Tag: teaser

  • ಸಂತಾನಂ ನಟನೆಯ ‘ಕಿಕ್’ ಸಿನಿಮಾದ ಟೀಸರ್ ಔಟ್: ಭರ್ಜರಿ ಎಂದ ಫ್ಯಾನ್ಸ್

    ಸಂತಾನಂ ನಟನೆಯ ‘ಕಿಕ್’ ಸಿನಿಮಾದ ಟೀಸರ್ ಔಟ್: ಭರ್ಜರಿ ಎಂದ ಫ್ಯಾನ್ಸ್

    ನ್ನಡದ ಅನೇಕ ನಿರ್ದೇಶಕರು ಬೇರೆ ಬೇರೆ ಸಿನಿಮಾ ರಂಗದಲ್ಲಿ ಬ್ಯುಸಿಯಾಗಿದ್ದಾರೆ. ಬಹುತೇಕ ಚಿತ್ರಗಳು ರಿಲೀಸ್ ಗೆ ರೆಡಿಯಾಗಿವೆ. ಅದರಲ್ಲಿ ಮೊದಲು ಕನ್ನಡದ ಪ್ರತಿಭಾವಂತ ನಿರ್ದೇಶಕ ಪ್ರಶಾಂತ್ ರಾಜ್ (Prashant Raj) ನಿರ್ದೇಶನದ ಕಿಕ್ ಚಿತ್ರ ಬಿಡುಗಡೆ ಆಗುತ್ತಿದೆ. ಅದಕ್ಕೂ ಮೊದಲು ಸಿನಿಮಾದ ಟೀಸರ್ (Teaser) ಅನ್ನು ರಿಲೀಸ್ ಮಾಡಿರುವ ನಿರ್ದೇಶಕರು ಭರ್ಜರಿ ಮನರಂಜನೆಯನ್ನೇ ಕೊಟ್ಟಿದ್ದಾರೆ. ಈ ಸಿನಿಮಾದ ನಾಯಕ ಸಂತಾನಂ ಅಭಿಮಾನಿಗಳು ಟೀಸರ್ ಭರ್ಜರಿ ಎಂದು ಸಂಭ್ರಮಸಿದ್ದಾರೆ.

    ‘ಕಿಕ್’ ಸಿನಿಮಾದ ಬಿಡುಗಡೆ ದಿನಾಂಕ ಬಹಿರಂಗವಾಗಿದೆ. ಪೋಸ್ಟರ್ ವೊಂದನ್ನು ರಿಲೀಸ್ (Release) ಮಾಡಿರುವ ಪ್ರಶಾಂತ್ ರಾಜ್, ಸೆಪ್ಟಂಬರ್ 1 ರಂದು ರಿಲೀಸ್ ಮಾಡುವುದಾಗಿ ತಿಳಿಸಿದ್ದಾರೆ. ಈಗಾಗಲೇ ಚಿತ್ರದ ಹಾಡುಗಳು ಸೂಪರ್ ಹಿಟ್ ಆಗಿದ್ದು, ಸಿನಿಮಾ ನಿರೀಕ್ಷೆ ಕೂಡ ಮೂಡಿಸಿದೆ. ಟೀಸರ್ ಕೂಡ ಚಿತ್ರದ ಬಗ್ಗೆ ಮತ್ತಷ್ಟು ಭರವಸೆಯನ್ನು ಮೂಡಿಸಿದೆ.

    ತಮ್ಮ ಚೊಚ್ಚಲು ತಮಿಳು ಚಿತ್ರಕ್ಕೆ ಕಿಕ್ (Kick) ಎಂದು ಹೆಸರಿಟ್ಟು ಕುತೂಹಲ ಮೂಡಿಸಿದ್ದರು ಪ್ರಶಾಂತ್ ರಾಜ್. ಈ ಸಿನಿಮಾದ ಮತ್ತೊಂದು ವಿಶೇಷ ಅಂದರೆ, ಕನ್ನಡದ ಹಲವು ಪ್ರತಿಭೆಗಳನ್ನು ತಮ್ಮೊಂದಿಗೆ ತಮಿಳಿಗೂ ಕರೆದುಕೊಂಡು ಹೋಗಿದ್ದಾರೆ ನಿರ್ದೇಶಕರು. ಕಾಮಿಡಿ ಸಿನಿಮಾಗಳ ಮೂಲಕ ತಮಿಳಿನ ಪ್ರೇಕ್ಷಕರ ಮನ ಗೆದ್ದಿರುವ ಸಂತಾನಂ (Santhanam) ಈ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದಾರೆ.

    ಬಸಣ್ಣಿ ಬಾ ಹಾಡಿನ ಖ್ಯಾತಿಯ ತಾನ್ಯ ಹೋಪ್ (Tanya Hope) ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ತುಪ್ಪದ ಬೆಡಗಿ ರಾಗಿಣಿ (Ragini) ಕೂಡ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಅಲ್ಲದೇ ಹೆಸರಾಂತ ತಾರಾ ಬಳಗವೇ ಸಿನಿಮಾದಲ್ಲಿದೆ. ಸಿನಿಮಾದ ಮತ್ತೊಂದು ವಿಶೇಷ ಎಂದರೆ, ಕಾಮಿಡಿಗೆ ಒತ್ತು ನೀಡಲಾಗಿದೆ. ಹೆಸರಾಂತ ಕಾಮಿಡಿ ಕಲಾವಿದರೇ ತಾರಾ ಬಳಗದಲ್ಲಿ ಇದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

     

    ಈ ಕುರಿತು ಮಾತನಾಡಿದ ಪ್ರಶಾಂತ್ ರಾಜ್, ‘ಬ್ರಹ್ಮಾನಂದಂ ನನ್ನಿಷ್ಟದ ನಟ. ಈ ಸಿನಿಮಾದಲ್ಲಿ ಕಾಮಿಡಿಗೂ ಹೆಚ್ಚು ಒತ್ತು ನೀಡಲಾಗಿದೆ. ಹಾಗಾಗಿ ಸಾಧು ಕೋಕಿಲಾ (Sadhu Kokila) ಕೂಡ ಸಿನಿಮಾದಲ್ಲಿ ಇದ್ದಾರೆ. ಈ ಸಿನಿಮಾದ ಮೂಲಕ ಫ್ರೆಶ್ ಆಗಿರುವ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದೇನೆ’ ಅಂತಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂದು ಧನ್ವೀರ್ ನಟನೆಯ ‘ವಾಮನ ಚಿತ್ರದ ಟೀಸರ್ ರಿಲೀಸ್

    ಇಂದು ಧನ್ವೀರ್ ನಟನೆಯ ‘ವಾಮನ ಚಿತ್ರದ ಟೀಸರ್ ರಿಲೀಸ್

    ಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಧನ್ವೀರ್ (Dhanveer) ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ವಾಮನ (Vamana) ಚಿತ್ರದ ಆಕ್ಷನ್ ಟೀಸರ್ ಇಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ  ಚಿತ್ರದ ಎರಡು ಹಾಡುಗಳು ಸಖತ್ ಹಿಟ್ ಆಗಿದೆ.  ಸದ್ಯ ಆಕ್ಷನ್ ಟೀಸರ್ ಬಿಡುಗಡೆಯಾಗಲಿದ್ದು, ಅದೇ ದಿನ ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್ ಸಹ ಇದೆ.

    ಚೇತನ್ ಗೌಡ ಅವರು ನಿರ್ಮಿಸಿರುವ ಮೊದಲ ಚಿತ್ರವಿದು. ಶಂಕರ್ ರಾಮನ್ (Shankar Raman) ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಅಜನೀಶ್ ಬಿ ಲೋಕನಾಥ್ ಸಂಗೀತ ನೀಡಿದ್ದಾರೆ. ಮಹೇನ್ ಸಿಂಹ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಭೂಷಣ್ ನೃತ್ಯ ನಿರ್ದೇಶನ, ಅರ್ಜುನ್ ರಾಜ್, ವಿಕ್ರಂ ಮೋರ್ ಹಾಗೂ ಜಾಲಿ ಬಾಸ್ಟಿನ್ ಸಾಹಸ ನಿರ್ದೇಶನ ಹಾಗೂ ನವೀನ್ ಹಾಡೋನಳ್ಳಿ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

    ಧನ್ವೀರ್ ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ (Reeshma Nanaiah) ನಟಿಸಿದ್ದಾರೆ. ತಾರಾ, ಸಂಪತ್ ರಾಜ್, ಆದಿತ್ಯ ಮೆನನ್, ಅವಿನಾಶ್, ಅಚ್ಯುತಕುಮಾರ್, ಕಾಕ್ರೋಜ್ ಸುಧಿ, ಪೆಟ್ರೋಲ್ ಪ್ರಸನ್ನ, ಶಿವರಾಜ್ ಕೆ.ಆರ್ ಪೇಟೆ, ಕೆ.ಜಿ.ಸಚ್ಚು, ಅರುಣ್ ಶ್ರೀರಾಮಯ್ಯ ಮುಂತಾದವರು “ವಾಮನ” ಚಿತ್ರದ ತಾರಾಬಳಗದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಭುದೇವ್ ನಟನೆಯ ‘ವುಲ್ಫ್ ಚಿತ್ರದ ಟೀಸರ್ ರಿಲೀಸ್

    ಪ್ರಭುದೇವ್ ನಟನೆಯ ‘ವುಲ್ಫ್ ಚಿತ್ರದ ಟೀಸರ್ ರಿಲೀಸ್

    ಸಂದೇಶ್ ಪ್ರೊಡಕ್ಷನ್ (Sandesh Nagaraj) ನಿರ್ಮಾಣದ 30ನೇ ಚಿತ್ರವಾದ ಮತ್ತು ತಮಿಳು, ಕನ್ನಡ, ಹಿಂದಿ, ತೆಲುಗು ಭಾಷೆಯಲ್ಲಿ ತಯಾರಾಗಿರುವ ‘ವುಲ್ಫ್’ (Wolf) ಚಿತ್ರದ ಟೀಸರ್ (Teaser) ರಿಲೀಸ್ ಆಗಿದೆ. ಡಾನ್ಸಿಂಗ್ ಸ್ಟಾರ್ ಪ್ರಭುದೇವ (Prabhudev), ಅನುಸೂಯ ಭಾರದ್ವಾಜ್, ಲಕ್ಷ್ಮಿ ರೈ, ವಸಿಷ್ಠ ಸಿಂಹ, ಅಂಜು ಕುರಿಯನ್ ಮುಂತಾದ ಖ್ಯಾತ ತಾರಾ ಬಳಗವನ್ನು  ಹೊಂದಿರುವ ಸಿನಿಮಾ ಇದಾಗಿದೆ.

    ವುಲ್ಫ್ ಚಿತ್ರ ತಾಂತ್ರಿಕ ಕೆಲಸಗಳನ್ನು ಮುಗಿಸಿ ಇದೀಗ ಮೊದಲ ಹಂತವಾಗಿ  ಆಗಸ್ಟ್  3ರಂದು ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯವನ್ನು ಆರಂಭಿಸಿದೆ ಚಿತ್ರತಂಡ. ದಕ್ಷಿಣ ಭಾರತೀಯ ಚಿತ್ರರಂಗದಲ್ಲೇ ವಿಭಿನ್ನವಾದ ಕಥಾ ಹಂದರವನ್ನು ಮೊದಲ ಬಾರಿಗೆ ಪ್ರೇಕ್ಷಕರ ಮುಂದೆ ಇಡಲು ಚಿತ್ರ ತಂಡ ತಯಾರಾಗಿದೆ. ಇದನ್ನೂ ಓದಿ:ಮದುವೆಯಾದ ಒಂದೇ ವರ್ಷಕ್ಕೆ ಪತಿಯನ್ನು ಕಳೆದುಕೊಂಡ ನಟಿ ಶ್ರುತಿ

    ಇದೇ ತಿಂಗಳು 16 ರಂದು ನಿರ್ಮಾಪಕರಾದ ಸಂದೇಶ್ ನಾಗರಾಜ್ ಅವರ ಜನುಮದಿನ ಅಂದು ತಮಿಳುನಟ ವಿಜಯ ಸೇತುಪತಿ (Vijay Sethupathi) ಹಾಡಿರುವ ಚಿತ್ರದ ಮೊದಲ ಲಿರಿಕಲ್ ವೀಡಿಯೋ ಸಹ ಬಿಡುಗಡೆಯಾಗುತ್ತಿದೆ.  ಈ ಚಿತ್ರವನ್ನು ವಿನು ವೆಂಕಟೇಶ್ ನಿರ್ದೇಶನ ಮಾಡಿದ್ದು, ಖ್ಯಾತ ಛಾಯಾಗ್ರಾಹಕ ಅರುಳ್ ವಿನ್ಸೆಂಟ್ ಛಾಯಾಗ್ರಹಣ, ಖ್ಯಾತ ತಾರೆ ಜಯಸುಧಾ ಅವರ ಪುತ್ರ ಹಾಗೂ  ಖ್ಯಾತ ಸಂಗೀತ ನಿರ್ದೇಶಕ  ಅಮರೀಶ್ ಸಂಗೀತ ನಿರ್ದೇಶನ ಮಾಡಿದ್ದಾರೆ.

