ಜೈಪುರ: ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು (LPG cylinders) ತುಂಬಿದ್ದ ಟ್ರಕ್‌ಗೆ (Truck), ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಭಾರೀ ಸ್ಫೋಟ ಸಂಭವಿಸಿರುವ ಘಟನೆ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ (Jaipur-Ajmer highway) ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಏಳು ವಾಹನಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡು, ನಂತರ ಗ್ಯಾಸ್ ಸಿಲಿಂಡರ್‌ಗಳು ಒಂದರ ನಂತರ ಒಂದರಂತೆ ಸರಣಿ ಸ್ಫೋಟಗೊಂಡಿದೆ. ಸ್ಫೋಟದ ಸದ್ದು ಕಿಲೋಮೀಟರ್ ಉದ್ದಕ್ಕೂ ಕೇಳಿಸಿದ್ದು, ಬೆಂಕಿಯ ಜ್ವಾಲೆಯು ಹತ್ತು ಕಿ.ಮೀ ದೂರಕ್ಕೂ ಕಾಣಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೂಡಲೇ ಅಗ್ನಿಶಾಮಕ ದಳ ಧಾವಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.
ಹಾಸನ: ಗ್ಯಾಸ್ ಟ್ಯಾಂಕರ್‌ಗೆ (Gas Tanker) ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಮೂವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅದರಲ್ಲಿ ಹದಿನೈದು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ (Hassan) ಜಿಲ್ಲೆ ಸಕಲೇಶಪುರ (Sakleshpura) ತಾಲೂಕಿನ ಮಾರನಹಳ್ಳಿ ಬಳಿ ನಡೆದಿದೆ.
ಚಿಂತಾಮಣಿ ಡಿಪೋದ ಸಾರಿಗೆ ಬಸ್ ಚಿಕ್ಕಬಳ್ಳಾಪುರದಿಂದ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಓವರ್‌ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಎಂಬಿಎ, ಎಂಸಿಎ ಪ್ರವೇಶಕ್ಕೆ ಭಾನುವಾರ ಪರೀಕ್ಷೆ- ಸಿದ್ಧತೆ ಪೂರ್ಣ: ಕೆಇಎ
ಗಂಭೀರವಾಗಿ ಗಾಯಗೊಂಡವರನ್ನು ಹಾಸನ ಹಾಗೂ ಮಂಗಳೂರು ಆಸ್ಪತ್ರೆಗೆ ಅಂಬುಲೆನ್ಸ್ ಮೂಲಕ ರವಾನಿಸಲಾಗಿದೆ. ಉಳಿದ ಗಾಯಾಳುಗಳು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಹಣ ಪಡೆದಿದ್ದು ನಿಜ, ಅದು ಟ್ಯಾಕ್ಸ್, ಅಭಿವೃದ್ಧಿ ಹಣ: ಲಂಚ ಆರೋಪಕ್ಕೆ ಕಮಲನಗರ ಪಿಡಿಓ ಸ್ಪಷ್ಟನೆ
