Tag: TATA IPL

  • ಇಂದು ಚೆನ್ನೈನಲ್ಲಿ ರೈಡರ್ಸ್ vs ರೈಸರ್ಸ್ ಫೈನಲ್ ಹಣಾಹಣಿ – ಈ ಸಲ ಕಪ್ ಯಾರಿಗೆ?

    ಇಂದು ಚೆನ್ನೈನಲ್ಲಿ ರೈಡರ್ಸ್ vs ರೈಸರ್ಸ್ ಫೈನಲ್ ಹಣಾಹಣಿ – ಈ ಸಲ ಕಪ್ ಯಾರಿಗೆ?

    ಚೆನ್ನೈ: ಐಪಿಎಲ್ 2024ರ ಫೈನಲ್ ಪಂದ್ಯಕ್ಕೆ ಚೆನ್ನೈನ (Chennai) ಚೆಪಾಕ್ ಮೈದಾನ (Chepauk Stadium) ಸಜ್ಜಾಗಿದ್ದು, ಈ ಬಾರಿ ಕಿರೀಟ ಯಾರ ಮುಡಿಗೇರಲಿದೆ ಎಂಬ ಕುತೂಹಲಕ್ಕೆ ಇಂದು ತೆರೆಬೀಳಲಿದೆ. 17ನೇ ಆವೃತ್ತಿಯ ಪ್ರಶಸ್ತಿ ತಮ್ಮದಾಗಿಸಿಕೊಳ್ಳಲು ಇಂದು ಕೋಲ್ಕತ್ತಾ ನೈಟ್ ರೈಡರ್ಸ್‌ (KKR) ಮತ್ತು ಸನ್ ರೈಸರ್ಸ್ ಹೈದರಾಬಾದ್ (SRH) ಮಧ್ಯೆ ರೋಚಕ ಕಾದಾಟ ನಡೆಯಲಿದೆ.

    ಐಪಿಎಲ್ 2024ರ (IPL 2024) ಲೀಗ್ ಹಂತದ ಅಗ್ರ ಎರಡು ತಂಡಗಳಾಗಿರುವ ಕೆಕೆಆರ್ ಮತ್ತು ಎಸ್‌ಆರ್‌ಹೆಚ್, ಮತ್ತೊಮ್ಮೆ ರನ್ ಮಳೆ ಹರಿಸಲು ಸಜ್ಜಾಗಿವೆ. ಆದರೆ, ಚೆನ್ನೈನ ನಿಧಾನ ಗತಿಯ ಪಿಚ್ ಉಭಯ ತಂಡಗಳ ಸ್ಫೋಟಕ ಆಟಕ್ಕೆ ಹೇಗೆ ವರ್ತಿಸಲಿದೆ ಎಂಬುದು ಕುತೂಹಲ ಮೂಡಿಸಿದೆ. ಇದನ್ನೂ ಓದಿ: USAಗೆ ಹಾರಿದ ಟೀಂ ಇಂಡಿಯಾ ಮೊದಲ ಬ್ಯಾಚ್‌ – ವಿಶ್ವಕಪ್‌ ಗೆದ್ದುಬರುವಂತೆ ಕೋಟ್ಯಂತರ ಅಭಿಮಾನಿಗಳ ಹಾರೈಕೆ!

    ಅಹಮದಾಬಾದ್‌ನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಎಸ್‌ಆರ್‌ಹೆಚ್ ತಂಡದ ವಿರುದ್ಧ ಗೆದ್ದ ಕೆಕೆಆರ್, ನೇರವಾಗಿ ಫೈನಲ್ ಪ್ರವೇಶಿಸಿತು. ಇದೇ ವೇಳೆ ಕೆಕೆಆರ್ ವಿರುದ್ಧ ಸೋತ ಸನ್‌ರೈಸರ್ಸ್, ಆ ಬಳಿಕ ಎರಡನೇ ಕ್ವಾಲಿಫೈಯರ್ ಕದನದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 36 ರನ್‌ಗಳಿಂದ ಗೆದ್ದು ಮತ್ತೆ ಕೆಕೆಆರ್ ತಂಡವನ್ನು ಎದುರಿಸಲು ಸಜ್ಜಾಗಿದೆ. ಶುಕ್ರವಾರವಷ್ಟೇ ಚೆಪಾಕ್ ಮೈದಾನದಲ್ಲಿ ರಾಜಸ್ಥಾನವನ್ನು ಸೋಲಿಸಿದ ಹೈದರಾಬಾದ್‌ಗೆ ಈ ಪಿಚ್ ಹೇಗೆ ವರ್ತಿಸುತ್ತದೆ ಎಂಬುದರ ಅರಿವಾಗಿದೆ. ಎರಡೂ ತಂಡಗಳ ಬ್ಯಾಟಿಂಗ್, ಬೌಲಿಂಗ್ ವಿಭಾಗ ಬಲಿಷ್ಟವಾಗಿದೆ. ಇದನ್ನೂ ಓದಿ: Malaysia Masters: ಜಿದ್ದಾ ಜಿದ್ದಿ ಕಣದಲ್ಲಿ ಗೆದ್ದು ಫೈನಲ್‌ಗೆ ಲಗ್ಗೆಯಿಟ್ಟ ಸಿಂಧು!

