ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ 2022-23ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಈ ವರ್ಷ ಯಾವುದೇ ತೆರಿಗೆ ಹೆಚ್ಚಳ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
2022-23ನೇ ಸಾಲಿನಲ್ಲಿ ರಾಜ್ಯದ ಅರ್ಥ ವ್ಯವಸ್ಥೆಯು ಚೇತರಿಕೆಯತ್ತ ಸಾಗಿದೆ. ಈ ಸನ್ನಿವೇಶದಲ್ಲಿ ರಾಜ್ಯದ ಜನಸಾಮಾನ್ಯರ ಮೇಲೆ ಇನ್ನಷ್ಟು ತೆರಿಗೆ ವಿಧಿಸಲು ಇಚ್ಛಿಸುವುದಿಲ್ಲ. ಆದ್ದರಿಂದ ಎಲ್ಲಾ ತೆರಿಗೆ ಸಂಗ್ರಹ ಇಲಾಖೆಗಳಲ್ಲಿ ಹೆಚ್ಚಿನ ದಕ್ಷತೆಯನ್ನು ತರುವ ಮೂಲಕ ಸಂಪನ್ಮೂಲಗಳ ಸಂಗ್ರಹಣಾ ಗುರಿಗಳನ್ನು ಸಾಧಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
2022-23ನೇ ಸಾಲಿಗೆ ವಾಣಿಜ್ಯ ತೆರಿಗೆ ಇಲಾಖೆ 77,010 ಕೋಟಿ ರೂ., ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 15,000 ಕೋಟಿ ರೂ., ರಾಜ್ಯ ಅಬಕಾರಿ ಇಲಾಖೆಗೆ 29,000 ಕೋಟಿ ರೂ. ಹಾಗೂ ಸಾರಿಗೆ ಇಲಾಖೆಗೆ 8,007 ಕೋಟಿ ರೂ. ತೆರಿಗೆ ಸಂಗ್ರಹ ಗುರಿ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.
ಕೋವಿಡ್‌ನಿಂದಾಗಿ ಎಲ್ಲಾ ಕ್ಷೇತ್ರಗಳು ಸಂಕಷ್ಟ ಎದುರಿಸಿವೆ. ಇಂತಹ ಸನ್ನಿವೇಶದಲ್ಲಿ ತೆರಿಗೆ ಬರೆ ಹಾಕುವುದು ಸರಿಯಲ್ಲ. ಆರ್ಥಿಕ ಪುನಶ್ಚೇತನಕ್ಕೆ ಸಹಕಾರ ನೀಡುವ ಕಾರ್ಯ ಅಗತ್ಯ ಎನ್ನುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮಕೈಗೊಂಡಿದೆ ಎನ್ನಲಾಗಿದೆ.
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಯಾವುದೇ ಜನಪ್ರಿಯ ಘೋಷಣೆ ಇಲ್ಲದ ಮೇಲ್ನೋಟಕ್ಕೆ ನೀರಸವಾಗಿ ಕಾಣುವ ಬಜೆಟ್ ಮಂಡಿಸಿ ಆಶ್ಚರ್ಯ ಮೂಡಿಸಿದ್ದಾರೆ.
ಸಾಧಾರಣಾವಾಗಿ ಕೇಂದ್ರ ಬಜೆಟ್‌ನಲ್ಲಿ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಭರಪೂರ ಯೋಜನೆಗಳನ್ನು ಪ್ರಕಟಿಸುವುದು ಸಾಮಾನ್ಯ. ಕಳೆದ ವರ್ಷದವರೆಗೂ ಈ ಸಂಪ್ರದಾಯ ಪಾಲನೆಯಾಗುತ್ತಿತ್ತು. ಆದರೆ ಈ ಬಾರಿ ಈ ಸಂಪ್ರದಾಯವನ್ನು ಧಿಕ್ಕರಿಸಿ ಭಾರತದ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ಮಂಡನೆ ಮಾಡಲಾಗಿದೆ ಎಂಬ ಅಭಿಪ್ರಾಯವನ್ನು ಆರ್ಥಿಕ ತಜ್ಞರು, ಉದ್ಯಮಿಗಳು ಹೊರಹಾಕಿದ್ದಾರೆ.
No populism, no tax cuts, only capex & focus on infrastructure, growth in Modi Ji govt’s Budget. Time to change the face of India’s infrastructure .. Let us hope and pray that their stated goals will become a reality .. Jai Hind#Budget2022#AmrutKaal
ಉತ್ತರಪ್ರದೇಶ, ಪಂಜಾಬ್, ಗೋವಾ, ಮಣಿಪುರ, ಉತ್ತರಾಖಂಡ್ ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿದ್ದರಿಂದ ಈ ರಾಜ್ಯಗಳಿಗೆ ಭರಪೂರ ಯೋಜನೆ ಜಾರಿಯಾಗಬಹುದು ಎಂಬ ಸಹಜ ವಿಶ್ಲೇಷಣೆ ಕೇಳಿಬಂದಿತ್ತು. ಕಳೆದ ಬಾರಿಯ ಬಜೆಟ್‌ನಲ್ಲೂ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ರಾಜ್ಯಗಳಿಗೆ ಯೋಜನೆ, ಅನುದಾನ ಸಿಕ್ಕಿದ ಹಿನ್ನೆಲೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿತ್ತು. ಆದರೆ ಈ ಅಭಿಪ್ರಾಯ ಈ ಬಾರಿ ವ್ಯಕ್ತವಾಗದೇ ಇರಲು ಬಜೆಟ್ ರೂಪಿಸಲಾಗಿದೆ. ಇದನ್ನೂ ಓದಿ: Budget 2022 : ಮೋದಿ ಸೂಚನೆಯಂತೆ ಜನರಿಂದ ಹೆಚ್ಚುವರಿ ತೆರಿಗೆ ಸಂಗ್ರಹ ಇಲ್ಲ
Crispest budget till date with no new complex regulations. Taxing #crypto thus making it legal! No excessive populism even after upcoming elections! Focus on investment, infrastructure, digital & most importantly, #GreenEnvironment & #EV#Budget2022
ರಾಜ್ಯಗಳಿಗೆ ಭರಪೂರ ಅನುದಾನ, ಯೋಜನೆ ಪ್ರಕಟಿಸುತ್ತಿದ್ದ ಕಾರಣ ವಿರೋಧ ಪಕ್ಷಗಳು, ಮಾಧ್ಯಮಗಳು ಇದು ಚುನಾವಣಾ ಓಲೈಸುವ ಬಜೆಟ್. ರಾಜ್ಯಗಳಿಗೆ ಮೀಸಲಾದ ಬಜೆಟ್ ಎಂದು ಪ್ರತಿ ವರ್ಷ ಟೀಕೆ ಮಾಡುತ್ತಿದ್ದವು. ಆದರೆ ಈ ಬಾರಿ ಈ ಟೀಕೆಗೆ ಅವಕಾಶ ನೀಡದಂತೆ ಸಮಗ್ರ ಭಾರತವನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಸಿದ್ಧಪಡಿಸಲಾಗಿದೆ. ಇದನ್ನೂ ಓದಿ: Budget 2022: ರಾಷ್ಟ್ರೀಯ ಹೆದ್ದಾರಿ 25 ಸಾವಿರ ಕಿ.ಮೀ ವಿಸ್ತರಣೆ – 400 ವಂದೇ ಭಾರತ್ ರೈಲು ತಯಾರಿ ಗುರಿ
ಈ ಬಾರಿ ಬಜೆಟ್‌ನಲ್ಲಿ ಯಾವುದೇ ಜನಪ್ರಿಯ ಘೋಷಣೆಗಳನ್ನು ಮಾಡಲಾಗಿಲ್ಲ. ಜನಪ್ರಿಯ ಯೋಜನೆಗಳನ್ನು ಪ್ರಕಟಿಸುವುದು ಸುಲಭ. ಆದರೆ ಜಾರಿ ಮಾಡುವುದು ಕಷ್ಟ. ಈ ಕಾರಣಕ್ಕೆ ಏನೋ ಎಂಬಂತೆ ಜನಪ್ರಿಯ ಘೋಷಣೆ ಇಲ್ಲದೇ ಭವಿಷ್ಯದಲ್ಲಿ ಡಿಜಿಟಲ್ ಶಕ್ತಿ ಆಗಿರುವ ಕಾರಣ ಡಿಜಿಟಲ್ ಕ್ಷೇತ್ರದತ್ತ ಗಮನ ನೀಡಲಾಗಿದೆ.
