Tag: TB Dam Gate Broken

  • ಈಗ ನೀರು ಹರಿಸಿದ್ರೂ ಅಕ್ಟೋಬರ್‌ ವೇಳೆಗೆ ಡ್ಯಾಂ ತುಂಬುವ ಸಾಧ್ಯತೆಯಿದೆ – ಸಿದ್ದರಾಮಯ್ಯ ವಿಶ್ವಾಸ

    ಈಗ ನೀರು ಹರಿಸಿದ್ರೂ ಅಕ್ಟೋಬರ್‌ ವೇಳೆಗೆ ಡ್ಯಾಂ ತುಂಬುವ ಸಾಧ್ಯತೆಯಿದೆ – ಸಿದ್ದರಾಮಯ್ಯ ವಿಶ್ವಾಸ

    – ಬಿಜೆಪಿಯವರಿಗೆ ಗೂಬೆ ಕೂರಿಸುವುದೇ ಕಸುಬು: ಸಿಎಂ ಕಿಡಿ

    ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ, 19ನೇ ಕ್ರಸ್ಟ್ ಗೇಟ್ ವೀಕ್ಷಣೆ ಮಾಡಿದರು. ಸಿಎಂ ಆಗಮನದ ಹಿನ್ನೆಲೆ ಜಲಾಶಯದ ಬಳಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿತ್ತು. ಒಬ್ಬರು ಎಸ್ಪಿ, ಇಬ್ಬರು ಅಡಿಷನಲ್ ಎಸ್ಪಿ ಸೇರಿದಂತೆ 400ಕ್ಕೂ ಸಿಬ್ಬಂದಿಯನ್ನ ನಿಯೋಜಿಸಲಾಗಿತ್ತು. ಅಲ್ಲದೇ ಮುಖ್ಯ ದ್ವಾರದ ಮುಂದೆ ಸಾರ್ವಜನಿಕರ ಅಹವಾಲು ಸ್ವೀಕಾರಕ್ಕೂ ವ್ಯವಸ್ಥೆ

    ಟಿಬಿ ಡ್ಯಾಂನ 19ನೇ ಕ್ರಸ್ಟ್‌ಗೇಟ್‌ ವೀಕ್ಷಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯ 1952-53ರಲ್ಲಿ ಪೂರ್ಣಗೊಂಡಿತ್ತು. ಆಗಿನಿಂದ ಏನೂ ತೊಂದರೆ ಆಗಿರಲಿಲ್ಲ. ಈಗ ತೊಂದರೆಯಾಗಿದೆ. 19ನೇ ಕ್ರಸ್ಟ್ ಗೇಟ್ ಚೈನ್ ಕಟ್ಟಾಗಿದ್ದರಿಂದ ಸಮಸ್ಯೆಯಾಗಿದೆ. ಈಗ ಗೇಟ್ ರಿಪೇರಿ ಮಾಡೋದಕ್ಕೆ ಸುಮಾರು 60 ಟಿಎಂಸಿನಷ್ಟು ನೀರನ್ನ ಹೊರಗೆ ಬಿಡಬೇಕು. ಆದ್ರೆ ಇನ್ನೂ ಅಕ್ಟೋಬರ್ ವರೆಗೆ ಮಳೆ ಇರೋದ್ರಿಂದ ಈಗ ಹೊರಗೆ ಹೋದಷ್ಟು ನೀರು ತುಂಬುವ ಸಾಧ್ಯತೆ ಇದೆ. ಈ ವಿಶ್ವಾಸವನ್ನು ನಾವೆಲ್ಲರೂ ಇಟ್ಟುಕೊಳ್ಳೋಣ ಎಂದು ನುಡಿದರು. ಇದನ್ನೂ ಓದಿ: ಜಲಾಶಯ ನಿರ್ವಹಣೆಗೆ ಕೇಂದ್ರ ಸಮಿತಿ ಸಲಹೆ ಧಿಕ್ಕರಿಸಿದೆ ರಾಜ್ಯ ಸರ್ಕಾರ: ಜೋಶಿ ಆರೋಪ

