Tag: tax free

  • UPನಲ್ಲಿ ‘ದಿ ಕೇರಳ ಸ್ಟೋರಿ’ ಚಿತ್ರ ಪ್ರಸಾರಕ್ಕೆ ತೆರಿಗೆ ವಿನಾಯ್ತಿ – ಸಿನಿಮಾ ವೀಕ್ಷಣೆ ಮಾಡಲಿದ್ದಾರೆ ಸಿಎಂ ಯೋಗಿ

    UPನಲ್ಲಿ ‘ದಿ ಕೇರಳ ಸ್ಟೋರಿ’ ಚಿತ್ರ ಪ್ರಸಾರಕ್ಕೆ ತೆರಿಗೆ ವಿನಾಯ್ತಿ – ಸಿನಿಮಾ ವೀಕ್ಷಣೆ ಮಾಡಲಿದ್ದಾರೆ ಸಿಎಂ ಯೋಗಿ

    ಲಕ್ನೋ: ದೇಶಾದ್ಯಂತ ಭಾರೀ ಸದ್ದು ಮಾಡುತ್ತಿರುವ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾಕ್ಕೆ ಉತ್ತರ ಪ್ರದೇಶದ ಸರ್ಕಾರ (UttarPradesh Government) ತೆರಿಗೆ ಮುಕ್ತ (Tax Free) ಪ್ರಸಾರಕ್ಕೆ ಅನುಮತಿ ನೀಡುವುದಾಗಿ ಹೇಳಿದೆ.

    ಈ ಕುರಿತು ಟ್ವೀಟ್‌ ಮೂಲಕ ತಿಳಿಸಿರುವ ಸಿಎಂ ಯೋಗಿ ಆದಿತ್ಯನಾಥ್‌, ಉತ್ತರ ಪ್ರದೇಶದಲ್ಲಿ ʻದಿ ಕೇರಳ ಸ್ಟೋರಿʼ ಚಿತ್ರಕ್ಕೆ ತೆರಿಗೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ರಾಜ್ಯದಲ್ಲಿ ಚಲನಚಿತ್ರ ಪ್ರಸಾರ ನಿಷೇಧಿಸಿದ ಒಂದು ದಿನದ ನಂತರ ಯೋಗಿ ಆದಿತ್ಯನಾಥ್‌ ತೆರಿಗೆ ಮುಕ್ತಗೊಳಿಸುವುದಾಗಿ ಘೋಷಣೆ ಮಾಡಿದ್ದಾರೆ. ಇದರೊಂದಿಗೆ ವಿಶೇಷ ಪ್ರದರ್ಶನದಲ್ಲಿ ಯೋಗಿ ಆದಿತ್ಯನಾಥ್‌ ಹಾಗೂ ಸಚಿವ ಸಂಪುಟದ ಸದಸ್ಯರೂ ಚಲನಚಿತ್ರ ವೀಕ್ಷಣೆ ಮಾಡುವ ಸಾಧ್ಯತೆಗಳಿವೆ ಎಂದು ಎಂದು ಆಪ್ತ ಮೂಲಗಳು ತಿಳಿಸಿವೆ.

    ‘ದಿ ಕೇರಳ ಸ್ಟೋರಿ’ (The Kerala Story) ಚಿತ್ರವನ್ನು ತಮಿಳುನಾಡು ಸರ್ಕಾರ ನಿಷೇಧ ಮಾಡಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳ (West Bengal) ಸರ್ಕಾರವೂ ಚಿತ್ರಮಂದಿರಗಳಲ್ಲಿ ಪ್ರದರ್ಶಿಸುವುದನ್ನ ನಿಷೇಧಿಸಿತ್ತು. ಸರ್ಕಾರದ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: The Kerala Story ಬಂದ್ಮೇಲೆ ಇಸ್ಲಾಂಗೆ 32 ಸಾವಿರ ಮಹಿಳೆಯರ ಮತಾಂತರ – ಗಂಭೀರ ಆರೋಪ

