Tag: teacher

  • 21 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಅರುಣಾಚಲ ಪ್ರದೇಶದ ಹಾಸ್ಟೆಲ್ ವಾರ್ಡನ್‌ಗೆ ಗಲ್ಲು ಶಿಕ್ಷೆ

    21 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಅರುಣಾಚಲ ಪ್ರದೇಶದ ಹಾಸ್ಟೆಲ್ ವಾರ್ಡನ್‌ಗೆ ಗಲ್ಲು ಶಿಕ್ಷೆ

    – ಪೋಕ್ಸೋ ಕಾಯ್ದೆ ಅಡಿ ಮರಣದಂಡನೆ ಸಿಕ್ಕಿರುವ ಮೊದಲ ಪ್ರಕರಣ ಎಂದ ಲಾಯರ್

    ಗುವಾಹಟಿ: ಇಲ್ಲಿನ ಸರ್ಕಾರಿ ವಸತಿ ಶಾಲೆಯೊಂದರಲ್ಲಿ (Arunachal school hostel) 2014ರಿಂದ 2022ರ ವರೆಗೆ 21 ಮಕ್ಕಳ ಮೇಲೆ ಲೈಂಗಿಕ ದೌರ್ನಜ್ಯ ಎಸಗಿದ್ದ ಹಾಸ್ಟೆಲ್‌ ವಾರ್ಡನ್‌ (Hostel Warden) ಯುಮ್ಕೆನ್‌ ಬಾಗ್ರಾಗೆ ಅರುಣಾಚಲ ಪ್ರದೇಶದ ವಿಶೇಷ ನ್ಯಾಯಾಲಯ ಗುರುವಾರ ಗಲ್ಲು ಶಿಕ್ಷೆ ವಿಧಿಸಿದೆ.

    ಅಲ್ಲದೇ ಮಕ್ಕಳು ದೂರು ನೀಡಿದರೂ ಅಪರಾಧವನ್ನು ವರದಿ ಮಾಡುವಲ್ಲಿ ವಿಫಲರಾದ ಮಾಜಿ ಮುಖ್ಯಶಿಕ್ಷಕ ಸಿಂಗ್ತುಂಗ್ ಯೋರ್ಪೆನ್ ಮತ್ತು ಹಿಂದಿ ಶಿಕ್ಷಕಿ ಮಾರ್ಬೊಮ್ ನ್ಗೊಮ್ದಿರ್ ಅವರಿಗೆ ಪೋಕ್ಸೊ ಕಾಯ್ದೆ ಅಡಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ವಿಶೇಷ ನ್ಯಾಯಾಧೀಶರಾದ ಜಾವೆಪ್ಲು ಚೈ ತೀರ್ಪು ಪ್ರಕಟಿಸಿದ್ದಾರೆ. ಭಾರತೀಯ ದಂಡ ಸಂಹಿತೆ (IPC) ಮತ್ತು POCSO ಕಾಯ್ದೆ ಅಡಿಯಲ್ಲಿ ಮೂವರನ್ನು ದೋಷಿಗಳೆಂದು ಘೋಷಿಸಿದ್ದಾರೆ. ವಿದ್ಯಾರ್ಥಿಗಳು ದೂರು ನೀಡಿದರೂ ಸಹ ಶಾಲೆಯ ಖ್ಯಾತಿಗೆ ಧಕ್ಕೆಯಾಗುತ್ತದೆ ಎಂಬ ಕಾರಣಕ್ಕೆ ಮೌನವಾಗಿರುವಂತೆ ಕೇಳಿಕೊಂಡಿದ್ದರು ಎಂಬ ಕಾರಣಕ್ಕೆ ಶಿಕ್ಷೆ ವಿಧಿಸಲಾಗಿದೆ ಎಂದು ನ್ಯಾಯಾಧೀಶರು ಉಲ್ಲೇಖಿಸಿದ್ದಾರೆ.

    STOP RAPE

    ಈ ಕುರಿತು ಮಾತನಾಡಿರುವ 21 ಮಕ್ಕಳ ಪರ ವಕೀಲ ಓಯಾಮ್‌ ಬಿಂಗೆಪ್‌, ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿರುವುದು ಸಂತೋಷವಾಗಿದೆ. ಇದು ದೇಶದಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ನೀಡಲಾದ ಮೊದಲ ಮರಣದಂಡನೆ ಪ್ರಕರಣವಾಗಿದೆ. ಇದರಲ್ಲಿ ಸಂತ್ರಸ್ತರು ಸತ್ತಿಲ್ಲ, ದೌರ್ಜನ್ಯ ಎಸಗಿದವರು ಸಾಯುತ್ತಾರೆ ಎಂದು ಸಹ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಹಿಳೆಯ ಭಯಾನಕ ಹತ್ಯೆ ಕೇಸ್ | ಮಹಾಲಕ್ಷ್ಮಿ ಮಗನನ್ನು ಟ್ರ್ಯಾಪ್ ಮಾಡಿದ್ದಳು: ಆರೋಪಿಯ ತಾಯಿ

    ಇನ್ನಿಬ್ಬರು ಆರೋಪಿಗಳಾದ ಅದೇ ಶಾಲೆಯ ಇನ್ನೋರ್ವ ಶಿಕ್ಷಕ ತಾಜಂಗ್ ಯೋರ್ಪೆನ್ ಮತ್ತು ಹಾಸ್ಟೆಲ್ ವಾರ್ಡನ್ ಪರಿಚಯಸ್ತ ಡೇನಿಯಲ್ ಪರ್ಟಿನ್ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ. ಇದನ್ನೂ ಓದಿ: ನಿರುದ್ಯೋಗ ಸಮಸ್ಯೆ, ಯುಜನರ ವಲಸೆಗೆ ಬಿಜೆಪಿ ಆಡಳಿತವೇ ಕಾರಣ – ರಾಹುಲ್‌ ಗಾಂಧಿ ಕಿಡಿ

    ಕೇಸ್‌ ಬೆಳಕಿಗೆ ಬಂದಿದ್ದು ಯಾವಾಗ?
    2022ರ ನವೆಂಬರ್‌ನಲ್ಲಿ ಪ್ರಕರಣ ಬೆಳಕಿಗೆ ಬಂದಿತ್ತು. ವಸತಿ ಶಾಲೆಯಲ್ಲಿ 12 ವರ್ಷದ ಅವಳಿ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಮತ್ತು ಅತ್ಯಾಚಾರಕ್ಕೆ ಯತ್ನಿಸಿದ್ದಕ್ಕಾಗಿ ಆರೋಪಿ ಬಾಗ್ರಾ ವಿರುದ್ಧ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದರು. ಬಳಿಕ ವಿಶೇಷ ತನಿಖಾ ತಂಡ ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿತು. ಬಳಿಕ ಬ್ರಾಗ್ರಾ ಹಾಸ್ಟೆಲ್‌ ವಾರ್ಡನ್‌ ಆಗಿದ್ದ 2014-2022ರ ಅವಧಿಯಲ್ಲಿ 6 ರಿಂದ 14 ವರ್ಷ ವಯಸ್ಸಿನ 6 ಹುಡುಗರು ಸೇರಿದಂತೆ, 21 ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬುದನ್ನು ಪತ್ತೆ ಮಾಡಿತು.

