Tag: Tamil Nadu Government

  • ತಮಿಳುನಾಡಿನಲ್ಲಿ ಹಿಂದಿ ಹೋರ್ಡಿಂಗ್ಸ್‌, ಸಿನಿಮಾ, ಹಾಡುಗಳ ನಿಷೇಧ?

    ತಮಿಳುನಾಡಿನಲ್ಲಿ ಹಿಂದಿ ಹೋರ್ಡಿಂಗ್ಸ್‌, ಸಿನಿಮಾ, ಹಾಡುಗಳ ನಿಷೇಧ?

    – ಹೊಸ ಕಾಯ್ದೆ ತರಲು ತಮಿಳುನಾಡು ಸರ್ಕಾರ ಪ್ಲ್ಯಾನ್‌; ಹಿಂದಿ ಹೇರಿಕೆ ವಿರುದ್ಧ ಮಹತ್ವದ ಹೆಜ್ಜೆ

    ಚೆನ್ನೈ: ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ನಿರಂತರವಾಗಿ ವಿರೋಧಿಸುತ್ತಿರುವ ಎಂ.ಕೆ ಸ್ಟಾಲಿನ್‌ (MK Stalin) ನೇತೃತ್ವದ ತಮಿಳುನಾಡು ಸರ್ಕಾರ ಈಗ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ಸಂಪೂರ್ಣವಾಗಿ ತಡೆಯುವ ಸಲುವಾಗಿ ವಿಧಾನಸಭೆಯಲ್ಲಿಂದು ಹೊಸ ಮಸೂದೆ (Bill) ಮಂಡನೆಗೆ ತಯಾರಿ ನಡೆಸಿದೆ.

    ಹೌದು. ತಮಿಳುನಾಡಿನಾದ್ಯಂತ ಹಿಂದಿ ಹೋರ್ಡಿಂಗ್ಸ್‌ (Hindi hoardings), ಬೋರ್ಡ್‌ಗಳು (ಬ್ಯಾನರ್‌ ಮಾದರಿಯವು), ಚಲನಚಿತ್ರಗಳು ಮತ್ತು ಹಾಡುಗಳನ್ನ ನಿಷೇಧಿಸುವ ಹೊಸ ಮಸೂದೆ ಮಂಡನೆಗೆ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದೆ. ಮಂಗಳವಾರ ರಾತ್ರಿ ಕೂಡ ಮಸೂದೆ ಕುರಿತು ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಲಾಗಿದೆ. ಈ ವೇಳೆ ಅಧಿಕಾರಿಗಳು ಈ ಕ್ರಮವು ಸಂವಿಧಾನಕ್ಕೆ ಅನುಗುಣವಾಗಿದೆ ಎಂದು ಹೇಳಿರುವುದಾಗಿ ಎಂದು ವರದಿಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಬಜೆಟ್ ಪ್ರತಿಯಲ್ಲಿ ರೂಪಾಯಿ ಚಿಹ್ನೆ ‘₹’ ಕೈಬಿಟ್ಟ ತಮಿಳುನಾಡು

    ಮಸೂದೆಯ ಕುರಿತು ಡಿಎಂಕೆ ಹಿರಿಯ ನಾಯಕ ಟಿಕೆಎಸ್ ಇಳಂಗೋವನ್ (TKS Elangovan) ಪ್ರತಿಕ್ರಿಯಿಸಿದ್ದು, ನಾವು ಸಂವಿಧಾನಕ್ಕೆ ವಿರುದ್ಧವಾಗಿ ಏನನ್ನೂ ಮಾಡುದಿಲ್ಲ. ಸಂವಿಧಾನದ ಆಶಯವನ್ನು ಪಾಲಿಸುತ್ತೇವೆ, ಆದ್ರೆ ಹಿಂದಿ ಹೇರಿಕೆಯನ್ನು ವಿರೋಧಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ – ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್

    ಆದಾಗ್ಯೂ ಬಿಜೆಪಿ (BJP) ತಮಿಳುನಾಡು ಸರ್ಕಾರದ ಈ ನಿರ್ಧಾರವನ್ನ ತೀವ್ರವಾಗಿ ವಿರೋಧಿಸಿದೆ. ಬಿಜೆಪಿಯ ವಿನೋಜ್ ಸೆಲ್ವಂ ಪ್ರತಿಕ್ರಿತಿಸಿ, ಇದು ಮೂರ್ಖತನ ಮತ್ತು ಅಸಂಬದ್ಧ ನಿರ್ಧಾರ. ಭಾಷೆಯನ್ನ ರಾಜಕೀಯ ಸಾಧನವಾಗಿ ಬಳಸಬಾರದು ಎಂದು ಕಿಡಿ ಕಾರಿದರು.

