Tag: Tablighi Jamaat

  • ನೂಪೂರ್‌ಗೆ ಬೆಂಬಲ ನೀಡಿದ್ದಕ್ಕೆ ತಬ್ಲೀಘಿ ಜಮಾತ್‌ನ ಮೂಲಭೂತವಾದಿಗಳಿಂದ ಔಷಧ ವ್ಯಾಪಾರಿಯ ಹತ್ಯೆ: ಎನ್‌ಐಎ

    ನೂಪೂರ್‌ಗೆ ಬೆಂಬಲ ನೀಡಿದ್ದಕ್ಕೆ ತಬ್ಲೀಘಿ ಜಮಾತ್‌ನ ಮೂಲಭೂತವಾದಿಗಳಿಂದ ಔಷಧ ವ್ಯಾಪಾರಿಯ ಹತ್ಯೆ: ಎನ್‌ಐಎ

    ಮುಂಬೈ: ಔಷಧ ವ್ಯಾಪಾರಿ ಉಮೇಶ್‌ ಪ್ರಹ್ಲಾದ್‌ ರಾವ್ ಕೊಲ್ಹೆ ಅವರನ್ನು ಸುನ್ನಿ ಇಸ್ಲಾಮಿಕ್ ಸಂಘಟನೆಯಾದ ತಬ್ಲೀಘಿ ಜಮಾತ್‌ನ(Tablighi Jamaat) ಮೂಲಭೂತವಾದಿ ಇಸ್ಲಾಮಿಸ್ಟ್‌ಗಳು ಹತ್ಯೆ ಮಾಡಿದ್ದಾರೆ ಎಂದು ರಾಷ್ಟ್ರೀಯ ತನಿಖಾ ದಳ(NIA) ಹೇಳಿದೆ.

    ಪೂರ್ವ ಮಹಾರಾಷ್ಟ್ರದ ಅಮರಾವತಿಯ(Amravati) ಔಷಧ ವ್ಯಾಪಾರಿ ಉಮೇಶ್‌ ಪ್ರಹ್ಲಾದರಾವ್ ಕೊಲ್ಹೆ(54) ಅವರ ಹತ್ಯೆಯ ತನಿಖೆ ನಡೆಸಿದ ಎನ್‌ಐಎ 11 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದೆ.

    ಬಿಜೆಪಿ ವಕ್ತಾರೆ ನೂಪೂರ್‌ ಶರ್ಮಾ ಅವರನ್ನು ಬೆಂಬಲಿಸಿ ಉಮೇಶ್‌ ಕೊಲ್ಹೆ ವಾಟ್ಸಪ್‌ನಲ್ಲಿ ಸ್ಟೇಟಸ್‌ ಹಾಕಿದ್ದರು. ಈ ಸ್ಟೇಟಸ್‌ ನೋಡಿ ನಮ್ಮ ಧರ್ಮಕ್ಕೆ ಅವಮಾನ ಮಾಡಿದ್ದಾರೆ ಎಂದು ತಿಳಿದು ಆರೋಪಿಗಳು ಹತ್ಯೆ ಮಾಡಿದ್ದಾರೆ ಎಂದು ಎನ್‌ಐಎ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ.

    ಉಮೇಶ್ ಕೊಲ್ಹೆ ಜೂನ್ 21 ರಂದು ಕೆಲಸ ಮುಗಿಸಿ ಹಿಂತಿರುಗುತ್ತಿದ್ದಾಗ ಮೂವರು ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾಗಿದ್ದರು. ಇದನ್ನೂ ಓದಿ: ನನ್ನ ಪಾಲಿಗೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಕಸ: ನಿರ್ದೇಶಕ ಸಯಿದ್ ಅಖ್ತರ್

    ಪ್ರವಾದಿಗೆ ಅವಮಾನ ಮಾಡಿದ್ದಕ್ಕೆ ಆರೋಪಿಗಳು ಪ್ರತೀಕಾರಕ್ಕೆ ತೀರಿಸಲು ಪುತ್ರನ ಎದುರುಗಡೆಯೇ ಬರ್ಬರವಾಗಿ ಹತ್ಯೆ ಮಾಡಿದ್ದರು. ಎಲ್ಲಾ ಆರೋಪಿಗಳು ತಬ್ಲೀಘಿ ಜಮಾತ್‌ ಸಂಘಟನೆಯ ಸದಸ್ಯರಾಗಿದ್ದರು. ಈ ಕೃತ್ಯದ ಮಾಸ್ಟರ್‌ ಮೈಂಡ್‌ ತಬ್ಲಿಘಿ ಜಮಾತ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿದ್ದ ಎಂದು ಎನ್‌ಐಎ ಹೇಳಿದೆ.

    ಇದು ಸಾಮಾನ್ಯ ಕೊಲೆಯಲ್ಲ. ಧಾರ್ಮಿಕ ಮೂಲಭೂತವಾದವನ್ನು ಬೆಳೆಸಿಕೊಂಡ ಮುಸ್ಲಿಂ ಯುವಕರು ಜನರಿಗೆ ಭಯ ಮಾಡಿಸಲು ಎಸಗಿದ ಈ ಕ್ರಿಮಿನಲ್‌ ಪಿತೂರಿ ಭಯೋತ್ಪಾದನಾ ಕೃತ್ಯಕ್ಕೆ ಸಮವಾಗಿದೆ. ಈ ಕೃತ್ಯದ ಬಳಿಕ ಆರೋಪಿಗಳು ಸಂಭ್ರಮಿಸಿದ್ದರು ಎಂದು ಉಲ್ಲೇಖಿಸಿದೆ.

    ಸೌದಿ ಸರ್ಕಾರದಿಂದ ನಿಷೇಧ:
    ಸೌದಿ ಅರೇಬಿಯಾ ಸರ್ಕಾರ ಸುನ್ನಿ ಇಸ್ಲಾಮಿಕ್ ಸಂಘಟನೆಯಾಗಿರುವ ತಬ್ಲಿಘಿ ಜಮಾತ್ ಅನ್ನು ನಿಷೇಧಿಸಿದೆ. ಈ ಸಂಘಟನೆ ಭಯೋತ್ಪಾದನೆ ಚಟುವಟಿಕೆಗಳಿಗೆ ಹೆಬ್ಬಾಗಿಲು ಎಂದಿರುವ ಸರ್ಕಾರ ಈ ಸಂಘಟನೆಯಿಂದ ದೂರ ಇರುವಂತೆ ಪ್ರಜೆಗಳಿಗೆ 2021ರ ಡಿಸೆಂಬರ್‌ನಲ್ಲಿ ಸೂಚಿಸಿತ್ತು.

    ತಬ್ಲಿಘಿಗಳು ಯಾರು?
    ಬ್ರಿಟಿಷರ ಅವಧಿಯಲ್ಲಿ 1926 ರಲ್ಲಿ ಭಾರತದಲ್ಲಿ ಹುಟ್ಟಿಕೊಂಡ ತಬ್ಲಿಘಿ ಜಮಾತ್ ಸುನ್ನಿ ಇಸ್ಲಾಮಿಕ್ ಮಿಷನರಿ ಸಂಘಟನೆಯಾಗಿದೆ. ಮುಸ್ಲಿಂ ಸಂಪ್ರದಾಯ, ಆಚರಣೆ, ಉಡುಪುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಎಂದು ಪ್ರತಿಪಾದಿಸುತ್ತದೆ. ಜಗತ್ತಿನಾದ್ಯಂತ 35 ರಿಂದ 40 ಕೋಟಿ ಅನುಯಾಯಿಗಳು ಇದ್ದಾರೆ ಎಂದು ಅಂದಾಜಿಸಲಾಗಿದೆ. ರಾಜಕೀಯ ಚಟುವಟಿಕೆಯಿಂದ ದೂರ ಇದ್ದು ಧರ್ಮ ಪ್ರಚಾರ ಮಾತ್ರ ನಮ್ಮ ಕೆಲಸ ಎಂದು ಸಂಘಟನೆ ಹೇಳಿಕೊಳ್ಳುತ್ತದೆ.‌

