Tag: teacher

  • ಮೇಲುಕೋಟೆ ಶಿಕ್ಷಕಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಅಕ್ಕ ಅಕ್ಕ ಅಂತಾನೇ ಮೂಹೂರ್ತ ಇಟ್ಟನಾ?

    ಮೇಲುಕೋಟೆ ಶಿಕ್ಷಕಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಅಕ್ಕ ಅಕ್ಕ ಅಂತಾನೇ ಮೂಹೂರ್ತ ಇಟ್ಟನಾ?

    ಮಂಡ್ಯ: ಶಿಕ್ಷಕಿಯನ್ನು (Teacher) ಕೊಲೆಗೈದು ಬೆಟ್ಟದ ತಪ್ಪಲಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪರಿಚಯಸ್ಥ ಹುಡುಗನಿಂದಲೇ ಶಿಕ್ಷಕಿ ಕೊಲೆಯಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

    ಮಂಡ್ಯ (Mandya) ಜಿಲ್ಲೆ ಪಾಂಡವಪುರ (Pandavapura) ತಾಲೂಕಿನ ಮೇಲುಕೋಟೆಯಲ್ಲಿ (Melukote) ಶಿಕ್ಷಕಿ ದೀಪಿಕಾ (28) ಮೃತದೇಹ ಕೊಲೆ ಮಾಡಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈಕೆಯ ಕೊಲೆಯ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿತ್ತು. ಇದೀಗ ಸ್ವಗ್ರಾಮದ ಯುವಕನ ವಿರುದ್ಧ ಮೃತ ದೀಪಿಕಾ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ದೀಪಿಕಾ ನಾಪತ್ತೆಗೂ ಮುನ್ನ ನಿತೀಶ್ (22) ಎಂಬಾತ ಕೊನೆಯ ಕರೆ ಮಾಡಿದ್ದ. ದೀಪಿಕಾ ಮೃತದೇಹ ಸಿಗುತ್ತಿದ್ದಂತೆ ಯುವಕ ಗ್ರಾಮದಿಂದ ನಾಪತ್ತೆಯಾಗಿದ್ದಾನೆ. ಇದನ್ನೂ ಓದಿ: ಬಂಡೆ ಬ್ಲಾಸ್ಟ್ ಮಾಡುವ ವೇಳೆ ಅವಘಡ – ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು

    ನಿತೀಶ್ ಅಕ್ಕ ಅಕ್ಕ ಎನ್ನುತ್ತಲೇ ದೀಪಿಕಾ ಜೊತೆ ಸ್ನೇಹ ಬೆಳೆಸಿದ್ದ. ಒಂದೇ ಊರಿನವನಾದ್ದರಿಂದ ದೀಪಿಕಾ ಆತನ ಜೊತೆ ಸಲುಗೆಯಿಂದಲೇ ಮಾತನಾಡುತ್ತಿದ್ದಳು. ನಿತೀಶ್‌ನಿಂದಲೇ ದೀಪಿಕಾ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಕೊಲೆಗೂ ಮುನ್ನ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಮತ್ತು ನಿತೀಶ್ ಜಗಳವಾಡುತ್ತಿದ್ದ ವೀಡಿಯೋ ಸೆರೆಯಾಗಿದೆ. 13 ಸೆಕೆಂಡ್‌ಗಳ ವಿಡಿಯೋ ರೆಕಾರ್ಡ್ ಮಾಡಿದ್ದ ಪ್ರವಾಸಿಗರು ಅದನ್ನು ಪೊಲೀಸರಿಗೆ ನೀಡಿದ್ದಾರೆ. ನಾಪತ್ತೆ ದೂರು ನೀಡಿದ್ರು, ಜಗಳ ವಿಡಿಯೋ ಸಿಕ್ಕಿದ್ರು ಗಂಭೀರವಾಗಿ ಪರಿಗಣಿಸದೆ ಪೊಲೀಸರ ನಿರ್ಲಕ್ಷ್ಯ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಇದನ್ನೂ ಓದಿ: ಅತ್ತಿಗೆ ಮೇಲೆ ಗ್ಯಾಂಗ್‌ರೇಪ್ ಮಾಡಿ ಕೊಲೆಗೈದ ಐವರು ಮೈದುನರು – ದುಬೈನಲ್ಲಿರೋ ಮಹಿಳೆಯ ಪತಿಯೇ ಮಾಸ್ಟರ್‌ಮೈಂಡ್

     

    ಬಳಿಕ ಬೆಟ್ಟದ ತಪ್ಪಲಿನಲ್ಲೇ ದೀಪಿಕಾಳ ಡಿಯೋ ಸ್ಕೂಟರ್ ಪತ್ತೆಯಾಗಿದೆ. ಸ್ಕೂಟರ್ ಪತ್ತೆಯಾದ ಸ್ಥಳದ ಸುತ್ತಮುತ್ತ ದೀಪಿಕಾಳಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ ವೇಳೆ ಹೂತಿದ್ದ ಸ್ಥಿತಿಯಲ್ಲಿ ಮೃತದೇಹ ಕಣ್ಣಿಗೆ ಬಿದ್ದಿದೆ. ತಕ್ಷಣವೇ ಕುಟುಂಬಸ್ಥರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಹಶಿಲ್ದಾರ್ ಸಮ್ಮುಖದಲ್ಲಿ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇನ್ನು ಆರೋಪಿ ಪತ್ತೆಗೆ 2 ವಿಶೇಷ ತಂಡ ರಚನೆ ಮಾಡಲಾಗಿದೆ. ಈ ಕುರಿತು ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ವೇದಿಕೆಯಲ್ಲೇ ಕುಸಿದು ಬಿದ್ದು ಹನುಮ ವೇಷಧಾರಿ ನಿಧನ

    ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿರುವ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಜನವರಿ 20 ರಂದು ದೀಪಿಕಾ ಶಾಲೆಗೆ ಹೋಗಿ ಬರುತ್ತೇನೆ ಎಂದು ಕೆಲಸಕ್ಕೆ ತೆರಳಿದ್ದರು. ಸಂಜೆಯಾದರೂ ಮಗಳು ಮನೆಗೆ ಬಾರದೇ ಇದ್ದಾಗ ಆತಂಕಗೊಂಡ ತಂದೆ ವೆಂಕಟೇಶ್ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ಸಹ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಇದನ್ನೂ ಓದಿ: ರೀಲ್ಸ್ ಮಾಡ್ತಾ ಸೋಶಿಯಲ್ ಮೀಡಿಯಾದಲ್ಲಿ ಫುಲ್‌ ಆಕ್ಟೀವ್ ಆಗಿದ್ದ ಶಿಕ್ಷಕಿ – ಸಾವಿನ ಸುತ್ತ ಅನುಮಾನಗಳ ಹುತ್ತ!

  • ರೀಲ್ಸ್ ಮಾಡ್ತಾ ಸೋಶಿಯಲ್ ಮೀಡಿಯಾದಲ್ಲಿ ಫುಲ್‌ ಆಕ್ಟೀವ್ ಆಗಿದ್ದ ಶಿಕ್ಷಕಿ – ಸಾವಿನ ಸುತ್ತ ಅನುಮಾನಗಳ ಹುತ್ತ!

    ರೀಲ್ಸ್ ಮಾಡ್ತಾ ಸೋಶಿಯಲ್ ಮೀಡಿಯಾದಲ್ಲಿ ಫುಲ್‌ ಆಕ್ಟೀವ್ ಆಗಿದ್ದ ಶಿಕ್ಷಕಿ – ಸಾವಿನ ಸುತ್ತ ಅನುಮಾನಗಳ ಹುತ್ತ!

    ಮಂಡ್ಯ: ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಶಿಕ್ಷಕಿ (Teacher) ದೀಪಿಕಾ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ.

    ರೀಲ್ಸ್‌ ಮಾಡಿಕೊಂಡು ಸೋಶಿಯಲ್‌ ಮೀಡಿಯಾದಲ್ಲಿ (Social Media) ಫುಲ್‌ ಆಕ್ಟೀವ್‌ ಆಗಿದ್ದ ಶಿಕ್ಷಕಿ ಇದ್ದಕ್ಕಿದ್ದಂತೆ ಶವವಾಗಿ ಪತ್ತೆಯಾಗಿದ್ದು, ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಅಲ್ಲದೇ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಯಾರೋ ದುಷ್ಕರ್ಮಿಗಳು ಕೊಲೆಗೈದು ಮೃತದೇಹ ಹೂತಿಟ್ಟಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.

    ಏನಿದು ಘಟನೆ?
    ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಮಹಿಳೆಯೊಬ್ಬರು (Women) (ಶಿಕ್ಷಕಿಯೂ ಹೌದು) ಮೂರೇ ದಿನಗಳಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೀಪಿಕಾ (28) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಶಿಕ್ಷಕಿ ಅನುಮಾನಾಸ್ಪದ ಸಾವು – ಮಣ್ಣಿನಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಶವ ಪತ್ತೆ

    ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಗಿರುವ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಜನವರಿ 20 ರಂದು ದೀಪಿಕಾ ಶಾಲೆಗೆ ಹೋಗಿ ಬರುತ್ತೇನೆ ಎಂದು ಕೆಲಸಕ್ಕೆ ತೆರಳಿದ್ದರು. ಸಂಜೆಯಾದರೂ ಮಗಳು ಮನೆಗೆ ಬಾರದೇ ಇದ್ದಾಗ ಆತಂಕಗೊಂಡ ತಂದೆ ವೆಂಕಟೇಷ್‌ ಮೇಲುಕೋಟೆ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಚೀನಾದಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪನ – ದೆಹಲಿಯಲ್ಲೂ ಕಂಪಿಸಿದ ಭೂಮಿ, ಬೆಚ್ಚಿಬಿದ್ದ ಜನ

    ಈ ಸಂಬಂಧ ಪೊಲೀಸರು ಸಹ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಸೋಮವಾರ ಸಂಜೆ ಮೇಲುಕೋಟೆಯ ಬೆಟ್ಟದ ತಪ್ಪಲಿನಲ್ಲಿ ಹದ್ದು, ಕಾಗೆ ಹಾರಾಡುತ್ತಿರುವುದು, ದುರ್ವಾಸನೆ ಬೀರುತ್ತಿರುವುದನ್ನು ಕಂಡು ಸ್ಥಳೀಯರು ಸಂಶಯಗೊಂಡಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹೂತಿಟ್ಟಿದ್ದ ಶವವನ್ನು ತಹಶೀಲ್ದಾರ್ ಸಮ್ಮುಖದಲ್ಲಿ ಹೊರತೆಗೆದಿದ್ದಾರೆ. ಬಳಿಕ ಮಂಡ್ಯದ ಎಸ್ಪಿ ಯತೀಶ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ.

  • ನಾಪತ್ತೆಯಾಗಿದ್ದ ಶಿಕ್ಷಕಿ ಅನುಮಾನಾಸ್ಪದ ಸಾವು – ಮಣ್ಣಿನಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಶವ ಪತ್ತೆ

    ನಾಪತ್ತೆಯಾಗಿದ್ದ ಶಿಕ್ಷಕಿ ಅನುಮಾನಾಸ್ಪದ ಸಾವು – ಮಣ್ಣಿನಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಶವ ಪತ್ತೆ

    ಮಂಡ್ಯ: ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಮಹಿಳೆಯೊಬ್ಬರು (ಶಿಕ್ಷಕಿಯೂ ಹೌದು) ಕೆಲ ದಿನಗಳಲ್ಲೇ ಅನುಮಾನಾಸ್ಪದ ಸಾವಿಗೀಡಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ (Melukote) ನಡೆದಿದೆ.

