Tag: Tamilunadu

  • ಸಸ್ಯಹಾರಿ ಊಟದಲ್ಲಿ ಚಿಕನ್ ಪೀಸ್- ಸ್ವಿಗ್ಗಿ ವಿರುದ್ಧ ದೂರು

    ಸಸ್ಯಹಾರಿ ಊಟದಲ್ಲಿ ಚಿಕನ್ ಪೀಸ್- ಸ್ವಿಗ್ಗಿ ವಿರುದ್ಧ ದೂರು

    ಚೆನ್ನೈ: ವ್ಯಕ್ತಿಯೋರ್ವ ಸ್ವಿಗ್ಗಿಯಲ್ಲಿ ಆರ್ಡರ್ ಮಾಡಿದ್ದ ಸಸ್ಯಹಾರಿ ಊಟದಲ್ಲಿ ಚಿಕನ್ ಪೀಸ್‍ಗಳು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಆತ ಫುಡ್ ಡೆಲಿವರಿ ಕಂಪನಿ ವಿರುದ್ಧ ಕಿಡಿಕಾರಿದ್ದಾರೆ.

    ಕೋ ಶೇಶಾ ಎಂಬ ತಮಿಳು ಗೀತೆ ರಚನಕಾರರು ಘಟನೆಗೆ ಸಂಬಂಧಿಸಿ ಟ್ವೀಟ್ ಮಾಡಿದ್ದಾರೆ. ಶೇಷಾ ಅವರು ಸಸ್ಯಹಾರಿಯಾಗಿದ್ದು, ಗೋಬಿ ಮಂಚೂರಿ ವಿತ್ ಕಾರ್ನ್ ಫ್ರೈಡ್ ರೈಸ್‍ನ್ನು ಆರ್ಡರ್ ಮಾಡಿದ್ದರು. ಆದರೆ ಆ ತಿಂಡಿಯಲ್ಲಿ ಅವರಿಗೆ ಚಿಕನ್ ಪೀಸ್ ಇರುವುದು ತಿಳಿದಿದೆ. ಈ ಹಿನ್ನೆಲೆಯಲ್ಲಿ ಅವರು ಸ್ವಿಗ್ಗಿಯು ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದೆ. ಘಟನೆ ಸಂಬಂಧಿಸಿ ಸ್ವಿಗ್ಗಿ ಅವರು ಕ್ಷಮೆಯಾಚಿಸಿ 70 ರೂ. ಪರಿಹಾರವನ್ನು ಅಷ್ಟೇ ನೀಡಿದೆ ಎಂದು ಆರೋಪಿಸಿದ್ದಾರೆ.

    ಘಟನೆಗೆ ಸಂಬಂಧಿಸಿ ಪರ ವಿರೋಧಗಳೆರಡೂ ಚರ್ಚೆ ಆಗುತ್ತಿದ್ದು, ಅನೇಕರು ನಾನ್‍ವೆಜ್ ರೆಸ್ಟೋರೆಂಟ್‍ನಿಂದ ಏಕೆ ಆರ್ಡರ್ ಮಾಡಿದರು. ಈ ರೀತಿ ದೂರು ನೀಡುವುದರಲ್ಲಿ ಅರ್ಥವಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಆರ್ಡರ್ ಮಾಡಿದ್ದ ಆಹಾರದಲ್ಲಿ ಹುಳಗಳು – ರೆಸ್ಟೋರೆಂಟ್ ವಿರುದ್ಧ ಮಹಿಳೆ ದೂರು

    ಇತ್ತೀಚೆಗಷ್ಟೇ ಜನಪ್ರಿಯ ರೆಸ್ಟೋರೆಂಟ್‍ನಲ್ಲಿ ಆರ್ಡರ್ ಮಾಡಿದ್ದ ಊಟದಲ್ಲಿ ಹುಳುಗಳು ಕಂಡು ಬಂದಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ರೆಸ್ಟೋರೆಂಟ್ ವಿರುದ್ಧ ದೂರು ದಾಖಲಿಸಿದ್ದರು. ಇದನ್ನೂ ಓದಿ: ಅಮೆರಿಕದಲ್ಲಿ ತಿರಂಗಾ ರ‍್ಯಾಲಿ – ಗಮನಸೆಳೆದ ಬಾಬಾ ಬುಲ್ಡೋಜರ್

    Live Tv
    [brid partner=56869869 player=32851 video=960834 autoplay=true]

  • ರಾಮೇಶ್ವರದ 6 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

    ರಾಮೇಶ್ವರದ 6 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

    ಕೊಲೊಂಬೋ: ರಾಮೇಶ್ವರಂನಿಂದ ಹೊರಟಿದ್ದ 6 ಮಂದಿ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿ ಅವರ ದೋಣಿಗಳನ್ನು ವಶಪಡಿಸಿಕೊಂಡಿದೆ.

    ಅಗತ್ಯ ಅನುಮತಿ ಪಡೆದು ರಾಮೇಶ್ವರಂನಿಂದ ಒಟ್ಟು 400 ದೋಣಿಗಳು ಹೋರಟಿತ್ತು. ಅದರಲ್ಲಿ ತಲೈಮನ್ನಾರ್ ಮತ್ತು ನಾಚಿಕುಡವು ಬಳಿ ಮೀನುಗಾರಿಕೆ ನಡೆಸುತ್ತಿದ್ದ 6 ಮಂದಿಯ ದೋಣಿ ಸುತ್ತ ನೌಕಾಪಡೆಯ ಗಸ್ತು ಸುತ್ತುವರೆದಿದ್ದು, ಅಕ್ರಮವಾಗಿ ಮೀನುಗಾರಿಕೆ ಆರೋಪದ ಮೇರೆಗೆ ಅವರನ್ನು ಬಂಧಿಸಿದ್ದಾರೆ.