    ಫೈನಲ್ ಪಂದ್ಯಕ್ಕೂ ಮುನ್ನ ಅದ್ಧೂರಿ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದೆ. ಸಂಜೆ 6 ಗಂಟೆಗೆ ಕಾರ್ಯಕ್ರಮ ಪ್ರಾರಂಭಗೊಳ್ಳಲಿದ್ದು, ನಟ-ನಟಿಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದನ್ನೂ ಓದಿ: IPL 2024: ಫೈನಲ್‌ ಪಂದ್ಯಕ್ಕೆ ʻರೆಮಲ್‌ʼ ಚಂಡಮಾರುತದ ಆತಂಕ – ಮಳೆ ಅಡ್ಡಿಯಾದ್ರೆ ವಿಜೇತರನ್ನ ನಿರ್ಧರಿಸೋದು ಹೇಗೆ?

    ಕೆಕೆಆರ್ ತಂಡ 14 ಪಂದ್ಯಗಳಲ್ಲಿ 9 ಪಂದ್ಯವನ್ನು ಗೆದ್ದು, 3 ಪಂದ್ಯದಲ್ಲಿ ಸೋಲನ್ನು ಅನುಭವಿಸಿದೆ. ಇನ್ನೂ 2 ಪಂದ್ಯ ಮಳೆಗೆ ಬಲಿಯಾಗಿದೆ. ಒಟ್ಟು 20 ಅಂಕಗಳನ್ನು ಗಳಿಸಿ ಕೆಕೆಆರ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನು ಎಸ್‌ಆರ್‌ಹೆಚ್ ತಂಡ 14 ಪಂದ್ಯಗಳಲ್ಲಿ 8 ಪಂದ್ಯ ಗೆದ್ದು, 5 ಪಂದ್ಯದಲ್ಲಿ ಸೋಲುಂಡಿದೆ. ಒಟ್ಟು 17 ಅಂಕಗಳನ್ನು ಗಳಿಸಿರುವ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಗಳಿಸಿದೆ. ಇದನ್ನೂ ಓದಿ: Divorce Rumours: ಪತ್ನಿ ನತಾಶಾಗೆ ವಿಚ್ಛೇದನ ನೀಡಿದ್ರೆ 70% ಕರಗಲಿದೆ ಪಾಂಡ್ಯ ಸಂಪತ್ತು!

  • ಐಪಿಎಲ್‌ನಲ್ಲಿ ಮತ್ತೊಂದು ದಾಖಲೆ ಉಡೀಸ್‌ -‌ ಬರೋಬ್ಬರಿ 35 ಕೋಟಿ ಮಂದಿ ವೀಕ್ಷಣೆ!

    ಐಪಿಎಲ್‌ನಲ್ಲಿ ಮತ್ತೊಂದು ದಾಖಲೆ ಉಡೀಸ್‌ -‌ ಬರೋಬ್ಬರಿ 35 ಕೋಟಿ ಮಂದಿ ವೀಕ್ಷಣೆ!

    ವಿಶಾಖಪಟ್ಟಣಂ: 2024ರ ಐಪಿಎಲ್‌ (IPL 2024) ಆವೃತ್ತಿ ಹಲವು ಅವಿಸ್ಮರಣೀಯ ದಾಖಲೆಗಳಿಗೆ ಸಾಕ್ಷಿಯಾಗಿದೆ. ಮೈದಾನದಲ್ಲಿ ಹುರಿಯಾಳುಗಳು ಬ್ಯಾಟ್‌ ಹಿಡಿದು ಅಬ್ಬರಿಸುತ್ತಾ ದಾಖಲೆಗಳನ್ನು ಬರೆಯುತ್ತಿದ್ದರೆ, ಗ್ರೌಂಡ್‌ ಹೊರಗೆ ಕ್ರಿಕೆಟ್‌ ಅಭಿಮಾನಿಗಳು ವೀಕ್ಷಣೆಯಲ್ಲಿ ದಾಖಲೆ ಮಾಡುತ್ತಿದ್ದಾರೆ. ಬುಧವಾರ ಕೋಲ್ಕತ್ತಾ ನೈಟ್‌ರೈಡರ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ (KKR vs DC) ವಿರುದ್ಧ ಪಂದ್ಯದ ಬಳಿಕ 17ನೇ ಆವೃತ್ತಿ ಮತ್ತೊಂದು ದಾಖಲೆಗೆ ಸಾಕ್ಷಿಯಾಗಿದೆ.

