Tag: teacher

  • ಪಿಯುಸಿಯಲ್ಲಿ 99 ಅಂಕ ಪಡೆದ ವಿದ್ಯಾರ್ಥಿನಿಗೆ 0 ಅಂಕ ನೀಡಿದ್ದ ಶಿಕ್ಷಕಿ ಅಮಾನತು

    ಪಿಯುಸಿಯಲ್ಲಿ 99 ಅಂಕ ಪಡೆದ ವಿದ್ಯಾರ್ಥಿನಿಗೆ 0 ಅಂಕ ನೀಡಿದ್ದ ಶಿಕ್ಷಕಿ ಅಮಾನತು

    ಹೈದರಾಬಾದ್: ತೆಲಂಗಾಣದ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಕಾರಣ ಕಳೆದ 10 ದಿನಗಳಲ್ಲಿ 23 ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ, ಮೌಲ್ಯಮಾಪನದಲ್ಲಿ ಶಿಕ್ಷಕಿ ಮಾಡಿದ ಎಡವಟ್ಟೊಂದು ಬೆಳಕಿಗೆ ಬಂದಿದೆ.

    ತೆಲುಗು ಭಾಷೆ ಪರೀಕ್ಷೆಯಲ್ಲಿ 99 ಅಂಕ ಗಳಿಸಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಮೌಲ್ಯಮಾಪಕಿ ಶೂನ್ಯ ಅಂಕ ನೀಡಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಲೋಪದ ಬಗ್ಗೆ ಮತ್ತೊಬ್ಬ ಮೌಲ್ಯಮಾಪಕ ಪರಿಶೀಲನೆ ನಡೆಸಬೇಕಿತ್ತು. ಆದರೆ ಆತ ಕೂಡ ನಿರ್ಲಕ್ಷ್ಯ ತೋರಿದ್ದಾನೆ. ಈ ಹಿನ್ನೆಲೆಯಲ್ಲಿ ಇಬ್ಬರೂ ಮೌಲ್ಯಮಾಪಕರನ್ನು ಅಮಾನತುಗೊಳಿಸಲಾಗಿದೆ.

    12 ನೇ ತರಗತಿ ವಿದ್ಯಾರ್ಥಿಯ ತೆಲುಗು ಪತ್ರಿಕೆಯ ಮೌಲ್ಯಮಾಪನ ಮಾಡುವಾಗ 99 ಅಂಕದ ಬದಲಿಗೆ ಶೂನ್ಯ ಅಂಕಗಳನ್ನು ನೀಡಿದ್ದ ಖಾಸಗಿ ಶಾಲೆಯ ಶಿಕ್ಷಕಿಯ ಮೇಲೆ 5 ಸಾವಿರ ರೂ. ದಂಡ ವಿಧಿಸಲಾಗಿದೆ. ಅಲ್ಲದೆ ಶಿಕ್ಷಕಿಯನ್ನು ಶಾಲೆಯ ಆಡಳಿತ ಮಂಡಳಿ ವಜಾ ಮಾಡಿದೆ.

    ಪಿಯು ಮಂಡಳಿ ಏಪ್ರಿಲ್ 18 ರಂದು ಫಲಿತಾಂಶವನ್ನು ಪ್ರಕಟಗೊಳಿಸಿತ್ತು. ಪರೀಕ್ಷೆಗಳಲ್ಲಿ ಫೇಲ್ ಆದ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು.

    ಪಿಯುಸಿ ಪರೀಕ್ಷೆ ಫಲಿತಾಂಶ ಬಂದ ನಂತರ ರಾಜ್ಯದಲ್ಲಿ ಅತಿ ಹೆಚ್ಚು ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಆದ್ದರಿಂದ ಇದನ್ನು ಖಂಡಿಸಿ ಬೃಹತ್ ಪ್ರತಿಭಟನೆಗಳು ಕೂಡ ಎಲ್ಲೆಡೆ ನಡೆದಿತ್ತು. ಅಲ್ಲದೇ ಫೇಲ್ ಆಗಿರುವ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಉಚಿತವಾಗಿ ಮರು-ಮೌಲ್ಯಮಾಪನವನ್ನು ಮಾಡಬೇಕು ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಒತ್ತಾಯಿಸಿದ್ದರು. ಈ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.

    ಪೋಷಕರು, ವಿದ್ಯಾರ್ಥಿ ಸಂಘಟನೆಗಳು ಮತ್ತು ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿ, ಪಿಯು ಬೋರ್ಡ್ ಮತ್ತು ಫಲಿತಾಂಶದ ಎಡವಟ್ಟಿಗೆ ಕಾರಣವಾದ ಐಟಿ ಕಂಪನಿ ಗ್ಲೋಬರೆನಾ ಟೆಕ್ನಾಲಜೀಸ್, ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಎಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ.

  • ಅಂಗನವಾಡಿ ಶಿಕ್ಷಕಿಯಿಂದಲೇ ಕಳ್ಳತನ!

    ಅಂಗನವಾಡಿ ಶಿಕ್ಷಕಿಯಿಂದಲೇ ಕಳ್ಳತನ!