    ಆರಂಭದಲ್ಲಿ 11 ಮೀನುಗಾರರನ್ನು ಬಂಧಿಸಲಾಯಿತು. ಅವರಲ್ಲಿ ಐವರು ದೋಣಿ ಎಂಜಿನ್ ಸ್ಥಗಿತಗೊಂಡಿದ್ದರಿಂದ ಶ್ರೀಲಂಕಾದ ಸಮುದ್ರಕ್ಕೆ ತೇಲಿಹೋಗಿದೆ ಎಂದು ಖಚಿತ ಪಡೆಸಿಕೊಂಡ ಶ್ರೀಲಂಕಾ ನೌಕಾಪಡೆ ನಂತರ ಆ ಐವರನ್ನು ಬಿಡುಗಡೆ ಮಾಡಿದೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರಾಗಿ ರನಿಲ್ ವಿಕ್ರಮಸಿಂಘೆ ಪ್ರಮಾಣವಚನ ಸ್ವೀಕಾರ

    ಬಂಧಿತರನ್ನು ಬಾಲಮುರುಗನ್, ಅಂತೋನಿ, ತಂಗಪಾಂಡಿ, ಅಜಿತ್, ಕೃಷ್ಣನ್ ಮತ್ತು ಮುದುಗು ಪಿಚೈ ಎಂದು ಗುರುತಿಸಲಾಗಿದೆ. ಮೀನುಗಾರರನ್ನು ತಲೈಮನ್ನಾರ್ ನೇವಿ ಕ್ಯಾಂಪ್‍ಗೆ ಕರೆದೊಯ್ಯಲಾಗಿದೆ. ಇದನ್ನೂ ಓದಿ: ಡಿಕೆಶಿಗೆ ಜಮೀರ್ ಡಿಚ್ಚಿ – ಸಿದ್ದರಾಮಯ್ಯಗೆ ಜಮೀರ್ ಜಿಂದಾಬಾದ್

    Live Tv
    [brid partner=56869869 player=32851 video=960834 autoplay=true]

  • ಮೇಕೆದಾಟು ಆಣೆಕಟ್ಟು ನಿರ್ಮಾಣ ಯೋಜನೆ- ಜು. 26ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

    ಮೇಕೆದಾಟು ಆಣೆಕಟ್ಟು ನಿರ್ಮಾಣ ಯೋಜನೆ- ಜು. 26ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

    ನವದೆಹಲಿ: ಮೇಕೆದಾಟು ಆಣೆಕಟ್ಟು ಸಮಗ್ರ ಯೋಜನಾ ವರದಿ (ಡಿಪಿಆರ್) ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸದಂತೆ ನಿರ್ದೇಶನ ನೀಡಲು ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜು. 26ಕ್ಕೆ ಮುಂದೂಡಿದೆ.

    ಇಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಎ.ಎಂ. ಕಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ, ಜು. 26ರಂದು ವಿಸ್ತೃತ ವಿಚಾರಣೆ ನಡೆಸುವುದಾಗಿ ತಿಳಿಸಿತು. ಅಲ್ಲದೇ ಪ್ರಕರಣ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನೋಟಿಸ್ ಜಾರಿ ಮಾಡಿತು.

    supreme court 12

    ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆ ಬಾಕಿ ಉಳಿದ ಹಿನ್ನೆಲೆಯಲ್ಲಿ ಜು. 22ರಂದು ನಿಗದಿಯಾಗಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಡಿಪಿಆರ್ ಬಗ್ಗೆ ಚರ್ಚಿಸಲ್ಲ, ಚರ್ಚೆ ಮುಂದೂಡಲು ಮನವಿ ಮಾಡುತ್ತೇವೆ ಎಂದು ಕರ್ನಾಟಕ, ತಮಿಳುನಾಡು ಸರ್ಕಾರ ಪರ ವಕೀಲರು ಕೋರ್ಟ್‍ಗೆ ತಿಳಿಸಿದರು. ಇದಕ್ಕೆ ಕೋರ್ಟ್ ಸಮ್ಮತಿ ಸೂಚಿಸಿತು.

    ಮೇಕೆದಾಟು ನದಿಗೆ ಆಣೆಕಟ್ಟು ಕಟ್ಟಲು ಹೊರಟಿರುವ ಕರ್ನಾಟಕ ಸರ್ಕಾರ ಯೋಜನೆಯ ಡಿಪಿಆರ್ ಸಲ್ಲಿಸಿದ್ದು, ಈ ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಲು ಸಮಿತಿಗೆ ಮನವಿ ಮಾಡಿತ್ತು. ಈ ಬಗ್ಗೆ ಚರ್ಚೆಗೆ ಸಮಿತಿಯೂ ಕೂಡಾ ಒಪ್ಪಿಗೆ ಸೂಚಿಸಿತ್ತು. ಇದನ್ನೂ ಓದಿ: ಮೊದಲು ಎಲೆಕ್ಷನ್ ಆಗಲಿ, ಆ ಮೇಲೆ ಪೈಪೋಟಿ ಮಾಡಲಿ: ಲಕ್ಷ್ಮಿ ಹೆಬ್ಬಾಳ್ಕರ್

    ಆದರೆ ಇದಕ್ಕೆ ವಿರೋಧಿಸಿದ ತಮಿಳುನಾಡು ಸರ್ಕಾರ, ಮೇಕೆದಾಟು ಆಣೆಕಟ್ಟು ಯೋಜನೆ ವಿರುದ್ಧ ಮೂಲ ಅರ್ಜಿ ಸುಪ್ರೀಂಕೋರ್ಟ್‍ನಲ್ಲಿ ಬಾಕಿ ಇದೆ. ಈ ಹಂತದಲ್ಲಿ ಸಭೆಯಲ್ಲಿ ಡಿಪಿಆರ್ ಬಗ್ಗೆ ಚರ್ಚೆ ಮಾಡಬಾರದು, ಈ ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸೂಚನೆ ನೀಡುವಂತೆ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿತ್ತು. ಇದನ್ನೂ ಓದಿ: ಹಿಜಬ್ ವಿವಾದದ ಬೆನ್ನಲ್ಲೇ ಮುಸ್ಲಿಮರಿಂದ ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ

    Live Tv
    [brid partner=56869869 player=32851 video=960834 autoplay=true]

  • ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದ ಯುವಕರನ್ನು ಬೆನ್ನೆಟ್ಟಿದ ಆನೆ- ವೀಡಿಯೋ ವೈರಲ್‌

    ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದ ಯುವಕರನ್ನು ಬೆನ್ನೆಟ್ಟಿದ ಆನೆ- ವೀಡಿಯೋ ವೈರಲ್‌

    ಚೆನ್ನೈ: ಆನೆಗಳ ಹಿಂಡು ರಸ್ತೆ ದಾಟುತ್ತಿರುವಾಗ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದ ಯುವಕರನ್ನು ನೋಡಿ ಬೆನ್ನೆಟ್ಟಿದ ಘಟನೆ ತಮಿಳುನಾಡಿನ ಕೂನೂರಿನಲ್ಲಿ ನಡೆದಿದೆ.

    ತಮಿಳುನಾಡಿನ ಕಟ್ಟೇರಿ ಬಳಿ ಆನೆಗಳ ಹಿಂಡುಗಳು ಆಹಾರ ಮತ್ತು ನೀರಿನ್ನು ಹುಡುಕುತ್ತಾ ಹೆದ್ದಾರಿಗೆ ಬಂದಿದ್ದವು. ಇದರಿಂದಾಗಿ ಹೆದ್ದಾರಿಯಲ್ಲಿ ಓಡಾಡುತ್ತಿದ್ದ ವಾಹನಗಳು ಆನೆ ರಸ್ತೆಯನ್ನು ದಾಟುವವರೆಗೆ ಅಲ್ಲೇ ನಿಂತಿದ್ದವು. ಆದರೆ ಅಲ್ಲಿದ್ದ ಯುವಕರು ಆ ಆನೆಗಳು ರಸ್ತೆಯನ್ನು ದಾಟುವಾಗ ಸೆಲ್ಫಿಯನ್ನು ತೆಗೆದುಕೊಳ್ಳಲು ಪ್ರಯತ್ನಿಸಿದ್ದಾರೆ. ಇದರಿಂದ ಆನೆಗಳು ಕೆರಳಿದೆ. ಅಲ್ಲಿದ್ದ ಪ್ರಯಾಣಿಕರನ್ನು ಬೆದರಿಸಿ ಓಡಿಸಲು ಮುಂದಾಗಿದೆ.

    ಪಕ್ಕದಲ್ಲಿದ್ದವರು ಭಯಭೀತರಾಗಿ ದೂರ ಸರಿದಿದ್ದಾರೆ. ನಂತರ ಆನೆಗಳು ಅರಣ್ಯಕ್ಕೆ ಇಳಿದುಹೋಗಲು ಸ್ವಲ್ಪ ಸಮಯವನ್ನು ತೆಗೆದುಕೊಂಡಿದೆ. ಇದೀಗ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ನೆಟ್ಟಿಗರು ಯುವಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಹಿಂದೂ ಅಸ್ತಿತ್ವಕ್ಕಾಗಿ ಶಸ್ತ್ರಾಸ್ತ್ರ ಹಿಡಿಯುವಂತಾಗಿದೆ: ಯತಿ ನರಸಿಂಹಾನಂದ ವಿರುದ್ಧ ಖರ್ಗೆ ಖಂಡನೆ

    ನೀಲಗಿರಿ ಜಿಲ್ಲೆ ಕಾಡು ಆನೆಗಳು, ಕಾಡಾನೆಗಳು ಮತ್ತು ಚಿರತೆಗಳಂತಹ ವನ್ಯಜೀವಿಗಳಿಂದ ಸಮೃದ್ಧವಾಗಿದೆ. ಅನೇಕ ಬಾರಿ ಆನೆಗಳು ಆಹಾರ ಮತ್ತು ನೀರನ್ನು ಹುಡುಕಿಕೊಂಡು ಹೆದ್ದಾರಿಗಳನ್ನು ದಾಟುತ್ತಿರುತ್ತದೆ. ಕಳೆದ 15 ದಿನಗಳಿಂದ ಕುನ್ನೂರು ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಕಾಡಾನೆಗಳು ಬೀಡುಬಿಟ್ಟಿವೆ. ಈ ಆನೆಗಳು ರನ್ನಿಮೇಡು, ಪಿಲ್ಲಿಮಲೈ, ಚಿನ್ನ ಕರುಂಬಳಂ ಮುಂತಾದ ಪ್ರದೇಶಗಳಲ್ಲಿ ಆಹಾರ ಮತ್ತು ನೀರು ಹುಡುಕುತ್ತಿವೆ. ಇದರಿಂದಾಗಿ ಈ ಮೊದಲೇ ಅರಣ್ಯ ಇಲಾಖೆಯವರು ಪ್ರವಾಸಿಗರಿಗೆ ಜಾಗರೂಕರಾಗಿರಿ ಹಾಗೂ ಆನೆಯ ಹಿಂಡನ್ನು ಪ್ರಚೋದಿಸಂತೆ ಅಥವಾ ಹತ್ತಿರಕ್ಕೆ ಹೋಗಲು ಪ್ರಯತ್ನಿಸದಂತೆ ಎಚ್ಚರಿಕೆಯನ್ನು ನೀಡಿದ್ದರು. ಇದನ್ನೂ ಓದಿ: ಹೀಗೆ ಮಾಡಿದ್ರೆ ಮುಂದಿನ ಜನಾಂಗಕ್ಕೆ ಕಾಂಗ್ರೆಸ್ ಇದೆಯೋ ಇಲ್ಲವೋ ಗೊತ್ತಾಗುವುದಿಲ್ಲ: ಮುರುಗೇಶ್ ನಿರಾಣಿ

  • ಮೇಕೆದಾಟು ಯೋಜನೆ- ರಾಜ್ಯ ಸರ್ಕಾರ ನಿರ್ಧಾರದ ವಿರುದ್ಧ ತ.ನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

    ಮೇಕೆದಾಟು ಯೋಜನೆ- ರಾಜ್ಯ ಸರ್ಕಾರ ನಿರ್ಧಾರದ ವಿರುದ್ಧ ತ.ನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

    ನವದೆಹಲಿ: ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ಮುಂದುವರಿಸಿದ್ದು, ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ನಿರ್ಣಯ ಮಂಡಿಸಿದೆ. ಇಂದು ಜಲ ಸಂಪನ್ಮೂಲ ಸಚಿವ ದುರೈ ಮುರುಗನ್ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಗೊತ್ತುವಳಿ ಮಂಡಿಸಿದ್ದಾರೆ.