I think to present a prudent budget with no major freebies or populist moves 10 days before a major election is very responsible and commendable.
ಮೂಲಸೌಕರ್ಯಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ, ರೈಲು, ಬಂದರು ಅಭಿವೃದ್ಧಿ ಪಡಿಸುವ ಯೋಜನೆ ಜಾರಿ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ, ರೈಲು ಒಂದು ರಾಜ್ಯಕ್ಕೆ ಮಾತ್ರ ಮೀಸಲಾಗಿರುವುದಿಲ್ಲ. ಹಲವು ರಾಜ್ಯಗಳನ್ನು ಸಂಪರ್ಕಿಸುವುದರಿಂದ ಆರ್ಥಿಕ ವ್ಯವಹಾರ, ಪ್ರವಾಸೋದ್ಯಮಕ್ಕೆ ನೆರವಾಗಲಿದೆ.
Brevity has always been a virtue. @nsitharaman ‘s shortest budget address may prove to be the most impactful…
ಈಗ ರೈಲ್ವೇ ಬಜೆಟ್ ಹಣಕಾಸು ಬಜೆಟ್‌ನಲ್ಲಿ ವಿಲೀನಗೊಂಡಿದೆ. ಇಲ್ಲದೆ ಇದ್ದಲ್ಲಿ ಹಳಿಯಲ್ಲಿ ಓಡದ ರೈಲು ಸೇರಿದಂತೆ ಬರೀ ಭಾಷಣಕ್ಕೆ ಮಾತ್ರ ಮೀಸಲಾದ ಯೋಜನೆಗಳು ಪ್ರಕಟವಾಗುತ್ತಿತ್ತು. ಆದರೆ ಈ ಬಾರಿ ಭಾರತದ ಭವಿಷ್ಯದ ಅವಶ್ಯಕತೆಗಳನ್ನು ಇಟ್ಟುಕೊಂಡು ಯಾವುದೇ ಓಲೈಕೆ ಇಲ್ಲದ ಹೊಸ ಪದ್ದತಿ ಮತ್ತು ಸರಿಯಾದ ಪದ್ದತಿಯಂತೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದಾರೆ ಎಂಬ ಅಭಿಪ್ರಾಯವನ್ನು ಆರ್ಥಿಕ ತಜ್ಞರು ವ್ಯಕ್ತಪಡಿಸುತ್ತಿದ್ದಾರೆ.
ನವದೆಹಲಿ: ಕೋವಿಡ್ ಸಾಂಕ್ರಾಮಿಕದ ಮಧ್ಯೆ ತೆರಿಗೆಯನ್ನು ಹೆಚ್ಚಿಸದಂತೆ ಪ್ರಧಾನಿ ಮೋದಿ ಸೂಚನೆ ನೀಡಿದ್ದರು. ಹೀಗಾಗಿ ಈ ಬಾರಿಯ ಬಜೆಟ್‌ನಲ್ಲಿ ಜನರಿಂದ ಯಾವುದೇ ಹೆಚ್ಚುವರಿ ತೆರಿಗೆ ಸಂಗ್ರಹಕ್ಕೆ ಇಳಿದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಬಜೆಟ್ ಬಳಿಕ ಇಲಾಖೆಯ ಅಧಿಕಾರಿಗಳ ಜೊತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ಸಂಕಷ್ಟದಲ್ಲಿರುವ ಜನರ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಬಾರದು ಎಂದು ಪ್ರಧಾನಿ ಮೋದಿ ಅವರು ಕಳೆದ ವರ್ಷ ಸೂಚಿಸಿದ್ದರು. ಈ ಕಾರಣಕ್ಕೆ ಈ ಬಾರಿಯೂ ಯಾವುದೇ ತೆರಿಗೆ ಹಾಕಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: Budget 2022: ಮುಂದಿನ 5 ವರ್ಷಗಳಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿಯ ಗುರಿ
ಕೇಂದ್ರ ಬಜೆಟ್ ಭಾಷಣದದಲ್ಲಿ ನಿರ್ಮಲಾ ಸೀತಾರಾಮನ್ ಮಹಾಭಾರತದ ಹದಿನೆಂಟು ಅಧ್ಯಾಯಗಳಲ್ಲಿ 12ನೆಯದಾದ ಶಾಂತಿಪರ್ವದಲ್ಲಿ ಬರುವ ಪದ್ಯವೊಂದನ್ನು ಪ್ರಸ್ತಾಪಿಸಿದ್ದರು. ರಾಜನಾದವನು ಜನರ ಯೋಗಕ್ಷೇಮಕ್ಕೆ ಬೇಕಾದ ವ್ಯವಸ್ಥೆಯನ್ನು ಮಾಡಬೇಕು. ಇದಕ್ಕಾಗಿ ಅವನು ಧರ್ಮಕ್ಕೆ ಅನುಸಾರವಾಗಿ ಬೇಜವಾಬ್ದಾರಿ ಬಿಟ್ಟು ಆಡಳಿತ ನಡೆಸಬೇಕು. ತೆರಿಗೆಗಳನ್ನು ಸರಿಪಡಿಸಬೇಕು ಎಂಬ ಶ್ಲೋಕವನ್ನು ಉಲ್ಲೇಖಿಸಿದರು. ಇದನ್ನೂ ಓದಿ: Budget 2022: 39.54 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ನ `ರೂಪಾಯಿ’ ಲೆಕ್ಕಾಚಾರ ಹೇಗಿದೆ ಗೊತ್ತಾ?
ಸಾಧಾರಣವಾಗಿ ಬಜೆಟ್‌ನಲ್ಲಿ ಆದಾಯ ತೆರಿಗೆ ಸ್ಲ್ಯಾಬ್‌ಗಳನ್ನು ಬದಲಿಸಲಾಗುತ್ತದೆ. ಆದರೆ ಈ ಬಾರಿ ಆದಾಯ ತೆರಿಗೆ ಸ್ಲ್ಯಾಬ್‌ಗಳನ್ನು ಬದಲಾಯಿಸಿಲ್ಲ.
ತಿರುವನಂತಪುರಂ: ಪಿಂಚಣಿ ಹಣದಲ್ಲಿ ಬದುಕುತ್ತಿದ್ದ ಹಿರಿಯ ವೃದ್ಧ ದಂಪತಿಗೆ ಲಕ್ಷಗಟ್ಟಲೇ ಮೊತ್ತದ ಹಣವನ್ನು ಕಟ್ಟುವಂತೆ ಜಿಎಸ್‍ಟಿ(Goods and Services Tax) ನೋಟಿಸ್ ಬಂದಿದೆ.