    ತುಮಕೂರು: ಮಕ್ಕಳಿಗೆ, ಬಾಣಂತಿಯರಿಗೆ ನೀಡುತ್ತಿದ್ದ ಆಹಾರ ಪದಾರ್ಥವನ್ನು ಕದ್ದು ಅಂಗನವಾಡಿ ಶಿಕ್ಷಕಿ ಸಿಕ್ಕಿಬಿದ್ದಿದ್ದಾರೆ.

    ತಿಮ್ಮರಾಜಮ್ಮ ಕಳ್ಳತನ ಮಾಡುತ್ತಿದ್ದ ಶಿಕ್ಷಕಿ. ಶಿರಾ ತಾಲೂಕು ಬುಕ್ಕಾಪಟ್ಟಣದ ಇಂದಿರಾ ಕಾಲೋನಿ ಅಂಗನವಾಡಿಯಲ್ಲಿ ಕದ್ದ ಆಹಾರ ಪದಾರ್ಥಗಳೊಂದಿಗೆ ಶಿಕ್ಷಕಿ ಸಿಕ್ಕಿಬಿದ್ದಿದ್ದಾರೆ.

    ಬೆಲ್ಲ, ಎಣ್ಣೆ, ಬೇಳೆಯನ್ನು ಶಿಕ್ಷಕಿಯೇ ಕದ್ದು ಜನರಲ್ ಸ್ಟೋರ್ ಗಳಿಗೆ ಮಾರಾಟ ಮಾಡುತ್ತಿದ್ದರು. ಆದರೆ ಇದೀಗ ಆಕೆ ಕದಿಯುವಾಗ ಊರಿನವರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮಕ್ಕಳಿಗೆ ಗರ್ಭಿಣಿ ಹಾಗೂ ಬಾಣಂತಿಯರಿಗೆ ನೀಡಲಾಗುತ್ತಿದ್ದ ಆಹಾರ ಪದಾರ್ಥಗಳನ್ನು ಶಿಕ್ಷಕಿ ಕದಿಯೋದನ್ನು ಗ್ರಾಮಸ್ಥರು ವಿಡಿಯೋ ಮಾಡಿದ್ದಾರೆ.

    ಹೀಗೆ ವಿಡಿಯೋ ರೆಕಾರ್ಡ್ ಮಾಡುತ್ತಿರುವುದನ್ನು ನೋಡಿದ ಶಿಕ್ಷಕಿ ಹೈಡ್ರಾಮ ಮಾಡಿದ್ದಾರೆ. ತಪ್ಪಾಯ್ತು ಬಿಟ್ಟು ಬಿಡಿ ಎಂದು ಕಾಲಿಗೆ ಬಿದ್ದು ಅಂಗಲಾಚಿದ ಪ್ರಸಂಗ ನಡೆಯಿತು. ಈ ಬಗ್ಗೆ ಸ್ಥಳೀಯರು ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ.

  • ವಿದ್ಯಾರ್ಥಿನಿ ಖಾಸಗಿ ಅಂಗ ಮುಟ್ಟಿ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ

    ವಿದ್ಯಾರ್ಥಿನಿ ಖಾಸಗಿ ಅಂಗ ಮುಟ್ಟಿ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ

    ಚಿಕ್ಕಬಳ್ಳಾಪುರ: ಸರ್ಕಾರಿ ಶಾಲಾ ಶಿಕ್ಷಕನೊರ್ವ 5ನೇ ತರಗತಿ ವಿದ್ಯಾರ್ಥಿನಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಶಿಕ್ಷಕನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

    ಅಂಜನಮೂರ್ತಿ ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವ ಶಿಕ್ಷಕ. ಅಂಜನಮೂರ್ತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದಾನೆ.

    ಬೇಸಿಗೆ ರಜಾ ದಿನಗಳಾದರೂ ಮಧ್ಯಾಹ್ನದ ಬಿಸಿಯೂಟ ಸವಿಯಲು ಶಾಲೆಗೆ ಬಂದಿದ್ದ ವಿದ್ಯಾರ್ಥಿನಿ ಜೊತೆ ಶಿಕ್ಷಕ ಅಂಜನಮೂರ್ತಿ ಅಸಭ್ಯವಾಗಿ ವರ್ತಿಸಿದ್ದಾನೆ. ಬಿಸಿಯೂಟ ಸವಿದು ಎಲ್ಲಾ ವಿದ್ಯಾರ್ಥಿಗಳು ಹೊರಟರೂ 5ನೇ ತರಗತಿಯ ವಿದ್ಯಾರ್ಥಿನಿಯನ್ನು ಮನೆಗೆ ಕಳುಹಿಸದೇ ಶಿಕ್ಷಕ ಶಾಲೆಯಲ್ಲೇ ಆಕೆಯನ್ನು ಮೈ ಮೇಲೆ ಕೂರಿಸಿಕೊಂಡು ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ.