    ನಾಪತ್ತೆಯಾದ ಮಹಿಳೆಯ (Women) ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಇದನ್ನೂ ಓದಿ: ಲವ್ ಜಿಹಾದ್ ಆರೋಪ – ಮಂಡ್ಯದ ಹಿಂದೂ ಬಾಲಕಿ ಜೊತೆ ಯುವಕ ಪರಾರಿ!

    ಮೃತ ಮಹಿಳೆಯನ್ನು ದೀಪಿಕಾ (28) ಎಂದು ಗುರುತಿಸಲಾಗಿದೆ. ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಗಿರುವ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

    ಜನವರಿ 20 ರಂದು ದೀಪಿಕಾ ಶಾಲೆಗೆ ಹೋಗಿ ಬರುತ್ತೇನೆ ಎಂದು ಕೆಲಸಕ್ಕೆ ತೆರಳಿದ್ದರು. ಅದೇ ದಿನ ಮಧ್ಯಾಹ್ನದ ವೇಳೆಗೆ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಅಂದು ಸಂಜೆ ಕುಟುಂಬಸ್ಥರು ಮೇಲುಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು ಸೋಮವಾರ ಸಂಜೆ ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಶವ ಪತ್ತೆಹಚ್ಚಿದ್ದಾರೆ. ಸ್ಥಳಕ್ಕೆ ಮಂಡ್ಯ ಎಸ್‌ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಕ್ಷಕಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಕ್ರಿಯಾಶೀಲರಾಗಿದ್ದರು ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ದಿನವೇ ಮಂಡ್ಯದಲ್ಲೂ ರಾಮಮಂದಿರ ಲೋಕಾರ್ಪಣೆ

  • ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಮುಖ್ಯ ಶಿಕ್ಷಕನ ವಿರುದ್ಧ ಕೇಸ್

    ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಮುಖ್ಯ ಶಿಕ್ಷಕನ ವಿರುದ್ಧ ಕೇಸ್

    ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕ ಶಿಕ್ಷಕ ಹಣಮೇಗೌಡನ ವಿರುದ್ಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅಡಿ ಕೇಸ್ ದಾಖಲಾಗಿದೆ.

    ಕಾಮುಕ ಶಿಕ್ಷಕ ಹಣಮೇಗೌಡ ಎರಡ್ಮೂರು ವರ್ಷಗಳಿಂದ ವಿದ್ಯಾರ್ಥಿಯರಿಗೆ ಲೈಂಗಿಕ ಕಿರುಕುಳ (Sexual Harassment) ನೀಡ್ತಿದ್ದ. ಈಗಾಗಲೇ ಅನುಚಿತ ವರ್ತನೆ ಆರೋಪದಡಿ ಶಿಕ್ಷಕ ಹಣಮೇಗೌಡನನ್ನು ಜಿಲ್ಲಾ ಪಂಚಾಯತಿ ಸಿಇಓ ಗರೀಮಾ ಪನ್ವಾರ್ ಅಮಾನತು ಮಾಡಿ ಆದೇಶಿಸಿದ್ರು. ಅಲ್ಲದೇ ಇದೇ ಘಟನೆಗೆ ಸಂಬಂಧಿಸಿದಂತೆ ನಾಲ್ಕು ಜನ ಶಿಕ್ಷಕ ಇಲಾಖೆ ಅಧಿಕಾರಿಗಳ ತಂಡದಿಂದ ಶಾಲೆಗೆ ಭೇಟಿ ವಿದ್ಯಾರ್ಥಿನಿಯರಿಂದ ಮಾಹಿತಿ ಸಂಗ್ರಹಿಸಲಾಗಿತ್ತು.

    ಅಧಿಕಾರಿಗಳ ತಂಡದ ಭೇಟಿ ವೇಳೆ ಶಾಲೆಯ ವಿದ್ಯಾರ್ಥಿನಿಯರು (Students) ಶಿಕ್ಷಕನ ಕರಾಳ ಮುಖ ಅನಾವರಣ ಮಾಡಿದ್ರು. ಲೈಂಗಿಕ ಕಿರುಕುಳ ನೀಡಿದ್ದರ ಬಗ್ಗೆ ಕಣ್ಣೀರಾಕುತ್ತಲೇ ಅಧಿಕಾರಿಗಳ ಮುಂದೆ ಎಲ್ಲಾ ವಿಚಾರವನ್ನ ವಿದ್ಯಾರ್ಥಿನಿಯರು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ರು. ಪರಿಶೀಲನೆ ವರದಿಯ ಆಧಾರದ ಮೇಲೆ ಯಾದಗಿರಿ ಡಿಡಿಪಿಐ ಮಂಜುನಾಥ ಎಚ್.ಟಿ ಅವರಿಂದ ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಲಾಗಿದೆ. ಇದನ್ನೂ ಓದಿ: ಹೊಸಪೇಟೆಯ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ- ನಾಲ್ವರು ಮಹಿಳೆಯರ ರಕ್ಷಣೆ

  • ಶಿಕ್ಷಕಿ ಸಾವು ಪ್ರಕರಣಕ್ಕೆ ಟ್ವಿಸ್ಟ್ – ಕೊಲೆಗೈದು ಪರಾರಿಯಾಗಿದ್ದ ಆರೋಪಿ ಪೊಲೀಸರ ಅತಿಥಿ

    ಶಿಕ್ಷಕಿ ಸಾವು ಪ್ರಕರಣಕ್ಕೆ ಟ್ವಿಸ್ಟ್ – ಕೊಲೆಗೈದು ಪರಾರಿಯಾಗಿದ್ದ ಆರೋಪಿ ಪೊಲೀಸರ ಅತಿಥಿ

    ಧಾರವಾಡ: ಇಲ್ಲಿನ ಓಂನಗರದಲ್ಲಿ ಇತ್ತೀಚೆಗಷ್ಟೇ ನಿವೃತ್ತ ಶಿಕ್ಷಕಿಯೊಬ್ಬರು (Teacher) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣವನ್ನು ಪೊಲೀಸರು (Police) ಭೇದಿಸಿದ್ದಾರೆ.

