Tag: teachers

  • ರಾಜ್ಯದಲ್ಲಿ 13 ಸಾವಿರ ಶಿಕ್ಷಕರ ಕೊರತೆ ಇದೆ: ಸಚಿವ ನಾಗೇಶ್

    ರಾಜ್ಯದಲ್ಲಿ 13 ಸಾವಿರ ಶಿಕ್ಷಕರ ಕೊರತೆ ಇದೆ: ಸಚಿವ ನಾಗೇಶ್

    – ಶೀಘ್ರ 5,000 ಶಿಕ್ಷಕರ ನೇಮಕಕ್ಕೆ ಕ್ರಮ

    ಚಿಕ್ಕಬಳ್ಳಾಪುರ: ರಾಜ್ಯದಲ್ಲಿ 12 ರಿಂದ 13 ಸಾವಿರ ಶಿಕ್ಷಕರ ಕೊರತೆ ಇದೆ ಎಂದು ಚಿಕ್ಕಬಳ್ಳಾಪುರದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

    ನಗರದ ಅಗಲಗುರ್ಕಿ ಬಳಿಯ ಬಿಜಿಎಸ್ ಶಾಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ 12-13 ಸಾವಿರ ಮಂದಿ ಶಿಕ್ಷಕರ ಕೊರತೆ ಇದೆ. ಶಿಕ್ಷಕರ ಕೊರತೆಗೆ ಎರಡು ಪ್ರಮುಖ ಕಾರಣಗಳಿವೆ. ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಕಾರಣ ವರ್ಗಾವಣೆಗಳು ಆಗಲಿಲ್ಲ. ಕಳೆದ ವರ್ಷ ಪರೀಕ್ಷೆ ಮಾಡಿ 10,000 ಮಂದಿ ಶಿಕ್ಷಕರ ನೇಮಕಕ್ಕೆ ತಯಾರಿ ಮಾಡಲಾಗಿತ್ತು. ಪರೀಕ್ಷೆಯಲ್ಲಿ 3,000 ಮಂದಿ ಮಾತ್ರ ಅರ್ಹರಾದರು. ಮತ್ತೊಂದೆಡೆ ಕೋವಿಡ್ ಬಂದ ನಂತರ ಅರ್ಥಿಕ ವ್ಯವಸ್ಥೆ ನಿಧಾನ ಆಯಿತು. ಈಗ 5000 ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಶಿಕ್ಷಕರ ಕೊರತೆಯಿಂದ ಅತಿಥಿ ಶಿಕ್ಷಕರ ನೇಮಕಕ್ಕೆ ಅವಕಾಶ ಮಾಡಿಕೊಡಲಾಗಿದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆ ಆಗಿಲ್ಲ ಎಂದರು. ಇದನ್ನೂ ಓದಿ: ಸೆ.17 ರಿಂದ ಕೊಡಗಿನಲ್ಲಿ ಶಾಲಾ-ಕಾಲೇಜು ಆರಂಭ

    ಕೊರೊನಾ ಮೂರನೇ ಅಲೆ ಎಚ್ಚರಿಕೆ ಇರುವುದರಿಂದ ಪೂರ್ಣ ಪ್ರಮಾಣದ ಶಾಲೆಗಳ ಆರಂಭ ಆಗಿಲ್ಲ. ತಜ್ಞರ ಸಲಹಾ ಸಮಿತಿ ಜೊತೆ ಚರ್ಚಿಸಿ ಪೂರ್ಣ ಪ್ರಮಾಣದ ಶಾಲೆಗಳ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ರಾಷ್ಟ್ರೀಯ ಶಿಕ್ಷಣ ನೀತಿ ಓದಿರುವವರು ಯಾರೂ ಹಿಂದಿ ದಿವಸ್ ಅಂತ ವಿರೋಧ ಮಾಡಲ್ಲ. ಮಾತೃ ಭಾಷೆಯಲ್ಲಿ ಶಿಕ್ಷಣ ಕೊಡಬೇಕೆಂದು ಯೋಚನೆ ಮಾಡಿರುವ ಸರ್ಕಾರ ನಮ್ಮದು. ದೇಶದಲ್ಲಿ ಸ್ವದೇಶಿ ಸ್ವಾವಲಂಬಿ ಶಿಕ್ಷಣ ಕೊಡಬೇಕೆಂದು ಮಹಾತ್ಮ ಗಾಂಧೀಜಿ ಸೇರಿ ಆನೇಕ ತಜ್ಞರು ಹೇಳಿದ್ದರು. ಆ ನಿಟ್ಟಿನಲ್ಲಿ ಮಕ್ಕಳ ಕೈಗೆ, ಬುದ್ಧಿಗೆ, ಹೃದಯಕ್ಕೆ ಶಿಕ್ಷಣ ಕೊಡಬೇಕು. ಇದನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪ್ರಯತ್ನ ಮಾಡಿದೆ. ಕಾಂಗ್ರೆಸ್‍ನವರಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಗೊಂದಲಗಳಿರಬಹದು. ಅದು ಪಾರ್ಲಿಮೆಂಟ್ ನಲ್ಲಿ ಹಾಗೂ ದೇಶದ ಅನೇಕ ಕಡೆ ಸಭೆ, ಸೆಮಿನಾರ್ ಗಳಲ್ಲಿ ಚರ್ಚೆಯಾದ ನಂತರವೇ ಜಾರಿಯಾದ ನಿರ್ಣಯ. ಈ ಬಗ್ಗೆ ಅವರು ತಿಳಿದರೆ ಸರಿಹೋಗಬಹುದು. ಅವರ ಜೊತೆ ಚರ್ಚೆ ಮಾಡುತ್ತೇವೆ ಎಂದರು.

  • ಶಾಲೆಯೊಳಗೆ ಬಿಯರ್ ಬಾಟ್ಲಿ ತೂರಿದ ಕಿಡಿಗೇಡಿಗಳು – ವಿದ್ಯಾಮಂದಿರಕ್ಕೆ ಅಪಮಾನ

    ಶಾಲೆಯೊಳಗೆ ಬಿಯರ್ ಬಾಟ್ಲಿ ತೂರಿದ ಕಿಡಿಗೇಡಿಗಳು – ವಿದ್ಯಾಮಂದಿರಕ್ಕೆ ಅಪಮಾನ

    ಚಿಕ್ಕಬಳ್ಳಾಪುರ: ತಡರಾತ್ರಿ ಮದ್ಯಪಾನ ಮಾಡಿ ಕಿಡಿಗೇಡಿಗಳು ಖಾಸಗಿ ಶಾಲೆಯೊಳಗೆ ಬಿಯರ್ ಬಾಟಲಿ ತೂರಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.

