Tag: Tanveer Seth

  • ತನ್ವಿರ್ ಸೇಠ್ ಪತ್ರ ಬರೆದಿರುವುದು ನನಗೆ ಗೊತ್ತಿಲ್ಲ: ಪರಮೇಶ್ವರ್

    ತನ್ವಿರ್ ಸೇಠ್ ಪತ್ರ ಬರೆದಿರುವುದು ನನಗೆ ಗೊತ್ತಿಲ್ಲ: ಪರಮೇಶ್ವರ್

    ಬೆಂಗಳೂರು: ಡಿಜೆಹಳ್ಳಿ (DJ Halli) ಹಾಗೂ ಕೆಜಿ ಹಳ್ಳಿ (KG Halli) ಪೊಲೀಸ್ ಠಾಣೆ ಮೇಲೆ ನಡೆದಿದ್ದ ದಾಳಿಯಲ್ಲಿ ಪ್ರಕರಣ ದಾಖಲಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ (G. Parameshwara) ಪ್ರತಿಕ್ರಿಯೆ ನೀಡಿದ್ದಾರೆ. ತನ್ವೀರ್ ಸೇಠ್ (Tanveer Seth) ನನಗೆ ಪತ್ರ ಬರೆದಿರಬಹುದು. ನನಗೆ ಈ ವಿಚಾರ ಗೊತ್ತಿಲ್ಲ ಎಂದು `ಪಬ್ಲಿಕ್ ಟಿವಿ’ಗೆ ತಿಳಿಸಿದ್ದಾರೆ.

    ಇದು ಆದೇಶ ಅಲ್ಲ, ಕೇವಲ ಟಿಪ್ಪಣಿ. ಸಾಮಾನ್ಯವಾಗಿ ಬಂದಿದ್ದ ಪತ್ರವನ್ನು ಹಾಗೇ ಕಳುಹಿಸಿರುವ ಸಾಧ್ಯತೆ ಇರುತ್ತದೆ. ಸಬ್ ಕಮಿಟಿಯ ಮುಖ್ಯಸ್ಥ ನಾನೇ ಆಗಿದ್ದೇನೆ. ಹೀಗಾಗಿ ಪ್ರಕರಣಗಳನ್ನು ಪರಿಶೀಲಿಸುವಂತೆ ಸೂಚಿಸಲು ಪತ್ರ ಬರೆದಿರಬಹುದು. ಇದಕ್ಕೆಲ್ಲ ಅದರದ್ದೇ ಆದ ನಿಯಮಗಳಿವೆ. ಯಾವುದೇ ಕೇಸ್ ವಾಪಾಸ್ ಪಡೆಯುವಾಗ ಸಂಪುಟದಲ್ಲಿ ಚರ್ಚೆಯಾಗಬೇಕು ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಸರ್ಕಾರ ಮುಸ್ಲಿಂ ಓಲೈಕೆಗೆ ಸಂವಿಧಾನಬಾಹಿರವಾಗಿ ವರ್ತಿಸಿದ್ರೆ ಪರಿಣಾಮ ನೆಟ್ಟಗಿರಲ್ಲ: ಸುನೀಲ್ ಕುಮಾರ್

    ಈ ವಿಚಾರವಾಗಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದರು. ಪೊಲೀಸ್ ಇಲಾಖೆಗೆ ಗೃಹ ಸಚಿವರು ಬರೆದ ಪತ್ರ ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ. ಸರ್ಕಾರ ಮುಸ್ಲಿಂ ಓಲೈಕೆಗಾಗಿ ಸಂವಿಧಾನಬಾಹಿರವಾಗಿ ವರ್ತಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ಕರ್ನಾಟಕದ ಪೊಲೀಸರು ಆಳುವ ಸರ್ಕಾರದ ಆಳುಗಳಂತೆ ವರ್ತಿಸುವುದಕ್ಕೆ ಮುನ್ನ ಆ ದಿನ ನಡೆದ ಭೀಬತ್ಸ ಘಟನೆಯನ್ನು ನೆನಪು ಮಾಡಿಕೊಳ್ಳಲಿ ಎಂದು ಟ್ವಿಟ್ಟರ್‌ನಲ್ಲಿ ಆಕ್ರೋಶ ಹೊರಹಾಕಿದ್ದರು. ಇದನ್ನೂ ಓದಿ: ಉತ್ತರದಲ್ಲಿ ಅವಾಂತರದ ಬಳಿಕ ಮುಂಗಾರು ದಕ್ಷಿಣ ಭಾರತಕ್ಕೆ – ಕರ್ನಾಟಕ ಸೇರಿ 3 ರಾಜ್ಯಗಳಲ್ಲಿ ರೆಡ್ ಅಲರ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಅಸಮಾಧಾನ ಹೊರಹಾಕಿದ ತನ್ವೀರ್ ಸೇಠ್

    ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಅಸಮಾಧಾನ ಹೊರಹಾಕಿದ ತನ್ವೀರ್ ಸೇಠ್

    ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವದರ ಮೂಲಕ ಮಾಜಿ ಸಚಿವ ತನ್ವೀರ್ ಸೇಠ್ ಅವರು ಅಸಮಾಧಾನ ಹೊರಹಾಕಿದ್ದಾರೆ.

    ಇತ್ತೀಚೆಗೆ ಅವರ ಮೇಲೆ ನಡೆದ ಹಲ್ಲೆ ವಿಚಾರವಾಗಿ ಗೃಹ ಸಚಿವರಿಗೆ ಪತ್ರ ಬರೆದ ತನ್ವೀರ್ ಸೇಠ್, ನನ್ನ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯನ್ನ ಮಾತ್ರ ಪೊಲೀಸರು ಬಂಧಿಸಿದ್ದಾರೆ. ಆದರೆ ಈ ಪ್ರಕರಣದ ಹಿಂದೆ ಯಾರು ಇದ್ದಾರೆ ಅನ್ನೋದು ಪತ್ತೆ ಹಚ್ಚುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ದೂರಿದ್ದಾರೆ.

    ನನ್ನ ಮೇಲೆ ಹಲ್ಲೆ ಮಾಡಿರುವ ಪ್ರಕರಣದಲ್ಲಿ ಸೂಕ್ತವಾಗಿ ತನಿಖೆ ನಡೆಯುತ್ತಿಲ್ಲ. ಈ ಪ್ರಕರಣದವನ್ನು ನಾನು ಗಂಭೀರವಾಗಿ ಪರಿಗಣಿಸುತ್ತೇನೆ. ನನ್ನ ಮೇಲೆ ಹಲ್ಲೆ ಮಾಡಿದ ಉದ್ದೇಶವನ್ನು ಪತ್ತೆ ಮಾಡಬೇಕು. ಇದರ ಹಿಂದೆ ಯಾರು ಇದ್ದಾರೆ ಎಂದು ಪತ್ತೆ ಹಚ್ಚಿ ನನಗೆ ನ್ಯಾಯ ಒದಗಿಸಬೇಕೆಂದು ಗೃಹ ಸಚಿವ ಬಸವರಾಜ ಬೊಮ್ಮಯಿಗೆ ತನ್ವೀರ್ ಸೇಠ್ ಪತ್ರ ಬರೆದು ಮನವಿ ಮಾಡಿದ್ದಾರೆ. ಇದನ್ನು ಓದಿ: ತನ್ವೀರ್ ರೀತಿಯಲ್ಲೇ ಖಾದರ್ ಹತ್ಯೆಗೆ ಸಂಘಟನೆಯಿಂದ ಸ್ಕೆಚ್

    ಕಳೆದ ವರ್ಷದ ನವೆಂಬರ್ 18ರಂದು ರಾತ್ರಿ 11 ಗಂಟೆ ಸುಮಾರಿನಲ್ಲಿ ಮೈಸೂರಿನ ಬನ್ನಿಮಂಟಪದಲ್ಲಿ ನೂರಾರು ಜನರ ಮುಂದೆಯೇ ಶಾಸಕರ ಮೇಲೆ ಕೊಲೆ ಯತ್ನ ನಡೆದಿತ್ತು. ಘಟನೆಯಲ್ಲಿ ಕುತ್ತಿಗೆ ಭಾಗಕ್ಕೆ ಮಚ್ಚಿನ ಪೆಟ್ಟು ಬಿದ್ದು ತನ್ವೀರ್ ಸೇಠ್ ಜೀವನ್ಮರಣ ಹೋರಾಟ ಆರಂಭಿಸಿದ್ದರು. ಹಲ್ಲೆಯ ನಂತರ ಮೈಸೂರಿನಲ್ಲಿ ಚಿಕಿತ್ಸೆ ಪಡೆದಿದ್ದ ಶಾಸಕ ತನ್ವೀರ್ ಸೇಠ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ವಿದೇಶಕ್ಕೆ ಕಳುಹಿಸಲಾಗಿತ್ತು. ಚಿಕಿತ್ಸೆ ಸಂಪೂರ್ಣ ಯಶಸ್ವಿಯಾದ ನಂತರ ದುಬೈನಲ್ಲೇ ಅವರು ವಿಶ್ರಾಂತಿ ಪಡೆದಿದ್ದರು. ಬಳಿಕ ಭಾರತಕ್ಕೆ ವಾಪಸ್ ಬಂದಿದ್ದರು.