    ಈ ವರ್ಷದ ಮಾರ್ಚ್‌ನಲ್ಲೂ ಕೂಡ ಎಂ.ಕೆ ಸ್ಟಾಲಿನ್‌ ನೇತೃತ್ವದ ಸರ್ಕಾರ 2025-26ರ ರಾಜ್ಯ ಬಜೆಟ್‌‌ನಲ್ಲಿ ರೂಪಾಯಿಯ ಅಧಿಕೃತ ಚಿಹ್ನೆ ‘₹’ ಕೈ ಬಿಟ್ಟು ಬದಲಿಗೆ ‘ರುಬಾಯಿ’ (ತಮಿಳಿನಲ್ಲಿ ರೂಪಾಯಿ) ಯಿಂದ ‘ರು’ ಅನ್ನು ಆಯ್ಕೆ ಮಾಡಿಕೊಂಡಿತ್ತು. ಇದನ್ನೂ ಓದಿ: 

  • 2ನೇ ಏರ್‌ಪೋರ್ಟ್‌ ನಿರ್ಮಾಣಕ್ಕೆ ತಮಿಳುನಾಡು ಸರ್ಕಾರಕ್ಕೆ ಗ್ರೀನ್‌ ಸಿಗ್ನಲ್‌ – ಹೊಸೂರು ಬಳಿ 2 ಸ್ಥಳ ಫೈನಲ್‌

    2ನೇ ಏರ್‌ಪೋರ್ಟ್‌ ನಿರ್ಮಾಣಕ್ಕೆ ತಮಿಳುನಾಡು ಸರ್ಕಾರಕ್ಕೆ ಗ್ರೀನ್‌ ಸಿಗ್ನಲ್‌ – ಹೊಸೂರು ಬಳಿ 2 ಸ್ಥಳ ಫೈನಲ್‌

    ನವದೆಹಲಿ: ಸಿಲಿಕಾನ್‌ ಸಿಟಿಯಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಸ್ಥಳ ಆಯ್ಕೆ ಮಾಡಿ ಮೊನ್ನೆಯಷ್ಟೇ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಈ ನಡುವೆ ತಮಿಳುನಾಡು ಸರ್ಕಾರವು (Tamil Nadu Government) ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು 2 ಸ್ಥಳ ಸೂಕ್ತ ಅಂತ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಗ್ರೀನ್ ಸಿಗ್ನಲ್ ಪಡೆದುಕೊಂಡು ಬಂದಿದೆ.

    ಕರ್ನಾಟಕ ಸರ್ಕಾರವು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ (Bengalur Airport) ದಟ್ಟಣೆ ತಗ್ಗಿಸಲು 2ನೇ ವಿಮಾನ ನಿಲ್ದಾಣವನ್ನು ಸ್ಥಾಪಿಸಲು ನಿರ್ಧಾರ ಕೈಗೊಂಡಿತ್ತು. ಇತ್ತ ತಮಿಳುನಾಡು ಸರ್ಕಾರ ಕೂಡ ಹೊಸೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಮುಂದಾಗಿತ್ತು. ಸದ್ಯ ಕರ್ನಾಟಕ ಸರ್ಕಾರವು ಸ್ಥಳ ಹುಡುಕಾಟ ನಡೆಸಿ 2-3 ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರದ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಅಷ್ಟರೊಳಗೆ ತಮಿಳುನಾಡು ಸರ್ಕಾರವು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಹೊಸೂರು ಬಳಿಯ 2 ಸ್ಥಳ ಸೂಕ್ತ ಎಂಬ ವರದಿಯನ್ನು ಪಡೆದುಕೊಂಡಿದೆ. ಇದನ್ನೂ ಓದಿ: ರಾಜ್ಯದಲ್ಲಿರೋದು ಸಿದ್ದರಾಮಯ್ಯನ ಸರ್ಕಾರ… ನಿಮ್ಮಪ್ಪನ ಸರ್ಕಾರ ಅಲ್ಲ – ಬಿಜೆಪಿ ಕಾರ್ಯಕರ್ತರ ವಿರುದ್ಧ ರೊಚ್ಚಿಗೆದ್ದ ಪ್ರದೀಪ್‌ ಈಶ್ವರ್‌

    ಆಯ್ಕೆಯಾದ ಸ್ಥಳಗಳಾವುವು?
    ಒಂದು ತನೇಜಾ ಏರೋಸ್ಪೇಸ್ ಮತ್ತು ಏವಿಯೇಷನ್ ಲಿಮಿಟೆಡ್ (TAAL) ವಿಮಾನ ನಿಲ್ದಾಣದಿಂದ ಸುಮಾರು 1.5 ಕಿ.ಮೀ ದೂರದಲ್ಲಿದೆ. ಮತ್ತೊಂದು ಉಲಗಂ ಬಳಿ (ಹೊಸೂರಿನ ಪೂರ್ವ ಮತ್ತು ಶೂಲಗಿರಿಯ ಉತ್ತರ) ಹೊಸೂರಿನಿಂದ ಸುಮಾರು 15.5 ಕಿ.ಮೀ ದೂರದಲ್ಲಿದೆ. ಎಲೆಕ್ಟ್ರಾನಿಕ್‌ ಸಿಟಿ ಹಾಗೂ ಸರ್ಜಾಪುರ ಎರಡಕ್ಕೂ ಉಲಗಂ ಸಮೀಪದಲ್ಲಿಯೇ ಇದೆ. ಎರಡರಲ್ಲಿ ಒಂದು ಸ್ಥಳವನ್ನು ಆಯ್ಕೆ ಮಾಡಿಕೊಳ್ಳುವಂತೆ ತಮಿಳುನಾಡಿಗೆ ಕೇಂದ್ರ ತಿಳಿಸಿದೆ. ಇದನ್ನೂ ಓದಿ: ಗ್ಯಾರಂಟಿಗಳಿಗೆ SCSP – TSP ಹಣ ಬಳಕೆ – ದಲಿತರ ಎಷ್ಟು ಕೋಟಿ ಹಣ ಬಳಕೆ? ಇಲ್ಲಿದೆ ಲೆಕ್ಕ..

