Tag: teacher

  • ಚಿತ್ರದುರ್ಗ| ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಶಿಕ್ಷಕ ಜೈಲುಪಾಲು

    ಚಿತ್ರದುರ್ಗ| ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಶಿಕ್ಷಕ ಜೈಲುಪಾಲು

    ಚಿತ್ರದುರ್ಗ: ಮನೆಗೆ ಫೋನ್ ಕರೆ ಮಾಡಿದ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ವಸತಿ ಶಾಲೆಯ ಶಿಕ್ಷಕ ವೀರೇಶ್ ಹಿರೇಮಠನನ್ನು ಬಂಧಿಸಿದ ಪೊಲೀಸರು ಜೈಲಿಗೆ ಅಟ್ಟಿದ್ದಾರೆ.

    ವಿಡಿಯೋ ವೈರಲ್‌ ಆದ ಬಳಿಕ ನಾಪತ್ತೆಯಾಗಿದ್ದ ವೀರೇಶ್‌ನನ್ನು ಪೊಲೀಸರು ಕಲಬುರಗಿಯಲ್ಲಿ ಬಂಧಿಸಿದ್ದರು.

    ತಡರಾತ್ರಿ ಆರೋಪಿಯನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ನ್ಯಾಯಾಧೀಶರು 2 ದಿನ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ ವೀರೇಶ್‌ನನ್ನು ಚಿತ್ರದುರ್ಗ ಜೈಲಿಗೆ ಕಳುಹಿಸಿದ್ದಾರೆ.

    ಶಿಕ್ಷಕ ವೀರೇಶ್ ಹಿರೇಮಠ್‌ನನ್ನು ಅಮಾನತುಗೊಳಿಸಿ ಚಿತ್ರದುರ್ಗ ಡಿಸಿ ವೆಂಕಟೇಶ್ ಆದೇಶ ಪ್ರಕಟಿಸಿದ್ದಾರೆ.  ಇದನ್ನೂ ಓದಿ:  Chitradurga | ಪೋಷಕರಿಗೆ ಕರೆ ಮಾಡಿ ಮಾತನಾಡಿದ ವಿದ್ಯಾರ್ಥಿಗೆ ಮುಖ್ಯ ಶಿಕ್ಷಕನಿಂದ ಹಲ್ಲೆ – ವೀಡಿಯೋ ವೈರಲ್

    ಏನಿದು ಪ್ರಕರಣ?
    ಗುರು ತಿಪ್ಪೇಸ್ವಾಮಿ ದೇವಸ್ಥಾನದ ಅಧೀನದ ವೇದ ಅಧ್ಯಯನ ಶಾಲೆಯ ಶಿಕ್ಷಕ ವೀರೇಶ್ ಹಿರೇಮಠ್ ವಿದ್ಯಾರ್ಥಿಯನ್ನು ನೆಲಕ್ಕೆ ತಳ್ಳಿ ಎಲ್ಲೆಂದರಲ್ಲಿ ಮನಬಂದಂತೆ ಒದ್ದಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

  • ಜಾತಿಗಣತಿಗೆ ನಡೆಸದ ಶಿಕ್ಷಕರ ವೇತನಕ್ಕೆ ಕತ್ತರಿ – ಬಗ್ಗದೇ ಇದ್ರೆ ಅಮಾನತು ಶಿಕ್ಷೆ

    ಜಾತಿಗಣತಿಗೆ ನಡೆಸದ ಶಿಕ್ಷಕರ ವೇತನಕ್ಕೆ ಕತ್ತರಿ – ಬಗ್ಗದೇ ಇದ್ರೆ ಅಮಾನತು ಶಿಕ್ಷೆ

    – ಬೆಂಗಳೂರಿನಲ್ಲಿ ಗಣತಿಗೆ ಜನತೆ ನಿರಾಸಕ್ತಿ

    ಬೆಂಗಳೂರು: ಶಿಕ್ಷಕರ ಅಸಹಕಾರದಿಂದಾಗಿ ಸರ್ಕಾರದ ಮಹತ್ವಾಕಾಂಕ್ಷಿಯ ಜಾತಿ ಸಮೀಕ್ಷೆಗೆ (Caste Survey) ಭಾರೀ ಹಿನ್ನಡೆ ಆಗುತ್ತಿದೆ. ಸಮೀಕ್ಷೆಗೆ ಗೈರಾದ ಶಿಕ್ಷಕರ (Teacher) ವೇತನ ಕಡಿತಕ್ಕೆ ಸರ್ಕಾರ ಮುಂದಾಗಿದೆ.