ಕೇರಳದ ಪೆರುಂಬವುರ್‌ನ ವೃದ್ಧ ದಂಪತಿಗೆ 5,97,439 ಲಕ್ಷ ರೂಪಾಯಿ ಪಾವತಿಸುವಂತೆ ನೋಟಿಸ್ ಕಳುಹಿಸಲಾಗಿದೆ. ನೋಟಿಸ್ ಸ್ವೀಕರಿಸಿದ 75 ವರ್ಷದ ರಾಜನ್, ಜಿಎಸ್‍ಟಿ ಮೊತ್ತವನ್ನು ನೋಡಿ ಶಾಕ್ ಆಗಿದ್ದಾರೆ.
ಮೂರು ವರ್ಷಗಳ ಹಿಂದೆ ರಾಜನ್ ಅವರ ಪಾನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಇತರ ದಾಖಲೆಗಳನ್ನು ನಕಲಿ ಮಾಡಿ ಭವಾನಿ ವುಡ್ ಪ್ರಾಡಕ್ಟ್ಸ್ ಹೆಸರಿನಲ್ಲಿ ಕಂಪನಿಯನ್ನು ನೊಂದಾಯಿಸಲಾಗಿದೆ. ಮುವಾಟ್ಟುಪುಳ ಕೇಂದ್ರ ತೆರಿಗೆ ಮತ್ತು ಕೇಂದ್ರ ಅಬಕಾರಿ ಕಚೇರಿಯಲ್ಲಿ ಜಿಎಸ್‍ಟಿ ನೊಂದವಣಿಯಾಗಿದೆ.
ರಾಜನ್ ಹೆಸರಿಗೆ ಕಂಪನಿಯೊಂದು ನೋಂದವಣಿಯಾಗಿದ್ದು, ಮೂರು ವರ್ಷಗಳಲ್ಲಿ ಕಂಪನಿಯ ಅಡಿಯಲ್ಲಿ ಕೋಟಿಗಟ್ಟಲೆ ವಹಿವಾಟು ನಡೆದಿರುವುದು ನೋಟಿಸ್ ಬಂದ ನಂತರವೇ ಗೊತ್ತಾಗಿದೆ. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರಕ್ಕೆ 400 ಕೆಜಿಯ ಬೀಗ ದೇಣಿಗೆ!
ಬೆಂಗಳೂರು: ಬರೋಬ್ಬರಿ 39 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ಬಿಬಿಎಂಪಿ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್‍ಗೆ ಬೀಗ ಹಾಕಿದೆ. ತೆರಿಗೆ ಕಟ್ಟುವವರೆಗೆ ಮಾಲ್ ಓಪನ್ ಮಾಡಲು ಬಿಡುವುದಿಲ್ಲ ಎಂದು ಬಿಬಿಎಂಪಿ ಖಡಕ್ ಎಚ್ಚರಿಕೆ ನೀಡಿದೆ.
ಕಳೆದ ಮೂರು ವರ್ಷಗಳಿಂದ ಮಂತ್ರಿ ಮಾಲ್ ತೆರಿಗೆ ಕಟ್ಟಿಲ್ಲ, ಬಡ್ಡಿ ಸೇರಿ ಒಟ್ಟು 39 ಕೋಟಿ ರೂ. ತೆರಿಗೆ ಬಾಕಿ ಉಳಿದಿದೆ. ಇಂದು ಪಾಲಿಕೆ ಅಧಿಕಾರಿಗಳು ವಸೂಲಿಗೆ ತೆರಳಿದ್ದರು. ಈ ವೇಳೆ ಸಹ ತೆರಿಗೆ ಕಟ್ಟಿಲ್ಲ. ಹೀಗಾಗಿ ಬೀಗ ಜಡಿಯಲಾಗಿದೆ ಎಂದು ಮಲ್ಲೇಶ್ವರ ಪಶ್ವಿಮ ಡಿಸಿ ಪ್ರಸನ್ನ ಕುಮಾರ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.
ಎಷ್ಟೇ ನೋಟಿಸ್ ನೀಡಿದರೂ ಮಂತ್ರಿ ಮಾಲ್ ಮಾತ್ರ ಬುದ್ಧಿ ಕಲಿತಿಲ್ಲ. ಪ್ರತಿಷ್ಟಿತ ಮಂತ್ರಿ ಮಾಲ್ 39 ಕೋಟಿ ರೂಪಾಯಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದೆ. ತೆರಿಗೆ ಬಾಕಿ ಪಾವತಿಸುವಂತೆ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತರು ನೋಟಿಸ್ ನೀಡಿದ್ದರು. 2017ರಿಂದ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತೆರಿಗೆ ಬಾಕಿ ಹಿನ್ನೆಲೆ ಮಂತ್ರಿ ಮಾಲ್ ಗೆ ಬೀಗ ಹಾಕಲು ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ ಹಾಗೂ ಬಿಬಿಎಂಪಿ ಅಧಿಕಾರಿಗಳಿಂದ ಮಂತ್ರಿ ಮಾಲ್ ಗೆ ಬೀಗ ಹಾಕಲಾಗಿತ್ತು. ಬಳಿಕ 5 ಕೋಟಿ ರೂ. ಪಾವತಿ, ಉಳಿದ ಹಣವನ್ನು ಅಕ್ಟೋಬರ್ ಅಂತ್ಯದ ವೇಳೆ ಕಟ್ಟುವುದಾಗಿ ಭರವಸೆ ನೀಡಿದ್ದರಿಂದ ಬೀಗ ತೆರವುಗೊಳಿಸಲಾಗಿದೆ. ಇದನ್ನೂ ಓದಿ: ಮೆಟ್ರೋ ಕಾಮಗಾರಿ – 30 ಅಡಿ ಮಣ್ಣು ಕುಸಿತ, ತಪ್ಪಿತು ಭಾರೀ ಅನಾಹುತ
ಆಸ್ತಿ ತೆರಿಗೆ ಕಟ್ಟಲು ಸಾಕಷ್ಟು ಕಾಲಾವಕಾಶ ನೀಡಲಾಗಿತ್ತು. ಆದರೂ ಮಂತ್ರಿ ಮಾಲ್ ನಿರ್ಲಕ್ಷ್ಯ ವಹಿಸಿದೆ. ಆಸ್ತಿ ತೆರಿಗೆ ಕಟ್ಟುವಲ್ಲಿ ಮಂತ್ರಿ ಮಾಲ್ ಹಿಂದೇಟು ಹಾಕುತ್ತಿದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಆಸ್ತಿ ತೆರಿಗೆ ವಂಚಕರ ಸಂಖ್ಯೆ ಹೆಚ್ಚಾಗಿದ್ದು, ಬಿಬಿಎಂಪಿಗೆ ಮಂತ್ರಿ ಮಾಲ್ ದೊಡ್ಡ ತಲೆನೋವಾಗಿದೆ. ಇದನ್ನೂ ಓದಿ:ರಾತ್ರಿ ರಾಜಕಾರಣ ಮಾಡುವ ಸಂಸ್ಕೃತಿ ಬಿಜೆಪಿಯದ್ದಲ್ಲ ಕಾಂಗ್ರೆಸ್ಸಿನದ್ದು: ಸಂಜಯ್ ಪಾಟೀಲ್
ಅಭಿಷೇಕ್ ಡೆವಲಪರ್ಸ್ ಹೆಸರಿನಲ್ಲಿ ಮಂತ್ರಿ ಮಾಲ್ ಬಿಬಿಎಂಪಿಗೆ ತೆರಿಗೆ ಪಾವತಿ ಮಾಡುತ್ತಿದೆ. 2017ರಿಂದ ಇದೂವರೆಗೂ ಆಸ್ತಿ ತೆರಿಗೆ ಕಟ್ಟಿಲ್ಲ. ಮಂತ್ರಿ ಮಾಲ್ ಗೆ ನೋಟಿಸ್ ಕೊಟ್ಟು ಬಿಬಿಎಂಪಿ ಸುಸ್ತಾಗಿದೆ. ತೆರಿಗೆ ಕಟ್ಟದಿದ್ದರೆ ಆಸ್ತಿ ಮುಟ್ಟುಗೋಲು ಹಾಕುವ ಎಚ್ಚರಿಕೆಯನ್ನು ಸಹ ನೀಡಲಾಗಿದೆ. ಎಷ್ಟೇ ಹೇಳಿದರೂ ಮಂತ್ರಿ ಮಾಲ್ ನ ಆಡಳಿತಾಧಿಕಾರಿ ಮಾತ್ರ ಕೇಳುತ್ತಿಲ್ಲ. ಬಿಬಿಎಂಪಿ ಪಶ್ಚಿಮ ವಲಯದಲ್ಲಿ ಅತೀ ದೊಡ್ಡ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಪಟ್ಟಿಯಲ್ಲಿ ಮಂತ್ರಿ ಮಾಲ್ ಮೊದಲ ಸ್ಥಾನದಲ್ಲಿದೆ.
