Tag: Tamilisai Soundararajan

  • ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್‌ ರಾಜೀನಾಮೆ – ಬಿಜೆಪಿಯಿಂದ ಕಣಕ್ಕೆ?

    ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್‌ ರಾಜೀನಾಮೆ – ಬಿಜೆಪಿಯಿಂದ ಕಣಕ್ಕೆ?

    ನವದೆಹಲಿ: ತೆಲಂಗಾಣ ಮತ್ತು ಪುದುಚೇರಿ (Telangana Puducherry) ರಾಜ್ಯಪಾಲರಾಗಿದ್ದ (Governor) ತಮಿಳಿಸೈ ಸೌಂದರರಾಜನ್ (Dr. Tamilisai Soundararajan) ಅವರು ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

    ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ರಾಜೀನಾಮೆ ಸಲ್ಲಿಸಿದ ಅವರು ಈ ಬಾರಿಯ ಲೋಕಸಭಾ ಚುನಾವಣೆಯ (Lok Sabha Election) ಸಮಯದಲ್ಲಿ ತಮಿಳುನಾಡಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಸಾಧ್ಯತೆಯಿದೆ.   ಇದನ್ನೂ ಓದಿ: ಖ್ಯಾತ ಗಾಯಕಿ ಮಂಗ್ಲಿ ಕಾರಿಗೆ ಗುದ್ದಿದ ಟ್ರಕ್: ತಪ್ಪಿದ ಭಾರೀ ಅನಾಹುತ

     

    ತಮಿಳಿಸೈ ಸೌಂದರರಾಜನ್ ಚೆನ್ನೈ ದಕ್ಷಿಣ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದ್ದು ಬಿಜೆಪಿಯ (BJP) ಮೂರನೇ ಪಟ್ಟಿಯಲ್ಲಿ ಅವರ ಹೆಸರು ಪ್ರಕಟವಾಗುವ ಸಾಧ್ಯತೆಯಿದೆ. ಇವರು 2019 ರವರೆಗೆ ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದರು.

    2019 ರಲ್ಲಿ ಕೇರಳದಿಂದ ಸ್ಪರ್ಧಿಸಲು ಮಿಜೋರಾಂ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ರಾಜೀನಾಮೆ ನೀಡಿ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಇದನ್ನೂ ಓದಿ: ಬೆಂಗಳೂರಿನಿಂದ ಮೈಸೂರಿಗೆ – ಕಾಂಗ್ರೆಸ್‌ನಿಂದ ಡಿವಿಎಸ್‌ ಸ್ಪರ್ಧೆ?

  • ತೆಲಂಗಾಣ ಹಂಗಾಮಿ ಸ್ಪೀಕರ್‌ ಆಗಿ AIMIM ಶಾಸಕ ಅಕ್ಬರುದ್ದೀನ್ ಓವೈಸಿ ಪ್ರಮಾಣ ವಚನ

    ತೆಲಂಗಾಣ ಹಂಗಾಮಿ ಸ್ಪೀಕರ್‌ ಆಗಿ AIMIM ಶಾಸಕ ಅಕ್ಬರುದ್ದೀನ್ ಓವೈಸಿ ಪ್ರಮಾಣ ವಚನ

    ಹೈದರಾಬಾದ್:‌ ತೆಲಂಗಾಣ ರಾಜ್ಯ ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ (Akbaruddin Owaisi) ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ ಶನಿವಾರ ಆರಂಭವಾಗಿರುವ ರಾಜ್ಯ ವಿಧಾನಸಭೆಯ (Telangana Legislative Assembly) ಮೊದಲ ಅಧಿವೇಶನಕ್ಕೆ ಹಂಗಾಮಿ ಸ್ಪೀಕರ್‌ ಆಗಿ ಅಕ್ಬರುದ್ದೀನ್ ಓವೈಸಿ ಅವರನ್ನು ನೇಮಕ ಮಾಡಲಾಗಿದ್ದು, ರಾಜ್ಯಪಾಲ ತಮಿಳಿಸೈ ಸೌಂದರರಾಜನ್ (Tamilisai Soundararajan) ಪ್ರಮಾಣ ವಚನ ಬೋಧಿಸಿದ್ದಾರೆ. ಇದನ್ನೂ ಓದಿ: ಶತ್ರು ಸೇನೆಗಳಿಂದ ರಕ್ಷಣೆಗೆ ಮಾಸ್ಟರ್‌ ಪ್ಲ್ಯಾನ್‌ – ಫೈಟರ್‌ ಜೆಟ್‌ಗಳಿಗೆ ಶೀಘ್ರವೇ ಬರಲಿದೆ ಡಿಜಿಟಲ್‌ ನಕ್ಷೆ