    ಗಿರಿಜಾ ನಡೂರಮಠ (63) ಎಂಬ ನಿವೃತ್ತ ಶಿಕ್ಷಕಿಯ ಶವ ಕೊಳೆತ ಸ್ಥಿತಿಯಲ್ಲಿ ಡಿ.15 ರಂದು ಅವರ ಮನೆಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಇದು ಸಹಜ ಸಾವು ಅಥವಾ ಆತ್ಮಹತ್ಯೆ ಇರಬಹುದು ಎಂದು ಎಲ್ಲರೂ ಊಹಿಸಿದ್ದರು. ಇದೀಗ ವಿದ್ಯಾಗಿರಿ ಠಾಣೆಯ ಪೊಲೀಸರು ಇದು ಕೊಲೆ ಎಂದು ಸಾಬೀತುಪಡಿಸಿದ್ದಾರೆ. ಇದನ್ನೂ ಓದಿ: ಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಬಿದ್ದು ಟೆಕ್ಕಿ ದುರ್ಮರಣ

    ಗಿರಿಜಾ ಅವರೊಂದಿಗೆ ಅಮರಗೋಳದ ಮಂಜುನಾಥ ದಂಡಿನ ಎಂಬಾತ ಹಣದ ವ್ಯವಹಾರ ಇಟ್ಟುಕೊಂಡಿದ್ದ. ಅವರಿಗೆ ಸುಮಾರು 10 ಲಕ್ಷ ರೂ. ಹಣ ಕೊಡಬೇಕಾಗಿತ್ತು. ಇದೇ ಕಾರಣಕ್ಕೆ ಗಿರಿಜಾ ಅವರನ್ನು ಆತ ಹತ್ಯೆ ಮಾಡಿ ಅಲ್ಲಿಂದ ಪರಾರಿಯಾಗಿದ್ದ ಎಂದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ.

    ಆರೋಪಿ ಮಂಜುನಾಥ್ ವೇಲ್‍ನಿಂದ ಶಿಕ್ಷಕಿಯ ಕತ್ತು ಬಿಗಿದು ಕೊಲೆಗೈದಿದ್ದಾನೆ. ಆದರೆ ಕೊಲೆ ಎಂದು ಯಾವುದೇ ಗುರುತು ಆರಂಭದಲ್ಲಿ ಗೊತ್ತಾಗಿರಲಿಲ್ಲ. ದೇಹವನ್ನು ಪರೀಕ್ಷಿಸಿದಾಗ ಕುತ್ತಿಗೆಯ ಭಾಗದಲ್ಲಿ ಸಣ್ಣ ಕಲೆ ಕಂಡಿದ್ದು ಇದನ್ನೇ ಇಟ್ಟುಕೊಂಡು ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

    ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ನಿದ್ದೆ ಮಂಪರಿನಲ್ಲಿ ಟೀ ಅಂಗಡಿಗೆ ಟ್ರಕ್‌ ನುಗ್ಗಿಸಿದ ಚಾಲಕ- ಐವರ ದುರ್ಮರಣ

  • ಕ್ರೀಡಾ ವಿದ್ಯಾರ್ಥಿಯೊಂದಿಗೆ ಕಾರಿನಲ್ಲಿ ಸೆಕ್ಸ್‌ – ಶಿಕ್ಷಕಿಯನ್ನ ರೆಡ್‌ಹ್ಯಾಂಡಾಗಿ ಹಿಡಿದು ಪೊಲೀಸರಿಗೊಪ್ಪಿಸಿದ ತಾಯಿ

    ಕ್ರೀಡಾ ವಿದ್ಯಾರ್ಥಿಯೊಂದಿಗೆ ಕಾರಿನಲ್ಲಿ ಸೆಕ್ಸ್‌ – ಶಿಕ್ಷಕಿಯನ್ನ ರೆಡ್‌ಹ್ಯಾಂಡಾಗಿ ಹಿಡಿದು ಪೊಲೀಸರಿಗೊಪ್ಪಿಸಿದ ತಾಯಿ

    ವಾಷಿಂಗ್ಟನ್‌: ಕ್ರೀಡಾ ಅಭ್ಯಾಸದಲ್ಲಿ ತೊಡಗಿದ್ದ ವಿದ್ಯಾರ್ಥಿಯೊಂದಿಗೆ ಶಿಕ್ಷಕಿಯೊಬ್ಬಳು (US Teacher) ಲೈಂಗಿಕ ಕ್ರಿಯೆ ನಡೆಸುತ್ತಿದ್ದ ವೇಳೆ ವಿದ್ಯಾರ್ಥಿಯ ತಾಯಿ ರೆಡ್‌ಹ್ಯಾಂಡಾಗಿ ಹಿಡಿದು ಶಿಕ್ಷಿಯನ್ನ ಪೊಲೀಸರಿಗೆ (US Police) ಒಪ್ಪಿಸಿರುವ ಘಟನೆ ಅಮೆರಿಕದ ಕೌಂಟಿಯಲ್ಲಿ ನಡೆದಿದೆ.

