Tag: tanuja

  • ‘ತನುಜಾ’  ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಸಚಿವ ಸುಧಾಕರ್

    ‘ತನುಜಾ’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಸಚಿವ ಸುಧಾಕರ್

    ಡೀ ದೇಶವೇ ಕೊರೋನ ಹಾವಳಿಯಿಂದ ತತ್ತರಿಸಿ ಹೋಗಿದ್ದ ಸಮಯ. ಅಂತಹ ಸಮಯದಲ್ಲಿ ಶಿವಮೊಗ್ಗದ ಕುಗ್ರಾಮದಿಂದ ಬೆಂಗಳೂರಿಗೆ ಬಂದು ತನುಜಾ ನೀಟ್ ಪರೀಕ್ಷೆ ಬರೆಯುತ್ತಾರೆ. ಆಕೆ ಪರೀಕ್ಷೆ ಬರೆಯಲು ಮುಖ್ಯ ಕಾರಣ ಆಗಿನ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್, ಪತ್ರಕರ್ತರಾದ ವಿಶ್ವೇಶ್ವರ್ ಭಟ್ ರವರು ಹಾಗೂ ಪ್ರದೀಪ್ ಈಶ್ವರ್. ಇವರೆಲ್ಲರ ಸಹಾಯದಿಂದ ತನುಜಾ ನೀಟ್ ಪರೀಕ್ಷೆ ಬರೆದು, ಇಂದು ಬೆಳಗಾವಿಯಲ್ಲಿ ಎರಡನೇ ವರ್ಷದ ಎಂ.ಬಿ.ಬಿ.ಎಸ್ ಅಭ್ಯಾಸ ಮಾಡುತ್ತಿದ್ದಾರೆ. ಈ ವಿಷಯವನ್ನಿಟ್ಟುಕೊಂಡು  ಹರೀಶ್ ಎಂ ಡಿ ಹಳ್ಳಿ ಚಿತ್ರ  ಮಾಡಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ವೈದ್ಯಕೀಯ ಸಚಿವರಾದ ಸುಧಾಕರ್  “ತನುಜಾ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಪತ್ರಕರ್ತರಾದ ವಿಶ್ವೇಶ್ವರ ಭಟ್ ರವರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ನಾನು ಸಮಾನ್ಯವಾಗಿ ಎಲ್ಲರ ಟ್ವಿಟ್ ಫಾಲೋ ಮಾಡುತ್ತಿರುತ್ತೇನೆ. ನನ್ನ ಆತ್ಮೀಯ ಸ್ನೇಹಿತರಾದ ವಿಶ್ವೇಶ್ವರ ಭಟ್ ಅವರು ತನುಜಾ ನೀಟ್ ಪರೀಕ್ಷೆ ಬರೆಯಲು ಸಹಾಯ ಮಾಡುವಂತೆ ಟ್ವಿಟ್ ಮಾಡಿದ್ದನ್ನು  ಗಮನಿಸಿ, ಆ ಹುಡುಗಿ ಪರೀಕ್ಷೆ ಬರೆಯಲು ಸಹಾಯ ಮಾಡುವಂತೆ ದೆಹಲಿಯ ನೀಟ್ ಅಧಿಕಾರಿಗಳ ಜೊತೆ ಮಾತನಾಡಿದ್ದೆ.  ಈ ವಿಷಯದಲ್ಲಿ ನಮ್ಮ ನಾಯಕರೂ ಹಾಗೂ ಆಗ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ಅವರ ಸಹಕಾರವಂತೂ ಅಪಾರ. ಆಮೇಲೆ ವಿಶ್ವೇಶ್ವರ ಭಟ್ ಅವರು ನಿರ್ದೇಶಕ ಹರೀಶ್ ಅವರನ್ನು ಪರಿಚಯ ಮಾಡಿಸಿ, ತನುಜಾ ಕುರಿತಾದ ಸಿನಿಮಾ ಮಾಡುತ್ತಿದ್ದಾರೆ‌ ಎಂದರು. ಹರೀಶ್ ಅವರು ನೀವು ಸಹ ಸಚಿವರಾಗಿಯೇ ಇದರಲ್ಲಿ ಅಭಿನಯಿಸಬೇಕು ಎಂದರು. ಡಾಕ್ಟರ್ ಆಗಿರುವ ನನ್ನನ್ನು ಆಕ್ಟರ್ ಮಾಡಿದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಆ ತನುಜಾ ಅಂದುಕೊಂಡಿದ್ದನ್ನು ಸಾಧಿಸಿ ವೈದ್ಯೆ ಆಗುತ್ತಿದ್ದಾಳೆ. ಈ ಸಿನಿಮಾ “ತನುಜಾ” ಕೂಡ ಯಶಸ್ವಿಯಾಗಲಿ ಎಂದು ಸಚಿವ ಸುಧಾಕರ್ ಹಾರೈಸಿದರು. ಇದನ್ನೂ ಓದಿ: ಸ್ಯಾಂಡಲ್‌ವುಡ್‌ ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

