Tag: tamilnadu

  • ಮೊಂಥಾ ಚಂಡಮಾರುತ ಎಫೆಕ್ಟ್: ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿಜಿಲ್ಲೆಗಳಲ್ಲಿ ವರುರ್ಣಾಭಟ

    ಮೊಂಥಾ ಚಂಡಮಾರುತ ಎಫೆಕ್ಟ್: ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿಜಿಲ್ಲೆಗಳಲ್ಲಿ ವರುರ್ಣಾಭಟ

    – ದೇಶದ ವಿವಿಧೆಡೆ ಅ.28, 29ರಂದು ಭಾರೀ ಮಳೆ
    – ಆಂಧ್ರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಮೊಂಥಾ ಚಂಡಮಾರುತದ (Montha Cyclone) ಪರಿಣಾಮ ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

    ಆಂಧ್ರಪ್ರದೇಶ ಹಾಗೂ ಒಡಿಶಾದ ಕರಾವಳಿಯತ್ತ ಚಂಡಮಾರುತ ಮುನ್ನುಗ್ಗುತ್ತಿರುವ ಹಿನ್ನೆಲೆ ದೇಶದ ವಿವಿಧೆಡೆ ಅ.28 ಹಾಗೂ ಅ.29ರಂದು ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಇನ್ನೂ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಂಡಮಾರುತದಿಂದಾಗಿ ಈಗಾಗಲೇ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳವಾರ (ಅ.28) ಬೆಂಗಳೂರಿನಿಂದ ಹೊರಡಲಿರುವ ಕೆಲವು ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.ಇದನ್ನೂ ಓದಿ: ಆಂಧ್ರ, ಒಡಿಶಾಕ್ಕೆ ಅಪ್ಪಳಿಸಲಿದೆ `ಮೊಂಥಾ’ ಸೈಕ್ಲೋನ್ – ಕರ್ನಾಟಕ ಸೇರಿ ತಮಿಳುನಾಡಿಗೆ ಮಳೆಯಾರ್ಭಟ

    ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ (Bengaluru) ವಾತಾವರಣ ತಂಪಾಗಿದ್ದು, ಅಲ್ಲಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ನಗರದ SMVTಯಿಂದ ಹೊರಡುವ ಏಳು ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದ್ದು, ಹೊರಡುವ ಸಮಯಕ್ಕಿಂತ 12 ಗಂಟೆ ತಡವಾಗಿ ಹೊರಡಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

    ಆಂಧ್ರ ಕರಾವಳಿ ತೀರ ಪ್ರದೇಶಕ್ಕೆ ಉತ್ತರ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಾ ಇಂದು ಸಂಜೆ ಅಥವಾ ರಾತ್ರಿಯ ವೇಳೆಗೆ ಆಂಧ್ರಪ್ರದೇಶದ ಮಚಲಿಪಟ್ಟಣ ಮತ್ತು ಕಳಿಂಗಪಟ್ಟಣ ನಡುವೆ, ಕಾಕಿನಾಡದ ಸುತ್ತಮುತ್ತಲಿನ ಕರಾವಳಿಯನ್ನು ದಾಟಲಿದೆ. ಈ ಚಂಡಮಾರುತವು ಗಂಟೆಗೆ 90 ರಿಂದ 100 ಕಿ.ಮೀ ವೇಗದಲ್ಲಿ ಚಲಿಸುವ ಸಾಧ್ಯತೆಯಿದೆ. ಅಲ್ಲದೇ ಚಂಡಮಾರುತವು 2-4.6 ಮೀಟರ್ ಎತ್ತರದ ಅಲೆಗಳೊಂದಿಗೆ ಬಂದು ಅಪ್ಪಳಿಸಿದ್ದು, ಆಂಧ್ರದ 1,419 ಹಳ್ಳಿಗಳು ಮತ್ತು 44 ಪಟ್ಟಣಗಳ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ. ಜೊತೆಗೆ ಆಂಧ್ರಪ್ರದೇಶ, ಒಡಿಶಾ, ಪುದುಚೇರಿ, ತಮಿಳುನಾಡು ಮತ್ತು ಛತ್ತೀಸ್‌ಗಢಗಳಲ್ಲಿ ರಾಷ್ಟ್ರೀಯ ವಿಪತ್ತು ಪಡೆಯ 22 ತಂಡಗಳನ್ನು ಸರ್ಕಾರ ನಿಯೋಜಿಸಿದೆ.

    ಈಗಾಗಲೇ ಆಂಧ್ರದ ಹಲವು ನಗರಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪರಿಸ್ಥಿತಿ ಅಸ್ತವ್ಯಸ್ಥವಾಗಿದೆ. ಆಂಧ್ರಪ್ರದೇಶದ ಅನಕಾಪಲ್ಲಿ, ಕಾಕಿನಾಡ, ಕೋನಾಸೀಮಾ, ಶ್ರೀಕಾಕುಳಂ, ನೆಲ್ಲೂರು, ವಿಶಾಖಪಟ್ಟಣಂ, ತಿರುಪತಿ, ಪಶ್ಚಿಮ ಗೋದಾವರಿಯಲ್ಲಿ ಮುಂದಿನ 10 ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಆಂಧ್ರಪ್ರದೇಶದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿದ್ದು, ಜನರನ್ನು ನಿರಾಶ್ರಿತ ಕೇಂದ್ರಗಳಿಗೆ ಶಿಫ್ಟ್ ಮಾಡಲಾಗಿದೆ. ಇನ್ನೂ ಆಂಧ್ರಪ್ರದೇಶದ ಪೂರ್ವ ಕರಾವಳಿಯಲ್ಲಿ ಸಂಚರಿಸುವ 65 ರೈಲುಗಳ ಓಡಾಟ ಸ್ಥಗಿತಗೊಂಡಿದೆ.

    ಮೊಂಥಾ ಚಂಡಮಾರುತದ ಹಿನ್ನೆಲೆ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಅವರು ತಡರಾತ್ರಿ ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಲು ವೀಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲನಾ ಸಭೆ ನಡೆಸಿದ್ದು, ಯಾವುದೇ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜನರಿಗೆ ಸ್ಪಂದಿಸಲು ಜಿಲ್ಲೆಗೊಬ್ಬರು ಅಧಿಕಾರಿಯನ್ನು ನೇಮಕ ಮಾಡಿ ಎಂದು ಸೂಚನೆ ನೀಡಿದ್ದಾರೆ.ಇದನ್ನೂ ಓದಿ: Cyclone Montha| ಎರಡು ದಿನ ಬೆಂಗಳೂರು ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

     

  • ಆಂಧ್ರ, ಒಡಿಶಾಕ್ಕೆ ಅಪ್ಪಳಿಸಲಿದೆ `ಮೊಂಥಾ’ ಸೈಕ್ಲೋನ್ – ಕರ್ನಾಟಕ ಸೇರಿ ತಮಿಳುನಾಡಿಗೆ ಮಳೆಯಾರ್ಭಟ