    ನಗರದ ಕೋಟೆ ವೃತ್ತದಲ್ಲಿರುವ ಆಕಾಶ್ ಗ್ಲೋಬಲ್ ಶಾಲೆಯ ಕಿಟಕಿಗೆ ಬಿಯರ್ ಬಾಟಲಿಯನ್ನು ತೂರಿದ್ದು, ಕಿಟಕಿ ಗಾಜು ಪುಡಿ, ಪುಡಿಯಾಗಿದೆ. ಈ ಪರಿಣಾಮ ಶಾಲೆಯ ಪ್ರವೇಶ ದ್ವಾರದ ಮುಂಭಾಗ ಹಾಗೂ ಆಡಳಿತ ಕಚೇರಿ ತುಂಬಾ ಬಿಯರ್ ಬಾಟಲಿಯ ಚೂರು ಹಾಗೂ ಕಿಟಕಿ ಗಾಜಿನ ಚೂರುಗಳು ತುಂಬಿಕೊಂಡಿವೆ. ಅಂದಹಾಗೇ ಮಧ್ಯರಾತ್ರಿ ಕುಡಿದ ಅಮಲಿನಲ್ಲಿ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದು, ಈ ಹಿಂದೆ ಸಹ ಇದೇ ಶಾಲೆಯ ಮತ್ತೊಂದು ಕಿಟಕಿ ಗಾಜಿಗೆ ಕಲ್ಲು ತೂರಾಟ ಮಾಡಿ ಹೊಡೆದು ಹಾಕಿದ್ದಾರೆ. ಹೀಗೆ ಪದೇ ಪದೇ ಶಾಲೆಯ ಕಿಟಿಕಿಗಳನ್ನು ಕಲ್ಲು ಹಾಗೂ ಮದ್ಯದ ಬಾಟಲಿಯಿಂದ ಹೊಡೆದು ಹಾಕುತ್ತಿರುವುದು ಶಾಲೆಯ ಶಿಕ್ಷಕರಲ್ಲಿ ಆತಂಕ ಮೂಡಿಸಿದೆ. ಇದನ್ನೂ ಓದಿ:ದರೋಡೆ ಮಾಡಲು ಹೋಗಿ ಏನೂ ಸಿಗದಿದ್ದಾಗ ಯುವತಿಯ ಅತ್ಯಾಚಾರವೆಸಗಿದ ಕಾಮುಕರು!

    ಈ ವಿಚಾರವಾಗಿ ಶಾಲೆಯ ಮುಖ್ಯ ಶಿಕ್ಷಕಿ ಪವಿತ್ರರವರು, ಶಾಲೆ ಮುಖ್ಯ ರಸ್ತೆಯಲ್ಲಿದ್ದು, ಶಾಲೆಯ ಮುಂಭಾಗ, ಅಕ್ಕ-ಪಕ್ಕ ರಾತ್ರಿ ವೇಳೆ ಕೆಲ ಪುಂಡ ಪೋಕರಿಗಳು ಕೂರುತ್ತಾರೆ. ಸಿಗರೇಟ್ ಹಾಗೂ ಮದ್ಯ ಸೇವನೆ ಮಾಡಿ ಬಾಟಲಿ ಬಿಸಾಡುವುದನ್ನು ಮಾಡುತ್ತಿದ್ದರು. ಆಗ ನಾವೇ ಕ್ಲೀನ್ ಮಾಡಿಕೊಂಡು ಸುಮ್ಮನಾಗುತ್ತಿದ್ವಿ. ಈ ಹಿಂದೆ ಸಹ ಶಾಲೆಯ ಮತ್ತೊಂದು ಕಿಟಕಿಯ ಗಾಜಿಗೆ ಕಲ್ಲು ತೂರಿ ಪುಡಿ ಪುಡಿ ಮಾಡಿದ್ದರು. ಆಗಲೂ ಸುಮ್ಮನಿದ್ವಿ. ಈಗ ತಡರಾತ್ರಿ ಶಾಲೆಯ ಮುಂಭಾಗದ ಕಿಟಕಿಗೆ ಬಿಯರ್ ಸಮೇತ ಬಾಟಲಿ ತೂರಿದ್ದು, ಕಿಟಕಿ ಗಾಜು ಹೊಡೆದು ಬಿಯರ್ ಬಾಟಲಿ ಒಳಗೆ ಬಂದಿದೆ. ಚೂರುಗಳೆಲ್ಲವೂ ಶಾಲೆ ಹಾಗೂ ಆಡಳಿತ ಕಚೇರಿಯಲ್ಲಿ ಹರಡಿವೆ. ಶಾಲೆ ಅಂದರೆ ದೇವಾಲಯ ಅಂತಾರೆ. ಅವರ ಮನೆ ಮಕ್ಕಳು ಸಹ ಯಾವುದೋ ಶಾಲೆಯಲ್ಲಿ ಓದುತ್ತಿರುತ್ತಾರೆ. ಆ ಶಾಲೆಯಲ್ಲಿ ಇಂತಹ ಘಟನೆ ಆದರೆ ಅವರಿಗೆಷ್ಟು ನೋವಾಗುತ್ತೆ? ಇದು ಶಾಲೆ ಅಲ್ವಾ. ಇಲ್ಲಿಗೂ ಮಕ್ಕಳು ಬರುತ್ತಾರೆ ಅಲ್ವಾ. ಯಾಕೆ ಹೀಗೆ ಮಾಡಿದ್ರು ಅಂತ ತಮ್ಮ ಆಕ್ರೋಶ ಮತ್ತು ಅಸಮಾಧಾನವನ್ನು ಹೊರಹಾಕಿದ್ದಾರೆ. ಇದನ್ನೂ ಓದಿ:ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ಅತ್ಯಾಚಾರಿಗಳ ಬಂಧನ

    ಕೋಟೆ ಪ್ರಮುಖ ವೃತ್ತವಾಗಿದ್ದು, ನಗರದ ಮುಖ್ಯ ಭಾಗದಲ್ಲಿ ಈ ಶಾಲೆಯಿದೆ. ಇಂತಹ ಸ್ಥಳದಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ. ಚಿಕ್ಕಬಳ್ಳಾಪುರ ನಗರ ಪೊಲೀಸರು ಎಚ್ಚೆತ್ತುಕೊಳ್ಳಬೇಕಿದೆ. ಬೀಟ್ ವ್ಯವಸ್ಥೆ ಹೆಚ್ಚು ಮಾಡಬೇಕಿದೆ ಅಂತ ಶಾಲೆಯ ಶಿಕ್ಷಕರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ. ಇದೀಗ ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯ ಪೇದೆಗಳು ಆಗಮಿಸಿ ವಿಚಾರಣೆ ನಡೆಸುತ್ತಿದ್ದಾರೆ.

  • ವಿದ್ಯಾರ್ಥಿಗಳ ಕೈಯಲ್ಲಿ ದೀಪ ಬೆಳಗಿಸಿ ಸ್ವಾಗತ ಕೋರಿದ ಶಿಕ್ಷಕರು

    ವಿದ್ಯಾರ್ಥಿಗಳ ಕೈಯಲ್ಲಿ ದೀಪ ಬೆಳಗಿಸಿ ಸ್ವಾಗತ ಕೋರಿದ ಶಿಕ್ಷಕರು

    ಬೆಂಗಳೂರು: ಮೂರನೇ ಕೊರೊನಾ ಅಲೆಯ ಭೀತಿ ಇರುವಾಗಲೇ ಮಕ್ಕಳೇ ಟಾರ್ಗೆಟ್ ಅಂತಾ ಹೇಳುತ್ತಿರುವಾಗಲೇ ರಾಜ್ಯ ಸರ್ಕಾರ ಮಕ್ಕಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಆಫ್ ಲೈನ್ ತರಗತಿಗಳನ್ನ ಶುರು ಮಾಡಿದೆ. ವಿದ್ಯಾರ್ಥಿಗಳ ಕೈಯಲ್ಲಿ ದೀಪ ಬೆಳಗಿಸಿ  ಶಾಲೆಗೆ ಶಿಕ್ಷಕರು ಸ್ವಾಗತ ಕೋರಿದ್ದಾರೆ.

    ಕೊರೊನಾ ಹೆಮ್ಮಾರಿಯ ಅಬ್ಬರಕ್ಕೆ ಇಡೀ ರಾಜ್ಯ ತಲ್ಲಣಗೊಂಡಿದೆ. ಚೀನಾದಿಂದ ಶುರುವಾದ ಕೊರೊನಾ ವೈರಾಣುವಿನ ಆರ್ಭಟ ಇಡೀ ಭೂಮಂಡಲವನ್ನೇ ಆಕ್ರಮಿಸಿ ಕೋಟ್ಯಾಂತರ ಜನರ ಜೀವನವನ್ನ ಹಾಳು ಮಾಡಿದೆ. ಇದನ್ನೂ ಓದಿ: ಕಾಂತ್ರಿಕಾರಿ ಅಂದ್ರೆ ಗುಂಡು ಹೊಡೆಯುವುದು ಅಲ್ಲ – ಚೇತನ್‍ಗೆ ಹೆಚ್‍ಡಿಕೆ ತಿರುಗೇಟು

    ಶಾಲೆಗಳ ಕಡೆಗೆ ವಿದ್ಯಾರ್ಥಿಗಳು ಬರ್ತಾರಾ ಅನ್ನೋ ಆತಂಕವಿತ್ತು, ಅದರೇ ಮಕ್ಕಳು ಶಾಲೆಗಳಿಗೆ ಬರ್ತಿದ್ದಾರೆ. 18 ತಿಂಗಳ ಬಳಿಕ ಶಾಲೆಗಳು ಆರಂಭವಾಗಿದ್ದು ಇಂದು ಚಾಮರಾಜಪೇಟೆಯ ಬಿಬಿಎಂಪಿ ಪ್ರೌಢಶಾಲೆಯಲ್ಲಿ ಮಕ್ಕಳು ಕೊರೊನಾ ನಿಯಮಗಳ ಪ್ರಕಾರ ಶಾಲೆಗೆ ಆಗಮಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಹೂ ಹಾಕಿ, ಚಪ್ಪಾಳೆ ತಟ್ಟಿ, ಡಿಫರೆಂಟಾಗಿ ಸ್ವಾಗತಿಸಿದ ಶಿಕ್ಷಕರು

    ಕೊರೊನಾದಿಂದ ಕ್ಲೋಸ್ ಆಗಿದ್ದ ಆಫ್ ಲೈನ್ ತರಗತಿಗಳು ಓಪನ್ ಆದ ಸಂತಸದಲ್ಲಿ ಶಿಕ್ಷಕರು ಮತ್ತು ಮಕ್ಕಳು ಇದ್ದಾರೆ. ಬಹಳ ದಿನಗಳ ನಂತರ ಶಾಲೆಗೆ ಬರ್ತಿರೋ ವಿದ್ಯಾರ್ಥಿಗಳ ಕೈಯಲ್ಲಿ ಈ ಶಾಲೆಯ ಶಿಕ್ಷಕರು ದೀಪವನ್ನ ಬೆಳಗಿಸುವ ಮೂಲಕ ವಿದ್ಯಾರ್ಥಿಗಳ ಭವಿಷ್ಯ ಬೆಳಗಲಿ ಅಂತಾ ಹಾರೈಸಿದ್ದಾರೆ.

  • ವಿದ್ಯಾರ್ಥಿಗಳಿಗೆ ಹೂ ಹಾಕಿ, ಚಪ್ಪಾಳೆ ತಟ್ಟಿ, ಡಿಫರೆಂಟಾಗಿ ಸ್ವಾಗತಿಸಿದ ಶಿಕ್ಷಕರು

    ವಿದ್ಯಾರ್ಥಿಗಳಿಗೆ ಹೂ ಹಾಕಿ, ಚಪ್ಪಾಳೆ ತಟ್ಟಿ, ಡಿಫರೆಂಟಾಗಿ ಸ್ವಾಗತಿಸಿದ ಶಿಕ್ಷಕರು

    ಬೀದರ್: ಕೊರೊನಾ ಮೂರನೇ ಅಲೆಯ ಭೀತಿ ನಡುವೆ ಶಾಲಾ, ಕಾಲೇಜುಗಳು ಇಂದಿನಿಂದ ಪ್ರಾರಂಭವಾಗಿವೆ. ಗಡಿ ಜಿಲ್ಲೆ ಬೀದರ್ ನಲ್ಲಿ ವಿದ್ಯಾರ್ಥಿಗಳನ್ನು ಶಿಕ್ಷಕರು ಹೂ ಹಾಕಿ, ಚಪ್ಪಾಳೆ ತಟ್ಟುವ ಮೂಲಕ ಡಿಫರೆಂಟಾಗಿ ಸ್ವಾಗತ ಮಾಡಿದ್ದಾರೆ.

    ಸರ್ಕಾರಿ ಶಾಲಾ – ಕಾಲೇಜುಗಳಲ್ಲಿ ಇಂದು ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳು ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಖುಷಿಯಿಂದ ಶಾಲಾ, ಕಾಲೇಜುಗಳ ಕಡೆ ಮುಖ ಮಾಡಿದ್ದಾರೆ. ಅಲ್ಲದೇ ಕೋವಿಡ್‍ನ ಯಾವುದೇ ಭಯವಿಲ್ಲದೆ ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ಬರುತ್ತಿದ್ದಾರೆ. ಇದನ್ನೂ ಓದಿ:ಶ್ರೀಗುರು ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ

    ಶಾಲೆ ಪ್ರಾರಂಭವಾಗಿದ್ದು ಹಾಗೂ ಇದರ ಜೊತೆಗೆ ನಮ್ಮ ಶಿಕ್ಷಕರು ಈ ರೀತಿ ಡಿಫರೆಂಟಾಗಿ ಸ್ವಾಗತ ಮಾಡಿಕೊಂಡಿದ್ದು, ನಮಗೆ ಖುಷಿಯಾಗಿದೆ ಎಂದು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಶಿಕ್ಷಕರು ಕೂಡ ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಶಾಲೆಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಅಕ್ರಮ ಸಾಗಾಟದ ವೇಳೆ ಅಪಘಾತವಾಗಿ 20 ಕರುಗಳ ಸಾವು ಪ್ರಕರಣ – 10 ಮಂದಿಯ ಬಂಧನ 

     

  • ಕೋವಿಡ್ ಕಾಲಘಟ್ಟದಲ್ಲಿ ಹೊಸ ಮನ್ವಂತರ – ಇಂದಿನಿಂದ ರಾಜ್ಯದಲ್ಲಿ ಶಾಲೆ-ಕಾಲೇಜು ಓಪನ್

    ಕೋವಿಡ್ ಕಾಲಘಟ್ಟದಲ್ಲಿ ಹೊಸ ಮನ್ವಂತರ – ಇಂದಿನಿಂದ ರಾಜ್ಯದಲ್ಲಿ ಶಾಲೆ-ಕಾಲೇಜು ಓಪನ್

    ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ 9-12ನೇ ಕ್ಲಾಸ್‍ವರೆಗೆ ಶಾಲಾ-ಕಾಲೇಜ್ ಆರಂಭವಾಗ್ತಿದೆ. ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ಸ್ಕೂಲ್ ಓಪನ್‍ಗೆ ಭರ್ಜರಿ ಸಿದ್ಧತೆ ನಡೆದಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲಾ ಕೇಂದ್ರಗಳಲ್ಲಿ 9-12ನೇ ತರಗತಿಗಳು ಆರಂಭವಾಗಲಿದೆ. 26 ಜಿಲ್ಲೆಗಳಲ್ಲೂ ಶಾಲಾ-ಕಾಲೇಜು ಆರಂಭಕ್ಕೆ ತಯಾರಿ ಆಗಿದೆ.

    ಮೊದಲ ಹಂತವಾಗಿ 9-12 ನೇ ತರಗತಿವರೆಗೆ ಇಂದಿನಿಂದ ಭೌತಿಕ ತರಗತಿಗಳು ಪ್ರಾರಂಭವಾಗ್ತಿದೆ. ಬೆಂಗಳೂರಿನ ವಿಜಯನಗರದ ಖಾಸಗಿ ಶಾಲೆಗಳಲ್ಲಿ ಸ್ವಚ್ಛತಾಕಾರ್ಯ ಭರದಿಂದ ನಡೆದಿದೆ. ಶಾಲಾ ಕೊಠಡಿಗಳಲ್ಲಿ ಸ್ಯಾನಿಟೇಸೇಷನ್ ಮಾಡಲಾಗಿದೆ. ಇದನ್ನೂ ಓದಿ: ನಾನೇ ಮಾಡಿದೇ, ನಾನೇ ಕಟ್ಟಿದೆ ಅಂತ ಪ್ರತಾಪ್ ಸಿಂಹ ಹೇಳೋದು ತಪ್ಪು: ವಿಶ್ವನಾಥ್

    ಭಾನುವಾರ ತುಮಕೂರಿನ ಹೆಗ್ಗರೆಯ ಸಿದ್ದಾರ್ಥ ಪ್ರೌಢಶಾಲೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಕ್ಕಳು ಶಾಲೆಗೆ ಬರಲು ಪೋಷಕರ ಅನುಮತಿ ಕಡ್ಡಾಯ. ಮುಂದಿನ ಹಂತದಲ್ಲಿ 1ರಿಂದ 8ನೇ ತರಗತಿ ಆರಂಭಕ್ಕೆ ಪ್ರಯತ್ನ ಮಾಡ್ತೇವೆ ಅಂತ ಮಾಹಿತಿ ನೀಡಿದರು. ಖಾಸಗಿ ಶಾಲೆ-ಕಾಲೇಜ್‍ಗಳು ಕೂಡ ಸಿದ್ಧವಾಗಿದೆ. ಇಂದು ಮಲ್ಲೇಶ್ವರದ ಎರಡು ಶಾಲೆಗಳಿಗೆ ಸಿಎಂ ಬೊಮ್ಮಾಯಿ ಖುದ್ದು ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಇದನ್ನೂ ಓದಿ: ಬದಲಾಯ್ತು ಸುಶಾಂತ್ ಎಫ್‍ಬಿ ಫೋಟೋ- ಸ್ವರ್ಗದಲ್ಲಿ ನೆಟ್‍ವರ್ಕ್ ಸಿಗುತ್ತಾ ಅಂದ್ರು ಫ್ಯಾನ್ಸ್

    ಶಾಲೆ ಆರಂಭಕ್ಕೆ ಮಾರ್ಗಸೂಚಿ:
    * 9 ಮತ್ತು 10ನೇ ತರಗತಿಗಳಿಗೆ ಆರಂಭದಲ್ಲಿ ಅರ್ಧ ದಿನ ಭೌತಿಕ ತರಗತಿ.
    ( ಸೋಮ-ಶುಕ್ರವಾರದವರೆಗೆ ಬೆ.10ರಿಂದ ಮ.1.30ರವರೆಗೂ, ಶನಿವಾರ ಮ. 12.30ರವರೆಗೆ ಕ್ಲಾಸ್)
    * 15 ರಿಂದ 20 ಮಕ್ಕಳನ್ನು ಒಂದು ಗುಂಪಾಗಿ ವಿಂಗಡಿಸಿ ಭೌತಿಕ ತರಗತಿ ನಡೆಸಬೇಕು.
    * ಮಕ್ಕಳು ಪೋಷಕರಿಂದ ಅನುಮತಿ ಪತ್ರ ತರುವುದು ಕಡ್ಡಾಯ.
    * ಪತ್ರದಲ್ಲಿ ಮಗುವಿಗೆ ಸೋಂಕು ಲಕ್ಷಣ ಇಲ್ಲ ಎಂಬುದನ್ನು ದೃಢೀಕರಿಸಿರಬೇಕು.
    * ತರಗತಿಗಳಿಗೆ ಮಕ್ಕಳ ಭೌತಿಕ ಹಾಜರಾತಿ ಕಡ್ಡಾಯವಲ್ಲ. ಆನ್‍ಲೈನ್ ಕ್ಲಾಸ್‍ಗೂ ಹಾಜರಾಗಬಹುದು.
    * ಬೆಂಚ್‍ಗಳ ಉದ್ದ ಆಧರಿಸಿ ಒಬ್ಬರು ಅಥವಾ ಇಬ್ಬರು ಕುಳಿತುಕೊಳ್ಳಲು ವ್ಯವಸ್ಥೆ ಕಲ್ಪಿಸಬೇಕು.
    * ಮನೆಯಿಂದಲೇ ಅಗತ್ಯವಾದ ಕುಡಿಯುವ ನೀರು, ಉಪಹಾರ ತರಬೇಕು.
    * 50 ವರ್ಷ ಮೇಲ್ಪಟ್ಟ ಶಿಕ್ಷಕರು ಮಾಸ್ಕ್, ಜೊತೆಗೆ ಫೇಸ್‍ಶೀಲ್ಡ್ ಧರಿಸಬೇಕು.
    * ಶಿಕ್ಷಕರು ಕನಿಷ್ಠ 1 ಡೋಸ್ ಆದರೂ ಪಡೆದಿರಲೇಬೇಕು. ಸೋಂಕು ಲಕ್ಷಣ ಇದ್ದಲ್ಲಿ ರಜೆ ಪಡೆಯಬೇಕು.

    ಪಿಯುಸಿ ತರಗತಿಗಳಿಗೆ ಮಾರ್ಗಸೂಚಿ
    * ಆನ್‍ಲೈನ್ ಅಥವಾ ಆಫ್‍ಲೈನ್ ಕ್ಲಾಸ್‍ಗೆ ಹಾಜರಾತಿ ಕಡ್ಡಾಯ
    * ಭೌತಿಕ ತರಗತಿಗೆ ಹಾಜರಾಗೋದು ಕಡ್ಡಾಯ ಅಲ್ಲ
    * ವಿದ್ಯಾರ್ಥಿಗಳು ಪೋಷಕರ ಅನುಮತಿ ಪತ್ರ ತರುವುದು ಕಡ್ಡಾಯ
    * ಎರಡು ಬ್ಯಾಚ್‍ನಲ್ಲಿ ಕಾಲೇಜು ನಡೆಸಬೇಕು. ( 50:50)
    * ಮೊದಲ ಬ್ಯಾಚ್‍ಗೆ ವಾರದ ಮೊದಲ 3 ದಿನ.. 2ನೇ ಬ್ಯಾಚ್‍ಗೆ ವಾರದ ಕೊನೆಯ 3 ದಿನ ಕ್ಲಾಸ್
    * ವಿಶಾಲವಾದ ಕೊಠಡಿ ಇದ್ದರೆ 100 ವಿದ್ಯಾರ್ಥಿಗಳಿಗೆ ಏಕಕಾಲದಲ್ಲಿ ತರಗತಿ
    * ಮಕ್ಕಳು ಪೋಷಕರಿಂದ ಅನುಮತಿ ಪತ್ರ ತರುವುದು ಕಡ್ಡಾಯ
    * ಪತ್ರದಲ್ಲಿ ಮಗುವಿಗೆ ಸೋಂಕು ಲಕ್ಷ ಇಲ್ಲ ಎಂಬುದನ್ನು ದೃಢೀಕರಿಸಿರಬೇಕು
    * 50 ವರ್ಷ ಮೇಲ್ಪಟ್ಟ ಉಪನ್ಯಾಸಕರಿಗೆ ಫೇಸ್ ಶೀಲ್ಡ್ ಕಡ್ಡಾಯ
    * ಆರೋಗ್ಯ ವ್ಯತ್ಯಾಸ, ಬೇರೆ ರೋಗ ಲಕ್ಷಣ ಇದ್ರೆ ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿಗೆ ಕಾಲೇಜಿಗೆ ನೋ ಎಂಟ್ರಿ

  • ಕಿಡ್ನಿ ವೈಫಲ್ಯದ ನಡುವೆಯೂ SSLCಯಲ್ಲಿ ಟಾಪರ್ ಆದ ವಿದ್ಯಾರ್ಥಿನಿ

    ಕಿಡ್ನಿ ವೈಫಲ್ಯದ ನಡುವೆಯೂ SSLCಯಲ್ಲಿ ಟಾಪರ್ ಆದ ವಿದ್ಯಾರ್ಥಿನಿ

    ಶಿವಮೊಗ್ಗ: ಎಲ್ಲಾ ಸರಿ ಇದ್ದರೂ ಪರೀಕ್ಷೆ ಎಂಬ ಭಯ ಆವರಿಸಿದರೆ ಉತ್ತಮ ಅಂಕ ಪಡೆಯುವುದೇ ಕಷ್ಟ. ಹೀಗಿರುವಾಗ ಕಿಡ್ನಿ ವೈಫಲ್ಯದ ನಡುವೆಯೂ ವಿದ್ಯಾರ್ಥಿನಿಯೊಬ್ಬಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ಮೆಚ್ಚುಗೆಗೆ ಪಾತ್ರರಾಗಿದ್ದಾಳೆ.

    ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಕೆ.ಎಸ್. ಮೂತ್ರಪಿಂಡ ನೋವಿನ ನಡುವೆಯೂ ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.93.12 ರಷ್ಟು ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ.

    ಆವಿನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುರುವರಿ ಗ್ರಾಮದ ಶ್ರೀಧರ್ ಹಾಗೂ ಶೈಲಜಾ ದಂಪತಿಯ ಪುತ್ರಿ ಶ್ರೀನಿಧಿಗೆ ಕಳೆದ ನಾಲ್ಕು ವರ್ಷದ ಹಿಂದೆ ಮೂತ್ರಪಿಂಡ ಸಮಸ್ಯೆ ಕಾಣಿಸಿಕೊಂಡಿದ್ದು, ವಾರದಲ್ಲಿ ಮೂರು ಬಾರಿ ಡಯಾಲಿಸಿಸ್‍ಗೆ ಒಳಗಾಗಬೇಕಿದೆ. ಆದರೂ ಸದಾ ಓದಿನಲ್ಲಿ ಮುಂದಿರುವ ಈ ವಿದ್ಯಾರ್ಥಿನಿ ಮೂತ್ರಪಿಂಡ ಸಮಸ್ಯೆಯ ನೋವಿಗೆ ಭಯ ಬೀಳದೇ ತನ್ನ ವ್ಯಾಸಂಗ ಮುಂದುವರಿಸಿದ್ದಾಳೆ.

    ಎಸ್‍ಎಸ್‍ಎಲ್‍ಸಿ ಪರೀಕ್ಷೆ ದಿನ ಸಹ ಡಯಾಲಿಸಿಸ್‍ಗೆ ಒಳಗಾಗಿದ್ದ ಈ ವಿದ್ಯಾರ್ಥಿನಿ, ಮೂತ್ರಪಿಂಡ ವೈಫಲ್ಯದ ನೋವಿನ ನಡುವೆಯೂ ಪರೀಕ್ಷೆಗೆ ಹಾಜರಾಗಿ ಅತೀ ಹೆಚ್ಚು ಅಂಕ ಪಡೆದಿದ್ದಾಳೆ. ತೀವ್ರ ಅನಾರೋಗ್ಯದ ನಡುವೆಯೂ ಉತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿನಿಯನ್ನು ಶಿಕ್ಷಕರು ಅಭಿನಂದಿಸಿದ್ದಾರೆ. ಇದನ್ನೂ ಓದಿ:ಹಾಕಿ ಕೋಚ್‌ ಅಂಕಿತಾ ಸುರೇಶ್‌ಗೆ ಕೊಡಗಿನಲ್ಲಿ ಅದ್ಧೂರಿ ಸ್ವಾಗತ

  • ವಿದ್ಯಾರ್ಥಿಗಳನ್ನು ಸೌಪರ್ಣಿಕಾ ನದಿ ದಾಟಿಸಿ SSLC ಪರೀಕ್ಷೆ ಬರೆಸಿದ ಉಡುಪಿ ಡಿಡಿಪಿಐ

    ವಿದ್ಯಾರ್ಥಿಗಳನ್ನು ಸೌಪರ್ಣಿಕಾ ನದಿ ದಾಟಿಸಿ SSLC ಪರೀಕ್ಷೆ ಬರೆಸಿದ ಉಡುಪಿ ಡಿಡಿಪಿಐ

    – ಶಿಕ್ಷಕರ ಮುತುವರ್ಜಿಗೆ ಜಿಲ್ಲೆಯ ಜನರ ಶ್ಲಾಘನೆ

    ಉಡುಪಿ: ತುಂಬಿ ಹರಿಯುತ್ತಿರುವ ಸೌಪರ್ಣಿಕಾ ನದಿಯನ್ನು ದಾಟಿ ಇಬ್ಬರು ವಿದ್ಯಾರ್ಥಿನಿಯರು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದಿದ್ದಾರೆ. ಸ್ವತಃ ಉಡುಪಿ ಡಿಡಿಪಿಐ ನದಿ ದಾಟಿಸಿ ಕುದ್ರು ಪ್ರದೇಶದ ಮಕ್ಕಳಿಗೆ ಬೆಂಬಲವಾಗಿ ನಿಂತಿದ್ದಾರೆ.

    ಜಿಲ್ಲೆಯ ಬೈಂದೂರು ತಾಲೂಕಿನ ಕುರು ದ್ವೀಪದ ಇಬ್ಬರು ವಿದ್ಯಾರ್ಥಿನಿಯನ್ನು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ದೋಣಿಯ ಮೂಲಕ ನದಿಯನ್ನು ದಾಟಿಸಿ ಡಿಡಿಪಿಐ ಹಾಗೂ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿಯವರು ಪರೀಕ್ಷಾ ಕೇಂದ್ರಕ್ಕೆ ಕರೆ ತಂದಿದ್ದಾರೆ.

    ಬೈಂದೂರು ವಲಯದ ಮರವಂತೆ ಸರ್ಕಾರಿ ಪ್ರೌಢ ಶಾಲೆಯ ಶಿಲ್ಪಾ ಹಾಗೂ ಸಂಜನಾ ಅವರ ಮನೆ ಕುರು ದ್ವೀಪದಲ್ಲಿದ್ದರು. ಊರಿಂದಾಚೆಗೆ ಬರಬೇಕೆಂದರೆ ಮರವಂತೆ, ಇಲ್ಲವಾದರೆ ನಾಡಾ ಮೂಲಕ ಸಾಗಿ ಬರಬೇಕಾಗುತ್ತದೆ. ದೋಣಿ ಮೂಲಕ ಸಾಗಿ ಬಂದರೂ ಇಲ್ಲಿನ ವಿದ್ಯಾರ್ಥಿಗಳು ಬಯಲು ದಾರಿಯಲ್ಲಿ ಮತ್ತೆ ಅರ್ಧ ಕಿ.ಮೀ ಗೂ ಹೆಚ್ಚು ನಡೆದುಕೊಂಡೇ ಕ್ರಮಿಸಿಬೇಕು. ನಿರಂತರ ಸುರಿದ ಭಾರೀ ಮಳೆಯಿಂದಾಗಿ ಪರೀಕ್ಷೆ ಬರೆಯಲು ಈ ವಿದ್ಯಾರ್ಥಿನಿಯರಿಗೆ ತುಂಬಾ ಸಮಸ್ಯೆಯಾಗಿತ್ತು. ಇದು ಪರೀಕ್ಷೆಯ ನೋಡಲ್ ಅಧಿಕಾರಿ ಕರುಣಾಕರ ಶೆಟ್ಟಿ ಅವರ ಗಮನಕ್ಕೆ ಬಂದಿದೆ. ಬಳಿಕ ಶಿಕ್ಷಣ ಇಲಾಖೆ ಮಕ್ಕಳನ್ನು ಕರೆತರಲು ಎಲ್ಲ ವ್ಯವಸ್ಥೆಗಳನ್ನು ಮಾಡಿದೆ.

    ಇಬ್ಬರು ಶಿಕ್ಷಕರನ್ನು ನಿಯೋಜಿಸಿ ಮಕ್ಕಳನ್ನು ಸುರಕ್ಷಿತವಾಗಿ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗಿದೆ. ವಿಶೇಷ ಕಾಳಜಿಯೊಂದಿಗೆ ಖುದ್ದು ಡಿಡಿಪಿಐ ಎಚ್.ಎನ್.ನಾಗೂರ ಹಾಗೂ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಸ್ವತಃ ದೋಣಿ ಮೇಲೇರಿ ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದಾರೆ. ಡಿಡಿಪಿಐ ಹಾಗೂ ಬೈಂದೂರು ತಹಸೀಲ್ದಾರ್ ಮರವಂತೆ ರಾ.ಹೆದ್ದಾರಿಯಿಂದ ಅರ್ಧ ಕಿ.ಮೀ ಬಯಲು ದಾರಿಯಲ್ಲಿ ನಡೆದು ಆ ಬಳಿಕ ದೋಣಿ ಮೂಲಕ ಕುರುವಿಗೆ ಪ್ರಯಾಣ ಬೆಳೆಸಿ ಮತ್ತೆ ಅದೇ ದೋಣಿಯಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ಪರೀಕ್ಷಾ ಕೇಂದ್ರಕ್ಕೆ ಸುರಕ್ಷಿತವಾಗಿ ಬಿಟ್ಟು ಗಮನ ಸೆಳೆದಿದ್ದಾರೆ. ಮಕ್ಕಳ ಬಗೆಗಿನ ಶಿಕ್ಷಣ ಇಲಾಖೆಯ ಈ ಕಾಳಜಿಯನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.

    ನದಿ ದಾಟಿಸಿ ಗ್ರಾಮಸ್ಥರೇ ಮಕ್ಕಳನ್ನು ಪರೀಕ್ಷೆ ಬರೆಸುವ ವ್ಯವಸ್ಥೆ ಮಾಡಬಹುದಿತ್ತು. ಗ್ರಾಮೀಣ ಭಾಗಕ್ಕೂ ಶಿಕ್ಷಣದ ಒತ್ತುಕೊಡುವ ಹಿನ್ನೆಲೆಯಲ್ಲಿ ಶಿಕ್ಷಕರ ಜೊತೆಗೆ ಸ್ವತಃ ನಾನೇ ಹೋಗಿದ್ದೇನೆ ಎಂದು ಡಿಡಿಪಿಐ ತಿಳಿಸಿದ್ದಾರೆ.

  • ಜಿಟಿ ಜಿಟಿ ಮಳೆ – ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಪರದಾಟ

    ಜಿಟಿ ಜಿಟಿ ಮಳೆ – ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಪರದಾಟ

    ರಾಯಚೂರು: ಜಿಲ್ಲೆಯಲ್ಲಿ ಬುಧವಾರ ಸಂಜೆಯಿಂದ ಸುರಿಯುತ್ತಿರುವ ಜಿಟಿ ಜಿಟಿ ಮಳೆ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅಡ್ಡಿಯುಂಟು ಮಾಡಿದೆ.

    ಗುರುವಾರ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳಿಗೆ ತೆರಳುವ ವಿದ್ಯಾರ್ಥಿಗಳು ಮಳೆಯಿಂದ ನಿಗದಿತ ಸಮಯಕ್ಕೆ ತಲುಪಲು ಕಷ್ಟವಾಗಿದೆ. ಅದರಲ್ಲೂ ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ಸ್ವಲ್ಪ ತೊಂದರೆಯುಂಟಾಗಿದೆ.

    ಮಳೆ ಕಾರಣಕ್ಕೆ ಪರೀಕ್ಷೆಗೆ ಗೈರಾಗದಂತೆ ಶಿಕ್ಷಕರು ರಾತ್ರಿಯಿಂದಲೇ ವಿದ್ಯಾರ್ಥಿಗಳಿಗೆ ಫೋನ್ ಕರೆ ಮಾಡಿ ತಿಳಿಸಿದ್ದಾರೆ. ಪರೀಕ್ಷೆ ಸ್ವಲ್ಪ ತಡವಾಗಿ ಬಂದವರಿಗೂ ಅವಕಾಶ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಬೆಳಗ್ಗೆ 10 ಗಂಟೆಗೆ ಪರೀಕ್ಷೆ ಆರಂಭವಾಗುತ್ತದೆ. 10:30 ರವರೆಗೆ ಹೆಚ್ಚುವರಿ ಸಮಯ ನೀಡಿರುವುದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಗೈರಾಗದಂತೆ ತಿಳಿಸಲಾಗಿದೆ. ಮಳೆಯಲ್ಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಂದಿದ್ದು, ಪರೀಕ್ಷೆಗೆ ಹಾಜರಾಗಿದ್ದಾರೆ.

    ಜಿಲ್ಲೆಯ 179 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 30,503 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜುಲೈ 19 ರಂದು ನಡೆದ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 246 ವಿದ್ಯಾರ್ಥಿಗಳು ಗೈರಾಗಿದ್ದರು. ಹೀಗಾಗಿ ಇಂದು ನಡೆಯುವ ಭಾಷಾ ಪರೀಕ್ಷೆಗೆ ಯಾವ ವಿದ್ಯಾರ್ಥಿಗಳು ಗೈರಾಗಬಾರದು ಎಂದು ಶಿಕ್ಷಕರು ಹೆಚ್ಚು ನಿಗಾವಹಿಸಿದ್ದಾರೆ. ಇದನ್ನೂ ಓದಿ: ಇಂದು SSLC ಕೊನೆ ಪರೀಕ್ಷೆ- ಕನ್ನಡ, ಇಂಗ್ಲಿಷ್, ಹಿಂದಿ ಎಕ್ಸಾಂ

  • ಕೆಎಟಿ ತೀರ್ಪು, ಮುಂಬಡ್ತಿ ಶಿಕ್ಷಕರ ಹಿತ ಕಾಪಾಡಲು ಸಂಘದ ಆಗ್ರಹ

    ಕೆಎಟಿ ತೀರ್ಪು, ಮುಂಬಡ್ತಿ ಶಿಕ್ಷಕರ ಹಿತ ಕಾಪಾಡಲು ಸಂಘದ ಆಗ್ರಹ

    ಮಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಮುಂಬಡ್ತಿ ಗೊಂದಲ ಹೊಸ ತಿರುವು ಪಡೆದುಕೊಂಡಿದೆ. ಈಗಾಗಲೇ ಮುಂಬಡ್ತಿ ಪಡೆದಿರುವ ಗ್ರೇಡ್ 2 ಪ್ರೌಢ ಶಾಲಾ ಶಿಕ್ಷಕರ ಹಿತವನ್ನು ಕಾಪಾಡಬೇಕು ಎಂಬ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಬಡ್ತಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘ ಅಭಿಯಾನ ಆರಂಭಿಸಿದೆ.

    ಶಿಕ್ಷಕರ ಹಿಂಬಡ್ತಿ ಆದೇಶವನ್ನು ಮರು ಪರಿಶೀಲಿಸಲು ಸರ್ಕಾರ ಮತ್ತು ಇಲಾಖೆಯ ಮೇಲೆ ಒತ್ತಡ ಹೇರಲು ಸಂಘ ಮುಂದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಉಸ್ತುವಾರಿ ಸಚಿವರು ಮತ್ತು ಶಾಸಕರನ್ನು ಭೇಟಿ ಮಾಡಿ, ಈ ಬಗ್ಗೆ ಸಂತ್ರಸ್ತ ಶಿಕ್ಷಕರ ಅಹವಾಲವನ್ನು ಮಂಡಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್, ಮಂಗಳೂರು ಶಾಸಕ ಹಾಗೂ ಮಾಜಿ ಸಚಿವ ಯು.ಟಿ.ಖಾದರ್ ಅವರಿಗೆ ಲಿಖಿತ ಮನವಿ ಸಲ್ಲಿಸಿ ಸಮಸ್ಯೆಯನ್ನು ಮನವರಿಕೆ ಮಾಡಿಕೊಡಲಾಯಿತು.