    ಭಾರತದ ಸಂವಿಧಾನದ 180ನೇ ವಿಧಿಯ ಷರತ್ತು (1) ರ ಮೂಲಕ ನೀಡಲಾದ ಅಧಿಕಾರಗಳನ್ನು ಚಲಾಯಿಸುವ ಮೂಲಕ, ತೆಲಂಗಾಣ ರಾಜ್ಯಪಾಲರು ಅಕ್ಬರುದ್ದೀನ್ ಓವೈಸಿ ಅವರನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ (Telangana Assembly Speaker), ಆಗಿ ನೇಮಿಸಿದ್ದಾರೆ. ಚುನಾಯಿತ ಸದಸ್ಯರಲ್ಲಿ ಒಬ್ಬರನ್ನು ಸ್ಪೀಕರ್‌ ಆಗಿ‌ ನೇಮಿಸುವವರೆಗೆ ಅಕ್ಬರುದ್ದೀನ್‌ ಸ್ಪೀಕರ್‌ ಆಗಿ ಅಧಿವೇಶನ ನಿರ್ವಹಿಸಲಿದ್ದಾರೆ. ಇದನ್ನೂ ಓದಿ: ಐಸಿಸ್‌ ಉಗ್ರರೊಂದಿಗೆ ನಂಟು; ಬೆಂಗಳೂರು ಸೇರಿ ದೇಶದ ಹಲವೆಡೆ NIA ದಾಳಿ

    ಇತ್ತೀಚೆಗಷ್ಟೇ ಮುಕ್ತಾಯಗೊಂಡ ತೆಲಂಗಾಣ ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ ಕಾಂಗ್ರೆಸ್‌ 64 ಸ್ಥಾನಗಳನ್ನು ಗಳಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆಡಳಿತಾರೂಢವಾಗಿದ್ದ ಭಾರತ್‌ ರಾಷ್ಟ್ರ ಸಮಿತಿ 39 ಹಾಗೂ ಬಿಜೆಪಿ 8 ಸ್ಥಾನಗಳನ್ನ ಪಡೆದುಕೊಂಡಿದೆ. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (TPCC) ಅಧ್ಯಕ್ಷರಾಗಿದ್ದ ರೇವಂತ್ ರೆಡ್ಡಿ ಅವರು ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ದೇಶದಲ್ಲಿ ಅತ್ಯಂತ ಕಿರಿಯ ವಯಸ್ಸಿಗೆ ಸಿಎಂ ಹುದ್ದೆ ಅಲಂಕರಿಸಿದ ಖ್ಯಾತಿ ಗಳಿಸಿದ್ದಾರೆ.

  • ವಿಮಾನದಲ್ಲಿದ್ದ ಪ್ರಯಾಣಿಕನ ಜೀವ ಉಳಿಸಿದ ತೆಲಂಗಾಣ ರಾಜ್ಯಪಾಲೆ

    ವಿಮಾನದಲ್ಲಿದ್ದ ಪ್ರಯಾಣಿಕನ ಜೀವ ಉಳಿಸಿದ ತೆಲಂಗಾಣ ರಾಜ್ಯಪಾಲೆ

    ಹೈದರಾಬಾದ್: ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರು ಶನಿವಾರ ಮುಂಜಾನೆ ದೆಹಲಿ-ಹೈದರಾಬಾದ್ ವಿಮಾನದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಯಾಣಿಕನಿಗೆ ಗೋಲ್ಡನ್ ಅವರ್ ಚಿಕಿತ್ಸೆ ನೀಡಿದರು.

    ರಾಜಕೀಯ ಪ್ರವೇಶಿಸುವ ಮೊದಲು ವೈದ್ಯರಾಗಿದ್ದ ಸೌಂದರರಾಜನ್, ಪ್ರಯಾಣಿಕನಿಗೆ ತಕ್ಷಣದ ವೈದ್ಯಕೀಯ ಚಿಕಿತ್ಸೆಯನ್ನು ಕೊಟ್ಟು ಸಹಾಯಕ ಔಷಧಿಗಳನ್ನು ನೀಡಿದರು. ಇದರಿಂದ ಸಹ-ಪ್ರಯಾಣಿಕರು ಸಂತೋಷ ವ್ಯಕ್ತಪಡಿಸಿದ್ದು, ಧನ್ಯವಾದವನ್ನು ಹೇಳಿದ್ದಾರೆ. ಈ ಕುರಿತು ರವಿ ಚಂದರ್ ನಾಯ್ಕ ಮುದವತ್ ಅವರು ಟ್ವೀಟ್ ಮಾಡಿದ್ದಾರೆ. ಈ ಪೋಸ್ಟ್ ನೋಡಿದ ನೆಟ್ಟಿಗರು ಸಂತೋಷ ವ್ಯಕ್ತಪಡಿಸಿದರು. ಇದನ್ನೂ ಓದಿ: ಒಳ್ಳೆಯದಾಗಬೇಕೆಂದ್ರೆ ಜನ 2023ರಲ್ಲಿ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಬಯಸುತ್ತಿದ್ದಾರೆ: ಜಮೀರ್ 

