Tag: teaser

  • ಕಿರಣ್ ರಾಜ್ ಹುಟ್ಟುಹಬ್ಬಕ್ಕೆ ‘ರಾನಿ’ ಟೀಸರ್

    ಕಿರಣ್ ರಾಜ್ ಹುಟ್ಟುಹಬ್ಬಕ್ಕೆ ‘ರಾನಿ’ ಟೀಸರ್

    ಟೈಟಲ್ ಹಾಗೂ ಪೋಸ್ಟರ್ ನಿಂದ ಸಿನಿ ಪ್ರೇಕ್ಷರಲ್ಲಿ ಕುತೂಹಲ ಹುಟ್ಟಿಸಿದ ‘ರಾನಿ’ (Rani) ಸಿನಿಮಾದ ಟೀಸರ್ (Teaser) ನಾಯಕ ನಟ ಕಿರಣ್ ರಾಜ್ (Kiran Raj) ಹುಟ್ಟುಹಬ್ಬದ ದಿನ ಜುಲೈ 5 ರಂದು ಬಿಡುಗಡೆಯಾಗುತ್ತಿದೆ. ರಾನಿ  ಚಿತ್ರದ​ ನಾಯಕ ಕಿರಣ್ ರಾಜ್ ದುಬೈಗೆ ಹೋಗಿ 13 ಸಾವಿರ  ಅಡಿ ಎತ್ತರದಿಂದ ಸ್ಕೈ ಡೈವ್ ಮಾಡಿ ರಾನಿ ಚಿತ್ರದ ಟೈಟಲ್ ಅನಾವರಣಗೊಳಿಸಿದ್ದರು. ಅವರ ಈ ಸಾಹಸಕ್ಕೆ ಇಡೀ ಚಿತ್ರರಂಗವೆ ಮೆಚ್ಚುಗೆ ವ್ಯಕ್ತಪಡಿಸಿತ್ತು. ನಂತರ ಬಿಡುಗಡೆಯಾದ ಪೋಸ್ಟರ್ ಚಿತ್ರದ ಮೇಲಿನ ಕುತೂಹಲ ಇನ್ನಷ್ಟು ಹೆಚ್ಚಿಸಿತ್ತು.

    ಈ ಬಾರಿ ಗಟ್ಟಿ ಕಥೆಯೊಂದಿಗೆ ಆಕ್ಷನ್-ಕಮರ್ಷಿಯಲ್ ಸಿನಿಮಾ ಮಾಡಿದ್ದೇನೆ ಎನ್ನುವ ನಿರ್ದೇಶಕ ಗುರುತೇಜ್ ಶೆಟ್ಟಿ (Gurutej Shetty),  ಇದೊಂದು ಗ್ಯಾಂಗ್ ಸ್ಟರ್ ಸಿನಿಮಾ ಆದರೂ ಕುಟುಂಬ ಸಮೇತ ನೋಡುವಂತಹ ಭಾವನಾತ್ಮಕ ವಿಷಯಗಳು ಚಿತ್ರದಲ್ಲಿದೆ ಎನ್ನುತ್ತಾರೆ. ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಕಿಡಿಕಾರಿದ ನಟ ರಾಜೀವ್ ಖಂಡೇಲ್ವಾಲ್

    ರವಿಶಂಕರ್ ಮೈಕೋ ನಾಗರಾಜ್ ,ಉಗ್ರಂ ರವಿ , ಉಗ್ರಂ ಮಂಜು, ಬಿ. ಸುರೇಶ , ಮಂಡ್ಯ ರಮೇಶ್, ಸುಜಯ್ ಶಾಸ್ತ್ರಿ, ಸೂರ್ಯ ಕುಂದಾಪುರ, ಧರ್ಮಣ್ಣ ಕಡೂರು, ಗಿರೀಶ್ ಹೆಗ್ಡೆ ಹೀಗೆ ಮುಂತಾದ ದೊಡ್ಡ ಕಲಾವಿದರ ದಂಡೇ ಈ ಚಿತ್ರದಲ್ಲಿದೆ.

     

    ಸಮೀಕ್ಷಾ, ಅಪೂರ್ವ, ರಾದ್ಯಾ ಮೂವರು ಈ ಚಿತ್ರದ ನಾಯಕಿಯರು. ಮೂವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಘವೇಂದ್ರ ಬಿ.ಕೋಲಾರ್ ಛಾಯಾಗ್ರಹಣ, ಮಣಿಕಾಂತ್ ಕದ್ರಿ ಸಂಗೀತ ನಿರ್ದೆಶನ​​ವಿರುವ ಈ ಚಿತ್ರಕ್ಕೆ ಸಚಿನ್ ಬಸ್ರೂರ್ ಹಿನ್ನಲೆ ಸಂಗೀತ ನೀಡುತ್ತಿದ್ದಾರೆ. ಸ್ಟಾರ್ ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ಚಂದ್ರಕಾಂತ್ ಪೂಜಾರಿ, ಉಮೇಶ್ ಹೆಗ್ಡೆ ನಿರ್ಮಿಸುತ್ತಿರುವ ಚೊಚ್ಚಲ ಚಿತ್ರವಿದು. ಇದೆ ವರ್ಷ ಡಿಸೆಂಬರ್ ನಲ್ಲಿ ಚಿತ್ರ ಬಿಡುಗಡೆ ಮಾಡುವ​ ಯೋಜನೆಯಲ್ಲಿದ್ದಾರೆ ನಿರ್ಮಾಪಕರು.

  • ಕ್ಷೇತ್ರಪತಿ ಚಿತ್ರದ ಟೀಸರ್ ಮೆಚ್ಚಿಕೊಂಡ ಸ್ಯಾಂಡಲ್ ವುಡ್

    ಕ್ಷೇತ್ರಪತಿ ಚಿತ್ರದ ಟೀಸರ್ ಮೆಚ್ಚಿಕೊಂಡ ಸ್ಯಾಂಡಲ್ ವುಡ್

    ಗುಲ್ಟು ಚಿತ್ರದ ಮೂಲಕ ಜನಪ್ರಿಯರಾಗಿ, ಹೊಂದಿಸಿ ಬರೆಯಿರಿ, ಹೊಯ್ಸಳ ಚಿತ್ರಗಳ ಮೂಲಕ ಅಪಾರ ಜನಮನ್ನಣೆ ಪಡೆದಿರುವ ನಟ ನವೀನ್ ಶಂಕರ್. ಪ್ರಸ್ತುತ ನವೀನ್ ಶಂಕರ್  ‘ಕ್ಷೇತ್ರಪತಿ’ (Kshetrapati) ಚಿತ್ರದಲ್ಲೂ ನಾಯಕರಾಗಿ ನಟಿಸಿದ್ದು, ಈ ಚಿತ್ರದ ಟೀಸರ್ (Teaser) ಬಿಡುಗಡೆಯಾಗಿದೆ. ಈ ಚಿತ್ರದ ನವೀನ್ ಶಂಕರ್ (Naveen Shankar) ಅವರ ಲುಕ್ ಗೆ ಹಾಗೂ ಟೀಸರ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

    ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಕ್ಷೇತ್ರಪತಿ ಪೊಲಿಟಿಕಲ್ ಡ್ರಾಮಾ ಕಥಾಹಂದರ ಹೊಂದಿದೆ. ಶ್ರೀಕಾಂತ್ ಕಟಗಿ (Srikanth Katagi) ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆ. ಹಾಗಾಗಿ ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆದಿದೆ‌. ಇದನ್ನೂ ಓದಿ:ಸೋದರಳಿಯನ ಸಿನಿಮಾಗೆ ಕ್ಲ್ಯಾಪ್ ಮಾಡಿ ಶುಭಕೋರಿದ ಕಿಚ್ಚ ಸುದೀಪ್

    ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ವೈ ವಿ ಬಿ ಶಿವಸಾಗರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಜೀವನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

    ಈ ಹಿಂದೆ ಹೊಂದಿಸಿ ಬರೆಯಿರಿ ಚಿತ್ರದಲ್ಲಿ ನಾಯಕ-ನಾಯಕಿಯಾಗಿ ನಟಿಸಿ, ಜನಮನ ಗೆದ್ದಿರುವ,  ನವೀನ್ ಶಂಕರ್ ಹಾಗೂ ಅರ್ಚನಾ ಜೋಯಿಸ್ ಕ್ಷೇತ್ರಪತಿ ಚಿತ್ರದಲ್ಲೂ ನಾಯಕ – ನಾಯಕಿಯಾಗಿ ನಟಿಸಿದ್ದಾರೆ.  ಅಚ್ಯುತ್ ಕುಮಾರ್, ರಾಹುಲ್ ಐನಾಪುರ, ಕೃಷ್ಣ ಹೆಬ್ಬಾಳೆ, ಶೈಲಶ್ರೀ ಅರಸ್, ನಾಟ್ಯ ರಂಗ, ಹರ್ಷ ಅರ್ಜುನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಮಾರಕಾಸ್ತ್ರ ಹಿಡಿದು ಬಂದ ಮಾಲಾಶ್ರೀ:  ಚಿತ್ರದ ಟೀಸರ್ ರಿಲೀಸ್

    ಮಾರಕಾಸ್ತ್ರ ಹಿಡಿದು ಬಂದ ಮಾಲಾಶ್ರೀ: ಚಿತ್ರದ ಟೀಸರ್ ರಿಲೀಸ್

    ನಸಿನ ರಾಣಿ ಮಾಲಾಶ್ರೀ (Malashree) ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಮಾರಕಾಸ್ತ್ರ’ (Marakastra) ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಮಾಲಾಶ್ರೀ ಅವರೆ ಟೀಸರ್ (Teaser) ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ಮಾರಕಾಸ್ತ್ರ ಚಿತ್ರದ ಸಾಹಸ ಸನ್ನಿವೇಶಗಳು ಅವರ ಹಿಂದಿನ ಚಾಮುಂಡಿ, ಶಕ್ತಿ ಮುಂತಾದ ಚಿತ್ರಗಳ ಸಾಹಸ ಸನ್ನಿವೇಶಗಳನ್ನು ನೆನಪಿಸಿತು ಎಂದು ನೆನಪಿನಂಗಳಕ್ಕೆ ಜಾರಿದರು.

    ನನಗೆ ಧನಕುಮಾರ್‌ ಮಾಸ್ಟರ್ ಮೂಲಕ ಈ ತಂಡದ ಪರಿಚಯವಾಯಿತು. ನಿರ್ದೇಶಕ ಗುರುಮೂರ್ತಿ ಸುನಾಮಿ‌ ಅವರು ಹೇಳಿದ ಕಥೆ ಇಷ್ಟವಾಯಿತು. ನಾನು ಈ ಚಿತ್ರ ಒಪ್ಪಕೊಳ್ಳಲು ನಿರ್ದೇಶಕರೆ ಕಾರಣ. ಏಕೆಂದರೆ ಅವರು ವಿಕಲ ಚೇತನರಾಗಿದ್ದರು ಕೂಡ,  ಅವರಲ್ಲಿರುವ ಸಿನಿಮಾ ಪ್ರೀತಿ ಕಂಡು ಸಂತೋಷವಾಯಿತು. ಮೊದಲು ಹನ್ನೊಂದು ದಿನಗಳ ಕಾಲ ನನ್ನ ಚಿತ್ರೀಕರಣ ಎಂದು ನಿಗದಿಯಾಗಿತ್ತು. ಆನಂತರ ಒಟ್ಟು ಅರವತ್ತು ದಿನಗಳ ಕಾಲ  ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದೇನೆ. ನಾಲ್ಕು ಸಾಹಸ ಸನ್ನಿವೇಶಗಳಿವೆ. ನಾನು ಆಕ್ಷನ್ ಕ್ವೀನ್ ಎಂದು‌ ಕರೆಸಿಕೊಳ್ಳಲು‌ ಥ್ರಿಲ್ಲರ್ ಮಂಜು ಮಾಸ್ಟರ್ ಪ್ರಮುಖ ಕಾರಣ. ಅವರ ಜೊತೆಗೆ ಈ ಚಿತ್ರದಲ್ಲೂ ಕೆಲಸ ಮಾಡಿದ್ದು ಖುಷಿಯಾಗಿದೆ .  ಇದರಲ್ಲಿ ನನ್ನದು ಪೊಲೀಸ್ ಅಧಿಕಾರಿಯ ಪಾತ್ರ ಎಂದರು ನಟಿ ಮಾಲಾಶ್ರೀ.

    ನಾನು ಮೂಲತಃ ಬಳ್ಳಾರಿಯವನು. ಇದು ನನ್ನ ಮೊದಲ ಚಿತ್ರ. ಪ್ರಥಮ ಚಿತ್ರದಲ್ಲೇ ಮಾಲಾಶ್ರೀ ಅವರಿಗೆ ಆಕ್ಷನ್ ಕಟ್ ಹೇಳುತ್ತೀನಿ ಅಂದುಕೊಂಡಿರಲಿಲ್ಲ. ಮಾರಕಾಸ್ತ್ರ ಒಂದು ಕೌಟುಂಬಿಕ ಚಿತ್ರ‌. ಇದರಲ್ಲಿ ಆಕ್ಷನ್, ಸಸ್ಪೆನ್ಸ್, ಥ್ರಿಲ್ಲರ್ ಎಲ್ಲವೂ ಇದೆ . ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಗುರುಮೂರ್ತಿ ಸುನಾಮಿ (Gurumurthy Tsunami) ತಿಳಿಸಿದರು. ಇದನ್ನೂ ಓದಿ:ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ಸ್ಯಾಂಡಲ್‌ವುಡ್‌ಗೆ ಎಂಟ್ರಿ

    ಮಾರಕಾಸ್ತ್ರ ಚಿತ್ರದ ಕಥೆ ಚೆನ್ನಾಗಿದೆ. ಚಿತ್ರದ ಹಾಡು ಹೇಳುವುದಕ್ಕೆ ಹೋದ ನಾನು ನಿರ್ಮಾಪಕನಾದೆ. ಈ ಚಿತ್ರದಲ್ಲಿ ನಟನೆ ಕೂಡ ಮಾಡಿದ್ದೇನೆ. ನನಗೆ ನನ್ನ ದೇಶದ ಮೇಲೆ ಅಭಿಮಾನ ಹೆಚ್ಚು. ಹಾಗಾಗಿ ಈ ಚಿತ್ರದ ಹಾಡೊಂದರ ಚಿತ್ರೀಕರಣವನ್ನು ಕಾಶ್ಮೀರದಿಂದ ಕನ್ಯಾಕುಮಾರಿ ತನಕ ಸುಮಾರು ಮೂವತ್ತೆರಡು ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇವೆ. ಸದ್ಯದಲ್ಲೇ ಹಾಡನ್ನು ಬಿಡುಗಡೆ ಮಾಡುತ್ತೇವೆ ಎಂದರು ನಿರ್ಮಾಪಕ ನಟರಾಜ್.

