Tag: tax

  • ಬೊಮ್ಮಾಯಿ ಬಜೆಟ್ : ಶಂಕರ್ ನಾಗ್ ಹೆಸರಿನಲ್ಲಿ ಟ್ಯಾಕ್ಸಿ, ಆಟೋ ನಿಲ್ದಾಣ

    ಬೊಮ್ಮಾಯಿ ಬಜೆಟ್ : ಶಂಕರ್ ನಾಗ್ ಹೆಸರಿನಲ್ಲಿ ಟ್ಯಾಕ್ಸಿ, ಆಟೋ ನಿಲ್ದಾಣ

    ನ್ನಡ ಸಿನಿಮಾ ರಂಗದ ಹೆಸರಾಂತ ನಟ ಶಂಕರ್ ನಾಗ್ (Shankar Nag) ಅವರ ಹೆಸರಿನಲ್ಲಿ ಸರಕಾರ ಸಾಕಷ್ಟು ಕೆಲಸ ಮಾಡಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿತ್ತು. ಅದರಲ್ಲೂ ಮೆಟ್ರೋ ನಿಲ್ದಾಣಗಳಿಗೆ ಅವರ ಹೆಸರು ಇಡಬೇಕು, ಶಂಕರ್ ಕನಸಿನ ನಂದಿಬೆಟ್ಟದಲ್ಲಿಯ ರೂಪ್ ವೇ ಚಾಲನೆ ಕೊಡಬೇಕು ಮತ್ತು ಅದಕ್ಕೆ ಶಂಕರ್ ನಾಗ್ ಅವರ ಹೆಸರನ್ನೇ ಇಡಬೇಕು ಎನ್ನುವುದು ಆಗ್ರಹವಾಗಿತ್ತು. ಕೊನೆಗೂ ಅದು ಹಾಗೆಯೇ ಉಳಿದುಕೊಂಡಿದೆ.

    ಆದರೆ, ಈ ಬಾರಿಯ ಬಜೆಟ್ (Karnataka Budget 2023) ನಲ್ಲಿ ಸರಕಾರವು ಶಂಕರ್ ಹೆಸರಿನಲ್ಲಿ ಯೋಜನೆಯೊಂದನ್ನು ರೂಪಿಸಿದ್ದು, ಅದನ್ನು ಆಯವ್ಯಯ 2023-24ರಲ್ಲಿ ಸೇರಿಸಲಾಗಿದೆ. ನಗರ ಹಾಗೂ ಪಟ್ಟಣಗಳಲ್ಲಿ ಖಾಲಿ ಇರುವ ಜಾಗಗಳನ್ನು ಗುರುತಿಸಿ, ಖ್ಯಾತ ನಟರಾದ ದಿವಗಂತ ಶಂಕರ್ ನಾಗ್ ಅವರ ಹೆಸರಿನಲ್ಲಿ ಟ್ಯಾಕ್ಸಿ (Taxi) ಹಾಗೂ ಆಟೋ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಹೇಳಿದೆ.

    ಈಗಾಗಲೇ ಇರುವ ಬಹುತೇಕ ಆಟೋ ಹಾಗೂ ಟ್ಯಾಕ್ಸಿ ನಿಲ್ದಾಣಗಳಿಗೆ ಶಂಕರ್ ನಾಗ್ ಅವರ ಹೆಸರೇ ಇದೆ. ಅದರಲ್ಲೂ ಬೆಂಗಳೂರಿನಲ್ಲಿ ಹೆಚ್ಚು ಶಂಕರ್ ನಾಗ್ ಆಟೋ ಅಥವಾ ಟ್ಯಾಕ್ಸಿ ನಿಲ್ದಾಣಗಳನ್ನು ನೋಡಬಹುದು. ಇದೀಗ ಬಜೆಟ್ ನಲ್ಲೂ ಇಂಥದ್ದೊಂದು ಯೋಜನೆಯನ್ನು ಘೋಷಿಸಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಜೊತೆ ಜೊತೆಯಲಿ’ ಶಿಲ್ಪಾ ಅಯ್ಯರ್

    ಬೆಂಗಳೂರಿನಲ್ಲಿ ಮೆಟ್ರೋ ನಿರ್ಮಾಣ ಆಗಬೇಕು ಎನ್ನುವುದು ಶಂಕರ್ ನಾಗ್ ಅವರ ಕನಸಾಗಿತ್ತು. ಅದೀಗ ನನಸಾಗಿದೆ. ನಂದಿಬೆಟ್ಟದಲ್ಲಿ ರೂಪ್‍ ವೇ ಕೂಡ ಶಂಕರ್ ಕನಸು. ಇಂತಹ ದೊಡ್ಡ ಯೋಜನೆಗಳಿಗೆ ಶಂಕರ್ ನಾಗ್ ಹೆಸರನ್ನು ಇಡಲಿ ಎನ್ನುವುದು ಅವರ ಅಭಿಮಾನಿಗಳ ಆಗ್ರಹವಾಗಿತ್ತು. ಆದರೆ, ಬಜೆಟ್‍ ನಲ್ಲಿ ಇದ್ಯಾವುದೂ ಘೋಷಣೆಯಾಗಲಿಲ್ಲ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇಂದಿನಿಂದ ಮನೆ ಬಾಡಿಗೆ ಮೇಲೆ ಜಿಎಸ್‌ಟಿ ಇಲ್ಲ

    ಇಂದಿನಿಂದ ಮನೆ ಬಾಡಿಗೆ ಮೇಲೆ ಜಿಎಸ್‌ಟಿ ಇಲ್ಲ

    ನವದೆಹಲಿ: ಮನೆ ಬಾಡಿಗೆ ಮೇಲೆ ಶೇ.18 ಸರಕು ಮತ್ತು ಸೇವಾ ತೆರಿಗೆ(GST) ವಿಧಿಸುತ್ತಿದ್ದ ನಿಯಮವನ್ನು ಇಂದಿನಿಂದ ಕೈಬಿಡಲಾಗಿದೆ.

