Tag: teaser

  • UI: ಯುಐ ಟೀಸರ್ ಔಟ್ – ಏನನ್ನೂ ತೋರಿಸದೇ ಪ್ರೇಕ್ಷಕರ ತಲೆಗೆ ಹುಳ ಬಿಟ್ಟ ರಿಯಲ್ ಸ್ಟಾರ್

    UI: ಯುಐ ಟೀಸರ್ ಔಟ್ – ಏನನ್ನೂ ತೋರಿಸದೇ ಪ್ರೇಕ್ಷಕರ ತಲೆಗೆ ಹುಳ ಬಿಟ್ಟ ರಿಯಲ್ ಸ್ಟಾರ್

    ರಿಯಲ್ ಸ್ಟಾರ್‌ ಉಪೇಂದ್ರ (Upendra) ಅವರ ಜನ್ಮದಿನದಂದು (ಸೆ.18) ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಯುಐ (UI) ಟೀಸರ್ (Teaser) ಊರ್ವಶಿ ಚಿತ್ರಮಂದಿರದಲ್ಲಿ (Urvashi Theatre) ಅಭಿಮಾನಿಗಳ ಮುಂದೆ ಅನಾವರಣವಾಗಿದೆ. ಈ ಸಂದರ್ಭದಲ್ಲಿ ಶಿವರಾಜ್ ಕುಮಾರ್ ದಂಪತಿ, ದುನಿಯಾ ವಿಜಯ್ ಕೂಡ ಸಾಕ್ಷಿಯಾಗಿದ್ದಾರೆ. ದೊಡ್ಡ ಪರದೆ ಮೇಲೆ ‘ಯುಐ’ ಟೀಸರ್​ ರಿಲೀಸ್ ಮಾಡಲಾಗಿದೆ. ಆದರೆ ಅದರಲ್ಲಿ ಏನೂ ಕಾಣಿಸಿಲ್ಲ. ಬರೀ ಶಬ್ದ ಕೇಳಿಸಿದೆ ಅಷ್ಟೇ.

    ಉಪೇಂದ್ರ ಏನೇ ಮಾಡಿದರೂ ಅದು ತುಂಬ ಡಿಫರೆಂಟ್​ ಆಗಿರುತ್ತದೆ. ‘ಯುಐ’ ಸಿನಿಮಾದ ಟೀಸರ್​ನಲ್ಲೂ ಅದು ಮತ್ತೆ ಸಾಬೀತಾಗಿದೆ. ಇಂದು ಚಿತ್ರತಂಡ ರಿಲೀಸ್​ ಮಾಡಿರುವ ಈ ಟೀಸರ್​ನಲ್ಲಿ ಯಾವುದೇ ದೃಶ್ಯಗಳು ಕಾಣಿಸಿಲ್ಲ. ಕೇವಲ ಒಂದಷ್ಟು ಡೈಲಾಗ್​ಗಳು ಮತ್ತು ಇತರೆ ಶಬ್ದ ಕೇಳಿಸಿದೆ. ಅದನ್ನು ಕೇಳಿಸಿಕೊಂಡು ಅಭಿಮಾನಿಗಳು ಕಥೆಯನ್ನು ಊಹಿಸಿಕೊಳ್ಳಬೇಕು. ಆ ಮೂಲಕ ಎಲ್ಲರ ತಲೆಗೂ ಉಪೇಂದ್ರ ಕೆಲಸ ಕೊಟ್ಟಿದ್ದಾರೆ. ಇದನ್ನೂ ಓದಿ: ಗಣೇಶ ಹಬ್ಬಕ್ಕೆ’ಕೆಂದಾವರೆ’ ಫಸ್ಟ್ ಲುಕ್ ರಿಲೀಸ್- ಹೊಸಬರ ತಂಡಕ್ಕೆ ಅಶ್ವಿನಿ ಪುನೀತ್ ಸಾಥ್

    ಈ ಟೀಸರ್​ ಕೇಳಿಸಿಕೊಂಡ ಪ್ರತಿಯೊಬ್ಬರ ತಲೆಯಲ್ಲೂ ಬೇರೆ ಬೇರೆ ಕಲ್ಪನೆ ಮೂಡುತ್ತಿದೆ. ಆ ರೀತಿ ಆಗಬೇಕು ಎಂಬುದೇ ಉಪೇಂದ್ರ ಅವರ ಆಶಯ. ಚಿತ್ರದ ಯಾವುದೇ ದೃಶ್ಯವನ್ನು ಯಾಕೆ ತೋರಿಸಿಲ್ಲ ಎಂಬುದನ್ನು ಉಪೇಂದ್ರ ವಿವರಿಸಿದ್ದಾರೆ. ‘ಇದೆಲ್ಲವೂ ಕಲ್ಪನೆಯಲ್ಲೇ ಇರಲಿ. ಅದರಲ್ಲೇ ಮಜಾ ಇದೆ. ಇದು ನಿಮ್ಮ ಕಲ್ಪನೆಯನ್ನು ಟೀಸ್​ ಮಾಡುವ ಟೀಸರ್​. ತಲೆ ಎತ್ತಿ ಕಲ್ಪನೆ ಮಾಡಿಕೊಳ್ಳಿ. ತಲೆ ತಗ್ಗಿಸಿ ಮೊಬೈಲ್​ ನೋಡೋದು ಬಿಡಿ. ಇದರಲ್ಲಿ ಸೌಂಡ್​ ಟ್ರಾವೆಲ್​ ಆಗುತ್ತದೆ. ಅದನ್ನು ಗಮನಿಸಿ. ಇದನ್ನು ಕೇಳಿಸಿಕೊಂಡರೆ ನೀವೆಲ್ಲ ಡೈರೆಕ್ಟರ್​ ಆಗುತ್ತೀರಿ’ ಎಂದು ಉಪೇಂದ್ರ ಹೇಳಿದ್ದಾರೆ. ಇದನ್ನೂ ಓದಿ: ಮೇಘನಾ ರಾಜ್ ಹೊಸ ಚಿತ್ರ ಅನೌನ್ಸ್- ಶ್ರೀನಗರ ಕಿಟ್ಟಿಗೆ ಜೊತೆಯಾದ ನಟಿ

    ‘ಇದು ಮಾಮೂಲಿ ಸಿನಿಮಾ ಅಲ್ಲ. ಸಿನಿಮಾ ನೋಡಿದ ಮೇಲೆ ತಲೆ ಎತ್ತಿಕೊಂಡು ಓಡಾಡುತ್ತೀರಿ. ಈ ಚಿತ್ರದಲ್ಲಿ 90ರಷ್ಟು ಗ್ರಾಫಿಕ್ಸ್​​ ಇದೆ. ಅದಕ್ಕಾಗಿ 4-5 ಕಡೆಗಳಲ್ಲಿ ಕೆಲಸ ನಡೆಯುತ್ತಿದೆ. ಆ ಕೆಲಸ ಪರ‍್ಣ ಆಗುವ ತನಕ ನಾನು ಏನನ್ನೂ ನಿಮಗೆ ತೋರಿಸಲ್ಲ ಎಂದು ಉಪೇಂದ್ರ ಹೇಳಿದ್ದಾರೆ. ಟೀಸರ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಏನನ್ನೂ ಟೀಸರ್ ನಲ್ಲಿ ತೋರಿಸದೇ ತಲೆಯಲ್ಲಿ ಹುಳ ಬಿಟ್ಟಿರೋ ಉಪೇಂದ್ರ ಯುಐ ಸಿನಿಮಾಗಾಗಿ ಫ್ಯಾನ್ಸ್ ಕಾಯ್ತಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳ ಜೊತೆ ಉಪ್ಪಿ ಬರ್ತ್‌ಡೇ ಸೆಲೆಬ್ರೇಶನ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಪೇಂದ್ರ ಮನೆಮುಂದೆ ಜಮಾಯಿಸಿದ ಅಭಿಮಾನಿಗಳು: ಉಪ್ಪಿ ಕೊಟ್ಟ ಭರವಸೆ ಏನು?

    ಉಪೇಂದ್ರ ಮನೆಮುಂದೆ ಜಮಾಯಿಸಿದ ಅಭಿಮಾನಿಗಳು: ಉಪ್ಪಿ ಕೊಟ್ಟ ಭರವಸೆ ಏನು?

