Tag: Tamil Cinema

  • ಅಯ್ಯೋ ನನಗೆ ಹೊಟ್ಟೆ ಬಂದಿದೆ ಎಂದಿದ್ದ ನಟಿ ರಿತಿಕಾ ಸಿಂಗ್ ಸೊಂಟ ಬಳ್ಳಿಯಂತಾಗಿದ್ದು ಹೇಗೆ ಗೊತ್ತಾ?

    ಅಯ್ಯೋ ನನಗೆ ಹೊಟ್ಟೆ ಬಂದಿದೆ ಎಂದಿದ್ದ ನಟಿ ರಿತಿಕಾ ಸಿಂಗ್ ಸೊಂಟ ಬಳ್ಳಿಯಂತಾಗಿದ್ದು ಹೇಗೆ ಗೊತ್ತಾ?

    ಯ್ಯೋ ನನಗೆ ಹೊಟ್ಟೆ ಬಂದಿದೆ ಎಂದಿದ್ದ ತಮಿಳು (Tamil Cinema) ನಟಿ ರಿತಿಕಾ ಸಿಂಗ್ (Actress Rithika Singh) ಮೂರು ತಿಂಗಳ ಸತತ ಪರಿಶ್ರಮದಿಂದ ಬೊಜ್ಜನ್ನು ಕರಗಿಸಿಕೊಂಡು ಬಳುಕೋ ಬಳ್ಳಿಯಂತಹ ಸೊಂಟವನ್ನು ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

    ಇನ್ಸ್ಟಾಗ್ರಾಮ್‌ನಲ್ಲಿ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿರುವ ಅವರು, ಬೊಜ್ಜು ಮತ್ತು ತೂಕ ಹೆಚ್ಚಳದಿಂದ ಅನುಭವಿಸಿದ ಸಂಕಟವನ್ನು ಹೊರಹಾಕಿದ್ದಾರೆ. ಪೋಸ್ಟ್‌ನಲ್ಲಿ, ನನಗೆ ತೂಕ ಹೆಚ್ಚಳದಿಂದ ಮೊಣಕಾಲು ತುಂಬಾ ನೋವಿತ್ತು. ನಟನೆ ವೇಳೆ, ಡ್ಯಾನ್ಸ್‌ ಮಾಡುವ ವೇಳೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದೆ. ಸಲೀಸಾಗಿ ನಡೆಯಲೂ ಆಗುತ್ತಿರಲಿಲ್ಲ. ಇಷ್ಟೆಲ್ಲ ಆದ ಮೇಲೆ ಕನ್ನಡಿಯ ಮುಂದೆ ನನ್ನನ್ನು ನಾನೇ ನೋಡಿಕೊಂಡು ತೂಕ ಇಳಿಸುವ ನಿರ್ಧಾರಕ್ಕೆ ಬಂದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: `ಹೌಸ್‌ ಅರೆಸ್ಟ್‌’ ಶೋನಲ್ಲಿ ಸೆಕ್ಸ್‌ ಪೊಸಿಷನ್‌ಗೆ ಒತ್ತಾಯ – ನಟ ಅಜಾಜ್ ಖಾನ್‌ಗೆ ಸಮನ್ಸ್

     

    View this post on Instagram

     

    A post shared by Ritika Singh (@ritika_offl)

    ನನ್ನ ಜೀವನಶೈಲಿಯಲ್ಲಿ ಕೆಲವು ದೊಡ್ಡ ಬದಲಾವಣೆಗಳನ್ನು ಮಾಡಿಕೊಂಡೆ. ಆದರೆ ನನಗೆ ಅಂತಿಮ ಬದಲಾವಣೆ ತಂದುಕೊಟ್ಟಿದ್ದು ಸಣ್ಣ ಸಣ್ಣ ವಿಷಯಗಳು, ಅವು ಅತಿ ದೊಡ್ಡ ಪರಿಣಾಮ ತಂದುಕೊಟ್ಟಿವೆ. ಈ ವಿಚಾರದ ಬಗ್ಗೆ ನಾನು ಹಂಚಿಕೊಳ್ಳಲು ಬಯಸುತ್ತೇನೆ. ಯಾಕೆಂದರೆ ನನ್ನಂತೆ ಸಮಸ್ಯೆ ಅನುಭವಿಸುವವರಿಗೆ ಇದು ಅನುಕೂಲವಾಗಲಿದೆ ಎಂದು ಪೋಸ್ಟ್‌ನಲ್ಲಿ ಹೇಳಿಕೊಂಡಿದ್ದಾರೆ.

    ಬೊಜ್ಜನ್ನು ಕರಗಿಸಲು ವ್ಯಾಯಾಮ ಮಾಡುವ ವೀಡಿಯೋವನ್ನು ಅವರು ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ತೂಕ ಇಳಿದು ಸಪೂರವಾದ ಸೊಂಟವನ್ನು ಅವರು ತೋರಿಸಿ, ಅಭಿಮಾನಿಗಳಿಗೆ, ಬೊಜ್ಜಿನ ಸಮಸ್ಯೆಯಿಂದ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಸ್ಫೂರ್ತಿಯಾಗಿದ್ದಾರೆ.

    ರಿತಿಕಾ ಸಿಂಗ್ ಸುಧಾ ಕೊಂಗರ ನಿರ್ದೇಶನದ ಆದಿಚುಟ್ಟು ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಆ ಚಿತ್ರದಲ್ಲಿನ ಅತ್ಯುತ್ತಮ ಅಭಿನಯಕ್ಕಾಗಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ. ಈ ಚಿತ್ರದ ನಂತರ, ಆಂಡವನ್ ಕತ್ತಲೈ, ಶಿವಲಿಂಗ, ಓ ಮೈ ಕಡವುಲೆ, ಕೊಲೈ, ಕಿಂಗ್ ಆಫ್ ಗೋಟಾ, ಮತ್ತು ಮಾಶಿ ಪಿಡೆಕ್ಕ ಮಾನಿತನ್ ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು. ರಜನಿಕಾಂತ್ ಅವರ ವೆಟ್ಟೈಯಾನ್‌ನಲ್ಲಿ ಸಹ ಅವರು ಪಾತ್ರ ಗಿಟ್ಟಿಸಿಕೊಂಡಿದ್ದರು. ಇದನ್ನೂ ಓದಿ: ಪಾಕಿಸ್ತಾನದ ನಟನ ಸಿನಿಮಾ ಭಾರತದಲ್ಲಿ ಬ್ಯಾನ್ ಮಾಡೋಕೆ ಅದೇನು ನೀಲಿಚಿತ್ರವಾ?- ಪ್ರಕಾಶ್ ರಾಜ್ ಕೆಂಡ

  • ದಕ್ಷಿಣ ಭಾರತದ ಖ್ಯಾತ ನಟಿ ಬಿಂದು ಘೋಷ್ ಇನ್ನಿಲ್ಲ

    ದಕ್ಷಿಣ ಭಾರತದ ಖ್ಯಾತ ನಟಿ ಬಿಂದು ಘೋಷ್ ಇನ್ನಿಲ್ಲ

    ಚೆನ್ನೈ: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ದಕ್ಷಿಣ ಭಾರತದ ಖ್ಯಾತ ನಟಿ ಬಿಂದು ಘೋಷ್ (Bindu Ghosh) ಭಾನುವಾರ ಕೊನೆಯುಸಿರೆಳೆದಿದ್ದಾರೆ.