    ಬಹುತೇಕ ಕಡೆ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಮಧ್ಯ ಪ್ರದೇಶ ಸೇರಿದಂತೆ ಹಲವು ರಾಜ್ಯಗಳು ತೆರಿಗೆ ವಿನಾಯಿತಿಯನ್ನೂ ಘೋಷಣೆ ಮಾಡಿವೆ. ಆದರೂ, ಪಶ್ಚಿಮ ಬಂಗಾಳ ಸರ್ಕಾರ ಈ ರೀತಿ ಸಿನಿಮಾವೊಂದನ್ನು ನಿಷೇಧ ಮಾಡುವುದು ಸರಿಯಲ್ಲ ಎಂದು ಬಿಜೆಪಿ (BJP) ಪ್ರತಿಕ್ರಿಯಿಸಿದೆ. ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಪ್ರತಿಭಟನೆಯ ಎಚ್ಚರಿಕೆಯನ್ನೂ ಕೊಟ್ಟಿದೆ. ದ್ವೇಷ ಮತ್ತು ಹಿಂಸಾಚಾರದ ಘಟನೆಗಳನ್ನು ತಪ್ಪಿಸಿ ರಾಜ್ಯದಲ್ಲಿ ಶಾಂತಿಯನ್ನು ಕಾಪಾಡುವ ಸಲುವಾಗಿ ಪಶ್ಚಿಮ ಬಂಗಾಳ ಸರ್ಕಾರವು ಕೇರಳ ಸ್ಟೋರಿ ಚಲನಚಿತ್ರವನ್ನು ನಿಷೇಧಿಸಲು ನಿರ್ಧರಿಸಿದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

    MAMATHA BANERJEE

    ಅದಾ ಶರ್ಮಾ (Adah Sharma) ಮುಖ್ಯಭೂಮಿಕೆಯ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಈಗಾಗಲೇ ರಿಲೀಸ್ ಆಗಿದೆ. ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ಮೂಡಿ ಬಂದಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ನಿಷೇಧ : ಪ್ರತಿಭಟನೆಗೆ ಇಳಿದ ಬಿಜೆಪಿ

  • 175 ಕೋಟಿ ರೂ. ತೆರಿಗೆ ವಿನಾಯಿತಿ – ಶಿರಡಿಯ ಸಾಯಿಬಾಬಾ ದೇವಾಲಯಕ್ಕೆ ರಿಲೀಫ್

    175 ಕೋಟಿ ರೂ. ತೆರಿಗೆ ವಿನಾಯಿತಿ – ಶಿರಡಿಯ ಸಾಯಿಬಾಬಾ ದೇವಾಲಯಕ್ಕೆ ರಿಲೀಫ್

    ಮುಂಬೈ: ಶಿರಡಿಯ (Shirdi) ಶ್ರೀ ಸಾಯಿಬಾಬಾ ದೇವಸ್ಥಾನ ಟ್ರಸ್ಟ್‌ಗೆ (Sri Saibaba Temple Trust) ಕಳೆದ ಮೂರು ವರ್ಷಗಳಲ್ಲಿ ವಿಧಿಸಲಾದ 175 ಕೋಟಿ ಆದಾಯ ತೆರಿಗೆ ಪಾವತಿಯಿಂದ (Income Tax Department) ವಿನಾಯಿತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸುಪ್ರೀಂ ಕೋರ್ಟ್ (Supreme Court) ಆದೇಶದ ಮೇರೆಗೆ ವಿನಾಯಿತಿ ನೀಡಲಾಗಿದೆ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 2015-16ನೇ ಸಾಲಿನ ತೆರಿಗೆಯನ್ನು ನಿರ್ಣಯಿಸುವಾಗ ಆದಾಯ ತೆರಿಗೆ ಇಲಾಖೆಯು ಶ್ರೀ ಸಾಯಿಬಾಬಾ ಸಂಸ್ಥಾನವು ಧಾರ್ಮಿಕ ಟ್ರಸ್ಟ್ ಅಲ್ಲ, ಚಾರಿಟೇಬಲ್ ಟ್ರಸ್ಟ್ ಎಂದು ಪರಿಗಣಿಸಲಾಗಿತ್ತು. ಹೀಗಾಗಿ ಪಡೆದ ದೇಣಿಗೆಗೆ ಶೇ.30ರಷ್ಟು ಆದಾಯ ತೆರಿಗೆ ವಿಧಿಸಿ, 183 ಕೋಟಿಗೆ ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ಸೂಚಿಸಿತ್ತು. ಇದನ್ನೂ ಓದಿ: ನರ್ಮದಾ ಘಾಟ್‍ನಲ್ಲಿ ಪ್ರಿಯಾಂಕಾ ಗಾಂಧಿ ಜೊತೆ ಆರತಿ ಬೆಳಗಿದ ರಾಹುಲ್ ಗಾಂಧಿ