    ಬಾಡಿಗೆದಾರನಿಗೆ ಕೇವಲ ವಸತಿ ಉದ್ದೇಶಕ್ಕೆ ಮನೆ ನೀಡಿದ್ದರೆ ಅದಕ್ಕೆ ಮನೆ ಮಾಲೀಕ ಜಿಎಸ್‌ಟಿ ಕಟ್ಟಬೇಕಿಲ್ಲ ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (CBIC) ಹೇಳಿದೆ. ಆದರೆ ಬಾಡಿಗೆ ತೆಗೆದುಕೊಂಡು ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ಶೇ.18ರಷ್ಟು ಜಿಎಸ್‌ಟಿ ಪಾವತಿಸಬೇಕಾಗುತ್ತದೆ. ಇದನ್ನೂ ಓದಿ: ಕಾಂಗ್ರೆಸ್ ತುಕ್ಡೆ ತುಕ್ಡೆ ಗ್ಯಾಂಗ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ: ಅಮಿತ್‌ ಶಾ

    GST

    ಡಿಸೆಂಬರ್‌ 17 ರಂದು ನಡೆದ ಜಿಎಸ್‌ಟಿ ಕೌನ್ಸಿಲ್‌ ಸಭೆಯ ಶಿಫಾರಾಸುಗಳು ಜ.1 ರಿಂದ ಜಾರಿಗೆ ಬರುತ್ತಿದೆ.

    ರಿಫೈನರಿಗಳಲ್ಲಿ ಬಳಸಲಾಗುವ ಈಥೈಲ್ ಮದ್ಯ(Eethyl Alcohol) ಮೇಲೆ ಇಂದಿನಿಂದ ಶೇ.5 ಜಿಎಸ್‌ಟಿ ವಿಧಿಸಲಾಗುತ್ತಿದೆ. ಇದಕ್ಕೂ ಮೊದಲು ಶೇ.18ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿತ್ತು. ದ್ವಿದಳ ಧಾನ್ಯಗಳ ಮೇಲಿದ್ದ ಶೇ.5 ತೆರಿಗೆಯನ್ನು ಶೂನ್ಯಕ್ಕೆ ಇಳಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ನವೆಂಬರ್‌ನಲ್ಲಿ 1.45 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ –  ಕರ್ನಾಟಕದ ಪಾಲು ಎಷ್ಟು?

    ನವೆಂಬರ್‌ನಲ್ಲಿ 1.45 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ – ಕರ್ನಾಟಕದ ಪಾಲು ಎಷ್ಟು?

    ನವದೆಹಲಿ: ನವೆಂಬರ್‌ ತಿಂಗಳಿನಲ್ಲಿ 1,45,867 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

    ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಜಿಎಸ್‌ಟಿ ಸಂಗ್ರಹ ಶೇ.11ರಷ್ಟು ಏರಿಕೆಯಾಗಿದೆ. ಕಳೆದ ನವೆಂಬರ್‌ನಲ್ಲಿ 1,31,526 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿತ್ತು. ಸತತ 9ನೇ ಬಾರಿಗೆ ಜಿಎಸ್‌ಟಿ ಸಂಗ್ರಹ 1.40 ಲಕ್ಷ ಕೋಟಿ ರೂ. ಗಡಿ ದಾಟುತ್ತಿದೆ.

    ಅಕ್ಟೋಬರ್‌ನಲ್ಲಿ ಸಂಗ್ರಹವಾದ ಜಿಎಸ್‌ಟಿಗೆ ಹೋಲಿಸಿದರೆ ನವೆಂಬರ್‌ ಜಿಎಸ್‌ಟಿ ಸಂಗ್ರಹ ಕಡಿಮೆಯಾಗಿದೆ. ಅಕ್ಟೋಬರ್‌ನಲ್ಲಿ 1,51,718 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿತ್ತು. ಇದನ್ನೂ ಓದಿ: iPhone ತಯಾರಿಸುವ ಕೋಲಾರದ ವಿಸ್ಟ್ರಾನ್‌ ಖರೀದಿಗೆ ಮುಂದಾದ ಟಾಟಾ

    ಒಟ್ಟು ಜಿಎಸ್‌ಟಿ ಸಂಗ್ರಹದಲ್ಲಿ ಕೇಂದ್ರ ಜಿಎಸ್‌ಟಿ(CGST) ಪಾಲು 25,681 ಕೋಟಿ ರೂ ಆಗಿದ್ದರೆ ರಾಜ್ಯ ಜಿಎಸ್‌ಟಿ(SGST) 32,651 ಕೋಟಿ ರೂ. ಆಗಿದೆ. ಇಂಟಿಗ್ರೇಟೆಡ್ ಜಿಎಸ್‌ಟಿ(ಭಾರತಕ್ಕೆ ಆಮದು ಮಾಡಿಕೊಳ್ಳುವ ಮತ್ತು ಭಾರತದಿಂದ ರಫ್ತು ಮಾಡುವ ಸಂದರ್ಭಗಳಲ್ಲಿ ಸರಕು ಮೇಲೆ ಹಾಕುವ ತೆರಿಗೆ) 77,103 ಕೋಟಿ ರೂ.ಗಳಾಗಿವೆ. ಇದರಲ್ಲಿ 10,433 ಕೋಟಿ ರೂ.(ವಸ್ತುಗಳನ್ನು ಆಮದು ಮಾಡಿಕೊಂಡಿದ್ದಕ್ಕೆ 817 ಕೋಟಿ ರೂ. ಸಂಗ್ರಹ ಸೇರಿ) ಸೆಸ್‌ ಕೂಡ ಸೇರಿದೆ.

    ಇಂಟಿಗ್ರೇಟೆಡ್ ಜಿಎಸ್‌ಟಿಯಿಂದ ಕೇಂದ್ರ ಜಿಎಸ್‌ಟಿಗೆ 33,997 ಕೋಟಿ ರೂ. ಮತ್ತು ರಾಜ್ಯ ಜಿಎಸ್‌ಟಿಗೆ 28,538 ಕೋಟಿ ರೂ. ವರ್ಗಾಯಿಸಲಾಗಿದೆ. ಈ ಹಂಚಿಕೆಯ ಬಳಿಕ ನವೆಂಬರ್‌ನಲ್ಲಿ ಕೇಂದ್ರ ಮತ್ತು ರಾಜ್ಯಗಳ ಒಟ್ಟು ಆದಾಯ ಕ್ರಮವಾಗಿ 59,678 ಕೋಟಿ ರೂ. ಮತ್ತು 61,189 ಕೋಟಿ ರೂ.ಗಳಾಗಿವೆ. ಕೇಂದ್ರ ಸರ್ಕಾರ ಜಿಎಸ್‌ಟಿ ಪರಿಹಾರವಾಗಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 17 ಸಾವಿರ ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದೆ.

    ಕರ್ನಾಟಕದಲ್ಲಿ(Karnataka) ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.13 ರಷ್ಟು ಏರಿಕೆಯಾಗಿದ್ದು, 10,238 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ. ಕಳೆದ ನವೆಂಬರ್‌ನಲ್ಲಿ 9,048 ಕೋಟಿ ರೂ. ಸಂಗ್ರಹವಾಗಿತ್ತು.