    2008ರಲ್ಲಿ ಪರಿಚಯಿಸಲಾದ ಲೈಫ್‌360 ಅಪ್ಲಿಕೇಷನ್‌ (Life360 Tracking App) ಬಳಿಸಿ ಅಮೆರಿಕದ ಮಹಿಳೆಯೊಬ್ಬರು ತನ್ನ ಮಗ ಶಿಕ್ಷಕಿಯೊಂದಿಗೆ ಅನೈಕ ಸಂಬಂಧ ಇಟ್ಟುಕೊಂಡಿರುವುದನ್ನ ಪತ್ತಹೆಚ್ಚಿದ್ದಾರೆ. 2008ರಲ್ಲಿ ಪರಿಚಯಿಸಲಾದ ಈ ಆ್ಯಪ್‌ ಫ್ಯಾಮಿಲಿ ಸೋಶಿಯಲ್‌ ನೆಟ್‌ವರ್ಕಿಂಗ್‌ ಅಪ್ಲಿಕೇಶನ್‌ ಆಗಿದ್ದು. ಮತ್ತೊಬ್ಬ ವ್ಯಕ್ತಿಯ ಇರುವಿಕೆಯನ್ನು ಗುರುತಿಸುತ್ತದೆ. ಜೊತೆಗೆ ವ್ಯಕ್ತಿ ಎಲ್ಲಿದ್ದಾರೆ? ಯಾರ ಜೊತೆ ಇದ್ದಾರೆ ಎಂಬುದನ್ನ ತಿಳಿಯುವುದಕ್ಕೂ ಅನುವು ಮಾಡಿಕೊಡುತ್ತದೆ. ಈ ಅಪ್ಲಿಕೇಶನ್‌ ಸಹಾಯದಿಂದಲೇ ತನ್ನ ಮಗನೊಟ್ಟಿಗೆ ಲೈಂಗಿಕ ಸಂಪರ್ಕ ಹೊಂದಿದ್ದ ಶಿಕ್ಷಕಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಬಸ್ಸಿನಲ್ಲೇ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

    18 ವರ್ಷದ ವಿದ್ಯಾರ್ಥಿ ಸೌತ್ ಮೆಕ್ಲೆನ್‌ಬರ್ಗ್ ಹೈಸ್ಕೂಲ್‌ನ 26 ವರ್ಷದ ಶಿಕ್ಷಕಿ ಗೇಬ್ರಿಯೆಲಾ ಕಾರ್ಟಯಾಳ ಜೊತೆ ಲೈಂಗಿಕ ಸಂಪರ್ಕ ಹೊಂದಿದ್ದನು. ರಗ್ಬಿ ಕ್ರೀಡಾಭ್ಯಾಸ ನಡೆಸುತ್ತಿದ್ದ ವಿದ್ಯಾರ್ಥಿ ಪ್ರತಿದಿನವೂ ತಡವಾಗಿ ಬರುತ್ತಿದ್ದನು. ಇದರಿಂದ ಅನುಮಾನಗೊಂಡ ತಾಯಿ ಆತನನ್ನು ಹಿಂಬಾಲಿಸಲು ಶುರು ಮಾಡಿದಳು. ಅಂದೊಂದು ದಿನ ಕೌಂಟಿ ನಗರದ ಉದ್ಯಾನವೊಂದರಲ್ಲಿ ಶಿಕ್ಷಕ್ಷಿ ಜೊತೆ ಕಾರಿನಲ್ಲೇ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದನು. ಈ ವೇಳೆ ಲೈಫ್‌360 ಅಪ್ಲಿಕೇಷನ್‌ ಬಳಿಸಿ ಹಿಂಬಾಲಿಸಿಕೊಂಡು ಬಂದಿದ್ದ ತಾಯಿ ರೆಡ್‌ಹ್ಯಾಂಡಾಗಿ ಹಿಡಿದು ಶಿಕ್ಷಕಿಯನ್ನ ಪೊಲೀಸರಿಗೆ ಒಪ್ಪಿದ್ದಾರೆ. ಇದನ್ನೂ ಓದಿ: Vijay Diwas: 1971 ರ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಗೆಲ್ಲಿಸಿದ ವೀರಯೋಧರಿಗೆ ಮೋದಿ ನಮನ

    ಬಳಿಕ ಶಿಕ್ಷಕಿ ಹಿನ್ನೆಲೆಯನ್ನು ಪರಿಶೀಲಿಸಿದಾಗ ಅಂದು ಆಕೆ ಥ್ಯಾಂಕ್ಸ್‌ಗಿವಿಂಗ್‌ ವಿಶೇಷ ಸಂದರ್ಭದ ರಜೆ ತೆಗೆದುಕೊಂಡಿದ್ದಳು. ಈ ವೇಳೆ ವಿದ್ಯಾರ್ಥಿ ಜೊತೆಗೆ ಅನುಚಿತ ವರ್ತನೆಯಲ್ಲಿ ತೊಡಗಿದ್ದಳು ಎಂದು ತಿಳಿದುಬಂದಿದೆ. ಅಪರಾಧ ಸಾಬೀತಾದ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: KSRTC ಟ್ರೇಡ್‍ಮಾರ್ಕ್ ಉಳಿಸಿಕೊಂಡ ಕರ್ನಾಟಕ- ಕಾನೂನು ಸಮರ ಸೋತ ಕೇರಳ 

  • ಲೋಕಾಯುಕ್ತ ಬಲೆಗೆ ಬಿದ್ದ ಉಪನ್ಯಾಸಕನಿಂದ ಶಿಕ್ಷಕರಿಗೆ ಕೋಟ್ಯಂತರ ರೂ. ಟೋಪಿ!

    ಲೋಕಾಯುಕ್ತ ಬಲೆಗೆ ಬಿದ್ದ ಉಪನ್ಯಾಸಕನಿಂದ ಶಿಕ್ಷಕರಿಗೆ ಕೋಟ್ಯಂತರ ರೂ. ಟೋಪಿ!