    ತೆರಿಗೆ ವಿಧಿಸಿದ್ದನ್ನು ಪ್ರಶ್ನಿಸಿ ಟ್ರಸ್ಟ್ ಸುಪ್ರೀಂ ಕೋರ್ಟ್‍ಗೆ ರಿಟ್ ಅರ್ಜಿಯನ್ನು ಸಲ್ಲಿಸಿತು. ವಿಚಾರಣೆ ನಡೆಸಿದ್ದ ಕೋರ್ಟ್ ನಿಗದಿತ ತೆರಿಗೆಯನ್ನು ನಿರ್ಧರಿಸುವವರೆಗೆ ಪಾವತಿಸಬೇಕಾದ ತೆರಿಗೆಗೆ ತಡೆ ನೀಡಿತ್ತು. ಅಂತಿಮವಾಗಿ ಆದಾಯ ತೆರಿಗೆ ಇಲಾಖೆ ಶ್ರೀ ಸಾಯಿಬಾಬಾ ಸಂಸ್ಥಾನವನ್ನು ಧಾರ್ಮಿಕ ಮತ್ತು ಚಾರಿಟೇಬಲ್ ಟ್ರಸ್ಟ್ ಎಂದು ಪರಿಗಣಿಸಿದೆ. ಹೀಗಾಗಿ ಶ್ರೀ ಸಾಯಿಬಾಬಾ ಸಂಸ್ಥಾನಕ್ಕೆ ಕಳೆದ ಮೂರು ವರ್ಷಗಳಲ್ಲಿ ವಿಧಿಸಲಾಗಿದ್ದ 175 ಕೋಟಿ ರೂಪಾಯಿ ತೆರಿಗೆಗೆ ವಿನಾಯಿತಿ ನೀಡಲಾಗಿದೆ. ಇದನ್ನೂ ಓದಿ: ಜಮೀನಿನ ಖಾತೆ ಬದಲಾವಣೆಗಾಗಿ ಲಂಚ ಸ್ವೀಕರಿಸುತ್ತಿದ್ದ ಕಿತ್ತೂರು ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

    Live Tv
    [brid partner=56869869 player=32851 video=960834 autoplay=true]

  • `ಗಂಧದಗುಡಿ’ ಚಿತ್ರಕ್ಕೆ ಟ್ಯಾಕ್ಸ್ ಫ್ರೀಗೆ ಒತ್ತಾಯ – ಅಪ್ಪು ಅಭಿಮಾನಿಗಳಿಂದ ಸರ್ಕಾರಕ್ಕೆ ಮನವಿ