ಬೆಳಗಾವಿ: ರಸ್ತೆಯಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಟ್ಯಾಂಕರ್ (Tanker) ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು (Kittur) ತಾಲೂಕಿನ ಇಟಗಿ ಕ್ರಾಸ್‌ನಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ-4 ಪುಣೆ ಬೆಂಗಳೂರು ರಸ್ತೆಯಲ್ಲಿ ದುರಂತ ಸಂಭವಿಸಿದೆ. ಕಲಬುರಗಿಯಿಂದ ಕೆಲಸಕ್ಕೆಂದು ಬೆಳಗಾವಿಗೆ ಬಂದಿದ್ದ ಕಾರ್ಮಿಕರು ಪುಣೆ ಬೆಂಗಳೂರು ಹೆದ್ದಾರಿಯಲ್ಲಿ ರಸ್ತೆ ರಿಪೇರಿ ಮಾಡುತ್ತಿದ್ದರು. ಈ ವೇಳೆ ಟ್ಯಾಂಕರ್ ಹರಿದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ನೆರವು ಕೇಂದ್ರದ ಬಳಿ ಇಸ್ರೇಲಿ ಪಡೆಗಳಿಂದ ಗುಂಡಿನ ದಾಳಿ – 26 ಮಂದಿ ಪ್ಯಾಲೆಸ್ಟೀನಿಯನ್ನರು ಸಾವು
ಅಪಘಾತದಲ್ಲಿ ಕಲಬುರಗಿ ಜಿಲ್ಲೆಯ ರಾಮನ್ನ, ಮಹೇಶ್, ರಾಮಚಂದ್ರ ಎಂಬವರು ಮೃತಪಟ್ಟಿದ್ದಾರೆ. ಲಕ್ಷ್ಮೀಬಾಯಿ, ಅನುಶ್ರೀ, ಭೀಮಾಬಾಯಿ ಗಂಭೀರ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಭೀಮಾಬಾಯಿಯ ಎರಡು ಕಾಲುಗಳು ಕಟ್ ಆಗಿದ್ದು, ಚಿಕಿತ್ಸೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಆಯಿಲ್ ತುಂಬಿದ್ದ ಟ್ಯಾಂಕರ್ ಕಾಮಿಕರ ಮೇಲೆ ಹರಿದು ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾಗಿದೆ. ಟ್ಯಾಂಕರ್‌ನಲ್ಲಿ ಸಿಲುಕಿದ್ದ ಚಾಲಕನನ್ನು ಪೊಲೀಸರು ಹೊರತೆಗೆದಿದ್ದಾರೆ. ಇದನ್ನೂ ಓದಿ: ಹಟ್ಟಿ ಚಿನ್ನದಗಣಿ | 2,800 ಅಡಿ ಆಳದಲ್ಲಿ ಏರ್ ಬ್ಲಾಸ್ಟ್ – ಕಾರ್ಮಿಕ ದುರ್ಮರಣ
ಘಟನೆ ಕುರಿತು ಗಾಯಾಳು ಲಕ್ಷ್ಮೀಬಾಯಿ ಮಾಧ್ಯಮಗಳೊಂದಿಗೆ ಮಾತನಾಡಿ, ನಾವು ಹೆದ್ದಾರಿ ಕೆಲಸಕ್ಕೆಂದು ಕಳೆದ ಏಳು ತಿಂಗಳ ಹಿಂದೆ ಬಂದಿದ್ದೆವು. ಇಂದು ರವಿವಾರವಿದ್ದ ಕಾರಣ ಮಧ್ಯಾಹ್ನವೇ ಕೆಲಸ ಮುಗಿಸಿಕೊಂಡು ಹೊರಟಿದ್ದೆವು. ಲಾರಿ ಚಾಲಕ ಫೋನ್‌ನಲ್ಲಿ ಮಾತನಾಡಿಕೊಂಡು ಡ್ರೈವಿಂಗ್ ಮಾಡುತ್ತಿದ್ದ. ಕೈ ಮಾಡಿದರೂ ಸಹ ನೋಡದೇ ಎಲ್ಲರ ಮೇಲೂ ಲಾರಿ ಹರಿಸಿದ. ನಾವು ಒಟ್ಟು ಆರು ಜನ ಇದ್ದೆವು. ಘಟನೆಯಲ್ಲಿ ನನ್ನ ಪತಿ ಹಾಗೂ ಮಗ ತೀರಿ ಹೋದರು. ನಮ್ಮ ಕುಟುಂಬಕ್ಕೆ ಇನ್ಯಾರು ದಿಕ್ಕು ಎಂದು ಕಣ್ಣೀರು ಹಾಕಿದರು. ಇದನ್ನೂ ಓದಿ: ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ಸುಧಾರಾಣಿ
ಚಿತ್ರದುರ್ಗ: ಶಾರ್ಟ್ ಸರ್ಕ್ಯೂಟ್‌ನಿಂದ (Short Circuit) ಸ್ಪಿರಿಟ್ ತರಲು ತೆರಳುತ್ತಿದ್ದ ಟ್ಯಾಂಕರ್‌ಗೆ (Tanker) ಬೆಂಕಿ ಹತ್ತಿಕೊಂಡು ಧಗಧಗನೇ ಹೊತ್ತಿ ಉರಿದ ಘಟನೆ ಚಿತ್ರದುರ್ಗದ (Chitradurga) ಸರೋಜಬಾಯಿ ಕಲ್ಯಾಣ ಮಂಟಪದ ಬಳಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಟ್ಯಾಂಕರ್ ಚಿತ್ರದುರ್ಗದಿಂದ ಬೆಳಗಾವಿಗೆ ಸ್ಪಿರಿಟ್ ತರುವ ಸಲುವಾಗಿ ತೆರಳುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಉಂಟಾಗಿಲ್ಲ. ಘಟನೆ ವೇಳೆ ಟ್ಯಾಂಕರ್‌ನಲ್ಲಿದ್ದ ಚಾಲಕ, ನಿರ್ವಾಹಕ ಬೆಂಕಿಯಿಂದ ಪಾರಾಗಿದ್ದಾರೆ. ಘಟನೆಯ ಪರಿಣಾಮ ಟ್ಯಾಂಕರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆ ಕೊಡಬೇಕು: ಜೈರಾಮ್ ರಮೇಶ್ ಆಗ್ರಹ