    ಮುಂದಿನ ಜಿಎಸ್‌ಟಿ ಕೌನ್ಸಿಲ್‌(GST Council) ಸಭೆ ಡಿ.17 ರಂದು ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದೆ. ಈ ವೇಳೆ ಕ್ಯಾಸಿನೋಗಳು, ಆನ್‌ಲೈನ್ ಗೇಮಿಂಗ್ ಮತ್ತು ಕುದುರೆ ರೇಸಿಂಗ್‌ಗಳ ಮೇಲೆ ಜಿಎಸ್‌ಟಿ ವಿಧಿಸುವ ಕುರಿತು ರಾಜ್ಯ ಹಣಕಾಸು ಸಚಿವರ ಸಮಿತಿಯ ಎರಡು ವರದಿಗಳು ಮತ್ತು ಜಿಎಸ್‌ಟಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪಿಸುವ ಕುರಿತು ಸಭೆ ಚರ್ಚೆ ನಡೆಸಲಿದೆ.

    Live Tv
    [brid partner=56869869 player=32851 video=960834 autoplay=true]

  • ಇಂಗ್ಲೆಂಡ್‌ನಲ್ಲಿ ಆರ್ಥಿಕ ಬಿಕ್ಕಟ್ಟು – ತೆರಿಗೆ ಹೆಚ್ಚಿಸಿ ವೆಚ್ಚ ಕಡಿತಕ್ಕೆ ಮುಂದಾದ ಸರ್ಕಾರ

    ಇಂಗ್ಲೆಂಡ್‌ನಲ್ಲಿ ಆರ್ಥಿಕ ಬಿಕ್ಕಟ್ಟು – ತೆರಿಗೆ ಹೆಚ್ಚಿಸಿ ವೆಚ್ಚ ಕಡಿತಕ್ಕೆ ಮುಂದಾದ ಸರ್ಕಾರ

    ಲಂಡನ್‌: ಬ್ರಿಟನ್(UK) ಇಂದು ಭಾರೀ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದೆ. ಬ್ರಿಟನ್ ದೇಶ ಆರ್ಥಿಕ ಆರ್ಥಿಕ ಹಿಂಜರಿತಕ್ಕೆ(Recession) ಸಿಲುಕಿದೆ ಎಂದು ಆ ದೇಶದ ವಿತ್ತ ಸಚಿವ ಜೆರೆಮಿ ಹಂಟ್ ಘೋಷಿಸಿದ್ದಾರೆ.

    ಇದೀಗ ದೇಶವನ್ನು ಆರ್ಥಿಕ ಹಿಂಜರಿತದಿಂದ ಮೇಲೆತ್ತಲು ತೆರಿಗೆ ಹೆಚ್ಚಳ ಮತ್ತು ವೆಚ್ಚ ಕಡಿತದ ನಿರ್ಧಾರವನ್ನು ರಿಷಿ ಸುನಾಕ್(Rishi Sunak) ಸರ್ಕಾರ ಪ್ರಕಟಿಸಿದೆ. ಹದಗೆಟ್ಟಿರುವ ಸಾರ್ವಜನಿಕ ಹಣಕಾಸು ವ್ಯವಸ್ಥೆಗೆ ಪುನಶ್ಚೇತನ ನೀಡಲು 66 ಶತಕೋಟಿ ಡಾಲರ್‌  ಮೊತ್ತದ ವಿತ್ತೀಯ ಯೋಜನೆಯನ್ನು ಘೋಷಿಸಿದೆ. ಇದನ್ನೂ ಓದಿ: ಬ್ರಿಟನ್‌ನಲ್ಲಿ ಹಿಂದೂ-ಮುಸ್ಲಿಂ ಉದ್ವಿಗ್ನತೆಗೆ ಭಾರತದ 500 ಟ್ವಿಟ್ಟರ್‌ ಖಾತೆಗಳು ಕಾರಣ!

    ಸಾರ್ವಜನಿಕ ವೆಚ್ಚ ನಿಯಂತ್ರಣ ಮತ್ತು ತೆರಿಗೆ ಏರಿಕೆಯನ್ನು ಇದು ಒಳಗೊಂಡಿದೆ. ಈ ಯೋಜನೆಯ ಭಾಗವಾಗಿ ಸಿರಿವಂತರಿಗೆ ಮತ್ತು ಇಂಧನ ಕಂಪನಿಗಳಿಗೆ ತೆರಿಗೆ ಹೆಚ್ಚಳ ಮಾಡಿದೆ. ಮತ್ತೊಂದು ಕಡೆ ಅಲ್ಲಿನ ಜನ ವೆಚ್ಚ ನಿಯಂತ್ರಣದ ಮೊರೆ ಹೋಗಿದ್ದಾರೆ.

    ಬ್ರಿಟನ್‍ನಲ್ಲಿ ಕಳೆದ ತಿಂಗಳು ಹಣದುಬ್ಬರ(Inflation) ಪ್ರಮಾಣ ಶೇ.11.1ರಷ್ಟಿತ್ತು. ಇದು ಕಳೆದ 41 ವರ್ಷಗಳಲ್ಲಿಯೇ ಗರಿಷ್ಠ. ಈ ವರ್ಷ ಶೇ. 9.1ರಷ್ಟು, 2023ರಲ್ಲಿ 7.4ರಷ್ಟು ಹಣದುಬ್ಬರ ನಿರೀಕ್ಷಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ವಿಶ್ವದಲ್ಲೇ ಫಸ್ಟ್‌ – ಹಸುಗಳ ತೇಗು, ಹೂಸಿಗೂ ತೆರಿಗೆ ವಿಧಿಸಿದ ನ್ಯೂಜಿಲೆಂಡ್‌!

    ವಿಶ್ವದಲ್ಲೇ ಫಸ್ಟ್‌ – ಹಸುಗಳ ತೇಗು, ಹೂಸಿಗೂ ತೆರಿಗೆ ವಿಧಿಸಿದ ನ್ಯೂಜಿಲೆಂಡ್‌!

    ಕ್ರೈಸ್ಟ್‌ ಚರ್ಚ್: ಹಸುಗಳು ತೇಗಿದರೆ(Burps) ಹಾಗೂ ಹೂಸು(Farts) ಬಿಟ್ಟರೆ ನ್ಯೂಜಿಲೆಂಡ್‌(New Zealand) ರೈತರು ಇನ್ನು ಮುಂದೆ ತೆರಿಗೆ(Tax) ಪಾವತಿಸಬೇಕು.

