Tag: Tamil Nadu Stampede

  • ʼ9 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ.. ಪೋಷಕರಿಗೆ ಹುಡುಕಿಕೊಡಿ ಪ್ಲೀಸ್‌ʼ: ರ‍್ಯಾಲಿ ವೇಳೆ ಮೈಕ್‌ನಲ್ಲಿ ಹೇಳಿದ್ದ ವಿಜಯ್‌

    ʼ9 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ.. ಪೋಷಕರಿಗೆ ಹುಡುಕಿಕೊಡಿ ಪ್ಲೀಸ್‌ʼ: ರ‍್ಯಾಲಿ ವೇಳೆ ಮೈಕ್‌ನಲ್ಲಿ ಹೇಳಿದ್ದ ವಿಜಯ್‌

    ಚೆನ್ನೈ: ತಮಿಳು ನಟ, ರಾಜಕಾರಣಿ ವಿಜಯ್‌ (Vijay) ರ‍್ಯಾಲಿ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 34 ಮಂದಿ ಸಾವನ್ನಪ್ಪಿದ್ದಾರೆ. 50 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ವಿಜಯ್‌ ರ‍್ಯಾಲಿ ಸಂದರ್ಭದಲ್ಲಿ ಮತ್ತೊಂದು ಮನಕಲಕುವ ಘಟನೆ ನಡೆದಿದೆ. ಅಪಾರ ಜನಸಂದಣಿಯಲ್ಲಿ 9 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ.

    ಲಕ್ಷಾಂತರ ಸಂಖ್ಯೆಯಲ್ಲಿ ನೆರೆದಿದ್ದ ಬೆಂಬಲಿಗರನ್ನು ಉದ್ದೇಶಿಸಿ ವಿಜಯ್‌ ಮಾತನಾಡುವ ವೇಳೆ, ವ್ಯಕ್ತಿಯೊಬ್ಬ ಬಸ್ ಮೇಲೆ ಬಂದು ಬಾಲಕಿ ಕಾಣೆಯಾಗಿರುವ ಬಗ್ಗೆ ವಿಜಯ್‌ಗೆ ತಿಳಿಸುತ್ತಾನೆ. ಆಗ ನಟ ತಕ್ಷಣ ಮೈಕ್‌ನಲ್ಲಿ ಅನೌನ್ಸ್‌ ಮಾಡುತ್ತಾರೆ. ‘9 ವರ್ಷದ ಅಶ್ಮಿಕಾ ಹೆಸರಿನ ಬಾಲಕಿ ಕಾಣೆಯಾಗಿದ್ದಾಳೆ. ದಯವಿಟ್ಟು ಯಾರಿಗಾದರು ಕಂಡರೆ ಗಮನಕ್ಕೆ ತನ್ನಿ. ಪೊಲೀಸರೇ ಸಹಕರಿಸಿ’ ಎಂದು ವಿಜಯ್‌ ಮನವಿ ಮಾಡಿದ್ದರು. ಇದನ್ನೂ ಓದಿ: ವಿಜಯ್‌ಗಾಗಿ ಸತತ 7 ಗಂಟೆ ಕಾದಿದ್ದ ಜನ; ಬರೋಬ್ಬರಿ 1 ಲಕ್ಷ ಮಂದಿ ಜಮಾವಣೆ – ಭೀಕರ ಕಾಲ್ತುಳಿತ ಹೇಗಾಯ್ತು?

    ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್‌ ಕರೂರಿನಲ್ಲಿ ಬೃಹತ್‌ ರ‍್ಯಾಲಿ ನಡೆಸಿದ್ದರು. ವಿಜಯ್‌ ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.

    ಮಕ್ಕಳು, ಮಹಿಳೆಯರೆನ್ನದೇ 1 ಲಕ್ಷಕ್ಕೂ ಹೆಚ್ಚು ಮಂದಿ ರ‍್ಯಾಲಿಯಲ್ಲಿ ಜಮಾಯಿಸಿದ್ದರು. ಈ ವೇಳೆ ತಳ್ಳಾಟ-ನೂಕಾಟವಾಗಿ ಕಾಲ್ತುಳಿತ ಸಂಭವಿಸಿದೆ. 30ಕ್ಕೂ ಹೆಚ್ಚು ಮಂದಿ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ. ಹಲವರು ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

  • ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ಇಂದು ನಡೆದ ನಟ-ರಾಜಕಾರಣಿ ವಿಜಯ್ ದಳಪತಿ ರ‍್ಯಾಲಿಯಲ್ಲಿ ಉಂಟಾದ ಕಾಲ್ತುಳಿತಕ್ಕೆ 33 ಮಂದಿ ಬಲಿಯಾಗಿದ್ದಾರೆ.

    ಮೂವರು ಮಕ್ಕಳು ಮತ್ತು ವಯಸ್ಕರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

    ಮೃತ ವಯಸ್ಕರು, ವಿಜಯ್ ಅವರ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಬೆಂಬಲಿಗರಾಗಿದ್ದರು. ರ‍್ಯಾಲಿಗಾಗಿ ಕನಿಷ್ಠ ಆರು ಗಂಟೆಗಳ ಕಾಲ ಕಾದಿದ್ದರು. ಸ್ಥಳಕ್ಕೆ ರ‍್ಯಾಲಿ ತಡವಾಗಿ ಬಂದಿತು. ಹೀಗಾಗಿ, ಹೆಚ್ಚಿನ ಜನಸಂದಣಿಯಾಗಿ ಕಾಲ್ತುಳಿತ ಸಂಭವಿಸಿದೆ.

    ರಾಜ್ಯ ಆರೋಗ್ಯ ಸಚಿವ ಎಂ. ಸುಬ್ರಮಣಿಯನ್ ಕರೂರಿಗೆ ಧಾವಿಸಿದ್ದಾರೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೂರ್ ಜಿಲ್ಲಾ ಕಾರ್ಯದರ್ಶಿ ವಿ. ಸೆಂಥಿಲ್‌ಬಾಲಾಜಿ ಅವರಿಗೆ ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.