Tag: Tahawwur Rana

  • ಮುಂಬೈ ದಾಳಿ ಮಾಸ್ಟರ್‌ಮೈಂಡ್‌ ತಹವ್ವೂರ್‌ ರಾಣಾ ಅರೆಸ್ಟ್‌

    ಮುಂಬೈ ದಾಳಿ ಮಾಸ್ಟರ್‌ಮೈಂಡ್‌ ತಹವ್ವೂರ್‌ ರಾಣಾ ಅರೆಸ್ಟ್‌

    – ವಿಮಾನ ದೆಹಲಿಗೆ ಬಂದು ಇಳಿಯುತ್ತಿದ್ದಂತೆ ರಾಣಾ ಬಂಧಿಸಿದ ಎನ್‌ಐಎ

    ನವದೆಹಲಿ: ಮುಂಬೈ ದಾಳಿಯ (Mumbai Attack) ಮಾಸ್ಟರ್‌ಮೈಂಡ್‌ ತಹವ್ವೂರ್‌ ರಾಣಾ (Tahawwur Rana) ದೆಹಲಿಗೆ ಬರುತ್ತಿದ್ದಂತೆಯೇ ಆತನನ್ನು ಎನ್‌ಐಎ ಬಂಧಿಸಿದೆ.

    26/11 ಭಯೋತ್ಪಾದಕ ದಾಳಿಯ ಸಂಚುಕೋರ, ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ತಹವ್ವೂರ್ ಹುಸೇನ್ ರಾಣಾನನ್ನು ಗುರುವಾರ ದೆಹಲಿಯ ವಿಮಾನ ನಿಲ್ದಾಣಕ್ಕೆ ಕರೆತರಲಾಯಿತು. ಬುಧವಾರ ವಿಶೇಷ ವಿಮಾನದಲ್ಲಿ ಅಮೆರಿಕದಿಂದ ಆತನನ್ನು ಗಡೀಪಾರು ಮಾಡಲಾಗಿತ್ತು. ಇದನ್ನೂ ಓದಿ: ಉಗ್ರ ಕಸಬ್‌ಗೆ ಬಿರಿಯಾನಿ ತಿನ್ನಿಸಿದ್ದನ್ನ ಮರೆತಿಲ್ಲ – ಕಾಂಗ್ರೆಸ್‌ ವಿರುದ್ಧ ಪಿಯೂಷ್‌ ಗೋಯಲ್‌ ವಾಗ್ದಾಳಿ

    64 ವಯಸ್ಸಿನ ತಹವ್ವೂರ್ ರಾಣಾನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ. ನಿನ್ನೆ ಅಮೆರಿಕದ ಲಾಸ್ ಏಂಜಲೀಸ್‌ನಿಂದ ಹೊರಟ ರಾಣಾ ಇದ್ದ ವಿಮಾನ ದೆಹಲಿಯ ಪಾಲಂ ತಾಂತ್ರಿಕ ಪ್ರದೇಶದಲ್ಲಿ ಇಂದು ಸಂಜೆ ಇಳಿಯಿತು. ಪ್ರಾಥಮಿಕ ಔಪಚಾರಿಕತೆಯ ನಂತರ ಆತನನ್ನು ಎನ್‌ಐಎ ಪ್ರಧಾನ ಕಚೇರಿಗೆ ಕರೆದೊಯ್ಯುವ ಸಾಧ್ಯತೆಯಿದೆ. ಉಗ್ರನನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯಕ್ಕೂ ಹಾಜರುಪಡಿಸಲಾಗುವುದು.

    ನಂತರ ಭಯೋತ್ಪಾದಕ ರಾಣಾನನ್ನು ದೆಹಲಿಯ ಹೆಚ್ಚಿನ ಭದ್ರತೆ ಕಲ್ಪಿಸಲಾಗಿರುವ ತಿಹಾರ್ ಜೈಲಿನಲ್ಲಿ ಇರಿಸಬಹುದು. ಅಂತಿಮವಾಗಿ ವಿಚಾರಣೆಯನ್ನು ಎದುರಿಸಲು ಮುಂಬೈಗೆ ಸ್ಥಳಾಂತರಿಸಬಹುದು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಣಾನಿಗೆ ಬಿರಿಯಾನಿ ಕೊಡಬೇಡಿ: ಮುಂಬೈ ದಾಳಿಯಲ್ಲಿ ಜನರ ರಕ್ಷಣೆಗೆ ನೆರವಾಗಿದ್ದ ಚಹಾ ಮಾರಾಟಗಾರ ಒತ್ತಾಯ

    ಉಗ್ರನ ಮೇಲೆ ಕ್ರಿಮಿನಲ್ ಪಿತೂರಿ, ಭಾರತ ಸರ್ಕಾರದ ವಿರುದ್ಧ ಯುದ್ಧ ಸಾರುವುದು, ಕೊಲೆ ಮತ್ತು ನಕಲಿ ದಾಖಲೆ ಸೃಷ್ಟಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

    ರಾಣಾ ಹಿಂದಿರುಗುವ ಮುನ್ನ ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನಡುವೆ ಸಭೆ ನಡೆದಿತ್ತು. ನಂತರ ಅಮಿತ್‌ ಶಾ ಅವರು, ಈ ಹಸ್ತಾಂತರವು ಪ್ರಧಾನಿ ನರೇಂದ್ರ ಮೋದಿಯವರ ರಾಜತಾಂತ್ರಿಕತೆಯ ದೊಡ್ಡ ಗೆಲುವು ಎಂದು ಬಣ್ಣಿಸಿದ್ದಾರೆ.

    ಅಮೆರಿಕಗೆ ಪ್ರಧಾನಿ ಮೋದಿ ಅವರ ಭೇಟಿಯ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅತ್ಯಂತ ದುಷ್ಟ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅನುಮೋದನೆ ನೀಡಲಾಗಿದೆ ಎಂದು ಘೋಷಿಸಿದ್ದರು. ಆದಾದ ಎರಡು ತಿಂಗಳ ನಂತರ ರಾಣಾನನ್ನು ಹಸ್ತಾಂತರಿಸಲಾಗಿದೆ. ಇದನ್ನೂ ಓದಿ: ಕೊನೆಗೂ ಭಾರತಕ್ಕೆ ಬಂದ ಮುಂಬೈ ದಾಳಿ ಉಗ್ರ ರಾಣಾ

  • ಉಗ್ರ ಕಸಬ್‌ಗೆ ಬಿರಿಯಾನಿ ತಿನ್ನಿಸಿದ್ದನ್ನ ಮರೆತಿಲ್ಲ – ಕಾಂಗ್ರೆಸ್‌ ವಿರುದ್ಧ ಪಿಯೂಷ್‌ ಗೋಯಲ್‌ ವಾಗ್ದಾಳಿ

    ಉಗ್ರ ಕಸಬ್‌ಗೆ ಬಿರಿಯಾನಿ ತಿನ್ನಿಸಿದ್ದನ್ನ ಮರೆತಿಲ್ಲ – ಕಾಂಗ್ರೆಸ್‌ ವಿರುದ್ಧ ಪಿಯೂಷ್‌ ಗೋಯಲ್‌ ವಾಗ್ದಾಳಿ

    – ಪ್ರತಿಯೊಬ್ಬ ಭಾರತೀಯ ಪ್ರಜೆಯೂ ಮೋದಿ ಬಗ್ಗೆ ಹೆಮ್ಮೆ ಪಡ್ತಾರೆ ಎಂದ ಕೇಂದ್ರ ಸಚಿವ

    ನವದೆಹಲಿ: 2008ರ ಮುಂಬೈ ದಾಳಿಯ ಉಗ್ರ ತಹವ್ವೂರ್‌ ರಾಣಾನನ್ನ (Tahawwur Rana) ಕೊನೆಗೂ ಭಾರತಕ್ಕೆ ಕರೆತರಲಾಗುತ್ತಿದೆ. ಆದ್ರೆ ಈ ವಿಷಯದಲ್ಲೂ ಕಾಂಗ್ರೆಸ್‌-ಬಿಜೆಪಿ ನಡುವೆ ರಾಜಕೀಯ ಜಟಾಪಟಿ ನಡೆದಿದೆ. ಮುಂಬೈ ದಾಳಿಯ ಉಗ್ರರನ್ನು ಬಂಧಿಸುವ ವಿಚಾರದಲ್ಲಿ ಅಂದಿನ ಯುಪಿಎ ಸರ್ಕಾರದ ನಡೆಯನ್ನು ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ (Piyush Goyal) ತೀವ್ರವಾಗಿ ಟೀಕಿಸಿದ್ದಾರೆ.

    ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ತಾಜ್‌ ಹೋಟೆಲ್‌ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಅಮಾಯಕರು ಪ್ರಾಣ ಕಳೆದುಕೊಂಡರು. ಆದ್ರೆ ಭಾಗಿಯಾಗಿರುವವರನ್ನು ಶಿಕ್ಷಿಸಲು ಹಿಂದಿನ ಯುಪಿಎ ಸರ್ಕಾರ (UPA Government) ಏನೂ ಮಾಡಲಿಲ್ಲ. ಸೆರೆ ಸಿಕ್ಕಿದ್ದ ಏಕೈಕ ಉಗ್ರ ಅಜ್ಮಲ್‌ ಕಸಬ್‌ಗೆ (Ajmal Kasab) ಬಿರಿಯಾನಿ ತಿನ್ನಿಸುವ ಕೆಲಸ ಮಾಡಿತ್ತು, ಇದನ್ನ ದೇಶದ ಜನ ಮರೆತಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಾಣಾನಿಗೆ ಬಿರಿಯಾನಿ ಕೊಡಬೇಡಿ: ಮುಂಬೈ ದಾಳಿಯಲ್ಲಿ ಜನರ ರಕ್ಷಣೆಗೆ ನೆರವಾಗಿದ್ದ ಚಹಾ ಮಾರಾಟಗಾರ ಒತ್ತಾಯ

    Tahawwur Hussain Rana

    ಮುಂದುವರಿದು.. ನಮ್ಮ ದೇಶದ ಮೇಲೆ ದಾಳಿ ಮಾಡಿದವರಿಗೆ ನ್ಯಾಯ ದೊರಕಿಸಿಕೊಡುವ ಸಂಕಲ್ಪವನ್ನು ನರೇಂದ್ರ ಮೋದಿ ಅಂದೇ ಮಾಡಿದ್ದರು. ಅಂದು ಮೋದಿ ಮಾಡಿದ ಸಂಕಲ್ಪವನ್ನು ಈಡೇರಿಸಿದ್ದಾರೆ. ಇಂದು ಪ್ರತಿಯೊಬ್ಬ ಭಾರತೀಯ ಪ್ರಜೆಯೂ ಮೋದಿ ಬಗ್ಗೆ ಹೆಮ್ಮೆ ಪಡುತ್ತಾರೆ ಎಂದು ಶ್ಲಾಘಿಸಿದ್ದಾರೆ.

    ಇದೇ ವೇಳೆ ಶಿವಸೇನೆ (ಉದ್ಧವ್‌ ಠಾಕ್ರೆ ಬಣ) ವಿರುದ್ಧವೂ ಕಿಡಿ ಕಾರಿದ ಸಚಿವರು, ಸಂಜಯ್‌ ರಾವತ್‌ ಅವರು, ಮುಸ್ಲಿಂ ವ್ಯಕ್ತಿ ಎಂತಹ ದೊಡ್ಡ ಅಪರಾಧದಲ್ಲಿ ತೊಡಗಿಸಿಕೊಂಡಿದ್ದರೂ ಸಮರ್ಥಿಸಿಕೊಳ್ಳುತ್ತಾರೆ. ಏಕೆಂದರೆ, ಉದ್ಧವ್‌ ಠಾಕ್ರೆ ಅವರ ಶಿವಸೇನೆಯು ಕಾಂಗ್ರೆಸ್‌ಗಿಂತ ಹೆಚ್ಚಿನ ತುಷ್ಟೀಕರಣದ ರಾಜಕೀಯದಲ್ಲಿ ತೊಡಗಿದೆ. ಪ್ರಧಾನಿ ಮೋದಿಯವರಂತೆ ಧನಾತ್ಮಕ ಚಿಂತನೆ ಹೊಂದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕೊನೆಗೂ ಭಾರತಕ್ಕೆ ಬಂದ ಮುಂಬೈ ದಾಳಿ ಉಗ್ರ ರಾಣಾ

    ಮುಂಬೈ ದಾಳಿ ಬಳಿಕ ಸೆರೆ ಸಿಕ್ಕಿದ್ದ ಏಕೈಕ ಉಗ್ರ ಅಜ್ಮಲ್‌ ಅಮೀರ್‌ ಕಸಬ್‌ನನ್ನು 2012ರಲ್ಲಿ ಪುಣೆಯ ಯೆರವಾಡ ಜೈಲಿನಲ್ಲಿ ಗಲ್ಲಿಗೇರಿಸಲಾಗಿತ್ತು. ಇದನ್ನೂ ಓದಿ: ಬಾಂಬ್‌ ದಾಳಿಗೂ ಜಗ್ಗಲ್ಲ – ಮುಂಬೈ ದಾಳಿಕೋರನನ್ನ ಕರೆತರಲು ಸಿದ್ಧವಾಯ್ತು NIA ಬುಲೆಟ್ ಪ್ರೂಫ್ ಕಾರು

  • ರಾಣಾನಿಗೆ ಬಿರಿಯಾನಿ ಕೊಡಬೇಡಿ: ಮುಂಬೈ ದಾಳಿಯಲ್ಲಿ ಜನರ ರಕ್ಷಣೆಗೆ ನೆರವಾಗಿದ್ದ ಚಹಾ ಮಾರಾಟಗಾರ ಒತ್ತಾಯ

    ರಾಣಾನಿಗೆ ಬಿರಿಯಾನಿ ಕೊಡಬೇಡಿ: ಮುಂಬೈ ದಾಳಿಯಲ್ಲಿ ಜನರ ರಕ್ಷಣೆಗೆ ನೆರವಾಗಿದ್ದ ಚಹಾ ಮಾರಾಟಗಾರ ಒತ್ತಾಯ

    – ಉಗ್ರರನ್ನು 2-3 ತಿಂಗಳಲ್ಲಿ ಗಲ್ಲಿಗೇರಿಸುವ ವ್ಯವಸ್ಥೆ ಜಾರಿಗೆ ಬರಬೇಕೆಂದು ತೌಫಿಕ್‌ ಒತ್ತಾಯ

    ಮುಂಬೈ: ಉಗ್ರ ತಹವ್ವುರ್‌ ರಾಣಾಗೆ (Tahawwur Rana) ಯಾವುದೇ ವಿಶೇಷ ಸೌಲಭ್ಯ ಕೊಡಬಾರದು. ಆತನಿಗೆ ಬಿರಿಯಾನಿ (Biriyani) ನೀಡದಿರಿ ಎಂದು 26/11 ಮುಂಬೈ ಭಯೋತ್ಪಾದಕ ದಾಳಿಯಲ್ಲಿ (Mumbai Terror Attack) ಅನೇಕ ಜನರನ್ನು ರಕ್ಷಿಸಲು ನೆರವಾಗಿದ್ದ ಮುಂಬೈನ ಪ್ರಸಿದ್ಧ ಚಹಾ ಮಾರಾಟಗಾರ ಮೊಹಮ್ಮದ್ ತೌಫಿಕ್ ಒತ್ತಾಯಿಸಿದ್ದಾರೆ.