    ಆಂಧ್ರ, ಒಡಿಶಾಕ್ಕೆ ಅಪ್ಪಳಿಸಲಿದೆ `ಮೊಂಥಾ’ ಸೈಕ್ಲೋನ್ – ಕರ್ನಾಟಕ ಸೇರಿ ತಮಿಳುನಾಡಿಗೆ ಮಳೆಯಾರ್ಭಟ

    ನವದೆಹಲಿ: ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಆಂಧ್ರಪ್ರದೇಶ ಹಾಗೂ ಒಡಿಶಾಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದೆ. ಪರಿಣಾಮ ಕರ್ನಾಟಕ, ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

    ಮಂಗಳವಾರ (ಅ.28) ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ತೀರ ಪ್ರದೇಶಕ್ಕೆ ಮೊಂಥಾ ಚಂಡಮಾರುತ 110 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದ್ದು, ಇಡೀ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ 26 ಜಿಲ್ಲೆಗಳ ಪೈಕಿ 23 ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ನೀಡಲಾಗಿದೆ. ಧಾರಾಕಾರ ಮಳೆ, ಅತೀ ವೇಗದ ಗಾಳಿ ಮತ್ತು ಸಂಭವನೀಯ ಪ್ರವಾಹದ ಸಾಧ್ಯತೆ ಇದೆ ಎಂದು ಹವಾಮಾವ ಇಲಾಖೆ ತಿಳಿಸಿದೆ. ಇದನ್ನೂ ಓದಿ: Cyclone Montha| ಎರಡು ದಿನ ಬೆಂಗಳೂರು ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

    ಕಾಕಿನಾಡ ಬಳಿಯ ಮಚಲಿಪಟ್ನಂ ಮತ್ತು ಕಳಿಂಗಪಟ್ನಂ ನಡುವೆ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾಕಿನಾಡ, ಕೋನ ಸೀಮಾ, ಎಲುರು, ಪಶ್ಚಿಮ ಗೋದಾವರಿ, ಕೃಷ್ಣ, ಗುಂಟೂರು, ಬಾಪಟ್ಲಾ, ಪ್ರಕಾಶಂ ಮತ್ತು ಎಸ್‌ಪಿಎಸ್‌ಆರ್ ನೆಲ್ಲೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಮಳೆ ಮುನ್ಸೂಚನೆ ಹಿನ್ನೆಲೆ ಆಂಧ್ರಪ್ರದೇಶದ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ನಿರ್ದೇಶಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಸಮುದ್ರ ತೀರ ಪ್ರದೇಶಗಳಲ್ಲಿನ ಜನರನ್ನು ಸ್ಥಳಾಂತರ ಮಾಡಿದ್ದು, ಆಶ್ರಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

    ಮುಂದಿನ ಮೂರ್ನಾಲ್ಕು ದಿನ ಕರ್ನಾಟಕದಲ್ಲೂ ಮಳೆಯಬ್ಬರ:
    ಮೊಂಥಾ ಚಂಡಮಾರುತದಿಂದ ಮುಂದಿನ ಮೂರ್ನಾಲ್ಕು ದಿನ ಕರ್ನಾಟಕದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿ ರಾಜ್ಯಾದ್ಯಂತ ಅಲ್ಲಲ್ಲಿ ನಿರಂತರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

    ಒಡಿಶಾ, ತಮಿಳುನಾಡಿನಲ್ಲೂ ಹೈ ಅಲರ್ಟ್:
    ಮೊಂಥಾ ಚಂಡಮಾರುತ ಹಿನ್ನೆಲೆ ಒಡಿಶಾ, ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಭೂಕುಸಿತ ಸಂಭವಿಸುವ ಸಾಧ್ಯತೆಯಿರುವ ಕಾರಣ ಒಡಿಶಾ ಸರ್ಕಾರವು ಎಲ್ಲಾ ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಕಾಲೇಜುಗಳಿಗೆ ಅ.30ರವರೆಗೆ ರಜೆ ನೀಡಲಾಗುವುದು ಎಂದು ತಿಳಿಸಿದೆ. ಇನ್ನೂ ಸೋಮವಾರ (ಅ.27) ಹಾಗೂ ಮಂಗಳವಾರ (ಅ.28) ತಮಿಳುನಾಡು, ಪುದುಚೇರಿಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.ಇದನ್ನೂ ಓದಿ: ಪುನಾರಚನೆಗೆ ಅವಕಾಶ ನೀಡಿದ್ರೆ ಸಿಎಂ ಸ್ಥಾನ ಅಬಾಧಿತ, ಇಲ್ಲದೇ ಇದ್ರೆ ರಾಜಕೀಯ ಚಟುವಟಿಕೆ: ರಾಜಣ್ಣ

  • ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಮೂಗುದಾರ

    ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಮೂಗುದಾರ

    – ಖಾಸಗಿ ಸಂಘ ಸಂಸ್ಥೆಗಳ ಚಟುವಟಿಕೆ ನಿಷೇಧ
    – ಚಟುವಟಿಕೆಗೆ ಪೂರ್ವಾನುಮತಿ ಕಡ್ಡಾಯ

    ಬೆಂಗಳೂರು: ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ (RSS) ಚಟುವಟಿಕೆಗಳಿಗೆ ಸಿದ್ದರಾಮಯ್ಯ (Siddaramaiah) ಸರ್ಕಾರ ಮೂಗುದಾರ ಹಾಕಿದೆ. ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಚಟುವಟಿಕೆ ನಿಷೇಧಿಸಲು ಕ್ಯಾಬಿನೆಟ್‌ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

    2013 ರ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದಿಟ್ಟು ಸರ್ಕಾರ ತಮಿಳುನಾಡು ಸರ್ಕಾರ (Government of Tamil Nadu) ಕೈಗೊಂಡಿರುವ ನಿರ್ಧಾರದಂತೆ ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಪೂರ್ವಾನುಮತಿ ಕಡ್ಡಾಯ ಮಾಡಿ ಹೊಸ ನಿಯಮ ತರಲು ಮುಂದಾಗಿದೆ.

    ತನ್ನ ತೀರ್ಮಾನದಲ್ಲಿ ಎಲ್ಲಿಯೂ ಆರ್‌ಎಸ್‌ಎಸ್‌ ಪದ ಬಳಕೆ ಮಾಡದ ಸರ್ಕಾರ ಖಾಸಗಿ ಸಂಸ್ಥೆಗಳು ಎಂದು ಉಲ್ಲೇಖಿಸಿ ಜಾಣ್ಮೆ ನಡೆ ಇರಿಸಿದೆ.