    2,300 ಶಿಕ್ಷಕರು ಗಣತಿಗೆ ಗೈರಾಗಿದ್ದು, ಅವರ ವಿರುದ್ಧ ವೇತನ ಕಡಿತದ ಅಸ್ತ್ರ ಪ್ರಯೋಗ ಮಾಡಿದೆ. ಒಂದು ವೇಳೆ ಇದಕ್ಕೂ ಬಗ್ಗದಿದ್ದಲ್ಲಿ ಶಿಕ್ಷಕರನ್ನು ಅಮಾನತು ಮಾಡಲು  ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ. ಇದನ್ನೂ ಓದಿ:  ಫೋನ್‌ ಟ್ಯಾಪಿಂಗ್‌ ಕೇಸ್;‌ ಅಲೋಕ್‌ ಕುಮಾರ್‌ ವಿರುದ್ಧದ ತನಿಖಾ ಆದೇಶ ರದ್ದು – ಸರ್ಕಾರಕ್ಕೆ ಭಾರೀ ಹಿನ್ನಡೆ

     

    ಗಣತಿಗೆ ಬೆಂಗಳೂರಿನಲ್ಲಿ (Bengaluru) ಅಪಾರ್ಟ್‌ಮೆಂಟ್‌ ನಿವಾಸಿಗಳು ಇನ್ನೂ ಸ್ಪಂದಿಸಿಲ್ಲ. ಇದುವರೆಗೆ ಶೇ.29ರಷ್ಟು ಸರ್ವೆ ಆಗಿದ್ದು, ಇನ್ನೂ 39 ಲಕ್ಷ ಮನೆಗಳ ಸರ್ವೆ ಬಾಕಿ ಉಳಿದಿದೆ. ಹೀಗಾಗಿ ಬೆಂಗಳೂರಿನ ಶಾಸಕರು ಮತ್ತು ಸಂಸದರ ಸಹಕಾರ ಕೊರಲು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ ರಾವ್ ನಿರ್ಧರಿಸಿದ್ದಾರೆ.

    ಈ ನಡುವೆ ಸಮೀಕ್ಷೆಗೆ ಹೋದವರಿಗೆ ನಾಯಿ ಕಾಟ ಜಾಸ್ತಿಯಾಗಿದೆ. ಬೆಂಗಳೂರಿನ ಪದ್ಮನಾಭನಗರದಲ್ಲಿ ಇಬ್ಬರು ಗಣತಿದಾರರಿಗೆ ನಾಯಿ ಕಚ್ಚಿದ್ದು ಚಿಕಿತ್ಸೆ ಪಡೆದುಕೊಂಡಿದ್ದಾರೆ.

    ಕೋಲಾರದಲ್ಲಿ ಸಮೀಕ್ಷೆಗೆ ತೆರಳಿದ್ದ ಬಿ.ಹೊಸಹಳ್ಳಿ ಶಾಲಾ ಶಿಕ್ಷಕಿ ಅಕ್ತರ್ ಬೇಗಂ ನಾಪತ್ತೆಯಾಗಿದ್ದಾರೆ. ಶಿಕ್ಷಕಿಗಾಗಿ ಕುಟುಂಬಸ್ಥರು ಹುಡುಕಾಡುತ್ತಿದ್ದಾರೆ.

  • ಜಾತಿಗಣತಿಗೆ ಹೋದ ಶಿಕ್ಷಕಿಯನ್ನೇ ಕೂಡಿ ಹಾಕಿದ ವ್ಯಕ್ತಿ!

    ಜಾತಿಗಣತಿಗೆ ಹೋದ ಶಿಕ್ಷಕಿಯನ್ನೇ ಕೂಡಿ ಹಾಕಿದ ವ್ಯಕ್ತಿ!

    ಬೆಂಗಳೂರು: ಜಾತಿಗಣತಿಗೆ (Caste Census) ಹೋದ ಶಿಕ್ಷಕಿಯನ್ನೇ (Teacher) ವ್ಯಕ್ತಿಯೊಬ್ಬ ಕೂಡಿ ಹಾಕಿದ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕೋತಿ ಹೊಸಹಳ್ಳಿಯಲ್ಲಿ ನಡೆದಿದೆ.