    ದುರೈ ಮುರುಗನ್ ಮಂಡಿಸಿದ ನಿರ್ಣಯಕ್ಕೆ ತಮಿಳನಾಡಿನ ಎಲ್ಲಾ ಪಕ್ಷಗಳು ಸಮ್ಮತಿ ಸೂಚಿಸಿ ಅಂಗೀಕರಿಸಿದ್ದು, ಮೇಕೆದಾಟು ಯೋಜನೆಗೆ ಅನುಮತಿ ನೀಡದಂತೆ ಕೇಂದ್ರ ಸರ್ಕಾರಕ್ಕೆ ಒಕ್ಕೂರಲಿನಿಂದ ಆಗ್ರಹಿಸಿವೆ.

    ಈ ನಿರ್ಣಯಕ್ಕೆ ವಿಶೇಷವಾಗಿ ತಮಿಳುನಾಡು ಬಿಜೆಪಿ ಕೂಡಾ ಬೆಂಬಲ ನೀಡಿದೆ. ಮೇಕೆದಾಟು ಅಣೆಕಟ್ಟು ಯೋಜನೆಗೆ ಅನುಮತಿ ನೀಡದಂತೆ ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಿದ್ದೇವೆ ಎಂದು ತಮಿಳುನಾಡು ಬಿಜೆಪಿ ನಾಯಕ ನೈನಾರ್ ನಾಗೇಂದ್ರನ್ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಿಂದ 22,500 ವಿದ್ಯಾರ್ಥಿಗಳು ವಾಪಸ್- ಆಪರೇಷನ್ ಗಂಗಾ ಪೂರ್ಣ

    ಮೇಕೆದಾಟು ಯೋಜನೆ ಸುಪ್ರೀಂಕೋರ್ಟ್‍ನಲ್ಲಿದ್ದು, ವಿಚಾರಣೆ ಬಾಕಿ ಇರುವಾಗಲೇ ಕಾವೇರಿ ನೀರಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿತ್ತು. ಇದಕ್ಕೆ ಠಕ್ಕರ್ ಕೊಡಲು ಹೊರಟ ಸಿಎಂ ಬಸವರಾಜ ಬೊಮ್ಮಾಯಿ ಬಿಜೆಪಿ ಸರ್ಕಾರ, ಕೇಂದ್ರದಿಂದ ಅನುಮತಿ ಸಿಗದ ಯೋಜನೆಗೆ ಈ ಬಾರಿಯ ಬಜೆಟ್‍ನಲ್ಲಿ 1000 ಕೋಟಿ ಹಣವನ್ನು ಮೀಸಲಿಟ್ಟಿತ್ತು. ಇದನ್ನೂ ಓದಿ: ಸ್ವಂತ ಜಮೀನು ಮಾರಿ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾದ ಹಿರಿಯ ನಟಿ ಲೀಲಾವತಿ

    ರಾಜ್ಯ ಸರ್ಕಾರದ ಇದೇ ನಿರ್ಧಾರವನ್ನು ಮುಂದಿಟ್ಟುಕೊಂಡು ಈಗ ತಮಿಳುನಾಡು ಹೋರಾಟ ಮುಂದುವರಿಸಿದೆ. ಒಂದು ಕಡೆ ಸುಪ್ರೀಂಕೋರ್ಟ್‍ನಲ್ಲಿ ಧಾವೆ ಹೂಡಿ ಯೋಜನೆಗೆ ಅನುಮತಿ ನೀಡದಂತೆ ಮನವಿ ಮಾಡುತ್ತಿರುವ ತಮಿಳುನಾಡು, ಮತ್ತೊಂದು ಕಡೆ ಯೋಜನೆಗೆ ಯಾವುದೇ ಅನುಮತಿಗಳು ನೀಡದಂತೆ ಕೇಂದ್ರ ಸರ್ಕಾರಕ್ಕೆ ನಿರಂತರ ಒತ್ತಡ ಹೇರುತ್ತಿದೆ.

  • ಕರ್ನಾಟಕ ಹೈಕೋರ್ಟ್ ಜಡ್ಜ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

    ಕರ್ನಾಟಕ ಹೈಕೋರ್ಟ್ ಜಡ್ಜ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

    ಬೆಂಗಳೂರು/ ಚೆನ್ನೈ: ಹಿಜಬ್ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರಿಗೆ ಕೊಲೆಬೆದರಿಕೆ ಹಾಕಿದ್ದ ಆರೋಪಿಯನ್ನು ಮಧುರೈ ಪೊಲೀಸರು ಬಂಧಿಸಿದ್ದಾರೆ.

    ರೆಹಮತ್ತುಲ್ಲಾ ಬಂಧಿತ ಆರೋಪಿ. ಈತ ತೌಹಿಫ್ ಜಮಾತ್ ಸಂಘಟನೆಯ ಸದಸ್ಯನಾಗಿದ್ದಾನೆ. ಮಧುರೈ ಪೊಲೀಸರು ಶನಿವಾರ ರಾತ್ರಿ ಆರೋಪಿಯನ್ನು ತಿರುನಲ್ವೇಲಿಯಲ್ಲಿ ಬಂಧಿಸಿದ್ದರು. ಸದ್ಯ ಆರೋಪಿಗೆ ಮಾರ್ಚ್ 31ರ ವರೆಗೂ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ತಿರುಪತ್ತೂರ್ ಜೈಲಿನಲ್ಲಿರಿಸಲಾಗಿದೆ.