    ಲೀಗ್‌ ಸುತ್ತಿನ ಮೊದಲ 10 ಪಂದ್ಯಗಳಲ್ಲಿ ದಾಖಲೆಯ 35 ಕೋಟಿ ವೀಕ್ಷಣೆ ಕಂಡಿದೆ.‌ ಕೋವಿಡ್‌ ಬಳಿಕ ಸ್ಟಾರ್‌ ಸ್ಫೋರ್ಟ್ಸ್‌ನಲ್ಲಿ (Star Sports) ಐಪಿಎಲ್‌ ಟೂರ್ನಿಯ ಮೊದಲ 10 ಪಂದ್ಯಗಳನ್ನು 35 ಕೋಟಿ ಮಂದಿ ವೀಕ್ಷಣೆ ಮಾಡಿದ್ದಾರೆ. ಇದು ಹಿಂದಿನ ಎಲ್ಲಾ ದಾಖಲೆಗಳನ್ನ ನುಚ್ಚುನೂರು ಮಾಡಿದೆ. ಬಾರ್ಕ್‌ (BARC) ದತ್ತಾಂಶಗಳನ್ನು ಉಲ್ಲೇಖಿಸಿ ಸ್ಟಾರ್‌ಸ್ಫೋರ್ಟ್ಸ್‌ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ರಿಷಭ್‌ ಪಂತ್‌ ಸೇರಿದಂತೆ ಇಡೀ ಡೆಲ್ಲಿ ತಂಡಕ್ಕೆ ಭಾರೀ ದಂಡ

    ಅಲ್ಲದೇ ಟಿವಿಯಲ್ಲಿ ಪಂದ್ಯಾವಳಿಯ ಒಟ್ಟು ವೀಕ್ಷಣೆ ಸಮಯವು 8,028 ಕೋಟಿ ನಿಮಿಷಗಳಷ್ಟು ತಲುಪಿದೆ. ಇದು ಕಳೆದ ವರ್ಷಕ್ಕಿಂತ 20% ಹೆಚ್ಚಳವಾಗಿದೆ. ಅಲ್ಲದೇ ಹಿಂದಿನ ಎಲ್ಲಾ ಆವೃತ್ತಿಗಳಿಗೆ ಹೋಲಿಸಿದರೆ, 17ನೇ ಆವೃತ್ತಿಯ ಐಪಿಎಲ್‌ ಪಂದ್ಯದ ರೇಟಿಂಗ್‌ಗಳು 22% ರಷ್ಟು ಏರಿಕೆಯಾಗಿದೆ ಎಂದು ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ನ ಕ್ರೀಡಾ ವಿಭಾಗದ ಮುಖ್ಯಸ್ಥ ಸಂಜೋಗ್ ಗುಪ್ತಾ ತಿಳಿಸಿದ್ದಾರೆ.

    17ನೇ ಆವೃತ್ತಿಯ ಐಪಿಎಲ್‌ ಟೂರ್ನಿಯು ಕಳೆದ ಮಾರ್ಚ್‌ 22ರಂದು ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು. ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಆರ್‌ಸಿಬಿ ನಡುವಿನ ಉದ್ಘಾಟನಾ ಪಂದ್ಯವನ್ನು ಸುಮಾರು 16.8 ಕೋಟಿ ಮಂದಿ ವೀಕ್ಷಣೆ ಮಾಡಿದ್ದರು. ಮೊದಲ 6 ಪಂದ್ಯಗಳನ್ನು ಜಿಯೋ ಸಿನಿಮಾದಲ್ಲಿ ಆಪ್‌ನಲ್ಲಿ 20 ಕೋಟಿ ಮಂದಿ ವೀಕ್ಷಿಸಿದ್ದರು. ಇದನ್ನೂ ಓದಿ: ಕೆಕೆಆರ್‌ ರನ್‌ ಹೊಳೆಯಲ್ಲಿ ಮುಳುಗಿದ ಡೆಲ್ಲಿ – ನೈಟ್‌ರೈಡರ್ಸ್‌ಗೆ 106 ರನ್‌ಗಳ ಭರ್ಜರಿ ಜಯ

    ಡಿಸ್ನಿ ಸ್ಟಾರ್‌ ಟಾಟಾ ಐಪಿಎಲ್‌ ಟೂರ್ನಿಯನ್ನು 10 ಭಾಷೆಗಳಲ್ಲಿ ಮತ್ತು 14 ವಾಹಿನಿಗಳಲ್ಲಿ ಪ್ರಸಾರ ಮಾಡುತ್ತಿದೆ. ಅಲ್ಲದೇ ಶ್ರವಣದೋಷವುಳ್ಳವರಿಗಾಗಿ ಸಂಕೇತ ಭಾಷೆಯಲ್ಲಿಯೂ ಕಾಮೆಂಟ್ರಿ ಪ್ರಸಾರ ಮಾಡಲಾಗುತ್ತಿದೆ. ಈ ನಡುವೆ ಜಿಯೋ ಸಿನಿಮಾ ತನ್ನ ಆಪ್‌ ಮತ್ತು ಕಂಪ್ಯೂಟರ್‌ ವೀಕ್ಷಕರಿಗೆ ಜೀತೋ ಧನ್ ಧನಾ ಧನ್ ಸ್ಪರ್ಧೆಯ ಮೂಲಕ ಪ್ರತೀ ಪಂದ್ಯದ ವೀಕ್ಷಣೆಯ ವೇಳೆ ಕಾರು ಗೆಲ್ಲುವ ಜೊತೆ ಅತ್ಯಾಕರ್ಷಕ ಬಹುಮಾನಗಳನ್ನೂ ವಿತರಿಸಲಾಗುತ್ತಿದೆ. ಕಳೆದ ವರ್ಷವೂ ಟಾಟಾ ಐಪಿಎಲ್‌ನ ಮೊದಲ 5 ವಾರಗಳಲ್ಲಿ 1,300 ಕೋಟಿಗೂ ಅಧಿಕ ವಿಡಿಯೋ ವೀಕ್ಷಣೆಯ ದಾಖಲೆಯನ್ನು ಜಿಯೋ ಸಿನಿಮಾ ತನ್ನದಾಗಿಸಿಕೊಂಡಿತ್ತು. ಇದನ್ನೂ ಓದಿ: 2ನೇ ಬಾರಿಗೆ ಆರ್‌ಸಿಬಿ ದಾಖಲೆ ನುಚ್ಚುನೂರು – ಐಪಿಎಲ್‌ ಇತಿಹಾಸದಲ್ಲಿ ಮತ್ತೊಂದು ವಿಶೇಷ ಸಾಧನೆ

  • CSKvsGT: ಜಿಯೋಸಿನಿಮಾದಲ್ಲಿ ಏಕಕಾಲಕ್ಕೆ 2.5 ಕೋಟಿ ಜನರಿಂದ ವೀಕ್ಷಣೆ – ಎಲ್ಲಾ ದಾಖಲೆಗಳು ಉಡೀಸ್‌

    CSKvsGT: ಜಿಯೋಸಿನಿಮಾದಲ್ಲಿ ಏಕಕಾಲಕ್ಕೆ 2.5 ಕೋಟಿ ಜನರಿಂದ ವೀಕ್ಷಣೆ – ಎಲ್ಲಾ ದಾಖಲೆಗಳು ಉಡೀಸ್‌

    – GT vs CSK ಕ್ವಾಲಿಫೈಯರ್-1 ಪಂದ್ಯದ ವೇಳೆ ಏಕಕಾಲಕ್ಕೆ ದಾಖಲೆಯ ವೀಕ್ಷಣೆ

    ಮುಂಬೈ: ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಟಾಟಾ ಐಪಿಎಲ್ 2023ರ ಕ್ವಾಲಿಫೈಯರ್-1 (IPl 2023 Qualifier-1) ಪಂದ್ಯವನ್ನು ಜಿಯೋಸಿನಿಮಾದಲ್ಲಿ (JioCinema) ದಾಖಲೆಯ 2.5 ಕೋಟಿ ಜನರು ವೀಕ್ಷಿಸಿದ್ದಾರೆ. ಈ ಮೂಲಕ ಜಿಯೋಸಿನಿಮಾ ಹೊಸ ಮೈಲಿಗಲ್ಲು ಸಾಧಿಸಿದೆ.