    ಬುಧವಾರ ಸಂಜೆ ಶಿಕ್ಷಕಿ ಸುಶೀಲಮ್ಮ ಅವರು ಸಂದೀಪ್‌ ಅವರ ಮನೆಗೆ ಆಗಮಿಸಿ, ನಾವು ಗಣತಿಗೆ ಬಂದಿದ್ದೇವೆ. ಆಧಾರ್‌ ಕಾರ್ಡ್ ಕೊಡಿ ಎಂದು ಕೇಳಿದ್ದರು. ಇದಕ್ಕೆ ಮನೆಯಲ್ಲಿದ್ದವರು, ನೀವು ಯಾವ ಕಂಪನಿಯವರು ಇಲ್ಲಿಗೆ ಏಕೆ ಬಂದಿದ್ದೀರಾ? ನೀವು ನಿಜವಾಗಿಯೂ ಟೀಚರ್ ಅಲ್ಲ ಎಂದು ಗಲಾಟೆ ಮಾಡಿದ್ದಾರೆ. ಇದನ್ನೂ ಓದಿ:  ದೈವಸ್ಥಾನದ ಮೆಟ್ಟಿಲೇರಿದ ಕಾಂತಾರ ಚಿತ್ರ – ದೈವಾರಾಧನೆ ಬಳಕೆ ವಿರುದ್ಧ ಸಿಡಿದೆದ್ದ ದೈವಾರಾಧಕರು

     

    ಕೊನೆಗೆ ಶಿಕ್ಷಕಿ ತಾಯಿಯ ಬಳಿಕ ಆಧಾರ್‌ಕಾರ್ಡ್, ವೋಟರ್ ಕಾರ್ಡ್ ನಂಬರ್ ಪಡೆದಿದ್ದರು. ಈ ಹೊತ್ತಿಗೆ ಟೀ ಶಾಪ್ ನಡೆಸುವ ಸಂದೀಪ್ ಮನೆಗೆ ಬಂದಿದ್ದಾನೆ. ಬಂದವನೇ ಜಗಳ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾನೆ.  ಇದನ್ನೂ ಓದಿ:  ಕತಾರ್‌ ಏರ್‌ವೇಸ್‌ ವಿಮಾನದಲ್ಲಿ ಸಸ್ಯಾಹಾರಿಗೆ ಮಾಂಸಾಹಾರ ನೀಡಿ ಯಡವಟ್ಟು – ಉಸಿರುಗಟ್ಟಿ ಪ್ರಯಾಣಿಕ ಸಾವು

    ಸುಶೀಲಮ್ಮ ನಾನು ಶಿಕ್ಷಕಿ ಎಂದು ಹೇಳಿದರೂ ಕೇಳದೇ ಸಂದೀಪ್‌ ಮನೆಯ ಕಾಪೌಂಡ್‌ನಲ್ಲಿ ಕೂಡಿಹಾಕಿದ್ದ. ಕೊನೆಗೆ ಭಯಗೊಂಡ ಸುಶೀಲಮ್ಮ ಪೊಲೀಸ್ ಕಂಟ್ರೋಲ್ ರೂಮ್ 112ಗೆ ಕರೆ ಮಾಡಿ ದೂರು ನೀಡಿದ್ದಾರೆ.

    ಕರೆಯ ಬೆನ್ನಲ್ಲೇ ಸಂದೀಪ್‌ ಮನೆಗೆ ತೆರಳಿ ಸುಶೀಲಮ್ಮ ಅವರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಕ್ಕೆ ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಸಂದೀಪ್ ಬಂಧಿಸಿ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

  • ದಾವಣಗೆರೆ | ಜಾತಿಗಣತಿ ಸಮೀಕ್ಷೆಗೆ ತೆರಳಿದ್ದ ಶಿಕ್ಷಕನಿಗೆ ಹೃದಯಾಘಾತ

    ದಾವಣಗೆರೆ | ಜಾತಿಗಣತಿ ಸಮೀಕ್ಷೆಗೆ ತೆರಳಿದ್ದ ಶಿಕ್ಷಕನಿಗೆ ಹೃದಯಾಘಾತ

    ದಾವಣಗೆರೆ: ಜಾತಿ ಸಮೀಕ್ಷೆಗೆ ತೆರಳಿದ್ದ ವೇಳೆ ಶಿಕ್ಷಕನಿಗೆ ಹೃದಯಾಘಾತ ಆಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

    ದಾವಣಗೆರೆ ತಾಲ್ಲೂಕಿನ ಹಳೆಕಡ್ಲೆಬಾಳು ಶಾಲೆಯ ಶಿಕ್ಷಕ ಪ್ರಕಾಶ್ ನಾಯಕ್ (44) ಅವರು ಸಮೀಕ್ಷೆ ಮಾಡುತ್ತಿದ್ದಾಗಲೇ ಹೃದಯಾಘಾತ ಸಂಭವಿಸಿದೆ.

