Tag: T20I

  • T20I TEAM OF THE YEAR 2022: ಕೊಹ್ಲಿ, ಸೂರ್ಯ, ಪಾಂಡ್ಯಗೆ ಸ್ಥಾನ

    T20I TEAM OF THE YEAR 2022: ಕೊಹ್ಲಿ, ಸೂರ್ಯ, ಪಾಂಡ್ಯಗೆ ಸ್ಥಾನ

    ಮುಂಬೈ: ಟೀಂ ಇಂಡಿಯಾ (Team India) ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat Kohli), ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ಸೂರ್ಯಕುಮಾರ್‌ ಯಾದವ್‌ ಹಾಗೂ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ (Hardik Pandya) ಅವರು 2022ರ ಸಾಲಿನ ಐಸಿಸಿ ಪುರುಷರ ‘ವರ್ಷದ ಟಿ20 ತಂಡ’ದಲ್ಲಿ (Men’s T20I Team of the Year 2022) ಸ್ಥಾನ ಪಡೆದುಕೊಂಡಿದ್ದಾರೆ.

    ಐಪಿಎಲ್‌ನಲ್ಲಿ (IPL) ಕಳಪೆ ಬ್ಯಾಟಿಂಗ್‌ ಪ್ರದರ್ಶನದಿಂದ ಟೀಕೆಗಳಿಗೆ ಗುರಿಯಾಗಿದ್ದ ಕೊಹ್ಲಿ 2022ರ ಏಷ್ಯಾಕಪ್‌ ಟೂರ್ನಿಯಲ್ಲಿ ಲಯಕ್ಕೆ ಮರಳಿದರು. 5 ಪಂದ್ಯಗಳಿಂದ 276 ರನ್‌ ಕಲೆಹಾಕಿದ್ದರು. ಏಷ್ಯಾಕಪ್‌ನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಭರ್ಜರಿ ಶತಕ ಸಿಡಿಸಿ ಮಿಂಚಿದರು. ಅಲ್ಲದೇ ಟಿ20 ವಿಶ್ವಕಪ್‌ (T20 WorldCup) ಟೂರ್ನಿಯಲ್ಲೂ ಬ್ಯಾಟಿಂಗ್‌ ಅಬ್ಬರ ಮುಂದುವರಿಸಿದ ಚೇಸ್‌ ಮಾಸ್ಟರ್‌ ಕೊಹ್ಲಿ ಪಾಕಿಸ್ತಾನ (Pakistan) ವಿರುದ್ಧ ಅಮೋಘ 82 ರನ್‌ ಗಳಿಸಿದ್ದರಲ್ಲದೆ, ಟೂರ್ನಿಯಲ್ಲಿ ಒಟ್ಟು 296 ರನ್‌ ಬಾರಿಸಿದರು.

    ಸೂರ್ಯನ ಅಬ್ಬರ: ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ಸೂರ್ಯಕುಮಾರ್‌ (Suryakumar Yadav) ಅವರು 2022ರ ಋತುವಿನಲ್ಲಿ 1,164 ರನ್‌ ಕಲೆಹಾಕಿದ್ದರು. 2 ಶತಕ ಮತ್ತು 9 ಅರ್ಧಶತಕ ಗಳಿಸಿದ್ದರು. ಮಾತ್ರವಲ್ಲದೇ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಟಿ20 ಬ್ಯಾಟರ್‌ಗಳ ಪಟ್ಟಿಯಲ್ಲಿ ಪಾಕಿಸ್ತಾನದ ಮೊಹಮ್ಮ್‌ ರಿಜ್ವಾನ್‌ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದರು. ಇದನ್ನೂ ಓದಿ: ಲೈಂಗಿಕ ಶೋಷಣೆ ಆರೋಪಕ್ಕೆ ಟ್ವಿಸ್ಟ್‌ – ಕುಸ್ತಿಪಟುಗಳ ವಿರುದ್ಧವೇ ಹೈಕೋರ್ಟ್‍ನಲ್ಲಿ ದೂರು

    ಪಾಂಡ್ಯ ಪರಾಕ್ರಮ: 2022ರಲ್ಲಿ ಉತ್ತಮ ಆಲ್‌ರೌಂಡರ್‌ ಪ್ರದರ್ಶನ ನೀಡಿದ ಹಾರ್ದಿಕ್‌ ಪಾಂಡ್ಯ ಬರೋಬ್ಬರಿ 607 ರನ್‌ಗಳಿಸಿದರಲ್ಲದೇ 20 ವಿಕೆಟ್‌ಗಳನ್ನು ಪೆಡೆಯುವ ಮೂಲಕ ವರ್ಷದ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಟಿ20 ವಿಶ್ವಕಪ್‌ ನಲ್ಲಿ ಇಂಗ್ಲೆಂಡ್‌ ವಿರುದ್ಧ ಸೆಮಿ ಫೈನಲ್‌ನಲ್ಲಿ 33 ಎಸೆತಗಳಲ್ಲಿ 66 ರನ್‌ ಚಚ್ಚಿ ತಂಡದ ಮೊತ್ತವನ್ನು 160ರ ಗಡಿ ದಾಟಿಸಿದರು.

    ಬಟ್ಲರ್‌ ಬೊಂಬಾಟ್‌ ಬ್ಯಾಟಿಂಗ್‌: ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಇಯಾನ್‌ ಮಾರ್ಗನ್‌ ನಿವೃತ್ತಿ ಘೋಷಿಸಿದ ಬಳಿಕ ಇಂಗ್ಲೆಂಡ್‌ ತಂಡದ ಕ್ಯಾಪ್ಟನ್‌ ಆದ ಜೋಸ್‌ ಬಟ್ಲರ್‌ (Jos Buttler) ಸಹ ವರ್ಷದ ಟಿ20ಐ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಕಳೆದ ವರ್ಷದ 15 ಪಂದ್ಯಗಳಲ್ಲಿ ಸ್ಫೋಟಕ ಬ್ಯಾಟಿಂಗ್‌ ಮಾಡಿರುವ ಬಟ್ಲರ್‌ 160.41 ಸ್ಟ್ರೈಕ್‌ರೇಟ್‌ನಲ್ಲಿ 462 ರನ್‌ಗಳನ್ನ ಚಚ್ಚಿದ್ದಾರೆ. ಅಲ್ಲದೇ ಏಕದಿನ ವಿಶ್ವಕಪ್‌ ಬಳಿಕ 2022ರಲ್ಲಿ ಟಿ20 ವಿಶ್ವಕಪ್‌ ಗೆಲ್ಲಲೂ ಬಟ್ಲರ್‌ ಕಾರಣವಾಗಿದ್ದಾರೆ. ಈ ಪಂದ್ಯದಲ್ಲಿ ಜವಾಬ್ದಾರಿ ಬ್ಯಾಟಿಂಗ್‌ ಪ್ರದರ್ಶಿಸಿದ ಬಟ್ಲರ್‌ 225 ರನ್‌ ಗಳಿಸಿ ಇಂಗ್ಲೆಂಡ್‌ ಆಟಗಾರರಲ್ಲೇ ಅತಿಹೆಚ್ಚು ರನ್‌ಗಳಿಸಿದ ಹೆಗ್ಗಳಿಕೆ ಪಡೆದರು.

     

    View this post on Instagram

     

    A post shared by ICC (@icc)

    ರಿಜ್ವಾನ್‌ ಮಿಂಚಿಂಗ್‌: 2021 ರಿಂದಲೂ ಅದ್ಭುತ ಫಾರ್ಮ್‌ ಮುಂದುವರಿಸಿದ ಪಾಕ್‌ ಕ್ರಿಕೆಟಿಗ ಮೊಹಮ್ಮದ್‌ ರಿಜ್ವಾನ್‌ 2022ರ ಒಂದೇ ವರ್ಷದಲ್ಲಿ 996 ರನ್‌ ಗಳಿಸಿ, ಪುರುಷರ ಅಂತಾರಾಷ್ಟ್ರೀಯ ಟಿ20 ನಲ್ಲಿ ಅತಿಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ 2ನೇ ಸ್ಥಾನ ಪಡೆದುಕೊಂಡಿದ್ದಾರೆ. ರಿಜ್ವಾನ್‌ ಚುಟುಕು ಪಂದ್ಯದಲ್ಲಿ 10 ಅರ್ಧಶತಗಳನ್ನ ಸಿಡಿಸಿದ್ದಾರೆ. ಜೊತೆಗೆ ಟಿ20 ವಿಶ್ವಕಪ್‌ನಲ್ಲಿ 175 ರನ್‌ಗಳಿಸಿ ಪಾಕ್‌ ತಂಡದ ಹೆಗ್ಗಳಿಕೆಗೂ ಅವರು ಪಾತ್ರರಾದರು. ಇದನ್ನೂ ಓದಿ: ಪಂತ್ ಆದಷ್ಟು ಬೇಗ ಗುಣಮುಖರಾಗಲಿ – ಮಹಾಕಾಳೇಶ್ವರನಿಗೆ ಪ್ರಾರ್ಥನೆ ಸಲ್ಲಿಸಿದ ಸೂರ್ಯ, ಕುಲ್‌ದೀಪ್

    ಇವರಷ್ಟೇ ಅಲ್ಲದೇ ಪಾಕಿಸ್ತಾನ ತಂಡದ ಹ್ಯಾರಿಸ್‌ ರೌಫ್‌, ಜಿಂಬಾಬ್ವೆ ತಂಡದ ಸಿಕಂದರ್‌ ರಾಜ, ಇಂಗ್ಲೆಂಡ್‌ ಆಲ್‌ರೌಂಡರ್‌ ಸ್ಯಾಮ್‌ ಕರ್ರನ್‌, ಶ್ರೀಲಂಕಾದ ವಾನಿಂದು ಹಸರಂಗ, ಕಿವೀಸ್‌ನ ಗ್ಲೆನ್‌ ಫಿಲಿಪ್ಸ್‌ ಹಾಗೂ ಐರ್ಲೆಂಡ್‌ನ ಜೋಶ್ ಲಿಟ್ಲ್‌ ವರ್ಷದ ಟಿ20ಐ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಏನಿದು ಕ್ರಿಕೆಟ್‌ನಲ್ಲಿ ಇಂಪ್ಯಾಕ್ಟ್‌ ಪ್ಲೇಯರ್‌ ಅಸ್ತ್ರ?