    ಈ ಘಟನೆಯಿಂದ ಗಾಬರಿಗೊಂಡ ವಿದ್ಯಾರ್ಥಿನಿ ಶಾಲೆಯಿಂದ ಓಡಿ ಹೋಗಿ ಮನೆಯಲ್ಲಿ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಬಳಿಕ ಶಾಲೆ ಬಳಿ ಬಂದ ಪೋಷಕರು ಹಾಗೂ ಗ್ರಾಮಸ್ಥರು ಶಾಲಾ ಶಿಕ್ಷಕ ಅಂಜನಮೂರ್ತಿಗೆ ಹಿಗ್ಗಾಮುಗ್ಗಾ ಥಳಿಸಿ ವಿಶ್ವನಾಥಪುರ ಪೊಲೀಸರಿಗೆ ಓಪ್ಪಿಸಿದ್ದಾರೆ.

    ಈ ಬಗ್ಗೆ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬಟ್ಟೆ ಬಿಚ್ಚುವಂತೆ ಹೇಳಿದ್ದ ಶಿಕ್ಷಕನ ವಿರುದ್ಧ ಯುವತಿ ದೂರು

    ಬಟ್ಟೆ ಬಿಚ್ಚುವಂತೆ ಹೇಳಿದ್ದ ಶಿಕ್ಷಕನ ವಿರುದ್ಧ ಯುವತಿ ದೂರು

    ಹೈದರಾಬಾದ್: ಡ್ಯಾನ್ಸ್ ಶಿಕ್ಷಕನೊಬ್ಬ 21 ವರ್ಷದ ಯುವತಿಯನ್ನು ಬಟ್ಟೆ ಬಿಚ್ಚುವಂತೆ ಹೇಳಿದ್ದು, ಇದೀಗ ಆತನ ವಿರುದ್ಧ ಯುವತಿ ಪೊಲೀಸರಿಗೆ ದೂರು ಸಲ್ಲಿಸಿದ್ದಾಳೆ.

    ಯುವತಿ ತೆಲಂಗಾಣದ ನಾರಾಯಂಗುಡಾ ಪೊಲೀಸ್ ಠಾಣೆಯಲ್ಲಿ ಬುಧವಾರ ನೃತ್ಯ ಶಿಕ್ಷಕನ ವಿರುದ್ಧ ದೂರು ದಾಖಲಿಸಿದ್ದಾಳೆ. ಆರೋಪಿ ಡಾನ್ಸ್ ಅಕಾಡೆಮಿ ಶಿಕ್ಷಕನಾಗಿದ್ದು, ವಿದ್ಯಾರ್ಥಿಗಳಿಗೆ ಬಟ್ಟೆಯನ್ನು ಬಿಚ್ಚುವಂತೆ ಹೇಳಿದ್ದನು ಎಂದು ಯುವತಿ ಆರೋಪಿಸಿದ್ದಾಳೆ.

    ದೂರಿನಲ್ಲಿ ಏನಿದೆ?
    ನಾಟಕ ಅಕಾಡೆಮಿ ಶಿಕ್ಷಕ ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರಾರಂಭವಾಗುವ ಮುನ್ನ ತಮ್ಮ ಬಟ್ಟೆಯನ್ನು ಬಿಚ್ಚುವಂತೆ ಕೇಳಿದ್ದನು. ಆದರೆ ನಾನು ಶಿಕ್ಷಕನ ಮಾತನ್ನು ತಿರಸ್ಕರಿಸಿದೆ. ಹೀಗಾಗಿ ನನ್ನನ್ನು ತರಗತಿಯಿಂದ ಹೊರಗೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

    ಯುವತಿ ದೂರ ಸಲ್ಲಿಸಿದ ನಂತರ ಪೊಲೀಸರು ಆರೋಪಿಯ ವಿರುದ್ಧ ಸೆಕ್ಷನ್ 509 (ಮಹಿಳೆ ಅವಮಾನ ಮಾಡುವ ಉದ್ದೇಶ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

  • ಚುನಾವಣಾ ತರಬೇತಿ ವೇಳೆ ಹೃದಯಾಘಾತದಿಂದ ಶಿಕ್ಷಕ ಸಾವು

    ಚುನಾವಣಾ ತರಬೇತಿ ವೇಳೆ ಹೃದಯಾಘಾತದಿಂದ ಶಿಕ್ಷಕ ಸಾವು

    ಬಳ್ಳಾರಿ: ಚುನಾವಣಾ ತರಬೇತಿ ವೇಳೆ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬಳ್ಳಾರಿಯ ಸಿರಗುಪ್ಪದಲ್ಲಿ ನಡೆದಿದೆ.

    ಸಿರಗುಪ್ಪ ತಾಲೂಕಿನ ಕೆಕ್ಕಲಕೋಟೆ ಗ್ರಾಮದ ಶಿಕ್ಷಕ ಬಿ.ರಮೇಶ್ (46) ಮೃತರು. ಬಿ.ರಮೇಶ್ ಅವರು ಸಿರಗುಪ್ಪದ ಆರನೇ ವಾರ್ಡಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದು, ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಪೂಲಿಂಗ್ ಆಫೀಸರ್ ಆಗಿ ನೇಮಕವಾಗಿದ್ದರು.