    ಈಗ ಕ್ರಸ್ಟ್ ಗೇಟ್ ರಿಪೇರಿ ಮಾಡಬೇಕು ಅಂದ್ರೆ, ನೀರು ಹೊರಕ್ಕೆ ಬಿಡಬೇಕು. ಇದರಿಂದ ರೈತರಿಗೆ ಮೊದಲ ಬೆಳೆಗೆ ಯಾವುದೇ ತೊಂದರೆ ಆಗಲ್ಲ. ಅಲ್ಲದೇ ಹವಾಮಾನ ಮುನ್ಸೂಚನೆ ಪ್ರಕಾರ ಅಕ್ಟೋಬರ್ ವರೆಗೆ ಮಳೆ ಇರುವುದರಿಂದ ಈಗ ಹರಿದಷ್ಟೂ ನೀರು ಡ್ಯಾಂಗೆ ತುಂಬುವ ಸಾಧ್ಯತೆಯಿದೆ. ನಮ್ಮದು ರೈತಪರ ಸರ್ಕಾರ, ರೈತರಿಗೆ ತೊಂದರೆಯಾಗೋದಕ್ಕೆ ಬಿಡಲ್ಲ ಅಂತ ಸಿಎಂ ಆಶ್ವಾಸನೆ ನೀಡಿದರು. ಇದನ್ನೂ ಓದಿ: ಜಲಾಶಯ ನಿರ್ವಹಣೆಗೆ ಕೇಂದ್ರ ಸಮಿತಿ ಸಲಹೆ ಧಿಕ್ಕರಿಸಿದೆ ರಾಜ್ಯ ಸರ್ಕಾರ: ಜೋಶಿ ಆರೋಪ

    ಇದೇ ವೇಳೆ ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿದ ಸಿಎಂ, ಜಲಾಶಯಗಳ ನಿರ್ವಹಣೆಗೆ ಒಂದು ಬೋರ್ಡ್ ಇದೆ. ಅದು ಕೇಂದ್ರದ ಸುಪರ್ದಿಗೆ ಬರುತ್ತೆ. ಈ ಬೋರ್ಡ್‌ನಲ್ಲಿ ತೆಲಂಗಾಣ, ಆಂಧ್ರ ಪ್ರದೇಶ ಹಾಗೂ ಕರ್ನಾಟಕದ ಅಧಿಕಾರಿಗಳು ಇದ್ದಾರೆ. ಆದ್ರೆ ಈ ವಿಚಾರದಲ್ಲಿ ನಾನು ರಾಜಕೀಯ ಮಾಡಲ್ಲ. ಯಾರ ಮೇಲೂ ತಪ್ಪು ಹೊರಿಸಲ್ಲ. ಸರಿಪಡಿಸುವ ಕೆಲಸ ಆಗುತ್ತೆ ಎಂದರು.

    ಮುಂದುವರಿದು, ಬಿಜೆಪಿಯವರು ರಾಜಕೀಯವಾಗಿ ಟೀಕೆ ಮಾಡ್ತಿದ್ದಾರೆ. ಕ್ರಸ್ಟ್ ಗೇಟ್ ಕಟ್ಟಾಗಿ ನೀರು ಹೊರಗೆ ಹೋಗ್ತಿದೆ. ಸರ್ಕಾರದ ಹೊಣೆಗೇಡಿತನ ಅಂದ್ರೆ ಏನರ್ಥ? ಬಿಜೆಪಿಯವರಿಗೆ ಗೂಬೆ ಕೂರಿಸುವುದೇ ಕಸುಬು, ನಾವು ರೈತರ ಪರವಾಗಿದ್ದೇವೆ. ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: Bengaluru | ಬಿಎಂಟಿಸಿ ವೋಲ್ವೋ ಬಸ್‌ನಿಂದ ಸರಣಿ ಅಪಘಾತ; ನಡುರಸ್ತೆಯಲ್ಲೇ ವಾಹನ ಸವಾರರ ಚಿರಾಟ!

  • Tungabhadra Dam | ಹೈದರಾಬಾದ್‌ನಿಂದ ಹೊಸ ಗೇಟ್ ತರಿಸಲು ಪ್ಲ್ಯಾನ್‌ – ಆಂಧ್ರ, ತೆಲಂಗಾಣದ ಕೆಲ ಜಿಲ್ಲೆಗಳಿಗೂ ಆತಂಕ!

