Tag: tb jayachandra

  • ಬೆಂಗಳೂರು – ಪುಣೆ ದಶಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅತಿ ಶೀಘ್ರ: ಟಿ.ಬಿ ಜಯಚಂದ್ರ

    ಬೆಂಗಳೂರು – ಪುಣೆ ದಶಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅತಿ ಶೀಘ್ರ: ಟಿ.ಬಿ ಜಯಚಂದ್ರ

    ತುಮಕೂರು: ಬೆಂಗಳೂರು- ಪುಣೆ ದಶಪಥ ರಾಷ್ಟ್ರೀಯ ಹೆದ್ದಾರಿ (Bengaluru-Pune Expressway) (ವಿಷನ್-47) ಕಾಮಗಾರಿ ಅತಿ ಶೀಘ್ರ ಪ್ರಾರಂಭವಾಗಲಿದ್ದು, ಇದರಿಂದಾಗಿ ಶಿರಾ ತಾಲೂಕಿನ ಚಿತ್ರಣವೇ ಬದಲಾಗುವುದು ಎಂದು ಶಾಸಕ ಟಿ.ಬಿ.ಜಯಚಂದ್ರ (TB Jayachandra) ಹೇಳಿದರು.

    ಶಿರಾ (Sira) ತಾಲೂಕಿನ ತೊಗರಗುಂಟೆ ಬಳಿ 25 ಕೋಟಿ ರೂ. ವೆಚ್ಚದಲ್ಲಿ ಶಿರಾ-ಅಮರಾಪುರ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ತಾಲೂಕಿನಲ್ಲಿ ಈಗಾಗಲೇ ಮೂರು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗುತ್ತಿದ್ದು, ಶೀಘ್ರದಲ್ಲಿ ಬೆಂಗಳೂರು- ಪುಣೆ ಹೆದ್ದಾರಿ ಕಾಮಗಾರಿ ಪ್ರಾರಂಭವಾಗುವುದರಿಂದ ಒಟ್ಟು ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗುವುದರಿಂದ ಮುಂದಿನ ದಿನಗಳಲ್ಲಿ ತಾಲೂಕು ಅಭಿವೃದ್ಧಿಯತ್ತ ಸಾಗುವುದು ಎಂದರು. ಇದನ್ನೂ ಓದಿ: ತ್ರಾಸಿ ಬೀಚ್‌ನಲ್ಲಿ ಟೂರಿಸ್ಟ್ ಬೋಟ್ ಪಲ್ಟಿ – ರೈಡರ್ ಕಣ್ಮರೆ

    ಶಿರಾ- ಅಮರಾಪುರ ರಸ್ತೆ ಕಾಮಗಾರಿ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿದೆ. ರಸ್ತೆ ಗುಣಮಟ್ಟಕ್ಕೆ ಆದ್ಯತೆ ನೀಡಿ ಹಣದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಹೆಚ್ಚು ಹಣ ಬೇಕಾದರೆ ನನಗೆ ಹೇಳಿ ಕೊಡಿಸಲಾಗುವುದು. ತಾಲೂಕಿನಲ್ಲಿ ನಾಲ್ಕು ಹೆದ್ದಾರಿಗಳು ಹಾದು ಹೋಗುತ್ತಿದ್ದು, ಇದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: Maharashtra | ನೂತನ ಸಚಿವರಿಗೆ ಖಾತೆ ಹಂಚಿಕೆ, ಗೃಹಖಾತೆ ತನ್ನಲ್ಲೇ ಉಳಿಸಿಕೊಂಡ ಬಿಜೆಪಿ – ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌!

  • ಕಾಡುಗೊಲ್ಲ ಸಮುದಾಯ ಎಸ್ಟಿಗೆ ಸೇರ್ಪಡೆ ವಿಚಾರ – ವಿ.ಸೋಮಣ್ಣ ಭೇಟಿಯಾದ ಟಿಬಿ ಜಯಚಂದ್ರ

    ಕಾಡುಗೊಲ್ಲ ಸಮುದಾಯ ಎಸ್ಟಿಗೆ ಸೇರ್ಪಡೆ ವಿಚಾರ – ವಿ.ಸೋಮಣ್ಣ ಭೇಟಿಯಾದ ಟಿಬಿ ಜಯಚಂದ್ರ

    ನವದೆಹಲಿ: ಕಾಡುಗೊಲ್ಲ ಸಮುದಾಯವನ್ನು (Kadugolla Community) ಪರಿಶಿಷ್ಟ ಪಂಗಡಕ್ಕೆ (ST) ಸೇರ್ಪಡೆ ಮಾಡುವ ಕುರಿತು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ (TB Jayachandra) ಅವರು ಕೇಂದ್ರ ಸಚಿವ ವಿ ಸೋಮಣ್ಣ (V Somanna) ಅವರನ್ನು ದೆಹಲಿಯಲ್ಲಿ (New Delhi) ಭೇಟಿ ಮಾಡಿ ಚರ್ಚೆ ಮಾಡಿದರು.

    ಕರ್ನಾಟಕ ಭವನದಲ್ಲಿ ಭೇಟಿ ಮಾಡಿದ ಅವರು, ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ತ್ವರಿತವಾಗಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲು ಸಹಾಯ ಮಾಡುವಂತೆ ಟಿ.ಬಿ ಜಯಚಂದ್ರ ಅವರು ಕೇಂದ್ರ ಸಚಿವ ವಿ ಸೋಮಣ್ಣ ಅವರಲ್ಲಿ ಮನವಿ ಮಾಡಿದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದಿದ್ದು ಸರಿಯಾಗಿದೆ: ಮಧು ಬಂಗಾರಪ್ಪ

    ತುಮಕೂರು, ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಕಾಡುಗೊಲ್ಲ ಸಮುದಾಯದ ಜನತೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವುದರಿಂದ ಆ ಸಮುದಾಯಕ್ಕೆ ಉದ್ಯೋಗ, ಶಿಕ್ಷಣ ಹಾಗೂ ಇತರ ಕ್ಷೇತ್ರಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚಿನ ಸವಲತ್ತುಗಳು ದೊರೆಯಲಿವೆ ಎಂದು ಜಯಚಂದ್ರ ಅವರು ಇದೇ ವೇಳೆ ಕೇಂದ್ರ ಸಚಿವರ ಗಮನಕ್ಕೆ ತಂದರು. ಇದನ್ನೂ ಓದಿ: ದರ್ಶನ್ ಇಂದೇ ಹೈಕೋರ್ಟ್ ಮೊರೆ ಹೋಗ್ತಾರಾ? – ಅರ್ಜಿ ಸಲ್ಲಿಸಿದ್ರೆ ಮುಂದೇನು?

  • ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನನಗೆ ಆಸಕ್ತಿಯಿಲ್ಲ, ನನ್ನ ಮಗನಿಗಿದೆ: ಟಿ.ಬಿ ಜಯಚಂದ್ರ

    ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನನಗೆ ಆಸಕ್ತಿಯಿಲ್ಲ, ನನ್ನ ಮಗನಿಗಿದೆ: ಟಿ.ಬಿ ಜಯಚಂದ್ರ

    ಬೆಂಗಳೂರು: ಲೋಕಸಭಾ ಚುನಾವಣೆ (Loksabha Election) ಸ್ಪರ್ದೆ ವಿಚಾರದಲ್ಲಿ ನನಗಂತೂ ಯಾವುದೇ ಆಸಕ್ತಿ ಇಲ್ಲ. ನನ್ನ ದೊಡ್ಡ ಮಗನಿಗೆ ಆಸಕ್ತಿ ಇದೆ ಎಂದು ಸರ್ಕಾರದ ದೆಹಲಿ ಪ್ರತಿನಿಧಿ ಹಾಗೂ ಶಾಸಕ ಟಿ.ಬಿ ಜಯಚಂದ್ರ (TB Jayachandra) ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ ರಾಜಕೀಯವಾಗಿ ಸಮುದಾಯಗಳನ್ನ ಓಲೈಕೆ ಮಾಡಬೇಕಾಗುತ್ತೆ. ತುಮಕೂರಿನಲ್ಲಿ ಕುಂಚಿಟಿಗ ಸಮುದಾಯಕ್ಕೆ ಪ್ರಾತಿನಿಧ್ಯ ಕೊಡೋದು ಸೂಕ್ತ ಮುದ್ದು ಹನುಮೇಗೌಡ, ಸೋಮಣ್ಣ ಬಗ್ಗೆ ಊಹಾಪೋಹ ಮಾತುಗಳು ಬರುತ್ತವೆ ಎಂದಿದ್ದಾರೆ. ಇದನ್ನೂ ಓದಿ: MBA ಓದಲು ಇಟಲಿಗೆ ತೆರಳಿದ್ದ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆ

    ಅವರು ಬಿಜೆಪಿ ಪಕ್ಷದಲ್ಲೇ ಇದ್ದಾರೆ. ತುಮಕೂರು ಬಗ್ಗೆ ಚರ್ಚೆ ಆಗಿಲ್ಲ, ಚಿತ್ರದುರ್ಗದ ಬಗ್ಗೆ ಚರ್ಚೆ ಆಗಿದೆ. ಮುದ್ದಹನುಮೇಗೌಡ ಕಾಂಗ್ರೆಸ್‌ಗೆ ಖಂಡಿತಾ ಅನಿವಾರ್ಯವಲ್ಲ. ಅವರನ್ನ ವಾಪಸ್ ಕರೆದುಕೊಂಡು ಬರೋದು ಅಷ್ಟು ಸಮಂಜಸವಲ್ಲ. ವಿ.ಸೋಮಣ್ಣ, ಮುದ್ದಹನುಮೇಗೌಡ ಇಬ್ಬರೂ ಬಿಜೆಪಿಯಲ್ಲೇ ಇದ್ದಾರೆ. ಅವರು ಅಲ್ಲಿರುವಾಗ ನಮ್ಮಲ್ಲೇಕೆ ಚರ್ಚೆ ಎಂದಿದ್ದಾರೆ.

  • DCM ಹುದ್ದೆಗೆ ಹೆಚ್ಚು ಮಹತ್ವ ಕೊಡಬಾರದು, ಅದು ಸಾಂವಿಧಾನಿಕ ಹುದ್ದೆಯಲ್ಲ: ಟಿ.ಬಿ ಜಯಚಂದ್ರ

    DCM ಹುದ್ದೆಗೆ ಹೆಚ್ಚು ಮಹತ್ವ ಕೊಡಬಾರದು, ಅದು ಸಾಂವಿಧಾನಿಕ ಹುದ್ದೆಯಲ್ಲ: ಟಿ.ಬಿ ಜಯಚಂದ್ರ

    ಬೆಂಗಳೂರು: ಉಪ ಮುಖ್ಯಮಂತ್ರಿ (DCM) ಹುದ್ದೆಯು ಸಾಂವಿಧಾನಿಕ ಹುದ್ದೆ ಅಲ್ಲ. ಅದಕ್ಕೆ ಹೆಚ್ಚು ಮಹತ್ವ ಕೊಡಬಾರದು ಎಂದು ಮಾಜಿ ಸಚಿವರೂ ಆಗಿರುವ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ (TB Jayachandra) ತಿಳಿಸಿದ್ದಾರೆ.

    3 ಡಿಸಿಎಂ ಹುದ್ದೆ ಸೃಷ್ಟಿ ಮಾಡಬೇಕು ಎಂಬ ಸಚಿವ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಚಿವ ರಾಜಣ್ಣ (Rajanna) ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಪತ್ರ ಬರೆಯುತ್ತೇನೆ ಅಂತ ಹೇಳಿದ್ದಾರೆ. ಅದು ಸಲಹೆ ರೂಪದಲ್ಲಿ ಕೊಟ್ಟಿರಬಹುದು ಎಂದಿದ್ದಾರೆ. ಇದನ್ನೂ ಓದಿ: ಜನ್ಮದಿನದಂದು ದೆಹಲಿಯಲ್ಲಿ ಮೋದಿ ಮೆಟ್ರೋ ರೈಡ್ – ಪ್ರಯಾಣಿಕರೊಂದಿಗೆ ಸೆಲ್ಫಿ