    ಸಿರಗುಪ್ಪದ ವಿವೇಕಾನಂದ ಶಾಲೆಯಲ್ಲಿ ಇಂದು ಚುನಾವಣಾ ತರಬೇತಿ ಆರಂಭವಾಗಿದ್ದು, 480ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಈ ವೇಳೆ ಬಿ.ರಮೇಶ್ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಾರ್ಗ ಮಧ್ಯೆ ಬಿ.ರಮೇಶ್ ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತ ಪಡಿಸಿದ್ದಾರೆ.

  • ಒಂದೇ ಶಾಲೆಯ 7 ಶಿಕ್ಷಕಿಯರು ಗರ್ಭಿಣಿ

    ಒಂದೇ ಶಾಲೆಯ 7 ಶಿಕ್ಷಕಿಯರು ಗರ್ಭಿಣಿ

    – 14 ಸಿಬ್ಬಂದಿಯಲ್ಲಿ 7 ಜನರಿಗೆ ಏಕಕಾಲದಲ್ಲಿ ಹೆರಿಗೆ ರಜೆ
    – ಹೊಸ ಸಿಬ್ಬಂದಿಯ ನೇಮಕಕ್ಕೆ ಮುಂದಾದ ಪ್ರಾಂಶುಪಾಲ

    ವಾಷಿಂಗ್ಟನ್: ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ.

    ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ.

    ನನ್ನ 20 ವರ್ಷದ ಸೇವಾ ಅವಧಿಯಲ್ಲಿ ಮೊದಲ ಬಾರಿಗೆ ಈ ರೀತಿಯ ಘಟನೆ ನಡೆದಿದೆ. ಶಾಲೆಯ ಏಳು ಶಿಕ್ಷಕಿಯರು ಗರ್ಭಿಣಿ ಎಂಬ ವಿಚಾರ ತಿಳಿದಾಗ ಒಂದು ಬಾರಿ ಶಾಕ್ ಆಯ್ತು. ಮೊದಲಿಗೆ ಆರು ಜನ ಶಿಕ್ಷಕಿಯರ ಗರ್ಭಿಣಿ ಎಂಬ ವಿಷಯ ತಿಳಿದಿತ್ತು. ಏಳನೇ ಶಿಕ್ಷಕಿಯೂ ಗರ್ಭಿಣಿ ಎಂದು ಆಶ್ಚರ್ಯ ಚಕಿಯನಾದೆ. ಸುದ್ದಿ ಕೇಳಿದಾಗ ಶಿಕ್ಷಕಿಯರು ತಮಾಷೆ ಮಾಡುತ್ತಿದ್ದಾರೆಂದು ಸುಮ್ಮನಾಗಿದ್ದೆ. ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದಾಗ ಖಾತರಿ ಆಯ್ತು. ಅಕ್ಟೋಬರ್ ನಲ್ಲಿ ಇಬ್ಬರು ಶಿಕ್ಷಕಿಯರು ಮಗುವಿಗೆ ಜನ್ಮ ನೀಡಲಿದ್ದಾರೆ ಎಂದು ಪ್ರಾಂಶುಪಾಲ ಐಶ್ಲೇ ಮಿಲರ್ ಹೇಳಿದ್ದಾರೆ.

    ಶಾಲೆಯ ಎಲ್ಲ ಶಿಕ್ಷಕಿಯರು ಗರ್ಭಿಣಿ ಆಗಿರುವ ವಿಷಯ ನಗರದಲೆಲ್ಲ ಹಬ್ಬಿದೆ. ಸ್ಥಳೀಯರು ನಗೆಯ ವಿಷಯದಂತೆ ಮಾತನಾಡಿಕೊಳ್ಳುತ್ತಿದ್ದಾರೆ. ಮತ್ತೆ ಕೆಲವರು ಶಾಲೆಯಲ್ಲಿನ ನೀರಿನ ಮಹಿಮೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಈ ವರ್ಷದ ಕೊನೆಯಲ್ಲಿ ಎಂಟು ಮಕ್ಕಳು ಜನಿಸಲಿವೆ. ನಾಲ್ಕನೇ ತರಗತಿ ಶಿಕ್ಷಕಿ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ.

  • ಕೊಡಗಿನ ಶಿಕ್ಷಕನಿಂದ ಕಾನ್ಫರೆನ್ಸ್ ಕಾಲ್ ಟೀಚಿಂಗ್ – ಶಹಬ್ಬಾಸ್ ಎಂದ ಪೋಷಕರು

    ಕೊಡಗಿನ ಶಿಕ್ಷಕನಿಂದ ಕಾನ್ಫರೆನ್ಸ್ ಕಾಲ್ ಟೀಚಿಂಗ್ – ಶಹಬ್ಬಾಸ್ ಎಂದ ಪೋಷಕರು

    – ಮುಳ್ಳೂರು ಶಾಲೆಯ ವಿದ್ಯಾರ್ಥಿಗಳಿಗೆ ಪಾಠ
    – ಶಾಲೆಯ ಆವರಣದಲ್ಲಿ ವಿಜ್ಞಾನ ಮಾದರಿ

    ಮಡಿಕೇರಿ: ಕೊಡಗಿನ ಸರ್ಕಾರಿ ಶಾಲೆಯ ಶಿಕ್ಷರೊಬ್ಬರು ಮಕ್ಕಳಿಗೆ ಉಪಯುಕ್ತವಾಗಲೆಂದು ಕಾನ್ಫರೆನ್ಸ್ ಕಾಲ್ ಟೀಚಿಂಗ್ ಮಾಡುವ ಮೂಲಕ ಪೋಷಕರ ಮನ ಗೆದ್ದಿದ್ದಾರೆ.

