ಬೆಂಗಳೂರು: ಒಳಮೀಸಲಾತಿ ಪ್ರಕ್ರಿಯೆ ಮುಗಿದ ಬಳಿಕ ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ (Teachers Recruitment) ಪ್ರಕ್ರಿಯೆ ಶುರು ಮಾಡಲಾಗುತ್ತದೆ. ಶಿಕ್ಷಕರ ನೇಮಕಾತಿಯಲ್ಲಿ ದೈಹಿಕ ಶಿಕ್ಷಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ.ಇದನ್ನೂ ಓದಿ: ಹೆಬ್ಬಾಳ ಫ್ಲೈಓವರ್ ಉದ್ಘಾಟಿಸಿದ ಡಿಸಿಎಂ – ಮೇಲ್ಸೇತುವೆಯಲ್ಲಿ ಡಿಕೆಶಿ ಬೈಕ್ ಓಡಿಸಿದ ಸ್ಟೈಲ್ ನೋಡಿ
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್‌ನ (JDS) ಭೋಜೇಗೌಡ ಅವರು ಪ್ರಶ್ನೆ ಕೇಳಿದರು. ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಕೊರತೆಯಿದೆ. 6ರಿಂದ 10ನೇ ತರಗತಿಗೆ ದೈಹಿಕ ಶಿಕ್ಷಣ ಒಂದು ವಿಷಯವಾಗಿ ಸೇರಿಸಬೇಕು ಎಂದು 2006-07ರಲ್ಲಿ ವರದಿಯನ್ನ ಸರ್ಕಾರ ಒಪ್ಪಿದೆ. 80% ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಕರು ಇಲ್ಲ. ದೈಹಿಕ ಶಿಕ್ಷಕರಿಲ್ಲದೆ ಫಿಟ್ ಇಂಡಿಯಾ, ಖೇಲೋ ಇಂಡಿಯಾ ಹೇಗೆ ಆಗುತ್ತದೆ. ಸಮಾರೋಪಾದಿಯಲ್ಲಿ ದೈಹಿಕ ಶಿಕ್ಷಕರ ನೇಮಕ ಆಗಬೇಕು. ಖಾಲಿ ಇರುವ ದೈಹಿಕ ಶಿಕ್ಷಕರ ಹುದ್ದೆಗೂ ಅತಿಥಿ ಶಿಕ್ಷಕರನ್ನ ನೇಮಕ ಮಾಡಿಕೊಳ್ಳಿ ಎಂದು ಒತ್ತಾಯಿಸಿದರು.
ಇದಕ್ಕೆ ಸಚಿವ ಮಧು ಬಂಗಾರಪ್ಪ ಉತ್ತರಿಸಿ, ದೈಹಿಕ ಶಿಕ್ಷಕರ ಕೊರತೆ ಇರುವುದು ಸತ್ಯ. ಈಗ ಆಗುವ ನೇಮಕಾತಿಯಲ್ಲಿ ಹೆಚ್ಚು ಪ್ರಾಮುಖ್ಯತೆ ದೈಹಿಕ ಶಿಕ್ಷಕರಿಗೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಒಳಮೀಸಲಾತಿ ಪ್ರಕ್ರಿಯೆ ಮುಗಿದ ಕೂಡಲೇ ನೇಮಕಾತಿ ಪ್ರಕ್ರಿಯೆ ಶುರು ಮಾಡ್ತೀವಿ. ದೈಹಿಕ ಶಿಕ್ಷಕ ಹುದ್ದೆಗೆ ಅತಿಥಿ ಶಿಕ್ಷಕರ ನೇಮಕ ಮಾಡುವ ಬಗ್ಗೆ ಪರಿಶೀಲನೆ ಮಾಡಲಾಗುತ್ತದೆ ಎಂದು ಹೇಳಿದರು.ಇದನ್ನೂ ಓದಿ: ಸಂಜೆಯೊಳಗೆ ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್ ಮಾಡಲು ಪರಮೇಶ್ವರ್ ಸೂಚನೆ
ಕೋಲ್ಕತ್ತಾ: ಶಿಕ್ಷಕರಿಂದ (Teachers) ಮಾತ್ರವಲ್ಲ ಯಾವುದೇ ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಪಶ್ಚಿಮ ಬಂಗಾಳದಲ್ಲಿ ಬೀಳಲ್ಲ ಎಂದು ಸಿಎಂ ಮಮತಾ ಬ್ಯಾನರ್ಜಿ (Mamata Banerjee) ವಾಗ್ದಾಳಿ ನಡೆಸಿದ್ದಾರೆ.
ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳದ (West Bengal) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕಾತಿಗೆ ನಡೆದಿದ್ದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ-2016 (SLST) ಅನ್ನು ಅನೂರ್ಜಿತಗೊಳಿಸಿ ಕೋಲ್ಕತ್ತಾ ಹೈಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಅಲ್ಲದೇ ಈ ಮೂಲಕ ಆಯ್ಕೆ ಮಾಡಲಾದ 25,753 ಶಿಕ್ಷಕರ ಹುದ್ದೆಯನ್ನು ವಜಾಗೊಳಿಸುವಂತೆ ಆದೇಶಿಸಿತು.
ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿರುವ ಮಮತಾ ಬ್ಯಾನರ್ಜಿ, 26,000 ಶಿಕ್ಷಕರನ್ನ ವಜಾಗೊಳಿಸಿದ್ದು, ಚುನಾವಣಾ ತಂತ್ರಗಾರಿಕೆಯ ಭಾಗ. ಪಶ್ಮಿಮ ಬಂಗಾಳದಲ್ಲಿ ಈ ಬಾರಿ ಶಿಕ್ಷಕರು ಮಾತ್ರವಲ್ಲ ಯಾವುದೇ ಸರ್ಕಾರಿ ನೌಕರರಿಂದಲೂ ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪಕ್ಷಗಳಿಗೆ ಒಂದೇ ಒಂದು ವೋಟು ಬೀಳಲ್ಲ. ಬಿಜೆಪಿ ನ್ಯಾಯಾಲಯವನ್ನು ಖರೀದಿಸಿದೆ. ಆದ್ರೆ ನನಗೆ ಸುಪ್ರೀಂ ಕೋರ್ಟ್‌ನಿಂದ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ವಿದೆ ಎಂದು ಹೇಳಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೋರ್ಟ್, ಸಿಬಿಐ, ಎನ್‌ಐಎ, ಬಿಎಸ್‌ಎಫ್ ಸೇರಿದಂತೆ ಮೊದಲಾದ ತನಿಖಾ ಸಂಸ್ಥೆಗಳನ್ನು ತನ್ನ ಅಧೀನದಲ್ಲಿಟುಕೊಂಡಿದೆ. ಇದು ಬಹಳ ದಿನ ನಡೆಯಲ್ಲ ಎಂದು ಕಿಡಿ ಕಾರಿದ್ದಾರೆ.
ಏನಿದು ಕೇಸ್?
ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕಾತಿಗೆ ನಡೆದಿದ್ದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ-2016 (SLST) ಅನ್ನು ಅನೂರ್ಜಿತಗೊಳಿಸಿ ಕೋಲ್ಕತ್ತಾ ಹೈಕೋರ್ಟ್ (Calcutta High Court) ಇತ್ತೀಚೆಗಷ್ಟೇ ಆದೇಶಿಸಿತ್ತು. ಅಷ್ಟೇ ಅಲ್ಲ, ಈ ಮೂಲಕ ಮಾಡಲಾದ ಎಲ್ಲಾ ನೇಮಕಾತಿಗಳನ್ನು ರದ್ದುಗೊಳಿಸುವಂತೆ ಆದೇಶಿಸಿದ್ದ ಕೋರ್ಟ್ ಕಾನೂನು ಬಾಹಿರವಾಗಿ ನೇಮಕಗೊಂಡ ಶಾಲಾ ಶಿಕ್ಷಕರು (Teachers Recruitment) 4 ವಾರಗಳಲ್ಲಿ ತಮ್ಮ ವೇತನ ಹಿಂದಿರುಗಿಸಬೇಕು ಎಂದೂ ಹೇಳಿದೆ. ಶಿಕ್ಷಕರಿಂದ ಹಣ ವಸೂಲಿ ಮಾಡುವ ಜವಾಬ್ದಾರಿಯನ್ನು ಆಯಾ ಜಿಲ್ಲಾ ವ್ಯಾಪ್ತಿಯ ಜಿಲ್ಲಾಧಿಕಾರಿಗಳಿಗೆ ಕೋರ್ಟ್ ವಹಿಸಿದೆ. ಇದರಿಂದ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ (Mamata Banerjee Govt.) ದೊಡ್ಡ ಹಿನ್ನಡೆಯಾಗಿತ್ತು.