    ಈ ನಿಯಮ ಜಾರಿಯಾದರೆ ಆರ್‌ಎಸ್‌ಎಸ್‌ ಮಾತ್ರವಲ್ಲ ಖಾಸಗಿ ಸಂಘ ಸಂಸ್ಥೆಗಳು / ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸುವುದಕ್ಕೆ ಕಡಿವಾಣ ಬೀಳಲಿದೆ. ಯಾರೇ ಯಾವುದೇ ಕಾರ್ಯಕ್ರಮ ಮಾಡುವುದಾದರೂ ಅನುಮತಿ ಪಡೆಯಬೇಕಾಗುತ್ತದೆ.

    ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗೆ ನಿಯಂತ್ರಣ ಮಾಡುವಂತೆ ಐಟಿಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದರು.

    ಪ್ರಿಯಾಂಕ್‌ ಖರ್ಗೆ ಪತ್ರದಲ್ಲಿ ಏನಿತ್ತು?
    ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುದಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಸರಕಾರವನ್ನು ನೀಡುತ್ತದೆ.

    ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂಬ ಹೆಸರಿನ ಸಂಘಟನೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆ ನಡೆಸುತ್ತಾ, ಘೋಷಣೆಗಳನ್ನು ಕೂಗುತ್ತಾ ಮಕ್ಕಳು ಮತ್ತು ಯುವ ಸಮುದಾಯದ ಮನಸ್ಸಿನಲ್ಲಿ ಭಾರತದ ಏಕತೆಯ ವಿರುದ್ಧವಾಗಿ, ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬಲಾಗುತ್ತಿದೆ.

    ಪೊಲೀಸ್ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ನಡೆಸುವ ಮೂಲಕ ಮುಗ್ಗ ಮಕ್ಕಳು ಹಾಡಿ ಯುವಜನರ ಮನಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ. ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ.

  • ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ, ಬೆಂಬಲಿಗರಿಗೆ ಏನು ಮಾಡ್ಬೇಡಿ: ಸ್ಟಾಲಿನ್ ವಿರುದ್ಧ ವಿಜಯ್ ಕಿಡಿ

    ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ, ಬೆಂಬಲಿಗರಿಗೆ ಏನು ಮಾಡ್ಬೇಡಿ: ಸ್ಟಾಲಿನ್ ವಿರುದ್ಧ ವಿಜಯ್ ಕಿಡಿ

    – ಬೇರೆ ಎಲ್ಲೂ ನಡೆಯದ ದುರಂತ ಕರೂರಿನಲ್ಲಿ ಮಾತ್ರ ಯಾಕಾಯ್ತು?
    – ಕಾಲ್ತುಳಿತದ ಹಿಂದಿನ ಸತ್ಯ ಶೀಘ್ರ ಬಹಿರಂಗಗೊಳ್ಳುತ್ತೆ

    ಚೆನ್ನೈ: ಕರೂರು ಕಾಲ್ತುಳಿತ (Karur Stampede) ದುರಂತ ಸಂಭವಿಸಿದ ಮೂರು ದಿನಗಳ ಬಳಿಕ ನಟ, ಟಿವಿಕೆ ಮುಖ್ಯಸ್ಥ ವಿಜಯ್ (Actor Vijay) ವಿಡಿಯೋವೊಂದನ್ನು ಹಂಚಿಕೊಂಡಿದ್ದು, ದುರಂತದ ಹಿಂದಿನ ಸತ್ಯ ಶೀಘ್ರದಲ್ಲೇ ಬಹಿರಂಗಗೊಳ್ಳುತ್ತದೆ ಎಂದಿದ್ದಾರೆ.

    ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಮೂಲಕ ಸಂದೇಶವನ್ನು ಹಂಚಿಕೊಂಡಿರುವ ಅವರು, ನನ್ನ ಜೀವನದಲ್ಲೇ ಇಂತಹ ನೋವಿನ ದಿನಗಳನ್ನು ನಾನು ಅನುಭವಿಸಿಲ್ಲ. ನಿಜಕ್ಕೂ ಈ ಸಂಗತಿಯಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ, ಬರೀ ನೋವೇ ತುಂಬಿಕೊಂಡಂತಾಗಿದೆ. ಜನರು ನನ್ನ ಮೇಲಿನ ಪ್ರೀತಿಯಿಂದಾಗಿ ನನ್ನನ್ನು ನೋಡಲು ಬರುತ್ತಾರೆ. ಅವರ ಪ್ರೀತಿ, ವಿಶ್ವಾಸಕ್ಕೆ ನಾನು ಯಾವಾಗಲೂ ಚಿರಋಣಿ. ಆದರೆ ಆ ಎಲ್ಲದಕ್ಕೂ ಮಿಗಿಲಾಗಿ ಜನರ ರಕ್ಷಣೆಯೇ ನನ್ನ ಮೊದಲ ಆದ್ಯತೆ. ನಾನು ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ಕೊಡುತ್ತೇನೆ. ಶೀಘ್ರದಲ್ಲಿಯೇ ಈ ಘಟನೆ ಹಿಂದಿನ ಸತ್ಯ ಬಹಿರಂಗವಾಗುತ್ತದೆ ಎಂದು ಪ್ರತಿಜ್ಞೆ ಮಾಡಿದ್ದಾರೆ.ಇದನ್ನೂ ಓದಿ: ವಿಜಯ್‌ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 41 ಸಾವು ಕೇಸ್‌ – ಟಿವಿಕೆ ನಾಯಕ ಅರೆಸ್ಟ್‌

    ಈ ಘಟನೆಗೂ ಮುನ್ನ ನಾನು ರಾಜಕೀಯವನ್ನು ಬದಿಗಿಟ್ಟು ಜನರ ಸುರಕ್ಷತೆಗಾಗಿ ಸೂಕ್ತವಾದ ಸ್ಥಳವನ್ನು ಆರಿಸಿ, ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡಿದ್ದೆ. ಆದರೆ ಏನಾಗಬಾರದು ಎಂದುಕೊಂಡಿದ್ದೆ, ಅದೇ ನಡೆದು ಹೋಗಿದೆ. ನಾನು ಒಬ್ಬ ಮನುಷ್ಯ. ಘಟನೆಯಲ್ಲಿ ಇಷ್ಟೊಂದು ಜನರಿಗೆ ತೊಂದರೆಯಾದಾಗ ನಾನು ಅಲ್ಲಿಯೇ ಇರಬಹುದಿತ್ತು. ಆದರೆ ನಾನಿದ್ದರೆ ಸಮಸ್ಯೆ ಇನ್ನೂ ಹೆಚ್ಚಾಗಬಹುದು ಎಂದು ತಿಳಿದು ಅಲ್ಲಿಂದ ಹೊರಟು ಹೋದೆ ಎಂದಿದ್ದಾರೆ.

    ಇದಕ್ಕೂ ಮುನ್ನ ನಾವು ಐದು ಜಿಲ್ಲೆಗಳಲ್ಲಿ ಪ್ರಚಾರ ಮಾಡಿದ್ದೇವೆ, ಆದರೆ ಕರೂರಿನಲ್ಲಿ ಯಾಕೆ ಹೀಗಾಯ್ತು? ಹೇಗಾಯ್ತು? ಜನರಿಗೆ ಎಲ್ಲ ಗೊತ್ತಿದೆ. ಅವರೆಲ್ಲವನ್ನೂ ನೋಡುತ್ತಿದ್ದಾರೆ. ಶೀಘ್ರವೇ ಎಲ್ಲ ಸತ್ಯ ಬಹಿರಂಗಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

    ಇದೇ ವೇಳೆ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರಿಗೆ ಮನವಿ ಮಾಡಿಕೊಂಡಿದ್ದು, ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ. ಆದರೆ ನನ್ನ ಬೆಂಬಲಿಗರಿಗೆ ಏನು ಮಾಡಬೇಡಿ. ನಾನು ಮನೆಯಲ್ಲಿ ಅಥವಾ ಕಚೇರಿಯಲ್ಲಿ ಇರುತ್ತೇನೆ. ನೀವು ನನ್ನ ಮೇಲೆ ಯಾವ ರೀತಿ ಬೇಕಾದರೂ ಕ್ರಮ ಕೈಗೊಳ್ಳಬಹುದು ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

    ಏನಿದು ಘಟನೆ?
    ಸೆ.27ರಂದು ತಮಿಳುನಾಡಿನ ಕರೂರಿನಲ್ಲಿ ನಟ, ರಾಜಕಾರಣಿ ವಿಜಯ್ ರ‍್ಯಾಲಿ ಹಮ್ಮಿಕೊಂಡಿದ್ದರು. ಅಂದು ಕರೂರಿಗೆ ಮಧ್ಯಾಹ್ನ ತಲುಪಬೇಕಿದ್ದ ವಿಜಯ್ ಏಳು ಗಂಟೆ ತಡವಾಗಿ ಆಗಮಿಸಿದ್ದರು. ಹೀಗಾಗಿ ಜನಸಂದಣಿ ಹೆಚ್ಚಾಗಿ, ಕಾಲ್ತುಳಿತ ಸಂಭವಿಸಿತ್ತು. ಪರಿಣಾಮ 41 ಜನರು ಸಾವನ್ನಪ್ಪಿದ್ದರು.ಇದನ್ನೂ ಓದಿ: ಕಾಲ್ತುಳಿತಕ್ಕೆ ಪೊಲೀಸರು ಹೊಣೆ – ಪತ್ರ ಬರೆದು ವಿಜಯ್‌ ಅಭಿಮಾನಿ, ಟಿವಿಕೆ ಕಾರ್ಯಕರ್ತ ಆತ್ಮಹತ್ಯೆ

  • ಜನರನ್ನು ಸೇರಿಸಿ ರ‍್ಯಾಲಿ ಮಾಡುವ ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು – ಡಿಕೆಶಿ

    ಜನರನ್ನು ಸೇರಿಸಿ ರ‍್ಯಾಲಿ ಮಾಡುವ ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು – ಡಿಕೆಶಿ

    ಬೆಂಗಳೂರು: ಜನರನ್ನ ಸೇರಿಸಿ ರ‍್ಯಾಲಿ ಮಾಡುವ ವಿಚಾರದಲ್ಲಿ ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ತಮಿಳುನಾಡು ಕಾಲ್ತುಳಿತದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶನಿವಾರ (ಸೆ.27) ರಾತ್ರಿ ತಮಿಳುನಾಡಿನಲ್ಲಿ ನಡೆದ ದುರಂತ ನಮಗೆಲ್ಲ ದುಖಃ ತಂದಿದೆ. ಮಕ್ಕಳು, ತಾಯಂದಿರು ಸಾವನ್ನಪ್ಪಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳು ಎಚ್ಚರಿಕೆಯಿಂದಿರಬೇಕು. ಎಚ್ಚರಿಕೆ ಇಟ್ಟು ಕೆಲಸ ಮಾಡಬೇಕು. ದೇಶವೇ ದಿಗ್ಬ್ರಮೆಗೊಂಡಿದೆ. ಸಾವನ್ನಪ್ಪಿದವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದಿದ್ದಾರೆ.ಇದನ್ನೂ ಓದಿ: ಕಲ್ಯಾಣ ಕರ್ನಾಟಕದ ಮಳೆ ಅವಾಂತರ – ಪ್ರಕೃತಿಯ ನಿಯಮ ಎಂದ ಡಿಕೆಶಿ

    ನಾವು ಈಗಾಗಲೇ ಜನಸಂದಣಿ ಬಿಲ್ ತಂದಿದ್ದೇವೆ. ನಾನೇ ಇದನ್ನು ಮೊದಲಿಗೆ ಮೂವ್ ಮಾಡಿದ್ದೆ. ಹೆಚ್.ಕೆ ಪಾಟೀಲ್ ಅವರಿಗೆ ಸರ್ಕಾರ ಸೂಚನೆ ನೀಡಿತ್ತು. ಮುಂದೆ ಈ ರೀತಿಯ ತೊಂದರೆ ಆಗಬಾರದು ಅಂತ ಮಾಡಿದ್ದೇವೆ.ನಮ್ಮಲ್ಲಿ ಸ್ಟೇಡಿಯಂನಲ್ಲಿ ಘಟನೆ ಆಗಿತ್ತು. ಅದಾದ ಮೇಲೆ ನಾವು ಎಚ್ಚರಿಕೆ ವಹಿಸಿದ್ದೇವೆ ಎಂದು ತಿಳಿಸಿದ್ದಾರೆ.

     

  • ಕರೂರು ಕಾಲ್ತುಳಿತ – ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್‌

    ಕರೂರು ಕಾಲ್ತುಳಿತ – ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್‌

    -ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ
    -ಕಾಲ್ತುಳಿತ ತನಿಖೆಗೆ ಸರ್ಕಾರದಿಂದ ಆಯೋಗ ರಚನೆ

    ಚೆನ್ನೈ: ತಮಿಳುನಾಡಿನ (Tamilnadu) ಕರೂರಿನಲ್ಲಿ (Karur) ಸಂಭವಿಸಿದ ಕಾಲ್ತುಳಿತದಲ್ಲಿ (Stampede) ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಎಂಕೆ ಸ್ಟಾಲಿನ್‌  (MK Stalin) ಘೋಷಿಸಿದ್ದಾರೆ.