    ತಕ್ಷಣ ಸ್ಥಳೀಯರ ಸಹಾಯದಿಂದ ಅವರನ್ನ ನಗರದ ಹೈಟೆಕ್‌ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಬಳಿಕ ಸ್ಟೆಂಟ್ ಹಾಕಿ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

    ಸ್ಥಳೀಯರ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಶಿಕ್ಷಕ ಪ್ರಕಾಶ್ ನಾಯಕ್ ಪಾರಾಗಿದ್ದಾರೆ. ಘಟನೆ ತಿಳಿದ ದಾವಣಗೆರೆ ಡಿಸಿ ಗಂಗಾಧರ ಸ್ವಾಮಿ ದೂರವಾಣಿ ಕರೆ ಮಾಡಿ ಪ್ರಕಾಶ್ ನಾಯಕ್‌ಗೆ ಧೈರ್ಯ ತುಂಬಿದ್ದಾರೆ.

  • ಹದಗೆಟ್ಟ ರಸ್ತೆ| ಗಣತಿ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿ ಬೈಕಿನಿಂದ ಬಿದ್ದು ಸಾವು

    ಹದಗೆಟ್ಟ ರಸ್ತೆ| ಗಣತಿ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿ ಬೈಕಿನಿಂದ ಬಿದ್ದು ಸಾವು

    ಬಾಗಲಕೋಟೆ: ಗಣತಿ ಕಾರ್ಯಕ್ಕೆ ಹೋದ ಶಿಕ್ಷಕಿ (Teacher) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ (Bagalkote) ತಾಲೂಕಿನ ತಿಮ್ಮಾಪೂರ ಕ್ರಾಸ್ ಬಳಿ ನಡೆದಿದೆ.

    ದಾನಮ್ಮ ವಿಜಯಕುಮಾರ ನಂದರಗಿ (52) ಸಾವನ್ನಪ್ಪಿರುವ ಶಿಕ್ಷಕಿ. ಗಣತಿ ಕಾರ್ಯ (Caste Census) ಮುಗಿಸಿಕೊಂಡು ಪುತ್ರನ ಜೊತೆ ಮನೆ ಕಡೆಗೆ ಬೈಕಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ.

    ಮೊದಲೇ ಗಣತಿ ಕಾರ್ಯದ ತಾಂತ್ರಿಕ ಸಮಸ್ಯೆಯಿಂದಾಗಿ ಎರಡ್ಮೂರು ದಿನಗಳಿಂದ ಶಿಕ್ಷಕಿ ದಾನಮ್ಮ ಟೆನ್ಶನ್‌ನಲ್ಲಿದ್ದರು. ಹೀಗಾಗಿ ಅವರನ್ನು ಕರೆದುಕೊಂಡು ಹೋಗಲು ಮಗ ವಿಕಾಸ್ ಬೈಕ್ ತೆಗೆದುಕೊಂಡು ಬಂದಿದ್ದ. ಮಗನ ಜೊತೆ ಬರುವಾಗ ಹದಗೆಟ್ಟ ರಸ್ತೆಯಿಂದ ಬ್ಯಾಲೆನ್ಸ್‌ ತಪ್ಪಿ ಜಾರಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.

    ಮೃತ ಶಿಕ್ಷಕಿ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ವಂದಾಲ ಗ್ರಾಮದವರು. ಬಾಗಲಕೋಟೆ ತಾಲೂಕಿನ ರಾಂಪೂರ ಸರ್ಕಾರಿ ಆಶ್ರಯ ಕಾಲೋನಿ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಕರ್ನಾಟಕದಲ್ಲಿ ಕೇಂದ್ರಕ್ಕೂ ಮೊದಲೇ ರಾಜ್ಯ ಚುನಾವಣಾ ಆಯೋಗದಿಂದ SIR

    ಬಾಗಲಕೋಟೆಯಲ್ಲಿ ವಾಸವಿದ್ದ ಕಾರಣ ಗಣತಿ ಕಾರ್ಯ ಮುಗಿಸಿ ಮನೆಗೆ ಹಿಂತಿರುಗುವಾಗ ಈ ಘಟನೆ ನಡೆದಿದೆ. ಈ ಕುರಿತು ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Chitradurga | ಸಮೀಕ್ಷೆ ಕಾರ್ಯಕ್ಕೆ ಗೈರು – 68 ಸಿಬ್ಬಂದಿಗೆ ನೋಟಿಸ್

    Chitradurga | ಸಮೀಕ್ಷೆ ಕಾರ್ಯಕ್ಕೆ ಗೈರು – 68 ಸಿಬ್ಬಂದಿಗೆ ನೋಟಿಸ್

    – 5 ದಿನದಲ್ಲೇ ಸಮೀಕ್ಷೆ ಪೂರ್ಣಗೊಳಿಸಿದ ಶಿಕ್ಷಕಿ

    ಚಿತ್ರದುರ್ಗ: ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ (Caste Census) ಗೈರಾದ ಹಿನ್ನೆಲೆ ಚಿತ್ರದುರ್ಗದಲ್ಲಿ (Chitradurga) 68 ಸಿಬ್ಬಂದಿಗೆ ನೋಟಿಸ್ ನೀಡಿದ್ದು, ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

    68 ಗಣತಿದಾರರು ಈವರೆಗೆ ಸಮೀಕ್ಷೆಗೆ ವರದಿ ಮಾಡಿಕೊಂಡಿಲ್ಲ. ಈ ಹಿನ್ನೆಲೆ ಗೈರಾಗಿ ನಿರ್ಲಕ್ಷ್ಯ ವಹಿಸಿದ 68 ಮಂದಿ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮುಡಾ ಕೇಸಲ್ಲಿ ಬಿ-ರಿಪೋರ್ಟ್‌ಗೆ ಸ್ನೇಹಮಯಿ ಆಕ್ಷೇಪ – ಅ.8ಕ್ಕೆ ಆದೇಶ ಕಾಯ್ದಿರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ

    ಇನ್ನು ಗೈರಾದವರಿಗೆ ನೋಟಿಸ್ ಒಂದೆಡೆಯಾದರೆ ಇನ್ನೊಂದೆಡೆ ಶಿಕ್ಷಕಿಯೊಬ್ಬರು (Teacher) ಕೇವಲ 5 ದಿನದಲ್ಲೇ ಸಮೀಕ್ಷೆ ಕಾರ್ಯ ಮುಗಿಸಿ ಮೆಚ್ಚುಗೆ ಗಳಿಸಿಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದಾಸರ್ಲಹಳ್ಳಿ ಗ್ರಾಮದಲ್ಲಿ ಶಿಕ್ಷಕಿ ಎಂ.ರಾಧಾ ತ್ವರಿತಗತಿಯಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿದ್ದಾರೆ. ಗ್ರಾಮದ ಜನರು ಕೆಲಸಕ್ಕೆ ಹೋಗುವ ಮುನ್ನ ಶಿಕ್ಷಕಿ ಹಾಜರಾಗುತ್ತಿದ್ದು, ಗ್ರಾಮದಲ್ಲೇ ಉಳಿದುಕೊಂಡು ಸಮೀಕ್ಷೆ ಕಾರ್ಯ ಕೈಗೊಂಡಿದ್ದಾರೆ. ಶಿಕ್ಷಕಿ ಎಂ.ರಾಧಾ ಕಾರ್ಯಕ್ಕೆ ದಾಸರ್ಲಹಳ್ಳಿ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಸರ್ಕಾರದ ವಿರುದ್ಧ ಪಿಓಕೆಯಲ್ಲಿ ಭಾರೀ ಪ್ರತಿಭಟನೆ – ಷರೀಫ್‌, ಅಸಿಮ್ ಮುನೀರ್‌ಗೆ ಪುಕ ಪುಕ

  • 7 ವರ್ಷದ ಬಾಲಕನ ಮೇಲೆ ಶಿಕ್ಷಕಿಯಿಂದ ಇದೆಂಥಾ ಕ್ರೌರ್ಯ – ಹೋಂ ವರ್ಕ್‌ ಮಾಡದಿದ್ದಕ್ಕೆ ತಲೆ ಕೆಳಗಾಗಿ ನೇತುಹಾಕಿ ಹಿಂಸೆ

    7 ವರ್ಷದ ಬಾಲಕನ ಮೇಲೆ ಶಿಕ್ಷಕಿಯಿಂದ ಇದೆಂಥಾ ಕ್ರೌರ್ಯ – ಹೋಂ ವರ್ಕ್‌ ಮಾಡದಿದ್ದಕ್ಕೆ ತಲೆ ಕೆಳಗಾಗಿ ನೇತುಹಾಕಿ ಹಿಂಸೆ