    ಈ ಚಿತ್ರದಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕಾಣಿಸಿಕೊಂಡಿದ್ದೇನೆ ಎಂದು ತಮ್ಮ ಪಾತ್ರದ ಬಗ್ಗೆ ಹರ್ಷಿಕಾ ಪೂಣಚ್ಛ (Harshika Poonachha) ಹೇಳಿದರು. ಚಿತ್ರದಲ್ಲಿ ನಟಿಸಿರುವ ಆನಂದ್ ಆರ್ಯ(ನಾಯಕ), ಭರತ್ ಸಿಂಗ್,  ಉಗ್ರಂ ಮಂಜು, ನಿರ್ಮಾಪಕಿ ಕೋಮಲ ನಟರಾಜ್, ಕ್ರಿಯೇಟಿವ್ ಹೆಡ್ ಧನಕುಮಾರ್, ಕಾರ್ಯಕಾರಿ ನಿರ್ಮಾಪಕ ಮಂಜುನಾಥ್ ಹಾಗೂ ಹಿನ್ನೆಲೆ ಸಂಗೀತ ನೀಡಿರುವ ಸತೀಶ್ ಬಾಬು ಮುಂತಾದವರು ಮಾರಕಾಸ್ತ್ರ ಚಿತ್ರದ ಕುರಿತು ಮಾತನಾಡಿದರು. ಮಂಜು ಕವಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅರುಣ್ ಸುರೇಶ್ ಛಾಯಾಗ್ರಹಣ ಮಾಡಿದ್ದಾರೆ.

  • ಜೂ 7ಕ್ಕೆ ಕಿಚ್ಚನ ಹೊಸ ಸಿನಿಮಾದ ಟೀಸರ್

    ಜೂ 7ಕ್ಕೆ ಕಿಚ್ಚನ ಹೊಸ ಸಿನಿಮಾದ ಟೀಸರ್

    ಜೂನ್ 1 ರಂದು ತಮ್ಮ ಹೊಸ ಸಿನಿಮಾದ ಟೀಸರ್ (Teaser) ಅನ್ನು ರಿಲೀಸ್ ಮಾಡುವುದಾಗಿ ಈ ಹಿಂದೆ ಘೋಷಿಸಿದ್ದರು ಸುದೀಪ್ (Kichcha Sudeep) . ಆದರೆ, ತಾಂತ್ರಿಕ ಕಾರಣದಿಂದಾಗಿ ಇಂದು ಟೀಸರ್ ಬಿಡುಗಡೆ ಆಗುತ್ತಿಲ್ಲ ಎಂದು ನಿರ್ಮಾಣ ಸಂಸ್ಥೆ ಹೇಳಿಕೊಂಡಿತ್ತು. ಇದೀಗ ಟೀಸರ್ ಯಾವಾಗ ಬಿಡುಗಡೆ ಆಗಲಿದೆ ಎನ್ನುವ ಕುರಿತು ಮಾಹಿತಿ ಸಿಕ್ಕಿದ್ದು, ಜೂನ್ 7 ರಂದು ಟೀಸರ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಈ ನಡುವೆ ಬಾಲಿವುಡ್ ಅಂಗಳದಿಂದ ಮತ್ತೊಂದು ಹೊಸ ಸುದ್ದಿ ಬಂದಿದ್ದು, ಸುದೀಪ್ ಅವರ 46ನೇ ಚಿತ್ರಕ್ಕೆ ಬಾಲಿವುಡ್ ನಟಿ ಸಿಮ್ರಾತ್ ಕೌರ್  (Simrat Kaur) ನಾಯಕಿಯಾಗಲಿದ್ದಾರಂತೆ.

    ಈ ಕುರಿತು ಅಧಿಕೃತವಾಗಿ ಸಿನಿಮಾ ತಂಡದಿಂದ ಯಾವುದೇ ಮಾಹಿತಿ ಬಾರದೇ ಇದ್ದರೂ, ಮಿಲ್ಕಿ ಬ್ಯೂಟಿ ಸಿಮ್ರಾತ್ ಕೌರ್ ಹೆಸರು ಮಾತ್ರ ಸಖತ್ ವೈರಲ್ ಆಗುತ್ತಿದೆ. ಮೂಲತಃ ಮುಂಬೈ ಮೂಲದವರಾದ ಸಿಮ್ರಾತ್, ತೆಲುಗು ಚಿತ್ರಗಳ ಮೂಲಕ ಸಿನಿಮಾ ರಂಗಕ್ಕೆ ಕಾಲಿಟ್ಟವರು. ಆ ಮೇಲೆ ಬಾಲಿವುಡ್ ನಲ್ಲಿ ಮಿಂಚಿದ್ದಾರೆ. ಇದೀಗ ಸಿಮ್ರಾತ್ ನಟನೆಯ ಗದಾರ್ 2 ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಇದನ್ನೂ ಓದಿ:‘ಬಾಹುಬಲಿ’ ಪ್ರಭಾಸ್‌ಗೆ ಸ್ಟಾರ್ ನಟ ಕಮಲ್ ಹಾಸನ್ ವಿಲನ್

    ಅಂದಹಾಗೆ ಈ ಸಿನಿಮಾವನ್ನು ತಮಿಳು (Tamil) ನಿರ್ದೇಶಕರೊಬ್ಬರು ನಿರ್ದೇಶನ ಮಾಡಲಿದ್ದಾರಂತೆ. ಈ ಸಿನಿಮಾದ ಮೂಲಕ ಹೊಸ ಹುಡುಗ ವಿಜಯ್ (Vijay) ಎನ್ನುವವರು ನಿರ್ದೇಶಕರಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನುವ ಮಾಹಿತಿ ಇದೆ. ಇದು ಕೂಡ ಅಧಿಕೃತ ಹೇಳಿಕೆಯಲ್ಲ. ಸುದೀಪ್ ತಂಡದಿಂದ ಸಿಕ್ಕಿರುವ ಮಾಹಿತಿಯಾಗಿದೆ.