    ಏನಿದು ಕ್ರಿಕೆಟ್‌ನಲ್ಲಿ ಇಂಪ್ಯಾಕ್ಟ್‌ ಪ್ಲೇಯರ್‌ ಅಸ್ತ್ರ?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಬಾರಿ ಎಡ್ಡೆ ಗೊಬ್ಬಿಯ’ ಸೂರ್ಯ ಎಂದ ರಾಹುಲ್ – ಅವರಿಗೆ ‘ತುಳು’ ಕಲಿಸಿ ಎಂಬ ಮನವಿ ಇಟ್ಟ ದೀವಿಶಾ ಶೆಟ್ಟಿ

    ‘ಬಾರಿ ಎಡ್ಡೆ ಗೊಬ್ಬಿಯ’ ಸೂರ್ಯ ಎಂದ ರಾಹುಲ್ – ಅವರಿಗೆ ‘ತುಳು’ ಕಲಿಸಿ ಎಂಬ ಮನವಿ ಇಟ್ಟ ದೀವಿಶಾ ಶೆಟ್ಟಿ

    ಮುಂಬೈ: ಟೀಂ ಇಂಡಿಯಾದ (Team India) ಹೊಡಿಬಡಿ ಆಟಗಾರ, ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ (Suryakumar Yadav) ಶ್ರೀಲಂಕಾ (Sri Lanka) ವಿರುದ್ಧ ತೋರಿದ ಅಬ್ಬರದ ಬ್ಯಾಟಿಂಗ್ ನೋಡಿ ಕನ್ನಡಿಗ ಕೆ.ಎಲ್ ರಾಹುಲ್ (K.L Rahul) ಬಾರಿ ಎಡ್ಡೆ ಗೊಬ್ಬಿಯ ಸೂರ್ಯ (ತುಂಬಾ ಚೆನ್ನಾಗಿ ಆಟವಾಡಿದೆ) ಎಂದು ಸಾಮಾಜಿಕ ಜಾಲತಾಣದ ಮೂಲಕ ತುಳು ಭಾಷೆಯಲ್ಲಿ (Tulu) ಪ್ರಶಂಸಿದ್ದರು. ಈ ಪೋಸ್ಟ್‌ಗೆ ಕಾಮೆಂಟ್ ಮಾಡಿರುವ ಸೂರ್ಯ ಕುಮಾರ್ ಅವರ ಪತ್ನಿ ದೀವಿಶಾ ಶೆಟ್ಟಿ (Devisha Shetty) ಅವರಿಗೆ ತುಳು ಕಲಿಸುವಂತೆ ಮನವಿ ಮಾಡಿದ್ದಾರೆ.

    ಶ್ರೀಲಂಕಾ ವಿರುದ್ಧ ಅಂತಿಮ ಟಿ20 ಪಂದ್ಯದಲ್ಲಿ ಮಿಸ್ಟರ್ 360 ಡಿಗ್ರಿ ಪ್ಲೇಯರ್ ಖ್ಯಾತಿಯ ಸೂರ್ಯ ತನ್ನ ವಿಸ್ಫೋಟಕ ಆಟದ ಮೂಲಕ ರಾಜ್‍ಕೋಟ್‍ನಲ್ಲಿ ರಾಜನಾಗಿ ಮೆರೆದಾಡಿದ್ದರು. ಬ್ಯಾಟಿಂಗ್‍ನಲ್ಲಿ ಬೌಂಡರಿ, ಸಿಕ್ಸರ್‌ಗಳ ಮಳೆ ಸುರಿಸಿದ ಸೂರ್ಯನ ಆಟ ಕಂಡು ಅಭಿಮಾನಿಗಳು ದಂಗಾಗಿದ್ದರು. ಈ ಆಟ ಕಂಡ ಟೀಂ ಇಂಡಿಯಾದ ಇನ್ನೋರ್ವ ಆಟಗಾರ, ಮಂಗಳೂರು ಮೂಲದ ಕೆ.ಎಲ್ ರಾಹುಲ್ ಬಾರಿ ಎಡ್ಡೆ ಗೊಬ್ಬಿಯ ಸೂರ್ಯ (ತುಂಬಾ ಚೆನ್ನಾಗಿ ಆಟವಾಡಿದೆ) ಎಂದು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಮೂಲಭಾಷೆ ತುಳುವಿನಲ್ಲಿ ಪೋಸ್ಟ್ ಮಾಡಿದ್ದರು. ಇದನ್ನು ಕಂಡ ಸೂರ್ಯಕುಮಾರ್ ಯಾದವ್ ಅವರ ಪತ್ನಿ ಕರಾವಳಿ ಮೂಲದವರಾದ ದೀವಿಶಾ ಶೆಟ್ಟಿ, ಚೂರ್ ತುಳು ಕಲ್ಪಾವೊಡು ಆರೆಗ್ ನನ (ಇನ್ನು ಸ್ವಲ್ಪ ತುಳು ಕಲಿಸಬೇಕು ಅವರಿಗೆ) ಎಂದು ರಾಹುಲ್ ಪೋಸ್ಟ್‌ಗೆ ಕಾಮೆಂಟ್ ಹಾಕಿ ಮಾಡಿದ್ದಾರೆ. ಇದನ್ನೂ ಓದಿ: ಟಿ20 ಕ್ರಿಕೆಟ್‍ನಲ್ಲಿ ವಿಸ್ಫೋಟಕ ಆಟ – ವಿಶ್ವ ದಾಖಲೆ ಬರೆದ SKY

    ಈ ಪೋಸ್ಟ್ ಇದೀಗ ತುಳುನಾಡಿನಾದ್ಯಂತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ರಾಹುಲ್ ಮತ್ತು ದೀವಿಶಾ ಅವರ ತುಳು ಪ್ರೇಮಕ್ಕೆ ಅಭಿಮಾನಿಗಳು ಮನಸೋತಿದ್ದಾರೆ. ಈ ಹಿಂದೆ ಸೂರ್ಯಕುಮಾರ್ ಯಾದವ್ ಅವರ ಮಗಳು ತುಳುವಿನಲ್ಲಿ ಮಾತನಾಡುವ ವೀಡಿಯೋ ಒಂದು ವೈರಲ್ ಆಗಿತ್ತು.

    ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಶತಕ ಹಾಗೂ ಸಂಘಟಿತ ಬೌಲಿಂಗ್ ಪ್ರದರ್ಶನದಿಂದಾಗಿ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ 91 ರನ್‍ಗಳ ಭರ್ಜರಿ ಜಯ ಸಾಧಿಸಿತ್ತು. ಈ ಮೂಲಕ ಟೀಂ ಇಂಡಿಯಾ 2-1 ಅಂತರದಲ್ಲಿ ಟಿ20 ಸರಣಿ ಗೆದ್ದು ಕೊಂಡಿತ್ತು. ಸೂರ್ಯ ಶ್ರೀಲಂಕಾ ವಿರುದ್ಧ 51 ಎಸೆತಗಳಲ್ಲಿ 7 ಬೌಂಡರಿ ಹಾಗೂ 9 ಸಿಕ್ಸರ್ ಸಹಿತ ಅಜೇಯ 112 ರನ್ ಚಚ್ಚಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಇದನ್ನೂ ಓದಿ: ಐಪಿಎಲ್‍ನಲ್ಲಿ ಸೂರ್ಯಕುಮಾರ್ ಯಾದವ್‍ನ ಒಂದು ‘ಮುತ್ತಿನ’ ಕಥೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಟಿ20 ಕ್ರಿಕೆಟ್‍ನಲ್ಲಿ ವಿಸ್ಫೋಟಕ ಆಟ – ವಿಶ್ವ ದಾಖಲೆ ಬರೆದ SKY

    ಟಿ20 ಕ್ರಿಕೆಟ್‍ನಲ್ಲಿ ವಿಸ್ಫೋಟಕ ಆಟ – ವಿಶ್ವ ದಾಖಲೆ ಬರೆದ SKY

    ಮುಂಬೈ: ಟೀಂ ಇಂಡಿಯಾದ (Team India) ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ಸೂರ್ಯಕುಮಾರ್ ಯಾದವ್ (Suryakumar Yadav) ಟಿ20 (T20I) ಕ್ರಿಕೆಟ್‍ನಲ್ಲಿ 843 ಎಸೆತಗಳಲ್ಲಿ 1,500 ರನ್ ಚಚ್ಚಿ ನೂತನ ವಿಶ್ವ ದಾಖಲೆ ಬರೆದಿದ್ದಾರೆ.