    Live Tv
    [brid partner=56869869 player=32851 video=960834 autoplay=true]

  • ಉಗ್ರ ಚಟುವಟಿಕೆಗಳಿಗೆ ಹೆಬ್ಬಾಗಿಲು – ತಬ್ಲಿಘಿ ಸಂಘಟನೆಯನ್ನು ನಿಷೇಧಿಸಿದ ಸೌದಿ ಸರ್ಕಾರ

    ಉಗ್ರ ಚಟುವಟಿಕೆಗಳಿಗೆ ಹೆಬ್ಬಾಗಿಲು – ತಬ್ಲಿಘಿ ಸಂಘಟನೆಯನ್ನು ನಿಷೇಧಿಸಿದ ಸೌದಿ ಸರ್ಕಾರ

    ರಿಯಾದ್‌: ಮಹತ್ವದ ಬೆಳವಣಿಗೆಯಲ್ಲಿ ಸೌದಿ ಅರೇಬಿಯಾ ಸರ್ಕಾರ ಸುನ್ನಿ ಇಸ್ಲಾಮಿಕ್ ಸಂಘಟನೆಯಾಗಿರುವ ತಬ್ಲಿಘಿ ಜಮಾತ್ ಅನ್ನು ನಿಷೇಧಿಸಿದೆ. ಈ ಸಂಘಟನೆ ಭಯೋತ್ಪಾದನೆ ಚಟುವಟಿಕೆಗಳಿಗೆ ಹೆಬ್ಬಾಗಿಲು ಎಂದಿರುವ ಸರ್ಕಾರ ಈ ಸಂಘಟನೆಯಿಂದ ದೂರ ಇರುವಂತೆ ಪ್ರಜೆಗಳಿಗೆ ಎಚ್ಚರಿಕೆ ನೀಡಿದೆ.

    ಮುಂದಿನ ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಈ ಕುರಿತು ಜನರಿಗೆ ಮಾಹಿತಿಯನ್ನು ನೀಡಬೇಕೆಂದು ಮಸೀದಿಗಳ ಮುಖ್ಯಸ್ಥರಿಗೆ ಸೌದಿ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯ ಸೂಚಿಸಿದೆ.

    ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದ ಇಸ್ಲಾಮಿಕ್‌ ವ್ಯವಹಾರ ಸಚಿವ ಡಾ. ಅಬ್ದುಲ್ಲತೀಫ್‌ ಆಲ್‌ ಶೇಖ್‌, ಶುಕ್ರವಾರ ಪ್ರಾರ್ಥನೆ ನಡೆಯುವ ವೇಳೆ ಎಲ್ಲ ಮಸೀದಿಗಳ ಮುಖ್ಯಸ್ಥರು ತಬ್ಲಿಘಿ ಮತ್ತು ದಾವಾ ಸಂಘಟನೆಯ ಬಗ್ಗೆ ಎಚ್ಚರಿಕೆ ನೀಡಿ 4 ಅಂಶಗಳ ಬಗ್ಗೆ ಹೇಳಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್‍ನೊಂದಿಗೆ ಮಾತುಕತೆ ಇಲ್ಲದೇ ಉಗ್ರವಾದ ಅಂತ್ಯ ಅಸಾಧ್ಯವಾಗಿದೆ: ಫಾರೂಕ್ ಅಬ್ದುಲ್ಲಾ

    4 ಅಂಶಗಳು ಯಾವುದು?
    1. ಈ ಸಂಘಟನೆಯ ಜೊತೆ ನಂಟು ಹೊಂದುವುದನ್ನು ನಿಷೇಧಿಸಲಾಗಿದೆ ಎಂಬುದನ್ನು ತಿಳಿಸಬೇಕು.
    2. ತಬ್ಲಿಘಿಗಳ ಪ್ರಮುಖ ತಪ್ಪು ನಡೆಗಳ ಬಗ್ಗೆ ವಿವರಿಸಬೇಕು.
    3. ಭಯೋತ್ಪಾನೆಗೆ ಹೆಬ್ಬಾಗಿಲು, ತಪ್ಪು ಮಾರ್ಗದರ್ಶನ ನೀಡುವ ಈ ಸಂಘಟನೆಯಿಂದ ದೂರ ಇರುವಂತೆ ಹೇಳಬೇಕು.
    4. ತಬ್ಲಿಘಿ ಸಂಘಟನೆಯಿಂದ ಸಮಾಜಕ್ಕೆ ಇರುವ ಅಪಾಯದ ಬಗ್ಗೆ ವಿವರಿಸಬೇಕು.

    ತಬ್ಲಿಘಿಗಳು ಯಾರು?
    ಬ್ರಿಟಿಷರ ಅವಧಿಯಲ್ಲಿ 1926 ರಲ್ಲಿ ಭಾರತದಲ್ಲಿ ಹುಟ್ಟಿಕೊಂಡ ತಬ್ಲಿಘಿ ಜಮಾತ್ ಸುನ್ನಿ ಇಸ್ಲಾಮಿಕ್ ಮಿಷನರಿ ಸಂಘಟನೆಯಾಗಿದೆ. ಮುಸ್ಲಿಂ ಸಂಪ್ರದಾಯ, ಆಚರಣೆ, ಉಡುಪುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಎಂದು ಪ್ರತಿಪಾದಿಸುತ್ತದೆ. ಜಗತ್ತಿನಾದ್ಯಂತ 35 ರಿಂದ 40 ಕೋಟಿ ಅನುಯಾಯಿಗಳು ಇದ್ದಾರೆ ಎಂದು ಅಂದಾಜಿಸಲಾಗಿದೆ. ರಾಜಕೀಯ ಚಟುವಟಿಕೆಯಿಂದ ದೂರ ಇದ್ದು ಧರ್ಮ ಪ್ರಚಾರ ಮಾತ್ರ ನಮ್ಮ ಕೆಲಸ ಎಂದು ಸಂಘಟನೆ ಹೇಳಿಕೊಳ್ಳುತ್ತದೆ.‌ ಇದನ್ನೂ ಓದಿ: ಹಿಂದೂ ಧರ್ಮಕ್ಕೆ ಮತಾಂತರಗೊಂಡ ಕೇರಳದ ಖ್ಯಾತ ಸಿನಿಮಾ ನಿರ್ದೇಶಕ ಅಲಿ ಅಕ್ಬರ್

    ಕಳೆದ ವರ್ಷ ಕೋವಿಡ್ ಮೊದಲ ಅಲೆಯ ಸಮಯದಲ್ಲಿ ಭಾರತದಲ್ಲಿ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ಸಾಮೂಹಿಕ ಸಭೆಯ ಆಯೋಜಿಸಿದ್ದಕ್ಕೆ ಈ ಸಂಘಟನೆಯ ವಿರುದ್ಧ ಮೊದಲ ಬಾರಿಗೆ ದೇಶದಲ್ಲಿ ಭಾರೀ ಟೀಕೆಗಳು ವ್ಯಕ್ತವಾಗಿತ್ತು.

    ತಬ್ಲಿಘಿಗಳು ನೇರವಾಗಿ ಉಗ್ರ ಕೃತ್ಯದಲ್ಲಿ ಭಾಗಿಯಾದ ಬಗ್ಗೆ ಉದಾಹರಣೆ ಇಲ್ಲ. ಆದರೆ ಈ ಸಂಘಟನೆ ನೀಡುವ ವಿಪರೀತ ಧರ್ಮ ಬೋಧನೆಯಿಂದ ಇದರ ಅನುಯಾಯಿಗಳು ತೀವ್ರವಾದಿ ಮುಸ್ಲಿಮ್‌ ಸಂಘಟನೆಗಳಿಗೆ ಸೇರುತ್ತಾರೆ ಎನ್ನುವುದು ಅಮೆರಿಕದ ಆರೋಪ.

  • ದೇಶದಲ್ಲಿ ಕೊರೊನಾ ವ್ಯಾಪಿಸಲು ತಬ್ಲಿಘಿಗಳೂ ಕಾರಣ – ಪ್ರಶ್ನೆಗೆ ಕೇಂದ್ರದ ಉತ್ತರ

    ದೇಶದಲ್ಲಿ ಕೊರೊನಾ ವ್ಯಾಪಿಸಲು ತಬ್ಲಿಘಿಗಳೂ ಕಾರಣ – ಪ್ರಶ್ನೆಗೆ ಕೇಂದ್ರದ ಉತ್ತರ

    ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡಲು ತಬ್ಲಿಘಿಗಳೂ ಕಾರಣ. ಒಂದೇ ಸ್ಥಳದಲ್ಲಿ ಹೆಚ್ಚು ಜನ ಸೇರಿದ್ದರಿಂದ ಹಾಗೂ ಸಮಾರಂಭದಲ್ಲಿ ವಿವಿಧ ರಾಜ್ಯಗಳ ಜನರು ಭಾಗವಹಿಸಿದ್ದರಿಂದ ವ್ಯಾಪಕವಾಗಿ ಹಬ್ಬಿತು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಶಿವ ಸೇನೆಯ ಸಂಸದ ಅನಿಲ್ ದೇಸಾಯಿ ಅವರು ದೆಹಲಿ ತಬ್ಲಿಘಿ ಜಮಾತ್ ಸಭೆಯಿಂದ ದೇಶದಲ್ಲಿ ಎಷ್ಟು ಜನರಿಗೆ ಕೊರೊನಾ ಹರಡಿದೆ ಎಂದು ಪ್ರಶ್ನೆ ಕೇಳಿದ್ದರು. ಈ ಪ್ರಶ್ನೆಗೆ ಗೃಹ ಸಚಿವ ಜಿ.ಕೃಷ್ಣಾ ರೆಡ್ಡಿ ಅವರು ರಾಜ್ಯ ಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.

    ಇದರಲ್ಲಿ ಕೊರೊನಾ ವ್ಯಾಪಕವಾಗಿ ಹರಡುವಿಕೆಗೆ ಕಾರಣ ತಿಳಿಸಿದ್ದು, ಮಾರ್ಚ್‍ನಲ್ಲಿ ದೆಹಲಿಯಲ್ಲಿ ನಡೆದ ಮುಸ್ಲಿಂ ಸಮುದಾಯದ ತಬ್ಲಿಘಿ ಜಮಾತ್ ವೇಳೆ ಹೆಚ್ಚು ಜನರು ಒಂದೇ ಕಡೆ ಸೇರಿರುವುದೂ ಕೊರೊನಾ ವ್ಯಾಪಕವಾಗಿ ಹರಡಲು ಕಾರಣ. ಕೊರೊನಾ ಪ್ರಕರಣಗಳು ಕಾಣಿಸಿಕೊಂಡ ಸಂದರ್ಭದಲ್ಲಿ ವಿವಿಧ ಪ್ರಾಧಿಕಾರಗಳು ಹೆಚ್ಚು ಜನ ಸೇರದಂತೆ, ಯಾವುದೇ ಕಾರ್ಯಕ್ರಮ ನಡೆಸದಂತೆ ಕಟ್ಟುನಿಟ್ಟಿನ ಆದೇಶ ನೀಡಿದ್ದರೂ ದೆಹಲಿಯಲ್ಲಿ ಯಾರಿಗೂ ತಿಳಿಯದಂತೆ ಮುಸ್ಲಿಂ ಸಮುದಾಯದವರು ಕಾರ್ಯಕ್ರಮ ನಡೆಸಿದ್ದರು ಎಂದು ತಿಳಿಸಿದ್ದಾರೆ.

    ದೆಹಲಿ ಪೊಲೀಸರು ಈ ಕುರಿತು ವರದಿ ಮಾಡಿದ್ದು, ಕೊರೊನಾ ವೈರಸ್ ಹರಡುವ ಹಿನ್ನೆಲೆ ವಿವಿಧ ಪ್ರಾಧಿಕಾರಗಳು ಆದೇಶ, ಮಾರ್ಗಸೂಚಿಗಳನ್ನು ಹೊರಡಿಸಲಾಗಿತ್ತು. ಇದರ ಹೊರತಾಗಿಯೂ ಯಾರಿಗೂ ತಿಳಿಯದಂತೆ ಗುಪ್ತವಾಗಿ ಬೃಹತ್ ಸಭೆಯನ್ನು ನಡೆಸಲಾಯಿತು. ಈ ವೇಳೆ ಸಾಮಾಜಿಕ ಅಂತರ, ಮಾಸ್ಕ್ ಹಾಗೂ ಸ್ಯಾನಿಟೈಸರ್ ಸೇರಿದಂತೆ ಕೊರೊನಾದ ಯಾವುದೇ ನಿಯಮ ಪಾಲಿಸಿರಲಿಲ್ಲ. ಹೀಗಾಗಿ ಕೊರೊನಾ ವ್ಯಾಪಕವಾಗಿ ಹಬ್ಬಲು ಇದೂ ಒಂದು ಕಾರಣ ಎಂದು ಸಚಿವರು ತಿಳಿಸಿದರು.

    ಮಾರ್ಚ್‍ನಲ್ಲಿ ದೆಹಲಿಯ ನಿಜಾಮುದ್ದೀನ್ ಪ್ರದೇಶದ ಮಸೀದಿಯಲ್ಲಿ ತಬ್ಲಿಘಿ ಜಮಾತ್ ಆಯೋಜಿಸಿದ್ದ ಧಾರ್ಮಿಕ ಕೂಟದಲ್ಲಿ ಭಾಗವಹಿಸಿದ್ದ ವಿದೇಶಿ ಹಾಗೂ ಸ್ಥಳೀಯರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಈ ಧಾರ್ಮಿಕ ಕೂಟದಲ್ಲಿ ಭಾಗವಹಿಸಿದ್ದ ನೂರಾರು ಜನರ ಸಂಪರ್ಕದ ಹಿನ್ನೆಲೆ ವಿವಿಧ ರಾಜ್ಯಗಳಲ್ಲಿ ಕೊರೊನಾ ವ್ಯಾಪಿಸಿತು ಎಂದು ವಿವರಿಸಿದರು.

    ದೆಹಲಿ ಸೇರಿದಂತೆ ದೇಶದ ವಿವಿಧ ನಗರಗಳಿಗೆ ಕೊರೊನಾ ಹೇಗೆ ವ್ಯಾಪಿಸಿತು ಎಂಬುದನ್ನು ವಿವರಿಸಿ ಎಂದು ಅನಿಲ್ ದೇಸಾಯಿ ಕೇಳಿದ್ದರು. ಹೀಗಾಗಿ ಕೇಂದ್ರ ಸಚಿವ ಜಿ.ಕೃಷ್ಣಾ ರೆಡ್ಡಿ ಲಿಖಿತ ಉತ್ತರದ ಮೂಲಕ ಮಾಹಿತಿ ನೀಡಿದ್ದಾರೆ.

    ಬಳಿಕ ತಬ್ಲಿಘಿ ಜಮಾತ್‍ನಲ್ಲಿ ಎಷ್ಟು ಜನ ಭಾಗವಹಿಸಿದ್ದರು, ಎಷ್ಟು ಜನರನ್ನು ಬಂಧಿಸಲಾಗಿದೆ ಎಂದು ಸಂಸದ ಅನಿಲ್ ದೇಸಾಯಿ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಗೃಹ ಸಚಿವಾಲಯ, ತಬ್ಲಿಘಿ ಜಮಾತ್‍ನ ಸುಮಾರು 2,361 ಜನರನ್ನು ಮಾರ್ಚ್ 29ರಂದು ದೆಹಲಿ ಪೊಲೀಸರು ಸ್ಥಳಾಂತರಿಸಿದ್ದಾರೆ. ಜಮಾತ್‍ನ 233 ಜನರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಘಟನೆಗೆ ಸಂಬಂಧಿಸಿದಂತೆ ಜಮಾತ್ ಮುಖ್ಯಸ್ಥ ಮೌಲಾನಾ ಮೊಹದ್ ಸಾದ್‍ನನ್ನು ವಿಚಾರಣೆ ನಡೆಸುತ್ತಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ರೆಡ್ಡಿ ವಿವರಿಸಿದ್ದಾರೆ.