    ಏನಿದು ಘಟನೆ?: ಹಿಜಬ್ ತೀರ್ಪು ಪ್ರಕಟಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ತಮಿಳುನಾಡು ಮೂಲದ ಮತೀಯ ಸಂಘಟನೆಯೊಂದು ಕೊಲೆ ಬೆದರಿಕೆ ಹಾಕಿತ್ತು. ತೌಹೀದ್ ಜಮಾತ್ ಸಂಘಟನೆ ಬೆದರಿಕೆ ಹಾಕಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸಂಘಟನೆ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದೇ ವೇಳೆ ಮಧುರೈ ಪೊಲೀಸರೂ ಪ್ರಕರಣ ದಾಖಲಿಸಿಕೊಂಡಿದ್ದರು. ಜಡ್ಜ್‍ಗೆ ಬೆದರಿಕೆ ಹಾಕಿದ ಸಂಬಂಧ ತನಿಖೆ ನಡೆಸುವಂತೆ ಒತ್ತಾಯಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್ ಮನವಿ ಮಾಡಿದ್ದರು. ಇದನ್ನೂ ಓದಿ: ಹಿಜಬ್‌ ತೀರ್ಪು ಪ್ರಕಟಿಸಿದ ಜಡ್ಜ್‌ಗಳಿಗೆ ಕೊಲೆ ಬೆದರಿಕೆ – ಕೇಸ್‌ ದಾಖಲು

    ತೌಹೀದ್ ಜಮಾತ್ ಸಂಘಟನೆಯ ಮುಖಂಡ ಆರ್.ರೆಹ್ಮತ್‍ವುಲ್ಲಾ ಮಧುರೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹಿಜಬ್ ತೀರ್ಪಿಗೆ ಆಕ್ಷೆ?ಪ ವ್ಯಕ್ತಪಡಿಸಿ ಪರೋಕ್ಷವಾಗಿ ನ್ಯಾಯಾಧಿ?ಶರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಆಧಾರಿಸಿ ವಕೀಲ, ಸುಧಾ ಕಟ್ವ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

    ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್ 506(ಬೆದರಿಕೆ), 501(1)(ಮಾನಹಾನಿ), 503(ಕ್ರಿಮಿನಲ್ ಬೆದರಿಕೆ), 109(ಪ್ರಚೋದನೆ), 504(ಶಾಂತಿ ಭಂಗ), 505(ಸಾರ್ವಜನಿಕ ಕಿಡಿಗೇಡಿತನ) ಸೇರಿದಂತೆ ವಿವಿಧ ಸೆಕ್ಷನ್‍ಗಳಲ್ಲಿ ಎಫ್‍ಐಆರ್ ದಾಖಲಾಗಿದೆ. ಈ ಪ್ರಕರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿತ್ತು. ಇದನ್ನೂ ಓದಿ: ಭಗವದ್ಗೀತೆ ಹೊಟ್ಟೆ ತುಂಬಿಸುವುದಿಲ್ಲ, ತಲೆಯನ್ನು ತುಂಬಿಸುತ್ತದೆ: ಪ್ರತಾಪ್‍ಸಿಂಹ

    ಗಿರೀಶ್ ಪತ್ರದಲ್ಲಿ ಏನಿತ್ತು?: ತೌಹೀದ್ ಜಮಾತ್ ಸಂಘಟನೆಯ ಮುಖಂಡ ಆರ್.ರಹ್ಮತ್‍ವುಲ್ಲಾ ಅವರು, ಸಾರ್ವಜನಿಕ ಭಾಷಣದಲ್ಲಿ ಹಿಜಬ್ ಕುರಿತು ತೀರ್ಪು ನೀಡಿರುವ ನ್ಯಾಯಾಮೂರ್ತಿಗಳು ಕೊಲೆಯಾದಲ್ಲಿ ಅವರೇ ನೇರ ಹೊಣೆಯಾಗಲಿದ್ದಾರೆ ಎಂದು ಹೇಳಿದ್ದರು. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನಾಯಕರು ತೀರ್ಪು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ತಿಳಿಸಿದ್ದರು. ಅಲ್ಲದೆ, ಹೊಸಪೇಟೆಯಲ್ಲಿ ಹಿಜಬ್ ಧರಿಸುವುದನ್ನು ಸಮರ್ಥಿಸಿ ಗೋಡೆಗಳ ಮೇಲೆ ಬರಹಗಳನ್ನು ಬರೆಯಲಾಗಿದ್ದು, ಅಮೀರ್- ಇ-ಶರಿತ್ ಎಂಬ ಸಂಘಟನೆ ತೀರ್ಪು ಖಂಡಿಸಿ ಬಂದ್‍ಗೆ ಕರೆ ನೀಡಿತ್ತು. ಈ ಎಲ್ಲ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸ್ವಯಂಪ್ರೆರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದರು.

  • ಲಾವಣ್ಯ ಆತ್ಮಹತ್ಯೆ ಕೇಸ್ ತನಿಖೆ ಸಿಬಿಐ ಹೆಗಲಿಗೆ: ಹೈಕೋರ್ಟ್ ಆದೇಶ

    ಲಾವಣ್ಯ ಆತ್ಮಹತ್ಯೆ ಕೇಸ್ ತನಿಖೆ ಸಿಬಿಐ ಹೆಗಲಿಗೆ: ಹೈಕೋರ್ಟ್ ಆದೇಶ

    ಚೆನ್ನೈ: ದ್ವಿತೀಯ ಪಿಯುಸಿ ಓದುತ್ತಿದ್ದ ತಾಂಜವೂರಿನ ವಿದ್ಯಾರ್ಥಿನಿ ಲಾವಣ್ಯ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿ ಮದ್ರಾಸ್ ಹೈಕೋರ್ಟ್‍ನ ಮಧುರೈ ಪೀಠ ಮಹತ್ವದ ಆದೇಶ ಪ್ರಕಟಿಸಿದೆ.