    ರಜನಿಕಾಂತ್, ಕಮಲ್ ಹಾಸನ್ ಸೇರಿದಂತೆ ಹಲವು ಸೂಪರ್ ಸ್ಟಾರ್ ಸಿನಿಮಾಗಳಲ್ಲಿ ಬಿಂದು ಘೋಷ್ ನಟಿಸಿದ್ದರು. ಗುಂಡು ಕಲ್ಯಾಣಂ ಜೊತೆ ಬಿಂದು ಘೋಷ್ ಹೆಚ್ಚಾಗಿ ಹಾಸ್ಯ ಪಾತ್ರಗಳಲ್ಲಿ ನಟಿಸಿದ್ದರು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಬಿಂದು ಘೋಷ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

    ಬಿಂದು ಘೋಷ್ ಅವರು ‘ಗೌರಿ ಕಲ್ಯಾಣಂ’, ‘ಸುರಕೊಟ್ಟೈ ಸಿಂಗಕುಟ್ಟಿ’, ‘ಮಂಗಮ್ಮಳ್ ಚಪಧಂ’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿ ಜನರನ್ನು ನಗಿಸಿದ್ದಾರೆ. ಬಿಂದು ಘೋಷ್ ಅವರ ಪಾರ್ಥಿವ ಶರೀರವನ್ನು ಚೆನ್ನೈನ ವಿರುಗಂಬಕ್ಕಂನಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಇರಿಸಲಾಗಿದೆ. ಸೋಮವಾರ ಅಂತ್ಯಕ್ರಿಯೆ ನಡೆಯಲಿದೆ.

  • ಕನ್ನಡ ರಾಜ್ಯೋತ್ಸವದ ದಿನ ತಮಿಳು ಚಿತ್ರ ಪ್ರದರ್ಶನಕ್ಕೆ ಅಡ್ಡಿ – ಪೋಸ್ಟರ್‌ಗಳಿಗೆ ಮಸಿ

    ಕನ್ನಡ ರಾಜ್ಯೋತ್ಸವದ ದಿನ ತಮಿಳು ಚಿತ್ರ ಪ್ರದರ್ಶನಕ್ಕೆ ಅಡ್ಡಿ – ಪೋಸ್ಟರ್‌ಗಳಿಗೆ ಮಸಿ

    ಮಡಿಕೇರಿ: ಕನ್ನಡ ರಾಜ್ಯೋತ್ಸವದ (Kannada Rajyotsava) ದಿನ ಕುಶಾಲನಗರದ ಚಿತ್ರಮಂದಿರವೊಂದರಲ್ಲಿ ತಮಿಳು ಸಿನಿಮಾ ಪ್ರದರ್ಶನ ಮಾಡಿದ್ದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಅಲ್ಲದೇ ಥಿಯೇಟರ್‌ ಮುಂದೆ ಪ್ರತಿಭಟನೆ ಕೂಡ ನಡೆಸಿವೆ.

    ರಾಜ್ಯದ ಎಲ್ಲೆಡೆಯೂ ಇಂದು (ಬುಧವಾರ) 68ನೇ ಕರ್ನಾಟಕ ರಾಜ್ಯೋತ್ಸವನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಯಿತು‌. ರಾಜ್ಯದ ಅನೇಕ ಚಿತ್ರಮಂದಿರಗಳಲ್ಲಿ ಕನ್ನಡ ಚಿತ್ರಗಳು ಪ್ರದರ್ಶನವಾಗುತ್ತಿವೆ. ಈ ನಡುವೆ ಕೊಡಗು (Kodagu) ಜಿಲ್ಲೆಯ ಕುಶಾಲನಗರದ ಚಿತ್ರಮಂದಿರದಲ್ಲಿ ವಿಜಯ್ ನಟನೆಯ ತಮಿಳಿನ ಲಿಯೋ ಚಿತ್ರ ಪ್ರದರ್ಶನವಾಗುತ್ತಿದ್ದ ಹಿನ್ನೆಲೆ ಕನ್ನಡಪರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಬೆಳಗಾವಿಯಲ್ಲಿ ರಾಜಕಾರಣವೇ ಇಲ್ಲ: ಜಾರ್ಜ್

    ಚಿತ್ರಮಂದಿರ ಹಾಗೂ ಮಾಲೀಕನ ವಿರುದ್ಧ ಅಕ್ರೋಶ ವ್ಯಕ್ತಪಡಿಸಿ ಚಿತ್ರಮಂದಿರದ ಮಾಲೀಕರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ವಿಜಯ್ ಭಾವಚಿತ್ರ ಇರುವ ಫ್ಲೆಕ್ಸ್‌ಗೆ ಮಸಿ ಬಳಿದು ಚಿತ್ರವನ್ನು ನಿಲ್ಲಿಸುವಂತೆ ಅಗ್ರಾಹಿಸಿದರು.

    ಪ್ರತಿಭಟನೆ ಹೆಚ್ಚಾದ ಹಿನ್ನೆಲೆಯಲ್ಲಿ ಕುಶಾಲನಗರದ ನಗರಠಾಣೆಯ ಪೊಲೀಸರ ಚಿತ್ರಮಂದಿರಕ್ಕೆ ಅಗಮಿಸಿ, ಚಿತ್ರ ಪ್ರದರ್ಶನವಾಗುವ ಸಂದರ್ಭದಲ್ಲಿ ಪ್ರೇಕ್ಷಕರಿಗೆ ತೊಂದರೆ ಆಗದ ರೀತಿಯಲ್ಲಿ ಪ್ರತಿಭಟನೆ ಮಾಡಿ. ಚಿತ್ರಮಂದಿರದ ಮಾಲೀಕರನ್ನು ಕರೆಸುತ್ತೇವೆ. ನಿಮ್ಮ ಅಬಿಫ್ರಾಯವನ್ನು ಮುಕ್ತವಾಗಿ ಹಂಚಿಕೊಳ್ಳಿ ಎಂದು ಪ್ರತಿಭಟನಾಕಾರರ ಮನವೊಲಿಸಿದರು. ಇದನ್ನೂ ಓದಿ: ನಮ್ಮ ಬಸ್‌ಗೆ ಹಾನಿ ಮಾಡಿದವರ ಮೇಲೆ ಕ್ರಮ, ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದೇವೆ: ರಾಮಲಿಂಗಾರೆಡ್ಡಿ

    ಕುಶಾಲನಗರ ನಗರ ಠಾಣೆಯ ಪೊಲೀಸ್‌ ಅಧಿಕಾರಿ ಚಂದ್ರಶೇಖರ್ ಮನವಿ ಮಾಡಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಚಿತ್ರಮಂದಿರ ಹೊರಗೆ ಪ್ರತಿಭಟನೆ ನಡೆಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಒಂದೇ ಹಂತದಲ್ಲಿ ತಮಿಳು ಸಿನಿಮಾದ ಶೂಟಿಂಗ್ ಮುಗಿಸಿದ ನಿರ್ದೇಶಕ ಪ್ರಶಾಂತ್ ರಾಜ್

    ಒಂದೇ ಹಂತದಲ್ಲಿ ತಮಿಳು ಸಿನಿಮಾದ ಶೂಟಿಂಗ್ ಮುಗಿಸಿದ ನಿರ್ದೇಶಕ ಪ್ರಶಾಂತ್ ರಾಜ್

    ದೇ ಮೊದಲ ಬಾರಿಗೆ ತಮಿಳು ಸಿನಿಮಾ ರಂಗಕ್ಕೆ ಹಾರಿರುವ ಪ್ರಶಾಂತ್ ರಾಜ್ ಅಚ್ಚರಿ ಎನ್ನುವಂತೆ ಒಂದೇ ಹಂತದಲ್ಲೇ ತಮ್ಮ ಚೊಚ್ಚಲು ತಮಿಳು ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ನಿರಂತರವಾಗಿ ಒಟ್ಟು 52 ದಿನಗಳ ಕಾಲ ಚಿತ್ರೀಕರಣ ಮಾಡಿರುವುದಾಗಿ ಅವರು ತಿಳಿಸಿದ್ದಾರೆ. ಭಾರೀ ಬಜೆಟ್ ನಲ್ಲೇ ಈ ಸಿನಿಮಾ ನಿರ್ಮಾಣವಾಗಿದ್ದು, ಈವರೆಗೂ ಅವರ ನಿರ್ಮಾಣ ಸಂಸ್ಥೆಯಿಂದ ಇಷ್ಟು ಬಜೆಟ್ ನ ಸಿನಿಮಾ ಬಂದಿಲ್ಲ ಎನ್ನುವುದು ಚಿತ್ರದ ಮತ್ತೊಂದು ಹೆಗ್ಗಳಿಕೆ. ಅಂದಾಜು 16 ಕೋಟಿಗೂ ಅಧಿಕ ವೆಚ್ಚವನ್ನೂ ಈ ಸಿನಿಮಾಗಾಗಿ ಖರ್ಚು ಮಾಡಿದ್ದಾರೆ ಎನ್ನಲಾಗುತ್ತಿದೆ.

    ಬೆಂಗಳೂರಿನಿಂದ ಶುರುವಾದ ಸಿನಿಮಾ ಚಿತ್ರೀಕರಣ ಚೆನ್ನೈ, ಬ್ಯಾಂಕಾಕ್, ಪಟಾಯ್, ಪುಕಟೆ ಸೇರಿದಂತೆ ಹಲವು ತಾಣಗಳಲ್ಲಿ ಚಿತ್ರೀಕರಣವಾಗಿದೆ. ಕಲರ್ ಫುಲ್ ಮತ್ತು ಯೂಥ್ ಫುಲ್ ಸಿನಿಮಾಗಳ ಮೂಲಕ ಹೆಸರು ಮಾಡಿರುವ ಪ್ರಶಾಂತ್ ರಾಜ್, ಈ ಸಿನಿಮಾದಲ್ಲೂ ಅದನ್ನು ಮುಂದುವರೆಸಿದ್ದಾರಂತೆ. ಲವ್ ಗುರು ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಮೂಡಿಸಿದ್ದ ಪ್ರಶಾಂತ್ ರಾಜ್ ಇದೇ ಮೊದಲ ಬಾರಿಗೆ ಅವರು ತಮಿಳು ಚಿತ್ರವೊಂದನ್ನು ನಿರ್ದೇಶನ ಮಾಡಿದ್ದಾರೆ. ಇದನ್ನೂ ಓದಿ : ಎಪ್ರಿಲ್ 2ನೇ ವಾರದಲ್ಲಿ ನಟಿ ಕಾವ್ಯ ಶಾ ಮದ್ವೆ : ಮಾಧ್ಯಮ ಲೋಕದ ಹುಡುಗನ ಜತೆ ಸಪ್ತಪದಿ

    ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಪ್ರಶಾಂತ್ ರಾಜ್ ಸಿನಿಮಾಗಳೆಂದರೆ ಅಲ್ಲಿ ಸಂಗೀತಕ್ಕೆ ಹೆಚ್ಚಿನ ಪ್ರಾಧಾನ್ಯತೆ ಇರುತ್ತದೆ. ಅಲ್ಲದೇ, ಮೆಲೊಡಿಗೂ ಅವರು ಹೆಚ್ಚು ಒತ್ತು ಕೊಡುತ್ತಾರೆ. ಈವರೆಗೂ ಪ್ರಶಾಂತ್ ರಾಜ್ ನಿರ್ದೇಶನದಲ್ಲಿ ಮೂಡಿ ಬಂದ ಚಿತ್ರಗಳಲ್ಲಿ ಹಾಡುಗಳು ಸೂಪರ್ ಹಿಟ್ ಆಗಿವೆ. ಹೀಗಾಗಿ ಪ್ರಶಾಂತ್ ರಾಜ್ ಮತ್ತು ಅರ್ಜುನ್ ಜನ್ಯ ಕಾಂಬಿನೇಷನ್ ನ ಹಾಡುಗಳು ಬಗ್ಗೆ ಈಗಿಂದಲೇ ಕುತೂಹಲ ಹೆಚ್ಚಾಗಿದೆ.