    ಡಿಸಿಎಂ ಹುದ್ದೆಗೆ ಹೆಚ್ಚು ಮಹತ್ವ ಕೊಡಬಾರದು. ಏಕೆಂದರೆ ಅದು ಸಾಂವಿಧಾನಿಕ ಹುದ್ದೆ ಅಲ್ಲ. ಸರ್ಕಾರ ಆಗಿ ನಾವು ನೋಡಬೇಕಾದ ಕೆಲಸ ತುಂಬಾ ಇದೆ. ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಬೇಕು. ಹೀಗಾಗಿ ಅದಕ್ಕೆ ಹೇಗೆ ಹಣ ಸಂಗ್ರಹ ಮಾಡಬೇಕು ಅನ್ನೋದರ ಬಗ್ಗೆ ಗಮನಹರಿಸಬೇಕು. ಗ್ಯಾರಂಟಿ ಯೋಜನೆ ಜೊತೆಗೆ ಬೇರೆ ಬೇರೆ ಅಭಿವೃದ್ಧಿ ಕೆಲ‌ಸ ಮಾಡುವ ಬಗ್ಗೆಯೂ ಗಮನ ಕೊಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಂಗೀತಾ ಬಿಜಲಾನಿ ಜೊತೆ ಸಲ್ಮಾನ್ ಮದುವೆ ಕ್ಯಾನ್ಸಲ್ ಆಗಿದ್ಯಾಕೆ- ಅಷ್ಟಕ್ಕೂ ಆಗಿದ್ದೇನು?

    ಲೋಕಸಭೆ ಚುನಾವಣೆ ಸಮಯದಲ್ಲಿ ಇದಕ್ಕೆ ಪ್ರಾಮುಖ್ಯತೆ ಕೊಡಬಾರದು. ಅವರ ಹೇಳಿಕೆ ರಾಜಕೀಯವಾಗಿ ಪ್ರಸ್ತುತ ಇರುತ್ತದೆ. ಅಂತಿಮವಾಗಿ ಹೈಕಮಾಂಡ್ ಈ ಬಗ್ಗೆ ತೀರ್ಮಾನ ಮಾಡುತ್ತದೆ. ರಾಜಣ್ಣ ಹೇಳಿಕೆಗೆ ಸಹಮತ ಅಂತ ಹೇಳುವುದಿಲ್ಲ. ಡಿಸಿಎಂ ಹುದ್ದೆಗೆ ಸಾಂವಿಧಾನಿಕ ಮಾನ್ಯತೆ ಇಲ್ಲ. ರಾಜಕೀಯವಾಗಿ ಡಿಸಿಎಂ ಹುದ್ದೆ ಸ್ಕೋಪ್ ಇರುತ್ತದೆ. ಅಂತಿಮವಾಗಿ ಹೈಕಮಾಂಡ್ ಎಲ್ಲವನ್ನ ತೀರ್ಮಾನ ಮಾಡುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೈಸ್ ಯೋಜನೆಯನ್ನ ಸರ್ಕಾರ ಸ್ವಾಧೀನಪಡಿಸಿಕೊಳ್ಳಬೇಕು – ಟಿ.ಬಿ.ಜಯಚಂದ್ರ

    ನೈಸ್ ಯೋಜನೆಯನ್ನ ಸರ್ಕಾರ ಸ್ವಾಧೀನಪಡಿಸಿಕೊಳ್ಳಬೇಕು – ಟಿ.ಬಿ.ಜಯಚಂದ್ರ

    ಬೆಂಗಳೂರು: ನೈಸ್ ವಿಚಾರದಲ್ಲಿ ಸದನ ಸಮಿತಿ ಕೊಟ್ಟಿರೋ ವರದಿ ಅನ್ವಯ ನೈಸ್ ಯೋಜನೆಯನ್ನ (Nice Project) ಸರ್ಕಾರ ವಶಪಡಿಸಿಕೊಳ್ಳಬೇಕು ಅಂತ ದೆಹಲಿ ಪ್ರತಿನಿಧಿ, ಸದನ ಸಮಿತಿ ಅಧ್ಯಕ್ಷರಾಗಿದ್ದ ಟಿ.ಬಿ ಜಯಚಂದ್ರ (TB Jayachandra) ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ನೈಸ್ ದಾಖಲಾತಿ ಬಿಡುಗಡೆ ವಿಚಾರವಾಗಿ ವಿಧಾನಸೌಧದಲ್ಲಿ (Vidhan Soudha) ಪ್ರತಿಕ್ರಿಯೆ ನೀಡಿದ ಅವರು, ಸದನ ಸಮಿತಿ ವರದಿ ಕೊಟ್ಟ ಮೇಲೆ ಮುಗಿದೋಯ್ತು. 2016ರ ಡಿಸೆಂಬರ್‌ನಲ್ಲೇ ವರದಿ ಕೊಟ್ಟಿದ್ದೇನೆ. ಮೂರು ಪಕ್ಷಗಳ ಶಾಸಕರು ಕುಳಿತು ವರದಿ ಕೊಟ್ಟಿದ್ದೇವೆ. ಬೆಳಗಾವಿ ಅಧಿವೇಶನದಲ್ಲಿ (Belagavi Session) ಚರ್ಚೆಗೆ ಒತ್ತಾಯಿಸಿದ್ದರು. ಸರ್ಕಾರ ಕೂಡ ಅದಕ್ಕೆ ಉತ್ತರ ಕೊಟ್ಟಿದೆ. ನಮ್ಮ ಶಿಫಾರಸು ಸಲಹೆ ಕೊಟ್ಟಿದ್ದೇವೆ ಅಂತ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಹಸ್ತ ಭೀತಿ; ವಲಸಿಗರ ಜೊತೆ ಸಮಾಲೋಚನೆ ನಡೆಸಲು ಬಿಎಸ್‌ವೈಗೆ ತಾಕೀತು

    ನೈಸ್ ಯೋಜನೆ ಮೇಲೆ 101 ಕೇಸ್ ಇದಕ್ಕೆ ಸಂಬಂಧಿಸಿದಂತೆ ಇದ್ವು. ಮೂರು ಜನರ ಸಮಿತಿ ರಚನೆ ಮಾಡಬೇಕು. ಅವರ ನೇತೃತ್ವದಲ್ಲಿ ಇದರ ತನಿಖೆ ಆಗಬೇಕು ಎಂದಿದ್ದೆವು. ನಾವು ಸಮಿತಿಯಲ್ಲಿ ಚರ್ಚಿಸಿ ವರದಿ ಕೊಟ್ಟಿದ್ದೇವೆ. ಶಿಫಾರಸು ಮಾಡಿದ್ದನ್ನ ಸರ್ಕಾರ ತೀರ್ಮಾನಿಸಬೇಕು. ಯೋಜನೆಯ ಹೆಚ್ಚುವರಿ ಭೂಮಿ ಪಡೆದುಕೊಳ್ಳಬೇಕು. ನಮ್ಮ‌ ವರದಿ ಮೇಲೆ ಸರ್ಕಾರ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಚಂದ್ರಯಾನ-3: ನೆಹರೂ ತಾರಾಲಯದಲ್ಲಿ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯೋ ದೃಶ್ಯ ನೇರಪ್ರಸಾರ