ತುಮಕೂರು: ಡೀಸೆಲ್ ಟ್ಯಾಂಕರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಗಂಭೀರ ಗಾಯಗೊಂಡಿರುವ ಘಟನೆ ತುಮಕೂರು (Tumakuru) ಜಿಲ್ಲೆಯಲ್ಲಿ ನಡೆದಿದೆ.
ಕುಣಿಗಲ್ (Kunigal) ತಾಲ್ಲೂಕಿನ ಹುಲಿಯೂರುದುರ್ಗ ಬಳಿಯ ರಾಜ್ಯ ಹೆದ್ದಾರಿ 33ರಲ್ಲಿರುವ ದೊಡ್ಡಮಾವತ್ತೂರು ಟೋಲ್ ಬಳಿ ಅಪಘಾತ ಸಂಭವಿಸಿದೆ. ಕುಣಿಗಲ್ ಕಡೆಯಿಂದ ಮದ್ದೂರು ಕಡೆಗೆ ತೆರಳುತ್ತಿದ್ದ ಟೈಲ್ಸ್ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮದ್ದೂರು ಕಡೆಯಿಂದ ಕುಣಿಗಲ್ ಕಡೆಗೆ ಬರುತ್ತಿದ್ದ ಡೀಸೆಲ್ ತುಂಬಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದೊಡ್ಡಮಾವತ್ತೂರು ಟೋಲ್‌ಗೆ ಗುದ್ದಿ ಸಿಬ್ಬಂದಿ ವಿಶ್ರಾಂತಿ ಕೊಠಡಿಗೆ ಲಾರಿ ನುಗ್ಗಿದ್ದು, ಟೋಲ್ ಸಂಪೂರ್ಣ ಜಖಂ ಆಗಿದೆ. ಇದನ್ನೂ ಓದಿ: ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ
ಡೀಸೆಲ್ ಟ್ಯಾಂಕರ್ ಚಾಲಕ ಹಾಗೂ ಇಬ್ಬರು ಟೋಲ್ ಸಿಬ್ಬಂದಿಗೆ ಗಂಭೀರ ಗಾಯವಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಮೃತೂರು ಪೊಲೀಸರು, ಹುಲಿಯೂರುದುರ್ಗ ಪೊಲೀಸರು, ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸಿಬ್ಬಂದಿಗಳು ಧಾವಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಅಪರಾಧಿಗಳ ಮೇಲುಗೈ, ರಾಜ್ಯ ಪೊಲೀಸರಿಗೆ ಸತ್ವ ಇಲ್ಲ: ಶೋಭಾ ಕರಂದ್ಲಾಜೆ
ಡಿಸೇಲ್ ತುಂಬಿದ್ದ ಟ್ಯಾಂಕರ್ ಅನಾಹುತ ಆಗದಂತೆ ನೋಡಿಕೊಂಡಿದ್ದಾರೆ. ಮೂರು ಕ್ರೇನ್‌ಗಳ ಮೂಲಕ ವಾಹನಗಳನ್ನು ಮೇಲೆತ್ತಿದ್ದು, ವಾಹನಗಳ ಓಡಾಟಕ್ಕೆ ಪೊಲೀಸರು ಅವಕಾಶ ಮಾಡಿಕೊಟ್ಟಿದ್ದಾರೆ. ಗಾಯಾಳುಗಳು ಕುಣಿಗಲ್ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಯಾದಗಿರಿ| ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ
ಚಂಡೀಗಢ: ಪಂಜಾಬ್‌ನ ಲೂಧಿಯಾನದಲ್ಲಿ (Punjab’s Ludhiana) ಫ್ಲೈಓವರ್ ಮೇಲೆ ಬೆಂಕಿಯ ಕೆನ್ನಾಲಿಗೆ ಧಗಧಗಿಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಖತ್ ವೈರಲ್ ಆಗುತ್ತಿದೆ.