ಈ ಕುರಿತು ಮಾಹಿತಿ ನೀಡಿರುವ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ, ಕಳೆದ 3 ವರ್ಷದಿಂದ ಬಡ್ಡಿ ಸೇರಿ ಒಟ್ಟು 39 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿದ್ದರು. ಈ ಪೈಕಿ ಡಿಡಿ ಮೂಲಕ ಇಂದು 5 ಕೋಟಿ ರೂ.ಗಳಷ್ಟು ಪಾವತಿ ಮಾಡಿದ್ದಾರೆ. ಇನ್ನೂ 34 ಕೋಟಿ ರೂ.ಗಳನ್ನು ಅಕ್ಟೋಬರ್ ಕೊನೆಯಲ್ಲಿ ನೀಡುವುದಾಗಿ ಹೇಳಿದ್ದಾರೆ. ಕೊರೊನಾ ನೆಪ ಹೇಳಿದ್ದರು. ಆದರೆ ಸೆಪ್ಟೆಂಬರ್ ಒಳಗಡೆ ಪೂರ್ತಿ ತೆರಿಗೆ ಕಟ್ಟುವಂತೆ ನೋಟಿಸ್ ನೀಡಲಾಗಿತ್ತು. ಆದರೆ ಆರ್ಥಿಕ ಸಂಕಷ್ಟದ ಹಿನ್ನೆಲೆ ತೆರಿಗೆ ಪಾವತಿಸಲು ಆಗುತ್ತಿಲ್ಲ ಎಂದು ಹೇಳಿದ್ದರು ಎಂದು ತಿಳಿಸಿದ್ದಾರೆ.
ಮಡಿಕೇರಿ: ನಗರಸಭೆಯ ವಿವಿಧ ಕರ ವಸೂಲಾತಿಯಲ್ಲಿ 60 ಲಕ್ಷ ರೂಪಾಯಿಗೂ ಹೆಚ್ಚು ಹಣ ದುರುಪಯೋಗವಾಗಿರುವುದು ಸಾಬೀತಾಗಿ, ಅದನ್ನು ವಸೂಲಿ ಮಾಡುವಂತೆ ಪೌರಾಡಳಿತ ಇಲಾಖೆಯಿಂದ ನಿರ್ದೇಶನ ಬಂದು ಮೂರು ತಿಂಗಳೇ ಕಳೆದಿದೆ. ಆದರೆ ಇಂದಿಗೂ ನಯಾಪೈಸೆ ವಸೂಲಾಗಿಲ್ಲ. ಹೀಗಾಗಿ ಸಿಬ್ಬಂದಿ ಅಷ್ಟೂ ಹಣ ವಾಪಸ್ ಮಾಡದಿದ್ದರೆ ಅದೇ ಮೌಲ್ಯದ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಮಡಿಕೇರಿ ನಗರಸಭೆಗೆ ನಿರ್ದೇಶಿಸಲಾಗಿದೆ.
ಮಡಿಕೇರಿ ನಗರಸಭೆಯಲ್ಲಿ 2015 ರಿಂದ 2017 ರವರೆಗೆ ಕರ ವಸೂಲಾತಿಯಲ್ಲಿ ಬರೋಬ್ಬರಿ ಒಂದು ಕೋಟಿಗೂ ಹೆಚ್ಚು ಹಣ ಅಂದಿನ ಕರವಸೂಲಾತಿ ಸಿಬ್ಬಂದಿಯಾದ ಸಜೀತ್ ಮತ್ತು ಸ್ವಾಮಿ ಇಬ್ಬರಿಂದ ದುರ್ಬಳಕೆಯಾಗಿತ್ತು. ಬಳಿಕ ಸ್ಥಳೀಯ ಲೆಕ್ಕ ಪರಿಶೋಧನೆಯಲ್ಲಿ 60,56,860 ರೂಪಾಯಿ ಅವ್ಯವಹಾರ ನಡೆದಿರುವುದು ಸಾಬೀತಾಗಿತ್ತು. ಈ ಕುರಿತು ತನಿಖೆ ನಡೆಸಿದ್ದ ಪೌರಾಡಳಿತ ಇಲಾಖೆ, ಇಬ್ಬರಿಂದ ಅಷ್ಟೂ ಹಣದ ಜೊತೆಗೆ ಇದುವರೆಗೆ ಶೇ.8ರ ಬಡ್ಡಿಯಂತೆ ಎಷ್ಟು ಹಣವಾಗುತ್ತದೆಯೋ ಅಷ್ಟನ್ನು ವಾಪಸ್ ಪಡೆದುಕೊಳ್ಳಬೇಕು. ಅಷ್ಟು ಹಣ ವಾಪಸ್ ಮಾಡದಿದ್ದರೆ ಅದೇ ಮೌಲ್ಯದ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಮಡಿಕೇರಿ ನಗರಸಭೆಗೆ ನಿರ್ದೇಶನ ನೀಡಿ ಮೂರು ತಿಂಗಳು ಕಳೆದಿದೆ. ಇಂದಿಗೂ ಒಂದೇ ಒಂದು ರೂಪಾಯಿ ವಾಪಸ್ ಸಂಗ್ರಹವಾಗಿಲ್ಲ. ಅಥವಾ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿಲ್ಲ. ಇದನ್ನೂ ಓದಿ: ಹುಟ್ಟಿದಾಗಿನಿಂದಲೂ ಶಾಲಾ-ಕಾಲೇಜು ಮೆಟ್ಟಿಲು ಹತ್ತದ ಯುವತಿ ಪಿಯುಸಿ ಪಾಸ್
ಈ ಕುರಿತು ಮಡಿಕೇರಿ ನಗರಸಭೆ ಆಯುಕ್ತ ರಾಮದಾಸ್ ಅವರನ್ನು ಕೇಳಿದರೆ ಅವ್ಯವಹಾರ ನಡೆಸಿದ್ದ ಇಬ್ಬರಿಗೂ ಎರಡು ನೋಟಿಸ್ ನೀಡಿ ಒಂದು ವಾರವಾಗಿದೆ. ಆದರೆ ಇಂದಿಗೂ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮತ್ತೊಂದು ನೋಟಿಸ್ ನೀಡಿ, ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದ್ದಾರೆ.
