Tag: TeamIndia

  • ವಿರಾಟ್ ಶತಕದ ಸರದಾರ – ಸಚಿನ್ ನಂತರ 2ನೇ ಸ್ಥಾನದಲ್ಲಿ ಕೊಹ್ಲಿ

    ವಿರಾಟ್ ಶತಕದ ಸರದಾರ – ಸಚಿನ್ ನಂತರ 2ನೇ ಸ್ಥಾನದಲ್ಲಿ ಕೊಹ್ಲಿ

    ಢಾಕಾ: ಬಾಂಗ್ಲಾದೇಶ (BanglaDesh) ವಿರುದ್ಧ ನಡೆದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ ಟೀಂ ಇಂಡಿಯಾ (Team India) ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ (International Cricket) ಅತಿಹೆಚ್ಚು ಶತಕ ಸಿಡಿಸಿದ ವಿಶ್ವದ ಹಾಗೂ ಭಾರತದ 2ನೇ ಆಟಗಾರನಾಗಿದ್ದಾರೆ.

    ಬಾಂಗ್ಲಾದೇಶ ವಿರುದ್ಧದ ರಣರೋಚಕ ಪಂದ್ಯದಲ್ಲಿ 91 ಎಸೆತಗಳನ್ನು ಎದುರಿಸಿದ ಕಿಂಗ್ ಕೊಹ್ಲಿ 2 ಸಿಕ್ಸರ್ ಹಾಗೂ 11 ಬೌಂಡರಿಗಳು ಸೇರಿ 113 ರನ್ ಕಲೆಹಾಕಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ತಂಡದ ಕೋಚ್ ರಿಕಿ ಪಾಂಟಿಂಗ್ (Ricky Ponting) ಅವರ ದಾಖಲೆಯನ್ನ ಪುಡಿ ಮಾಡಿದ್ದಾರೆ. ಇದನ್ನೂ ಓದಿ: T20 ವಿಶ್ವಕಪ್‍ನಲ್ಲಿ ಕೊಹ್ಲಿ ಕಿಂಗ್ – ನೂತನ ವಿಶ್ವದಾಖಲೆ

    ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಶತಕ ಬಾರಿಸಿದ ಬ್ಯಾಟ್ಸ್‌ಮ್ಯಾನ್‌ಗಳ ಪಟ್ಟಿಯಲ್ಲಿ ಇದೀಗ ವಿರಾಟ್ ಕೊಹ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ (ODI Cricket) 100 ಶತಕಗಳನ್ನು (ಟೆಸ್ಟ್‌ನಲ್ಲಿ 51, ಏಕದಿನ 49) ಗಳಿಸಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ವಿಶ್ವದ ನಂ.1 ಸ್ಥಾನದಲ್ಲಿದ್ದಾರೆ. ಇನ್ನೂ 71 ಶತಕ (ಟೆಸ್ಟ್‌ನಲ್ಲಿ  41, ಏಕದಿನ 30) ಬಾರಿಸಿದ್ದ ರಿಕಿ ಪಾಂಟಿಂಗ್ 2ನೇ ಸ್ಥಾನದಲ್ಲಿದ್ದರು. ಇದೀಗ 72 ಶತಕ (ಟೆಸ್ಟ್ 27, ಏಕದಿನದಲ್ಲಿ 44) ಬಾರಿಸಿ ವಿರಾಟ್ ಕೊಹ್ಲಿ ರಿಕಿ ಪಾಂಟಿಂಗ್ ದಾಖಲೆಯನ್ನ ಸರಿಗಟ್ಟಿದ್ದಾರೆ. ಅಲ್ಲದೇ ಈವರೆಗೆ 1,172 ಬೌಂಡರಿಗಳನ್ನು ಸಿಡಿಸಿ ಅತ್ಯಧಿಕ ಬೌಂಡರಿ ಬಾರಿಸಿದ ವಿಶ್ವದ 5ನೇ ಆಟಗಾರನಾಗಿದ್ದಾರೆ. ಇದನ್ನೂ ಓದಿ: India vs Bangladesh 3rd ODI – ಭಾರತಕ್ಕೆ 227 ರನ್‌ಗಳ ಭರ್ಜರಿ ಜಯ

    ಬಾಂಗ್ಲಾದೇಶ ವಿರುದ್ಧ ನಡೆದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಟಾಸ್ ಸೋತು ಕ್ರೀಸ್‌ಗಿಳಿದ ಟೀಂ ಇಂಡಿಯಾ (Team India) 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 409 ರನ್ ಗಳಿಸಿತು. ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಬಾಂಗ್ಲಾ ತಂಡ 34 ಓವರ್‌ಗಳಲ್ಲಿ 182 ರನ್‌ಗಳಿಗೆ ಸರ್ವಪತನ ಕಂಡಿತು. ಭಾರತ 227 ರನ್‌ಗಳ ಬೃಹತ್ ಮೊತ್ತದ ಅಂತರದಲ್ಲಿ ಜಯ ಸಾಧಿಸಿತು.

    Live Tv
    [brid partner=56869869 player=32851 video=960834 autoplay=true]

  • ನೆಟ್ ಪ್ರಾಕ್ಟೀಸ್ ವೇಳೆ ರೋಹಿತ್ ಶರ್ಮಾ ಬಲಗೈಗೆ ಪೆಟ್ಟು – ಟೀಂ ಇಂಡಿಯಾಗೆ ಆಘಾತ

    ನೆಟ್ ಪ್ರಾಕ್ಟೀಸ್ ವೇಳೆ ರೋಹಿತ್ ಶರ್ಮಾ ಬಲಗೈಗೆ ಪೆಟ್ಟು – ಟೀಂ ಇಂಡಿಯಾಗೆ ಆಘಾತ

    ಮೆಲ್ಬರ್ನ್: ಜಿಂಬಾಬ್ವೆ (Zimbabwe) ವಿರುದ್ಧ ಗೆದ್ದು ಅಗ್ರಸ್ಥಾನದೊಂದಿಗೆ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿರುವ ಟೀಂ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) ನೆಟ್ ಪ್ರಾಕ್ಟೀಸ್ ಮಾಡುತ್ತಿದ್ದ ವೇಳೆ ಬಲಗೈಗೆ ಬಲವಾದ ಪೆಟ್ಟುಮಾಡಿಕೊಂಡಿದ್ದಾರೆ.

    ಇಂಗ್ಲೆಂಡ್ (England) ವಿರುದ್ಧ ಗುರುವಾರ ನಡೆಯಲಿರುವ ಟಿ20 ವಿಶ್ವಕಪ್ (T20 WorldCup) ಸೆಮಿಫೈನಲ್‌ಗೆ ನೆಟ್ ಪ್ರಾಕ್ಟೀಸ್ ಮಾಡುತ್ತಿದ್ದ ವೇಳೆ ಪೆಟ್ಟು ಮಾಡಿಕೊಂಡಿದ್ದಾರೆ. ನೆಟ್ ಸೆಷನ್‌ನಲ್ಲಿ ಎಸ್. ರಘು ಅವರಿಂದ ಥ್ರೋಡೌನ್ ತೆಗೆದುಕೊಳ್ಳುತ್ತಿದ್ದಾಗ ಶಾರ್ಟ್‌ಬಾಲ್‌ ಅವರ ಬಲಗೈಗೆ ಬಡಿದಿದೆ. 150 ಪ್ಲಸ್ ವೇಗದಲ್ಲಿ 18 ಯಾರ್ಡ್‌ಗಳಿಂದ ಎಸೆಯಲ್ಪಟ್ಟ ಥ್ರೋಡೌನ್ ಅನ್ನು ರೋಹಿತ್ ಶಾರ್ಟ್ ಆರ್ಮ್ ಮಾಡಲು ಯತ್ನಿಸಿದರು. ಈ ವೇಳೆ ಕೈಗೆ ಪೆಟ್ಟಾಗಿದೆ, ಇದರಿಂದ ತೀವ್ರ ನೋವುಂಟಾಗಿ ತಕ್ಷಣವೇ ಅವರು ನೆಟ್ ತೊರೆದಿದ್ದಾರೆ. ಇದನ್ನೂ ಓದಿ: ರೋಹಿತ್‍ರನ್ನು ನೋಡಲೆಂದು ಮೈದಾನಕ್ಕಿಳಿದ ಅಭಿಮಾನಿಗೆ 6.5 ಲಕ್ಷ ರೂ. ಫೈನ್

    ವೈದ್ಯಕೀಯ ತಂಡ (Medical Team) ಪರಿಶೀಲಿಸಿದ್ದು, ಯಾವುದೇ ಮುರಿತ ಕಂಡುಬಂದಿಲ್ಲ ಎಂದು ಹೇಳಿದೆ. ಸೆಮಿಸ್ ಹತ್ತಿರದ ಸಂದರ್ಭದಲ್ಲಿ ರೋಹಿತ್ ನಾಯಕತ್ವ ಬಹಳ ಮುಖ್ಯವಾಗಿದ್ದು, ಸದ್ಯ ಅವರ ಕೈಗೆ ಪೆಟ್ಟಾಗಿರುವುದರಿಂದ ಟೀಂ ಇಂಡಿಯಾ ತೀವ್ರ ಆಘಾತಕ್ಕೆ ಒಳಗಾಗಿದೆ. ಇದನ್ನೂ ಓದಿ: 2024ರ T20 ವಿಶ್ವಕಪ್‍ಗೆ 20 ತಂಡ – ಯಾವೆಲ್ಲ ತಂಡಗಳಿಗೆ ನೇರ ಪ್ರವೇಶ?

    ಭಾನುವಾರ ಭಾರತ ಹಾಗೂ ಜಿಂಬಾಬ್ವೆ (Zimbabwe) ನಡುವಿನ ಕಾದಾಟದಲ್ಲಿ ಟೀಂ ಇಂಡಿಯಾ 71 ರನ್‌ಗಳ ಭರ್ಜರಿ ಜಯದೊಂದಿಗೆ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿತು. ಭಾರತ ನೀಡಿದ 187 ರನ್‌ಗಳ ಗುರಿ ಬೆನ್ನಟ್ಟಿದ ಜಿಂಬಾಬ್ವೆ 17.2 ಓವರ್‌ಗಳಲ್ಲೇ 115 ರನ್‌ಗಳಿಗೆ ಆಲೌಟ್ ಆಯಿತು.

    Live Tv
    [brid partner=56869869 player=32851 video=960834 autoplay=true]

  • ರಾಹುಲ್ ಅರ್ಧ ಶತಕದ ಅಬ್ಬರ – ಟೀಕೆಗಳಿಗೆ ಬ್ಯಾಟ್ ಮೂಲಕವೇ ಉತ್ತರಕೊಟ್ಟ ಕನ್ನಡಿಗ

    ರಾಹುಲ್ ಅರ್ಧ ಶತಕದ ಅಬ್ಬರ – ಟೀಕೆಗಳಿಗೆ ಬ್ಯಾಟ್ ಮೂಲಕವೇ ಉತ್ತರಕೊಟ್ಟ ಕನ್ನಡಿಗ

    ಕ್ಯಾನ್ಬೆರಾ: ಟೀಂ ಇಂಡಿಯಾ (Team India) ಆರಂಭಿಕ ಕನ್ನಡಿಗ ಕೆ.ಎಲ್.ರಾಹುಲ್ (KL Rahul) ತಮ್ಮ ವಿರುದ್ಧದ ಟೀಕೆಗಳಿಗೆ ಬ್ಯಾಟ್ ಮೂಲಕವೇ ಉತ್ತರ ಕೊಟ್ಟಿದ್ದಾರೆ.

    ಆಸ್ಟ್ರೇಲಿಯಾದ ಅಡಿಲೇಡ್ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶದ (Bangladesh) ವಿರುದ್ಧದ ಪಂದ್ಯದಲ್ಲಿ ಅರ್ಧ ಶತಕ ಸಿಡಿಸುವ ಮೂಲಕ ಅಬ್ಬರಿಸಿದ್ದಾರೆ. ಇದನ್ನೂ ಓದಿ: ರಾಹುಲ್ ಅಬ್ಬರಿಸೋದನ್ನ ನೀವು ನೋಡ್ತೀರಾ – ಕನ್ನಡಿಗನ ಬೆಂಬಲಕ್ಕೆ ನಿಂತ ದ್ರಾವಿಡ್

    ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸುತ್ತಿದ್ದ ಕೆ.ಎಲ್ ರಾಹುಲ್ (KL Rahul) ಪಾಕಿಸ್ತಾನ (Pakistan), ನೆದರ್‌ಲ್ಯಾಂಡ್ ಹಾಗೂ ದಕ್ಷಿಣ ಆಫ್ರಿಕಾದ (South Africa) ವಿರುದ್ಧ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ಟೀಕೆಗಳಿಗೆ ಗುರಿಯಾಗಿದ್ದರು. ಮೂರು ಪಂದ್ಯಗಳಲ್ಲಿ 34 ಎಸೆತಗಳನ್ನು ಎದುರಿಸಿದ್ದ ರಾಹುಲ್ 22 ರನ್‌ಗಳನ್ನಷ್ಟೇ ಗಳಿಸಿದ್ದರು. ರಾಹುಲ್ ಕಳಪೆ ಪ್ರದರ್ಶನ ನೀಡಿದ್ದಕ್ಕೆ ಟೀಂ ಇಂಡಿಯಾದ (Team India) ಅಭಿಮಾನಿಗಳು ರಾಹುಲ್ ವಿರುದ್ಧ ಮುಗಿಬಿದ್ದಿದ್ದರು. ಸಾಕಷ್ಟು ಟ್ರೋಲ್‌ಗಳಿಗೆ ಗುರಿ ಮಾಡಿದ್ದರು.

    ಇದೀಗ ಟೀಕೆಗಳಿಗೆ ರಾಹುಲ್ ಬ್ಯಾಟ್ ಮೂಲಕವೇ ಉತ್ತರ ಕೊಟ್ಟಿದ್ದಾರೆ. ಬಾಂಗ್ಲಾದೇಶದ ವಿರುದ್ಧ ಅಬ್ಬರಿಸಿದ ರಾಹುಲ್ 32 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ. ಇದರಲ್ಲಿ 4 ಸಿಕ್ಸರ್ ಹಾಗೂ 3 ಬೌಂಡರಿಗಳು ಸೇರಿವೆ. ಇದನ್ನೂ ಓದಿ: ನಾನ್‍ ಸ್ಟ್ರೈಕರ್ ರನೌಟ್‍ನಿಂದ ಪಾರಾಗಲು ಹೊಸ ಐಡಿಯಾ ಹುಡುಕಿದ ಗ್ಲೆನ್ ಫಿಲಿಪ್ಸ್  

    ನಿನ್ನೆಯಷ್ಟೇ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ (Rahul Dravid), ಕೆ.ಎಲ್.ರಾಹುಲ್ ಬೆಂಬಲಿಸಿ, ಮೆಚ್ಚುಗೆಯ ಮಾತುಗಳನ್ನಾಡಿದ್ದರು. ನನ್ನ ಪ್ರಕಾರ ಕೆ.ಎಲ್ ರಾಹುಲ್ ಅವರೊಬ್ಬ ಅತ್ಯದ್ಭುತ ಕ್ರಿಕೆಟಿಗ. ಅವರು ಈಗಾಗಲೇ ತಮ್ಮ ಸಾಮರ್ಥ್ಯವೇನು ಎಂಬುದನ್ನು ಸಾಬೀತು ಮಾಡಿದ್ದಾರೆ. ಮುಂದಿನ ಪಂದ್ಯಗಳಲ್ಲಿ ರಾಹುಲ್ ಅಬ್ಬರಿಸೋದನ್ನ ನೀಡವು ನೋಡುತ್ತೀರಿ ಎಂದು ದ್ರಾವಿಡ್ ಹೇಳಿದ್ದರು.

    Live Tv
    [brid partner=56869869 player=32851 video=960834 autoplay=true]

  • ಹಾರ್ದಿಕ್ ಪಾಂಡ್ಯಗೆ ಟೀಂ ಇಂಡಿಯಾದ T20 ನಾಯಕತ್ವ

    ಹಾರ್ದಿಕ್ ಪಾಂಡ್ಯಗೆ ಟೀಂ ಇಂಡಿಯಾದ T20 ನಾಯಕತ್ವ

    ಮುಂಬೈ: ಟಿ20 ವಿಶ್ವಕಪ್ (T20 World Cup) ಬಳಿಕ ನ್ಯೂಜಿಲೆಂಡ್ (New Zealand) ಮತ್ತು ಬಾಂಗ್ಲಾದೇಶ (Bangladesh) ವಿರುದ್ಧದ ಸರಣಿಗಾಗಿ ಟೀಂ ಇಂಡಿಯಾವನ್ನು (Team India) ಆಯ್ಕೆ ಮಾಡಲಾಗಿದೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯರನ್ನು (Hardik Pandya) ತಂಡದ ನಾಯಕನನ್ನಾಗಿ ನೇಮಕ ಮಾಡಲಾಗಿದೆ.

    ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ನೂತನ ನಾಯಕನೊಂದಿಗೆ ಕಣಕ್ಕಿಳಿಯಲಿದ್ದು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸಹಿತ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಸಂಜು ಸ್ಯಾಮ್ಸನ್ ಮತ್ತು ಉಮ್ರಾನ್ ಮಲಿಕ್‍ಗೆ ಮತ್ತೆ ಮಣೆ ಹಾಕಲಾಗಿದೆ. ಇದನ್ನೂ ಓದಿ: ಮತ್ತೆ ಟೀಂ ಇಂಡಿಯಾ ಸೇರಲಿದ್ದಾರೆ ಜಡೇಜಾ

    ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಶಿಖರ್ ಧವನ್‍ರನ್ನು ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಗಾಯಾಳುವಾಗಿದ್ದ ದೀಪಕ್ ಚಹರ್‌ರನ್ನು ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿದೆ.

    ಟಿ20 ತಂಡ:
    ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್, ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಕುಲ್‍ದೀಪ್ ಯಾದವ್, ಅರ್ಶ್‍ದೀಪ್ ಸಿಂಗ್, ಹರ್ಷಲ್ ಪಟೇಲ್ , ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್. ಇದನ್ನೂ ಓದಿ: ಕತ್ರಿನಾ ಕೈಫ್‌ಗೆ ಬೌಲಿಂಗ್‌ ಮಾಡಿದ ಹರ್ಭಜನ್‌ ಸಿಂಗ್‌

    ಏಕದಿನ ತಂಡ:
    ಶಿಖರ್ ಧವನ್ (ನಾಯಕ), ರಿಷಬ್ ಪಂತ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯಜುವೇಂದ್ರ ಚಾಹಲ್, ಕುಲ್‍ದೀಪ್ ಯಾದವ್, ಅರ್ಶ್‍ದೀಪ್ ಸಿಂಗ್, ದೀಪಕ್ ಚಾಹರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.

    ಬಾಂಗ್ಲಾದೇಶದ ಏಕದಿನ ಮತ್ತು ಟೆಸ್ಟ್ ಸರಣಿಗೆ ಹಿರಿಯ ಆಟಗಾರರನ್ನು ಸೇರಿದ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಖಾಯಂ ನಾಯಕ ರೋಹಿತ್ ಶರ್ಮಾ, ಕೊಹ್ಲಿ ಸೇರಿದಂತೆ ಆಲೌರೌಂಡರ್ ರವೀಂದ್ರ ಜಡೇಜಾರನ್ನು ಮತ್ತೆ ಬಿಸಿಸಿಐ (BCCI) ಆಯ್ಕೆ ಸಮಿತಿ ಆಯ್ಕೆ ಮಾಡಿದೆ. ಯಶ್‌ ದಯಾಲ್‌ಗೆ ಟೀಂ ಇಂಡಿಯಾ ಪರ ಆಡಲು ಮೊದಲ ಕರೆ ನೀಡಲಾಗಿದೆ. ಇದನ್ನೂ ಓದಿ: ಖಾಸಗಿತನಕ್ಕೆ ಧಕ್ಕೆ ತರಬೇಡಿ – ಹೋಟೆಲ್ ವಿರುದ್ಧ ಕೊಹ್ಲಿ ಕೆಂಡ

    ಏಕದಿನ ಸರಣಿ:
    ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್, ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಬ್ ಪಂತ್, ಇಶಾನ್ ಕಿಶನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಯಶ್ ದಯಾಳ್.

    ಟೆಸ್ಟ್ ಸರಣಿ:
    ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಕೆ.ಎಸ್ ಭರತ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.

    ಈಗಾಗಲೇ ಗಾಯಾಳುವಾಗಿ ಟಿ20 ವಿಶ್ವಕಪ್ ಸರಣಿಯಿಂದ ಹೊರಗುಳಿದಿರುವ ಜಸ್ಪ್ರೀತ್ ಬುಮ್ರಾ ಈ ಎರಡೂ ಸರಣಿಯಿಂದಲೂ ಹೊರಗುಳಿದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮತ್ತೆ ಟೀಂ ಇಂಡಿಯಾ ಸೇರಲಿದ್ದಾರೆ ಜಡೇಜಾ

    ಮತ್ತೆ ಟೀಂ ಇಂಡಿಯಾ ಸೇರಲಿದ್ದಾರೆ ಜಡೇಜಾ

    ಮುಂಬೈ: ಮೊಣಕಾಲು ಗಾಯಕ್ಕೆ ತುತ್ತಾಗಿದ್ದ ಟೀಂ ಇಂಡಿಯಾದ (Team India) ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ (Ravindra Jadeja) ಮತ್ತೆ ಟೀಂ ಇಂಡಿಯಾಕ್ಕೆ ಮರಳುತ್ತಿದ್ದಾರೆ.

    ಬಾಂಗ್ಲಾದೇಶದ (Bangladesh) ವಿರುದ್ಧ ಡಿಸೆಂಬರ್‌ನಲ್ಲಿ ನಡೆಯಲಿರುವ ಟೆಸ್ಟ್ (Test Cricket) ಹಾಗೂ ಏಕದಿನ ಸರಣಿ ಮೂಲಕ ತಂಡಕ್ಕೆ ಮರಳಲಿದ್ದಾರೆ. ಈ ಬಗ್ಗೆ ಬಿಸಿಸಿಐ (BCCI) ಅಧಿಕೃತವಾಗಿ ತಿಳಿಸಿದೆ. ಇದನ್ನೂ ಓದಿ: ದುಬೈನಲ್ಲಿ ರವೀಂದ್ರ ಜಡೇಜಾ ಎಡವಟ್ಟು – BCCI ಕೆಂಡಾಮಂಡಲ

    ಹೌದು. ಏಷ್ಯಾಕಪ್‌ನ (AisaCup2022) ಮೊದಲೆರಡು ಪಂದ್ಯಗಳಲ್ಲಿ ಆಲ್‌ರೌಂಡರ್ ಆಟವಾಡಿದ್ದ ರವೀಂದ್ರ ಜಡೇಜಾ ನಂತರ ಮೊಣಕಾಲು ಗಾಯಕ್ಕೆ ತುತ್ತಾದರು. ತಂಡದ ಸ್ಟಾರ್ ಆಟಗಾರನಾಗಿ ಗುರುತಿಸಿಕೊಂಡಿದ್ದ ಜಡೇಜಾ ಗಾಯಗೊಂಡು ಟೂರ್ನಿಯಿಂದ ಹೊರ ನಡೆದರು. ಆ ಬಳಿಕ ಸೋಲಿನತ್ತ ಮುಖ ಮಾಡಿದ ಭಾರತ ಸೂಪರ್ ಫೋರ್ ಹಂತದಲ್ಲೇ ಮುಗ್ಗರಿಸಿ ನಿರಾಸೆ ಮೂಡಿಸಿತ್ತು. ಅಲ್ಲದೇ ಮೊಣಕಾಲಿನ ಗಾಯದ ಸಮಸ್ಯೆಯಿಂದಾಗಿ ವಿಶ್ವಕಪ್‌ನಲ್ಲೂ (T20 WorldCup) ಜಡೇಜಾ ಸ್ಥಾನ ಕಳೆದುಕೊಂಡರು.

    ಇದೀಗ ಶಸ್ತ್ರಚಿಕಿತ್ಸೆಯಿಂದ ಗುಣಮುಖರಾಗಿದ್ದು, ಡಿಸೆಂಬರ್‌ನಲ್ಲಿ ನಡೆಯುವ ಬಾಂಗ್ಲಾದೇಶದ (Bangladesh) ವಿರುದ್ಧದ ಏಕದಿನ ಹಾಗೂ ಟೆಸ್ಟ್ ಸರಣಿಯ ಮೂಲಕ ಮತ್ತೆ ಟೀಂ ಇಂಡಿಯಾಕ್ಕೆ (Team India) ಮರಳಲಿದ್ದಾರೆ. ಇದನ್ನೂ ಓದಿ: ಖಾಸಗಿತನಕ್ಕೆ ಧಕ್ಕೆ ತರಬೇಡಿ – ಹೋಟೆಲ್ ವಿರುದ್ಧ ಕೊಹ್ಲಿ ಕೆಂಡ

    ಬಾಂಗ್ಲಾದೇಶ ವಿರುದ್ಧ ಸೆಣಸುವ ಏಕದಿನ ತಂಡ:
    ರೋಹಿತ್ ಶರ್ಮಾ (ನಾಯಕ) (Rohit Sharma), ಕೆಎಲ್ ರಾಹುಲ್ (KL Rahul) (ಉಪನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ (Virat Kohli), ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಯಶ್ ದಯಾಳ್.

    ಟೆಸ್ಟ್ ಕ್ರಿಕೆಟ್ ತಂಡ:
    ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್‌ದೀಪ್‌ ಯಾದವ್ , ಶಾರ್ದೂಲ್ ಠಾಕೂರ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.

    Live Tv
    [brid partner=56869869 player=32851 video=960834 autoplay=true]

  • ಸತತ ಸೋಲಿನ ರುಚಿ – ಭಾರತದ ಗೆಲುವಿಗಾಗಿ ಪಾಕ್ ತಂಡ ಪ್ರಾರ್ಥನೆ

    ಸತತ ಸೋಲಿನ ರುಚಿ – ಭಾರತದ ಗೆಲುವಿಗಾಗಿ ಪಾಕ್ ತಂಡ ಪ್ರಾರ್ಥನೆ

    ಕ್ಯಾನ್ಬೆರಾ: ಆಸ್ಟ್ರೇಲಿಯಾದಲ್ಲಿ (Australia) ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ (T20 WorldCup) ಪಾಕಿಸ್ತಾನದ ಪಯಣ ಬಹುತೇಕ ಖೇಲ್ ಕತಂ ಆದಂತೆ ಕಾಣ್ತಿದೆ. ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾ (Team India) ಎದುರು ಸೋಲಿನ ರುಚಿ ಕಂಡ ಪಾಕಿಸ್ತಾನ (Pakistan) ತನ್ನ 2ನೇ ಪಂದ್ಯದಲ್ಲಿ ಜಿಂಬಾಬ್ವೆ ಎದುರು ಹೀನಾಯ ಸೋಲು ಅನುಭವಿಸಿತ್ತು.

    ಕೊನೆಯವರೆಗೂ ರೋಚಕತೆಯಿಂದ ಕೂಡಿದ್ದ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಬಾಬರ್ ಸೇನೆ ಕೇವಲ 1 ರನ್ ಅಂತರದಲ್ಲಿ ಸೋಲು ಕಂಡಿತು. ಇದೀಗ ಬಾಬರ್ (BabarAzam) ಪಡೆಗೆ ಸೆಮಿಸ್‌ಗೆ ತೆರಳಲು ಕಠಿಣ ಪರಿಸ್ಥಿತಿ ಎದುರಾಗಿದೆ. ಪಾಕ್ ಉಳಿದ 3 ಪಂದ್ಯಗಳಲ್ಲೂ ಗೆಲ್ಲುವುದು ನಿರ್ಣಾಯಕವಾಗಿದೆ. ಅಲ್ಲದೇ ಕೆಲ ತಂಡಗಳ ಸೋಲು ಗೆಲುವಿನ ಮೇಲೂ ಪಾಕ್ ಅವಲಂಬಿತವಾಗಿದೆ. ಇದನ್ನೂ ಓದಿ: ಸೆಮಿಫೈನಲ್ ನಂತರ ಭಾರತ ಕೂಡ ಮನೆಗೆ – ಶೋಯೆಬ್ ಅಖ್ತರ್

    2021ರ ಟಿ20 ವಿಶ್ವಕಪ್‌ನಲ್ಲಿ ಭಾರತದ ಸ್ಥಿತಿಯೂ ಹೀಗೆ ಇತ್ತು. ಆಗ ಕೊಹ್ಲಿ (Virat Kohli) ಪಡೆಯ ಸ್ಥಿತಿ ನೋಡಿ ನಗೆ ಬೀರಿದ ಪಾಕ್ ತಂಡ ಇದೀಗ ಹಿಟ್‌ಮ್ಯಾನ್ ರೋಹಿತ್ (Rohit Sharma) ಪಡೆಯ ಸತತ ಗೆಲುವಿಗಾಗಿ ದೇವರಿಗೆ ಮೊರೆ ಇಡುತ್ತಿದ್ದಾರೆ.

    ಸೂಪರ್-12 ಗುಂಪು-2ರಲ್ಲಿರುವ 6 ತಂಡಗಳ ಪೈಕಿ ಸತತ ಗೆಲುವು ಸಾಧಿಸಿರುವ ಭಾರತ ಅಗ್ರಸ್ಥಾನದಲ್ಲಿದ್ದರೆ, 2 ಪಂದ್ಯಗಳಲ್ಲೂ ಸೋಲು ಕಂಡಿರುವ ಪಾಕಿಸ್ತಾನ (Pakistan) 5ನೇ ಸ್ಥಾನದಲ್ಲಿದೆ. ನೆದರ್‌ಲ್ಯಾಂಡ್ (Netherlands) 6ನೇ ಸ್ಥಾನದಲ್ಲಿದೆ. ಪಾಕ್ ಈಗಾಗಲೇ 2 ಪಂದ್ಯಗಳಲ್ಲಿ ಸೋತಿದ್ದು, ಉಳಿದ 3 ಪಂದ್ಯಗಳಲ್ಲಿ ಗೆಲುವು ನಿರ್ಣಾಯಕವಾಗಿ ಬೇಕಿದೆ. ಜೊತೆಗೆ ರನ್‌ರೇಟ್‌ನತ್ತಲೂ ಗಮನಿಸಬೇಕಿದೆ. ಇದನ್ನೂ ಓದಿ: `ಹೃದಯದ ರಾಣಿ’ ಎಂದು ಪ್ರೇಯಸಿಯನ್ನ ಹಾಡಿ ಹೊಗಳಿದ ಸಿದ್ಧಾರ್ಥ್

    ಭಾರತದ ಸತತ ಗೆಲುವಿಗಾಗಿ ಪ್ರಾರ್ಥನೆ:
    ಪಾಕಿಸ್ತಾನ ಸೆಮಿಫೈನಲ್‌ಗೆ ಬರಬೇಕಾದ್ರೆ ಮೂರು ಪಂದ್ಯಗಳ ಗೆಲುವು ಮಾತ್ರವಲ್ಲ. ನಾಳೆ ನಡೆಯುವ ಸೂಪರ್ ಸಂಡೇ ಮ್ಯಾಚ್‌ನಲ್ಲಿ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾವನ್ನು ಸೋಲಿಸಬೇಕಾಗಿದೆ. ಮುಂದಿನ ಪಂದ್ಯಗಳಲ್ಲಿ ಜಿಂಬಾಬ್ವೆ ತನ್ನ ಉಳಿದ ಮೂರು ಪಂದ್ಯಗಳಲ್ಲಿ ಎರಡು ಪಂದ್ಯ ಸೋಲಬೇಕಿದೆ. ಅದೇ ಸಮಯದಲ್ಲಿ ಬಾಂಗ್ಲಾದೇಶ (Bangladesh) ಇನ್ನೊಂದು ಪಂದ್ಯದಲ್ಲಿ ಸೋಲಬೇಕು. ಭಾರತ ದಕ್ಷಿಣ ಆಫ್ರಿಕಾ (South Africa), ಬಾಂಗ್ಲಾದೇಶ ಮತ್ತು ಜಿಂಬಾಬ್ವೆ ಈ ಮೂರು ತಂಡಗಳನ್ನು ಸೋಲಿಸಬೇಕು. ಅಂದುಕೊಂಡಂತೆ ಎಲ್ಲವೂ ಆದ್ರೆ ಪಾಕಿಸ್ತಾನ ಸೆಮಿಸ್‌ಗೆ ತಲುಪುವ ಸಾಧ್ಯತೆಯಿದೆ. ಎದುರಾಳಿ ತಂಡಗಳು ಬಲಿಷ್ಠವಾಗಿರುವುದರಿಂದ ಇದು ಸಾಧ್ಯವಾಗುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ. ಹಾಗಾಗಿ ಪಾಕಿಸ್ತಾನ ತಂಡ ಈಗ ಭಾರತದ ಗೆಲುವಿಗಾಗಿ ಪ್ರಾರ್ಥಿಸುತ್ತಿದೆ.

    ಒಂದು ವೇಳೆ ಸೂಪರ್ 12 ಸುತ್ತಿನಲ್ಲಿ ಭಾರತ ಸೋತರೆ, ಪಾಕಿಸ್ತಾನ ಸೆಮಿಸ್ ರೇಸ್‌ನಿಂದ ಹೊರಗುಳಿಯುತ್ತದೆ. ಅದಕ್ಕಾಗಿಯೇ ಪಾಕಿಸ್ತಾನದ ಅಭಿಮಾನಿಗಳು ಈಗ ಭಾರತದ ಗೆಲುವಿಗಾಗಿ ಕಾದುಕುಳಿತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸೆಮಿಫೈನಲ್ ನಂತರ ಭಾರತ ಕೂಡ ಮನೆಗೆ – ಶೋಯೆಬ್ ಅಖ್ತರ್

    ಸೆಮಿಫೈನಲ್ ನಂತರ ಭಾರತ ಕೂಡ ಮನೆಗೆ – ಶೋಯೆಬ್ ಅಖ್ತರ್

    ಇಸ್ಲಾಮಾಬಾದ್: ಸತತ ಸೋಲಿನಿಂದ ಕಂಗೆಟ್ಟಿರುವ ಪಾಕಿಸ್ತಾನ (Pakistan) ಇನ್ನೊಂದೇ ವಾರದಲ್ಲಿ ಮನೆಗೆ ಬರಲಿದೆ. ಭಾರತ (India) ಕೂಡ ಸೆಮಿಫೈನಲ್ಸ್ ಬಳಿಕ ಮನೆಕಡೆಗೆ ನಡೆಯಲಿದೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ (Shoaib Akhtar) ಭವಿಷ್ಯ ನುಡಿದಿದ್ದಾರೆ.

    ಟಿ20 ವಿಶ್ವಕಪ್‌ನಲ್ಲಿ (T20 WorldCup) ಪಾಕಿಸ್ತಾನ ತಂಡದ ಪ್ರದರ್ಶನ ಕುರಿತು ಯುಟ್ಯೂಬ್ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಪಾಕ್ ರಿಜ್ವಾನ್ ಹಿಂದಿಕ್ಕಿ ನಂ.1 ಪಟ್ಟಕ್ಕೆ ಏರಿದ ಸೂರ್ಯ

    ಇದು ತುಂಬಾ ನಿರಾಶಾದಾಯಕ. ನಾನು ಈಗಾಗಲೇ ಹೇಳಿದ್ದೇನೆ. ಪಾಕಿಸ್ತಾನ ತಂಡವು ಇದೇ ವಾರದಲ್ಲಿ ತವರಿಗೆ ಮರಳಲಿದೆ. ಹಾಗೆಯೇ ಭಾರತ ಕೂಡ ಸೆಮಿಫೈನಲ್ ಹಂತದಲ್ಲಿ ಮನೆಗೆ ಹಿಂತಿರುಗಲಿದೆ. ಟೀಂ ಇಂಡಿಯಾ (Team India) ಸಹ ಅಷ್ಟು ಉತ್ತಮವಾಗಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಪಾಕ್ ಕ್ರಿಕೆಟ್ ಮಂಡಳಿಯು (PCB) ವಿಶ್ವಕಪ್‌ಗೆ ಅನರ್ಹ ಆಟಗಾರರನ್ನ ಆಯ್ಕೆ ಮಾಡಿದೆ ಎಂದು ದೂಷಿಸಿದ್ದಾರೆ. ಇದನ್ನೂ ಓದಿ: ಪಾಕ್‍ಗೆ ಮರ್ಮಾಘಾತ – 1 ರನ್‍ಗಳ ರೋಚಕ ಜಯ ಸಾಧಿಸಿದ ಜಿಂಬಾಬ್ವೆ

    ಟಿ20 ವಿಶ್ವಕಪ್‌ನಲ್ಲಿ (T20 Wordcup) ಭಾರತದ ಎದುರು ಮಂಡಿಯೂರಿದ ಪಾಕ್ ತಂಡ 2ನೇ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧವೂ ಸೋಲನ್ನು ಕಂಡಿದೆ. ಸತತ ಸೋಲಿನ ರುಚಿ ನೋಡಿದ ಪಾಕಿಸ್ತಾನ ಇದೀಗ ಅರ್ಹತಾ ಸುತ್ತಿನ ರ‍್ಯಾಂಕಿಂಗ್ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಕುಸಿತ ಕಂಡಿದೆ.

    Live Tv
    [brid partner=56869869 player=32851 video=960834 autoplay=true]

  • ಪಾಕ್ ರಿಜ್ವಾನ್ ಹಿಂದಿಕ್ಕಿ ನಂ.1 ಪಟ್ಟಕ್ಕೆ ಏರಿದ ಸೂರ್ಯ

    ಪಾಕ್ ರಿಜ್ವಾನ್ ಹಿಂದಿಕ್ಕಿ ನಂ.1 ಪಟ್ಟಕ್ಕೆ ಏರಿದ ಸೂರ್ಯ

    ಕ್ಯಾನ್ಬೆರಾ: ನೆದರ್‌ಲ್ಯಾಂಡ್ (Netherland) ವಿರುದ್ಧ ಸ್ಫೋಟಕ ಅರ್ಧಶತಕ ಗಳಿಸಿದ ಟೀಂ ಇಂಡಿಯಾ (Team India) ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ (Suryakumar Yadav) ಪಾಕಿಸ್ತಾನದ (Pakistan) ಓಪನರ್ ಮೊಹಮ್ಮದ್ ರಿಜ್ವಾನ್ (Mohammad Rizwan) ದಾಖಲೆಯನ್ನು ಸರಿಗಟ್ಟಿದ್ದು, ಈ ವರ್ಷದಲ್ಲಿ ಅತಿಹೆಚ್ಚು ರನ್‌ಗಳಿದ ಮೊದಲ ಆಟಗಾರ ಎನ್ನಿಸಿಕೊಂಡಿದ್ದಾರೆ.

    ಇತ್ತೀಚೆಗೆ ಆಸ್ಟ್ರೇಲಿಯಾ (Australia) ವಿರುದ್ಧದ T20 ಸರಣಿಯಲ್ಲೂ ಅಬ್ಬರಿಸಿದ ಸೂರ್ಯಕುಮಾರ್ ಐಸಿಸಿ ಟಿ20 (ICC T20) ರ‍್ಯಾಂಕಿಂಗ್‌ನಲ್ಲಿ 780 ರೇಟಿಂಗ್ಸ್ ಗಳಿಸುವ ಮೂಲಕ 3ನೇ ಸ್ಥಾನಕ್ಕೇರಿದರು. ಅಲ್ಲದೇ 573 ಎಸೆತಗಳಲ್ಲಿ ವೇಗದ 1 ಸಾವಿರ ರನ್ ಪೂರೈಸಿದ ಖ್ಯಾತಿ ಗಳಿಸಿದ್ದರು. ಇದೀಗ ಮತ್ತೊಮ್ಮೆ ಸ್ಪೋಟಕ ಅರ್ಧ ಶತಕ (25 ಎಸೆತಗಳಲ್ಲಿ 50 ರನ್) ಸಿಡಿಸುವ ಮೂಲಕ ವಿಶೇಷ ದಾಖಲೆ ಬರೆದಿದ್ದಾರೆ. ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್‌ನನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ್ದಾರೆ. ಇದನ್ನೂ ಓದಿ: T20ಯಲ್ಲಿ ವಿಶ್ವದಾಖಲೆ ನಿರ್ಮಿಸಿದ ಸೂರ್ಯ