    `ಗಂಧದಗುಡಿ’ ಚಿತ್ರಕ್ಕೆ ಟ್ಯಾಕ್ಸ್ ಫ್ರೀಗೆ ಒತ್ತಾಯ – ಅಪ್ಪು ಅಭಿಮಾನಿಗಳಿಂದ ಸರ್ಕಾರಕ್ಕೆ ಮನವಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‌ ಕುಮಾರ್‌ ( Puneeth Rajkumar) ಅವರ ಕೊನೆಯ ಚಿತ್ರ ಗಂಧದಗುಡಿ (Gandhagudi) ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ನಾಡು, ನುಡಿ ಉಳಿವಿನ ವಿಚಾರವಾಗಿ ಬರುತ್ತಿರುವ ಈ ಚಿತ್ರಕ್ಕೆ ಸದ್ಯ ಟ್ಯಾಕ್ಸ್ ಫ್ರೀ ಮಾಡುವಂತೆ ಅಭಿಮಾನಿಗಳು ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ.

    ಕರ್ನಾಟಕ ರತ್ನ ಡಾ. ಪುನೀತ್ ರಾಜ್‍ಕುಮಾರ್ ಅವರ ಕನಸಿನ ಕೂಸು ಗಂಧದಗುಡಿ ಚಿತ್ರ ಇದೇ ತಿಂಗಳ 28ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಇದು ಅಪ್ಪು ಅವರ ಕೊನೆಯ ಚಿತ್ರ ಆಗಿರುವ ಕಾರಣ ಸಿನಿಮಾದ ಕ್ರೇಜ್ ಹಾಗೂ ಸೆಲೆಬ್ರೇಷನ್ ರೇಂಜು ಎರಡೂ ಬೇರೆಯದ್ದೇ ಮಟ್ಟದಲ್ಲಿರಲಿದೆ ಎನ್ನುವುದು ಖಚಿತ. ಈಗಾಗಲೇ ಪರಮಾತ್ಮನನ್ನು ಕಣ್ತುಂಬಿಕೊಳ್ಳುವುದಕ್ಕೆ ಇಡೀ ದೇಶವೇ ಕಾದುಕುಳಿತಿದೆ. ಈ ನಡುವೆ ಸರ್ಕಾರಕ್ಕೆ ಅಪ್ಪು ಅಭಿಮಾನಿಗಳು ಮನವಿವೊಂದನ್ನು ಸಲ್ಲಿಸಲು ತಯಾರಿ ನಡೆಸಿದ್ದಾರೆ.  ಇದನ್ನೂ ಓದಿ: ‘ಗಂಧದ ಗುಡಿ’ ಪ್ರಿ ರಿಲೀಸ್ ಇವೆಂಟ್ : ಅಮಿತಾಭ್, ರಜನಿ ಸೇರಿ ಗಣ್ಯರಿಗೆ ಆಹ್ವಾನ

    ಹೌದು ಅರಣ್ಯ ಸಂಪತ್ತು, ಪ್ರಾಣಿ ಪಕ್ಷಿ ಸಂಕುಲ ಉಳಿಸುವ ನಿಟ್ಟಿನಲ್ಲಿ ಶುರುವಾದ ಚಿತ್ರ ಗಂಧದಗುಡಿ. ನಾಡು, ನುಡಿ ವಿಚಾರವಾಗಿ ಬರುತ್ತಿರುವ ಈ ಚಿತ್ರಕ್ಕೆ ಯಾವುದೇ ತೆರಿಗೆ ವಿಧಿಸದೇ ವಿನಾಯಿತಿ ನೀಡುವಂತೆ ಅಭಿಮಾನಿಗಳು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಈ ಹಿಂದೆ ಬಿಡುಗಡೆಯಾದ ದಿ ಕಾಶ್ಮೀರ್ ಫೈಲ್ಸ್ (The kashmir Files) ಚಿತ್ರಕ್ಕೆ ತೆರಿಗೆ ವಿನಾಯಿತಿ ಕೊಟ್ರಿ. ಈಗ ನಮ್ಮದೇ ಭಾಷೆಯ ಚಿತ್ರ ಸಮಾಜಕ್ಕೆ ಸಂದೇಶ ಸಾರುತ್ತಿದೆ. ಜೊತೆಗೆ ಪುನೀತ್ ರಾಜ್‍ಕುಮಾರ್ ಅವರ ಕೊನೆಯ ಚಿತ್ರ. ಈ ಕಾರಣಕ್ಕಾಗಿ ತೆರಿಗೆ ವಿನಾಯಿತಿ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

    ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಕೆಲ ಕ್ಯಾಂಪೇನ್‍ಗಳಿಗೂ ಅಪ್ಪು ಅಭಿಮಾನಿಗಳು ಪ್ಲ್ಯಾನ್ ಮಾಡಿದ್ದಾರೆ. ಟ್ವಿಟ್ಟರ್ ಅಭಿಯಾನದ ಜೊತೆಗೆ ವಿವಿಧ ಸೆಲೆಬ್ರಿಟಿಗಳ ಮೂಲಕ ಸರ್ಕಾರದ ಮಟ್ಟದಲ್ಲಿ ವಿಷಯವನ್ನು ಚರ್ಚೆಗೆ ತರಲು ಸಿದ್ಧತೆ ನಡೆಸಿದ್ದು, ಎರಡ್ಮೂರು ದಿನಗಳಲ್ಲಿ ರಾಜ್ಯಾದ್ಯಂತ ಗಂಧದಗುಡಿ ಚಿತ್ರಕ್ಕೆ ಟ್ಯಾಕ್ಸ್ ಫ್ರೀ ಮಾಡುವಂತೆ ಅಭಿಯಾನ ಆರಂಭವಾಗಲಿದೆ.

    ಒಟ್ಟಾರೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಕೊನೆಯ ಚಿತ್ರಕ್ಕೆ ಟ್ಯಾಕ್ಸ್ ಫ್ರೀ ಮಾಡುವಂತೆ ಅಭಿಮಾನಿಗಳು ಸರ್ಕಾರಕ್ಕೆ ಒತ್ತಾಯಿಸುತ್ತಿರುವುದು ಒಳ್ಳೇಯ ಸುದ್ದಿಯೇ, ಆದರೆ ಈ ಬಗ್ಗೆ ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುವುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಮುಂದಿನ ವರ್ಷ ಹಸೆಮಣೆ ಏರಲಿದ್ದಾರೆ ಸಿದ್ಧಾರ್ಥ್-ಕಿಯಾರಾ

    Live Tv
    [brid partner=56869869 player=32851 video=960834 autoplay=true]

  • ಬೇಕಿದ್ರೆ ʻದಿ ಕಾಶ್ಮೀರ್‌ ಫೈಲ್ಸ್‌ʼನ್ನು ಯೂಟ್ಯೂಬ್‌ಗೆ ಹಾಕಲಿ: ತೆರಿಗೆ ವಿನಾಯಿತಿ ಕೇಳಿದ ಬಿಜೆಪಿಗೆ ಕೇಜ್ರಿವಾಲ್‌ ಟಾಂಗ್

    ಬೇಕಿದ್ರೆ ʻದಿ ಕಾಶ್ಮೀರ್‌ ಫೈಲ್ಸ್‌ʼನ್ನು ಯೂಟ್ಯೂಬ್‌ಗೆ ಹಾಕಲಿ: ತೆರಿಗೆ ವಿನಾಯಿತಿ ಕೇಳಿದ ಬಿಜೆಪಿಗೆ ಕೇಜ್ರಿವಾಲ್‌ ಟಾಂಗ್

    ನವದೆಹಲಿ: ಕಾಶ್ಮೀರಿ ಪಂಡಿತರ ಮೇಲಿನ ದೌರ್ಜನ್ಯ ಕುರಿತ ಸಿನಿಮಾ ʼದಿ ಕಾಶ್ಮೀರ್‌ ಫೈಲ್ಸ್‌ʼಗೆ ರಾಷ್ಟ್ರ ರಾಜಧಾನಿಯಲ್ಲೂ ತೆರಿಗೆ ವಿನಾಯಿತಿ ಘೋಷಿಸಬೇಕು ಎಂಬ ಬಿಜೆಪಿ ಶಾಸಕರ ಒತ್ತಾಯಕ್ಕೆ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ತಿರುಗೇಟು ನೀಡಿದ್ದಾರೆ.