    ರಿಯಲ್ ಸ್ಟಾರ್ ಉಪೇಂದ್ರ (Upendra) ಅವರ ಮನೆಮುಂದೆ ಅಭಿಮಾನಿಗಳು ಏಕಾಏಕಿ ಜಮಾಯಿಸಿದ್ದಾರೆ. ಅಭಿಮಾನಿಗಳ ಈ ಜಮಾವಣೆಗೆ ಸ್ವತಃ ಉಪ್ಪಿನೇ ಅಚ್ಚರಿ ವ್ಯಕ್ತ ಪಡಿಸಿದ್ದಾರೆ. ಅದಕ್ಕೆ ಕಾರಣವನ್ನೂ ಅವರು ಕೇಳಿದ್ದಾರೆ. ಅಭಿಮಾನಿಗಳ ಒತ್ತಾಯಕ್ಕೆ ಮಣಿದು, ಟೀಸರ್ ರಿಲೀಸ್ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

    ಹೌದು, ಯುಐ (UI) ಸಿನಿಮಾದ ಟೀಸರ್ (Teaser) ರಿಲೀಸ್ ಮಾಡುವುದಕ್ಕಾಗಿ ಚಿತ್ರತಂಡ ಪ್ರಮೋಷನಲ್ ವಿಡಿಯೋವೊಂದನ್ನು ಶೂಟ್ ಮಾಡಿದ್ದು, ಈ ವಿಡಿಯೋದಲ್ಲಿ ಅಭಿಮಾನಿಗಳು ಉಪೇಂದ್ರ ಅವರ ಮನೆ ಮುಂದೆ ಬರೋದು, ತಮಗೆ ಟೀಸರ್ ಬೇಕೇ ಬೇಕು ಎಂದು ಕೇಳುವುದು, ಅದಕ್ಕೆ ಉಪೇಂದ್ರ ಕೌಂಟರ್ ಕೊಡುವುದು, ದೂರದಿಂದಲೇ ಅದನ್ನು ನಿರ್ಮಾಪಕರು ನೋಡುವುದು ಹೀಗೆ ನಾನಾ ದೃಶ್ಯಗಳ ಮೂಲಕ ಟೀಸರ್ ರಿಲೀಸ್ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಇದನ್ನೂ ಓದಿ:Gadar 2 ಸಕ್ಸಸ್, ರಾಜಕೀಯಕ್ಕೆ ವಿದಾಯ ಹೇಳ್ತಾರಾ ಸನ್ನಿ ಡಿಯೋಲ್?

    ಹೌದು, ಸೆಪ್ಟೆಂಬರ್ 18ರಂದು ಉಪೇಂದ್ರ ಹುಟ್ಟು ಹಬ್ಬ (Birthday). ಅಂದೇ ಯುಐ ಟೀಸರ್ ರಿಲೀಸ್ ಮಾಡುವುದಾಗಿ ಉಪೇಂದ್ರ ಘೋಷಣೆ ಮಾಡಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಊರ್ವಶಿ ಚಿತ್ರಮಂದಿರದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಟೀಸರ್ ರಿಲೀಸ್ ಮಾಡುವುದಾಗಿ ಉಪೇಂದ್ರ ತಿಳಿಸಿದ್ದಾರೆ.

     

    ನಾನಾ ಕಾರಣಗಳಿಂದಾಗಿ ಉಪೇಂದ್ರ ನಿರ್ದೇಶನದ ಯುಐ ಸಿನಿಮಾ ಕುತೂಹಲ ಮೂಡಿಸಿದೆ. ಹಲವು ವರ್ಷಗಳ ನಂತರ ಉಪೇಂದ್ರ ಮತ್ತೆ ನಿರ್ದೇಶಕರ ಕ್ಯಾಪ್ ತೊಟ್ಟಿದ್ದಾರೆ. ಜೊತೆಗೆ ಹೊಸ ಬಗೆಯ ಕಥೆಯನ್ನು ಈ ಸಿನಿಮಾಗಾಗಿ ಹುಡುಕಿದ್ದಾರಂತೆ. ಹೀಗಾಗಿ ಯುಐ ಸಿನಿಮಾ ಸಾಕಷ್ಟು ನಿರೀಕ್ಷೆ ಹಾಗೂ ಕ್ಯೂರಿಯಾಸಿಟಿ ಮೂಡಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಸೂರ್ಯ’ನ ಹೋರಾಟಕ್ಕೆ ಬೆಂಬಲಿಸಿದ ಟೀಸರ್: ಇದು ಸಾಗರ್ ನಿರ್ದೇಶನದ ಸಿನಿಮಾ

    ‘ಸೂರ್ಯ’ನ ಹೋರಾಟಕ್ಕೆ ಬೆಂಬಲಿಸಿದ ಟೀಸರ್: ಇದು ಸಾಗರ್ ನಿರ್ದೇಶನದ ಸಿನಿಮಾ

    ಗಿನ ಕಾಲದ ಯುವಕ, ಯುವತಿಯರು ಪ್ರೀತಿಗಾಗಿ ಏನೆಲ್ಲ ಸಾಹಸಗಳನ್ನು ಮಾಡಬಹುದು ಎಂದು ಈಗಾಗಲೇ ಸಾಕಷ್ಟು ಚಲನಚಿತ್ರಗಳ ಮೂಲಕ ನಿರ್ದೇಶಕರು ಹೇಳಿದ್ದಾರೆ. ಅದೆಲ್ಲಕ್ಕಿಂತ ವಿಭಿನ್ನವಾದ, ಹೊಸ ತರಹದ ಕಥೆಯೊಂದನ್ನು ಯುವ ನಿರ್ದೇಶಕ ಸಾಗರ್ ಅವರು ಸೂರ್ಯ ಚಿತ್ರದ ಮೂಲಕ ಹೇಳುತಿದ್ದಾರೆ. ಖ್ಯಾತ ನಿರ್ದೇಶಕ ಬಿ.ಸುರೇಶ ಅವರ ಜೊತೆ ಸಹನಿರ್ದೇಶಕರಾಗಿ ಕೆಲಸ ಮಾಡಿದ್ದ ಸಾಗರ್, ಮಾಸ್ ಲವ್‌ಸ್ಟೋರಿ ಇಟ್ಟುಕೊಂಡು ಸೂರ್ಯ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಚಿತ್ರೀಕರಣದ ಕೊನೆಯಹಂತ ತಲುಪಿರುವ ಈ ಸಿನಿಮಾದಲ್ಲಿ ಯುವನಟ ಪ್ರಶಾಂತ್ ನಾಯಕನಾಗಿ ನಟಿಸಿದ್ದು, ಹರ್ಷಿತಾ ನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಂದಿ ಸಿನಿಮಾಸ್ ಮೂಲಕ ಬಸವರಾಜ್ ಬೆಣ್ಣೆ ಹಾಗೂ ರವಿ ಬೆಣ್ಣೆ ಸಹೋದರರು ಈ ಚಿತ್ರವನ್ನು  ನಿರ್ಮಾಣ  ಮಾಡುತ್ತಿದ್ದಾರೆ.

    ಸೂರ್ಯ ಚಿತ್ರದ ಟೀಸರ್ ಅನಾವರಣ ಸಮಾರಂಭ ಇತ್ತೀಚೆಗೆ ನೆರವೇರಿತು. ನಿರ್ದೇಶಕ ಬಹದ್ದೂರ್ ಚೇತನ್ ಅವರು ಟೀಸರ್ ಬಿಡುಗಡೆಮಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಚಿತ್ರದ ಕುರಿತಂತೆ ಮಾತನಾಡಿದ ನಿರ್ದೇಶಕ ಸಾಗರ್, ಸೂರ್ಯ ನಾಯಕನ ಹೆಸರು. ಆತ ತನ್ನ ಪ್ರೀತಿಗೋಸ್ಕರ ಯುದ್ದದ ರೀತಿಯಲ್ಲಿ ಸಮರ ಸಾರಿ ಅದನ್ನು ಹೇಗೆ ಉಳಿಸಿಕೊಳ್ಳುತ್ತಾನೆ ಎನ್ನುವುದೇ ಚಿತ್ರದ ಕಾನ್ಸೆಪ್ಟ್. ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡುತ್ತಲೇ ನಾನೊಂದು ಕಥೆ ಮಾಡಿಕೊಂಡಿದ್ದೆ, ಆ ಕಥೆಯನ್ನು ಇಷ್ಟಪಟ್ಟ ನನ್ನ ಸ್ನೇಹಿತ, ಈ ನಿರ್ಮಾಪಕರ ಬಳಿ ಮಾತನಾಡಿ ಅವರನ್ನು ಒಪ್ಪಿಸಿದರು. ಬೆಂಗಳೂರು ಸುತ್ತಮುತ್ತ ಹಾಗೂ ಪೂನಾದಲ್ಲಿ ಮಾತಿನ ಭಾಗದ ಚಿತ್ರೀಕರಣ ನಡೆಸಿದ್ದೇವೆ, ಈಗಾಗಲೇ 3 ಹಾಡುಗಳನ್ನು ಚಿತ್ರೀಕರಿಸಿದ್ದು, ಉಳಿದ 2 ಸೆಟ್ ಸಾಂಗ್ ಹಾಗೂ ಹೆಚ್‌ಎಂಟಿಯಲ್ಲಿ ಮಾಡಬೇಕೆಂದಿರುವ ಸಾಹಸ ದೃಶ್ಯದ ಚಿತ್ರೀಕರಣವಷ್ಟೇ ಬಾಕಿಯಿದೆ. ಆರ್ಮುಗಂ ರವಿಶಂಕರ್ ಅವರನ್ನು ಈವರೆಗೆ ನೋಡಿರದಂಥ ಪಾತ್ರದಲ್ಲಿ ಕಾಣಬಹುದು. ಅಲ್ಲದೆ ನಟಿ ಶ್ರುತಿ ಅವರು ಒಬ್ಬ ಡಾಕ್ಟರ್ ಜೊತೆಗೆ ಈಗಿನ ಕಾಲದ ಅಮ್ಮನಾಗೂ ಕಾಣಿಸಿಕೊಂಡಿದ್ದಾರೆ, ಕಾಂತಾರ ಖ್ಯಾತಿಯ ಪ್ರಮೋದ್ ಶೆಟ್ಟಿ ಅವರಿಲ್ಲಿ ಉತ್ತರ ಕರ್ನಾಟಕ ಭಾಗದ ವಿಲನ್ ಪಾತ್ರ ನಿರ್ವಹಿಸಿದ್ದಾರೆ. ಚಿತ್ರದ 5 ಹಾಡುಗಳಿಗೆ ಶ್ರೀಶಾಸ್ತ ಸಂಗೀತ ಸಂಯೋಜನೆ ಮಾಡಿದ್ದು, ಬಹದ್ದೂರ್ ಚೇತನ್, ಯೋಗರಾಜ ಭಟ್ ಸಾಹಿತ್ಯ ರಚಿಸಿದ್ದಾರೆ ಎಂದು ಹೇಳಿದರು.ಇದನ್ನೂ ಓದಿ:ನಟಿ ಮಹಾಲಕ್ಷ್ಮಿ ಪತಿ ರವೀಂದ್ರ ಬಂಧನ

    ನಾಯಕ ಪ್ರಶಾಂತ್ ಮಾತನಾಡುತ್ತ ಪೂನಾ ಫಿಲಂ ಇನ್ ಸ್ಟಿಟ್ಯೂಟ್‌ನಲ್ಲಿ ಅಭಿನಯ ಕಲಿತ ನಂತರ ಸೀರಿಯಲ್‌ಗಳಲ್ಲಿ ಸಣ್ಣಪುಟ್ಟ ಪಾತ್ರ ಮಾಡಿಕೊಂಡಿದ್ದೆ. ಸಾಗರ್ ಅವರು ಕರೆದು ನನಗೀ  ಅವಕಾಶ ಕೊಟ್ಟಿದ್ದಾರೆ. ಈ ಚಿತ್ರದ ಮೂಲಕ ಮೊದಲಬಾರಿಗೆ ನಾಯಕನಾಗಿ ಕಾಣಿಸಿಕೊಂಡಿದ್ದೇನೆ. ಒಬ್ಬ ಮಿಡಲ್ ಕ್ಲಾಸ್ ಹುಡುಗ, ಲವರ್ ಬಾಯ್, ತನ್ನ ಪ್ರೀತಿಯನ್ನು ಉಳಿಸಿಕೊಳ್ಳಲು ಆತ ಹೇಗೆಲ್ಲ ಹೋರಾಡುತ್ತಾನೆಂದು ನನ್ನ ಪಾತ್ರದ ಮೂಲಕ ತೋರಿಸಿದ್ದಾರೆ ಎಂದು ಹೇಳಿದರು. ನಾಯಕಿ ಹರ್ಷಿತಾ ಮಾತನಾಡಿ ನನ್ನದು ತುಂಬಾ ವೇರಿಯೇಶನ್ಸ್ ಇರುವ ಪಾತ್ರ, ಪ್ರೀತಿಯ ವಿಷಯದಲ್ಲಿ ಆಕೆ ಯಾವ ನಿರ್ಧಾರ ತಗೋತಾಳೆ ಅನ್ನುವುದೇ ಈ ಚಿತ್ರದ ಕಥೆ ಎಂದು ವಿವರಿಸಿದರು.

     

    ನಿರ್ಮಾಪಕ ಬಸವರಾಜ್ ಬೆಣ್ಣೆ ಮಾತನಾಡಿ ರವಿಬೆಣ್ಣೆ ಹಾಗೂ ನಾನು ಇಬ್ಬರೂ ಸಹೋದರರು. ಬೆಳಗಾವಿಯ ರೈತ ಕುಟುಂಬದಿಂದ ಬಂದವರು. ಪೂನಾದಲ್ಲಿ ಇಂಡಸ್ಟ್ರಿ ನಡೆಸುತ್ತಿದ್ದೇವೆ. ಸಾಗರ್ ನಮ್ಮನ್ನು ಭೇಟಿಯಾಗಿ ಈ ಕಥೆ ಹೇಳಿದರು. ಹೊಸಬರಿಗೆ ಅವಕಾಶ ಕೊಡಬೇಕೆಂದು ಈ ಸಿನಿಮಾ ನಿರ್ಮಾಣ ಮಾಡಿದ್ದೇವೆ ಎಂದು ಹೇಳಿದರು. ವಿಲನ್ ರೋಲ್ ಮಾಡಿರುವ ಪ್ರಶಾಂತ್ ಶೆಟ್ಟಿ ಮಾತನಾಡಿ ನನ್ನ ಪಾತ್ರ ರವಿಶಂಕರ್ ಅವರಜೊತೆ ಬರುತ್ತದೆ ಎಂದರು. ಛಾಯಾಗ್ರಾಹಕ ಮನುರಾಜ್ ಮಾತನಾಡಿ ಈ ಹಿಂದೆ ಮೆಲೋಡಿ ಡ್ರಾಮಾ ಚಿತ್ರಕ್ಕೆ ಕ್ಯಾಮೆರಾ ವರ್ಕ್ ಮಾಡಿದ್ದೆ, ಇದು ಎರಡನೇ ಚಿತ್ರ. ಬೆಂಗಳೂರು ಸುತ್ತಮುತ್ತ ಈವರೆಗೆ 35 ದಿನಗಳ ಕಾಲ ಚಿತ್ರದ ಶೂಟಿಂಗ್  ನಡೆಸಿದ್ದೇವೆ ಎಂದರು. ಟಿ.ಎಸ್. ನಾಗಾಭರಣ, ಬಲ ರಾಜವಾಡಿ, ಪ್ರಸನ್ನ ಉಳಿದ ಪಾತ್ರ ವರ್ಗದಲ್ಲಿದ್ದಾರೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿನೋದ್ ಪ್ರಭಾಕರ್ ಅಭಿನಯದ ‘ಫೈಟರ್’ ಟೀಸರ್ ಗೆ ಫ್ಯಾನ್ಸ್ ಫಿದಾ

    ವಿನೋದ್ ಪ್ರಭಾಕರ್ ಅಭಿನಯದ ‘ಫೈಟರ್’ ಟೀಸರ್ ಗೆ ಫ್ಯಾನ್ಸ್ ಫಿದಾ

    ರಿ ಟೈಗರ್ ವಿನೋದ್ ಪ್ರಭಾಕರ್ (Vinod Prabhakar) ಅಭಿನಯದ, ನೂತನ್ ಉಮೇಶ್ (Nutan Umesh) ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ ‘ಫೈಟರ್’ (Fighter) ಚಿತ್ರದ ಟೀಸರ್ (Teaser) ಇತ್ತೀಚೆಗೆ ಬಿಡುಗಡೆಯಾಯಿತು. ನಿರ್ಮಾಪಕ ಸೋಮಶೇಖರ್ ಅವರ ತಂದೆ ಕೃಷ್ಣಪ್ಪ ಟೀಸರ್ ಬಿಡುಗಡೆ ಮಾಡಿದರು.

    ಟೀಸರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕ ನೂತನ್ ಉಮೇಶ್, ಈ ಚಿತ್ರದ ಶೀರ್ಷಿಕೆಯನ್ನು ವಿನೋದ್ ಪ್ರಭಾಕರ್ ಅವರ ಅಭಿಮಾನಿಗಳೇ ಅನಾವರಣ ಮಾಡಿದ್ದರು.  ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಹೂರ್ತಕ್ಕೆ ಆಗಮಿಸಿ ಚಿತ್ರಕ್ಕೆ ಚಾಲನೆ ನೀಡಿದ್ದರು.  ಈಗ ಟೀಸರ ಅನ್ನು ನಿರ್ಮಾಪಕರ ತಂದೆಯವರು ಬಿಡುಗಡೆ ಮಾಡಿದ್ದಾರೆ. ಸದ್ಯದಲ್ಲೇ ಹಾಡುಗಳು ಹಾಗೂ ಟ್ರೈಲರ್ ಹೊರಬರಲಿದ್ದು, ಅಕ್ಟೋಬರ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ಫೈಟರ್ ಎಂದರೆ ಹೊಡೆದಾಡುವವನು ಎಂದು ತಿಳಿದುಕೊಳ್ಳುತ್ತಾರೆ. ಆದರೆ ನಮ್ಮ ಫೈಟರ್ ಅನ್ಯಾಯದ ವಿರುದ್ಧ ಹಾಗೂ ತನ್ನ ಕುಟುಂಬಕ್ಕಾಗಿ ಹೋರಾಡುವವನು.‌ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ನಿರ್ಮಾಪಕ ಸೋಮಶೇಖರ್ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಗುರುಕಿರಣ್ ಸಂಗೀತ ನೀಡಿದ್ದಾರೆ‌. ಪಾವನ ಹಾಗೂ ಲೇಖ ಚಂದ್ರ ನಾಯಕಿಯರಾಗಿ ನಟಿಸಿದ್ದಾರೆ . ಸುಮಾರು ವರ್ಷಗಳ ನಂತರ ನಟಿ ನಿರೋಷ  ಈ ಚಿತ್ರದಲ್ಲಿ  ಅಭಿನಯಿಸಿದ್ದಾರೆ ಎಂದರು. ಇದನ್ನೂ ಓದಿ:ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ರಿಷಬ್ ಶೆಟ್ಟಿ ದಂಪತಿ

    ಫೈಟರ್ ನಲ್ಲಿ ಬರೀ ಹೋರಾಟ ಹಾಗೂ ಹೊಡೆದಾಟವಿಲ್ಲ. ತಂದೆ- ತಾಯಿ ಹಾಗೂ ಮಗನ  ಬಾಂಧವ್ಯದ ಸನ್ನಿವೇಶಗಳು ಎಲ್ಲರ ಮನ ಮುಟ್ಟಲಿದೆ. ಜೊತೆಗೆ ಥ್ರಿಲ್ಲರ್ ಅಂಶಗಳನ್ನ ಒಳಗೊಂಡ ಕೌಟುಂಬಿಕ ಮನರಂಜನೆಯ ಚಿತ್ರ ಇದಾಗಿದೆ. ನನ್ನನ್ನು ನಿರ್ದೇಶಕರು ನನ್ನ ಹಿಂದಿನ ಚಿತ್ರಗಳಿಗಿಂತ ತುಂಬಾನೇ ಸ್ಟೈಲಿಷ್ ಆಗಿ ತೋರಿಸಿದ್ದಾರೆ. ನಿರ್ಮಾಪಕರು ಯಾವುದಕ್ಕೂ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ಸಮಾಜದ ವ್ಯವಸ್ಥೆಯ ವಿರುದ್ಧ ಹೋರಾಡುವ ಫೈಟರ್ ನಾನು ಎಂದು ವಿನೋದ್ ಪ್ರಭಾಕರ್ ತಿಳಿಸಿದರು.

    ನಾಯಕಿಯರಾದ ಲೇಖಾ ಚಂದ್ರ ಹಾಗೂ ಪಾವನ (Pavana) ತಮ್ಮ ಪಾತ್ರದ ಕುರಿತು ಮಾತನಾಡಿದರು. ಬಹಳ ದಿನಗಳ ನಂತರ ಕನ್ನಡ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ನಿರೋಷ ಸಂತಸಪಟ್ಟರು. ಚಿತ್ರದಲ್ಲಿ  ಹಾಡುಗಳಿದ್ದು ಎರಡೂ ವಿಭಿನ್ನವಾಗಿವೆ ಎಂದು ಸಂಗೀತ ನಿರ್ದೇಶಕ ಗುರುಕಿರಣ್ ತಿಳಿಸಿದರು. ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಫೈಟರ್ ಚಿತ್ರದ ಸಾಹಸ ದೃಶ್ಯಗಳ ಕುರಿತು ಮಾಹಿತಿ ನೀಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದ್ರಯಾನ-3 ಸಕ್ಸಸ್ ಆಗುತ್ತೆ – ಇಸ್ರೋಗೆ ಡಾಲಿ ಧನ್ಯವಾದ

    ಚಂದ್ರಯಾನ-3 ಸಕ್ಸಸ್ ಆಗುತ್ತೆ – ಇಸ್ರೋಗೆ ಡಾಲಿ ಧನ್ಯವಾದ

    ಬೆಂಗಳೂರು: ಚಂದ್ರಯಾನ-3 (Chandrayaan-3) ಸಕ್ಸಸ್ ಆಗ್ತಿದೆ, ನನ್ನ ಹುಟ್ಟುಹಬ್ಬದ ದಿನವೇ ಆಗ್ತಿರೋದು ತುಂಬಾ ಖುಷಿ ತಂದಿದೆ ಎಂದು ನಟ ಡಾಲಿ ಧನಂಜಯ್ (Dhananjay) ತಿಳಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ನಮ್ಮ ವಿಜ್ಞಾನಿಗಳ ಎಲ್ಲ ಪರಿಶ್ರಮ ಸಾರ್ಥಕವಾಗುವ ಗಳಿಗೆ ಅದು. ನಮ್ಮ ಇಸ್ರೋ (ISRO), ಇಸ್ರೋ ವಿಜ್ಞಾನಿಗಳು ತುಂಬಾ ಒಳ್ಳೆಯ ಕೆಲಸ ಮಾಡ್ತಿದ್ದಾರೆ. ಅವರಿಗೆ ಧನ್ಯವಾದ ಇನ್ನೂ ಇಂತಹ ಅನೇಕ ಕೆಲಸಗಳು ಅವರಿಂದ ಆಗಲಿ. ಜಗತ್ತಿನಲ್ಲಿ ಎಲ್ಲವೂ ಒಂದೇ ಬಾರಿಗೆ ಸಕ್ಸಸ್ ಆಗಲ್ಲ. ಕೆಲವೊಮ್ಮೆ ವಿಫಲವಾಗುತ್ತೆ. ಹಾಗೆಯೇ ನಮ್ಮ ಇಸ್ರೋ ಚಂದ್ರಯಾನ 3 ಸಕ್ಸಸ್ ಆಗುತ್ತೆ ಎಂದು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಯೋಗಿಗಳ ಕಾಲು ಹಿಡಿಯುವುದು ನನ್ನ ಅಭ್ಯಾಸ : ರಜನಿ ಖಡಕ್ ಉತ್ತರ

    ನಿನ್ನೆ ಚಂದ್ರಯಾನ-3 ಕುರಿತಂತೆ ಟ್ವೀಟ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದ ದಕ್ಷಿಣ ಭಾರತದ ಹೆಸರಾಂತ ನಟ ಪ್ರಕಾಶ್ ರಾಜ್ ಮತ್ತೊಂದು ಟ್ವೀಟ್ ಮೂಲಕ ಸ್ಪಷ್ಟನೆ ಕೊಟ್ಟಿದ್ದರು. ದ್ವೇಷಕ್ಕೆ ದ್ವೇಷ ಮಾತ್ರ ಕಾಣಿಸುತ್ತದೆ. ನಾನು ಉಲ್ಲೇಖಿಸಿದ್ದು ನಮ್ಮ ಕೇರಳದ ಚಾಯ್‌ವಾಲಾರನ್ನ ವಿಜೃಂಭಿಸುವ ಆರ್ಮ್ಸ್ಟ್ರಾಂಗ್ ಕಾಲದ ಜೋಕ್. ಟ್ರೋಲಿಗರ ಕಣ್ಣಿಗೆ ಕಾಣಿಸಿದ ಚಾಯ್‌ವಾಲಾ ಯಾರು? ನಿಮಗೆ ಜೋಕ್ ಅರ್ಥವಾಗದಿದ್ದರೆ, ಅದು ನಿಮ್ಮ ಮೇಲೆಯೇ ಮಾಡಿದ ಜೋಕ್ ಆಗುತ್ತದೆ. ಬಾಲಿಶವಾಗಿ ವರ್ತಿಸುವುದನ್ನು ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ಮೈಸೂರು ಹುಡುಗನ ಬೆತ್ತಲೆ ವಿಡಿಯೋ ಇಟ್ಕೊಂಡಿದ್ದಾರಂತೆ ನಟಿ ರಾಖಿ

    ಪ್ರಕಾಶ್ ರಾಜ್ ಅವರ ಪ್ರತಿಕ್ರಿಯೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇಡೀ ದೇಶವೇ ಹೆಮ್ಮೆ ಪಡುವಂತೆ ನಿಮ್ಮ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ. ಜಗತ್ತೇ ಈ ಕೆಲಸಕ್ಕಾಗಿ ಕೊಂಡಾಡುತ್ತಿದೆ. ಆದರೆ ಪ್ರಕಾಶ್ ರೈ ಈ ರೀತಿ ಗೇಲಿ ಮಾಡುವುದು ಸರಿಯಲ್ಲ. ಭಾರತದ ಅಸ್ಮಿತೆಯನ್ನೇ ಪ್ರಶ್ನೆ ಮಾಡುವ ನಟನಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ಹಲವರು ಪ್ರತಿಕ್ರಿಯಿಸಿದ್ದರು. ಇಂದು ಸಚಿವರೂ ಕೂಡ ಗರಂ ಆಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಾಲಿ ಹುಟ್ಟು ಹಬ್ಬಕ್ಕೆ ‘ಉತ್ತರಕಾಂಡ’ ಟೀಸರ್ ರಿಲೀಸ್

    ಡಾಲಿ ಹುಟ್ಟು ಹಬ್ಬಕ್ಕೆ ‘ಉತ್ತರಕಾಂಡ’ ಟೀಸರ್ ರಿಲೀಸ್

    ಟ ಡಾಲಿ ಧನಂಜಯ್ (Dhananjay) ಹುಟ್ಟು ಹಬ್ಬದ (Birthday) ಮುನ್ನಾ ದಿನ ಇಂದು ಉತ್ತರಕಾಂಡ ಸಿನಿಮಾದ ಟೀಸರ್ (Teaser)  ರಿಲೀಸ್ ಆಗಿದೆ. ಜೊತೆಗೆ ಗಬ್ರು (Gabru) ಪಾತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದೆ ಚಿತ್ರತಂಡ. ‘ಉತ್ತರಕಾಂಡ’ ಸಿನಿಮಾದ ಮುಹೂರ್ತವಾಗಿ ಹಲವು ತಿಂಗಳುಗಳೇ ಕಳೆದಿವೆ. ಮುಹೂರ್ತದ ನಂತರ ಯಾವುದೇ ಅಪ್ ಡೇಟ್ ನೀಡಿರಲಿಲ್ಲ ಚಿತ್ರತಂಡ. ಸಿನಿಮಾ ಶೂಟಿಂಗ್ ಕೂಡ ಶುರುವಾಗಿಲ್ಲ ಎಂದು ಹೇಳಲಾಗಿತ್ತು. ಇದೀಗ ಚಿತ್ರತಂಡ ಟೀಸರ್ ರಿಲೀಸ್ ಮಾಡಿದೆ.

    ರೋಹಿತ್ ಪದಕಿ ನಿರ್ದೇಶನದಲ್ಲಿ ಉತ್ತರಕಾಂಡ (Uttarkanda) ಸಿನಿಮಾ ಮೂಡಿ ಬರಲಿದ್ದು, ಮೋಹಕ ತಾರೆ ರಮ್ಯಾ ಮತ್ತೆ ಈ ಸಿನಿಮಾದ ಮೂಲಕ ನಟಿಯಾಗಿ ಚಿತ್ರೋದ್ಯಮಕ್ಕೆ ವಾಪಸ್ಸಾಗಿದ್ದಾರೆ. ಇದೇ ಮೊದಲ ಬಾರಿಗೆ ಡಾಲಿ ಜೊತೆ ರಮ್ಯಾ ತೆರೆ ಹಂಚಿಕೊಳ್ಳುತ್ತಿದ್ದಾರೆ. ಜೊತೆಗೆ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

    ಅದ್ದೂರಿ ಹುಟ್ಟು ಹಬ್ಬಕ್ಕೆ ಸಿದ್ಧತೆ

    ತನ್ನ ಬರ್ತಡೇ ದಿನ ಅಭಿಮಾನಿಗಳ ಜೊತೆ ಸಮಯ ಕಳೆಯಲು ನಿರ್ಧರಿಸಿರುವ ಡಾಲಿ, ಅಂದು ತಾವು ಯಾವೆಲ್ಲ ಸ್ಥಳದಲ್ಲಿ ಸಿಗುತ್ತೇನೆ ಎನ್ನುವುದನ್ನು ಹೇಳಿಕೊಂಡಿದ್ದಾರೆ. ಹುಟ್ಟು ಹಬ್ಬದ ದಿನದಂದು ತಾವು ಮನೆಯಲ್ಲಿ ಇರದೇ ಇರುವ ಕಾರಣಕ್ಕಾಗಿ ಯಾರೂ ಮನೆ ಹತ್ತಿರ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ಇಂದು ರಾತ್ರಿಯೇ 11 ಗಂಟೆಯಿಂದ ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಅಭಿಮಾನಿಗಳ ಜೊತೆ ಕೇಕ್ ಕಟ್ ಮಾಡುವುದಕ್ಕೂ ಡಾಲಿ ಸಿಗುತ್ತಾರಂತೆ. ಆಗಸ್ಟ್ 23ಕ್ಕೆ ಡಾಲಿ ಹುಟ್ಟು ಹಬ್ಬ. ಅಂದು ಮತ್ತೆ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೂ ನಂದಿ ಲಿಂಕ್ಸ್ ಗ್ರೌಂಡ್‍ ನಲ್ಲೇ ಧನಂಜಯ್ ಅಭಿಮಾನಿಗಳೊಂದಿಗೆ ಸಮಯ ಕಳೆಯುವುದಾಗಿ ತಿಳಿಸಿದ್ದಾರೆ. ಹುಟ್ಟು ಹಬ್ಬಕ್ಕೆ ಬರುವವರು ಕೇಕ್, ಹಾರ ತರಬೇಡಿ ಎಂದು ವಿಶೇಷ ಮನವಿ ಮಾಡಿಕೊಂಡಿದ್ದಾರೆ.

    ಈ ಬಾರಿಯ ಹುಟ್ಟುಹಬ್ಬವನ್ನು ಅಭಿಮಾನಿಗಳು ಡಾಲಿ ಉತ್ಸವ ಹೆಸರಿನಲ್ಲಿ ಆಚರಿಸುತ್ತಿದ್ದಾರೆ. ಡಾಲಿ ಉತ್ಸವ ಎಂದು ಹೆಸರಿಟ್ಟು ‘ಅಭಿಮಾನದ ತೇರು ಎಳೆಯೋಣ ಬನ್ನಿ’ ಎಂದು ಟ್ಯಾಗ್ ಲೈನ್ ಇಡಲಾಗಿದೆ. ಇಂದಿನಿಂದಲೇ ಅಭಿಮಾನಿಗಳು ಉತ್ಸವಕ್ಕೆ ರೆಡಿಯಾಗಿದ್ದಾರೆ. 4 ವರ್ಷಗಳ ಬಳಿಕ ಅದ್ದೂರಿಯಾಗಿ ಅಭಿಮಾನಿಗಳ ಜೊತೆ ಡಾಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಡಾಲಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟು 10 ವರ್ಷಗಳಾಗಿದೆ. ಹಾಗಾಗಿ ಈ ಬಾರಿಯ ಹುಟ್ಟುಹಬ್ಬ ಧನಂಜಯ್ ಅವರಿಗೆ ತುಂಬಾ ವಿಶೇಷವಾಗಿದೆ.

     

    ನೆರೆ, ಕೊರೊನಾ, ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಕಾರಣದಿಂದ ಧನಂಜಯ್ ಕಳೆದ 4 ವರ್ಷಗಳಿಂದ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಅಭಿಮಾನಿಗಳ ಕೈಗೂ ಸಿಕ್ಕಿರಲಿಲ್ಲ. ಹಾಗಾಗಿ ಈ ಬಾರಿ ದೊಡ್ಡ ಮಟ್ಟದಲ್ಲಿ ಬರ್ತಡೇ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದು ಹುಟ್ಟುಹಬ್ಬದ ದಿನ ಅಭಿಮಾನಿಗಳ ಜೊತೆಯೇ ಸಮಯ ಕಳೆಯಲು ನಿರ್ಧರಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವರಮಹಾಲಕ್ಷ್ಮೀ ಹಬ್ಬಕ್ಕೆ ‘ಯಥಾಭವ’ ಚಿತ್ರದ ಟೀಸರ್

    ವರಮಹಾಲಕ್ಷ್ಮೀ ಹಬ್ಬಕ್ಕೆ ‘ಯಥಾಭವ’ ಚಿತ್ರದ ಟೀಸರ್

    ಗೌತಮ್ ಬಸವರಾಜು (Gautham Basavaraj) ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ‘ಯಥಾಭವ’ (Yathabhava) ಚಿತ್ರದ ಟೀಸರ್ (Teaser) ಆಗಸ್ಟ್ 25ರಂದು ರಿಲೀಸ್ ಆಗುತ್ತಿದೆ. ವರಮಹಾಲಕ್ಷ್ಮೀ ಹಬ್ಬದ ದಿನದಂದು ಟೀಸರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಹಬ್ಬದ ಗಿಫ್ಟ್ ನೀಡುತ್ತಿದೆ ಚಿತ್ರತಂಡ.

    ಕೋರ್ಟ್ ಡ್ರಾಮ ಜಾನರ್ ನ ಈ ಚಿತ್ರದಲ್ಲಿ ಪವನ್ ಶಂಕರ್ (Pawan Shankar) ಹಾಗೂ ಸಹನ ಸುಧಾಕರ್ (Sahana Sudhakar) ನಾಯಕ – ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ ಗೌತಮ್ ಸುಧಾಕರ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.  ದತ್ತಣ್ಣ,  ಬಾಲ ರಾಜವಾಡಿ, ಗೋಪಾಲಕೃಷ್ಣ ದೇಶಪಾಂಡೆ, ಮಾಸ್ಟರ್ ಶಮಂತ್, ನೀನಾಸಂ ಆನಂದ್, ಉಮಾ ಹೆಬ್ಬಾರ್, ಮಹೇಶ್ ಕಾಳಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

    Macht entertainments ಲಾಂಛನದಲ್ಲಿ ಸುಜಾತ ಕುಮಾರಿ ಹಾಗೂ ಅನಿಲ್ ಕುಮಾರ್ ಬಿ.ಎನ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಹರ್ಷ್ ಮಿಶ್ರ ಛಾಯಾಗ್ರಹಣ,  ಹರೀಶ್ ಚೌಧರಿ ಸಂಕಲನ, ಕುಂಗ್ಫು ಚಂದ್ರು ಸಾಹಸ ನಿರ್ದೇಶನ, ಸುಚಿತ್ ಚವ್ಹಾಣ್, ನೃತ್ಯ ನಿರ್ದೇಶನ , ಸ್ಮಿತ ಕುಲಕರ್ಣಿ  ಕಲಾ ನಿರ್ದೇಶನ ಹಾಗೂ ನಿರ್ಮಾಲ್ ಜೋಶಿ ಅವರ ಸಹ ನಿರ್ದೇಶನವಿದೆ. ಉತ್ಸವ್ ಶ್ರೇಯಸ್ ಸಂಗೀತ ನೀಡಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ.  ಸುರೇಶ್ ರೆಡ್ಡಿ ಹಾಗೂ ಅಭಿಷೇಕ್ ಅಕ್ಕಣ್ಣನವರ್ ಹಾಡುಗಳನ್ನು ಬರೆದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸುರೇಶ್ ಡಿ.ಎಂ ನಿರ್ದೇಶನದ `ಚೋಳ’ ಟೀಸರ್ ರಿಲೀಸ್: ರಗಡ್ ಪಾತ್ರದಲ್ಲಿ ಅಂಜನ್

    ಸುರೇಶ್ ಡಿ.ಎಂ ನಿರ್ದೇಶನದ `ಚೋಳ’ ಟೀಸರ್ ರಿಲೀಸ್: ರಗಡ್ ಪಾತ್ರದಲ್ಲಿ ಅಂಜನ್

    ರೂರಲ್ ಸ್ಟಾರ್ ಅಂಜನ್ (Anjan) ನಾಯಕನಾಗಿ ನಟಿಸಿರುವ `ಚೋಳ’ (Chola) ಚಿತ್ರ ಇತ್ತೀಚಿನ ದಿನಗಳಲ್ಲಿ ಪ್ರೇಕ್ಷಕರ ಗಮನ ಸೆಳೆದುಕೊಂಡಿತ್ತು. ಸುರೇಶ್ ಡಿ.ಎಂ (Suresh DM) ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಭಿನ್ನವಾದ ಕಥಾ ಹಂದರ ಹೊಂದಿದೆ. ಇದೀಗ ಚೋಳ ಚಿತ್ರದ ಟೀಸರ್ (Teaser) ಬಿಡುಗಡೆಯಾಗಿದೆ. ರೂರಲ್ ಸ್ಟಾರ್ ಅಂಜನ್ ಅಕ್ಷರಶಃ ಮಾಸ್ ಲುಕ್ ನಲ್ಲಿ ಅಬ್ಬರಿಸಿದ್ದಾರೆ. ಇದರೊಂದಿಗೆ ಸಿನಿಮಾ ಮೇಕಿಂಗ್, ಕಥೆ, ಪಾತ್ರವರ್ಗ ಸೇರಿದಂತೆ ಎಲ್ಲ ದಿಕ್ಕುಗಳಲ್ಲಿಯೂ ಸಿನಿಮಾ ಗಮನ ಸೆಳೆದಿದೆ. ನಿರ್ದೇಶಕ ಸುರೇಶ್ ಡಿ.ಎಂ ಮೊದಲ ಹೆಜ್ಜೆಯಲ್ಲಿಯೇ ಭರವಸೆ ಮೂಡಿಸಿದ್ದಾರೆ.