    ರಾಜ್‍ಕೋಟ್‍ನಲ್ಲಿ ಶ್ರೀಲಂಕಾ (Sri Lanka) ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿ ಸಂಭ್ರಮಿಸಿದ್ದರು. ಈ ಪಂದ್ಯದ ಮೂಲಕ ಕೇವಲ 843 ಎಸೆತಗಳಲ್ಲಿ 1,500 ರನ್ ಸಿಡಿಸಿದ ಮೊದಲ ಆಟಗಾರ ಎಂಬ ದಾಖಲೆಯನ್ನು ಬರೆದಿದ್ದಾರೆ. ಇದನ್ನೂ ಓದಿ: ಸೂರ್ಯನ ಸಿಡಿಲಬ್ಬರದ ಶತಕಕ್ಕೆ ಲಂಕಾ ಭಸ್ಮ – ಭಾರತಕ್ಕೆ ಟಿ20 ಸರಣಿ ಕಿರೀಟ

    ಸೂರ್ಯಕುಮಾರ್ ಯಾದವ್ 45 ಪಂದ್ಯವಾಡಿ 43 ಇನ್ನಿಂಗ್ಸ್‌ಗಳಿಂದ 1,500 ರನ್‌ ಸಿಡಿಸಿದ್ದಾರೆ. ಈ ಮೂಲಕ ವೇಗವಾಗಿ 1,500 ರನ್ ಸಿಡಿಸಿದ ಭಾರತದ ಮೂರನೇ ಆಟಗಾರ ಎಂಬ ಮೈಲಿಗಲ್ಲನ್ನು ನೆಟ್ಟಿದ್ದಾರೆ. ಟೀಂ ಇಂಡಿಯಾ ಪರ ಈಗಾಗಲೇ ವಿರಾಟ್ ಕೊಹ್ಲಿ (Virat Kohli), ಕೆ.ಎಲ್ ರಾಹುಲ್ ಕೇವಲ 39 ಇನ್ನಿಂಗ್ಸ್‌ಗಳಿಂದ 1,500 ರನ್ ಪೇರಿಸಿದ್ದಾರೆ.

    ಟಿ20 ಕ್ರಿಕೆಟ್‍ನಲ್ಲಿ 150ಕ್ಕೂ ಹೆಚ್ಚು ಸ್ಟ್ರೈಕ್‍ರೇಟ್‍ನಲ್ಲಿ 1,500 ರನ್ ಬಾರಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಸೂರ್ಯಕುಮಾರ್ ಯಾದವ್ ಪಾತ್ರರಾಗಿದ್ದಾರೆ. ಇದೀಗ ಸೂರ್ಯ 45 ಪಂದ್ಯವಾಡಿ 43 ಇನ್ನಿಂಗ್ಸ್‌ಗಳಿಂದ 3 ಶತಕ ಮತ್ತು 13 ಅರ್ಧಶತಕ ಸಹಿತ 1,578 ರನ್ ಸಿಡಿಸಿ ಗಮನಸೆಳೆದಿದ್ದಾರೆ. ಕಳೆದ ಒಂದು ವರ್ಷದಿಂದ ಸೂರ್ಯಕುಮಾರ್‌ ಯಾದವ್‌ ರನ್‌ ಹೊಳೆ ಹರಿಸುತ್ತಿದ್ದಾರೆ. ಇದನ್ನೂ ಓದಿ: 9 ಸಿಕ್ಸರ್‌, 7 ಬೌಂಡರಿ – 45 ಎಸೆತಗಳಲ್ಲೇ ಸ್ಫೋಟಕ ಶತಕ ಸಿಡಿಸಿದ ದಾಖಲೆ ವೀರ ಸೂರ್ಯ

    ಇದಲ್ಲದೇ ಟೀಂ ಇಂಡಿಯಾಪರ ಟಿ20 ಕ್ರಿಕೆಟ್‍ನಲ್ಲಿ ಮೂರು ಶತಕ ಬಾರಿಸಿ ಅತೀ ಹೆಚ್ಚು ಶತಕ ಬಾರಿಸಿರುವ ಪಟ್ಟಿಯಲ್ಲಿ 2ನೇ ಸ್ಥಾನ ಪಡೆದಿದ್ದಾರೆ. ಟಿ20 ಕ್ರಿಕೆಟ್‍ನಲ್ಲಿ 4 ಶತಕ ಬಾರಿಸಿರುವ ರೋಹಿತ್ ಶರ್ಮಾ (Rohit Sharma) ಈ ಪಟ್ಟಿಯಲ್ಲಿ ಅಗ್ರಜನಾಗಿ ಕಾಣಿಸಿಕೊಂಡಿದ್ದಾರೆ.

    ಸೂರ್ಯಕುಮಾರ್‌ ಯಾದವ್‌ ಸಿಡಿಲಬ್ಬರದ ಶತಕ ಹಾಗೂ ಸಂಘಟಿತ ಬೌಲಿಂಗ್‌ ಪ್ರದರ್ಶನದಿಂದಾಗಿ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ 91 ರನ್‌ಗಳ ಭರ್ಜರಿ ಜಯ ಸಾಧಿಸಿತ್ತು. ಈ ಮೂಲಕ ಟೀಂ ಇಂಡಿಯಾ 2-1 ಅಂತರದಲ್ಲಿ ಟಿ20 ಸರಣಿ ಗೆದ್ದು ಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸೂರ್ಯನ ಸಿಡಿಲಬ್ಬರದ ಶತಕಕ್ಕೆ ಲಂಕಾ ಭಸ್ಮ – ಭಾರತಕ್ಕೆ ಟಿ20 ಸರಣಿ ಕಿರೀಟ

    ಸೂರ್ಯನ ಸಿಡಿಲಬ್ಬರದ ಶತಕಕ್ಕೆ ಲಂಕಾ ಭಸ್ಮ – ಭಾರತಕ್ಕೆ ಟಿ20 ಸರಣಿ ಕಿರೀಟ

    ಮುಂಬೈ: ಸೂರ್ಯಕುಮಾರ್‌ ಯಾದವ್‌ (Suryakumar Yadav) ಸಿಡಿಲಬ್ಬರದ ಶತಕ ಹಾಗೂ ಸಂಘಟಿತ ಬೌಲಿಂಗ್‌ ಪ್ರದರ್ಶನದಿಂದಾಗಿ ಟೀಂ ಇಂಡಿಯಾ (Team India) ಶ್ರೀಲಂಕಾ (Srilanka) ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ 91 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 2-1 ಅಂತರದಲ್ಲಿ ಗೆದ್ದು ಸರಣಿ ಕಿರೀಟ ಮುಡಿಗೇರಿಸಿಕೊಂಡಿದೆ.

    ಶ್ರೀಲಂಕಾ ವಿರುದ್ಧದ T20 ಸರಣಿಯ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಹಾರ್ದಿಕ್‌ ಪಡೆ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 228 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು. 229 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಶ್ರೀಲಂಕಾ ನಿಗದಿತ 16.4 ಓವರ್‌ಗಳಲ್ಲಿ 137 ರನ್‌ಗಳಿಗೆ ಸರ್ವಪತನ ಕಂಡು, ಸೋಲೊಪ್ಪಿಕೊಂಡಿತು. ಟೀಂ ಇಂಡಿಯಾ 2-1 ಅಂತರದಲ್ಲಿ ಸರಣಿ ಗೆದ್ದು ಬೀಗಿತು.

    ಟೀಂ ಇಂಡಿಯಾದ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಶ್ರೀಲಂಕಾ (SriLanka) ಉತ್ತಮ ಶುಭಾರಂಭ ನೀಡಿತು. ಒಂದೆಡೆ ರನ್‌ ಕಲೆಹಾಕುತ್ತಿದ್ದರೂ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ಭಾರತದ ಬೌಲರ್‌ಗಳು ತಮ್ಮ ಮಾರಕ ದಾಳಿಯಿಂದ ಲಂಕನ್ನರಿಗೆ ಲಗಾಮು ಹಾಕಿದರು. ಪರಿಣಾಮ ಪವರ್‌ ಪ್ಲೇ ಮುಗಿಯುವಷ್ಟರಲ್ಲೇ 51 ರನ್‌ ಗಳಿಸಿದ್ದ ಲಂಕಾ ತಂಡ 2 ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

    ಆರಂಭಿಕರಾಗಿ ಕಣಕ್ಕಿಳಿದ ಪಾತುಮ್‌ ನಿಸಾಂಕ 3 ಬೌಂಡರಿಗಳೊಂದಿಗೆ 15 ರನ್‌ ಗಳಿಸಿದ್ರೆ, ಕುಸಾಲ್‌ ಮೆಂಡಿಸ್‌ (Kusal Mendis) 15 ಎಸೆತಗಳಲ್ಲಿ 23ರನ್‌ (2 ಸಿಕ್ಸರ್‌, 2 ಬೌಂಡರಿ) ಬಾರಿಸಿ ಪೆವಿಲಿಯನ್‌ ನತ್ತ ಮುಖ ಮಾಡಿದ್ರು. 2ನೇ ಕ್ರಮಾಂಕದಲ್ಲಿ ಬಂದ ಅವಿಷ್ಕಾ ಫರ್ನಾಂಡೋ 1 ರನ್‌ ಗಳಿಸಿದರು. ವಾನಿಂದು ಹಸರಂಗ (Wanindu Hasaranga de Silva) ಸಹ 9 ರನ್‌, ಚಮಿಕ ಕರುಣ ರತ್ನೆ (Chamika Karunaratne) ಶೂನ್ಯಕ್ಕೆ ನಿರ್ಗಮಿಸಿ ನಿರಾಸೆ ಮೂಡಿಸಿದ್ರು.