ಲೂಧಿಯಾನದ ಖನ್ನಾ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಯಿಲ್ ತುಂಬಿ ಹೊರಟಿದ್ದ ಟ್ಯಾಂಕರ್ (Oil Tanker) ಫ್ಲೈಓವರ್‌ನ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಪರಿಣಾಮ ಬೆಂಕಿ ಹೊತ್ತಿ ಉರಿದಿದೆ.
ಘಟನೆಯ ಹಿನ್ನೆಲೆಯಲ್ಲಿ ಕೆಲ ಕಾಲ ಆ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಇನ್ನು ಫ್ಲೈಓವರ್‌ನಲ್ಲಿ ಬೆಂಕಿಯ ಕೆನ್ನಾಲಿಗೆ ಆಕಾಶದೆತ್ತರಕ್ಕೆ ಹೊತ್ತಿ ಉರಿಯುತ್ತಿದ್ದರೆ,ಇದರ ಕೆಳಗೆ ವಾಹನಗಳು ಚಲಿಸುತ್ತಿದ್ದವು. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳ ಬಗ್ಗೆ ವರದಿಯಾಗಿಲ್ಲ. ಇದನ್ನೂ ಓದಿ: ಮಕ್ಕಳು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದ ಮಾಲೀಕ
#WATCH | Punjab: A massive fire broke out in Khanna, Ludhiana after an oil tanker hit a divider and overturned. pic.twitter.com/JrPrKVNmaQ
ಘಟನೆಯ ಫೋಟೋಗಳು ಮತ್ತು ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿವೆ. ಘಟನೆಯ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಹರಸಾಹಸಪಟ್ಟಿದ್ದಾರೆ. ಈ ಮೂಲಕ ಭಾರೀ ಅನಾಹುತವನ್ನು ತಡೆಯಲು ಪ್ರಯತ್ನಿಸಿವೆ.
ವಿಜಯನಗರ: ಅಡುಗೆ ಎಣ್ಣೆ (Cooking Oil) ತುಂಬಿದ ಟ್ಯಾಂಕರ್ ಪಲ್ಟಿಯಾದ (Tanker Overturn) ಹಿನ್ನೆಲೆಯಲ್ಲಿ ಅದರಲ್ಲಿದ್ದ ಅಡುಗೆ ಎಣ್ಣೆ ಒಯ್ಯಲು ಜನ ಮುಗಿಬಿದ್ದಿರುವ ಘಟನೆ ವಿಜಯನಗರ (Vijayanagar) ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಬಳಿ ನಡೆದಿದೆ.