    ಮೈಸೂರು: ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದ ಮೈಸೂರಿನ ಉಪನ್ಯಾಸಕನ (Lecturer) ಮತ್ತೊಂದು ಕರ್ಮಕಾಂಡ ಬಯಲಾಗಿದೆ. ದಾಳಿಯ ನಂತರ ಲೋಕಾಯುಕ್ತ ಹೇಳಿದ್ದು 8 ಕೋಟಿ ರೂ. ಅಕ್ರಮ ಆಸ್ತಿ. ಆದರೆ ಈ ಉಪನ್ಯಾಸಕನಿಂದ ಶಿಕ್ಷಕರಿಗೆ 70 ಕೋಟಿ ವಂಚನೆ ನಡೆದಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

    40 ಲಕ್ಷ ರೂ. ಮೌಲ್ಯದ ಬರೋಬ್ಬರಿ 70 ನಿವೇಶನಗಳನ್ನು ಉಪನ್ಯಾಸಕ ಮಹದೇವಸ್ವಾಮಿ (Mahadevaswamy) ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಮಹದೇವಸ್ವಾಮಿ ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗದಲ್ಲಿದ್ದು, ಕರ್ನಾಟಕ ರಾಜ್ಯ ಕಾಲೇಜು ಅಧ್ಯಾಪಕರು ಹಾಗೂ ಶಾಲಾ ಶಿಕ್ಷಕರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಕೂಡ ಆಗಿದ್ದಾರೆ.  ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಕಡಲೆಕಾಯಿ ಪರಿಷೆಯಲ್ಲಿ ಹಣ ವಸೂಲಿ ಮಾಡುತ್ತಿದ್ದವರ ಮೇಲೆ ಕ್ರಮ: ರಾಮಲಿಂಗಾ ರೆಡ್ಡಿ ಭರವಸೆ

     

    ಸಂಘದ ಅಧ್ಯಕ್ಷನಾಗಿ ಶಿಕ್ಷಕರಿಗೆ ನೀಡಬೇಕಾದ ನಿವೇಶನಗಳನ್ನು ಪತ್ನಿ, ಮಕ್ಕಳು ಸಂಬಂಧಿಕರಿಗೆ ಬರೆದುಕೊಡಲಾಗಿದೆ ಎಂದು ಆರೋಪಿಸಲಾಗುತ್ತಿದೆ. ಮೈಸೂರಿನ ಹೊರ ವಲಯದ ಗುರುಕುಲ ಬಡಾವಣೆಯಲ್ಲಿ 70 ಶಿಕ್ಷಕರಿಗೆ ಮೋಸವಾಗಿದ್ದು ಸರಾಸರಿ 40 ಲಕ್ಷ ರೂ. ಮೌಲ್ಯದ 70 ನಿವೇಶನಗಳಿಂದ 28 ಕೋಟಿ ರೂ. ಮೋಸವಾಗಿದೆ.

    ಮತ್ತೊಂದು ಬಡಾವಣೆ ನಿರ್ಮಾಣಕ್ಕೆ 2014 ರಿಂದ 40 ಕೋಟಿ ರೂ. ಹಣ ವಸೂಲಿ ಮಾಡಿದ್ದು ಅದಕ್ಕಾಗಿ ಭೂಮಿಯನ್ನೇ ಖರೀದಿ ಮಾಡಿಲ್ಲ. ಪೊಲೀಸರು, ಸಹಕಾರ ಇಲಾಖೆ ಯಾರಿಗೂ ದೂರು ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗುರುಕುಲ ಬಡಾವಣೆ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಆರೋಪಿಸಿದ್ದಾರೆ.

     

  • ಹೋಂ ವರ್ಕ್ ಮಾಡಿಲ್ಲವೆಂದು ಕೈಗೆ ರಾಡ್‍ನಿಂದ ಹೊಡೆದ್ರಾ ಶಿಕ್ಷಕಿ?

    ಹೋಂ ವರ್ಕ್ ಮಾಡಿಲ್ಲವೆಂದು ಕೈಗೆ ರಾಡ್‍ನಿಂದ ಹೊಡೆದ್ರಾ ಶಿಕ್ಷಕಿ?

    – ವಿದ್ಯಾರ್ಥಿ ಕೈಗೆ ಬಿತ್ತು 6 ಸ್ಟಿಚ್

    ಬೆಂಗಳೂರು: ನಗರದ ಖಾಸಗಿ ಶಾಲೆಯಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಹೋಂ ವರ್ಕ್ (Home Work) ಮಾಡಿಲ್ಲವೆಂದು ವಿದ್ಯಾರ್ಥಿಗೆ ಥಳಿಸಿದ ಆರೋಪ ಕೇಳಿಬಂದಿದೆ.

    ಈ ಘಟನೆ ಮೂರು ದಿನಗಳ ಹಿಂದೆ ನಗರದ ಖಾಸಗಿ ಶಾಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಏಳನೇ ತರಗತಿ ವಿದ್ಯಾರ್ಥಿ ಮಹಮ್ಮದ್ ಫರ್ದೀನ್‍ಗೆ ಹೋಂ ವರ್ಕ್ ಮಾಡಿಲ್ಲವೆಂದು ಶಾಲಾ ಶಿಕ್ಷಕಿ ಕೈಗೆ ರಾಡ್‍ನಲ್ಲಿ ರಕ್ತ ಬರುವಂತೆ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.

    ಇತ್ತ ವಿದ್ಯಾರ್ಥಿ ಕೈಗೆ ಗಂಭೀರ ಗಾಯಗಳಾಗಿದ್ದು, ಹುಳಿಮಾವು ಸಾಯಿ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಫರ್ದಿನ್ ಕೈಗೆ ಆರು ಹೊಲಿಗೆ ಹಾಕಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿ, ಅಸೈನ್ಮೆಂಟ್ ಮಾಡಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿ ಮೇಲೆ ಹಲ್ಲೆ ಮಾಡಿದ್ದಾಗಿ ಆರೋಪಿಸಿದ್ದಾನೆ.