    ಲಾವಣ್ಯ (17) ತಂಜಾವೂರು ಜಿಲ್ಲೆಯ ಕ್ರಿಶ್ಚಿಯನ್ ಸಂಸ್ಥೆಯಾದ ಇಮ್ಯಾಕ್ಯುಲೇಟ್ ಹಾರ್ಟ್ ಆಫ್ ಮೇರಿ ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಅವಳಿಗೆ ಹಾಸ್ಟೆಲ್ ವಾರ್ಡನ್ ಸಗಯಾ ಮೇರಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ಹಿಂಸೆ ಹಾಗೂ ಶೋಷಣೆಗೆ ನೀಡುತ್ತಿದ್ದಾರೆ ಎಂದು ವೀಡಿಯೋವೊಂದರಲ್ಲಿ ಹೇಳಿದ್ದಳು. ಈ ವೀಡಿಯೋ ಭಾರೀ ವೈರಲ್ ಆಗಿತ್ತು.

    ಈ ಹಿನ್ನೆಲೆಯಲ್ಲಿ ಲಾವಣ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದರು. ತಮಿಳುನಾಡು ಪೊಲೀಸರ ತನಿಖೆಯ ಮೇಲೆ ನಮಗೆ ನಂಬಿಕೆ ಇಲ್ಲ ಮತ್ತು ಈ ಬಗ್ಗೆ ಸಿಬಿಐ ತನಿಖೆಯಾಗಬೇಕೆಂದು ಲಾವಣ್ಯ ಅವರ ಪೋಷಕರು ಹೇಳಿದ್ದರು. ಪೊಲೀಸರು ಧಾರ್ಮಿಕ ಮತಾಂತರದ ಭಾಗವನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಕುಟುಂಬ ಆರೋಪಿಸಿತ್ತು. ಇದನ್ನೂ ಓದಿ: ಹಾಸ್ಟೆಲ್ ವಾರ್ಡನ್‍ನಿಂದ ಮತಾಂತರ ಕಿರುಕುಳ – ವಿದ್ಯಾರ್ಥಿನಿ ಆತ್ಮಹತ್ಯೆ

    ಜೊತೆಗೆ ಲಾವಣ್ಯ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ನಿರಾಕರಿಸಿದ್ದರಿಂದ ಸದಾ ಕಿರುಕುಳ ನೀಡುತ್ತಿದ್ದರು. ಇದನ್ನು ತಡೆಯಲಾರದೇ ಲಾವಣ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಮಿಳುನಾಡು ಬಿಜೆಪಿ ಆರೋಪಿಸಿತ್ತು. ಈ ವಿಚಾರ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಇದನ್ನೂ ಓದಿ: ಕುಡಿತ ಬಿಟ್ಟರೆ ಮಾತ್ರ ಮನೆಗೆ ಬರುತ್ತೇನೆ ಎಂದಿದ್ದಕ್ಕೆ ಪತ್ನಿಯನ್ನೇ ಕೊಲೆಗೈದ

  • ಹೊಗೇನಕಲ್‌ನ ಒಂದಿಂಚು ಜಾಗವನ್ನು ಬೇರೆಯವರಿಗೆ ಬಿಟ್ಟುಕೊಡಲ್ಲ: ಸೋಮಣ್ಣ

    ಹೊಗೇನಕಲ್‌ನ ಒಂದಿಂಚು ಜಾಗವನ್ನು ಬೇರೆಯವರಿಗೆ ಬಿಟ್ಟುಕೊಡಲ್ಲ: ಸೋಮಣ್ಣ

    ಚಾಮರಾಜನಗರ: ಹೊಗೇನಕಲ್‌ನಲ್ಲಿ ಒಂದಿಂಚು ಜಾಗವನ್ನು ಬೇರೆಯವರಿಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.

    ಹೊಗೇನಕಲ್‌ನಲ್ಲಿ 400 ಎಕರೆ ವಿಸ್ತೀರ್ಣದ ನಡುಗುಡ್ಡೆಯನ್ನು ತಮಿಳುನಾಡು ಸರ್ಕಾರ ಅತಿಕ್ರಮಿಸಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ರಾಜ್ಯದ ಸಣ್ಣ ಹಕ್ಕನ್ನು ಸಹ ಬೇರೆಯವರಿಗೆ ಬಿಟ್ಟು ಕೊಡಲ್ಲ, ನಮ್ಮ ಹಕ್ಕನ್ನು ನಾವು ಕಾಯ್ದುಕೊಳ್ಳುತ್ತೇವೆ. ನಮಗೆ ಆ ಶಕ್ತಿಯಿದೆ ಎಂದರು.

    Somanna

    ಜಂಟಿ ಸರ್ವೆ ಪುನಾರಾಂಭಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಯಾವ್ಯಾವ ಕಾಲಕ್ಕೇ ಏನಾಗಬೇಕೋ ಆ ರೀತಿಯೇ ಆಗುತ್ತದೆ. ಕರ್ನಾಟಕದ ಒಂದು ಇಂಚು ಜಾಗವನ್ನು ಬೇರೆಯವರಿಗೆ ಬಿಟ್ಟುಕೊಡಲ್ಲ. ನಮ್ಮ ನೆಲದಲ್ಲಿ ಇನ್ನೊಬ್ಬರು ಬಂದು ಸೇರಿಕೊಳ್ಳಲು ಅವಕಾಶ ಕೊಡಲ್ಲ ಎಂದು ಭರವಸೆ ನೀಡಿದರು. ಇದನ್ನೂ ಓದಿ: ನನ್ನ ವಿಜಯನಗರದ ಜನ ದುಃಖದಲ್ಲಿದ್ದಾರೆ: ಆನಂದ್ ಸಿಂಗ್