ಭಾನುವಾರ ಬೆಳಗ್ಗಿನ ಜಾವ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿಯಾಗಿದೆ. ಜನರು ಮೊದಲು ಇದು ಪೆಟ್ರೋಲ್ ತುಂಬಿದ ಟ್ಯಾಂಕರ್ ಎಂದುಕೊಂಡು ಹತ್ತಿರ ಹೋಗಲು ಹೆದರಿದ್ದರು. ಬಳಿಕ ಟ್ಯಾಂಕರ್‌ನಲ್ಲಿದ್ದ ಎಣ್ಣೆ ಕೆಳಗೆ ಚೆಲ್ಲಿದ್ದು, ಅದು ಅಡುಗೆ ಎಣ್ಣೆ ಎಂಬುದು ತಿಳಿದು ಬಂದಿದೆ. ತಕ್ಷಣ ಅದನ್ನು ತೆಗೆದುಕೊಂಡು ಹೋಗಲು ಮುಗಿಬಿದಿದ್ದಾರೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ಕಾನಾಹೊಸಹಳ್ಳಿ ಪೊಲೀಸರು ಭೇಟಿ ನೀಡಿದ್ದಾರೆ. ಅಡುಗೆ ಎಣ್ಣೆ ತುಂಬಲು ಮುಂದಾಗಿದ್ದ ಜನರನ್ನು ಚದುರಿಸಿದ್ದಾರೆ. ಸದ್ಯ ಅಪಘಾತದಿಂದ ಚಾಲಕ ಹಾಗೂ ಕ್ಲೀನರ್ ಪಾರಾಗಿದ್ದಾರೆ. ಇದನ್ನೂ ಓದಿ: ನಾನು ಅಪ್ಪನ ಹೆಗಲ ಮೇಲೆ ಕೂತು ದಸರಾ ನೋಡಿದ್ದೆ: ಸಿದ್ದರಾಮಯ್ಯ
ಧಾರವಾಡ: ಬುಧವಾರ ಸಂಜೆ ಧಾರವಾಡ (Dharwad) ಬೇಲೂರು ಕೈಗಾರಿಕಾ ಪ್ರದೇಶದ ಹೈಕೋರ್ಟ್ ಪೀಠದ ಬಳಿ ಗ್ಯಾಸ್ ಟ್ಯಾಂಕರ್ (Tanker) ಲೀಕೇಜ್ ಆಗಿತ್ತು. ಇದರಿಂದ ಇಡಿ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣ ಆಗಿತ್ತು. ಗುರುವಾರ ಆ ಗ್ಯಾಸ್ ಟ್ಯಾಂಕರ್ ಲೀಕೇಜ್ ತಡೆದು, ಟ್ಯಾಂಕರ್ ಸ್ಥಳಾಂತರ ಮಾಡಲಾಗಿದ್ದು, ರಾತ್ರಿಯಿಡೀ ವಿದ್ಯುತ್ ಇಲ್ಲದೆ ಕಳೆದಿದ್ದ ಅಲ್ಲಿನ ಜನ ಈಗ ನಿಟ್ಟುಸಿರು ಬಿಡುವಂತೆ ಆಗಿದೆ.
ಧಾರವಾಡದಲ್ಲಿ ನಿರಂತರ 18 ಗಂಟೆಗಳ ಕಾಲ ಜೀವ ಕೈಯಲ್ಲಿ ಹಿಡಿದು ಕ್ಷಣ ಕ್ಷಣ ಕಳೆದಿದ್ದ ನೂರಾರು ಹಳ್ಳಿಯ ಜನ ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಂ.4ರ ಧಾರವಾಡದ ಬೇಲೂರು ಹೈಕೋರ್ಟ್ ಬಳಿಯ ಅಂಡರ್‌ಪಾಸ್‌ನಲ್ಲಿ ನಿನ್ನೆ ಹೆಚ್‌ಪಿ ಕಂಪನಿಯ ಟ್ಯಾಂಕರ್ ಸಿಲುಕಿ ಬಿಟ್ಟಿತ್ತು. ಅಂಡರ್‌ಪಾಸ್‌ನ ಮೇಲ್ಭಾಗದ ರಸ್ತೆಗೆ ತಾಗಿದ ಪರಿಣಾಮ ಗ್ಯಾಸ್ ಸೋರಿಕೆಯಾಗೋದಕ್ಕೆ ಆರಂಭವಾಗಿತ್ತು.
ಇದನ್ನು ಸಮರೋಪಾದಿಯಲ್ಲಿ ತಹಬದಿಗೆ ತರಲು ಸುಮಾರು 18 ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಬೇಕಾಯ್ತು. ಸಣ್ಣದೊಂದು ಕಿಡಿ ಹಾರಿದ್ದರು ಕೂಡಾ ದೊಡ್ಡ ಅನಾಹುತ ಸಂಭವಿಸೋ ಸಾಧ್ಯತೆ ಇತ್ತು. ಹೀಗಾಗಿ ವಿದ್ಯುತ್ ಕಡಿತಗೊಳಿಸಿ, ಜನರಿಗೆ ಯಾವುದೇ ರೀತಿಯ ಬೆಂಕಿ ಹೊತ್ತಿಸದಂತೆ ಸೂಚಿಸಲಾಗಿತ್ತು. ಇದರಿಂದಾಗಿ ಅಮಾವಾಸ್ಯೆ ರಾತ್ರಿ ನಮಗೆ ಕರಾಳವಾಗಿ ಹೋಯ್ತಾ? ಅನ್ನೋ ಆತಂಕದಲ್ಲಿಯೇ ಜನ ರಾತ್ರಿ ಕಳೆದರು.
