Tag: tata institute

  • ಟಾಟಾ ಇನ್‍ಸ್ಟಿಟ್ಯೂಟ್‍ನಲ್ಲಿ ಸಿಲಿಂಡರ್ ಸ್ಫೋಟ – ಯುವ ವಿಜ್ಞಾನಿ ದುರ್ಮರಣ

    ಟಾಟಾ ಇನ್‍ಸ್ಟಿಟ್ಯೂಟ್‍ನಲ್ಲಿ ಸಿಲಿಂಡರ್ ಸ್ಫೋಟ – ಯುವ ವಿಜ್ಞಾನಿ ದುರ್ಮರಣ

    ಬೆಂಗಳೂರು: ನಗರದ ಯಶವಂತಪುರ ಬಳಿಯ ಟಾಟಾ ಇನ್‍ಸ್ಟಿಟ್ಯೂಟ್‍ನಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಸಂಶೋಧಕ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.

    ಮನೋಜ್ ಕುಮಾರ್ ಮೃತ ದುರ್ದೈವಿ ವಿದ್ಯಾರ್ಥಿ. ಈತ ಏರೋ ಸ್ಪೇಸ್ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದನು. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದೆ.

    ಸದ್ಯ ಗಾಯಾಳುಗಳನ್ನು ಸ್ಥಳೀಯ ಖಾಸಾಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೆಮಿಕಲ್ ಸಿಲಿಂಡರ್ ಬ್ಲಾಸ್ಟ್ ಆದ ಹಿನ್ನೆಲೆಯಲ್ಲಿ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಸದಾಶಿವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

     ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv