Tag: teaser

  • ಕುತೂಹಲ ಕೆರಳಿಸುವ ಪೀಟರ್ ಸಿನಿಮಾ : ರಾಜೇಶ್ ಧ್ರುವ ಹೀರೋ

    ಕುತೂಹಲ ಕೆರಳಿಸುವ ಪೀಟರ್ ಸಿನಿಮಾ : ರಾಜೇಶ್ ಧ್ರುವ ಹೀರೋ

    ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಛಾಪು ಮೂಡಿಸಿರುವ ನಟ ರಾಜೇಶ್ ಧ್ರುವ (Rajesh Dhruva) ಹೀರೋ ಆಗಿರುವ ಅಭಿನಯಿಸಿರುವ ಹೊಸ ಸಿನಿಮಾ ಪೀಟರ್. ಈಗಾಗಲೇ ಪೋಸ್ಟರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಕುತೂಹಲಕಾರಿ ಟೀಸರ್ ಬಿಡುಗಡೆಯಾಗಿದೆ.

    ಥಿಂಕ್ ಮ್ಯೂಸಿಕ್ ಕನ್ನಡ ಯೂಟ್ಯೂಬ್‌ನಲ್ಲಿ ಪೀಟರ್ ಸಿನಿಮಾದ ಆಕರ್ಷಕ ಟೀಸರ್ ಅನಾವರಣ ಮಾಡಲಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಡ್ರಾಮಾ ಹಾಗೂ ಪ್ರೀತಿ-ಫ್ಯಾಮಿಲಿ ಕಂಟೆಂಟ್ ಜೊತೆಗೆ ಚೆಂಡೆ ಮೇಳವನ್ನು ಇಟ್ಕೊಂಡು ಟೀಸರ್ ಕಟ್ ಮಾಡಿದ್ದಾರೆ. ರಾಜೇಶ್ ಧ್ರುವ, ಪ್ರತಿಮಾ ನಾಯಕ್, ಜಾನ್ವಿ ರಾಯಲ, ರಘು ಪಾಂಡೇಶ್ವರ ಇಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.ಇದನ್ನೂ ಓದಿ: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ದೂರು

    ‘ದೂರದರ್ಶನ’ ಚಿತ್ರ ಖ್ಯಾತಿಯ ನಿರ್ದೇಶಕ ಸುಕೇಶ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಬಾರಿ ಸುಕೇಶ್ ಸೆನ್ಸಿಟಿವ್ ಸಸ್ಪೆನ್ಸ್ ಡ್ರಾಮಾ ಕಥಾಹಂದವರನ್ನು ಪ್ರೇಕ್ಷಕರಿಗೆ ಉಣ ಬಡಿಸಲಿದ್ದಾರೆ. ಟೀಸರ್ ಮೂಲಕ ಮತ್ತಷ್ಟು ಚಿತ್ರದ ಮೇಲೆ ಭರವಸೆ ಹೆಚ್ಚಾಗಿದೆ. ಸಿನಿಮಾದಲ್ಲಿ ಜಾನ್ವಿ ರಾಯಲ, ರವೀಕ್ಷಾ ಶೆಟ್ಟಿ, ಪ್ರತಿಮಾ ನಾಯಕ್, ರಘು ಪಾಂಡೇಶ್ವರ್, ರಾಮ ನಾಡಗೌಡ, ವರುಣ್ ಪಟೇಲ್ ತಾರಾಬಳಗದಲ್ಲಿದ್ದಾರೆ.

    ಕನ್ನಡ ಚಿತ್ರರಂಗದ ಖ್ಯಾತ ಸೌಂಡ್ ಇಂಜಿನಿಯರ್ ರವಿ ಹೀರೆಮಠ್ ಹಾಗೂ ರಾಕೇಶ್ ಹೆಗಡೆ ವೃದ್ಧಿ ಸ್ಟುಡಿಯೊಸ್ ಬ್ಯಾನರ್ ನಡಿ ಪೀಟರ್ ಸಿನಿಮಾ ನಿರ್ಮಿಸಿದ್ದಾರೆ. ಗುರುಪ್ರಸಾದ್ ನರ್ನಾಡ್ ಛಾಯಾಗ್ರಹಣ, ನವೀನ್ ಶೆಟ್ಟಿ ಸಂಕಲನ, ದೇವರಾಜ್ ಕಲಾ ನಿರ್ದೇಶನ ಚಿತ್ರಕ್ಕಿದೆ. ಬಹು ಭಾಷೆಯಲ್ಲಿ ಪೀಟರ್ ಸಿನಿಮಾ ತೆರೆಗೆ ಬರಲಿದೆ.ಇದನ್ನೂ ಓದಿ: ಬೆನ್ನು ನೋವಿದ್ರೂ ನನ್ನನ್ನ ಎತ್ತಿಕೊಳ್ಳುವ ದೃಶ್ಯ ಮಾಡಲು ಒಪ್ಪಿಕೊಂಡಿದ್ರು – ರಚನಾ ರೈ

  • ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ದೈಜಿ ಟೀಸರ್

    ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ದೈಜಿ ಟೀಸರ್

    ಮ್ಮ ಅಮೋಘ ಅಭಿನಯದಿಂದ ಜನಮನಗೆದ್ದಿರುವ ನಟ ರಮೇಶ್ ಅರವಿಂದ್ (Ramesh Aravind) ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ರಮೇಶ್ ಅರವಿಂದ್ ಅವರು ಪ್ರಮುಖಪಾತ್ರದಲ್ಲಿ ನಟಿಸಿರುವ ದೈಜಿ (Daiji) ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ತಮ್ಮ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಟೀಸರ್ (Teaser) ಬಿಡುಗಡೆ ನಂತರ ದೈಜಿ ಚಿತ್ರತಂಡದವರು ಮಾಧ್ಯಮದವರ ಜೊತೆಗೆ ಮಾತನಾಡಿದರು.

    ರಮೇಶ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ ಮಾತನಾಡಿದ ನಿರ್ಮಾಪಕ ರವಿ ಕಶ್ಯಪ್, ಹತ್ತು ವರ್ಷಗಳ ಹಿಂದೆ ನಾನು, ನಿರ್ದೇಶಕ ಆಕಾಶ್ ಶ್ರೀವತ್ಸ ಅವರಿಗೆ ಈ ಚಿತ್ರದ ಬಗ್ಗೆ ಹೇಳಿದ್ದೆ. ಈಗ ಕಾಲ ಕೂಡಿ ಬಂದಿದೆ. ಇದು ವಿದೇಶದಲ್ಲಿ ನಾನು ಕಂಡಿರುವ ನೈಜ ಘಟನೆ ಆಧರಿತ ಚಿತ್ರ. ಇದನ್ನು ನಾನು ಅಂದುಕೊಂಡಂತೆ ತೆರೆಗೆ ತಂದಿರುವ ತಂತ್ರಜ್ಞರಿಗೆ ಹಾಗೂ ಕಲಾವಿದರಿಗೆ ಧನ್ಯವಾದ. ಇನ್ನೂ ಯಾವುದೇ ಹಾಲಿವುಡ್ ಚಿತ್ರಕ್ಕೂ ಕಡಿಮೆ ಇಲ್ಲದಂತೆ ಮೂಡಿಬಂದಿರುವ ನಮ್ಮ ದೈಜಿ ಚಿತ್ರವನ್ನು ಕೆಲವೇ ದಿನಗಳಲ್ಲಿ ನಿಮ್ಮ ಮುಂದೆ ತರುತ್ತೇವೆ ಎಂದರು.

    ಸಂಖ್ಯಾಶಾಸ್ತ್ರದ ಪ್ರಕಾರ ಮೂರು ಅಂಕಿಗೂ, ನನಗೂ ಹಾಗೂ ಈ ಚಿತ್ರಕ್ಕೂ ನಂಟಿದೆ. ಹೇಗೆಂದರೆ, ಇದು ನನ್ನ ನಿರ್ದೇಶನದಲ್ಲಿ ರಮೇಶ್ ಅರವಿಂದ್ ಅವರು ನಾಯಕರಾಗಿ ನಟಿಸಿರುವ ಮೂರನೇ ಸಿನಿಮಾ. ನಟಿ ರಾಧಿಕಾ ನಾರಾಯಣ್ ಅವರ ಜೊತೆಗೂ ಮೂರನೇ ಸಿನಿಮಾ. ನನ್ನ ಹಾಗೂ ನಿರ್ಮಾಪಕರ ಮೂರನೇ ಕಾಂಬಿನೇಶನ್ ನ ಚಿತ್ರವೂ ಹೌದು.(ಒಂದು ಕಿರುಚಿತ್ರ). ಹೇಗೆ ಮೂರರ ನಂಟನ್ನು ಸಾಕಷ್ಟು ಉದಾಹರಿಸಬಲ್ಲೆ. ನಿರ್ಮಾಪಕರು ವಿದೇಶದಲ್ಲಿ ತಾವು ಕಂಡ ನೈಜ ಘಟನೆಯನ್ನು ನನಗೆ ಹೇಳಿದರು. ಅವರು ಹೇಳಿದ ಈ ಕಥೆಯೇ ಈ ಚಿತ್ರಕ್ಕೆ ಸ್ಪೂರ್ತಿ. ನಂತರ ಈ ಕಥೆಗೆ ರಮೇಶ್ ಅರವಿಂದ್ ಅವರೆ ಸೂಕ್ತ ಎನಿಸಿ, ಅವರಿಗೆ ಕಥೆ ಹೇಳಿದಾಗ, ಅವರು ನಟಿಸಲು ಒಪ್ಪಿಕೊಂಡಿದ್ದು ಬಹಳ ಖುಷಿಯಾಯಿತು. ಸೂರ್ಯ ಎಂಬ ಪಾತ್ರದಲ್ಲಿ ರಮೇಶ್ ಅವರು ಕಾಣಿಸಿಕೊಂಡಿದ್ದಾರೆ. ರಾಧಿಕಾ ನಾರಾಯಣ್ ಅವರು ಭೂಮಿ ಪಾತ್ರದಲ್ಲಿ ಹಾಗೂ ರಮೇಶ್ ಅವರ ತಮ್ಮನಾಗಿ ನಟ ದಿಗಂತ್ ಗಗನ್ ಎನ್ನುವ ಪಾತ್ರದಲ್ಲಿ ನಟಿಸಿದ್ದಾರೆ. ದೈಜಿ ಎಂದರೆ ಪ್ರೇತಾತ್ಮಗಳ ದೈವ ಎಂದರ್ಥ. ಇಂದು ಟೀಸರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಟ್ರೇಲರ್ ಸಹ ಬರಲಿದ್ದು, ವರ್ಷದ ಕೊನೆ ಅಥವಾ ನೂತನ ವರ್ಷದ ಆರಂಭಕ್ಕೆ ದೈಜಿ ನಿಮ್ಮ ಮುಂದೆ ಬರಲಿದೆ ಎಂದು ನಿರ್ದೇಶಕ ಆಕಾಶ್ ಶ್ರೀವತ್ಸ ತಿಳಿಸಿದರು. ಇದನ್ನೂ ಓದಿ:  ಅಮೆರಿಕದಲ್ಲಿ ವಿನಯ್ & ವಂದಿತಾ ಜೊತೆ ರಮ್ಯಾ ಸುತ್ತಾಟ

     

    ಹುಟ್ಟು – ಸಾವು ಬಾಳಿನಲ್ಲಿ ಎರಡು ಕೊನೆಗಳು ಎಂಬ ಸಾಲಿದೆ. ಆದರೆ ಇವೆರಡರ ಮಧ್ಯೆ ಏನಿದೆ? ಇವೆರಡರ ಮಧ್ಯೆ ಪ್ರೀತಿ ಇದೆ. ಒಂದು ವೇಳೆ ಸಾವೇ ಕೊನೆಯಾಗದಿದ್ದರೆ ಏನಿರುತ್ತದೆ? ಅದರ ಆಚೆಗೆ ಒಂದು ದುಷ್ಟ ಶಕ್ತಿ ಇರುತ್ತದೆ. ಆ ಶಕ್ತಿ ಈ ಪ್ರೀತಿಯನ್ನು ಹೊತ್ತುಕೊಂಡು ಹೊಗುತ್ತದೆ. ಇದೇ ನಾವು ಸಾಮಾನ್ಯ ಹಾರರ್ ಚಿತ್ರಗಳಲ್ಲಿ ಕಾಣುವುದು. ಆದರೆ ನಿರ್ದೇಶಕ ಆಕಾಶ್ ಶ್ರೀವತ್ಸ ಈ ರೀತಿಯ ಹಾರಾರ್ ಸಿನಿಮಾ ಮಾಡಿಲ್ಲ. ಈವರೆಗೂ ನಾನು ಸಾಕಷ್ಟು ಹಾರರ್ ಸಿನಿಮಾ ನೋಡಿದ್ದೇನೆ. ಆದರೆ ಈ ರೀತಿ ಕಥೆ ನಾನು ನೋಡಿಲ್ಲ. ಅಂತಹ ಚಿತ್ರ ಮಾಡಿದ್ದಾರೆ ನಿರ್ದೇಶಕ ವತ್ಸ ಅವರು. ನಾನು ಬಾಲಚಂದರ್ ಅವರಂತಹ ಹೆಸರಾಂತ ನಿರ್ದೇಶಕರ ಜೊತೆಗೆ ಹತ್ತು ಸಿನಿಮಾ ಮಾಡಿದ್ದೇನೆ. ಮುಂದೆ ವತ್ಸ ಅವರ ಜೊತೆಗೂ ಇದೇ ರೀತಿ ಮಾಡುತ್ತೇನೆ. ಇನ್ನೂ, ನಿರ್ಮಾಪಕ ರವಿ ಕಶ್ಯಪ್ ಅವರ ಸಿನಿಮಾ ಪ್ರೀತಿ ಬಗ್ಗೆ ಎಷ್ಟು ಹೇಳಿದರು ಕಡಿಮೆ. ರಾಧಿಕಾ ನಾರಾಯಣ್ ಅವರಂತೂ ಮಹಾನಟಿ. ದಿಗಂತ್ ಅವರ ಲವಲವಿಕೆ ನನಗೆ ಬಹಳ ಇಷ್ಟ. ಈ ಚಿತ್ರದಲ್ಲಿ ವಿದೇಶದ ಪ್ರಸಿದ್ದ ಕಲಾವಿದರೊಂದಿಗೂ ನಟಿಸಿದ್ದೇನೆ. ಆದಷ್ಟು ಬೇಗ ದೈಜಿ ಚಿತ್ರವನ್ನು ತೆರೆಯ ಮೇಲೆ ನೋಡಲು ಕಾತುರನಾಗಿದ್ದೇನೆ ಎಂದು ರಮೇಶ್ ಅರವಿಂದ್ ಹೇಳಿದರು.

    ಭೂಮಿ ಪಾತ್ರದಲ್ಲಿ ನಟಿಸಿರುವುದಾಗಿ ನಟಿ ರಾಧಿಕಾ ನಾರಾಯಣ್ ಹಾಗೂ ಗಗನ್ ಪಾತ್ರದಲ್ಲಿ ಅಭಿನಯಿಸಿರುವಿದಾಗಿ ದಿಗಂತ್ ತಿಳಿಸಿದರು. ಚಿತ್ರದಲ್ಲಿ ನಟಿಸಿರುವ ಬಿ.ಎಂ.ಗಿರಿರಾಜ್, ಬರಹಗಾರ ಅಭಿಜಿತ್ ಹಾಗೂ ಕಾಸ್ಟಿಂಗ್ ಡೈರೆಕ್ಟರ್ ಸುನಯನ ಸುರೇಶ್ ಮುಂತಾದರ ದೈಜಿ ಬಗ್ಗೆ ಮಾತನಾಡಿದರು. ಶ್ರೀಶ ಕುದುವಳ್ಳಿ ಛಾಯಾಗ್ರಹಣ, ಜ್ಯೂಡಾ ಸ್ಯಾಂಡಿ ಸಂಕಲನವಿರುವ ಈ ಚಿತ್ರಕ್ಕೆ ಆಕಾಶ್ ಶ್ರೀವತ್ಸ ಅವರೆ ಸಂಕಲನ ಕಾರ್ಯ ಮಾಡಿದ್ದಾರೆ.

  • ನ್ಯಾಚುರಲ್ ನಾನಿಯ ಮಾಸ್ ಟೀಸರ್ ಹಿಟ್ 3

    ನ್ಯಾಚುರಲ್ ನಾನಿಯ ಮಾಸ್ ಟೀಸರ್ ಹಿಟ್ 3

    ತೆಲುಗಿನಲ್ಲಿ ರೊಮ್ಯಾಂಟಿಕ್‌ ಸಿನಿಮಾಗಳ ಜೊತೆಗೆ ಮಾಸ್‌ ಅವತಾರಕ್ಕೂ ಸೈ ಎನಿಸಿಕೊಳ್ಳುವಂಥ ನ್ಯಾಚುರಲ್ ಸ್ಟಾರ್ ನಾನಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ನಾನಿ ಹುಟ್ಟುಹಬ್ಬದ ವಿಶೇಷವಾಗಿ ಹಿಟ್-3  (Hit 3) ಸಿನಿಮಾದ ಟೀಸರ್ (Teaser) ಬಿಡುಗಡೆ ಮಾಡಲಾಗಿದೆ. ಒಂದು ಸೀರಿಯಲ್ ಕಿಲ್ಲರ್‌ನ ಹಿಡಿಯೋದಕ್ಕೆ ನಡೆಯುವ ಇನ್ವೆಸ್ಟಿಗೇಶನ್ ಈ ಸಿನಿಮಾದ ಕಥೆ. ಅರ್ಜುನ್ ಸರ್ಕಾರ್ ಆಗಿ ಮಾಸ್ ಅವತಾರದಲ್ಲಿ ನಾನಿ (Nani) ಅಬ್ಬರಿಸಿದ್ದಾರೆ.

    ‘ಹಿಟ್ 3`.. ಇದು ಹಿಟ್ ಫ್ರಾಂಚೈಸಿ ಇಂದ ಬರುತ್ತಿರುವ  ಸಿನಿಮಾ. ಈ ಚಿತ್ರಕ್ಕೆ ಶೈಲೇಶ್ ಕೊಲನು ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಹಿಟ್ ಮೊದಲನೇ ಸಿನಿಮಾದಲ್ಲಿ ವಿಶ್ವಕ್ ಸೇನ್ ಹೀರೋ ಆಗಿ ನಟಿಸಿದ್ದಾರೆ. ಹಿಟ್ 2 ರಲ್ಲಿ ಅಡವಿಶೇಷು ನಟಿಸಿದ್ದಾರೆ.  ಮೂರನೇ ಫ್ರಾಂಚೈಸಿಯಲ್ಲಿ ನಾನಿ ಸಖತ್ ರಡಗ್ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

     

    ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ತಮಿಳು ಭಾಷೆಯಲ್ಲಿ ಟೀಸರ್ ರಿಲೀಸ್ ಮಾಡಲಾಗಿದೆ. ನಾನಿಗೆ ಜೋಡಿಯಾಗಿ ಶ್ರೀನಿಧಿ ಶೆಟ್ಟಿ ನಟಿಸಿದ್ದಾರೆ. ಪ್ರಶಾಂತಿ ತಿಪಿರ್ನೇನಿ ನಿರ್ಮಾಣದಲ್ಲಿ ಚಿತ್ರ‌ ಮೂಡಿ ಬಂದಿದ್ದು, ಮಿಕ್ಕಿ ಜೆ ಮೇಯರ್ ಸಂಗೀತ, ಸಾನು ಜಾನ್ ವರ್ಗೀಸ್ ಛಾಯಾಗ್ರಹಣ ಹಾಗೂ ಕಾರ್ತಿಕ್ ಶ್ರೀನಿವಾಸ್ ಸಂಕಲನ ಹಿಟ್-3 ಚಿತ್ರಕ್ಕಿದೆ. ಟೀಸರ್ ಮೈ ಜುಮ್ ಅನ್ನೋ ಹಾಗೆ ಇದೆ. ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದ್ದು, ಮೇ 1ರಂದು ಚಿತ್ರ ಬಿಡುಗಡೆಯಾಗಲಿದೆ.

  • ‘ಮಿಸ್ಟರ್ ರಾಣಿ’ ಟೀಸರ್:  ವಿಭಿನ್ನತೆಯ ಕಚಗುಳಿ

    ‘ಮಿಸ್ಟರ್ ರಾಣಿ’ ಟೀಸರ್: ವಿಭಿನ್ನತೆಯ ಕಚಗುಳಿ

    ಮಿಸ್ಟರ್ ರಾಣಿ  (Mister Rani) ಸಿನಿಮಾದ ಪೋಸ್ಟರ್ ಕ್ರಿಯೆಟಿವಿಯಿಂದಾಗಿ  ಸಖತ್ ವೈರೆಲ್ ಆಗಿತ್ತು. ಪೋಸ್ಟರ್ ನಲ್ಲೇ ಒಂದು ರೀತಿ ಟ್ರೆಂಡ್ ಸೆಟ್ ಮಾಡಿತ್ತು.ಈಗ ಸಿನಿಮಾದ ಟೀಸರ್ ರೀಲಿಸ್ ಮಾಡಿದ್ದಾರೆ. ಸದ್ಯದ ಕ್ರೈಮ್, ಥ್ರಿಲರ್, ಹಾರರ್, ಲವ್ ಸ್ಟೋರಿ ಎಲ್ಲವನ್ನು ಬದಿಗಿಟ್ಟು ವಿನೂತನ ಶೈಲಿಯ  ಕಾಮಿಡಿ ಎಂಟರ್ ಟೈನರ್ ಚಿತ್ರವನ್ನು ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ಖ್ಯಾತಿಯ ನಿರ್ದೇಶಕ ಮಧುಚಂದ್ರ (Madhuchandra) ಮಾಡಿದ್ದಾರೆ. “ಹೀರೋ ಆಗ್ಬೇಕು ಅಂತ ಸಿನಿಮಾ ರಂಗಕ್ಕೆ ಬಂದ ಹುಡುಗ ಆಕಸ್ಮಿಕವಾಗಿ ಹೀರೋಯಿನ್ ಆಗಿಬಿಡ್ತಾನೆ ಅನ್ನೋದೆ ಟೀಸರ್ ನಲ್ಲಿ ಹೇಳಿರೋ ಕಥೆ”.ಒನ್ ಲೈನ್ ಸ್ಟೋರಿಯಲ್ಲೇ ಸಿನಿಮಾ ಎಷ್ಟು ಡಿಫರೆಂಟಾಗಿದೆ ಮತ್ತು ಮಜಾವಾಗಿದೆ ಅನ್ನೋದು ಗೊತ್ತಾಗುತ್ತೆ.

    ಲಕ್ಷ್ಮಿ ನಿಮಾಸ ಸೀರಿಯಲ್ ನಲ್ಲಿ ಜಯಂತ್ ಪ್ರಾತಮಾಡಿ ಸಿಕ್ಕಾಪಟ್ಟೆ ಫೇಮಸ್ ಆಗಿರೋ ದೀಪಕ್ ಸುಬ್ರಹ್ಮಣ್ಯ ಈ ಚಿತ್ರದ ಹೀರೋ(ಯಿನ್!?) ರಾಣಿ ರೋಲ್ ಮಾಡಿರೋದು ದೀಪಕ್ ಸುಬ್ರಹ್ಮಣ್ಯ ಅಂತ ಗೊತ್ತಾದಾಗ ತುಂಬಾ ಜನ ಶಾಕ್ ಆಗಿದ್ದಾರೆ. ಒಬ್ಬ ಹೊಸ ಹುಡುಗ ಈ ಲೆವೆಲ್ ನಲ್ಲಿ ಹುಡುಗಿ ಥರ ಚೇಂಜ್ ಓವರ್ ಮಾಡೋಕೆ ಸಾಧ್ಯಾನಾ ಅಂತ ಎಲ್ಲಾರೂ ಅಚ್ಚರಿ ಪಟ್ಟಿದ್ದಾರೆ. ರಾಣಿ ಪೋಸ್ಟರ್ ನೋಡಿ ನಮಗೆ ಇನ್ನೊಬ್ಬಳು ಹೀರೋಯಿನ್ ಕಾಂಪಿಟೇಷನ್ ಮಾಡೋಕೆ ಬಂದಳಲ್ಲ ಅಂತ ತುಂಬಾ ಜನ ಹೀರೋಯಿನ್ ಕೂಡ ಹೊಟ್ಟೆ ಉರಿ ಪಟ್ಟುಕೊಂಡಿದ್ದರಂತೆ. ಆದ್ರೆ ಟೀಸರ್ ನೋಡಿ ಅಯ್ಯೋ ರಾಣಿ ಹುಡುಗಿ ಅಲ್ಲ. ಹುಡುಗ ಅಂತ ಗೊತ್ತಾಗಿ ಬೆಸ್ತು ಬಿದ್ದಿದ್ದಾರೆ.

     

    ಇನ್ನು ಟೀಸರ್ ನೋಡಿದರೆ ಚಿತ್ರ ಟೆಕ್ನಿಕಲ್ ಆಗಿ ತುಂಬಾ ಬೇರೆ ಲೆವೆಲ್ ಗೆ ಮೂಡಿಬಂದಿರೋದು ಎದ್ದು ಕಾಣುತ್ತಿದೆ. ಟೀಸರ್ ಒಪನಿಂಗ್ ನಲ್ಲಿ ಬರುವ ಅನಿಮೇಷನ್‌ ನೋಡಿದಾಗ ಇದು ಯಾವುದೋ  ಹಾಲಿವುಡ್ ಚಿತ್ರವಿರಬೇಕೆಂದು ಅನ್ನಿಸುವುದರಲ್ಲಿ ಸಂಶಯವಿಲ್ಲ. ಇದೊಂದು ವಿಭಿನ್ನ ರೀತಿಯ ಥಿಯೇಟರ್ ಎಕ್ಸ್ ಪೀರಿಯೆನ್ಸ್ ಕೊಡುವಂತ ಚಿತ್ರ ಎನಿಸುತ್ತಿದೆ.

  • ‘ಆಪರೇಷನ್ ಡಿ’ ಚಿತ್ರದ ಟೀಸರ್ ರಿಲೀಸ್ : ಧ್ರುವ ಸರ್ಜಾ ಸಾಥ್

    ‘ಆಪರೇಷನ್ ಡಿ’ ಚಿತ್ರದ ಟೀಸರ್ ರಿಲೀಸ್ : ಧ್ರುವ ಸರ್ಜಾ ಸಾಥ್

    ಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅದ್ವಿತ ಫಿಲಂ ಫ್ಯಾಕ್ಟರಿ  ಹಾಗೂ ಮಸ್ಕ್ಯುಲರ್ ಗ್ರೂಪ್ ಲಾಂಛನದಲ್ಲಿ ಭಾರ್ಗವಿ ಮುರಳಿ ಹಾಗೂ ರಂಗನಾಥ್ ಬಿ ನಿರ್ಮಿಸಿರುವ ಹಾಗೂ ತಿರುಮಲೇಶ್ ವಿ ನಿರ್ದೇಶನದ “ಆಪರೇಶನ್ ಡಿ” ಚಿತ್ರದ ಟೀಸರ್ ಅನ್ನು ಬಿಡುಗಡೆ ಶುಭ ಹಾರೈಸಿದ್ದಾರೆ. ಇತ್ತೀಚೆಗೆ ನಡೆದ ಈ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ ತಿಳಿಸಿ, “ಆಪರೇಷನ್ ಡಿ” (Operation D) ಕುರಿತು ಮಾತನಾಡಿದರು.

    ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ ಎಂದು ಮಾತು ಆರಂಭಿಸಿದ ನಿರ್ದೇಶಕ ತಿರುಮಲೇಶ್ ವಿ, “ಆಪರೇಷನ್ ಡಿ” ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಮರ್ಡರ್ ಮಿಸ್ಟರಿ ಕಥೆ ಆಧರಿಸಿದ ಚಿತ್ರ. ಮರ್ಡರ್ ಮಿಸ್ಟರಿ ಆದರೂ, ಒಂದು ಕಡೆ ರಕ್ತ ಕಾಣುವುದಿಲ್ಲ ಹಾಗೂ ಆಕ್ಷನ್ ಸನ್ನಿವೇಶಗಳಿಲ್ಲ. 2018 – 19 ರಲ್ಲಿ ಹುಟ್ಟಿದ ಈ ಕಾಲ್ಪನಿಕ ಕಥೆ, 2022 ರಲ್ಲಿ ಸಿನಿಮಾ ರೂಪ ಪಡೆದುಕೊಂಡಿತ್ತು. ನನ್ನ ಕಥೆಯನ್ನು ಸಿನಿಮಾವಾಗಿಸಲು ಕುಟುಂಬದವರು ಹಾಗೂ ಮಿತ್ರರು ಸಹಕಾರಿಯಾದರು.

    ಸದ್ಯದಲ್ಲೇ ಸೆನ್ಸಾರ್ ಮುಂದೆ ಬರಲಿರುವ ಈ ಚಿತ್ರ ವರ್ಷದ ಕೊನೆಗೆ ತೆರೆಗೆ ಬರಲಿದೆ. ಇಂದು ಟೀಸರ್ ಬಿಡುಗಡೆಯಾಗಿದೆ. ಟೀಸರ್ ನಲ್ಲಿ ಬರುವ ನಾರಾಯಣ, ಲಕ್ಷ್ಮೀ ಹಾಗೂ ನಾರದ ಪಾತ್ರಗಳಿಗೆ  ನಿರ್ದೇಶಕ – ನಟ ಶ್ರೀನಿ, ನಟಿ ಸಂಗೀತಾ ಭಟ್ ಹಾಗೂ ಸುದರ್ಶನ್ ರಂಗಪ್ರಸಾದ್  ಧ್ವನಿ ನೀಡಿದ್ದಾರೆ. ಸಿರಿ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿರುವ ಟೀಸರ್ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಚಿತ್ರ ಚೆನ್ನಾಗಿ ಮೂಡಿಬರಲು ಚಿತ್ರತಂಡದವರ ಪಾಲು ಹೆಚ್ಚಿದೆ ಎಂದರು.‌

    ಚಿತ್ರದಲ್ಲಿ ನಾಲ್ಕು ಹಾಡುಗಳಿದೆ ಎಂದು ಸಂಗೀತ ನಿರ್ದೇಶಕಿ ವೇದಿಕ ತಿಳಿಸಿದರು. ಕೆಂಪಗಿರಿ ಹಾಗೂ ತಿರುಮಲೇಶ್ ತಲಾ ಒಂದು ಹಾಡು ಬರೆದಿದ್ದಾರೆ ಹಾಗೂ ಎರಡು ಹಾಡನ್ನು ವೇದಿಕ ಅವರೆ ಬರೆದಿದ್ದಾರೆ, ಭಾರ್ಗವಿ ಮುರಳಿ,  ರಂಗನಾಥ್  ಹಾಗೂ ಸುರೇಶ ಅವರು ನಿರ್ಮಾಣದ ಬಗ್ಗೆ ಮಾಹಿತಿ ನೀಡಿದರು. ಚಿತ್ರದಲ್ಲಿ ನಟಿಸಿರುವ ರುದ್ರೇಶ್ ಬೂದನೂರು, ಸುಹಾಸ್ ಆತ್ರೇಯ, ವಿನೋದ್ ದೇವ್, ಸ್ನೇಹ ಭಟ್, ಇಂಚರ ಭರತ್ ರಾಜ್, ಮಹೇಶ್ ಎಸ್ ಕಲಿ, ಶ್ರೀಧರ್, ಪೃಥ್ವಿ ಬನವಾಸಿ, ಶಿವಾನಂದ್,  ಸಂಚಯ ನಾಗರಾಜ್, ವೆಂಕಟಾಚಲ,  ಶಿವಮಂಜು,  ಕ್ರೇಜಿ ನಾಗರಾಜ್,  ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಸಂಕಲನಕಾರ ವಿಕ್ರಮ್ ಶ್ರೀಧರ್, ಛಾಯಾಗ್ರಾಹಕ ಕಾರ್ತಿಕ್ ಪ್ರಸಾದ್, ನೃತ್ಯನಿರ್ದೇಶಕ  ಜೈಹರಿಪ್ರಸಾದ್,  BGM ನೀಡಿರುವ ರಾಹುಲ್ ಅರ್ಜ ಕಲಾ ಸೇರಿದಂತೆ ಅನೇಕ ತಂತ್ರಜ್ಞರು ಪತ್ರಿಕಾಗೋಷ್ಠಿಯಲ್ಲಿದ್ದರು.

  • ‘ವೃತ್ತ’ ಸಿನಿಮಾಗೆ ಪ್ರಸೆಂಟ್ ಮಾಡಲು ಬಂದ ನೀನಾಸಂ ಸತೀಶ್

    ‘ವೃತ್ತ’ ಸಿನಿಮಾಗೆ ಪ್ರಸೆಂಟ್ ಮಾಡಲು ಬಂದ ನೀನಾಸಂ ಸತೀಶ್

    ಪ್ರತಿ ದಿನ ಹೊಸ ಸಿನಿಮಾ ಸೆಟ್ಟೇರೋದು ಟ್ರೇಲರ್‌ ಟೀಸರ್‌ ಬಿಡುಗಡೆ ಆಗೋದು ಹೊಸತೇನಲ್ಲ. ಆದರೆ ಬಿಡುಗಡೆ ಆದ ಕೆಲವೇ ಕೆಲವು ಸಿನಿಮಾ ಟೀಸರ್‌  ಪ್ರೇಕ್ಷಕರ ಗಮನ ಸೆಳೆಯುತ್ತವೆ. ಸದ್ಯ ಈಗ ಸಿನಿ ಪ್ರೇಮಿಗಳ ಗಮನ ಸೆಳೆದಿರುವ ಟೀಸರ್‌ ವೃತ್ತ. ವೃತ್ತ (Virtta) ಅಂದ ತಕ್ಷಣ ಒಂದು ಸರ್ಕಲ್‌ ನಲ್ಲಿ ನಡೆಯೋ ಸ್ಟೋರಿ ಇರಬೇಕು ಅನ್ನೋದು ಮೊದಲಿಗೆ ಅನ್ನಿಸುತ್ತೆ ಆದ್ರೆ ಈ ವೃತ್ತ ಸಿನಿಮಾದ ಕಾನ್ಸೆಪ್ಟ್‌ ಬೇರೆ. ಸಿನಿಮಾ ಕಂಪ್ಲೀಟ್‌ ಮಾಡಿ ಟೀಸರ್‌ ಬಿಡುಗಡೆ ಮಾಡಿರೋ ವೃತ್ತ ತಂಡಕ್ಕೆ ನಟ ನೀನಾಸಂ ಸತೀಶ್‌ ಸಾಥ್‌ ಸಿಕ್ಕಿದೆ. ಸಿನಿಮಾ ಟೀಸರ್‌, ಟ್ರೇಲರ್‌ ನೋಡಿ ಚಿತ್ರವನ್ನ ತಮ್ಮದೇ ಬ್ಯಾನರ್‌ ಅಡಿಯಲ್ಲಿ ಪ್ರಸೆಂಟ್‌ ಮಾಡೋದಕ್ಕೆ ಸತೀಶ್‌ ನಿರ್ಧಾರ ಮಾಡಿದ್ದಾರೆ ಟೀಸರ್‌ ಲಾಂಚ್‌ ಗೆ ಬಂದು ಹೊಸಬರ ಪ್ರಯತ್ನಕ್ಕೆ ಸಾಥ್‌ ಕೊಟ್ರು. ಹೊಸ ತಂಡವಾದ್ರು ಎಲ್ಲಾ ರೀತಿಯಲ್ಲೂ ತಯಾರಿ ಮಾಡಿಕೊಂಡೆ ಬಂದಿದ್ದಾರೆ ಅನ್ನೋದು ಟೀಸರ್‌ ನೋಡಿದ್ರೆ ತಿಳಿಯುತ್ತೆ.

    ವೃತ್ತ ಸಿನಿಮಾವನ್ನ ನಿರ್ದೇಶನ ಮಾಡುವುದರ ಜೊತೆಗೆ ಲಿಖಿಕ್‌ ಕುಮಾರ್‌ ಎಸ್ ಕನ್ನಡ ಸಿನಿಮಾರಂಗಕ್ಕೆ ನಿರ್ದೇಶಕನಾಗಿ ಕಾಲಿಡುತ್ತಿದ್ದಾರೆ…ಇನ್ನು ಚಿತ್ರವನ್ನ ಲಕ್ಷ್ಯ ಆರ್ಟ್ಸ್‌ ಬ್ಯಾನರ್‌ ಅಡಿಯಲ್ಲಿ ಟಿ ಶಿವಕುಮಾರ್‌ ನಿರ್ಮಾಣ ಮಾಡಿದ್ದಾರೆ..ಚಿತ್ರದ ವಿಶೇಷ ಅಂದ್ರೆ ನಾಯಕ ಒಬ್ಬನ ಸುತ್ತಲೇ ಕಥೆ ಕೇಂದ್ರೀಕೃತವಾಗಿರುತ್ತಂತೆ. ಚಿತ್ರಕ್ಕೆ ಸಿಂಕ್ರೋನೈಸ್‌ ಮಾಡಿದ ಧ್ವನಿಯನ್ನ ಬಳಸಲಾಗಿದೆ… ಸಿನಿಮಾಗೆ ಯೋಗೀಶ್‌ ಗೌಡ ಚಿತ್ರಕಥೆ ಬರೆದಿದ್ದಾರೆ ಸುರೇಶ್‌ ಆರ್ಮುಗಂ ಸಂಕಲನ, ಶಂಕರ್‌ ರಾಮನ್‌ ಅವರ ಸಂಭಾಷಣೆ, ಗೌತಮ್‌ ಕೃಷ್ಣ ಅವರ ಛಾಯಾಗ್ರಹಣ ಮತ್ತು ಆಂಟನಿ ಹಾಗೂ ಹರಿ ಕ್ರಿಶಾಂತ್‌ ಎಸ್‌ ಅವರ ಸಂಗೀತ ಚಿತ್ರಕ್ಕಿದೆ..ಬಹುತೇಕ ಹೊಸಬರೇ ಕೂಡಿ ಮಾಡಿರೋ ಚಿತ್ರ ಇದಾಗಿದ್ದು, ಟೆಕ್ನಿಕಲಿ ಸ್ಟ್ರಾಂಗ್‌ ಆಗಿ ಇದ್ದರೆ ಸಿನಿಮಾ ಕೂಡ ಚೆನ್ನಾಗಿ ಇರುತ್ತೆ ಅನ್ನೋದು ಸಿನಿಮಾತಂಡದ ಮಾತು…

    ಚಿತ್ರದ ತಾರಾಗಣದಲ್ಲಿ ನಾಯಕನಾಗಿ ಮಾಹಿರ್‌ ಮೊಹಿದ್ದೀನ್‌ , ಚೈತ್ರಾ ಜೆ ಆಚಾರ್‌ , ಹತಿಣಿ ಸುಂದರ ರಾಜನ್‌ ಅಭಿನಯ ಮಾಡಿದ್ದಾರೆ ..ನಾಯಕನಾಗಿ ಕಾಣಿಸಿಕೊಳ್ತಿರೋ ಮಾಹಿರ್‌ ಸಾಕಷ್ಟು ವರ್ಷಗಳಿಂದ ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದಾರೆ…ಟೀಸರ್‌ ನಲ್ಲಿ ಮಾಹಿರ್‌ ಅಭಿನಯ ಗಮನ ಸೆಳೆದಿದ್ದು ಮುಂದಿನ ದಿನಗಳಲ್ಲಿ ಮಾಹಿರ್‌ ಅದ್ಬುತ ಕಲಾವಿದನಾಗಿ ಚಿತ್ರರಂಗದಲ್ಲಿ ಉಳಿದುಕೊಳ್ಳುವ ಎಲ್ಲಾ ಭರವಸೆಗಳು ಕಾಣ್ತಿದೆ…

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಯಕ ಮಾಹೀರ್‌ ನಟನೆ ನನ್ನ ಬಹು ದಿನದ ಕನಸು ಅದನ್ನ ನಾಟಕಗಳ ಮೂಲಕ ನನಸು ಮಾಡಿಕೊಳ್ಳುತ್ತಿದ್ದೆ ಈಗ ವೃತ್ತ ಸಿನಿಮಾ ಮೂಲಕ ದೊಡ್ಡ ಪರದೆಗೆ ಬರುತ್ತಿರೋದು ಮತ್ತಷ್ಟು ಖುಷಿಕೊಟ್ಟಿದೆ ಎಂದರು..ನಿರ್ದೇಶಕ ಲಿಖಿತ್‌ ಮಾತನಾಡಿ ಹೊಸ ಸಿನಿಮಾಗೆ ಸತೀಶ್‌ ಅವರ ಸಪೋರ್ಟ್‌ ಸಿಕ್ಕಿರೋದು ಖುಷಿ ತಂದಿದೆ.. ಕಿರು ಚಿತ್ರಗಳನ್ನ ಮಾಡುತ್ತಾ ಇದ್ದ ತಂಡ ಇವತ್ತು ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಿದ್ದರಾಗಿಗಿದ್ದೇವೆ ಎಂದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿನಿಮಾತಂಡ ನಿನಾಸಂ ಸತೀಶ್‌ ಅವರ ಸಹಾಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ರು…. ಸಿನಿಮಾ ನೋಡಿ ಖುಷಿಯಾಗಿರೋ ಸತೀಶ್‌ ಹೊಸಬರ ಸಿನಿಮಾ ಅನ್ನೋ ಕಾರಣಕ್ಕೆ ಬಂದಿಲ್ಲ ಸಿನಿಮಾ ಚೆನ್ನಾಗಿದೆ ಅನ್ನೋ ಕಾರಣಕ್ಕೆ ಸಪೋರ್ಟ್‌ ಮಾಡುತ್ತಿದ್ದೇನೆ ಅಂದ್ರು…. ಸದ್ಯ ಟೀಸರ್‌ ಬಿಡುಗಡೆ ಮಾಡಿರುವ ತಂಡ ಆದಷ್ಟು ಬೇಗ ಟ್ರೇಲರ್‌ ಲಾಂಚ್‌ ಮಾಡಿ ಇದೇ ವರ್ಷಾಂತ್ಯದಲ್ಲಿ ತೆರೆಗೆ ಬರೋ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

  • ‘ಮಾಂತ್ರಿಕ’ನ ಸಸ್ಪೆನ್ಸ್ ಜರ್ನಿ:  ಆತ್ಮಗಳ ಬೆನ್ನತ್ತಿದ ಟೀಮ್

    ‘ಮಾಂತ್ರಿಕ’ನ ಸಸ್ಪೆನ್ಸ್ ಜರ್ನಿ: ಆತ್ಮಗಳ ಬೆನ್ನತ್ತಿದ ಟೀಮ್

    ಗತ್ತಿನಲ್ಲಿ ದೆವ್ವ, ಭೂತಗಳು ಇದೆಯೋ ಇಲ್ಲವೊ ಗೊತ್ತಿಲ್ಲ. ಆದರೆ ಅವುಗಳ ಸತ್ಯಾಸತ್ಯತೆಯ ಹುಡುಕಾಟ ಮಾತ್ರ ನಡೆದೇ ಇದೆ. ಅಂಥದೇ ಒಂದು ಹುಡುಕಾಟದ ಪ್ರಯತ್ನದಲ್ಲಿ ಹೊರಬಂದ ಚಿತ್ರವೇ ಮಾಂತ್ರಿಕ (Maantrika) . ಐಟಿ ಹಿನ್ನೆಲೆಯಿಂದ ಬಂದ ವ್ಯಾನವರ್ಣ ಜಮ್ಮುಲ (Vanavarna)ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಜೊತೆಗೆ ಪ್ರಮುಖ ಪಾತ್ರದಲ್ಲೂ ಸಹ ಕಾಣಿಸಿಕೊಂಡಿದ್ದಾರೆ, ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.   ಘೋಸ್ಟ್ ಹಂಟರ್(ಆತ್ಮಗಳನ್ನು ಪತ್ತೆಹಚ್ಚುವವ) ಸುತ್ತ ನಡೆಯುವ ಇಂಟಲೆಕ್ಚುಯಲ್, ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಈ ಚಿತ್ರದಲ್ಲಿದೆ, ದೆವ್ವ ಅನ್ನೋದು ಇದೆಯೋ ಇಲ್ಲವೋ ಅಥವಾ ಅದೆಲ್ಲಾ ನಮ್ಮ ಭ್ರಮೆಯೋ ಎನ್ನುವುದರ ಸುತ್ತ ಸಾಗುವ ಕಥೆ  ಈ ಚಿತ್ರದಲ್ಲಿದ್ದು, ರಾಧಿಕಾ ಮಾಲಿ ಪಾಟೀಲ ಹಾಗೂ ಮೈಥಿಲಿ ನಾಯಕ್  ನಾಯಕಿಯರಾಗಿ ನಟಿಸಿದ್ದಾರೆ.

    ಈ ಸಂದರ್ಭದಲ್ಲಿ ನಿರ್ಮಾಪಕಿ, ನಿರ್ದೇಶನದಲ್ಲೂ ಸಾಥ್  ನೀಡಿದ ವ್ಯಾನವರ್ಣ ಅವರ ಪತ್ನಿ ಆಯನ  ಮಾತನಾಡಿ ನಾನು ಎಂಎನ್ ಸಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು. ಈಗಾಗಲೇ ಸಿನಿಮಾ ನೋಡಿದ್ದೇನೆ.  ಜಗತ್ತಿನಲ್ಲಿ ಮಾಟ, ಮಂತ್ರ ಅನ್ನೋದು ಇದೆಯಾ ಎಂಬುದರ ರಿಯಾಲಿಟಿ ಬಗ್ಗೆ ಹೇಳುವ ಚಿತ್ರವಿದು. ಅದೇ ಕಾರಣಕ್ಕೆ ಈ ಸಿನಿಮಾ ನಿರ್ಮಾಣದಲ್ಲಿ ನಾನೂ ಜೊತೆಯಾದೆ. ದಸರಾ ವೇಳೆಗೆ ರಿಲೀಸ್ ಮಾಡುವ ಪ್ಲಾನ್ ಇದೆ ಎಂದರು.  ನಂತರ ಮಾತನಾಡಿದ  ವ್ಯಾನವರ್ಣ ಜಮ್ಮುಲ,  ಮಾನವ ದಿನದ 24 ಘಂಟೆಯೂ ಮಾನವ ಭಯದಲ್ಲೇ ಬದುಕುತ್ತಿದ್ದಾನೆ. ಮೊದಲು ಅ ಭಯವನ್ನು ನಮ್ಮ‌ ಮನಸಿನಿಂದ ತೆಗೆದುಹಾಕಿ, ಕಮ್ ಟು ರಿಯಾಲಿಟಿ ಎಂದು ಈ  ಚಿತ್ರದಲ್ಲಿ ಹೇಳಿದ್ದೇವೆ. ದೆವ್ವ ಇದೆಯೋ, ಇಲ್ವೋ, ಇದ್ರೆ ಅದು ಹೇಗಿರುತ್ತೆ, ಅಥವಾ ಇದು ಸೈಕಲಾಜಿಕಲ್ ಫೀಲಿಂಗೋ ? ಎಂಬುದನ್ನೂ ಸಹ ಚಿತ್ರದಲ್ಲಿ  ತೋರಿಸಿದ್ದೇವೆ.

    ಟಿಆರ್(ಕಮ್ ಟು ರಿಯಾಲಿಟಿ) ಅರ್ಗನೈಜೇಶನ್ ನಡೆಸೋ ದೆವ್ವಗಳನ್ನು ಹಂಟರ್ ಕೃಷ್ಣನ ಪಾತ್ರದಲ್ಲಿ ನಾನು ಕಾಣಿಸಿಕೊಂಡಿದ್ದೇನೆ. ದೆವ್ವಗಳ ಬಗ್ಗೆ ಕೇಳಿ ಬಂದವರಿಗೆ ಸಲಹೆ  ನೀಡುವುದು ಆತನ ಕೆಲಸ. ಭಯ ಅನ್ನೋದು ಎಲ್ಲರಿಗೂ  ಕನೆಕ್ಟ್ ಆಗುತ್ತೆ. ಜನರಿಗೆ ಆ ಬಗ್ಗೆ ಎಜುಕೇಟ್ ಮಾಡಬೇಕು, ಜೊತೆಗೆ ಎಂಟರ್ ಟೈನ್ ಮೆಂಟ್ ಕೊಡಬೇಕೆಂದು ಮಾಡಿದ ಚಿತ್ರವಿದು. ಮೂಢನಂಬಿಕೆಗಳಿಂದ ಮೂಢರಾಗಬೇಡಿ, ಅದರ ಹಿಂದಿನ ಸತ್ಯಾಂಶ ಬೇರೇನೇ ಇರುತ್ತೆ, ಅದನ್ನು ನೋಡಿದ ಮೇಲೆ ನಿರ್ಧರಿಸಿ ಅಂತ ಇದರಲ್ಲಿ  ಹೇಳಿದ್ದೇವೆ. ಬೆಂಗಳೂರು, ಮಂಗಳೂರು ಅಲ್ಲದೆ ಬೆಂಗಳೂರಿನಲ್ಲಿ ಖಾಲಿ ಇದ್ದ  ಮಾಲ್‌ವೊಂದರಲ್ಲಿ ಪ್ರಮುಖ ಭಾಗದ  ಚಿತ್ರೀಕರಣ ಮಾಡಿದ್ದೇವೆ. ಮಾಲ್‌ನಲ್ಲಿ ಶೂಟ್ ಮಾಡುವಾಗ ಚಿತ್ರತಂಡಕ್ಕೆ ಸಾಕಷ್ಟು ವಿಚಿತ್ರ ಅನುಭವಗಳಾಗಿವೆ ಎಂದು ಹೇಳಿದರು.

     

    ನಿರ್ಮಾಣದಲ್ಲಿ ಕೈ ಜೋಡಿಸಿದ ದುಶ್ಯಂತ್ ಗೋಲ್ಡ್, ಅಲ್ಲದೆ ಬೆಳ್ಳಿದೀಪ ಗೋವಿಂದ್, ದೇವೇಂದ್ರ, ಮುಂಜಾನೆ ಮಂಜು, ಜಗದೀಶ್ ಎಲ್ಲರೂ ಚಿತ್ರದ ಬಗ್ಗೆ ಮಾತನಾಡಿದರು. ಇನ್ನು ಈ ಚಿತ್ರಕ್ಕೆ ನಿರ್ದೇಶಕರೇ ಸಂಕಲನ ಮಾಡಿದ್ದು, ಸ್ಟಾಲಿನ್ ಅವರ ಸಂಗೀತ ಸಂಯೋಜನೆ, ಅನಿಲ್ ಆಂಟೋನಿ ಹಾಗೂ ರಮೇಶ್ ಮರ‍್ರಿಪಲ್ಲಿ ಅವರ ಛಾಯಾಗ್ರಹಣ, ಲಯನ್ ಜಿ.ಗಂಗರಾಜು ಅವರ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ

  • ‘ಯಲಾಕುನ್ನಿ’ ಟೀಸರ್ ರಿಲೀಸ್: ಕೋಮಲ್ ಗೆಟಪ್ ವೈರಲ್

    ‘ಯಲಾಕುನ್ನಿ’ ಟೀಸರ್ ರಿಲೀಸ್: ಕೋಮಲ್ ಗೆಟಪ್ ವೈರಲ್

    ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ, ಹೊಸ ಪ್ರತಿಭೆ N R ಪ್ರದೀಪ್ ಕಥೆ, ಚಿತ್ರಕಥೆ, ಸಾಹಿತ್ಯ,ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕೋಮಲ್ ಕುಮಾರ್ (Komal Kumar) ನಾಯಕರಾಗಿ ನಟಿಸಿರುವ “ಯಲಾಕುನ್ನಿ” (Yelakunni) ಚಿತ್ರದ ಟೀಸರ್ ಬಿಡುಡಗೆ ಆಗಿದೆ.

    ಗಿಚ್ಚಿ ಗಿಲಿಗಿಲಿ ಫೈನಲ್ ಕಾರ್ಯಕ್ರಮದಲ್ಲಿ ಚಿತ್ರತಂಡ ಟೀಸರ್ ರಿಲೀಸ್ ಮಾಡಿದೆ. ಕೋಮಲ್ ಕುಮಾರ್ ಸ್ಟುಡಿಯೋಸ್ ಯೂಟ್ಯೂಬ್ ಚಾನಲ್ ನಲ್ಲಿ ಈ ಚಿತ್ರದ ಟೀಸರ್ ಲಭ್ಯವಿದೆ. ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಕೋಮಲ್ ಕುಮಾರ್ ಅವರ ವಜ್ರಮುನಿ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

     

    ಚಿತ್ರ ತೆರೆಗೆ ತರೋಕೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಈ ಸಿನಿಮಾದ ಮತ್ತೊಂದು ವಿಶೇಷ ಅಂದರೆ  ಯಲಾಕುನ್ನಿ ಚಿತ್ರಕ್ಕೆ ‘ಮೇರಾ ನಾಮ್ ವಜ್ರಮುನಿ’ ಎಂಬ ಅಡಿಬರಹವಿದೆ.

  • ಕಾಶಿನಾಥ್ ಪುತ್ರನ ಸಿನಿಮಾದ ಟೀಸರ್ ರಿಲೀಸ್: ಕುತೂಹಲ ಮೂಡಿಸಿದ ಸ್ಟೋರಿ

    ಕಾಶಿನಾಥ್ ಪುತ್ರನ ಸಿನಿಮಾದ ಟೀಸರ್ ರಿಲೀಸ್: ಕುತೂಹಲ ಮೂಡಿಸಿದ ಸ್ಟೋರಿ

    ಯುವ ಆವೇಗದ ತಂಡವೊಂದು ಅಖಾಡಕ್ಕಿಳಿಯಿತೆಂದರೆ, ಅಚ್ಚರಿದಾಯಕ ಕಂಟೆಂಟೊಂದು ರೂಪುಗೊಳ್ಳುತ್ತಿದೆ ಎಂದೇ ಅರ್ಥ. ಅದನ್ನು ಮತ್ತೆ ನಿಜವಾಗಿಸುವ ನಿಟ್ಟಿನಲ್ಲಿ `ಎಲ್ಲಿಗೆ ಪಯಣ ಯಾವುದೋ ದಾರಿ’ (Yellige Payana Yavudo Daari) ಚಿತ್ರದ ಮೂಲಕ ತಂಡವೊಂದು ಎಂಟ್ರಿ ಕೊಟ್ಟಿದೆ. ಈಗಾಗಲೇ ತಣ್ಣಗೆ ಚಿತ್ರೀಕರಣ ಮುಗಿಸಿಕೊಂಡಿರುವ ಈ ಚಿತ್ರದ ಟೀಸರ್ ಇದೀಗ ಬಿಡುಗಡೆಗೊಂಡಿದೆ. ಸೀಮಿತ ದೃಶ್ಯಗಳಲ್ಲಿಯೇ ಕುತೂಹಲದ ಕೆನೆಗಟ್ಟಿಕೊಂಡಿರುವಂತೆ ಭಾಸವಾಗುವ ಈ ಟೀಸರ್ ಪ್ರೇಕ್ಷಕರನ್ನು ಸಲೀಸಾಗಿ ತನ್ನತ್ತ ಸೆಳೆದುಕೊಳ್ಳುವಂತಿದೆ.

    ಇದು ಅಭಿಮನ್ಯು ಕಾಶಿನಾಥ್ ನಾಥ್ (Abhimanya Kashinath) ನಾಯಕನಾಗಿ ನಟಿಸಿರುವ ಚಿತ್ರ. ಬೇರೆಯದ್ದೇ ತೆರನಾದ ವಿಶಿಷ್ಟ ಪಾತ್ರದ ಮೂಲಕ ಅಭಿಮನ್ಯು ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ಸದರಿ ಟೀಸರ್‌ನಲ್ಲಿ ಅವರು ವಿಭಿನ್ನ ಗೆಟಪ್ಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಧಾನವಾಗಿ ಇದೊಂದು ಥ್ರಿಲ್ಲರ್ ಕಥನವನ್ನು ಒಳಗೊಂಡಿರುವ ಚಿತ್ರವೆಂಬ ಸಂದೇಶವೊಂದು, ಅತ್ಯಂತ ಪರಿಣಾಮಕಾರಿಯಾಗಿ ಪ್ರೇಕ್ಷಕರತ್ತ ದಾಟಿಕೊಂಡಿದೆ. ಈ ಟೀಸರ್ ಜೊತೆ ಜೊತೆಗೇ ಒಂದಷ್ಟು ಸೂಕ್ಷ್ಮ ಸಂಗತಿಗಳನ್ನು ಚಿತ್ರತಂಡ ಹಂಚಿಕೊಂಡಿದೆ.

    ಇದು ಕಿರಣ್ ಎಸ್ ಸೂರ್ಯ ನಿರ್ದೇಶನದ ಚೊಚ್ಚಲ ಚಿತ್ರ. ಈಗಾಗಲೇ ಹನ್ನೆರಡು ವರ್ಷಗಳ ಕಾಲ ಚಿತ್ರರಂಗದ ನಾನಾ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸಿರುವವರು ಕಿರಣ್. ಈ ಮೂಲಕ ಅವರು ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಇದೊಂದು ಲವ್ ಕಂ ಥ್ರಿಲ್ಲರ್ ಜಾನರಿನ ಚಿತ್ರ. ಹಾಗೆಂದ ಮಾತ್ರಕ್ಕೆ ಆ ಪರಿಧಿಗೆ ಸೀಮಿತವಾದ ಕಥೆ ಇಲ್ಲಿದೆ ಅಂದುಕೊಳ್ಳುವಂತಿಲ್ಲ. ಕೊಲೆಯೊಂದರ ಸುತ್ತ ಕಥೆ ಜರುಗುತ್ತದೆ ಅಂದುಕೊಳ್ಳಲೂ ಸಾಧ್ಯವಿಲ್ಲ. ಇದುವರೆಗೆ ನೋಡಿದ್ದು ನಿಜವೋ ಸುಳ್ಳೋ ಎಂಬಂತೆ ಬೆರಗಿಗೆ ದೂಡುವ ರೀತಿಯಲ್ಲಿ ಈ ಸಿನಿಮಾವನ್ನು ರೂಪಿಸಲಾಗಿದೆಯಂತೆ. ವಿಶೇಷವೆಂದರೆ, ಕಿಚ್ಚಾ ಸುದೀಪ್ ಈ ಚಿತ್ರದ ಹಾಡೊಂದನ್ನು ಹಾಡಿದ್ದಾರೆ. ವಾಸುಕಿ ವೈಭವ್ ಹಾಗೂ ಸಪ್ತಸಾಗರದಾಚೆ ಎಲ್ಲೋ ಖ್ಯಾತಿಯ ಶ್ರೀಲಕ್ಷ್ಮಿ ಒಂದೊಂದು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಎರಡು ಹಾಡುಗಳಿಗೆ ಖುದ್ದು ನಿರ್ದೇಶಕ ಕಿರಣ್ ಎಸ್ ಸೂರ್ಯ ಸಾಹಿತ್ಯ ಬರೆದಿದ್ದಾರೆ.

     

    ಸುದರ್ಶನ ಆರ್ಟ್ಸ್ ಬ್ಯಾನರಿನಡಿಯಲ್ಲಿ ಜತಿನ್ ಪಟೇಲ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯೊಂದಿಗೆ ಕಿರಣ್ ಎಸ್ ಸೂರ್ಯ ನಿರ್ದೇಶನ ಮಾಡಿದ್ದಾರೆ. ಅಭಿಮನ್ಯು ಕಾಶಿನಾಥ್ ಅವರಿಗೆ ಸ್ಫೂರ್ತಿ ಉಡಿಮನೆ ನಾಯಕಿಯಾಗಿ  ಸಾಥ್ ಕೊಟ್ಟಿದ್ದಾರೆ. ವಿಜಯಶ್ರೀ ಕಲಬುರ್ಗಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಬಲ ರಾಜವಾಡಿ, ಶೋಭನ್, ಅಯಾಂಕ್, ರಿನಿ ಬೋಪಣ್ಣ, ಪ್ರದೀಪ್, ರವಿತೇಜ, ಕಿಶೋರ್, ಅಶ್ವಿನಿ ರಾವ್, ಪ್ರಿಯಾ ಮುಂತಾದವರ ತಾರಾಗಣವಿದೆ. ಪ್ರಣವ್ ರಾವ್ ಸಂಗೀತ ನಿರ್ದೇಶನ, ಸತ್ಯ ರಾಮ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಮೋದ್ ಮರವಂತೆ ಸಾಹಿತ್ಯವಿದೆ. ಪೋಸ್ಟ್ ಪ್ರೊಡಕ್ಷನ್ ಹಂತ ದಾಟಿಕೊಂಡಿರುವ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ.

  • ನಾಲ್ಕು ಭಾಷೆಗಳಲ್ಲಿ ರಿಲೀಸ್ ಆಯಿತು `1990 s’ ಚಿತ್ರದ ಟೀಸರ್

    ನಾಲ್ಕು ಭಾಷೆಗಳಲ್ಲಿ ರಿಲೀಸ್ ಆಯಿತು `1990 s’ ಚಿತ್ರದ ಟೀಸರ್

    ನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ (Nandakumar C M)  ನಿರ್ದೇಶಿಸಿರುವ ಹಾಗೂ ಅರುಣ್ – ರಾಣಿ ವರದ್ ಅಭಿನಯದ “1990s” ಚಿತ್ರದ ಟೀಸರ್ (Teaser) ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಲಹರಿ ವೇಲು ಸೇರಿದಂತೆ ಅನೇಕ ಗಣ್ಯರು ನಾಲ್ಕು ಭಾಷೆಗಳ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ಹಿಂದಿ ಟೀಸರ್ ತಾಂತ್ರಿಕ ಕಾರಣದಿಂದ ಇಂದು ಬಿಡುಗಡೆಯಾಗಲಿಲ್ಲ. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

    ನಾನು ಇಪ್ಪತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ನಿರ್ದೇಶಕನಾಗಿ ಇದು ಚೊಚ್ಚಲ ಚಿತ್ರ. ಈ ಚಿತ್ರ ಆಗಲು ಪ್ರಮುಖ ಕಾರಣ ಚಿತ್ರದ ಛಾಯಾಗ್ರಹಕ ಹಾಲೇಶ್, ಸಂಗೀತ ನಿರ್ದೇಶಕ ಮಹಾರಾಜ, ಸಂಕಲನಕಾರ ಕೃಷ್ಣ ಹಾಗೂ ನೃತ್ಯ ನಿರ್ದೇಶಕ ಸಾದಿಕ್ ಸರ್ದಾರ್ ಹಾಗೂ ಚಿತ್ರದ ನಾಯಕ ಅರುಣ್. ಇವರೆಲ್ಲರು ನನ್ನ ಜೊತೆಗೆ ಕೈಜೋಡಿಸಿದ್ದು ನಾನು ಈ ಚಿತ್ರ ನಿರ್ದೇಶನ ಮಾಡಲು ಕಾರಣವಾಯಿತು. ಇವರೆಲ್ಲರಿಗೂ ಹಾಗೂ ನಿರ್ಮಾಣ ಸಂಸ್ಥೆ ಮನಸ್ಸು ಮಲ್ಲಿಗೆ ಕಂಬೈನ್ಸ್ ಗೆ ನಾನು ಆಬಾರಿ. ಇನ್ನು “1990s” ತೊಂಭತ್ತರ ದಶಕದಲ್ಲಿ ನಡೆಯುವ ಪ್ರೇಮಕಥೆ. ಅರುಣ್ ಹಾಗೂ ರಾಣಿ ವರದ್ ನಾಯಕ – ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಕಷ್ಟು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳು ಪೂರ್ಣವಾಗಿದ್ದು, ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದು ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ಪ್ಯಾನ್ ಇಂಡಿಯಾ ಚಿತ್ರವಾಗಿರುವುದರಿಂದ ಚಿತ್ರದ ಶೀರ್ಷಿಕೆಯನ್ನು “1990s” ಎಂದು ಇಡಲಾಗಿದೆ ಎಂದರು ನಿರ್ದೇಶಕ ನಂದಕುಮಾರ್.

    ರಂಗಭೂಮಿ ಕಲಾವಿದನಾಗಿ ಹತ್ತುವರ್ಷಗಳ ಅನುಭವವಿರುವ ನನಗೆ ಹಿರಿತೆರೆತಲ್ಲಿ ಇದು ಮೊದಲ ಚಿತ್ರ. ನಂದಕುಮಾರ್ ಅವರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಎಲ್ಲರಿಗೂ ಚಿತ್ರ ಹಿಡಿಸುವ ನಂಬಿಕೆ ಇದೆ‌. ಈ ಚಿತ್ರದಲ್ಲಿ ನನ್ನದು ಮುಗ್ದ ಪ್ರೇಮಿಯ ಪಾತ್ರ ಎಂದು ತಿಳಿಸಿದ ನಾಯಕ ಅರುಣ್,  ನಾನು ಹಿರಿಯ ಸಂಕಲನಕಾರ ಜನಾರ್ದನ್ ಅವರ ಪುತ್ರ ಎಂದರು.

    ಛಾಯಾಗ್ರಾಹಕ ಹಾಲೇಶ್, ಸಂಗೀತ ನಿರ್ದೇಶಕ ಮಹಾರಾಜ, ಸಂಕಲಕಾರ ಕೃಷ್ಣ, ನೃತ್ಯ ನಿರ್ದೇಶಕ ಸಾದಿಕ್ ಸರ್ದಾರ್ ಮುಂತಾದ ತಂತ್ರಜ್ಞರು ಹಾಗೂ ಕಲಾವಿದರು “1990s” ಕುರಿತು ಮಾತನಾಡಿದರು.