    ಹೌದು. ವಿಶ್ವದಲ್ಲೇ ಮೊದಲ ಬಾರಿಗೆ ನ್ಯೂಜಿಲೆಂಡ್‌ ಸರ್ಕಾರ ಹಸುಗಳು ತೇಗಿದರೆ ಹಾಗೂ ಹೂಸು ಬಿಟ್ಟರೆ ಅವುಗಳನ್ನು ಸಾಕಿದ ರೈತರ ಮೇಲೆ ತೆರಿಗೆ ವಿಧಿಸಲು ಮುಂದಾಗಿದೆ.

    ಕೃಷಿ(Agriculture) ಉದ್ಯಮದಿಂದ ಏರುತ್ತಿರುವ ಹಸಿರುಮನೆ ಅನಿಲ ಹೊರಸೂಸುವಿಕೆಯನ್ನು ನಿಯಂತ್ರಿಸಲು ಸರ್ಕಾರ ಹೊಸ ಹವಾಮಾನ ಬದಲಾವಣೆ ಪ್ರಸ್ತಾವನೆ ಸಲ್ಲಿಸಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಹಿಂದಿಯಲ್ಲಿ ಕಾಂತಾರ ಸಿನಿಮಾಗೆ 2500 ಥಿಯೇಟರ್ : ಬೆಚ್ಚಿಬಿತ್ತು ಬಾಲಿವುಡ್

    ನ್ಯೂಜಿಲೆಂಡ್‌ನಲ್ಲಿ ಭಾರೀ ಪ್ರಮಾಣದಲ್ಲಿ ಹೈನೋದ್ಯಮ ನಡೆಯುತ್ತಿದೆ. ದನದ ಮೂತ್ರದಲ್ಲಿ ನೈಟ್ರಸ್ ಆಕ್ಸೈಡ್ ಇದ್ದರೆ ಹಸುವಿನ ಹೂಸಿನಲ್ಲಿ ಮೀಥೇನ್ ಅನಿಲ ಇದೆ. ಇದರಿಂದಾಗಿ ಹಸಿರು ಮನೆ ಪರಿಣಾಮ ಹೆಚ್ಚಾಗುತ್ತದೆ ಎನ್ನುವುದು ನ್ಯೂಜಿಲೆಂಡ್‌ ಸರ್ಕಾರದ ವಾದ.

    ಮಿತಿಮೀರಿದ ಹೈನುಗಾರಿಕೆ ನಿಯಂತ್ರಿಸಿ ಇಂಗಾಲಕ್ಕೆ ಕಡಿವಾಣ ಹಾಕುವ ಉದ್ದೇಶವನ್ನು ಸರ್ಕಾರ ಹೊಂದಿದೆ. ತೆರಿಗೆಯಿಂದ ಸಂಗ್ರಹವಾದ ಹಣವನ್ನು ಹವಾಮಾನ ಸ್ನೇಹಿ ತಂತ್ರಗಳನ್ನು ಅಳವಡಿಸಿಕೊಳ್ಳುವ ರೈತರಿಗೆ ಸಂಶೋಧನೆ, ಹೊಸ ತಂತ್ರಜ್ಞಾನಗಳು ಮತ್ತು ಸಬ್ಸಿಡಿಗಳಿಗೆ ಧನಸಹಾಯ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

    ನ್ಯೂಜಿಲೆಂಡ್‌ ಆರ್ಥಿಕತೆಗೆ ಹೈನುಗಾರಿಗೆ ಕೊಡುಗೆ ದೊಡ್ಡದು. ಕೇವಲ 50 ಲಕ್ಷ ಜನಸಂಖ್ಯೆ ಇರುವ ದೇಶದಲ್ಲಿ 1 ಕೋಟಿ ಡೈರಿ ಹಸುಗಳಿದ್ದರೆ 2.6 ಕೋಟಿ ಕುರಿಗಳಿವೆ.

    2050 ರ ವೇಳೆಗೆ ಕೃಷಿ ಪ್ರಾಣಿಗಳಿಂದ ಮೀಥೇನ್ ಹೊರಸೂಸುವಿಕೆಯ ಪ್ರಮಾಣವನ್ನು ಶೇ.47% ಕ್ಕೆ ತಗ್ಗಿಸಲು ಸರ್ಕಾರ ಈ ಹಿಂದೆ ವಾಗ್ದಾನ ಮಾಡಿತ್ತು. ಸರ್ಕಾರಗಳು ಪ್ರಸ್ತಾಪಿಸಿದ ತೆರಿಗೆ ಅಡಿಯಲ್ಲಿ, ರೈತರು 2025 ರಲ್ಲಿ ತೆರಿಗೆ ಪಾವತಿಸಬೇಕಾಗುತ್ತದೆ. ತೆರಿಗೆ ದರವನ್ನು ಸರ್ಕಾರ ಇನ್ನೂ ನಿಗದಿ ಮಾಡಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಆಗಸ್ಟ್‌ ಜಿಎಸ್‌ಟಿ ಶೇ.28 ಏರಿಕೆ – 1.43 ಲಕ್ಷ ಕೋಟಿ ರೂ.ನಲ್ಲಿ ಯಾವ ರಾಜ್ಯದ ಪಾಲು ಎಷ್ಟು?

    ಆಗಸ್ಟ್‌ ಜಿಎಸ್‌ಟಿ ಶೇ.28 ಏರಿಕೆ – 1.43 ಲಕ್ಷ ಕೋಟಿ ರೂ.ನಲ್ಲಿ ಯಾವ ರಾಜ್ಯದ ಪಾಲು ಎಷ್ಟು?

    ನವದೆಹಲಿ: ಆಗಸ್ಟ್‌ ತಿಂಗಳಿನಲ್ಲಿ 1,43,612 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ತಿಳಿಸಿದೆ.

    ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಜಿಎಸ್‌ಟಿ ಸಂಗ್ರಹ ಶೇ. 28ರಷ್ಟು ಏರಿಕೆಯಾಗಿದೆ. ಕಳೆದ ಆಗಸ್ಟ್‌ನಲ್ಲಿ 1,12,020 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿತ್ತು. ಸತತ 6ನೇ ಬಾರಿಗೆ ಜಿಎಸ್‌ಟಿ ಸಂಗ್ರಹ 1.40 ಲಕ್ಷ ಕೋಟಿ ರೂ. ಗಡಿ ದಾಟುತ್ತಿದೆ.