ನಗರಸಭೆ ಸದಸ್ಯರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದು ಕೋಟಿಗೂ ಹೆಚ್ಚು ಹಣ ದುರ್ಬಳಕೆ ಆಗಿತ್ತು. ಅದನ್ನು ಸ್ಥಳೀಯ ಲೆಕ್ಕ ಪರಿಶೋಧನೆ ಮಾಡಿಸಿ ಕೇವಲ 60,56,860 ರೂಪಾಯಿ ಅವ್ಯವಹಾರ ಆಗಿದೆ ಎಂಬುದಾಗಿ ವರದಿ ನೀಡಲಾಗಿದೆ. ಅಲ್ಲದೆ ನಗರಸಭೆಯ ಇತರೆ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದು, ಅವರನ್ನೂ ತನಿಖೆಗೆ ಒಳಪಡಿಸಬೇಕು. ಆ ಕೆಲಸ ಮಾಡದೆ ಅವ್ಯವಹಾರದಲ್ಲಿ ಭಾಗಿಯಾದವರನ್ನೇ ತನಿಖಾ ಸಮಿತಿಯಲ್ಲಿ ಸದಸ್ಯರನ್ನಾಗಿ ಮಾಡಿ ಅವರನ್ನೆಲ್ಲಾ ರಕ್ಷಿಸಲಾಗಿದೆ. ಕೇವಲ ಕರ ವಸೂಲುಗಾರರನ್ನು ತಪ್ಪಿಸ್ಥರೆಂದು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರಗಳು ಜಿಎಸ್‍ಟಿಗೆ ಸೇರಿಸಲು ಒಪ್ಪದ ಹೊರತು ಪೆಟ್ರೋಲ್ ಬೆಲೆ ಇಳಿಯಲ್ಲ: ಹರ್ದೀಪ್ ಸಿಂಗ್ ಪುರಿ
ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿರುವ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದೇವೆ. ಅಲ್ಲಿಯಾದರೂ ಎಲ್ಲಾ ಹಗರಣಗಳು ಬೆಳಕಿಗೆ ಬರಲಿ ಎನ್ನೋದು ನಗರಸಭೆ ಸದಸ್ಯರ ಆಗ್ರಹ. ನಗರಸಭೆಯಲ್ಲಿ ನಡೆದ ಅವ್ಯವಾರದ ಹಣ ವಸೂಲಿ ಮಾಡಲು ಅಧಿಕಾರಿಗಳು ಇಂದಿಗೂ ಮನಸ್ಸು ಮಾಡಿಲ್ಲ. ಇತ್ತ ತಪ್ಪು ಮಾಡಿದ ನಗರಸಭೆಯ ಸಿಬ್ಬಂದಿಗೂ ಯಾವುದೇ ಶಿಕ್ಷೆ ಅಗದೇ ರಾಜಾರೋಷವಾಗಿ ಓಡಾಡಿಕೊಂಡಿದ್ದಾರೆ. ಹೇಳುವವರು, ಕೇಳುವವರು ಯಾರೂ ಇಲ್ಲ ಎಂಬ ಪರಿಸ್ಥಿತಿ ನಗರಸಭೆಯದು ಎಂದು ಸಾರ್ವನಿಕರು ಪ್ರಶ್ನೆ ಮಾಡುತ್ತಿದ್ದಾರೆ.
ಮುಂಬೈ: ಬಾಲಿವುಡ್ ನಟ ಸೋನು ಸೂದ್ 20 ಕೋಟಿಗೂ ಅಧಿಕ ತೆರಿಗೆ ವಂಚಿಸಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.
ಸತತ ಮೂರು ದಿನಗಳ ಕಾಲ ಸೋನು ಅವರ ಮನೆ, ಕಚೇರಿಗಳ ಮೇಲೆ ಸಮೀಕ್ಷೆ ನಡೆಸಿದ ಐಟಿ ಅಧಿಕಾರಿಗಳು, ನಟನಿಗೆ ಸಂಬಂಧಿಸಿದ ನಾನ್ ಪ್ರಾಫಿಟ್ ಸಂಸ್ಥೆಯು, 2.1 ಕೋಟಿಗಳನ್ನು ವಿದೇಶಿ ಮೂಲಗಳಿಂದ ಸಂಗ್ರಹಿಸಿದೆ ಎಂದಿದೆ. ಇದು ಸರ್ಕಾರದ ವಿದೇಶಿ ಹಣ ಸ್ವೀಕಾರದ ಕಾನೂನಿಗೆ ವಿರುದ್ಧವಾಗಿದೆ ಎಂದು ಇಲಾಖೆ ತಿಳಿಸಿದೆ.
During the course of search at the premises of the actor &his associates, incriminating evidence pertaining to tax evasion found. The main modus operandi followed by the actor had been to route his unaccounted income in form of bogus unsecured loans from many bogus entities: CBDT
ಮನೆಯ ಮೇಲಿನ ಸಮೀಕ್ಷೆಯ ವೇಳೆ ಅವರು ತಮ್ಮ ಸಹವರ್ತಿಗಳೊಂದಿಗೆ ಕೂಡಿ ತೆರಿಗೆ ವಂಚನೆ ನಡೆಸಿದ್ದರ ಕುರಿತು ಸಾಕ್ಷ್ಯಗಳು ಪತ್ತೆಯಾಗಿವೆ. ಇದರಲ್ಲಿ ಮುಖ್ಯವಾಗಿ ಲೆಕ್ಕವಿಲ್ಲದ ಆದಾಯವನ್ನು ನಕಲಿ ಸಂಸ್ಥೆಗಳ ಮೂಲಕ ಸಾಗಿಸಲಾಗಿದೆ ಎಂದು ಸಿಬಿಡಿಟಿ ಮಾಹಿತಿ ನೀಡಿದೆ. ಐಟಿ ಇಲಾಖೆಯು ಸೋನು ಸೂದ್ ಹಾಗೂ ಲಕ್ನೋ ಮೂಲದ ಸಂಸ್ಥೆಯೊಂದರ ಮೇಲೆ ಸಮೀಕ್ಷೆ ನಡೆಸಿತ್ತು.ಇದಕ್ಕೆ ಸಂಬಂಧಪಟ್ಟಂತೆ, ಮುಂಬೈ, ಲಕ್ನೋ, ಕಾನ್ಪುರ, ಜೈಪುರ, ದೆಹಲಿ, ಗುರುಗ್ರಾಮಗಳಲ್ಲಿ ಶೋಧ ನಡೆಸಲಾಗಿತ್ತು ಎಂದು ಕೇಂದ್ರ ಆದಾಯ ತೆರಿಗೆ ಮಂಡಳಿ ತಿಳಿಸಿದೆ.