    ನಂತರ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಧನಂಜಯ ಡಿ ಸಿಲ್ವಾ ಹಾಗೂ ಚರಿತ್ ಅಸಲಂಕಾ ಉತ್ತಮ ಇನ್ನಿಂಗ್ಸ್‌ ಕಟ್ಟಲು ಪ್ರಯತ್ನಿಸಿದರು. ಸೆಲ್ವಾ 14 ಎಸೆತಗಳಲ್ಲಿ 22 ರನ್‌ ಗಳಿಸಿದ್ರೆ, ಅಸಲಂಕಾ 14 ಎಸೆತಗಳಲ್ಲಿ 19 ರನ್‌ ಗಳಿಸಿದರು. ಇವರಿಬ್ಬರ ಆಟಕ್ಕೆ ಭಾರತದ ಬೌಲರ್‌ಗಳು ಬ್ರೇಕ್‌ ಹಾಕಿದ್ರು. ನಾಯಕ ದಸುನ್‌ ಶನಕ  (Dasun Shanaka) ಕೂಡ 23 ರನ್‌ಗಳಿಸಿ ಔಟಾದರು. ಮಹೀಶ್‌ ತೀಕ್ಷಣ 2 ರನ್‌ ದಿಲ್ಶನ್‌ 9ರನ್‌ ಗಳಿಸಿದ್ರೆ, ಕುಸನ್‌ ರಜಿತ ಶೂನ್ಯಕ್ಕೆ ನಿರ್ಗಮಿಸಿದರು. ಕಳಪೆ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಪ್ರದರ್ಶನದಿಂದಾಗಿ ಶ್ರೀಲಂಕಾ ತಂಡ ಹೀನಾಯ ಸೋಲನ್ನು ಅನುಭವಿಸಿತು.

    ಅರ್ಷ್‌ದೀಪ್‌, ಹಾರ್ದಿಕ್‌, ಚಾಹಲ್‌ ಬೌಲಿಂಗ್‌ ಕಮಾಲ್‌:
    ಬೌಲಿಂಗ್‌ನಲ್ಲೀ ತಮ್ಮ ಕೈಚಳಕ ತೋರಿದ ಭಾರತೀಯ ಬೌಲರ್‌ಗಳು ಪ್ರಮುಖ ವಿಕೆಟ್‌ಗಳನ್ನು ಉರುಳಿಸುವಲ್ಲಿ ಯಶಸ್ವಿಯಾದರು.‌ ಕಳೆದ ಪಂದ್ಯದಲ್ಲಿ ನೋಬಾಲ್‌ ನೀಡಿ ಕೆಟ್ಟ ದಾಖಲೆ ಬರೆದಿದ್ದ ಅರ್ಷ್‌ದೀಪ್‌ ಸಿಂಗ್‌ (Arshdeep Singh) ಈ ಬಾರಿ 3 ವಿಕೆಟ್‌ ಪಡೆದು ಗೆಲುವಿಗೆ ಶ್ರಮಿಸಿದರು. ನಾಯಕ ಹಾರ್ದಿಕ್‌ ಪಾಂಡ್ಯ (Hardik Pandya), ಯಜುವೇಂದ್ರ ಚಾಹಲ್‌, ಉಮ್ರಾನ್‌ ಮಲಿಕ್‌ ತಲಾ 2 ವಿಕೆಟ್‌ ಪಡೆದರೆ, ಅಕ್ಷರ್‌ ಪಟೇಲ್‌ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

    ಟಾಸ್‌ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು. ಆರಂಭಿಕನಾಗಿ ಕಣಕ್ಕಿಳಿದ ಇಶಾನ್‌ ಕಿಶನ್‌ 1 ರನ್‌ ಗಳಿಸಿ ಟೀಂ ಇಂಡಿಯಾಕ್ಕೆ ನಿರಾಸೆ ಮೂಡಿಸಿದರು. ಈ ವೇಳೆ 2ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ರಾಹುಲ್‌ ತ್ರಿಪಾಟಿ ಆಕ್ರಮಣಕಾರಿ ಬ್ಯಾಟಿಂಗ್‌ನಿಂದ ಪವರ್‌ ಪ್ಲೇನಲ್ಲಿ ಭರ್ಜರಿ ರನ್‌ ತಂದುಕೊಟ್ಟರು. 16 ಎಸೆತಗಳನ್ನು ಎದುರಿಸಿದ ತ್ರಿಪಾಟಿ 218.75 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿ 35 ರನ್‌ (2 ಸಿಕ್ಸರ್‌, 5 ಬೌಂಡರಿ) ಸಿಡಿಸಿದರು. ಈ ವೇಳೆ ಚಮಿಕ ಕರುಣರತ್ನೆ ಬೌಲಿಂಗ್‌ನಲ್ಲಿ ಬೌಂಡರಿಗೆ ತಳ್ಳಲುಹೋಗಿ ಕ್ಯಾಚ್‌ ನೀಡಿ ನಿರ್ಗಮಿಸಿದರು. ನಂತರ ಸೂರ್ಯನ ಅಬ್ಬರ ಶುರುವಾಯಿತು.

    2ನೇ ಪಂದ್ಯದಲ್ಲಿ ಅರ್ಧ ಶತಕ ಗಳಿಸಿ ಔಟಾಗಿದ್ದ ಸೂರ್ಯ ಈ ಬಾರಿ ಆರಂಭದಿಂದಲೇ ಅಬ್ಬರಿಸಲು ಶುರು ಮಾಡಿದರು. ಸಿಕ್ಸರ್‌- ಬೌಂಡರಿಗಳನ್ನು ಬಾರಿಸುತ್ತಾ ಲಂಕಾ ಬೌಲರ್‌ಗಳು ಕಂಗಾಲಾಗುವಂತೆ ಮಾಡಿದ್ರು. 219.60 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಸೂರ್ಯ 51 ಎಸೆತಗಳಲ್ಲಿ 7 ಬೌಂಡರಿ ಹಾಗೂ 9 ಸಿಕ್ಸರ್ ಗಳೊಂದಿಗೆ 112 ರನ್‌ ಗಳಿಸಿ ಅಜೇಯರಾಗುಳಿದರು.

    ಈ ವೇಳೆ ಸೂರ್ಯನಿಗೆ ಸಾಥ್‌ ನೀಡಿದ ಶುಭಮನ್‌ ಗಿಲ್‌ 36 ಎಸೆತಗಳಲ್ಲಿ 46 ರನ್‌ (3 ಸಿಕ್ಸರ್‌, 2 ಬೌಂಡರಿ) ಸಿಡಿಸಿ ಪೆವಿಲಿಯನ್‌ಗೆ ಮರಳಿದರು. ಅಂತಿಮ ಹಂತದಲ್ಲಿ ಅಕ್ಷರ್ ಪಟೇಲ್ ಕೂಡ ಭರ್ಜರಿ ಬ್ಯಾಟಿಂಗ್‌ ಮಾಡಿದರು. 9 ಎಸೆತ ಎದುರಿಸಿದ ಅಕ್ಷರ್ 21 ರನ್‌ಗಳಿಸಿ ಅಜೇಯವಾಗುಳಿದರು. ಆದ್ರೆ ಮಧ್ಯಮ ಕ್ರಮಾಂಕದಲ್ಲಿ ಬಂದ ನಾಯಕ ಹಾರ್ದಿಕ್‌ ಪಾಂಡ್ಯ 4 ಎಸೆತಗಳಲ್ಲಿ 4 ರನ್‌ ಗಳಿಸಿ ಔಟಾದರು.