    ಜುಲೈನಲ್ಲಿ ಸಂಗ್ರಹವಾದ ಜಿಎಸ್‌ಟಿಗೆ ಹೋಲಿಸಿದರೆ ಆಗಸ್ಟ್ ಜಿಎಸ್‌ಟಿ ಸಂಗ್ರಹ ಶೇ. 4ರಷ್ಟು ಕಡಿಮೆಯಾಗಿದೆ. ಜುಲೈನಲ್ಲಿ 1,48,995 ಕೋಟಿ ರೂ. ಜಿಎಸ್‌ಟಿ ಆದಾಯ ಸಂಗ್ರಹವಾಗಿತ್ತು. ಇದನ್ನೂ ಓದಿ: ಏಪ್ರಿಲ್‌- ಜೂನ್‌ GDP ಬೆಳವಣಿಗೆ 13.5% ರಷ್ಟು ಏರಿಕೆ

    ಒಟ್ಟು ಜಿಎಸ್‌ಟಿ ಸಂಗ್ರಹದಲ್ಲಿ ಕೇಂದ್ರ ಜಿಎಸ್‌ಟಿ ಪಾಲು 24,710 ಕೋಟಿ ರೂ.ಗಳಾಗಿದ್ದರೆ, ರಾಜ್ಯ ಜಿಎಸ್‌ಟಿ 30,951 ಕೋಟಿ ರೂ. ಆಗಿದೆ. ಇಂಟಿಗ್ರೇಟೆಡ್ ಜಿಎಸ್‌ಟಿ(ಭಾರತಕ್ಕೆ ಆಮದು ಮಾಡಿಕೊಳ್ಳುವ ಮತ್ತು ಭಾರತದಿಂದ ರಫ್ತು ಮಾಡುವ ಸಂದರ್ಭಗಳಲ್ಲಿ ಸರಕು ಮೇಲೆ ಹಾಕುವ ತೆರಿಗೆ) 77,782 ಕೋಟಿ ರೂ.ಗಳಾಗಿವೆ. ಇದರಲ್ಲಿ 10,168 ಕೋಟಿ ರೂ. ಸೆಸ್‌ ಕೂಡ ಸೇರಿದೆ.

    ಇಂಟಿಗ್ರೇಟೆಡ್ ಜಿಎಸ್‌ಟಿಯಿಂದ ಕೇಂದ್ರ ಜಿಎಸ್‌ಟಿಗೆ 29,524 ಕೋಟಿ ರೂ. ಮತ್ತು ರಾಜ್ಯ ಜಿಎಸ್‌ಟಿಗೆ 25,119 ಕೋಟಿ ರೂ. ನೀಡಲಾಗಿದೆ. ಈ ಹಂಚಿಕೆಯ ಬಳಿಕ ಜುಲೈನಲ್ಲಿ ಕೇಂದ್ರ ಮತ್ತು ರಾಜ್ಯಗಳ ಒಟ್ಟು ಆದಾಯ ಕ್ರಮವಾಗಿ 54,234 ಕೋಟಿ ರೂ. ಮತ್ತು 56,070 ಕೋಟಿ ರೂ.ಗಳಾಗಿವೆ.

    ಕರ್ನಾಟಕದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.29 ರಷ್ಟು ಏರಿಕೆಯಾಗಿದ್ದು, 9,583 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ. ಕಳೆದ ಆಗಸ್ಟ್‌ನಲ್ಲಿ 7,429 ಕೋಟಿ ರೂ. ಸಂಗ್ರಹವಾಗಿತ್ತು.

    ಜುಲೈನಲ್ಲಿ 7.6 ಕೋಟಿ ಇ-ವೇ ಬಿಲ್‌ ತಯಾರಾಗಿದ್ದರೆ ಜೂನ್‌ನಲ್ಲಿ 7.4 ಕೋಟಿ ತಯಾರಾಗಿತ್ತು. ಕಳೆದ ವರ್ಷ ಜೂನ್‌ ತಿಂಗಳಿನಲ್ಲಿ 6.4 ಕೋಟಿ ಇ-ವೇ ಬಿಲ್‌ ತಯಾರಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಇ-ವೇ ಬಿಲ್‌ ಪ್ರಮಾಣ ಶೇ.19 ರಷ್ಟು ಏರಿಕೆಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ವೈಯಕ್ತಿಕ ಬಳಕೆಗಾಗಿ ಬಾಡಿಗೆ ನೀಡಿದ್ದರೆ ಜಿಎಸ್‌ಟಿ ಇಲ್ಲ- ಕೇಂದ್ರ

    ವೈಯಕ್ತಿಕ ಬಳಕೆಗಾಗಿ ಬಾಡಿಗೆ ನೀಡಿದ್ದರೆ ಜಿಎಸ್‌ಟಿ ಇಲ್ಲ- ಕೇಂದ್ರ

    ನವದೆಹಲಿ: ವಾಸದ ಮನೆಗಳನ್ನು ಖಾಸಗಿಗಳಿಗೆ ವೈಯಕ್ತಿಕ ಬಳಕೆಗಾಗಿ ಬಾಡಿಗೆಗೆ ನೀಡಿದ್ದರೆ ಅದಕ್ಕೆ ಜಿಎಸ್‌ಟಿ ಅನ್ವಯಸುವುದಿಲ್ಲ. ಬದಲಿಗೆ ವಾಣಿಜ್ಯ ಉದ್ದೇಶಕ್ಕೆ ನೀಡಿದ್ದರೆ ಮಾತ್ರ ಜಿಎಸ್‌ಟಿ ಅನ್ವಯವಾಗುತ್ತದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

    ಇತ್ತೀಚೆಗೆ ಜುಲೈ 18ರಂದು ಜಾರಿಗೆ ಬಂದ ಜಿಎಸ್‌ಟಿ ಹೊಸ ನಿಯಮಗಳ ಅನ್ವಯ ಜಿಎಸ್‌ಟಿ ಅಡಿಯಲ್ಲಿ ನೋಂದಾಯಿಸಲ್ಪಟ್ಟ ಬಾಡಿಗೆದಾರರು ವಸುನೆಯ ಮಾಲಿಕರಿಗೆ ಪಾವತಿಸುವ ಹಣಕ್ಕೆ ಶೇ.18ರಷ್ಟು ಜಿಎಸ್‌ಟಿ ಪಾವತಿಸಬೇಕು ಎಂದು ವರದಿಯಾಗಿತ್ತು. ಇದರಿಂದಾಗಿ ಸಾಕಷ್ಟು ಗೊಂದಲ ಉಂಟಾಗಿತ್ತು. ಈ ಹಿನ್ನೆಲೆಯಯಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಮನೆ ಬಾಡಿಗೆಗೆ ಜಿಎಸ್‌ಟಿ ಇಲ್ಲ ಎಂದು ಸರ್ಕಾರ ಖಚಿತ ಪಡಿಸಿದೆ. ಇದರಿಂದಾಗಿ ಬಾಡಿಗೆದಾರರು ನಿಟ್ಟುಸಿರು ಬಿಡುವಂತಾಗಿದೆ.