    ಭಯೋತ್ಪಾದಕ ಅಜ್ಮಲ್ ಕಸಬ್‌ಗೆ ನೀಡಿದಂತೆಯೇ ಭಾರತವು ತಹವ್ವುರ್ ರಾಣಾಗೆ ಯಾವುದೇ ವಿಶೇಷ ಉಪಚಾರವನ್ನು ನೀಡಬಾರದು. ಪ್ರತ್ಯೇಕ ಸೆಲ್‌ನಂತಹ ವಿಶೇಷ ವ್ಯವಸ್ಥೆ ಕೂಡ ನೀಡಬಾರದು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕೊನೆಗೂ ಭಾರತಕ್ಕೆ ಬಂದ ಮುಂಬೈ ದಾಳಿ ಉಗ್ರ ರಾಣಾ

    ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತು ಮಾತನಾಡಿದ ತೌಫಿಕ್, ಭಾರತ ಅವನಿಗೆ ವಿಶೇಷ ಸೆಲ್ ಒದಗಿಸುವ ಅಗತ್ಯವಿಲ್ಲ. ಕಸಬ್‌ಗೆ ನೀಡಲಾದಂತಹ ಬಿರಿಯಾನಿ ಮತ್ತು ಸೌಲಭ್ಯ ಕೂಡ ಕೊಡಬಾರದು. ಭಯೋತ್ಪಾದಕರಿಗೆ ಪ್ರತ್ಯೇಕ ಕಾನೂನು ಇರಬೇಕು. ಉಗ್ರರನ್ನು 2-3 ತಿಂಗಳೊಳಗೆ ಗಲ್ಲಿಗೇರಿಸುವಂತಹ ವ್ಯವಸ್ಥೆ ಜಾರಿಯಲ್ಲಿರಬೇಕು ಎಂದು ತಿಳಿಸಿದ್ದಾರೆ.

    ಮುಂಬೈ ದಾಳಿ ನಡೆದಾಗ ದಕ್ಷಿಣ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್‌ ಟರ್ಮಿನಸ್‌ನಲ್ಲಿ ತೌಫಿಕ್‌ ಚಹಾ ಅಂಗಡಿ ಇಟ್ಟುಕೊಂಡಿದ್ದರು. ದಾಳಿ ಸಂದರ್ಭದಲ್ಲಿ ಅನೇಕ ಜನರನ್ನು ರಕ್ಷಿಸಲು ತೌಫಿಕ್‌ ನೆರವಾಗಿದ್ದರು. ಗಾಯಗೊಂಡವರನ್ನು ಆಸ್ಪತ್ರೆಗೆ ಕೊಂಡೊಯ್ಯಲು ಸಹಾಯ ಮಾಡಿದ್ದರು. ಇದನ್ನೂ ಓದಿ: ಮುಂಬೈ ದಾಳಿಕೋರ ರಾಣಾ ತನ್ನ ಪ್ರಜೆಯಲ್ಲ – ದಿಢೀರ್‌ ಪಾಕ್‌ ಸ್ಪಷ್ಟನೆ

    166 ಅಮಾಯಕರ ಜೀವಗಳನ್ನು ಬಲಿತೆಗೆದುಕೊಂಡ 2008 ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಆರೋಪವನ್ನು ರಾಣಾ ಎದುರಿಸುತ್ತಿದ್ದಾನೆ. ಅಮೆರಿಕವು ಉಗ್ರನನ್ನು ಭಾರತಕ್ಕೆ ಹಸ್ತಾಂತರಿಸಿದೆ.

  • ಕೊನೆಗೂ ಭಾರತಕ್ಕೆ ಬಂದ ಮುಂಬೈ ದಾಳಿ ಉಗ್ರ ರಾಣಾ

    ಕೊನೆಗೂ ಭಾರತಕ್ಕೆ ಬಂದ ಮುಂಬೈ ದಾಳಿ ಉಗ್ರ ರಾಣಾ

    ನವದೆಹಲಿ: ಮುಂಬೈ ಭಯೋತ್ಪಾದಕ (Mumbai Terror Attack) ದಾಳಿಯ ಸಂಚುಕೋರ ತಹವ್ವುರ್‌ ರಾಣಾನನ್ನು (Tahawwur Rana) ಕೊನೆಗೂ ವಿಶೇಷ ವಿಮಾನದ ಮೂಲಕ ಭಾರತಕ್ಕೆ ಕರೆತರಲಾಯಿತು.

    ರಾಣಾ ಇದ್ದ ವಿಶೇಷ ವಿಮಾನ ಗುರುವಾರ ಸಂಜೆ ದೆಹಲಿಯ ಪಾಲಂ ಏರ್‌ಪೋರ್ಟ್‌ನಲ್ಲಿ ಲ್ಯಾಂಡ್‌ ಆಗಿದೆ. ದೆಹಲಿಯಲ್ಲಿ ಎನ್‌ಐಎ ಬಂಧನ ಪ್ರಕ್ರಿಯೆ ನಡೆಸಿದೆ. ಸ್ಥಳದಲ್ಲಿ ಭಾರೀ ಬಿಗಿ ಭದ್ರತೆ ಕಲ್ಪಿಸಲಾಗಿದೆ.

    ಪಾಕಿಸ್ತಾನ ಮೂಲದ ಕೆನಡಾ ಪ್ರಜೆ ರಾಣಾ (64)ನನ್ನು ಲಾಸ್‌ ಏಂಜಲೀಸ್‌ ಮೆಟ್ರೋಪಾಲಿಟನ್‌ ಬಂಧನ ಕೇಂದ್ರದಲ್ಲಿ ಇರಿಸಲಾಗಿತ್ತು. ಅಮೆರಿಕದಲ್ಲಿ ಬೀಡುಬಿಟ್ಟಿರುವ ಭಾರತದ ಬಹು ಏಜೆನ್ಸಿ ತಂಡವು, ರಾಣಾನನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ನಡೆಸಿತು.

    ಭಾರತಕ್ಕೆ ಗಡೀಪಾರಾಗುವುದರಿಂದ ತಪ್ಪಿಸಿಕೊಳ್ಳಲು ರಾಣಾ ಅಮೆರಿಕದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಆದರೆ, ಆತನ ಅರ್ಜಿಯನ್ನು ಕೋರ್ಟ್‌ ತಿರಸ್ಕರಿಸಿತು. ಗಡೀಪಾರಿನಿಂದ ತಪ್ಪಿಸಿಕೊಳ್ಳುವ ರಾಣಾನ ಕೊನೆಯ ಪ್ರಯತ್ನವೂ ವಿಫಲವಾಗಿದ್ದು, ಇಂದು ಭಾರತಕ್ಕೆ ಕರೆತರಲಾಗುತ್ತಿದೆ.

    ರಾಣಾ 2008ರ ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಪಾಕಿಸ್ತಾನಿ ಅಮೆರಿಕನ್‌ ಪ್ರಜೆ ಡೇವಿಡ್‌ ಕೋಲ್ಮನ್‌ ಹೆಡ್ಲಿ ಅಲಿಯಾಸ್‌ ದಾವೂದ್‌ ಗಿಲಾನಿಯ ನಿಕಟ ಸಹಚರನಾಗಿದ್ದ.

  • ಮುಂಬೈ ದಾಳಿಕೋರ ರಾಣಾ ತನ್ನ ಪ್ರಜೆಯಲ್ಲ – ದಿಢೀರ್‌ ಪಾಕ್‌ ಸ್ಪಷ್ಟನೆ

    ಮುಂಬೈ ದಾಳಿಕೋರ ರಾಣಾ ತನ್ನ ಪ್ರಜೆಯಲ್ಲ – ದಿಢೀರ್‌ ಪಾಕ್‌ ಸ್ಪಷ್ಟನೆ

    ಇಸ್ಲಾಮಾಬಾದ್‌: ಮುಂಬೈ ದಾಳಿಯ (Mumbai Attack) ಉಗ್ರ ತಹವ್ವೂರ್ ರಾಣಾ (Tahawwur Rana) ತನ್ನ ಪ್ರಜೆಯಲ್ಲ, ಆತ ಕೆನಡಾದ (Canada) ಪ್ರಜೆ ಎಂದು ಪಾಕಿಸ್ತಾನ (Pakistan) ಹೇಳಿದೆ.

    ಅಮೆರಿಕದಿಂದ ರಾಣಾನನ್ನು ಭಾರತ ಕರೆ ತರುತ್ತಿದ್ದಂತೆ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಅಂತರ ಕಾಯ್ದುಕೊಳ್ಳಲು ಮುಂದಾಗಿದೆ. ಆತ ತನ್ನ ಹೆಸರನ್ನು ಹೇಳಬಹುದು ಎಂಬ ಭಯದಿಂದ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡದ ಪಾಕ್‌ ಈಗ ದಿಢೀರ್‌ ಸ್ಪಷ್ಟೀಕರಣ ನೀಡಿದೆ.

    ಈ ಸಂಬಂಧ ವಾರದ ಮಾಧ್ಯಮ ಸುದ್ದಿಗೋಷ್ಠಿಯಲ್ಲಿ ವಿದೇಶಾಂಗ ಇಲಾಖೆ, ರಾಣಾ ಎರಡು ದಶಕಗಳಿಗೂ ಹೆಚ್ಚು ಕಾಲ ತನ್ನ ಪೌರತ್ವವನ್ನು ನವೀಕರಿಸದ ಕಾರಣ ಆತ ಪಾಕಿಸ್ತಾನಿ ಪ್ರಜೆಯಲ್ಲ ಎಂದು ಹೇಳಿದೆ. ಇದನ್ನೂ ಓದಿ: ಬಾಂಬ್‌ ದಾಳಿಗೂ ಜಗ್ಗಲ್ಲ – ಮುಂಬೈ ದಾಳಿಕೋರನನ್ನ ಕರೆತರಲು ಸಿದ್ಧವಾಯ್ತು NIA ಬುಲೆಟ್ ಪ್ರೂಫ್ ಕಾರು

    ಕಳೆದ ಎರಡು ದಶಕಗಳಿಂದ ತಹವ್ವೂರ್ ರಾಣಾ ತನ್ನ ಪಾಕಿಸ್ತಾನಿ ದಾಖಲೆಗಳನ್ನು ನವೀಕರಿಸಿಲ್ಲ. ಇದರಿಂದ ಆತ ಕೆನಡಾ ಪ್ರಜೆ ಎನ್ನುವುದು ಸ್ಪಷ್ಟವಾಗಿದೆ ಎಂದು ತಿಳಿಸಿದೆ.

    ಗುಪ್ತಚರ ವರದಿಗಳ ಪ್ರಕಾರ, ರಾಣಾ ಪಾಕಿಸ್ತಾನದ ಐಎಸ್‌ಐ ಜೊತೆ ಆಳವಾದ ಸಂಪರ್ಕ ಹೊಂದಿದ್ದ ಮತ್ತು ಪಾಕ್‌ ಸೇನೆಗೆ ಬೆಂಬಲ ನೀಡಿದ್ದ. ಮುಂಬೈ ದಾಳಿಯ ಸಂಚು ರೂಪಿಸುವಲ್ಲಿ ಪಾಕಿಸ್ತಾನದ ನೇರ ಪಾತ್ರದ ಬಗ್ಗೆ ರಾಣಾ ಬಹಿರಂಗ ಪಡಿಸುವ ಸಾಧ್ಯತೆಯಿದೆ.

    ಐಎಸ್‌ಐ ಭಾಗಿಯಿಂದ ಹಿಡಿದು ಲಷ್ಕರ್-ಎ-ತೊಯ್ಬಾದ ಜೊತೆಗಿನ ಸಮನ್ವಯದವರೆಗಿನ ಸಂಪೂರ್ಣ ಜಾಲವನ್ನು ರಾಣಾ ಬಹಿರಂಗಪಡಿಸುವ ಸಾಧ್ಯತೆಯಿದೆ.

    ಹೆಡ್ಲಿ ಮತ್ತು ಲಷ್ಕರ್ ಜೊತೆ ರಾಣಾ ಸಂಪರ್ಕ
    ದಾಳಿಯ ಮೊದಲು ಮುಂಬೈ ಸ್ಥಳಗಳ ಮೇಲೆ ದಾಳಿ ನಡೆಸಿದ್ದ ಪಾಕಿಸ್ತಾನಿ-ಅಮೆರಿಕನ್ ಭಯೋತ್ಪಾದಕ ಡೇವಿಡ್ ಕೋಲ್ಮನ್ ಹೆಡ್ಲಿಯೊಂದಿಗಿನ ನಿಕಟ ಸಂಬಂಧದಿಂದಾಗಿ ರಾಣಾ ಹೆಸರು ಮುನ್ನೆಲೆಗೆ ಬಂದಿತ್ತು.

    ತಹಾವೂರ್ ರಾಣಾ ಯಾರು?
    ತಹಾವೂರ್ ರಾಣಾ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ. ತನ್ನ ಬಾಲ್ಯದ ಗೆಳೆಯ ಡೇವಿಡ್ ಕೋಲ್ಮನ್ ಹೆಡ್ಲಿ, ದಾವೂದ್ ಗಿಲಾನಿ ಮತ್ತು ಇತರರಿಗೆ ಸಹಕರಿಸಿದ್ದ. ಈ ಮೂಲಕ ಮುಂಬೈನಲ್ಲಿ ಲಷ್ಕರ್ ಭಯೋತ್ಪಾದಕ ದಾಳಿಯ ಯೋಜನೆ ಮತ್ತು ಕಾರ್ಯಗತಗೊಳಿಸಿದ್ದ.

    ರಾಣಾ ನವೆಂಬರ್ 11 ಮತ್ತು 21, 2008 ರ ನಡುವೆ ದುಬೈ ಮೂಲಕ ಮುಂಬೈಗೆ ಬಂದಿದ್ದ. ಪೊವೈನಲ್ಲಿರುವ ಹೋಟೆಲ್ ರಿನೈಸಾನ್ಸ್‌ನಲ್ಲಿ ತಂಗಿ ದಾಳಿಗೆ ಬೇಕಾದ ಸಿದ್ಧತೆ ಪರಿಶೀಲಿಸಿದ್ದ. ಈತ ದುಬೈಗೆ ಹೋದ 5 ದಿನಗಳ ಬಳಿಕ ದಾಳಿ ನಡೆದಿತ್ತು.

    ಭಾರತವು ಜೂನ್ 2020 ರಲ್ಲಿ ರಾಣಾನನ್ನು ಗಡೀಪಾರುಗಾಗಿ ಕಾನೂನು ಪ್ರಕ್ರಿಯೆಯನ್ನು ಪ್ರಾರಂಭಿಸಿತು. ಈ ವರ್ಷದ ಫೆಬ್ರವರಿಯಲ್ಲಿ, ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಣಾನನ್ನು ಗಡೀಪಾರು ಮಾಡಲಾಗುವುದು ಎಂದು ದೃಢಪಡಿಸಿದ್ದರು.