     

    ಒಂದು ದಿನದಲ್ಲಿ ನಡೆಯುವ ಕಥೆಯು ಇದಾಗಿದ್ದು, ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಮಾದರಿಯ ಚಿತ್ರವಂತೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೇ ಬರೆದಿದ್ದಾರೆ. ಭಾರೀ ಬಜೆಟ್ ನ ಚಿತ್ರ ಇದಾಗಿದ್ದು, ಕನ್ನಡ ಮತ್ತು ತಮಿಳಿನಲ್ಲಿ ಈ ಸಿನಿಮಾ ಏಕಕಾಲಕ್ಕೆ ರೆಡಿಯಾಗಲಿದೆ. ಅರ್ಜುನ್ ಜನ್ಯ ಬದಲಾಗಿ ಈ ಚಿತ್ರಕ್ಕೆ ಹ್ಯಾರೀಸ್ ಜೈರಾಜ್ ಎನ್ನುವವರು ಸಂಗೀತ ಸಂಯೋಜನೆ ಮಾಡಲಿದ್ದಾರೆ. ಅಧಿಕೃತವಾಗಿ ಚಿತ್ರತಂಡ ಮಾಹಿತಿ ಕೊಡದೇ ಇದ್ದರೂ, ಸುದೀಪ್ ಅವರ ಆಪ್ತರಿಂದಲೇ ಇವಿಷ್ಟು ಮಾಹಿತಿ ಹೊರ ಬಂದಿವೆ.

  • Breaking- ಸುದೀಪ್ ಸಿನಿಮಾಗೆ ಹೊಸ ನಿರ್ದೇಶಕ: ಜೂನ್ 1ಕ್ಕೆ ಟೀಸರ್ ರಿಲೀಸ್

    Breaking- ಸುದೀಪ್ ಸಿನಿಮಾಗೆ ಹೊಸ ನಿರ್ದೇಶಕ: ಜೂನ್ 1ಕ್ಕೆ ಟೀಸರ್ ರಿಲೀಸ್

    ಜೂನ್ 1 ರಂದು ಸುದೀಪ್ (Sudeep) ನಟನೆಯ ಹೊಸ ಸಿನಿಮಾದ (New Movie) ಟೀಸರ್ ರಿಲೀಸ್ ಆಗಲಿದೆ. ಟೀಸರ್ (Teaser) ರಿಲೀಸ್ ಗೂ ಮುನ್ನ ಈ ಸಿನಿಮಾದ ಬಗ್ಗೆ ಅಚ್ಚರಿ ಸುದ್ದಿಗಳು ಹೊರ ಬಂದಿದ್ದು, ಈ ಸಿನಿಮಾವನ್ನು ತಮಿಳು (Tamil) ನಿರ್ದೇಶಕರೊಬ್ಬರು ನಿರ್ದೇಶನ ಮಾಡಲಿದ್ದಾರಂತೆ. ಈ ಸಿನಿಮಾದ ಮೂಲಕ ಹೊಸ ಹುಡುಗ ವಿಜಯ್ (Vijay) ಎನ್ನುವವರು ನಿರ್ದೇಶಕರಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನುವ ಮಾಹಿತಿ ಇದೆ.

    ಒಂದು ದಿನದಲ್ಲಿ ನಡೆಯುವ ಕಥೆಯು ಇದಾಗಿದ್ದು, ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಮಾದರಿಯ ಚಿತ್ರವಂತೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೇ ಬರೆದಿದ್ದಾರೆ. ಭಾರೀ ಬಜೆಟ್ ನ ಚಿತ್ರ ಇದಾಗಿದ್ದು, ಕನ್ನಡ ಮತ್ತು ತಮಿಳಿನಲ್ಲಿ ಈ ಸಿನಿಮಾ ಏಕಕಾಲಕ್ಕೆ ರೆಡಿಯಾಗಲಿದೆ. ಅರ್ಜುನ್ ಜನ್ಯ ಬದಲಾಗಿ ಈ ಚಿತ್ರಕ್ಕೆ ಹ್ಯಾರೀಸ್ ಜೈರಾಜ್ ಎನ್ನುವವರು ಸಂಗೀತ ಸಂಯೋಜನೆ ಮಾಡಲಿದ್ದಾರೆ. ಅಧಿಕೃತವಾಗಿ ಚಿತ್ರತಂಡ ಮಾಹಿತಿ ಕೊಡದೇ ಇದ್ದರೂ, ಸುದೀಪ್ ಅವರ ಆಪ್ತರಿಂದಲೇ ಇವಿಷ್ಟು ಮಾಹಿತಿ ಹೊರ ಬಂದಿವೆ.

    ಸ್ವತಃ ಸುದೀಪ್ ಅವರೇ ಜೂನ್ 1ನೇ ತಾರೀಖಿನಂದು ಹೊಸ ಸಿನಿಮಾದ ಅಪ್ ಡೇಟ್ ನೀಡುವುದಾಗಿ ತಿಳಿಸಿದ್ದರು. ಹೊಸ ಸಿನಿಮಾದ ಟೀಸರ್ ಅನ್ನು ರಿಲೀಸ್ ಮಾಡುವುದಾಗಿ ಘೋಷಿಸಿದ್ದರು. ಅದಕ್ಕೂ ಆರು ದಿನ ಮುಂಚೆಯೇ ಮೊನ್ನೆ ಆ ಸಿನಿಮಾದ ಸಣ್ಣ ಸುಳಿವು ಕೊಟ್ಟಿದ್ದರು. ಆ ಸಿನಿಮಾದ ನಿರ್ಮಾಪಕರು ಯಾರು ಎಂದು ಸಣ್ಣದೊಂದು ಝಲಕ್ ರಿಲೀಸ್ ಮಾಡುವ ಮೂಲಕ ತಿಳಿಸಿದ್ದರು. ಇದನ್ನೂ ಓದಿ:ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಕಮಲಿ’ ನಟಿ ಯಶಸ್ವಿನಿ

    ಸುದೀಪ್ ಅವರ ಮುಂದಿನ ಸಿನಿಮಾವನ್ನು ತಮಿಳು (Tamil) ನಿರ್ಮಾಣ ಸಂಸ್ಥೆಯೊಂದು ನಿರ್ಮಾಣ ಮಾಡುತ್ತಿದ್ದು, ಸುದೀಪ್ ಟೀಸರ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಸಣ್ಣದೊಂದು ವಿಡಿಯೋ ರಿಲೀಸ್ ಮಾಡಿತ್ತು ತಮಿಳಿನ ಕಲೈಪುಲಿ ಎಸ್ ತನು (Kalaipuli S Tanu) ನಿರ್ಮಾಣ ಸಂಸ್ಥೆ. ಕಿಚ್ಚ ಕಾರಿನಿಂದ ಇಳಿಯುವುದರ ಜೊತೆಗೆ ಮೇಕಪ್ ನಲ್ಲಿ ಭಾಗಿಯಾಗುವ ಸಣ್ಣದೊಂದು ವಿಡಿಯೋ ಬಿಡುಗಡೆ ಮಾಡಿದ್ದರು. ಸುದೀಪ್ ಅವರ ಗೆಟಪ್ ಜಭರದಸ್ತಾಗಿ ಇರಲಿದೆ ಎನ್ನುವ ಸುಳಿವನ್ನೂ ನೀಡಿದ್ದರು.