    ಕಳೆದ ಜುಲೈನಲ್ಲಿ ಈ ಸಂಬಂಧ ಚಾರ್ಜ್‌ಶೀಟ್‌ ಸಹ ಸಲ್ಲಿಸಲಾಗಿತ್ತು. ಈ ಮಾಹಿತಿ ಅನುಸಾರ, ವಾರ್ಡನ್‌ ಮಾದಕ ದ್ರವ್ಯ ಸೇವಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದ. ಹಲ್ಲೆ ನಡೆಸಿರುವ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಕೂಡ ಹಾಕಿದ್ದ. ಇದರಿಂದ 6 ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬುದನ್ನು ಎಸ್‌ಐಟಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಜಿತಿಯಾ ಪವಿತ್ರ ಸ್ನಾನದ ವೇಳೆ ಅವಘಡ – ಬಿಹಾರದಲ್ಲಿ 37 ಮಕ್ಕಳು ಸೇರಿ 46 ಮಂದಿ ನದಿಯಲ್ಲಿ ಮುಳುಗಿ ದುರ್ಮರಣ

    ನಂತರ ಆರೋಪಿ ಬಾಗ್ರಾ ವಿರುದ್ಧ ಐಪಿಸಿಯ ಸೆಕ್ಷನ್ 328, 292 ಮತ್ತು 506 ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 6, 10 ಮತ್ತು 12ರ ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿತ್ತು. ಅಲ್ಲದೇ ಘಟನೆಯನ್ನು ವರದಿ ಮಾಡುವಲ್ಲಿ ವಿಫಲರಾದ ಮಹಿಳಾ ಶಿಕ್ಷಕಿ ನ್ಗೊಮ್ದಿರ್‌ಗೆ ಐಪಿಸಿ ಸೆಕ್ಷನ್ 506, ಪೋಕ್ಸೊ ಕಾಯ್ದೆಯ ಸೆಕ್ಷನ್ 17 ಮತ್ತು 21 (1)ರ ಅಡಿ ಶಿಕ್ಷೆ ವಿಧಿಸಲಾಗಿದೆ. ಇನ್ನೂ ಹಲ್ಲೆ ನಡೆಸಿದ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕನಾಗಿದ್ದ ಯೋರ್ಪೆನ್‌ಗೆ ಐಪಿಸಿ ಸೆಕ್ಷನ್ 17, 21 (2), ಶಿಕ್ಷೆ ವಿಧಿಸಲಾಗಿದೆ.

  • ಶಿಕ್ಷಕರ ಸಮಸ್ಯೆಗೆ ಶೀಘ್ರವೇ ಪರಿಹಾರ: ಸಿದ್ದರಾಮಯ್ಯ

    ಶಿಕ್ಷಕರ ಸಮಸ್ಯೆಗೆ ಶೀಘ್ರವೇ ಪರಿಹಾರ: ಸಿದ್ದರಾಮಯ್ಯ

    – ರಾಜಪ್ಪ ಮೇಷ್ಟ್ರು ಅಂದ್ರೆ ತುಂಬಾ ಇಷ್ಟ

    ಬೆಂಗಳೂರು: ಬುಧವಾರ ಶಿಕ್ಷಕ ಸಂಘದ ಜೊತೆ ಚರ್ಚೆ ಮಾಡಿದ್ದೇವೆ. ಹಲವು ಸಮಸ್ಯೆ ಹೇಳಿದ್ದಾರೆ. ಸರ್ಕಾರಕ್ಕೆ ಸಮಸ್ಯೆಗಳ ಅರಿವಾಗಿದೆ. ಆದಷ್ಟು ಶೀಘ್ರವೇ ಶಿಕ್ಷಕರ ಸಮಸ್ಯೆ ಪರಿಹಾರ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ.

    ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಶಿಕ್ಷಕರ ದಿನಾಚರಣೆ (Teacher’s Day) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದೇ ವೇಳೆ ತಮ್ಮ ಬಾಲ್ಯದ ನೆನಪು ಮಾಡಿಕೊಂಡ ಸಿಎಂ, ನನಗೆ ಶಿಕ್ಷಕರು ಕಂಡರೆ ಅಪಾರಗೌರವ ಇದೆ. ನನಗೆ ರಾಜಪ್ಪ ಮೇಷ್ಟ್ರು ಕಂಡರೆ ಇಷ್ಟ. ನಾನು 1 ರಿಂದ 4ನೇ ತರಗತಿ ಓದಿರಲಿಲ್ಲ. ರಾಜಪ್ಪ ಮೇಷ್ಟ್ರು ನನ್ನನ್ನು ನೇರವಾಗಿ 5ನೇ ತರಗತಿಗೆ ಸೇರಿಸಿದ್ರು. ಅಂತಹ ಶಿಕ್ಷಕರು ಇರಬೇಕು ಎಂದರು. ಇದನ್ನೂ ಓದಿ: ಶಿಕ್ಷಕರ ವೃತ್ತಿ ಸಾಮಾಜಿಕ ಜವಾಬ್ದಾರಿ: ಸಿದ್ದರಾಮಯ್ಯ

    ನಾನು ಹೈಸ್ಕೂಲ್‌ಗೆ ಹೋಗೋವರೆಗೂ ಚಪ್ಪಲಿ ಹಾಕಿರಲಿಲ್ಲ. ಬರೀ ಕಾಲಲ್ಲಿ ನಡೆದಿದ್ದೆ. ಇದಕ್ಕಾಗಿ ಸಿಎಂ ಆದ ಮೇಲೆ ಶೂ ಭಾಗ್ಯ ತಂದೆ. ನಮ್ಮ ಸರ್ಕಾರ ಬಂದ ಮೇಲೆ ವಿದ್ಯಾಸಿರಿ ಕಾರ್ಯಕ್ರಮ ಮಾಡಿದೆ. ನಮ್ಮ ಅಪ್ಪ ಹಾಸ್ಟೆಲ್‌ಗೆ ಸೇರಿಸಿರಲಿಲ್ಲ. ಸಂಬಂಧಿಕರ ಮನೆಯಲ್ಲಿ ಓದುತ್ತಿದ್ದೆ. ನನ್ನ ಅನುಭವದಿಂದ ವಿದ್ಯಾಸಿರಿ ಯೋಜನೆ ಜಾರಿ ಮಾಡಿದೆ. ನಾನು ಇಲ್ಲಿಯವರೆಗೆ ಬರಲು ಶಿಕ್ಷಣ ಕಾರಣ ಮತ್ತು ರಾಜಪ್ಪ ಮೇಷ್ಟ್ರು ಕಾರಣ. ಶಿಕ್ಷಣ ಬಹಳ ಮಹತ್ವದ್ದು. ಶಿಕ್ಷಣ ಅತ್ಯಗತ್ಯ. ಅರಿವು ಮತ್ತು ಜ್ಞಾನ, ಸ್ವಾಭಿಮಾನ, ಜಾತ್ಯಾತೀತ ಭಾವ ಬಂದಾಗ ಮಾತ್ರ ಶಿಕ್ಷಣ ಪಡೆದಿದ್ದು ಸಾರ್ಥಕವಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ದರ ಏರಿಕೆ ನಿಯಂತ್ರಿಸಲು ಕಡಿಮೆ ಬೆಲೆಗೆ ಈರುಳ್ಳಿ ಮಾರಾಟಕ್ಕೆ ಮುಂದಾದ ಕೇಂದ್ರ ಸರ್ಕಾರ

  • SSLC ವಿದ್ಯಾರ್ಥಿನಿಗೆ ತನ್ನ ಬೆತ್ತಲೆ ಫೋಟೋ ಕಳಿಸಿ ಕಿರುಕುಳ – ಕಾಮುಕ ಶಿಕ್ಷಕನ ವಿರುದ್ಧ ಕೇಸ್‌