    ಶ್ರೀಲಂಕಾ ತಂಡದ ಪರ ದಿಲ್ಶನ್ ಮಧುಶಂಕ 2 ವಿಕೆಟ್‌ ಪಡೆದರೆ, ಕಸುನ್ ರಜಿತಾ, ಚಮಿಕ ಕರುಣರತ್ನೆ ಹಾಗೂ ವಾನಿಂದು ಹಸರಂಗ ತಲಾ ಒಂದೊಂದು ವಿಕೆಟ್‌ ಪಡೆದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 9 ಸಿಕ್ಸರ್‌, 7 ಬೌಂಡರಿ – 45 ಎಸೆತಗಳಲ್ಲೇ ಸ್ಫೋಟಕ ಶತಕ ಸಿಡಿಸಿದ ದಾಖಲೆ ವೀರ ಸೂರ್ಯ

    9 ಸಿಕ್ಸರ್‌, 7 ಬೌಂಡರಿ – 45 ಎಸೆತಗಳಲ್ಲೇ ಸ್ಫೋಟಕ ಶತಕ ಸಿಡಿಸಿದ ದಾಖಲೆ ವೀರ ಸೂರ್ಯ

    ಮುಂಬೈ: ದಾಖಲೆಗಳ ಸರದಾರ ಸೂರ್ಯಕುಮಾರ್ ಯಾದವ್ (Suryakumar Yadav) ಭರ್ಜರಿ ಶತಕ ಸಿಡಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

    ಈ ಹಿಂದೆ ಕಿವೀಸ್‌ ಪಡೆಯ ದ್ವಿಪಕ್ಷೀಯ ಸರಣಿಯ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್‌ ಬೌಲರ್‌ಗಳನ್ನು ಬೆಂಡೆತ್ತಿದ್ದ ಸೂರ್ಯ ಈಗ ಲಂಕಾ ಬೌಲರ್‌ಗಳ ಬೆವರಿಳಿಸಿದ್ದಾರೆ. ಇದನ್ನೂ ಓದಿ: 11 ಬೌಂಡರಿ, 7 ಸಿಕ್ಸ್ – ಶತಕ ಸಿಡಿಸಿದ ದಾಖಲೆ ವೀರ ಸೂರ್ಯ

    ಶನಿವಾರ ಗುಜರಾತ್‌ನ ರಾಜ್‌ಕೋಟ್‌ ಕ್ರೀಡಾಂಗಣದಲ್ಲಿ ನಡೆದ ಶ್ರೀಲಂಕಾ ನಡುವಿನ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ 45 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸುವ ಮೂಲಕ ಸೂರ್ಯಕುಮಾರ್‌ ತನ್ನ ದಾಖಲೆಯನ್ನು ತಾನೇ ಮುರಿದಿದ್ದಾರೆ. ಕಿವೀಸ್‌ ಪಡೆ ಎದುರು 49 ಎಸೆತಗಳಲ್ಲಿ ಶತಕ ಸಿಡಿಸಿದ್ದ ಸೂರ್ಯ‌ ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ 219.60 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿ 45 ಎಸೆತಗಳಲ್ಲೇ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ (Rohit Sharma) ನಂತರ ಅತೀ ಕಡಿಮೆ ಎಸೆತಗಳಲ್ಲಿ ಶತಕ ಸಿಡಿಸಿದ 2ನೇ ಭಾರತೀಯನೆಂಬ ಖ್ಯಾತಿ ಪಡೆದಿದ್ದಾರೆ.

    ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ 51 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ ಅಜೇಯ 112 ರನ್ ಚಚ್ಚಿದ್ದಾರೆ. ಸಿಂಹಳೀಯರ ವಿರುದ್ಧ ಆರಂಭದಿಂದಲೇ ಅಬ್ಬರಿಸಲು ಮುಂದಾದ ಸೂರ್ಯಕುಮಾರ್ ಮೊದಲ 26 ಎಸೆತಗಳಲ್ಲಿ 50 ರನ್ ಸಿಡಿಸಿದ್ರೆ, ಮುಂದಿನ 25 ಎಸೆತಗಳಲ್ಲಿ 62 ರನ್ ಚಚ್ಚಿದ್ದಾರೆ. 9 ಸಿಕ್ಸರ್, 7 ಬೌಂಡರಿಗಳೂ ಇದರಲ್ಲಿ ಸೇರಿವೆ.

    ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ (Cricket) ಇದು ಸೂರ್ಯಕುಮಾರ್ ಯಾದವ್ ಅವರ 3ನೇ ಶತಕವಾಗಿದೆ. 2022ರ ಆವೃತ್ತಿಯ ಜುಲೈನಲ್ಲಿ ಇಂಗ್ಲೆಂಡ್ (England) ವಿರುದ್ಧ ನಡೆದ ಟಿ20 ಸರಣಿಯಲ್ಲಿ 48 ಎಸೆತಗಳಲ್ಲಿ ಸೂರ್ಯಕುಮಾರ್ ಭರ್ಜರಿ ಶತಕ ಬಾರಿಸಿದ್ದರು. ಇದರಲ್ಲಿ 14 ಬೌಂಡರಿ ಮತ್ತು 6 ಸಿಕ್ಸ್‌ಗಳು ದಾಖಲಾಗಿದ್ದವು. 2022ರಲ್ಲಿ ನ್ಯೂಜಿಲೆಂಡ್‌ ವಿರುದ್ಧ ನಡೆದ ಟಿ20ಯಲ್ಲಿ 49 ಎಸೆತಗಳಲ್ಲಿ ಶತಕ ಸಿಡಿಸಿದ್ದರು ಇದರಲ್ಲಿ 11 ಬೌಂಡರಿ, 7 ಸಿಕ್ಸರ್‌ ದಾಖಲಾಗಿದ್ದವು. ಇದೀಗ ಶ್ರೀಲಂಕಾ ವಿರುದ್ಧ 45 ಎಸೆತಗಳಲ್ಲಿ 8 ಸಿಕ್ಸರ್‌, 6 ಬೌಂಡರಿಗಳೊಂದಿಗೆ ಸ್ಫೋಟಕ ಶತಕ ಸಿಡಿಸಿ ದಾಖಲೆಯ ಪುಟ ಸೇರಿದ್ದಾರೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 2018ರ ಆವೃತ್ತಿಯಲ್ಲಿ ಶ್ರೀಲಂಕಾ ವಿರುದ್ಧ 35 ಎಸೆತಗಳಲ್ಲಿ ಶತಕ ಸಿಡಿಸಿದ್ದು, ಈವರೆಗಿನ ದಾಖಲೆಯಾಗಿದೆ.

    ಟಿ20ನಲ್ಲಿ ಸೂರ್ಯಕುಮಾರ್ ಸಿಡಿಸಿದ 3ನೇ ಶತಕವಾಗಿದ್ದು, ರೋಹಿತ್ ಶರ್ಮಾ (Rohit Sharma) ನಂತರ ಅತೀ ಕಡಿಮೆ ಎಸೆತಗಳಲ್ಲಿ ಶತಕ ಸಿಡಿಸಿದ 2ನೇ ಭಾರತೀಯನೆಂಬ ಖ್ಯಾತಿ ಪಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಭಾರತ-ಶ್ರೀಲಂಕಾ ನಡುವೆ ಟಿ20 ಕ್ಲೈಮ್ಯಾಕ್ಸ್‌ – ರಾಜ್‍ಕೋಟ್‍ನಲ್ಲಿ ಗೆದ್ದವರಿಗೆ ಕಿರೀಟ

    ಭಾರತ-ಶ್ರೀಲಂಕಾ ನಡುವೆ ಟಿ20 ಕ್ಲೈಮ್ಯಾಕ್ಸ್‌ – ರಾಜ್‍ಕೋಟ್‍ನಲ್ಲಿ ಗೆದ್ದವರಿಗೆ ಕಿರೀಟ

    ರಾಜ್‍ಕೋಟ್: ಭಾರತ (India) ಹಾಗೂ ಶ್ರೀಲಂಕಾ (Sri Lanka) ನಡುವೆ ಇಂದು ಮೂರನೇ ಮತ್ತು ಅಂತಿಮ ಟಿ20 (T20I) ಪಂದ್ಯ ನಡೆಯಲಿದೆ. ಇದೀಗ ಸರಣಿ 1-1 ಸಮಬಲ ಸಾಧಿಸಿರುವ ಕಾರಣ ಇಂದು ನಡೆಯುವ ಪಂದ್ಯ ಕುತೂಹಲ ಮೂಡಿಸಿದೆ.

    ರಾಜ್‍ಕೋಟ್‍ನಲ್ಲಿ (Rajkot) ಫೈನಲ್ ಫೈಟ್ ನಡೆಯಲಿದ್ದು, ಕ್ರಿಕೆಟ್ ಪ್ರೇಮಿಗಳು ಹೈವೋಲ್ಟೇಜ್ ಮ್ಯಾಚ್‍ಗಾಗಿ ಕಾದು ಕುಳಿತಿದ್ದಾರೆ. 3 ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಪಂದ್ಯವನ್ನು ಭಾರತ 2 ರನ್‍ಗಳಿಂದ ರೋಚಕವಾಗಿ ಗೆದ್ದುಕೊಂಡರೆ, 2 ಪಂದ್ಯವನ್ನು ಶ್ರೀಲಂಕಾ 16 ರನ್‍ಗಳ ಗೆಲುವಿನೊಂದಿಗೆ ಸರಣಿಯನ್ನು ಸಮಬಲ ಗೊಳಿಸಿಕೊಂಡಿದೆ. ಹಾಗಾಗಿ ಮೂರನೇ ಪಂದ್ಯ ಫೈನಲ್‍ನಂತೆ ಗೋಚರಿಸುತ್ತಿದ್ದು, ಗೆದ್ದವರು ಸರಣಿ ಕೈವಶ ಮಾಡಿಕೊಳ್ಳಲಿದ್ದಾರೆ. ಇದನ್ನೂ ಓದಿ: ನೋಬಾಲ್ ಎಸೆಯುವುದು ಅಪರಾಧ – ಅರ್ಶ್‍ದೀಪ್ ಸಿಂಗ್ ತಪ್ಪಿಗೆ ಚಾಟಿ ಬೀಸಿದ ಪಾಂಡ್ಯ

    ಟೀಂ ಇಂಡಿಯಾ ಟಿ20 ತಂಡದ ಸಾರಥ್ಯ ವಹಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ ರಾಜ್‍ಕೋಟ್‍ನಲ್ಲಿ ಗೆಲುವಿನ ಸಂಭ್ರಮಾಚರಣೆಗೆ ಕಾದು ಕುಳಿತಿದ್ದು, ಈ ಗೆಲುವಿನೊಂದಿಗೆ ಟಿ20 ತಂಡದ ಚುಕ್ಕಾಣಿ ಭದ್ರಪಡಿಸಿಕೊಳ್ಳುವ ಪ್ಲಾನ್‍ನಲ್ಲಿದ್ದಾರೆ. ಇನ್ನೊಂದೆಡೆ ಶ್ರೀಲಂಕಾ ಟಿ20 ಕ್ರಿಕೆಟ್‍ನಲ್ಲಿ ಶ್ರೇಷ್ಠ ಪ್ರದರ್ಶನದೊಂದಿಗೆ ತವರಿನಲ್ಲಿ ಭಾರತಕ್ಕೆ ಟಕ್ಕರ್ ನೀಡಲು ಹವಣಿಸುತ್ತಿದೆ.