    ತಮಿಳಿನ ಹೆಸರಾಂತ ನಟ ಸಂತಾನಂ ಈ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದು, ತಾನ್ಯ ಹೋಪ್ ಈ ಸಿನಿಮಾದಲ್ಲಿ ನಾಯಕಿ. ಸಾಧು ಕೋಕಿಲಾ ಸೇರಿದಂತೆ ಸಾಕಷ್ಟು ಹೆಸರಾಂತ ತಾರೆಯರು ಈ ಸಿನಿಮಾದಲ್ಲಿ ಪಾತ್ರ ಮಾಡಿದ್ದಾರೆ. ರಾಗಿಣಿ ಕೂಡ ಅತಿಥಿ ಪಾತ್ರದಲ್ಲಿ ನಟಿಸಿದ್ದು ಮತ್ತೊಂದು ವಿಶೇಷ. ಕಲರ್ ಫುಲ್ ಮತ್ತು ಮ್ಯೂಸಿಕ್ ಈ ಮೂರು ಪ್ರಶಾಂತ್ ರಾಜ್ ಮಂತ್ರಗಳು. ಅವರ ಬಹುತೇಕ ಚಿತ್ರಗಳು ಕಲರ್ ಫುಲ್ ಆಗಿ ಮೂಡಿ ಬಂದಿವೆ. ಹೊಸ ಹೊಸ ಲೊಕೇಶನ್ ಗಳಲ್ಲಿ ಚಿತ್ರಿತವಾಗಿವೆ. ತಮಿಳು ಸಿನಿಮಾದಲ್ಲೂ ಈ ಸೂತ್ರವನ್ನೇ ಅವರು ಪಾಲಿಸಿಕೊಂಡು ಹೋಗುತ್ತಿದ್ದಾರಂತೆ.

    Live Tv

  • ಬಾಲಿವುಡ್ ನಿದ್ದೆ ಕೆಡಿಸಿದ ಮತ್ತೊಂದು ದಕ್ಷಿಣದ ಸಿನಿಮಾ : ರಿಲೀಸ್ ಗೂ ಮುನ್ನ ಕೋಟಿ ಕೋಟಿ ಬಾಚಿಕೊಂಡ ಕಮಲ್ ಹಾಸನ್

    ಬಾಲಿವುಡ್ ನಿದ್ದೆ ಕೆಡಿಸಿದ ಮತ್ತೊಂದು ದಕ್ಷಿಣದ ಸಿನಿಮಾ : ರಿಲೀಸ್ ಗೂ ಮುನ್ನ ಕೋಟಿ ಕೋಟಿ ಬಾಚಿಕೊಂಡ ಕಮಲ್ ಹಾಸನ್

    ದೇ ಶುಕ್ರವಾರ ಕಮಲ್ ಹಾಸನ್ ನಟನೆಯ ‘ವಿಕ್ರಮ್’ ಸಿನಿಮಾ ರಿಲೀಸ್ ಆಗುತ್ತಿದೆ. ಬಿಡುಗಡೆಗೂ ಮುನ್ನ ಈ ಸಿನಿಮಾ ಕೋಟಿ ಕೋಟಿ ಬಾಚಿಕೊಂಡಿದೆ ಎಂದು ಬಾಕ್ಸ್ ಆಫೀಸ್ ರಿಪೋರ್ಟ್ ಹೇಳುತ್ತಿದೆ. ಹೀಗಾಗಿ ದಕ್ಷಿಣದ ಸಿನಿಮಾವೊಂದು ಮತ್ತೆ ಬಾಲಿವುಡ್ ಮಂದಿಯನ್ನು ನಿದ್ದೆಗೆಡಿಸಿದೆ. ಆರ್.ಆರ್.ಆರ್ ಮತ್ತು ಕೆಜಿಎಫ್ 2 ನಂತರ ವಿಕ್ರಮ್ ಕೂಡ ಬಾಕ್ಸ್ ಆಫೀಸಿನಲ್ಲಿ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಲಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕನಿಗೆ ಆಕ್ಸ್ ಫರ್ಡ್ ಯೂನಿವರ್ಸಿಟಿಯಲ್ಲಿ ಅವಮಾನ

    ಕಮಲ್ ಹಾಸನ್, ವಿಜಯ್ ಸೇತು ಪತಿ ಮತ್ತು ಫಾಸಿಲ್ ಕಾಂಬಿನೇಷನ್ ನ ಸಿನಿಮಾ ಇದಾಗಿದ್ದರಿಂದ ಸಿನಿಮಾ ರಿಲೀಸ್ ಗೂ ಮುನ್ನ 250 ಕೋಟಿ ರೂಪಾಯಿ ಬಾಚಿದೆಯಂತೆ. ಸಿನಿಮಾ ಬಿಡುಗಡೆಗೆ ಇನ್ನೂ ಎರಡು ದಿನ ಇರುವಾಗಲೇ ಬಹುತೇಕ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಬೋರ್ಡ್ ಕೂಡ ಬಿದ್ದಿದೆಯಂತೆ. ತಮಿಳು ನಾಡಿನಲ್ಲಿ ಮೊದಲೆರಡು ದಿನಗಳ ಟಿಕೆಟ್ ಗಳು ಖಾಲಿ ಖಾಲಿ. ಹಿಂದಿಯಲ್ಲೂ ಸಿನಿಮಾ ಕೂಡ ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ.  ಇದನ್ನೂ ಓದಿ : ಕಮಲ್ ಹಾಸನ್ ‘ವಿಕ್ರಮ್’ ಚಿತ್ರಕ್ಕೆ 13 ಕಡೆ ಕತ್ತರಿ : ಸೆನ್ಸಾರ್ ಮಂಡಳಿ ಸೂಚನೆ ಏನಿತ್ತು?

    ಈಗಾಗಲೇ ಈ ಚಿತ್ರದ ಬಗ್ಗೆ ತಮಿಳಿನಲ್ಲಿ ವಿರೋಧವೂ ಕೇಳಿ ಬಂದಿದೆ. ಅಲ್ಲದೇ, ಸೆನ್ಸಾರ್ ಮಂಡಳಿಯು ಸಿನಿಮಾದಲ್ಲಿ ಹಿಂಸೆ ಇದ್ದ ಕಾರಣದಿಂದಾಗಿ 13 ಕಡೆ ಕತ್ತರಿ ಪ್ರಯೋಗ ಮಾಡಿದೆ. ಈ ಎಲ್ಲದರ ಮಧ್ಯಯೂ ಅದ್ಭುತ ರೆಸ್ಪಾನ್ಸ್ ಸಿಗುತ್ತಿದೆಯಂತೆ. ಹಾಗಾಗಿ ನಾಲ್ಕು ಸಾವಿರ ಚಿತ್ರಮಂದಿರಗಳಲ್ಲಿ ವಿಕ್ರಮ್ ಸಿನಿಮಾ ತೆರೆ ಕಾಣುತ್ತಿದೆ.