    SSLC ವಿದ್ಯಾರ್ಥಿನಿಗೆ ತನ್ನ ಬೆತ್ತಲೆ ಫೋಟೋ ಕಳಿಸಿ ಕಿರುಕುಳ – ಕಾಮುಕ ಶಿಕ್ಷಕನ ವಿರುದ್ಧ ಕೇಸ್‌

    ಡೆಹ್ರಾಡೂನ್‌: 10ನೇ ತರಗತಿ ವಿದ್ಯಾರ್ಥಿನಿಯೊಬ್ಬರು (SSLC Girl Student) ಶಾಲಾ ಶಿಕ್ಷಕನಿಂದಲೇ ಲೈಂಗಿಕ ಕಿರುಕುಳ ಅನುಭವಿಸುತ್ತಿರುವುದಾಗಿ ದೂರು ದಾಖಲಿಸಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

    ಉತ್ತರಾಖಂಡದ (Uttarakhand) ಹಲ್ದ್ವಾನಿಯಲ್ಲಿ ಘಟನೆ ನಡೆದಿದೆ. ತನ್ನ ಶಾಲೆಯ ಶಿಕ್ಷಕನೇ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ. ವಾಟ್ಸಪ್‌ ಮತ್ತು ಸ್ನ್ಯಾಪ್‌ಚಾಟ್‌ನಲ್ಲಿ ತನಗೆ ಬೆತ್ತೆಲೆ ಫೋಟೋಗಳನ್ನು ಕಳಿಸಿದ್ದಾನೆ. ಈ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ ಬಳಿಕ ಪೊಲೀಸರಿಗೆ (Uttarakhand Police) ದೂರು ನೀಡಲಾಗಿದೆ. ಇದನ್ನೂ ಓದಿ: ಮುಡಾ ಪ್ರಕರಣದಲ್ಲಿ ರಾಯಚೂರು ಸಂಸದ ಜಿ.ಕುಮಾರ ನಾಯಕ್ ಹೆಸರು – ಅಕ್ರಮವಾಗಿ ಭೂಪರಿವರ್ತನೆ ಆರೋಪ

    ಇನ್ನೂ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಲ್ದ್ವಾನಿ ವೃತ್ತ ನಿರೀಕ್ಷಕ ನಿತಿನ್ ಲೋಹಾನಿ ಮಾಹಿತಿ ನೀಡಿದ್ದು, ಹಲ್ದ್ವಾನಿಯ ಖಾಸಗಿ ಶಾಲೆಯೊಂದರ ಶಿಕ್ಷಕನೊಬ್ಬ ಸೋಷಿಯಲ್‌ ಮೀಡಿಯಾದಲ್ಲಿ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶಗಳನ್ನ ಕಳಿಸಿದ್ದಾನೆ. ಈ ಬಗ್ಗೆ ದೂರು ಸ್ವೀಕರಿಸಿ, ಎಫ್‌ಐಆರ್‌ ದಾಖಲಿಸಿದ್ದು, ತನಿಖೆ ಪ್ರಾರಂಭಿಸಿದ್ದೇವೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಮಾಸ್ ಬಂಡುಕೋರರ ದಾಳಿ- ಒತ್ತೆಯಾಳುಗಳ 6 ಶವ ಪತ್ತೆಹಚ್ಚಿ ವಶಪಡಿಸಿಕೊಂಡ ಇಸ್ರೇಲ್

    ಘಟನೆ ಬೆಳಕಿಗೆ ಬಂದಿದ್ದು ಹೇಗೆ?
    ಇಲ್ಲಿನ ಖಾಸಗಿ ಶಾಲೆಯ ಶಿಕ್ಷಕ, ತನ್ನ ವಿದ್ಯಾರ್ಥಿನಿಗೆ ಆಗಾಗ್ಗೆ ಕಿರುಕುಳ ನೀಡಲು ಶುರು ಮಾಡಿದ್ದಾನೆ. ಆಕೆಗೆ ಅನುಚಿತ ಸಂದೇಶಗಳನ್ನ ಕಳಿಸಿದ್ದಾನೆ. ಮೆಸೇಜ್‌ ಜೊತೆಗೆ ಸ್ನ್ಯಾಪ್‌ ಚಾಟ್‌ ಮತ್ತು ವಾಟ್ಸಪ್‌ಗಳಲ್ಲಿ ತನ್ನ ಬೆತ್ತಲೆ ಫೋಟೋಗಳನ್ನ ವಿದ್ಯಾರ್ಥಿನಿಗೆ ಕಳಿಸಿದ್ದಾನೆ. ಇದರಿಂದ ಮಾನಸಿಕ ತೊಂದರೆಗೆ ಒಳಗಾದ ವಿದ್ಯಾರ್ಥಿನಿ ವಿಷಯವನ್ನು ಪೋಷಕರಿಗೆ ತಿಳಿಸಿದ್ದಾಳೆ. ನಂತರ ಪೋಷಕರು ಕೊತ್ವಾಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಪಬ್ಲಿಕ್‌ ಟಿವಿ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ 2ನೇ ದಿನವೂ ಉತ್ತಮ ಸ್ಪಂದನೆ – ಸಂಜೆ 6 ಗಂಟೆವರೆಗೂ ಇರಲಿದೆ ಮೇಳ

  • ಲೈಂಗಿಕ ಕಿರುಕುಳ ಆರೋಪ – ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ ಪ್ರಾಂಶುಪಾಲರ ಅಮಾನತು

    ಲೈಂಗಿಕ ಕಿರುಕುಳ ಆರೋಪ – ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ ಪ್ರಾಂಶುಪಾಲರ ಅಮಾನತು

    ಕಲಬುರಗಿ: ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರ (Girls Student) ದೂರಿನ ಕುರಿತು ನಿರ್ಲಕ್ಷ್ಯ ವಹಿಸಿದ್ದ ಜೇವರ್ಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Morarji Desai Residential School) ಪ್ರಾಂಶುಪಾಲರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶಿಸಿದ್ದಾರೆ.

    ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್

    ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪದ ಮೇಲೆ ಜೇವರ್ಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಕನನ್ನು (PT Teacher) ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಲಾಗಿತ್ತು. ಈ ಬೆನ್ನಲ್ಲೇ ವಿದ್ಯಾರ್ಥಿನಿಯರ ದೂರಿನ ಕುರಿತು ನಿರ್ಲಕ್ಷ್ಯ ವಹಿಸಿದ್ದ ಜೇವರ್ಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರನ್ನೂ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಇದನ್ನೂ ಓದಿ: ಪತಂಜಲಿ ಸಸ್ಯಾಹಾರಿ ಹರ್ಬಲ್ ಟೂತ್ ಪೌಡರ್‌ನಲ್ಲಿ ಮಾಂಸಾಹಾರಿ ಅಂಶ – ದೆಹಲಿ ಹೈಕೋರ್ಟ್‌ಗೆ ಅರ್ಜಿ

    ದೈಹಿಕ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯದ ಕುರಿತು ಪ್ರಾಂಶುಪಾಲರಿಗೆ ಲಿಖಿತವಾಗಿ ದೂರು ನೀಡಿದ್ದರು. ಆದಾಗ್ಯೂ ಪ್ರಾಂಶುಪಾಲರು ಕ್ರಮ ಕೈಗೊಳ್ಳಲು ಹಿಂದೇಟು ಹಾಕಿದ್ದರು ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: BMTC ನಿರ್ವಾಹಕ ಹುದ್ದೆಗೆ ಪರೀಕ್ಷೆ, ಕಟ್ಟುನಿಟ್ಟಿನ ನಿಗಾವಹಿಸುವಂತೆ ಕ್ರಮ – ಕೆಇಎ

    ಈ ಆರೋಪದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ಸೇವೆಯಿಂದ ಅಮಾನತು ಮಾಡಿ ಆದೇಶಿಸಿಲಾಗಿದೆ. ಇವರು ಕರ್ನಾಟಕ ನಾಗರೀಕ ಸೇವಾ ನಿಯಮಾವಳಿ ನಿಯಮ 98(A) (D)ರ ಪ್ರಕಾರ ಜೀವನಾಂಶ ಭತ್ಯೆ ಪಡೆಯಲು ಅರ್ಹರಿರುತ್ತಾರೆ. ಅಮಾನತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಟ್ಟಿ ಹೊರಗೆ ಹೋಗುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ತ್ವರಿತ ತೀರ್ಪಿನ ಅಗತ್ಯವಿದೆ: ಮೋದಿ

  • ಎರಡು ಜಡೆ ಹಾಕದ್ದಕ್ಕೆ ವಿದ್ಯಾರ್ಥಿನಿಯರ ಕೂದಲಿಗೆ ಕತ್ತರಿ!