ಶಿಕ್ಷಕರ ನೇಮಕಾತಿ ನಡೆದಿದ್ದು ಹೇಗೆ?
ಈ ಹಿಂದೆ 24,640 ಖಾಲಿ ಹುದ್ದೆಗಳಿಗೆ 23 ಲಕ್ಷ ಅಭ್ಯರ್ಥಿಗಳು SLST-2016 ಪರೀಕ್ಷೆ ಬರೆದಿದ್ದರು. ಆದ್ರೆ ಸರ್ಕಾರ 24,640 ಖಾಲಿ ಹುದ್ದೆಗಳಿಗೆ ಒಟ್ಟು 25,753 ನೇಮಕಾತಿ ಪತ್ರಗಳನ್ನು ನೀಡಲಾಗಿತ್ತು ಎಂದು ಅರ್ಜಿದಾರರ ಪರ ವಕೀಲ ಫಿರ್ದೌಸ್ ಶಮೀಮ್ ಆರೋಪಿಸಿದ್ದರು. ಈ ಅರ್ಜಿಯನ್ನು ಕೋರ್ಟ್ ವಿಚಾರಣೆ ನಡೆಸಿ, ನೇಮಕಾತಿಯನ್ನು ರದ್ದುಪಡಿಸಿತು.
ಪ್ರಕರಣ ಸಂಬಂಧ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕೋಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ವಿಭಾಗೀಯ ಪೀಠವನ್ನು ರಚಿಸಿದ್ದರು. 9, 10, 11, 12ನೇ ತರಗತಿಯ ಶಿಕ್ಷಕರು ಸಿ, ಡಿ ದರ್ಜೆ ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿದ 2016 ಎಎಲ್‌ಎಸ್‌ಟಿ ನೇಮಕಾತಿ ಬಗ್ಗೆ ನ್ಯಾಯಪೀಠ ಬಹಳಷ್ಟು ಅರ್ಜಿಗಳು ಮತ್ತು ಮನವಿಗಳನ್ನು ಆಲಿಸಿತ್ತು. ಸದ್ಯ ಕೋಲ್ಕತ್ತಾ ಕೋರ್ಟ್ ಆದೇಶ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
2019ರ ಚುನಾವಣೆಯಲ್ಲಿ 42 ಸ್ಥಾನಗಳ ಬಲಾ-ಬಲಾಯಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 18 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಈ ಬಾರಿ ಬಿಜೆಪಿ ಅಧಿಕ ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ.
– 25,000 ಶಿಕ್ಷಕರ ಕೆಲಸಕ್ಕೆ ಕುತ್ತು – ವೇತನ ಹಿಂದಿರುಗಿಸಲು 4 ವಾರಗಳ ಗಡುವು
ಕೋಲ್ಕತ್ತಾ: ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕಾತಿಗೆ ನಡೆದಿದ್ದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ-2016 (SLST) ಅನ್ನು ಅನೂರ್ಜಿತಗೊಳಿಸಿ ಕೋಲ್ಕತ್ತಾ ಹೈಕೋರ್ಟ್ (Calcutta High Court) ಆದೇಶಿಸಿದೆ.