    ದೆಹಲಿ ಪೊಲೀಸರು ಜಮಾತ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ 36 ದೇಶಗಳ 956 ವಿದೇಶಿಗರ ವಿರುದ್ಧ 59 ಚಾರ್ಜ್‍ಶೀಟ್ ಸಲ್ಲಿಸಿದ್ದು, ಕೇಂದ್ರ ಸರ್ಕಾರ ಅವರ ವಿಸಾ ರದ್ದುಪಡಿಸಿದೆ. ಪ್ರವಾಸ ವೀಸಾದಲ್ಲಿ ಬಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಅಪರಾಧ. ಈ ಹಿನ್ನೆಲೆಯಲ್ಲಿ ಪ್ರವಾಸಿ ವೀಸಾ ದುರುಪಯೋಗ ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ. ಈ ವಿದೇಶಿಗರು ಪ್ರವಾಸಿ ವಿಸಾ ಪಡೆದು ಭಾರತಕ್ಕೆ ಬಂದಿದ್ದು, ಧಾರ್ಮಿಕ ಕೂಟಗಳಲ್ಲಿ ಭಾಗಿಯಾಗಿದ್ದರು ಎಂದು ಚಾರ್ಜ್ ಶೀಟ್‍ನಲ್ಲಿ ಉಲ್ಲೇಖಿಸಲಾಗಿದೆ.

  • ತಬ್ಲಿಘಿ ಜಮಾತ್: 2,200 ವಿದೇಶಿಗರಿಗೆ 10 ವರ್ಷ ನಿಷೇಧ ವಿಧಿಸಿದ ಕೇಂದ್ರ

    ತಬ್ಲಿಘಿ ಜಮಾತ್: 2,200 ವಿದೇಶಿಗರಿಗೆ 10 ವರ್ಷ ನಿಷೇಧ ವಿಧಿಸಿದ ಕೇಂದ್ರ

    ನವದೆಹಲಿ: ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 2200 ಮಂದಿ ವಿದೇಶಿಯರಿಗೆ ಕೇಂದ್ರ ಸರ್ಕಾರ 10 ವರ್ಷಗಳ ನಿಷೇಧ ವಿಧಿಸಿದೆ.

    ಭಾರತದಲ್ಲಿ ಕೊರೊನಾ ಪ್ರಕರಣ ಆರಂಭಿಕವಾಗಿ ವರದಿಯಾಗುತ್ತಿದ್ದ ಸಂದರ್ಭದಲ್ಲಿ ತಬ್ಲಿಘಿ ಜಮಾತ್ ಧಾರ್ಮಿಕ ಸಭೆ ಇಡೀ ದೇಶಕ್ಕೆ ಶಾಕ್ ನೀಡಿತ್ತು. ದೇಶದ ಹಲವರು ರಾಜ್ಯಗಳಿಂದ ಆಗಮಿಸಿದ್ದ ಜಮಾತ್ ಸದಸ್ಯರಿಂದ ಸೋಂಕು ಹೆಚ್ಚಾಗಿ ಹರಡಿತ್ತು. ಭಾರತ ಮಾತ್ರವಲ್ಲದೇ ವಿದೇಶದಿಂದ ಆಗಮಿಸಿದ್ದ ಹಲವು ಪ್ರವಾಸಿಗರು ಕೂಡ ಸಭೆಯಲ್ಲಿ ಭಾಗಿಯಾಗಿದ್ದ ಮಾಹಿತಿ ಆ ಬಳಿಕ ಬಹಿರಂಗವಾಗಿತ್ತು. ಪ್ರವಾಸಿ ವೀಸಾ ಪಡೆದು ಭಾರತಕ್ಕೆ ಆಗಮಿಸಿದ್ದ ಹಲವರು ನಿಯಮಗಳನ್ನು ಮೀರಿ ಸಭೆಯಲ್ಲಿ ಭಾಗಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಈ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ.

    2200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳನ್ನು ಕೇಂದ್ರ ಗೃಹ ಇಲಾಖೆ ಬ್ಲಾಕ್ ಲಿಸ್ಟ್ ಗೆ ಸೇರಿಸಿದ್ದು, ಇವರ ಮೇಲೆ 10 ವರ್ಷ ಭಾರತಕ್ಕೆ ಆಗಮಿಸದಂತೆ ನಿಷೇಧ ವಿಧಿಸಿದೆ. ಜಮಾತ್ ಸಭೆಯಲ್ಲಿ ಭಾಗಿಯಾಗಿದ್ದ ಇವರು ನಿಯಮಗಳನ್ನು ಉಲ್ಲಂಘಿಸಿ ದೆಹಲಿಯ ಮರ್ಕಜ್ ಭವನದಲ್ಲಿ ಜರುಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎಂದು ಸರ್ಕಾರ ಗುರುತಿಸಿದೆ. ನಿಷೇಧ ಪಟ್ಟಿಯಲ್ಲಿ ಹೆಚ್ಚಿನ ಮಂದಿ ಇಂಡೋನೇಷ್ಯಾಗೆ ಸೇರಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ದೆಹಲಿ ಕಾರ್ಯಕ್ರಮದ ಬಳಿಕ ಹಲವರು ದೇಶದ ವಿವಿಧ ಭಾಗಗಳಲ್ಲಿ ಜರುಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪರಿಣಾಮ ದೇಶದಲ್ಲಿ ಕೊರೊನಾ ಪ್ರಕರಣ ಸಂಖ್ಯೆ ದಿಢೀರ್ ಎಂದು ಹೆಚ್ಚಾಗಿತ್ತು. ಮೇ 13 ರಿಂದ 17ರ ವರೆಗೂ ದೆಲಿಯ ನಿಜಾಮುದ್ದೀನ್‍ನಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆದಿತ್ತು.

  • ಗ್ರೀನ್ ಝೋನ್ ಚಿತ್ರದುರ್ಗಕ್ಕೆ ಬಂದ ತಬ್ಲಿಘಿಗಳು

    ಗ್ರೀನ್ ಝೋನ್ ಚಿತ್ರದುರ್ಗಕ್ಕೆ ಬಂದ ತಬ್ಲಿಘಿಗಳು

    ಚಿತ್ರದುರ್ಗ: ಕೊರೊನಾ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳದೆ ಗ್ರೀನ್ ಝೋನ್‍ನಲ್ಲಿರು ಚಿತ್ರದುರ್ಗಕ್ಕೆ ತಬ್ಲಿಘಿಗಳು ವಾಪಸ್ ಆಗಿದ್ದಾರೆ.