    https://twitter.com/iammrcn/status/1550614073124933633?ref_src=twsrc%5Etfw

    ನಡೆದಿದ್ದೇನು?
    ಸೌಂದರರಾಜನ್ ಅವರು ವಾರಣಾಸಿಯಿಂದ ನವದೆಹಲಿ ಮೂಲಕ ಹೈದರಾಬಾದ್‍ಗೆ ಹಿಂದಿರುಗುತ್ತಿದ್ದಾಗ ವಿಮಾನ ಸಿಬ್ಬಂದಿ ನೀಡಿದ ಪ್ರಕಟಣೆಗೆ ಪ್ರತಿಕ್ರಿಯಿಸಿದರು. ಸಹ-ಪ್ರಯಾಣಿಕನಿಗೆ ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಸೌಂದರರಾಜನ್ ಅವರು ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿದ್ದು, ವಿಮಾನ ನಿಲ್ದಾಣಕ್ಕೆ ಬಂದ ನಂತರ ಚಿಕಿತ್ಸೆ ಪಡೆದ ಪ್ರಯಾಣಿಕರನ್ನು ಗಾಲಿಕುರ್ಚಿಯಲ್ಲಿ ವಿಮಾನ ನಿಲ್ದಾಣದ ವೈದ್ಯಕೀಯ ಬೂತ್‍ಗೆ ಕರೆದೊಯ್ಯಲಾಯಿತು.

    ಸೌಂದರರಾಜನ್ ಅವರು ಇತ್ತೀಚೆಗೆ ಭದ್ರಾದ್ರಿ-ಕೊತಗುಡೆಂ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಎಡೆಬಿಡದ ಮಳೆ ಮತ್ತು ಕೆಸರಿನಲ್ಲಿಯೇ ನಡೆದು ಪ್ರದೇಶದ ಸುತ್ತಲೂ ನಡೆದರು. ನಂತರ ಅವರು ಅಶ್ವಪುರಂ ಮಂಡಲದ ಆಶ್ರಯ ಶಿಬಿರಗಳಿಗೆ ಭೇಟಿ ನೀಡಿದ್ದು, ಪ್ರವಾಹ ಪೀಡಿತ ಜನರೊಂದಿಗೆ ಸಂವಾದ ನಡೆಸಿದ್ದರು. ಇದನ್ನೂ ಓದಿ: ಯಡಿಯೂರಪ್ಪ ತ್ಯಾಗ ಮಾಡಿಲ್ಲ, ಅವರನ್ನ ಪಕ್ಷದಿಂದ ದಬ್ಬಿದ್ರು: ಸಿಎಂ ಇಬ್ರಾಹಿಂ

    ಮೊದಲು ಅಶ್ವಪುರಂ ಮಂಡಲದ ವೇಮುಲಪಲ್ಲಿ ಗ್ರಾಮಕ್ಕೆ ಭೇಟಿ ನೀಡಿದ ಅವರು ನಂತರ, ಪಾಮುಲಪಲ್ಲಿಯ ಎಸ್‍ಕೆಟಿ ಫಂಕ್ಷನ್ ಹಾಲ್ ಮತ್ತು ಚಿಂತಿರಿಯಾಲ ಕಾಲೋನಿಯ ತರಿಂಗಿಣಿ ಫಂಕ್ಷನ್ ಹಾಲ್‍ನಲ್ಲಿ ಸ್ಥಾಪಿಸಲಾದ ಆಶ್ರಯ ಶಿಬಿರಗಳಿಗೆ ಭೇಟಿ ನೀಡಿದರು. ಸೌಂದರರಾಜನ್ ಅವರು ಹಾನಿಗೊಳಗಾದ ಮನೆಗಳು ಮತ್ತು ಜಲಾವೃತಗೊಂಡ ಭತ್ತದ ಗದ್ದೆಗಳಿಗೆ ಭೇಟಿ ನೀಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಮೋದಿಯನ್ನು ಭೇಟಿಯಾದ ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್

