ಕನ್ನಡದ ಹಾಸ್ಯ ನಟ ತಬಲಾ ನಾಣಿ (Tabla Nani) ಪುತ್ರಿ ಚಿತ್ರಾ ರಾಮ್ (Chitra) ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸೀಮಂತ ಶಾಸ್ತ್ರದ ಫೋಟೋ ಹಂಚಿಕೊಂಡು, ತಾಯಿಯಾಗುತ್ತಿರುವ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ನಾನು ಕೆಲವು ತಪ್ಪುಗಳನ್ನು ಮಾಡಿದ್ದೇನೆ: ಸಮಂತಾ
ತಬಲಾ ನಾಣಿ ಪುತ್ರಿ ಚಿತ್ರಾ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ತುಂಬು ಗರ್ಭಿಣಿಯಾಗಿರುವ ಚಿತ್ರಾ ಇತ್ತೀಚೆಗೆ ಸರಳವಾಗಿ ಸೀಮಂತ ಶಾಸ್ತ್ರ ಜರುಗಿದೆ. ಕಾರ್ಯಕ್ರಮದ ಕೆಲ ಫೋಟೋಗಳನ್ನು ಚಿತ್ರಾ ಹಂಚಿಕೊಂಡಿದ್ದಾರೆ. ಇದೀಗ ಚಿತ್ರ ದಂಪತಿಗೆ ಅಭಿಮಾನಿಗಳು ಶುಭಕೋರಿದ್ದಾರೆ.
ಅಂದಹಾಗೆ, ಚಿತ್ರಾ ಅವರು ಡಬ್ಬಿಂಗ್ ಆರ್ಟಿಸ್ಟ್ ಆಗಿದ್ದು, ಈ ವರ್ಷ ಫೆಬ್ರವರಿಯಲ್ಲಿ ತಬಲಾ ನಾಣಿ ಪುತ್ರಿ ಮದುವೆ ನಡೆಯಿತು. ‘ವೀಲ್ ಚೇರ್ ರೋಮಿಯೋ’ ಚಿತ್ರದ ಹೀರೋ ರಾಮ್ ಚೇತನ್ (Ram Chethan) ಜೊತೆ ಚಿತ್ರಾ ಅದ್ಧೂರಿಯಾಗಿ ಮದುವೆಯಾದರು.
ಈ ಹಿಂದೆ ದೇಶಪ್ರೇಮ ಸಾರುವ ಆ್ಯಕ್ಟ್ 370 ಎಂಬ ಚಿತ್ರ ನಿರ್ದೇಶಿಸಿದ್ದ ಕೆ.ಶಂಕರ್ (K. Shankar) ಅವರೀಗ ಕಾಮಿಡಿ ಜಾನರ್ ಚಿತ್ರವೊಂದಕ್ಕೆ ಕೈ ಹಾಕಿದ್ದಾರೆ. ಲೈರಾ ಎಂಟರ್ ಟೈನ್ಮೆಂಟ್ ಅಂಡ್ ಮೀಡಿಯಾ ಮೂಲಕ ಭರತ್ ಗೌಡ ಮತ್ತು ಸಿ.ರಮೇಶ್ ಜೊತೆಯಾಗಿ ನಿರ್ಮಿಸುತ್ತಿರುವ, ಕೆ.ಶಂಕರ್ ನಿರ್ದೇಶನವಿರುವ ಆ ಚಿತ್ರದ ಹೆಸರು ‘ನನಗೂ ಹೆಂಡ್ತಿ ಬೇಕು’ (Nanagu Hendti Beku). ದೃಷ್ಟಿ ವಿಕಲಚೇತನನೊಬ್ಬ ಮದುವೆಯಾಗಲು ಹೊರಟಾಗ ನಡೆಯುವ ಪ್ರಸಂಗಗಗಳನ್ನು ಹಾಸ್ಯಮಯವಾಗಿ ಹೇಳುವ ಕಥಾಹಂದರ ಹೊಂದಿರುವ ಈ ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ನಡೆಯುತ್ತಿದೆ. ಕೆ. ಶಂಕರ್ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರ ಸಂಪೂರ್ಣ ಕಾಮಿಡಿ ಜಾನರ್ ಚಿತ್ರವಾಗಿದೆ.
ಮದುವೆಯಾಗಲು ಹೊರಟು ಒಂದು ಹೆಣ್ಣುಕೂಡ ಸಿಗದೇ ಪರಿತಪಿಸುವ ಕುರುಡನ ಪಾತ್ರದಲ್ಲಿ ಹಾಸ್ಯನಟ ತಬಲ ನಾಣಿ (Tabla Nani) ಅವರು ಕಾಣಿಸಿಕೊಂಡಿದ್ದಾರೆ. ತಬಲ ನಾಣಿಗೆ ಎದುರು ಬ್ಯಾಂಕ್ ಜನಾರ್ಧನ್ ಮತ್ತು ಬಾಲು ನಕರಾತ್ಮಕ ಪಾತ್ರದಲ್ಲಿ ರಂಜಿಸಲಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಒಬ್ಬ ಮೂಕಿಯಾಗಿ ನಟಿಸಿದ್ದಾರೆ. ಚಿತ್ರದಲ್ಲಿ ಎರಡು ಫೈಟ್ ಮತ್ತು ಎರಡು ಹಾಡುಗಳಿದ್ದು, ಕೆ.ಎಮ್. ಇಂದ್ರ ಅವರ ಸಂಗೀತ ಸಂಯೋಜನೆಯಿದೆ.
ಇಡೀ ಚಿತ್ರದ ಚಿತ್ರೀಕರಣ ಚಿತ್ರದುರ್ಗದಲ್ಲಿ ನಡೆಯುತ್ತಿದೆ. ಈ ಚಿತ್ರದಲ್ಲಿ ತಬಲಾ ನಾಣಿ, ರಾಜ್ ಬಾಲ, ಬ್ಯಾಂಕ್ ಜನಾರ್ಧನ್, ಶೃತಿ, ಚೈತ್ರಾ ಕೋಟೂರ್ (Chaitra Kotooru), ರಮೇಶ್ ಭಟ್, ಕಿಲ್ಲರ್ ವೆಂಕಟೇಶ್ ಗಣೇಶ್ ರಾವ್, ದೊಡ್ಡ ರಂಗೇಗೌಡ, ಧರ್ಮ, ಕೆಜಿಎಫ್ ಕೃಷ್ಣಪ್ಪ, ಪ್ರಿಯಾಂಕ, ಗಾನವಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.
ಬೆಂಗಳೂರು: ತಬಲನಾಣಿ, `ಕಿರಿಕ್ ಪಾರ್ಟಿ’ ಚಂದನ್ ಆಚಾರ್, ಅಪೂರ್ವ, ಸಂಜನಾ ಹಾಗೂ ಡಾ.ಡಿ.ಎಸ್.ಮಂಜುನಾಥ್ ಹಾಗೂ ಸುಚೇಂದ್ರ ಪ್ರಸಾದ್ ಪ್ರಮುಖ ಭೂಮಿಕೆಯಲ್ಲಿರುವ `ಕೆಮಿಸ್ಟ್ರಿ ಆಫ್ ಕರಿಯಪ್ಪ’ ಯಶಸ್ವಿಯಾಗಿ 25 ದಿನ ಪೂರೈಸಿ 50ನೇ ದಿನದತ್ತ ಮುನ್ನುಗ್ಗುತ್ತಿದೆ. ಇದೇ ಖುಷಿಯಲ್ಲಿ ಚಿತ್ರತಂಡ ಸೆಲೆಬ್ರಿಟಿ ಶೋ ಏರ್ಪಡಿಸಿತ್ತು. `ಗುಳ್ಟು’ ನವೀನ್, ಪ್ರಥಮ್, ನವೀನ್ ಸಜ್ಜು, ಶಶಿಕುಮಾರ್, ಭುವನ್ ಪೊನ್ನಣ್ಣ ಸೇರಿದಂತೆ ಬಿಗ್‍ಬಾಸ್‍ನ ಅನೇಕ ಸ್ಪರ್ಧಿಗಳು ಸಿನಿಮಾ ನೋಡಿ ತಮ್ಮ ಅಭಿಪ್ರಾಯ ಹಂಚಿಕೊಂಡರು.