    GST

    ವೈಯಕ್ತಿಕ ಬಳಕೆಗಾಗಿ ಖಾಸಗಿ ವ್ಯಕ್ತಿಗಳಿಗೆ ಮನೆಯನ್ನು ಬಾಡಿಗೆಗೆ ನೀಡಿದ್ದರೆ ಅದಕ್ಕೆ ಜಿಎಸ್‌ಟಿ ದರ ಅನ್ವಯಿಸುವುದಿಲ್ಲ. ಮನೆಯನ್ನು ವಾಣಿಜ್ಯ ಉದ್ದೇಶಕ್ಕಾಗಿ ಯಾವುದಾದರೂ ಸಂಸ್ಥೆಗೆ ಬಾಡಿಗೆಗೆ ನೀಡಿದ್ದರೇ ಮಾತ್ರ ಅದಕ್ಕೆ ಜಿಎಸ್‌ಟಿ ಅನ್ವಯಿಸುತ್ತದೆ ಎಂದು ಮಾಹಿತಿ ನೀಡಿದೆ.

    ಉದ್ದಿಮೆಯ ಮಾಲೀಕ ಅಥವಾ ಪಾಲುದಾದರು ಖಾಸಗಿ ಬಳಕೆಗಾಗಿ ಬಾಡಿಗೆ ಮನೆಯನ್ನು ಪಡೆದಿದ್ದರೆ, ಅದಕ್ಕೂ ಜಿಎಸ್‌ಟಿ ಇಲ್ಲ ಎಂದು ತಿಳಿಸಿದೆ. ಇದರಿಂದಾಗಿ ಜಿಎಸ್‌ಟಿ ನೋಂದಣಿ ಮಾಡಿಕೊಂಡ ಉದ್ಯಮರು ಅಥವಾ ಪಾಲುದಾರರು ಖಾಸಗಿ ಬಳಕೆಗೆ ಮನೆಯನ್ನು ಬಾಡಿಗೆ ಪಡೆದಿದ್ದರೆ, ಅದಕ್ಕೆ ಜಿಎಸ್‌ಟಿ ಪಾವತಿಸಬೇಕು ಎಂದು ಕೆಲ ತೆರಿಗೆ ಸಲಹೆಗಾರರು ನೀಡುತ್ತಿದ್ದ ಸಲಹೆಯಿಂದಾಗಿ ಉದ್ಭವಿಸಿದ ಗೊಂದಲವೂ ಪರಿಹಾರವಾಗಿದೆ. ಇದನ್ನೂ ಓದಿ: ತ್ರಿವರ್ಣ ಧ್ವಜದ ಡಿಪಿ ಹಾಕಿದ ಆರ್‌ಎಸ್‌ಎಸ್‌

    Live Tv
    [brid partner=56869869 player=32851 video=960834 autoplay=true]

  • ಬಡವರಿಗೆ ತೆರಿಗೆ ಹೊರೆ; ಶ್ರೀಮಂತರಿಗೆ ಮಾತ್ರ ವಿನಾಯಿತಿ – ಕೇಂದ್ರದ ವಿರುದ್ಧ ಕೇಜ್ರಿವಾಲ್‌ ಕಿಡಿ

    ಬಡವರಿಗೆ ತೆರಿಗೆ ಹೊರೆ; ಶ್ರೀಮಂತರಿಗೆ ಮಾತ್ರ ವಿನಾಯಿತಿ – ಕೇಂದ್ರದ ವಿರುದ್ಧ ಕೇಜ್ರಿವಾಲ್‌ ಕಿಡಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಜನಸಾಮಾನ್ಯರ ಮೇಲೆ ತೆರಿಗೆಯನ್ನು ಹೇರುತ್ತಿದೆ. ಆದರೆ ಶ್ರೀಮಂತರಿಗೆ ತೆರಿಗೆ ವಿನಾಯಿತಿ ನೀಡುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಆರೋಪಿಸಿದ್ದಾರೆ.

    ಪಿಂಚಣಿ ನೀಡಲು ಹಣವಿಲ್ಲ ಎಂದು ಅಗ್ನಿಪಥ ಯೋಜನೆ ತಂದರು. ಸೈನಿಕರಿಗೆ ಪಿಂಚಣಿ ನೀಡಲು ದೇಶಕ್ಕೆ ಹಣವಿಲ್ಲದೆ ಪರದಾಡುವ ಸ್ಥಿತಿ ಸ್ವಾತಂತ್ರ್ಯ ನಂತರ ಇದುವರೆಗೂ ಬಂದಿರಲಿಲ್ಲ ಎಂದು ಕೇಂದ್ರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಇದನ್ನೂ ಓದಿ: ಭಾರತದ 14ನೇ ಉಪರಾಷ್ಟ್ರಪತಿಯಾಗಿ ಧನಕರ್ ಪ್ರಮಾಣ ವಚನ

    ಕೇಂದ್ರ ಸರ್ಕಾರದ ಹಣ ಎಲ್ಲಿ ಹೋಯಿತು? ಕೇಂದ್ರ ಸರ್ಕಾರವು ತಾನು ಸಂಗ್ರಹಿಸುವ ತೆರಿಗೆಯ ಒಂದು ಭಾಗವನ್ನು ರಾಜ್ಯಗಳೊಂದಿಗೆ ಹಂಚಿಕೊಳ್ಳುತ್ತದೆ. ಈ ಹಿಂದೆ ಇದು ಶೇ.42ರಷ್ಟಿತ್ತು. ಈಗ ಅದನ್ನು ಶೇ.29-30ಕ್ಕೆ ಕಡಿತಗೊಳಿಸಲಾಗಿದೆ. ಎಲ್ಲಿಗೆ ಹೋಗುತ್ತಿದೆ ಹಣ ಎಂದು ಪ್ರಶ್ನಿಸಿದ್ದಾರೆ.