    ಅಕ್ಟೋಬರ್‌ನಲ್ಲೇ ಅರ್ಜಿ ಸಲ್ಲಿಸಿದ್ದ ತಮಿಳುನಾಡು
    ತಮಿಳುನಾಡು ಸರ್ಕಾರವು 2024ರ ಅಕ್ಟೋಬರ್‌ನಲ್ಲಿ ಅಧ್ಯಯನಕ್ಕಾಗಿ ಐದು ಸ್ಥಳಗಳನ್ನು ಆಯ್ಕೆ ಮಾಡಿತ್ತು. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಕುರಿತು ಸಾಧ್ಯಾಸಾಧ್ಯತಾ ವರದಿಯನ್ನು ತಮಿಳುನಾಡು ಸರ್ಕಾರಕ್ಕೆ ನೀಡಿದೆ. ಎರಡು ಸ್ಥಳಗಳನ್ನು ಪರಿಶೀಲಿಸಿದ ನಂತರ ಈ ವರದಿಯನ್ನು ಸಿದ್ಧಪಡಿಸಿದೆ. ಈ ವರದಿಯ ಪ್ರಕಾರ, ಎರಡೂ ಸ್ಥಳಗಳು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸೂಕ್ತವಾಗಿವೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಯುಪಿಯ ಪುರುಷನಿಗೆ ಪಾಕ್ ಏಜೆಂಟ್ ನೇಹಾ ಆಮಿಷ – ರಕ್ಷಣಾ ಇಲಾಖೆಯ ಮಾಹಿತಿ ಸೋರಿಕೆ ಮಾಡ್ತಿದ್ದವನ ಬಂಧನ 

  • ವಜ್ರ ಖಚಿತ ಡಾಬು, ಬಂಗಾರದ ಕಿರೀಟ – ಚಿತ್ರಗಳಲ್ಲಿ ಜಯಲಲಿತಾ ಆಸ್ತಿ, ಇಲ್ಲಿದೆ ನೋಡಿ…

    ವಜ್ರ ಖಚಿತ ಡಾಬು, ಬಂಗಾರದ ಕಿರೀಟ – ಚಿತ್ರಗಳಲ್ಲಿ ಜಯಲಲಿತಾ ಆಸ್ತಿ, ಇಲ್ಲಿದೆ ನೋಡಿ…

    – 1,526 ಎಕರೆ ಜಾಗದ ಆಸ್ತಿ ಪತ್ರ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ

    ಬೆಂಗಳೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ (Jayalalithaa) ಅವರ ಚಿನ್ನದ ಡಾಬು, ಬಂಗಾರದ ಕಿರೀಟ, ಖಡ್ಗ ಸೇರಿದಂತೆ ಆಸ್ತಿ ಪತ್ರಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಸಿಸಿಎಚ್ ಕೋರ್ಟ್ (CCH Court) ಹಾಲ್-34ರಲ್ಲಿ ನಡೆಯಿತು.

    ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಲವು ವಸ್ತುಗಳನ್ನು ವಿಶೇಷ ನ್ಯಾಯಾಲಯವು ವಶಪಡಿಸಿಕೊಂಡಿತ್ತು. ವಶಪಡಿಸಿಕೊಂಡ ವಸ್ತುಗಳು, ಬಟ್ಟೆಗಳು ಹಾಗೂ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ನೀಡುವಂತೆ ಕೋರ್ಟ್ ಆದೇಶ ಹೊರಡಿಸಿತ್ತು. ಅದರಂತೆ ಜಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿ ಪತ್ರಗಳು, 11,344 ರೇಷ್ಮೆ ಸೀರೆಗಳು, 7,040 ಗ್ರಾಂ (7.04 ಕೆಜಿ) ತೂಕದ 468 ಬಗೆಯ ಚಿನ್ನಾಭರಣ, ವಜ್ರಖಚಿತ ಆಭರಣಗಳು ಹಾಗೂ 750 ಜೊತೆ ಚಪ್ಪಲಿಗಳು, ವಾಚ್‌ಗಳು ಸೇರಿದಂತೆ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ (Tamil Nadu Government) ಹಸ್ತಾಂತರಿಸುವ ಪ್ರಕ್ರಿಯೆ ನಡೆಯಿತು.

    ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಸ್‌ಪಿಪಿ ಕಿರಣ್ ಜವಳಿ, ತಮಿಳುನಾಡು ಸರ್ಕಾರಕ್ಕೆ ಚಿನ್ನಾಭರಣ ಮರಳಿ ಕೊಡಲು ಆದೇಶ ಆಗಿದೆ. ತಮಿಳುನಾಡು ವಿಜಿಲೆನ್ಸ್ ಅಧಿಕಾರಿಗಳು ಬಂದಿದ್ದರು. ಅವರ ಸಮಕ್ಷಮದಲ್ಲಿ ಎಲ್ಲ ಆಸ್ತಿಗಳನ್ನ ಪರಿಶೀಲನೆ ಮಾಡಲಾಗಿದೆ. ಒಟ್ಟು 27 ಕೆಜೆಯಷ್ಟು ವಸ್ತುಗಳನ್ನ ಹಸ್ತಾಂತರಿಸಲಾಗಿದೆ. ಸೀಜ್ ಮಾಡಿದ್ದ ಬಸ್‌ ಹಾಗೂ 1,526 ಎಕರೆ ಜಾಗ ಕೂಡ ತಮಿಳುನಾಡು ಸರ್ಕಾರಕ್ಕೆ ಕೊಡಲಾಗಿದೆ. ತಂಜಾವೂರು ಸೇರಿದಂತೆ ಬೇರೆ ಬೇರೆ ಕಡೆ ಇದೇ ಜಮೀನು ಇದ್ದು, ಒಟ್ಟು 1,606 ಐಟಮ್‌ಗಳನ್ನು ಕೊಡಲಾಗಿದೆ. ಸೊಂಟದ ಡಾಬು, ಒಂದು ಕೆಜಿಯ ಚಿನ್ನದ ಕಿರೀಟ, ಖಡ್ಗ, ಗೋಲ್ಡ್ ವಾಚ್, ಪೆನ್‌ಗಳಿದ್ದು ಇವುಗಳನ್ನ ಉಡುಗೊರೆಯಾಗಿ ನೀಡಿರಬಹುದು ಎನ್ನಲಾಗಿದೆ. ಸೀರೆಗಳನ್ನ ಈಗಾಗಲೇ ಹಸ್ತಾಂತರಿಸಲಾಗಿದೆ ಎಂದು ಸಹ ಅವರು ತಿಳಿಸಿದ್ದಾರೆ.

    ಅಲ್ಲದೇ ಕರ್ನಾಟಕ ಸರ್ಕಾರಕ್ಕೆ ಒಟ್ಟು 16 ಕೋಟಿ ರೂ. ನೀಡಲು ಕೋರ್ಟ್‌ ಆದೇಶ ಮಾಡಿದೆ. ಎಐಡಿಎಂಕೆ ಮಾಜಿ ನಾಯಕಿ ಶಶಿಕಲಾ 20 ಕೋಟಿ ಹಣ ಕಟ್ಟಿದ್ದ ಕಾರಣ ಅವರಿಂದ 8 ಕೋಟಿ ಸೇರಿ ಒಟ್ಟು 13 ಕೋಟಿ ರೂ.ಗಳನ್ನ ಕರ್ನಾಟಕ ಸರ್ಕಾರಕ್ಕೆ ಕೊಡಲು ಕೋರ್ಟ್‌ ಹೇಳಿದೆ.

    ಶುಕ್ರವಾರ ವಕೀಲರು ಹಾಗೂ ತಮಿಳುನಾಡಿನ ಕೆಲ ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಪ್ರತಿಯೊಂದು ಮಾಹಿತಿಯನ್ನು ನೀಡಿ ಚಿನ್ನದ ಒಡವೆಗಳನ್ನು ತೂಕ ಹಾಕಿ ಬಿಗಿ ಭದ್ರತೆಯಲ್ಲಿ ಕೊಂಡೊಯ್ಯಲಾಯ್ತು. 7,040 ಗ್ರಾಂ ತೂಕದ 468 ಬಗೆಯ ಚಿನ್ನ, ವಜ್ರಾಭರಣಗಳು, 700 ಕೆ.ಜಿ ತೂಕದ ಬೆಳ್ಳಿ ಆಭರಣಗಳು, 11,344 ರೇಷ್ಮೆ ಸೀರೆಗಳು, 740 ದುಬಾರಿ ಚಪ್ಪಲಿಗಳು, 250 ಶಾಲು, 12 ರೆಫ್ರಿಜರೇಟರ್, 10 ಟಿವಿ ಸೆಟ್, 8 ವಿಸಿಆರ್, 1 ವಿಡಿಯೋ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೆಕಾರ್ಡರ್ ಹಾಗೂ 1,040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್‌ಗಳು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲಾಯಿತು.

  • ಜಯಲಲಿತಾರ 11,344 ರೇಷ್ಮೆ ಸೀರೆ, 750 ಜೋಡಿ ಚಪ್ಪಲಿ, ಆಸ್ತಿ ಪತ್ರ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ

    ಜಯಲಲಿತಾರ 11,344 ರೇಷ್ಮೆ ಸೀರೆ, 750 ಜೋಡಿ ಚಪ್ಪಲಿ, ಆಸ್ತಿ ಪತ್ರ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ

    ಚೆನ್ನೈ: ತಮಿಳುನಾಡಿನ (TamilNadu) ಮಾಜಿ ಸಿಎಂ ದಿ. ಜಯಲಲಿತಾ ಅವರ 11,344 ರೇಷ್ಮೆ ಸೀರೆ, 750 ಜೋಡಿ ಚಪ್ಪಲಿ ಸೇರಿದಂತೆ ಆಸ್ತಿ ಪತ್ರ ಹಸ್ತಾಂತರ ಪ್ರಕ್ರಿಯೆ ಸಿಸಿಎಚ್ ಕೋರ್ಟ್ ಹಾಲ್ (CCH Court) 34ರಲ್ಲಿ ನಡೆಯಿತು.