    ಶಾಲಾ ಆಡಳಿತ ಮಂಡಳಿಯಿಂದ ಪ್ರಕರಣ ಮುಚ್ಚಿ ಹಾಕಲು ಯತ್ನ ಮಾಡುವ ಆರೋಪವೂ ಕೇಳಿಬಂದಿದೆ.

  • ಶಿಕ್ಷಕನ ಅಪಹರಿಸಿ, ಬಂದೂಕಿನಿಂದ ಬೆದರಿಸಿ ಮಗಳೊಂದಿಗೆ ಮದುವೆ ಮಾಡಿಸಿದ ಕಿಡ್ನ್ಯಾಪರ್

    ಶಿಕ್ಷಕನ ಅಪಹರಿಸಿ, ಬಂದೂಕಿನಿಂದ ಬೆದರಿಸಿ ಮಗಳೊಂದಿಗೆ ಮದುವೆ ಮಾಡಿಸಿದ ಕಿಡ್ನ್ಯಾಪರ್

    ಪಾಟ್ನಾ: ಬಿಹಾರದಲ್ಲಿ (Bihar) ಶಿಕ್ಷಕನೊಬ್ಬನನ್ನು (Teacher) ಅಪಹರಿಸಿ, ಗನ್ ತೋರಿಸಿ ಬೆದರಿಸಿ ತನ್ನ ಮಗಳೊಂದಿಗೆ ಕಿಡ್ನ್ಯಾಪರ್ ಮದುವೆ (Mariiage) ಮಾಡಿಸಿರುವ ಘಟನೆಯೊಂದು ನಡೆದಿದೆ.

    ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಬಿಹಾರ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪಟೇಪುರ್‌ನ ರೇಪುರಾದಲ್ಲಿರುವ ಉತ್ಕ್ರಮಿತ್ ಮಧ್ಯ ವಿದ್ಯಾಲಯದಲ್ಲಿ ಹೊಸದಾಗಿ ನೇಮಕಗೊಂಡ ಶಿಕ್ಷಕ ಗೌತಮ್ ಕುಮಾರ್‌ನನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿಸಲಾಗಿದೆ.

    ಬುಧವಾರ ಗೌತಮ್ ಕುಮಾರ್ ಎಂದಿನಂತೆ ಶಾಲೆಗೆ ಹೋಗಿದ್ದಾಗ ಅಲ್ಲಿಗೆ ಬಂದ 3-4 ಜನರು ಆತನನ್ನು ಅಪಹರಿಸಿದ್ದಾರೆ. ಆತನಿಗೆ ಬಂದೂಕು ತೋರಿಸಿ, ಬೆದರಿಸಿ, ಅಪಹರಣವಾದ ಕೇವಲ 24 ಗಂಟೆಯಲ್ಲಿ ಕಿಡ್ನ್ಯಾಪರ್‌ನ ಮಗಳೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ.

    ಗಮನಾರ್ಹ ವಿಚಾರವೆಂದರೆ ಈ ರೀತಿ ಯುವಕರನ್ನು ಅಪಹರಣ ಮಾಡಿ ಮದುವೆ ಮಾಡುವುದು ಬಿಹಾರದಲ್ಲಿ ಸಾಮಾನ್ಯವಾಗಿದೆ. ಇದನ್ನು ‘ಪಕಡ್ವಾ ವಿವಾಹ’ ಎಂದು ಕರೆಯಲಾಗುತ್ತದೆ. ಹೆಚ್ಚಾಗಿ ಒಳ್ಳೆಯ ಹುದ್ದೆಗೇರಿದ ಯುವಕರನ್ನು ಈ ರೀತಿ ಅಪಹರಣ ಮಾಡಿ ತಮ್ಮ ಮಕ್ಕಳೊಂದಿಗೆ ಮದುವೆ ಮಾಡಿಸುತ್ತಾರೆ. ಆದರೆ ಮದುವೆ ಬಗ್ಗೆ ಯೋಚನೆಯೇ ಮಾಡಿರದ ಗೌತಮ್ ಕುಮಾರ್ ಈಗ ಅನಿರೀಕ್ಷಿತವಾಗಿ ಪಕಡ್ವಾ ವಿವಾಹಕ್ಕೆ ಒಳಗಾಗಿದ್ದಾನೆ.

    ಇತ್ತ ಗೌತಮ್ ಕುಮಾರ್ ಅಪಹರಣವಾಗುತ್ತಿದ್ದಂತೆ ಆತನ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಬುಧವಾರ ರಾತ್ರಿ ರಸ್ತೆ ತಡೆದು ಪ್ರತಿಭಟಿಸಿದ್ದಾರೆ. ಕಾಣೆಯಾಗಿದ್ದ ಶಿಕ್ಷಕನಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆಯನ್ನು ಮಾಡಿದ್ದಾರೆ. ಇದನ್ನೂ ಓದಿ: ಉತ್ತರಕಾಶಿ ಘಟನೆ ಕುರಿತು ಸಿನಿಮಾ: 14ಕ್ಕೂ ಹೆಚ್ಚು ಶೀರ್ಷಿಕೆ ನೋಂದಣಿ

