Tag: Tangalan

  • ವಿಕ್ರಮ್ ನಟನೆಯ ‘ತಂಗಲಾನ್’ ಚಿತ್ರದ ರಿಲೀಸ್ ಡೇಟ್ ಫಿಕ್ಸ್

    ವಿಕ್ರಮ್ ನಟನೆಯ ‘ತಂಗಲಾನ್’ ಚಿತ್ರದ ರಿಲೀಸ್ ಡೇಟ್ ಫಿಕ್ಸ್

    ಸ್ಟ್ ಲುಕ್ ನಿಂದಾಗಿ ಸಖತ್ ಕ್ಯೂರಿಯಾಸಿಟಿ ಕ್ರಿಯೇಟ್ ಮಾಡಿರುವ ತಂಗಲಾನ್ (Tangalan) ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇದೇ ಏಪ್ರಿಲ್ ನಲ್ಲಿ ತಮ್ಮ ಚಿತ್ರವನ್ನು ವಿಶ್ವದಾದ್ಯಂತ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಚಿಯಾನ್ ವಿಕ್ರಮ್ (Vikram) ಹಾಗೂ ಪ.ರಂಜಿತ್  (Pa. Ranjith)ಕಾಂಬಿನೇಷನ್ ಚಿತ್ರವಿದು.

    ರಜನಿಕಾಂತ್ ಅಭಿನಯದ ಕಬಾಲಿ, ಕಾಲ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದ ಪ. ರಂಜಿತ್ ಈ ಬಾರಿ ಕೋಲಾರ ಗೋಲ್ಡ್ ಫೀಲ್ಡ್ ಹಿನ್ನೆಲೆಯ ಕಥೆಯನ್ನು ಈ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರೆ.

    ಈ ಚಿತ್ರದಲ್ಲಿ ವಿಕ್ರಮ್ ಜೊತೆಗೆ ಪಾರ್ವತಿ, ಮಾಳವಿಕಾ ಮೋಹನನ್, ಪಶುಪತಿ, ಹರಿಕೃಷ್ಣನ್, ಅನ್ಬುದುರೈ ಮುಂತಾದ ಪ್ರತಿಭಾವಂತ ಕಲಾವಿದರ ದಂಡೇ ಇದೆ. ಈ ಚಿತ್ರಕ್ಕೆ ಎ. ಕಿಶೋರ್ ಛಾಯಾಗ್ರಹಣ ಮಾಡುತ್ತಿದ್ದು, ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ಸಂಯೋಜಿಸುತ್ತಿದ್ದಾರೆ. ಪ. ರಂಜಿತ್ ಅವರೇ ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದಿದ್ದು ಅವರಿಗೆ ಬರವಣಿಗೆಯಲ್ಲಿ ತಮಿಳ್ ಪ್ರಭಾ ಸಹಾಯ ಮಾಡಿದ್ದಾರೆ. ಎಸ್.ಎಸ್. ಮೂರ್ತಿ ಕಲಾನಿರ್ದೇಶನ ಮತ್ತು ಆರ್.ಕೆ. ಸೆಲ್ವಾ ಅವರ ಸಂಕಲನವಿದೆ.

     

    ಕೆಜಿಎಫ್ ಹಿನ್ನೆಲೆಯಲ್ಲಿ ಸಾಗುವ ಈ ಆಕ್ಷನ್ ಚಿತ್ರವನ್ನು ಸ್ಟುಡಿಯೋ ಗ್ರೀನ್ ಸಂಸ್ಥೆಯಡಿ ಕೆ.ಇ. ಜ್ನಾನವೇಲ್ ರಾಜ ನಿರ್ಮಿಸುತ್ತಿದ್ದಾರೆ. ದೊಡ್ಡ ಬಜೆಟ್ನಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ನಿರ್ಮಾಣದಲ್ಲಿ ಪ. ರಂಜಿತ್ ಅವರ ನೀಲಂ ಪ್ರೊಡಕ್ಷನ್ಸ್ ಸಹ ಕೈಜೋಡಿಸಿದೆ.

  • ಪಕ್ಕೆಲುಬು ಮುರಿದುಕೊಂಡ ವಿಕ್ರಮ್ : ಶಸ್ತ್ರ ಚಿಕಿತ್ಸೆಗೆ ಸೂಚಿಸಿದ ವೈದ್ಯರು

    ಪಕ್ಕೆಲುಬು ಮುರಿದುಕೊಂಡ ವಿಕ್ರಮ್ : ಶಸ್ತ್ರ ಚಿಕಿತ್ಸೆಗೆ ಸೂಚಿಸಿದ ವೈದ್ಯರು

    ಮಿಳಿನ ಸ್ಟಾರ್ ನಟ ಚಿಯಾನ್ ವಿಕ್ರಮ್ (Chiyaan Vikram) ನಿನ್ನೆಯಷ್ಟೇ ಸಾಹಸ ಸನ್ನಿವೇಶದ ರಿಹರ್ಸಲ್ ವೇಳೆ ಪಕ್ಕೆಲುಬು (Ribs) ಮುರಿದುಕೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆಯಿಂದ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಶಸ್ತ್ರ ಚಿಕಿತ್ಸೆ (Surgery) ಮಾಡಿಸಿಕೊಳ್ಳುವಂತೆ ಸೂಚಿಸಿದ್ದಾರೆ ಎಂದು ವರದಿ ಆಗಿದೆ.

    ‘ಪೊನ್ನಿಯಿನ್ ಸೆಲ್ವನ್ 2’ (Ponniyin Selvan 2) ಸಿನಿಮಾದ ಪ್ರಚಾರ ಮುಗಿಸಿ ಮತ್ತೆ ಹೊಸ ಸಿನಿಮಾದ ಚಿತ್ರೀಕರಣಕ್ಕೆ ವಿಕ್ರಮ್ ರೆಡಿಯಾಗುತ್ತಿದ್ದರು. ಸದ್ಯ ಅವರು ‘ತಂಗಲಾನ್’ (Thangalaan Film) ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಸಿನಿಮಾದ ರಿಹರ್ಸಲ್ ವೇಳೆ ಬಿದ್ದು ವಿಕ್ರಮ್ ಪಕ್ಕೆಲುಬಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ನಟಿ ಮೇಘನಾ ರಾಜ್ ಹುಟ್ಟು ಹಬ್ಬಕ್ಕೆ ತತ್ಸಮ ತದ್ಭವ ಪೋಸ್ಟರ್ ರಿಲೀಸ್

    ‘ತಂಗಲಾನ್’ ಸಿನಿಮಾದ ರಿಹರ್ಸಲ್ ವೇಳೆ ವಿಕ್ರಮ್‌ಗೆ ಗಾಯಗಳಾಗಿರೋದ್ರಿಂದ ಶೂಟಿಂಗ್ ನಿಲ್ಲಿಸಲಾಗಿದೆ. ಅವರು ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕೆ ಮತ್ತೆ ಶೂಟಿಂಗ್ ಶುರುವಾಗುತ್ತದೆ. ಈ ಹಿಂದೆ ಕೂಡ ಇದೇ ಸಿನಿಮಾ ಸೆಟ್‌ನಲ್ಲಿ ವಿಕ್ರಮ್‌ಗೆ ಪೆಟ್ಟಾಗಿ ಕೆಲವು ದಿನಗಳ ಕಾಲ ಶೂಟಿಂಗ್ ನಿಂತಿತ್ತು. ಇದರಿಂದ ವಿಕ್ರಮ್ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ವಿಕ್ರಮ್ ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಪ್ರಸ್ತುತ ವಿಕ್ರಮ್‌ಗೆ ಆಸ್ಪತ್ರೆಯಲ್ಲೇ ಇದ್ದಾರೆ.

    ಕೋಲಾರ ಚಿನ್ನದ ಗಣಿಯ ಕಾರ್ಮಿಕರ ಸುತ್ತಾ ‘ತಂಗಲಾನ್’ ಸಿನಿಮಾ ಮೂಡಿ ಬರ್ತಿದೆ. ನಿರ್ದೇಶಕ ಪಾ.ರಂಜಿತ್ ಕೋಲಾರದಲ್ಲಿ ನಡೆದ ನಿಜವಾದ ಘಟನೆಗಳನ್ನು ಆಧರಿಸಿ, ಆ ಬಗ್ಗೆ ಸಂಶೋಧನೆ ನಡೆಸಿ ಸಿನಿಮಾ ಮಾಡುತ್ತಿರುವುದಾಗಿ ಹೇಳಿದ್ದಾರೆ. ನೂರು ವರ್ಷಗಳ ಹಿಂದೆ ಅಲ್ಲಿನ ಗಣಿ ಕಾರ್ಮಿಕರ ಪರಿಸ್ಥಿತಿ ಹೇಗಿತ್ತು ಎನ್ನುವುದರ ಹಿನ್ನೆಲೆಯಲ್ಲಿ ಕಥೆ ಸಾಗಲಿದೆ.

  • ನಟ ವಿಕ್ರಮ್ ಹಾಗೂ ನಿರ್ದೇಶಕ ಪ.ರಂಜಿತ್ ಸಿನಿಮಾಗೆ ಟೈಟಲ್ ಫಿಕ್ಸ್: ಇದು ಕೆಜಿಎಫ್ ಕಥೆ

    ನಟ ವಿಕ್ರಮ್ ಹಾಗೂ ನಿರ್ದೇಶಕ ಪ.ರಂಜಿತ್ ಸಿನಿಮಾಗೆ ಟೈಟಲ್ ಫಿಕ್ಸ್: ಇದು ಕೆಜಿಎಫ್ ಕಥೆ

    ಚಿಯಾನ್ ವಿಕ್ರಮ್ (Vikram) ಅಭಿನಯದ, ಪ. ರಂಜಿತ್ (P. Ranjith) ನಿರ್ದೇಶನದ ಹೊಸ ಚಿತ್ರಕ್ಕೆ ಕೊನೆಗೂ ಟೈಟಲ್ ಸಿಕ್ಕಿದೆ. ಈ ಚಿತ್ರಕ್ಕೆ ‘ತಂಗಲಾನ್’ ಎಂದು ನಾಮಕರಣ ಮಾಡಲಾಗಿದ್ದು, ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ. ಈ ಹಿಂದೆ ರಜನಿಕಾಂತ್ ಅಭಿನಯದ ಕಬಾಲಿ, ಕಾಲ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದ ಪ. ರಂಜಿತ್, ವಿಕ್ರಮ್ ಅಭಿನಯದಲ್ಲಿ ಕೋಲಾರ ಗೋಲ್ಡ್ ಫೀಲ್ಡ್ ಹಿನ್ನೆಲೆಯಲ್ಲಿ ಒಂದು ಚಿತ್ರ ಮಾಡುತ್ತಾರೆ ಎಂಬ ಸುದ್ದಿ ಇತ್ತು. ಈ ಚಿತ್ರ ಈಗ ಅಧಿಕೃತವಾಗಿರುವುದಷ್ಟೇ ಅಲ್ಲ, ಸೋಮವಾರ ದೀಪಾವಳಿ ಹಬ್ಬದ ಪ್ರಯುಕ್ತ ಚಿತ್ರದ ಟೈಟಲ್ (Title) ಟೀಸರ್ ಸಹ ಅನಾವರಣಗೊಂಡಿದೆ.

    ‘ತಂಗಲಾನ್’ (Tangalan) ಚಿತ್ರದಲ್ಲಿ ವಿಕ್ರಮ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಹಬ್ಬದ ದಿನ ಅವರ ಚಿತ್ರವೊಂದರ ಟೀಸರ್ ಬಿಡುಗಡೆಯಾಗಿದ್ದು ಅಭಿಮಾನಿಗಳಲ್ಲಿ ಸಂತಸ ತಂದಿದೆ. ಈ ಚಿತ್ರದಲ್ಲಿ ವಿಕ್ರಮ್ ಜೊತೆಗೆ ಪಾರ್ವತಿ, ಮಾಳವಿಕಾ ಮೋಹನನ್, ಪಶುಪತಿ, ಹರಿಕೃಷ್ಣನ್, ಅನ್ಬುದುರೈ ಮುಂತಾದ ಪ್ರತಿಭಾವಂತ ಕಲಾವಿದರ ದಂಡೇ ಇದೆ. ಈ ಚಿತ್ರಕ್ಕೆ ಎ. ಕಿಶೋರ್ ಛಾಯಾಗ್ರಹಣ ಮಾಡುತ್ತಿದ್ದು, ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ಸಂಯೋಜಿಸುತ್ತಿದ್ದಾರೆ. ಪ. ರಂಜಿತ್ ಅವರೇ ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದಿದ್ದು ಅವರಿಗೆ ಬರವಣಿಗೆಯಲ್ಲಿ ತಮಿಳ್ ಪ್ರಭಾ ಸಹಾಯ ಮಾಡಿದ್ದಾರೆ. ಎಸ್.ಎಸ್. ಮೂರ್ತಿ ಕಲಾನಿರ್ದೇಶನ ಮತ್ತು ಆರ್.ಕೆ. ಸೆಲ್ವಾ ಅವರ ಸಂಕಲನವಿದೆ. ಇದನ್ನೂ ಓದಿ: ಹಿಂದುತ್ವದಲ್ಲೇ ಬ್ರಾಹ್ಮಣತ್ವವಿದೆ; ಪಬ್ಲಿಸಿಟಿಗೋಸ್ಕರ ನಟ ಚೇತನ್ ವಿವಾದಿತ ಹೇಳಿಕೆ – ಪೇಜಾವರ ಶ್ರೀ

    ಕೆಜಿಎಫ್ ಹಿನ್ನೆಲೆಯಲ್ಲಿ ಸಾಗುವ ಈ ಆಕ್ಷನ್ ಚಿತ್ರವನ್ನು ಸ್ಟುಡಿಯೋ ಗ್ರೀನ್ ಸಂಸ್ಥೆಯಡಿ ಕೆ.ಇ. ಜ್ನಾನವೇಲ್ ರಾಜ ನಿರ್ಮಿಸುತ್ತಿದ್ದಾರೆ. ದೊಡ್ಡ ಬಜೆಟ್ನಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ನಿರ್ಮಾಣದಲ್ಲಿ ಪ. ರಂಜಿತ್ ಅವರ ನೀಲಂ ಪ್ರೊಡಕ್ಷನ್ಸ್ ಸಹ ಕೈಜೋಡಿಸಿದೆ.

    Live Tv
    [brid partner=56869869 player=32851 video=960834 autoplay=true]