    ಈ ಹಿಂದೆಯಷ್ಟೇ ತಾವು ಮೂರು ಸಿನಿಮಾಗಳನ್ನು ಒಪ್ಪಿಕೊಂಡಿರುವ ಕುರಿತು ಕಿಚ್ಚ ಸುದೀಪ್ (Sudeep) ಬಹಿರಂಗ ಪಡಿಸಿದ್ದರು. ಮೂರು ಸಿನಿಮಾಗಳಲ್ಲಿ ಮೊದಲು ಯಾವುದು ಶುರುವಾಗಲಿದೆ ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ‘ಬಿಲ್ಲ ರಂಗ ಬಾಷಾ’ (Billa Ranga Basha) ಮೊದಲು ಮೂಡಿ ಬರಲಿದೆ ಎನ್ನಲಾಗಿತ್ತು. ಆದರೆ, ಅದಕ್ಕೂ ಮುನ್ನ ವಿಜಯ್ ನಿರ್ದೇಶನದ ಚಿತ್ರ ತಯಾರಾಗಲಿದೆ ಎನ್ನುವ ಮಾಹಿತಿ ಸಿಕ್ಕಿದೆ.

  • ಮಾಲಿವುಡ್ ಸ್ಟಾರ್ ಗೆ ಸಿಂಪಲ್ ಸ್ಟಾರ್ ಸಾಥ್

    ಮಾಲಿವುಡ್ ಸ್ಟಾರ್ ಗೆ ಸಿಂಪಲ್ ಸ್ಟಾರ್ ಸಾಥ್

    ಮಿನ್ನಲ್ ಮುರಳಿ ಎಂಬ ಸೂಪರ್ ಹೀರೋ ಸಿನಿಮಾ ಮೂಲಕ ಖ್ಯಾತಿ ಪಡೆದಿರುವ ಟೊವಿನೋ ಥಾಮಸ್ (Tovino Thomas) ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಅಜಯಂತೆ ರಂದಂ ಮೋಷನಂ (ARM) ಟೀಸರ್ ರಿಲೀಸ್ ಆಗಿದೆ. ಹಿಂದಿಯಲ್ಲಿ ಹೃತಿಕ್ ರೋಷನ್, ತೆಲುಗಿನಲ್ಲಿ ನಾನಿ, ತಮಿಳಿನಲ್ಲಿ ಲೋಕೇಶ್ ಕನಕರಾಜ್ ಮತ್ತು ಆರ್ಯ, ಕನ್ನಡದಲ್ಲಿ ರಕ್ಷಿತ್ ಶೆಟ್ಟಿ (Rakshit Shetty), ಮಲಯಾಳಂ ಪೃಥ್ವಿರಾಜ್ ಸುಕುಮಾರನ್ ಸೋಷಿಯಲ್ ಮೀಡಿಯಾ ಮೂಲಕ ಟೀಸರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

    ಟೊವಿನೋ ಥಾಮಸ್ ಮಾಸ್ ಅವತಾರ ತಾಳಿದ್ದಾರೆ. ಹಳ್ಳಿಗಾಡಿನಲ್ಲಿ ನಡೆಯುವ ಘಟನೆ ಸುತ್ತ ಇಡೀ ಟೀಸರ್ ಸಾಗುತ್ತದೆ. ಟೊವಿನೋ ಥಾಮಸ್ ವೃತ್ತಿ ಜೀವನದ ಬಹುವಿಶೇಷ ಸಿನಿಮಾ ಇದಾಗಿದೆ. ಈ  ಚಿತ್ರದಲ್ಲಿ ಟೊವಿನೋ ಥಾಮಸ್ ತ್ರಿಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಮೂಲಕ ಕಲಾವಿದನಾಗಿ ಮೊದಲ ಬಾರಿ ಬಹು ದೊಡ್ಡ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದು ಪ್ಯಾನ್ ಇಂಡಿಯಾ  ಸ್ಟಾರ್ ಆಗಿ ಹೊರ ಹೊಮ್ಮುತ್ತಿದ್ದಾರೆ.  ಮಲಯಾಳಂ ಖ್ಯಾತ ನಟ ಟೊವಿನೋ ಥಾಮಸ್ ವೃತ್ತಿ ಜೀವನದ ಬಹು ವಿಶೇಷ ಸಿನಿಮಾ ಇದಾಗಿದೆ.  ಇದನ್ನೂ ಓದಿ:ಕಾಲೆಳೆದ ನಟಿಗೆ ಸ್ನೇಹದ ಹಸ್ತಚಾಚಿದ ರಶ್ಮಿಕಾ ಮಂದಣ್ಣ

    ಚಿತ್ರದಲ್ಲಿ ಟೊವಿನೋ ಥಾಮಸ್ ತ್ರಿಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಮೂಲಕ ಕಲಾವಿದನಾಗಿ ಮೊದಲ ಬಾರಿ ಬಹು ದೊಡ್ಡ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರ ಹೊಮ್ಮುತ್ತಿದ್ದಾರೆ. ಸೌತ್ ಸಿನಿರಂಗದ ಸೆನ್ಸೇಷನಲ್ ನಟಿ ಕೃತಿ ಶೆಟ್ಟಿಗೂ (Kriti Shetty) ಸ್ಪೆಷಲ್ ಆಗಿದ್ದು ತೆಲುಗು, ತಮಿಳಿನಲ್ಲಿ ಮಿಂಚಿದ್ದ ಕೃತಿ ಶೆಟ್ಟಿ ಈಗ ಮಲಯಾಳಂ ಚಿತ್ರರಂಗಕ್ಕೂ ಎಂಟ್ರಿ ನೀಡುತ್ತಿದ್ದಾರೆ. ಟೊವಿನೋ ಥಾಮಸ್ ಜೋಡಿಯಾಗಿ ಕೃತಿ ನಟಿಸುತ್ತಿದ್ದು, ಉಳಿದಂತೆ ನಟಿಯರಾದ ಐಶ್ವರ್ಯ ರಾಜೇಶ್, ಸುರಭಿ ಲಕ್ಷಿ ಕೂಡ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

    ‘ಅಜಯಂತೆ ರಂದಂ ಮೋಷನಂ’ ನಿರ್ದೇಶಕ ಜಿತಿನ್ ಲಾಲ್ ನಿರ್ದೇಶಿಸುತ್ತಿದ್ದು ಇದು ಇವರ ಮೊದಲ ಸಿನಿಮಾ. ಸುಜಿತ್ ನಂಬಿಯಾರ್ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆಯನ್ನು ಬರೆದಿದ್ದು, ಬಾಸಿಲ್ ಜೋಸೆಫ್, ಕಿಶೋರ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಜಗದೀಶ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿ ನಿರ್ಮಾಣವಾಗುತ್ತಿರುವ 3ಡಿಯಲ್ಲಿ ತೆರೆ ಕಾಣುವ ‘ಅಜಯಂತೆ ರಂದಂ ಮೋಷನಂ’ ಚಿತ್ರವನ್ನು ಯುಜಿಎಂ ಪ್ರೊಡಕ್ಷನ್ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದು, ಮ್ಯಾಜಿಕ್ ಫ್ರೇಮ್ಸ್ ಸಹ ನಿರ್ಮಾಣ ಮಾಡುತ್ತಿದೆ.

  • ದೆಹಲಿಯ ರಾಜ್ ಪಥ್ ನಲ್ಲಿ ರಿಲೀಸ್ ಆಯ್ತು ‘ಸ್ಪೈ’ ಟೀಸರ್

    ದೆಹಲಿಯ ರಾಜ್ ಪಥ್ ನಲ್ಲಿ ರಿಲೀಸ್ ಆಯ್ತು ‘ಸ್ಪೈ’ ಟೀಸರ್

    ಟಾಲಿವುಡ್ ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಸ್ಪೈ (Spy). ಕಾರ್ತಿಕೇಯ-2 ಬಳಿಕ ಅಖಿಲ್ ಸಿದ್ದಾರ್ಥ್ (Akhil Siddharth) ನಟಿಸುತ್ತಿರುವ ಆಕ್ಷನ್ ಪ್ಯಾಕ್ಡ್ ಕಥಾಹಂದರ ಈ ಚಿತ್ರದ ಟೀಸರ್  (Teaser) ದೆಹಲಿಯ (Delhi) ರಾಜ್ ಪಥ್ ನಲ್ಲಿರುವ ಸುಭಾಷ್ ಚಂದ್ರಬೋಸ್ ಪುತ್ಥಳಿ ಮುಂದೆ ಅನಾವರಣ ಮಾಡಲಾಗಿದೆ.

    ಭಾರತದ ಟಾಪ್ ಸೀಕ್ರೆಟ್ ರಹಸ್ಯಗಳು, ವಿಮಾನ ಅಪಘಾತದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಸಾವನ್ನಪ್ಪಿದ್ದಾರೆ ಎನ್ನಲಾದ ವಿಚಾರಗಳನ್ನು ಬೆನ್ನತ್ತುವ ಗೂಢಚಾರಿ ಪಾತ್ರದಲ್ಲಿ ನಿಖಿಲ್ ಸಿದ್ದಾರ್ಥ್ ಅಭಿನಯಿಸಿದ್ದು, ಐಶ್ವರ್ಯ ಮೆನನ್ (Aishwarya Menon) ನಾಯಕಿಯಾಗಿ, ಸನ್ಯಾ ಠಾಕೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

    ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಆಗಿರುವ ಗ್ಯಾರಿ ಬಿ ಹೆಚ್ ಸ್ಪೈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಎವರು ಮತ್ತು ಹಿಟ್ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್ ರೆಡ್ಡಿ ED ಎಂಟರ್‌ಟೈನ್‌ಮೆಂಟ್‌ನಡಿ ಚರಣ್ ರಾಜ್ ಉಪ್ಪಲಪತಿ ಜೊತೆಗೂಡಿ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದಾರೆ. ಇದನ್ನೂ ಓದಿ:ಸಲ್ಮಾನ್ ಖಾನ್‌ರನ್ನ ಮಗುವಿನ ಮುಗ್ಧತೆಗೆ ಹೋಲಿಸಿದ ಸುಧಾ ಮೂರ್ತಿ

    ಸ್ಪೈ ಸಿನಿಮಾದ ಪೋಸ್ಟರ್ ಹಾಗೂ ಗ್ಲಿಂಪ್ಸ್ ನಿರೀಕ್ಷೆ ಹೆಚ್ಚಿಸಿದ್ದು, ನಿಖಿಲ್‌ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ‌ ಮೂಡಿ ಬರ್ತಿರುವ ಚಿತ್ರಕ್ಕೆ ರಾಜಶೇಖರ್ ರೆಡ್ಡಿ  ನಿರ್ಮಾಣದ ಜೊತೆಗೆ ಕಥೆ ಕೂಡ ಬರೆದಿದ್ದು, ಗ್ಯಾರಿ ಬಿ.ಎಚ್. ನಿರ್ದೇಶನದ ಜೊತೆಗೆ ಸಂಕಲನದ ಹೊಣೆ ಹೊತ್ತಿದ್ದಾರೆ. ಆಕ್ಷನ್ ಪ್ಯಾಕ್ಡ್ ಸ್ಪೈ ಥ್ರಿಲ್ಲರ್ ಸಿನಿಮಾದಲ್ಲಿ‌ ನಿಖಿಲ್‌ಗೆ ಜೋಡಿಯಾಗಿ ಐಶ್ವರ್ಯ ಮೆನನ್ ನಟಿಸಿದ್ದು, ಅಭಿನವ್ ಗೋಮತಮ್, ಮಕರಂದ್ ದೇಶಪಾಂಡೆ, ನಿತಿನ್ ಮೆಹ್ತಾ, ರವಿವರ್ಮ, ಕೃಷ್ಣ ತೇಜ, ಪ್ರಿಶಾ ಸಿಂಗ್, ಸೋನಿಯಾ ನರೇಶ್ ಮತ್ತು ಇತರರು ತಾರಾಬಳಗದಲ್ಲಿದ್ದಾರೆ.

    ಹೈ ಬಜೆಟ್‌ನಲ್ಲಿ ತಯಾರಾಗಲಿರುವ ಸ್ಪೈ ಸಿನಿಮಾಗೆ ಹಾಲಿವುಡ್ ತಂತ್ರಜ್ಞರ ಮೆರಗು ಸಿಕ್ಕಿದೆ. ಜೂನಿಯನ್ ಅಮರು ಸೂರಿಸೆಟ್ಟಿ ಛಾಯಾಗ್ರಹಣ, ಶ್ರೀಚರಣ್ ಪಕಳ ಸಂಗೀತ, ಅರ್ಜುನ್ ಸೂರಿಸೆಟ್ಟಿ ಕಲಾ ನಿರ್ದೇಶನ ಸಿನಿಮಾಕ್ಕಿದೆ. ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ತಯಾರಾಗಿರುವ ಸ್ಪೈ ಜೂನ್ 29ರಂದು ವರ್ಲ್ಡ್ ವೈಡ್ ರಿಲೀಸ್ ಆಗಲಿದೆ.