    ಈ ಕುರಿತು ಎಕ್ಸ್‌ (X) ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಕಾಲ್ತುಳಿತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಕ್ಕೂ 10 ಲಕ್ಷ ರೂ. ಪರಿಹಾರ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರತಿಯೊಬ್ಬರಿಗೂ 1 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಜೊತೆಗೆ ಕಾಲ್ತುಳಿತದ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶೆ ಅರುಣಾ ಜಗದೀಶನ್ ಅವರ ನೇತೃತ್ವದಲ್ಲಿ ಆಯೋಗ ರಚಿಸಲಾಗುವುದು ಎಂದಿದ್ದಾರೆ.ಇದನ್ನೂ ಓದಿ: ಕರೂರು ಕಾಲ್ತುಳಿತ ತೀವ್ರ ದು:ಖವನ್ನುಂಟು ಮಾಡಿದೆ – ಪ್ರಧಾನಿ ಮೋದಿ ಸಂತಾಪ

    ಶನಿವಾರ (ಸೆ.27) ರಾತ್ರಿ ಕರೂರಿಗೆ ಭೇಟಿ ನೀಡಿ, ಸಂತ್ರಸ್ತರ ಕುಟುಂಬಗಳನ್ನು ಹಾಗೂ ಗಾಯಾಳುಗಳನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸುತ್ತೇನೆ. ತಮಿಳಿಗ ವೆಟ್ರಿ ಕಳಗಂ ಪಕ್ಷದ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 8 ಮಕ್ಕಳು ಮತ್ತು 16 ಮಹಿಳೆಯರು ಸೇರಿದಂತೆ 36 ಜನರು ಸಾವನ್ನಪ್ಪಿದ್ದಾರೆ. ಸದ್ಯ ತಿರುಚಿ, ಸೇಲಂ ಮತ್ತು ದಿಂಡಿಗಲ್ ಜಿಲ್ಲಾಧಿಕಾರಿಗಳು ಕರೂರಿಗೆ ಹೋಗಿ ಪರಿಹಾರ ಕಾರ್ಯಗಳ ಬಗ್ಗೆ ಕ್ರಮವಹಿಸಿ ಎಂದು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

    ಕಾಲ್ತುಳಿತ ಸಂಭವಿಸಿದ್ದು ಹೇಗೆ?
    ನಟ ವಿಜಯ ಶನಿವಾರ (ಸೆ.27) ಮಧ್ಯಾಹ್ನದ ಹೊತ್ತಿಗೆ ಕರೂರಿಗೆ ತಲುಪಬೇಕಿತ್ತು. ಆದರೆ ಏಳು ಗಂಟೆಗಳ ಕಾಲ ತಡವಾಗಿ ಬಂದ ಕಾರಣ ಜನಸಂದಣಿ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿತು ಎನ್ನಲಾಗಿದೆ. ನಟ ಸ್ಥಳಕ್ಕೆ ಬರುತ್ತಿದ್ದಂತೆ ಜನರ ನೂಕಾಟ, ತಳ್ಳಾಟ ಹೆಚ್ಚಾಗಿ ಉಸಿರುಗಟ್ಟಲು ಶುರುವಾಗಿದ್ದು, ಇದರಿಂದ ಜನರು ಸ್ಥಳದಲ್ಲೇ ಮೂರ್ಛೆ ಹೋಗಲಾರಂಭಿಸಿದರು. ಇದನ್ನು ಗಮನಸಿದ ನಟ ಕೂಡಲೇ ತಮ್ಮ ಭಾಷಣ ನಿಲ್ಲಿಸಿ, ನೀರಿನ ಬಾಟಲಿಗಳನ್ನು ಎಸೆದಿದ್ದಾರೆ ಎಂದು ತಿಳಿದು ಬಂದಿದೆ.

    ಈ ವೇಳೆ ಬಾಟಲಿ ಎಸೆಯುತ್ತಿದ್ದ ನಟ ವಿಜಯ್ ಹತ್ತಿರಕ್ಕೆ ಜನರು ಹೋಗಲು ಪ್ರಾರಂಭಿಸಿದ್ದು, ಈ ವೇಳೆ ಒಂದು ಭಾಗದ ಜನರ ನಡುವೆ ಕಾಲ್ತುಳಿತ ಸಂಭವಿಸಿದೆ. ಪರಿಣಾಮ 40 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಮೂವರು ಮಕ್ಕಳು ಮತ್ತು ವಯಸ್ಕರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: ʼ9 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ.. ಪೋಷಕರಿಗೆ ಹುಡುಕಿಕೊಡಿ ಪ್ಲೀಸ್‌ʼ: ರ‍್ಯಾಲಿ ವೇಳೆ ಮೈಕ್‌ನಲ್ಲಿ ಹೇಳಿದ್ದ ವಿಜಯ್‌

  • ಕರೂರು ಕಾಲ್ತುಳಿತ ತೀವ್ರ ದು:ಖವನ್ನುಂಟು ಮಾಡಿದೆ – ಪ್ರಧಾನಿ ಮೋದಿ ಸಂತಾಪ

    ಕರೂರು ಕಾಲ್ತುಳಿತ ತೀವ್ರ ದು:ಖವನ್ನುಂಟು ಮಾಡಿದೆ – ಪ್ರಧಾನಿ ಮೋದಿ ಸಂತಾಪ

    ನವದೆಹಲಿ/ಚೆನ್ನೈ: ತಮಿಳುನಾಡಿನ (Tamilnadu) ಕರೂರಿನಲ್ಲಿ (Karur) ಸಂಭವಿಸಿದ ಭೀಕರ ಕಾಲ್ತುಳಿತ (Stampede) ದುರಂತದ ಬಗ್ಗೆ ಪ್ರಧಾನಿ ಮೋದಿ (PM Modi) ಸಂತಾಪ ಸೂಚಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ತಮಿಳುನಾಡಿನ ಕರೂರಿನಲ್ಲಿ ನಡೆದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ತೀವ್ರ ನೋವನ್ನುಂಟು ಮಾಡಿದೆ. ಈ ದುರಂತದಲ್ಲಿ ಹಲವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ದೇವರು ಅವರ ಕುಟುಂಬಸ್ಥರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪಾರ್ಥಿಸುತ್ತೇನೆ. ಇನ್ನೂ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ʼ9 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ.. ಪೋಷಕರಿಗೆ ಹುಡುಕಿಕೊಡಿ ಪ್ಲೀಸ್‌ʼ: ರ‍್ಯಾಲಿ ವೇಳೆ ಮೈಕ್‌ನಲ್ಲಿ ಹೇಳಿದ್ದ ವಿಜಯ್‌

    ಕಾಲ್ತುಳಿತ ಸಂಭವಿಸಿದ್ದು ಹೇಗೆ?
    ನಟ ವಿಜಯ ಶನಿವಾರ (ಸೆ.27) ಮಧ್ಯಾಹ್ನದ ಹೊತ್ತಿಗೆ ಕರೂರಿಗೆ ತಲುಪಬೇಕಿತ್ತು. ಆದರೆ ಏಳು ಗಂಟೆಗಳ ಕಾಲ ತಡವಾಗಿ ಬಂದ ಕಾರಣ ಜನಸಂದಣಿ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿತು ಎನ್ನಲಾಗಿದೆ. ನಟ ಸ್ಥಳಕ್ಕೆ ಬರುತ್ತಿದ್ದಂತೆ ಜನರ ನೂಕಾಟ, ತಳ್ಳಾಟ ಹೆಚ್ಚಾಗಿ ಉಸಿರುಗಟ್ಟಲು ಶುರುವಾಗಿದ್ದು, ಇದರಿಂದ ಜನರು ಸ್ಥಳದಲ್ಲೇ ಮೂರ್ಛೆ ಹೋಗಲಾರಂಭಿಸಿದರು. ಇದನ್ನು ಗಮನಸಿದ ನಟ ಕೂಡಲೇ ತಮ್ಮ ಭಾಷಣ ನಿಲ್ಲಿಸಿ, ನೀರಿನ ಬಾಟಲಿಗಳನ್ನು ಎಸೆದಿದ್ದಾರೆ ಎಂದು ತಿಳಿದು ಬಂದಿದೆ.

    ಈ ವೇಳೆ ಬಾಟಲಿ ಎಸೆಯುತ್ತಿದ್ದ ನಟ ವಿಜಯ್ ಹತ್ತಿರಕ್ಕೆ ಜನರು ಹೋಗಲು ಪ್ರಾರಂಭಿಸಿದ್ದು, ಈ ವೇಳೆ ಒಂದು ಭಾಗದ ಜನರ ನಡುವೆ ಕಾಲ್ತುಳಿತ ಸಂಭವಿಸಿದೆ. ಪರಿಣಾಮ 33 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಮೂವರು ಮಕ್ಕಳು ಮತ್ತು ವಯಸ್ಕರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ:

  • ವಿಜಯ್‌ಗಾಗಿ ಸತತ 7 ಗಂಟೆ ಕಾದಿದ್ದ ಜನ; ಬರೋಬ್ಬರಿ 1 ಲಕ್ಷ ಮಂದಿ ಜಮಾವಣೆ – ಭೀಕರ ಕಾಲ್ತುಳಿತ ಹೇಗಾಯ್ತು?

    ವಿಜಯ್‌ಗಾಗಿ ಸತತ 7 ಗಂಟೆ ಕಾದಿದ್ದ ಜನ; ಬರೋಬ್ಬರಿ 1 ಲಕ್ಷ ಮಂದಿ ಜಮಾವಣೆ – ಭೀಕರ ಕಾಲ್ತುಳಿತ ಹೇಗಾಯ್ತು?

    ಚೆನ್ನೈ: ತಮಿಳುನಾಡಿನ (Tamilnadu) ಕರೂರಿನಲ್ಲಿ (Karur) ಶನಿವಾರ (ಸೆ.27) ನಡೆದ ತಮಿಳು ನಟ-ರಾಜಕಾರಣಿ ವಿಜಯ್ ದಳಪತಿಯವರ ರ‍್ಯಾಲಿಗಾಗಿ ಬರೋಬ್ಬರಿ 1 ಲಕ್ಷ ಮಂದಿ ಸತತ 7 ಗಂಟೆ ಕಾದಿದ್ದರು ಎಂಬ ಮಾಹಿತಿ ತಿಳಿದುಬಂದಿದೆ.

    ನಟ ವಿಜಯ ಮಧ್ಯಾಹ್ನದ ಹೊತ್ತಿಗೆ ಕರೂರಿಗೆ ತಲುಪಬೇಕಿತ್ತು. ಆದರೆ ಏಳು ಗಂಟೆಗಳ ಕಾಲ ತಡವಾಗಿ ಬಂದ ಕಾರಣ ಜನಸಂದಣಿ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿತು ಎನ್ನಲಾಗಿದೆ. ನಟ ಸ್ಥಳಕ್ಕೆ ಬರುತ್ತಿದ್ದಂತೆ ಜನರ ನೂಕಾಟ, ತಳ್ಳಾಟ ಹೆಚ್ಚಾಗಿ ಉಸಿರುಗಟ್ಟಲು ಶುರುವಾಗಿದ್ದು, ಇದರಿಂದ ಜನರು ಸ್ಥಳದಲ್ಲೇ ಮೂರ್ಛೆ ಹೋಗಲಾರಂಭಿಸಿದರು. ಇದನ್ನು ಗಮನಸಿದ ನಟ ಕೂಡಲೇ ತಮ್ಮ ಭಾಷಣ ನಿಲ್ಲಿಸಿ, ನೀರಿನ ಬಾಟಲಿಗಳನ್ನು ಎಸೆದಿದ್ದಾರೆ ಎಂದು ತಿಳಿದು ಬಂದಿದೆ.ಇದನ್ನೂ ಓದಿ: ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಈ ವೇಳೆ ಬಾಟಲಿ ಎಸೆಯುತ್ತಿದ್ದ ನಟ ವಿಜಯ್ ಹತ್ತಿರಕ್ಕೆ ಜನರು ಹೋಗಲು ಪ್ರಾರಂಭಿಸಿದ್ದು, ಈ ವೇಳೆ ಒಂದು ಭಾಗದ ಜನರ ನಡುವೆ ಕಾಲ್ತುಳಿತ ಸಂಭವಿಸಿದೆ. ಪರಿಣಾಮ 33 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಮೂವರು ಮಕ್ಕಳು ಮತ್ತು ವಯಸ್ಕರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

    ರಾಜ್ಯ ಆರೋಗ್ಯ ಸಚಿವ ಎಂ. ಸುಬ್ರಮಣಿಯನ್ ಕರೂರಿಗೆ ಧಾವಿಸಿದ್ದಾರೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೂರ್ ಜಿಲ್ಲಾ ಕಾರ್ಯದರ್ಶಿ ವಿ. ಸೆಂಥಿಲ್‌ಬಾಲಾಜಿ ಅವರಿಗೆ ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಡಿಎಂಕೆಗೆ ಮತ ಹಾಕಿದರೆ ಬಿಜೆಪಿಗೇ ವೋಟ್‌ ಹಾಕಿದಂತೆ.. ನಾನು BJP ಜೊತೆ ಕೈಜೋಡಿಸಲ್ಲ: ನಟ ವಿಜಯ್‌

  • ತಮಿಳುನಾಡಲ್ಲಿ ವಿಜಯ್ ದಳಪತಿ ರಣಕಹಳೆ

    ತಮಿಳುನಾಡಲ್ಲಿ ವಿಜಯ್ ದಳಪತಿ ರಣಕಹಳೆ

    ಳಪತಿ ವಿಜಯ್ ತಮಿಳುನಾಡಿನಲ್ಲಿ (Tamil Nadu) ರಣಕಹಳೆ ಊದಿದ್ದಾರೆ. 2026ರ ಚುನಾವಣೆಗಾಗಿ (Election) ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದ್ದು, ಮಧುರೈನಲ್ಲಿ ಟಿವಿಕೆ ಪಕ್ಷದ ಸಮಾವೇಶಕ್ಕೆ ಹರಿದು ಬಂದ ಜನಸಾಗರ ನೋಡಿ ನಟ ವಿಜಯ್ (Vijay) ಭಾವುಕರಾಗಿದ್ದಾರೆ.

    ಜನ ನಾಯಗನ್ (Jana Nayagan) ಸಿನಿಮಾ ಮುಗಿಸಿ ರಾಜಕೀಯ ರಣರಂಗದಲ್ಲಿ ಸೆಣಸಾಡಲು ಪಣ ತೊಟ್ಟು ನಿಂತಿದ್ದಾರೆ. ವಿಜಯ್ ದಳಪತಿ ಸಿನಿಮಾರಂಗಕ್ಕೆ ಗುಡ್ ಬೈ ಹೇಳಿ ಪೂರ್ತಿಯಾಗಿ ರಾಜಕೀಯ ರಂಗದಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಈಗಾಗಲೇ ಘೋಷಿಸಿದ್ದಾರೆ. ವಿಜಯ್ ತಮ್ಮ ಕೊನೆಯ ಸಿನಿಮಾ ಜನ ನಾಯಗನ್ ಮುಗಿಸಿ ಕಂಪ್ಲೀಟ್ ಆಗಿ ರಾಜಕೀಯದಲ್ಲೇ ತೊಡಗಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: ಬಾಲಿವುಡ್‌ನಲ್ಲೂ ಜೂ.ಎನ್‌ಟಿಆರ್‌ಗೆ ಸೋಲು

    ಸದ್ಯ ತಮ್ಮ ಕೊನೆಯ ಸಿನಿಮಾ ಜನ ನಾಯಗನ್ ಚಿತ್ರದ ಶೂಟಿಂಗ್ ಕೆಲಸಗಳಲ್ಲಿ ಬ್ಯುಸಿಯಾಗಿರುವ ವಿಜಯ್ ದಳಪತಿ ಸದ್ಯದಲ್ಲಿಯೇ ಸಿನಿಮಾದ ಶೂಟಿಂಗ್ ಮುಗಿಸಿಕೊಡಲಿದ್ದಾರೆ. ಅಂದಹಾಗೆ ಜನ ನಾಯಗನ್ ಚಿತ್ರ 2026ರ ಸಂಕ್ರಾಂತಿಗೆ ಅಭಿಮಾನಿಗಳ ಮುಂದೆ ದರ್ಶನ ನೀಡಲಿದೆ. ಈ ನಿಟ್ಟಿನಲ್ಲಿ ಒಂದು ಕಡೆ ಸಿನಿಮಾ ತಂಡ ತಯಾರಿಯನ್ನ ಮಾಡಿಕೊಂಡಿದೆ. ಇದರ ಜೊತೆ ಜೊತೆಗೆ ತಮ್ಮ ಪಕ್ಷ ಕಟ್ಟುವ ಕಾರ್ಯದಲ್ಲಿ ವಿಜಯ್ ಸದಾ ತಮ್ಮನ್ನ ತೊಡಗಿಸಿಕೊಂಡಿದ್ದಾರೆ. ಮಧುರೈನ ಸಮಾವೇಶದಲ್ಲಿ ವಿಜಯ್ ಗುಡುಗಿಗೆ ತಮಿಳುನಾಡು ರಾಜಕೀಯ ಕ್ಷೇತ್ರದಲ್ಲಿ ಕಂಪನ ಶುರುವಾಗಿದೆ.

    ಮಧುರೈನಲ್ಲಿ ನಡೆದ ಸಮಾವೇಶಕ್ಕೆ ಜನ ಸಾಗರವೇ ಹರಿದು ಬಂದಿದೆ. ವಿಜಯ್ ವೇದಿಕೆ ಮೇಲೆ ಆಡಿದ ಒಂದೊಂದು ಮಾತಿಗೆ ವಿಜಯ್ ಅಭಿಮಾನಿ ಬಳಗ ಹಾಗೂ ತಮಿಳು ನಾಡಿನ ಜನ ರಣಕೇಕೆ ಹಾಕಿ ಕುಣಿದಿದೆ. 234 ಕ್ಷೇತ್ರದಲ್ಲೂ ನಾನೇ ಸ್ಪರ್ಧಿಸಿದ ಹಾಗೆ ಎನ್ನುವ ಮಾತಿಗೆ ಸಮ್ಮತ ನೀಡಿದ್ದಾರೆ ತಮಿಳುನಾಡಿನ ಜನ. ವಿಜಯ್ ದಳಪತಿ ಸಿನಿಮಾರಂಗದಿಂದ ರಾಜಕೀಯ ರಂಗಕ್ಕೆ ಪ್ರವೇಶ ಮಾಡಲು ಸಖತ್ ರೆಸ್ಪಾನ್ಸ್ ಸಿಕ್ತಿದೆ. ಅಲ್ಲದೇ ತಮ್ಮ ನಾಯಕನ ಮೂಲಕ ಮತ್ತಷ್ಟು ಅಭಿವೃದ್ದಿ ಹಾಗೂ ಬದಲಾವಣೆಯ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ ಜನ.

    ವಿಜಯ್ ದಳಪತಿ ತಮ್ಮ ಸಿನಿಮಾ ಮೂಲಕ ಅಪಾರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಅವರ ಅಭಿಮಾನಿ ಬಳಗ ಹಾಗೂ ಅವರ ಮೇಲಿನ ಅಭಿಮಾನ ಮತ್ತೊಮ್ಮೆ ಪ್ರೂವ್ ಆಗಿದೆ. ಮಧುರೈನ ಸಮಾವೇಶಕ್ಕೆ ಲಕ್ಷಾಂತರ ಜನ ಸೇರಿದ್ದಾರೆ. ಈ ಅಪಾರ ಜನಸಂಖ್ಯೆಯನ್ನ ನೋಡಿ ವೇದಿಕೆ ಮೇಲೆ ವಿಜಯ್ ಕಣ್ಣೀರಿಟ್ಟಿದ್ದಾರೆ. ಅಲ್ಲದೇ ಈ ವೇಳೆ ತಮಿಳುನಾಡಿನ ಜನರಿಗೆ ಕೆಲವೊಂದಿಷ್ಟು ಮಾತುಗಳನ್ನ ಕೊಟ್ಟಿದ್ದಾರೆ. ತಮ್ಮ ಪಕ್ಷ ಸ್ವತಂತ್ರವಾಗಿರಲಿದೆ ಯಾವುದೇ ಪಕ್ಷದೊಂದಿದೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.