    ಭಾರತದಲ್ಲಿ ಕೊರೊನಾ ಶುರುವಾದಾಗ ವಿದೇಶಕ್ಕೆ ತೆರಳಿದ್ದ ಚಿತ್ರದುರ್ಗ ಮೂಲದ ಓರ್ವ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದಿದ್ದದಿಂದ ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗಿದ್ದರು. ಮಹಿಳೆ ಗುಣಮುಖರಾಗಿ ಮನೆ ಸೇರಿದ ಬಳಿಕ ನಿಟ್ಟುಸಿರು ಬಿಟ್ಟಿದ್ದರು. ಅಲ್ಲಿಂದ ಇಲ್ಲಿಯವರೆಗೂ ಜಿಲ್ಲೆಯಲ್ಲಿ ಯಾರಿಗೂ ಸೋಂಕು ಕಾಣಿಸಿಕೊಳ್ಳದೆ ಗ್ರೀನ್ ಝೋನ್‍ನಲ್ಲಿದೆ. ಆದರೆ ಮಂಗಳವಾರ ಗುಜರಾತ್‍ನಿಂದ ಬಂದಿರುವ 33ಜನ ತಬ್ಲಿಘಿಗಳು ಬಂದಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿತ್ರದುರ್ಗ ಡಿಎಚ್‍ಓ ಡಾ.ಪಾಲಾಕ್ಷ ಅವರು, ಅದೃಷ್ಟವಶಾತ್ ಅವರೆಲ್ಲರೂ ಸಹ ಈಗಾಗಲೇ ಗುಜರಾತ್‍ನಲ್ಲಿ ತಪಾಸಣೆಗೊಳಪಟ್ಟಿದ್ದು, 30 ದಿನಗಳ ಕ್ವಾರಂಟೈನ್ ಸಹ ಮುಗಿಸಿದ್ದಾರೆ. ಆದರೂ ಅವರನ್ನು ಮುಂಜಾಗ್ರತಾಕ್ರಮವಾಗಿ ಚಿತ್ರದುರ್ಗದ ಸರ್ಕಾರಿ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಹಾಗೆಯೇ ಮತ್ತೊಮ್ಮೆ ಅವರನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸುವುದರ ಜೊತೆಗೆ ಅವರ ಮೇಲೆ ಒಂದು ವಾರಗಳ ಕಾಲ ನಿಗಾ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

    ಚಿತ್ರದುರ್ಗಕ್ಕೆ ವಾಪಸ್ ಆಗಿರುವ ತಬ್ಲಿಘಿಗಳೆಲ್ಲರೂ ಚಿತ್ರದುರ್ಗ, ತುಮಕೂರು ಮೂಲದವರಾಗಿದ್ದು, ಅವರಲ್ಲಿ ಚಿತ್ರದುರ್ಗದ 15 ಜನ ಹಾಗೂ ತುಮಕೂರಿನ 18 ಜನ ತಬ್ಲಿಗಿಗಳು ಒಂದೇ ಬಸ್‍ನಲ್ಲಿ ವಾಪಸ್ ಆಗಿದ್ದಾರೆ. ಅವರು ಗುಜರಾತ್‍ನ ಅಹಮದಾಬಾದ್‍ನಲ್ಲಿ ಮಾರ್ಚ್ 8ರಂದು ನಡೆದ ತಬ್ಲಿಘಿ ಸಭೆಗೆ ತೆರಳಿದ್ದರು. ಲಾಕ್‍ಡೌನ್ ಸಡಿಲಿಕೆಯಿಂದಾಗಿ ಸೋಮವಾರ ಗುಜರಾತಿನಿಂದ ಪ್ರಯಾಣ ಬೆಳೆಸಿ ಇಂದು ಅವರ ಸ್ವಗ್ರಾಮಗಳಿಗೆ ತೆರಳಲು ಆಗಮಿಸಿದ್ದಾರೆ. ಆದರೆ ಎಚ್ಚೆತ್ತ ಜಿಲ್ಲೆಯ ಪೊಲೀಸರು ಚಿತ್ರದುರ್ಗ ತಾಲೂಕಿನ ಬೊಗಳೇರಹಟ್ಟಿ ಚೆಕ್ ಪೋಸ್ಟ್ ಬಳಿ ಅವರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಹೀಗಾಗಿ ಕೋಟೆನಾಡಿನ ಮಂದಿ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯಾಧಿಕಾರಿ ಮನವಿ ಮಾಡಿದ್ದಾರೆ.

    ಜಿಲ್ಲಾ ಆರೋಗ್ಯಾಧಿಕಾರಿಗಳು ಕೂಡ ಚಿತ್ರದುರ್ಗದ 15 ಜನರನ್ನು ಮಾತ್ರ ಇಲ್ಲಿ ಕ್ವಾರಂಟೈನ್ ಮಾಡಿದ್ದು, 18 ಜನರನ್ನು ತುಮಕೂರಿಗೆ ಕಳಿಸಿದ್ದಾರೆ. ಆದರೆ ಈವರೆಗೆ ನಿರಾತಂಕವಾಗಿ ಯಾವುದೇ ಭಯವಿಲ್ಲದೇ ನಿರ್ಭಯವಾಗಿ ಓಡಾಡುತ್ತಿದ್ದ ಚಿತ್ರದುರ್ಗದ ಜನರು ತಬ್ಲಿಘಿಗಳ ಆಗಮನದಿಂದ ಮತ್ತೆ ಚಿಂತಾಕ್ರಾಂತರಾಗಿದ್ದಾರೆ.

  • ಜಮಾತ್‍ಗೆ ಹೋಗಿ ಬಂದವರು ಸೇರಿದಂತೆ ಕ್ವಾರಂಟೈನ್‍ನಲ್ಲಿದ್ದ 238 ಜನರ ಬಿಡುಗಡೆ

    ಜಮಾತ್‍ಗೆ ಹೋಗಿ ಬಂದವರು ಸೇರಿದಂತೆ ಕ್ವಾರಂಟೈನ್‍ನಲ್ಲಿದ್ದ 238 ಜನರ ಬಿಡುಗಡೆ

    ಬಳ್ಳಾರಿ: ಕ್ವಾರಂಟೈನ್‍ನಲ್ಲಿ ಇರಿಸಲಾಗಿದ್ದ ತಬ್ಲಿಘಿ ಜಮಾತ್‍ಗೆ ಹೋಗಿ ಬಂದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳದ ಹಿನ್ನೆಲೆ ಜಿಲ್ಲಾಡಳಿತ ಅವರನ್ನು ಬಿಡುಗಡೆ ಮಾಡಿದೆ.

    ಬಳ್ಳಾರಿ ಜಿಲ್ಲೆಯ ನಾನಾ ಪ್ರದೇಶದಿಂದ ದೆಹಲಿಯ ತಬ್ಲಿಘಿ ಜಮಾತ್‍ಗೆ 92 ಮಂದಿ ಹೋಗಿ ಬಂದಿದ್ದರು. ಹೀಗಾಗಿ ಅವರನ್ನು ಬಳ್ಳಾರಿಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಯದಲ್ಲಿ 79 ಜನರನ್ನು ಪ್ರತ್ಯೇಕವಾಗಿ ಇಡಲಾಗಿತ್ತು. ಇನ್ನು ಉಳಿದ 12 ಜನರು ರಾಜ್ಯದ ಬೇರೆ ಬೇರೆ ಪ್ರದೇಶಗಳಲ್ಲಿ ವಾಸವಾಗಿದ್ದರು. ಹೀಗಾಗಿ ಅವರನ್ನು ಆಯಾ ಪ್ರದೇಶದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇನ್ನು ಜಮಾತ್‍ಗೆ ಹೋಗಿ ಬಂದವರು ಸೇರಿದಂತೆ ಕ್ವಾರಂಟೈನಲ್ಲಿದ್ದ ಜಿಲ್ಲೆಯ ಒಟ್ಟು 238 ಜನರನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ.

    ಇವರೆಲ್ಲಾ ಕೊರೊನಾ ಸೋಂಕು ಹೊಂದಿದವರ ಜೊತೆಯಲ್ಲಿ ಸಂಪರ್ಕ ಹೊಂದಿದ್ದರು. ಆದ್ರೆ ಇವರಲ್ಲಿ ಯಾರಿಗೂ ಸೋಂಕಿನ ಗುಣಲಕ್ಷಣಗಳು ಕಾಣದ ಹಿನ್ನೆಲೆ ಜಿಲ್ಲಾಡಳಿತ ಕ್ವಾರಂಟೈನಿಂದ ಇವರನ್ನು ಬಿಡುಗಡೆ ಮಾಡಿದೆ. ಜಿಲ್ಲಾಡಳಿತ ಇವರಿಗೆ ಕಟ್ಟುನಿಟ್ಟಿನ ಆದೇಶ ಮಾಡಿದ್ದು, ಬಿಡುಗಡೆ ಆದ ಇವರೆಲ್ಲಾ ಹೋಮ್ ಕ್ವಾರಂಟೈನ್‍ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ.