ಅಷ್ಟೇ ಅಲ್ಲ, ಈ ಮೂಲಕ ಮಾಡಲಾದ ಎಲ್ಲಾ ನೇಮಕಾತಿಗಳನ್ನು ರದ್ದುಗೊಳಿಸುವಂತೆ ಆದೇಶಿರುವ ಕೋರ್ಟ್ ಕಾನೂನು ಬಾಹಿರವಾಗಿ ನೇಮಕಗೊಂಡ ಶಾಲಾ ಶಿಕ್ಷಕರು (Teachers Recruitment) 4 ವಾರಗಳಲ್ಲಿ ತಮ್ಮ ವೇತನ ಹಿಂದಿರುಗಿಸಬೇಕು ಎಂದೂ ಹೇಳಿದೆ. ಶಿಕ್ಷಕರಿಂದ ಹಣ ವಸೂಲಿ ಮಾಡುವ ಜವಾಬ್ದಾರಿಯನ್ನು ಆಯಾ ಜಿಲ್ಲಾ ವ್ಯಾಪ್ತಿಯ ಜಿಲ್ಲಾಧಿಕಾರಿಗಳಿಗೆ ಕೋರ್ಟ್ ವಹಿಸಿದೆ. ಇದರಿಂದ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ (Mamata Banerjee Govt.) ದೊಡ್ಡ ಹಿನ್ನಡೆಯಾಗಿದೆ. ಇದನ್ನೂ ಓದಿ: ಅಣಕು ಮತ ಎಣಿಕೆ ವೇಳೆ ಬಿಜೆಪಿಗೆ ಹೆಚ್ಚುವರಿ ಮತ – ವರದಿ ಸುಳ್ಳೆಂದ ಚುನಾವಣಾ ಆಯೋಗ
ನ್ಯಾಯಮೂರ್ತಿಗಳಾದ ದೇಬಂಗ್ಲು ಬಸಾಕ್ ಮತ್ತು ಮೊಹಮ್ಮದ್ ಶಬ್ಬರ್ ರಶೀದಿ ಅವರನ್ನೊಳಗೊಂಡ ವಿಭಾಗೀಯ ಪೀಠವು ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಕೈಗೊಳ್ಳಲು ಮತ್ತು 3 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿದೆ. ಜೊತೆಗೆ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗಕ್ಕೆ (WBSSC) ಹೊಸದಾಗಿ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಕೇಳಿದೆ. ಕೋಲ್ಕತ್ತಾ ಹೈಕೋರ್ಟ್‌ನ ಈ ಆದೇಶವನ್ನು ಸದ್ಯದಲ್ಲೇ ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: 14 ವರ್ಷದ ಅಪ್ರಾಪ್ತೆಯ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ಅನುಮತಿ
ಏನಿದು ಪ್ರಕರಣ?:
ಈ ಹಿಂದೆ 24.640 ಖಾಲಿ ಹುದ್ದೆಗಳಿಗೆ 23 ಲಕ್ಷ ಅಭ್ಯರ್ಥಿಗಳು SLST-2016 ಪರೀಕ್ಷೆ ಬರೆದಿದ್ದರು. ಆದ್ರೆ ಸರ್ಕಾರ 24,640 ಖಾಲಿ ಹುದ್ದೆಗಳಿಗೆ ಒಟ್ಟು 25,753 ನೇಮಕಾತಿ ಪತ್ರಗಳನ್ನು ನೀಡಲಾಗಿದೆ ಎಂದು ಅರ್ಜಿದಾರರ ಪರ ವಕೀಲ ಫಿರ್ದೌಸ್ ಶಮೀಮ್ ಆರೋಪಿಸಿದ್ದರು. ಈ ಅರ್ಜಿಯನ್ನು ಕೋರ್ಟ್ ಸೋಮವಾರ ವಿಚಾರಣೆ ನಡೆಸಿತು. ಕೋರ್ಟ್ ಆದೇಶದ ಬಳಿಕ ಈ ದಿನಕ್ಕಾಗಿ ನಾವು ಕಾಯುತ್ತಿದ್ದೆವು. ಹಲವು ವರ್ಷಗಳ ಹೋರಾಟದ ಬಳಿಕ ಕೊನೆಗೂ ನ್ಯಾಯ ಸಿಕ್ಕಿದೆ ಉದ್ಯೋಗ ಆಕಾಂಕ್ಷಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಶಿಕ್ಷಕರ ನೇಮಕಾತಿ (Teachers Recruitment) ವಿಳಂಬ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಕಳೆದ 4 ದಿನಗಳಿಂದ ಅಭ್ಯರ್ಥಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಸ್ಥಳಕ್ಕಾಗಮಿಸಿ ಭಾವಿ ಶಿಕ್ಷಕರನ್ನು ಭೇಟಿ ಮಾಡಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಪ್ರತಿಭಟನಾ ನಿರತ ಅಭ್ಯರ್ಥಿಗಳೊಂದಿಗೆ ಮಾತನಾಡಿದ ಮಧು ಬಂಗಾರಪ್ಪ, ಮೊದಲನೆಯದಾಗಿ ನಿಮ್ಮಲ್ಲಿ ನಾನು ಕ್ಷಮೆ ಕೇಳುತ್ತೇನೆ ನೀವೆಲ್ಲಾ ಮಕ್ಕಳನ್ನು ಕರೆದುಕೊಂಡು ಬರೋದು ಮನಸ್ಸಿಗೆ ನೋವಾಗುತ್ತದೆ. ಸರ್ಕಾರದ ಮೇಲೆ ಇಟ್ಟಿರೋ ನಂಬಿಕೆಯನ್ನು ನೀವು ದಯವಿಟ್ಟು ಕಳೆದುಕೊಳ್ಳಬೇಡಿ ಎಂದು ಕೇಳಿಕೊಂಡರು.