    ಸಾಂದರ್ಭಿಕ ಚಿತ್ರ

    ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಲವು ವಸ್ತುಗಳನ್ನು ವಿಶೇಷ ನ್ಯಾಯಾಲಯವು ವಶಪಡಿಸಿಕೊಂಡಿತ್ತು. ವಶಪಡಿಸಿಕೊಂಡ ವಸ್ತುಗಳನ್ನು ಹಾಗೂ ಬಟ್ಟೆಗಳನ್ನು ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ನೀಡುವಂತೆ ಕೋರ್ಟ್ ಆದೇಶ ಹೊರಡಿಸಿತ್ತು. ಅದರಂತೆ ಜಯಲಲಿತಾ (Jayalalithaa) ಅವರಿಗೆ ಸಂಬಂಧಿಸಿದ ಆಸ್ತಿ ಪತ್ರಗಳು, 11,344 ರೇಷ್ಮೆ ಸೀರೆಗಳು, 7,040 ಗ್ರಾಂ (7.04 ಕೆಜಿ) ತೂಕದ 468 ಬಗೆಯ ಚಿನ್ನಾಭರಣ, ವಜ್ರಖಚಿತ ಆಭರಣಗಳು ಹಾಗೂ 750 ಜೊತೆ ಚಪ್ಪಲಿಗಳು, ವಾಚ್‌ಗಳು ಸೇರಿದಂತೆ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ನಡೀತು. ಇದನ್ನೂ ಓದಿ: ಜಿಯೋ ಹಾಟ್‌ಸ್ಟಾರ್‌ ವಿಲೀನ | ಇನ್ಮುಂದೆ ಐಪಿಎಲ್‌ ಉಚಿತ ವೀಕ್ಷಣೆ ಇಲ್ಲ- ಎರಡನ್ನೂ ಸಬ್‌ಸ್ಕ್ರೈಬ್‌ ಮಾಡಿದವರ ಕಥೆ ಏನು?

    silk saree

    ಸಂಬಂಧಿಕರು ಎಂದು ಹೇಳಿಕೊಂಡು ದೀಪ ಹಾಗೂ ದೀಪಕ್ ಇಬ್ಬರು ಜಯಲಲಿತಾ ಒಡವೆಯನ್ನ ನಮಗೆ ಕೊಡಿ ಎಂದು ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿಯನ್ನ ಸಲ್ಲಿಸಿದ್ದರು. ಆದ್ರೆ, ಹೈಕೋರ್ಟ್ ಅವರ ಅರ್ಜಿಯನ್ನು ವಜಾ ಮಾಡಿತ್ತು. ಇಂದು ನ್ಯಾಯಾಧೀಶರ ಸಮ್ಮುಖದಲ್ಲಿ ತಮಿಳುನಾಡು ಸರ್ಕಾರಕ್ಕೆ ಎಲ್ಲಾ ವಸ್ತುಗಳನ್ನು ವರ್ಗಾವಣೆ ಮಾಡಲಾಯ್ತು. ಇದನ್ನೂ ಓದಿ: ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕದ ಸಾಮರ್ಥ್ಯಕ್ಕೆ ಸಾಕ್ಷಿ: ಡಿಕೆಶಿ

    ವಕೀಲರು ಹಾಗೂ ತಮಿಳುನಾಡಿನ ಕೆಲ ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಪ್ರತಿಯೊಂದು ಮಾಹಿತಿಯನ್ನು ನೀಡಿ ಚಿನ್ನದ ಒಡವೆಗಳನ್ನು ತೂಕ ಹಾಕಿ ಬಿಗಿ ಭದ್ರತೆಯಲ್ಲಿ ಕೊಂಡೊಯ್ಯಲಾಯ್ತು. 7,040 ಗ್ರಾಂ ತೂಕದ 468 ಬಗೆಯ ಚಿನ್ನ, ವಜ್ರಾಭರಣಗಳು, 700 ಕೆ.ಜಿ ತೂಕದ ಬೆಳ್ಳಿ ಆಭರಣಗಳು, 11,344 ರೇಷ್ಮೆ ಸೀರೆಗಳು, 740 ದುಬಾರಿ ಚಪ್ಪಲಿಗಳು, 250 ಶಾಲು, 12 ರೆಫ್ರಿಜರೇಟರ್, 10 ಟಿವಿ ಸೆಟ್, 8 ವಿಸಿಆರ್, 1 ವಿಡಿಯೋ ಕ್ಯಾಮರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೆಕಾರ್ಡರ್ ಹಾಗೂ 1,040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್‌ಗಳು ತಮಿಳುನಾಡು ಸರ್ಕಾರಕ್ಕೆ ಸೇರಲಿವೆ. ಇದನ್ನೂ ಓದಿ: ಬೆಂಗಳೂರು | 5 ಕೋಟಿ ವೆಚ್ಚದಲ್ಲಿ ಬೀದಿನಾಯಿಗಳಿಗೆ ವ್ಯಾಕ್ಸಿನ್‌ಗೆ ಬಿಬಿಎಂಪಿ ಪ್ಲ್ಯಾನ್‌!