The total amount of tax evaded unearthed so far, amounts to more than Rs 20 crore: Central Board of Direct Taxes (CBDT)
ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಕಷ್ಟಪಡುತ್ತಿರುವವರಿಗೆ ಸಹಾಯ ಮಾಡಿದ ಪ್ರಯತ್ನಗಳು ಭಾರೀ ಪ್ರಶಂಸೆಯನ್ನುಗಳಿಸಿತ್ತು. ಆದರೆ ಕಳೆದ ವರ್ಷ ಜುಲೈನಲ್ಲಿ ಕೋವಿಡ್ ಮೊದಲ ಅಲೆಯಲ್ಲಿ ಸ್ಥಾಪಿಸಲಾದ ಅವರ ಲಾಭರಹಿತ ಸೂದ್ ಚಾರಿಟಿ ಫೌಂಡೇಶನ್ 18 ಕೋಟಿಗೂ ಹೆಚ್ಚು ದೇಣಿಗೆ ಸಂಗ್ರಹಿಸಿದೆ. ಈ ವರ್ಷದ ಏಪ್ರಿಲ್ ವರೆಗೆ, ಅದರಲ್ಲಿ 1.9 ಕೋಟಿ ಪರಿಹಾರ ಕಾರ್ಯಕ್ಕಾಗಿ ಖರ್ಚು ಮಾಡಿದೆ. ಉಳಿದ 17 ಕೋಟಿ ಹಣ ಲಾಭರಹಿತ ಬ್ಯಾಂಕ್ ಖಾತೆಯಲ್ಲಿ ಬಳಕೆಯಾಗದೆ ಉಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋನು ಸೂದ್ ಅವರ ಕಂಪನಿ ಮತ್ತು ಲಕ್ನೋ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಯ ನಡುವಿನ ಇತ್ತೀಚಿನ ಒಪ್ಪಂದದ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಒಪ್ಪಂದದ ಆಧಾರದ ಮೇಲೆ ತೆರಿಗೆ ವಂಚನೆಯ ಆರೋಪದ ಕುರಿತು ಸಮೀಕ್ಷೆ ನಡೆಸಲಾಗಿದೆ.
ಲಕ್ನೋದ ಸಂಸ್ಥೆಯಲ್ಲಿ ಸೋನು ಸೂದ್ ಅಕ್ರಮ ಹಣವನ್ನು ಹೂಡಿದ್ದಾರೆ. ಈ ಕುರಿತು ಸಾಕ್ಷಾಧಾರಗಳು ಲಭ್ಯವಾಗಿವೆ. ಜೊತೆಗೆ ಲಕ್ನೋದ ಕಂಪೆನಿಯು 65 ಕೋಟಿಗೂ ಅಧಿಕ ಬೋಗಸ್ ಕಾಂಟ್ರಾಕ್ಟ್ ಪಡೆದಿದೆ. ಹೆಚ್ಚಿನ ತನಿಖೆ ನಡೆದಿದೆ ಎಂದು ಮಾಹಿತಿ ನೀಡಲಾಗಿದೆ.
ನವದೆಹಲಿ: ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸೋನು ಸೂದ್ ಅವರ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದೆ.
ಮುಂಬೈ ಕಚೇರಿ ಮತ್ತು ಲಕ್ನೋದಲ್ಲಿರುವ ಕಂಪನಿ ಸೇರಿದಂತೆ ಒಟ್ಟು ಆರು ಕಡೆ ಈ ದಾಳಿ ನಡೆದಿದೆ. ಸೋನು ಸೂದ್ ಕಂಪನಿ ಮತ್ತು ಲಕ್ನೋ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಯ ನಡುವಿನ ಇತ್ತೀಚಿಗೆ ಒಪ್ಪಂದ ನಡೆದಿತ್ತು. ಈ ಒಪ್ಪಂದದ ವೇಳೆ ತೆರಿಗೆ ವಂಚನೆ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಸೋನು ಸೂದ್ ಮೇಲೆ ಐಟಿ ದಾಳಿ ನಡೆಯುತ್ತಿರುವುದು ಇದೇ ಮೊದಲೆನಲ್ಲ. ಈ ಹಿಂದೆ 2012 ರಲ್ಲಿ ತೆರಿಗೆ ವಂಚನೆ ಆರೋಪದ ಮೇಲೆ ದಾಳಿ ನಡೆದಿತ್ತು.
ರಾಜಕೀಯ ಪಕ್ಷಗಳು ಸೋನು ಸೂದ್ ಮೇಲಿನ ಐಟಿ ದಾಳಿಯನ್ನು ಖಂಡಿಸಿವೆ. ಆಪ್ ನಾಯಕ ರಾಘವ್ ಚಡ್ಡಾ ಪ್ರತಿಕ್ರಿಯಿಸಿ, ಬಡವರಿಗೆ ಸಹಾಯ ಮಾಡಿ ಲಕ್ಷಾಂತರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ಸೋನು ಸೂದ್ ಮೇಲಿನ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಮಾಜಿ ಗಂಡನ ಹೇಳಿಕೆಯಿಂದ ಚೀನಾದ ಖ್ಯಾತ ನಟಿಗೆ ಬಿತ್ತು 340 ಕೋಟಿ ರೂ. ದಂಡ
ರಾಜಕೀಯ ಪಕ್ಷಗಳ ಟೀಕೆ ಬಿಜೆಪಿ ವಕ್ತಾರ ಆಸಿಫ್ ಭಮ್ಲಾ ಪ್ರತಿಕ್ರಿಯಿಸಿ, ಐಟಿ ದಾಳಿಗೂ ಕೇಜ್ರಿವಾಲ್ ಜೊತೆಗಿನ ಭೇಟಿಗೂ ಯಾವುದೇ ಸಂಬಂಧವಿಲ್ಲ. ಯಾವುದೇ ವ್ಯಕ್ತಿ ಯಾರನ್ನೂ ಭೇಟಿ ಮಾಡಬಹುದು. ಆದಾಯ ತೆರಿಗೆ ಇಲಾಖೆ ಸ್ವತಂತ್ರವಾಗಿದ್ದು ತನ್ನದೇ ಆದ ಶಿಷ್ಟಾಚಾರವನ್ನು ಹೊಂದಿದೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಅಮ್ಮ ನೀವು ಸೂಪರ್ ವುಮೆನ್ – ಹಾಡಿ ಹೊಗಳಿದ ರಾಧಿಕಾ ಪಂಡಿತ್
48 ವರ್ಷದ ಸೋನ್ ಸೂದ್ ಎರಡು ದಶಕಗಳಿಂದ ಚಲನ ಚಿತ್ರರಂಗದಲ್ಲಿದ್ದಾರೆ. ಕೋವಿಡ್ 19 ಸಮಯದಲ್ಲಿ ಅವರು ನೀಡಿದ ಸಹಾಯ ಕಾರ್ಯ ದೇಶದೆಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿತ್ತು. ದೆಹಲಿ ಸರ್ಕಾರ ಕೆಲ ದಿನಗಳ ಹಿಂದೆ ಶಾಲಾ ವಿದ್ಯಾರ್ಥಿಗಳಿಗೆ ಆರಂಭಿಸಿರುವ ಮಾರ್ಗದರ್ಶನ ಕಾರ್ಯಕ್ರಮದ ರಾಯಭಾರಿಯಾಗಿ ಸೋನು ಸೂದ್ ಅವರನ್ನು ಆಯ್ಕೆ ಮಾಡಿತ್ತು.