    ಸ್ವಾತಂತ್ರ್ಯ ಬಂದು 75 ವರ್ಷಗಳು ತುಂಬಿವೆ. ಬಡವರ ಗೋಧಿ, ಅಕ್ಕಿಗೂ ಕೇಂದ್ರ ಸರ್ಕಾರ ತೆರಿಗೆ ವಿಧಿಸಿರುವುದು ಕ್ರೂರ ಕೆಲಸ. ಗೋಧಿ, ಅಕ್ಕಿ, ಲಸ್ಸಿ, ಪನೀರ್‌ ಮೇಲೆ ತೆರಿಗೆ. ಹೀಗೆ ಬಡವರ ಆಹಾರದ ಮೇಲೆ ಕೇಂದ್ರ ತೆರಿಗೆ ವಿಧಿಸುವಷ್ಟು ಹದಗೆಟ್ಟಿದ್ದು ಹೇಗೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕಲ್ಲಿದ್ದಲು ಹಗರಣ – 8 ಐಪಿಎಸ್‌ ಅಧಿಕಾರಿಗಳಿಗೆ ED ಸಮನ್ಸ್‌

    2014ರಲ್ಲಿ 20 ಲಕ್ಷ ಕೋಟಿ ರೂ. ಇದ್ದ ಕೇಂದ್ರದ ಬಜೆಟ್ ಈಗ 40 ಲಕ್ಷ ಕೋಟಿಯಾಗಿದೆ. ಅತಿ ಶ್ರೀಮಂತರ, ಅವರ ಆಪ್ತರ ಸಾಲ ಮನ್ನಾ ಮಾಡಲು ಕೇಂದ್ರ 10 ಲಕ್ಷ ಕೋಟಿ ರೂ. ಖರ್ಚು ಮಾಡಿದೆ. ಅವರು ಈ ಸಾಲಗಳನ್ನು ಮನ್ನಾ ಮಾಡದಿದ್ದರೆ, ಸರ್ಕಾರವು ಜನರ ಆಹಾರದ ಮೇಲೆ ತೆರಿಗೆ ವಿಧಿಸುವ ಅಗತ್ಯವಿರುತ್ತಿರಲಿಲ್ಲ. ಸೈನಿಕರ ಪಿಂಚಣಿ ಪಾವತಿಸಲು ಅವರ ಬಳಿ ಹಣವಿರುತ್ತದೆ. ದೊಡ್ಡ, ದೊಡ್ಡ ಕಂಪನಿಗಳ 5 ಲಕ್ಷ ಕೋಟಿ ರೂ. ಮೌಲ್ಯದ ತೆರಿಗೆಯನ್ನೂ ಸರ್ಕಾರ ಮನ್ನಾ ಮಾಡಿದೆ ಎಂದು ತಿಳಿಸಿದ್ದಾರೆ.

    ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಟೀಕೆಯನ್ನು ಬಿಜೆಪಿ ತಳ್ಳಿಹಾಕಿದೆ. ಇದಕ್ಕೆ ತಿರುಗೇಟು ನೀಡಿದ ಬಿಜೆಪಿ, ಕೇಜ್ರಿವಾಲ್ ತಮ್ಮ ಆರೋಪವನ್ನು 24 ಗಂಟೆಗಳಲ್ಲಿ ಸಾಬೀತುಪಡಿಸುವಂತೆ ಸವಾಲು ಹಾಕಿದೆ. ಇದನ್ನೂ ಓದಿ: ಲಿಪ್‍ಸ್ಟಿಕ್‍ನಿಂದ ವಾಲ್ ಮೇಲೆ ಡೆತ್ ನೋಟ್ – ಗೃಹಿಣಿ ಆತ್ಮಹತ್ಯೆಗೆ ಕಿರುಕುಳವೇ ಕಾರಣವಾಯ್ತಾ?

    Live Tv
    [brid partner=56869869 player=32851 video=960834 autoplay=true]

  • ಪ್ರಧಾನಿ ಬಂದಾಗ ಮಾತ್ರ ರಸ್ತೆ ಮಾಡಿಸ್ತೀರಾ; ನಮ್ಮ ಮಕ್ಕಳು ಒಳ್ಳೆ ರಸ್ತೆಯಲ್ಲಿ ಓಡಾಡಬಾರದಾ – ಪ್ರಕಾಶ್‌ ರಾಜ್‌ ಪ್ರಶ್ನೆ

    ಪ್ರಧಾನಿ ಬಂದಾಗ ಮಾತ್ರ ರಸ್ತೆ ಮಾಡಿಸ್ತೀರಾ; ನಮ್ಮ ಮಕ್ಕಳು ಒಳ್ಳೆ ರಸ್ತೆಯಲ್ಲಿ ಓಡಾಡಬಾರದಾ – ಪ್ರಕಾಶ್‌ ರಾಜ್‌ ಪ್ರಶ್ನೆ

    ಮೈಸೂರು: ಪ್ರಧಾನ ಮಂತ್ರಿಗಳು ಬಂದಾಗ ಮಾತ್ರ ರಸ್ತೆ ಸರಿ ಮಾಡುತ್ತೀರಾ. ನಮ್ಮ ಮಕ್ಕಳು ಒಳ್ಳೆಯ ರಸ್ತೆಯಲ್ಲಿ ಓಡಾಡಬಾರದಾ ಎಂದು ಕಳಪೆ ರಸ್ತೆ ಕಾಮಗಾರಿ ಆರೋಪ ಹೊತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ನಟ ಪ್ರಕಾಶ್‌ ರಾಜ್‌ ಕಿಡಿಕಾರಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ತೆರಿಗೆ ಹಣ ನಮ್ಮ ದುಡ್ಡು. ನಾನು ವರ್ಷಕ್ಕೆ 38 ಲಕ್ಷ ರೂ. ತೆರಿಗೆ ಕಟ್ಟುತ್ತೇನೆ. ಪ್ರಶ್ನಿಸುವುದು ನಮ್ಮ ಹಕ್ಕು. ಒಳ್ಳೆಯ ರಸ್ತೆಯಲ್ಲಿ ನಮ್ಮ ಮಕ್ಕಳು ಓಡಾಡಬಾರದಾ? ನಮ್ಮ ದುಡ್ಡಿನಲ್ಲಿ ಅವರು ಬದುಕೋದು. ಸಾರ್ವಜನಿಕರ ಹಣದಲ್ಲಿ ಬದುಕುವ ರಾಜಕಾರಣಿಗಳು ಬಂದಾಗ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ರಸ್ತೆ ನಿರ್ಮಾಣ ಮಾಡುತ್ತೀರಾ? ನಮಗಾಗಿ ಯಾಕೆ ಮಾಡಲ್ಲ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರಧ್ವಜ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ, ನಾಚಿಕೆಯಾಗಬೇಕು: ಜಗದೀಶ್ ಶೆಟ್ಟರ್

    ಈ ಹಿಂದೆ ಪ್ರತಾಪ್ ಸಿಂಹ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಿದ್ದೆ. ಇದು ಸುದ್ದಿಯಾಗಿ ವೈರಲ್‌ ಆಯಿತು. ಬಳಿಕ ಅವರು ಸೋತು ಕ್ಷಮೆ ಕೇಳಿದರು. ಆದರೆ ಇದು ಮಾತ್ರ ಸುದ್ದಿ ಆಗಲಿಲ್ಲ ಎಂದು ಮಾತನಾಡಿದ್ದಾರೆ.