     

    ಪ್ರೊಡಕ್ಷನ್ ಎಕ್ಸಿಕ್ಯೂಟಿವ್ ಆಗಿ ಪ್ರಸಾದ್ ಬಿ ಏನ್ ಮತ್ತು ಕಾಮರಾಜು ಕಾರ್ಯ ನಿರ್ವಹಿಸಿರುವ ಈ ಚಿತ್ರವನ್ನು  ಸಂದೇಶ ನಾಗರಾಜ್ ಅವರು ಸಂದೇಶ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಕ್ರಾಂತ್ ನಟನೆಯ  ‘ಸ್ಪಾರ್ಕ್ ಲೈಫ್’ ಟೀಸರ್ ರಿಲೀಸ್

    ವಿಕ್ರಾಂತ್ ನಟನೆಯ ‘ಸ್ಪಾರ್ಕ್ ಲೈಫ್’ ಟೀಸರ್ ರಿಲೀಸ್

    ಗಂತೂ ಪ್ಯಾನ್ ಇಂಡಿಯಾ ಸಿನಿಮಾಗಳ ಟ್ರೆಂಡ್ ಜೋರಾಗಿದೆ. ಬಹುತೇಕ ಸಿನಿಮಾ ರಂಗಗಳಲ್ಲಿಯೂ ಸಾಲು ಸಾಲು ಪ್ಯಾನ್ ಇಂಡಿಯಾ ಚಿತ್ರಗಳು ಅನೌನ್ಸ್ ಆಗುತ್ತಲೇ ಇವೆ. ಅದರ ಮುಂದುವರೆದ ಭಾಗವಾಗಿ ತೆಲುಗಿನಲ್ಲಿ ‘ಸ್ಪಾರ್ಕ್ ಲೈಫ್’ (Spark Life) ಎಂಬ ಸಿನಿಮಾ ತಯಾರಾಗ್ತಿದ್ದು, ಈ ಚಿತ್ರದ ಟೀಸರ್ (Teaser) ಬಿಡುಗಡೆಯಾಗಿದೆ.

    ಎರಡು ನಿಮಿಷ ಎರಡು ಸೆಕೆಂಡ್ ಇರುವ ಈ ಟೀಸರ್ ಕಂಪ್ಲೀಟ್ ಸಾಹಸಮಯ ದೃಶ್ಯಗಳಿಂದ ಕೂಡಿದೆ. ಯುವ ಪ್ರತಿಭೆ ವಿಕ್ರಾಂತ್ (Vikrant) ನಾಯಕನಾಗಿ ನಟಿಸಿದ್ದು, ಮೆಹ್ರೀನ್ ಫಿರ್ಜಾದಾ (Mehreen Firzad) ಹಾಗೂ ರುಕ್ಸಾರ್ ಧಿಲ್ಲೋನ್ (Ruksar Dhillon) ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:‘ಬಾಹುಬಲಿ’ ಪ್ರಭಾಸ್- ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೆ ಕೊನೆಗೂ ಸಿಕ್ತು ಗುಡ್‌ ನ್ಯೂಸ್

    ಧಗಧಗಿಸುವ ಬೆಂಕಿ, ಹೆಣಗಳ ರಾಶಿ, ರಕ್ತಪಾತದಿಂದ ಆರಂಭವಾಗುವ ಟೀಸರ್ ನಲ್ಲಿ ನಾಯಕನನ್ನು ಭರ್ಜರಿ ಆಕ್ಷನ್ ಮೂಲಕ ಪರಿಚಯಿಸಲಾಗಿದೆ, ಪ್ರೀತಿ, ಪ್ರೇಮ, ತನಿಖೆ ಸುತ್ತ ಟೀಸರ್ ಸಾಗುತ್ತದೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಸೈಕಾಲಜಿಕಲ್ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸ್ಪಾರ್ಕ್ ಲೈಫ್ ಸಿನಿಮಾಗೆ ಡೆಫ್ ಫ್ರಾಗ್ ಪ್ರೊಡಕ್ಷನ್ ಆಕ್ಷನ್ ಕಟ್ ಹೇಳಿದ್ದು, ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

    ಮಲಯಾಳಂ ನಟ ಗುರು ಸೋಮಸುಂದರಂ ಮತ್ತು ನಾಸರ್, ಸುಹಾಸಿನಿ ಮಣಿರತ್ನಂ, ವೆನ್ನೆಲ ಕಿಶೋರ್, ಸತ್ಯ, ಶ್ರೀಕಾಂತ್ ಅಯ್ಯಂಗಾರ್, ಅನ್ನಪೂರ್ಣಮ್ಮ, ರಾಜಾ ರವೀಂದ್ರ ತಾರಾಬಳಗದಲ್ಲಿದ್ದಾರೆ. ಹೃದಯಂ ಸಿನಿಮಾ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನವಿರುವ ಸ್ಪಾರ್ಕ್ ಲೈಫ್ ಸಿನಿಮಾ ತೆಲುಗು, ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಮೂಡಿ ಬರಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಮೋದ್-ರೋಹಿತ್ ಕಾಂಬಿನೇಷನ್ ‘ರಕ್ತಾಕ್ಷ’ ಸಿನಿಮಾದ ಮಾಸ್ ಟೀಸರ್ ರಿಲೀಸ್

    ಪ್ರಮೋದ್-ರೋಹಿತ್ ಕಾಂಬಿನೇಷನ್ ‘ರಕ್ತಾಕ್ಷ’ ಸಿನಿಮಾದ ಮಾಸ್ ಟೀಸರ್ ರಿಲೀಸ್

    ರಂಭದಿಂದಲೂ ನಾನಾ ಬಗೆಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿರುವ ರಕ್ತಾಕ್ಷ (Raktaksha) ಸಿನಿಮಾದ ಸಾಹಸಮಯ ಟೀಸರ್ (Teaser) ರಿಲೀಸ್ ಆಗಿದೆ. ಪಂಚಿಂಗ್ ಡೈಲಾಗ್ ಹೊಡೆಯುತ್ತಾ ನಾಯಕ ರೋಹಿತ್ ಭರ್ಜರಿಯಾಗಿ ಎಂಟ್ರಿ ಕೊಟ್ಟಿದ್ದಾರೆ.  ಸಿಕ್ಸ್ ಪ್ಯಾಕ್ ಲುಕ್ ನಲ್ಲಿ ರಗಡ್ ಆಗಿ ಅಬ್ಬರಿಸಿರುವ ಅವರು ಪ್ರಮೋದ್ ಶೆಟ್ಟಿ (Pramod Shetty) ಎದುರು ತೊಡೆ ತಟ್ಟಿ ಅಬ್ಬರಿಸಿದ್ದಾರೆ‌. ಕಿಲ್ಲಿಂಗ್ ಲುಕ್ ಮೂಲಕವೇ ಗಮನಸೆಳೆದಿರುವ ರೋಹಿತ್ ಕನ್ನಡ ಚಿತ್ರರಂಗದ ಭರವಸೆ ನಾಯಕ ಎನಿಸಿಕೊಂಡಿದ್ದಾರೆ. ಟೀಸರ್ ಪ್ರಾಮಿಸಿಂಗ್ ಎನಿಸಿದ್ದು, ಧೀರೇಂದ್ರ ಡಾಸ್ ಸಂಗೀತ ಸಖತ್ ಕಿಕ್ ಕೊಡುತ್ತಿದೆ.