    ಜಿಯೋಸಿನಿಮಾ ಹಾಲಿ ಐಪಿಎಲ್ ಆವೃತ್ತಿಯಲ್ಲಿ 3ನೇ ಬಾರಿಗೆ ತನ್ನದೇ ವೀಕ್ಷಕರ ದಾಖಲೆಯನ್ನ ಮುರಿದಿದೆ. ಜೊತೆಗೆ 2019ರ ಐಸಿಸಿ ಏಕದಿನ ವಿಶ್ವಕಪ್ (ICC WorldCup) ವೇಳೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದ ವೇಳೆ ನಿರ್ಮಿಸಲ್ಪಟ್ಟಿದ್ದ ವಿಶ್ವದಾಖಲೆಯನ್ನೂ ಸರಿಗಟ್ಟಿದೆ. ಇದನ್ನೂ ಓದಿ: IPL 2023 Final: ಗುಜರಾತ್‌ಗೆ ಗುನ್ನ ಕೊಟ್ಟ ಚೆನ್ನೈ – 10ನೇ ಬಾರಿಗೆ ಫೈನಲ್‌ಗೆ CSK ಎಂಟ್ರಿ

    ಏಪ್ರಿಲ್ 17ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ (CSK) ನಡುವಿನ ಪಂದ್ಯದ ವೇಳೆ ಎಂ.ಎಸ್ ಧೋನಿ (MS Dhoni) ಅವರ ಆಟ ವೀಕ್ಷಿಸಲು 2.4 ಕೋಟಿ ವೀಕ್ಷಕರು ಜಿಯೋಸಿನಿಮಾದಲ್ಲಿ ಒಟ್ಟಾಗಿ ಸೇರಿದ್ದು ಹಿಂದಿನ ದಾಖಲೆ ಎನಿಸಿತ್ತು. ಅದಕ್ಕೂ ಮುನ್ನ ಏಪ್ರಿಲ್ 12ರಂದು ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಧೋನಿ ಗತವೈಭವ ನೆನಪಿಸುವಂಥ ಬ್ಯಾಟಿಂಗ್ ಪ್ರದರ್ಶಿಸಿದಾಗ ಗರಿಷ್ಠ 2.2 ಕೋಟಿ ವೀಕ್ಷಕರ ದಾಖಲೆ ಕಂಡಿತ್ತು.

    ಟಾಟಾ ಐಪಿಎಲ್ 2023ರ (TATA IPL 2023) ಪಂದ್ಯಗಳನ್ನು ವೀಕ್ಷಿಸಲು ಜಿಯೋಸಿನಿಮಾ, ಕ್ರಿಕೆಟ್ ಅಭಿಮಾನಿಗಳ ಪ್ರಮುಖ ಆದ್ಯತೆ ಆಗಿದೆ ಎಂಬುದಕ್ಕೆ ಈ ದಾಖಲೆಗಳು ಸಾಕ್ಷಿಯಾಗಿವೆ. ರೋಚಕ ಪಂದ್ಯಗಳನ್ನು ವೀಕ್ಷಿಸುವ ವೇಳೆ ಜಿಯೋಸಿನಿಮಾದಲ್ಲಿ ಅಭಿಮಾನಿ ಕೇಂದ್ರಿತವಾದ ಹಲವಾರು ಕೊಡುಗೆಗಳನ್ನು ನೀಡಲಾಗುತ್ತಿದೆ. ಉದಾಹರಣೆಗೆ ಎಲ್ಲಾ ನೆಟ್ವರ್ಕ್ ಚಂದಾದಾರರಿಗೆ ಉಚಿತ ಸ್ಟ್ರೀಮಿಂಗ್ ನೀಡಲಾಗಿದೆ. 4K ಸ್ಟ್ರೀಮಿಂಗ್ ವಿಶೇಷವೆನಿಸಿದೆ. 12 ಭಾಷೆಗಳಲ್ಲಿ ವೀಕ್ಷಕ ವಿವರಣೆ ನೀಡಲಾಗುತ್ತಿದೆ. ಜೀತೋ ಧನ್ ಧನಾ ಧನ್ ಸ್ಪರ್ಧೆಯ ಮೂಲಕ ಪ್ರತೀ ಪಂದ್ಯದ ವೀಕ್ಷಣೆಯ ವೇಳೆ ಕಾರು ಗೆಲ್ಲುವ ಜೊತೆ ಅತ್ಯಾಕರ್ಷಕ ಬಹುಮಾನಗಳನ್ನೂ ವಿತರಿಸಲಾಗುತ್ತಿದೆ.