ನಮ್ಮ ತಂದೆಯವರು ಮುಖ್ಯಮಂತ್ರಿಯಾಗಿದ್ದಾಗ ಸಾಕಷ್ಟು ಕೆಲಸ ಮಾಡಿದ್ರು. ನಾನು ಕೋರ್ಟ್ಗೆ ಪ್ರಶ್ನೆ ಮಾಡಲು ಹೋಗಲ್ಲ. ನಿಮ್ಮ ಬಳಿ ಕೈ ಮುಗಿದು ಕೇಳಿಕೊಳ್ಳುತ್ತೇನೆ. ನೀವೆಲ್ಲರೂ ಇಲ್ಲಿಂದ ದಯಮಾಡಿ ಹೊರಡಿ. ಕೋರ್ಟ್ ಆದೇಶ ಬಂದ ತಕ್ಷಣ ನಾನು ನಿಮಗೆ ನೇಮಕಾತಿ ಮಾಡಿ ಕೊಡುತ್ತೇನೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: Karnataka Budget: 1 ರೂಪಾಯಿ ಬಂದಿದ್ಹೇಗೆ? ಹೋಗಿದ್ದು ಹೇಗೆ?
ಈ ವಿಚಾರ ಕೋರ್ಟ್‌ನಲ್ಲಿ ಇರುವುದರಿಂದ ಯಾವಾಗ ಈಡೇರುತ್ತದೆ ಎಂದು ನಾನು ನಿಮಗೆ ಹೇಳಲು ಸಾಧ್ಯವಿಲ್ಲ. ಒಳ್ಳೆಯ ವಕೀಲರನ್ನು ಕೊಟ್ಟಿದ್ದಾರೆ. ಕೋರ್ಟ್‌ನಿಂದ ಸ್ಟೇ ಇರುವುದರಿಂದ ಇದು ಅನ್ವಯವಾಗಲ್ಲ. ಕೋರ್ಟ್ ಪರಿಶೀಲನೆ ಮಾಡಿ ಎಂದು ಹೇಳಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಪ್ರತಿಭಟನೆ ಏಕೆ?
ಪರೀಕ್ಷೆ ನಡೆದು ಒಂದು ವರ್ಷ ಕಳೆದರೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಇನ್ನೂ ನೇಮಕಾತಿ ಆದೇಶ ಮತ್ತು ಸ್ಥಳ ನಿಯೋಜನೆ ಆಗಿಲ್ಲ. ಪರೀಕ್ಷೆ ಬರೆದಿದ್ದ 70 ಸಾವಿರ ಅಭ್ಯರ್ಥಿಗಳಲ್ಲಿ 13,352 ಜನ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಆ ಪೈಕಿ ನೇಮಕಾತಿಯಲ್ಲಿ ಕಾನೂನು ಗೊಂದಲವಿದೆ ಎಂದು ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದೇ ಕಾರಣದಿಂದಾಗಿ ಯಾವುದೇ ಕಾನೂನು ತೊಡಕಿಲ್ಲದೇ ಆಯ್ಕೆಯಾದ ಅಭ್ಯರ್ಥಿಗಳಿಗೂ ಸಮಸ್ಯೆಯಾಗುತ್ತಿದೆ. ಸರ್ಕಾರ ಕೂಡಲೇ ಸಮಸ್ಯೆಯನ್ನು ಪರಿಹರಿಸಿಕೊಡಬೇಕೆಂದು ಉತ್ತೀರ್ಣರಾದ ಅಭ್ಯರ್ಥಿಗಳು ಆಗ್ರಹಿಸಿದ್ದಾರೆ. ಇದನ್ನೂ ಓದಿ: Karnataka Budget 2023: ಸಿಎಂ ತವರು ಜಿಲ್ಲೆಗೆ ಸಿಕ್ಕಿದ್ದೇನು?
