Tag: Team India Womens

  • ಇದು ಚರಿತ್ರೆ ಸೃಷ್ಟಿಸೊ ಅವತಾರ – U19 ಮಹಿಳಾ T20 ವಿಶ್ವಕಪ್‌ನಲ್ಲಿ ಚೊಚ್ಚಲ ಶತಕ, ಭಾರತದ ತ್ರಿಶಾ ಗೊಂಗಡಿ ದಾಖಲೆ

    ಇದು ಚರಿತ್ರೆ ಸೃಷ್ಟಿಸೊ ಅವತಾರ – U19 ಮಹಿಳಾ T20 ವಿಶ್ವಕಪ್‌ನಲ್ಲಿ ಚೊಚ್ಚಲ ಶತಕ, ಭಾರತದ ತ್ರಿಶಾ ಗೊಂಗಡಿ ದಾಖಲೆ

    ಕೌಲಾಲಂಪುರ್‌: ಕ್ರಿಕೆಟ್‌ ಮೈದಾನದಲ್ಲಿ ಆಟಗಾರರು ದಿನವೂ ಒಂದೊಂದೇ ಯಶಸ್ವಿನ ಮೆಟ್ಟಿಲನ್ನು ಹತ್ತುತ್ತಲೇ ಇರುತ್ತಾರೆ. ಯಾವುದೇ ವಯೋಮಿತಿಯ ಕ್ರಿಕೆಟ್‌ ನಡೆದರೂ ಸಹ ಅಲ್ಲಿ ದಾಖಲೆ ಬರೆಯುವುದು ಕಟ್ಟಿಟ್ಟ ಬುತ್ತಿ. ಹಾಗೆಯೇ ಮಲೇಷ್ಯಾದಲ್ಲಿ ನಡೆಯುತ್ತಿರುವ ಅಂಡರ್‌-19 ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತೀಯ ಮಹಿಳಾ ಕ್ರಿಕೆಟ್‌ ತಂಡದ ವನಿತೆ ವಿಶ್ವದಾಖಲೆ ಬರೆದಿದ್ದಾರೆ.

    ಇಂದು ಮಲೇಷ್ಯಾದ ಕೌಲಾಲಂಪುರ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಅಂಗಳದಲ್ಲಿ ಸ್ಕಾಟ್‌ಲೆಂಡ್‌ ಅಂಡರ್‌-19 ಮಹಿಳಾ ತಂಡದ (Scotland Womens Team) ವಿರುದ್ಧ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ್ತಿ ತ್ರಿಶಾ ಗೊಂಗಡಿ (Gongadi Trisha) ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಕೇವಲ 53 ಎಸೆತಗಳಲ್ಲೇ ಶತಕ ಸಿಡಿಸಿದ ತ್ರಿಶಾ ಗೊಂಗಡಿ ಅಂಡರ್‌-19 ಟಿ20 ವಿಶ್ವಕಪ್‌ ಇತಿಹಾಸದಲ್ಲಿ ವಿಶ್ವದಲ್ಲೇ ಮೊದಲ ಬಾರಿಗೆ ಶತಕ ಸಿಡಿಸಿದ ಸಾಧನೆಗೆ ಪಾತ್ರರಾಗಿದ್ದಾರೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ಗೊಂಗಡಿ ಕೇವಲ 53 ಎಸೆತಗಳಲ್ಲೇ ಶತಕ ಸಿಡಿಸಿದರು. 186.44 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ತ್ರಿಶಾ ತಾನು ಎದಿರಿಸಿದ 59 ಎಸೆತಗಳಲ್ಲಿ 13 ಬೌಂಡರಿ, 4 ಸಿಕ್ಸರ್‌ ಸೇರಿ 110 ರನ್‌ ಸಿಡಿಸಿ ಅಜೇಯರಾಗುಳಿದರು.

    ಇದರೊಂದಿಗೆ ಮತ್ತೋರ್ವ ಆರಂಭಿಕ ಆಟಗಾರ್ತಿ ಜಿ ಕಮಲಿನಿ (G Kamalini) 42 ಎಸೆತಗಳಲ್ಲಿ 9 ಬೌಂಡರಿಗಳೊಂದಿಗೆ ಜವಾಬ್ದಾರಿಯುತ 51 ರನ್‌ ಕೊಡುಗೆ ನೀಡಿದರು. ಉಳಿದಂತೆ ಸಾನಿಕಾ ಚಲ್ಕೆ 29 ರನ್‌ಗಳಿಸಿದ್ರೆ, ವೈಡ್‌, ನೋಬಾಲ್‌ನಿಂದಲೇ ಹೆಚ್ಚುವರಿ 18 ರನ್‌ ತಂಡಕ್ಕೆ ಸೇರ್ಪಡೆಯಾಯಿತು.

    209 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಸ್ಕಾಟ್‌ಲೆಂಡ್‌ ಮಹಿಳಾ ತಂಡ 14 ಓವರ್‌ಗಳಲ್ಲಿ ಕೇವಲ 58 ರನ್‌ಗಳಿಗೆ ಸರ್ವಪತನ ಕಂಡಿತು. ಪರಿಣಾಮ ಭಾರತದ ವನಿತೆಯರು 150 ರನ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಕಂಡಿತು.

  • ಭಾರತೀಯ ಕ್ರಿಕೆಟ್‌ ಇತಿಹಾಸದಲ್ಲೇ ಗರಿಷ್ಠ ರನ್‌ ದಾಖಲೆ – ಐರ್ಲೆಂಡ್‌ ವಿರುದ್ಧ ಸರಣಿ ಗೆದ್ದ ಸಿಂಹಿಣಿಯರು

    ಭಾರತೀಯ ಕ್ರಿಕೆಟ್‌ ಇತಿಹಾಸದಲ್ಲೇ ಗರಿಷ್ಠ ರನ್‌ ದಾಖಲೆ – ಐರ್ಲೆಂಡ್‌ ವಿರುದ್ಧ ಸರಣಿ ಗೆದ್ದ ಸಿಂಹಿಣಿಯರು

    ರಾಜ್‌ಕೋಟ್‌: ಐರ್ಲೆಂಡ್‌ ವಿರುದ್ಧ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ವನಿತೆಯರು (Team India Womens) ಇತಿಹಾಸ ನಿರ್ಮಿಸಿದ್ದಾರೆ.

    50 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 435 ರನ್‌ ಗಳಸಿದ ಭಾರತದ ವನಿಯರು 304 ರನ್‌ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಗೆಲುವಿನೊಂದಿಗೆ 3 ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್‌ಸ್ವೀಪ್‌ ಮಾಡಿದ್ದಾರೆ.

    ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 50 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 435 ರನ್‌ ಸಿಡಿಸಿತ್ತು. 436 ರನ್‌ಗಳ ಬೃಹತ್‌ ಮೊತ್ತದ ಗುರಿ ಪಡೆದ ಐರ್ಲೆಂಡ್‌ ಮಹಿಳಾ ತಂಡ (Ireland Womens Team) 131 ರನ್‌ಗಳಿಗೆ ಆಲೌಟ್‌ ಆಗಿ ಸೋಲೊಪ್ಪಿಕೊಂಡಿತು.

    ಸ್ಮೃತಿ, ಪ್ರತಿಕಾ ಶತಕಗಳ ಆರ್ಭಟ:
    ಆರಂಭಿಕರಾಗಿ ಕಣಕ್ಕಳಿದ ಪ್ರತೀಕಾ ರಾವಲ್ (Pratika Rawal) ಹಾಗೂ ಸ್ಮೃತಿ ಮಂಧಾನ (Smriti Mandhana) ಜೋಡಿ ಮೊದಲ ವಿಕೆಟ್‌ಗೆ 233 ರನ್‌ ಗಳ ಭರ್ಜರಿ ಜೊತೆಯಾಟ ನೀಡಿತು. ಆರಂಭದಿಂದಲೇ ಈ ಜೋಡಿ ಐರ್ಲೆಂಡ್‌ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ಚೆಂಡಾಡಿತು. ಪ್ರತೀಕಾ 129 ಎಸೆತಗಳಲ್ಲಿ 154 ರನ್‌ (20 ಬೌಂಡರಿ, 1 ಸಿಕ್ಸರ್)‌ ಚಚ್ಚಿದ್ರೆ, ಮತ್ತೋರ್ವ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ 80 ಎಸೆತಗಳಲ್ಲಿ ಸ್ಫೋಟಕ 135 ರನ್‌ (12 ಬೌಂಡರಿ, 7 ಸಿಕ್ಸರ್)‌ ಸಿಡಿಸಿ ಮಿಂಚಿದರು. ಇದು ತಂಡದ ಬೃಹತ್‌ ಮೊತ್ತಕ್ಕೆ ಕಾರಣವಾಯ್ತು. ಇದರೊಂದಿಗೆ ರಿಚಾ ಘೋಷ್‌ 59 ರನ್‌, ತೇಜಲ್ ಹಸಬ್ನಿಸ್ 28 ರನ್‌, ಹರ್ಲಿನ್‌ ಡಿಯೋಲ್‌ 15 ರನ್‌, ದೀಪ್ತಿ ಶರ್ಮಾ 11 ರನ್‌ ಹಾಗೂ ಜೆಮಿಮಾ ರೊಡ್ರಿಗ್ಸ್‌ 4 ರನ್‌ಗಳ ಕೊಡುಗೆ ನೀಡಿದರು.