    ಜಿಯೋಸಿನಿಮಾ ಡಿಜಿಟಲ್ ಕ್ರೀಡಾ ವೀಕ್ಷಣೆಯ ಜಗತ್ತಿನಲ್ಲಿ ಜಾಗತಿಕ ಮಾನದಂಡ ನಿರ್ಮಿಸುವುದನ್ನು ಮುಂದುವರಿಸಿದೆ. ಟಾಟಾ ಐಪಿಎಲ್ 2023ರ ಮೊದಲ 5 ವಾರಗಳಲ್ಲಿ 1,300 ಕೋಟಿಗೂ ಅಧಿಕ ವಿಡಿಯೋ ವೀಕ್ಷಣೆಯ ದಾಖಲೆ ರಚಿಸಲಾಗಿತ್ತು. ವೀಕ್ಷಕರು ಜಿಯೋಸಿನಿಮಾದ ಅಭಿಮಾನಿ-ಕೇಂದ್ರಿತ ಪ್ರಸ್ತುತಿಗೆ ಮನಸೋತಿದ್ದಾರೆ. ಪ್ರತಿ ಪಂದ್ಯದ ವೇಳೆ ಪ್ರತಿ ವೀಕ್ಷಕರು ಸರಾಸರಿ 60 ನಿಮಿಷಗಳಷ್ಟು ಸಮಯವನ್ನು ಜಿಯೋಸಿನಿಮಾದಲ್ಲಿ ಕಳೆಯುತ್ತಿದ್ದಾರೆ. ಕನೆಕ್ಟೆಡ್ ಟಿವಿಯಲ್ಲಿನ ಟಾಟಾ ಐಪಿಎಲ್ 2023ರ ಪಂದ್ಯಗಳ ವೀಕ್ಷಣೆ ಈಗಾಗಲೇ HD TVಗಿಂತ ಎರಡು ಪಟ್ಟು ಅಧಿಕ ವೀಕ್ಷಕರ ಸಂಖ್ಯೆಯನ್ನು ತಲುಪಿದೆ. ಇದನ್ನೂ ಓದಿ: ಪ್ಲೇ ಆಫ್ಸ್‌ನಲ್ಲಿ ಒಂದೊಂದು ಡಾಟ್‌ ಬಾಲ್‌ಗೂ 500 ಗಿಡ ನೆಡಲಿದೆ BCCI – ಏಕೆ ಗೊತ್ತೇ?

    ಟಾಟಾ ಐಪಿಎಲ್ 2023ರ ಡಿಜಿಟಲ್ ಸ್ಟ್ರೀಮಿಂಗ್‌ಗಾಗಿ ಜಿಯೋಸಿನಿಮಾ 26 ಅಗ್ರ ಬ್ರ್ಯಾಂಡ್‌ಗಳ ಜೊತೆ ಒಪ್ಪಂದ ಮಾಡಿಕೊಂಡಿದೆ. ಇವುಗಳಲ್ಲಿ (ಸಹ-ಪ್ರಸ್ತುತ ಪ್ರಾಯೋಜಕ) ಡ್ರೀಮ್11, (ಕೋ-ಪವರ್ಡ್) ಜಿಯೋಮಾರ್ಟ್, ಫೋನ್ಪೆ, ಟಿಯಾಗೋ ಇವಿ, ಜಿಯೋ (ಸಹ ಪ್ರಾಯೋಜಕ) ಆ್ಯಪ್ಪಿ ಫಿಜ್, ಇಟಿಮನೀ, ಕ್ಯಾಸ್ಟ್ರಾಲ್, ಟಿವಿಎಸ್, ಓರಿಯೊ, ಬಿಂಗೋ, ಸ್ಟಿಂಗ್, ಅಜಿಯೋ, ಹೈಯರ್, ರುಪೇ, ಲೂಯಿಸ್ ಜೀನ್ಸ್, ಅಮೆಜಾನ್, ರಾಪಿಡೊ, ಅಲ್ಟ್ರಾ ಟೆಕ್ ಸಿಮೆಂಟ್, ಪೂಮಾ, ಕಮಲಾ ಪಸಂದ್, ಕಿಂಗ್‌ಫಿಶರ್ ಪವರ್ ಸೋಡಾ, ಜಿಂದಾಲ್ ಪ್ಯಾಂಥರ್ ಟಿಎಂಟಿ ರೆಬಾರ್, ಸೌದಿ ಪ್ರವಾಸೋದ್ಯಮ, ಸ್ಪಾಟಿಫೈ ಮತ್ತು ಎಎಂಎಫ್ಐ ಸೇರಿವೆ.