    ಮುಂಬೈ ದಾಳಿ:
    2008 ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ ಭಯೋತ್ಪಾದಕರು ಪ್ರವೇಶಿಸಿದ್ದರು. ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನು ನಡೆಸಿ 166 ಜನರನ್ನು ಕೊಂದಿದ್ದರು. 300 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು.

  • ಬಾಂಬ್‌ ದಾಳಿಗೂ ಜಗ್ಗಲ್ಲ – ಮುಂಬೈ ದಾಳಿಕೋರನನ್ನ ಕರೆತರಲು ಸಿದ್ಧವಾಯ್ತು NIA ಬುಲೆಟ್ ಪ್ರೂಫ್ ಕಾರು

    ಬಾಂಬ್‌ ದಾಳಿಗೂ ಜಗ್ಗಲ್ಲ – ಮುಂಬೈ ದಾಳಿಕೋರನನ್ನ ಕರೆತರಲು ಸಿದ್ಧವಾಯ್ತು NIA ಬುಲೆಟ್ ಪ್ರೂಫ್ ಕಾರು

    – ರಾಣಾನನ್ನ ತಿಹಾರ್‌ ಜೈಲಲ್ಲಿಡಲು ವ್ಯವಸ್ಥೆ – ದೆಹಲಿಯಲ್ಲೇ ನಡೆಯಲಿದೆ ವಿಚಾರಣೆ

    ಮುಂಬೈ: 2008ರ ಮುಂಬೈ ಭಯೋತ್ಪಾದಕ ದಾಳಿಯ (Mumbai Attack) ಸಂಚುಕೋರ ತಹವ್ವೂರ್ ರಾಣಾನನ್ನು (Tahawwur Rana) ಅಮೆರಿಕದಿಂದ ಗಡಿಪಾರು ಮಾಡಲಾಗಿದ್ದು ಇಂದು ಮಧ್ಯಾಹ್ನದ ಬಳಿಕ ಭಾರತಕ್ಕೆ ಬಂದಿಳಿಯಲಿದ್ದಾನೆ.

    ಎನ್‌ಐಎ ಮತ್ತು ರಾ ಅಧಿಕಾರಿ ತಂಡಗಳ ಬಿಗಿ ಭದ್ರತೆಯೊಂದಿಗೆ ವಿಶೇಷ ವಿಮಾನದಲ್ಲಿ ದೆಹಲಿಯ ಪಾಲಂ ಏರ್‌ಪೋರ್ಟ್‌ನ ಟರ್ಮಿನಲ್‌ 1ನಲ್ಲಿ ಬಂದಿಳಿಯಲಿದ್ದಾನೆ. ಇಲ್ಲಿಂದ ಅವನನ್ನ ಎನ್‌ಐಎ ಕೇಂದ್ರ ಕಚೇರಿಗೆ ಕರೆದೊಯ್ಯಲು ವಿಶೇಷ ಬುಲೆಟ್‌ ಪ್ರೂಫ್‌ ವಾಹನ ಸಿದ್ಧವಾಗಿದೆ. ಅದಕ್ಕಾಗಿ ಎನ್‌ಐಎ ಕಚೇರಿ ಹೊರಗಿನ ಭದ್ರತೆ ಪರಿಶೀಲಿಸಲು ದಕ್ಷಿಣ ಡಿಸಿಪಿ ಸ್ಥಳಕ್ಕೆ ತೆರಳಿದ್ದಾರೆ.

    MUMBAI ATTACK

    ಎನ್‌ಐಎ ಮೂಲಗಳ ಪ್ರಕಾರ, ಈಗಾಗಲೇ ರಾಣಾನನ್ನ ಸೇಫಾಗಿ ಎನ್‌ಐಎ ಕಚೇರಿಗೆ ಕರೆತರಲು ಮಾರ್ಕ್ಸ್‌ಮನ್‌ (Marksman) ವಿಶೇಷ ಬುಲೆಟ್‌ ಪ್ರೂಫ್‌ ವಾಹನವನ್ನ ಪಾಲಂ ಏರ್‌ಪೋರ್ಟ್‌ನಲ್ಲಿ ಇರಿಸಲಾಗಿದೆ. ದೆಹಲಿ ಪೊಲೀಸರ ವಿಶೇಷ ವಿಭಾಗದ SWAT (ಸ್ವಾಟ್‌) ಕಾಂಡೋಗಳನ್ನೂ ಸಹ ಸ್ಥಳದಲ್ಲಿ ನಿಯೋಜಿಸಲಾಗಿದೆ. ಜೊತೆಗೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ಭದ್ರತಾ ವಿಭಾಗ ಮತ್ತು ಸ್ಥಳೀಯ ಪೊಲೀಸರು ವಿಮಾನ ನಿಲ್ದಾಣದ ಹೊರಭಾಗದಲ್ಲಿ ಅಲರ್ಟ್ ಆಗಿದ್ದಾರೆ.

    ಮಾರ್ಕ್ಸ್‌ಮನ್‌ ಬುಲೆಟ್‌ಪ್ರೂಫ್‌ ಕಾರು ಎಷ್ಟು ಸೇಫ್‌?
    ಮಾರ್ಕ್ಸ್‌ಮನ್‌ (Marksman) ಅತ್ಯಂತ ಸುರಕ್ಷಿತವಾದ ಕಾರು, ಬುಲೆಟ್‌ ನಿಂದ ಮಾತ್ರವಲ್ಲದೇ ಗ್ರೆನೇಡ್‌ ದಾಳಿ ನಡೆದರೂ ಸಹ ಇದರ ಒಳಗಿರುವವರಿಗೆ ಯಾವುದೇ ಪರಿಣಾಮ ಬೀರುವುದಿಲ್ಲ. ದೊಡ್ಡ ದೊಡ್ಡ ಭಯೋತ್ಪಾದಕರು, ದರೋಡೆಕೋರರನ್ನು ಸಂಬಂಧ ಪಟ್ಟ ಸ್ಥಳಗಳಿಗೆ ಸುರಕ್ಷಿತವಾಗಿ ಕರೆದೊಯ್ಯಲು ಈ ವಾಹನವನ್ನ ಬಳಸಲಾಗುತ್ತದೆ.

    ರಾಣಾ ಭಾರತಕ್ಕೆ ತಲುಪಿದ ಕೂಡಲೇ ಎನ್‌ಐಎ ತಂಡ ಅಧಿಕೃತವಾಗಿ ಕಸ್ಟಡಿಗೆ ತೆಗೆದುಕೊಳ್ಳಲಿದೆ. ಮೊದಲು ಎನ್‌ಐಎ ಕಚೇರಿಗೆ ಕರೆತರಲಿದ್ದು, ಕೆಲ ಕಾಲ ವಿಚಾರಣೆ ಬಳಿಕ ಪಟಿಯಾಲ ಹೌಸ್‌ ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆಯಿದೆ. ಕೋರ್ಟ್‌ಗೆ ಹಾಜರುಪಡಿಸುವುದಕ್ಕೂ ಮುನ್ನ ಎನ್‌ಐಎ ಅಧಿಕಾರಿಗಳ ಭದ್ರತೆಯಲ್ಲೇ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ನಂತರ ದೆಹಲಿ ತಿಹಾರ್ ಜೈಲಿನ ಹೈಸೆಕ್ಯುರಿಟಿ ವಾರ್ಡ್‌ನಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ತಹವ್ವೂರ್ ರಾಣಾ ಯಾರು?
    ತಹವ್ವೂರ್ ರಾಣಾ ಹುಟ್ಟಿದ್ದು ಪಾಕಿಸ್ತಾನದಲ್ಲಿ. ಆರ್ಮಿ ಮೆಡಿಕಲ್ ಕಾಲೇಜಿನಲ್ಲಿ (Medical College) ಅಧ್ಯಯನ ಮಾಡಿದ ರಾಣಾ, ಪಾಕಿಸ್ತಾನದ ಸೇನೆಯಲ್ಲಿ 10 ವರ್ಷಗಳ ಕಾಲ ವೈದ್ಯನಾಗಿ ಕೆಲಸ ಮಾಡಿದ್ದ. ಈ ಕೆಲಸ ಇಷ್ಟವಾಗದೇ ಸೇನೆ ತೊರೆದ ರಾಣಾ, ಭಾರತದ ವಿರುದ್ಧ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿದ್ದ. ಸದ್ಯ ರಾಣಾ ಕೆನಡಾ ಮೂಲದ ಉದ್ಯಮಿ.