    ಸೋಮವಾರಪೇಟೆ ತಾಲೂಕಿನ ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ವಿನೂತನ ಕಲಿಕೆ ವಿಧಾನವನ್ನು ಬಳಸಲಾಗುತ್ತಿದೆ. ಇಲ್ಲಿನ ಶಿಕ್ಷಕ ಸತೀಶ್ ಅವರು ಟೆಕ್ನಾಲಜಿ ಬಳಸಿ ವಿನೂತನ ರೀತಿಯಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ.

    ಇವರ ಈ ವಿಶೇಷ ಪಾಠದ ಪ್ಲಾನ್‍ನಿಂದ ಶಾಲೆಗೆ ಹಾಜರಾಗದ ವಿದ್ಯಾರ್ಥಿಗಳು ಕೂಡ ಸಂಜೆ ಮನೆಯಲ್ಲಿಯೇ ಸಂಜೆ ವೇಳೆ ಪಾಠ ಕೇಳ್ತಿದ್ದಾರೆ. ಶಾಲೆಯ ಪಾಠ ಅರ್ಥವಾಗದ ಮಕ್ಕಳು ಮತ್ತೆ ಪಾಠ ಕೇಳಿ ಕಲಿಯುತ್ತಿದ್ದಾರೆ. ಈ ವಿಭಿನ್ನ ಪ್ರಯೋಗ ಮಕ್ಕಳಿಗೂ, ಪೋಷಕರಿಗೂ ಖುಷಿ ಕೊಟ್ಟಿದೆ.

    ಶಾಲೆಯ ಆವರಣದ ಸುತ್ತಲೂ ಸೈನ್ಸ್ ಮಾಡೆಲ್‍ಗಳನ್ನು ನಿರ್ಮಿಸಲಾಗಿದೆ. ಈ ಮಾಡೆಲ್‍ಗಳನ್ನು ನೋಡಿ ಕಲಿತು, ಅದರ ಕೆಲಸದ ಬಗ್ಗೆ ಇಲ್ಲಿನ ಮಕ್ಕಳು ವಿವರಿಸುತ್ತಾರೆ. ಕಾಲೇಜು ಮಟ್ಟದ ಪ್ರಾಕ್ಟಿಕಲ್ ಟೀಚಿಂಗ್ ಕೂಡ ಅಲ್ಲಿದೆ. ಟೆಕ್ನಾಲಜಿಯನ್ನ ಹೇಗೆ ಬಳಸಿಕೊಳ್ಳಬೇಕು ಅನ್ನೋದನ್ನ ಶಿಕ್ಷಕ ಸತೀಶ್ ಇಲ್ಲಿನ ಮಕ್ಕಳಿಗೆ ಕಲಿಸುತ್ತಿದ್ದಾರೆ.

    ಹೇಗೆ ಕಾನ್ಫರೆನ್ಸ್ ಕಾಲ್?
    ಸಿಟಿಯ ಹೈಫೈ ಶಾಲೆಗಳಲ್ಲಿ ಮಕ್ಕಳಿಗೆ ವಾಟ್ಸಾಪ್ ಗ್ರೂಪ್ ಮಾಡಿ ಟೀಚ್ ಮಾಡುವಂತಹದ್ದು ಗ್ರಾಮೀಣ ಭಾಗಕ್ಕೆ ಆಗಲ್ಲ, ಅದರ ಬದಲಿಗೆ ಬಂದಿರೋದೆ ಕಾನ್ಫರೆನ್ಸ್ ಕಾಲ್ ಟೀಚಿಂಗ್. ಇದು ತುಂಬಾ ಸಿಂಪಲ್. ಸಂಜೆ ಮಕ್ಕಳು ಮನೆಗೆ ಹೋದ್ಮೇಲೆ ಸಂಜೆ 7 ಗಂಟೆಯಿಂದ 9 ಗಂಟೆಯವರೆಗೆ ಈ ಕಾನ್ಫರೆನ್ಸ್ ಕಾಲ್ ಟೀಚಿಂಗ್ ಸಮಯ ಫಿಕ್ಸ್ ಆಗಿರುತ್ತೆ. ಏಕಕಾಲದಲ್ಲಿ ಎಂಟರಿಂದ ಹತ್ತು ವಿದ್ಯಾರ್ಥಿಗಳನ್ನು ಕರೆಯಲ್ಲಿ ನಿರತರಾಗುವಂತೆ ಮಾಡಿ ಬೋಧನೆ ಮಾಡಬಹುದು. ಕಲಿಕೆಯಲ್ಲಿ ಹಿಂದಿರುವ ಮಕ್ಕಳನ್ನು ಪ್ರತಿನಿತ್ಯ ಈ ಮೂಲಕ ಗಮನಿಸಬಹುದು. ಕೆಲ ಮನೆಗಳಲ್ಲಿ ಪೋಷಕರು ಹಲವು ಕಾರಣಗಳಿಂದ ತಮ್ಮ ಮಕ್ಕಳ ಕಲಿಕೆಯ ಬಗ್ಗೆ ನಿರ್ಲಕ್ಷ್ಯ ತೋರುತ್ತಾರೆ. ಅಂತಹ ಮಕ್ಕಳ ಬಗ್ಗೆ ಕೂಡ ನಿಗಾ ವಹಿಸಲು ಇದು ನೆರವಾಗುತ್ತದೆ ಎಂದು ಸತೀಶ್ ತಿಳಿಸಿದ್ದಾರೆ.