`ಚಿತ್ರದಲ್ಲಿ ಕಾಮಿಡಿಯೇ ಪ್ಲಸ್ ಪಾಯಿಂಟ್. ತಬಲ ನಾಣಿ ಟೈಮಿಂಗ್ಸ್ ಚಿತ್ರವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಸಹಕಾರಿಯಾಗಿದೆ. ಡೈರೆಕ್ಟರ್ ಕುಮಾರ್ ಎಫರ್ಟ್ ಎದ್ದು ಕಾಣುತ್ತದೆ. ತುಂಬಾ ನೀಟಾದ ಸಿನಿಮಾ ಎಂಬುದರಲ್ಲಿ ಎರಡು ಮಾತಿಲ್ಲ’ ಎಂದು `ಗುಳ್ಟು’ ನವೀನ್ ಅಭಿಪ್ರಾಯಪಟ್ಟರೆ, `ಸಿನಿಮಾ ಆರಾಮಾಗಿ ನೋಡಿಸಿಕೊಂಡು ಹೋಗುತ್ತದೆ. ಮುಗಿಯೋದೇ ಗೊತ್ತಾಗಲ್ಲ. ಕಾಮಿಡಿ ಹಾಗೂ ಮೆಸೇಜ್ ತುಂಬಾ ಚೆನ್ನಾಗಿದೆ’ ಎಂದು ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಶಶಿಕುಮಾರ್. ಇದೇ ರೀತಿ ಸಿನಿಮಾ ನೊಡಿದವರೆಲ್ಲರೂ ಮೆಚ್ಚುಗೆಯ ಮಾತನಾಡಿ ಚಿತ್ರತಂಡದ ಶ್ರಮಕ್ಕೆ ಬೆನ್ನು ತಟ್ಟಿದ್ದಾರೆ.
ಕನ್ನಡ ಸಂಘದಿಂದ ಚಿತ್ರತಂಡಕ್ಕೆ ಸನ್ಮಾನ:
25 ದಿನ ಪೂರೈಸಿದ ಹಿನ್ನೆಲೆಯಲ್ಲಿ `ಗೆಲುವು ಕನ್ನಡ ಗೆಳೆಯರ ಸಮಿತಿ’ಯ ಕೃಷ್ಣಣ್ಣ ಎಂಬುವವರ ನೇತೃತ್ವದಲ್ಲಿ ಇಡೀ ಥಿಯೇಟರ್‍ನ್ನು ಬುಕ್ ಮಾಡಿ ಸುಮಾರು 150ಕ್ಕೂ ಹೆಚ್ಚು ಕುಟುಂಬದವರು ಸಿನಿಮಾ ನೋಡಿ ಚಿತ್ರತಂಡವನ್ನು ಪ್ರಶಂಸಿಸಿದ್ದಾರೆ. ಚಿಕ್ಕವರಿಂದ ದೊಡ್ಡವರವರೆಗೂ `ಕೆಮಿಸ್ಟ್ರಿ ಆಫ್ ಕರಿಯಪ್ಪ’ ಸಿನಿಮಾ ನೋಡಿ ಚಿತ್ರತಂಡವನ್ನು ಆತ್ಮೀಯವಾಗಿ ಸನ್ಮಾನಿಸಿದ್ದಾರೆ.