    ದೆಹಲಿ ವಿಧಾನಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್‌, ಬಿಜೆಪಿಯವರು ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಕೇಳುತ್ತಿದ್ದಾರೆ. ನಿರ್ದೇಶಕರು ಸಿನಿಮಾವನ್ನು ಯೂಟ್ಯೂಬ್‌ಗೆ ನೀಡಲಿ. ಉಚಿತವಾಗಿ ಸಿನಿಮಾ ನೋಡಬಹುದು ಎಂದು ಚಾಟಿ ಬೀಸಿದ್ದಾರೆ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ ನಿಂದ ಜೇಮ್ಸ್ ಚಿತ್ರಕ್ಕೆ ತೊಂದರೆ ಇಲ್ಲ : ಶಿವರಾಜ್ ಕುಮಾರ್

    ನಮ್ಮನ್ನು ತೆರಿಗೆ ಮುಕ್ತ ಮಾಡಿ ಎಂದು ಏಕೆ ಕೇಳುತ್ತಿದ್ದೀರಿ? ಅಷ್ಟು ಉತ್ಸುಕರಾಗಿದ್ದರೆ ವಿವೇಕ್ ಅಗ್ನಿಹೋತ್ರಿಯವರಿಗೆ ಯೂಟ್ಯೂಬ್‌ನಲ್ಲಿ ಹಾಕಲು ಹೇಳಿ, ಎಲ್ಲಾ ಉಚಿತವಾಗಿರುತ್ತದೆ. ಎಲ್ಲರೂ ಅದನ್ನು ಒಂದು ದಿನದಲ್ಲಿ ನೋಡಬಹುದು. ಆಗ ತೆರಿಗೆ ಮುಕ್ತ ಮಾಡುವ ಅಗತ್ಯವಾದರೂ ಏಕೆ ಬರುತ್ತದೆ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ‌

    ಈಗಾಗಲೇ ಕರ್ನಾಟಕ, ಉತ್ತರ ಪ್ರದೇಶ, ತ್ರಿಪುರ, ಹರಿಯಾಣ, ಗುಜರಾತ್‌, ಉತ್ತರಾಖಂಡ್‌ ಸೇರಿದಂತೆ ಬಿಜೆಪಿ ಆಡಳಿತವಿರುವ ಅನೇಕ ರಾಜ್ಯಗಳಲ್ಲಿ ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಲಾಭವನ್ನು ದಾನಮಾಡಿ ಎಂದ ಐಎಎಸ್ ಆಫೀಸರ್: ನಿರ್ದೇಶಕರ ಉತ್ತರವೇನು?

    ಅರವಿಂದ್‌ ಕೇಜ್ರಿವಾಲ್‌ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ʻನೀಲ್ ಬಟ್ಟೆಯ್ ಸಣ್ಣಾಟʼ ಸಿನಿಮಾಗೆ ದೆಹಲಿ ಸರ್ಕಾರ ತೆರಿಗೆ ವಿನಾಯಿತಿ ನೀಡಿದೆ ಎಂದು ಕೇಜ್ರಿವಾಲ್‌ ಮಾಡಿದ್ದ ಟ್ವೀಟ್‌ ಹಂಚಿಕೊಂಡು ಸಂತೋಷ್‌ ಟೀಕೆ ವ್ಯಕ್ತಪಡಿಸಿದ್ದಾರೆ. ಆ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವವರು ಇದಕ್ಕೆ ಯಾಕೆ ನೀಡುತ್ತಿಲ್ಲ. ನಾಚಿಕೆಯಾಗಬೇಕು ಎಂದು ಟ್ವೀಟ್‌ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.