    Tungabhadra Dam | ಹೈದರಾಬಾದ್‌ನಿಂದ ಹೊಸ ಗೇಟ್ ತರಿಸಲು ಪ್ಲ್ಯಾನ್‌ – ಆಂಧ್ರ, ತೆಲಂಗಾಣದ ಕೆಲ ಜಿಲ್ಲೆಗಳಿಗೂ ಆತಂಕ!

    ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್‌ ನೀರಿನ ರಭಸಕ್ಕೆ ಕೊಚ್ಚಿ (TB Dam Gate Broken) ಹೋಗಿರುವುದು ರಾಜ್ಯಾದ್ಯಂತ ಸುದ್ದಿಯಾಗಿದೆ. ಸ್ಥಳಕ್ಕೆ ಬೆಂಗಳೂರು, ಹೈದರಾಬಾದ್ ಮೂಲದ ತಾಂತ್ರಿಕ ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಲು ಮುಂದಾಗಿದೆ. ಕ್ರಸ್ಟ್ ಗೇಟ್ ಕಳಚಿಕೊಂಡ ಹಿನ್ನೆಲೆ 19ನೇ ಗೇಟ್‌ನಿಂದ ನೀರು ಮುಗಿಲೆತ್ತರಕ್ಕೆ ಪುಟಿಯುತ್ತಿದೆ. ಒಂದೇ ಗೇಟ್ ನಿಂದ ಬರೋಬ್ಬರಿ 35 ಸಾವಿರ ಕ್ಯೂಸೆಕ್ ನೀರು ಹರಿಯುತ್ತಿದೆ. ನೀರಿನ ರಭಸ ಹೆಚ್ಚಾಗುತ್ತಿದ್ದಂತೆ ಜಲಾಶಯದ 32 ಗೇಟ್‌ಗಳ ಪೈಕಿ 28 ಗೇಟ್‌ಗಳನ್ನ ತೆರೆಯಲಾಗಿದೆ. ಇದರಿಂದ 30 ಗ್ರಾಮಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದ್ದು, 4 ಜಿಲ್ಲೆಗಳಲ್ಲಿ ಹೈಅಲರ್ಟ್‌ ಘೋಷಿಸಲಾಗಿದೆ. ಸದ್ಯದ ಬೆಳವಣಿಗೆಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿ..

    ಹೈದರಾಬಾದ್‌ನಿಂದ ಹೊಸ ಗೇಟ್:
    ತುಂಗಭದ್ರಾ ಜಲಾಶಯದ (Tungabhadra Reservoir) 19ನೇ ಕ್ರಸ್ಟ್‌ಗೇಟ್‌ ಕೊಚ್ಚಿ ಹೋದ ಹಿನ್ನೆಲೆಯಲ್ಲಿ ಹೈದರಾಬಾದ್ (Hyderabad) ಮೂಲದ ಕಂಪನಿಯಿಂದ ಹೊಸ ಗೇಟ್ ತಂದು ಅಳವಡಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಆದ್ರೆ ಹೊಸಗೇಟ್ ಸಿದ್ಧವಾಗಿ, ಅಳವಡಿಸಬೇಕಾದ್ರೆ ವಾರಕ್ಕೂ ಹೆಚ್ಚು ಸಮಯ ಬೇಕಾಗಬಹುದು. ಅಲ್ಲದೇ ದುರಸ್ತಿ ಕಾರ್ಯ ವಿಳಂಭವಾದರೂ ಡ್ಯಾಂನಲ್ಲಿ ನೀರು ಖಾಲಿಯಾಗುವ ಸಾಧ್ಯತೆಯಿದೆ ಅಂತ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