    ಜಿಲ್ಲೆಯಲ್ಲಿ ಈವರೆಗೂ ಒಟ್ಟು 13 ಪಾಸಿಟಿವ್ ಪ್ರಕರಣಗಳು ಪತ್ತೆ ಆಗಿವೆ. ಅಲ್ಲದೇ ತಬ್ಲಿಘಿ ಜಮಾತ್‍ಗೆ ಹೋಗಿ ಬಂದ ಒಬ್ಬರಲ್ಲಿ ಮಾತ್ರ ಸೋಂಕು ಕಾಣಿಸಿಕೊಂಡಿದೆ.

  • ಪಾದರಾಯನಪುರ ರಹಸ್ಯ ಬಯಲು – ಮಸೀದಿಯಲ್ಲಿ ವಿದೇಶಿ ತಬ್ಲಿಘಿಗಳಿಗೆ ಆಶ್ರಯ

    ಪಾದರಾಯನಪುರ ರಹಸ್ಯ ಬಯಲು – ಮಸೀದಿಯಲ್ಲಿ ವಿದೇಶಿ ತಬ್ಲಿಘಿಗಳಿಗೆ ಆಶ್ರಯ

    ಬೆಂಗಳೂರು: ಈಗ ಎಲ್ಲಿ ನೋಡಿದ್ರೂ ಬೆಂಗಳೂರಿನ ಪಾದರಾಯನಪುರದ್ದೇ ಚರ್ಚೆ. ಕೊರೊನಾ ವಾರಿಯರ್ಸ್ ಮೇಲೆ ಸಾಮೂಹಿಕವಾಗಿ ದಾಳಿ ನಡೆಸಿದ ಬಳಿಕ ಪಾದರಾಯನಪುರದೊಳಗಿನ ಒಂದೊಂದೇ ರಹಸ್ಯಗಳು ಬಯಲಾಗ್ತಿವೆ.

    ಪಾದರಾಯನಪುರಕ್ಕೆ ವಿದೇಶಿ ತಬ್ಲಿಘಿಗಳ ನಂಟಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ. ಇಲ್ಲಿನ ಮಸೀದಿಯೊಂದರಲ್ಲಿ ಪಾಸ್‍ಪೋರ್ಟ್ ಅವಧಿ ಮುಗಿದ ಇಂಡೋನೇಷ್ಯಾ ಮತ್ತು ಕಿರ್ಗಿಸ್ಥಾನದ 19 ಮಂದಿಗೆ ಆಶ್ರಯ ನೀಡಲಾಗಿತ್ತು. ಈ ವಿಚಾರ ಶಾಸಕ ಜಮೀರ್ ಅಹ್ಮದ್ ಮತ್ತು ಕಾರ್ಪೋರೇಟರ್ ಇಮ್ರಾನ್ ಪಾಶಾಗೆ ಗೊತ್ತಿದ್ದರೂ ಮುಚ್ಚಿಟ್ಟಿದ್ದರು ಎಂಬ ಆರೋಪ ಕೇಳಿಬಂದಿದೆ.

    ಮಾಹಿತಿ ಮುಚ್ಚಿಟ್ಟವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸೂರ್ಯಪ್ರಸಾದ್  ಜೆಜೆ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ತಬ್ಲಿಘಿ ಧರ್ಮಪ್ರಚಾರಕರಿಂದಲೇ ಪಾದರಾಯನಪುರದಲ್ಲಿ ಸೋಂಕು ಹರಡಿತಾ ಎಂಬ ಪ್ರಶ್ನೆಯೂ ಎದ್ದಿದೆ. ಕೇವಲ ಜೆಜೆ ನಗರ ಒಂದರಲ್ಲೇ 20ಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗಿದ್ದರು.

    ಪಾದರಾಯನಪುರ ಗಲಭೆ ಬಗ್ಗೆ ರಾಜ್ಯ ಸರ್ಕಾರದಿಂದ ಹೈಕೋರ್ಟ್ ವರದಿ ಕೇಳಿದೆ. ವೈದ್ಯರು ಮತ್ತು ಪೊಲೀಸರ ಮೇಲಿನ ದಾಳಿಗೆ ಕಳವಳ ವ್ಯಕ್ತಪಡಿಸಿದ ಹೈಕೋರ್ಟ್, ಮುಂದೆ ಇಂತಹ ಘಟನೆಗಳು ನಡೆಯದಿರಲು ಏನು ಕ್ರಮ ಕೈಗೊಳ್ಳುತ್ತಿದ್ದೀರಿ ಎಂದು ಪ್ರಶ್ನಿಸಿದೆ. ಆರೋಗ್ಯ, ಆಶಾ ಕಾರ್ಯಕರ್ತರಿಗೆ ಸಶಸ್ತ್ರ ಪೊಲೀಸರಿಂದ ಭದ್ರತೆ ನೀಡಲು ಸಾಧ್ಯವೇ ತಿಳಿಸಿ ಎಂದಿದೆ. ಇದನ್ನೂ ಓದಿ: 21 ತಬ್ಲಿಘಿಗಳನ್ನು ಪತ್ತೆಹಚ್ಚಿದ್ದ ಇನ್ಸ್‌ಪೆಕ್ಟರ್‌ಗೆ ಕೊರೊನಾ

    ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದ ವ್ಯಕ್ತಿಗಳು ಕೂಡಲೇ ಆಸ್ಪತ್ರೆಗೆ ತೆರಳಿ ಆರೋಗ್ಯ ಪರೀಕ್ಷೆ ನಡೆಸಬೇಕೆಂದು ಸರ್ಕಾರ ಸೂಚನೆ ನೀಡಿತ್ತು.

    ಈ ಹಿಂದೆ ಮಹಾರಾಷ್ಟ್ರದಲ್ಲಿ ಒಟ್ಟು 21 ತಬ್ಲಿಘಿಗಳು ಮಸೀದಿ ಮತ್ತು ವಿದ್ಯಾ ಕೇಂದ್ರದಲ್ಲಿ ಅಡಗಿ ಕುಳಿತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಈ ತಬ್ಲಿಘಿಗಳನ್ನು ಕ್ವಾರಂಟೈನ್ ಕೇಂದ್ರಕ್ಕೆ ಹಾಕಿದ್ದರು. ಪರೀಕ್ಷೆಯ ವೇಳೆ ಈ ಎಲ್ಲ ತಬ್ಲಿಘಿಗಳಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ದಾಳಿ ಬಳಿಕ ಮಹಾರಾಷ್ಟ್ರ ಪೊಲೀಸರು ಆಶ್ರಯ ನೀಡಿದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು.

  • ಕರ್ನಾಟಕದಿಂದ ತಬ್ಲಿಘಿಗೆ ಹೋದವರು ಎಷ್ಟು? – ಸವಾಲಾಗಿದೆ ಪತ್ತೆ ಕಾರ್ಯ

    ಕರ್ನಾಟಕದಿಂದ ತಬ್ಲಿಘಿಗೆ ಹೋದವರು ಎಷ್ಟು? – ಸವಾಲಾಗಿದೆ ಪತ್ತೆ ಕಾರ್ಯ

    ಬೆಂಗಳೂರು: ಕರ್ನಾಟಕದಿಂದ ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದವರು ಎಷ್ಟು? ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಶ್ನೆಗೆ ಸರ್ಕಾರದ ಬಳಿ ಈಗಲೂ ಸ್ಪಷ್ಟವಾದ ಉತ್ತರವಿಲ್ಲ.

    ಹೌದು, ತಬ್ಲಿಘಿ ಜಮಾತ್ ಧಾರ್ಮಿಕ ಸಭೆಗೆ ಕರ್ನಾಟಕದಿಂದ 1,300 ಮಂದಿ ಭಾಗಿಯಾಗಿದ್ದರು ಎಂದು ಸರ್ಕಾರ ಅಧಿಕೃತ ಮಾಹಿತಿಯನ್ನು ಕಳೆದ ಬುಧವಾರ ಬಿಡುಗಡೆಗೊಳಿತ್ತು. ಕರ್ನಾಟಕದಿಂದ 1,300 ಮಂದಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದ್ದು, 50 ಮಂದಿಗೆ ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ 269 ಮಂದಿ, ಇತರ ಜಿಲ್ಲೆಗಳಲ್ಲಿ 472 ಮಂದಿ ಸೇರಿ ಒಟ್ಟು 801 ಮಂದಿ ಕ್ವಾರಂಟೈನ್‍ನಲ್ಲಿದ್ದು 581 ಮಂದಿ ಇನ್ನೂ ಪತ್ತೆಯಾಗಿಲ್ಲ. 50 ವಿದೇಶಿ ತಬ್ಲಿಘಿಯರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದರು.

    ಹಳೆ ಲೆಕ್ಕದಲ್ಲಿ 1,300 ಮಂದಿ ಇದ್ದರೆ ಕಳೆದ 8 ದಿನಗಳಲ್ಲಿ ಹಲವು ಲೆಕ್ಕ ಸಿಕ್ಕಿದ್ದು ಸುಮಾರು 2 ಸಾವಿರಕ್ಕೂ ಹೆಚ್ಚು ಮಂದಿ ತಬ್ಲಿಘಿ ಕಾರ್ಯಕ್ರಮಕ್ಕೆ ತೆರಳಿದ್ದರು ಎನ್ನುವ ವಿಚಾರ ಈಗ ತಿಳಿದುಬಂದಿದೆ. ರೈಲಿನಲ್ಲಿ ಮಾರ್ಚ್ 20 ರಂದು ಪ್ರಯಾಣಿಸಿದವರು ಮತ್ತು ಈಗಾಗಲೇ ಪತ್ತೆಯಾದ ವ್ಯಕ್ತಿಗಳ ಜೊತೆ ವಿಚಾರಣೆ ವೇಳೆ ಈ ಮಾಹಿತಿ ಲಭ್ಯವಾಗಿದೆ.

    ಈಗ ಉಳಿದ 600 ಮಂದಿ ಎಲ್ಲಿದ್ದಾರೆ? ಅವರನ್ನು ಪತ್ತೆ ಮಾಡುವುದು ಹೇಗೆ ಎನ್ನುವುದೇ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಕಳೆದ 8 ದಿನಗಳಲ್ಲಿ ಜಮಾತ್ ನಂಟಿನಿಂದ ಬೆಳಗಾವಿಯಲ್ಲಿ 18 ಕೊರೊನಾ ಪಾಸಿಟಿವ್ ದಾಖಲಾಗಿದ್ದು ಆತಂಕಕ್ಕೆ ಕಾರಣವಾಗಿದೆ.

    ಸರ್ಕಾರ ಈಗಾಗಲೇ ತಬ್ಲಿಘಿಗೆ ಹೋದವರು ಸ್ವಯಂಪ್ರೇರಿತವಾಗಿ ಆಗಮಿಸಿ ವೈದ್ಯಕೀಯ ಪರೀಕ್ಷೆಗೆ ಬರಬೇಕು ಎಂದು ಸೂಚಿಸಿದ್ದರೂ ಇನ್ನೂ ಹಲವು ಮಂದಿ ಆಗಮಿಸಿಲ್ಲ. ಹೀಗೆ ರಾಜ್ಯದ ಉದ್ದಗಲಕ್ಕೂ ಮತ್ತಷ್ಟು ತಬ್ಲಿಘಿಗಳು ತಲೆಮರೆಸಿಕೊಂಡಿರುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ತಬ್ಲಿಘಿಗಳನ್ನು ಪತ್ತೆ ಹಚ್ಚುವ ಕಾರ್ಯ ಮತ್ತಷ್ಟು ತೀವ್ರಗೊಳಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.

    ಸರಿಯಾದ ಮಾಹಿತಿ ಸಿಗದ ಪರಿಣಾಮ ನಗರ ಪ್ರದೇಶದಲ್ಲಿ ತಬ್ಲಿಘಿಗಳನ್ನ ಪತ್ತೆ ಹಚ್ಚುವುದು ಜಿಲ್ಲಾಡಳಿತಕ್ಕೆ ಹಾಗೂ ಪೊಲೀಸರಿಗೆ ದೊಡ್ಡ ಸವಾಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಅಕ್ಕ ಪಕ್ಕದವರ ದೂರು ಆದರಿಸಿ ಪರಿಶೀಲನೆ ನಡೆಯುತ್ತಿದೆ.

    ಬೆಂಗಳೂರಿನಲ್ಲಿ ಎಷ್ಟಿದೆ?
    ಬೆಂಗಳೂರಿನಲ್ಲಿ ಒಟ್ಟು 71 ಮಂದಿಗೆ ಕೊರೊನಾ ಬಂದಿದ್ದು, ಈ ಪೈಕಿ 35 ಮಂದಿ ಗುಣಮುಖರಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ. ಟ್ರಾವೆಲ್ ಹಿಸ್ಟರಿಯಿಂದ 34( ಶೇ.48), ಪ್ರಾಥಮಿಕ ಸಂಪರ್ಕ 18(ಶೇ.25), ಉಸಿರಾಟದ ತೊಂದರೆ 10(ಶೇ.14), ತಬ್ಲಿಘಿ ಜಮಾತ್ 7(ಶೇ.10) ಮಂದಿಗೆ ಕೊರೊನಾ ಬಂದಿದೆ.

     

  • ಜಮಾತ್ ನಂಜಿಗೆ ಬೆಚ್ಚಿಬಿದ್ದ ಕುಡಚಿ – ಒಂದೇ ಊರಲ್ಲಿ 10ಕ್ಕೆ ಏರಿದ ಸೋಂಕಿತರ ಸಂಖ್ಯೆ

    ಜಮಾತ್ ನಂಜಿಗೆ ಬೆಚ್ಚಿಬಿದ್ದ ಕುಡಚಿ – ಒಂದೇ ಊರಲ್ಲಿ 10ಕ್ಕೆ ಏರಿದ ಸೋಂಕಿತರ ಸಂಖ್ಯೆ

    ಬೆಳಗಾವಿ(ಚಿಕ್ಕೋಡಿ): ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಕರ್ನಾಟಕದಲ್ಲಿಯು ತನ್ನ ಅಟ್ಟಹಾಸ ಮುಂದುವರೆಸಿದೆ. ಹೆಚ್ವು ಸೋಂಕಿತರು ಇರುವ ಪಟ್ಟಿಗೆ ಈಗ ಬೆಳಗಾವಿ ಜಿಲ್ಲೆಯು ಸೇರ್ಪಡೆಯಾಗಿದೆ. ಜಿಲ್ಲೆಯಲ್ಲಿ ಭಾನುವಾರ 14 ಇದ್ದ ಸೊಂಕಿತರ ಸಂಖ್ಯೆ ಸೋಮವಾರಕ್ಕೆ 17ಕ್ಕೆ ಏರಿಕೆಯಾಗಿದೆ.

    ಬೆಳಗಾವಿ ಜಿಲ್ಲೆಯ ಕುಡಚಿ ಪಟ್ಟಣದಲ್ಲಿ ಮತ್ತೆ ಮೂವರಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದ್ದು, ಈ ಮೂಲಕ ಬೆಳಗಾವಿ ಜಿಲ್ಲೆ ಡೋಂಜರ್ ಝೋನ್‍ನತ್ತ ಹೆಜ್ಜೆ ಇಟ್ಟಿದೆ. ಸೋಮವಾರ ಮಧ್ಯಾಹ್ನ ಹೆಲ್ತ್ ಬುಲಿಟಿನ್ ಬಿಡುಗಡೆಯಾಗಿದ್ದು, ಅದರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಮೂರು ಹೊಸ ಸೋಂಕಿತ ಪ್ರಕರಣ ಪತ್ತೆಯಾಗಿರುವುದು ವರದಿಯಾಗಿದೆ. ಈ ಮೂಲಕ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣ ಕೊರೊನಾ ಹಾಟ್‌ಸ್ಪಾಟ್‌ ಆಗಿ ಪರಿಣಮಿಸಿದೆ. ಈಗ ಕುಡಚಿ ಪಟ್ಟಣ ಒಂದರಲ್ಲೇ 10 ಸೋಂಕಿತ ಪ್ರಕರಣಗಳು ಬೆಳಕಿಗೆ ಬಂದಿರ.