    ಎರಡು ಜಡೆ ಹಾಕದ್ದಕ್ಕೆ ವಿದ್ಯಾರ್ಥಿನಿಯರ ಕೂದಲಿಗೆ ಕತ್ತರಿ!

    – ಶಾಲೆಗೆ ಬಂದು ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡ ಪೋಷಕರು

    ರಾಮನಗರ: ಸರ್ಕಾರಿ ಶಾಲೆಯ ಶಿಕ್ಷಕರು (Govt School Teachers) ವಿದ್ಯಾರ್ಥಿನಿಯರ ಜಡೆಯನ್ನು ಕತ್ತರಿಸಿದ ಘಟನೆ ಚನ್ನಪಟ್ಟಣ (Channapatna) ತಾಲೂಕಿನ ಅರಳಾಳುಸಂದ್ರ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

    ಮಕ್ಕಳ ಜಡೆ ಕತ್ತರಿಸಿದ ವಿಚಾರ ತಿಳಿದು ಶಾಲೆಗೆ ಆಗಮಿಸಿದ ಪೋಷಕರು (Parents) ಗಲಾಟೆ ನಡೆಸಿ ಶಿಕ್ಷಕರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಅತಿಹೆಚ್ಚು ಸ್ಟಾರ್ಟಪ್‌ಗಳು ನೋಂದಣಿಯಾಗಿರುವ ಎರಡನೇ ರಾಜ್ಯ ಕರ್ನಾಟಕ

    ಏನಿದು ಘಟನೆ?
    ಶಾಲೆಗೆ ಬರುವಾಗ ಎರಡು ಜಡೆಗಳನ್ನು ಹಾಕಿಲ್ಲ ಎಂಬ ಕಾರಣಕ್ಕೆ ಶಾಲಾ ಶಿಕ್ಷಕರು ಎಂಟನೇ ತರಗತಿಯಲ್ಲಿ ಓದುತ್ತಿದ್ದ ಮೂವರು ವಿದ್ಯಾರ್ಥಿನಿಯರ ಜಡೆಗಳನ್ನು ಕತ್ತರಿಸಿದ್ದಾರೆ.

    ಮನೆಗೆ ತೆರಳಿದ ವಿದ್ಯಾರ್ಥಿನಿಯರು ತಮ್ಮ ಪೋಷಕರಿಗೆ ತರಗತಿಯಲ್ಲಿ ನಡೆದ ಘಟನೆ ವಿವರಿಸಿದಾಗ ಸಿಟ್ಟಿಗೆದ್ದ ಪೋಷಕಕರು ಇಂದು ಬೆಳಗ್ಗೆ ಶಾಲೆಗೆ ಆಗಮಿಸಿ ಶಾಲೆಯ ಮುಖ್ಯ ಶಿಕ್ಷಕರನ್ನು ಹಾಗೂ ಕೂದಲು ಕತ್ತರಿಸಿದ ದೈಹಿಕ ಶಿಕ್ಷಕ ಶಿವಕುಮಾರ್, ಸಹಶಿಕ್ಷಕಿ ಪವಿತ್ರಾ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮಾತನಾಡುವ ವೇಳೆ ಮೈಕ್‌ ಮ್ಯೂಟ್‌ – ಮಮತಾ ಆರೋಪ ಸುಳ್ಳೆಂದ ಪಿಐಬಿ ಫ್ಯಾಕ್ಟ್‌ ಚೆಕ್‌

    ವಿಷಯ ತಿಳಿದು ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಅಕ್ಕೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

     

  • ವಿಚ್ಛೇದಿತ ಮಹಿಳೆಯೊಂದಿಗೆ ಯುವಕನ ಲವ್ವಿ ಡವ್ವಿ – ಗರ್ಭಿಣಿ ಆದ್ಮೇಲೆ ಟೀಚರ್‌ಗೆ ಕೈಕೊಟ್ಟು ಜೂಟ್‌!

    ವಿಚ್ಛೇದಿತ ಮಹಿಳೆಯೊಂದಿಗೆ ಯುವಕನ ಲವ್ವಿ ಡವ್ವಿ – ಗರ್ಭಿಣಿ ಆದ್ಮೇಲೆ ಟೀಚರ್‌ಗೆ ಕೈಕೊಟ್ಟು ಜೂಟ್‌!

    ಮೈಸೂರು: ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಯೊಂದಿಗೆ (Mysuru Women) ಲವ್ವಿ ಡವ್ವಿ ನಡೆಸುತ್ತಿದ್ದ ಯುವಕ, ಆಕೆಯನ್ನ ಗರ್ಭಿಣಿ (Pregnant Women) ಮಾಡಿ ನಂತರ ಪರಾರಿಯಾಗಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.

    34 ವರ್ಷದ ಸಂತ್ರಸ್ತೆ ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ (Private School) ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದು, ಆರೋಪಿ ಯುವಕನನ್ನು ಹರೀಶ್ (25) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಟ್ರೈಲರ್ ಸಮೇತ ನದಿಗೆ ಬಿದ್ದ ಟ್ರಾಕ್ಟರ್ – ಓರ್ವ ಕಣ್ಮರೆ, 12 ಮಂದಿ ಬಚಾವ್

    ಪಿರಿಯಾಪಟ್ಟಣ ಮೂಲದ ಮಹಿಳೆ ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾದ್ದಾರೆ. ಈಕೆ 2018ರಲ್ಲಿ ಗಂಡನಿಂದ ವಿಚ್ಛೇದನ ಪಡೆದು ಪ್ರತ್ಯೇಕವಾಗಿ ಬದುಕಿತ್ತಿದ್ದರು. ನಂತರ ಈಕೆಯ ಬಾಳಲ್ಲಿ ಎಂಟ್ರಿಯಾದ ಹರೀಶ್ ಮದುವೆಯಾಗುವುದಾಗಿ ನಂಬಿಸಿದ್ದಾನೆ. ಬಳಿಕ ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಇದೀಗ ಕೈಕೊಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಆರೋಪಿ ಹರೀಶ್ ಮದ್ಯ ಕುಡಿಸಿ ನನ್ನ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪದಡಿ ಮಹಿಳೆ ದೂರು ನೀಡಿದ್ದು, ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರೀಶ್ ನನ್ನ ಮೇಲೆ ಅತ್ಯಾಚಾರ ಮಾಡಿ 2 ತಿಂಗಳಿನಿಂದ ಕಾಣೆಯಾಗಿದ್ದಾನೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ, ಪೊಲೀಸರಿಂದ ನನಗೆ ನ್ಯಾಯ ಸಿಗುವ ಭರವಸೆಯಿದೆ. ಆತ ನನ್ನನ್ನ ಮದುವೆಯಾದ್ರೆ ಕೇಸ್ ವಾಪಸ್ ಪಡೆಯುತ್ತೇನೆ ಎಂದು ಮಹಿಳೆ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ನಮಗೆ ಫ್ರೀ ಬೇಡ, ಹೆಚ್ಚುವರಿ ಬಸ್ ಓಡಿಸಿ: ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ವಿದ್ಯಾರ್ಥಿನಿ ಕ್ಲಾಸ್