ಬೆಂಗಳೂರು: ಪದವೀಧರ ಪ್ರಾಥಮಿಕ ಶಿಕ್ಷಕರ (GPT) ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸಮಗ್ರ ಶಿಕ್ಷಣ ಕಚೇರಿಯಲ್ಲಿ ಸಚಿವ ಬಿ.ಸಿ.ನಾಗೇಶ್ (B.C.Nagesh) ಅವರು ಶುಕ್ರವಾರ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ಮಾಡಿದ್ದೇವೆ. 1:1 ಆಧಾರದಲ್ಲಿ ಪಟ್ಟಿ ರಿಲೀಸ್ ಮಾಡಲಾಗಿದೆ. ಎಲ್ಲರ ಆರೋಪಕ್ಕೆ ಇವತ್ತು ಉತ್ತರ ನೀಡಿದ್ದೇವೆ. ಅತ್ಯುತ್ತಮವಾಗಿ ಪರೀಕ್ಷೆ ನಡೆಸಿ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜನರ ಮುಂದೆ ಏಕೆ ರಾಜಕೀಯವಾಗಿ ಬೆತ್ತಲಾಗ್ತೀರಿ – ಕಾಂಗ್ರೆಸ್‌ಗೆ ಸುಧಾಕರ್ ತಿರುಗೇಟು
15 ಸಾವಿರ ಶಿಕ್ಷಕರ ನೇಮಕಾತಿಗೆ ಪರೀಕ್ಷೆ ಮಾಡಿದ್ದೆವು. 13,363 ಜನ 1:1 ಆಧಾರದಲ್ಲಿ ಅಭ್ಯರ್ಥಿಗಳು ಪಟ್ಟಿಯಲ್ಲಿ ಇದ್ದಾರೆ. ಕಲ್ಯಾಣ ಕರ್ನಾಟಕದಲ್ಲಿ 5 ಸಾವಿರ ಹುದ್ದೆ ಇಟ್ಟಿದ್ದೇವೆ. ಆದ್ರೆ ಅಲ್ಲಿ ಸ್ವಲ್ಪ ಕೊರತೆ ಆಗಿದೆ. 5 ಸಾವಿರ ಹುದ್ದೆ ಪೈಕಿ 4,187 ಪಟ್ಟಿ ರಿಲೀಸ್ ಆಗಿದೆ (ಕಲ್ಯಾಣ ಕರ್ನಾಟಕ). ಉಳಿದ ಭಾಗದಲ್ಲಿ 9,176 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
1,768 ಇಂಗ್ಲಿಷ್ ಅಭ್ಯರ್ಥಿಗಳು ಆಯ್ಕೆ ಆಗಿದೆ. ಗಣಿತ – 5,450 ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ. ಸಮಾಜ ವಿಜ್ಞಾನ- 4,521 ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ. ಜೀವ ವಿಜ್ಞಾನ- 1,624 ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ. ಒಟ್ಟು 15 ಸಾವಿರ ಪೋಸ್ಟ್‌ನಲ್ಲಿ 13,363 ಹುದ್ದೆಗೆ ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ, ಕಮಿಷನರ್ ಅನುಮತಿ ಇಲ್ಲದೆ ಮಾಡಲು ಆಗುತ್ತಾ?- ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಆಗ್ರಹ
ಯಾವುದೇ ತರಹದ ಗೊಂದಲ ಇಲ್ಲದೆ ಇಲಾಖೆ ಪರೀಕ್ಷೆ ಮಾಡಿದೆ. 3 ಜನ ತೃತೀತ ಲಿಂಗಿಗಳು ಶಿಕ್ಷಕರಾಗಿ ಆಯ್ಕೆ ಆಗಿದ್ದಾರೆ. ಇತಿಹಾಸದಲ್ಲಿ ಮೊದಲ ಬಾರಿಗೆ ತೃತೀಯ ಲಿಂಗಿಗಳು ಆಯ್ಕೆ ಆಗಿದ್ದಾರೆ. 10 ಜನ ಪರೀಕ್ಷೆ ಬರೆದಿದ್ದರು. ಅದರಲ್ಲಿ 3 ಜನ ಆಯ್ಕೆ ಆಗಿದ್ದಾರೆ. 34 ಜನ ಎಂಜಿನಿಯರ್ ಅಭ್ಯರ್ಥಿಗಳ ಪೈಕಿ 19 ಜನ ಎಂಜಿನಿಯರಿಂಗ್ ಅಭ್ಯರ್ಥಿಗಳು ಶಿಕ್ಷಕರಾಗಿ ಆಯ್ಕೆ ಆಗಿದ್ದಾರೆ. 8 ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಯಶಸ್ವಿಯಾಗಿ ಮಾಡಿದ್ದೇವೆ. ಫೆಬ್ರವರಿಯಲ್ಲಿ 2,500 ಹೈಸ್ಕೂಲ್ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಮಾಡ್ತೀವಿ ಎಂದಿದ್ದಾರೆ.