ನವದೆಹಲಿ: ಪೆಟ್ರೋಲ್, ಡೀಸೆಲ್ ಇತರ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ವ್ಯಾಪ್ತಿಗೆ ತರುವ ಬಗ್ಗೆ ಜಿಎಸ್‍ಟಿ ಮಂಡಳಿ ಶುಕ್ರವಾರದ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಿದೆ.
ಕಳೆದ ಜೂನ್ ತಿಂಗಳಿನಲ್ಲಿ ಕೇರಳ ಹೈಕೋರ್ಟ್ ರಾಜ್ಯಗಳು ಪೆಟ್ರೋಲ್, ಡೀಸೆಲ್ ಮೇಲೆ ಪ್ರತ್ಯೇಕ ದರವನ್ನು ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಇವುಗಳನ್ನು ಜಿಎಸ್‍ಟಿ ವ್ಯಾಪ್ತಿಗೆ ತರುವ ಬಗ್ಗೆ ತೀರ್ಮಾನ ಕೈಗೊಳ್ಳುವಂತೆ ಜಿಎಸ್‍ಟಿ ಮಂಡಳಿಗೆ ಸೂಚಿಸಿತ್ತು. ಹೈಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಎಸ್‍ಟಿ ಮಂಡಳಿಯ ಸಭೆಯಲ್ಲಿ ಈ ವಿಚಾರವನ್ನು ಚರ್ಚೆಗೆ ಇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಒಪ್ಪಿಗೆ ಸಿಗುತ್ತಾ?
ಇಲ್ಲಿಯವರೆಗೆ ರಾಜ್ಯ ಸರ್ಕಾರಗಳು ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‍ಟಿ ವ್ಯಾಪ್ತಿಗೆ ತರಲು ವಿರೋಧ ವ್ಯಕ್ತಪಡಿಸುತ್ತಿವೆ. ಜಿಎಸ್‍ಟಿ ವ್ಯವಸ್ಥೆಯಲ್ಲಿ ಬದಲಾವಣೆಯಾಗಬೇಕಾದರೆ ಮಂಡಳಿ ಸದಸ್ಯ ರಾಜ್ಯಗಳ ಮೂರನೇ ಎರಡರಷ್ಟು ಬಹುಮತ ಬೇಕು.
ಅಡುಗೆ ಅನಿಲ (ಎಲ್‍ಪಿಜಿ), ಸೀಮೆಎಣ್ಣೆ, ನಾಫ್ತಾ ಗಳಿಗೆ ಜಿಎಸ್‍ಟಿ ಅನ್ವಯವಾಗುತ್ತಿದೆ. ಆದರೆ ಡೀಸೆಲ್, ಪೆಟ್ರೋಲ್, ನೈಸರ್ಗಿಕ ಅನಿಲ, ಕಚ್ಚಾ ತೈಲ ಮತ್ತು ವಿಮಾನ ಇಂಧನವನ್ನು ಸದ್ಯಕ್ಕೆ ಜಿಎಸ್‍ಟಿಯಿಂದ ಹೊರಗೆ ಇಡಲಾಗಿದೆ. ರಾಜ್ಯ ಸರ್ಕಾರಗಳು ಮದ್ಯ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರವನ್ನು ಬಿಟ್ಟುಕೊಡಲು ಮುಂದಾಗದ ಹಿನ್ನೆಲೆಯಲ್ಲಿ ಇವುಗಳು ಜಿಎಸ್‍ಟಿ ವ್ಯಾಪ್ತಿಗೆ ಸೇರ್ಪಡೆಯಾಗಿಲ್ಲ. ಇದನ್ನೂ ಓದಿ: ಪೆಟ್ರೋಲ್‌ನ್ನು ಜಿಎಸ್‌ಟಿಗೆ ಸೇರಿಸಿದರೆ ಅದು ರಾಜ್ಯಗಳ ಪಾಲಿಗೆ ಮರಣ ಶಾಸನ – ಕೇಂದ್ರದ ವಿರುದ್ಧ ಎಚ್‌ಡಿಕೆ ಆಕ್ರೋಶ
ಯಾಕೆ ಬಿಟ್ಟುಕೊಡಲ್ಲ?
ರಾಜ್ಯ ಸರ್ಕಾರಗಳಿಗೆ ಅತಿಹೆಚ್ಚು ಆದಾಯ ಮೂಲವೇ ತೈಲ. ಕೇಂದ್ರ ಸರ್ಕಾರ ಅಬಕಾರಿ ಸುಂಕ ಹಾಕಿದರೆ ರಾಜ್ಯ ಸರ್ಕಾರ ವ್ಯಾಟ್ ಹಾಕುತ್ತದೆ. ಈ ಮೂಲಕ ರಾಜ್ಯದ ಬೊಕ್ಕಸವನ್ನು ತುಂಬಿಸಿಕೊಳ್ಳುತ್ತದೆ. ಅಷ್ಟೇ ಅಲ್ಲದೇ ಸುಲಭವಾಗಿ ಆದಾಯ ಸಂಗ್ರಹವಾಗುತ್ತದೆ. ಸಿಎಂ ಕುಮಾರಸ್ವಾಮಿ ತನ್ನ ಅಧಿಕಾರ ಅವಧಿಯಲ್ಲಿ ರೈತರ ಸಾಲಮನ್ನಾ ಮಾಡಲು ಆರ್ಥಿಕ ಸಂಪನ್ಮೂಲ ಹೆಚ್ಚಿಸಲು ಪೆಟ್ರೋಲ್, ಡೀಸೆಲ್ ಮೇಲೆ ಹೆಚ್ಚುವರಿ ತೆರಿಗೆ ಸಹ ಹಾಕಿದ್ದರು. ಸದ್ಯಕ್ಕೆ ರಾಜ್ಯ ಸರ್ಕಾರಕ್ಕೆ ಸಂಪನ್ಮೂಲ ಹೆಚ್ಚಳ ಮಾಡಲು ಇರುವ ಏಕೈಕ ಮಾರ್ಗ ಎಂದರೆ ತೈಲ. ಹೀಗಾಗಿ ಯಾವುದೇ ಸರ್ಕಾರ ಪೆಟ್ರೋಲನ್ನು ಜಿಎಸ್‍ಟಿ ವ್ಯಾಪ್ತಿಗೆ ತರಲು ಒಪ್ಪಿಗೆ ನೀಡುತ್ತಿಲ್ಲ.
ಒಂದು ಲೀಟರ್ ಪೆಟ್ರೋಲ್ ಮೇಲೆ 1 ವರ್ಷದ ಹಿಂದೆ 19.98 ರೂ. ಇದ್ದ ಅಬಕಾರಿ ಸುಂಕ 32.90 ರೂ.ಗೆ ಏರಿಕೆಯಾಗಿದೆ. ಡೀಸೆಲ್ ಮೇಲಿದ್ದ 15.83 ರೂ. ಅಬಕಾರಿ ಸುಂಕ 31.8 ರೂ.ಗೆ ಹೆಚ್ಚಳವಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಈ ಹಿಂದೆ ತಿಳಿಸಿದ್ದರು.