  • ಭಾರತದಲ್ಲೇ ಅತೀ ಹೆಚ್ಚು ಸಂಭಾವನೆ ಪಡೆಯುವ ನಟನಾದ ರಜನೀಕಾಂತ್

    ಭಾರತದಲ್ಲೇ ಅತೀ ಹೆಚ್ಚು ಸಂಭಾವನೆ ಪಡೆಯುವ ನಟನಾದ ರಜನೀಕಾಂತ್

    ಸಿನಿಮಾ ರಂಗದಲ್ಲಿ ಗೆಲುವು ಮತ್ತು ಸಂಭಾವನೆಯ ವಿಚಾರವಾಗಿಯೇ ಸ್ಟಾರ್ ಗಳಿಗೆ ಪಾಪ್ಯುಲಾರಿಟಿ ಗೊತ್ತು ಪಡಿಸಲಾಗುತ್ತದೆ. ನಂಬರ್ ಗಳ ಪಟ್ಟ ಕಟ್ಟಲಾಗುತ್ತಿದೆ. ಇದೀಗ ಭಾರತೀಯ ಸಿನಿಮಾ ರಂಗದಲ್ಲಿ ನಂ.1 ನಟ ಯಾರು? ಯಾರು ಅತೀ ಹೆಚ್ಚು ಸಂಭಾವನೆಯನ್ನು ಪಡೆಯುತ್ತಾರೆ ಎನ್ನುವ ಚರ್ಚೆ ಮುನ್ನೆಲೆಗೆ ಬಂದಿದೆ. ಕಾರಣ ಅಚ್ಚರಿ ಪಡುವಂತೆ ರಜನೀಕಾಂತ್ ಸಂಭಾವನೆ ಪಡೆಯುತ್ತಿದ್ದಾರಂತೆ. ಇದನ್ನೂ ಓದಿ : ‘ಕಾಳಿ’ ಟೈಟಲ್ ಧ್ರುವ ಸರ್ಜಾಗಾ? ಅಥವಾ ಅಭಿಷೇಕ್ ಅಂಬರೀಶ್ ಗಾ?

    ಭಾರತೀಯ ಸಿನಿಮಾ ರಂಗದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟರು ಬಾಲಿವುಡ್ ನಲ್ಲೇ ಇದ್ದಾರೆ ಎಂದು ನಂಬಿಸುತ್ತಾ ಬರಲಾಗಿತ್ತು. ದಕ್ಷಿಣದ ಸಿನಿಮಾಗಳ ಬಜೆಟ್ ನ ಎರಡ್ಮೂರು ಪಟ್ಟು ಸಂಭಾವನೆಯನ್ನು ಬಾಲಿವುಡ್ ನಟರು ಪಡೆಯುತ್ತಾರೆ ಎಂದು ಗೇಲಿ ಮಾಡಲಾಗುತ್ತಿತ್ತು. ನೂರಾರು ಕೋಟಿ ಸಂಭಾವನೆ ಪಡೆಯುವ ಮೂಲಕ ಖಾನ್ ಖಾಂದಾನ್ ನಟರು ಯಾವಾಗಲೂ ನಂಬರ್ 1 ಪಟ್ಟದಲ್ಲೇ ಬೀಗುತ್ತಾರೆ ಎನ್ನುವುದು ದಾಖಲಾಗಿತ್ತು. ಇದೀಗ ಎಲ್ಲವನ್ನೂ ಅಳಿಸಿ ಹಾಕುತ್ತಿದ್ದಾರೆ ರಜನೀಕಾಂತ್. ಇದನ್ನೂ ಓದಿ: ಬ್ರ್ಯಾಂಡ್ ಬೆಂಗಳೂರು ಹೆಸರು ಉಳಿಸಿ – ಪ್ರಧಾನಿಗೆ ನಟ ಅನಿರುದ್ಧ್ ಪತ್ರ

    ಹೌದು, ದಕ್ಷಿಣದ ಸಿನಿಮಾಗಳು ಬಾಲಿವುಡ್ ನಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ನೂರಾರು ಕೋಟಿ ರೂಪಾಯಿಗಳನ್ನು ಬಾಚುತ್ತಿರುವಾಗ, ಸಹಜವಾಗಿಯೇ ದಕ್ಷಿಣದ ನಟರು ಕೂಡ ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಅದರಲ್ಲೂ ತಮಿಳಿನ ಸೂಪರ್ ಸ್ಟಾರ್ ನಟ ರಜನೀಕಾಂತ್ ಅವರು ಸಂಭಾವನೆಯ ವಿಚಾರದಲ್ಲಿ ಯಾವತ್ತೂ ಹಿಂದೆ ಬಿದ್ದಿಲ್ಲ. ಬಾಲಿವುಡ್ ಖ್ಯಾತ ನಟರ ಸಂಭಾವನೆಯನ್ನೇ ಇವರು ಹಣ ಪಡೆಯುತ್ತಿದ್ದರು ಎನ್ನುವುದು ಸತ್ಯ. ಇದನ್ನೂ ಓದಿ: ಚೇತನಾ ರಾಜ್ ಸಾವಿನ ಬೆನ್ನಲ್ಲೇ ಬಾಡಿ ಶೇಮಿಂಗ್ ಬಗ್ಗೆ ವಿನಯಾ ಪ್ರಸಾದ್ ಪುತ್ರಿ ಖಡಕ್ ಮಾತು

    ಇದೀಗ ರಜನೀಕಾಂತ್ ಅವರು 169ನೇ ಸಿನಿಮಾವನ್ನು ಒಪ್ಪಿಕೊಂಡಿದ್ದು, ಈ ಚಿತ್ರಕ್ಕೆ ಅವರು ಬರೋಬ್ಬರಿ 150 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ ಭಾರತದಲ್ಲೇ ಅತೀ ಹೆಚ್ಚು ಸಂಭಾವನೆ ಪಡೆದ ನಟ ಇವರಾಗಿದ್ದಾರೆ. 250ಕ್ಕೂ ಹೆಚ್ಚು ಕೋಟಿ ಈ ಸಿನಿಮಾ ನಿರ್ಮಾಣಕ್ಕಾಗಿ ಖರ್ಚು ಮಾಡಲಾಗುತ್ತಿದೆಯಂತೆ.