  • ಕಾವೇರಿ ನೀರು ಬಿಡುಗಡೆ ವಿಚಾರ; ರಾಜ್ಯ ಸರ್ಕಾರ ನಿರ್ಧಾರದ ಬೆನ್ನಲ್ಲೇ ಸರ್ವಪಕ್ಷಗಳ ಸಭೆ ಕರೆದ ತ.ನಾಡು ಸರ್ಕಾರ

    ಕಾವೇರಿ ನೀರು ಬಿಡುಗಡೆ ವಿಚಾರ; ರಾಜ್ಯ ಸರ್ಕಾರ ನಿರ್ಧಾರದ ಬೆನ್ನಲ್ಲೇ ಸರ್ವಪಕ್ಷಗಳ ಸಭೆ ಕರೆದ ತ.ನಾಡು ಸರ್ಕಾರ

    ನವದೆಹಲಿ/ಚೆನ್ನೈ: ಕಾವೇರಿ ನದಿಯಿಂದ (Cauvery River) ತಮಿಳುನಾಡಿಗೆ ನಿತ್ಯ ಒಂದು ಟಿಎಂಸಿ ನೀರು ಬಿಡುಗಡೆ ಮಾಡಲು ಕರ್ನಾಟಕ ರಾಜ್ಯ ಸರ್ಕಾರ ನಿರಾಕರಿಸಿದ್ದು, ಪ್ರತಿನಿತ್ಯ 8 ಕ್ಯುಸೆಕ್‌ ನೀರು ಹರಿಸಲು ತೀರ್ಮಾನ ಕೈಗೊಂಡ ಮರುದಿನವೇ ತಮಿಳುನಾಡು ಸರ್ಕಾರ (Tamil Nadu Government) ಸರ್ವಪಕ್ಷಗಳ ಸಭೆ ಕರೆದಿದೆ. ನಾಳೆ (ಮಂಗಳವಾರ) ಚೆನ್ನೈನಲ್ಲಿ ಜಲಸಂಪನ್ಮೂಲ ಸಚಿವ ದೊರೈಮುರುಗನ್ (Durai Murugan) ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

    ಭಾನುವಾರ ಸರ್ವಪಕ್ಷಗಳ ಸಭೆ ಕರೆದಿದ್ದ ಕರ್ನಾಟಕ ಸರ್ಕಾರ ಕಾವೇರಿ ನೀರು  ನಿಯಂತ್ರಣಾ ಸಮಿತಿ (CWRC) ಶಿಫಾರಸ್ಸು ಅನ್ವಯ ನಿತ್ಯ ಒಂದು ಟಿಎಂಸಿ ನೀರು ಬಿಡುಗಡೆ ಮಾಡದಿರಲು ತಿರ್ಮಾನಿಸಿತ್ತು. ಜುಲೈ 31ರ ವರೆಗೆ ನಿತ್ಯ 8 ಕ್ಯುಸೆಕ್‌ ನೀರು ಹರಿಸಲು, ಮಳೆ ಕಡಿಮೆಯಾದ್ರೆ, ಅದಕ್ಕಿಂತಲೂ ಕಡಿಮೆ ನೀರು ಹರಿಸಲು ತೀರ್ಮಾನಿಸಿತ್ತು. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ – ನಿತ್ಯ 8 ಸಾವಿರ ಕ್ಯುಸೆಕ್‌ ನೀರು ಹರಿಸಲು ಸರ್ಕಾರ ನಿರ್ಧಾರ: ಸಿಎಂ

    ಅಲ್ಲದೇ ಮಳೆಯ ಪ್ರಮಾಣ ನಿರೀಕ್ಷೆಗಿಂತ ಸರಿ ಸುಮಾರು 28% ಕೊರತೆ ಇದ್ದು ಈವರೆಗಿನ ಮಳೆಗೆ ಜಲಾಶಯಗಳು ಕೂಡಾ ಭರ್ತಿಯಾಗಿಲ್ಲ. ಹವಮಾನ ಇಲಾಖೆ ಮಳೆಯ ಭರವಸೆ ನೀಡಿದ್ದರೂ ಗ್ಯಾರಂಟಿ ಇಲ್ಲ ಹೀಗಾಗೀ ಜುಲೈ ಅಂತ್ಯದವರೆಗೂ 1 ಟಿಎಂಸಿ ನೀರು ಸಾಧ್ಯವಿಲ್ಲ ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವರಿಕೆ ಮಾಡಲು ನಿರ್ಧರಿಸಿದೆ. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ವರೆಗೂ ಹೋಗೋಣ – ರಾಜ್ಯ ಸರ್ಕಾರಕ್ಕೆ ಆರ್‌. ಅಶೋಕ್‌ ಬೆಂಬಲ!

    ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸ್ಸಿನ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಮೇಲ್ಮನವಿ ಸಲ್ಲಿಸಿ ರಾಜ್ಯದ ಪರಿಸ್ಥಿತಿಯನ್ನು ಮನವರಿಕೆ ಮಾಡಲು ನಿರ್ಧರಿಸಿದ್ದು ಅಲ್ಲಿಯವರೆಗೂ ನೀರು ಬಿಡುಗಡೆ ಮಾಡದಿರಲು ಸರ್ವ ಪಕ್ಷಯಲ್ಲಿ ತಿರ್ಮಾನಿಸಿತ್ತು. ರಾಜ್ಯ ಸರ್ಕಾರದ ಈ ತಿರ್ಮಾನದ ಬೆನ್ನಲ್ಲೇ ಈಗ ತಮಿಳುನಾಡಿನ ಪಕ್ಷಗಳ ಸಭೆಯನ್ನು ಸಚಿವ ದೊರೈಮುರುಗನ್ ಕರೆದಿದ್ದು, ಒತ್ತಡ ಹೆಚ್ಚಿಸುವ ಪ್ರಯತ್ನ ಆರಂಭಿಸಿದೆ. ಇದನ್ನೂ ಓದಿ: Karnataka Assembly Session| ಟಾರ್ಗೆಟ್‌ ಸಿದ್ದರಾಮಯ್ಯ – ಪ್ರತಿಪಕ್ಷಗಳಿಗೆ ಸಿಕ್ಕಿವೆ 3 ಬ್ರಹ್ಮಾಸ್ತ್ರಗಳು 