ನಿನ್ನೆ ಸಂಜೆ 6:20ರ ಹೊತ್ತಿಗೆ ಈ ಟ್ಯಾಂಕರ್ ಅಂಡರ್‌ಪಾಸ್ ಅಡಿ ಸಿಲುಕಿತ್ತು. ಸಾಮಾನ್ಯವಾಗಿ ಯಾವುದೇ ದೊಡ್ಡ ವಾಹನಗಳು ಈ ಮಾರ್ಗದಲ್ಲಿ ಬರೋದೇ ಇಲ್ಲ. ಆದರೆ ಚಾಲಕನ ಸಣ್ಣದೊಂದು ಮೈಮರೆವು ಈ ಅವಘಡಕ್ಕೆ ಕಾರಣವಾಗಿದೆ. ಬೇಲೂರು ಕೈಗಾರಿಕಾ ಪ್ರದೇಶದಲ್ಲಿರೋ ಹೆಚ್‌ಪಿಸಿಎಲ್ ಘಟಕಕ್ಕೆ ಮುಂಬೈನಿಂದ ಬಂದಿರೋ ಈ ಟ್ಯಾಂಕರ್ ತಲುಪಬೇಕಿತ್ತು. ಆದರೆ ಚಾಲಕ ಮೈಮರೆತು ತೀರಾ ಮುಂದೆ ಬಂದು ಬಿಟ್ಟಿದ್ದ. ಹೀಗಾಗಿ ಹೈಕೋರ್ಟ್ ಮುಂದೆ ಎಡಕ್ಕೆ ಟರ್ನ್ ತೆಗೆದುಕೊಂಡು ಸರ್ವಿಸ್ ರಸ್ತೆಗೆ ಇಳಿದ ಚಾಲಕ ಬಳಿಕ ಈ ಅಂಡರ್‌ಪಾಸ್ ಮೂಲಕ ಆಚೆ ರಸ್ತೆ ಸೇರಲು ಪ್ರಯತ್ನಿಸಿದ್ದಾನೆ. ಇದನ್ನೂ ಓದಿ: ಉಡುಪಿ ಕಾಲೇಜಿನ ವೀಡಿಯೋ ಪ್ರಕರಣ- ಗುಜರಾತ್ FSLಗೆ ರವಾನೆ ಸಾಧ್ಯತೆ
ಈ ವೇಳೆ ರಸ್ತೆಯ ಮೇಲ್ಭಾಗ ಟ್ಯಾಂಕರ್‌ಗೆ ತಾಗಿದೆ. ಆ ಕ್ಷಣವೇ ಟ್ಯಾಂಕರ್ ಮೇಲ್ಭಾಗದಲ್ಲಿನ ವಾಲ್ವ್‌ಗೆ ಹಾನಿ ಆಗಿದೆ. ವಾಲ್ವ್ ಬಳಿಯಿಂದಲೇ ಗ್ಯಾಸ್ ಸೋರಿಕೆ (Gas Leak) ಶುರುವಾಗಿ ಬಿಟ್ಟಿದೆ. ಆ ಕ್ಷಣವೇ ಸ್ಥಳೀಯರು ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಸುದ್ದಿ ಮುಟ್ಟಿಸಿದ್ದಾರೆ. ಬೇಲೂರು ಘಟಕದ ಅಗ್ನಿಶಾಮಕ ದಳದ ಸಿಬ್ಬಂದಿ ಕೇವಲ 10 ನಿಮಿಷದಲ್ಲಿ ಸ್ಥಳಕ್ಕೆ ಬಂದಿದ್ದಾರೆ.