    ಮನಿ ಲಾಂಡರಿಂಗ್ ಕೂಡ ಆಗಿದೆ ವರದಿಯಲ್ಲಿ ಹೇಳಿದ್ದೆವು, ಯೋಜನೆಯ ಮೂಲ ಒಪ್ಪಂದದ ಉಲ್ಲಂಘನೆ ಆದ ಬಗ್ಗೆ ವರದಿಯಲ್ಲಿ ಪ್ರಸ್ತಾಪ ಆಗಿದೆ. ಅದಕ್ಕೆ ವರದಿ ಬಗ್ಗೆ ಕ್ರಮ ಆಗಲೇಬೇಕು. ಇಡೀ ಯೋಜನೆಯನ್ನೇ ಸರ್ಕಾರ‌ ಟೇಕ್ ಓವರ್ ಮಾಡಬೇಕು ಅಂತ ಒತ್ತಾಯಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುಂಚಿಟಿಗ ಸಮುದಾಯಕ್ಕೆ ಕೇಂದ್ರ ಒಬಿಸಿ ಮೀಸಲಾತಿ ಕಲ್ಪಿಸುವಂತೆ ಟಿ.ಬಿ ಜಯಚಂದ್ರ ಮನವಿ

    ಕುಂಚಿಟಿಗ ಸಮುದಾಯಕ್ಕೆ ಕೇಂದ್ರ ಒಬಿಸಿ ಮೀಸಲಾತಿ ಕಲ್ಪಿಸುವಂತೆ ಟಿ.ಬಿ ಜಯಚಂದ್ರ ಮನವಿ

    ನವದೆಹಲಿ: ಕರ್ನಾಟಕದ ಕುಂಚಿಟಿಗ ಸಮುದಾಯಕ್ಕೆ (Kunchitiga community) ಒಬಿಸಿ (OBC) ಮೀಸಲಾತಿ ಕಲ್ಪಿಸುವಂತೆ ಮಾಜಿ ಸಚಿವ ಟಿ.ಬಿ ಜಯಚಂದ್ರ (TB Jayachandra) ಮನವಿ ಮಾಡಿದ್ದಾರೆ. ಕೇಂದ್ರ ಹಿಂದುಳಿದ ವರ್ಗಗಳ ಉಪ ಪಂಗಡಗಳ ‘ರೋಹಿಣಿ’ ನಿಯೋಗದ ಅಧ್ಯಕ್ಷೆ, ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶೆ ಜಿ. ರೋಹಿಣಿ ಅವರನ್ನು ಭೇಟಿ ಮಾಡಿದ ಅವರು ಈ ಬಗ್ಗೆ ಚರ್ಚೆ ನಡೆಸಿದರು.

    ಭೇಟಿ ವೇಳೆ ಮನವಿಗೆ ಪೂರಕವಾಗಿ ಹಿಂದಿನಿಂದಲೂ ಕೇಂದ್ರ ಸರ್ಕಾರದ ಜೊತೆ ನಡೆದಿರುವ ಪತ್ರ ವ್ಯವಹಾರಗಳ ದಾಖಲೆ, ಕುಂಚಿಟಿಗ ಸಮುದಾಯಕ್ಕೆ ಒಬಿಸಿ ಮೀಸಲಾತಿ ಕಲ್ಪಿಸಲು ಅಗತ್ಯವಿರುವ ಹಲವಾರು ದಾಖಲೆಗಳನ್ನು ನೀಡಿ ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದರು. ಇದನ್ನೂ ಓದಿ: ಮುಂದಿನ 18 ತಿಂಗಳಲ್ಲಿ ರಾಜ್ಯದಲ್ಲಿ ಐದು ಏರ್‌ಪೋರ್ಟ್‌ ನಿರ್ಮಾಣ: ಮುರುಗೇಶ್ ನಿರಾಣಿ

    ಮನವಿ ಬಳಿಕ ಮಾತನಾಡಿದ ಅವರು, ಇತ್ತೀಚೆಗೆ ತುಮಕೂರು, ಹಿರಿಯೂರು, ಶಿಕಾರಿಪುರ, ಚಿಕ್ಕಹುಲಿಕುಂಟೆಯಲ್ಲಿ ಕುಂಚಿಟಿಗರ ಸಮಾವೇಶ ನಡೆದಿತ್ತು. ಈ ಸಮುದಾಯದ ಬಹುದಿನಗಳ ಬೇಡಿಕೆಯಾದ ಕೇಂದ್ರ ಒಬಿಸಿ ಮೀಸಲಾತಿ ಕಲ್ಪಿಸಲು ಅಗತ್ಯವಿರುವ ಹೋರಾಟ ಮಾಡಲು ಒಮ್ಮತದಿಂದ ತಿರ್ಮಾನ ಮಾಡಿ ಈ ಕುರಿತು ನಿರ್ಣಯವನ್ನು ತೆಗೆದುಕೊಳ್ಳಲಾಗಿತ್ತು ಎಂದು ತಿಳಿಸಿದರು. ಇದನ್ನೂ ಓದಿ: ಕೋಟಿ ಕಂಠ ಗಾಯನದಲ್ಲಿ ಕನ್ನಡ ಹಾಡಿಗೆ ಹೆಜ್ಜೆ ಹಾಕಿದ ಪ್ರಹ್ಲಾದ್‌ ಜೋಶಿ