  • ಜಯಲಲಿತಾ ನಿವಾಸ ಸ್ವಾಧೀನ- ತಮಿಳುನಾಡು ಸರ್ಕಾರದ ನಿಲುವಿಗೆ ಹೈಕೋರ್ಟ್ ತಡೆ

    ಜಯಲಲಿತಾ ನಿವಾಸ ಸ್ವಾಧೀನ- ತಮಿಳುನಾಡು ಸರ್ಕಾರದ ನಿಲುವಿಗೆ ಹೈಕೋರ್ಟ್ ತಡೆ

    ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ “ಪೋಯಸ್ ಗಾರ್ಡನ್” ನಿವಾಸವನ್ನು ತಮಿಳುನಾಡು ಸರ್ಕಾರ ಸ್ವಾಧೀನಪಡಿಸಿಕೊಳ್ಳುವುದನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿದೆ.

    ಜಯಲಲಿತಾ ಅವರ ನಿವಾಸವನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ಸೊಸೆ ದೀಪಾ ಮತ್ತು ಸೋದರಳಿಯ ಜೆ.ದೀಪಕ್ ಅವರು ಪ್ರಶ್ನಿಸಿದ್ದರು. ಇದನ್ನೂ ಓದಿ: ಸಿಂಹಕ್ಕೆ ಆಹಾರವಾಗುತ್ತಿದ್ದ ಯುವಕ: ತಪ್ಪಿತು ಭಾರೀ ದುರಂತ

    ಜಯಲಲಿತಾ ಅವರ ವೇದ ನಿಲಯಂ ಅನ್ನು ಸ್ಮಾರಕವಾಗಿ ರೂಪಿಸುವ ಪ್ರಸ್ತಾವನೆಯನ್ನು ಎಐಎಡಿಎಂಕೆ ಸರ್ಕಾರವು ಈ ಹಿಂದೆ ಮಂಡಿಸಿತ್ತು. ಇದು ತಮಿಳುನಾಡಿನ ಜನತೆ ಹಾಗೂ ಎಐಎಡಿಎಂ ಪಕ್ಷದ ಕಾರ್ಯಕರ್ತರೂ ಇದಕ್ಕೆ ಸಮ್ಮತಿ ಸೂಚಿಸಿದ್ದಾರೆ ಎಂದು ಬಿಂಬಿಸಲಾಗಿದೆ. ಇದನ್ನೂ ಓದಿ: ಮುರುಡೇಶ್ವರಕ್ಕೆ ಐಸಿಸ್ ಕಣ್ಣು- ದೇವಾಲಯಕ್ಕೆ ವಿಶೇಷ ಪೊಲೀಸ್ ಭದ್ರತೆ ವ್ಯವಸ್ಥೆ

    ಕಳೆದ ವರ್ಷ ತಮಿಳುನಾಡು ಸರ್ಕಾರವು 0.55 ವಿಸ್ತಾರದ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು 67.09 ಕೋಟಿ ರೂ. ಅನ್ನು ಠೇವಣಿ ಇಟ್ಟಿತ್ತು. ಇದರ ವಿರುದ್ಧ ಜಯಲಲಿತಾ ಕುಟುಂಬಸ್ಥರು ಕಾನೂನು ಹೋರಾಟ ಆರಂಭಿಸಿದ್ದರು.

  • ಮತ್ತೆ ಕೊರೊನಾ ಏರಿಕೆ – ತಮಿಳುನಾಡಿನಲ್ಲಿ ಲಾಕ್‍ಡೌನ್ ಮುಂದುವರಿಕೆ

    ಮತ್ತೆ ಕೊರೊನಾ ಏರಿಕೆ – ತಮಿಳುನಾಡಿನಲ್ಲಿ ಲಾಕ್‍ಡೌನ್ ಮುಂದುವರಿಕೆ

    ಚೆನ್ನೈ: ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿದ್ದು, ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ತಮಿಳುನಾಡು ಸರ್ಕಾರ ಆಗಸ್ಟ್ 9ರವರೆಗೆ ಲಾಕ್‍ಡೌನ್ ಮುಂದುವರಿಸಿದೆ.

    ಹಿಂದಿನ ಆದೇಶಕ್ಕೆ ಅನುಗುಣವಾಗಿ ಲಾಕ್‍ಡೌನ್ ಜಾರಿಯಲ್ಲಿರಲಿದೆ. ನಿಯಮಗಳಲ್ಲಿ ಯಾವುದೇ ಸಡಿಲಿಕೆ ಇಲ್ಲ ಎಂದು ತನ್ನ ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ:ಕೊರೊನಾ ಹೆಚ್ಚಾಗಲು ಜವಾಬ್ದಾರಿ ಸ್ಥಾನದಲ್ಲಿರುವವರೇ ಕಾರಣ: ಉಡುಪಿ ಡಿಸಿ

    ಈಜುಕೊಳ, ಬಾರ್, ರೆಸ್ಟೋರೆಂಟ್, ಶಿಕ್ಷಣ ಸಂಸ್ಥೆ, ಮೃಗಾಲಯ, ಚಿತ್ರಮಂದಿರಗಳನ್ನು ತೆರೆಯಲು ನಿರಾಕರಿಸಲಾಗಿದ್ದು, ಪುದುಚೇರಿ ಹೊರತುಪಡಿಸಿ ಅಂತರರಾಜ್ಯ ಪ್ರಯಾಣವನ್ನು ಕೂಡ ನಿರ್ಬಂಧಿಸಲಾಗಿದೆ. ಸಾಮಾಜಿಕ, ರಾಜಕೀಯ, ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದ್ದು, ವಿವಾಹ ಮತ್ತಿತರ ಕಾರ್ಯಕ್ರಮಗಳಿಗೆ 50 ಜನರಿಗೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ. ಅಂತ್ಯಕ್ರಿಯೆ ವೇಳೆ 20ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದು ಸೂಚಿಸಿದೆ.