    ಸಂಘದ ಜಿಲ್ಲಾಧ್ಯಕ್ಷೆ ಶೆರ್ಲಿ ಸುಮಾಲಿನಿ ನೇತೃತ್ವದಲ್ಲಿ ಸಚಿವರು ಮತ್ತು ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಉಪಾಧ್ಯಕ್ಷರಾದ ಪ್ರತಿಭಾ, ಜಿಲ್ಲಾ ಕಾರ್ಯದರ್ಶಿ ಪ್ರತೀಪ್, ಮಂಗಳೂರು ತಾಲೂಕು ಸಂಘದ ಅಧ್ಯಕ್ಷ ಪ್ರೇಮನಾಥ ಮರ್ಣೆ, ಸಂಘಟನಾ ಕಾರ್ಯದರ್ಶಿ ಗಣೇಶ್ ಹಾಗೂ ಇತರ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ಇದೇ ವೇಳೆ ಬಂದರು, ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ ಅವರಿಗೂ ಸುಳ್ಯದಲ್ಲಿ ಮನವಿ ಸಲ್ಲಿಸಲಾಯಿತು. ಸುಳ್ಯ ತಾಲೂಕು ಬಡ್ತಿ ಶಿಕ್ಷಕರ ಸಂಘದ ಅಧ್ಯಕ್ಷರಾದ ನಾರಾಯಣ.ಬಿ, ಪದಾಧಿಕಾರಿಗಳಾದ ಉನ್ನಿಕೃಷ್ಣನ್ ಹಾಗೂ ಹಿಂಬಡ್ತಿ ಎದುರಿಸುತ್ತಿರುವ ಶಿಕ್ಷಕರು ಸಚಿವ ಅಂಗಾರ ಅವರಿಗೆ ಮನವಿ ಸಲ್ಲಿಸಿದರು. ಪುತ್ತೂರು ತಾಲೂಕು ಬಡ್ತಿ ಶಿಕ್ಷಕರ ಸಂಘದಿಂದ ಶಾಸಕ ಸಂಜೀವ ಮಠಂದೂರು ಅವರಿಗೆ ಮನವಿ ಸಲ್ಲಿಸಲಾಯಿತು.

    ಕರ್ನಾಟಕ ಆಡಳಿತ ನ್ಯಾಯ ಮಂಡಳಿಯು ಕಳೆದ ಮೇ 12ರಂದು ಮಹತ್ವದ ತೀರ್ಪು ನೀಡಿದ್ದು, 6ರಿಂದ 8ನೇ ತರಗತಿವರೆಗೆ ಬೋಧಿಸಲು ನೇಮಕಗೊಂಡ ಶಿಕ್ಷಕರು ಮಾತ್ರ ಪ್ರೌಢ ಶಾಲಾ ಶಿಕ್ಷಕರು ಗ್ರೇಡ್ 2 ಹುದ್ದೆಯನ್ನು ಹೊಂದಲು ಅರ್ಹರು ಮತ್ತು ಈ ಹಿಂದೆ ನೀಡಿರುವ ಎಲ್ಲ ಬಡ್ತಿಗಳನ್ನು ಹಿಂಪಡೆಯಬೇಕು ಎಂದು ಕೆಎಟಿ ತೀರ್ಪಿನಲ್ಲಿ ಹೇಳಿತ್ತು. ಈ ಬಗ್ಗೆ ಬಡ್ತಿ ಶಿಕ್ಷಕರ ಸಂಘ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದು, ಸರ್ಕಾರದ ಮೇಲೆ ಒತ್ತಡ ಹೇರಲು ಈ ಮನವಿ ಸಲ್ಲಿಸಲಾಗುತ್ತಿದೆ.

  • ಜು.5ರಿಂದ ಸಂವೇದಾ ತರಗತಿಗಳು ಆರಂಭ: ಸುರೇಶ್ ಕುಮಾರ್

    ಜು.5ರಿಂದ ಸಂವೇದಾ ತರಗತಿಗಳು ಆರಂಭ: ಸುರೇಶ್ ಕುಮಾರ್

    ಬೆಂಗಳೂರು: ಕೋವಿಡ್ ಸೋಂಕಿನಿಂದಾಗಿ 2021-22ನೇ ಸಾಲಿನ ಭೌತಿಕ ತರಗತಿಗಳ ಆರಂಭ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ದೂರದರ್ಶನ ಚಂದನ ವಾಹಿನಿಯಲ್ಲಿ ಜುಲೈ 5ರಿಂದ ಸಂವೇದಾ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮಗಳು ಆರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

    ರಾಜ್ಯದ ಎಲ್ಲ ಶಿಕ್ಷಕರು ಸದರಿ ವೇಳಾಪಟ್ಟಿಯನ್ನು ತಮ್ಮ ಶಾಲೆಯ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ತಲುಪಿಸಿ, ಅವರೊಂದಿಗೆ ಸಮನ್ವಯ ಸಾಧಿಸಿ, ನಿಗದಿತ ಸಮಯದಲ್ಲಿ ನಿಗದಿತ ತರಗತಿಯ ವಿದ್ಯಾರ್ಥಿಗಳು ಸಂವೇದಾ ತರಗತಿಗಳನ್ನು ವೀಕ್ಷಿಸುವಂತೆ ಕ್ರಮ ಕೈಗೊಳ್ಳಬೇಕು. ನಂತರ ಪ್ರತಿಯೊಬ್ಬ ವಿದ್ಯಾರ್ಥಿಯ ಮೌಲ್ಯಮಾಪನ ವಿವರಗಳನ್ನು ನಿರ್ವಹಿಸಬೇಕು ಎಂದು ಅವರು ಸೂಚಿಸಿದ್ದಾರೆ.

    ಯಾವುದೇ ವಿದ್ಯಾರ್ಥಿಗೆ ದೂರದರ್ಶನ ವೀಕ್ಷಿಸಲು ಅವಕಾಶದ ಕೊರತೆಯಿದ್ದಲ್ಲಿ ಆಯಾ ಶಾಲೆಯ ಶಿಕ್ಷಕರು ಎಸ್‍ಡಿಎಂಸಿ ಸದಸ್ಯರ ನೆರವು ಪಡೆಯಬೇಕು. ವಿದ್ಯಾರ್ಥಿಗೆ ದೂರದರ್ಶನ ವೀಕ್ಷಿಸಲು ಅನುಕೂಲ ಮಾಡಿಕೊಡಬೇಕು. ಅಲ್ಲದೆ ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಕಲಿಕೆಯನ್ನು ಪರಿಣಾಮಕಾರಿಗೊಳಿಸಲು ಅವಕಾಶ ಕಲ್ಪಿಸಬೇಕೆಂದು ತಿಳಿಸಿದ್ದಾರೆ.

    1ರಿಂದ 7ನೇ ತರಗತಿಗಳಿಗೆ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಮತ್ತು 8ರಿಂದ 10ನೇ ತರಗತಿವರೆಗೆ ಬೆಳಗ್ಗೆ 8ರಿಂದ ಸಂಜೆ 4.30ರವರೆಗೆ ನಡೆಯಲಿವೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಮಕ್ಕಳು ಸಂವೇದಾ ತರಗತಿಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.