    ಸುಮಾರು 2 ದಶಕಗಳ ಕಾಲ ಸಮುದಾಯಕ್ಕೆ ಒಬಿಸಿ ಮೀಸಲಾತಿ ಕಲ್ಪಿಸಲು ಹೋರಾಟ ಮಾಡಲಾಗಿದೆ. ಈ ನಿಟ್ಟಿನಲ್ಲಿ ಇದ್ದಂತಹ ಅನೇಕ ಕಾನೂನು ತೊಡಕುಗಳನ್ನು ನಿವಾರಣೆ ಮಾಡಿ, ತಾವು ಕಾನೂನು ಸಚಿವರಾಗಿದ್ದ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾಲಯದ ಮಾನವಶಾಸ್ತ್ರ ಅಧ್ಯಯನ ವಿಭಾಗದ ಮೂಲಕ ಸಮುದಾಯದ ಕುಲಶಾಸ್ತ್ರ ಅಧ್ಯಯನ ಮಾಡಿಸಿದ್ದೇವೆ. ಈಗಾಗಲೇ 2019ರಲ್ಲಿ ಈ ವರದಿಯನ್ನು ರಾಜ್ಯ ಸಚಿವ ಸಂಪುಟ ಸಭೆ ಅಂಗೀಕರಿಸಿ ಕುಂಚಿಟಿಗ ಸಮುದಾಯಕ್ಕೆ ಕೇಂದ್ರ ಒಬಿಸಿ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರದ ಮುಖೇನ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದನ್ನು ಆಧರಿಸಿ ಕ್ರಮ ವಹಿಸಲು ಮನವಿ ಮಾಡಿದೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ನಂಬಲು ಸಾಧ್ಯವಿಲ್ಲದ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದೇನೆ: ಟಿಬಿ ಜಯಚಂದ್ರ

    ನಂಬಲು ಸಾಧ್ಯವಿಲ್ಲದ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದೇನೆ: ಟಿಬಿ ಜಯಚಂದ್ರ

    ಬೆಂಗಳೂರು: ನಂಬಲು ಸಾಧ್ಯವಿಲ್ಲದ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದೇನೆ ಎಂದು ಶಿರಾ ಕ್ಷೇತ್ರದ ಕಾಂಗ್ರೆಸ್‍ನ ಮಾಜಿ ಸಚಿವ ಟಿಬಿ ಜಯಚಂದ್ರ ಅವರು ವೀಡಿಯೋ ಮೂಲಕ ತಿಳಿಸಿದ್ದಾರೆ.

    ಘಟನೆ ಕುರಿತು ಖಾಸಗಿ ಆಸ್ಪತ್ರೆಯಿಂದಲೇ ವೀಡಿಯೋ ಕಳುಹಿಸಿರುವ ಅವರು, ರಾತ್ರಿ ನಾನು ಸಂಚರಿಸುತ್ತಿದ್ದ ಕಾರಿನ ಟಯರ್ ಬ್ಲಾಸ್ಟ್ ಆಗಿ ಅಪಘಾತ ಆಗಿದೆ ಎಂದು ಮಾಹಿತಿ ನೀಡಿದರು.

    ನಂಬಲು ಸಾಧ್ಯವಿಲ್ಲದ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದೇನೆ. ಭಯ ಪಡುವ ಅಗತ್ಯವಿಲ್ಲ. ಸಣ್ಣ ಗಾಯವಾಗಿದ್ದು 3-4 ವಾರ ಆಸ್ಪತ್ರೆಯಲ್ಲಿ ಇರಬೇಕು ಅಂತ ವೈದ್ಯರು ಹೇಳಿದ್ದಾರೆ. ನನ್ನನ್ನು ನೋಡಲು ಯಾರು ಬರುವುದು ಬೇಡ ಎಂದು ವೀಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ನುಗ್ಗಿಕೇರಿ ಕಲ್ಲಂಗಡಿ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್

    ನಡೆದಿದ್ದು ಏನು?
    ಶಿರಾ ಕ್ಷೇತ್ರದ ಕಾಂಗ್ರೆಸ್‍ನ ಮಾಜಿ ಸಚಿವ ಟಿಬಿ ಜಯಚಂದ್ರ ಅವರು ಫಾರ್ಚುನರ್ ಕಾರಿನಲ್ಲಿ ಪ್ರಯಾಣಿಸುತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಉರುಳಿ ಬಿದ್ದ ಘಟನೆ ತುಮಕೂರು ತಾಲೂಕಿನ ಸಿಬಿ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ರಾತ್ರಿ ಸುಮಾರು 1 ಗಂಟೆಗೆ ನಡೆದಿದೆ. ಇದನ್ನೂ ಓದಿ:  ಹಿಂದೂಯೇತರನ ಅಂಗಡಿ ಧ್ವಂಸ ಪ್ರಕರಣ- ಶ್ರೀರಾಮಸೇನೆಯ ನಾಲ್ವರ ಬಂಧನ

    ಘಟನೆಯಲ್ಲಿ ಜಯಚಂದ್ರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗನ್ ಮ್ಯಾನ್ ಹಾಗೂ ಕಾರು ಚಾಲಕ ಕೂಡ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಜಯಚಂದ್ರ ಅವರಿಗೆ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

  • ಮದಲೂರು ಕೆರೆಗೆ ನೀರು ಬಿಡಲು ಸಾಧ್ಯವಿಲ್ಲ- ಮಾಧುಸ್ವಾಮಿ ಮತ್ತೊಮ್ಮೆ ಸ್ಪಷ್ಟನೆ

    ಮದಲೂರು ಕೆರೆಗೆ ನೀರು ಬಿಡಲು ಸಾಧ್ಯವಿಲ್ಲ- ಮಾಧುಸ್ವಾಮಿ ಮತ್ತೊಮ್ಮೆ ಸ್ಪಷ್ಟನೆ

    ತುಮಕೂರು: ಶಿರಾ ತಾಲೂಕು ಮದಲೂರು ಕೆರೆಗೆ ಯಾವುದೇ ಕಾರಣಕ್ಕೂ ನೀರು ಬೀಡಲು ಸಾಧ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ಅವರ ರಾಜಕೀಯ ದಾಳಕ್ಕೆ ಬಲಿಯಾಗಲು ನಾನು ತಯಾರಿಲ್ಲ. ಮದಲೂರು ಕೆರೆಗೆ ನೀರು ಹರಿಸಲಾಗದು, ಏನಾದರೂ ಮಾಡಿಕೊಳ್ಳಲಿ ಎಂದು ಸುದ್ದಿಗಾರರಿಗೆ ತಿಳಿಸಿದರು. ಶಿರಾ ತಾಲೂಕಿಗೆ ಹಂಚಿಕೆಯಾಗಿರುವ 0.9 ಟಿಎಂಸಿ ನೀರನ್ನು ಆ ಭಾಗಕ್ಕೆ ಬಳಸಿಕೊಳ್ಳುವಂತೆ ಹೈಕೋರ್ಟ್ ಹೇಳಿದೆ. ಹಂಚಿಕೆಯಾಗಿರುವ ನೀರನ್ನು ಕಳ್ಳಂಬೆಳ್ಳ ಕೆರೆಗೆ ತುಂಬಿಸಿ, ಶಿರಾ ಕೆರೆಗೆ ನೀರು ಹರಿಸುವುದರ ಒಳಗೆ ಮುಗಿದು ಹೋಗುತ್ತದೆ. ಮದಲೂರು ಕೆರೆಗೆ ಎಲ್ಲಿಂದ ನೀರು ಕೊಡುವುದು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮದಲೂರು ಕೆರೆಗೆ ನೀರು ಬಿಡಲ್ಲ ಎನ್ನಲು ಮಾಧುಸ್ವಾಮಿಗೆ ನೈತಿಕತೆ ಇಲ್ಲ: ಟಿ.ಬಿ.ಜಯಚಂದ್ರ