  • IPL 2023: RCB ತಂಡಕ್ಕೆ ಆನೆ ಬಲ – ವಿಲ್‌ ಜಾಕ್ಸ್‌ ಬದಲಿಗೆ ಕಿವೀಸ್‌ ಸ್ಟಾರ್‌ ಆಲ್‌ರೌಂಡರ್‌ ಸೇರ್ಪಡೆ

    IPL 2023: RCB ತಂಡಕ್ಕೆ ಆನೆ ಬಲ – ವಿಲ್‌ ಜಾಕ್ಸ್‌ ಬದಲಿಗೆ ಕಿವೀಸ್‌ ಸ್ಟಾರ್‌ ಆಲ್‌ರೌಂಡರ್‌ ಸೇರ್ಪಡೆ

    ಮುಂಬೈ: ಪ್ರತಿಷ್ಠಿತ 16ನೇ ಆವೃತ್ತಿಯ ಐಪಿಎಲ್‌ (IPL 2023) ಆರಂಭಕ್ಕೆ ಕೆಲವೇ ದಿನಗಳು ಬಾಕಿಯಿದೆ. ದೇಶಾದ್ಯಂತ 12 ಕ್ರೀಡಾಂಗಣದಲ್ಲಿ ಒಟ್ಟು 70 ಲೀಗ್‌ ಪಂದ್ಯಗಳು ನಡೆಯಲಿವೆ. ಪಂದ್ಯ ಆರಂಭಕ್ಕೆ ದಿನಗಣನೆ ಬಾಕಿಯಿರುವ ಹೊತ್ತಿನಲ್ಲೇ ಆರ್‌ಸಿಬಿ (RCB) ತಂಡದಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ.

    ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಇಂಗ್ಲೆಂಡ್‌ ಕ್ರಿಕೆಟಿಗ ವಿಲ್‌ ಜಾಕ್ಸ್‌ (Will Jacks) ಬದಲಿಗೆ ನ್ಯೂಜಿಲೆಂಡ್‌ ತಂಡದ ಸ್ಟಾರ್‌ ಆಲ್‌ರೌಂಡರ್‌ ಮೈಕೆಲ್‌ ಬ್ರೇಸ್ವೆಲ್‌ (Michael Bracewell) ಅವರನ್ನ ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ. ಇದನ್ನೂ ಓದಿ: RCB ಪಂದ್ಯಗಳ ಟಿಕೆಟ್‌ ದರ ನೋಡಿ ಬೆಚ್ಚಿಬಿದ್ದ ಅಭಿಮಾನಿಗಳು – ಟಿಕೆಟ್‌ ಬುಕ್‌ ಮಾಡೋದು ಹೇಗೆ..?

    3.2 ಕೋಟಿಗೆ ಬಿಕರಿಯಾಗಿದ್ದ ಇಂಗ್ಲೆಂಡ್‌ ಕ್ರೆಕೆಟಿಗ ವಿಲ್‌ ಜಾಕ್ಸ್‌ ಬೆನ್ನಿನ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ. ಆದ್ದರಿಂದ ಬದಲಿ ಆಟಗಾರನಾಗಿ ಮೈಕೆಲ್‌ ಬ್ರೇಸ್ವೆಲ್‌ ಅವರನ್ನ 1 ಕೋಟಿ ರೂ.ಗೆ ಆರ್‌ಸಿಬಿ ತಂಡ ಖರೀದಿ ಮಾಡಿದೆ.

    16 T20 ಪಂದ್ಯಗಳನ್ನಾಡಿರುವ ಬ್ರೇಸ್ವೆಲ್‌ 113 ರನ್‌ ಗಳಿಸಿದ್ದು, 21 ವಿಕೆಟ್‌ ಪಡೆದಿದ್ದಾರೆ. ಇತ್ತೀಚೆಗೆ ಭಾರತದ ವಿರುದ್ಧ ನಡೆದ ಏಕದಿನ ಕ್ರಿಕೆಟ್‌ ಸರಣಿಯ ಮೊದಲ ಪಂದ್ಯದಲ್ಲೇ 78 ಎಸೆತಗಳಲ್ಲಿ 140 ರನ್‌ ಚಚ್ಚಿದ್ದರು. ಇದನ್ನೂ ಓದಿ: ವಿರಾಟ್ ಅಣ್ಣನ ಸಲಹೆ ಸಹಾಯವಾಯ್ತು – RCB ಗೆಲುವಿನ ನಂತ್ರ ಮಂದಾನ ಮುಖದಲ್ಲಿ ಮಂದಹಾಸ

    ಏಪ್ರಿಲ್‌ 2 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಮೊದಲ ಪಂದ್ಯ ನಡೆಯಲಿದ್ದು, ಮುಂಬೈ ಇಂಡಿಯನ್ಸ್‌ ವಿರುದ್ಧ ಸೆಣಸಲಿದೆ.