    ಚಂಡೀಗಢ: ಯಾವುದೇ ಒಬ್ಬ ವಿದ್ಯಾರ್ಥಿ ತನ್ನ ಗುರಿ ತಲುಪಬೇಕಾದ್ರೆ ಹಿಂದೆ ಶಿಕ್ಷಕರೊಬ್ಬರು ಇರಲೇಬೇಕು. ವಿದ್ಯಾರ್ಥಿಗಳ ತಪ್ಪುಗಳನ್ನು ತಿದ್ದುತ್ತಾ, ಜೀವನಕ್ಕೆ ದಾರಿ ದೀಪವಾಗಬೇಕಿರುವುದು ಶಿಕ್ಷಕರು (Teachers). ಆದ್ರೆ ಇಲ್ಲೊಬ್ಬಳು ಶಿಕ್ಷಕಿ ಅದಕ್ಕೆ ವ್ಯತಿರಿಕ್ತವಾಗಿದ್ದಾಳೆ. ವಿದ್ಯಾರ್ಥಿ ಹೋಂ ವರ್ಕ್‌ ಮಾಡಿಲ್ಲ ಅನ್ನೋ ಕಾರಣಕ್ಕೆ ಆತನ ಕೈಕಾಲು ಕಟ್ಟಿ, ತಲೆಕೆಳಗಾಗಿ ನೇತು ಹಾಕಿ ಹಿಂಸೆ ನೀಡಿ ಕ್ರೌರ್ಯ ಮೆರೆದಿದ್ದಾಳೆ.

    ಹೌದು. ಹರಿಯಾಣದ (Haryana) ಪಾಣಿಪತ್‌ನ ಶ್ರೀಜನ್ ಪಬ್ಲಿಕ್ ಶಾಲೆಯಲ್ಲಿ (Srijan Public School) ಈ ಘಟನೆ ನಡೆದಿದೆ. ವಿದ್ಯಾರ್ಥಿ ಹೋಂ ವರ್ಕ್‌ ಮಾಡಿಲ್ಲ ಅಂತ ಶಿಕ್ಷಕಿಯೊಬ್ಬಳು ಆತನ ಕೈಕಾಲು ಕಟ್ಟಿ, ತಲೆಕೆಳಗಾಗಿಸಿ ನೇತುಹಾಕಿದ್ದಾಳೆ, ವಿದ್ಯಾರ್ಥಿಯನ್ನ ಚೆನ್ನಾಗಿ ಥಳಿಸಿದ್ದಾಳೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಹಿಟ್ ಅಂಡ್‌ ರನ್‌ಗೆ ಬಿ.ಕಾಂ ಪದವೀಧರೆ ಬಲಿ

    ಆಗಸ್ಟ್‌ 13ರಂದು ನಡೆದಿದ್ದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಾಲಾ ಆಡಳಿಯ ಮಂಡಳಿಗೆ ಈ ವಿಷಯ ತಿಳಿದಿದ್ದೂ ಮುಚ್ಚಿಟ್ಟಿದ್ದರು. ಆದ್ರೆ ಹಲ್ಲೆ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದಮೇಲೆ ವಿಷಯ ಗೊತ್ತಾಗಿದೆ.

    ವಿಡಿಯೋ ಆಧರಿಸಿ ಮಾಡೆಲ್‌ ಪೊಲೀಸ್‌ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ದೂರು ನೀಡುತ್ತಿದ್ದಂತೆ ಶಿಕ್ಷಕಿ ಕಡೆಯವರು ಎನ್ನಲಾದ ಕೆಲವರು ಪೋಷಕರಿಗೆ ದೂರು ಹಿಂಪಡೆಯುವಂತೆ ಬೆದರಿಕೆ ಹಾಕಿದ್ದಾರೆಂದು ತಿಳಿದುಬಂದಿದೆ. ಇದನ್ನೂ ಓದಿ: TVK Vijay Rally Stampede | ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ

    ಮತ್ತೊಂದು ವಿಡಿಯೋ ವೈರಲ್‌
    ಇನ್ನೂ ಅದೇ ಶಾಲೆಯಲ್ಲಿ ಇತರ ಮಕ್ಕಳನ್ನು ಥಳಿಸುತ್ತಿರುವ ಇನ್ನೊಂದು ವಿಡಿಯೋ ಸಹ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಒಬ್ಬ ಶಿಕ್ಷಕಿ ಮಗುವನ್ನ ಹೊಡೆಯುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಸತತ ಒಂಬತ್ತು ಬಾರಿ ಮಗುವಿಗೆ ಕಪಾಳಮೋಕ್ಷ ಮಾಡುತ್ತಿದ್ದಾಳೆ. ವಿಡಿಯೋಗಳನ್ನ ವಶಕ್ಕೆ ಪಡೆದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಲ್ಲದೇ ಚಾಲಕನ ಕೈಯಿಂದಲೂ ಥಳಿಸಿದ್ದಳು ಎನ್ನಲಾಗಿ ಕಾಲೇಜು ಪ್ರಾಂಶುಪಾಲರು ಹಾಗೂ ಬಸ್‌ ಚಾಲಕನನ್ನ ಬಂಧಿಸಲಾಗಿದೆ.

  • ಕೆಮ್ಮಣ್ಣುಗುಂಡಿ | ಪತ್ನಿ ಜೊತೆ ಸೆಲ್ಫಿ ತೆಗೆಯಲು ಹೋಗಿ 60 ಅಡಿ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವು

    ಕೆಮ್ಮಣ್ಣುಗುಂಡಿ | ಪತ್ನಿ ಜೊತೆ ಸೆಲ್ಫಿ ತೆಗೆಯಲು ಹೋಗಿ 60 ಅಡಿ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವು

    ಚಿಕ್ಕಮಗಳೂರು: ಪತ್ನಿ ಜೊತೆ ಅಪಾಯಕಾರಿ ಸ್ಥಳದಲ್ಲಿ ಸೆಲ್ಫಿ (Selfie) ತೆಗೆದುಕೊಳ್ಳಲು ಹೋಗಿ 60 ಅಡಿ ಆಳದ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವನ್ನಪ್ಪಿದ ದುರ್ಘಟನೆ ಕೆಮ್ಮಣ್ಣುಗುಂಡಿಯ (Kemmanugundi) ಬಳಿ ನಡೆದಿದೆ.

    ಮೃತ ಶಿಕ್ಷಕನನ್ನು (Teacher) ಸಂತೋಷ್ (40) ಎಂದು ಗುರುತಿಸಲಾಗಿದೆ. ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿಗೆ ಪತ್ನಿ ಜೊತೆ ಸಂತೋಷ್ ಬಂದಿದ್ದರು. ಈ ವೇಳೆ ರಸ್ತೆ ಬದಿ ಪತ್ನಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಅವರ ತಲೆಗೆ ಬಲವಾದ ಗಾಯವಾಗಿ, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಸೆಲ್ಫಿ ತೆಗೆಯಲು ಹೋಗಿ ಕಾಡಾನೆ ದಾಳಿಯಿಂದ ಜಸ್ಟ್ ಮಿಸ್ ಆಗಿದ್ದ ವ್ಯಕ್ತಿಗೆ 25 ಸಾವಿರ ದಂಡ!

    ಸಂತೋಷ್ ಅವರು ತರೀಕೆರೆ ತಾಲೂಕಿನ ಲಕ್ಷ್ಮೀಸಾಗರ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.

    ಅಗ್ನಿಶಾಮಕದಳದ ಸಿಬ್ಬಂದಿ ಪ್ರಪಾತದಿಂದ ಮೃತದೇಹವನ್ನು ತೆಗೆದಿದ್ದಾರೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಭದ್ರತಾ ವೈಫಲ್ಯ?- ಡ್ಯಾಂನ ಕ್ರಸ್ಟ್ ಗೇಟ್ ಬಳಿ ಓಡಾಡುತ್ತ ಸೆಲ್ಫಿ ವೀಡಿಯೋ

     

  • ಹುಬ್ಬಳ್ಳಿ | ಸಿಲಿಂಡರ್ ದುರಂತ – ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿ ಸಾವು

    ಹುಬ್ಬಳ್ಳಿ | ಸಿಲಿಂಡರ್ ದುರಂತ – ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿ ಸಾವು

    ಹುಬ್ಬಳ್ಳಿ: ಸಿಲಿಂಡರ್ ದುರಂತ ಪ್ರಕರಣ ಗಂಭೀರವಾಗಿ ಗಾಯಗೊಂಡಿದ್ದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೆ, ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