    ಸೊಂಕಿತ ರೋಗಿ 149ರ ಇಬ್ಬರೂ ಮೊಮ್ನಕ್ಕಳಿಗೆ ಕೊರೊನಾ ತಗುಲಿದೆ. ರೋಗಿ 243 ಹಾಗೂ ರೋಗಿ 244 ಇಬ್ಬರೂ ರೋಗಿ 149ರ ಮೊಮ್ಮಕ್ಕಳಾಗಿದ್ದು, ರೋಗಿ 245 ಸೇರಿ ಎಲ್ಲರೂ ದೆಹಲಿ ಜಮಾತಗೆ ಹೋಗಿ ಬಂದವರು ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ 7 ಮಂದಿ ಸೋಂಕಿತರಿಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಂದು ವರದಿಯಾದ ಪ್ರಕರಣಗಳ ಸೋಂಕಿತರನ್ನು ಕೂಡ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

    ಕುಡಚಿ ಪಟ್ಟಣದ ಜನತೆ ನಿಜಾಮುದ್ದೀನ್ ನಂಜಿಗೆ ಅಕ್ಷರಶಃ ಬೆಚ್ಚಿ ಬಿದ್ದಿದ್ದು, ಸೋಂಕಿತರ ಸಂಪರ್ಕ ಮಾಡಿದ್ದ 46 ಜನರನ್ನು ಜಿಲ್ಲಾಡಳಿತ ಕ್ವಾರಂಟೈನ ಮಾಡಿದೆ. ದಿನದಿಂದ ದಿನಕ್ಕೆ ಸೊಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಕುಡಚಿ ಪಟ್ಟಣವನ್ನು ಸಂಪೂರ್ಣ ಲಾಕಡೌನ್ ಮಾಡಲಾಗಿದ್ದು, ಲಾಕ್‍ಡೌನ ಉಲಂಘಿಸಿ ಹೊರಬರುವವರ ಮೇಲೆ ಡ್ರೋಣ್ ಕ್ಯಾಮೆರಾ ಮೂಲಕ ಕಣ್ಣಿಟ್ಟಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.

  • ಇಂದು ರಾಜ್ಯದಲ್ಲಿ 17 ವ್ಯಕ್ತಿಗಳಿಗೆ ಕೊರೊನಾ – 6 ಮಂದಿಗೆ ಜಮಾತ್ ನಂಟು

    ಇಂದು ರಾಜ್ಯದಲ್ಲಿ 17 ವ್ಯಕ್ತಿಗಳಿಗೆ ಕೊರೊನಾ – 6 ಮಂದಿಗೆ ಜಮಾತ್ ನಂಟು

    ಬೆಂಗಳೂರು: ಲಾಕ್‍ಡೌನ್ ನಡುವೆಯೂ ಕರ್ನಾಟಕದಲ್ಲಿ ತಬ್ಲಿಘಿಗಳಿಂದ ಕೊರೊನಾ ವೈರಸ್ ಹೆಚ್ಚಾಗುತ್ತಿದೆ.

    ದೆಹಲಿಯ ನಿಜಾಮುದ್ದೀನ್ ಧರ್ಮಸಭೆಗೆ ಹೋಗಿ ಬಂದಿದ್ದ ತಬ್ಲಿಘಿಗಳು ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಸೋಂಕು ಹಬ್ಬಿಸಿದ್ದರು. 1,300 ಮಂದಿ ಪೈಕಿ ನಿನ್ನೆಯವರೆಗೂ 55 ಮಂದಿಗೆ ಸೋಂಕು ತಗುಲಿತ್ತು. ಆ ಸಂಖ್ಯೆ ಈಗ  ಹೆಚ್ಚಾಗಿದೆ.

    ಇಂದು ಬೆಳಕಿಗೆ ಬಂದ 17 ಸೋಂಕಿತರ ಪೈಕಿ 6 ಮಂದಿಗೆ ಜಮಾತ್ ನಂಟಿದೆ. ಕೊರೊನಾಗೆ ಬಲಿಯಾದ ಕಲಬುರಗಿಯ ವೃದ್ಧ(ರೋಗಿ ನಂಬರ್ 177)ನ ಕುಟುಂಬದಲ್ಲಿ ಮತ್ತೆ ಸೋಂಕು ಕಾಣಿಸಿಕೊಂಡಿದೆ.

    ಮೃತ ವೃದ್ಧನ ಸೊಸೆಗೆ ಕೊರೊನಾ ಪಾಸಿಟಿವ್ ಬಂದಿದೆ. ಅಲ್ಲದೇ, ಬಹಮನಿ ಆಸ್ಪತ್ರೆಯಲ್ಲಿದ್ದಾಗ ವೃದ್ಧನನ್ನು ನೋಡಿಕೊಂಡಿದ್ದ ಆಯಾಗೂ ಸೋಂಕು ವ್ಯಾಪಿಸಿದೆ. ಬೆಳಗಾವಿಯ ನಾಲ್ವರಿಗೂ ಕೂಡ ಜಮಾತ್ ನಂಟು ಇರುವುದು ಖಚಿತಪಟ್ಟಿದೆ.

    ರಾಯಭಾಗದ  ರೋಗಿ ನಂಬರ್ 150ರಿಂದ ಮೂವರಿಗೆ ಸೋಂಕು ಹಬ್ಬಿದೆ. ಕ್ವಾರಂಟೇನ್‍ನಲ್ಲಿ ಇರಬೇಕು ಅಂತಾ ಹೇಳಿದ್ದರೂ ಕೇಳದ ಈ ವ್ಯಕ್ತಿ ಸಿಹಿ ತಿಂಡಿ ಮಾರಲು ಹೋಗಿದ್ದರಿಂದ ಸೋಂಕು ಬಂದಿದೆ ಎಂದು ಹೇಳಲಾಗುತ್ತಿದೆ.

    ಇಂದಿನ ಪ್ರಕರಣ
    > ರೋಗಿ ನಂ.220 – ಕಲಬುರಗಿಯ 24 ವರ್ಷದ ಮಹಿಳೆ – ಕೇಸ್ ನಂ.177ರ ಸೊಸೆ
    > ರೋಗಿ ನಂ.222 – ಕಲಬುರಗಿಯ 38 ವರ್ಷದ ಮಹಿಳೆ – ಕೇಸ್ ನಂ.177ರ ಸಂಪರ್ಕ – ಆಸ್ಪತ್ರೆ ಆಯಾ
    > ರೋಗಿ ನಂ.223 – ಬೆಳಗಾವಿಯ ರಾಯಭಾಗದ 19 ವರ್ಷದ ಯುವಕ – ಕೇಸ್ ನಂ.150ರ ಸಂಪರ್ಕ
    > ರೋಗಿ ನಂ.224 – ಬೆಳಗಾವಿಯ ಹಿರೇಬಾಗೇವಾಡಿಯ 38 ವರ್ಷದ ಪುರುಷ – ಕೇಸ್ ನಂ.128ರ ಸಂಪರ್ಕ
    > ರೋಗಿ ನಂ.225 – ಬೆಳಗಾವಿಯ ರಾಯಭಾಗದ 55 ವರ್ಷದ ಪುರುಷ – ಕೇಸ್ ನಂ.150ರ ಸಂಪರ್ಕ
    > ರೋಗಿ ನಂ.226 – ಬೆಳಗಾವಿಯ ರಾಯಭಾಗದ 25 ವರ್ಷದ ಯುವಕ – ಕೇಸ್ ನಂ.150ರ ಸಂಪರ್ಕ