    ಮಹಿಳೆ ನೀಡಿದ ದೂರಿನಲ್ಲಿ ಏನಿದೆ?
    ನಾನು ಮೂಲತಃ ಪಿರಿಯಾಪಟ್ಟಣ ನಿವಾಸಿ, ಖಾಸಗಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದೇನೆ. ನನ್ನ ತಮ್ಮ ವ್ಯವಸಾಯ ಮಾಡಿಕೊಂಡಿದ್ದಾನೆ. ನಾನು 2016ರಿಂದ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದೇನೆ. 2015ರಲ್ಲಿ ಆಂಧ್ರ ಮೂಲದ ವ್ಯಕ್ತಿಯೊಂದಿಗೆ ವಿವಾಹವಾಗಿತ್ತು. 6 ವರ್ಷದ ಹೆಣ್ಣು ಮಗಳಿದ್ದಾಳೆ. 2018ರಲ್ಲಿ ಪತಿಯಿಂದ ವಿಚ್ಛೇದನ ಪಡೆದಿದ್ದೇನೆ. ಹವ್ಯಾಸಿ ಗಾಯಕಿಯಾಗಿಯೂ ಕೆಲಸ ಮಾಡುತ್ತಿದ್ದೇನೆ. 6 ತಿಂಗಳ ಹಿಂದೆ ಹರೀಶ್ ಕಾರ್ಯುಕ್ರಮವೊಂದರಲ್ಲಿ ಪರಿಚಯವಾಗಿದ್ದ. ಆಗಾಗ್ಗೆ ನಮ್ಮ ಮನೆಗೆ ಬಂದು ಹೋಗುತ್ತಿದ್ದ. 2023ರ ಡಿ.31ರ ರಾತ್ರಿಯೂ ಹೊಸ ವರ್ಷ ಆಚರಣೆಗೆ ನಮ್ಮ ಮನೆಗೆ ಬಂದಿದ್ದ. ನನ್ನನ್ನು ಪ್ರೀತಿಸುವುದಾಗಿ ಹೇಳಿದ್ದ ಹರೀಶ್ ನಿನಗೆ ವಿಚ್ಛೇದನ ಆಗಿದೆ. ನಾನೇ ನಿನ್ನನ್ನ ಮದುವೆಯಾಗ್ತೀನಿ ಅಂತ ಹೇಳಿದ. ಅಲ್ಲದೇ ಅಂದು ಮದ್ಯ ತಂದು ಏನೂ ಆಗುವುದಿಲ್ಲ ಎಂದು ಹೇಳಿ ಬಲವಂತವಾಗಿ ಕುಡಿಸಿದ, ತಾನೂ ಕುಡಿದಿದ್ದ. ನಾನು ಎಷ್ಟೇ ನಿರಾಕರಿಸಿದರೂ ಬಿಡಲಿಲ್ಲ. ನಂತರ ನಾನು ನಿಶ್ಯಕ್ತಿಗೆ ಜಾರಿದ್ದರಿಂದ ಹೆಚ್ಚು ಪ್ರತಿರೋಧಿಸಲು ಆಗಲಿಲ್ಲ.

    ಮರುದಿನದಿಂದ ಅವನು ತನ್ನ ಬಟ್ಟೆಗಳನ್ನು ನನ್ನ ಮನೆಯಲ್ಲೇ ತಂದಿಟ್ಟಿದ್ದ. ನಾನು ಮದುವೆಯಾಗುವವರೆಗೆ ದೈಹಿಕ ಸಂಪರ್ಕ ಬೇಡವೆಂದು ಹೇಳಿದರೂ ಕೇಳದೇ ಪ್ರತಿದಿನ ನನ್ನೊಂದಿಗೆ ದೈಹಿಕ ಸಂಪರ್ಕ ಮಾಡುತ್ತಿದ್ದ. ಇತ್ತೀಚೆಗೆ ನನ್ನಿಂದ ದೂರವಿರುತ್ತಿದ್ದ. ಇದರಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳೋಣವೆಂದು ನಿರ್ಧರಿಸಿದೆ. ಬಳಿಕ ನನ್ನ ಅಣ್ಣನಿಗೆ ವಿಷಯ ತಿಳಿಸಿದೆ. ಕೊನೆಗೆ ನನ್ನನ್ನು ಮದುವೆಯಾಗಲು ಮನೆಯವರ ಒಪ್ಪಿಗೆ ಪಡೆದುಬರುತ್ತೇನೆ ಎಂದು ಹೇಳಿಹೋದ ಹರೀಶ್ ಈವರೆಗೂ ಸಂಪರ್ಕಕ್ಕೆ ಸಿಕ್ಕಿಲ್ಲ. ನನ್ನನ್ನು ನಂಬಿಸಿ ಮೋಸ ಮಾಡಿರುವ ಹರೀಶನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿರಿಕೊಂಡಿರುವ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

    ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ತೇರಂಬಳ್ಳಿ ಗ್ರಾಮದ ಹರೀಶ್, ಮೈಸೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದನು. ಈತ ಸಹ ಹವ್ಯಾಸಿ ಹಾಡುಗಾರನಾಗಿದ್ದ. ಇದನ್ನೂ ಓದಿ: ಉಗಾಂಡಾ ವಿರುದ್ಧ 134 ರನ್‌ಗಳ ಜಯ – T20 ವಿಶ್ವಕಪ್‌ನಲ್ಲಿ ಮತ್ತೊಂದು ಇತಿಹಾಸ ಸೃಷ್ಠಿಸಿದ ವಿಂಡೀಸ್‌!

  • ಭಾರೀ ವಿರೋಧದ ಬೆನ್ನಲ್ಲೇ ಸೆಕ್ಯೂರಿಟಿ ಕಂಪನಿಗೆ ನೀಡಿದ್ದ ಶಿಕ್ಷಕರ ನೇಮಕಾತಿ ಟೆಂಡರ್ ರದ್ದು

    ಭಾರೀ ವಿರೋಧದ ಬೆನ್ನಲ್ಲೇ ಸೆಕ್ಯೂರಿಟಿ ಕಂಪನಿಗೆ ನೀಡಿದ್ದ ಶಿಕ್ಷಕರ ನೇಮಕಾತಿ ಟೆಂಡರ್ ರದ್ದು

    – ಹೊರಗುತ್ತಿಗೆ ಮೂಲಕ ಶಿಕ್ಷಕರ ನೇಮಕಕ್ಕೆ ಟೆಂಡರ್‌
    – ಡಿಕೆಶಿ ಸೂಚನೆ ಬೆನ್ನಲ್ಲೇ ಆದೇಶ ರದ್ದು

    ಬೆಂಗಳೂರು: ಖಾಸಗಿ ಸೆಕ್ಯುರಿಟಿ ಮತ್ತು ಡಿಟೆಕ್ಟಿವ್ ಏಜೆನ್ಸಿಗಳ ಮೂಲಕ ಹೊರಗುತ್ತಿಗೆ ಶಿಕ್ಷಕರನ್ನು (Teachers) ನೇಮಿಸಿಕೊಳ್ಳಲು ಮುಂದಾಗಿದ್ದ ಬಿಬಿಎಂಪಿ (BBMP) ಈಗ ಈ ನಿರ್ಧಾರದಿಂದ ಹಿಂದಕ್ಕೆ ಸರಿದಿದೆ.