– ಐದೈದು ಖಾತೆ ಇಟ್ಕೊಂಡು ಕೂರೋದು ಸರಿಯಲ್ಲ
– ಈಶ್ವರಪ್ಪಗೆ ಸಚಿವ ಸ್ಥಾನ ಕೊಡಿ
ವಿಜಯಪುರ: ಪ್ರಧಾನಿ ಮೋದಿ (Naredra Modi) ಅವರು ಮುಖ್ಯಮಂತ್ರಿಯಾಗಿದ್ದಾಗ ಸಿಎಂ ಹುದ್ದೆ ಬಿಟ್ಟು ಬೇರೆ ಯಾವ ಖಾತೆಯನ್ನೂ ಅವರು ಹೊಂದಿರಲಿಲ್ಲ. ಹಾಗೆಯೇ ಬೊಮ್ಮಾಯಿ (Basavaraj Bommai) ಅವರು ಸಿಎಂ ಹುದ್ದೆ ಬಿಟ್ಟು ಉಳಿದೆಲ್ಲ ಖಾತೆಗಳನ್ನ ಹಂಚಿಕೆ ಮಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ಒತ್ತಾಯಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕೆಲವೊಂದು ಖಾಲಿ ಇರುವ ಖಾತೆಗಳನ್ನು ಸಿಎಂ ತಾವೇ ಇಟ್ಟುಕೊಂಡು ಕೂರಬಾರದು. ಸಚಿವ ಸಂಪುಟ ವಿಸ್ತರಣೆ ಮಾಡಬೇಕು. ಐದೈದು ಖಾತೆ ಒಬ್ಬರೇ ಇಟ್ಟುಕೊಂಡು ಕೂರೋದು ಸರಿಯಲ್ಲ. ಮೋದಿಯವರು ಸಿಎಂ ಆಗಿದ್ದಾಗ ಸಿಎಂ ಬಿಟ್ಟು ಬೇರೆ ಯಾವ ಖಾತೆಯನ್ನೂ ಇಟ್ಟುಕೊಂಡಿರಲಿಲ್ಲ. ಅದೇ ರೀತಿ ಬೊಮ್ಮಾಯಿ (Basavaraj Bommai) ಅವರು ಕೂಡ ಸಿಎಂ ಸ್ಥಾನ ಬಿಟ್ಟು ಉಳಿದೆಲ್ಲವುಗಳನ್ನ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನ್ಯೂಯಾರ್ಕ್‌ನಲ್ಲಿ ಚೀನಾದ ರಹಸ್ಯ ಪೊಲೀಸ್ ಠಾಣೆ ಕಾರ್ಯಾಚರಣೆ!