  • ಪವನ್ ಕಲ್ಯಾಣ್ ವಿರುದ್ಧ ಗರಂ ಆದ ನಟಿ ಪೂನಂ ಕೌರ್

    ಪವನ್ ಕಲ್ಯಾಣ್ ವಿರುದ್ಧ ಗರಂ ಆದ ನಟಿ ಪೂನಂ ಕೌರ್

    ವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ (Ustad Bhagat Singh) ಚಿತ್ರದ ಫಸ್ಟ್ ಟೀಸರ್ (Teaser) ನಿನ್ನೆ ರಿಲೀಸ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಖತ್ ಕ್ರೇಜ್ ಕ್ರಿಯೇಟ್ ಮಾಡಿದೆ. ಟೀಸರ್ ನಲ್ಲಿ ಪವನ್ ಕಲ್ಯಾಣ್ ಹೊಡೆದ ಡೈಲಾಗ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಗಬ್ಬರ್ ಸಿಂಗ್ ರೀತಿಯಲ್ಲೇ ಈ ಸಿನಿಮಾ ಕೂಡ ಹಿಟ್ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಗಬ್ಬರ್ ಸಿಂಗ್ ನಂತರ ನಿರ್ದೇಶಕ ಹರೀಶ್ ಶಂಕರ್ ಮತ್ತು ಪವನ್ ಕಲ್ಯಾಣ್ ಒಟ್ಟಾಗಿರುವುದರಿಂದ ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

    ‘ಧರ್ಮಕ್ಕೆ ತೊಂದರೆಯಾದಾಗ, ಅಧರ್ಮ ಹೆಚ್ಚಾದ ಸಮಯದಲ್ಲಿ ನಾನು ಅವತಾರ ಎತ್ತಿ ಬರುತ್ತೇನೆ ಎನ್ನುವ ಶ್ರೀಕೃಷ್ಣನ ಮಾತನ್ನು ಅಳವಡಿಸಿ ಗ್ಲಿಂಪ್ಸ್ ಮಾಡಲಾಗಿದೆ. ನಂತರ ಪವನ್ ಕಲ್ಯಾಣ್ ಖಡಕ್ ಡೈಲಾಗ್ ಹೊಡೆಯುತ್ತಾರೆ. ಭಗತ್ ಸಿಂಗ್ ಪಾತಬಸ್ತಿ ಎನ್ನುವ ಶಬ್ದವೇ ಅಭಿಮಾನಿಗಳಿಗೆ ಕಿಕ್ ಕೊಡುತ್ತದೆ.

    ಅಭಿಮಾನಿಗಳು ಪವನ್ ಕಲ್ಯಾಣ್ ಮ್ಯಾನರಿಸಂ ಮತ್ತು ಲುಕ್ ಗೆ ಫಿದಾ ಆಗಿದ್ದರೆ, ನಟಿ ಪೂನಂ ಕೌರ್ (Poonam Kaur) ಚಿತ್ರದ ಪೋಸ್ಟರ್ ಕಂಡು ಗರಂ ಆಗಿದ್ದಾರೆ. ಈ ಸಿನಿಮಾ ಟೀಮ್ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಗೆ ಅವಮಾನ ಮಾಡಿದ್ದಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರನ ಹೆಸರಿನ ಮೇಲೆ ಪವನ್ ಕಲ್ಯಾಣ್ ಕಾಲಿಟ್ಟಿದ್ದಾರೆ ಎಂದು ನಟಿ ಕೋಪವನ್ನು ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ:‘ಕಸ್ಟಡಿ’ ಸಿನಿಮಾ ತೆರೆಗೆ- ಕಾನ್ಸ್‌ಟೇಬಲ್ ಪಾತ್ರದಲ್ಲಿ ನಾಗ ಚೈತನ್ಯ

    ನಟನ ಕಾಲ ಕೆಳಗೆ ಮಹಾತ್ಮನ ಹೆಸರು ಹಾಕಿರುವುದು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳುವಂಥದ್ದು ಅಲ್ಲ ಎಂದು ಪೂನಂ ಕಾಮೆಂಟ್ ಮಾಡುತ್ತಿದ್ದಂತೆಯೇ ಪರ ವಿರೋಧದ ಕಾಮೆಂಟ್ ಗಳು ರಾಶಿ ರಾಶಿ ಬಿದ್ದಿವೆ. ಪವನ್ ಕಲ್ಯಾಣ್ ಫ್ಯಾನ್ಸ್ ಪೂನಂ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಸಿನಿಮಾವನ್ನು ಸಿನಿಮಾ ರೀತಿಯಲ್ಲೇ ನೋಡಿ ಎಂದು ತಿರುಗೇಟು ನೀಡಿದ್ದಾರೆ.

  • ವಿನಯ್ ಹುಟ್ಟುಹಬ್ಬಕ್ಕೆ ‘ಪೆಪೆ’ ಟೀಸರ್ ಗಿಫ್ಟ್

    ವಿನಯ್ ಹುಟ್ಟುಹಬ್ಬಕ್ಕೆ ‘ಪೆಪೆ’ ಟೀಸರ್ ಗಿಫ್ಟ್

    ದೊಡ್ಮನೆ ಕುಡಿ, ರಾಘವೇಂದ್ರ ರಾಜ್ ಕುಮಾರ್ ಸುಪುತ್ರ ವಿನಯ್ ರಾಜ್ ಕುಮಾರ್ (Vinay Rajkumar) ಬರ್ತ್ ಡೇ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳೊಟ್ಟಿಗೆ ಅದ್ಧೂರಿಯಾಗಿ ಹುಟ್ಟುಹಬ್ಬ (Birthday) ಆಚರಿಸಿಕೊಳ್ತಿರುವ ರಾಯಲ್ ಸ್ಟಾರ್ ಗೆ ‘ಪೆಪೆ’ (Pepe) ಸಿನಿಮಾ ಬಳಗದ ಕಡೆಯಿಂದ ಸ್ಪೆಷಲ್ ಗಿಫ್ಟ್ ಸಿಕ್ಕಿದೆ. ವಿನಯ್ ಜನ್ಮದಿನದ ವಿಶೇಷವಾಗಿ ಪೆಪೆ ಟೀಸರ್ ರಿಲೀಸ್ ಮಾಡಲಾಗಿದೆ.

    ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿಬಂದಿರುವ ಟೀಸರ್ (Teaser) ಝಲಕ್ ನಲ್ಲಿ ವಿನಯ್ ರಾಜ್ ಕುಮಾರ್, ರಗಡ್ ಲುಕ್ ನಲ್ಲಿ ಮಿಂಚಿದ್ದಾರೆ. ಅಂದಹಾಗೇ ಪೆಪೆ ಗ್ಯಾಂಗ್ ಸ್ಟಾರ್ ಸಿನಿಮಾ ಇದಾಗಿದ್ದು, ವಿನಯ್ ರಾಜ್ ಕುಮಾರ್ ಹಿಂದಿನ ಎಲ್ಲಾ ಸಿನಿಮಾಗಳಿಗಿಂತ ಇಲ್ಲಿ ವಿಭಿನ್ನ ಅವತಾರ ತಾಳಿದ್ದಾರೆ. ಇದನ್ನೂ ಓದಿ:ಡಿವೋರ್ಸ್ ಸುದ್ದಿ ಬೆನ್ನಲ್ಲೇ ‘ಪುಷ್ಪ 2’ ಸಿನಿಮಾದಲ್ಲಿ ನಿಹಾರಿಕಾ ಕೊನಿಡೆಲಾ

    ಶ್ರೀಲೇಶ್‌ ಎಸ್‌ ನಾಯರ್‌ ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್ ಕುಂದರ್ ನಟಿಸಿದ್ದು, ಮಯೂರ್ ಪಟೇಲ್, ಯಶ್ ಶೆಟ್ಟಿ, ಬಾಲ ರಾಜ್ ವಾಡಿ, ಮೆದಿನಿ ಕೆಳಮನಿ, ಅರುಣಾ ಬಾಲರಾಜ್, ನವೀನ್ ಡಿ ಪಡಿಲ್ ಒಳಗೊಂಡ ತಾರಾಬಳಗವಿದೆ. ‘ಪೆಪೆ’ ಚಿತ್ರಕ್ಕೆ ಅಭಿಷೇಕ್ ಜಿ ಕಾಸರಗೋಡು ಕ್ಯಾಮೆರಾ ವರ್ಕ್, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನವಿದೆ.

    ಡಾ. ರವಿವರ್ಮಾ, ಚೇತನ್ ಡಿಸೋಜಾ, ಡಿಫ್ರೆಂಟ್ ಡ್ಯಾನಿ, ನರಸಿಂಹ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದ್ದಾರೆ. ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರದಲ್ಲಿ ‘ಪೆಪೆ’ ಸಿನಿಮಾವನ್ನು ಸೆರೆ ಹಿಡಿಯಲಾಗಿದೆ. ಉದಯ್ ಸಿನಿ ವೆಂಚರ್, ದೀಪ ಫಿಲಂಸ್ ಬ್ಯಾನರ್ ನಡಿ ಉದಯ್ ಶಂಕರ್ ಮತ್ತು ಶ್ರೀರಾಮ್ ಬಿ ಎಮ್ ಕೋಲಾರ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

  • ಆದಿತ್ಯ ಹುಟ್ಟುಹಬ್ಬಕ್ಕೆ ‘ಟೆರರ್’ ಚಿತ್ರದ ಟೀಸರ್ ರಿಲೀಸ್

    ಆದಿತ್ಯ ಹುಟ್ಟುಹಬ್ಬಕ್ಕೆ ‘ಟೆರರ್’ ಚಿತ್ರದ ಟೀಸರ್ ರಿಲೀಸ್

    ನಟ ಆದಿತ್ಯ ಅಭಿನಯದ ‘ಟೆರರ್’ (Terror) ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ನಾಯಕ ಆದಿತ್ಯ (Aditya) ಅವರ ಹುಟ್ಟುಹಬ್ಬದ ಸಲುವಾಗಿ ಚಿತ್ರತಂಡ ವಿಶೇಷ ಟೀಸರ್ (Teaser) ಬಿಡುಗಡೆ ಮಾಡಿದೆ‌.  ನಿರ್ದೇಶಕ, ನಿರ್ಮಾಪಕ ಆರ್. ಚಂದ್ರು (R. Chandru) ಟೆರರ್ ಚಿತ್ರದ ಟೀಸರ್ ಬಿಡುಗಡೆಗೊಳಿಸಿದರು. ಟೆರರ್ ಸಿನಿಮಾದ ಹೆಸರಿನಲ್ಲೆ ಒಂದು ಫೈಯರ್ ಇದೆ. ಟೀಸರಿನಲ್ಲಿ ಕಾಣುವ ಪ್ರತಿಯೊಂದು ಸನ್ನಿವೇಶಗಳು ಗಮನ ಸೆಳೆಯುತ್ತದೆ. ಟೀಸರ್ ನಲ್ಲಿಯೇ ಟೆರರ್ ದೊಡ್ಡ ಹಿಟ್ ಆಗುವ ಲಕ್ಷಣಗಳು ಕಾಣುತ್ತಿದೆ ಎಂದು ಆರ್ ಚಂದ್ರು ಹಾರೈಸಿದರು.

    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ನಿರ್ಮಾಪಕರಾದ ದೇವೇಂದ್ರ ರೆಡ್ಡಿ,  ರಮೇಶ್ ರೆಡ್ಡಿ, ಪ್ರಕಾಶ್, ಶ್ರೀನಗರ ಕಿಟ್ಟಿ ಮುಂತಾದವರು ಟೀಸರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಆದಿತ್ಯ ಅವರಿಗೆ ಹಾಗೂ ಚಿತ್ರತಂಡಕ್ಕೆ ಶುಭ ಕೋರಿದರು. ಇದನ್ನೂ ಓದಿ:ಆರ್.ಎಲ್ ಜಾಲಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು ಹಿರಿಯ ನಟ ಶ್ರೀನಿವಾಸ್ ಮೂರ್ತಿ

    ಈ ಕಥೆ ಕೇಳಿದ ಕೂಡಲೇ ನಿರ್ಮಾಪಕ ಸಿಲ್ಕ್ ಮಂಜು ಈ ಸಿನಿಮಾ ಮಾಡಲು ಒಪ್ಪಿಕೊಂಡರು. ಅವರ ಸಹಕಾರದಿಂದಲೇ ಈ ಸಿನಿಮಾ ಮಾಡಲು ಸಾಧ್ಯವಾಗುತ್ತಿದೆ.  ಸಿನಿಮಾದಲ್ಲಿ ಆದಿತ್ಯ ನಾಯಕರಾಗಿ ನಟಿಸುತ್ತಿದ್ದಾರೆ. ಶ್ರೀನಗರ ಕಿಟ್ಟಿ (Srinagar Kitty)ಕೂಡ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಕೋಟೆ ಪ್ರಭಾಕರ್, ಧರ್ಮ ಮೊದಲಾದವರು ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಈಗಾಗಲೇ ಶೇಕಡಾ 30 ಚಿತ್ರೀಕರಣ ಪೂರ್ಣಗೊಂಡಿದೆ. ಬೆಂಗಳೂರು ಸುತ್ತಮುತ್ತ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ ಎಂದು ನಿರ್ದೇಶಕ ರಂಜನ್ ಶಿವರಾಮ್ ಗೌಡ ಹೇಳಿದರು.

    ಕನ್ನಡ ಚಿತ್ರರಂಗಕ್ಕೆ ‘A’ ಎಂಬ ಉತ್ತಮ ಚಿತ್ರಕೊಟ್ಟ ನಿರ್ಮಾಪಕ ಸಿಲ್ಕ್ ಮಂಜು ಅವರ ನಿರ್ಮಾಣದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ರಂಜನ್ ಅವರು ಹೇಳಿದ ಕಥೆ ಇಷ್ಟವಾಯಿತು. ನನ್ನ ಹುಟ್ಟುಹಬ್ಬಕ್ಕಾಗಿ ವಿಶೇಷ ಟೀಸರ್ ಬಿಡುಗಡೆ ಮಾಡಿರುವ ಚಿತ್ರತಂಡಕ್ಕೆ ಇಲ್ಲಿ ಆಗಮಿಸಿರುವ ಪ್ರತಿಯೊಬ್ಬರಿಗೂ ನನ್ನ ಧನ್ಯವಾದ ಎಂದರು ನಾಯಕ ಆದಿತ್ಯ.  ‘ಎ’ ಸಿನಿಮಾ ಬಿಡುಗಡೆಯಾಗಿ 25 ವರ್ಷ ಆದ ಮೇಲೆ ಮತ್ತೊಂದು ನಿರೀಕ್ಷಿತ ಸಿನಿಮಾ ಮಾಡುತ್ತಿದ್ದೇವೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಸಿಲ್ಕ್ ಮಂಜು.