    ನನ್ನ ಪರಿಚಯದವರೊಬ್ಬರಿಂದ ಕೋವಿಡ್ ಸಮಯದಲ್ಲಿ ತನುಜಾ ಪರೀಕ್ಷೆ ‌ಬರೆಯಲು ಮುಂದಾಗಿರುವ ವಿಷಯ ತಿಳಿಯಿತು. ತಕ್ಷಣ ನಾನು ಈ ವಿಷಯದ ಕುರಿತು ಟ್ವಿಟ್ ಮಾಡಿದೆ. ತನುಜಾ ತಾಯಿ ಸಹ ನನಗೆ ಫೋನ್ ಮಾಡಿ ಮಗಳು ಪರೀಕ್ಷೆ ಬರೆಯಲು ಸಹಾಯ ಮಾಡುವಂತೆ ಕೇಳಿಕೊಂಡರು. ನನ್ನ ಟ್ವಿಟ್ ಗೆ ಕೊರೋನ ಅಂತಹ ಕಷ್ಟ ಸಮಯದಲ್ಲಿ, ಅದರಲ್ಲೂ ಅವರೆ ಆರೋಗ್ಯ ಸಚಿವರಾಗಿ ಸಾಕಷ್ಟು ಒತ್ತಡವಿದ್ದರೂ ನನ್ನ ಮನವಿಗೆ ಸ್ಪಂದಿಸಿ ತನುಜಾ ನೀಟ್ ಪರೀಕ್ಷೆ ಬರೆಯಲು ಸುಧಾಕರ್ ಸಹಾಯ ಮಾಡಿದರು. ಆಗ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ಅವರು ಆ ಹುಡಿಗಿಗೆ ನಮ್ಮ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದರು. ನಾನು ಈ ಘಟನೆಯನ್ನು ಅಂಕಣದಲ್ಲಿ ಬರೆದುಕೊಂಡಿದ್ದೆ. ಅಂಕಣ ಓದ್ದಿದ ಹರೀಶ್ ಚಿತ್ರ ಮಾಡಲು ಮುಂದಾದರು. ಕಷ್ಟಪಟ್ಟು ನಿರ್ಮಾಪಕರನ್ನು ಹುಡುಕಿ ಚಿತ್ರ ನಿರ್ಮಾಣ ಮಾಡಿದ್ದಾರೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ. ಎಲ್ಲರೂ ಈ ಚಿತ್ರವನ್ನು ನೋಡಿ ಎಂದರು ಪತ್ರಕರ್ತ ವಿಶ್ವೇಶ್ವರ ಭಟ್.

    “ತನುಜಾ” ನಿಜಕ್ಕೂ ಎಲ್ಲಾ ವಿದ್ಯಾರ್ಥಿಗಳಿಗೂ ಸ್ಫೂರ್ತಿ. ಆಕೆಯ ಪಾತ್ರ ಮಾಡಿರುವುದಕ್ಕೆ ನನಗೆ ಹೆಮ್ಮೆ ಇದೆ ಎಂದರು ನಟಿ ಸಪ್ತ ಪಾವೂರ್. ನಟ ರಾಜೇಶ್ ನಟರಂಗ ಸಹ ತಮ್ಮ ಪಾತ್ರದ ಕುರಿತು ಮಾತನಾಡಿದರು. ತನುಜಾ ತಾಯಿ ಹಿರಿಯಮ್ಮ ಅವರು ಸಮಾರಂಭಕ್ಕೆ ಆಗಮಿಸಿ, ಮಗಳು ಪರೀಕ್ಷೆ ಬರೆಯಲು ಸಹಕಾರ ನೀಡಿದ್ದ ಸಕಲರಿಗೂ ಧನ್ಯವಾದ ತಿಳಿಸಿದರು. ಚಿತ್ರರಂಗ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

    Live Tv
    [brid partner=56869869 player=32851 video=960834 autoplay=true]

  • ‘ತನುಜಾ’ ಸಿನಿಮಾ ಕಥೆಗೆ ಮನಸೋತು ಬಣ್ಣ ಹಚ್ಚಿದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

    ‘ತನುಜಾ’ ಸಿನಿಮಾ ಕಥೆಗೆ ಮನಸೋತು ಬಣ್ಣ ಹಚ್ಚಿದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

    ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತನುಜಾ ಚಿತ್ರಕ್ಕೆ ಮೊಟ್ಟಮೊದಲ ಬಾರಿಗೆ ಬಣ್ಣ ಹಚ್ಚಿ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ್ದಾರೆ.

    ಈ ಹಿಂದೆ ಅವರೇ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ತನುಜಾ ಎಂಬ ಹೆಣ್ಣುಮಗಳು ಕೋವಿಡ್ ಕಾರಣದಿಂದ ನೀಟ್ ಪರೀಕ್ಷೆ ಬರೆಯಲಾಗದೆ ತನ್ನ ಅಸಹಾಯಕತೆಯನ್ನು ತೋಡಿಕೊಂಡಿದ್ದ ಸಂದರ್ಭದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ್ ಈಶ್ವರ್ ಅವರ ಸಹಕಾರದಿಂದ ಪರೀಕ್ಷೆ ಬರೆದು ನೀಟ್ ಪಾಸಾಗಿದ್ದು ಇಡೀ ದೇಶದ ಗಮನ ಸೆಳೆದಿತ್ತು.

    ಪರೀಕ್ಷೆ ಬರೆಯಲು ಸುಮಾರು 350ಕಿಮೀ ದೂರ ಪ್ರಯಾಣ ಮಾಡಿ ಬಂದು ಪರೀಕ್ಷೆ ಬರೆದಿದ್ದೆ ರೋಚಕತೆಯಿಂದ ಕೂಡಿದ್ದು, ಎಲ್ಲರ ಕುತೂಹಲ ಕೆರಳಿಸಿತು ಇದನ್ನೇ ಒನ್‌ಲೈನ್ ಸ್ಟೋರಿ ಆಗಿಸಿಕೊಂಡು ಸಾಮಾಜಿಕ ಕಳಕಳಿಯುಳ್ಳ ರಾಜ್ಯಪ್ರಶಸ್ತಿ ವಿಜೇತ ಹರೀಶ್ ಎಂ.ಡಿ ಹಳ್ಳಿಯವರು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಇದನ್ನೂ ಓದಿ: ಹಿಜಬ್ ಆಯ್ಕೆಯಲ್ಲ, ನಾವು ಪ್ರೀತಿಸುವ ದೇವರು ವಿಧಿಸಿರುವ ಶಿಷ್ಟಾಚಾರ: ಝೈರಾ ವಾಸಿಮ್