    Ajit Doval

    ರಾಣಾ ನವೆಂಬರ್ 11 ಮತ್ತು 21, 2008 ರ ನಡುವೆ ದುಬೈ ಮೂಲಕ ಮುಂಬೈಗೆ ಬಂದಿದ್ದ. ಪೊವೈನಲ್ಲಿರುವ ಹೋಟೆಲ್ ರಿನೈಸಾನ್ಸ್‌ನಲ್ಲಿ ತಂಗಿ ದಾಳಿಗೆ ಬೇಕಾದ ಸಿದ್ಧತೆ ಪರಿಶೀಲಿಸಿದ್ದ. ಈತ ದುಬೈಗೆ ಹೋದ 5 ದಿನಗಳ ಬಳಿಕ ದಾಳಿ ನಡೆದಿತ್ತು. ಭಾರತವು ಜೂನ್ 2020 ರಲ್ಲಿ ರಾಣಾನನ್ನು ಗಡಿಪಾರಿಗಾಗಿ ಕಾನೂನು ಪ್ರಕ್ರಿಯೆಯನ್ನು ಪ್ರಾರಂಭಿಸಿತು. ಈ ವರ್ಷದ ಫೆಬ್ರವರಿಯಲ್ಲಿ, ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಣಾನನ್ನು ಗಡಿಪಾರು ಮಾಡಲಾಗುವುದು ಎಂದು ದೃಢಪಡಿಸಿದ್ದರು.

    ನೆನಪಿದೆಯಾ ಕರಾಳ ಮುಂಬೈ ದಾಳಿ
    2008 ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ ಭಯೋತ್ಪಾದಕರು ಪ್ರವೇಶಿಸಿದ್ದರು. ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನು ನಡೆಸಿ 166 ಜನರನ್ನು ಕೊಂದಿದ್ದರು. 300 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು.

  • 2008ರ ಮುಂಬೈ ದಾಳಿ ಆರೋಪಿ ಭಾರತ ಹಸ್ತಾಂತರ ತಡೆ ಅರ್ಜಿ ತಿರಸ್ಕರಿಸಿದ ಯುಎಸ್‌ ಸುಪ್ರೀಂ ಕೋರ್ಟ್

    2008ರ ಮುಂಬೈ ದಾಳಿ ಆರೋಪಿ ಭಾರತ ಹಸ್ತಾಂತರ ತಡೆ ಅರ್ಜಿ ತಿರಸ್ಕರಿಸಿದ ಯುಎಸ್‌ ಸುಪ್ರೀಂ ಕೋರ್ಟ್

    ವಾಷಿಂಗ್ಟನ್‌: 2008ರ ಮುಂಬೈ ಭಯೋತ್ಪಾದಕ ದಾಳಿಯ (Mumbai Terror Attack) ಆರೋಪಿ ತಹವ್ವೂರ್‌ ರಾಣಾಗೆ ದೊಡ್ಡ ಹಿನ್ನಡೆಯಾಗಿದೆ. ತನ್ನನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ ನೀಡುವಂತೆ ಸಲ್ಲಿಸಿದ್ದ ಕೊನೆಯ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿದೆ.

    ಪಾಕಿಸಾನ ಮೂಲದ ಕೆನಡಾ ಪ್ರಜೆಯಾದ ರಾಣಾನನ್ನ ಸದ್ಯ ಅಮೆರಿಕದ ಲಾಸ್‌ ಏಂಜಲೀಸ್‌ನ ಮೆಟ್ರೋಪಾಲಿಟನ್‌ ಡಿಟೆನ್ಶನ್‌ ಸೆಂಟರ್‌ನಲ್ಲಿ ಇರಿಸಲಾಗಿದೆ. ಇದನ್ನೂ ಓದಿ: Black Monday| ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ – ಕರಗಿತು ಹೂಡಿಕೆದಾರರ 19 ಲಕ್ಷ ಕೋಟಿ 

    PM Modi Mumbai Attack

    2009ರಿಂದಲೂ ರಾಣಾನನ್ನ ಭಾರತಕ್ಕೆ ಕರೆತರಲು ಭಾರತ ಹೋರಾಡುತ್ತಿದೆ. ಇತ್ತೀಚೆಗೆ ಮೋದಿ ಅಮೆರಿಕಕ್ಕೆ ಭೇಟಿ ನೀಡಿದಾಗ ಟ್ರಂಪ್‌ ಮೋದಿ ಎದುರಲ್ಲೇ ಭಾರತಕ್ಕೆ ರಾಣಾನನ್ನ ಹಸ್ತಾಂತರಿಸುವುದಾಗಿ ಘೋಷಣೆ ಮಾಡಿದ್ದರು. ಇದೀಗ ಯುಎಸ್‌ ಸುಪ್ರೀಂ ಕೋರ್ಟ್‌ ನಡೆ ಇದಕ್ಕೆ ಇನ್ನಷ್ಟು ಪುಷ್ಠಿ ನೀಡಿದೆ. ಇದನ್ನೂ ಓದಿ: ಕಚ್ಚಾ ತೈಲ ದರ ಭಾರೀ ಇಳಿಕೆ- ಭಾರತದಲ್ಲೂ ಪೆಟ್ರೋಲ್‌, ಡೀಸೆಲ್‌ ದರ ಇಳಿಕೆಯಾಗುತ್ತಾ?

    ಮುಂಬೈ ದಾಳಿ ಬಳಿಕ ಪಾಕ್‌ನಿಂದ ಫಲಾಯನ ಮಾಡಿದ್ದ ರಾಣಾ, ಡೆನ್ಮಾರ್ಕ್‌ನಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದಕ್ಕಾಗಿ ಆತನನ್ನ ಅಮೆರಿಕದಲ್ಲಿ ಬಂಧಿಸಲಾಗಿತ್ತು. ಕಳೆದ ಫೆಬ್ರವರಿ 27ರಂದು ರಾಣಾ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿದ್ದರು. ಕಳೆದ ತಿಂಗಳ ಆರಂಭದಲ್ಲಿ ನ್ಯಾಯಾಧೀಶರು ಈ ಅರ್ಜಿಯನ್ನು ತಿರಸ್ಕರಿಸಿದ್ದರು. ಬಳಿಕ ಮುಖ್ಯ ನ್ಯಾಯಮೂರ್ತಿ ರಾಬರ್ಟ್ಸ್‌ ಅವರಿಗೆ ಮೇಲ್ಮನವಿ ಸಲ್ಲಿಸಿದ್ದರು. ಅಂತಿಮವಾಗಿ ಸುಪ್ರೀಂ ಕೋರ್ಟ್‌ ರಾಣಾ ಅರ್ಜಿಯನ್ನು ತಿರಸ್ಕರಿಸಿತು.

