Tag: tarin

  • ನೀರಿದ್ದ ಬಕೆಟ್‌ಗೆ ತಲೆ ಮುಳುಗಿಸಿ ಪತ್ನಿಯನ್ನ ಕೊಂದ, ತಾನೂ ಆತ್ಮಹತ್ಯೆ ಮಾಡ್ಕೊಂಡ

    ನೀರಿದ್ದ ಬಕೆಟ್‌ಗೆ ತಲೆ ಮುಳುಗಿಸಿ ಪತ್ನಿಯನ್ನ ಕೊಂದ, ತಾನೂ ಆತ್ಮಹತ್ಯೆ ಮಾಡ್ಕೊಂಡ

    ಹೈದರಾಬಾದ್: ನೀರು ತುಂಬಿದ ಬಕೆಟ್ ಒಳಗೆ ಪತ್ನಿಯ ತಲೆ ಮುಳುಗಿಸಿ ಪತ್ನಿಯನ್ನು ಹತ್ಯೆ ಮಾಡಿದ ಬಳಿಕ ತಾನೂ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

    ಮೃತರನ್ನು ಮಹಾನಂದ ಬಿಸ್ವಾಸ್ (24), ಪಂಪಾ ಸರ್ಕಾ (22) ಎಂದು ಗುರುತಿಸಲಾಗಿದೆ. ಮೂಲತಃ ಈತ ಅಸ್ಸಾಂ ನಿವಾಸಿ, ಹೈದರಾಬಾದ್‌ನ ಬಂಜಾರ ಹಿಲ್ಸ್‌ನಲ್ಲಿರುವ ಶಾಪಿಂಗ್ ಮಾಲ್ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಈತನ ಮೃತದೇಹ ಮಂಗಳವಾರ ಲಕಡಿ ಕಾ ಪುಲ್ ರೈಲು ನಿಲ್ದಾಣದ ಹಳಿಗಳ ಮೇಲೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಏಕನಾಥ್‌ ಶಿಂಧೆ ಸಿಎಂ – ನಾನು ಸರ್ಕಾರದಲ್ಲಿ ಇರಲ್ಲ ಎಂದ ಫಡ್ನವೀಸ್‌

    ಸಾಂದರ್ಭಿಕ ಚಿತ್ರ

    ಪಂಪಾ ಸರ್ಕಾ ಮತ್ತು ಬಿಸ್ವಾತ್ ಇಬ್ಬರೂ ಅಸ್ಸಾಂ ಮೂಲದವರು. ಕೆಲಸಕ್ಕೆಂದು ಹೈದರಾಬಾದ್‌ಗೆ ಬಂದಿದ್ದರು. ಒಂದೂವರೆ ವರ್ಷದ ಹಿಂದೆ ಮದುವೆಯಾಗಿ ಪ್ರೇಮ್‌ನಗರದಲ್ಲಿ ವಾಸವಿದ್ದರು. ಪತ್ನಿಯ ಶೀಲ ಶಂಕಿಸಿ, ಕೆಲವು ದಿನಗಳ ಹಿಂದೆ ಬಿಸ್ವಾಸ್ ಆಕೆಯನ್ನು ಪ್ರಶ್ನಿಸಿದ್ದರು. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ. ಜಗಳ ತಾರಕ್ಕೇರಿ ಮಾತಿನ ಚಕಮಕಿ ನಡೆದಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಇದನ್ನೂ ಓದಿ: ಮೋದಿ, ಅಮಿತ್‌ ಶಾ, ಯೋಗಿಗೆ ಜೀವ ಬೆದರಿಕೆ – ಆರೋಪಿಯನ್ನು ಬಂಧಿಸಿ ಬಿಟ್ಟು ಕಳುಹಿಸಿದ ಪೊಲೀಸರು

    CRIME

    ಪತ್ನಿ ಮೃತಪಟ್ಟಿರುವುದು ದೃಢವಾದ ಬಳಿಕ ಮೃತದೇಹವನ್ನು ಅಲ್ಲಿಯೇ ಬಿಟ್ಟು, ಮನೆಯನ್ನು ಲಾಕ್ ಮಾಡಿ, ಮರು ದಿನ ಬಿಸ್ವಾತ್ ರೈಲು ನಿಲ್ದಾಣಕ್ಕೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಿಸ್ವಾಸ್ ಮೃತದೇಹ ಪತ್ತೆಯಾದಾಗ ಆತನ ಪಾಕೆಟ್‌ನಲ್ಲಿ ಒಂದು ಪೋನ್ ಮತ್ತು ಡೈರಿ ಇತ್ತು. ಅಸ್ಸಾಮೀಸ್ ಭಾಷೆಯಲ್ಲಿ ಬರೆದಿದ್ದರಿಂದ ಅದರ ಅನುವಾದಕ್ಕಾಗಿ ಪೊಲೀಸರು ಬಿಸ್ವಾಸ್ ಸ್ನೇಹಿತರನ್ನು ಸಂಪರ್ಕಿಸಿದರು. ಬಿಸ್ವಾಸ್ ಸ್ನೇಹಿತರು ಹೇಳುವಂತೆ ಪತ್ನಿಯನ್ನು ಕೊಲೆ ಮಾಡಿ ಅದೇ ನೋವಿನಿಂದ ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆತ ಹೇಳಿದ್ದಾನೆ ಎನ್ನಲಾಗಿದೆ.

