Tag: Tabla maestro Zakir Hussain

  • ತಬಲಾ ಮಾಂತ್ರಿಕ ಜಾಕಿರ್ ಹುಸೇನ್‌ ನಿಧನ

    ತಬಲಾ ಮಾಂತ್ರಿಕ ಜಾಕಿರ್ ಹುಸೇನ್‌ ನಿಧನ

    ವಾಷಿಂಗ್ಟನ್‌: ತೀವ್ರ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್ (73) ನಿಧನರಾಗಿದ್ದಾರೆ.

    ಖ್ಯಾತ ತಬಲ ವಾದಕ ಜಾಕೀರ್‌ ಹುಸೇನ್‌ ಅವರಿಗೆ ರಕ್ತದೊತ್ತಡ ಸಮಸ್ಯೆ ಇತ್ತು. ಕಳೆದ ವಾರದಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಅವರನ್ನು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

    ಜಾಕೀರ್ ಹುಸೇನ್ ಅಸ್ವಸ್ಥರಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ಅವರ ಸ್ನೇಹಿತ ರಾಕೇಶ್ ಚೌರಾಸಿಯಾ ಕೆಲವೇ ಗಂಟೆಗಳ ಹಿಂದೆ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದರು.

    ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾ ಅವರ ಹಿರಿಯ ಪುತ್ರರಾಗಿದ್ದ ಜಾಕಿರ್ ಹುಸೇನ್ ತಮ್ಮ ತಂದೆಯ ಹಾದಿಯಲ್ಲಿ ಸಾಗುವ ಮೂಲಕ ವಿಶ್ವ ವಿಖ್ಯಾತಿಯನ್ನು ಪಡೆದಿದ್ದರು. ತಮ್ಮ ವೃತ್ತಿ ಜೀವನದಲ್ಲಿ ಅವರು ಐದು ಗ್ರ್ಯಾಮಿ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿಯನ್ನು ಬೆಳಗಿದ್ದರು.

    ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟ ಹುಸೇನ್ ಅವರಿಗೆ 1988 ರಲ್ಲಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಶ್ರೀ, 2002 ರಲ್ಲಿ ಪದ್ಮಭೂಷಣ ಮತ್ತು 2023 ರಲ್ಲಿ ಪದ್ಮವಿಭೂಷಣ ಪುರಸ್ಕಾರಗಳು ಲಭಿಸಿದ್ದವು.

  • ತಬಲಾ ಮಾಂತ್ರಿಕ ಜಾಕಿರ್ ಹುಸೇನ್‌ಗೆ ತೀವ್ರ ಅನಾರೋಗ್ಯ – ಐಸಿಯುನಲ್ಲಿ ಚಿಕಿತ್ಸೆ

    ತಬಲಾ ಮಾಂತ್ರಿಕ ಜಾಕಿರ್ ಹುಸೇನ್‌ಗೆ ತೀವ್ರ ಅನಾರೋಗ್ಯ – ಐಸಿಯುನಲ್ಲಿ ಚಿಕಿತ್ಸೆ

    ವಾಷಿಂಗ್ಟನ್‌: ತಬಲಾ ಮಾಂತ್ರಿಕ ಜಾಕೀರ್ ಹುಸೇನ್ (73) (Tabla maestro Zakir Hussain) ಅವರು ತೀವ್ರ ಹೃದಯ (Heart) ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದು, ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಐಸಿಯುವಿನಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ.

    ಖ್ಯಾತ ತಬಲ ವಾದಕ ಜಾಕೀರ್‌ ಹುಸೇನ್‌ ಅವರಿಗೆ ರಕ್ತದೊತ್ತಡ ಸಮಸ್ಯೆ ಇತ್ತು. ಕಳೆದ ವಾರದಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಅವರನ್ನು ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಸ್ನೇಹಿತ ರಾಕೇಶ್ ಚೌರಾಸಿಯಾ ತಿಳಿಸಿದ್ದಾರೆ.

    ಅವರು ಅಸ್ವಸ್ಥರಾಗಿದ್ದಾರೆ ಮತ್ತು ಇದೀಗ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ನಾವೆಲ್ಲರೂ ಪರಿಸ್ಥಿತಿಯ ಬಗ್ಗೆ ಚಿಂತಿತರಾಗಿದ್ದೇವೆ ಎಂದು ಚೌರಾಸಿಯಾ ಮಾಧ್ಯಮಗಳ ಮುಂದೆ ಭಾವುಕರಾಗಿದ್ದಾರೆ.