ಸುಮಾರು 18 ಟನ್ ಸಾಮರ್ಥ್ಯದ ಗ್ಯಾಸ್ ಇದ್ದ ಕಾರಣಕ್ಕೆ ಬೇಗ ಖಾಲಿ ಮಾಡುವುದೇ ಸವಾಲಾಗಿತ್ತು. ಹೀಗಾಗಿ ನಿಧಾನವಾಗಿ ಅದೆಲ್ಲ ಗ್ಯಾಸ್ ಖಾಲಿ ಆಗೋವರೆಗೂ ಕಾದ ಎಲ್ಲರೂ, ಬೆಳಗ್ಗೆ 11ರ ಹೊತ್ತಿಗೆ ಸ್ವಲ್ಪ ಗ್ಯಾಸ್ ಖಾಲಿಯಾದಾಗ ಟ್ಯಾಂಕರ್ ಮೇಲ್ಭಾಗಕ್ಕೆ ತೆರಳಿ ವಾಲ್ವ್ ಸರಿಪಡಿಸಿದ್ದಾರೆ. ಉಳಿದ ಗ್ಯಾಸ್ ಅನ್ನು ಮತ್ತೊಂದು ಖಾಲಿ ಟ್ಯಾಂಕರ್‌ಗೆ ತುಂಬಿಸಿ, ಅಲ್ಲಿಂದ ತೆರವು ಮಾಡಿದ್ದಾರೆ.
ಇದೆಲ್ಲವೂ ಆಗೋ ಹೊತ್ತಿಗೆ ಸುಮಾರು 20 ಗಂಟೆಗಳು ಕಳೆದು ಹೋಗಿದ್ದವು. ಇಷ್ಟು ಸುದೀರ್ಘ ಅವಧಿ ಬಳಿಕ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಸದ್ಯ ರಸ್ತೆ ಸಂಚಾರವೂ ಸುಗಮವಾಗಿದೆ. ಸದ್ಯ ಚಾಲಕನ ಸಣ್ಣ ತಪ್ಪು ಇಷ್ಟೆಲ್ಲಾ ಅವಾಂತರಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದರಿಂದ ಪ್ರಯಾಣಿಕರು ಹಾಗೂ ಸಾವಿರಾರು ಲಾರಿ ಚಾಲಕರು ಪರದಾಟ ನಡೆಸಿದ್ದಾರೆ. ಅಲ್ಲದೇ ಕೈಗಾರಿಕೆ ಬಂದ್ ಮಾಡುವ ಸ್ಥಿತಿಯೂ ಬಂದಿತ್ತು. ಸದ್ಯ ಎಲ್ಲ ಪ್ರಯತ್ನ ಸಫಲವಾಗಿದ್ದರಿಂದ ಯಾವುದೇ ಅವಘಡ ಸಂಭವಿಸಿಲ್ಲ ಎನ್ನುವುದೇ ನೆಮ್ಮದಿಯ ವಿಷಯ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಭರವಸೆ
ಧಾರವಾಡ: ಗ್ಯಾಸ್ ತುಂಬಿದ ಟ್ಯಾಂಕರ್ (Gas Tanker) ಒಂದು ಅಂಡರ್ ಪಾಸ್‌ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಸೇತುವೆಗೆ ತಾಗಿ ಗ್ಯಾಸ್ ಲೀಕ್ (Gas Leak) ಆಗಿರುವ ಘಟನೆ ಧಾರವಾಡದ (Dharwad) ಬೇಲೂರು ಗ್ರಾಮದ ಬಳಿಯ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಸಂಭವಿಸಿದೆ. ಸದ್ಯ ಆ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
ಗ್ಯಾಸ್ ಲೀಕೇಜ್ ದೊಡ್ಡ ಮಟ್ಟದಲ್ಲಿ ಆಗಿದ್ದು, ಜನ ಸಂಚಾರ ಹಾಗೂ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿದ್ದು, ಯಾವುದೇ ಅನಾಹುತ ಆಗದಂತೆ ಕಣ್ಣಿಟ್ಟಿದ್ದಾರೆ. ಹೈಕೋರ್ಟ್ ಅಕ್ಕಪಕ್ಕದ ಬೇಲೂರು, ಕೋಟೂರು, ಮುಮ್ಮಿಗಟ್ಟಿ ಸೇರಿದಂತೆ ಇಡಿ ಕೈಗಾರಿಕಾ ಪ್ರದೇಶದ ವಿದ್ಯುತ್ ಸ್ಥಗಿತಗೊಳಿಸಲಾಗಿದೆ.