    ಭಾರತದ ಇತಿಹಾಸದಲ್ಲೇ ಅತ್ಯಧಿಕ ರನ್‌:
    ಐರ್ಲೆಂಡ್‌ ವಿರುದ್ಧ ಸರಣಿಯ ಕೊನೇ ಪಂದ್ಯದಲ್ಲಿ ಭಾರತೀಯ ವನಿತೆಯರು 435 ರನ್‌ ಗಳಿಸಿದ್ದು, ಭಾರತೀಯ ಏಕದಿನ ಕ್ರಿಕೆಟ್‌ ಇತಿಹಾಸದಲ್ಲೇ ಗರಿಷ್ಠ ರನ್‌ ಆಗಿದೆ. ಪುರುಷರ ಏಕದಿನ ಕ್ರಿಕೆಟ್‌ನಲ್ಲಿ 2011ರಲ್ಲಿ ಭಾರತ ವೆಸ್ಟ್‌ಇಂಡೀಸ್‌ ವಿರುದ್ಧ 418 ರನ್‌ ಗಳಿಸಿದ್ದು, ಈವರೆಗಿನ ದಾಖಲಾಗಿತ್ತು.

    ಐತಿಹಾಸಿಕ ಜಯ
    ಭಾರತೀಯ ವನಿಯರು 304 ರನ್‌ಗಳ ಅಂತರದಲ್ಲಿ ಐರ್ಲೆಂಡ್‌ ವಿರುದ್ಧ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮಹಿಳೆಯರ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್‌ಗಳಿಂದ ಗೆಲುವು ಶಾಧಿಸಿದ 7ನೇ ತಂಡವೆಂಬ ವಿಶೇಷ ಸಾಧನೆಗೆ ಪಾತ್ರರಾದರು. ಇದಕ್ಕೂ ಮುನ್ನ ನ್ಯೂಜಿಲೆಂಡ್‌ (408 ರನ್‌), ಆಸೀಸ್‌ (374 ರನ್‌), ಆಸೀಸ್‌ (363 ರನ್‌), ನ್ಯೂಜಿಲೆಂಡ್‌ (347 ರನ್‌), ನ್ಯೂಜಿಲೆಂಡ್‌ (306 ರನ್‌), ನ್ಯೂಜಿಲೆಂಡ್‌ (305 ರನ್‌) ಕ್ರಮವಾಗಿ ಮೊದಲ 6 ಸ್ಥಾನಗಳಲ್ಲಿವೆ.

    ವಿಶ್ವದ 4ನೇ ತಂಡ:
    ಇನ್ನೂ ಭಾರತೀಯ ಮಹಿಳಾ ತಂಡ, ಏಕದಿನ ಕ್ರಿಕೆಟ್‌ನ ಇನ್ನಿಂಗ್ಸ್‌ವೊಂದರಲ್ಲಿ ಅತ್ಯಧಿಕ ರನ್‌ ಗಳಿಸಿದ 4ನೇ ತಂಡವಾಗಿಯೂ ಹೊರಹೊಮ್ಮಿದೆ. ಇದಕ್ಕೂ ಮುನ್ನ ನ್ಯೂಜಿಲೆಂಡ್‌ (491 ರನ್‌, 455 ರನ್‌, 440 ರನ್‌) ಮೊದಲ ಮೂರು ಸ್ಥಾನಗಳಲ್ಲಿದೆ.

  • ಚಾಂಪಿಯನ್‌ ಕಿವೀಸ್‌ ಮಹಿಳಾ ತಂಡಕ್ಕೆ 19.6 ಕೋಟಿ ಬಹುಮಾನ – ಟೀಂ ಇಂಡಿಯಾಕ್ಕೆ ಸಿಕ್ಕಿದ್ದೆಷ್ಟು?

    ಚಾಂಪಿಯನ್‌ ಕಿವೀಸ್‌ ಮಹಿಳಾ ತಂಡಕ್ಕೆ 19.6 ಕೋಟಿ ಬಹುಮಾನ – ಟೀಂ ಇಂಡಿಯಾಕ್ಕೆ ಸಿಕ್ಕಿದ್ದೆಷ್ಟು?

    ದುಬೈ: ಇದೇ ಮೊದಲ ಬಾರಿಗೆ ಮಹಿಳಾ ಟಿ20 ವಿಶ್ವಕಪ್‌ (Women’s T20 World Cup) ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡ ನ್ಯೂಜಿಲೆಂಡ್‌ ಮಹಿಳಾ ತಂಡ (New Zealand Womens Team) ಕೋಟಿ ಕೋಟಿ ನಗದು ಬಹುಮಾನ ಬಾಚಿಕೊಂಡಿದೆ. ಅಲ್ಲದೇ 2ನೇ ಬಾರಿಗೆ ರನ್ನರ್‌ ಪ್ರಶಸ್ತಿ ತನ್ನದಾಗಿಸಿಕೊಂಡ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಸಹ ನಗದು ಬಹುಮಾನ ಪಡೆದುಕೊಂಡಿದೆ.

    ಭಾನುವಾರ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ಮಹಿಳಾ ತಂಡ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 32 ರನ್‌ಗಳ ಗೆಲುವು ಸಾಧಿಸಿದ ಕಿವೀಸ್‌ ಇದೇ ಮೊದಲ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿತು. ಈ ಟ್ರೋಫಿಯೊಂದಿಗೆ 19.6 ಕೋಟಿ ರೂ. (2.34 ದಶಲಕ್ಷ ಡಾಲರ್‌) ನಗದು ಬಹುಮಾನವನ್ನು (Prize Money) ತನ್ನದಾಗಿಸಿಕೊಂಡಿತು. ಜೊತೆಗೆ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಬರೋಬ್ಬರಿ 9.8 ಕೋಟಿ ರೂ. (1.17 ದಶಲಕ್ಷ ಡಾಲರ್‌) ಬಹುಮಾನ ಪಡೆದುಕೊಂಡಿತು.

    ಭಾರತಕ್ಕೆ ಸಿಕ್ಕಿದ್ದೆಷ್ಟು?
    2024ರ ಮಹಿಳಾ ಟಿ20 ವಿಶ್ವಕಪ್‌ ಆವೃತ್ತಿಯ ಬಹುಮಾನವು ವಿನ್ನರ್‌ ಮತ್ತು ರನ್ನರ್‌ ಅಪ್‌ಗಳಿಗೆ ಸೀಮಿತವಾಗಿರದೇ ಸೆಮಿಸ್‌, ಲೀಗ್‌ ಸುತ್ತಿನಲ್ಲಿ ಉತ್ತಮ ಪ್ರದರ್ಶನ ನೀಡಿದ ಮೂರು ತಂಡಗಳಿಗೂ ಬಹುಮಾನ ನೀಡಲಾಗುತ್ತಿದೆ. ಸೆಮಿ ಫೈನಲ್‌ನಲ್ಲಿ ಸೋತು ನಿರಾಸೆ ಅನುಭವಿಸಿದ ಆಸ್ಟ್ರೇಲಿಯಾ ಮಹಿಳಾ ತಂಡ 5.7 ಕೋಟಿ ರೂ. (6,75,000 ದಶಲಕ್ಷ ಡಾಲರ್‌) ಬಹುಮಾನ ಪಡೆದುಕೊಂಡಿದೆ. ಇದನ್ನೂ ಓದಿ: 36 ವರ್ಷಗಳ ಬಳಿಕ ಭಾರತದ ನೆಲದಲ್ಲಿ ಟೆಸ್ಟ್‌ ಗೆದ್ದ ಕಿವೀಸ್‌ – ಟೀಂ ಇಂಡಿಯಾ ಸೋಲಿಗೆ ಕಾರಣಗಳೇನು?