    ಪ್ರಸ್ತುತ ನಾನು 3, 4 ಹಾಗೂ 5ನೇ ತರಗತಿಯ ವಿದ್ಯಾರ್ಥಿಗಳಿಗೆ ದಿನಕ್ಕೊಂದು ವಿಷಯದಂತೆ ಕಾನ್ಫರೆನ್ಸ್ ಕಾಲ್ ಮೂಲಕ ಬೋಧಿಸುತ್ತಿದ್ದೇನೆ. ವಿದ್ಯಾರ್ಥಿಗಳು ಕೂಡ ಆಸಕ್ತಿಯಿಂದ ಕಲಿಯುತ್ತಿದ್ದು, ಸಂಜೆ ತಮ್ಮ ಬರವಣಿಗೆಗಳನ್ನು ಬೇಗ ಬೇಗ ಮುಗಿಸಿಕೊಂಡು ಶಿಕ್ಷಕರ ಕರೆಗಾಗಿ ಕಾಯುತ್ತಿರುತ್ತಾರೆ. ಇದಕ್ಕೆ ಪೋಷಕರು ಸಹ ಉತ್ತಮವಾಗಿ ಸ್ಪಂದಿಸುತ್ತಿದ್ದು, ಕಾನ್ಫರೆನ್ಸ್ ಕಾಲ್ ಟೀಚಿಂಗ್ ಬಳಿಕ ಅದನ್ನು ರೆಕಾರ್ಡ್ ಮಾಡಿಕೊಂಡು ಅತಿ ಉಪಯುಕ್ತ ತರಗತಿಗಳನ್ನು ಶಿಕ್ಷಕರು ಇತರ ಕೆಲಸದಲ್ಲಿ ನಿರತರಾದಾಗ ಮಕ್ಕಳಿಗೆ ಕೇಳಿಸುತ್ತಿದ್ದಾರೆ ಎಂದು ಸತೀಶ್ ಹೇಳಿದ್ದಾರೆ. ಸತೀಶ್ ಅವರ ಈ ವಿಶಿಷ್ಟ ಪ್ರಯತ್ನಕ್ಕೆ ಪೋಷಕರು ಹಾಗೂ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಶಿಕ್ಷಕನಿಂದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

    ಶಿಕ್ಷಕನಿಂದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

    – ಶಿಕ್ಷಕನಿಗೆ ಗ್ರಾಮಸ್ಥರಿಂದ ಥಳಿತ

    ರಾಮನಗರ: ಸರ್ಕಾರಿ ಶಾಲಾ ಶಿಕ್ಷಕನೊಬ್ಬ ನಾಲ್ಕನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಮನಗರ ತಾಲೂಕಿನಲ್ಲಿ ನಡೆದಿದೆ.

    ಸರ್ಕಾರಿ ಪ್ರಾಥಾಮಿಕ ಶಾಲೆಯ ಚಂದ್ರುಶೇಖರ್ ಲೈಂಗಿಕ ದೌರ್ಜನ್ಯ ನೀಡುತ್ತಿದ್ದ ಶಿಕ್ಷಕ. ಶಾಲೆಯ ನಾಲ್ಕನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ದಿನನಿತ್ಯವೂ ಚಂದ್ರಶೇಖರ್ ಲೈಂಗಿಕ ಕಿರುಕುಳ ನೀಡಿದ್ದ. ಅಷ್ಟೇ ಅಲ್ಲದೆ ಕಳೆದ ಎರಡು ದಿನಗಳ ಹಿಂದೆ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿ ಕೆನ್ನೆ ಕಚ್ಚಿ, ಮೈ ಮೇಲೆ ಗಾಯಗಳನ್ನು ಮಾಡಿದ್ದಾನೆ.