    ಆಂಧ್ರ, ತೆಲಂಗಾಣದ ಜಿಲ್ಲೆಗಳಿಗೂ ಸಂಕಷ್ಟ:
    ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕಳಚಿಹೋಗಿರುವುದಿಂದ ಗೇಟ್ ರಿಪೇರಿ ಮಾಡಬೇಕಾದ್ರೆ 60 ಟಿಎಂಸಿ ನಷ್ಟು ನೀರನ್ನು ಹೊರಹರಿಸಬೇಕಾಗಿದೆ ಎಂದು ಅಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದ್ದಾರೆ. ಇದರಿಂದ ಸುಮಾರು 30 ಗ್ರಾಮಗಳಿಗೆ ನೀರು ನುಗ್ಗುವ ಭೀತಿ ಉಂಟಾಗಿದೆ. ಲಕ್ಷಾಂತರ ರೈತರಿಗೂ ಸಂಕಷ್ಟ ತಂದೊಡ್ಡಿದೆ. ಅಲ್ಲದೇ ಈ ಬೆಳವಣಿಗೆಯಿಂದ ಕರ್ನಾಟಕ ಮಾತ್ರವಲ್ಲ, ಆಂಧ್ರ ಪ್ರದೇಶ ಮತ್ತು ತೆಲಂಗಾಣದ ಜನರಿಗೂ ಸಂಕಷ್ಟ ಉಂಟಾಗಿದೆ.

    ಆಂಧ್ರ ಮತ್ತು ತೆಲಂಗಾಣದ ಆದೋನಿ, ಕರ್ನೂಲ, ಕಡಪ, ಮಹೆಬೂಬ ನಗರ ಜಿಲ್ಲೆಗಳಿಗೂ ಇಲ್ಲಿನ ತುಂಗಭದ್ರಾ ಜಲಾಶಯ ಜೀವನಾಡಿಯಾಗಿದೆ. ನದಿ, ಕಾಲುವೆ ಮೂಲಕ ಈ ಎರಡು ರಾಜ್ಯಗಳಿಗೆ ನೀರು ಸರಬರಾಜಾಗುತ್ತದೆ. ನದಿ ನೀರು ಖಾಲಿಯಾದರೇ ಕೃಷಿ ಜಮೀನುಗಳಿಗೂ ನೀರು ಸಿಗದ ಪರಿಸ್ಥಿತಿ ಅಲ್ಲಿನ ಜಿಲ್ಲೆಗಳಿಗೂ ಕಾಡಲಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಕ್ರಮಗಳ ಕುರಿತು ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳ ಅಧಿಕಾರಿಗಳು ಕರ್ನಾಟಕದ ಉನ್ನತ ಅಧಿಕಾರಿಗಳು ಮತ್ತು ಟಿಬಿ ಡ್ಯಾಂ ಬೋರ್ಡ್ ಅಧಿಕಾರಿಗಳ ಜೊತೆ ಸಂಪರ್ಕ ಸಾಧಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    ಬೆಳೆಗೆ ನೀರಿನ ಕೊರೆತೆ ಸಾಧ್ಯತೆ:
    ಕಲ್ಯಾಣ ಕರ್ನಾಟಕದ ಕೊಪ್ಪಳ, ವಿಜಯನಗರ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಿಗೆ ಈ ಡ್ಯಾಂ ಆಧಾರವಾಗಿದ್ದು, 6 ಲಕ್ಷ ಹೆಕ್ಟೇರ್ ಬೆಳೆಗೆ ನೀರಿನ ಸಂಪರ್ಕ ಕಲ್ಪಿಸುತ್ತದೆ. ಆದ್ರೆ 105 ಟಿಎಂಸಿ ಸಾರ್ಮಥ್ಯದ ತುಂಗಭದ್ರಾ ಜಲಾಶಯದಲ್ಲೀಗ 60 ಟಿಎಂಸಿ ನೀರು ಹೊರಹರಿಸಬೇಕಿರುವುದರಿಂದ ಒಂದು ಬೆಳೆಗೆ ನೀರಿನ ಕೊರೆತೆ ಉಂಟಾಗಲಿದೆ ಎಂದು ರೈತರು ಆತಂಕದಲ್ಲಿದ್ದಾರೆ.

  • Tungabhadra Dam | 3 ಲಕ್ಷ ಕ್ಯುಸೆಕ್‌ ನೀರು ಹೊರಕ್ಕೆ ಹರಿಸಿದ್ರೆ 4 ಜಿಲ್ಲೆಗಳಿಗೆ ಅಪಾಯ!

    Tungabhadra Dam | 3 ಲಕ್ಷ ಕ್ಯುಸೆಕ್‌ ನೀರು ಹೊರಕ್ಕೆ ಹರಿಸಿದ್ರೆ 4 ಜಿಲ್ಲೆಗಳಿಗೆ ಅಪಾಯ!

    ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಸಂಖ್ಯೆ 19ರಲ್ಲಿ ಚೈನ್ ಲಿಂಕ್ ತುಂಡಾಗಿರುವ (TB Dam Gate Broken) ಕಾರಣ ನದಿಗೆ ಅಪಾರ ಪ್ರಮಾಣದ ನೀರು ಹರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತುಂಗಾ ನದಿ ಪಾತ್ರದ ಜನಲ್ಲಿ ಪ್ರವಾಹ ಭೀತಿ ಎದುರಾಗಿದೆ.

    ಈಗಾಗಲೇ 90 ಸಾವಿರಕ್ಕೂ ಅಧಿಕ ಕ್ಯುಸೆಕ್‌ ನೀರು ಹೊರಹರಿಸಲಾಗುತ್ತಿದೆ. ಮಧ್ಯಾಹ್ನದ ವೇಳೆಗೆ ಸುಮಾರು 3 ಲಕ್ಷ ಕ್ಯುಸೆಕ್‌ ನೀರನ್ನು ಹೊರಹರಿಸುವ ಸಾಧ್ಯತೆಯಿದೆ ಎಂದು ಟಿಬಿ ಡ್ಯಾಂ ಮಂಡಳಿ (Tungabhadra Reservoir Board)  ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರಿಂದ ಈಗಾಗಲೇ ಬಳ್ಳಾರಿ, ಕೊಪ್ಪಳ (Koppala), ರಾಯಚೂರು ಹಾಗೂ ವಿಜಯನಗರ ನಾಲ್ಕು ಜಿಲ್ಲೆಗಳ ಜಿಲ್ಲಾಡಳಿತ ಹೈ ಅಲರ್ಟ್‌ ಘೋಷಣೆ ಮಾಡಿವೆ. ಸ್ಥಳದಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

    ಹೆಚ್ಚಿನ ನೀರು ಹರಿಸಿದ್ರೆ ಸುಮಾರು 30ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗುವ ಆತಂಕ ಉಂಟಾಗಿದೆ. ಅಲ್ಲದೇ ಸಮಸ್ಯೆ ಪರಿಹರಿಸಬೇಕಾದ್ರೆ 65 ಟಿಎಂಸಿ ನೀರು ಖಾಲಿ ಮಾಡಬೇಕು ಎಂದು ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದು, ಇದರಿಂದ 6 ಲಕ್ಷ ಹೆಕ್ಟೇರ್‌ಗೂ ಅಧಿಕ ಬೆಳಗೆ ನೀರಿನ ಕೊರತೆಯಾಗುವ ಸಾಧ್ಯತೆಯಿದೆ. 65 ಟಿಎಂಸಿ ನೀರು ಖಾಲಿಯಾದ್ರೆ ಒಂದು ಬೆಳೆಗೂ ಡ್ಯಾಂ ನೀರು ಸಾಕಾಗಲ್ಲ. ಬೇಸಿಗೆಯಲ್ಲಿ ಜನರಿಗೆ ಕುಡಿಯೋದಕ್ಕೂ ನೀರು ಸಿಗಲ್ಲ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

    4 ಜಿಲ್ಲೆಗಳಿಗೆ ಆತಂಕ:
    ಅಲ್ಲದೇ 65 ಟಿಎಂಸಿ ನೀರು ಖಾಲಿ ಮಾಡುವುದರಿಂದ 4 ಜಿಲ್ಲೆಯ ಜನರಿಗೆ ಮತ್ತೆ ಜಲಕ್ಷಾಮ ಕಾಡುತ್ತೆ. ಬಳ್ಳಾರಿ, ಕೊಪ್ಪಳ, ರಾಯಚೂರು ಹಾಗೂ ವಿಜಯನಗರ ಜಿಲ್ಲೆಗಳಿಗೆ ಸಮಸ್ಯೆಯಾಗುತ್ತದೆ ಅಧಿಕಾರಿ ಮೂಲಗಳು ತಿಳಿಸಿವೆ.