    ಬಿಬಿಎಂಪಿ ನಿರ್ಧಾರ ಸರ್ಕಾರ ಬಾರಿ ಮುಜುಗರ ತಂದಿತ್ತು. ಅಷ್ಟೇ ಅಲ್ಲದೇ ಮಾಜಿ ಶಿಕ್ಷಣ ಸಚಿವರು ಸೇರಿ ಹಲವರಿಂದ ಟೀಕೆ ವ್ಯಕ್ತವಾಗಿತ್ತು.‌ ಇದರಿಂದ ಎಚ್ಚೆತ್ತ ಸರ್ಕಾರ ಟೆಂಡರ್ (Tender) ರದ್ದುಗೊಳಿಸಿ ಅಧಿಕೃತ ಆದೇಶ ಪ್ರಕಟಿಸಿದೆ.

    ಸೆಕ್ಯುರಿಟಿ ಕಂಪನಿಗೆ ನೀಡಿದ ಶಿಕ್ಷಕರ ನೇಮಕಾತಿ ಟೆಂಡರ್‌ ಅನ್ನು ರದ್ದು ಮಾಡುವಂತೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಸೂಚನೆ ಬೆನ್ನಲ್ಲೇ ಸೆಕ್ಯುರಿಟಿ ಕಂಪನಿಗೆ ನೀಡಿದ ಗುತ್ತಿಗೆಯನ್ನ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರದ್ದು ಮಾಡಿ ಆದೇಶ ಮಾಡಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ 87 ಕೋಟಿ ಗೋಲ್ಮಾಲ್ – ಏನಿದು ಹಗರಣ? ಅಕ್ರಮ ಹಣ ವರ್ಗಾವಣೆ ಆಗಿದ್ದು ಯಾಕೆ?

    ಭದ್ರತಾ ಸಿಬ್ಬಂದಿ ಒದಗಿಸುವ ಸೆಕ್ಯೂರಿಟಿ ಏಜೆನ್ಸಿ ಮೂಲಕ ಶಿಕ್ಷಕರ ನೇಮಕಾತಿ ಮಾಡಿಕೊಂಡರೆ ಬಿಬಿಎಂಪಿ ಶಾಲಾ ಕಾಲೇಜ್‌ಗಳಲ್ಲಿ ಶಿಕ್ಷಣ ವ್ಯವಸ್ಥೆ ಹೇಗಿರುತ್ತದೆ ಎಂಬ ಭಾರೀ ಪ್ರಶ್ನೆ ಎದ್ದಿತ್ತು. ಅಷ್ಟೇ ಅಲ್ಲದೇ ಸೆಕ್ಯೂರಿಟಿ ಏಜೆನ್ಸಿ ಮೂಲಕವೇ ಶಿಕ್ಷಕಕರಿಗೆ ಸಂಬಳ ನೀಡಲಾಗುವುದು ಷರತ್ತು ವಿಧಿಸಲಾಗಿತ್ತು.

    ಗುತ್ತಿಗೆ ರದ್ದಾದ ಕಾರಣ ಬಿಬಿಎಂಪಿಯಿಂದಲೇ ನೇರವಾಗಿ ಶಿಕ್ಷಕರಿಗೆ ಸಂಬಳ ಸಿಗಲಿದೆ. ಇನ್ನು ಮುಂದೆ  ಸರ್ಕಾರದ ಮೂಲಕವೇ ಕೌನ್ಸಿಲಿಂಗ್‌ ಮಾಡಿ ಬಿಬಿಎಂಪಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ ನಡೆಯಲಿದೆ.

    ಭಾರೀ ವಿರೋಧ ವ್ಯಕ್ತವಾಗಿತ್ತು:
    ಬಿಬಿಎಂಪಿಯ ಈ ಪ್ರಕ್ರಿಯೆಗೆ ಸುಮಾರು 700ಕ್ಕೂ ಹೆಚ್ಚು ಹೊರಗುತ್ತಿಗೆ ಶಿಕ್ಷಕರು ವಿರೋಧ ವ್ಯಕ್ತಪಡಿಸಿದ್ದರು. ಶಾಲೆ ಬಹಿಷ್ಕರಿಸಿ ಪ್ರತಿಭಟಿಸಿದ್ದರು. ಆದರೂ, ಇದಕ್ಕೆ ಮಣಿಯದ ಸರ್ಕಾರ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರು, ಬಿಬಿಎಂಪಿ ಶಾಲೆಯಲ್ಲಿ ಅನರ್ಹ ಶಿಕ್ಷಕರಿದ್ದಾರೆ. ಅವರೆಲ್ಲ ಬೇಡ. ಶಿಕ್ಷಣ ಇಲಾಖೆಯಿಂದಲೇ ಶಿಕ್ಷಕರು ಬರುತ್ತಾರೆ. ಈಗಿರುವವರು ಅರ್ಹತೆ ಇದ್ದರೆ ಎಸ್‌ಡಿಎಂಸಿ ಮೂಲಕ ನೇಮಕವಾಗಬಹುದು. ಅವರಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ್ದರು.

     

  • ಮದ್ಯಪ್ರಿಯರಿಗೆ ಗುಡ್ ನ್ಯೂಸ್ – ಬೆಂಗಳೂರಲ್ಲಿ 3 ದಿನ ಅಲ್ಲ, 2 ದಿನ ಮಾತ್ರ ಮದ್ಯ ಮಾರಾಟ ಬಂದ್

    ಮದ್ಯಪ್ರಿಯರಿಗೆ ಗುಡ್ ನ್ಯೂಸ್ – ಬೆಂಗಳೂರಲ್ಲಿ 3 ದಿನ ಅಲ್ಲ, 2 ದಿನ ಮಾತ್ರ ಮದ್ಯ ಮಾರಾಟ ಬಂದ್

    ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ (Vidhan Parishad by-election) ಹಿನ್ನೆಲೆ ಮದ್ಯ ಮಾರಾಟಕ್ಕೆ (Alcohol Sale Ban) ವಿಧಿಸಿದ್ದ ನಿರ್ಬಂಧ‌ದಲ್ಲಿ ಮಾರ್ಪಾಡು ಮಾಡಲಾಗಿದೆ. ಮತದಾನದ ದಿನ ಮತ್ತು ಎಣಿಕೆ‌‌ ದಿನದಂದು ಮಾತ್ರ ಮದ್ಯ ಮಾರಾಟಕ್ಕೆ ಹೈಕೋರ್ಟ್‌ ನಿರ್ಬಂಧ ವಿಧಿಸಿ ಆದೇಶ ಪ್ರಕಟಿಸಿದೆ.

    ಫೆ.16 ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಮತ್ತು ಫೆ.20 ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಮಾತ್ರ ಮದ್ಯ ಮಾರಾಟ ನಿರ್ಬಂಧ ಹೇರಿ ‌‌ನ್ಯಾ. ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ಪ್ರಕಟಿಸಿದೆ.  ಇದನ್ನೂ ಓದಿ: ರಾಜ್ಯದಲ್ಲಿ ಬೇಬಿ ಅಂಬುಲೆನ್ಸ್ ಆರಂಭ – ವಿಶೇಷತೆ ಏನು?