    ಈಗಾಗಲೇ ನಡೆದಿರುವ 2 ಪಂದ್ಯಗಳು ಕೂಡ ಪೈಪೋಟಿಯಿಂದ ಕೊಡಿತ್ತು. ಪುಣೆಯಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ರನ್ ಹೊಳೆ ಹರಿದಿತ್ತು. ಬೌಂಡರಿ, ಸಿಕ್ಸರ್‌ಗಳ ಮೂಲಕ ಬ್ಯಾಟ್ಸ್‌ಮ್ಯಾನ್‌ಗಳು ವಿಜೃಂಭಿಸಿದ್ದರು. ಇದೀಗ ಮೂರನೇ ಪಂದ್ಯ ಭಾರೀ ಕುತೂಹಲ ಮೂಡಿಸಿದ್ದು, ಎರಡೂ ತಂಡಗಳು ಗೆಲುವಿಗಾಗಿ ಹೋರಾಡಲಿದೆ. ಇದನ್ನೂ ಓದಿ: ಸಿಕ್ಸರ್, ಬೌಂಡರಿ ಸುರಿಮಳೆ – ಸ್ಫೋಟಕ ಅರ್ಧ ಶತಕ ಸಿಡಿಸಿ ದಾಖಲೆ ಬರೆದ ಅಕ್ಷರ್ ಪಟೇಲ್

    ಟೀಂ ಇಂಡಿಯಾ ಪರ ಮೊದಲೆರಡು ಪಂದ್ಯಗಳಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಶುಭಮನ್ ಗಿಲ್ ಉತ್ತಮ ಆರಂಭ ನೀಡಲು ವಿಫಲರಾಗಿದ್ದರು. ಹಾಗಾಗಿ ಅವರ ಸ್ಥಾನದಲ್ಲಿ ಋತುರಾಜ್ ಗಾಯಕ್ವಾಡ್ ಅವಕಾಶ ಪಡೆಯುವ ಸಾಧ್ಯತೆ ಇದೆ. ಇನ್ನೊಂದೆಡೆ ಕಳೆದ ಪಂದ್ಯದಲ್ಲಿ ಆಡುವ ಅವಕಾಶ ಪಡೆದ ರಾಹುಲ್ ತ್ರಿಪಾಠಿ ನಿರಾಸೆ ಮೂಡಿಸಿದ್ದರು. ಹಾಗಾಗಿ ಅವರ ಸ್ಥಾನದಲ್ಲಿ ವಾಷಿಂಗ್ಟನ್ ಸುಂದರ್‌ರನ್ನು ಕಣಕ್ಕಿಳಿಸುವ ಸಾಧ್ಯತೆ ಕಂಡುಬರುತ್ತಿದೆ. ಬೌಲಿಂಗ್‍ನಲ್ಲಿ ದುಬಾರಿಯಾದ ಅರ್ಶ್‍ದೀಪ್ ಸಿಂಗ್ ಬದಲು ಮತ್ತೆ ಹರ್ಷಲ್ ಪಟೇಲ್ ಸ್ಥಾನ ಪಡೆಯಬಹುದು. ಈ ಮೂರು ಬದಲಾವಣೆಯೊಂದಿಗೆ ಭಾರತ ಮೂರನೇ ಪಂದ್ಯವಾಡುವ ಸಾಧ್ಯತೆ ಗೋಚರಿಸುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವೈಡ್ ಕೊಡದ ಅಂಪೈರ್‌ಗೆ ನಿಂದಿಸಿದ ದೀಪಕ್ ಹೂಡಾ

    ವೈಡ್ ಕೊಡದ ಅಂಪೈರ್‌ಗೆ ನಿಂದಿಸಿದ ದೀಪಕ್ ಹೂಡಾ

    ಮುಂಬೈ: ಶ್ರೀಲಂಕಾ (Sri Lanka) ವಿರುದ್ಧ ನಡೆದ ಮೊದಲ ಟಿ20 (T20I) ಪಂದ್ಯದಲ್ಲಿ ವೈಡ್ ಕೊಡದ ಅಂಪೈರ್ (Umpire) ವಿರುದ್ಧ ಟೀಂ ಇಂಡಿಯಾ ಬ್ಯಾಟ್ಸ್‌ಮ್ಯಾನ್‌ ದೀಪಕ್ ಹೂಡಾ (Deepak Hooda) ಗರಂ ಆದ ಘಟನೆ ಪಂದ್ಯದ ನಡುವೆ ನಡೆದಿದೆ.

    ಸ್ಲಾಗ್ ಓವರ್‌ಗಳಲ್ಲಿ ದೀಪಕ್ ಹೂಡಾ ಅಬ್ಬರದ ಬ್ಯಾಟಿಂಗ್‍ಗೆ ಮುಂದಾಗಿದ್ದರು. 18 ಓವರ್ ಎಸೆಯಲು ಬಂದ ಕಸುನ್ ರಂಜಿತ್ ತಮ್ಮ 5ನೇ ಎಸೆತ ಆಫ್‌ಸೈಡ್‌ ಎಸೆದರು. ಈ ವೇಳೆ ಒಂದು ಹೆಜ್ಜೆ ಆಫ್‌ಸೈಡ್‌ ಮುಂದೆ ಕಾಲಿಟ್ಟಿದ್ದ ಹೂಡಾ ಹೊಡೆಯಲು ಪ್ರಯತ್ನಿಸಿ ವೈಡ್ ಎಂದು ತಿಳಿದು ಬಾಲ್ ಬಿಟ್ಟಿದ್ದಾರೆ. ಆದರೆ ಅಂಪೈರ್ ವೈಡ್ ನಿರಾಕರಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ಹೂಡಾ ಅಂಪೈರ್‌ಗೆ ನಿಂದಿಸಿದ್ದಾರೆ. ಇದನ್ನೂ ಓದಿ: ಅಕ್ಷರ್, ಹೂಡಾ ಹೊಡಿಬಡಿ ಆಟ – ಲಂಕಾಗೆ ಲಗಾಮು ಹಾಕಿದ ಮಾವಿ

    ಅನ್‍ಫೀಲ್ಡ್ ಅಂಪೈರ್ ಕೆ.ಎನ್ ಅನಂತ ಪದ್ಮನಾಭನ್ ವಿರುದ್ಧ ವೈಡ್‍ಗಾಗಿ ವಾದಿಸಿದ ಹೂಡಾ. ಓವರ್ ಮುಕ್ತಾಯದ ಬಳಿಕ ಈ ಬಗ್ಗೆ ಪ್ರಶ್ನಿಸಿದ್ದಾರೆ. ಇದೀಗ ಈ ವೀಡಿಯೋ ವೈರಲ್ ಆಗುತ್ತಿದೆ.

    ಸ್ಲಾಗ್ ಓವರ್‌ಗಳಲ್ಲಿ ಅಬ್ಬರಿಸಿದ ಹೂಡಾ, ಅಕ್ಷರ್
    94 ರನ್‍ಗಳಿಗೆ ಪ್ರಮುಖ 5 ವಿಕೆಟ್ ಕಳೆದುಕೊಂಡು ಕುಸಿತಕಂಡಿದ್ದ ತಂಡಕ್ಕೆ ಆ ಬಳಿಕ ಸ್ಲಾಗ್ ಓವರ್‌ಗಳಲ್ಲಿ ಶಕ್ತಿ ತುಂಬಿದ್ದು, ದೀಪಕ್ ಹೂಡಾ ಮತ್ತು ಅಕ್ಷರ್ ಪಟೇಲ್. ಇವರಿಬ್ಬರೂ ಕುಸಿತದ ಭೀತಿಯಲ್ಲಿದ್ದ ತಂಡಕ್ಕೆ ಭರ್ಜರಿ ಬ್ಯಾಟಿಂಗ್ ಮೂಲಕ ಚೇತರಿಕೆ ನೀಡಿದರು. ಹೂಡಾ ತನ್ನ ಹೊಡಿಬಡಿ ಬ್ಯಾಟಿಂಗ್ ಮೂಲಕ 41 ರನ್ (23 ಎಸೆತ, 1 ಬೌಂಡರಿ, 4 ಸಿಕ್ಸ್) ಚಚ್ಚಿ ಮಿಂಚಿದರು. ಅಕ್ಷರ್ ಪಟೇಲ್ 31 ರನ್ (20 ಎಸೆತ, 3 ಬೌಂಡರಿ, 1 ಸಿಕ್ಸ್) ಬಾರಿಸಿ ತಂಡದ ಮೊತ್ತವನ್ನು 160ರ ಗಡಿ ದಾಟಿಸಿದರು. ಇದನ್ನೂ ಓದಿ: ಮಂಕಡ್‌ ಮೂಲಕ ರನೌಟ್ ಮಾಡಿದ ಜಂಪಾ – ನಾಟೌಟ್‌ ಎಂದ ಅಂಪೈರ್!