    ಪ್ರಸ್ತುತ ವರ್ಷದಲ್ಲಿ 19 ಇನ್ನಿಂಗ್ಸ್‌ಗಳನ್ನಾಡಿರುವ ಮೊಹಮ್ಮದ್ ರಿಜ್ವಾನ್ 124 ಸ್ಟ್ರೈಕ್‌ರೇಟ್‌ ನಲ್ಲಿ 662 ಎಸೆತಗಳಿಗೆ 825 ರನ್‌ಗಳಿಸಿ ಈ ವರ್ಷದ ಟಿ20 ನಲ್ಲಿ ಅತಿಹೆಚ್ಚು ರನ್‌ಗಳಿಸಿದ ಮೊದಲ ಸ್ಥಾನದಲ್ಲಿದ್ದರು. ಆದರೆ ಸತತ ಬ್ಯಾಟಿಂಗ್ ಲಯ ಕಂಡುಕೊಂಡಿರುವ ಸೂರ್ಯಕುಮಾರ್ 25 ಇನ್ನಿಂಗ್ಸ್‌ಗಳನ್ನು ಎದುರಿಸಿದರೂ 184.86 ಸ್ಟ್ರೈಕ್‌ರೇಟ್‌ನಲ್ಲಿ 469 ಎಸೆತಗಳಲ್ಲೇ 867 ರನ್ ಬಾರಿಸಿ ರಿಜ್ವಾನ್ ಅವರನ್ನು ಹಿಂದಿಕ್ಕಿದ್ದರು. ಇದನ್ನೂ ಓದಿ: ಪಾಕ್‍ಗೆ ಮರ್ಮಾಘಾತ – 1 ರನ್‍ಗಳ ರೋಚಕ ಜಯ ಸಾಧಿಸಿದ ಜಿಂಬಾಬ್ವೆ

    ಸೂರ್ಯನ ಈ ದಾಖಲೆಯಲ್ಲಿ 1 ಶತಕ, 7 ಅರ್ಧಶತಕ, 77 ಬೌಂಡರಿ ಹಾಗೂ 52 ಸಿಕ್ಸರ್‌ಗಳು ಸೇರಿವೆ. ಇದರಿಂದಾಗಿ 4ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿಸುವ ಸೂರ್ಯ ಓಪನರ್ ರಿಜ್ವಾನ್‌ಗಿಂತಲೂ ಉತ್ತಮವಾಗಿ ಆಡಿದ್ದಾರೆ ಎಂಬುದನ್ನು ತೋರಿಸಿದೆ.

    ಗುರುವಾರ ನೆದರ್‌ಲ್ಯಾಂಡ್ (Netherland) ವಿರುದ್ಧ ಸಿಡ್ನಿಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು. 180 ರನ್‌ಗಳ ಗುರಿ ಬೆನ್ನತ್ತಿದ್ದ ನೆದರ್‌ಲ್ಯಾಂಡ್ ಟೀಂ ಇಂಡಿಯಾದ ಸಂಘಟಿತ ಬೌಲಿಂಗ್ ದಾಳಿಗೆ ತತ್ತರಿಸಿ ನಿಗದಿತ ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 123 ರನ್‌ಗಳಿಸಿ ಸೋಲನ್ನು ಒಪ್ಪಿಕೊಂಡಿತು.

    Live Tv
    [brid partner=56869869 player=32851 video=960834 autoplay=true]

  • ವಿಶ್ವಕಪ್‌ನಲ್ಲಿರೋ ಆಟಗಾರರಿಗೆ ಸರಿಯಾಗಿ ಊಟ ಸಿಗ್ತಿಲ್ಲ- ಟೀಂ ಇಂಡಿಯಾ ಬೇಸರ

    ವಿಶ್ವಕಪ್‌ನಲ್ಲಿರೋ ಆಟಗಾರರಿಗೆ ಸರಿಯಾಗಿ ಊಟ ಸಿಗ್ತಿಲ್ಲ- ಟೀಂ ಇಂಡಿಯಾ ಬೇಸರ

    ಮೆಲ್ಬರ್ನ್: ವಿಶ್ವಕಪ್ (T20 WorldCup) ಆರಂಭಗೊಂಡಿದ್ದು, ಮೊದಲ ಪಂದ್ಯದಲ್ಲೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ (Pakistan) ಹುಟ್ಟಡಗಿಸಿರುವ ಟೀಂ ಇಂಡಿಯಾ (Team India) ಗೆಲುವಿನ ನಗೆ ಬೀರಿದೆ.

    ಅಲ್ಲದೇ ಇಂದು ನೆದರ್‌ಲೆಂಡ್‌ನೊಂದಿಗೆ (Netherlands) ಕಣಕ್ಕಿಳಿಯಲಿದೆ. ಆದರೆ ವಿಶ್ವಕಪ್‌ನಲ್ಲಿರುವ ಆಟಗಾರರಿಗೆ ಸರಿಯಾದ ಊಟ ಸಿಗುತ್ತಿಲ್ಲ ಎಂದು ಟೀಂ ಇಂಡಿಯಾ ಬೇಸರ ವ್ಯಕ್ತಪಡಿಸಿದೆ. ಅತೀ ತಣ್ಣಗಿನ ಹಾಗೂ ಗ್ರಿಲ್ ಮಾಡದ ಸ್ಯಾಂಡ್‌ವಿಚ್ ಹಾಗೂ ಬಟರ್‌ಫ್ರೂಟ್ ಅನ್ನೇ ನೀಡುತ್ತಿದ್ದಾರೆ. ಅದನ್ನು ಹೇಗೆ ತಿನ್ನುವುದು ಎಂದು ಬೇಸರ ಹೊರಹಾಕಿದೆ. ಇದನ್ನೂ ಓದಿ: ಭಾರತ-ಪಾಕ್ ಪಂದ್ಯದಲ್ಲಿ ಕಾಂಟ್ರವರ್ಸಿ – ಗೆಲುವಿನ ಬಳಿಕ ಅಗ್ರೇಸ್ಸಿವ್ ಮೂಡ್‍ನಲ್ಲಿ ದ್ರಾವಿಡ್

    ಇದಕ್ಕೆ ಪ್ರತಿಕ್ರಿಯಿಸಿರುವ ಟೀಂ ಇಂಡಿಯಾ (Team India) ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ (Virender Sehwag), ಸಿಡ್ನಿಯಲ್ಲಿ ನಡೆದ ತರಬೇತಿಯ ಅವಧಿಯ ನಂತರ ಟೀಂ ಇಂಡಿಯಾಕ್ಕೆ ತಣ್ಣಗಿನ ಆಹಾರ ಮತ್ತು ಸ್ಯಾಂಡ್‌ವಿಚ್‌ಗಳನ್ನ, ಫಲಾಫೆಲ್ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನು ನನ್ನ ತಂದೆ ಬಗ್ಗೆ ಮಾತ್ರ ಯೋಚಿಸುತ್ತೇನೆ – ಗ್ರೌಂಡ್‌ನಲ್ಲೇ ಕಣ್ಣೀರಿಟ್ಟ ಪಾಂಡ್ಯ

    ಪಾಶ್ಚಿಮಾತ್ಯ ದೇಶಗಳು ಎಷ್ಟು ಒಳ್ಳೆಯ ಆತಿಥ್ಯ ನೀಡುತ್ತವೆ ಎಂದು ಭಾವಿಸುವ ದಿನಗಳು ಈಗ ಹೊರಟುಹೋಗಿವೆ. ಅತ್ಯುನ್ನತ ಗುಣಮಟ್ಟದ ಆತಿಥ್ಯ ನೀಡುವ ವಿಷಯದಲ್ಲಿ ಭಾರತ ಮಾತ್ರ ಪಾಶ್ಚಿಮಾತ್ಯ ದೇಶಗಳಿಗಿಂತ ಮುಂದಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

    ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ 4 ವಿಕೆಟ್‌ಗಳ ರೋಚಕ ಜಯ ಸಾಧಿಸಿದ ಟೀಂ ಇಂಡಿಯಾ ಇಂದು ನೆದರ್‌ಲೆಂಡ್‌ನೊಂದಿಗೆ ಕಣಕ್ಕಿಳಿಯಲಿದೆ. ಮಧ್ಯಾಹ್ನ 12.30ರ ವೇಳೆ ಆಸ್ಟ್ರೇಲಿಯಾದ ಎಸ್‌ಸಿಜೆ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ನಾನು ನನ್ನ ತಂದೆ ಬಗ್ಗೆ ಮಾತ್ರ ಯೋಚಿಸುತ್ತೇನೆ – ಗ್ರೌಂಡ್‌ನಲ್ಲೇ ಕಣ್ಣೀರಿಟ್ಟ ಪಾಂಡ್ಯ

    ನಾನು ನನ್ನ ತಂದೆ ಬಗ್ಗೆ ಮಾತ್ರ ಯೋಚಿಸುತ್ತೇನೆ – ಗ್ರೌಂಡ್‌ನಲ್ಲೇ ಕಣ್ಣೀರಿಟ್ಟ ಪಾಂಡ್ಯ

    ಮೆಲ್ಬರ್ನ್: ಟಿ20 ವಿಶ್ವಕಪ್ (T20 WorldCup) ಆರಂಭಿಕ ಪಂದ್ಯದಲ್ಲೇ ಬದ್ಧವೈರಿಗಳ ಹುಟ್ಟಡಗಿಸಿದ ಟೀಂ ಇಂಡಿಯಾ (Team India) ಭಾರತೀಯರಿಗೆ ದೀಪಾವಳಿ (Diwali) ಉಡುಗೊರೆ ನೀಡಿದೆ.

    ಸಾಂಪ್ರದಾಯಿಕ ಎದುರಾಳಿಯೊಂದಿಗಿನ ಕಾಳಗದಲ್ಲಿ ವಿರಾಟ್ ಕೊಹ್ಲಿ (Virat Kohli) ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದರು. ಅವರಿಗೆ ಸಾಥ್ ನೀಡಿದ ಪಾಂಡ್ಯ (Hardik Pandya) 37 ಎಸೆತಗಳಲ್ಲಿ 2 ಸಿಕ್ಸರ್, 1 ಬೌಂಡರಿಯೊಂದಿಗೆ 108.10 ಸ್ಟ್ರೈಕ್‌ರೇಟ್‌ನಲ್ಲಿ 40 ರನ್ ಸಿಡಿಸಿದರು. ಅಲ್ಲದೇ ಬೌಲಿಂಗ್‌ನಲ್ಲೂ ಪರಾಕ್ರಮ ತೋರಿದ ಪಾಂಡ್ಯ 4 ಓವರ್‌ಗಳಲ್ಲಿ 30 ರನ್ ನೀಡಿ 3 ವಿಕೆಟ್ ಕಬಳಿಸಿದರು. ಪಾಂಡ್ಯ ಆಲ್‌ರೌಂಡರ್ ಆಟಕ್ಕೆ ನಾಯಕ ರೋಹಿತ್ ಶರ್ಮಾ (RohitSharma) ಕೂಡ ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಾಕ್ ವಿರುದ್ಧ ರೋಚಕ ಜಯ – ಇದು ಕೊಹ್ಲಿ ಕೆರಿಯರ್‌ನ ಬೆಸ್ಟ್ ಇನ್ನಿಂಗ್ಸ್

    ಬಳಿಕ ಮಾತನಾಡಿದ ಪಾಂಡ್ಯ, ತನ್ನ ತಂದೆಯನ್ನು ನೆನೆದು ಕಣ್ಣೀರಿಟ್ಟರು. ನಾನು ನನ್ನ ತಂದೆಯ ಬಗ್ಗೆ ಮಾತ್ರ ಯೋಚಿಸುತ್ತಿದ್ದೇನೆ. ನಾನು ಅಳುತ್ತಿರುವುದು ತಂದೆ ಇಲ್ಲ ಎಂಬ ಕಾರಣಕ್ಕೆ ಅಲ್ಲ. ನಾನು ನನ್ನ ಮಗನನ್ನು ತುಂಬಾ ಪ್ರೀತಿಸುತ್ತೇನೆ. ಆದರೆ ನನಗೆ ನನ್ನ ತಂದೆ ಏನೆಲ್ಲ ಮಾಡಿದ್ರೋ ಅದನ್ನು ನಾನು ನನ್ನ ಮಗನಿಗೆ ಮಾಡುತ್ತೇನೋ ಇಲ್ಲವೋ ಎಂದು ಗೊತ್ತಿಲ್ಲ. ಆರೂವರೆ ವರ್ಷದ ಹುಡುಗನ ಕನಸಿಗೋಸ್ಕರ ನನ್ನ ತಂದೆ ಅಂದು ನಗರವನ್ನೇ ಬಿಟ್ಟುಹೋದರು. ಆದರೆ ನಾನು ಇಂದು ಏನು ಮಾಡುತ್ತಿದ್ದೇನೆ ಎಂಬುದೂ ಅವರಿಗೆ ತಿಳಿದಿಲ್ಲ. ಇಂದಿನ ಈ ಆಟ, ಗೆಲುವು ನನ್ನ ತಂದೆಗೆ ಅರ್ಪಿಸುತ್ತೇನೆ ಎಂದು ಭಾವುಕರಾದರು. ಇದನ್ನೂ ಓದಿ: Love You SO Much – ಪಾಕ್ ವಿರುದ್ಧ ಗೆಲುವಿನ ಬಳಿಕ ಅನುಷ್ಕಾಗೆ ಕೃತಜ್ಞತೆ ಸಲ್ಲಿಸಿದ ಕೊಹ್ಲಿ

    ಹಾರ್ದಿಕ್ ಪಾಂಡ್ಯ ದಾಖಲೆ:
    ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ವಿಶೇಷ ದಾಖಲೆ ಕೂಡ ಮಾಡಿದ್ದಾರೆ. ಅತ್ಯುತ್ತಮ ಆಲ್‌ರೌಂಡರ್ ಪ್ರದರ್ಶನ ನೀಡಿದ ಹಾರ್ದಿಕ್ ಇದೀಗ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ (International Cricket) ಭಾರತ ಪರ 1,000 ರನ್ ಗಳಿಸಿದ ಹಾಗೂ 50 ವಿಕೆಟ್‌ಗಳನ್ನು ಪಡೆದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಈ ಸಾಧನೆ ಮಾಡಿದ 7ನೇ ಆಟಗಾರನಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]