ಚಿಕ್ಕೊಡಿ(ಬೆಳಗಾವಿ): ತೆರಿಗೆ ವಸೂಲಿ ಮಾಡಲು ಸುಳ್ಳು ಲೆಕ್ಕ ಹೇಳಿ ನಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಸಾರ್ವಜನಿಕರು ಅಧಿಕಾರಿಗಳನ್ನು ದೂರುತ್ತಿರುವ ಘಟನೆ ಹುಕ್ಕೇರಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪುರಸಭೆ ಅಧಿಕಾರಿಗಳು ಮನೆಗಳ ಹಾಗೂ ವಾಣಿಜ್ಯ ಮಳಿಗೆಗಳ ತೆರಿಗೆ ಕಟ್ಟಿದ ಲೆಕ್ಕಪತ್ರದ ಪುಸ್ತಕ ಸರಿಯಾಗಿ ಇಡುತ್ತಿಲ್ಲ. ಈ ಪರಿಣಾಮ ಜನರಿಂದ ಬೇಕಾಬಿಟ್ಟಿಯಾಗಿ ತೆರಿಗೆಯನ್ನು ವಸೂಲಿ ಮಾಡುತ್ತಿದ್ದಾರೆ. ತೆರಿಗೆ ಕಟ್ಟಿದ ನಾಗರಿಕರಿಂದ ಮತ್ತೆ ವಸೂಲಿ ಮಾಡಲು ಸುಳ್ಳು ಲೆಕ್ಕ ಹೇಳಿ ದಾರಿ ತಪ್ಪಿಸುತ್ತಿದ್ದಾರೆ ಎಂದು ಹುಕ್ಕೇರಿ ಪಟ್ಟಣದ ಸಾರ್ವಜನಿಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಮಾರ್ಷಲ್‍ನನ್ನೇ ಕಾರಿನ ಬಾನೆಟ್ ಮೇಲೆ ಎಳೆದುಕೊಂಡು ಹೋದ ಚಾಲಕ
ಸ್ಥಳೀಯ ಪುರಸಭೆಗೆ ಭೇಟಿ ನೀಡಿದ ಜಿಲ್ಲಾ ಅಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ ಅವರಿಗೆ ಈ ಕುರಿತು ದೂರು ನೀಡಿ ತಮ್ಮ ಅಳಲುನ್ನು ತೋಡಿಕೊಂಡಿದ್ದಾರೆ. ತೆರೆಗೆ ವಸೂಲಿ ಅಧಿಕಾರಿ ಸ್ಥಳೀಯರಾಗಿದ್ದು, ಹಲವು ವರ್ಷಗಳಿಂದ ಇಲ್ಲೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಸಾರ್ವಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ತೆರಿಗೆ ಕಟ್ಟಲು ಹೋದರೆ ಬೆಕ್ಕಾಬಿಟ್ಟಿ ಲೆಕ್ಕ ತೋರಿಸುತ್ತಾರೆ ಎಂದು ಆರೋಪವನ್ನು ಮಾಡಲಾಗುತ್ತಿದೆ.
ತೆರಿಗೆ ಕಟ್ಟಿದ ರಸೀದಿ ತೋರಿಸಿದರೂ ಕಿರಿಕಿರಿ ಮಾಡುತ್ತಿದ್ದು, ಪದೇ ಪದೇ ಆಲೆದಾಡಿಸುತ್ತಿದ್ದಾರೆ ಎಂದು ದೂರಿದ್ದಾರೆ. ಕೂಡಲೇ ಅವರನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಕಳೆದ ವರ್ಷ ಪುರಸಭೆಗೆ ಮಳೆ ನೀರು ನುಗ್ಗಿ ಲೆಕ್ಕಪತ್ರದ ಪುಸ್ತಕವೆಲ್ಲ ಹಾಳಾಗಿವೆ. ಇದರಿಂದ ಮನೆ, ವಾಣಿಜ್ಯ ಕರ ತುಂಬಿರುವ ಲೆಕ್ಕ ತಪ್ಪಿ ಹೋಗಿದೆ. ಇದನ್ನು ಸರಿಪಡಿಸಿ ಸಾರ್ವಜನಿಕರಿಗೆ ನ್ಯಾಯ ಒದಗಿಸಿ ಕೊಡಬೇಕು. ಜೊತೆಗೆ ಆ ಅಧಿಕಾರಿಯನ್ನು ತಕ್ಷಣ ವರ್ಗಾಯಿಸಬೇಕು ಎಂದು ವಿನಂತಿಸಿಕೊಂಡಿದ್ದಾರೆ. ಇದನ್ನೂ ಓದಿ: ಒಂದೂವರೆ ಕೋಟಿ ವೆಚ್ಚದ ಸರ್ಕಾರಿ ಹೈಟೆಕ್ ಆಸ್ಪತ್ರೆ ನಿರ್ಮಾಣ
ಪುರಸಭೆ ಬಳಿಯ ಸೇತುವೆಗೆ ಚಿಕ್ಕ ಪೈಪ್ ಅಳವಡಿಸಿ ಅವೈಜ್ಞಾನಿಕವಾಗಿ ತರಕಾರಿ ಮಾರುಕಟ್ಟೆ ನಿರ್ಮಿಸಲಾಗಿದೆ. ಈ ಪರಿಣಾಮ ಕಳೆದ ವರ್ಷ ಕಮ್ಮಾರ ಓಣಿ ಹಾಗೂ ಅಂಗಡಿಗಳಲ್ಲಿ ನೀರು ನುಗ್ಗಿ ಮನೆಗಳು ಉರುಳಿ ಲಕ್ಷಾಂತರ ಹಾನಿಯಾಗಿದ್ದು, ಸಾರ್ವಜನಿಕರಿಗೆ ಪರಿಹಾರ ನೀಡಬೇಕು. ಪಟ್ಟಣಕ್ಕೆ ಕಲುಷಿತ ನೀರು ಪೂರೈಕೆ ನಿಲ್ಲಿಸಿ, ಶುದ್ಧ ನೀರು ಸರಬರಾಜು ಮಾಡಬೇಕು. ನಗರೋತ್ಥಾನ ಕಾಮಗಾರಿ ಕಳಪೆಯಾಗಿದ್ದು, ಅದನ್ನು ಸರಿಪಡಿಸಿಬೇಕು ಎಂದು ಒತ್ತಾಯಿಸಿದ್ದಾರೆ.
ಈಶ್ವರ ಉಳ್ಳಾಗಡ್ಡಿ ಸಾರ್ವಜನಿಕರ ಅಹವಾಲು ಆಲಿಸಿದ್ದು, ಸೇತುವೆ ಎತ್ತರಿಸಲು ಇದೇ ವೇಳೆ ಟೆಂಡರ್ ಕರೆದಿದ್ದಾರೆ. 15 ದಿನಗಳಲ್ಲಿ ಕಾಮಗಾರಿ ಪ್ರಾರಂಭಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಮೋಹನ ಜಾಧವ ಅವರಿಗೆ ಸೂಚಿನೆ ನೀಡಿದ್ದಾರೆ. ಇದನ್ನೂ ಓದಿ: ಕರ್ತವ್ಯಕ್ಕೆ ತೆರಳುತ್ತಿದ್ದ ವಕೀಲ ಅಪಘಾತದಲ್ಲಿ ಸಾವು
ಸರ್ವೇಶ್ ಜಕಾತಿ, ಅಸಿಫ್ ಜಲಾಲಿ ಅಲ್ಲಾವುದ್ದೀನ್ ಗಳದಗಿ, ಶೇಖರ್ ಮಾಯಣ್ಣವರ, ಗಜಬರ ಮುಲ್ಲಾ ಮುಲ್ಲಾ ಸಲೀಂ, ಮುಲ್ಲಾ ಫರಾನಾ ಬೆಳಗಾವಿ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.