    ಸದ್ಯ ಗುಂಪು ಹಂತದ ಪಂದ್ಯಗಳಲ್ಲಿ ಇನ್ನೂ ರೇಟಿಂಗ್ಸ್‌ ನಿಗದಿಪಡಿಸಿಲ್ಲ. ಆದ್ರೆ ಲೀಗ್‌ ಸುತ್ತಿನ 4 ಪಂದ್ಯಗಳ ಪೈಕಿ 2 ರಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ (Team India Womens) 2.25 ಕೋಟಿ ರೂ. (2,70,000 ದಶಲಕ್ಷ ಡಾಲರ್)‌ ಬಹುಮಾನ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಲೀಗ್‌ ಸುತ್ತಿನ ಮೂರು ತಂಡಗಳಿಗೂ ಒಂದೇ ಮೊತ್ತದ ಬಹುಮಾನ ನೀಡಲಾಗುತ್ತದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ICC Women’s T20 World Cup | ನ್ಯೂಜಿಲೆಂಡ್‌ಗೆ ಚೊಚ್ಚಲ ಚಾಂಪಿಯನ್‌ ಕಿರೀಟ

    ಕಿವೀಸ್‌ಗೆ ಐತಿಹಾಸಿಕ ಗೆಲುವು:
    ಈ ಹಿಂದೆಯೂ ಎರಡು ಬಾರಿ ಫೈನಲ್ ತಲುಪಿದ್ದ ನ್ಯೂಜಿಲೆಂಡ್ ಮಹಿಳಾ ತಂಡ 2009ರಲ್ಲಿ ಇಂಗ್ಲೆಂಡ್ ವಿರುದ್ಧ, 2010ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡು ರನ್ನರ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಇನ್ನೂ 2023ರಲ್ಲಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾ ವಿರುದ್ಧ ಸೋತು ರನ್ನರ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಇದೀಗ 14 ವರ್ಷಗಳ ಬಳಿಕ ಫೈನಲ್ ಪ್ರವೇಶಿಸಿದ ಕಿವೀಸ್ ಮಹಿಳಾ ತಂಡ ಚೊಚ್ಚಲ ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

    ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಸೋಫಿ ಡಿವೈನ್‌ ನಾಯಕತ್ವದ ನ್ಯೂಜಿಲೆಂಡ್ ಆರಂಭಿಕ ಹಿನ್ನಡೆ ಅನುಭವಿಸಿದರೂ ಸವಾಲಿನ ಮೊತ್ತ ಕಲೆಹಾಕಿತು. 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತ್ತು. ಗೆಲುವಿಗೆ 159 ರನ್ ಗುರಿ ಪಡೆದ ದಕ್ಷಿಣ ಆಫ್ರಿಕಾ ತಂಡ 9 ವಿಕೆಟ್‌ಗಳಿಗೆ 126 ರನ್‌ಗಳಷ್ಟೇ ಗಳಿಸಲು ಸಾಧ್ಯವಾಗಿ ಸೋಲು ಕಂಡಿತು. ಇದನ್ನೂ ಓದಿ:  ನಂಬಿಕೆ ಇಲ್ಲದಿದ್ರೆ ಪ್ರತಿ ಪಂದ್ಯ ಮುಗಿದ ಬಳಿಕ ಭಾರತಕ್ಕೆ ಮರಳಬಹುದು: ಬಿಸಿಸಿಐಗೆ ಪಾಕ್‌ ಹೊಸ ಆಫರ್‌ 

  • ಜಿದ್ದಾ ಜಿದ್ದಿ ಕಣದಲ್ಲಿ ಗೆದ್ದು ಬೀಗಿದ ಭಾರತ; ಪಾಕ್‌ ವಿರುದ್ಧ 6 ವಿಕೆಟ್‌ ಜಯ – ಸೆಮಿಸ್‌ ಕನಸು ಜೀವಂತ

    ಜಿದ್ದಾ ಜಿದ್ದಿ ಕಣದಲ್ಲಿ ಗೆದ್ದು ಬೀಗಿದ ಭಾರತ; ಪಾಕ್‌ ವಿರುದ್ಧ 6 ವಿಕೆಟ್‌ ಜಯ – ಸೆಮಿಸ್‌ ಕನಸು ಜೀವಂತ

    ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಜಿದ್ದಾಜಿದ್ದಿ ಕಣದಲ್ಲಿ ಭಾರತ ಮಹಿಳಾ ತಂಡವು ಪಾಕಿಸ್ತಾನ (Ind vs Pak) ಮಹಿಳಾ ತಂಡದ ವಿರುದ್ಧ 6 ವಿಕೆಟ್‌ಗಳ ಅಮೋ ಗೆಲುವು ಸಾಧಿಸಿದೆ. ಇದರೊಂದಿಗೆ ಟಿ20 ವಿಶ್ವಕಪ್‌ (Women’s T20 World Cup) ಪ್ರಸಕ್ತ ಆವೃತ್ತಿಯಲ್ಲಿ ಗೆಲುವಿನ ಖಾತೆ ತೆರೆದು ಸೆಮಿಸ್‌ ಕನಸು ಜೀವಂತವಾಗಿರಿಸಿಕೊಂಡಿದೆ.

    ಟಾಸ್‌ ಗೆದ್ದು ಮೊದಲು ಬ್ಯಾಟ್‌ ಬೀಸಿದ ಪಾಕಿಸ್ತಾನ ತಂಡ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 105 ರನ್‌ ಗಳಿಸಿತ್ತು. ಅಲ್ಪಮೊತ್ತದ ಗುರಿ ಬೆನ್ನಟ್ಟಿದ್ದ ಭಾರತ 18.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 106 ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

    ಅಲ್ಪ ಮೊತ್ತದ ಗುರಿ ಪಡೆದು ಇನ್ನಿಂಗ್ಸ್‌ ಆರಂಭಿಸಿದ ಭಾರತ ನಿಧಾನಗತಿಯ ಬ್ಯಾಟಿಂಗ್‌ ಆರಂಭಿಸಿತ್ತು. ಒಂದೆಡೆ ರನ್‌ ಕಲೆಹಾಕುತ್ತಿದ್ದರೂ ಮತ್ತೊಂದು ಕಡೆ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತ್ತು. ಆದ್ರೆ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗ್ಸ್‌, ನಾಯಕಿ‌ ಹರ್ಮನ್‌ ಪ್ರೀತ್‌ ಕೌರ್‌ ಅವರ ಸಂಘಟಿತ ಪ್ರದರ್ಶನ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾಯಿತು.

    ಪಾಕ್‌ಗೆ ಟರ್ನಿಂಗ್‌ ಸಿಕ್ಕಿದ್ದೆಲ್ಲಿ?
    ಒಂದೆಡೆ ರನ್‌ ಕಲೆಹಾಕುತ್ತಾ ಸಾಗಿದ ಭಾರತ ಮಹಿಳಾ ತಂಡಕ್ಕೆ ಪಾಕ್‌ ಕಠಿಣ ಪೈಪೋಟಿ ನೀಡಿತ್ತು. 16ನೇ ಓವರ್‌ನಲ್ಲಿ ನಾಯಕಿ ಫಾತಿಮಾ ಸನಾ ಅವರು ರೊಡ್ರಿಗ್ಸ್‌ ಹಾಗೂ ರಿಚಾಘೋಷ್‌ ಅವರ ಬ್ಯಾಕ್‌ ಟು ಬ್ಯಾಕ್‌ ವಿಕೆಟ್‌ ಪಡೆದರು. ಇದರಿಂದ ಪಾಕ್‌ ಗೆಲುವಿನ ಕನಸು ಕಂಡಿತ್ತು. ಬಳಿಕ ಕಣಕ್ಕಿಳಿದ ಹರ್ಮನ್‌ಪ್ರೀತ್‌ ಪಂದ್ಯದ ದಿಕ್ಕನ್ನೇ ಬದಲಿಸಿ, ತಂಡವನ್ನು ಗೆಲುವಿನ ದಡ ಸೇರಿಸಿದರು.

    ಟೀಂ ಇಂಡಿಯಾ ಪರ ಶಫಾಲಿ ವರ್ಮಾ 32 ರನ್‌, ಜೆಮಿಮಾ ರೊಡ್ರಿಗ್ಸ್‌ 23 ರನ್‌, ಹರ್ಮನ್‌ ಪ್ರೀತ್‌ ಕೌರ್‌ 29 ರನ್‌ ಗಳಿಸಿದ್ರೆ, ದೀಪ್ತಿ ಶರ್ಮಾ 7 ರನ್‌, ಸಜೀವನ್‌ ಸಜನಾ 4 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರು.

    ಪಾಕ್‌ ಪರ ಫಾತಿಮಾ ಸನಾ 2 ವಿಕೆಟ್‌ ಕಿತ್ತರೆ, ಒಮೈಮಾ ಸೋಹಾಲ್‌, ಸೈದಾ ಇಕ್ಬಾಲ್‌ ತಲಾ ಒಂದೊಂದು ವಿಕೆಟ್‌ ಕಿತ್ತರು.

    ಪಾಕ್‌ ತಂಡದ ಆಟಗಾರ್ತಿಯರನ್ನು ಭಾರತದ ಬೌಲರ್‌ಗಳು ಇನ್ನಿಲ್ಲದಂತೆ ಕಾಡಿದರು. ಆರಂಭಿಕ ಬ್ಯಾಟರ್ ಗುಲ್ ಫಿರೋಜಾ ಅವರು ಖಾತೆ ತೆರೆಯುವ ಮುನ್ನವೇ, ವೇಗಿ ರೇಣುಕಾ ಠಾಕೂರ್ ಸಿಂಗ್ ಮೊದಲ ಓವರ್‌ನಲ್ಲೇ ಪೆವಿಲಿಯನ್‌ಗೆ ಅಟ್ಟಿದರು. ನಂತರ ಕಣಕ್ಕಿಳಿದ ಸಿದ್ರಾ ಅಮಿನ್ (8) ಅವರನ್ನು ದೀಪ್ತಿ ಶರ್ಮಾ ಹೆಚ್ಚು ಹೊತ್ತು ಉಳಿಯದಂತೆ ನೋಡಿಕೊಂಡರು. ನಿದಾ ದರ್ (28 ರನ್) ಹೊರತುಪಡಿಸಿ ಉಳಿದವರು ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡುವಲ್ಲಿ ವಿಫಲರಾದರು.

    ಪಾಕಿಸ್ತಾನ ಪರ ಬ್ಯಾಟಿಂಗ್ ನಲ್ಲಿ ಮುನೀಬಾ ಅಲಿ 17, ನಿದಾ ದಾರ್ 28 ಮತ್ತು ಸೈದಾ ಶಾ ಅಜೇಯ 14 ರನ್ ಪೇರಿಸಿದರು. ಭಾರತ ಪರ ಬೌಲಿಂಗ್ ನಲ್ಲಿ ಅರುಂಧತಿ ರೆಡ್ಡಿ 3, ಶ್ರೇಯಾಂಕಾ ಪಟೇಲ್ 2, ರೇಣುಕಾ ಸಿಂಗ್, ದೀಪ್ತಿ ಶರ್ಮಾ, ಆಶಾ ಶೋಭನ ತಲಾ 1 ವಿಕೆಟ್ ಪಡೆದರು.

    ಭಾರತದ ಪರ ಅರುಂಧತಿ ರೆಡ್ಡಿ 3 ವಿಕೆಟ್ ಪಡೆದರೆ, ಕರ್ನಾಟಕದ ಶ್ರೇಯಂಕಾ ಪಾಟೀಲ್ 2 ವಿಕೆಟ್ ಉರುಳಿಸಿದರು. ರೇಣುಕಾ, ದೀಪ್ತಿ ಹಾಗೂ ಆಶಾ ಶೋಬನಾ ತಲಾ ಒಂದೊಂದು ವಿಕೆಟ್ ಉರುಳಿಸಿದರು.

  • Women’s Asia Cup: ಸ್ಮೃತಿ, ರೇಣುಕಾ ಶೈನ್‌ – ಬಾಂಗ್ಲಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ; ಫೈನಲ್‌ ಪ್ರವೇಶಿಸಿದ ಭಾರತ!

    Women’s Asia Cup: ಸ್ಮೃತಿ, ರೇಣುಕಾ ಶೈನ್‌ – ಬಾಂಗ್ಲಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ; ಫೈನಲ್‌ ಪ್ರವೇಶಿಸಿದ ಭಾರತ!

    ಡಂಬುಲ್ಲಾ: ಮಹಿಳಾ ಏಷ್ಯಾಕಪ್‌ (Women’s Asia Cup) ಟೂರ್ನಿಯ ಸೆಮಿಫೈನಲ್‌ ಪಂದ್ಯದಲ್ಲಿ ಬಾಂಗ್ಲಾದೇಶ ಮಹಿಳಾ ತಂಡದ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ಭಾರತೀಯ ಮಹಿಳಾ ಕ್ರಿಕೆಟ್‌ ತಂಡ (India Womens Team) ಸತತ 5ನೇ ಬಾರಿಗೆ ಫೈನಲ್‌ ತಲುಪಿತು.

    2012, 2016, 2018, 2022ರಲ್ಲಿ ಫೈನಲ್‌ ಪ್ರವೇಶಿಸಿದ್ದ ಭಾರತ 2018 ಹೊರತುಪಡಿಸಿ ಮೂರು ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. 2018ರಲ್ಲಿ ಬಾಂಗ್ಲಾ (Bangladesh Womens) ವಿರುದ್ಧವೇ ಸೋತು ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಇದೀಗ ಸತತ 5ನೇ ಬಾರಿಗೆ ಫೈನಲ್‌ ಪ್ರವೇಶಿಸಿರುವ ಭಾರತ ಮತ್ತೊಮ್ಮೆ ಚಾಂಪಿಯನ್‌ ಆಗಿ ಹೊರಹೊಮ್ಮುವ ಭರವಸೆ ಮೂಡಿಸಿದೆ.

    ಶುಕ್ರವಾರ ಡಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ನಡೆಸಿದ ಬಾಂಗ್ಲಾದೇಶ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 80 ರನ್​ ಬಾರಿಸಿತು. ಅಲ್ಪ ಮೊತ್ತದ ಗುರಿ ಬೆನ್ನಟ್ಟಿದ ಭಾರತ 11 ಓವರ್​ಗಳಲ್ಲಿ ಯಾವುದೇ ವಿಕೆಟ್​ ನಷ್ಟವಿಲ್ಲದೇ 83 ರನ್​ ಬಾರಿಸಿ ಗೆಲುವಿನ ನಗೆ ಬೀರಿತು.

    ಚೇಸಿಂಗ್‌ ಆರಂಭಿಸಿದ ಭಾರತದ ಪರ ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮಾ (Shafali Verma) 26 ರನ್‌ (28 ಎಸೆತ, 2 ಬೌಂಡರಿ), ಸ್ಮೃತಿ ಮಂಧಾನ (Smriti Mandhana) 55 ರನ್‌ (39 ಎಸೆತ, 9 ಬೌಂಡರಿ, 1 ಸಿಕ್ಸರ್‌) ಬಾರಿಸಿ ಅಜೇಯರಾಗುಳಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಬಾಂಗ್ಲಾ ದೇಶದ ವಿರುದ್ಧ ಭಾರತದ ಬೌಲರ್‌ಗಳು ಘಾತುಕ ದಾಳಿ ನಡೆಸಿದರು. ಮಧ್ಯಮವೇಗಿ ರೇಣುಕಾ ಸಿಂಗ್‌ 4 ಓವರ್‌ಗಳಲ್ಲಿ 1 ಮೇಡಿನ್‌ ಸಹಿತ ಕೇವಲ 10 ರನ್‌ ಬಿಟ್ಟುಕೊಟ್ಟು 3 ವಿಕೆಟ್‌ ಕಿತ್ತರು. ಇದೇ ವೇಳೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 50 ವಿಕೆಟ್​ಗಳ ಮೈಲುಗಲ್ಲು ತಲುಪಿದರು. ಇದರೊಂದಿಗೆ ರಾಧಾ ಯಾದವ್‌ 4 ಓವರ್‌ಗಳಲ್ಲಿ 3 ವಿಕೆಟ್‌ ಕಿತ್ತರೆ, ಪೂಜಾ ವಸ್ತ್ರಕಾರ್‌ ಹಾಗೂ ದೀಪ್ತಿ ಶರ್ಮಾ ತಲಾ ಒಂದೊಂದು ವಿಕೆಟ್‌ ಕಿತ್ತರು.

    ಬಾಂಗ್ಲಾ ಪರ ನಾಯಕಿ ನಿಗರ್ ಸುಲ್ತಾನಾ 51 ಎಸೆತ ಎದುರಿಸಿ 32 ರನ್​, ಶೋರ್ನಾ ಅಖ್ತರ್​ 19 ರನ್ ಗಳಿಸಿದ್ರೆ, ಉಳಿದ ಆಟಗಾರರು ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದರು.

    ಶುಕ್ರವಾರ (ಇಂದು) ರಾತ್ರಿ ನಡೆಯುವ ಮತ್ತೊಂದು ಸೆಮಿಫೈನಲ್​ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಆತಿಥೇಯ ಶ್ರೀಲಂಕಾ ಮುಖಾಮುಖಿಯಾಗಲಿವೆ. ಗೆದ್ದ ತಂಡ ಫೈನಲ್‌ನಲ್ಲಿ ಭಾರತ ತಂಡದೊಂದಿಗೆ ಫೈನಲ್‌ನಲ್ಲಿ ಸೆಣಸಲಿದೆ.

  • Women’s Asia Cup: ನೇಪಾಳ ವಿರುದ್ಧ 82 ರನ್‌ಗಳ ಭರ್ಜರಿ ಗೆಲುವು – ಸೆಮಿಸ್‌ಗೆ ಲಗ್ಗೆಯಿಟ್ಟ ಭಾರತ

    Women’s Asia Cup: ನೇಪಾಳ ವಿರುದ್ಧ 82 ರನ್‌ಗಳ ಭರ್ಜರಿ ಗೆಲುವು – ಸೆಮಿಸ್‌ಗೆ ಲಗ್ಗೆಯಿಟ್ಟ ಭಾರತ

    ಡಂಬುಲ್ಲಾ: ಶಫಾಲಿ ವರ್ಮಾ (Shafali Verma) ಸ್ಫೋಟಕ ಬ್ಯಾಟಿಂಗ್‌, ಸಂಘಟಿತ ಬೌಲಿಂಗ್‌ ಪ್ರದರ್ಶನದಿಂದ ಭಾರತ ಮಹಿಳಾ ಕ್ರಿಕೆಟ್‌ ತಂಡವು ನೇಪಾಳ ತಂಡದ ವಿರುದ್ಧ 82 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 2024ರ ಮಹಿಳಾ ಟಿ20 ಏಷ್ಯಾಕಪ್‌ (Women’s Asia Cup 2024) ಟೂರ್ನಿಯ ಸೆಮಿಫೈನಲ್‌ ಪ್ರವೇಶಿಸಿದೆ. ಹಾಲಿ ಚಾಂಪಿಯನ್ಸ್‌ ಸಹ ಆಗಿರುವ ಭಾರತ 2024ರಲ್ಲಿ ಮಹಿಳಾ ಏಷ್ಯಾಕಪ್‌ ಟೂರ್ನಿಯ ಸೆಮಿಸ್‌ಗೆ ಎಂಟ್ರಿ ಕೊಟ್ಟ ಮೊದಲ ತಂಡವೂ ಆಗಿದೆ.

    ಇಲ್ಲಿನ ರಣಗಿರಿ ದಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 178 ರನ್‌ ಬಾರಿಸಿತ್ತು. 179 ರನ್‌ಗಳ ಗುರಿ ಬೆನ್ನಟ್ಟಿದ ನೇಪಾಳ ತಂಡ (Nepal Womens Team) ನಿಗದಿತ ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ ಕೇವಲ 96 ರನ್‌ಗಳಿಸಿ ಹೀನಾಯ ಸೋಲು ಕಂಡಿತು. ಇದನ್ನೂ ಓದಿ: ಭದ್ರತಾ ಕಾರಣಕ್ಕಾಗಿ ಭಾರತ ಸರ್ಕಾರ ಅನುಮತಿ ನಿರಾಕರಿಸಿದ್ರೆ ಬಿಸಿಸಿಐ ಬರೆದುಕೊಡಲಿ – ಪಾಕ್‌ ಪಟ್ಟು!

    ಸ್ಮೃತಿ ಮಂಧಾನ (Smriti Mandhana) ನಾಯಕತ್ವದಲ್ಲಿ ಕಣಕ್ಕಿಳಿದ ಟೀಂ ಇಂಡಿಯಾ ಪರ ಶಫಾಲಿ ವರ್ಮಾ ಎದುರಾಳಿ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ದಂಡಿಸಿದರು. 48 ಎಸೆತಗಳಲ್ಲಿ ಸ್ಫೋಟಕ 81 ರನ್‌ (12 ಬೌಂಡರಿ, 1 ಸಿಕ್ಸರ್)‌ ಚಚ್ಚಿದರು. ಇದರೊಂದಿಗೆ ದಯಾಳನ್‌ ಹೇಮಲತಾ 47 ರನ್‌ (42 ಎಸೆತ, 5 ಬೌಂಡರಿ, 1 ಸಿಕ್ಸರ್)‌, ಸಜೀವನ್‌ ಸಜನ 10 ರನ್‌, ಜೆಮಿಮಾ ರೊಡ್ರಿಗ್ಸ್‌ 28 ರನ್‌ ಹಾಗೂ ರಿಚಾ ಘೋಷ್‌ 6 ರನ್‌ ಗಳಿಸಿ ಮಿಂಚಿದರು. ಇದನ್ನೂ ಓದಿ: Paris Olympic 2024: ಭಾರತೀಯ ಕ್ರೀಡಾಪಟುಗಳಿಗೆ 8.5 ಕೋಟಿ ನೆರವು ಘೋಷಿಸಿದ ಬಿಸಿಸಿಐ

    ಸ್ಫರ್ಧಾತ್ಮಕ ಗುರಿ ಬೆನ್ನಟ್ಟಿದ ನೇಪಾಳ ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿ, ಆರಂಭದಿಂದಲೇ ವಿಕೆಟ್‌ ಕಳೆದುಕೊಂಡಿತು. ನೇಪಾಳ ಪರ ನಾಯಕಿ ಇಂದು ಬರ್ಮಾ 14 ರನ್‌, ಸೀತಾ ರಾಣಾ ಮಗರ್ 18 ರನ್‌, ರುಬಿನಾ 15 ರನ್‌ ಹಾಗೂ ಬಿಂದು 17 ರನ್‌ ಗಳಿಸಿದ್ದು ಬಿಟ್ಟರೆ, ಉಳಿದ ಆಟಗಾರ್ತಿಯರು ಅಲ್ಪಮೊತ್ತಕ್ಕೆ ಪೆವಿಲಿಯನ್‌ನತ್ತ ಮುಖ ಮಾಡಿದರು. ಇದರಿಂದ ಗೆಲುವು ಸುಲಭವಾಗಿ ಭಾರತದ ವನಿತೆಯರ ಪಾಲಾಯಿತು.

    ಟೀಂ ಇಂಡಿಯಾ ಪರ ದೀಪ್ತಿ ಶರ್ಮಾ 3 ವಿಕೆಟ್‌ ಕಿತ್ತರೆ, ಅರುಂಧತಿ ರೆಡ್ಡಿ, ರಾಧಾ ಯಾದವ್‌ ತಲಾ 2 ವಿಕೆಟ್‌ ಹಾಗೂ ರೇಣಿಕಾ ಸಿಂಗ್‌ 1 ವಿಕೆಟ್‌ ಪಡೆದು ಮಿಂಚಿದರು. ಇದನ್ನೂ ಓದಿ: ಮುಂಬೈಗೆ ಗುಡ್‌ಬೈ ಹೇಳ್ತಾರಾ ರೋಹಿತ್‌, ಬುಮ್ರಾ, ಸೂರ್ಯ? – 2025ರ ಐಪಿಎಲ್‌ನ ಮಹತ್ವದ 5 ಬೆಳವಣಿಗೆಗಳು ಹೀಗಿವೆ

  • ಆಫ್ರಿಕಾ ವಿರುದ್ಧ 10 ವಿಕೆಟ್‌ಗಳ ಜಯ – ಭಾರತದ ವನಿತೆಯರಿಗೆ ಮತ್ತೊಂದು ಕಿರೀಟ!

    ಆಫ್ರಿಕಾ ವಿರುದ್ಧ 10 ವಿಕೆಟ್‌ಗಳ ಜಯ – ಭಾರತದ ವನಿತೆಯರಿಗೆ ಮತ್ತೊಂದು ಕಿರೀಟ!

    ಚೆನ್ನೈ: ಶಫಾಲಿ ವರ್ಮಾ, ಸ್ಮೃತಿ ಮಂಧಾನ (Smriti Mandhana) ಅವರ ಬ್ಯಾಟಿಂಗ್‌ ನೆರವು ಹಾಗೂ ಸ್ನೇಹ್‌ ರಾಣಾ ಅವರ ಅಮೋಘ ಬೌಲಿಂಗ್‌ ಪ್ರದರ್ಶನದಿಂದ ಟೀಂ ಇಂಡಿಯಾ ಮಹಿಳಾ ತಂಡವು ದಕ್ಷಿಣಾ ಆಫ್ರಿಕಾ ಮಹಿಳಾ (South Africa Women) ತಂಡದ ವಿರುದ್ಧ ಏಕೈಕ ಟೆಸ್ಟ್‌ ಪಂದ್ಯದಲ್ಲಿ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಕ್ಲೀನ್‌ ಸ್ವೀಪ್‌ ಸಾಧನೆ ಮಾಡಿದ್ದ ವನಿತೆಯರು ಇದೀಗ ಟೆಸ್ಟ್‌ ಕ್ರಿಕೆಟ್‌ನಲ್ಲಿ (Test Cricket) ಗೆಲುವು ಸಾಧಿಸಿದ್ದಾರೆ.

    ಚೆನ್ನೈನ (Chennai) ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆದ ಏಕೈಕ ಟೆಸ್ಟ್‌ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ 37 ರನ್‌ ಗುರಿ ಪಡೆದ ಭಾರತ ಮಹಿಳಾ ತಂಡ 9.2 ಓವರ್‌ಗಳಲ್ಲೇ ಗುರಿ ತಲುಪಿ ಗೆಲುವು ಸಾಧಿಸಿದೆ. ಶಫಾಲಿ ವರ್ಮಾ ಮತ್ತೆ 24 ರನ್, ಶುಭಾ ಸತೀಶ್ 13 ಅಜೇಯರಾಗಿ ಉಳಿದರು. ಇದನ್ನೂ ಓದಿ: ವಿಶ್ವಕಪ್‌ ಗೆಲ್ಲಲು ಕಾರಣವಾಗಿದ್ದು 3 ಮಹತ್ವದ ನಿರ್ಧಾರ – ಟೀಂ ಇಂಡಿಯಾ ಸಿದ್ಧಗೊಂಡಿದ್ದು ಹೇಗೆ?

    ಟಾಸ್ ಗೆದ್ದು ಮೊದಲ ಬ್ಯಾಟ್​ ಮಾಡಿದ ಹರ್ಮನ್​ ಪ್ರೀತ್ ಕೌರ್‌ (Harmanpreet Kaur) ಬಳಗ ಮೊದಲ ಇನ್ನಿಂಗ್ಸ್‌ನಲ್ಲಿ ಬೃಹತ್​ ಮೊತ್ತ ಪೇರಿಸಿತ್ತು. 115.1 ಓವರ್​​​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 603 ರನ್ ಗಳಿಸಿ ಡಿಕ್ಲೇರ್‌ ಮಾಡಿಕೊಂಡಿತ್ತು. ಪ್ರತಿಯಾಗಿ ಆಡಿದ್ದ ದಕ್ಷಿಣ ಆಫ್ರಿಕಾ ವನಿತೆಯರ ತಂಡ ಮೊದಲ ಇನ್ನಿಂಗ್ಸ್​​ನಲ್ಲಿ 84.3 ಓವರ್​ಗಳಿಗೆ 266 ರನ್ ಗಳಿಸಿ ಆಲೌಟ್‌ ಆಯಿತು. ಬಳಿಕ ಫಾಲೋ ಆನ್‌ ಗುರಿಯೊಂದಿಗೆ 2ನೇ ಇನ್ನಿಂಗ್ಸ್‌ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡ 154.4 ಓವರ್‌ಗಳಲ್ಲಿ 373 ಗಳಿಸಿ ಆಲೌಟ್‌ ಆಯಿತು. ಇದರಿಂದ ಭಾರತ ತಂಡ 37 ರನ್​ಗಳ ಗುರಿ ಪಡೆದು ಸುಲಭ ಜಯ ದಾಖಲಿಸಿತು.

    ಮೊದಲ ಇನ್ನಿಂಗ್ಸ್‌ನಲ್ಲಿ ಮಿಂಚಿದ ಬ್ಯಾಟರ್ಸ್‌:
    ಮೊದಲ ಇನ್ನಿಂಗ್ಸ್‌ನಲ್ಲಿ ಭಾರತದ ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮಾ ಸ್ಫೋಟಕ ದ್ವಿಶತಕ ದಾಖಲಿಸಿದರು. ಇದರೊಂದಿಗೆ ಸ್ಮೃತಿ ಮಂಧಾನ ಅಮೋಘ ಶತಕ ಸಿಡಿಸಿದರು. ಮೊದಲ ವಿಕೆಟ್​ಗೆ ಈ ಜೋಡಿ 292 ರನ್​ಗಳ ಜತೆಯಾಟ ನೀಡಿತ್ತು. ಸ್ಮೃತಿ ಮಂಧಾನ 161 ಎಸೆತಗಳಲ್ಲಿ 26 ಬೌಂಡರಿ, 1 ಸಿಕ್ಸರ್ ಸಹಿತ 149 ರನ್ ಗಳಿಸಿ ಔಟಾದರೆ. ಶಫಾಲಿ 197 ಎಸೆತಗಳಲ್ಲಿ 23 ಬೌಂಡರಿ, 8 ಸಿಕ್ಸರ್ ಸಹಿತ ದಾಖಲೆಯ ದ್ವಿಶತಕ ಸಿಡಿಸಿದರು. ಬಳಿಕ ಜೆಮಿಮಾ ರೋಡ್ರಿಗ್ಸ್‌ 55 ರನ್‌, ಹರ್ಮನ್​ಪ್ರೀತ್ ಕೌರ್ 69 ರನ್‌, ರಿಚಾ ಘೋಷ್ 86 ರನ್ ಸಿಡಿಸಿ ಮಿಂಚಿದರು.

    ಸ್ನೇಹ್ ರಾಣಾ ದಾಳಿಗೆ ಆಫ್ರಿಕಾ ತತ್ತರ:
    ಮೊದಲ ಇನ್ನಿಂಗ್ಸ್​ ಬ್ಯಾಟ್​ ಮಾಡಿದ ದಕ್ಷಿಣ ಆಫ್ರಿಕಾ ತಂಡ ಸ್ನೇಹ್ ರಾಣಾ ಬೌಲಿಂಗ್ ದಾಳಿಗೆ ತತ್ತರಿಸಿತು. ಇದರ ನಡುವೆಯೂ ಸುನೆ ಲುಸ್ 65 ರನ್‌ ಮತ್ತು ಮರಿಜಾನ್ನೆ ಕಪ್ 74 ರನ್‌ ಗಳಿಸಿ ಬ್ಯಾಟಿಂಗ್‌ ಬಲ ನೀಡಿದ್ದರು. ಇದರೊಂದಿಗೆ ದೀಪ್ತಿ ಶರ್ಮಾ 2 ವಿಕೆಟ್ ಪಡೆದರೆ, ಸ್ನೇಹ್​ ರಾಣಾ 8 ವಿಕೆಟ್ ಕಿತ್ತರು. ಇದನ್ನೂ ಓದಿ: ಐಸಿಸಿ ಕನಸಿನ ತಂಡ ಪ್ರಕಟ – ಕೊಹ್ಲಿಗಿಲ್ಲ ಸ್ಥಾನ, ಪಟ್ಟಿಯಲ್ಲಿದ್ದಾರೆ 6 ಟೀಂ ಇಂಡಿಯಾ ಆಟಗಾರರು

    ವೋಲ್ವರ್ತ್​​ ಮತ್ತು ಸುನೆ ಲೂಸ್ ಶತಕ:
    337 ರನ್​ಗಳ ಹಿನ್ನಡೆ ಅನುಭವಿಸಿದ ಪ್ರವಾಸಿ 2ನೇ ಇನ್ನಿಂಗ್ಸ್​ನಲ್ಲಿ ಉತ್ತಮ ಪ್ರದರ್ಶನ ನೀಡಿತು. ನಾಯಕಿ ಲಾರಾ ವೋಲ್ವರ್ತ್​​ ಮತ್ತು ಸುನೆ ಲುಸ್​ ಶತಕ ಸಿಡಿಸಿ ಗಮನ ಸೆಳೆದರು. ಲಾರಾ 16 ಬೌಂಡರಿ ಸಹಿತ 122 ರನ್ ಬಾರಿಸಿದರೆ ಲುಸ್​ 203 ಎಸೆತಗಳಲ್ಲಿ 18 ಬೌಂಡರಿ ಸಹಿತ 109 ರನ್ ಗಳಿಸಿದರು. ನಾಡಿನ್ ಡಿ ಕ್ಲರ್ಕ್ 61 ರನ್‌ ಸಿಡಿಸಿದರು. ಮೊದಲ ಇನ್ನಿಂಗ್ಸ್​​ನಲ್ಲಿ 8 ವಿಕೆಟ್ ಕಿತ್ತಿದ್ದ ಸ್ನೆಹ್ ರಾಣಾ 2ನೇ ಇನ್ನಿಂಗ್ಸ್​​ನಲ್ಲಿ 2 ವಿಕೆಟ್ ಪಡೆದರು. ದೀಪ್ತಿ ಶರ್ಮಾ, ರಾಜೇಶ್ವರಿ ಗಾಯಕ್ವಾಡ್ ತಲಾ 2 ವಿಕೆಟ್ ಕಿತ್ತರು, ಶಫಾಲಿ ವರ್ಮಾ, ಹರ್ಮನ್ ಪ್ರೀತ್ ಕೌರ್ ತಲಾ 1 ವಿಕೆಟ್ ಪಡೆದು ದಕ್ಷಿಣ ಆಫ್ರಿಕಾದ ಆಟವನ್ನು ಕೊನೆಗೊಳಿಸಿದರು.