    ಗಂಗಮ್ಮ ಮೃತ ದುರ್ದೈವಿ. ಜು.24 ರಂದು ಹುಬ್ಬಳ್ಳಿಯ ಶಕ್ತಿನಗರದಲ್ಲಿ ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿಕೊಂಡ ಪರಿಣಾಮ, ಗಂಗಮ್ಮ, ಅವರ ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದರು. ಶಿಕ್ಷಕಿಗೆ 65% ಸುಟ್ಟ ಗಾಯಗಳಾಗಿದ್ದವು. ಅವರನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: 162 ಬಾರಿ ಫಾರಿನ್‌ ಟ್ರಿಪ್‌, 300 ಕೋಟಿ ಹಗರಣ – ನಕಲಿ ರಾಯಭಾರ ಕಚೇರಿ ರಹಸ್ಯ ಕಂಡು ಬೆಚ್ಚಿಬಿದ್ದ ಅಧಿಕಾರಿಗಳು

    ಉಳಿದ ಮೂವರಿಗೆ ಚಿಕಿತ್ಸೆ ಮುಂದುವರಿದಿದೆ. ಹುಬ್ಬಳ್ಳಿ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭೀಮನ ಅಮಾವಾಸ್ಯೆಯಂದು ಗಂಡನ ಪೂಜೆ ಮಾಡಿ ಆತ್ಮಹತ್ಯೆ ಕೇಸ್ – ಪತಿಗೆ ಅನೈತಿಕ ಸಂಬಂಧದ ಶಂಕೆಯಿಂದ ಪತ್ನಿ ಸೂಸೈಡ್

  • Madikeri | ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಶವ ಪತ್ತೆ – ಕೊಲೆ ಶಂಕೆ, ಕುಟುಂಬಸ್ಥರಿಂದ ದೂರು

    Madikeri | ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಶವ ಪತ್ತೆ – ಕೊಲೆ ಶಂಕೆ, ಕುಟುಂಬಸ್ಥರಿಂದ ದೂರು

    ಮಡಿಕೇರಿ: ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಶಿಕ್ಷಕಿಯ ಕುಟುಂಬಸ್ಥರು ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ಆರೋಪ ಮಾಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

    ಮಡಿಕೇರಿ ತಾಲೂಕಿನ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ಶಿಕ್ಷಕಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಗ್ರಾಮದ ನಿವಾಸಿ ನಜೀರ್ ಎಂಬವರ ಪತ್ನಿ ಸಫ್ರೀನಾ ಶೇಕ್ (32) ಮೃತ ಶಿಕ್ಷಕಿ. ಮೃತ ಸಫ್ರೀನಾ ನಾಪೋಕ್ಲುವಿನ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಬುಧವಾರ ರಾತ್ರಿ ಎಮ್ಮೆಮಾಡುವಿನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನೇಣಿನ ಕುಣಿಕೆಯಿಂದ ಬಿಡಿಸಿ ಪತಿ ನಜೀರ್ ಸಫ್ರೀನಾಳನ್ನು ನಾಪೋಕ್ಲುವಿನ ಖಾಸಗಿ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ಪರೀಕ್ಷಿಸಿ ದೃಢಪಡಿಸಿದ್ದಾರೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನವಾದ 4 ದಿನದ ಬಳಿಕ ಸಿಕ್‌ ಲೀವ್‌ ಹಾಕಿದ್ರು 100ಕ್ಕೂ ಹೆಚ್ಚು ಪೈಲಟ್‌ಗಳು

    ಕಳೆದ ಎರಡು ದಿನಗಳಿಂದ ಪತಿ ನಜೀರ್ ಹಾಗೂ ಸಫ್ರೀನಾ ನಡುವೆ ಮನೆಯಲ್ಲಿ ಸಾಲದ ವಿಚಾರವಾಗಿ ಜಗಳ ನಡೆಯುತ್ತಿತ್ತು ಎನ್ನಲಾಗಿದ್ದು, ಮೃತ ಸಫ್ರೀನಾ ದೇಹದಲ್ಲಿ ಗಾಯಗಳ ಗುರುತು ಕಂಡು ಬಂದಿದೆ. ಹೀಗಾಗಿ ಪತಿ ನಜೀರ್ ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂದು ಸಫ್ರೀನಾ ಸಹೋದರ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ. ಸಫ್ರೀನಾ ಸಹೋದರ ರುವೈಸ್ ನಾಪೋಕ್ಲು ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ `ಮಾಸ್ಟರ್ ಪ್ಲ್ಯಾನ್’ – ಕಾಮಗಾರಿಗೆ ಸರ್ಕಾರದಿಂದ 215 ಕೋಟಿ ಅನುಮೋದನೆ