  • ಕರಾಳ ದಿನಗಳ ಮರೆತು ಸಿನಿಮಾ ರಂಗದಲ್ಲಿ ರಾಗಿಣಿ ಮತ್ತೆ ಬ್ಯುಸಿ

    ಕರಾಳ ದಿನಗಳ ಮರೆತು ಸಿನಿಮಾ ರಂಗದಲ್ಲಿ ರಾಗಿಣಿ ಮತ್ತೆ ಬ್ಯುಸಿ

    ಡ್ರಗ್ಸ್ ಕೇಸ್ ನಂತರ ಸಾಕಷ್ಟು ಬದಲಾವಣೆ ಆಗಿರುವ ರಾಗಿಣಿ ದ್ವಿವೇದಿ, ಇದೀಗ ಮತ್ತೆ ಸಿನಿಮಾ ರಂಗದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಅವರ ಕೈಯಲ್ಲಿ ಎರಡು ಚಿತ್ರಗಳಿದ್ದು, ಎರಡೂ ಸಿನಿಮಾಗಳಲ್ಲೂ ವಿಭಿನ್ನ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಒಂದು ತಮಿಳು ಚಿತ್ರವಾದರೆ ಮತ್ತೊಂದು ಕನ್ನಡ ಮತ್ತು ತಮಿಳಿನಲ್ಲಿ ಮೂಡಿ ಬರುತ್ತಿವೆ. ಇದನ್ನೂ ಓದಿ : ರವಿವರ್ಮನ ಕಲ್ಪನೆಯ ಸುಂದರಿಯರಂತೆ ಪತ್ನಿಯ ಫೋಟೋ ಶೂಟ್ ಮಾಡಿಸಿದ ಜನಾರ್ದನ ರೆಡ್ಡಿ

    ಕಳೆದ ಸಂಕ್ರಾಂತಿಯ ದಿನದಂದು ತಮಿಳಿನ ‘ಒನ್ 2 ಒನ್’ ಚಿತ್ರಕ್ಕೆ ಮುಹೂರ್ತವಾಗಿದ್ದು, ಕೆಲ ಹಂತದ ಶೂಟಿಂಗ್ ನಲ್ಲೂ ರಾಗಿಣಿ ಪಾಲ್ಗೊಂಡಿದ್ದಾರೆ. ತಿರುಜ್ಞಾನಮ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಇದೊಂದು ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಮಾದರಿಯ ಸಿನಿಮಾವಾಗಿದೆ. ಹೋಮ್ಲಿ ರೀತಿಯ ಪಾತ್ರವನ್ನು ಈ ಸಿನಿಮಾದಲ್ಲಿ ನಿರ್ವಹಿಸುತ್ತಿದ್ದಾರಂತೆ ರಾಗಿಣಿ. ಇದನ್ನೂ ಓದಿ : ಚಲಿಸುವ ಬೋಟ್ ನಲ್ಲಿ ಚೆಲುವೆ ರಾಧಿಕಾ ಕುಮಾರಸ್ವಾಮಿ

    ಮೊನ್ನೆಯಷ್ಟೇ ಅವರು ಮತ್ತೊಂದು ಸಿನಿಮಾವನ್ನು ಒಪ್ಪಿಕೊಂಡಿದ್ದು, ಅದು ತಮಿಳು ಮತ್ತು ಕನ್ನಡದಲ್ಲಿ ನಿರ್ಮಾಣವಾಗುತ್ತಿದೆ. ಈ ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. ಕನ್ನಡದ ನಿರ್ದೇಶಕರೇ ಆದ ಪ್ರಶಾಂತ್ ರಾಜ್ ಈ ಚಿತ್ರದ ನಿರ್ದೇಶಕರು. ಈಗಾಗಲೇ ಬೆಂಗಳೂರಿನಲ್ಲೇ ಚಿತ್ರದ ಶೂಟಿಂಗ್ ನಡೆದಿದೆ. ತಾನ್ಯ ಹೋಪ್ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದು, ರಾಗಿಣಿ ಅವರದ್ದು ಅತಿಥಿ ಪಾತ್ರವಾ? ಅಥವಾ ಮತ್ತೊಂದು ನಾಯಕಿಯ ಪಾತ್ರವಾ ಗೊತ್ತಾಗಿಲ್ಲ. ಇದನ್ನೂ ಓದಿ: ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿ

    ಪ್ರಶಾಂತ್ ರಾಜ್ ನಿರ್ದೇಶನದ ಚಿತ್ರಕ್ಕೆ ಸಂತಾನಂ ಹೀರೋ. ಮೊದಲ ಬಾರಿಗೆ ಅವರು ಕನ್ನಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕನ್ನಡ ಮತ್ತು ತಮಿಳು ಎರಡೂ ಭಾಷೆಗಳಲ್ಲೂ ಈ ಸಿನಿಮಾದ ಮೂಡಿ ಬರುತ್ತಿರುವುದು ವಿಶೇಷ. ಈ ಸಿನಿಮಾದಲ್ಲಿ ರಾಗಿಣಿ ಗ್ಲಾಮರ್ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಮಾಹಿತಿ ಇದೆ. ಸದ್ಯ ಬೆಂಗಳೂರಿನಲ್ಲಿ ಶೂಟಿಂಗ್ ನಡೆಯುತ್ತಿದ್ದು, ನಂತರ ಚೆನ್ನೈನಲ್ಲಿ ಚಿತ್ರೀಕರಣವಂತೆ.

  • ಪ್ರಶಾಂತ್ ರಾಜ್ ನಿರ್ದೇಶನದ ತಮಿಳು ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶಕ

    ಪ್ರಶಾಂತ್ ರಾಜ್ ನಿರ್ದೇಶನದ ತಮಿಳು ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶಕ

    ಲವ್ ಗುರು ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಮೂಡಿಸಿದ್ದ ಪ್ರಶಾಂತ್ ರಾಜ್ ಇದೀಗ ಸದ್ದಿಲ್ಲದೇ ತಮಿಳು ಸಿನಿಮಾ ರಂಗಕ್ಕೆ ಹಾರಿದ್ದಾರೆ. ಇದೇ ಮೊದಲ ಬಾರಿಗೆ ಅವರು ತಮಿಳು ಚಿತ್ರವೊಂದನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಪ್ರಶಾಂತ್ ರಾಜ್ ಸಿನಿಮಾಗಳೆಂದರೆ ಅಲ್ಲಿ ಸಂಗೀತಕ್ಕೆ ಹೆಚ್ಚಿನ ಪ್ರಾಧಾನ್ಯತೆ ಇರುತ್ತದೆ. ಅಲ್ಲದೇ, ಮೆಲೊಡಿಗೂ ಅವರು ಹೆಚ್ಚು ಒತ್ತು ಕೊಡುತ್ತಾರೆ. ಈವರೆಗೂ ಪ್ರಶಾಂತ್ ರಾಜ್ ನಿರ್ದೇಶನದಲ್ಲಿ ಮೂಡಿ ಬಂದ ಚಿತ್ರಗಳಲ್ಲಿ ಹಾಡುಗಳು ಸೂಪರ್ ಹಿಟ್ ಆಗಿವೆ. ಹೀಗಾಗಿ ಪ್ರಶಾಂತ್ ರಾಜ್ ಮತ್ತು ಅರ್ಜುನ್ ಜನ್ಯ ಕಾಂಬಿನೇಷನ್ ನ ಹಾಡುಗಳು ಬಗ್ಗೆ ಈಗಿಂದಲೇ ಕುತೂಹಲ ಹೆಚ್ಚಾಗಿದೆ.

    ಸಿನಿಮಾ ತಮಿಳದ್ದಾದರೂ, ಬಹುತೇಕ ಕನ್ನಡದ ತಂತ್ರಜ್ಞರು ಮತ್ತು ಕಲಾವಿದರು ಈ ಸಿನಿಮಾದಲ್ಲಿ ಇರಲಿದ್ದಾರೆ ಎಂದು ಈ ಹಿಂದೆ ಪ್ರಶಾಂತ್ ರಾಜ್ ಹೇಳಿದ್ದರು. ಕನ್ನಡದ ಹುಡುಗಿಯನ್ನೇ ನಾಯಕಿಯನ್ನಾಗಿ ಆಯ್ಕೆ ಮಾಡುವೆ ಎಂದೂ ತಿಳಿಸಿದ್ದರು. ಕೊಟ್ಟ ಮಾತಿನಂತೆ ಕನ್ನಡದ ನಟಿಯನ್ನೇ ನಾಯಕಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ತಾನ್ಯ ಹೋಪ್ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದನ್ನೂ ಓದಿ : ಕೆಜಿಎಫ್ 2 : ಕಿಚ್ಚ ಸುದೀಪ್ ಮತ್ತು ಯಶ್ ಮಧ್ಯೆ ತಂದಿಡುತ್ತಿದೆ ವೈರಲ್ ವಿಡಿಯೋ

    ಲವ್ ಗುರು ಸೇರಿದಂತೆ ಅನೇಕ ಚಿತ್ರಗಳಿಗೆ ನಿರ್ದೇಶನ ಮಾಡಿರುವ ಪ್ರಶಾಂತ್ ರಾಜ್, ಇದೇ ಮೊದಲ ಬಾರಿಗೆ ತಮಿಳು ಚಿತ್ರ ಮಾಡುತ್ತಿದ್ದು, ತಮ್ಮದೇ ಆದ ಶೈಲಿಯ ಕಥೆಯನ್ನೇ ತಮಿಳಿನಲ್ಲೂ ಆಯ್ಕೆ ಮಾಡಿದ್ದಾರೆ. ಲವ್, ಕಲರ್ ಫುಲ್ ಮತ್ತು ಮ್ಯೂಸಿಕ್ ಈ ಮೂರು ಪ್ರಶಾಂತ್ ರಾಜ್ ಮಂತ್ರಗಳು. ಅವರ ಬಹುತೇಕ ಚಿತ್ರಗಳು ಕಲರ್ ಫುಲ್ ಆಗಿ ಮೂಡಿ ಬಂದಿವೆ. ಹೊಸ ಹೊಸ ಲೊಕೇಶನ್ ಗಳಲ್ಲಿ ಚಿತ್ರಿತವಾಗಿವೆ. ತಮಿಳು ಸಿನಿಮಾದಲ್ಲೂ ಈ ಸೂತ್ರವನ್ನೇ ಅವರು ಪಾಲಿಸಿಕೊಂಡು ಹೋಗುತ್ತಿದ್ದಾರಂತೆ. ಇದನ್ನೂ ಓದಿ: ತಾಯಿಯಾಗುತ್ತಿದ್ದಾರೆ ಚಂದ್ರನ ರಾಣಿ ಶ್ರಿಯಾ ಸರನ್ 

    ಪ್ರಶಾಂತ್ ರಾಜ್ ಅವರ ತಮಿಳಿನ ಚೊಚ್ಚಲು ಚಿತ್ರಕ್ಕೆ ಸಂತಾನಂ ಹೀರೋ. ಈ ತಿಂಗಳು ಕೊನೆಯಲ್ಲಿ ಶೂಟಿಂಗ್ ಶುರುವಾದರೆ, ಆಗಸ್ಟ್ ನಲ್ಲಿ ಸಿನಿಮಾ ಬಿಡುಗಡೆ ಮಾಡುವುದಾಗಿ ಹೇಳುತ್ತಾರೆ ನಿರ್ದೇಶಕರು. ಇದನ್ನೂ ಓದಿ : ಕೆಜಿಎಫ್-2 ಸಿನಿಮಾ ವೀಕ್ಷಣೆ ವೇಳೆ ಹಾರಿದ ಗುಂಡು- ಯುವಕನ ಹೊಟ್ಟೆಗೆ ಗಾಯ

    ಸಾಧು ಕೋಕಿಲಾ ಸೇರಿದಂತೆ ಕೆಲ ನಟರೂ ಈ ಸಿನಿಮಾದಲ್ಲಿ ನಟಿಸಲಿದ್ದಾರೆ. ಸುಧಾಕರ್ ಅವರ ಸಿನಿಮಾಟೋಗ್ರಫಿ ಚಿತ್ರಕ್ಕಿರಲಿದೆ. ಕನ್ನಡದ ಸಂಗೀತ ನಿರ್ದೇಶಕರೇ ಈ ಸಿನಿಮಾದಲ್ಲಿ ಕೆಲಸ ಮಾಡಲಿದ್ದಾರೆ.

  • ಸಿಂಬು ನಟನೆಯ ಚಿತ್ರಕ್ಕೆ ಐಶ್ವರ್ಯ ರಜನೀಕಾಂತ್ ನಿರ್ದೇಶಕಿ

    ಸಿಂಬು ನಟನೆಯ ಚಿತ್ರಕ್ಕೆ ಐಶ್ವರ್ಯ ರಜನೀಕಾಂತ್ ನಿರ್ದೇಶಕಿ

    ನುಷ್ ಜತೆಗೆ ವಿಚ್ಛೇದನದ ನಂತರ ರಜನೀಕಾಂತ್ ಪುತ್ರಿ ಐಶ್ವರ್ಯ ಆಸ್ಪತ್ರೆ ಸೇರಿಕೊಂಡಿದ್ದರು. ಕೋವಿಡ್ ಮತ್ತು ಇತರ ಆರೋಗ್ಯಕ್ಕೆ ಸಂಬಂಧಿಸಿದಂತೆ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರು ಗುಣಮುಖರಾಗಿದ್ದು, ಕೆಲವೇ ದಿನಗಳಲ್ಲೇ ಮತ್ತೆ ಅವರು ನಿರ್ದೇಶನ ಆರಂಭ ಮಾಡಲಿದ್ದಾರಂತೆ.

    ನಿರ್ದೇಶಕಿಯಾಗಿ ಹಲವು ಸಿನಿಮಾಗಳನ್ನು ಮಾಡಿರುವ ಐಶ್ವರ್ಯ, ಖಾಸಗಿ ಬದುಕಿನಲ್ಲಿ ಸಾಕಷ್ಟು ನೋವುಗಳನ್ನು ಉಂಡವರು. ಹಾಗಾಗಿ ಅವರು ಅನಿವಾರ್ಯವಾಗಿ ಮತ್ತೆ ಕೆಲಸಕ್ಕೆ ಇಳಿಯಬೇಕಿದೆ. ಎಲ್ಲ ಸಂಕಟಗಳನ್ನು ದಾಟಿಕೊಳ್ಳಲು ಮತ್ತೆ ನಿರ್ದೇಶನ ಮಾಡುವುದು ಸೂಕ್ತ ಎಂಬ ಸಲಹೆ ಬಂದ  ಹಿನ್ನೆಲೆಯಲ್ಲಿ ಅವರು ಹೊಸ ಕಥೆಯೊಂದನ್ನು ಕೈಗೆತ್ತಿಕೊಂಡಿದ್ದಾರಂತೆ.  ಇದನ್ನೂ ಓದಿ : ಅಂದು ಸುದೀಪ್ ಪುಸ್ತಕ ಬಿಡುಗಡೆ ಮಾಡಿದ್ದ ಪುನೀತ್, ಇಂದು ಪುನೀತ್ ಪುಸ್ತಕ ಬಿಡುಗಡೆ ಮಾಡಿದ ಸುದೀಪ್

    ಈಗಾಗಲೇ ಕಥೆ ರೆಡಿ ಮಾಡಿಕೊಂಡಿದ್ದು, ತಮಿಳಿನ ಖ್ಯಾತ ನಟ ಸಿಂಬು ಅವರ ಚಿತ್ರಕ್ಕೆ ಐಶ್ವರ್ಯ ನಿರ್ದೇಶನ ಮಾಡಲಿದ್ದಾರೆ ಎನ್ನುವ ಮಾಹಿತಿ ಇದೆ. ಕೆಲ ವರ್ಷಗಳಿಂದ ಸಿಂಬು ಸಿನಿಮಾ ರಂಗದಿಂದ ದೂರವಿದ್ದರು. ಈ ಸಿನಿಮಾದ ಮೂಲಕ ಅವರೂ ಚಿತ್ರೋದ್ಯಮಕ್ಕೆ  ಮರಳಲಿದ್ದಾರಂತೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್

    ಪತಿ ಧನುಷ್ ಅವರು ಸಿನಿಮಾದ ಮೂಲಕ ನಿರ್ದೇಶಕಿ ಆದವರು ಐಶ್ವರ್ಯ. ಆನಂತರ ಅವರು ವಾಯಿ ರಾಜ್ ವಾಯಿ ಸೇರಿದಂತೆ ಹಲವು ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಐದು ವರ್ಷದಿಂದ ಯಾವುದೇ ಚಿತ್ರ ಮಾಡಿರಲಿಲ್ಲ.

  • ತಮಿಳಿನ ಖ್ಯಾತ ಹಾಸ್ಯ ನಟ ವಿವೇಕ್ ಇನ್ನಿಲ್ಲ

    ತಮಿಳಿನ ಖ್ಯಾತ ಹಾಸ್ಯ ನಟ ವಿವೇಕ್ ಇನ್ನಿಲ್ಲ

    ಚೆನ್ನೈ: ತಮಿಳಿನ ಖ್ಯಾತ ಹ್ಯಾಸ ನಟ ವಿವೇಕ್ ಇಂದು ಬೆಳಗಿನ ಜಾವ ಸುಮಾರು 4.30ಕ್ಕೆ ನಿಧನರಾಗಿದ್ದಾರೆ,

    ವಿವೇಕ್ ಅವರಿಗೆ ಗುರುವಾರ ಎದೆನೋವು ಕಾಣಿಸಿಕೊಂಡ ಪರಿಣಾಮ ಚೆನ್ನೈನ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ವೈದ್ಯರು ಆರೋಗ್ಯ ಸ್ಥಿತಿ ಪರೀಕ್ಷಿಸಿದಾಗ ಹೃದಯಾಘಾತವಾಗಿರುವುದು ತಿಳಿದು ಬಂದಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದರು.

    ವೈದ್ಯರು ಆರೋಗ್ಯ ಪರೀಕ್ಷಿಸಿದ ನಂತರ ವಿವೇಕ್ ಅವರು ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೃದ್ರೋಗ ತಜ್ಞರ ತಂಡ ಅವರ ಆರೋಗ್ಯವನ್ನು ನಿರಂತರವಾಗಿ ಗಮನಿಸುತ್ತಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

    ವಿವೇಕ್ ಏಪ್ರಿಲ್ 15 ರಂದು ಅವರ ಸ್ನೇಹಿತನೊಂದಿಗೆ ಚೆನ್ನೈನ ಒಮಾಂಡುರಾರ್ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆ ಪಡೆದಿದ್ದರು. ಲಸಿಕೆ ಪಡೆದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ವಿವೇಕ್ ಅವರು, ಎಲ್ಲರೂ ಕೂಡ ಕೋವಿಡ್ -19 ಲಸಿಕೆಗಳನ್ನು ಪಡೆಯುವಂತೆ ಮನವಿ ಮಾಡಿದ್ದರು. ಹಾಗೆ ಕೊರೊನಾದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಪ್ರತಿಯೊಬ್ಬರು ಸಾಮಾಜಿಕ ಅಂತರ ಪಾಲಿಸಬೇಕೆಂದು ಜನರಿಗೆ ಕಿವಿಮಾತು ಹೇಳಿದ್ದರು.

    ವಿವೇಕ್ ಅವರು ತಮಿಳಿನ ಬಹುಬೇಡಿಕೆಯ ಹಾಸ್ಯ ನಟರಾಗಿದ್ದು, ಈಗಾಗಲೇ 220 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ವಿವೇಕ್ ಸಿನಿಮಾರಂಗಕ್ಕೆ ನೀಡಿದ ಕೊಡುಗೆಗಾಗಿ ಭಾರತ ಸರ್ಕಾರ 2009 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.