    4ನೇ ದಿನದಾಟದಲ್ಲಿ 37 ರನ್‌ಗಳ ಗುರಿ ಪಡೆದ ಭಾರತ 9.2 ಓವರ್​​​ಗಳಲ್ಲೇ 37 ರನ್ ಗಳಿಸಿತು. ಇದನ್ನೂ ಓದಿ: `ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು’ – ಭಗವದ್ಗೀತೆಯ ಸಂದೇಶ ಹಂಚಿಕೊಂಡ ಅಖ್ತರ್

    ಸಂಕ್ಷಿಪ್ತ ಸ್ಕೋರ್‌
    ಟೀಂ ಇಂಡಿಯಾ
    ಮೊದಲ ಇನ್ನಿಂಗ್ಸ್‌ – 603/6d
    2ನೇ ಇನ್ನಿಂಗ್ಸ್‌ – 37/0

    ದಕ್ಷಿಣ ಆಫ್ರಿಕಾ
    ಮೊದಲ ಇನ್ನಿಂಗ್ಸ್‌ – 266/10
    2ನೇ ಇನ್ನಿಂಗ್ಸ್‌ – 373/10

  • Asian Games Women’s Cricket: ಬಾಂಗ್ಲಾ ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟ ಭಾರತ

    Asian Games Women’s Cricket: ಬಾಂಗ್ಲಾ ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟ ಭಾರತ

    ಹಾಂಗ್‌ಝೌ: ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ನಲ್ಲಿ (Asian Games)  ಭಾರತೀಯ ಮಹಿಳಾ ಕ್ರಿಕೆಟ್‌ ತಂಡವು ಬಾಂಗ್ಲಾದೇಶವನ್ನ (Bangladesh) ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟಿದೆ. ಸೋಮವಾರ ಶ್ರೀಲಂಕಾ ವಿರುದ್ಧ ಚಿನ್ನದ ಪದಕಕ್ಕಾಗಿ ಕಾದಾಟ ನಡೆಸಲಿದೆ.

    ಝೆಜಿಯಾಂಗ್ ಟೆಕ್‌ ವಿವಿ ಕ್ರೀಡಾಂಗಣದಲ್ಲಿಂದು ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಭಾರತ ಫೈನಲ್‌ ತಲುಪಿದೆ. ಇದನ್ನೂ ಓದಿ: ರೋಯಿಂಗ್‌ನಲ್ಲಿ ಭಾರತಕ್ಕೆ ಮೂರು ಪದಕ – ಕ್ರಿಕೆಟ್‌ನಲ್ಲಿ ಫೈನಲ್‌ ಪ್ರವೇಶಿಸಿದ ಮಹಿಳೆಯರು

    ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ 17.5 ಓವರ್‌ಗಳಲ್ಲಿ ಕೇವಲ 51 ರನ್‌ಗಳಿಗೆ ಸರ್ವಪತನ ಕಂಡಿತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ ಭಾರತೀಯ ಮಹಿಳಾ ತಂಡ 8 ಓವರ್‌ಗಳಲ್ಲೇ 52 ರನ್‌ ಗಳಿಸಿ ಗೆಲುವು ಸಾಧಿಸಿತು.

    ಮೊದಲು ಕ್ರೀಸ್‌ಗಿಳಿದ ಬಾಂಗ್ಲಾದೇಶ ತಂಡ ಟೀಂ ಇಂಡಿಯಾದ ಬಿಗಿ ಬೌಲಿಂಗ್‌ ಹಿಡಿತಕ್ಕೆ ತತ್ತರಿಸಿತು. ಟೀಂ ಇಂಡಿಯಾ ಪರ ಮಾರಕ ಬೌಲಿಂಗ್‌ ದಾಳಿ ನಡೆಸಿದ ಪೂಜಾ ವಸ್ತ್ರಾಕರ್‌ 4 ಓವರ್‌ಗಳಲ್ಲಿ 17 ರನ್‌ ಬಿಟ್ಟುಕೊಟ್ಟು 4 ವಿಕೆಟ್‌ ಕಿತ್ತರೆ, ಟಿಟಾಸ್‌ ಸಾಧು, ಅಮನ್‌ಜ್ಯೋತ್‌ ಕೌರ್‌, ರಾಜೇಶ್ವರಿ ಗಾಯಕ್ವಾಡ್‌ ಹಾಗೂ ದೇವಿಕಾ ವೈದ್ಯ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು. ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ

    ಟೀಂ ಇಂಡಿಯಾ ಪರ ಬ್ಯಾಂಟಿಂಗ್‌ನಲ್ಲಿ ಜೆಮಿಮಾ ರೊಡ್ರಿಗ್ಸ್‌ 15 ಎಸೆತಗಳಲ್ಲಿ 3 ಬೌಂಡರಿಗಳೊಂದಿಗೆ 20 ರನ್‌ ಗಳಿಸಿದ್ರೆ, ಶಫಾಲಿ ವರ್ಮಾ 21 ಎಸೆತಗಳಲ್ಲಿ 2 ಬೌಂಡರಿಯೊಂದಿಗೆ 17 ರನ್‌ಗಳಿಸಿದರು. ನಾಯಕಿ ಸ್ಮೃತಿ ಮಂಧಾನ 7 ರನ್‌ಗಳಿಗೆ ವಿಕೆಟ್‌ ಕೈಚೆಲ್ಲಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಏಷ್ಯನ್ ಗೇಮ್ಸ್‌ನಲ್ಲಿ ಇತಿಹಾಸ ನಿರ್ಮಿಸಿದ ಶಫಾಲಿ ವರ್ಮಾ

    ಏಷ್ಯನ್ ಗೇಮ್ಸ್‌ನಲ್ಲಿ ಇತಿಹಾಸ ನಿರ್ಮಿಸಿದ ಶಫಾಲಿ ವರ್ಮಾ

    ಹ್ಯಾಂಗ್‌ಜೂ: ಚೀನಾದ ಹ್ಯಾಂಗ್‌ಜೂನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ (Asian Games 2023) ಭಾರತೀಯ ಮಹಿಳಾ ತಂಡದ ಆಟಗಾರ್ತಿ ಶಫಾಲಿ ವರ್ಮಾ (Shafali Verma) ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

    ಹ್ಯಾಂಗ್‌ಜೂನ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಮೈದಾನದಲ್ಲಿಂದು (ಗುರುವಾರ) ನಡೆದ ಪಂದ್ಯದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಮತ್ತು ಮಲೇಷ್ಯಾ ಮಹಿಳಾ ಕ್ರಿಕೆಟ್ (Malaysia Womens Team) ತಂಡಗಳ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಯಿತು. ಆದ್ರೆ ಈ ಪಂದ್ಯದಲ್ಲಿ ಮೊದಲು ಕ್ರೀಸ್‌ಗಿಳಿದ ಟೀಂ ಇಂಡಿಯಾ ಪರ ಶಫಾಲಿ ವರ್ಮಾ 31 ಎಸೆತಗಳಲ್ಲಿ 51 ರನ್‌ ಬಾರಿಸುವ ಮೂಲಕ ಏಷ್ಯನ್ ಗೇಮ್ಸ್ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

    ಆರಂಭಿಕರಾಗಿ ಕಣಕ್ಕಿಳಿದ ಶಫಾಲಿ ವರ್ಮಾ 171.79 ಸ್ಟ್ರೈಕ್‌ರೇಟ್‌ ಬ್ಯಾಟ್ ಬೀಸಿ 39 ಎಸೆತಗಳಲ್ಲಿ 67 ರನ್ (5 ಸಿಕ್ಸರ್, 4 ಬೌಂಡರಿ) ಚಚ್ಚಿದರು. ಈ ಮೂಲಕ ಏಷ್ಯನ್ ಗೇಮ್ಸ್ ಕ್ರಿಕೆಟ್ ಇತಿಹಾಸದಲ್ಲಿ ಅರ್ಧಶತಕ ಸಿಡಿಸಿದ ಮೊದಲ ಮಹಿಳಾ ಆಟಗಾರ್ತಿ ಎಂಬ ಕೀರ್ತಿಗೆ ಪಾತ್ರರಾದರು. ಇದನ್ನೂ ಓದಿ: ಏಷ್ಯನ್ ಗೇಮ್ಸ್: ಭಾರತ-ಮಲೇಷ್ಯಾ ಪಂದ್ಯ ರದ್ದು, ಕ್ವಾರ್ಟರ್ ಫೈನಲ್‍ಗೆ ಜಿಗಿದ ಟೀಂ ಇಂಡಿಯಾ

    ಈ ಪಂದ್ಯದಲ್ಲಿ ಭಾರತ 5.4 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು 60 ರನ್ ಗಳಿಸಿದ್ದಾಗ ಮಳೆ ಅಡ್ಡಿಯಾಯಿತು. ಆದ್ದರಿಂದ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಪಂದ್ಯವನ್ನ 15 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು.

    ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಸ್ಮೃತಿ ಮಂಧಾನ (Smriti Mandhana) 27 ರನ್ ಗಳಿಸಿದ್ರೆ, ಸೋಟಕ ಆರಂಭ ನೀಡಿದ ಶಫಾಲಿ ವರ್ಮಾ 67 ರನ್ ಚಚ್ಚಿದರು. ಇದರೊಂದಿಗೆ ಜೆಮಿಮಾ ರೊಡ್ರಿಗಸ್ ಅಜೇಯ 47 ರನ್ (29 ಎಸೆತ, 6 ಬೌಂಡರಿ) ಹಾಗೂ ರಿಷಾ ಘೋಷ್ ಕೇವಲ 7 ಎಸೆತಗಳಲ್ಲಿ ಸ್ಫೋಟಕ 21 ರನ್ (3 ಬೌಂಡರಿ, 1 ಸಿಕ್ಸರ್) ಚಚ್ಚಿ ತಂಡದ ಮೊತ್ತ 170ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಅಂತಿಮವಾಗಿ ಭಾರತ ನಿಗದಿತ 15 ಓವರ್‌ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ ಭಾರತ 173 ರನ್ ಕಲೆಹಾಕಿತು. ಇದನ್ನೂ ಓದಿ: ಆಸ್ಟ್ರೇಲಿಯಾ ಏಕದಿನ ಸರಣಿಗೆ ಭಾರತ ತಂಡ ಪ್ರಕಟ – ಕೆ.ಎಲ್‌ ರಾಹುಲ್‌ಗೆ ನಾಯಕತ್ವ, ಸೂರ್ಯನಿಗೂ ಚಾನ್ಸ್‌

    ಈ ಗುರಿ ಬೆನ್ನಟ್ಟಿದ ಮಲೇಷ್ಯಾ ಇನಿಂಗ್ಸ್ ಆರಂಭಿಸುತ್ತಿದ್ದಂತೆಯೇ ಮತ್ತೆ ಮಳೆ ಸುರಿಯಲಾರಂಭಿಸಿತು. ಮಲೇಷ್ಯಾ ತಂಡ ಕೇವಲ ಎರಡು ಎಸೆತಗಳನ್ನು ಎದುರಿಸಿದ್ದಾಗ ಮಳೆ ಆರಂಭವಾಯಿತು. ಭಾರೀ ಮಳೆಯ ಕಾರಣ ಪಂದ್ಯವು ಫಲಿತಾಂಶವಿಲ್ಲದೆ ರದ್ದಾಯಿತು. ಭಾರತ ಉತ್ತಮ ರನ್‌ರೇಟ್ ಹೊಂದಿದ್ದ ಕಾರಣ ಸೆಮಿಫೈನಲ್ ಪ್ರವೇಶಿಸಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Asian Games 2023 ನಲ್ಲಿ ಟೀಂ ಇಂಡಿಯಾ ಪಾಲ್ಗೊಳ್ಳಲು ಬಿಸಿಸಿಐ ಗ್ರೀನ್‌ ಸಿಗ್ನಲ್‌

    Asian Games 2023 ನಲ್ಲಿ ಟೀಂ ಇಂಡಿಯಾ ಪಾಲ್ಗೊಳ್ಳಲು ಬಿಸಿಸಿಐ ಗ್ರೀನ್‌ ಸಿಗ್ನಲ್‌

    ಮುಂಬೈ: ಮುಂದಿನ ಸೆಪ್ಟಂಬರ್‌-ಅಕ್ಟೋಬರ್‌ನಲ್ಲಿ ಚೀನಾದ ಹ್ಯಾಂಗ್‌ಜೂನಲ್ಲಿ ನಡೆಯುವ ಏಷ್ಯನ್‌ ಗೇಮ್ಸ್ (Asian Games 2023) ಕ್ರೀಡಾಕೂಟದಲ್ಲಿ ಟೀಂ ಇಂಡಿಯಾ (Team India) ಪಾಲ್ಗೊಳ್ಳಲು ಬಿಸಿಸಿಐ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ.

    ಏಷ್ಯನ್‌ ಗೇಮ್ಸ್ ಟೂರ್ನಿಯಲ್ಲಿ ಕ್ರಿಕೆಟ್ ಕೂಡ ಸ್ಪರ್ಧೆಯ ಭಾಗವಾಗಿದೆ. ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 8 ರವರೆಗೆ ಈ ಟೂರ್ನಿ ನಡೆಯಲಿದೆ. ಟಿ20 ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಭಾರತದ ಮಹಿಳಾ ಹಾಗೂ ಪುರುಷರ ತಂಡವನ್ನು ಕಣಕ್ಕಿಳಿಸಲು ಬಿಸಿಸಿಐನ (BCCI) ಅಪೆಕ್ಸ್ ಕೌನ್ಸಿಲ್ ಒಪ್ಪಿಗೆ ಸೂಚಿಸಿದೆ.

    2010 ಮತ್ತು 2014ರ ಏಷ್ಯನ್ ಗೇಮ್ಸ್‌ ಟೂರ್ನಿಯಲ್ಲಿ ಭಾರತ (Team India) ಭಾಗವಹಿಸಲು ನಿರಾಕರಿಸಿತ್ತು. 2028ಕ್ಕೆ ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುವ ಒಲಿಂಪಿಕ್ಸ್‌ ನಲ್ಲಿ ಕ್ರಿಕೆಟ್‌ ಸೇರ್ಪಡೆಗೊಳಿಸಲು ಬಿಸಿಸಿಐ ಒತ್ತಾಯಿಸುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಏಷ್ಯನ್‌ ಗೇಮ್ಸ್‌ನಲ್ಲಿ ಪಾಲ್ಗೊಳ್ಳಲು ಅನುಮತಿಸಿದೆ. ಇದನ್ನೂ ಓದಿ: Asian Games 2023 – ಶಿಖರ್‌ ಧವನ್‌ಗೆ ಟೀಂ ಇಂಡಿಯಾ ನಾಯಕತ್ವ?

    ಭಾರತದ ಪುರುಷರ ತಂಡ ಮತ್ತು ಮಹಿಳಾ ಕ್ರಿಕೆಟ್‌ ತಂಡಗಳು ಇದೇ ಮೊದಲಬಾರಿಗೆ ಏಷ್ಯನ್‌ ಗೇಮ್ಸ್‌ನಲ್ಲಿ ಸ್ಪರ್ಧಿಸಲು ಸಜ್ಜಾಗಿವೆ ಎಂಬುದನ್ನ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಖಚಿತಪಡಿಸಿದ್ದಾರೆ. ಇದನ್ನೂ ಓದಿ: Threadಗೆ ಸ್ಟಾರ್‌ ಕ್ರಿಕೆಟಿಗರಿಂದ ಫುಲ್‌ ಸಪೋರ್ಟ್‌ – ಎಲೋನ್‌ ಮಸ್ಕ್‌ಗೆ ಟಾಂಗ್‌ ಕೊಟ್ಟ ಅಶ್ವಿನ್‌

    ಈಗಾಗಲೇ ಸಾಲು-ಸಾಲು ಸರಣಿಗಳನ್ನ ಮುಂದಿಟ್ಟುಕೊಂಡಿರುವ ಟೀಂ ಇಂಡಿಯಾ, ಆಗಸ್ಟ್‌ 31 ರಿಂದ ಸೆಪ್ಟಂಬರ್‌ 17ರ ವರೆಗೆ ನಡೆಯುವ ಏಕದಿನ ಏಷ್ಯಾಕಪ್‌ ಟೂರ್ನಿಗೂ ತಂಡವನ್ನ ಅಣಿಗೊಳಿಸಬೇಕಿದೆ. ಆ ನಂತರ ಅಕ್ಟೋಬರ್‌ 5 ರಿಂದ ಆರಂಭವಾಗುವ ವಿಶ್ವಕಪ್‌ಗೆ ಬಲಿಷ್ಠ ತಂಡವನ್ನ ಆಯ್ಕೆ ಮಾಡಬೇಕಿರುವುದು ಸವಾಲಾಗಿದೆ. ಹಾಗಾಗಿ ಬಿಸಿಸಿಐ ಟೀಂ ಇಂಡಿಯಾ 2ನೇ ಶ್ರೇಣಿಯ ಪುರುಷರ ತಂಡವನ್ನ ಏಷ್ಯನ್‌ ಗೇಮ್ಸ್‌ಗೆ ಕಳುಹಿಸುವ ನಿರೀಕ್ಷೆಯಿದೆ.

    ಈ ಹಿಂದೆ 2010ರ ಏಷ್ಯನ್‌ ಗೇಮ್ಸ್‌ ಟೂರ್ನಿಯಲ್ಲಿ ಬಾಂಗ್ಲಾದೇಶ, 2014ರ ಆವೃತ್ತಿಯಲ್ಲಿ ಶ್ರೀಲಂಕಾ ಪುರುಷರ ತಂಡ ಚಿನ್ನದ ಪದಕಗಳನ್ನ ಗೆದ್ದಿತ್ತು. ಮಹಿಳಾ ವಿಭಾಗದಲ್ಲಿ ಪಾಕಿಸ್ತಾನ ತಂಡ 2 ಬಾರಿ ಚಿನ್ನದ ಪದಕ ಬಾಚಿಕೊಂಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]