    ಮೋದಿಯನ್ನು ಭೇಟಿಯಾದ ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್

    ನವದೆಹಲಿ: ತೆಲಂಗಾಣ ಮತ್ತು ಪುದುಚೇರಿ ರಾಜ್ಯಪಾಲೆಯಾದ ತಮಿಳಿಸೈ ಸೌಂದರರಾಜನ್ ಅವರು ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಜೊತೆಗೆ ಅಮಿತ್ ಶಾ ಅವರನ್ನು ಸಹ ಭೇಟಿಯಾಗಲಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಪ್ರಗತಿ ಭವನ ಮತ್ತು ರಾಜಭವನ ನಡುವಿನ ಅಂತರ ಹೆಚ್ಚುತ್ತಿರುವ ಮಧ್ಯೆ ರಾಜ್ಯಪಾಲರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ. ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಕೂಡ ದೆಹಲಿಯಲ್ಲಿರುವುದು ಎಲ್ಲರಲ್ಲಿಯೂ ಕುತೂಹಲ ಕೆರಳಿಸಿದೆ. ಇದನ್ನೂ ಓದಿ: ಡ್ರಾಮಾ ಕ್ವೀನ್ ಭಾರತಿ ಸಿಂಗ್ ಗಂಡನಿಗೆ 6 ಮಕ್ಕಳು ಬೇಕಂತೆ : ಹೆರಿಗೆ ನೋವಿನ ಕ್ಷಣಗಳನ್ನು ಹಂಚಿಕೊಂಡ ಹಾಸ್ಯ ಕಲಾವಿದೆ

    ಜೂನ್ 2021 ರಿಂದಲೂ ಕೆ. ಚಂದ್ರಶೇಖರ್ ರಾವ್ (ಕೆಸಿಆರ್) ಅವರು ರಾಜ್ಯಪಾಲರನ್ನು ಭೇಟಿ ಮಾಡಿಲ್ಲ ಮತ್ತು ರಾಜ್ಯಪಾಲರು ಭಾಗವಹಿಸಿದ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸಿಲ್ಲ ಎಂದು ಮೂಲಗಳ ಮೂಲಕ ತಿಳಿದುಬಂದಿದೆ. ಅಲ್ಲದೇ ರಾಜ್ಯಪಾಲರನ್ನು ಭೇಟಿಯಾಗಲು ಅಥವಾ ವಿವರಣೆ ನೀಡಲು ಸರ್ಕಾರದ ಉನ್ನತ ಅಧಿಕಾರಿಗಳಿಗೆ ಸಿಎಂ ಅವಕಾಶ ನೀಡುತ್ತಿಲ್ಲ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ವಿವಾದಿತ ಸಮಾಧಿಯನ್ನ ಶಾಂತಿಯುತವಾಗಿ ಸ್ಥಳಾಂತರಿಸಿದ ಕ್ರೈಸ್ತ ಸಮುದಾಯ

    ಇತ್ತೀಚೆಗಷ್ಟೇ ರಾಜಭವನದಲ್ಲಿ ಆಯೋಜಿಸಲಾಗಿದ್ದ ಯುಗಾದಿ ಪೂರ್ವ ಕಾರ್ಯಕ್ರಮದಿಂದ ಅರ್ಧದಲ್ಲಿಯೇ ಕೆಸಿಆರ್ ಕ್ಯಾಬಿನೆಟ್ ಮಂತ್ರಿಗಳು ಎದ್ದು ಹೋಗಿದ್ದರು. ಮುಳುಗು ಜಿಲ್ಲೆಯ ಸಮ್ಮಕ್ಕ ಸರಳಮ್ಮ ಜಾತ್ರೆಗೆ ರಾಜ್ಯಪಾಲರು ಭೇಟಿ ನೀಡಿದ ಸಂದರ್ಭದಲ್ಲಿ ಮತ್ತು ಇತ್ತೀಚೆಗಷ್ಟೇ ನೂತನವಾಗಿ ಉದ್ಘಾಟನೆಗೊಂಡ ಯದಾದ್ರಿ ದೇವಸ್ಥಾನಕ್ಕೆ ಭೇಟಿ ನೀಡಿದಗಲೂ ಜಿಲ್ಲಾಧಿಕಾರಿಗಳು ರಾಜ್ಯಪಾಲರನ್ನು ಬರಮಾಡಿಕೊಂಡಿರಲಿಲ್ಲ.