    ಜಸ್ಟ್‌ ಆಸ್ಕಿಂಗ್‌ ಮೂಲಕ ಸದ್ದು ಮಾಡಿ ಈಗ ತೆರೆಮರೆಗೆ ಸರಿದಿರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಎಂದೂ ಯಾವತ್ತೂ ಪ್ರಗತಿಪರರು, ಚಿಂತಕರ ಪರವಾಗಿರುತ್ತೇನೆ. ನಾನು ಕಣ್ಣಿಗೆ ಕಾಣದೇ ನನ್ನ ಕೆಲಸಗಳನ್ನು ಮಾಡುತ್ತಿದ್ದೇನೆ. ಮೀಡಿಯಾ ಮುಂದೆ ಬಂದು ಹೇಳಬೇಕೆಂದೇನಿಲ್ಲ. ನಾನು ಬೇರೆ ಬೇರೆ ರಾಜ್ಯಗಳಲ್ಲಿ ಇರುತ್ತೇನೆ. ನನ್ನ ವೃತ್ತಿಯ ಜೊತೆಗೆ ಪ್ರಗತಿಪರ ಹೋರಾಟದಲ್ಲಿ ಸದಾ ಸಕ್ರಿಯವಾಗಿರುತ್ತೇನೆ. ಕಣ್ಣಿಗೆ ಕಾಣದೆಯೇ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶೂ ಹಾಕಿಕೊಂಡೆ ದಸರಾ ಗಜಪಡೆಗೆ ಪೂಜೆ ಸಲ್ಲಿಸಿದ ಸಚಿವ ಉಮೇಶ್ ಕತ್ತಿ

    Live Tv
    [brid partner=56869869 player=32851 video=960834 autoplay=true]

  • ಎರಡನೇ ಅತಿ ಹೆಚ್ಚು ಸಂಗ್ರಹ – ಜುಲೈನಲ್ಲಿ 1.48 ಲಕ್ಷ ಜಿಎಸ್‌ಟಿ ಆದಾಯ

    ಎರಡನೇ ಅತಿ ಹೆಚ್ಚು ಸಂಗ್ರಹ – ಜುಲೈನಲ್ಲಿ 1.48 ಲಕ್ಷ ಜಿಎಸ್‌ಟಿ ಆದಾಯ

    ನವದೆಹಲಿ: ಕೇಂದ್ರ ಹಣಕಾಸು ಇಲಾಖೆ (Finance Ministry) ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಮಾಸಿಕ ಮಾಹಿತಿಯನ್ನು ನೀಡಿದ್ದು, ಏಪ್ರಿಲ್‌ನಲ್ಲಿ 1,48,995 ಕೋಟಿ ರೂ. ಸಂಗ್ರಹಿದೆ.

    ಜಿಎಸ್‌ಟಿ ಜಾರಿಯಾದ ಬಳಿಕ ಎರಡನೇ ಅತಿ ಹೆಚ್ಚು ತೆರಿಗೆ ಸಂಗ್ರಹವಾಗಿದೆ. ಕಳೆದ ವರ್ಷದ ಜುಲೈ ತಿಂಗಳಿಗೆ ಹೋಲಿಸಿದರೆ ಶೇ.28 ರಷ್ಟು ಜಿಎಸ್‌ಟಿ ಸಂಗ್ರಹ ಹೆಚ್ಚಳವಾಗಿದೆ.

    ಈ ತಿಂಗಳ ಜೂನ್‌ ತಿಂಗಳಿಗೆ ಹೋಲಿಸಿದರೆ ಶೇ.3 ರಷ್ಟು ಹೆಚ್ಚಳವಾಗಿದೆ. ಜೂನ್‌ನಲ್ಲಿ 1.44 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹವಾಗಿತ್ತು. ಈ ವರ್ಷದ ಏಪ್ರಿಲ್‌ನಲ್ಲಿ 1.68 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹವಾಗಿತ್ತು. ಏಪ್ರಿಲ್‌ನ ಜಿಎಸ್‌ಟಿ ಸಂಗ್ರಹ ಸಾರ್ವಕಾಲಿಕ ಗರಿಷ್ಠವಾಗಿದೆ. ಇದನ್ನೂ ಓದಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 36 ರೂ. ಇಳಿಕೆ

    ಕಳೆದ ವರ್ಷದ ಜುಲೈನಲ್ಲಿ ಕರ್ನಾಟಕದಲ್ಲಿ 6,737 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾದರೆ ಈ ಬಾರಿ 9,795 ಕೋಟಿ ರೂ. ಸಂಗ್ರಹವಾಗಿದೆ.  ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.45 ರಷ್ಟು ಹೆಚ್ಚಳವಾಗಿದೆ.

    ಜಿಎಸ್‌ಟಿ ಸಂಗ್ರಹದ ಪೈಕಿ ಸೆಂಟ್ರಲ್‌ ಜಿಎಸ್‌ಟಿ 25,751 ಕೋಟಿ ರೂ., ಸ್ಟೇಟ್‌ ಜಿಎಸ್‌ಟಿ 32,807 ಕೋಟಿ ರೂ., ಇಂಟಿಗ್ರೇಟೆಡ್‌ ಜಿಎಸ್‌ಟಿ(ಭಾರತಕ್ಕೆ ಆಮದು ಮಾಡಿಕೊಳ್ಳುವ ಮತ್ತು ಭಾರತದಿಂದ ರಫ್ತು ಮಾಡುವ ಸಂದರ್ಭಗಳಲ್ಲಿ ಸರಕು ಮೇಲೆ ಹಾಕುವ ತೆರಿಗೆ) 79,518 ಕೋಟಿ ರೂ., ಸೆಸ್‌ ಮೂಲಕ 10,920 ಕೋಟಿ ರೂ. ಆದಾಯ ಸಂಗ್ರಹವಾಗಿದೆ.

    ಕಳೆದ 5 ತಿಂಗಳಿನಿಂದ ಜಿಎಸ್‌ಟಿ ಆದಾಯ 1.4 ಲಕ್ಷ ಕೋಟಿ ದಾಟುತ್ತಿದೆ. ಪ್ರತಿ ತಿಂಗಳು ಸ್ಥಿರವಾದ ಹೆಚ್ಚಳವನ್ನು ತೋರಿಸುತ್ತದೆ ಎಂದು ಹಣಕಾಸು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]