    ಕುಮಾರ್‌ನ ಕುಟುಂಬ ರಾಜೇಶ್ ರೈ ಎಂಬ ವ್ಯಕ್ತಿಯ ಮೇಲೆ ಅಪಹರಣದ ಆರೋಪ ಹೊರಿಸಿದೆ. ರಾಜೇಶ್ ರೈ ಕುಟುಂಬ ಕುಮಾರ್‌ನನ್ನು ಬಲವಂತವಾಗಿ ಕರೆದೊಯ್ದು ತಮ್ಮ ಮಗಳು ಚಾಂದಿನಿಯೊಂದಿಗೆ ಮದುವೆ ಮಾಡಿದ್ದಾಗಿ ಆರೋಪಿಸಿದ್ದಾರೆ. ಈ ಹಿಂದೆ ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ್ದಕ್ಕೆ ಕುಮಾರ್‌ಗೆ ದೈಹಿಕ ಹಿಂಸೆ ನೀಡಿದ್ದಾಗಿಯೂ ತಿಳಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು ಅಪಹರಣಕಾರರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬಿಹಾರದಲ್ಲಿ ಪಕಡ್ವಾ ವಿವಾಹ ಸಾಮಾನ್ಯವಾಗಿದೆ. ಕಳೆದ ವರ್ಷ ಅನಾರೋಗ್ಯಕ್ಕೊಳಗಾದ ಪ್ರಾಣಿಯನ್ನು ಪರೀಕ್ಷಿಸಲು ಕರೆದಿದ್ದ ಪಶುವೈದ್ಯನನ್ನು ಮೂವರು ಅಪಹರಿಸಿ ಬೇಗುಸರಾಯ್‌ನಲ್ಲಿ ಬಲವಂತವಾಗಿ ಮದುವೆ ಮಾಡಿಸಿದ್ದರು. ಕೆಲವು ವರ್ಷಗಳ ಹಿಂದೆ ಬಿಹಾರದಲ್ಲಿ ಎಂಜಿನಿಯರ್‌ಗೆ ಸಂಬಂಧಿಸಿದ ಇಂತಹುದೇ ಘಟನೆ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿತ್ತು. ಬೊಕಾರೊ ಸ್ಟೀಲ್ ಪ್ಲಾಂಟ್‌ನಲ್ಲಿ ಜೂನಿಯರ್ ಮ್ಯಾನೇಜರ್ ಆಗಿದ್ದ 29 ವರ್ಷದ ವಿನೋದ್ ಕುಮಾರ್ ಎಂಬಾತನನ್ನು ಥಳಿಸಿ, ಪಾಟ್ನಾದ ಪಂಡರಕ್ ಪ್ರದೇಶದಲ್ಲಿ ಮಹಿಳೆಯನ್ನು ಬಲವಂತವಾಗಿ ವಿವಾಹವಾಗುವಂತೆ ಮಾಡಲಾಗಿತ್ತು. ಇದನ್ನೂ ಓದಿ: ರಷ್ಯಾದ ಮಹಿಳೆಯರು 8 ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರಿ: ಪುಟಿನ್‌ ಕರೆ

  • 7 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ – ಕಾಮುಕ ಶಿಕ್ಷಕ ಅರೆಸ್ಟ್

    7 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ – ಕಾಮುಕ ಶಿಕ್ಷಕ ಅರೆಸ್ಟ್

    ದಾವಣಗೆರೆ: 7 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗುತ್ತಿದ್ದ ಕಾಮುಕ ಶಿಕ್ಷಕನ್ನು ಬಂಧಿಸಿರುವ ಘಟನೆ ದಾವಣಗೆರೆ (Davanagere) ನಗರದ ಸರ್ಕಾರಿ ಶಾಲೆಯೊಂದರಲ್ಲಿ (Government School) ನಡೆದಿದೆ.

    ಅಪ್ರಾಪ್ತೆ ಮೇಲೆ ಕಾಮುಕ ಶಿಕ್ಷಕ ನಿರಂತರ ಅತ್ಯಾಚಾರ ಎಸಗುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ಬಾಲಕಿ ಅನಾರೋಗ್ಯಕ್ಕೆ (Illness) ತುತ್ತಾದಾಗ ಪ್ರಕರಣ ಬೆಳಕಿಗೆ ಬಂದಿದೆ.

    ದಾವಣಗೆರೆ ನಗರದ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಹಲವು ದಿನಗಳಿಂದ ಬಾಲಕಿ ಮೇಲೆ ಅತ್ಯಾಚಾರ ಎಸಗುತ್ತಿದ್ದ. ಯಾರಿಗೂ ಹೇಳದಂತೆ ಆಕೆಗೆ ಬೆದರಿಕೆ ಹಾಕಿದ್ದ. ಆದ್ರೆ ಕಳೆದ ಎರಡು ದಿನಗಳ ಹಿಂದೆ ಬಾಲಕಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ತಪಾಸಣೆ ವೇಳೆ ಆಕೆ ಮೇಲೆ ಅತ್ಯಾಚಾರವಾಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಧರ್ಮಸ್ಥಳಕ್ಕೆ ಹೊರಟ್ಟಿದ್ದ ಬಸ್‌ ಹಳ್ಳಕ್ಕೆ ಉರುಳಿಬಿದ್ದು ಮಹಿಳೆ ಸಾವು – ಐವರು ಗಂಭೀರ

    ಕೂಡಲೇ ಪೋಷಕರು ಕಾಮುಕ ಶಿಕ್ಷಕನ ವಿರುದ್ಧ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೋಷಕರ ದೂರಿನನ್ವಯ ಪೋಕ್ಸೋ ಪ್ರಕರಣದ ಅಡಿ ಕೇಸ್‌ ದಾಖಲಿಸಿದ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೆ ಒಳಗಾದ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ದೆಹಲಿಯಲ್ಲಿ ವಿಷವಾಗುತ್ತಿದೆಯಾ ಉಸಿರಾಡುವ ಗಾಳಿ? – ಪರಿಶೀಲನೆಗೆ 1,119 ಅಧಿಕಾರಿಗಳ 517 ತಂಡ ರಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]