    ತಮಿಳುನಾಡು ಕೈಗೊಂಡಿರುವ ಹೊಗೇನಕಲ್ ಎರಡನೇ ಹಂತದ ಕುಡಿಯುವ ನೀರಿನ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾವು ಕುಡಿದ ಮೇಲೆ ತಮಿಳುನಾಡಿನವರು ನೀರು ಕುಡಿಯುತ್ತಾರೆ ವಿನಾಃ ಅವರು ಕುಡಿದ ನೀರನ್ನು ನಾವು ಕುಡಿಯೋದಿಲ್ಲ, ಅವರ ಹಕ್ಕನ್ನು ಕಾಯ್ದುಕೊಳ್ಳೋದು ಅವರ ಕರ್ತವ್ಯ. ನಮ್ಮ ಹಕ್ಕನ್ನು ಕಾಯ್ದುಕೊಳ್ಳೋದು ನಮ್ಮ ಕರ್ತವ್ಯವಾಗಿದ್ದು, ನಮ್ಮ ಜನರಿಗೆ ಅನ್ಯಾಯ ಮಾಡಿಕೊಂಡು ಅವರಿಗೆ ನೀರು ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ನಮಗೆ ಗೌರವ ಕೊಟ್ಟಿದ್ದಕ್ಕೆ ಜಾರಕಿಹೊಳಿಗೆ ಅಭಿನಂದನೆ: ಎಚ್‍ಡಿಕೆ

  • ಬ್ಯಾಂಕ್ ಲಾಕರ್‌ನಲ್ಲಿ 500 ಕೋಟಿ ಮೌಲ್ಯದ ಶಿವಲಿಂಗ ಪತ್ತೆ!

    ಬ್ಯಾಂಕ್ ಲಾಕರ್‌ನಲ್ಲಿ 500 ಕೋಟಿ ಮೌಲ್ಯದ ಶಿವಲಿಂಗ ಪತ್ತೆ!

    ಚೆನ್ನೈ: ವ್ಯಕ್ತಿಯೊಬ್ಬನ ಬ್ಯಾಂಕ್ ಲಾಕರ್‌ನಲ್ಲಿದ್ದ 500 ಕೋಟಿ ರೂ. ಮೌಲ್ಯದ ಶಿವಲಿಂಗವನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಎಸ್. ಅರುಣ ಭಾಸ್ಕರ್‌ರನ್ನು ವಿಚಾರಣೆ ನಡೆಸಲಾಗುತ್ತಿದೆ. ಅರುಣ ಭಾಸ್ಕರ್ ತಂದೆ ಎನ್.ಎ.ಸಾಮಿಯ್ಯಪ್ಪನ್ ಹೆಸರಲ್ಲಿರುವ ಬ್ಯಾಂಕ್ ಲಾಕರ್‌ನಲ್ಲಿ ಪಚ್ಚೆ ಹಾಗೂ ಹರಳುಯುಕ್ತ ಶಿವಲಿಂಗ ದೊರೆತಿದೆ.

    POLICE JEEP

    ದೇಗುಲಗಳ ಹಳೆಯ ವಿಗ್ರಹಗಳನ್ನು ಕದ್ದು, ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ದೊರೆತ್ತಿತ್ತು. ಅದರ ಆಧಾರದ ಮೇಲೆ ಹೆಚ್ಚುವರಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ರಾಜಾರಾಮ್ ಮತ್ತು ಅಧಿಕಾರಿಗಳು ನಗರದ ಮನೆಯೊಂದರ ಮೇಲೆ ದಾಳಿ ನಡೆಸಿದ್ದರು. ಇದನ್ನೂ ಓದಿ:  8 ಲಕ್ಷಕ್ಕೆ ಹೆಣ್ಣು ಮಕ್ಕಳನ್ನು ಮಾರಾಟ ಮಾಡಿದ ತಂದೆ ಅರೆಸ್ಟ್

    ಈ ಸಂದರ್ಭದಲ್ಲಿ ಅರುಣ ಭಾಸ್ಕರ್ ತಂದೆ ಎನ್.ಎ.ಸಾಮಿಯ್ಯಪ್ಪನ್ ಹೆಸರಿನಲ್ಲಿ ಬ್ಯಾಂಕ್ ಲಾಕರ್‌ನಲ್ಲಿ 500 ಕೋಟಿ ರೂ. ಮೌಲ್ಯದ ಶಿವಲಿಂಗ ಇರುವ ಮಾಹಿತಿ ದೊರೆತಿದೆ. ಶಿವಲಿಂಗಕ್ಕೆ ಯಾವುದೇ ಅಧಿಕೃತ ದಾಖಲೆ ಇಲ್ಲದ ಕಾರಣ ಲಿಂಗವನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ವಸಿಷ್ಠರೂ ಅಲ್ಲ, ವಿಶ್ವಾಮಿತ್ರನೂ ಅಲ್ಲ: ಸಿ.ಟಿ.ರವಿ

    ಶಿವಲಿಂಗವು 8 ಸೆ.ಮೀ. ಉದ್ದ, 500 ಗ್ರಾಂ ಭಾರವಿದೆ. ತಿರುವರೂರ್ ಜಿಲ್ಲೆಯ ತಿರುಕ್ಕುವಲೈ ಎಂಬಲ್ಲಿರುವ ಶಿವಲಿಂಗವೊಂದು ಕಳವಾಗಿತ್ತು. ಪತ್ತೆಯಾಗಿರುವ ಶಿವಲಿಂಗ ಆ ದೇಗುಲದ್ದೇ ಎಂದು ಪೊಲೀಸರು ಶಂಕಿಸಿದ್ದಾರೆ.

  • ರಾವತ್ ಇದ್ದ ಹೆಲಿಕಾಪ್ಟರ್ ಪತನದ ತನಿಖಾ ವರದಿ ಮುಂದಿನ ವಾರ ಸಲ್ಲಿಕೆ?