    ಮಾಡೆಲಿಂಗ್ ಲೋಕದಲ್ಲಿ ಛಾಪು ಮೂಡಿಸಿರುವ ರೋಹಿತ್ (Rohit) ರಕ್ತಾಕ್ಷ ಸಿನಿಮಾ ಮೂಲಕ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ತಮ್ಮದೇ ಸಾಯಿ ಪ್ರೊಡಕ್ಷನ್ ಹೌಸ್ ನಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.  ರಕ್ತಾಕ್ಷ ಸಿನಿಮಾವನ್ನು ವಾಸುದೇವ ಎಸ್.ಎನ್ ನಿರ್ದೇಶನ ಮಾಡುತ್ತಿದ್ದಾರೆ. ಅಂದ್ಹಾಗೆ ವಾಸುದೇವ್ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಸಿನಿಮಾವಿದು. ರೋಹಿತ್ ಜೊತೆ ಒಂದಷ್ಟು ಉತ್ಸಾಹಿ ಪ್ರತಿಭೆಗಳು ಸೇರಿ ‘ರಕ್ತಾಕ್ಷ’ ಸಿನಿಮಾಗೆ ದುಡಿದಿದ್ದಾರೆ. ಇದನ್ನೂ ಓದಿ:ಕಮ್‌ಬ್ಯಾಕ್ ಆಗ್ತಿರೋ ಅನುಷ್ಕಾ ಶೆಟ್ಟಿ ಸಿನಿಮಾದಿಂದ ದೂರವಾಗಿದ್ಯಾಕೆ? ಇಲ್ಲಿದೆ ಅಪ್‌ಡೇಟ್

    ಚಿತ್ರಕ್ಕೆ ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಧೀರೇಂದ್ರ ಡಾಸ್ ಸಂಗೀತ ನೀಡಿದ್ದಾರೆ. ಕೆಜಿಎಫ್ ನಟಿಸಿರುವ ರೂಪಾ ರಾಯಪ್ಪ (Rupa Rayappa), ಅರ್ಚನಾ ಕೊಟ್ಟಿಗೆ, ರಚನಾ ದಶರತ್,  ಪ್ರಭು, ವಿಶ್ವ, ಭದ್ರಿ ನಾರಾಯಣ, ಗುರುದೇವ  ನಾಗರಾಜ, ಬಸವರಾಜ ಆದಾಪುರ ನಟಿಸಿದ್ದಾರೆ. ಖಳನಾಯಕ ಪಾತ್ರದಲ್ಲಿ ನಟ ಪ್ರಮೋದಶೆಟ್ಟಿ ಅಭಿನಯಿಸಿದ್ದಾರೆ.

     

    ಈಗಾಗಲೇ ವಸಿಷ್ಠ ಸಿಂಹ ಅವರು ಹಾಡಿರುವ ರಕ್ತಾಕ್ಷ ಟೈಟಲ್ ಟ್ರ್ಯಾಕ್ ಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಸದ್ಯ ಟೀಸರ್ ಮೂಲಕ ರಕ್ತಾಕ್ಷ ಸಿನಿಮಾ ನಿರೀಕ್ಷೆ ದುಪ್ಪಟ್ಟು ಮಾಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೂರ್ಯ ಹುಟ್ಟುಹಬ್ಬಕ್ಕೆ ‘ಕಂಗುವ’ ತಂಡದಿಂದ ಭರ್ಜರಿ ಗಿಫ್ಟ್

    ಸೂರ್ಯ ಹುಟ್ಟುಹಬ್ಬಕ್ಕೆ ‘ಕಂಗುವ’ ತಂಡದಿಂದ ಭರ್ಜರಿ ಗಿಫ್ಟ್

    ಕಾಲಿವುಡ್ ನ ಜನಪ್ರಿಯ ನಟ ಸೂರ್ಯ (Surya) ನಿನ್ನೆ ಹುಟ್ಟು ಹಬ್ಬ (Birthday) ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ‘ಕಂಗುವ’ (Kanguva) ಚಿತ್ರತಂಡವು ಟೀಸರ್ (Teaser) ಬಿಡುಗಡೆ ಮಾಡುವ ಮೂಲಕ ಸೂರ್ಯ ಅವರಿಗೆ ಶುಭಾಶಯಗಳನ್ನು ತಿಳಿಸಿದೆ.

    ಕಳೆದ 16 ವರ್ಷಗಳಲ್ಲಿ ‘ಸಿಂಗಂ’ ಸರಣಿ, ‘ಪರುತ್ತಿವೀರನ್’, ‘ಸಿರುತ್ತೈ’, ‘ಕೊಂಬನ್’, ‘ನಾನ್ ಮಹಾನ್ ಅಲ್ಲ’, ‘ಮದರಾಸ್’, ‘ಟೆಡ್ಡಿ’, ‘ಪತ್ತು ತಾಲ’ ಮುಂತಾದ ಜನಪ್ರಿಯ ಚಿತ್ರಗಳನ್ನು ನಿರ್ಮಿಸಿರುವ ಕೆ.ಇ. ಜ್ಞಾನವೇಲ್ ರಾಜ, ‘ಕಂಗುವ’ ಚಿತ್ರವನ್ನು ತಮ್ಮ ಸ್ಟೂಡಿಯೋ ಗ್ರೀನ್ ಸಂಸ್ಥೆಯಡಿ ನಿರ್ಮಿಸುತ್ತಿದ್ದಾರೆ. ಈಗಾಗಲೇ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳನ್ನು ಹುಟ್ಟುಹಾಕಿರುವ ಈ ಚಿತ್ರವನ್ನು ಶಿವ ನಿರ್ದೇಶನ ಮಾಡುತ್ತಿದ್ದಾರೆ.

    ದೊಡ್ಡ ಬಜೆಟ್ ನಲ್ಲಿ, ಅತ್ಯುನ್ನತ ತಂತ್ರಜ್ಞಾನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಏಕಕಾಲಕ್ಕೆ 10 ಭಾಷೆಗಳಲ್ಲಿ, 3 ಡಿಯಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಈಗ ಬಿಡುಗಡೆಯಾಗಿರುವ ಟೀಸರ್ ತಮಿಳು, ತೆಲುಗು, ಮಲಯಾಳಂ, ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಸೇರಿದಂತೆ ಆರು ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಸದ್ಯದಲ್ಲೇ ಇನ್ನೂ ನಾಲ್ಕು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

    ‘ಕಂಗುವ’ ಚಿತ್ರದಲ್ಲಿ ಮಾನವೀಯ ಸಂಬಂಧಗಳಷ್ಟೇ ಅಲ್ಲ, ಇದುವರೆಗೂ ನೋಡಿರದ ಅದ್ಭುತ ಸಾಹಸ ದೃಶ್ಯಗಳಿವೆ. ಎರಡು ನಿಮಿಷ ಅವಧಿಯ ಈ ಟೀಸರ್ ತನ್ನ ಅದ್ಭುತ ಗ್ರಾಫಿಕ್ಸ್, ದೃಶ್ಯಗಳ ಮೂಲಕ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಟೀಸರ್ ನ ಕೊನೆಯಲ್ಲಿ ಸೂರ್ಯ ಕಾಣಿಸಿಕೊಳ್ಳಲಿದ್ದು, ಅವರ ಲುಕ್ ಪ್ರೇಕ್ಷಕರನ್ನು ಆಕರ್ಷಿಸಿದೆ.

    ‘ಕಂಗುವ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಚಿತ್ರ ಮೂಡಿಬರುತ್ತಿರುವ ರೀತಿಗೆ ಚಿತ್ರತಂಡ ಖುಷಿಯಾಗಿದೆ. ಸದ್ಯದಲ್ಲೇ ಚಿತ್ರೀಕರಣ ಮುಗಿಯಲಿದ್ದು, 2024ರಲ್ಲಿ ಚಿತ್ರ ಜಗತ್ತಿನಾದ್ಯಂತ ದಾಖಲೆಯ 10 ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಇದನ್ನೂ ಓದಿ:ಸುದೀಪ್-ಕುಮಾರ್ ಕಾಲ್‌ಶೀಟ್ ಕದನದ ನಡುವೆ ಚಂದ್ರಚೂಡ್‌ಗೆ ಸೂರಪ್ಪ ಬಾಬು ಕ್ಲಾಸ್

    ಈ ಚಿತ್ರದಲ್ಲಿ ಸೂರ್ಯ ಜೊತೆಗೆ ಬೇರೆ ಭಾಷೆಗಳ ಪ್ರಮುಖ ಪಾತ್ರಧಾರಿಗಳು ಸಹ ಕಾಣಿಸಿಕೊಳ್ಳುತ್ತಿದ್ದು, ಬಾಲಿವುಡ್‌ ನ ಜನಪ್ರಿಯ ನಟಿ ದಿಶಾ ಪಠಾಣಿ (Disha Patani) ಈ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ‘ರಾಕ್ ಸ್ಟಾರ್’ ಎಂದೇ ಜನಪ್ರಿಯರಾಗಿರುವ ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜನೆ, ವೆಟ್ರಿ ಪಳನಿಸ್ವಾಮಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

     

    ಬೇರೆ ಭಾಷೆಗಳ ಜನಪ್ರಿಯ ಚಿತ್ರ ವಿತರಣಾ ಸಂಸ್ಥೆಗಳು ‘ಕಂಗುವ’ ಚಿತ್ರತಂಡದ ಜೊತೆಗೆ ಕೈಜೋಡಿಸಿದ್ದು, ಸದ್ಯದಲ್ಲೇ ಈ ಸಹಯೋಗದ ಬಗ್ಗೆ ಹೆಚ್ಚಿನ ಮಾಹಿತಿಗಳು ಹೊರಬೀಳಲಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಯರ ಸನ್ನಿಧಿಯಲ್ಲಿ ‘ಉಸಿರೇ ಉಸಿರೇ’ ಚಿತ್ರದ ಟೀಸರ್ ರಿಲೀಸ್

    ರಾಯರ ಸನ್ನಿಧಿಯಲ್ಲಿ ‘ಉಸಿರೇ ಉಸಿರೇ’ ಚಿತ್ರದ ಟೀಸರ್ ರಿಲೀಸ್

    ಸಿರೇ.. ಉಸಿರೇ… (Usire Usire) ಸದ್ಯ ಹಲವಾರು ವಿಶೇಷತೆಗಳಿಂದ  ಸದ್ದು ಮಾಡುತ್ತಾ ಪ್ರೇಕ್ಷಕರ ಕುತೂಹಲ ಮುಡಿಸುತ್ತಿರುವ ಚಿತ್ರ. ಎನ್.ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ ಸಿ.ಎಂ. ವಿಜಯ್ ನಿರ್ದೇಶನದ ಈ ಚಿತ್ರಕ್ಕೆ ಕಿಚ್ಚ ಸುದೀಪ್ (Sudeep) ಎಂಟ್ರಿಯಾಗುತ್ತಲೇ ಚಿತ್ರಕ್ಕೆ ಹೈ ವೋಲ್ಟೇಜ್ ಸಿಕ್ಕಿತ್ತು. ಈಗಾಗಲೇ ಉಸಿರೇ ಉಸಿರೇ ಚಿತ್ರದ ಟೀಸರ್ (Teaser) ಒಂದನ್ನು ಬಿಡುಗಡೆ ಮಾಡಿ ಪ್ರೇಕ್ಷಕರ ಹೃದಯ ಬಡಿತವನ್ನು ಹೆಚ್ಚು ಮಾಡಿದೆ.

    ಇತ್ತೀಚೆಗೆ ಈ ಚಿತ್ರದ ಟೀಸರ್ ಬಳ್ಳಾರಿ ಶ್ರೀ ರೇಣುಕಾ ಎಲ್ಲಮ್ಮ ಜಾತ್ರೆಯಲ್ಲಿ‌‌ ಸುಮಾರು ಹತ್ತು ಸಾವಿರಕ್ಕೂ ಅಧಿಕ ಜನರ ಸಮ್ಮುಖದಲ್ಲಿ ಸದ್ಗುರು ಜುಮಾರಿ ತಾತಾಯ್ಯ ಅವರು ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಅಂದು ಸಂಜೆ ಮಂತ್ರಾಲಯದ ಗುರು ಸಾರ್ವಭೌಮರ ಸನ್ನಿಧಿಯಲ್ಲಿ ಸುಬುಧೇಂದ್ರ ತೀರ್ಥರು ಟೀಸರ್ ಬಿಡುಗಡೆ ಮಾಡಿ ಆಶೀರ್ವಾದಿಸಿದ್ದಾರೆ. ನಾಯಕ ಬಿಗ್ ಬಾಸ್ ಖ್ಯಾತಿಯ ರಾಜೀವ್ (Rajeev), ನಾಯಕಿ ಶ್ರೀಜಿತ ಹಾಗೂ ನಿರ್ದೇಶಕ ಸಿ.ಎಂ.ವಿಜಯ್ ಮುಂತಾದ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು. ಟೀಸರ್ ಬಿಡುಗಡೆಯಾಗಿ ಎರಡು ದಿನಗಳಲ್ಲಿ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿ, ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರಾಧಿಕಾ ರಾವ್

    ಈಗಾಗಲೇ ಟೀಸರ್ ನಲ್ಲಿರುವ ಸಂಗೀತ, ಹೀರೊ ಎಂಟ್ರಿ ಆಲಿ ಬ್ರಹ್ಮನಂದಂ ಕಾಮಿಡಿ ದೇವರಾಜ್ ಅವರ ಪಾತ್ರ ಹಾಗೂ ಸಂಭಾಷಣೆ ಪ್ರೇಕ್ಷಕರ ಮನಸನ್ನು ದೋಚಿ ಒಂದೇ ದಿನದಲ್ಲಿ ಒಂದು ಮಿಲಿಯನ್ ಗೂ ಹೆಚ್ಚು ವೀಕ್ಷಣೆ ಪಡೆದಿದೆ.  ಬಿಗ್ ಬಾಸ್ ಖ್ಯಾತಿಯ ರಾಜೀವ್ (Rajeev) ಈ ಚಿತ್ರದ ನಾಯಕ. ಶ್ರೀಜಿತ  (Sreejith) ನಾಯಕಿ.

    ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಆಲಿ, ಬ್ರಹ್ಮಾನಂದಂ,ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಹಾಗೂ ಕಿಚ್ಚ ಸುದೀಪ ಮುಂತಾದವರು ತಾರಾಬಳಗದಲ್ಲಿದ್ದಾರೆ.  ಸಿ.ಎಂ.ವಿಜಯ್ ನಿರ್ದೇಶನದ ಈ ಚಿತ್ರಕ್ಕೆ  ಮನು ಬಿ ಕೆ ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ ವಿವೇಕ್ ಚಕ್ರವರ್ತಿಯ ಸಂಗೀತವಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಿವಣ್ಣ ಹುಟ್ಟುಹಬ್ಬ: ನಿವಾಸದ ಮುಂದೆ ಅಭಿಮಾನಿಗಳ ಸಂಭ್ರಮ

    ಶಿವಣ್ಣ ಹುಟ್ಟುಹಬ್ಬ: ನಿವಾಸದ ಮುಂದೆ ಅಭಿಮಾನಿಗಳ ಸಂಭ್ರಮ

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಮ್ಮ ಹುಟ್ಟು ಹಬ್ಬವನ್ನು (Birthday) ಇಂದು ಆಚರಿಸಿಕೊಂಡರು. ರಾತ್ರಿಯಿಂದಲೇ ಶಿವಣ್ಣ ಅಭಿಮಾನಿಗಳು ಅವರ ಮನೆ ಮುಂದೆ ಜಮಾಯಿಸಿದ್ದರು. ಅಭಿಮಾನಿಗಳು ತಂದಿದ್ದ ಕೇಕ್ ಕತ್ತರಿಸಿ ಅವರೊಂದಿಗೆ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು.  ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar)  ಅವರ ನಿಧನದ ಕಾರಣದಿಂದ ಶಿವಣ್ಣ ಕಳೆದ ವರ್ಷ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಈ ವರ್ಷ ಅಭಿಮಾನಿಗಳ ಜೊತೆ ಅದ್ದೂರಿಯಾಗಿ ಬರ್ತ್‌ಡೇಯನ್ನ ಆಚರಿಸಿಕೊಂಡಿದ್ದಾರೆ. ಫ್ಯಾನ್ಸ್‌ಗಾಗಿ ತಮ್ಮ ಸಮಯವನ್ನ ಮೀಸಲಿಡುತ್ತಿದ್ದಾರೆ. ಇಂದು ಏನೆಲ್ಲಾ ಸರ್ಪ್ರೈಸ್ ಇರಲಿದೆ ಇಲ್ಲಿದೆ ಡಿಟೈಲ್ಸ್.

    ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ಅವರು ಜೂನ್ 12ರಂದು 61ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ‘ಆನಂದ’ ಸಿನಿಮಾದಿಂದ ವೃತ್ತಿ ಬದುಕು ಆರಂಭಿಸಿದ ನಟ, 100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. 60ರ ವಯಸ್ಸಿನಲ್ಲೂ ಯಂಗ್ & ಎನರ್ಜಿಟಿಕ್ ಆಗಿ ಶಿವಣ್ಣ ಕಾಣಿಸಿಕೊಳ್ಳುತ್ತಾರೆ.

    ಇದೀಗ ಶಿವಣ್ಣ ಹುಟ್ಟುಹಬ್ಬಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಶಿವರಾಜ್ ಕುಮಾರ್ ಬರ್ತಡೇಗೆ ಫ್ಯಾನ್ಸ್ ಕಡೆಯಿಂದ ಸಿದ್ಧತೆ ನಡೆಯುತ್ತಿದೆ. ರಾತ್ರಿ 11:30ಕ್ಕೆ ನಾಗವಾರದ ಮನೆಯಲ್ಲಿ ಆಪ್ತರ ಜೊತೆ ಆಚರಣೆ ಶಿವಣ್ಣ, ಬರ್ತ್‌ಡೇ ಸೆಲೆಬ್ರೆಟ್ ಮಾಡಿದ್ದಾರೆ. ಬೆಳಗ್ಗೆ 8ರಿಂದ 10ಗಂಟೆಯವರೆಗೆ ಅಭಿಮಾನಿಗಳಿಗೆ ಸಮಯ ಮೀಸಲಿಟ್ಟಿದ್ದಾರೆ. ಬಳಿಕ 10:30ಕ್ಕೆ ಡಾ.ರಾಜ್‌ಕುಮಾರ್ ಪುಣ್ಯಭೂಮಿಯಲ್ಲಿ ಪೂಜೆ ಇರಲಿದೆ. ಇದಾದ ನಂತರ ಶಿವಣ್ಣ ನಟನೆಯ ಘೋಸ್ಟ್ ಸಿನಿಮಾದ ಟೀಸರ್ 11:45ಕ್ಕೆ ಸಂತೋಷ್ ಚಿತ್ರಮಂದಿರದಲ್ಲಿ ಲಾಂಚ್ ಆಗಲಿದೆ. ಮತ್ತೆ ಸಂಜೆ ನಾಗವಾರದ ಮನೆಯಲ್ಲಿ ಅಭಿಮಾನಿಗಳ ಜೊತೆ ಸಂಭ್ರಮಾಚರಣೆ ಮಾಡಲಿದ್ದಾರೆ. ಇದನ್ನೂ ಓದಿ:ಸ್ಟೈಲೀಶ್‌ ಆಗಿ ಕಾಣಿಸಿಕೊಂಡ ‘ಅಮೃತಧಾರೆ’ ಸಾರಾ- ಕಾವ್ಯಾ ಗೌಡ

    ಶಿವರಾಜ್‌ಕುಮಾರ್ ಅವರು ಕನ್ನಡ ಸಿನಿಮಾಗಳ ಜೊತೆ ಪರಭಾಷೆಯ ಸಿನಿಮಾಗಳಲ್ಲೂ ಮಿಂಚ್ತಿದ್ದಾರೆ. ಕೈತುಂಬಾ ಸಿನಿಮಾಗಳಿವೆ. ಸದ್ಯ ‘ಘೋಸ್ಟ್’ ಸಿನಿಮಾದ ಲುಕ್‌ನಿಂದ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ. ಬಿಗ್ ಡ್ಯಾಡಿ ಎಂಬ ಪೋಸ್ಟರ್ ಲುಕ್‌ನಿಂದ ಶಿವಣ್ಣ ಕಿಕ್ ಕೊಟ್ಟಿದ್ದಾರೆ. ಅದರ ಜೊತೆಗೆ ಈ ಬಿಗ್ ಡ್ಯಾಡಿ ಅಂದರೆ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಕೌತುಕ ಮೂಡುವ ಹಾಗೇ ಮಾಡಿದ್ದಾರೆ. ಶಿವಣ್ಣ ಬರ್ತ್‌ಡೇ ಸಂಭ್ರಮವನ್ನು ಮತ್ತಷ್ಟು ಹೆಚ್ಚು ಮಾಡಲು ‘ಘೋಸ್ಟ್’ (Ghost Film) ಸಿನಿಮಾ ತಂಡದಿಂದ ಬಿಗ್ ಡ್ಯಾಡಿ ವೀಡಿಯೋ ರಿಲೀಸ್ ಆಗಲಿದೆ. ಅಂದು ಬೆಳಗ್ಗೆ 11:45ಕ್ಕೆ ಬಿಗ್ ಡ್ಯಾಡಿ ಪರಿಚಯ ಆಗಲಿದೆ. ಈ ಮೂಲಕ ಬಿಗ್ ಡ್ಯಾಡಿ ಅಂದರೆ ಏನು ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ.

     

    ಈ ಪೋಸ್ಟರ್‌ನಲ್ಲಿ ಶಿವಣ್ಣ ಅವರು ರೈಫಲ್ ಹಿಡಿದು ನಿಂತಿದ್ದಾರೆ. ಈ ಸಿನಿಮಾ ಸಖತ್ ಮಾಸ್ ಆಗಿರಲಿದೆ ಎಂಬುದಕ್ಕೆ ಸುಳಿವು ಸಿಕ್ಕಿದೆ. ನಿರ್ದೇಶಕ ಎಂ.ಜಿ. ಶ್ರೀನಿವಾಸ್ ಅವರ ಬರ್ತ್‌ಡೇಯಂದು ಪೋಸ್ಟರ್ ರಿವೀಲ್ ಆಗಿರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಕನ್ನಡ ಚಿತ್ರರಂಗದಲ್ಲಿ ಶ್ರೀನಿ ಅವರು ನಟನಾಗಿ, ನಿರ್ದೇಶಕನಾಗಿ ಹೆಸರು ಮಾಡಿದ್ದಾರೆ. ‘ಘೋಸ್ಟ್’ ಚಿತ್ರದಲ್ಲಿ ಅವರು ಶಿವಣ್ಣ ಜೊತೆ ಕೈ ಜೋಡಿಸಿರುವುದರಿಂದ ಫ್ಯಾನ್ಸ್‌ಗೆ ನಿರೀಕ್ಷೆ ಮೂಡಿಸಿದೆ. ಘೋಸ್ಟ್ ಸಿನಿಮಾದ ಜೊತೆ ಶಿವಣ್ಣ ನಟಿಸಿರುವ ಪರಭಾಷಾ ಸಿನಿಮಾಗಳ ಲುಕ್ ಕೂಡ ರಿವೀಲ್ ಆಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಂದು ಕೃಷ್ಣ, ಇಂದು ಶಿವ : ಓ ಮೈ ಗಾಡ್ ಅಂದ ಅಕ್ಷಯ್ ಕುಮಾರ್

    ಅಂದು ಕೃಷ್ಣ, ಇಂದು ಶಿವ : ಓ ಮೈ ಗಾಡ್ ಅಂದ ಅಕ್ಷಯ್ ಕುಮಾರ್

    ಕ್ಷಯ್ ಕುಮಾರ್ ನಟನೆಯ ‘ಓ ಮೈ ಗಾಡ್ 2’ (Oh My God 2) ಸಿನಿಮಾದ ಟೀಸರ್ ಇಂದು ರಿಲೀಸ್ ಆಗಿದೆ. ಸಿನಿಮಾದಲ್ಲಿನ ಅಕ್ಷಯ್ (Akshay Kumar) ಅವತಾರಕ್ಕೆ ಅಭಿಮಾನಿಗಳು ಜೈ ಹೋ ಎಂದಿದ್ದಾರೆ. 2012ರಲ್ಲಿ ಈ ಸಿನಿಮಾದ ಮೊದಲ ಭಾಗ ಬಿಡುಗಡೆಯಾಗಿತ್ತು. ಇದೀಗ ಪಾರ್ಟ್ 2 ಸಿದ್ಧವಾಗಿದ್ದು ಅಕ್ಷಯ್ ಪಾತ್ರ ಕೂಡ ಬದಲಾಗಿದೆ.

    ಹತ್ತು ವರ್ಷಗಳ ಹಿಂದೆ ರಿಲೀಸ್ ಆಗಿದ್ದ ಓ ಮೈ ಗಾಡ್ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಅವರು ಕೃಷ್ಣನಾಗಿ (Krishna) ಕಾಣಿಸಿಕೊಂಡಿದ್ದರು. ಈ ಬಾರಿ ಅವರು ಶಿವನ (Shiva) ಅವತಾರವೆತ್ತಿದ್ದಾರೆ. ಮೊನ್ನೆಯಷ್ಟೇ ಈ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿತ್ತು. ಅದನ್ನು ಅಕ್ಷಯ್ ಅಭಿಮಾನಿಗಳು ಅಪಾರವಾಗಿ ಮೆಚ್ಚಿದ್ದರು. ಇವತ್ತಿನ ಟೀಸರ್ ಅನ್ನು ಅಷ್ಟೇ ಮೆಚ್ಚಿಕೊಂಡಿದ್ದಾರೆ. ಇದನ್ನೂ ಓದಿ:ಅಮೆರಿಕಾದಲ್ಲಿ ಅವಳಿ ಮಕ್ಕಳಿಗೆ ಕೇಶ ಮುಂಡನ ಮಾಡಿಸಿದ ಪ್ರೀತಿ ಜಿಂಟಾ

    ಹೇಳಿ ಕೇಳಿ ಇದೊಂದು ಕಾಮಿಡಿ ಸಿನಿಮಾ. ಶಿವನ ರೂಪದಲ್ಲಿ ಬಂದಿರುವ ಅಕ್ಷಯ್, ಯಾವೆಲ್ಲ ಲೀಲೆಗಳನ್ನು ಪರದೆಯ ಮೇಲೆ ಆಡುತ್ತಾರೋ ಕಾದು ನೋಡಬೇಕು. ಟೀಸರ್ ನಲ್ಲಿಯೂ ಹಲವು ಕಾಮಿಡಿ ಅಂಶಗಳು ಇದ್ದು, ಇಡೀ ಸಿನಿಮಾ ಹಾಸ್ಯದ ರಸದೌತಣವನ್ನು ನೀಡುವುದು ಪಕ್ಕಾ ಅನ್ನುವಂತಿದೆ ರಿಲೀಸ್ ಆದ ಟೀಸರ್.

     

    ಟೀಸರ್ ನೋಡಿ ಕೆಲವರು ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗದಂತೆ ಎಚ್ಚವಹಿಸಿ ಎಂದು ಸಲಹೆ ನೀಡಿದರೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬಂದರೆ ಬೈಕಾಟ್ ಮಾಡುವುದಾಗಿಯೂ ಕೆಲವರು ಕಾಮೆಂಟ್ ಮಾಡಿದ್ದಾರೆ. ಅಂದಹಾಗೆ ಅಕ್ಷಯ್ ಕುಮಾರ್ ಜೊತೆ ಈ ಸಿನಿಮಾದಲ್ಲಿ ಯಾಮಿ ಗೌತಮ್, ಪಂಕಜ್ ತ್ರಿಪಾಠಿ ಸೇರಿದಂತೆ ಹಲವರು ತಾರಾಗಣದಲ್ಲಿ ಇದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಿವರಾಜ್ ಕುಮಾರ್ ಹುಟ್ಟ ಹಬ್ಬಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಂಡ ‘ಘೋಸ್ಟ್’ ಟೀಮ್

    ಶಿವರಾಜ್ ಕುಮಾರ್ ಹುಟ್ಟ ಹಬ್ಬಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಂಡ ‘ಘೋಸ್ಟ್’ ಟೀಮ್

    ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ಅವರ ಹುಟ್ಟು ಹಬ್ಬವನ್ನು (Birthday) ಸಂಭ್ರಮದಿಂದ ಆಚರಿಸಲು ಘೋಸ್ಟ್ ಚಿತ್ರತಂಡ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಅವರು ಹುಟ್ಟ ಹಬ್ಬದ ಎರಡು ದಿನ ಮುಂಚೆಯೇ ಅಭಿಮಾನಿಗಳು ಮತ್ತು ಚಿತ್ರತಂಡ ಸರ್ವ ರೀತಿಯ ಸಿದ್ಧತೆ ನಡೆಸಿದೆ. ಜುಲೈ ೧೨ ರಂದು ಸೆಂಚುರಿಸ್ಟಾರ್ ಜನುಮದಿನ. ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ಕಟೌಟ್ ಹಾಕಲಾಗಿದೆ. ಅಭಿಮಾನಿಗಳ ಸಂಭ್ರಮಾಚರಣೆ 2 ಕಟೌಟ್ ಗಳು ಸಾಕ್ಷಿಯಾಗಲಿವೆ.