    ಈ ಜೋಡಿ 6ನೇ ವಿಕೆಟ್‍ಗೆ ಅಜೇಯ 68 ರನ್ (35 ಎಸೆತ) ಚಚ್ಚಿದ ಪರಿಣಾಮ 20 ಓವರ್‌ಗಳಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ 162 ರನ್ ಬಾರಿಸಿತು. ಬ್ಯಾಟಿಂಗ್‍ನಲ್ಲಿ ಅಕ್ಷರ್ ಪಟೇಲ್ ಮತ್ತು ದೀಪಕ್ ಹೂಡಾ ಧೂಳೆಬ್ಬಿಸಿದರೆ, ಬೌಲಿಂಗ್‍ನಲ್ಲಿ ಶಿವಂ ಮಾವಿ ಶೈನ್ ಆದರು. ಪರಿಣಾಮ 20 ಓವರ್‌ಗಳಲ್ಲಿ 163 ರನ್ ಗುರಿ ಬೆನ್ನಟ್ಟಿದ ಶ್ರೀಲಂಕಾ 160 ರನ್‍ಗಳಿಗೆ ಸರ್ವಪತನ ಕಂಡು ಸೋಲುಂಡಿತು. ಇತ್ತ 2 ರನ್‍ಗಳ ರೋಚಕ ಜಯ ಸಾಧಿಸಿದ ಭಾರತ 3 ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

  • ಸಿಕ್ಸರ್‌ ವೀರ ಸೂರ್ಯ Vs ಎಬಿಡಿ – ಇಬ್ಬರಲ್ಲಿ ಯಾರು ಬೆಸ್ಟ್‌? – ಟ್ವಿಟ್ಟರ್‌ನಲ್ಲಿ ಟ್ರೆಂಡ್‌

    ಸಿಕ್ಸರ್‌ ವೀರ ಸೂರ್ಯ Vs ಎಬಿಡಿ – ಇಬ್ಬರಲ್ಲಿ ಯಾರು ಬೆಸ್ಟ್‌? – ಟ್ವಿಟ್ಟರ್‌ನಲ್ಲಿ ಟ್ರೆಂಡ್‌

    ವೆಲ್ಲಿಂಗ್ಟನ್: ಟಿ20 ಸ್ಪೆಷಲಿಸ್ಟ್ ಆಗಿರುವ ಟೀಂ ಇಂಡಿಯಾ (Team India) ಆಟಗಾರ ಸೂರ್ಯಕುಮಾರ್ ಯಾದವ್ (Suryakumar Yadav) ಅವರನ್ನ ಅಭಿಮಾನಿಗಳು ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ಮನ್ ಎಬಿ ಡಿ ವಿಲಿಯರ್ಸ್‌ಗೆ (Ab de Villiers) ಹೋಲಿಸಿ ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಶುರು ಮಾಡಿದ್ದಾರೆ.

    ಪ್ರತಿ ಇನ್ನಿಂಗ್ಸ್‌ನಲ್ಲೂ ಒಂದಿಲ್ಲೊಂದು ದಾಖಲೆ ಬರೆಯುತ್ತಿರುವ ಸೂರ್ಯಕುಮಾರ್ ಯಾದವ್ ಈ ವರ್ಷದಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್ ಬ್ಯಾಟ್ಸ್‌ಮನ್‌ ಸಹ ಆಗಿದ್ದಾರೆ. ಭಾರತದ ಮಿಸ್ಟರ್ 360 ಎಂದೇ ಕರೆಯುವ ಸೂರ್ಯಕುಮಾರ್ ಯಾದವ್‌ನನ್ನು ಅಭಿಮಾನಿಗಳು ಎಬಿಡಿಗೆ (Ab de Villiers) ಹೋಲಿಸಿ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಶುರು ಮಾಡಿದ್ದಾರೆ. ಅಲ್ಲದೇ ಇಬ್ಬರಲ್ಲಿ ಯಾರು ಬೆಸ್ಟ್‌? ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ಅಭಿಮಾನಿಗಳು ಸೂರ್ಯ ಟಿ20 (T20) ಸ್ಪೆಷಲಿಸ್ಟ್‌ ಆದ್ರೆ, ಎಬಿಡಿ ಎಲ್ಲ ಆವೃತ್ತಿಗಳಲ್ಲೂ ಬೆಸ್ಟ್‌ ಬ್ಯಾಟ್ಸ್‌ಮನ್‌ ಅವರ ಆಟ ಅವರವರಿಗೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  11 ಬೌಂಡರಿ, 7 ಸಿಕ್ಸ್ – ಶತಕ ಸಿಡಿಸಿದ ದಾಖಲೆ ವೀರ ಸೂರ್ಯ

    ಕೀವಿಸ್ (New Zealand) ವಿರುದ್ಧ ದ್ವಿಪಕ್ಷೀಯ ಸರಣಿಯ ಮೊದಲ ಪಂದ್ಯದಲ್ಲಿ ಅಬ್ಬರಿಸಿದ ಸೂರ್ಯ ಕೇವಲ 49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿ, 51 ಎಸೆತಗಳಲ್ಲಿ ಅಜೇಯ 111 ರನ್ ಚಚ್ಚಿ ಮಿಂಚಿದ್ದಾರೆ. ಈ ಮೂಲಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ನಂತರ ಸ್ಪೋಟಕ ಶತಕ ಸಿಡಿಸಿದ 2ನೇ ಆಟಗಾರರಾಗಿದ್ದರು. ಇದು ಟಿ20 ನಲ್ಲಿ ಸೂರ್ಯಕುಮಾರ್ ಸಿಡಿಸಿದ 2ನೇ ಶತಕವಾಗಿದೆ. ಇದನ್ನೂ ಓದಿ: ಶತಕ ಸಿಡಿಸಿ ಮೆರೆದ ಸೂರ್ಯ – ಕೀವಿಸ್ ಕಿವಿ ಹಿಂಡಿದ ಭಾರತ

    ಸೂರ್ಯ ಈಗ ಸಿಕ್ಸರ್ ವೀರ:
    ಸ್ಫೋಟಕ ಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್ ಈ ವರ್ಷದ ಆವೃತ್ತಿಯಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಟಾಪರ್ ಆಗಿದ್ದಾರೆ. ಈ ಆವೃತ್ತಿಯಲ್ಲಿ ಒಟ್ಟು 60 ಸಿಕ್ಸರ್ ಸಿಡಿಸಿದ ಸೂರ್ಯ ಮೊದಲ ಸ್ಥಾನದಲ್ಲಿದ್ದರೆ 43 ಸಿಕ್ಸರ್ ಸಿಡಿಸಿದ ಎಂ.ಡಿ ವಸೀಮ್ 2ನೇ ಸ್ಥಾನದಲ್ಲಿ ಹಾಗೂ 39 ಸಿಕ್ಸರ್ ಸಿಡಿಸಿದ ವೆಸ್ಟ್ ಇಂಡೀಸ್‌ನ ರೋವ್ಮನ್ ಪೋವೆಲ್ ನಂತರದ ಸ್ಥಾನದಲ್ಲಿದ್ದಾರೆ.

    ಭಾನುವಾರ ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಕ್ರೀಸ್‌ಗಿಳಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿತು. ಬೃಹತ್ ಮೊತ್ತದ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ 18.5 ಓವರ್‌ಗಳಲ್ಲೇ ತನ್ನೆಲ್ಲಾ ವಿಕೆಟ್‌ಗಳನ್ನು ಕೆಳದುಕೊಂಡು 65 ರನ್‌ಗಳ ಅಂತರದಲ್ಲಿ ಹೀನಾಯ ಸೋಲನುಭವಿಸಿತು.

    Live Tv
    [brid partner=56869869 player=32851 video=960834 autoplay=true]

  • ಶತಕ ಸಿಡಿಸಿ ಮೆರೆದ ಸೂರ್ಯ – ಕೀವಿಸ್ ಕಿವಿ ಹಿಂಡಿದ ಭಾರತ

    ಶತಕ ಸಿಡಿಸಿ ಮೆರೆದ ಸೂರ್ಯ – ಕೀವಿಸ್ ಕಿವಿ ಹಿಂಡಿದ ಭಾರತ

    ಮೌಂಟ್ ಮೌಂಗನುಯಿ: ಬ್ಯಾಟಿಂಗ್‍ನಲ್ಲಿ ಸೂರ್ಯಕುಮಾರ್ ಯಾದವ್ (Suryakumar Yadav) ಸಿಡಿಸಿದ ಸಿಡಿಲಬ್ಬರದ ಶತಕಕ್ಕೆ ಕಂಗಾಲಾಗಿದ್ದ ನ್ಯೂಜಿಲೆಂಡ್‍ಗೆ (New Zealand) ಬೌಲಿಂಗ್‍ನಲ್ಲಿ ಹೂಡಾ ನೀಡಿದ ಆಘಾತದ ಪರಿಣಾಮ ತವರಿನಲ್ಲಿ ಸೋತಿದೆ.

