Tag: tahsildar office

  • ಶಾರ್ಟ್ ಸರ್ಕ್ಯೂಟ್‌ನಿಂದ ತಹಶೀಲ್ದಾರ್ ಕಚೇರಿಯಲ್ಲಿ ಅಗ್ನಿ ಅವಘಡ; ಮಹತ್ವದ ದಾಖಲೆಗಳು ಭಸ್ಮ

    ಶಾರ್ಟ್ ಸರ್ಕ್ಯೂಟ್‌ನಿಂದ ತಹಶೀಲ್ದಾರ್ ಕಚೇರಿಯಲ್ಲಿ ಅಗ್ನಿ ಅವಘಡ; ಮಹತ್ವದ ದಾಖಲೆಗಳು ಭಸ್ಮ

    – ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲು

    ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ನಾಡ ತಹಶಿಲ್ದಾರ ಕಚೇರಿಯಲ್ಲಿ (Tahsildar office) ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಮಹತ್ವದ ದಾಖಲೆಗಳು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

    ರಾತ್ರಿ ವೇಳೆ ಅಗ್ನಿ ಅವಘಡ ನಡೆದಿದ್ದು ಕಂಪ್ಯೂಟರ್, ಸಾರ್ವಜನಿಕರ ಮಹತ್ವದ ದಾಖಲೆಗಳು, ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ಮಳೆಯಿಂದ ಹಳೆಯ ಕಟ್ಟಡದ ಗೋಡೆಗಳು ಒದ್ದೆಯಾಗಿದ್ದು ಅಲ್ಲಲ್ಲಿ ಸೋರಿದ್ದರಿಂದ ಶಾರ್ಟ್ ಸರ್ಕ್ಯೂಟ್ (Short circuit) ಉಂಟಾಗಿದೆ. ಇನ್ವೊಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡಿದೆ. ಇದರಿಂದ ಕಚೇರಿಯಲ್ಲಿನ ವಸ್ತುಗಳೆಲ್ಲಾ ಸುಟ್ಟು ಕರಕಲಾಗಿವೆ.

    ಎರಡನೇ ಬಾರಿ ನಾಡ ತಹಶಿಲ್ದಾರ ಕಚೇರಿ ಅಗ್ನಿದುರಂತಕ್ಕೆ ಈಡಾಗಿದೆ. ಮಹತ್ವದ ದಾಖಲೆಗಳು ಸುಟ್ಟು ಹೋಗಿರುವುದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಖಾನಾಪುರದ ತಹಶೀಲ್ದಾರ್ ಕಚೇರಿ ಎದುರು ಪ್ಲಾಸ್ಟಿಕ್ ಚೀಲದಲ್ಲಿ ನವಜಾತ ಶಿಶು ಪತ್ತೆ

    ಖಾನಾಪುರದ ತಹಶೀಲ್ದಾರ್ ಕಚೇರಿ ಎದುರು ಪ್ಲಾಸ್ಟಿಕ್ ಚೀಲದಲ್ಲಿ ನವಜಾತ ಶಿಶು ಪತ್ತೆ

    ಬೆಳಗಾವಿ: ಖಾನಾಪುರದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿದ್ದ ಸ್ಥಿತಿಯಲ್ಲಿ ಎರಡು ದಿನದ ನವಜಾತ ಶಿಶು ಪತ್ತೆಯಾಗಿದೆ.

    ಖಾನಾಪುರದ ತಹಶೀಲ್ದಾರ್ ಕಚೇರಿ ಮುಂಭಾಗದ ಮಾವಿನ ಮರದ ಕೆಳಗೆ ಪ್ಲಾಸ್ಟಿಕ್ ಚೀಲದಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಸ್ಥಳೀಯರು ಶಿಶುವನ್ನು ನೋಡಿ ಗಮನಿಸಿ ಸ್ಥಳದಲ್ಲಿ ಯಾರು ಪತ್ತೆಯಾಗದೇ ಇದ್ದಾಗ ಖಾನಾಪೂರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 250 ರೂ. ಹಣ ಕೊಡದಿದ್ದಕ್ಕೆ ಬಿಯರ್ ಬಾಟಲ್‍ನಿಂದ ತಲೆಗೆ ಹೊಡೆದು ಕೊಲೆ

    ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶಿಶುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಮತ್ತು ದಾದಿಯರು ಮಗುವನ್ನು ಪರೀಕ್ಷಿಸಿ ಶಿಶು ಕಲ್ಯಾಣಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಆ ಬಳಿಕ ಮಗುವನ್ನು ಬೆಳಗಾವಿಗೆ ಕಳುಹಿಸಲಾಗಿದೆ. ಸದ್ಯ ಮಗು ಆರೋಗ್ಯವಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಲೈಂಗಿಕ ತೃಷೆ ತೀರಿಸಿಕೊಳ್ಳಲು ಹೋಗಿ ವ್ಯಕ್ತಿ ಎಡವಟ್ಟು – ಎಕ್ಸ್ ರೇ ನೋಡಿ ವೈದ್ಯರೇ ಶಾಕ್

  • ಸ್ಮಶಾನಕ್ಕಾಗಿ ತಾಲೂಕು ಕಚೇರಿ ಮುಂದೆ ಶವವಿಟ್ಟು ಪ್ರತಿಭಟನೆ

    ಸ್ಮಶಾನಕ್ಕಾಗಿ ತಾಲೂಕು ಕಚೇರಿ ಮುಂದೆ ಶವವಿಟ್ಟು ಪ್ರತಿಭಟನೆ

    ಮಂಡ್ಯ: ಸ್ಮಶಾನಕ್ಕಾಗಿ ಆಗ್ರಹಿಸಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾರೇಕುರ ಗ್ರಾಮಸ್ಥರು ತಹಶೀಲ್ದಾರ್ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಜರುಗಿದೆ.

    ಕಾರೇಕುರ ಗ್ರಾಮದ ಪುಟ್ಟಮ್ಮ ಎಂಬವರು ಅನಾರೋಗ್ಯಕ್ಕೆ ತುತ್ತಾಗಿ ಸೋಮವಾರ ಮೃತಪಟ್ಟಿದ್ದರು. ಐದಾರು ದಶಕಗಳಿಂದ ಅಂತ್ಯಸಂಸ್ಕಾರ ನಡೆಸುತ್ತಿದ್ದ ಬೆಳಗೋಳ ಗ್ರಾಮ ವ್ಯಾಪ್ತಿಯ ಸರ್ವೆ ನಂ. 342ರ ಜಾಗದಲ್ಲಿ ಅಂತ್ಯಕ್ರಿಯೆ ನಡೆಸಲು ಮುಂದಾದಾಗ ಥಾಮಸ್ ಮ್ಯಾಥ್ಯೂ ಎಂಬವರು ತಡೆದಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಶವವನ್ನು ಶ್ರೀರಂಗಪಟ್ಟಣ ತಹಶೀಲ್ದಾರ್ ಕಚೇರಿ ಬಳಿಗೆ ತಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಗ್ರಾಮದಲ್ಲಿ ಯಾರೇ ಮೃತಪಟ್ಟರೂ ಸರ್ವೇ ನಂ.342 ಜಾಗದಲ್ಲೇ ಅಂತ್ಯಸಂಸ್ಕಾರ ಮಾಡಿಕೊಂಡು ಬರಲಾಗುತ್ತಿತ್ತು. ಅಲ್ಲದೆ ಕೆಲವು ವರ್ಷಗಳ ಹಿಂದೆ ಥಾಮಸ್ ಮ್ಯಾಥ್ಯೂ ಎಂಬಾತ ಸ್ಮಶಾನದ ಜಾಗ ತನ್ನದೆಂದು ಆಕ್ರಮಿಸಿಕೊಳ್ಳಲು ಮುಂದಾಗಿದ್ದರು. ಆ ವೇಳೆ ನ್ಯಾಯಾಲಯದ ಮೊರೆ ಹೋದಾಗ ಗ್ರಾಮಸ್ಥರ ಪರವಾಗಿ ತೀರ್ಪು ಬಂದಿತ್ತು. ನ್ಯಾಯಾಲಯದ ತೀರ್ಪಿಗೆ ಆತ ತಡೆಯಾಜ್ಞೆ ತಂದಿದ್ದು, ಶವ ಸಂಸ್ಕಾರಕ್ಕೆ ಅಡ್ಡಿಪಡಿಸುತ್ತಿದ್ದಾನೆ. ಇನ್ನು ಅಧಿಕಾರಿಗಳು ಈ ಹಿಂದೆ ಸ್ಮಶಾನ ಜಾಗದ ಸಮಸ್ಯೆ ಇತ್ಯರ್ಥ ಮಾಡುವುದಾಗಿ ಭರವಸೆ ನೀಡಿದ್ದರು. ಇದೀಗ ಆತನೊಂದಿಗೆ ಶಾಮೀಲಾಗಿ ಬೇರೆ ಜಾಗ ನೀಡುವುದಾಗಿ ಹೇಳುತ್ತಿದ್ದಾರೆ. ಅದೇ ಜಾಗದಲ್ಲೇ ಅಂತ್ಯಸಂಸ್ಕಾರ ಮಾಡಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

  • ಜೋಯಿಡಾ ತಹಶೀಲ್ದಾರ್ ಕಚೇರಿಗೆ ಎಸಿಬಿ ದಾಳಿ – ಲಂಚ ಪಡೆಯುತ್ತಿದ್ದ ಅಧಿಕಾರಿ ಬಲೆಗೆ

    ಜೋಯಿಡಾ ತಹಶೀಲ್ದಾರ್ ಕಚೇರಿಗೆ ಎಸಿಬಿ ದಾಳಿ – ಲಂಚ ಪಡೆಯುತ್ತಿದ್ದ ಅಧಿಕಾರಿ ಬಲೆಗೆ

    ಕಾರವಾರ: ಲಂಚ ಸ್ವೀಕರಿಸುತಿದ್ದ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಮೇಲೆ ಎಸಿಬಿ ದಾಳಿ ನೆಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ.

    ಎಸಿಬಿ ಡಿವೈಎಸ್ಪಿ ಶ್ರೀಕಾಂತ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಜೋಯಿಡಾ ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಮಂಜುನಾಥ್ ಹುಚ್ಚಣ್ಣನವರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಆತನ್ನು ವಶಕ್ಕೆ ಪಡೆದು ತನಿಖೆ ಮಾಡಲಾಗುತ್ತಿದೆ.

    ಗೋಪಿಕಾ ಶಾಂತ ಸಾವಂತ್ ಇವರ ಹೆಸರು ಬದಲಾವಣೆಗೆ ಇವರ ಸಂಬಂಧಿ ಮೋಹನ್ ದೇಸಾಯಿ ಬಳಿ 11 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ. ಮುಂಜುನಾಥ್ ಹುಚ್ಚಣ್ಣನವರ್ ಇಂದು ಮೋಹನ್ ದೇಸಾಯಿಯಿಂದ ಜೋಯಿಡಾ ತಹಶೀಲ್ದಾರ್ ಕಚೇರಿಯಲ್ಲಿ ಮುಂಗಡ ಹಣವಾಗಿ ಎರಡು ಸಾವಿರ ಲಂಚ ಸ್ವೀಕರಿಸುವಾಗ ಹಣದ ಸಮೇತ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ದೂರು ನೀಡಿದ ದೂರುದಾರರ ಜೊತೆ ಮೋಹನ ದೇಸಾಯಿ, ಅಧ್ಯಕ್ಷರು ಕಾಳಿ ಬ್ರಿಗೇಡ್ ಅವುರ್ಲಿ ಫಟಕ. ರವಿ ರೇಡಕರ ಮುಖ್ಯ ಸಂಚಾಲಕರು ಕಾಳಿ ಬ್ರಿಗೇಡ್, ಸತೀಶ ನಾಯ್ಕ, ಪ್ರಭಾಕರ ನಾಯ್ಕ, ವಿಷ್ಣು ದೇಸಾಯಿ, ಕಿರಣ ನಾಯ್ಕ, ಅಜೀತ ಟೆಂಗ್ಸೆ, ರಾಜೇಶ ದೇಸಾಯಿ ಈ ಸಂದರ್ಭದಲ್ಲಿ ಇದ್ದರು.

  • ತಹಶೀಲ್ದಾರ್ ಕಚೇರಿ ಮೇಲೆ ಎಸಿಬಿ ದಾಳಿ – ನಕಲಿ ಅಧಿಕಾರಿಯನ್ನು ನೋಡಿ ದಂಗಾದ ಅಧಿಕಾರಿಗಳು

    ತಹಶೀಲ್ದಾರ್ ಕಚೇರಿ ಮೇಲೆ ಎಸಿಬಿ ದಾಳಿ – ನಕಲಿ ಅಧಿಕಾರಿಯನ್ನು ನೋಡಿ ದಂಗಾದ ಅಧಿಕಾರಿಗಳು

    ವಿಜಯಪುರ: ದಾಳಿ ವೇಳೆ ನಕಲಿ ಅಧಿಕಾರಿಯೊಬ್ಬ ಸಿಕ್ಕಿ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ.

    ಅಧಿಕಾರಿಗಳು ಕೆಲಸ ಮಾಡಿಕೊಡಲು ಲಂಚ ಕೇಳುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಇಂದು ದೇವರ ಹಿಪ್ಪರಗಿ ತಹಶೀಲ್ದಾರ್ ಕಚೇರಿಗೆ ಎಸಿಬಿ ಅಧಿಕಾರಿಗಳಾದ ಡಿಎಸ್‍ಪಿ ಮಲ್ಲೇಶ್ ಹಾಗೂ ಇನ್ಸ್ ಪೆಕ್ಟರ್ ಸಚಿನ್ ಚಲವಾದಿ ದಾಳಿ ನಡೆಸಿದ್ದಾರೆ. ಈ ವೇಳೆ ಚಂದ್ರಹಾಸ ಹೊಸಮನಿ ನಕಲಿ ಅಧಿಕಾರಿಯಾಗಿ ಅಲ್ಲಿ ಕೆಲಸ ಮಾಡುತ್ತಿರುವುದು ಕಂಡುಬಂದಿದೆ.

    ಸರ್ಕಾರಿ ಸಿಬ್ಬಂದಿಯಂತೆ ತಹಶೀಲ್ದಾರ್ ಕಚೇರಿಯಲ್ಲೇ ಪ್ರತ್ಯೇಕ ಟೇಬಲ್, ಪ್ರತ್ಯೇಕ ತಿಜೋರಿ ಹೊಂದಿದ್ದ ಹೊಸಮನಿ ಸಿಂಧುತ್ವ ನೀಡಲು ಹಣಮಂತ ರೆಡ್ಡಿ ಎಂಬುವರ ಬಳಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ. ಈ ಸಂಬಂಧ ಹಣಮಂತ ಎಸಿಬಿಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ದಾಳಿ ನಡೆಸಿ ಪರಿಶೀಲನೆ ಮಾಡಿದಾಗ ನಕಲಿ ಅಧಿಕಾರಿ ಅನ್ನೋದು ಬಯಲಾಗಿದೆ.

    ಸಿಂಧುತ್ವ ವಿಭಾಗದ ಅಧಿಕಾರಿ ಎಂದು ಹೇಳಿಕೊಂಡಿದ್ದ ಹೊಸಮನಿ, ಜನರಿಂದ ಸಿಂಧುತ್ವಕ್ಕಾಗಿ ಹಣ ಪಡೆಯುತ್ತಿದ್ದ. ಈ ಚಂದ್ರಹಾಸ ಹೊಸಮನಿ ಮೂಲಕವೇ ತಹಶೀಲ್ದಾರ್ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಸಲಾಗುತಿತ್ತು ಎಂದು ಸಾರ್ವಜನಿಕರ ಆರೋಪ ಮಾಡಿದ್ದಾರೆ. ಹೊಸಮನಿಯನ್ನು ತಹಶೀಲ್ದಾರ್ ಕಚೇರಿಯ ಸರ್ಕಾರಿ ಸಿಬ್ಬಂದಿ ಎಂದು ಭಾವಿಸಿದ್ದ ಜನರು ಮತ್ತು ಎಸಿಬಿ ಅಧಿಕಾರಿಗಳು ನಕಲಿ ಎಂದು ತಿಳಿದು ದಂಗಾಗಿದ್ದಾರೆ.

    ನಕಲಿ ಅಧಿಕಾರಿ ಹೊಸಮನಿಯನ್ನು ವಶಕ್ಕೆ ಪಡೆದ ಎಸಿಬಿ ಅಧಿಕಾರಿಗಳು, 25 ಕ್ಕೂ ಅಧಿಕ ಸಿಂಧುತ್ವ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಈ ವಿಚಾರದಲ್ಲಿ ತನಿಖೆ ನಡೆಸಿ ಈತನಿಂದ ಹಣ ಪಡೆಯುತ್ತಿದ್ದ ಅಧಿಕಾರಿಗಳನ್ನು ಪ್ರಕರಣದಲ್ಲಿ ಆರೋಪಿಗಳನ್ನಾಗಿ ಮಾಡಲು ಎಸಿಬಿ ಅಧಿಕಾರಿಗಳು ಮುಂದಾಗಿದ್ದಾರೆ.