    ಈ ಹಿಂದೆ ಈ ವಿಚಾರವಾಗಿ ಮಾತನಾಡಿದ್ದ ಅವರು, ನನ್ನ ಮೇಲೆ ನಡೆದ ಹಲ್ಲೆ ಪ್ರಕರಣ ಅನಿರೀಕ್ಷಿತ. ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅದರ ಪ್ರತಿಯನ್ನು ಪಡೆದುಕೊಂಡಿದ್ದೇನೆ. ತನಿಖೆ ಬಗ್ಗೆ ನನಗೆ ಯಾವುದೇ ತಕರಾರು ಇಲ್ಲ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿದವರು ಯಾರು ಎಂಬುದು ಗೊತ್ತಿಲ್ಲ. ಇದೆಲ್ಲವು ಸಾರ್ವಜನಿಕವಾಗಿ ಬಹಿರಂಗವಾಗಬೇಕು. ಇದನ್ನು ಪೊಲೀಸರು ಜನರಿಗೆ ತಿಳಿಸಬೇಕು ಎಂದಿದ್ದರು.

  • ತನ್ವೀರ್ ರೀತಿಯಲ್ಲೇ ಖಾದರ್ ಹತ್ಯೆಗೆ ಸಂಘಟನೆಯಿಂದ ಸ್ಕೆಚ್

    ತನ್ವೀರ್ ರೀತಿಯಲ್ಲೇ ಖಾದರ್ ಹತ್ಯೆಗೆ ಸಂಘಟನೆಯಿಂದ ಸ್ಕೆಚ್

    – ಗೃಹ ಇಲಾಖೆಗೆ ಗುಪ್ತಚರ ಇಲಾಖೆಯಿಂದ ಸ್ಫೋಟಕ ಮಾಹಿತಿ
    – ಮೂಲಭೂತವಾದಿ ಸಂಘಟನೆಯಿಂದ ಹತ್ಯೆಗೆ ಸಂಚು
    – ಕರೆ ಮಾಡಿ ಭದ್ರತೆ ತೆಗೆದುಕೊಳ್ಳಿ ಎಂದ ಬೊಮ್ಮಾಯಿ

    ಬೆಂಗಳೂರು: ದಕ್ಷಿಣ ಕನ್ನಡ ಪ್ರಭಾವಿ ಕಾಂಗ್ರೆಸ್ ಮುಖಂಡ, ಮಾಜಿ ಆರೋಗ್ಯ ಸಚಿವ ಯುಟಿ ಖಾದರ್ ಅವರ ಹತ್ಯೆಗೆ ಮೂಲಭೂತವಾದಿ ಸಂಘಟನೆ ಸ್ಕೆಚ್ ರೂಪಿಸಿದ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ.

    ಮೈಸೂರು ಶಾಸಕ ತನ್ವೀರ್ ಸೇಠ್ ಅವರ ಹತ್ಯೆಗೆ ಸಂಚು ರೂಪಿಸಿದಂತೆ ಸಂಘಟನೆಯೊಂದು ಖಾದರ್ ಹತ್ಯೆಗೆ ಸ್ಕೆಚ್ ಹಾಕಿದೆ ಎಂದು ಗುಪ್ತಚರ ಇಲಾಖೆ ಸರ್ಕಾರಕ್ಕೆ ತಿಳಿಸಿದೆ.

    ಗುಪ್ತಚರ ಇಲಾಖೆ ಈ ವಿಚಾರ ತಿಳಿಸಿದ ಬೆನ್ನಲ್ಲೇ ಎಚ್ಚರಗೊಂಡ ಸರ್ಕಾರ ಖಾದರ್ ಅವರಿಗೆ ಭದ್ರತೆ ಹೆಚ್ಚು ಮಾಡಲು ಸೂಚಿಸಿದೆ. ಆದರೆ ಖಾದರ್ ನನಗೆ ಯಾವುದೇ ಜೀವಭಯ ಇಲ್ಲ ಎಂದು ಹೇಳಿ ಭದ್ರತೆಯನ್ನು ನಿರಾಕರಿಸಿದ್ದಾರೆ. ಭದ್ರತೆ ನಿರಾಕರಿಸಿದ ವಿಚಾರ ತಿಳಿದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಿದ್ದರಾಮಯ್ಯ ಮೂಲಕ ಖಾದರ್ ಅವರ ಮನ ಒಲಿಸಲು ಮುಂದಾಗಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಖಾದರ್, ನನಗೆ ಜೀವ ಬೆದರಿಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ವತ: ಗೃಹ ಸಚಿವರು ನನಗೆ ಕರೆ ಮಾಡಿ ಹೇಳಿ ಭದ್ರತೆ ಪಡೆಯುವಂತೆ ಹೇಳಿದ್ದಾರೆ. ಆದರೆ ಓರ್ವ ಪೋಲಿಸ್ ಸಿಬ್ಬಂದಿಯನ್ನು ಭದ್ರತೆ ನೀಡಲು ಸರ್ಕಾರ ಮುಂದಾಗಿದೆ. ಇಂತಹ ಕಾಟಾಚಾರದ ಭದ್ರತೆ ನನಗೆ ಬೇಡ ಅಂತ ನಾನು ಸಿಬ್ಬಂದಿಯನ್ನು ವಾಪಸ್ ಕಳುಹಿಸಿದ್ದೇನೆ ಎಂದು ತಿಳಿಸಿದ್ದಾರೆ.

    ಎಸಿಪಿ ಒಬ್ಬರು ಮನೆಗೆ ಬಂದು ಮಾತನಾಡಿದ್ದಾರೆ. ಭದ್ರತೆ ಕೊಟ್ಟರೆ ಸರಿಯಾಗಿ ಕೊಡಬೇಕು. ಒಬ್ಬ ಪೊಲೀಸರ ಭದ್ರತೆ ಕೊಟ್ಟು ಹೆಚ್ಚು ಕಡಿಮೆ ಯಾದರೆ ಯಾರು ಹೊಣೆ? ತನ್ವೀರ್ ಸೇಟ್ ಅವರಿಗೂ ಓರ್ವ ಗನ್ ಮೆನ್ ಕೊಟ್ಟಿದ್ದರು. ಘಟನೆಯಾದ ನಂತರ ಆ ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ. ಇದರಲ್ಲಿ ಆತನ ತಪ್ಪು ಏನು? ಓರ್ವ ಪೊಲೀಸ್ ಭದ್ರತೆಗೆ ನಿಯೋಜಿಸಿದರೆ ಆತ 8 ಗಂಟೆ ಕೆಲಸ ಮುಗಿಸಿ ಹೋಗುತ್ತಾನೆ. ಆಮೇಲೆ ಏನು ಮಾಡುವುದು? ನನಗೆ ಬೆದರಿಕೆ ಇದೆ ಎಂದು ಗೃಹ ಸಚಿವರೆ ಹೇಳಿದ್ದಾರೆ. ಆದರೆ ಸೂಕ್ತ ಭದ್ರತೆ ಕೊಡುವಲ್ಲಿ ವಿಫಲರಾಗಿದ್ದಾರೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

    ನಾನು ಶಾಸಕನಾಗಿ ಯಾವತ್ತು ಗನ್ ಮನ್ ಇಟ್ಟುಕೊಂಡಿಲ್ಲ. ಈಗ ಓರ್ವ ಸಿಬ್ಬಂದಿಯನ್ನು ದಿನದ 8 ಗಂಟೆಯ ಕಾಲ ಜೊತೆಗಿಟ್ಟುಕೊಂಡು ಅವನಿಗೆ ನಾನು ತೊಂದರೆ ನೀಡುವುದಿಲ್ಲ. ಕಾಟಾಚಾರದ ಭದ್ರತೆ ನನಗೆ ಬೇಕಿಲ್ಲ. ಕಲ್ಪಿಸಿದರೆ ಸರಿಯಾದ ಭದ್ರತೆ ನೀಡಲಿ ಎಂದು ಹೇಳಿ ಸರ್ಕಾರದ ವಿರುದ್ಧ ಖಾದರ್ ಹರಿಹಾಯ್ದಿದ್ದಾರೆ.

  • ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ- ಆಸ್ಪತ್ರೆಯಿಂದ ಡಿಸ್ಚಾರ್ಜ್

    ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ- ಆಸ್ಪತ್ರೆಯಿಂದ ಡಿಸ್ಚಾರ್ಜ್

    ಮೈಸೂರು: ಹಲ್ಲೆಗೆ ಒಳಗಾಗಿದ್ದ ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ವೀರ್ ಸೇಠ್ ಅವರು ಸೋಮವಾರ ರಾತ್ರಿ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ವೈದ್ಯರು ಡಿಸ್ಚಾರ್ಜ್ ಆಗುವಂತೆ ಸೂಚಿಸಿದ್ದು, ಮನೆಯಲ್ಲೆ ವಿಶ್ರಾಂತಿ ಪಡೆಯಲು ತಿಳಿಸಿದ್ದಾರೆ.

    ಕಳೆದ ಎಂಟು ದಿನಗಳಿಂದ ಶಾಸಕರು ಚಿಕಿತ್ಸೆ ಪಡೆಯುತ್ತಿದ್ದರು. ಕೊಲೆ ಯತ್ನದಿಂದಾಗಿ ಶಾಸಕರ ಕುತ್ತಿಗೆ ಹಾಗೂ ಕಿವಿ ಭಾಗಕ್ಕೆ ಗಾಯವಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ನವೆಂಬರ್ 18ರ ರಾತ್ರಿಯಿಂದ ಶಾಸಕರಿಗೆ ಅಳವಡಿಸಿದ್ದ ವೆಂಟಿಲೇಟರ್ ತೆಗೆಯಲಾಗಿತ್ತು. ಇದೀಗ ತನ್ವೀರ್ ಆರೋಗ್ಯದಲ್ಲಿ ಆಸ್ಪತ್ರೆಯಿಂದ ಚೇತರಿಕೆ ಕಂಡಿದ್ದು, ಡಿಸ್ಚಾರ್ಜ್ ಆಗಿದ್ದಾರೆ.

    ಈ ವಿಚಾರವಾಗಿ ಅಂದು ಮಾತನಾಡಿದ್ದ ಕೊಲಂಬಿಯಾ ಏಷಿಯಾ ಆಸ್ಪತ್ರೆ ವೈದ್ಯ ಡಾ.ಉಪೇಂದ್ರ ಶಣೈ, ಕುತ್ತಿಗೆ ಭಾಗಕ್ಕೆ ಚಾಕು ಹಾಕಿರುವ ಕಾರಣ ತೀವ್ರವಾಗಿ ಪೆಟ್ಟಾಗಿದೆ. ತನ್ವೀರ್ ಸೇಠ್ ಅವರ ರಕ್ತನಾಳ ನರಗಳಿಗೆ ತೀವ್ರ ಗಾಯವಾಗಿದೆ. ಬಿಪಿ, ಶುಗರ್ ಸಮಾನ್ಯ ಸ್ಥಿತಿಗೆ ತರಲು ಪ್ರಯತ್ನ ಪಡುತ್ತಿದ್ದೇವೆ. ಆಗಲೇ ಒಂದು ಶಸ್ತ್ರ ಚಿಕಿತ್ಸೆಯನ್ನು ಮಾಡಿದ್ದೇವೆ. ಮುಂದಿನ 48 ಗಂಟೆಯವರೆಗೂ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದರು.

    ನವೆಂಬರ್ 17ರ ರಾತ್ರಿ ತನ್ವೀರ್ ಸೇಠ್ ಬನ್ನಿ ಮಂಟಪ ಸಮೀಪದ ಪಾರ್ಟಿ ಹಾಲಿಗೆ ತಮ್ಮ ಆತ್ಮೀಯ ಮಗನ ಮದುವೆಯ ಬೀಗರೂಟಕ್ಕೆ ಆಗಮಿಸಿದ್ದರು. ಈ ವೇಳೆ ಯುವಕ ಫರಾನ್ (24) ಚಾಕುವಿನಿಂದ ಹಲ್ಲೆ ಮಾಡಿದ್ದ. ಅವರ ಕತ್ತಿಗೆ ಭಾಗಕ್ಕೆ ಚಾಕು ಹಾಕಿ ಪರಾರಿಯಾಗುತ್ತಿದ್ದ ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ನಂತರ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸೇಠ್ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.