    ಡೈರಿ ಓದಿದ ಬಳಿಕ ಪೊಲೀಸರು ಬಿಸ್ವಾತ್ ಮನೆಗೆ ದೌಡಾಯಿಸಿದ್ದಾರೆ. ಆದರೆ ಬಾಗಿಲನ್ನು ಲಾಕ್ ಮಾಡಲಾಗಿತ್ತು. ಬೀಗವನ್ನು ಮುರಿದು ಮನೆಯ ಒಳಹೊಕಾಗಿ ನಿಗೂಡ ಸ್ಥಿತಿಯಲ್ಲಿ ಬಿಸ್ವಾಸ್ ಪತ್ನಿ ಪಂಪಾ ಸರ್ಕಾ (22)ರ ಮೃತದೇಹ ಪತ್ತೆಯಾಯಿತು. ಪೊಲೀಸರ ಪ್ರಕಾರ ಪಂಪಾಳ ತಲೆಯನ್ನು ನೀರು ತುಂಬಿದ ಬಕೆಟ್‌ನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ.

    ಸದ್ಯ ಪೊಲೀಸರು ಮೃಹದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

    Live Tv

  • ಬೆಂಗ್ಳೂರು ಕನಸು-ನನಸು: ಸಬ್ ಅರ್ಬನ್ ರೈಲು ಹಳಿ ನಿರ್ಮಾಣಕ್ಕೆ ಸೈ ಎಂದ ಕೇಂದ್ರ

    ಬೆಂಗ್ಳೂರು ಕನಸು-ನನಸು: ಸಬ್ ಅರ್ಬನ್ ರೈಲು ಹಳಿ ನಿರ್ಮಾಣಕ್ಕೆ ಸೈ ಎಂದ ಕೇಂದ್ರ

    ಬೆಂಗಳೂರು: ಸಿಲಿಕಾನ್ ಸಿಟಿಗೆ ಸಬ್ ಅರ್ಬನ್ ರೈಲು ಸೇವೆ ಒದಗಿಸಲು ಕೇಂದ್ರ ಸರ್ಕಾರ ಇಂದು ಮಂಡಿಸಿರುವ ಬಜೆಟ್ ನಲ್ಲಿ ಘೋಷಣೆ ಮಾಡಿದೆ.

    ಬಜೆಟ್ ನಲ್ಲಿ ರೈಲ್ವೆ ಇಲಾಖೆಯಲ್ಲಿಯೂ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ಸಬ್ ಅರ್ಬನ್ ರೈಲು ಯೋಜನೆಗೆ ಒಟ್ಟು 40 ಸಾವಿರ ಕೋಟಿ ರೂ. ಮೀಸಲಿಡಲಾಗಿದ್ದು, ಅದರಲ್ಲಿ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ 17 ಸಾವಿರ ಕೋಟಿ ರೂ. ನೀಡಲಾಗುತ್ತಿದೆ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.

    ಇದರಿಂದ ನಗರ ಮತ್ತು ಸುತ್ತಮುತ್ತಲಿನ ಉಪನಗರಗಳಿಗೆ ರೈಲು ಸಂಪರ್ಕ ಏರ್ಪಡಲಿದೆ. ರಾಮನಗರ-ಬೆಂಗಳೂರು, ಬೆಂಗಳೂರು-ಮಂಡ್ಯ, ಕೇಂದ್ರ ರೈಲ್ವೇ ನಿಲ್ದಾಣ-ಯಶವಂತಪುರ, ಯಶವಂತಪುರ- ತುಮಕೂರು, ಯಲಹಂಕ-ಬೈಯಪ್ಪನಹಳ್ಳಿ, ಯಲಹಂಕ-ದೊಡ್ಡಬಳ್ಳಾಪುರ, ಯಲಹಂಕ-ಚಿಕ್ಕಬಳ್ಳಾಪುರ ನಡುವೆ ಬೆಂಗಳೂರು ಸಬ್ ಅರ್ಬನ್ ರೈಲು ಸೇವೆ ಆರಂಭವಾಗಲಿದೆ.

    ನಗರದ ಜನದಟ್ಟಣೆ ಕಡಿಮೆ ಮಾಡಲು ಮತ್ತು ವಿಮಾನ ನಿಲ್ದಾಣಕ್ಕೆ ನೇರಸಂಪರ್ಕ ಕಲ್ಪಿಸುವ ಉದ್ದೇಶದಿಂದ ಬೆಂಗಳೂರಿಗೆ ಸಬ್ ಅರ್ಬನ್ ರೈಲು ಬರಬೇಕು ಎಂಬ ಪ್ರಸ್ತಾಪವನ್ನು 1996ರಿಂದಲೇ ಈಗ ಕೇಂದ್ರ ಸಚಿವರಾಗಿರುವ ಅನಂತ್ ಕುಮಾರ್ ಅವರು ಸರ್ಕಾರಗಳನ್ನು ಒತ್ತಾಯ ಮಾಡುತ್ತಲೇ ಬಂದಿದ್ದರು. ಇದೀಗ ಅವರ ಸಿಲಿಕಾನ್ ಸಿಟಿಯ ಕನಸು ಈಡೇರಿದೆ. ಒಟ್ಟಿನಲ್ಲಿ ಲಕ್ಷಾಂತರ ಜನರಿಗೆ ಅನುಕೂಲವಾಗುವ ಈ ಯೋಜನೆಯಿಂದ ಟ್ರಾಫಿಕ್ ಜಾಮ್ ತಪ್ಪಲಿದೆ.

  • ರೈಲಿಗೆ ತಲೆ ಕೊಟ್ಟು ಪಿಹೆಚ್‍ಡಿ ವಿದ್ಯಾರ್ಥಿನಿ ಆತ್ಮಹತ್ಯೆ

    ರೈಲಿಗೆ ತಲೆ ಕೊಟ್ಟು ಪಿಹೆಚ್‍ಡಿ ವಿದ್ಯಾರ್ಥಿನಿ ಆತ್ಮಹತ್ಯೆ

    ಕಲಬುರಗಿ: ಪಿಹೆಚ್‍ಡಿ ವಿದ್ಯಾರ್ಥಿನಿಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಕಲಬುರಗಿಯಲ್ಲಿ ನಡೆದಿದೆ.

    31 ವರ್ಷದ ಶ್ರೀದೇವಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ರೈಲ್ವೇ ಹಳಿ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮೃತ ಶ್ರೀದೇವಿ ಗುಲ್ಬರ್ಗಾ ವಿವಿ ಅರ್ಥಶಾಸ್ತ್ರ ವಿಭಾಗದ ಪಿಹೆಚ್‍ಡಿ ವಿದ್ಯಾರ್ಥಿನಿಯಾಗಿದ್ದರು. ಈಕೆ ಸಾಯುವ ಮುನ್ನ ಮನೆಯಲ್ಲಿ ಡೆತ್‍ನೋಟ್ ಬರೆದಿಟ್ಟು ಕಾಣೆಯಾಗಿದ್ದು, ಇದೀಗ ಶವವಾಗಿ ಪತ್ತೆಯಾಗಿದ್ದಾರೆ.

    ಆತ್ಮಹತ್ಯೆಗೆ ಕಾರಣವೇನು?: ತಿಪ್ಪಣ್ಣ ಎಂಬ ವ್ಯಕ್ತಿ ತನಗೆ 5 ವರ್ಷಗಳಿಂದ ಪರಿಚಯವಿದ್ದು, ಮದುವೆಯಾಗುವುದಾಗಿ ಹೇಳಿ ಮೋಸ ಮಾಡಿದ್ದಾನೆ. ತುಂಬಾ ತೊಂದರೆ ಕೊಡುತ್ತಿದ್ದಾನೆ. ನನ್ನ ಗೈಡ್ ಕೂಡ ದುಡ್ಡಿಗಾಗಿ ತೊಂದರೆ ಕೊಡುತ್ತಿದ್ದಾರೆ. ಇದರಿಂದ ಮಾನಸಿಕವಾಗಿ ನೊಂದಿದ್ದೇನೆ. ನನ್ನ ಸಾವಿಗೆ ತಿಪ್ಪಣ್ಣ ಕಾರಣ ಎಂದೆಲ್ಲಾ ಡೆತ್‍ನೋಟ್‍ನಲ್ಲಿ ಶ್ರೀದೇವಿ ಬರೆದಿದ್ದಾರೆ.

    ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    https://www.youtube.com/watch?v=wIVy7EU-WkI