    ಇದೀಗ ಮಾಜಿ ಸಿಎಂ ಆಗಮನದಿಂದ ಚಿತ್ರತಂಡಕ್ಕೆ ದೊಡ್ಡ ಗೆಲುವಾಗಿದ್ದು ಖುದ್ದು ಅಂದಿನ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರು ಇಂದು ಅವರ ಪಾತ್ರಕ್ಕೆ ಬಣ್ಣಹಚ್ಚಿದ್ದು ಸ್ಯಾಂಡಲ್‌ವುಡ್‌ನಲ್ಲಿ ಸಂಚಲನ ಮೂಡಿಸುತ್ತಿದೆ. ಇಂದು ಮೊದಲ ದಿನ ಅವರ ಭಾಗದ ಚಿತ್ರೀಕರಣ ಯಶಸ್ವಿಯಾಗಿ ನಡೆದಿದ್ದು ಅತ್ಯದ್ಭುತವಾಗಿ ನಟಿಸಿದ್ದಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಇದನ್ನೂ ಓದಿ: ಬಣ್ಣದ ಲೋಕಕ್ಕೆ ಕಾಲಿಟ್ಟ ಬಿ.ಎಸ್ ಯಡಿಯೂರಪ್ಪ

    ಯಡಿಯೂರಪ್ಪನವರನ್ನು ವಿಧಾನಸೌಧದ ಒಳಗೆ ಮತ್ತು ಹೊರಗೆ ಹೋರಾಟದ ಮುಖವನ್ನು ಕಂಡಿರುವ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಅವರು ಚಿತ್ರದಲ್ಲಿ ಹೇಗೆ ಕಾಣಿಸುತ್ತಾರೋ..? ಅವರ ಪಾತ್ರ ಹೇಗಿರಲಿದೆ.? ಎನ್ನುವ ಸಹಜ ಕುತೂಹಲ ಎಲ್ಲರಲ್ಲಿದೆ. ಇದಕ್ಕೆಲ್ಲ ಉತ್ತರವಾಗಿ ಸದ್ಯದಲ್ಲೇ ಚಿತ್ರ ತೆರೆಕಾಣುತ್ತಿದೆ.

    Beyond visions cinemas ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ತನುಜಾ’ ಚಿತ್ರ ನೈಜ ಘಟನೆಯಾಧಾರಿತ ವಾಗಿದ್ದು ಶಿವಮೊಗ್ಗದ ಹಾಗೂ ಬೆಂಗಳೂರಿನ ಹಲವೆಡೆ ಚಿತ್ರೀಕರಣಗೊಂಡಿದೆ.

    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದಲ್ಲಿ ಅಭಿನಯಿಸಿದ್ದ ಸಪ್ತ ಪಾವೂರು ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದು ತಾರಾಗಣದಲ್ಲಿ ಬಿ.ಎಸ್ ಯಡಿಯೂರಪ್ಪ, ವಿಶ್ವೇಶ್ವರಯ್ಯ ಭಟ್, ಡಾ.ಕೆ ಸುಧಾಕರ್, ರಾಜೇಶ್ ನಟರಂಗ, ಕೈಲಾಶ್, ಸಂಧ್ಯಾ ಅರಕೆರೆ, ಬೇಬಿ ಶ್ರೀ, ಅಭಿನಯಿಸುತ್ತಿದ್ದು, ಪ್ರದ್ಯೋತನ ಸಂಗೀತ ನಿರ್ದೇಶನ ಹಾಗೂ ರವೀಂದ್ರನಾಥ್ ಅವರ ಛಾಯಾಗ್ರಹಣ, ಉಮೇಶ್ ಆರ್.ಬಿ ಸಂಕಲನವಿದ್ದು ಆರ್ ಚಂದ್ರಶೇಖರ್ ಪ್ರಸಾದ್ ಹಾಗೂ ಜೆ.ಎಂ ಪ್ರಹ್ಲಾದ್ ಸಂಭಾಷಣೆ ಬರೆದಿದ್ದು ನಿರ್ದೇಶಕ ಹರೀಶ್ ಎಂ.ಡಿ ಹಳ್ಳಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ.