ದುಬೈ: ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ (Ind vs Pak) ನಡುವಿನ ಏಷ್ಯಾಕಪ್ ಪಂದ್ಯ ನಾಳೆ (ಸೆ.14) ನಡೆಯಲಿದೆ. ದುಬೈ ಕ್ರೀಡಾಂಗಣದಲ್ಲಿ ರಾತ್ರಿ 8ಕ್ಕೆ ಪಂದ್ಯ ಶುರುವಾಗಲಿದೆ. ಈ ನಡುವೆ ಮೊದಲ ಪಂದ್ಯ ಗೆದ್ದು ಶುಭಾರಂಭ ಮಾಡಿರುವ ಪಾಕ್ ತಂಡದ ನಾಯಕ ಸಲ್ಮಾನ್ ಅಘಾ (Salman Agha) ಟೀಂ ಇಂಡಿಯಾಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.
ಶುಕ್ರವಾರ ಒಮನ್ (Oman) ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಪಾಕ್ 93 ರನ್‌ಗಳ ಭರ್ಜರಿ ಜಯ ಸಾಧಿಸಿತು. ಪಂದ್ಯದ ಬಳಿಕ ಪೋಸ್ಟ್ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ನಾಯಕ ಸಲ್ಮಾನ್ ಅಘಾ, ನಾವು ನಮ್ಮ ಪ್ಲ್ಯಾನಿಂಗ್ ಅನ್ನು ಸರಿಯಾದ ರೀತಿಯಲ್ಲಿ ಕಾರ್ಯಗತಗೊಳಿಸಿದ್ರೆ ಭಾರತ (Team India) ಸೇರಿದಂತೆ ಯಾವುದೇ ತಂಡವನ್ನು ಸೋಲಿಸುವಷ್ಟು ಸಮರ್ಥರಿದ್ದೇವೆ ಎಂದು ತಿಳಿಸಿದ್ರು. ಇದನ್ನೂ ಓದಿ: Asia Cup 2025 | ಒಮ್ಮೆ ಏಕದಿನ, ಒಮ್ಮೆ ಟಿ20 – ಸ್ವರೂಪ ಬದಲಾಗೋದು ಏಕೆ?
ಕಳೆದ 2-3 ತಿಂಗಳಿನಿಂದ ನಾವು ಉತ್ತಮ ಕ್ರಿಕೆಟ್ ಆಡ್ತಿದ್ದೇವೆ, ಇದು ಇನ್ನಷ್ಟು ಬೆಳವಣಿಗೆ ಆಗಬೇಕಾಗಿದೆ. ಅದಕ್ಕಾಗಿ ದೀರ್ಘಕಾಲದ ವರೆಗೆ ನಮ್ಮ ಪ್ಲ್ಯಾನಿಂಗ್ ಅನ್ನು ಸಕ್ರಿಯಗೊಳಿಸಬೇಕು. ಆಗ ಯಾವುದೇ ತಂಡವನ್ನು ಸೋಲಿಸಲು ನಮ್ಮಿಂದ ಸಾಧ್ಯವಾಗುತ್ತದೆ ಎಂದು ಸಹ ಆಟಗಾರರಿಗೆ ಕಿವಿಮಾತು ಹೇಳಿದ್ರು. ಇದನ್ನೂ ಓದಿ: ಇದು ಮ್ಯಾಚ್ ಅಷ್ಟೇ; ಭಾರತ – ಪಾಕ್ ಪಂದ್ಯ ಬೇಡ ಎಂದ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ
ಶುಕ್ರವಾರ ಒಮನ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕ್ ಮೊಹಮ್ಮದ್ ಹ್ಯಾರಿಸ್ ಅವರ ಅಮೋಘ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಒಮನ್ ಕೇವಲ 67 ರನ್‌ಗಳಿಗೆ ಆಲೌಟ್ ಆಗಿ ಹೀನಾಯ ಸೋಲು ಕಂಡಿತು. ಇದನ್ನೂ ಓದಿ: RCB ಸ್ಟಾರ್ ಸಾಲ್ಟ್ ಬೆಂಕಿ ಆಟಕ್ಕೆ ಹರಿಣರ ಪಡೆ ಛಿದ್ರ – ಟಿ20ನಲ್ಲಿ ಹೊಸ ದಾಖಲೆ ಬರೆದ ಇಂಗ್ಲೆಂಡ್
– ರಾಷ್ಟ್ರದ ಹಿತಾಸಕ್ತಿಗಿಂತ ಕ್ರಿಕೆಟ್ ದೊಡ್ಡದಲ್ಲ ಅಂತ ಅರ್ಜಿದಾರರ ವಾದ
ನವದೆಹಲಿ: ಭಾರತ ಮತ್ತು ಪಾಕಿಸ್ತಾನ (Ind vs Pak) ನಡುವೆ ಸೆ.14ರಂದು ನಡೆಯಲಿರುವ ಟಿ20 ಏಷ್ಯಾಕಪ್ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಿಚಾರಣೆಗೆ ತಿರಸ್ಕರಿಸಿದೆ.
2025ರ ಟಿ20 ಏಷ್ಯಾಕಪ್ (Asia Cup 2025) ವೇಳಾಪಟ್ಟಿ ಪ್ರಕಟವಾದಾಗಿನಿಂದಲೂ ಭಾರತ – ಪಾಕ್ ನಡುವಿನ ಪಂದ್ಯಕ್ಕೆ ಭಾರೀ ವಿರೋಧ ಕೇಳಿಬರ್ತಿದೆ. ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆ ಬಳಿಕ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳು ಹದಗೆಟ್ಟಿವೆ. ಹೀಗಾಗಿ ಇಂಡೋ-ಪಾಕ್ ಪಂದ್ಯ ನಿಲ್ಲಿಸುವಂತೆ ಒತ್ತಾಯಗಳು ಕೇಳಿಬರುತ್ತಿವೆ. ಅದೇ ರೀತಿ ಭಾರತ-ಪಾಕಿಸ್ತಾನ ನಡುವಿನ ಏಷ್ಯಾಕಪ್ ಪಂದ್ಯವನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಆದ್ರೆ ಅರ್ಜಿಯನ್ನ ವಿಚಾರಣೆಗೆ ಪರಿಗಣಿಸೋದಕ್ಕೂ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಊರ್ವಶಿ ಜೈನ್ ನೇತೃತ್ವದಲ್ಲಿ ನಾಲ್ವರು ಕಾನೂನು ವಿದ್ಯಾರ್ಥಿಗಳ ಪರವಾಗಿ ಸಂವಿಧಾನದ 32ನೇ ವಿಧಿ ಅಡಿಯಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಲಾಗಿತ್ತು. ಸೆ.14ರಂದು ದುಬೈನಲ್ಲಿ ಏಷ್ಯಾಕಪ್ ಭಾಗವಾಗಿ ನಡೆಯಲಿರುವ ಭಾರತ-ಪಾಕಿಸ್ತಾನ ಟಿ20 ಕ್ರಿಕೆಟ್ ಪಂದ್ಯವನ್ನ ರದ್ದುಗೊಳಿಸುವಂತೆ ಅರ್ಜಿಯಲ್ಲಿ ಕೋರಲಾಗಿತ್ತು. ತುರ್ತು ವಿಚಾರಣೆಗೆ ಪಟ್ಟಿ ಮಾಡಲಾಗಿತ್ತು. ಈ ವೇಳೆ ನ್ಯಾ. ಮಹೇಶ್ವರಿ ತುರ್ತು ಏನಿದೆ? ಅಂತ ಪ್ರಶ್ನಿಸಿದರಲ್ಲದೇ ಅದು ಒಂದು ಅಷ್ಟೇ.. ಭಾನುವಾರ ಪಂದ್ಯ ಇದೆ, ಏನು ಮಾಡೋಕಾಗುತ್ತೆ? ಅಂತ ತಿಳಿಸಿದ್ದಾರೆ. ಇದನ್ನೂ ಓದಿ:ಕುಲ್ದೀಪ್, ದುಬೆ ಮಿಂಚು; 57 ರನ್‌ಗೆ ಯುಎಇ ಆಲೌಟ್ – ಟಿ20 ಇತಿಹಾಸದಲ್ಲೇ ಕೆಟ್ಟ ದಾಖಲೆ
ಅರ್ಜಿದಾರರ ವಾದ ಏನು?
ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಸಿಂಧೂರ ಕಾರ್ಯಾಚರಣೆ ನಂತರ ಪಾಕಿಸ್ತಾನದೊಂದಿಗೆ ಕ್ರಿಕೆಟ್ ಪಂದ್ಯವನ್ನ ಆಯೋಜಿಸುವುದು ರಾಷ್ಟ್ರೀಯ ಘನತೆ ಮತ್ತು ಸಾರ್ವಜನಿಕ ಭಾವನೆಗೆ ತಪ್ಪು ಸಂದೇಶ ನೀಡುತ್ತದೆ. ಭಯೋತ್ಪಾದನೆಗೆ ಆಶ್ರಯ ನೀಡುವ ರಾಷ್ಟ್ರಗಳೊಂದಿಗೆ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದು ಸೈನಿಕರ ನೈತಿಕತೆಯನ್ನ ಹಾಳು ಮಾಡಿದಂತಾಗುತ್ತದೆ. ಕ್ರಿಕೆಟ್ ರಾಷ್ಟ್ರದ ಹಿತಾಸಕ್ತಿ, ನಾಗರಿಕರ ಜೀವನ ಹಾಗೂ ಸೈನಿಕರ ತ್ಯಾಗಕ್ಕಿಂತ ಹೆಚ್ಚಿನದ್ದಲ್ಲ ಎಂದು ಅರ್ಜಿದಾರರು ವಾದಿಸಿದರು. ಆದಾಗ್ಯೂ ಕೋರ್ಟ್ ತುರ್ತು ವಿಚಾರಣೆಗೆ ಅರ್ಜಿಯನ್ನು ನಿರಾಕರಿಸಿತು.
ಪ್ರಶಸ್ತಿ ಗೆಲ್ಲುವ ಪ್ರಬಲ ಸ್ಪರ್ಧಿಯಾಗಿರುವ ಭಾರತ ತಂಡವು ಇಂದು ಆತಿಥೇಯ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ವಿರುದ್ಧ ತನ್ನ ಅಭಿಯಾನ ಶುರು ಮಾಡಲಿದೆ. ರಾತ್ರಿ 8ಕ್ಕೆ ಪಂದ್ಯ ಶುರುವಾಗಲಿದೆ. ಭಾರತ ತನ್ನ ಮುಂದಿನ ಪಂದ್ಯವನ್ನ ಪಾಕಿಸ್ತಾನ (Pakistan) ವಿರುದ್ಧ ಸೂಪರ್ ಸಂಡೇ ಎದುರಿಸಲಿದೆ. ಹೀಗಾಗಿ ಆ ದೊಡ್ಡ ಪಂದ್ಯಕ್ಕೂ ಮೊದಲು, ಟೀಂ ಇಂಡಿಯಾಕ್ಕೆ ಈ ಪಂದ್ಯ ಮಹತ್ವದ್ದಾಗಿದೆ. ಇದನ್ನೂ ಓದಿ: Asia Cup 2025 | ಏಷ್ಯಾ ಕಪ್‌ಗೆ 30 ವರ್ಷಗಳ ಇತಿಹಾಸ
ʻಎʼ ತಂಡದಲ್ಲಿರುವ ಭಾರತ ಸೂಪರ್ ಸಿಕ್ಸ್ ಹಂತ ಪ್ರವೇಶಿಸಲು ಯುಎಇ, ಒಮನ್ ಹಾಗೂ ಪಾಕಿಸ್ತಾನ ತಂಡಗಳ ವಿರುದ್ಧ ಸೆಣಸಬೇಕಿದೆ. ಮುಖ್ಯ ಕೋಚ್ ಗೌತಮ್ ಗಂಭೀರ್ ತಮ್ಮ ಹಳೆಯ ತಂತ್ರದೊಂದಿಗೆ ಮುಂದುವರಿದರೆ, ಸೂರ್ಯಕುಮಾರ್ ಯಾದವ್ (Suryakumar Yadav) ಚೊಚ್ಚಲ ಬಾರಿಗೆ ನಾಯಕನಾಗಿ ಏಷ್ಯಾ ಕಪ್ನಲ್ಲಿ ಮುನ್ನಡೆಸುತ್ತಿದ್ದು, ಯಾವ ತಂತ್ರ ಹೂಡಲಿದ್ದಾರೆ ಅನ್ನೋದನ್ನ ಕಾದುನೋಡಬೇಕಿದೆ.
ಆಲ್‌ರೌಂಡರ್‌ಗಳಿಗೆ ಆದ್ಯತೆ
ಇನ್ನೂ ಗಂಭೀರ್ ಟೀಂ ಇಂಡಿಯಾದ ಮುಖ್ಯಕೋಚ್ ಆದಾಗಿನಿಂದ ಭಾರತ ತಂಡ ಎಲ್ಲಾ ಸ್ವರೂಪಗಳಲ್ಲಿ ಆಲ್‌ರೌಂಡರ್‌ಗಳಿಗೆ ಹೆಚ್ಚಿನ ಆದ್ಯತೆ ನೀಡಿದೆ. ಬ್ಯಾಟಿಂಗ್ ಅನ್ನು ಬಲಪಡಿಸಲು ಮತ್ತು 8ನೇ ಕ್ರಮಾಂಕದವರೆಗೆ ಉತ್ತಮ ಬ್ಯಾಟ್ಸ್‌ಮನ್‌ಗಳನ್ನ ಹೊಂದಲು ಈ ಆದ್ಯತೆ ನೀಡಲಾಗಿದೆ. ಅದರಂತೆ ಇಂದಿನ ಪಂದ್ಯದಲ್ಲಿ ಆಲ್‌ರೌಂಡರ್ ಆಗಿ ಹಾರ್ದಿಕ್ ಪಾಂಡ್ಯ ಹಾಗೂ ಸ್ಪಿನ್ ಆಲ್‌ರೌಂಡರ್ ಆಗಿ ಅಕ್ಷರ್ ಪಟೇಲ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಇದನ್ನೂ ಓದಿ: Asia Cup 2025 | ಒಮ್ಮೆ ಏಕದಿನ, ಒಮ್ಮೆ ಟಿ20 – ಸ್ವರೂಪ ಬದಲಾಗೋದು ಏಕೆ?
ಪ್ಲೇಯಿಂಗ್-11 ನಿಂದ ಸ್ಯಾಮ್ಸನ್ ಔಟ್ ಸಾಧ್ಯತೆ
ಇನ್ನೂ ವಿಕೆಟ್ ಕೀಪರ್‌ಗಳ ಪೈಕಿ ಜಿತೇಶ್ ಶರ್ಮಾ, ಸಂಜು ಸ್ಯಾಮ್ಸನ್ ತಂಡದಲ್ಲಿದ್ದಾರೆ. ಸ್ಯಾಮ್ಸನ್ ಅವರ ಸ್ಫೋಟಕ ಬ್ಯಾಟಿಂಗ್‌ಗಿಂತ ಜಿತೇಶ್ ಅವರ ಫಿನಿಷರ್ ಪಾತ್ರಕ್ಕೆ ಆದ್ಯತೆ ಸಿಗುವುದು ಖಚಿತ ವಾಗಿದೆ, ಅಲ್ಲದೇ ಶುಭ್‌ಮನ್ ಗಿಲ್ (Shubman Gill) ಅಗ್ರ ಕ್ರಮಾಂಕಕ್ಕೆ ಮರಳಿರುವುದರಿಂದ ಸ್ಯಾಮ್ಸನ್‌ಗೆ ಪ್ಲೇಯಿಂಗ್ 11ನಲ್ಲಿ ಸ್ಥಾನ ಸಿಗುವುದೂ ಸಹ ಅನುಮಾನ ಎಂದೇ ಹೇಳಲಾಗುತ್ತಿದೆ. ಇದನ್ನೂ ಓದಿ: Asia Cup 2025 | ಇಂದಿನಿಂದ ಟೂರ್ನಿ – 8 ತಂಡಗಳ ಬಲಾಬಲ ಹೇಗಿದೆ?
ಪ್ರಾಕ್ಟೀಸ್ ಸೆಷನ್‌ನಲ್ಲೇ ಅಬ್ಬರಿಸಿದ ಅಭಿ
ಇನ್ನೂ ಯುಎಇ ವಿರುದ್ಧ ಪಂದ್ಯಕ್ಕೂ ಮುನ್ನ ನಡೆದ ಪ್ರಾಕ್ಟೀಸ್ ಸೆಷನ್‌ನಲ್ಲಿ ಅಭಿಷೇಕ್ ಶರ್ಮಾ (Abhishek Sharma) ಅಬ್ಬರಿಸಿದ್ದಾರೆ. ಬ್ಯಾಟಿಂಗ್ ಅಭ್ಯಾಸದ ವೇಳೆ 25 ರಿಂದ 30 ಸಿಕ್ಸರ್‌ಗಳನ್ನ ಬಾರಿಸುವ ಮೂಲಕ ಎಲ್ಲರನ್ನು ಬೆರಗುಗೊಳಿಸಿದ್ದಾರೆ. ಹೀಗಾಗಿ ಭಾರತ ಮೊದಲು ಬ್ಯಾಟಿಂಗ್ ಮಾಡಲು ಕಣಕ್ಕಿಳಿದರೆ, ಬೃಹತ್ ಮೊತ್ತ ಪೇರಿಸುವ ವಿಶ್ವಾಸವನ್ನು ಮೂಡಿಸಿದ್ದಾರೆ.
ಏಷ್ಯಾ ಕಪ್ ಟಿ20 ಕ್ರಿಕೆಟ್ (Asia Cup T20 Cricket) ಟೂರ್ನಿ ಇಂದಿನಿಂದ ಆರಂಭವಾಗಲಿದೆ. ಯುಎಇ (UAE) ದೇಶದ ದುಬೈ, ಅಬುಧಾಬಿ ಕ್ರೀಡಾಂಗಣದಲ್ಲಿ 20 ದಿನಗಳ ಕಾಲ 8 ದೇಶಗಳು ಒಟ್ಟು 19 ಪಂದ್ಯಗಳನ್ನು ಆಡಲಿವೆ. ಉದ್ಘಾಟನಾ ಪಂದ್ಯ ಅಫ್ಘಾನಿಸ್ತಾನ ಮತ್ತು ಹಾಂಕಾಂಗ್ ಮಧ್ಯೆ ನಡೆದರೆ ಸೆ.28ರಂದು ಫೈನಲ್ ಪಂದ್ಯ ನಡೆಯಲಿದೆ.
ಹಾಲಿ ಚಾಂಪಿಯನ್ ಭಾರತ (India) ಬುಧವಾರ ಯುಎಇ ವಿರುದ್ಧ ತನ್ನ ಮೊದಲ ಪಂದ್ಯವಾಡಲಿದೆ. ಪಾಕಿಸ್ತಾನದ ವಿರುದ್ಧ ಸೂಪರ್ ಸಂಡೇ ಹೈವೋಲ್ಟೇಜ್ ಪಂದ್ಯವನ್ನಾಡಲಿದೆ. ಪ್ರತಿದಿನ ರಾತ್ರಿ 8 ಗಂಟೆಗೆ ಪಂದ್ಯ ಶುರುವಾಗಲಿದೆ. ಈಹೊತ್ತಿನಲ್ಲಿ ಏಷ್ಯಾಕಪ್ ಆವೃತ್ತಿಯ ಇತಿಹಾಸ ತಿಳಿಯುವುದೂ ಅಷ್ಟೇ ಸೂಕ್ತವಾಗಿದೆ.
30 ವರ್ಷಗಳ ಇತಿಹಾಸ ನೀವೂ ತಿಳಿಯಿರಿ
ಏಷ್ಯಾ ಕಪ್ ಟೂರ್ನಿಗೆ 30 ವರ್ಷಗಳ ಇತಿಹಾಸವಿದೆ. ಮೊದಲಬಾರಿಗೆ ಏಷ್ಯನ್ ಕ್ರಿಕೆಟ್ ಸಮಿತಿ (ACC)ಯು ಏಷ್ಯಾದ ಅತ್ಯುತ್ತಮ ತಂಡವನ್ನು ನಿರ್ಧರಿಸುವ ಸಲುವಾಗಿ 1984ರಲ್ಲಿ ಶಾರ್ಜಾದಲ್ಲಿ ಏಷ್ಯಾಕಪ್ ಹಮ್ಮಿಕೊಂಡಾಗ ಏಕದಿನ ಮಾದರಿಯಲ್ಲೇ ನಡೆಸುವುದೆಂದು ನಿರ್ಧಾರ ಆಗಿತ್ತು . ಆಗ ಟಿ20 ಮಾದರಿ ಸಹ ಇರಲಿಲ್ಲ ಎಂಬುದು ಸಹ ಗಮನಾರ್ಹ. ಆದರೆ ಈ ರೀತಿ ಪ್ರತಿಬಾರಿ ಮಾದರಿ ಬದಲಾಯಿಸುವ ಪರಿಪಾಠ ಕಳೆದ 10 ವರ್ಷಗಳಿಂದ ಸಾಗಿ ಬಂದಿದೆ. 2009ರ ಬಳಿಕ ಈ ಟೂರ್ನಿ ಪ್ರತಿ 2 ವರ್ಷಗಳಿಗೊಮ್ಮೆ ನಿಯಮಿತವಾಗಿ ನಡೆಸಲು ನಿರ್ಧರಿಸಲಾಯಿತು. ಆದರೆ 2015ರಲ್ಲಿ ಮುಂದಿನ ವಿಶ್ವ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ನಡೆಸುವ ನಿರ್ಧಾರಕ್ಕೆ ಬರಲಾಯಿತು. ಹಾಗಾಗಿ 2026ರ ಈ ಬಾರಿಯ ಏಷ್ಯಾ ಕಪ್ ಟಿ20 ಮಾದರಿಯಲ್ಲಿ ನಡೆಯಲಿದೆ.
ಭಾರತ vs ಪಾಕಿಸ್ತಾನ 3 ಬಾರಿ ಮುಖಾಮುಖಿ?
ಪಹಲ್ಗಾಮ್ ಉಗ್ರರ ದಾಳಿ ಹಾಗೂ ಆ ಬಳಿಕ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಇದೇ ಮೊದಲ ಬಾರಿ ಭಾರತ-ಪಾಕ್ (India vs Pakistan) ತಂಡಗಳು ತಂಡಗಳು ಬಹುರಾಷ್ಟ್ರೀಯ ಟೂರ್ನಿಯಲ್ಲಿ ಮುಖಾಮುಖಿಯಾಗಲಿವೆ. ಪ್ರಶಸ್ತಿ ಸುತ್ತಿಗೆ ಬಂದ್ರೆ ಉಭಯ ತಂಡಗಳು ಒಂದಲ್ಲ ಮೂರು ಬಾರಿ ಕಾದಾಟ ನಡೆಸುವ ಸಾಧ್ಯತೆಯಿದೆ.
ಸೆ.14ರಂದು ಗುಂಪು ಹಂತದಲ್ಲಿ ಮೊದಲ ಬಾರಿಗೆ ಸೆಣಸಾಟವಾಡಲಿವೆ. ಒಂದು ವೇಳೆ ಗುಂಪು ಹಂತದಲ್ಲಿ ಗೆದ್ದು ಸೂಪರ್ 6 ಪ್ರವೇಶಿಸಿದ್ರೆ ಅಲ್ಲೂ ಕಾದಾಟ ನಡೆಸಬೇಕಾಗುತ್ತದೆ. ಸೂಪರ್ 6 ರಲ್ಲಿ ಅಗ್ರ ಸ್ಥಾನ ಪಡೆದರೆ ಫೈನಲ್‌ನಲ್ಲೂ ಮುಖಾಮುಖಿಯಾಗುವ ಸಾಧ್ಯತೆಯಿದೆ.
ಭಾರತವೇ ಯಶಸ್ವಿ ತಂಡ
ಏಷ್ಯಾಕಪ್ ಇಲ್ಲಿಯವರೆಗೆ 16 ಆವೃತ್ತಿಗಳನ್ನು ಪೂರ್ಣಗೊಳಿಸಿದ್ದು, ಟೀಂ ಇಂಡಿಯಾ ಅತ್ಯಂತ ಯಶಸ್ವಿ ತಂಡವಾಗಿದೆ. ಏಷ್ಯಾಕಪ್‌ನಲ್ಲಿ ಹೆಚ್ಚು ಪ್ರಶಸ್ತಿಗಳನ್ನು ಗೆದ್ದ ತಂಡ ಭಾರತ ಆಗಿದೆ.
ಭಾರತ – 8 ಪ್ರಶಸ್ತಿಗಳು
ಶ್ರೀಲಂಕಾ – 6 ಪ್ರಶಸ್ತಿಗಳು
ಪಾಕಿಸ್ತಾನ – 2 ಪ್ರಶಸ್ತಿಗಳು
ರನ್ನರ್ ಅಪ್
ಶ್ರೀಲಂಕಾ – 7 ಬಾರಿ ರನ್ನರ್ ಅಪ್
ಭಾರತ – 3 ಬಾರಿ ರನ್ನರ್ ಅಪ್
ಪಾಕಿಸ್ತಾನ – 3 ಬಾರಿ ರನ್ನರ್ ಅಪ್
ಬಾಂಗ್ಲಾದೇಶ – 3 ಬಾರಿ ರನ್ನರ್ ಅಪ್
ಯಾವುದೇ ಮಹತ್ವದ ಟೂರ್ನಿ ಒಂದು ಮಾದರಿಯಲ್ಲಿ ನಡೆಯಬೇಕಾದ್ರೆ ಅದರ ಸ್ವರೂಪ ಮೊದಲೇ ನಿರ್ಧಾರವಾಗಿರುತ್ತೆ.. ಆದ್ರೆ ಏಷ್ಯಾ ಕಪ್ (Asia Cup 2025) ಮಾತ್ರ ಹಾಗಲ್ಲ. 2022ರಲ್ಲಿ ನಡೆದ ಏಷ್ಯಾ ಕಪ್ ಟಿ20 ಮಾದರಿಯಲ್ಲಿ ನಡೆದಿತ್ತು. 2023ರಲ್ಲಿ ಏಕದಿನ ಮಾದರಿಯಲ್ಲಿ ನಡೆಯಿತು. ಇದೀಗ ಮತ್ತೆ ಟಿ20 ಮಾದರಿಗೆ ಬದಲಾಯಿಸಲಾಗಿದೆ. ಈ ರೀತಿ ಪ್ರತಿಬಾರಿಯೂ ಮಾದರಿ ಬದಲಾಯಿಸಲು ಕಾರಣವೇನು? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.
ಏಷ್ಯಾ ಕಪ್ ಟಿ20 ಕ್ರಿಕೆಟ್ (Asia Cup T20 Cricket) ಟೂರ್ನಿ ಇಂದಿನಿಂದ ಆರಂಭವಾಗಲಿದೆ. ಯುಎಇ (UAE) ದೇಶದ ದುಬೈ, ಅಬುಧಾಬಿ ಕ್ರೀಡಾಂಗಣದಲ್ಲಿ 20 ದಿನಗಳ ಕಾಲ 8 ದೇಶಗಳು ಒಟ್ಟು 19 ಪಂದ್ಯಗಳನ್ನು ಆಡಲಿವೆ. ಉದ್ಘಾಟನಾ ಪಂದ್ಯ ಅಫ್ಘಾನಿಸ್ತಾನ ಮತ್ತು ಹಾಂಕಾಂಗ್ ಮಧ್ಯೆ ನಡೆದರೆ ಸೆ.28ರಂದು ಫೈನಲ್ ಪಂದ್ಯ ನಡೆಯಲಿದೆ. ಹಾಲಿ ಚಾಂಪಿಯನ್ ಭಾರತ (India) ಬುಧವಾರ ಯುಎಇ ವಿರುದ್ಧ ತನ್ನ ಮೊದಲ ಪಂದ್ಯವಾಡಲಿದೆ. ಪಾಕಿಸ್ತಾನದ ವಿರುದ್ಧ ಸೂಪರ್ ಸಂಡೇ ಹೈವೋಲ್ಟೇಜ್ ಪಂದ್ಯವನ್ನಾಡಲಿದೆ.
ವಿಶ್ವಕಪ್‌ಗೆ ಪೂರ್ವತಯಾರಿ ಏಷ್ಯಾ ಕಪ್
1975ರಲ್ಲಿ ಪ್ರಾರಂಭವಾದ ಐಸಿಸಿ ಏಕದಿನ ವಿಶ್ವಕಪ್ (ICC ODI World Cup) ಪ್ರತಿ 4 ವರ್ಷಗಳಿಗೊಮ್ಮೆ ಬರುತ್ತದೆ. ಅದೇ 2007ರಲ್ಲಿ ಪ್ರಾರಂಭವಾದ ಐಸಿಸಿ ಟಿ20 ವಿಶ್ವಕಪ್ ಅನ್ನು ಪ್ರತಿ 2 ವರ್ಷಗಳಿಗೊಮ್ಮೆ ನಡೆಸಲಾಗುತ್ತದೆ. ಏಷ್ಯಾ ಕಪ್ ಸಹ 2 ವರ್ಷಗಳಿಗೊಮ್ಮೆ ನಡೆಯುತ್ತಿರುವುದರಿಂದ ಇದನ್ನು ವಿಶ್ವಕಪ್‌ಗೆ ಪೂರ್ವತಯಾರಿಯಾಗಿ ನಡೆಸಲು ಅನುಕೂಲ ಆಗುವಂತೆ ನಡೆಸಲು ಐಸಿಸಿ ನಿರ್ದೇಶನ ನೀಡಿದೆ. ಹಾಗಾಗಿ ಪ್ರತಿ ಬಾರಿ ಟಿ20 ವಿಶ್ವಕಪ್‌ಗೆ (T20 World Cup) ಮುನ್ನ ಟಿ20 ಮಾದರಿಯಲ್ಲಿ ಏಕದಿನ ವಿಶ್ವಕಪ್‌ಗೆ ಮುನ್ನ ಏಕದಿನ ಮಾದರಿಯಲ್ಲಿ ಕ್ರಿಕೆಟ್ ಟೂರ್ನಿ ನಡೆಯಲಿದೆ.
ಯಾವಾಗಿನಿಂದ ಈ ಬದಲಾವಣೆ?
2015ರ ಬಳಿಕ ಈ ಬೆಳವಣಿಗೆ ನಡೆದಿದೆ. 2016 ರಲ್ಲಿ ಏಷ್ಯಾಕಪ್ ಟಿ20 ಮಾದರಿಯಲ್ಲಿ ಏಷ್ಯಾ ಕಪ್ ನಡೆಯಿತು. ಇದು 2016ರ ಟಿ20 ವಿಶ್ವಕಪ್‌ಗೂ ಮುನ್ನ ಸಿದ್ಧತೆಯಾಗಿತ್ತು. 2018 ರಲ್ಲಿ ಏಷ್ಯಾ ಕಪ್ ಟೂರ್ನಿಯು ಏಕದಿನ ಮಾದರಿಯಲ್ಲಿ ನಡೆಯಿತು. ಇದು 2019ರ ಏಕದಿನ ವಿಶ್ವಕಪ್‌ಗೆ ಸಿದ್ಧತೆಯಾಗಿತ್ತು. 2022ರಲ್ಲಿ ಟಿ20 ಮಾದರಿಯಲ್ಲಿ ಏಷ್ಯಾ ಕಪ್ ನಡೆಯಿತು. ಇದು 2022ರ ಟಿ20 ವಿಶ್ವಕಪ್‌ಗೆ ಪೂರ್ವತಯಾರಿ ಆಗಿತ್ತು. 2023 ರಲ್ಲಿ ಏಕದಿನ ಮಾದರಿಯಲ್ಲಿ ಏಷ್ಯಾ ಕಪ್ ನಡೆಯಿತು. ಇದು 2023ರ ಏಕದಿನ ವಿಶ್ವಕಪ್‌ಗೆ ಸಕಲ ಸಿದ್ಧತೆಯಾಗಿತ್ತು. 2025 ರಲ್ಲಿ ಟಿ20ಐ ಮಾದರಿಯಲ್ಲಿ ಏಷ್ಯಾ ಕಪ್ ನಡೆಯಲಿದೆ. ಇದು 2026 ರ ಟಿ20ಐ ವಿಶ್ವಕಪ್‌ಗೆ ಪೂರ್ವ ಸಿದ್ಧತೆಯಾಗಿರಲಿದೆ. ಜೊತೆಗೆ ಎರಡೂ ಮಾದರಿಗಳ ಜನಪ್ರಿಯತೆ ಹೆಚ್ಚಲು, ಅಭಿಮಾನಿಗಳನ್ನು, ಪ್ರಾಯೋಜಕರನ್ನು ಹಿಡಿದಿಟ್ಟುಕೊಳ್ಳಲು ಐಸಿಸಿ ಮತ್ತು ಎಸಿಸಿ ಕಂಡುಕೊಂಡಿರುವ ತಂತ್ರವಾಗಿದೆ.
ಭಾರತವೇ ಯಶಸ್ವಿ ತಂಡ
ಏಷ್ಯಾಕಪ್ ಇಲ್ಲಿಯವರೆಗೆ 16 ಆವೃತ್ತಿಗಳನ್ನು ಪೂರ್ಣಗೊಳಿಸಿದ್ದು, ಟೀಂ ಇಂಡಿಯಾ ಅತ್ಯಂತ ಯಶಸ್ವಿ ತಂಡವಾಗಿದೆ. ಏಷ್ಯಾಕಪ್‌ನಲ್ಲಿ ಹೆಚ್ಚು ಪ್ರಶಸ್ತಿಗಳನ್ನು ಗೆದ್ದ ತಂಡ ಭಾರತ ಆಗಿದೆ.
ಭಾರತ – 8 ಪ್ರಶಸ್ತಿಗಳು
ಶ್ರೀಲಂಕಾ – 6 ಪ್ರಶಸ್ತಿಗಳು
ಪಾಕಿಸ್ತಾನ – 2 ಪ್ರಶಸ್ತಿಗಳು
ರನ್ನರ್ ಅಪ್
ಶ್ರೀಲಂಕಾ – 7 ಬಾರಿ ರನ್ನರ್ ಅಪ್
ಭಾರತ – 3 ಬಾರಿ ರನ್ನರ್ ಅಪ್
ಪಾಕಿಸ್ತಾನ – 3 ಬಾರಿ ರನ್ನರ್ ಅಪ್
ಬಾಂಗ್ಲಾದೇಶ – 3 ಬಾರಿ ರನ್ನರ್ ಅಪ್
ಬಹುನಿರೀಕ್ಷಿತ ಏಷ್ಯಾಕಪ್ (Asia Cup) ಟೂರ್ನಿಯು ಇಂದಿನಿಂದ ಯುಎಇನಲ್ಲಿ ಶುರುವಾಗುತ್ತಿದೆ. ಸೆ.28ರ ವರೆಗೆ ಟೂರ್ನಿ ನಡೆಯಲಿದೆ. ಭಾರತ ತಂಡ (Team India) ತನ್ನ ಮೊದಲ ಪಂದ್ಯವನ್ನು ಯುಎಇ ವಿರುದ್ಧ ಸೆಪ್ಟೆಂಬರ್ 10ರಂದು ಆಡಲಿದೆ. ಪ್ರತಿದಿನ ರಾತ್ರಿ 8 ಗಂಟೆಗೆ ಪಂದ್ಯ ಶುರುವಾಗಲಿದೆ.
ದುಬೈ (Dubai) ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡ ಅನೇಕ ಪ್ರಯೋಗಗಳನ್ನು ನಡೆಸುವ ಸಾಧ್ಯತೆ ಇದೆ. ಜೊತೆಗೆ ಟೆಸ್ಟ್ ತಂಡದ ನಾಯಕ ಶುಭಮನ್ ಗಿಲ್ ಅವರು ಟಿ20 ತಂಡಕ್ಕೆ ಉಪನಾಯಕನಾಗಿ ಮರಳಿರುವುದು ತಂಡದ ರಚನೆ ಮೇಲೆ ಯಾವ ರೀತಿಯ ಪ್ರಭಾವ ಬೀರಬಹುದು ಎಂಬ ಬಗ್ಗೆಯೂ ಕುತೂಹಲ ಇದ್ದೇ ಇದೆ. ಅಲ್ಲದೇ 2026ರ ಟಿ20 ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ಭಾರತ ಈ ಟೂರ್ನಿಯಲ್ಲಿ ಹೇಗೆ ಪ್ರದರ್ಶನ ನೀಡಲಿದೆ ಎಂಬುದೂ ಕೂಡ ಅಷ್ಟೇ ಮುಖ್ಯವಾಗಿದೆ.
ಇನ್ನೂ ಪ್ರತಿವರ್ಷ ಏಷ್ಯಾಕಪ್ ಟೂರ್ನಿಯಲ್ಲಿ 6 ತಂಡಗಳು ಪಾಲ್ಗೊಳ್ಳುತ್ತಿದ್ದವು. ಈ ಬಾರಿ ತಂಡಗಳ ಸಂಖ್ಯೆಯನ್ನು 8ಕ್ಕೆ ಏರಿಸಲಾಗಿದ್ದು, ಬಲಾ ಬಲ ಹೇಗಿದೆ ಎಂಬುದನ್ನಿಲ್ಲಿ ನೋಡಬಹುದು…
ಮುಂಬೈ: ರೋಹಿತ್ ಶರ್ಮಾ (Rohit Sharma) ಬಳಿಕ ಮೂರು ಮಾದರಿಯ ಕ್ರಿಕೆಟ್‌ಗೆ ಟೀಂ ಇಂಡಿಯಾದ ಕ್ಯಾಪ್ಟನ್ ಯಾರಾಗ್ತಾರೆ ಅನ್ನೋ ಪ್ರಶ್ನೆಗೆ ಬಹುತೇಕ ಉತ್ತರ ಸಿಕ್ಕಂತೆ ಕಾಣುತ್ತಿದೆ. ರೋಹಿತ್ ನಿವೃತ್ತಿ ಬಳಿಕ 25 ವರ್ಷದ ಯುವ ಆಟಗಾರ ಶುಭಮನ್ ಗಿಲ್ (Shubman Gill) ಅವರನ್ನೇ ಎಲ್ಲಾ ಮಾದರಿಯ ನಾಯಕನನ್ನಾಗಿ ನೇಮಿಸುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.
ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ (International Cricket) ರೋಹಿತ್, ವಿರಾಟ್ ಕೊಹ್ಲಿ ಅವರ ನಿವೃತ್ತಿಯ ವಿಚಾರಗಳು ಸೋಷಿಯಲ್ ಮೀಡಿಯಾದಲ್ಲಿ ಪದೇ ಪದೇ ಸದ್ದು ಮಾಡುತ್ತಿವೆ. ಇದೇ ಅಕ್ಟೋಬರ್ 19ರಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿ (ODI Series) ಬಳಿಕ ಇಬ್ಬರು ದಿಗ್ಗಜರು ನಿವೃತ್ತಿ ಘೋಷಿಸುವ ಎಲ್ಲಾ ಸಾಧ್ಯತೆಗಳಿವೆ. ಹಾಗಾಗಿ ರೋಹಿತ್ ಬಳಿಕ ಆಲ್‌ಫಾರ್ಮ್ಯಾಟ್ (ಎಲ್ಲಾ ಮಾದರಿ)ಗೆ ಗಿಲ್ ಅವರನ್ನು ನಾಯಕನನ್ನಾಗಿ ನೇಮಿಸುವ ಬಗ್ಗೆ ಬಿಸಿಸಿಐ ಆಯ್ಕೆ ಸಮಿತಿ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಸೆ.9ರಿಂದ ಶುರುವಾಗಲಿರುವ ಟಿ20 ಏಷ್ಯಾ ಕಪ್ ಟೂರ್ನಿ ಬಳಿಕ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.
ವರದಿಗಳ ಪ್ರಕಾರ, ಶುಭಮನ್ ಗಿಲ್ ಅವರನ್ನು ಏಕದಿನ ನಾಯಕನನ್ನಾಗಿ ನೇಮಿಸುವ ಬಗ್ಗೆ ಯಾವುದೇ ಸಂಶಯ ಇಲ್ಲ. ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಗೆ ಇನ್ನಷ್ಟು ಸಮಯ ಬೇಕಾಗುತ್ತದೆ ಎಂದು ಬಿಸಿಸಿಐ (BCCI) ಹೇಳಿದೆ. ರೋಹಿತ್ ಶರ್ಮಾ ಸದ್ಯ ಏಕದಿನ ಸ್ವರೂಪದಲ್ಲಿ ಮಾತ್ರ ಆಡುತ್ತಿದ್ದು, 2027ರ ಏಕದಿನ ವಿಶ್ವಕಪ್ ಗೆದ್ದು ತರುವ ಉತ್ಸಾಹದಲ್ಲಿದ್ದಾರೆ. ಆದ್ರೆ ಅಷ್ಟೊತ್ತಿಗೆ ಅವರ ವಯಸ್ಸು 40 ಸಮೀಪಿಸಲಿದೆ. ಹೀಗಾಗಿ ಆಯ್ಕೆ ಸಮಿತಿ ಅವರ ವಯೋಮಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಕೈಬಿಡುವ ನಿರ್ಧಾರದಲ್ಲಿದೆ. ಹೀಗಾಗಿ ಶುಭಮನ್ ಗಿಲ್ ಅವರನ್ನು ಆಸೀಸ್ ಸರಣಿ ಬಳಿಕ ಏಕದಿನ ನಾಯಕನನ್ನಾಗಿ ನೇಮಕ ಮಾಡುವ ಸಾಧ್ಯತೆಗಳಿವೆ ಎನ್ನಲಾಗ್ತಿದೆ.
ಎಲ್ಲಾ ಫಾರ್ಮ್ಯಾಟ್‌ಗೆ ಒಬ್ಬನೇ ನಾಯಕ?
ಸದ್ಯ ಬಿಸಿಸಿಐ ಆಯ್ಕೆ ಸಮಿತಿಯು ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಒಬ್ಬನೇ ನಾಯಕನನ್ನ ಹುಡುಕುತ್ತಿದೆ. ಅದಕ್ಕಾಗಿ ಏಷ್ಯಾಕಪ್ ಬಳಿಕ 34 ವರ್ಷದ ಸೂರ್ಯಕುಮಾರ್ ಯಾದವ್ ಅವರನ್ನ ಟಿ20 ನಾಯಕತ್ವದಿಂದ ಬದಲಾಯಿಸುವ ಚಿಂತನೆಯಲ್ಲಿದೆ. ಅಕ್ಷರ್ ಪಟೇಲ್ ಅವರನ್ನು ಟಿ20I ಉಪನಾಯಕನ್ನಾಗಿ ನೇಮಿಸಲಾಗಿದೆ.
ಈಗಾಗಲೇ ಟೆಸ್ಟ್ ಕ್ಯಾಪ್ಟನ್ ಆಗಿ ಸೈ ಎನಿಸಿಕೊಂಡಿರುವ ಶುಭಮನ್ ಗಿಲ್ ಅಕ್ಟೋಬರ್ ಬಳಿಕ ಏಕದಿನ ನಾಯಕನೂ ಆಗಲಿದ್ದಾರೆ. ಜೊತೆಗೆ 2026ರ ಟಿ0 ವಿಶ್ವಕಪ್ ಬಳಿಕ ಟಿ20 ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ. ಆದರೆ ಬಿಸಿಸಿಐ ಈ ಕುರಿತು ಎಲ್ಲಿಯೂ ಅಧಿಕೃತ ಹೇಳಿಕೆ ನೀಡಿಲ್ಲ.
ಆಸೀಸ್ ಸರಣಿ ಬಳಿಕ ರೋಹಿತ್- ಕೊಹ್ಲಿಗೆ ವಿದಾಯ?
ಇನ್ನೂ ಮುಂದಿನ ಅಕ್ಟೋಬರ್ 19ರಿಂದ ಅ.25ರ ವರೆಗೆ ಆಸ್ಟ್ರೇಲಿಯಾ ವಿರುದ್ಧ ಭಾರತ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಈ ಸರಣಿ ಬಳಿಕ ದಿಗ್ಗಜರಾದ ವಿರಾಟ್, ರೋಹಿತ್ ನಿವೃತ್ತಿ ಘೋಷಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಟೆಸ್ಟ್ ಮತ್ತು ಟಿ20 ಮಾದರಿಗಳಿಗೆ ವಿದಾಯ ಹೇಳಿರುವ ಕೊಹ್ಲಿ ಮತ್ತು ರೋಹಿತ್ ಇಬ್ಬರೂ ಪ್ರಸ್ತುತ ಏಕದಿನ ಮಾದರಿಯಲ್ಲಿ ಮಾತ್ರ ಆಡುತ್ತಿದ್ದಾರೆ.
ನವದೆಹಲಿ: ಅಕ್ರಮ ಬೆಟ್ಟಿಂಗ್ ಆ್ಯಪ್‌ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಕ್ರಿಕೆಟಿಗ ಶಿಖರ್ ಧವನ್‌ಗೆ (Shikhar Dhawan) ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿಗೊಳಿಸಿದೆ.
ಅಧಿಕಾರಿಗಳ ಪ್ರಕಾರ, ಪ್ರಕರಣದ ತನಿಖೆಯು ʻ1xBetʼ ಬೆಟ್ಟಿಂಗ್ ಆ್ಯಪ್‌ಗೆ (Illegal Betting App Case) ಸಂಬಂಧಿಸಿದೆ. ಶಿಖರ್ ಧವನ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳ ಮೂಲಕ ಬೆಟ್ಟಿಂಗ್ ಆ್ಯಪ್ ಪರ ಪ್ರಚಾರ ಮಾಡ್ತಿದ್ದಾರೆ. ಹೀಗಾಗಿ ʻ1xBetʼ ಆ್ಯಪ್ ಜಾಹೀರಾತಿಗೆ ಸಂಬಂಧಿಸಿದಂತೆ 39 ವರ್ಷದ ಧವನ್ ತಮ್ಮ ಪಾತ್ರ ಸ್ಪಷ್ಟಪಡಿಸಬೇಕಿದೆ. ಅದಕ್ಕಾಗಿ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ. ಇದನ್ನೂ ಓದಿ: ದಿಗ್ಗಜರನ್ನ ಹಿಂದಿಕ್ಕಿದ ಸಿಕಂದರ್ ರಜಾ – ಪಾಕ್ ಮೂಲದ ಜಿಂಬಾಬ್ವೆ ಆಟಗಾರ ವಿಶ್ವದ ನಂ.1 ಆಲ್‌ರೌಂಡರ್
ಏನಿದು ಕೇಸ್?
ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ವಂಚನೆ ಜೊತೆಗೆ ಭಾರೀ ಪ್ರಮಾಣದ ತೆರಿಗೆ ವಂಚನೆ ಮಾಡಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಬೆಟ್ಟಿಂಗ್ ಆ್ಯಪ್‌ಗಳಿಗೆ ಸಂಬಂಧಿಸಿದ ಹಲವಾರು ಪ್ರಕರಣಗಳ ತನಿಖೆ ನಡೆಸುತ್ತಿದೆ. ಈಗಾಗಲೇ ಬೆಟ್ಟಿಂಗ್ ಆ್ಯಪ್‌ಗಳ ಪ್ರಚಾರದಲ್ಲಿದ್ದ ಹಲವಾರು ಬಾಲಿವುಡ್ ಮತ್ತು ದಕ್ಷಿಣ ಭಾರತದ ಚಲನಚಿತ್ರ ತಾರೆಯರು, ಕ್ರಿಕೆಟಿಗರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುತ್ತಿದೆ.
ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ಹರ್ಭಜನ್ ಸಿಂಗ್, ಊರ್ವಶಿ ರೌಟೇಲಾ ಮತ್ತು ಸುರೇಶ್ ರೈನಾ ಕೂಡಾ ಈ ಪಟ್ಟಿಯಲ್ಲಿದ್ದಾರೆ. ಕಳೆದ ತಿಂಗಳು ಸುರೇಶ್ ರೈನಾ ವಿಚಾರಣೆ ಎದುರಿಸಿದ್ದರು. ಇದನ್ನೂ ಓದಿ: ಟಿ20 ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ ಮಿಚೆಲ್ ಸ್ಟಾರ್ಕ್
ಇಸ್ಲಾಮಾಬಾದ್: ಭಾರತ ಮತ್ತು ಪಾಕಿಸ್ತಾನ (India – Pakistan) ನಡುವಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲ್ಲುವ ಫೆವರೆಟ್ ಆಗಿದೆ. ಆದ್ರೆ ಆ ಸಂರ್ಭದಲ್ಲಿ ಯಾರು ಒತ್ತಡವನ್ನು ನಿಭಾಯಿಸಬಲ್ಲದೋ ಆ ತಂಡ ವಿಜಯಶಾಲಿಯಾಗಲಿದೆ ಎಂದು ಪಾಕಿಸ್ತಾನದ ತಂಡದ ಕ್ರಿಕೆಟ್ ಕೋಚ್ ವಾಸಿಮ್ ಅಕ್ರಮ್ (Wasim Akram) ಹೇಳಿದ್ದಾರೆ.