    ನೆನಪಿದೆಯಾ ಆ ಕರಾಳ ದಿನ..?
    2008ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ ಭಯೋತ್ಪಾದಕರು ಪ್ರವೇಶಿಸಿದ್ದರು. 60 ಗಂಟೆಗಳಿಗೂ ಹೆಚ್ಚು ಕಾಲ ಮುತ್ತಿಗೆ ಹಾಕಿ, ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನ ನಡೆಸಿ 166 ಜನರನ್ನು ಹತ್ಯೆಗೈದಿದ್ದರು. 300ಕ್ಕೂ ಹೆಚ್ಚು ಜನರನ್ನ ಗಾಯಗೊಳಿಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು. ಈ ದಾಳಿಯಲ್ಲಿ ರಾಣಾ ಪಾತ್ರವಿದೆ ಎಂದು ಭಾರತ ಆರೋಪಿಸಿತ್ತು.

    pm modi donald trump

    ಇದಕ್ಕೂ ಮುನ್ನ ಜನವರಿ ತಿಂಗಳಲ್ಲಿ ಅಮೆರಿಕದ ಸುಪ್ರೀಂ ಕೋರ್ಟ್, ತಹವ್ವೂರ್ ರಾಣಾನ ಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿ, ಆತನನ್ನು ಭಾರತಕ್ಕೆ ಗಡೀಪಾರು ಮಾಡಲು ದಾರಿ ಮಾಡಿಕೊಟ್ಟಿತು. ಇದನ್ನೂ ಓದಿ: ಸಮುದ್ರದಲ್ಲಿ ಪಾಕ್‌ ವ್ಯಕ್ತಿಗೆ ಎದುರಾದ ಸಂಕಷ್ಟ – 3 ಗಂಟೆ ಕಾಲ ಶಸ್ತ್ರಚಿಕಿತ್ಸೆ ನೀಡಿ ಜೀವ ಉಳಿಸಿದ ಭಾರತೀಯ ನೌಕಾಪಡೆ ಸಿಬ್ಬಂದಿ

  • ಮುಂಬೈ ದಾಳಿಕೋರ ತಹವ್ವೂರ್ ಅರ್ಜಿ ವಜಾ – ಶೀಘ್ರವೇ ಭಾರತಕ್ಕೆ ಹಸ್ತಾಂತರ

    ಮುಂಬೈ ದಾಳಿಕೋರ ತಹವ್ವೂರ್ ಅರ್ಜಿ ವಜಾ – ಶೀಘ್ರವೇ ಭಾರತಕ್ಕೆ ಹಸ್ತಾಂತರ

    ವಾಷಿಂಗ್ಟನ್: 26/11ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತುರ್ತು ತಡೆ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಅಮೆರಿಕದ ಸುಪ್ರೀಂಕೋರ್ಟ್ (Supreme Court) ವಜಾಗೊಳಿಸಿದೆ.

    ರಾಣಾ ಸಲ್ಲಿಸಿದ್ದ ಅರ್ಜಿಯಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ, ಭಾರತದಲ್ಲಿ ವಿಚಾರಣೆಗೆ ಒಳಗಾಗುವಷ್ಟು ಕಾಲ ತಾನು ಬದುಕುಳಿಯುವುದಿಲ್ಲ, ಶೀಘ್ರದಲ್ಲಿ ನಾನು ಸಾವನ್ನಪ್ಪಬಹುದು. ಅಲ್ಲದೇ ಪಾಕಿಸ್ತಾನಿ ಮುಸ್ಲಿಂ ಹಾಗೂ ಮಾಜಿ ಸೇನಾಧಿಕಾರಿಯಾಗಿರುವ ಹಿನ್ನೆಲೆ ಭಾರತದಲ್ಲಿ ಹಿಂಸೆಗೆ ಒಳಗಾಗಬಹುದು ಎಂದು ಉಲ್ಲೇಖಿಸಿದ್ದರು.ಇದನ್ನೂ ಓದಿ: ಚಿತ್ರರಂಗ ಕೇಳಿದ್ದೆಲ್ಲಾ ಸಿಎಂ ಕೊಡುತ್ತಲೇ ಬಂದಿದ್ದಾರೆ: ನರಸಿಂಹಲು

    ಆದರೆ ಈ ಅಂಶಗಳನ್ನು ಅಮೆರಿಕಾ ಸುಪ್ರೀಂಕೋರ್ಟ್ ಪರಿಗಣಿಸಿಲ್ಲ. ಇದರಿಂದಾಗಿ ತಹವ್ವೂರ್ ರಾಣಾಗೆ ಹಿನ್ನಡೆಯಾಗಿದೆ. ಭಾರತಕ್ಕೆ ರಾಣಾ ಹಸ್ತಾಂತರಕ್ಕೆ ಇನ್ನಷ್ಟು ಶಕ್ತಿ ಬಂದಿದ್ದು, ಭಾರತದ ವಿದೇಶಾಂಗ ಇಲಾಖೆ ಅಧಿಕಾರಿಗಳು ಈಗಾಗಲೇ ಪ್ರಕ್ರಿಯೆ ಆರಂಭಿಸಿದ್ದಾರೆ.

    ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಾಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅವನು ತುಂಬಾ ದುಷ್ಟ ಎಂದು ಕರೆದು ರಾಣಾ ಗಡಿಪಾರು ಮಾಡಲು ತಮ್ಮ ಆಡಳಿತ ಅನುಮೋದನೆ ನೀಡಿದೆ ಎಂದು ಘೋಷಿಸಿದರು. 63 ವರ್ಷದ ತಹಾವೂರ್ ರಾಣಾ ಪ್ರಸ್ತುತ ಲಾಸ್ ಏಂಜಲೀಸ್‌ನ ಜೈಲಿನಲ್ಲಿದ್ದಾನೆ.ಇದನ್ನೂ ಓದಿ: ಹಾಲಿನ ದರ 5 ರೂ. ಹೆಚ್ಚಳಕ್ಕೆ ಚಿಂತನೆ: ಭೀಮಾನಾಯ್ಕ್

     

     

  • ನಾನು ಪಾಕಿಸ್ತಾನದ ಮುಸ್ಲಿಂ, ಭಾರತದಲ್ಲಿ ಹಿಂಸೆಯಾಗುವ ಸಾಧ್ಯತೆ ಹೆಚ್ಚು: ಮುಂಬೈ ದಾಳಿ ಆರೋಪಿ ತಹವ್ವೂರ್‌

    ನಾನು ಪಾಕಿಸ್ತಾನದ ಮುಸ್ಲಿಂ, ಭಾರತದಲ್ಲಿ ಹಿಂಸೆಯಾಗುವ ಸಾಧ್ಯತೆ ಹೆಚ್ಚು: ಮುಂಬೈ ದಾಳಿ ಆರೋಪಿ ತಹವ್ವೂರ್‌

    – ಭಾರತಕ್ಕೆ ಹಸ್ತಾಂತರ ಮಾಡದಂತೆ ಅಮೆರಿಕದ ಸುಪ್ರೀಂ ಕೋರ್ಟ್‌ಗೆ ಮುಂಬೈ ದಾಳಿ ಆರೋಪಿ ತಹವ್ವೂರ್ ರಾಣಾ ಅರ್ಜಿ

    ನವದೆಹಲಿ: 26/11 ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ (Tahawwur Rana) ತನ್ನನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತುರ್ತು ತಡೆ ನೀಡುವಂತೆ ಕೋರಿ ಅಮೆರಿಕದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ. ತಾನು ಪಾಕಿಸ್ತಾನಿ ಮೂಲದ ಮುಸ್ಲಿಂ ಆಗಿರುವುದರಿಂದ ಭಾರತದಲ್ಲಿ ತನಗೆ ಹಿಂಸೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ರಾಣಾ ಅರ್ಜಿಯಲ್ಲಿ ಹೇಳಿದ್ದಾನೆ.

    63 ವರ್ಷದ ತಹಾವೂರ್ ರಾಣಾ ಪ್ರಸ್ತುತ ಲಾಸ್ ಏಂಜಲೀಸ್‌ನ ಜೈಲಿನಲ್ಲಿದ್ದಾನೆ. ಸಲ್ಲಿಕೆಯಾಗಿರುವ ಅರ್ಜಿಯಲ್ಲಿ ಹೃದಯ ರಕ್ತನಾಳದ ಉರಿಯೂತ, ಅರಿವಿನ ದೌರ್ಬಲ್ಯದೊಂದಿಗೆ ಪಾರ್ಕಿನ್ಸನ್ ಕಾಯಿಲೆ ಮತ್ತು ಸಂಭವನೀಯ ಮೂತ್ರಕೋಶದ ಕ್ಯಾನ್ಸರ್ ಸೇರಿದಂತೆ ಹಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ರಾಣಾ ವಿಚಾರಣೆಯನ್ನು ಎದುರಿಸಲು ಅವರು ಹೆಚ್ಚು ಕಾಲ ಬದುಕಲಾರರು ಎಂದು ಅವರ ವಕೀಲರು ತಿಳಿಸಿದ್ದಾರೆ.

    ಅಲ್ಲದೇ ಭಾರತದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ವಿಶೇಷವಾಗಿ ಮುಸ್ಲಿಮರ ಮೇಲೆ ವ್ಯವಸ್ಥಿತ ತಾರತಮ್ಯ ಮತ್ತು ಕಳಂಕವನ್ನುಂಟು ಮಾಡುತ್ತಿದೆ. ಇದು ರಾಣಾ ಅವರ ನ್ಯಾಯಯುತ ವಿಚಾರಣೆಯ ಹಕ್ಕು ಅಪಾಯಕ್ಕೆ ಸಿಲುಕುತ್ತದೆ ಎಂದು ಅವರ ಪರ ವಕೀಲರು ವಾದಿಸಿದರು.

    ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ‘ತುಂಬಾ ದುಷ್ಟ’ ಎಂದು ಕರೆದು ರಾಣಾ ಗಡಿಪಾರು ಮಾಡಲು ತಮ್ಮ ಆಡಳಿತ ಅನುಮೋದನೆ ನೀಡಿದೆ ಎಂದು ಘೋಷಿಸಿದರು.

    ಎಲ್ಲಾ ಕಾನೂನು ದಾಖಲೆಗಳನ್ನು ಅಮೆರಿಕದ ಅಧಿಕಾರಿಗಳೊಂದಿಗೆ ಹಂಚಿಕೊಳ್ಳಲಾಗಿದೆ. ಹಸ್ತಾಂತರಕ್ಕೆ ಅನುಮತಿ ದೊರೆತ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ ತಂಡವು ಅಮೆರಿಕಕ್ಕೆ ಪ್ರಯಾಣಿಸಲಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿ ಕಾರ್ಯಗತಗೊಳಿಸಿದ್ದಕ್ಕಾಗಿ ರಾಣಾ ಸೇರಿದಂತೆ ಒಂಬತ್ತು ಜನರ ವಿರುದ್ಧ ಎನ್‌ಐಎ 2011 ರಲ್ಲಿ ಆರೋಪಪಟ್ಟಿ ಸಲ್ಲಿಸಿತು.

  • 2008ರ ಮುಂಬೈ ಭಯೋತ್ಪಾದಕ ದಾಳಿ ಆರೋಪಿಯನ್ನು ಭಾರತಕ್ಕೆ ಹಸ್ತಾಂತರಿಸಲು ಒಪ್ಪಿಗೆ – ಮೋದಿ ಎದುರೇ ಟ್ರಂಪ್‌ ಘೋಷಣೆ

    2008ರ ಮುಂಬೈ ಭಯೋತ್ಪಾದಕ ದಾಳಿ ಆರೋಪಿಯನ್ನು ಭಾರತಕ್ಕೆ ಹಸ್ತಾಂತರಿಸಲು ಒಪ್ಪಿಗೆ – ಮೋದಿ ಎದುರೇ ಟ್ರಂಪ್‌ ಘೋಷಣೆ

    ವಾಷಿಂಗ್ಟನ್‌: 2008ರ ಮುಂಬೈ ಭಯೋತ್ಪಾದಕ ದಾಳಿಯ (Mumbai Terror Attack) ಆರೋಪಿ ತಹವ್ವೂರ್‌ ರಾಣಾನನ್ನು (Tahawwur Rana) ಭಾರತಕ್ಕೆ ಹಸ್ತಾಂತರಿಸಲು ಅಮೆರಿ ಒಪ್ಪಿಕೊಂಡಿದೆ. ಪ್ರಧಾನಿ ಮೋದಿ ಎದುರಲ್ಲೇ ಅಮೆರಿಕ ಅಧ್ಯಕ್ಷ ಟ್ರಂಪ್ ‌ಈ ಘೋಷಣೆ ಮಾಡಿದ್ದಾರೆ.

    ಪ್ರಧಾನಿ ಮೋದಿ (PM Modi) ಅವರು ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. 2ನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿ ಟ್ರಂಪ್‌ (Donald Trump) ಅಧಿಕಾರ ವಹಿಸಿಕೊಂಡ ಬಳಿಕ ಇದು ಮೋದಿ ಅವರ ಮೊದಲ ಭೇಟಿ.

    ಪ್ರಧಾನಿ ಮೋದಿ ಅವರ ಜೊತೆ ದ್ವಿಪಕ್ಷೀಯ ಮಾತುಕತೆ ನಂತರ, ಮುಂಬೈ ದಾಳಿ ಆರೋಪಿಯನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಒಪ್ಪಿಕೊಂಡಿದೆ ಎಂದು ಟ್ರಂಪ್‌ ತಿಳಿಸಿದ್ದಾರೆ. ನಾವು 26/11 ಮುಂಬೈ ಭಯೋತ್ಪಾದಕ ದಾಳಿಯ ಆರೋಪಿಯಾಗಿರುವ ಅತ್ಯಂತ ಅಪಾಯಕಾರಿ ವ್ಯಕ್ತಿಯನ್ನು ಭಾರತಕ್ಕೆ ಹಸ್ತಾಂತರಿಸುತ್ತಿದ್ದೇವೆ ಎಂದು ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ.

    26/11 ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ಪ್ರಸ್ತುತ ಅಮೆರಿಕದಲ್ಲಿ ಹೆಚ್ಚಿನ ಭದ್ರತೆಯ ಜೈಲಿನಲ್ಲಿದ್ದಾನೆ. ಭಾರತ ಹಲವು ವರ್ಷಗಳಿಂದ ಆತನನ್ನು ಹಸ್ತಾಂತರಿಸುವಂತೆ ಕೋರುತ್ತಿದೆ.

    ಇದೇ ಜನವರಿ ತಿಂಗಳಲ್ಲಿ ಅಮೆರಿಕದ ಸುಪ್ರೀಂ ಕೋರ್ಟ್, ತಹವ್ವೂರ್ ರಾಣಾನ ಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿ, ಆತನನ್ನು ಭಾರತಕ್ಕೆ ಗಡೀಪಾರು ಮಾಡಲು ದಾರಿ ಮಾಡಿಕೊಟ್ಟಿತು.