    ಆಹಾರ ಪೂರೈಸಲು ರೆಸ್ಟೋರೆಂಟ್‌ಗಳಿಗೆ ನಿರ್ಬಂಧವಿಲ್ಲ. ಮದ್ಯಪಾನ ನಿರ್ಬಂಧಿಸದಿದ್ದರೆ ಶಿಕ್ಷಕರು ಮದ್ಯ ಸೇವಿಸುತ್ತಾರೆಂದು ಭಾವಿಸಬೇಕಿಲ್ಲ. ಮುಕ್ತ, ನ್ಯಾಯಸಮ್ಮತ ಮತದಾನಕ್ಕೆ ಇಷ್ಟು ದಿನದ ನಿರ್ಬಂಧ ಅಗತ್ಯವಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಈ ಆದೇಶ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರಕ್ಕೂ ಅನ್ವಯವಾಗುತ್ತದೆ. ಇದನ್ನೂ ಓದಿ: ದೇವಾಲಯಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ: ರಾಮಲಿಂಗಾ ರೆಡ್ಡಿ

    10 ಸಾವಿರ ಮಹಿಳೆಯರು ಹಾಗೂ 6,000 ಪುರುಷರು ಇರುವ ಒಂದೇ ಒಂದು ಶಿಕ್ಷಣ ಕ್ಷೇತ್ರಕ್ಕೆ16ನೇ ತಾರೀಖು ನಡೆಯುವ ಚುನಾವಣೆಗೆ 3600 ಕ್ಕೂ ಹೆಚ್ಚಿಗೆ ಸನ್ನದುಗಳನ್ನು ಮುಚ್ಚಲು ಆದೇಶ ಕೊಟ್ಟಿರುವುದು ಅನಗತ್ಯ ಹಾಗೂ ಅವೈಜ್ಞಾನಿಕ. ಇದನ್ನು ಮರು ಪರಿಶೀಲಿಸಲೆಂದು ಖುದ್ದು ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೆವು. ಆದರೆ ನಮ್ಮ ಪರವಾಗಿ ಸೂಕ್ತ ಆದೇಶ ಬಂದಿರುವುದಿಲ್ಲ. ಈ ಕಾರಣದಿಂದ ನಾವು ಹೈಕೋರ್ಟ್‌ ಮೊರೆ ಹೋಗಿದ್ದೆವು. ನ್ಯಾಯಾಧೀಶರು ನಮ್ಮ ಪರ ವಾದವನ್ನು ಆಲಿಸಿದ ನಂತರ 16 ಮತ್ತು 20 ನೇ ತಾರೀಕು ಎರಡು ದಿನಗಳು ಮಾತ್ರ ಬಂದ್ ಮಾಡಬೇಕೆಂಬ ಆದೇಶವನ್ನುಹೊರಡಿಸಿರುತ್ತಾರೆ. ಈ ಸಮಂಜಸವಾದ ನ್ಯಾಯ ಸಿಕ್ಕಿರುವುದು ಸಂತಸದ ವಿಷಯ. ವಕೀಲರಾದ ಅರುಣ್ ಶ್ಯಾಮರವರ ಜೊತೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ಪಿಸಿ ರಾವ್ ಹೇಳಿದ್ದಾರೆ.

     

    ಉಪ ಚುನಾವಣೆ ಹಿನ್ನೆಲೆ ಫೆಬ್ರವರಿ 14ರ ಸಂಜೆಯಿಂದ 16ರ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಡಳಿತ ಆದೇಶ ಪ್ರಕಟಿಸಿತ್ತು.

    ಬೆಂಗಳೂರು ನಗರ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಶಿಕ್ಷಕರು (ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ ಮತ್ತು ಆನೇಕಲ್) ಶಿಕ್ಷಕರು ಮತದಾನ ಮಾಡಲಿದ್ದಾರೆ. ಮಾದರಿ ನೀತಿ ಸಂಹಿತೆ ಫೆ.23ರವರೆಗೆ ಜಾರಿಯಾಲ್ಲಿರಲಿದೆ.

  • ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಮಲ ಪ್ರದರ್ಶಿಸಿದ ಮಕ್ಕಳು – ಶಾಸಕ ಶಿವಲಿಂಗೇಗೌಡ ಗರಂ

    ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಮಲ ಪ್ರದರ್ಶಿಸಿದ ಮಕ್ಕಳು – ಶಾಸಕ ಶಿವಲಿಂಗೇಗೌಡ ಗರಂ

    – ಮಕ್ಕಳನ್ನು ಹೇಗೆ ಉದ್ಧಾರ ಮಾಡ್ತೀರಾ ಅಂತಾ ಶಿಕ್ಷಕರಿಗೆ ತರಾಟೆ

    ಹಾಸನ: ಅರಸೀಕೆರೆಯ (Arasikere) ಶಾಲೆಯೊಂದರಲ್ಲಿ (School) ನಡೆದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಕೆಎಂ ಶಿವಲಿಂಗೇಗೌಡ (KM Shivalinge Gowda) ಗರಂ ಆಗಿದ್ದಾರೆ.

    ಗಣರಾಜ್ಯೋತ್ಸವ (Republic Day) ಅಂಗವಾಗಿ ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭ ಶಾಲಾ ಮಕ್ಕಳು ನೃತ್ಯ ಪ್ರದರ್ಶನವೊಂದರಲ್ಲಿ ಭಾರತದ ರಾಷ್ಟ್ರೀಯ ಹೂವು ಕಮಲದ ಚಿತ್ರವನ್ನು ಪ್ರದರ್ಶಿಸಿದ್ದರು. ಇದರಿಂದ ಶಾಸಕ ಶಿವಲಿಂಗೇಗೌಡ, ತಹಸೀಲ್ದಾರ್ ಸಂತೋಷ್ ಹಾಗೂ ಸಾರ್ವಜನಿಕರು ಕೆಂಡಾಮಂಡಲವಾಗಿದ್ದು, ಶಾಲಾ ಶಿಕ್ಷಕಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ; ಮೊದಲ ಪಟ್ಟಿ ರಿಲೀಸ್

    ಶಾಲಾ ಶಿಕ್ಷಕಿಯನ್ನು ತರಾಟೆಗೆ ತೆಗೆದುಕೊಂಡ ಶಾಸಕ, ಕಮಲ ಯಾವ ಪಕ್ಷದ ಚಿಹ್ನೆ? ಯಾವ ಸೀಮೆ ನಾಗರಿಕರು ನೀವು? ಮಕ್ಕಳನ್ನು ಹೇಗೆ ಉದ್ಧಾರ ಮಾಡ್ತೀರಾ ಎಂದು ಕೋಪಗೊಂಡಿದ್ದಾರೆ. ಈ ವೇಳೆ ಶಾಲಾ ಶಿಕ್ಷಕಿ, ಕಮಲ ಒಂದು ಪಕ್ಷದ ಚಿಹ್ನೆ ಹೇಗೆ ಆಗುತ್ತೆ ಸರ್? ನೀವು ಹೀಗೆ ಮಾತನಾಡಿದರೆ ಸರಿ ಹೋಗಲ್ಲ ಸರ್ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: 2024ರಲ್ಲಿ ಅಣು ಬಾಂಬ್ ಸ್ಫೋಟಗೊಳ್ಳುವ ಸಾಧ್ಯತೆ ಇದೆ: ಕೋಡಿಮಠ ಸ್ವಾಮೀಜಿ ಭವಿಷ್ಯ