ಬಹುನಿರೀಕ್ಷಿತ ಏಷ್ಯಾಕಪ್ (Asia Cup 2025) ಟೂರ್ನಿ ಸೆಪ್ಟೆಂಬರ್ 9 ರಿಂದ ಪ್ರಾರಂಭವಾಗಲಿದ್ದು, ಸೆ.10 ರಂದು ಭಾರತ ತನ್ನ ಮೊದಲ ಪಂದ್ಯವನ್ನಾಡಲಿದೆ. ಹೈವೋಲ್ಟೇಜ್ ಪಂದ್ಯವಾದ ಇಂಡೋ ಪಾಕ್ ಕದನ ಸೆ.14ರಂದು ನಡೆಯಲಿದ್ದು, ಈ ಕುರಿತು ವಾಸಿಂ ಅಕ್ರಮ್ ಮಾತನಾಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸರಣಿ ಆಡಲ್ಲ: ಸಚಿವ ಮನ್ಸುಖ್ ಮಾಂಡವಿಯಾ
ಭಾರತ-ಪಾಕ್ ಪಂದ್ಯ ಇತರ ಎಲ್ಲಾ ಪಂದ್ಯಗಳಂತಲ್ಲ, ಅತ್ಯಂತ ರೋಮಾಂಚನಕಾರಿಯಾಗಿರುತ್ತೆ, ಹೆಚ್ಚು ಮನರಂಜನೆಯನ್ನೂ ನೀಡುತ್ತೆ. ಈ ಪಂದ್ಯದಲ್ಲಿ ಆಟಗಾರರು ಕ್ರೀಡಾ ಮನೋಭಾವ ತೋರಿಸಬೇಕು. ಜೊತೆಗೆ ಅಭಿಮಾನಿಗಳು ಶಿಸ್ತಿನಿಂದ ವರ್ತಿಸಬೇಕು ಎಂದರಲ್ಲದೇ, ಇತ್ತೀಚೆಗೆ ಭಾರತ ತಂಡ ಉತ್ತಮ ಫಾರ್ಮ್‌ನಲ್ಲಿದೆ, ಗೆಲ್ಲುವ ಫೇವರೆಟ್ ಕೂಡ ಆಗಿದೆ. ಆದ್ರೆ ಪಂದ್ಯದ ದಿನದಂದು ಒತ್ತಡವನ್ನು ನಿಭಾಯಿಸಿದ ತಂಡವು ಗೆಲ್ಲಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಐಪಿಎಲ್‌ಗೆ ಗುಡ್‌ಬೈ ಹೇಳಿದ ಅಶ್ವಿನ್
ಮತ್ತೆ ಟೆಸ್ಟ್ ಸರಣಿ ಆಡಲಿ
ಮುಂದುವರಿದು ಮಾತನಾಡಿದ ವಾಸಿಮ್, ಟಿ20 ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಎದುರಾಗುವ ಸಾಧ್ಯತೆಯಿದೆ. ಇದು ವಿಶ್ವದಾದ್ಯಂತ ಇರುವ ಅಭಿಮಾನಿಗಳಿಗೆ ಹಬ್ಬವಾಗಲಿದೆ. ಇದಲ್ಲದೇ ಉಭತ ತಂಡಗಳು ಮತ್ತೆ ಟೆಸ್ಟ್ ಸರಣಿಯನ್ನು ಪುನರಾರಂಭಿಸಲಿ ಅನ್ನೋದು ನನ್ನ ಆಶಯ.
ಮುಂಬೈ: ಟೆಸ್ಟ್ ಪರಿಣತ ಬ್ಯಾಟರ್ ಚೇತೇಶ್ವರ ಪೂಜಾರ (Cheteshwar Pujara) ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ಇಂದು ನಿವೃತ್ತಿ ಘೋಷಿಸಿದ್ದಾರೆ. ಈ ವರ್ಷ ರೋಹಿತ್ ಶರ್ಮಾ (ಟೆಸ್ಟ್), ವಿರಾಟ್ ಕೊಹ್ಲಿ (ಟೆಸ್ಟ್), ರವಿಚಂದ್ರನ್ ಅಶ್ವಿನ್ (ಎಲ್ಲಾ ಮಾದರಿ) ಬಳಿಕ ಈಗ ಪೂಜಾರ ಎಲ್ಲ ಮಾದರಿಯ ಕ್ರಿಕೆಟ್‌ಗೆ (Cricket) ನಿವೃತ್ತಿ ಘೋಷಿಸಿದ್ದಾರೆ.
ಈ ಕುರಿತು ತಮ್ಮ ಇನ್‌ಸ್ಟಾ ಖಾತೆಯಲ್ಲಿ ಭಾವುಕ ಸಂದೇಶವೊಂದನ್ನೂ ಹಂಚಿಕೊಂಡಿದ್ದಾರೆ. ಟೀಂ ಇಂಡಿಯಾ ಜೆರ್ಸಿಯನ್ನ ಧರಿಸಿ ರಾಷ್ಟ್ರಗೀತೆ ಹಾಡುವುದು, ಪ್ರತಿ ಬಾರಿ ಮೈದಾನಕ್ಕಿಳಿದಾಗ ನನ್ನ ಅತ್ಯುತ್ತಮ ಪ್ರಯತ್ನ ಮಾಡುವುದು ಇದೆಲ್ಲವೂ ಪದಗಳಲ್ಲಿ ವರ್ಣಿಸಲು ಅಸಾಧ್ಯ. ಆದ್ರೆ ಎಲ್ಲ ಒಳ್ಳೇ ವಿಷಯಗಳೂ ಎಂದಾದರೂ ಕೊನೆಗೊಳ್ಳಬೇಕಲ್ಲವೇ? ಅದೇ ರೀತಿ ನಾನು ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ, ಎಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು ಅಂತ ಭಾವುಕ ಸಂದೇಶ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಟೆಸ್ಟ್ ಕ್ಯಾಪ್ಟನ್ ಗಿಲ್‌ಗೆ ಅನಾರೋಗ್ಯ – ಏಷ್ಯಾಕಪ್ ಟೂರ್ನಿಗೆ ಅಯ್ಯರ್‌ಗೆ ಸಿಗುತ್ತಾ ಚಾನ್ಸ್?
ರಾಜ್‌ಕೋಟ್‌ನಲ್ಲಿ ಜನಿಸಿದ 37 ವರ್ಷದ ಪೂಜಾರ 2010ರಲ್ಲಿ ಟೀಂ ಇಂಡಿಯಾಕ್ಕೆ ಪದಾರ್ಪಣೆ ಮಾಡಿದರು. ಟೀಂ ಇಂಡಿಯಾದಲ್ಲಿ ಅತಿಹೆಚ್ಚು ರನ್ ಗಳಿಸಿದ 8ನೇ ಟೆಸ್ಟ್ ಬ್ಯಾಟರ್ ಎನಿಸಿಕೊಂಡಿದ್ದರು. ಇದುವರೆಗೆ 103 ಟೆಸ್ಟ್, 5 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸರಣಿ ಆಡಲ್ಲ: ಸಚಿವ ಮನ್ಸುಖ್ ಮಾಂಡವಿಯಾ
ಟೀಂ ಇಂಡಿಯಾ ಪರ 103 ಟೆಸ್ಟ್ ಪಂದ್ಯಗಳಲ್ಲಿ 43.60 ಸರಾಸರಿಯಲ್ಲಿ 7,195 ರನ್ ಗಳಿಸಿದ್ದಾರೆ. ಇದರಲ್ಲಿ 19 ಶತಕಗಳು ಮತ್ತು 35 ಅರ್ಧಶತಕಗಳು ಸೇರಿವೆ. ತವರಿನಲ್ಲಿ ನಡೆದ ಒಟ್ಟು ಟೆಸ್ಟ್‌ನಲ್ಲಿ 3,839 ರನ್ ಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಂತ ವಿಶ್ವಾಸಾರ್ಹ ಬ್ಯಾಟರ್ ಆಗಿದ್ದ ಪೂಜಾರ, ಸ್ವದೇಶಿ ಮತ್ತು ವಿದೇಶಗಳಲ್ಲಿ ನಡೆದ ಟೆಸ್ಟ್ ಪಂದ್ಯಗಳ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದ್ರೆ ಕಳೆದ ವರ್ಷಗಳಲ್ಲಿ ಸಂಪೂರ್ಣವಾಗಿ ಫಾರ್ಮ್ ಕಳೆದುಕೊಂಡಿದ್ದರು. ಇದು ಅವರನ್ನು ನಿವೃತ್ತಿಯ ಕಡೆಗೆ ಸೆಳೆದಿರಬಹುದು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ನವೆಂಬರ್‌ನಲ್ಲಿ ಕೇರಳಕ್ಕೆ ಭೇಟಿ ನೀಡಲಿದ್ದಾರೆ ಅರ್ಜೆಂಟಿನಾದ ಫುಟ್‌ಬಾಲ್ ಆಟಗಾರ ಮೆಸ್ಸಿ