    ಜಯಚಂದ್ರ ಅವರು ಶಿರಾ ಕೆರೆಗೆ ನೀರು ಬಿಡುವುದು ಬೇಡ. ಅದೇ ನೀರನ್ನು ಮದಲೂರು ಕೆರೆಗೆ ಹರಿಸಿ ಎಂದು ಹೇಳಿದರೆ ಆಗ ಮಾತ್ರ ನೀರು ಬಿಡಬಹುದು. ಇದಕ್ಕೆ ಶಿರಾ ನಗರದ ಜನರನ್ನು ಒಪ್ಪಿಸಿಕೊಂಡು ಬರಲಿ ಎಂದು ಸವಾಲು ಹಾಕಿದರು. 0.9 ಟಿಎಂಸಿ ನೀರನ್ನು ತಾಲೂಕಿನ ಎಲ್ಲಿಗೆ ಬೇಕಾದರೂ ಹರಿಸಿಕೊಳ್ಳಲಿ. ಶಿರಾ ನಗರದಲ್ಲಿ 60 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಅಲ್ಲಿನ ಜನರು ಕುಡಿಯಲು ಕೆರೆ ನೀರನ್ನೇ ಆಶ್ರಯಿಸಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ ಶಿರಾ ಕೆರೆಗೆ ಬಿಡದೆ ಬೇರೆಡೆಗೆ ಕೊಡಲು ಸಾಧ್ಯವಿಲ್ಲ. ಮದಲೂರು ಕೆರೆ ಬಳಿ ಕುಡಿಯುವ ನೀರು ಸರಬರಾಜು ಮಾಡಲು ಯಾವ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಸುಮ್ಮನೆ ಕೆರೆಗೆ ಬಿಡಲಾಗುತ್ತದೆಯೆ? ಹೈಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲೇ ನೀರು ಕೊಡಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮಯುದ್ಧ- ಎಂ.ಬಿ.ಪಾಟೀಲ್ ಧರ್ಮ ದಾಳಕ್ಕೆ ಕಾಂಗ್ರೆಸ್ ಮೌನ

    ಶಿರಾ, ಮದಲೂರು ನಾಲೆ ಮಧ್ಯದಲ್ಲಿ ಸಾಕಷ್ಟು ಬ್ಯಾರೇಜ್‍ಗಳನ್ನು ಜಯಚಂದ್ರ ನಿರ್ಮಿಸಿದ್ದಾರೆ. ಈ ಬ್ಯಾರೇಜ್‍ಗಳನ್ನು ತುಂಬಿಸಿ ಮುಂದಕ್ಕೆ ನೀರು ತೆಗೆದುಕೊಂಡು ಹೋಗಲು ಸಾಧ್ಯವೇ ಇಲ್ಲ. ಬ್ಯಾರೇಜ್‍ಗಳನ್ನು ತೆರವುಮಾಡಿ, ಪೈಪ್‍ಲೈನ್ ನಿರ್ಮಿಸಿದರೆ ಈಗಲೂ ನೀರು ಬಿಡಲು ಸಿದ್ಧ. ಆಗ ಬೇಕಾದರೆ ರಾಜಿಮಾಡಿಕೊಳ್ಳುತ್ತೇನೆ. ಈಗ ಪೈಪ್‍ಲೈನ್ ನಿರ್ಮಿಸಿ, ನೀರು ಬಿಡುವುದು ಅಸಾಧ್ಯದ ಕೆಲಸ. ಅವರು ಮಾಡಿದ ಅವಾಂತರದಿಂದ ಇಷ್ಟೆಲ್ಲ ಸಮಸ್ಯೆಗಳಾಗಿವೆ ಎಂದು ಹೇಳಿದರು.

  • ತ್ರಿಕೋನ ಫೈಟಲ್ಲಿ ಯಾರ ಮುಡಿಗೆ ‘ಶಿರಾ’ ಕಿರೀಟ?- ನಾಳೆ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ

    ತ್ರಿಕೋನ ಫೈಟಲ್ಲಿ ಯಾರ ಮುಡಿಗೆ ‘ಶಿರಾ’ ಕಿರೀಟ?- ನಾಳೆ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ

    ತುಮಕೂರು: ಶಿರಾ ಉಪಚುನಾವಣೆಯ ಜಿದ್ದಾಜಿದ್ದಿನ ಅಖಾಡದ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇತ್ತ ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ. ಮೂರೂ ಪಕ್ಷಗಳ ಅಭ್ಯರ್ಥಿಗಳ ನಡುವೆ ತ್ರಿಕೋನ ಸ್ಪರ್ಧೆ ಇರೋಂದ್ರಿಂದ ಇಂದಿನ ಮತ ಎಣಿಕೆ ಇನ್ನಷ್ಟು ಮತ್ತಷ್ಟು ಕುತೂಹಲ ಕೆರಳಿಸಿದೆ.