  • ಒಟ್ಟು 65 ದಿನ ಐಪಿಎಲ್ ಕಲರವ – ಆರ್​ಸಿಬಿಗೆ ಪಂಜಾಬ್ ಮೊದಲ ಎದುರಾಳಿ

    ಒಟ್ಟು 65 ದಿನ ಐಪಿಎಲ್ ಕಲರವ – ಆರ್​ಸಿಬಿಗೆ ಪಂಜಾಬ್ ಮೊದಲ ಎದುರಾಳಿ

    ಮುಂಬೈ: 2022ರ ಐಪಿಎಲ್ ವೇಳಾಪಟ್ಟಿ ಇಂದು ಬಿಡುಗಡೆಯಾಗಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರನ್ನರ್‌ಅಪ್‌ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ವಾಂಖೆಡೆ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿದೆ.

    ಮಾರ್ಚ್ 26 ರಂದು ಐಪಿಎಲ್ ಆರಂಭವಾಗುತ್ತಿದ್ದು, ಮುಂಬೈ ಮತ್ತು ಪುಣೆಯಲ್ಲಿ ಒಟ್ಟು 70 ಲೀಗ್ ಮತ್ತು 4 ಪ್ಲೇ ಆಫ್ ಪಂದ್ಯಗಳು ನಡೆಯಲಿದೆ. ಒಟ್ಟು 65 ದಿನಗಳ ಕಾಲ ಟೂರ್ನಿ ನಡೆಯಲಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಜಡೇಜಾ ಆಲ್‍ರೌಂಡರ್ ಆಟಕ್ಕೆ ಮಂಕಾದ ಲಂಕಾ – ಭಾರತಕ್ಕೆ ಭರ್ಜರಿ ಇನ್ನಿಂಗ್ಸ್ ಜಯ

    ಮುಂಬೈ ನಗರದಲ್ಲಿರುವ ವಾಂಖೆಡೆ ಸ್ಟೇಡಿಯಂ, ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಒಟ್ಟು 20 ಲೀಗ್ ಪಂದ್ಯಗಳು ನಡೆಯಲಿದೆ. ಪುಣೆಯ ಎಮ್‍ಸಿಎ ಅಂತರಾಷ್ಟ್ರೀಯ ಸ್ಟೇಡಿಯಂ ಮತ್ತು ಬ್ರಬೋರ್ನ್ ಕ್ರೀಡಾಂಗಣದಲ್ಲಿ 15 ಪಂದ್ಯ ನಡೆಯಲಿದೆ. ಎಲ್ಲಾ ತಂಡಗಳು ತಲಾ 4 ಪಂದ್ಯಗಳನ್ನು ವಾಂಖೆಡೆ ಮತ್ತು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಆಡಲಿದ್ದು, ತಲಾ 3 ಪಂದ್ಯಗಳನ್ನು ಬ್ರಬೋರ್ನ್ ಮತ್ತು ಎಮ್‍ಸಿಎ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಆಡಲಿದೆ.

    ಮಾರ್ಚ್ 27 ರಂದು ಮೊದಲ ಡಬಲ್‌ ಹೆಡರ್ ಪಂದ್ಯ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಡೆಲ್ಲಿ ಮತ್ತು ಮುಂಬೈ ತಂಡ ಸೆಣಸಾಡಲಿದೆ. ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡ ಎದುರುಬದುರಾಗಲಿದ್ದು, ಈ ಮೂಲಕ ಆರ್​ಸಿಬಿ ತನ್ನ ಅಭಿಯಾನ ಆರಂಭಿಸಲಿದೆ. ಇದನ್ನೂ ಓದಿ: ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಅನುಷ್ಕಾ ಶರ್ಮಾ ಶುಭ ಹಾರೈಕೆ

    12 ಡಬಲ್ ಹೆಡರ್ ಪಂದ್ಯಾಟ ನಡೆಯಲಿದ್ದು, ಮೊದಲ ಪಂದ್ಯ ಮಧ್ಯಾಹ್ನ 3:30ಕ್ಕೆ ಆರಂಭವಾದರೆ, ಎರಡನೇ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ. ಫೈನಲ್ ಪಂದ್ಯ ಮೇ 29 ರಂದು ನಡೆಯಲಿದೆ. ಇದನ್ನೂ ಓದಿ: ಮಹಿಳಾ ವಿಶ್ವಕಪ್ 2022- ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