    ಕಳೆದ ಎರಡು ತಿಂಗಳಿನಿಂದ ತಮಿಳುನಾಡಿನ 31 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿಗೆ ಇಳಿದಿದೆ. ಆದರೆ ಎರಡು-ಮೂರು ದಿನಗಳಿಂದ ಈ ಸಂಖ್ಯೆ ಏಕಾಏಕಿ ಏರಿಕೆಯಾಗುತ್ತಿದೆ. ಕಳೆದ ಬುಧವಾರ 1,756, ಗುರುವಾರ 1859, ಶುಕ್ರವಾರ 1,947 ಪ್ರಕರಣಗಳು ಪತ್ತೆಯಾಗಿದೆ. ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಕ್ರಮವನ್ನು ತಮಿಳುನಾಡು ಸರ್ಕಾರ ಮುಂದುವರಿಸಿದೆ. ಇದನ್ನೂ ಓದಿ:ನಗರದಲ್ಲಿ ಕೋವಿಡ್ ಮೂರನೇ ಅಲೆ ಆರಂಭದ ಆತಂಕ- ಸೋಂಕಿತರ ಸಂಪರ್ಕಿತರಲ್ಲೂ ಹೆಚ್ಚಿದ ಪಾಸಿಟಿವ್ ಪ್ರಕರಣ

  • ಮೇಕೆದಾಟು ಯೋಜನೆಗೆ ಅಡ್ಡಿಪಡಿಸಲು ತಮಿಳುನಾಡು ಸರ್ಕಾರದಿಂದ ಹೊಸ ತಂತ್ರ

    ಮೇಕೆದಾಟು ಯೋಜನೆಗೆ ಅಡ್ಡಿಪಡಿಸಲು ತಮಿಳುನಾಡು ಸರ್ಕಾರದಿಂದ ಹೊಸ ತಂತ್ರ

    ಚೆನೈ: ಮೇಕೆದಾಟು ಆಣೆಕಟ್ಟು ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡು ಸರ್ಕಾರ, ಯೋಜನೆಗೆ ಅಡ್ಡಿವುಂಟು ಮಾಡಲು ಹೊಸ ಪ್ರಯತ್ನವೊಂದನ್ನು ಆರಂಭಿಸಿದೆ. ಆಣೆಕಟ್ಟು ನಿರ್ಮಾಣ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ ಬೆನ್ನಲ್ಲೇ ಸರ್ವ ಪಕ್ಷಗಳ ಸಭೆ ಕರೆಯಲು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ನಿರ್ಧರಿಸಿದ್ದಾರೆ.

    ಜುಲೈ 12ರಂದು ಎಂ.ಕೆ.ಸ್ಟಾಲಿನ್ ಸರ್ವಪಕ್ಷ ಸಭೆ ಕರೆದಿದ್ದು, ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುವುದು ಸಭೆಯ ಉದ್ದೇಶ ಎಂದು ಹೇಳಾಗಿದೆ. ತಮಿಳುನಾಡಿನ ಎಲ್ಲ ರಾಜಕೀಯ ಪಕ್ಷಗಳು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಚಿಂತಿಸಿವೆ.

    ಕಳೆದ ಎರಡು ದಿನಗಳ ಹಿಂದೆ ತಮಿಳುನಾಡು ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್ ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿದರು. ಅಲ್ಲದೆ ಮೇಕೆದಾಟು ಯೋಜನೆಗೆ ತಡೆವೊಡ್ಡಂತೆ ಸಿಎಂ ಬಿಎಸ್‍ವೈ ಬರೆದಿದ್ದ ಪತ್ರಕ್ಕೂ ಸಿಎಂ ಎಂ.ಕೆ.ಸ್ಟಾಲಿನ್ ಖಾರವಾಗಿ ಪ್ರತಿಕ್ರಿಯಿಸಿದ್ದರು.

    ತಮಿಳುನಾಡಿನ ಸರ್ಕಾರದ ವಿರೋಧದ ನಡುವೆಯೇ ರಾಜ್ಯ ಸರ್ಕಾರ ಮೇಕೆದಾಟು ಆಣೆಕಟ್ಟು ನಿರ್ಮಾಣ ಮಾಡಲು ತೀರ್ಮಾನಿಸಿದೆ. ಈ ಹಿನ್ನಲೆ ಸರ್ವ ಪಕ್ಷ ಸಭೆ ನಡೆಸುವ ಮೂಲಕ ಒಮ್ಮತದ ನಿರ್ಧಾರ ಕೈಗೊಂಡು, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ತಮಿಳುನಾಡು ಸರ್ಕಾರ ಪ್ಲ್ಯಾನ್ ಮಾಡಿದೆ.