ಈಶ್ವರಪ್ಪನವರ (Eshwarappa) ಮೇಲೆ ಸುಳ್ಳು ಆರೋಪ ಮಾಡಿದ ಕಾರಣ ರಾಜಿನಾಮೆ ನೀಡಿದ್ದರು. ಈಗ ಅವರಿಗೂ ಸಚಿವ ಸ್ಥಾನ ನೀಡಬೇಕು. ಅದರೊಂದಿಗೆ ಬಸವರಾಜ ಹೊರಟ್ಟಿ (Basavaraj Horatti) ಅವರಿಗೂ ನೀಡಿದ್ದ ಭರವಸೆಯಂತೆ ಸಭಾಪತಿ ಸ್ಥಾನ ಕೊಡಬೇಕು. ಕೊಟ್ಟ ಮಾತಿನಂತೆ ನಡೆದುಕೊಳ್ಳದಿದ್ದರೆ ಪಕ್ಷದ ಮೇಲೆ ನಂಬಿಕೆ ಹೊರಟುಹೋಗುತ್ತದೆ ಎಂದು ಎಚ್ಚರಿಸಿದ್ದಾರೆ.
ಬೀದರ್‌ನ ಮರದಾಸಾದಲ್ಲಿ (Madrasa) ಆಯುಧ ಪೂಜೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಅಲ್ಲಿ ಅಂಬಾಭವಾನಿ ಗುಡಿ ಇದ್ದದ್ದು ಸತ್ಯ. ಅಲ್ಲಿ ಪೂಜೆ ಮಾಡಿದ್ದರಲ್ಲಿ ತಪ್ಪಿಲ್ಲ. ಹಲವು ವರ್ಷಗಳಿಂದಲೂ ಅಲ್ಲಿ ಪೂಜೆ ನಡೆದಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಐತಿಹಾಸಿಕ ಕಲ್ಯಾಣ ಪರ್ವ ಕಾರ್ಯಕ್ರಮ ಇಬ್ಭಾಗ – ಬಸವ ಭಕ್ತರು ಅಸಮಾಧಾನ
ಶಿಕ್ಷಕರ (Teachers) ಅಕ್ರಮ ನೇಮಕಾತಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಅವರ ಕಾಲದಲ್ಲಿ ಶಿಕ್ಷಕರನ್ನು ಅಕ್ರಮವಾಗಿ ನೇಮಕ ಮಾಡಿಕೊಳ್ಳಲಾಗಿದೆ. ಮೆರಿಟ್ ಇಲ್ಲ, ಅರ್ಜಿ ಇಲ್ಲ, ಡೈರೆಕ್ಟ್ ಸೆಲೆಕ್ಷನ್ ಮಾಡಿಕೊಂಡಿದ್ದಾರೆ. ಈ ಪ್ರಮಾದಿಂದಾಗಿ ಅವರನ್ನು ಬಂಧಿಸಿರುವುದು ಸರಿಯಾಗಿಯೇ ಇದೆ. ಸಿಒಡಿ ತನಿಖೆ ನಡೆಸಿ ಇದಕ್ಕೊಂದು ತಾರ್ಕಿಕ ಅಂತ್ಯ ಕೊಡಬೇಕೆಂದು ಒತ್ತಾಯಿಸಿದ್ದಾರೆ.
ಟಿಪ್ಪು ಮತಾಂಧ ರಾಜ: ಟಿಪ್ಪು ಹೆಸರಿಗೆ ಬದಲಾಗಿ ಒಡೆಯರ್ ಎಕ್ಸ್‌ಪ್ರೆಸ್ (Wodeyar Express) ಹೆಸರನ್ನು ಇಟ್ಟಿದ್ದು, ಒಳ್ಳೆಯ ವಿಚಾರ. ಟಿಪ್ಪು ಲಕ್ಷಾಂತರ ಹಿಂದೂಗಳನ್ನ ಕೊಲೆ ಮಾಡಿದ ಮತಾಂಧ ರಾಜ. ಹೈದರ್ ಅಲಿ ಒಡೆಯರ್ ಆಸ್ಥಾನಲ್ಲಿ ಸೈನಿಕನಾಗಿದ್ದ. ಅವರೆಲ್ಲಾ ಮೋಸ ಮಾಡಿದವರು. ಆ ರೈಲಿಗೆ ಟಿಪ್ಪು ಅಂತಾ ಹೆಸರಿಟ್ಟಿದ್ದೇ ತಪ್ಪು. ಒಡೆಯರ್ ಅವರ ಹೆಸರು ಇಟ್ಟಿದ್ದು ಒಳ್ಳೆಯದೇ ಆಯ್ತು ಎಂದು ಶ್ಲಾಘಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]