    ವಿದ್ಯಾರ್ಥಿನಿ ಇಂದು ಬೆಳಿಗ್ಗೆ ಸ್ನಾನಕ್ಕೆ ಹೋಗುವಾಗ ಪೋಷಕರು ಗಾಯಗಳನ್ನು ಗಮನಿಸಿ ವಿಚಾರಸಿದ್ದಾರೆ. ಆಗ ವಿದ್ಯಾರ್ಥಿನಿ ಘಟನೆಯನ್ನು ವಿವರಿಸಿದ್ದಾರೆ. ಇದರಿಂದಾಗಿ ಆಕ್ರೋಶಗೊಂಡ ಬಾಲಕಿಯ ಪೋಷಕರು ಹಾಗೂ ಗ್ರಾಮಸ್ಥರು ಶಾಲೆಗೆ ನುಗ್ಗಿ ಕಾಮುಕ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಘಟನೆಯ ಕುರಿತು ಮಾಹಿತಿ ಸ್ಥಳೀಯರು ದೂರು ನೀಡುತ್ತಿದ್ದಂತೆ ಶಾಲೆಗೆ ಭೇಟಿ ನೀಡಿದ ತಾಲೂಕು ಶಿಕ್ಷಣಾಧಿಕಾರಿ ಚಂದ್ರಶೇಖರ್ ನನ್ನು ಅಮಾನತುಗೊಳಿಸಿದ್ದಾರೆ.

    ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕು, ಅಕ್ಷರ ಜ್ಞಾನ ನೀಡಬೇಕು. ಕೂಲಿ ಮಾಡಿ ಪೋಷಕರು ಮಕ್ಕಳನ್ನು ಶಾಲೆಗೆ ಸೇರಿಸುತ್ತಾರೆ. ಆದರೆ ಚಂದ್ರಶೇಖರ್ ಪುಟ್ಟ ಮಗುವಿನ ಜೊತೆಗೆ ಅಸಭ್ಯವಾಗಿ ನಡೆದುಕೊಂಡಿದ್ದಾನೆ. ಆತನಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಗ್ರಾಮದ ಮಹಿಳೆ ಒತ್ತಾಯಿಸಿದ್ದಾರೆ.

    ಈ ಘಟನೆಯ ಕುರಿತು ಮಾಹಿತಿ ಸಿಗುತ್ತಿದ್ದಂತೆ ಶಾಲೆಗೆ ಭೇಟಿ ನೀಡಿದ ರಾಮನಗರ ಗ್ರಾಮಾಂತರ ಪೊಲೀಸರು ಶಿಕ್ಷಕ ಚಂದ್ರಶೇಖರ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಿಕ್ಷಕನಿಗೆ ಕಠಿಣ ಶಿಕ್ಷೆ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾನವೀಯತೆ ಮೆರೆದ ಪೊಲೀಸ್ ಇನ್ಸ್‌ಪೆಕ್ಟರ್ – ಶಹಬ್ಬಾಶ್‍ಗಿರಿ ಕೊಟ್ಟ ಡಿಸಿಪಿ ಅಣ್ಣಾಮಲೈ

    ಮಾನವೀಯತೆ ಮೆರೆದ ಪೊಲೀಸ್ ಇನ್ಸ್‌ಪೆಕ್ಟರ್ – ಶಹಬ್ಬಾಶ್‍ಗಿರಿ ಕೊಟ್ಟ ಡಿಸಿಪಿ ಅಣ್ಣಾಮಲೈ

    ಬೆಂಗಳೂರು: ದುಷ್ಕರ್ಮಿಯಿಂದ ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾಗಿದ್ದ ಶಿಕ್ಷಕಿಗೆ ರಕ್ತದಾನ ಮಾಡುವ ಮೂಲಕ ಪೊಲೀಸ್ ಇನ್ಸ್‌ಪೆಕ್ಟರ್ ಮಾನವೀಯತೆಯ ಮೆರೆದಿದ್ದಾರೆ.

    ಸಿದ್ದಲಿಂಗಯ್ಯ ಗಿರಿನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದು, ಶಿಕ್ಷಕಿಗೆ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಶಿಕ್ಷಕಿ ತನುಜಾರನ್ನು ದುಷ್ಕರ್ಮಿಯೊಬ್ಬ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ. ಪರಿಣಾಮ ತನುಜಾ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರು. ಈ ವೇಳೆ ಸಿದ್ದಲಿಂಗಯ್ಯ ಗಾಯಾಳು ತನುಜಾರಿಗೆ ರಕ್ತ ಕೊಟ್ಟು ಜೀವ ಉಳಿಸಿದ್ದಾರೆ.

    ನಡೆದಿದ್ದು ಏನು?
    ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ತನುಜಾರಿಗೆ ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದನು. ಇದರಿಂದ ತನುಜ ನಡುರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಬಳಿಕ ಮಾಹಿತಿ ಸಿಕ್ಕಿದ ತಕ್ಷಣ ಸಿದ್ದಲಿಂಗಯ್ಯ ಸ್ಥಳಕ್ಕೆ ದಾವಿಸಿ ಕೂಡಲೇ ತನುಜಾರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು.