    ರಾವತ್ ಇದ್ದ ಹೆಲಿಕಾಪ್ಟರ್ ಪತನದ ತನಿಖಾ ವರದಿ ಮುಂದಿನ ವಾರ ಸಲ್ಲಿಕೆ?

    ನವದೆಹಲಿ: ಇತ್ತೀಚೆಗಷ್ಟೇ ಹುತಾತ್ಮರಾದ ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಅವರಿದ್ದ ಹೆಲಿಕಾಪ್ಟರ್ ಪತನದ ತನಿಖಾ ವರದಿಯನ್ನು ಮುಂದಿನ ವಾರ ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆಯಿದೆ.

    ಡಿ.8ರಂದು ತಮಿಳುನಾಡಿನ ಕುನೂರಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರ್ಘಟನೆಯಲ್ಲಿ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿ 13 ಮಂದಿ ಹುತಾತ್ಮರಾಗಿದ್ದರು. ರಾವತ್ ಅವರು ಕೊಯಮತ್ತೂರು ಬಳಿಯ ಸೂಲೂರಿನಿಂದ ವೆಲ್ಲಿಂಗ್ಟನ್‌ನಲ್ಲಿರುವ ಡಿಫೆನ್ಸ್ ಸ್ಟಾಫ್ ಕಾಲೇಜಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿತ್ತು.

    ಈ ದುರಂತಕ್ಕೆ ಕಾರಣವೇನು ಎಂಬ ಪ್ರಶ್ನೆ ಹಲವರಲ್ಲಿ ಕಾಡಿತ್ತು. ಈ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ಪತನಕ್ಕೆ ಕಾರಣ ತಿಳಿಯಲು ರಕ್ಷಣಾ ಸಚಿವಾಲಯ ತ್ರಿಸೇವಾ ತನಿಖೆಗೆ ಆದೇಶಿಸಿತ್ತು. ಕೂನೂರಿನಲ್ಲಿ ಸಂಭವಿಸಿದ್ದ ಸೇನಾ ಹೆಲಿಕಾಪ್ಟರ್ ದುರಂತದ ಬಗ್ಗೆ ಸೇನಾ ಪಡೆಗಳ 3 ವಿಭಾಗಗಳ ತಜ್ಞರನ್ನು ಒಳಗೊಂಡ ಸಮಿತಿ ತನಿಖೆ ನಡೆಸಿತ್ತು.

    ಏರ್ ಮಾರ್ಷಲ್ ಮಾನವೇಂದ್ರ ಸಿಂಗ್ ಈ ತಂಡದ ನೇತೃತ್ವ ವಹಿಸಿದ್ದರು. ಅವರು ಐಎಎಫ್‌ನ ತರಬೇತಿ ಕಮಾಂಡರ್‌ನ ಕಮಾಂಡರ್ ಮತ್ತು ಸ್ವತಃ ಚಾಪರ್ ಪೈಲಟ್ ಆಗಿದ್ದಾರೆ. ಅವರ ಜೊತೆ ಭಾರತೀಯ ಸೇನೆ ಮತ್ತು ನೌಕಾಪಡೆಯ ಇಬ್ಬರು ಬ್ರಿಗೇಡಿಯರ್ ಶ್ರೇಣಿಯ ಅಧಿಕಾರಿಗಳು ತನಿಖೆಯಲ್ಲಿ ಸಹಾಯಕರಾಗಿದ್ದಾರೆ. ಇದನ್ನೂ ಓದಿ:  ಬಿಹಾರ್‌ ಸಿಎಂ ಪುತ್ರ ತನ್ನ ತಂದೆಗಿಂತಲೂ 5 ಪಟ್ಟು ಹೆಚ್ಚು ಶ್ರೀಮಂತ

    ಹೆಲಿಕಾಪ್ಟರ್ ಪತನಕ್ಕೆ ಲ್ಯಾಂಡಿಂಗ್ ಆಗುವ ವೇಳೆ ಸಿಬ್ಬಂದಿ ದಿಗ್ಭ್ರಮೆಗೆ ಸಿಲುಕಿದ್ದು ಸೇರಿದಂತೆ ಎಲ್ಲಾ ಆಯಾಮಗಳಲ್ಲೂ ತನಿಖೆ ಕೈಗೊಳ್ಳಲಾಗಿದೆ. ಹೆಲಿಕಾಪ್ಟರ್‌ನ ಬ್ಲ್ಯಾಕ್ ಬಾಕ್ಸ್ ನಲ್ಲಿ ಕಾಕ್‌ಪಿಟ್ ಧ್ವನಿ ರೆಕಾರ್ಡ್ ಮತ್ತು ಫ್ಲೈಟ್ ಡಾಟಾ ರೆಕಾರ್ಡ್ ಗಳನ್ನೆಲ್ಲಾ ಪರಿಶೀಲಿಸಲಾಗಿದೆ. ಇದನ್ನೂ ಓದಿ: New Year – ಪಾಕಿಸ್ತಾನ, ಚೀನಾ ಸೈನಿಕರಿಗೆ ಸಿಹಿ ಹಂಚಿ ವಿಶ್‌ ಮಾಡಿದ ಭಾರತೀಯ ಯೋಧರು

    ತನಿಖೆಯ ಎಲ್ಲಾ ವರದಿ ಅಂತಿಮ ಘಟ್ಟದಲ್ಲಿದೆ. ಹೀಗಾಗಿ ಮುಂದಿನ ವಾರ ಎಲ್ಲಾ ಅಂಶಗಳನ್ನು ಒಳಗೊಂಡ ಬೃಹತ್ ಗಾತ್ರದ ತನಿಖಾ ವರದಿ ವಾಯುಪಡೆ ಮುಖ್ಯ ಕಚೇರಿಗೆ ಸಲ್ಲಿಕೆ ಆಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.