    ಕಾಂಗ್ರೆಸ್, ಜೆಡಿಎಸ್‍ಗೆ ಮತ್ತೆ ಅಸ್ತಿತ್ವ ಉಳಿಸಿಕೊಳ್ಳುವ ತವಕವಿದ್ದರೆ, ಬಿಜೆಪಿಗೆ ಖಾತೆ ತೆರೆಯುವ ತವಕ. ಶಿರಾ ಅಖಾಡದಲ್ಲಿ ಸೋಲು ಗೆಲುವಿನ ಲೆಕ್ಕಾಚಾರ. ಭಾರೀ ಕುತೂಹಲ ಮೂಡಿಸಿರೋ ಶಿರಾ ಉಪಚುನಾವಣೆ ಫಲಿತಾಂಶ ಇವತ್ತು ಪ್ರಕಟಗೊಳ್ಳಲಿದೆ. ನವೆಂಬರ್ 3ರಂದು ಮತದಾರರು ಬರೆದ ಭವಿಷ್ಯ ಇಂದು ಬಹಿರಂಗವಾಗಲಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಈ ಮೂರೂ ಪಕ್ಷದ ಅಭ್ಯರ್ಥಿಗಳ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದ್ದು ವಿಜಯದ ಕಿರೀಟ ಯಾರ ತಲೆಯೇರಲಿದೆ ಅನ್ನೋದು ಮಧ್ಯಾಹ್ನದೊಳಗೆ ತಿಳಿಯಲಿದೆ.

    ತುಮಕೂರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಯಿಂದ ಮತಎಣಿಕೆ ಕಾರ್ಯ ಆರಂಭವಾಗಲಿದೆ. ಶಿರಾ ಉಪಚುನಾವನೆಯ ಕಣದಲ್ಲಿ ಒಟ್ಟು ಅಭ್ಯರ್ಥಿಗಳು 15 ಅದೃಷ್ಟ ಪರೀಕ್ಷೆ ನಡೆಸಿದ್ದು, ಕ್ಷೇತ್ರದಲ್ಲಿ 2,15,694 ಮತದಾರರಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಶೇ.84 ಅಂದರೇ 1,77,645 ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. 4,821 ಅಂಚೆ ಮತಗಳು ಚಲಾವಣೆಯಾಗಿದೆ.

    ಇಂದು 24 ಸುತ್ತುಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಒಟ್ಟು 14 ಟೇಬಲ್‍ಗಳಲ್ಲಿ ಮತ ಎಣಿಕೆ ನಡೆಯಲಿದೆ. 330 ಮತಗಟ್ಟೆಗಳ ರಿಸಲ್ಟ್ ಹೊರಬೀಳಲಿದೆ. ಕೋವಿಡ್ ಹಿನ್ನಲೆಯಲ್ಲಿ ಭಾರೀ ಮುಂಜಾಗೃತೆ ವಹಿಸಿದ್ದು ಸಾಮಾಜಿಕ ಅಂತರ, ಸ್ಯಾನಿಟೈಸಿಂಗ್, ಥರ್ಮಲ್ ಸ್ಕಾನಿಂಗ್ ನಡೆಯಲಿದೆ.

    ಚುನಾವಣಾ ಮತ ಎಣಿಕೆಗೆ ಹಿನ್ನೆಲೆ ಬೆಳಗ್ಗೆ 6 ಗಂಟೆಯಿಂದ ನಾಳೆ ಬೆಳಗ್ಗೆ 6ರವರೆಗೂ ಮತ ಎಣಿಕಾ ಕೇಂದ್ರದ ಸುತ್ತ 5 ಕಿ.ಮೀ ವ್ಯಾಪ್ತಿ ಹಾಗೂ ಶಿರಾ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇನ್ನು ಕ್ಷೇತ್ರದಲ್ಲಿ ಮತ ಎಣಿಕೆ ಕೇಂದ್ರದ ಸುತ್ತ 3 ಸುತ್ತಿನ ಭದ್ರತೆ. ಮತ ಎಣಿಕೆ ಕೇಂದ್ರದ ಸುತ್ತ ಸೆಂಟ್ರಲ್ ಆರ್ಮಡ್ ಫೋರ್ಸ್ ಕಾರ್ಯನಿರ್ವಹಣೆ. 2 ಕೆಎಸ್‍ಆರ್‍ಪಿ, 3 ಡಿವೈಎಸ್ಪಿ, ಸಿಪಿಐ, ಪಿಎಸ್‍ಐ ಸೇರಿ 200ಕ್ಕೂ ಹೆಚ್ಚು ಸಿಬ್ಬಂದಿಯ ನಿಯೋಜನೆ ಮಾಡಲಾಗಿದೆ.

    ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಹಾಗೂ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಡುವೆ ತ್ರಿಕೋನ ಸ್ಪರ್ಧೆ ಇತ್ತು. ಈ ಹಿನ್ನಲೆಯಲ್ಲಿ ಒಂದೊಂದು ಸುತ್ತಿನಲ್ಲೂ ಒಬ್ಬೊಬ್ಬರು ಮುನ್ನಡೆ ಕಾಯ್ದುಕೊಂಡು ಫಲಿತಾಂಶದಲ್ಲಿ ಕುತೂಹಲ ಹುಟ್ಟುವ ಸಾಧ್ಯತೆ ಇದೆ. 6 ಜಿ.ಪಂ ಕ್ಷೇತ್ರ ಹಾಗೂ ನಗರ ಪ್ರದೇಶ ಸೇರಿ 7 ಕಡೆಗಳಲ್ಲಿ ಯಾರಿಗೆ ಎಷ್ಟು ಮತ ಬೀಳಲಿದೆ ಎಂಬುದು ಕುತೂಹಲ ಕೆರಳಿಸಿದೆ.

    ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಗೆಲುವು ನಮ್ಮದೇ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ಧೈರ್ಯವಾಗಿ ಮತ ಎಣಿಕೆಯಲ್ಲಿ ಪಾಲ್ಗೊಳ್ಳಲು ಜಯಚಂದ್ರ ಕರೆ

    ಧೈರ್ಯವಾಗಿ ಮತ ಎಣಿಕೆಯಲ್ಲಿ ಪಾಲ್ಗೊಳ್ಳಲು ಜಯಚಂದ್ರ ಕರೆ

    ಬೆಂಗಳೂರು: ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಶಿರಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ತಮ್ಮ ಕಾರ್ಯಕರ್ತರಿಗೆ ವೀಡಿಯೋ ಸಂದೇಶ ರವಾನಿಸಿದ್ದಾರೆ. ನಾಳೆ ನಡೆಯುವ ಮತ ಎಣಿಕೆ ಕಾರ್ಯದಲ್ಲಿ ಎಲ್ಲರೂ ಧೈರ್ಯವಾಗಿ ಭಾಗಿಯಾಗಿ ಎಂದು ಹೇಳಿದ್ದಾರೆ.