ಗ್ಯಾಸ್ ಲೀಕೇಜ್‌ನಿಂದಾಗಿ ಬುಧವಾರ ಸಂಜೆಯಿಂದಲೇ ರಸ್ತೆಯನ್ನು ಬಂದ್ ಮಾಡಲಾಗಿದೆ. ಲೀಕೇಜ್ ತಡೆಯಲು ಸಾಧ್ಯವಾಗದ ಹಿನ್ನೆಲೆ ಟ್ಯಾಂಕರ್‌ನಲ್ಲಿರುವ ಇಡೀ ಗ್ಯಾಸ್ ಅನ್ನು ಹೊರ ಹಾಕಿ ಅದನ್ನು ಹೊರತೆಗೆಯಲು ಪ್ರಯತ್ನಿಸಲಾಗುತ್ತಿದೆ. ಕಳೆದ 12 ಗಂಟೆಯಿಂದ ಗ್ಯಾಸ್ ನಿರಂತರವಾಗಿ ಸೋರಿಕೆಯಾಗುತ್ತಿದೆ. ರಾತ್ರಿಯಿಡೀ ಕಳೆದರೂ ಟ್ಯಾಂಕರ್ ಇನ್ನೂ ಖಾಲಿಯಾಗಿಲ್ಲ. ಇದನ್ನೂ ಓದಿ: ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಕಂಪನಿಗೆ ಭಾರೀ ವಿರೋಧ!
ಹುಬ್ಬಳ್ಳಿ: ಕಾರು (Car) ಮತ್ತು ಟ್ಯಾಂಕರ್ (Tanker) ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಪ್ರವಾಸಕ್ಕೆ ತೆರಳುತ್ತಿದ್ದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಧಾರವಾಡ (Dharwad) ಜಿಲ್ಲೆಯಲ್ಲಿ ನಡೆದಿದೆ.
ಕಲಘಟಗಿ (Kalaghatgi) ತಾಲೂಕಿನ ಸಂಗಟಿಕೊಪ್ಪ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಪ್ರವಾಸಕ್ಕೆ ಹೊರಟಿದ್ದ ಮೊಹಮ್ಮದ್ ಇಶಾನ್, ಮೊಹಮ್ಮದ್ ಸೈಫ್ ಹಾಗೂ ಇಸ್ಮಾಯಿಲ್ ಸಾವನ್ನಪ್ಪಿದ್ದಾರೆ. ಮೃತ ಯುವಕರನ್ನು ಹುಬ್ಬಳ್ಳಿ ನಿವಾಸಿಗಳೆಂದು ಗುರುತಿಸಲಾಗಿದೆ.
ಒಟ್ಟು 6 ಯುವಕರು ಹುಬ್ಬಳ್ಳಿಯಿಂದ ತಮ್ಮ ಕಾರಿನಲ್ಲಿ ಕಾರವಾರದ ಕಡೆ ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆ ಸಂಗಟಿಕೊಪ್ಪದಲ್ಲಿ ಟ್ಯಾಂಕರ್ ಹಾಗೂ ಕಾರಿನ ನಡುವೆ ಅಪಘಾತ ಉಂಟಾಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಓರ್ವ ಯುವಕ ಚಿಕಿತ್ಸೆ ಫಲಕಾರಿಯಾಗದೇ ಕಿಮ್ಸ್‌ನಲ್ಲಿ ಕೊನೆಯುಸಿರೆಳೆದ್ದಾನೆ. ಇದನ್ನೂ ಓದಿ: ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಘಟನೆ – ಮೃತದೇಹವನ್ನು ಹಲವು ಕಿ.ಮೀ ಎಳೆದೊಯ್ದ ಕಾರು
ಯುವಕರು ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದಾಗ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋಗಳನ್ನು ಕೂಡಾ ಅಪ್ಲೋಡ್ ಮಾಡಿದ್ದರು. ಘಟನೆ ಬಗ್ಗೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 13ರ ಬಾಲಕಿಗೆ 114 ಬಾರಿ ಇರಿದು ಕೊಂದ ಸಹಪಾಠಿ ತಪ್ಪೊಪ್ಪಿಗೆ
Live Tv
[brid partner=56869869 player=32851 video=960834 autoplay=true]