    ಕನ್ನಡ ಚಿತ್ರರಂಗದಲ್ಲಿ ಇದುವರೆಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದವರು ಸುರೇಶ್ ಡಿ.ಎಂ. ನಿರ್ಮಾಪಕರಾಗಿ ಭಿನ್ನ ಅಭಿರುಚಿಯ ಸಿನಿಮಾ ನೀಡಿದವರು. ಚೋಳ ಸಿನಿಮಾ ಮೂಲಕ ನಿರ್ದೇಶಕರಾದ ಸುದ್ದಿ ಹೊರ ಬಂದಾಗ ಸಹಜವಾಗಿಯೇ ಕುತೂಹಲ ಮೂಡಿತ್ತು. ಈಗ ಟೀಸರ್ ನೋಡಿದಾಗ ಅವರ ಕಸುಬುದಾರಿಕೆಯನ್ನು ಎತ್ತಿ ಹಿಡಿದಿದೆ. ನಾನಾ ಅಂಶಗಳು ಮಿಳಿತವಾಗಿರುವ ಪಕ್ಕಾ ರಗಡ್ ಕಥೆಯೊಂದಿಗೆ ಸುರೇಶ್ ಅವರು ಈ ಚಿತ್ರವನು ರೂಪಿಸಿರುವುದು ಟೀಸರ್ ಮೂಲಕ ಋಜುವಾತಾಗಿದೆ.

    ರೂರಲ್ ಸ್ಟಾರ್ ಅಂಜನ್, ಸಿಕ್ಕ ಸೀಮಿತ ಅವಕಾಶದಲ್ಲಿಯೇ ತಮ್ಮ ಪ್ರತಿಭೆಯನ್ನು ಸಾಬೀತು ಪಡಿಸಿದ್ದಾರೆ. ಈ ಹುಡುಗನಿಗೆ ಸರಿಯಾದ ಅವಕಾಶ ಸಿಕ್ಕರೆ ಹೀರೋ ಆಗಿ ನೆಲೆ ಕಂಡುಕೊಳ್ಳುತ್ತಾರೆ ಎಂದು ಪ್ರೇಕ್ಷಕರೇ ಅಭಿಪ್ರಾಯ ಪಟ್ಟಿದ್ದರು. ಕಡೆಗೂ ಸುರೇಶ್ ಡಿ.ಎಂ ಅದಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅದರ ಫಲವಾಗಿಯೇ ಅಂಜನ್ ಮಾಸ್ ಮೂಡಿನಲ್ಲಿ ಆರ್ಭಟಿಸಿದ್ದಾರೆ. ಈ ಟೀಸರ್ ನೋಡಿದವರೆಲ್ಲರೂ ಖುಷಿಯಾಗಿದ್ದಾರೆ.

    ಸುರೇಶ್ ಡಿ.ಎಂ ಸೃಷ್ಟಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಈ ಚಿತ್ರವನ್ನು ಸ್ವತಃ ನಿರ್ಮಾಣ ಮಾಡಿದ್ದಾರೆ. ಇಲ್ಲಿ ದಿಶಾ ಪಾಂಡೆ ಮತ್ತು ಪ್ರತಿಭಾ ನಾಯಕಿಯರಾಗಿ ಸಾಥ್ ಕೊಟ್ಟಿದ್ದಾರೆ. ದಿನೇಶ್ ಮಂಗಳೂರು ಮತ್ತು ಬಲ ರಾಜವಾಡಿ ಖಳನಟರಾಗಿ ನಟಿಸಿದ್ದಾರೆ. ಅವರೆಲ್ಲರ ಪಾತ್ರಗಳ ಝಲಕ್ ಟೀಸರ್ ನಲ್ಲಿ ಕಾಣಿಸಿವೆ. ಅದು ಪ್ರೇಕ್ಷಕರು ಥ್ರಿಲ್ ಆಗುವಂತೆಯೂ ಮಾಡಿದೆ.

    ತುಳುವಿನಲ್ಲಿ ಸೂಪರ್ ಹಿಟ್ ಆಗಿರುವ, ರೂಪೇಶ್ ಶೆಟ್ಟಿ ನಿರ್ದೇಶನದ ಸರ್ಕಸ್ ಎಂಬ ಚಿತ್ರಕ್ಕೆ  ಸಂಗೀತ ನಿರ್ದೇಶನ ಮಾಡಿದ್ದ ಲಾಯ್ ವ್ಯಾಲೆಂಟೈನ್  ಸಲ್ಡಾನ ಈ ಚಿತ್ರಕ್ಕೆ ಸಂಗೀತ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಹಿರಿಯ ನಟ ಮನಮೋಹನ್ ರಾಯ್ ಸೇರಿದಂತೆ ಈ ತಾರಾಗಣದಲ್ಲಿ ಪ್ರತಿಭಾನ್ವಿತ ನಟ ವರ್ಧನ್, ಮಜಾ ಭಾರತ ಖ್ಯಾತಿಯ ಜಗಪ್ಪ, ಮಿಂಚು ಮುಂತಾದವರಿದ್ದಾರೆ. ಸಂದೀಪ್ ಹೊನ್ನಾಳ್ಳಿ ಛಾಯಾಗ್ರಹಣ, ಶಿವಕುಮಾರ್ ಎ. ಸಂಕಲನ ಈ ಚಿತ್ರಕ್ಕಿದೆ.

     

    ಚೋಳ ಎಂಬ ಶೀರ್ಷಿಕೆ ಕೇಳಿದಾಕ್ಷಣ ಬಹುತೇಕರ ಗಮನ ಬೇರೆತ್ತಲೋ ವಾಲಿಕೊಂಡಿತ್ತು. ಆದರೆ, ಇದೊಂದು ಆಧುನಿಕ ದಿನಮಾನದ ಕಥನ ಎಂಬುದನ್ನು ಈ ಟೀಸರ್ ಸಾರಿ ಹೇಳಿದೆ. ಪ್ರೀತಿ, ರೌಡಿಸಂ ಸೇರಿದಂತೆ ಅನೇಕ ಅಂಶಗಳನ್ನು ಸಿನಿಮಾ ಒಳಗೊಂಡಿದೆ. ಅದು ನಿಜಕ್ಕೂ ಭಿನ್ನವಾಗಿದೆ ಎಂಬುದು ಈ ಟೀಸರ್ ತಿಳಿಸುತ್ತದೆ. ಈಗಾಗಲೇ ಒಂದಷ್ಟು ಭಾಗಗಳ ಚಿತ್ರೀಕರಣ ಸುಸೂತ್ರವಾಗಿ ನೆರವೇರಿದೆ. ಇನ್ನು ಕೆಲವೇ ದಿನಗಳಲ್ಲಿ ಚಿತ್ರೀಕರಣ ಮುಗಿಸಿಕೊಳ್ಳಲು ಸುರೇಶ್ ಅವರು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಈ ಹಂತದಲ್ಲಿ ಚೋಳ ಬಗೆಗಿನ ಒಂದಷ್ಟು ಇಂಟರೆಸ್ಟಿಂಗ್ ಮಾಹಿತಿಗಳು ಹಂತ ಹಂತವಾಗಿ ಪ್ರೇಕ್ಷಕರನ್ನು ತಲುಪಿಕೊಳ್ಳಲಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಪ್ತಮಿ ಗೌಡ ನಟನೆಯ ‘ವ್ಯಾಕ್ಸಿನ್ ವಾರ್’ ಚಿತ್ರದ ಟೀಸರ್ ರಿಲೀಸ್

    ಸಪ್ತಮಿ ಗೌಡ ನಟನೆಯ ‘ವ್ಯಾಕ್ಸಿನ್ ವಾರ್’ ಚಿತ್ರದ ಟೀಸರ್ ರಿಲೀಸ್

    ‘ದಿ ಕಾಶ್ಮೀರ್ ಫೈಲ್ಸ್’ ಬಳಿಕ ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶನದಲ್ಲಿ ತಯಾರಾಗಿರುವ ‘ದಿ ವ್ಯಾಕ್ಸಿನ್ ವಾರ್’ (Vaccine War) ಸಿನಿಮಾದ ಟೀಸರ್ (Teaser) ಹಾಗೂ ಬಿಡುಗಡೆ ದಿನಾಂಕ ಪ್ರಕಟವಾಗಿದೆ. ಸ್ವಾತಂತ್ರ್ಯ ದಿನದ ಅಂಗವಾಗಿ ರಿಲೀಸ್ ಆಗಿದ್ದ ಟೀಸರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ‌.

    ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಕುರಿತ ಪ್ರಯೋಗದ ದೃಶ್ಯದೊಂದಿಗೆ ಆರಂಭವಾಗುವ ಟೀಸರ್ ನಲ್ಲಿ ಭಾರತೀಯ ವಿಜ್ಞಾನಿಗಳು ವ್ಯಾಕ್ಸಿನ್‌ ಗಾಗಿ ಪಟ್ಟ ಶ್ರಮವನ್ನು ಟೀಸರ್ ನಲ್ಲಿ ಕಟ್ಟಿಕೊಡಲಾಗಿದೆ. ಅಲ್ಲದೇ ಕುತೂಹಲ ಮೂಡಿಸುವಂತಹ ಸಾಕಷ್ಟು ಸಂಗತಿಗಳನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಇದನ್ನೂ ಓದಿ:ಪಡ್ಡೆಹುಡುಗರ ರಾಣಿ ಶ್ರೀಲೀಲಾ ಅಭಿಮಾನಿಗಳಿಗೆ ಗುಡ್‌ ನ್ಯೂಸ್

    ಕೋವಿಡ್ ವ್ಯಾಕ್ಸಿನ್ ಸುತ್ತ ಸಾಗುವ ಕಥೆಯಲ್ಲಿ ಪಲ್ಲವಿ ಜೋಶಿ, ಅನುಪಮ್ ಖೇರ್, ನಾನಾ ಪಾಟೇಕರ್ ಮತ್ತು ಕಾಂತಾರ ಸಿನಿಮಾ ಖ್ಯಾತಿಯ ಸಪ್ತಮಿ ಗೌಡ (Saptami Gowda)ಪ್ರಮುಖ ಪಾತ್ರಗಳಲ್ಲಿದ್ದಾರೆ. ಕಾಶ್ಮೀರಿ ಫೈಲ್ಸ್​ ನಿರ್ಮಾಪಕ ಅಭಿಷೇಕ್​ ಅಗರ್ವಾಲ್ ಬಂಡವಾಳ ಹೂಡಿದ್ದು, ಐ ಆ್ಯಮ್ ಬುದ್ಧ ಸಹಯೋಗದಲ್ಲಿ ಪಲ್ಲವಿ ಜೋಶಿ ಕೂಡ ಸಿನಿಮಾಕ್ಕೆ ಹಣ ಹಾಕಿದ್ದಾರೆ.

    ಸೆಪ್ಟಂಬರ್​ 28ರಂದೇ ‘ದಿ ವ್ಯಾಕ್ಸಿನ್​ ವಾರ್’ ಚಿತ್ರ 11 ಭಾಷೆಯಲ್ಲಿ ತೆರೆ ಕಾಣಲಿದೆ. ಇದೇ ದಿನ ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬೋದ ಸಲಾರ್ ಸಿನಿಮಾ ಕೂಡ ಬಿಡುಗಡೆಯಾಗಲಿದೆ. ಒಂದೇ ದಿನಕ್ಕೆ ನಿರೀಕ್ಷೆ ಮೂಡಿಸುವಂತಹ ಎರಡು ಚಿತ್ರಗಳು ರಿಲೀಸ್ ಆಗುತ್ತಿದ್ದು, ಪ್ರೇಕ್ಷಕರು ಕಾಯುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ದೇವರ’ ಸಿನಿಮಾದಲ್ಲಿನ ಸೈಫ್ ಅಲಿಖಾನ್ ಲುಕ್ ಗೆ ಫ್ಯಾನ್ಸ್ ಫಿದಾ

    ‘ದೇವರ’ ಸಿನಿಮಾದಲ್ಲಿನ ಸೈಫ್ ಅಲಿಖಾನ್ ಲುಕ್ ಗೆ ಫ್ಯಾನ್ಸ್ ಫಿದಾ

    ಜ್ಯೂನಿಯರ್ ಎನ್.ಟಿ.ಆರ್ ನಾಯಕನಾಗಿ ನಟಿಸುತ್ತಿರುವ ದೇವರ (Devara) ಸಿನಿಮಾದಲ್ಲಿ ಬಾಲಿವುಡ್ ನಟ ಸೈಫ್ ಅಲಿಖಾನ್ (Saif Ali Khan) ಖಳನಟರಾಗಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರದ ಟೀಸರ್ ಎರಡು ದಿನಗಳ ಹಿಂದೆಯಷ್ಟೇ ರಿಲೀಸ್ ಆಗಿದ್ದು, ಟೀಸರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮತ್ತು ಅವರ ಲುಕ್ ವಿಶೇಷವಾಗಿದೆ.

    ರ್ ಆರ್ ಆರ್ ಚಿತ್ರದ ನಂತರ ತೆಲುಗು ನಟ ಜ್ಯೂನಿಯರ್ ಎನ್ಟಿಆರ್ (Jr NTR) ಇದೀಗ ಕೊರಟಾಲ ಶಿವ (Koratala Shiva) ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರ ಪ್ರಾರಂಭವಾದರೂ ಚಿತ್ರತಂಡ ಮಾತ್ರ ಇದುವರೆಗೂ ಶೀರ್ಷಿಕೆಯನ್ನು ಘೋಷಿಸಿರಲಿಲ್ಲ. ಜ್ಯೂನಿಯರ್ ಎನ್ಟಿಆರ್ ಹುಟ್ಟು ಹಬ್ಬದ ಸಂದರ್ಭದಲ್ಲಿ ಚಿತ್ರದ ಹೆಸರನ್ನು ಘೋಷಿಸಲಾಗಿದೆ. ಚಿತ್ರಕ್ಕೆ ‘ದೇವರ’ (Devara) ಎಂಬ ಶೀರ್ಷಿಕೆ ಇಡಲಾಗಿತ್ತು.

    ಜೊತೆಗೆ ಅಂದು ಪೋಸ್ಟರ್ ಕೂಡ ರಿಲೀಸ್ ಆಗಿತ್ತು. ಆ ಪೋಸ್ಟರ್ನಲ್ಲಿ ಜ್ಯೂನಿಯರ್ ಎನ್.ಟಿ.ಆರ್ ಕಪ್ಪು ಬಣ್ಣದ ಲುಂಗಿ ಮತ್ತು ಶರ್ಟ್ ತೊಟ್ಟು,  ಸಮುದ್ರದ ಬಂಡೆಗಳ ಮೇಲೆ ಕೊಡಲಿ ಹಿಡಿದು ನಿಂತು ತೀಕ್ಷ್ಣವಾಗಿ ನೋಡುತ್ತಿದ್ದಾರೆ. ಕಳೆಗೆ ಹೆಣಗಳ ರಾಶಿ ಇದೆ. ಪಕ್ಕದಲ್ಲಿ ಮುರಿದು ಬಿದ್ದ ದೋಣಿಯೊಂದನ್ನೂ ಕಾಣಬಹುದಾಗಿತ್ತು.

     

    ‘ದೇವರ ಚಿತ್ರದ ಮೂಲಕ ಶ್ರೀದೇವಿ ಮಗಳು ಜಾಹ್ನವಿ ಕಪೂರ್ (Jahnavi Kapoor) ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಜೊತೆಗೆ ಬಾಲಿವುಡ್ನ ಖ್ಯಾತ ನಟ ಸೈಫ್ ಅಲಿ ಖಾನ್ ಸಹ ಖಳನಟನಾಗಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಪ್ರಕಾಶ್ ರೈ, ಶ್ರೀಕಾಂತ್ ಮುಂತಾದ ಪ್ರತಿಭಾವಂತ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಯುವಸುಧಾ ಆರ್ಟ್ಸ್ ಮತ್ತು ಎನ್ಟಿಆರ್ ಆರ್ಟ್ಸ್ನಡಿ ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿಕೃಷ್ಣ ನಿರ್ಮಿಸುತ್ತಿರುವ ಈ ಚಿತ್ರವನ್ನು ಖ್ಯಾತ ನಟ ನಂದಮೂರಿ ಕಲ್ಯಾಣರಾಮ್ ನಿರ್ಮಿಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]