    ಇಂದು ಅನಿರೀಕ್ಷಿತ ಘಟನೆ ನಡೆದಿದ್ದು, ಪತ್ನಿ ನಿರ್ಮಲಾರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಹಾಗಾಗಿ ನಾನು ಸಹ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಬಂದು ಪರೀಕ್ಷೆಗೆ ಒಳಗಾದಾಗ ನನ್ನ ಕೊರೊನಾ ವರದಿ ಸಹ ಪಾಸಿಟಿವ್ ಬಂದಿದೆ. ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಮತ ಎಣಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ. ನಿಮ್ಮೆಲ್ಲರ ಪರಿಶ್ರಮದಿಂದಾಗಿ ಚುನಾವಣೆ ನಡೆದಿದೆ. ಮತ ಎಣಿಕೆ ವೇಳೆ ನಾನು ಗೈರಾಗುತ್ತಿದ್ದೇನೆ. ದಯಮಾಡಿ ಎಲ್ಲರೂ ಎದೆಗುಂದದೆ ಧೈರ್ಯದಿಂದ ಮತ ಎಣಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ ಎಂದು ಟಿ.ಬಿ.ಜಯಚಂದ್ರ ಕೇಳಿ ಕೊಂಡಿದ್ದಾರೆ.

    ನಮ್ಮ ಕಾರ್ಯಕರ್ತರು ಮತ್ತು ಪಕ್ಷದ ಮುಖಂಡರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತೆ ಎಂಬ ವಿಶ್ವಾಸವಿದೆ. ಕಾರ್ಯಕರ್ತರು ಯಾವುದಕ್ಕೂ ಯೋಚನೆ ಮಾಡಬೇಡಿ. ಆದಷ್ಟು ಬೇಗ ಗುಣಮುಖನಾಗಿ ಆಸ್ಪತ್ರೆಯಿಂದ ಬರುತ್ತೇನೆ. ಬಂದ ವೇಳೆ ನಿಮ್ಮೆಲ್ಲರನ್ನ ಭೇಟಿಯಾಗಿ ಕೃತಜ್ಞತೆಯನ್ನು ಹೇಳುತ್ತೇನೆ. ನಾಳೆಯ ನನ್ನ ಗೈರು ಹಾಜರಿಗೆ ಯಾರು ಬೇಸರ ತಿಳಿದುಕೊಳ್ಳ ಬೇಡಿ. ಎಲ್ಲರೂ ಅತ್ಯಂತ ಸಂತೋಷದಿಂದ ಚುನಾವಣೆ ಮತ ಎಣಿಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ. ಕಾರಣ ಜಯ ನಮ್ಮದು, ಜಯ ನಮಗೆ ಕಟ್ಟಿಟ್ಟ ಬುತ್ತಿ ಎಂದು ಜಯಚಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಶಿರಾ ಉಪಚುನಾವಣೆಯ ಜಿದ್ದಾಜಿದ್ದಿನ ಅಖಾಡದ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇತ್ತ ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ. ಮೂರೂ ಪಕ್ಷಗಳ ಅಭ್ಯರ್ಥಿಗಳ ನಡುವೆ ತ್ರಿಕೋನ ಸ್ಪರ್ಧೆ ಇರೋಂದರಿಂದ ನಾಳೆಯ ಮತ ಎಣಿಕೆ ಇನ್ನಷ್ಟು ಮತ್ತಷ್ಟು ಕುತೂಹಲ ಕೆರಳಿಸಿದೆ.

    ತುಮಕೂರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಾಳೆ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಒಟ್ಟು 24 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಪ್ರತಿ ಸುತ್ತಿನಲ್ಲಿ ತೀವ್ರ ಹಣಾಹಣಿಯಿಂದಾಗಿ ರೋಚಕತೆಯ ಘಟ್ಟ ತಲುಪುವ ಸಾಧ್ಯತೆ. ಈ ಬಾರಿ ಅಂಚೆ 4821 ಅಂಚೆ ಮತ ಸೇರಿ ಒಟ್ಟು ಶೇ.84 ರಷ್ಟು ಮತದಾನವಾಗಿದ್ದು. ಇವಿಎಂ ಮತಯಂತ್ರದಲ್ಲಿ 1 ಲಕ್ಷ 77 ಸಾವಿರದ 645 ಮತದಾರರು ಮತಚಲಾಯಿಸಿದ್ದಾರೆ.

     

    ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮುಂಜಾನೆ 7 ಗಂಟೆಗೆ ಸ್ರ್ಟಾಂಗ್ ರೂಂ ತೆರಯಲಿದ್ದು, 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಮತ ಎಣಿಕಾ ಕೇಂದ್ರದ ಸುತ್ತ ಮೂರು ಸುತ್ತಿನ ಭದ್ರತೆ ನಿಯೋಜಿಸಿದ್ದು, ಸೆಂಟ್ರಲ್ ಆರ್ಮಡ್ ಫೊರ್ಸ್ ಕಾರ್ಯನಿರ್ವಹಿಲಿದೆ. 2 ಕೆ.ಎಸ್.ಆರ್.ಪಿ, ಮೂರು ಡಿವೈಎಸ್ಪಿ, ಸಿಪಿಐ, ಪಿಎಸ್‍ಐ ಗಳು ಸೇರಿದಂತೆ ಒಟ್ಟು 200ಕ್ಕೂ ಹೆಚ್ಚು ಪೊಲೀಸರನ್ನ ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.

    ಒಟ್ಟು 14 ಟೇಬಲ್ ಗಳಲ್ಲಿ 24 ಸುತ್ತು ಮತ ಎಣಿಕೆ ನಡೆಯಲಿದ್ದು, 330 ಮತಗಟ್ಟೆಗಳ ರಿಸಲ್ಟ್ ಹೊರಬೀಳಲಿದೆ. ಕೋವಿಡ್ ಹಿನ್ನಲೆಯಲ್ಲಿ ಭಾರೀ ಮುಂಜಾಗ್ರತೆವಹಿಸಿದ್ದು ಸಾಮಾಜಿಕ ಅಂತರ, ಸ್ಯಾನಿಟೈಸಿಂಗ್, ಥರ್ಮಲ್ ಸ್ಕಾನಿಂಗ್ ನಡೆಯಲಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ನಾಡಿದ್ದು ಬೆಳಗ್ಗೆ 6 ವರೆಗೂ ಮತ ಎಣಿಕಾ ಕೇಂದ್ರದ ಸುತ್ತಾ 5 ಕಿ.ಮೀ ವ್ಯಾಪ್ತಿ ಹಾಗೂ ಶಿರಾ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.