    ಟಿಬಿ ಡ್ಯಾಂನಲ್ಲಿ ಏನಾಗಿದೆ?
    ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ ಸಂಖ್ಯೆ 19ರ ಚೈನ್‌ಲಿಂಕ್ ಶನಿವಾರ (ಆ.10) ತಡರಾತ್ರಿ 11 ಗಂಟೆ ಸುಮಾರಿಗೆ ತುಂಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚೈನ್ ಲಿಂಕ್ ತುಂಡಾಗಿರುವ ಕಾರಣ ನದಿಗೆ ಅಪಾರ ಪ್ರಮಾಣದ ನೀರು ಹರಿಸಲಾಗುತ್ತಿದೆ. ನೀರಿನ ರಭಸಕ್ಕೆ ತುಂಡಾಗಿರುವ ಭಾಗವೂ ಕಾಣುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • Koppala | ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ನ ಚೈನ್ ಲಿಂಕ್ ಕಟ್ – ಜನರಲ್ಲಿ ಆತಂಕ!

    Koppala | ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ನ ಚೈನ್ ಲಿಂಕ್ ಕಟ್ – ಜನರಲ್ಲಿ ಆತಂಕ!

    – ನದಿಗೆ ಹರಿದ ಅಪಾರ ನೀರು; ಸ್ಥಳಕ್ಕೆ ಶಾಸಕ ಹಿಟ್ನಾಳ್ ಭೇಟಿ, ಪರಿಶೀಲನೆ

    ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ ಸಂಖ್ಯೆ 19ರಲ್ಲಿ ಚೈನ್‌ ಲಿಂಕ್‌ ತುಂಡಾಗಿರುವ ( TB Dam Gate Broken) ಕಾರಣ ನದಿಗೆ ಅಪಾರ ಪ್ರಮಾಣದ ನೀರು ಹರಿಸಲಾಗುತ್ತಿದೆ. ನೀರಿನ ರಭಸಕ್ಕೆ ತುಂಡಾಗಿರುವ ಭಾಗವೂ ಕಾಣುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದ (Tungabhadra Reservoir) ಕ್ರಸ್ಟ್‌ ಗೇಟ್‌ನ ಚೈನ್‌ಲಿಂಕ್ ಶನಿವಾರ (ಆ.10) ತಡರಾತ್ರಿ 11 ಗಂಟೆ ಸುಮಾರಿಗೆ ತುಂಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸದ್ಯ 105 ಟಿಎಂಸಿ ಸಾಮರ್ಥ್ಯದ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಗೇಟ್ ಸಂಖ್ಯೆ 19 ರಿಂದ 35 ರಿಂದ 45 ಸಾವಿರ ಕ್ಯುಸೆಕ್‌ ನೀರು ನದಿಗೆ ಹರಿಸಲಾಗುತ್ತಿದೆ. ಉಳಿದ ಗೇಟ್‌ಗಳಿಂದ ಸುಮಾರು 75 ಸಾವಿರ ಕ್ಯುಸೆಕ್‌ ನೀರನ್ನ ಹೊರಬಿಡಲಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದ್ರೆ ಮಾತ್ರವೇ ಗೇಟ್‌ಗೆ ಏನಾಗಿದೆ ಎಂಬುದನ್ನ ನೋಡೋದಕ್ಕೆ ಸಾಧ್ಯ. ಆದ್ದರಿಂದ ನದಿ ಪಾತ್ರದ ಜನರು ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

    ನೀರಾವರಿ ಇಲಾಖೆಯ ಉನ್ನತ ಅಧಿಕಾರಿಗಳು ಈಗಾಗಲೇ ಬೆಂಗಳೂರಿನಿಂದ ಹೊರಟಿದ್ದು, ನೀರಿನ ಹೊರಹರಿವಿನ ಪ್ರಮಾಣವನ್ನ 1 ರಿಂದ 2 ಲಕ್ಷ ಕ್ಯುಸೆಕ್‌ಗೆ ಏರಿಸಬೇಕು. ನೀರು ಕಡಿಮೆಯಾದ್ರೆ ಬಳಿಕ ತುಂಡಾದ ಚೈನ್‌ಲಿಂಕ್‌ ಸರಿಪಡಿಸಲು ಸಾಧ್ಯವಾಗುತ್ತದೆ. ದುರಸ್ತಿಗೆ ಅಗತ್ಯವಾಗಿ ಬೇಕಾದ ನೀರು ಕಡಿಮೆ ಮಾಡಲು ಕನಿಷ್ಠ 3-4 ದಿನವಾದ್ರೂ ಬೇಕು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.