    ಹೆಚ್ಚಿನ ಚಿಕಿತ್ಸೆಗೆಂದು ತನುಜಾರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆಯಿಂದ ತನುಜಾ ತೀವ್ರ ರಕ್ತಸ್ರಾವದಿಂದ ನಿತ್ರಾಣಗೊಂಡಿದ್ದರು. ಆಗ ವೈದ್ಯರು ಹೆಚ್ಚುವರಿ ರಕ್ತದ ಅವಶ್ಯಕತೆ ಇದೆ ತುರ್ತು ರಕ್ತ ಬೇಕು ಎಂದು ಸೂಚಿಸಿದ್ದರು. ತಕ್ಷಣವೇ ಸಿದ್ದಲಿಂಗಯ್ಯ ಗಾಯಾಳು ತನುಜಾರಿಗೆ ರಕ್ತ ನೀಡಿ ಪ್ರಾಣ ಉಳಿಸಿದ್ದರು.

    ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತನುಜ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ತನುಜಾ ಹೊಸಕೆರೆಹಳ್ಳಿಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಸುತ್ತಿದ್ದರು. ಸಿದ್ದಲಿಂಗಯ್ಯ ಕೆಲಸಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿದ್ದಾರೆ. ದಕ್ಷಿಣ ವಿಭಾಗ ಡಿಸಿಪಿ ಅಣ್ಣಾಮಲೈ ಅವರು ಕೂಡ ಸಿದ್ದಲಿಂಗಯ್ಯ ಅವರಿಗೆ ಶಹಬ್ಬಾಶ್ ಗಿರಿ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರೀತಿಯ ಗುರುವನ್ನು ಕಳೆದುಕೊಂಡ ದುಃಖದಲ್ಲಿ ನಟ ಶರಣ್

    ಪ್ರೀತಿಯ ಗುರುವನ್ನು ಕಳೆದುಕೊಂಡ ದುಃಖದಲ್ಲಿ ನಟ ಶರಣ್

    ಬೆಂಗಳೂರು: ಪ್ರತಿಯೊಬ್ಬರ ಜೀವನದಲ್ಲೂ ನೆನಪಲ್ಲೇ ಉಳಿಯುವಂತಹ ಒಬ್ಬರು ಮಾರ್ಗದರ್ಶಕರಿರುತ್ತಾರೆ. ಅವರ ಮಾರ್ಗದರ್ಶನದಲ್ಲೇ ಸಾಗಿ ಸಾಧನೆ ಮಾಡಿರುತ್ತಾರೆ. ಅಂತಹ ಶಿಕ್ಷಕರೊಬ್ಬರು ನಟ ಶರಣ್ ಅವರಿಗೂ ಇದ್ದು, ಇದೀಗ ಅವರನ್ನು ಕಳೆದುಕೊಂಡ ದುಃಖದಲ್ಲಿ ಶರಣ್ ಇದ್ದಾರೆ.

    ಶರಣ್ ಅವರ ಗುರುಗಳಾದ ಬೆಲಹರ್ ಸರ್ ವಿಧಿವಶರಾಗಿದ್ದಾರೆ. ಬೆಲಹರ್ ಅವರು ಶರಣ್ ಅವರ ಶಾಲಾ ಶಿಕ್ಷಕರಾಗಿದ್ದಾರೆ. ಇವರು ಗಣಿತ ಪಾಠವನ್ನು ಮಾಡುತ್ತಿದ್ದರು. ಹೀಗಾಗಿ ಶರಣ್ ತಮ್ಮ ಪ್ರೀತಿಯ ಗುರುಗಳನ್ನು ಕಳೆದುಕೊಂಡ ನೋವಿನಲ್ಲಿದ್ದಾರೆ.

    ನಟ ಶರಣ್ ಈ ಬಗ್ಗೆ ಅವರೇ ಟ್ವೀಟ್ ಮಾಡುವ ಮೂಲಕ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ. “ನನ್ನ ಅಚ್ಚು-ನೆಚ್ಚಿನ ಶಿಕ್ಷಕರಾದ ಬೆಲಹರ್ ಸರ್ ರನ್ನು ನಾನು ಕಳೆದುಕೊಂಡಿದ್ದೇನೆ. ಅವರು ನನಗೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಗಣಿತ ಪಾಠ ಮಾಡುತ್ತಿದ್ದರು. ನಿಮ್ಮನ್ನು ನನ್ನ ಬದುಕಿನಲ್ಲಿ ಪಡೆದಿದ್ದು ನನ್ನ ಅದೃಷ್ಟ” ಎಂದು ಅಳು ಎಮೋಜಿಯನ್ನು ಹಾಕಿ ಅವರ ಜೊತೆಗಿನ ಫೋಟೋವನ್ನು ಹಾಕಿದ್ದಾರೆ.

    ಸದ್ಯಕ್ಕೆ ನಟ ಶರಣ್ ಅವರ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಆದರೂ ತಮಗೆ ಪ್ರೀತಿಯಿಂದ ಪಾಠ ಹೇಳಿಕೊಟ್ಟ ಗುರುಗಳ ಸಾವಿಗೆ ಸಂತಾಪ ಸೂಚಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv