Tag: talwar attack

  • ಜನನಿಬಿಡ ಪ್ರದೇಶದಲ್ಲಿ ತಲ್ವಾರ್ ಝಳಪಿಸಿದ ಯುವಕ ಅರೆಸ್ಟ್

    ಜನನಿಬಿಡ ಪ್ರದೇಶದಲ್ಲಿ ತಲ್ವಾರ್ ಝಳಪಿಸಿದ ಯುವಕ ಅರೆಸ್ಟ್

    ಚಾಮರಾಜನಗರ: ಜನನಿಬಿಡ ಪ್ರದೇಶದಲ್ಲಿ ತಲ್ವಾರ್ ಝಳಪಿಸಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆಗೆ ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

    ತಲ್ವಾರ್ ಹಿಡಿದು ನಿಂತಿದ್ದ ದೀಪು ಎಂಬ ಯುವಕನನ್ನು ಬಂಧಿಸಲಾಗಿದೆ. ಹಣಕಾಸು ವಿಚಾರಕ್ಕೆ ಗಲಾಟೆ ನಡೆದಿದ್ದು, ಕೃಷ್ಣಮೂರ್ತಿ ಎಂಬವರ ಮೇಲೆ ಯುವಕ ಹಲ್ಲೆಗೆ ಯತ್ನಿಸಿದ್ದ. ಇದನ್ನೂ ಓದಿ: ಹೊಳೆಹೊನ್ನೂರಲ್ಲಿ ಪ್ರತ್ಯೇಕ ಅಪಘಾತ – ಇಬ್ಬರು ಯುವಕರ ದುರ್ಮರಣ

    ಚಾಮರಾಜನಗರದ ದೊಡ್ಡಂಗಡಿ ಬೀದಿಯಲ್ಲಿ ಘಟನೆ ನಡೆದಿದೆ. ಜನನಿಬಿಡ ಪ್ರದೇಶದಲ್ಲಿ ತಲ್ವಾರ್ ಝಳಪಿಸಿತ್ತಾ ದೀಪು ಹಲ್ಲೆಗೆ ಮುಂದಾಗಿದ್ದ. ತಲ್ವಾರ್ ತಗುಲಿ ಕೃಷ್ಣಮೂರ್ತಿ ಕೈ ಬೆರಳಿಗೆ ಗಾಯವಾಗಿದೆ. ಹಲ್ಲೆಗೆ ಯತ್ನಿಸಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಪರಿಸ್ಥಿತಿ ತಿಳಿಗೊಳಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ತಲ್ವಾರ್ ಹಿಡಿದು ನಿಂತಿದ್ದ ಯುವಕನನ್ನು ಬಂಧಿಸಿದ್ದಾರೆ. ಈ ಸಂಬಂಧ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಟ ದರ್ಶನ್‌ಗೆ ಬಿಗ್‌ ರಿಲೀಫ್‌; 7 ತಿಂಗಳ ಬಳಿಕ ಜಾಮೀನು ಮಂಜೂರು

  • ತಲವಾರು ದಾಳಿಗೆ ಯತ್ನಿಸಿದ ಮೂವರ ಬಂಧನ

    ತಲವಾರು ದಾಳಿಗೆ ಯತ್ನಿಸಿದ ಮೂವರ ಬಂಧನ

    ಮಂಗಳೂರು: ಅನ್ಯಕೋಮಿನ ವ್ಯಕ್ತಿಯೋರ್ವನ ಮೇಲೆ ತಲವಾರು ದಾಳಿಗೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ಮಂಗಳೂರಿನ (Mangaluru) ಕಾವೂರು ಪೊಲೀಸರು ಬಂಧಿಸಿದ್ದಾರೆ.

    ನಗರದ ಹೊರವಲಯದ ಕಾವೂರು ಎಂ.ವಿ.ಶೆಟ್ಟಿ ಕಾಲೇಜು ಬಳಿ ಕಳೆದ ಆಗಸ್ಟ್ 20ರಂದು ಸ್ಕೂಟರ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅನ್ಯ ಕೋಮಿನ ವ್ಯಕ್ತಿಯೋರ್ವರಿಗೆ ತಲವಾರು ಬೀಸಿದ್ದಾರೆ. ಈ ವೇಳೆ ಅವರು ತಪ್ಪಿಸಿಕೊಂಡರೂ ಮುಖಕ್ಕೆ ಗಾಯವಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು, ಕೇವಲ 24 ಗಂಟೆಯೊಳಗೆ ಕಾವೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮತ್ತೊಂದು ಪ್ರೇಮ ಕಥನ- ಪತಿ ಭೇಟಿಯಾಗಲು ಭಾರತಕ್ಕೆ ಬಂದ ಬಾಂಗ್ಲಾ ಮಹಿಳೆಗೆ ಶಾಕ್!

    ಪಂಜಿಮೊಗರು ನಿವಾಸಿಗಳಾದ ಚರಣ್ ರಾಜ್, ಸುಮಂತ್ ಬರ್ಮನ್ ಹಾಗೂ ಅವಿನಾಶ್ ಬಂಧಿತ ಆರೋಪಿಗಳು. ಬಂಧಿತರ ಪೈಕಿ ಚರಣ್ ರಾಜ್ ರೌಡಿ ಶೀಟರ್ ಆಗಿದ್ದು,ಜನರಲ್ಲಿ ಭಯ ಹುಟ್ಟಿಸಲು ಈ ಕೃತ್ಯ ನಡೆಸಿರೋದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಜಯೋತ್ಸವದ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ!

    ವಿಜಯೋತ್ಸವದ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ!

    ಮಂಗಳೂರು: ಬಿಜೆಪಿ ವಿಜಯೋತ್ಸವದ ವೇಳೆ ಕಲ್ಲುತೂರಾಟ, ತಲವಾರು ದಾಳಿ ನಡೆದ ಘಟನೆ ಕರಾವಳಿ ಜಿಲ್ಲೆಯಲ್ಲಿ ನಡೆದಿದೆ.

    ಮಂಗಳೂರು ಹೊರವಲಯದ ಅಡ್ಯಾರ್ ಪದವು ಮಸೀದಿ ಬಳಿ ಈ ಘಟನೆ ನಡೆದಿದ್ದು, ಭಿನ್ನಕೋಮಿನ ಯುವಕರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರಿನಿಂದ ದಾಳಿ ನಡೆಸಲಾಗಿದೆ ಎಂಬ ಮಾಹಿತಿಗಳು ಲಭ್ಯವಾಗುವೆ.

    ಘಟನೆಯಲ್ಲಿ ನಾಲ್ವರು ಬಿಜೆಪಿ ಕಾರ್ಯಕರ್ತರಿಗೆ ಗಂಭೀರ ಗಾಯಗಳಾಗಿದೆ. ಸದ್ಯ ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸುಮಾರು 50ಕ್ಕೂ ಅಧಿಕ ಯುವಕರಿಂದ ಈ ದಾಳಿ ನಡೆದಿದೆ. ಘಟನೆಯಲ್ಲಿ ಹಿಂದೂ ಧಾರ್ಮಿಕ ಕೇಂದ್ರದ ಮೇಲೆಯೂ ಕಲ್ಲು ತೂರಾಟ ಮಾಡಲಾಗಿದೆ. ಒಟ್ಟಿನಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

    ಈ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.