    ಈಗಾಗಲೇ ಘೋಸ್ಟ್ ಚಿತ್ರದ ಲುಕ್ ನಲ್ಲಿ ಕಟೌಟ್ ರೆಡಿಯಾಗಿದ್ದು, ಜುಲೈ 12ಕ್ಕೆ ಶಿವರಾಜ್ ಕುಮಾರ್ ಸಿನಿಮಾ ಹಾಡುಗಳನ್ನು ಸಂತೋಷ್ ಚಿತ್ರಮಂದಿರದಲ್ಲಿ ಹಾಕಲಾಗುತ್ತದೆ ಎಂದು ತಿಳಿದು ಬಂದಿದೆ. ಅಲ್ಲದೇ ಅದೇ ಚಿತ್ರಮಂದಿರದಲ್ಲೇ ಘೋಸ್ಟ್ ಸಿನಿಮಾ ಟೀಸರ್ (Teaser) ಕೂಡ ರಿಲೀಸ್ ಆಗಿ ಪ್ರದರ್ಶನ ಆಗಲಿದೆ.  ಈಗಾಗಲೇ ಶಿವರಾಜ್‌ಕುಮಾರ್ ‘ಘೋಸ್ಟ್’ (Ghost) ಸಿನಿಮಾದ ಬಿಗ್ ಡ್ಯಾಡಿ ಪೋಸ್ಟರ್ ಮೂಲಕ ಗಮನ ಸೆಳೆಯುತ್ತಿದ್ದಾರೆ. ಘೋಸ್ಟ್ ಸಿನಿಮಾ ನಿರ್ದೇಶಕ ಶ್ರೀನಿ (ಜುಲೈ 9) ಅವರ ಹುಟ್ಟುಹಬ್ಬದಂದು ಶಿವಣ್ಣ ಫ್ಯಾನ್ಸ್ ಹ್ಯಾಪಿ ನ್ಯೂಸ್‌ವೊಂದನ್ನ ಹಂಚಿಕೊಂಡಿದ್ದಾರೆ.

    ಶಿವರಾಜ್‌ಕುಮಾರ್ (Shivarajkumar) ಅವರು ಕನ್ನಡ ಸಿನಿಮಾಗಳ ಜೊತೆ ಪರಭಾಷೆಯ ಸಿನಿಮಾಗಳಲ್ಲೂ ಮಿಂಚ್ತಿದ್ದಾರೆ. ಕೈತುಂಬಾ ಸಿನಿಮಾಗಳಿವೆ. ಸದ್ಯ ಘೋಸ್ಟ್ ಸಿನಿಮಾದ ಲುಕ್‌ನಿಂದ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ. ಬಿಗ್ ಡ್ಯಾಡಿ ಎಂಬ ಪೋಸ್ಟರ್ ಲುಕ್‌ನಿಂದ ಶಿವಣ್ಣ ಕಿಕ್ ಕೊಡ್ತಿದ್ದಾರೆ. ಅದರ ಜೊತೆಗೆ ಈ ಬಿಗ್ ಡ್ಯಾಡಿ ಅಂದರೆ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಕೌತುಕ ಮೂಡುವ ಹಾಗೇ ಮಾಡಿದ್ದಾರೆ. ಇದನ್ನೂ ಓದಿ:‘ರಂಗಬಲಿ’ ಸಕ್ಸಸ್ ಮೀಟ್‌ನಿಂದ ನಾಗ ಶೌರ್ಯ ವಾಕ್ ಔಟ್

    ಇದೇ ಜುಲೈ 12ರಂದು ಎನರ್ಜಿಟಿಕ್ ಹೀರೋ ಶಿವಣ್ಣ ಅವರ ಜನ್ಮದಿನ. ಪ್ರತಿ ವರ್ಷದಂತೆ ಈ ಬಾರಿ ಕೂಡ ಅಭಿಮಾನಿಗಳು ಅದ್ದೂರಿಯಾಗಿ ಹುಟ್ಟುಹಬ್ಬವನ್ನ ಸೆಲೆಬ್ರೇಟ್ ಮಾಡಲಿದ್ದಾರೆ. ಈ ಸಂಭ್ರಮವನ್ನು ಮತ್ತಷ್ಟು ಹೆಚ್ಚು ಮಾಡಲು ‘ಘೋಸ್ಟ್’ ಸಿನಿಮಾ ತಂಡದಿಂದ ‘ಬಿಗ್ ಡ್ಯಾಡಿ’ ವೀಡಿಯೋ ರಿಲೀಸ್ ಆಗಲಿದೆ. ಅಂದು ಬೆಳಗ್ಗೆ 11.45ಕ್ಕೆ ಬಿಗ್ ಡ್ಯಾಡಿ ಪರಿಚಯ ಆಗಲಿದೆ. ಈ ಮೂಲಕ ಬಿಗ್ ಡ್ಯಾಡಿ ಅಂದರೆ ಏನು ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ.

     

    ಈ ಪೋಸ್ಟರ್‌ನಲ್ಲಿ ಶಿವಣ್ಣ ಅವರು ರೈಫಲ್ ಹಿಡಿದು ನಿಂತಿದ್ದಾರೆ. ಈ ಸಿನಿಮಾ ಸಖತ್ ಮಾಸ್ ಆಗಿರಲಿದೆ ಎಂಬುದಕ್ಕೆ ಸುಳಿವು ಸಿಕ್ಕಿದೆ. ನಿರ್ದೇಶಕ ಎಂ.ಜಿ. ಶ್ರೀನಿವಾಸ್ (Director Shrinivas) ಅವರ ಬರ್ತ್‌ಡೇಯಂದು ಪೋಸ್ಟರ್ ರಿವೀಲ್ ಆಗಿರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಕನ್ನಡ ಚಿತ್ರರಂಗದಲ್ಲಿ ಶ್ರೀನಿ ಅವರು ನಟನಾಗಿ, ನಿರ್ದೇಶಕನಾಗಿ ಹೆಸರು ಮಾಡಿದ್ದಾರೆ. ‘ಘೋಸ್ಟ್’ ಚಿತ್ರದಲ್ಲಿ ಅವರು ಶಿವಣ್ಣ ಜೊತೆ ಕೈ ಜೋಡಿಸಿರುವುದರಿಂದ ಹೈಪ್ ಹೆಚ್ಚಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]