    ಭಾರತ (India) ನೀಡಿದ 192 ರನ್‍ಗಳ ಬೃಹತ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ಪರ ನಾಯಕ ಕೇನ್ ವಿಲಿಯಮ್ಸನ್ ಹೋರಾಟದ ಹೊರತಾಗಿಯೂ 18.5 ಓವರ್‌ಗಳಲ್ಲಿ ಅಂತ್ಯಕ್ಕೆ 126 ರನ್‍ಗಳಿಗೆ ಸರ್ವಪತನ ಕಂಡಿತು. ಮೊದಲ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತ್ತು. ಇಂದು ನಡೆದ ಎರಡನೇ ಪಂದ್ಯದಲ್ಲಿ ಪಾಂಡ್ಯ ಪಡೆ 65 ರನ್‍ಗಳ ಭರ್ಜರಿ ಜಯ ದಾಖಲಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇದನ್ನೂ ಓದಿ: ಅರ್ಜುನ ಪ್ರಶಸ್ತಿ ಸಿಕ್ಕಿದ್ದು 2017ರಲ್ಲಿ ಕೈ ಸೇರಿದ್ದು 2022ರಲ್ಲಿ – 5 ವರ್ಷಗಳ ಬಳಿಕ ಪೂಜಾರ ಪ್ರಶಸ್ತಿ ಸ್ವೀಕಾರ

    ನ್ಯೂಜಿಲೆಂಡ್ ತಂಡ ಆರಂಭದಲ್ಲೇ ಫಿನ್ ಅಲೆನ್ ವಿಕೆಟ್‍ನ್ನು ಶೂನ್ಯಕ್ಕೆ ಕಳೆದುಕೊಂಡಿತು. ಬಳಿಕ ಡೆವೂನ್ ಕಾನ್ವೇ 25 ರನ್ (22 ಎಸೆತ, 3 ಬೌಂಡರಿ) ಸಿಡಿಸಿ ವಿಕೆಟ್ ಕೈಚೆಲ್ಲಿಕೊಂಡರು. ಆ ಬಳಿಕ ಕುಸಿತ ಕಂಡ ನ್ಯೂಜಿಲೆಂಡ್ ತಂಡಕ್ಕೆ ವಿಲಿಯಮ್ಸನ್ ಮಾತ್ರ ಆಸರೆಯಾದರು. ಕೊನೆಗೆ 18ನೇ ಓವರ್‌ನಲ್ಲಿ ವಿಲಿಯಮ್ಸನ್ 61 ರನ್ (52 ಎಸೆತ, 4 ಬೌಂಡರಿ, 2 ಸಿಕ್ಸ್) ಸಿಡಿಸಿ ಔಟ್ ಆಗುವುದರೊಂದಿಗೆ ನ್ಯೂಜಿಲೆಂಡ್ ಗೆಲುವಿನ ಕನಸು ಭಗ್ನಗೊಂಡಿತು. ಅಂತಿಮವಾಗಿ 18.5 ಓವರ್‌ಗಳ ಅಂತ್ಯಕ್ಕೆ 126 ರನ್‍ಗಳಿಗೆ ಆಲೌಟ್ ಆಯಿತು.

    ಬೌಲಿಂಗ್‍ನಲ್ಲಿ ದೀಪಕ್ ಹೂಡಾ 4 ವಿಕೆಟ್ ಕಿತ್ತು ಮಿಂಚಿದರು. ಸಿರಾಜ್, ಚಾಹಲ್ ತಲಾ 2 ವಿಕೆಟ್ ಪಡೆದರೆ, ವಾಷಿಂಗ್ಟನ್ ಸುಂದರ್ ಮತ್ತು ಭುವನೇಶ್ವರ್‌ ಕುಮಾರ್‌ 1 ವಿಕೆಟ್ ಕಬಳಿಸಿದರು. ಇದನ್ನೂ ಓದಿ: 11 ಬೌಂಡರಿ, 7 ಸಿಕ್ಸ್ – ಶತಕ ಸಿಡಿಸಿದ ದಾಖಲೆ ವೀರ ಸೂರ್ಯ

    ಈ ಮೊದಲು ಟಾಸ್ ಗೆದ್ದ ಅತಿಥೇಯ ತಂಡ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿತು. ಇತ್ತ ಬ್ಯಾಟಿಂಗ್ ಆರಂಭಿಸಿದ ಹಾರ್ದಿಕ್ ಪಾಂಡ್ಯ ನೇತೃತ್ವದ ಯುವ ತಂಡ ಆರಂಭದಲ್ಲಿ ಡಲ್ ಹೊಡೆಸಿತು. ಆರಂಭಿಕರಾಗಿ ಕಣಕ್ಕಿಳಿದ ರಿಷಭ್ ಪಂತ್ 6 ರನ್ (13 ಎಸೆತ, 1 ಬೌಂಡರಿ) ಸಿಡಿಸಿ ಪೆವಿಲಿಯನ್ ದಾರಿ ಹಿಡಿದರು.

    ಇನ್ನೋರ್ವ ಆರಂಭಿಕ ಆಟಗಾರ ಇಶಾನ್ ಕಿಶನ್ ಒಂದು ಕಡೆ ಅಬ್ಬರಿಸುತ್ತ 36 ರನ್ (31 ಎಸೆತ, 4 ಬೌಂಡರಿ, 1 ಸಿಕ್ಸ್) ಚಚ್ಚಿ ಅಬ್ಬರ ನಿಲ್ಲಿಸಿದರು. ಬಳಿಕ ಬಂದ ಶ್ರೇಯಸ್ ಅಯ್ಯರ್ ಆಟ 13 ರನ್‍ಗೆ (9 ಎಸೆತ, 1 ಬೌಂಡರಿ, 1 ಸಿಕ್ಸ್) ಅಂತ್ಯಕಂಡಿತು.

    ಸೂರ್ಯ ಶತಕ ವೀರ:
    ಭಾರತದ ಮೊದಲ ಹತ್ತು ಓವರ್‌ಗಳಲ್ಲಿ ಕುಂಟುತ್ತ ಸಾಗುತ್ತಿದ್ದ ವೇಳೆ ವೇಗ ಹೆಚ್ಚಿಸಲು ಸೂರ್ಯಕುಮಾರ್ ಯಾದವ್ ಮುಂದಾದರು. ತಮ್ಮ ಎಂದಿನ ಹೊಡಿಬಡಿ ಅಟ ಆರಂಭಿಸಿದ ಸೂರ್ಯ 50 ರನ್ (32 ಎಸೆತ) ಸಿಡಿಸಿ ಅರ್ಧಶತಕ ಪೂರೈಸಿದರು. ಬಳಿಕ ಮತ್ತಷ್ಟೂ ಆಕ್ರಮಣ ಶೈಲಿಯಲ್ಲಿ ಬ್ಯಾಟ್‍ಬೀಸಿ ನ್ಯೂಜಿಲೆಂಡ್ ಬೌಲರ್‌ಗಳ ಬೆವರಿಳಿಸಿದ ಸೂರ್ಯ ಮುಂದಿನ 17 ಎಸೆತಗಳಲ್ಲಿ 50 ರನ್ ಚಚ್ಚಿ ಶತಕ ಪೂರೈಸಿದರು.

    ಈ ಶತಕದೊಂದಿಗೆ 2022ರಲ್ಲಿ ಟಿ20 ಕ್ರಿಕೆಟ್‍ನಲ್ಲಿ 2 ಶತಕ ಸಿಡಿಸಿ ಮಿಂಚಿದರು. ಕೊನೆಯ ವರೆಗೆ ಆಡಿದ ಸೂರ್ಯ ಅಜೇಯ 111 ರನ್ (51 ಎಸೆತ, 11 ಬೌಂಡರಿ, 7 ಸಿಕ್ಸ್) ಚಚ್ಚಿ ಸಿಡಿಲಬ್ಬರದ ಬ್ಯಾಟಿಂಗ್‍ನಿಂದಾಗಿ ತಂಡದ ಮೊತ್ತವನ್ನು 190ರ ಗಡಿದಾಟಿಸಿದರು. ಅಂತಿಮವಾಗಿ ಭಾರತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 191 ರನ್ ಬಾರಿಸಿತು. ಟೀಂ ಇಂಡಿಯಾ ಬ್ಯಾಟಿಂಗ್ ಸರದಿಯಲ್ಲಿ ಸೂರ್ಯ 51 ಎಸೆತಗಳಲ್ಲಿ 111 ರನ್ ಬಾರಿಸಿದರೆ, ಉಳಿದ ಬ್ಯಾಟ್ಸ್‌ಮ್ಯಾನ್‌ಗಳು 69 ಎಸೆತಗಳಲ್ಲಿ ಕೇವಲ 67 ರನ್ ಕಲೆಹಾಕಲಷ್ಟೇ ಶಕ್ತರಾದರು.

    ಇತ್ತ ಬೌಲಿಂಗ್‍ನಲ್ಲಿ ಮಿಂಚಿದ ಕೀವಿಸ್ ವೇಗಿ ಟಿಮ್ ಸೌಥಿ ಕೊನೆಯ ಓವರ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದರು.

    Live Tv
    [brid partner=56869869 player=32851 video=960834 autoplay=true]