  • FAStag ವ್ಯವಹಾರ – ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    FAStag ವ್ಯವಹಾರ – ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    -ಅಗ್ರಸ್ಥಾನದಲ್ಲಿ ತಮಿಳುನಾಡು

    ನವದೆಹಲಿ: ಕಳೆದ ಮೂರೂವರೆ ವರ್ಷಗಳಲ್ಲಿ ಭಾರತದಾದ್ಯಂತ ಫಾಸ್ಟ್‌ಸ್ಟ್ಯಾಗ್‌ (Fastag) ವಹಿವಾಟಿನಲ್ಲಿ ತಮಿಳುನಾಡು (Tamilnadu) ಮುಂಚೂಣಿಯಲ್ಲಿದೆ.

    ಲೋಕಸಭೆಯಲ್ಲಿ ಮಂಡಿಸಿದ ಮಾಹಿತಿ ಪ್ರಕಾರ, 2022ರಿಂದ 2025ರ ಜೂನ್ ವರೆಗೆ 1.26 ಬಿಲಿಯನ್ (126 ಕೋಟಿ) ವಹಿವಾಟು ನಡೆಸುವ ಮೂಲಕ ತಮಿಳುನಾಡು ಅಗ್ರಸ್ಥಾನ ಕಾಯ್ದುಕೊಂಡಿದೆ. ಈ ಮೂಲಕ ಹೆಚ್ಚಿನ ಸಂಚಾರವಿರುವ ಉತ್ತರ ಪ್ರದೇಶ, ಮಹಾರಾಷ್ಟ್ರ ರಾಜ್ಯಗಳನ್ನು ಹಿಂದಿಕ್ಕಿದೆ.ಇದನ್ನೂ ಓದಿ: ಹಾವೇರಿ| ಬರ್ತ್‌ಡೇ ದಿನವೇ ಕಾಂಗ್ರೆಸ್ ಯುವ ಕಾರ್ಯಕರ್ತನ ಹತ್ಯೆ

    ಕರ್ನಾಟಕದಲ್ಲಿ 1.19 ಬಿಲಿಯನ್ (119 ಕೋಟಿ) ವಹಿವಾಟು ದಾಖಲು:
    ಇದೇ ಅವಧಿಯಲ್ಲಿ ಉತ್ತರ ಪ್ರದೇಶ ಮತ್ತು ಕರ್ನಾಟಕ ಕ್ರಮವಾಗಿ 1.19 ಬಿಲಿಯನ್ (119 ಕೋಟಿ) ಹಾಗೂ ಹಾಗೂ 1.12 ಬಿಲಿಯನ್ (112 ಕೋಟಿ) ವಹಿವಾಟು ದಾಖಲಾಗಿದೆ. ರಾಜಸ್ಥಾನ ಮತ್ತು ಮಹಾರಾಷ್ಟ್ರದಲ್ಲಿ ಕ್ರಮವಾಗಿ 1 ಬಿಲಿಯನ್ (100 ಕೋಟಿ) ಮತ್ತು 919 ಮಿಲಿಯನ್ (91.9 ಕೋಟಿ) ವಹಿವಾಟು ಆಗಿದೆ. ತಮಿಳುನಾಡಿನಲ್ಲಿ ವಾರ್ಷಿಕವಾಗಿ ಅತ್ಯಧಿಕ ಮೊತ್ತದ ವಹಿವಾಟು ನಡೆದರೆ, ಉತ್ತರ ಪ್ರದೇಶ ಮತ್ತು ಕರ್ನಾಟಕ ರಾಜ್ಯಗಳಲ್ಲಿ ವೇಗದ ಬೆಳವಣಿಗೆಯಾಗಿದೆ. ಉದಾಹರಣೆಗೆ ಕರ್ನಾಟಕದಲ್ಲಿ 2022ರಿಂದ 2024ರವರೆಗಿನ ವಹಿವಾಟಿನಲ್ಲಿ ಶೇ.28.7ರಷ್ಟು ಹೆಚ್ಚಳ ಆಗಿದೆ.

    ದಕ್ಷಿಣ ಭಾರತದ ಗಣನೀಯ ಕೊಡುಗೆ:
    2022ರಿಂದ 2024ರ ಅವಧಿಯಲ್ಲಿ ಉತ್ತರ ಪ್ರದೇಶದಲ್ಲಿ ಶೇ.30.09ರಷ್ಟು ಬೆಳವಣಿಗೆಯಾಗಿದೆ. ಇದಕ್ಕೆ ವಿರುದ್ಧವಾಗಿ ತಮಿಳುನಾಡಿನಲ್ಲಿ ಎರಡು ವರ್ಷಗಳಲ್ಲಿ ಸುಮಾರು ಶೇ.16.8ರಷ್ಟು ಬೆಳವಣಿಗೆಯಾಗಿದೆ. ಒಟ್ಟಾರೆಯಾಗಿ ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕೇರಳದಿಂದ ಫಾಸ್ಟ್‌ಸ್ಟ್ಯಾಗ್‌ ಚಟುವಟಿಕೆಗೆ ಗಣನೀಯ ಕೊಡುಗೆ ನೀಡಿದಂತಾಗಿದೆ. 2022ರಿಂದ 2025ರವರೆಗೆ ಐದು ರಾಜ್ಯಗಳು ಸೇರಿ 3.71 ಬಿಲಿಯನ್ ವಹಿವಾಟು ನಡೆಸಿದೆ. ಇದು ರಾಷ್ಟ್ರದ ಒಟ್ಟು 13.69 ಬಿಲಿಯನ್ ವಹಿವಾಟಿನಲ್ಲಿ ಸರಿಸುಮಾರು ಶೇ.27.1ರಷ್ಟಿದೆ.

    ಫಾಸ್ಟ್‌ಸ್ಟ್ಯಾಗ್‌ ವ್ಯವಸ್ಥೆಯಲ್ಲಿನ ದೋಷಗಳ ಬಗ್ಗೆ ಸರ್ಕಾರ ಕಳವಳ ವ್ಯಕ್ತಪಡಿಸಿದ್ದು, ಈಗಾಗಲೇ ಸಮಸ್ಯೆಯನ್ನು ಪರಿಹರಿಸಿದೆ. ತಪ್ಪಾಗಿ ಹಣ ಕಡಿತಗೊಂಡಾಗ ಟೋಲ್ ಸಂಗ್ರಹ ಏಜೆನ್ಸಿಗೆ 1 ಲಕ್ಷ ರೂ. ದಂಡ ಕೂಡಾ ವಿಧಿಸಲಾಗಿದೆ.ಇದನ್ನೂ ಓದಿ: ಆಟೋದಲ್ಲಿ ಬಂದು ಅಂಗಡಿ ಮುಂದಿದ್ದ ಉಪ್ಪಿನ ಮೂಟೆ ಕದ್ದ ಕಳ್ಳರು