    ಇದರಿಂದ ಸಿಟ್ಟುಗೊಂಡ ಶಾಸಕರು, ಏನು ಸರಿ ಹೋಗಲ್ಲ? ನಿಮಗೆ ನೋಟಿಸ್ ಕೊಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ತಹಸೀಲ್ದಾರ್ ಸಂತೋಷ್ ಮಧ್ಯಪ್ರವೇಶಿಸಿ ಒಂದು ಧರ್ಮ, ಒಂದು ಪಕ್ಷದ ಚಿಹ್ನೆ ಹೈಲೆಟ್ ಮಾಡಬಾರದು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಕಿ ಲಕ್ಷ್ಮಿ, ನಿನ್ನೆ-ಮೊನ್ನೆ ನೃತ್ಯ ನೋಡಿದವರು ನೋಡಿದರೆ ಅದನ್ನು ಬಳಸುತ್ತಿರಲಿಲ್ಲ. ಸಭೆಯಲ್ಲಿ ಸೂಚನೆ ನೀಡಿದ್ದರೆ ಚಿಹ್ನೆ ಬಳಸುತ್ತಿರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸಂಘಟನೆ ಕೆಲಸದಲ್ಲಿ ತೊಡಗಿಸಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡ್ತೇನೆ: ಜಗದೀಶ್ ಶೆಟ್ಟರ್

    ಇದಕ್ಕೆ ಪ್ರತ್ಯುತ್ತರ ಕೊಟ್ಟ ಶಾಸಕ ಶಿವಲಿಂಗೇಗೌಡ, ಇವರು ಎಂತದ್ದಾನ್ನಾದರೂ ತೋರಿಸಿಕೊಳ್ಳಲಿ ನನಗೇನು? ಅಲ್ಲಿ ಯಾವನೋ ಕುಳಿತಿರುತ್ತಾನೆ. ಬಿಜೆಪಿ ಚಿಹ್ನೆ ತೋರಿಸುತ್ತಿದ್ದಾರೆ ಎಂದು ಕಲ್ಲು ತೂರಿದರೆ ಮುಂದೆ ಆಗುವುದನ್ನು ನೋಡಬೇಕು. ಇದು ರಾಷ್ಟ್ರೀಯ ಹಬ್ಬ ಎಂದು ಸಿಡಿಮಿಡಿಗೊಂಡಿದ್ದಾರೆ. ಅತ್ಯುತ್ತಮ ನೃತ್ಯಕ್ಕಾಗಿ ಶಾಲಾ ಮಕ್ಕಳು ಮೊದಲ ಬಹುಮಾನ ಪಡೆದಿದ್ದರು. ಶಾಸಕರ ಆಕ್ಷೇಪದ ನಂತರ ತಾಲೂಕು ಆಡಳಿತ ನಾಲ್ಕನೇ ಬಹುಮಾನ ನೀಡಿದೆ. ಇದನ್ನೂ ಓದಿ: ಗಣೇಶ್ ಭಟ್ ಕೆತ್ತಿರೋ ವಿಗ್ರಹವನ್ನು ರಾಮದೇವರ ಬೆಟ್ಟಕ್ಕೆ ನೀಡುವಂತೆ ಇಕ್ಬಾಲ್ ಹುಸೇನ್ ಪತ್ರ

  • ಮೇಲುಕೋಟೆ ಶಿಕ್ಷಕಿ ಕೊಲೆ ಪ್ರಕರಣ – ಆರೋಪಿ ಅರೆಸ್ಟ್

    ಮೇಲುಕೋಟೆ ಶಿಕ್ಷಕಿ ಕೊಲೆ ಪ್ರಕರಣ – ಆರೋಪಿ ಅರೆಸ್ಟ್

    ಮಂಡ್ಯ: ಇಲ್ಲಿನ ಮೇಲುಕೋಟೆ (Melukote) ಶಿಕ್ಷಕಿ (Teacher) ದೀಪಿಕಾ ನಾಪತ್ತೆ ಹಾಗೂ ಕೊಲೆ ಪ್ರಕರಣ ಬೆಳಕಿಗೆ ಬಂದ 30 ಗಂಟೆಯಲ್ಲೇ ಪೊಲೀಸರು ಹಂತಕನನ್ನು ಬಂಧಿಸಿದ್ದಾರೆ. ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿ ನಿತೀಶ್‌ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    ಮೇಲುಕೋಟೆ ಬೆಟ್ಟದ ತಪ್ಪಲಲ್ಲಿ ಮಾಣಿಕ್ಯನಹಳ್ಳಿ ಗ್ರಾಮದ ದೀಪಿಕಾಳನ್ನು (28) ಅದೇ ಗ್ರಾಮದ ನಿತೀಶ್ ಕೊಲೆ ಮಾಡಿ ಹೂತು ಹಾಕಿದ್ದ. ಶನಿವಾರ ಮಧ್ಯಾಹ್ನ ಶಾಲೆಯಿಂದ ತೆರಳಿದ್ದ ದೀಪಿಕಾ ನಿಗೂಢವಾಗಿ ನಾಪತ್ತೆಯಾಗಿದ್ದು, ಅಂದು ಸಂಜೆ ಬೆಟ್ಟದ ಹಿಂಭಾಗದ ರಸ್ತೆ ಸಮೀಪ ದೀಪಿಕಾ ಸ್ಕೂಟರ್ ಪತ್ತೆಯಾಗಿತ್ತು. ಅಲ್ಲದೆ ದೀಪಿಕಾಳನ್ನು ಎಳೆದಾಡುತ್ತಿದ್ದ ದೃಶ್ಯವನ್ನು ಬೆಟ್ಟದ ಮೇಲಿನಿಂದ ಪ್ರವಾಸಿಗರೊಬ್ಬರು ವೀಡಿಯೋ ಮಾಡಿದ್ದರು. ಇದಾದ ನಂತರ ಮೇಲುಕೋಟೆ ಠಾಣೆಗೆ ದೀಪಿಕಾ ಪೋಷಕರು ನಾಪತ್ತೆ ದೂರು ನೀಡಿದ್ದರು. ಸೋಮವಾರ ಸಂಜೆ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಶವ ಪತ್ತೆಯಾಗಿತ್ತು. ಇದನ್ನೂ ಓದಿ: ಜಾತ್ರೆ ವೇಳೆ ಕುಡಿದು ರಂಪಾಟ – ಮೂವರಿಗೆ ಸ್ಟೀಲ್ ಕಟರ್‌ನಿಂದ ಇರಿತ 

     ಈ ವೇಳೆ ಶವ ಪತ್ತೆಯಾಗುತ್ತಿದ್ದಂತೆ ನಿತೀಶ್ ಗ್ರಾಮದಿಂದ ಎಸ್ಕೇಪ್ ಆಗಿದ್ದ. ಅಲ್ಲದೇ ದೀಪಿಕಾಗೆ ಕೊನೆಯದಾಗಿ ಈತನೇ ಫೋನ್ ಕಾಲ್ ಮಾಡಿದ್ದ. ನಿತೀಶ್ ಕೊಲೆಗಾರ ಎಂದು ದೀಪಿಕಾ ಪತಿ ಲೋಕೇಶ್ ಆರೋಪ ಮಾಡಿದ್ದರು. ಈ ಅನುಮಾನದಿಂದ ನಾಪತ್ತೆಯಾಗಿದ್ದ ನಿತೀಶ್‌ನನ್ನು ಪೊಲೀಸರು ಹುಡುಕಾಟ ನಡೆಸಿದ್ದರು. ಇದೀಗ ನಿತೀಶ್‌ನನ್ನು ಬಂಧಿಸಿ ಪೊಲೀಸರು ಕರೆತಂದಿದ್ದಾರೆ. ಇಂದು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಅಪಾರ್ಟ್‍ಮೆಂಟ್‍ನ 29ನೇ ಮಹಡಿಯಿಂದ ಹಾರಿ ಬಾಲಕಿ ಆತ್ಮಹತ್ಯೆ