Tag: teaser

  • ಸಂಚಲನ ಮೂಡಿಸಿದ ನರೇಶ್-ಪವಿತ್ರಾ ಲೋಕೇಶ್ ಜೋಡಿಯ ‘ಮತ್ತೆ ಮದುವೆ’

    ಸಂಚಲನ ಮೂಡಿಸಿದ ನರೇಶ್-ಪವಿತ್ರಾ ಲೋಕೇಶ್ ಜೋಡಿಯ ‘ಮತ್ತೆ ಮದುವೆ’

    ತೆಲುಗು ನಟ ನರೇಶ್ (Naresh) ಹಾಗೂ ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ (Pavitra Lokesh) ಮತ್ತೆ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣ ಮತ್ತೆ ಮದುವೆ (Matte Maduve) ಟೀಸರ್. ಇವರಿಬ್ಬರು ನಟಿಸಿರುವ ಮತ್ತೆ ಮದುವೆ ಟೀಸರ್ (Teaser) ರಿಲೀಸ್ ಆಗಿದೆ. ಸಣ್ಣ ಝಲಕ್ ಮೂಲಕ ಸಂಚಲನ ಸೃಷ್ಟಿಸಿದ್ದ ಈ ಸಿನಿಮಾದ ಟೀಸರ್ ನಲ್ಲಿ ಹಲವು ವಿಷಯಗಳನ್ನು ಬಿಚ್ಚಿಡಲಾಗಿದೆ.

    ತೆಲುಗು ಇಂಡಸ್ಟ್ರೀಯವರು ಕನ್ನಡದ ಮೇಲೆ ಕಣ್ಣು ಹಾಕ್ತಿದ್ದಾರೆ ಎಂಬ ಪಂಚಿಂಗ್ ಡೈಲಾಗ್ ಮೂಲಕ ಶುರುವಾಗುವ ಟೀಸರ್ ಥೇಟ್ ನರೇಶ್ ಪವಿತ್ರಾ ರಿಯಲ್ ಕಥೆಯಂತಿದೆ. ನರೇಶ್ ಮೂರನೇ ಪತ್ನಿ ನಡೆಸಿದ ಬೀದಿ ರದ್ದಾಂತ, ಮೈಸೂರಿನ ಹೋಟೆಲ್ ನಲ್ಲಿ ನಡೆದ ಘಟನೆ, ನರೇಶ್ ಬಾಳಲ್ಲಿ ಪವಿತ್ರಾ ಲೋಕೇಶ್ ಎಂಟ್ರಿ ಎಲ್ಲವೂ ಟೀಸರ್ ನಲ್ಲಿ ಬಿಚ್ಚಿಡಲಾಗಿದೆ, ಇದು ರಿಯಲ್ ಲೈಫ್ ಕಥೆಯಂತೆ ಭಾಸವಾಗಿದೆ. ಇದನ್ನೂ ಓದಿ:ನಯನತಾರಾ ಬಗ್ಗೆ ಕನ್ನಡದ ‘ಗೂಳಿ’ ನಟಿ ಶಾಕಿಂಗ್ ಹೇಳಿಕೆ

    ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಮತ್ತೆ ಮದುವೆ ಚಿತ್ರಕ್ಕೆ ಎಂ. ಎಸ್. ರಾಜು (M.S. Raju) ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

    ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಟೀಸರ್ ಮೂಲಕ ಸಂಚಲನ ಸೃಷ್ಟಿಸುತ್ತಿರುವ ಮತ್ತೆ ಮದುವೆ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿಬರ್ತಿದ್ದು, ಮೇ ತಿಂಗಳಲ್ಲಿ ಥಿಯೇಟರ್ ಅಂಗಳ ಪ್ರವೇಶಿಸಲಿದೆ.

  • ಪವಿತ್ರಾ ಲೋಕೇಶ್ ಮುಂದಿಟ್ಟುಕೊಂಡು ಪತ್ನಿಗೆ ಟಾಂಗ್ ಕೊಟ್ಟರಾ ನರೇಶ್

    ಪವಿತ್ರಾ ಲೋಕೇಶ್ ಮುಂದಿಟ್ಟುಕೊಂಡು ಪತ್ನಿಗೆ ಟಾಂಗ್ ಕೊಟ್ಟರಾ ನರೇಶ್

    ತೆಲುಗು ನಟ ನರೇಶ್ ಮತ್ತು ಪವಿತ್ರಾ ಲೋಕೇಶ್ ಕಾಂಬಿನೇಷನ್ ನ ‘ಮತ್ತೆ ಮದುವೆ’ (Matte Maduve) ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್ (Teaser) ಮೂಲಕ ತಮ್ಮ ಜೀವನದಲ್ಲಿ ನಡೆದ ಘಟನೆಗಳನ್ನೇ ಸಿನಿಮಾ ಮಾಡಿದ ಎಲ್ಲ ಕುರುಹುಗಳನ್ನು ನರೇಶ್ ಬಿಟ್ಟುಕೊಟ್ಟಿದ್ದಾರೆ. ಅಲ್ಲದೇ, ಕಾನೂನು ಮೂಲಕ ಹೋರಾಟ ಮಾಡುತ್ತಿರುವ ಪತ್ನಿ ರಮ್ಯಾ ಅವರಿಗೆ ಟಾಂಗ್ ಕೂಡ ಕೊಟ್ಟಿದ್ದಾರೆ.

    ಪವಿತ್ರಾ ಲೋಕೇಶ್ ಮತ್ತು ನರೇಶ್ ಅವರನ್ನು ಮೈಸೂರು ಲಾಡ್ಜ್ ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದಿಟ್ಟಿದ್ದರು ರಮ್ಯಾ. ಆ ದೃಶ್ಯವನ್ನೂ ಸಿನಿಮಾದಲ್ಲಿ ಅಳವಡಿಸಿಕೊಂಡಿದ್ದಾರೆ. ಅಲ್ಲದೇ, ಮಾಧ್ಯಮಗಳ ಮುಂದೆ ರಮ್ಯಾ ಮಾಡಿರುವ ಅಷ್ಟೂ ಆಪಾದನೆಗಳನ್ನೂ ಸಿನಿಮಾದಲ್ಲಿ ಬಳಸಿಕೊಂಡಿದ್ದಾರೆ ಎನ್ನುವುದು ಟೀಸರ್ ನಲ್ಲಿ ಬಂದ ರಮ್ಯಾ ಪಾತ್ರ ಹೇಳುತ್ತಿದೆ. ಹೀಗಾಗಿ ಈ ಮೂಲಕ  ಅನೇಕ ವಿಷಯಗಳಲ್ಲಿ ಪತ್ನಿಗೆ ನರೇಶ್ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ:ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ‘ಬ್ರಹ್ಮಕಮಲ’ ಚಿತ್ರ

    ನರೇಶ್ ಹಾಗೂ ಕನ್ನಡದ ನಟಿ ಪವಿತ್ರಾ ಲೋಕೇಶ್ ಲವ್ವಿಡವ್ವಿ ವಿಚಾರ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ವರ್ಷದ ಮೊದಲ ದಿನದಿಂದ ಈವರೆಗೂ ಒಂದಿಲ್ಲೊಂದು ವಿಚಾರಕ್ಕಾಗಿ ಈ ಇಬ್ಬರೂ ಸುದ್ದಿಯಲ್ಲಿದ್ದಾರೆ. ಮದುವೆ, ಹನಿಮೂನ್ ಅಂತೆಲ್ಲ ಫೋಟೋ ಹಂಚಿಕೊಳ್ಳುತ್ತಿದ್ದವರ ನಿಜಬಣ್ಣ ಈಗ ಬಯಲಾಗಿದೆ. ಈ ಎಲ್ಲವೂ ಖಾಸಗಿ ವಿಚಾರವಲ್ಲ, ಅವು ಸಿನಿಮಾಗಾಗಿ ಮಾಡಿದ ದೃಶ್ಯಗಳು ಎಂದು ನಿರ್ದೇಶಕ ಎಂ.ಎಸ್.ರಾಜು (MS Raju) ಹೇಳಿಕೊಂಡಿದ್ದರು. ಅದು ಟೀಸರ್ ಮೂಲಕ ನಿಜವಾಗಿದೆ.

    ನರೇಶ್ ಹಾಗೂ ಪವಿತ್ರಾ ಲೋಕೇಶ್ ಲವ್ ಸ್ಟೋರಿಯನ್ನೇ ತಮ್ಮ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರಂತೆ ರಾಜು. ಅವರವರ ಪಾತ್ರಗಳನ್ನು ಅವರೇ ಮಾಡಿದ್ದಾರಂತೆ. ಅಲ್ಲದೇ, ನರೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಎಂದು ಹೇಳಿಕೊಂಡಿದ್ದಾರೆ.  ನರೇಶ್ (Naresh) ಮತ್ತು ಪವಿತ್ರಾ ಲೋಕೇಶ್ (Pavitra Lokesh) ಮದುವೆ ಫೋಟೋ ರಿಲೀಸ್ ಆದ ಬೆನ್ನಲ್ಲೇ ಸದ್ದಿಲ್ಲದೇ ದುಬೈಗೆ (Dubai) ಹಾರಿದ್ದರು. ಕೆಲ ದಿನಗಳ ಕಾಲ (Honeymoon) ದುಬೈನಲ್ಲಿ ಈ ಜೋಡಿ ಕಳೆದಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಈ ಎಲ್ಲವೂ ಸಿನಿಮಾದಲ್ಲಿ ಇರಲಿವೆಯಂತೆ.

    ಹೊಸ ವರ್ಷದ ದಿನದಂದು ಪವಿತ್ರಾ ಲೋಕೇಶ್ ತುಟಿಗೆ ಮುತ್ತಿಡುವ ಮೂಲಕ ತಾವು ಮದುವೆ ಆಗುತ್ತಿರುವ ವಿಷಯವನ್ನು ಹಂಚಿಕೊಂಡಿದ್ದರು ತೆಲುಗು ನಟ ನರೇಶ್. ಅದೊಂದು ಮದುವೆಯ ಆಮಂತ್ರಣ ಎನ್ನುವಂತೆ ವಿಡಿಯೋ ಮಾಡಿದ್ದರು. ಈ ವಿಡಿಯೋ ರಿಲೀಸ್ ಆಗಿ ಕೆಲವು ದಿನಗಳ ನಂತರ, ಅದೊಂದು ಸಿನಿಮಾ ಪ್ರಚಾರಕ್ಕಾಗಿ ಮಾಡಿರುವ ವಿಡಿಯೋ ಎಂದು ಹೇಳಲಾಯಿತು. ಈ ವಿಚಾರವಾಗಿ ನರೇಶ್ ಪತ್ನಿ ರಮ್ಯಾ ಗರಂ ಕೂಡ ಆದರು. ಅದು ಮತ್ತೆ ಮದುವೆ ಸಿನಿಮಾದ ದೃಶ್ಯವೆಂದು ಈಗ ಖಚಿತವಾಗಿದೆ.

  • ಪವಿತ್ರಾ ಲೋಕೇಶ್-ನರೇಶ್ ‘ಮತ್ತೆ ಮದುವೆ’: ನಾಳೆ ಏನ್ ಕಾದಿದೆಯೋ?

    ಪವಿತ್ರಾ ಲೋಕೇಶ್-ನರೇಶ್ ‘ಮತ್ತೆ ಮದುವೆ’: ನಾಳೆ ಏನ್ ಕಾದಿದೆಯೋ?

    ನ್ನಡದ ಹೆಸರಾಂತ ನಟಿ ಪವಿತ್ರಾ ಲೋಕೇಶ್ ಮತ್ತು ತೆಲುಗಿನ ಖ್ಯಾತ ನಟ ನರೇಶ್ ‘ಮತ್ತೆ ಮದುವೆ’ ವಿಚಾರವನ್ನು ಹಂಚಿಕೊಂಡಿದ್ದಾರೆ. ನಾಳೆ 11.11ಕ್ಕೆ ಮತ್ತೆ ಮದುವೆಗೆ ಮಹೂರ್ತ ಫಿಕ್ಸ್ ಮಾಡಿದ್ದಾರೆ. ಈ ವಿಷಯದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ಹಂಚಿಕೊಂಡಿರುವ ಅವರು ‘ನಾಳೆ ಮತ್ತೆ ಮದುವೆಯ ಟೀಸರ್ ಬಿಡುಗಡೆಯಾಗಲಿದೆ. ಶುಭ ಹಾರೈಸಿ’ ಎಂದು ಬರೆದುಕೊಂಡಿದ್ದಾರೆ.

    ಇತ್ತೀಚೆಗಷ್ಟೇ ‘ಮತ್ತೆ ಮದುವೆ’ (Matte Maduve) ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿತ್ತು. ಸಾಕಷ್ಟು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಎಂ. ಎಸ್. ರಾಜು (MS Raju) ಆಕ್ಷನ್ ಕಟ್ ಹೇಳಿದ್ದಾರೆ. ಇದನ್ನೂ ಓದಿ:ರೋಸಿ ಟೈಟಲ್ ವಿವಾದ : ಶಿವರಾಜ್ ಕುಮಾರ್ ಗೆ ಮನವಿ ಮಾಡಿದ ಯೋಗಿ

    ನರೇಶ್ ಜೊತೆ ಪವಿತ್ರಾ ಲೋಕೇಶ್ ಜೋಡಿಯಾಗಿ ನಟಿಸಿರುವ ‘ಮತ್ತೆ ಮದುವೆ’ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಚಿತ್ರರಂಗದಲ್ಲಿ ಸಾಕಷ್ಟು ಕ್ಯೂರಿಯಾಸಿಟಿಯನ್ನು ಹುಟ್ಟು ಹಾಕಿತ್ತು. ಇದೀಗ ಬಿಡುಗಡೆಗೆ ರೆಡಿಯಾಗಿರುವ ಸಿನಿಮಾ ತಂಡ ಫಸ್ಟ್ ಲುಕ್ ಮೂಲಕ ಸಿನಿ ಪ್ರೇಕ್ಷಕರನ್ನು ಎದುರುಗೊಂಡಿದೆ.  ಏಕಕಾಲದಲ್ಲಿ ತೆಲುಗು ಹಾಗೂ ಕನ್ನಡದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಏಪ್ರಿಲ್ ಅಥವಾ ಮೇ ನಲ್ಲಿ ತೆರೆ ಕಾಣಲಿದೆ ಎನ್ನಲಾಗುತ್ತಿದೆ.

    ‘ಮತ್ತೆ ಮದುವೆ’ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

    ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಶೀಘ್ರದಲ್ಲೇ ಚಿತ್ರತಂಡ ಸಿನಿಮಾ ಬಿಡುಗಡೆಯ ದಿನಾಂಕವನ್ನು ಹಂಚಿಕೊಳ್ಳಲಿದೆ.

    ನರೇಶ್ (Naresh) ಮತ್ತು ಪವಿತ್ರಾ ಲೋಕೇಶ್ (Pavitra Lokesh) ಮದುವೆ ಫೋಟೋ ರಿಲೀಸ್ ಆದ ಬೆನ್ನಲ್ಲೇ ಸದ್ದಿಲ್ಲದೇ ದುಬೈಗೆ (Dubai) ಹಾರಿದ್ದರು. ಕೆಲ ದಿನಗಳ ಕಾಲ (Honeymoon) ದುಬೈನಲ್ಲಿ ಈ ಜೋಡಿ ಕಳೆದಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ನಿನ್ನೆಯಷ್ಟೇ ಮದುವೆ (Marriage) ಆಗಿದ್ದೇವೆ ಎನ್ನುವ ಅರ್ಥದಲ್ಲಿ ವಿಡಿಯೋ ಶೇರ್ ಮಾಡಿದ್ದ ನರೇಶ್, ನಂತರ ಅವರು ದುಬೈನಲ್ಲಿ ಕಾಲ ಕಳೆದ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿದ್ದವು. ದುಬೈನ ಬೇರೆ ಬೇರೆ ಸ್ಥಳಗಳಲ್ಲಿ ಸೆರೆ ಹಿಡಿಯಲಾದ ಫೋಟೋಗಳು ಕೂಡ ಅವಾಗಿದ್ದವು.

  • ‘SCAM (1770)’  ಚಿತ್ರದ ಟೀಸರ್  ರಿಲೀಸ್ ಮಾಡಿದ ದತ್ತಣ್ಣ

    ‘SCAM (1770)’ ಚಿತ್ರದ ಟೀಸರ್ ರಿಲೀಸ್ ಮಾಡಿದ ದತ್ತಣ್ಣ

    ಗಿನ ಶಿಕ್ಷಣ ವ್ಯವಸ್ಥೆ ಹಾಗೂ ವಿದ್ಯಾರ್ಥಿಗಳನ್ನು ಕುರಿತಾದ   ‘SCAM (1770)’ ಚಿತ್ರದ ಟೀಸರ್ (Teaser) ಬಿಡುಗಡೆಯಾಗಿ ಜನಪ್ರಿಯವಾಗುತ್ತಿದೆ. ಹಿರಿಯ ನಟ ದತ್ತಣ್ಣ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.

    ನಮ್ಮ‌ ಕಾಲದ ಶಿಕ್ಷಣ ವ್ಯವಸ್ಥೆಗೂ ಈಗಿನ ಶಿಕ್ಷಣ ವ್ಯವಸ್ಥೆಗೂ ಸಾಕಷ್ಟು ವ್ಯತ್ಯಾಸವಿದೆ. ಆಗ 92 ಅಂಕ ಪಡೆದರೆ ಅವರೆ ಮೊದಲು. ಈಗ 99 ಬಂದರೂ ಸಾಕಾಗುವುದಿಲ್ಲ ಎನ್ನುತ್ತಾರೆ. ಶಿಕ್ಷಣದ ವ್ಯವಸ್ಥೆಯಲ್ಲಿ ನಡೆಯುತ್ತಿರುವ scam ಬಗ್ಗೆ ಈ ಚಿತ್ರ ಬರುತ್ತಿದೆ‌ .  ಚಿತ್ರ ಯಶಸ್ವಿಯಾಗಲಿ ಎಂದು ದತ್ತಣ್ಣ (Duttanna) ಹಾರೈಸಿದರು. ಇದನ್ನೂ ಓದಿ:ಬಿರುಕಿನ ಸಂಬಂಧಕ್ಕೆ ‘ಮಾವು-ಬೇವು’ ಸಿನಿಮಾ ಅಮೃತ ದಾರ

    ಲಾಕ್ ಡೌನ್ ಸಮಯದಲ್ಲಿ ಹುಟ್ಟಿದ ಕಥೆಯಿದು. ನಾನು ಕೂಡ ಶಿಕ್ಷಣ ವ್ಯವಸ್ಥೆ ಕುರಿತಾದ ಎಷ್ಟೋ ಕೇಸ್ ಗಳನ್ನು ತೆಗೆದುಕೊಂಡಿದ್ದೇನೆ. ನಾವಿಬ್ಬರು ಸೇರಿ ಬರೆದ ಕಥೆ ನಿರ್ಮಾಪಕರಿಗೆ ಇಷ್ಟವಾಯಿತು ಎಂದು ಇಂದು ನಟೇಶ್(ವೈದ್ಯೆ) ಹಾಗೂ ನೇತ್ರಾವತಿ (ಅಡ್ವೊಕೇಟ್)ತಿಳಿಸಿದರು.

    ಇದೊಂದು ಪ್ರಸ್ತುತ ಶಿಕ್ಷಣ ವ್ಯವಸ್ಥೆ ಆಧಾರಿತ ಚಿತ್ರ SCAM (1770). ಯಾವ ಅಭ್ಯಾಸ ತಪ್ಪಿದರೂ ಬದುಕಬಹುದು. ಆದರೆ ವಿದ್ಯಾಭ್ಯಾಸ ತಪ್ಪಿದ್ದರೆ ಬದುಕುವುದು ಕಷ್ಟ. ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಶಿಕ್ಷಣಕ್ಕೆ ಸಂಬಂಧಪಟ್ಟ ಪ್ರತಿಯೊಬ್ಬರು ನೋಡಲೇಬೇಕಾದ ಚಿತ್ರವಿದು. ಟೀಸರ್ ಬಿಡುಗಡೆ ಮಾಡಿಕೊಟ್ಟ ದತ್ತಣ್ಣ ಅವರಿಗೆ ಹಾಗೂ ಇಡೀ ತಂಡಕ್ಕೆ ಧನ್ಯವಾದ  ಎಂದರು ನಿರ್ದೇಶಕ (Vikas Pushpagiri) ವಿಕಾಸ್ ಪುಷ್ಪಗಿರಿ.

    ಡಿ.ಕ್ರಿಯೇಷನ್ಸ್ ಮೂಲಕ ಈ ಚಿತ್ರ ನಿರ್ಮಾಣ ಮಾಡಿರುವ ದೇವರಾಜ್ (Devraj) ಅವರು ಚಿತ್ರದ ಬಗ್ಗೆ ಮಾತನಾಡಿದರು.  ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿನಿಮಾ ಚಿತ್ರ ಖ್ಯಾತಿಯ ರಂಜನ್  ನಿಶ್ಚಿತ, ಹರಿಣಿ, ನಾರಾಯಣಸ್ವಾಮಿ, ಸಂಗೀತ ನಿರ್ದೇಶಕ ಸತೀಶ್ ಆರ್ಯನ್, ನಿರ್ದೇಶಕರ ಜೊತೆಗೂಡಿ ಚಿತ್ರಕಥೆ ಬರೆಯುತ್ತಿರುವ ಶಂಕರ್ ರಾಮನ್ ಮುಂತಾದ ಚಿತ್ರತಂಡದ ಸದಸ್ಯರು  ಚಿತ್ರದ ಕುರಿತು ಮಾಹಿತಿ ನೀಡಿದರು.

  • ಪಸಂದಾಗಿದೆ ‘ರವಿಕೆ ಪ್ರಸಂಗ’ ಎಂದ ಗೀತಾಭಾರತಿ ಭಟ್

    ಪಸಂದಾಗಿದೆ ‘ರವಿಕೆ ಪ್ರಸಂಗ’ ಎಂದ ಗೀತಾಭಾರತಿ ಭಟ್

    ಹೆಣ್ಣುಮಕ್ಕಳು ಮನೆಯಲ್ಲಿ ಯಾವುದೇ ಸಮಾರಂಭವಾದರೂ ಸೀರೆಗೆ ತಕ್ಕಂತೆ ರವಿಕೆ ಹೊಲಿಸಿಕೊಳ್ಳುವುದು ರೂಡಿ. ಅಂತಹ ರವಿಕೆಯ ಕುರಿತಾದ  ‘ರವಿಕೆ ಪ್ರಸಂಗ’ (Ravike Prasanga) ಎಂಬ  ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಪ್ರಚಾರದ ಮೊದಲ ಹೆಜ್ಜೆಯಾಗಿ ಚಿತ್ರದ ಟೀಸರ್ (Teaser) ಬಿಡುಗಡೆಯಾಗಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಧ್ಯಮಕ್ಕೆ ಮಾಹಿತಿ ನೀಡಿದರು.

    ನಮ್ಮ ದೃಷ್ಟಿ ಮೀಡಿಯಾ & ಪ್ರೊಡಕ್ಷನ್ ವತಿಯಿಂದ ನಿರ್ಮಾಣವಾಗಿರುವ ಎರಡನೇ ಚಿತ್ರವಿದು. ಶಂತನು ಮಹರ್ಷಿ, ಗಿರೀಶ್ ಗೌಡ, ನಿರಂಜನ್ ಗೌಡ ಹಾಗೂ ಶಿವರುದ್ರಯ್ಯ ಅವರು ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ನನ್ನ ಪತ್ನಿ ಪಾವನ ಸಂತೋಷ್ ಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.  ‘ಬ್ರಹ್ಮ ಗಂಟು’ ಧಾರಾವಾಹಿ ಖ್ಯಾತಿಯ ಗೀತಾಭಾರತಿ ಭಟ್ (Geeta Bharati Bhatt), ಸಂಪತ್ ಮೈತ್ರೇಯ, ರಾಕೇಶ್ ಮಯ್ಯ, ಸುಮನ್ ರಂಗನಾಥ್,  ಪದ್ಮಜಾರಾವ್ (Padmaja Rao) ರಘು ಪಾಂಡೇಶ್ವರ್ ಹೀಗೆ ಸಾಕಷ್ಟು ಅನುಭವಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ವಿನಯ್ ಶರ್ಮ ಸಂಗೀತ ನಿರ್ದೇಶನ, ಮುರಳಿಧರ್ ಎನ್ ಛಾಯಾಗ್ರಹಣ ಹಾಗೂ ರಘು ಶಿವರಾಮ್ ಸಂಕಲನವಿರುವ “ರವಿಕೆ ಪ್ರಸಂಗ” ಚಿತ್ರದ ಮೊದಲ ಪ್ರತಿ ಸದ್ಯದಲ್ಲೇ ಬರಲಿದೆ. ವಿಭಿನ್ನ ಕಥೆಯ ಈ ಚಿತ್ರ ಎಲ್ಲರಿಗೂ ಹಿಡಿಸಲಿದೆ ಎಂದು ಚಿತ್ರದ ಕುರಿತು ನಿರ್ದೇಶಕ ಸಂತೋಷ್ ಕೊಡೆಂಕೆರಿ (Santhosh Kodenkeri) ಮಾಹಿತಿ ನೀಡಿದರು.

    ಈ ಚಿತ್ರದ ಕಥೆ ಬಹಳ ಇಷ್ಟವಾಯಿತು. ಪ್ರತಿಯೊಬ್ಬ ಹೆಣ್ಣುಮಕ್ಕಳಿಗೆ ರವಿಕೆ ಮೇಲೆ ಪ್ರೀತಿ. ಅದರ ಅಳತೆ ಸರಿಯಾಗಿರಬೇಕು ಎಂದು ಸಾಕಷ್ಟು ಸಲ ಟೈಲರ್ ಜೊತೆ ಚರ್ಚಿಸುತ್ತಾರೆ. ಈ ರೀತಿ ಮಹಿಳೆ ಹಾಗೂ ಟೈಲರ್ ನಡುವೆ ರವಿಕೆಗಾಗಿ ನಡೆಯುವ ಮುಖ್ಯ ವಿಷಯವೇ “ರವಿಕೆ ಪ್ರಸಂಗ”. ಸಂಭಾಷಣೆ ಮಂಗಳೂರು ಕನ್ನಡದಲ್ಲಿರುತ್ತದೆ. ಎಲ್ಲರ ಮನಸ್ಸಿಗೆ, ವಿಶೇಷವಾಗಿ ಹೆಣ್ಣುಮಕ್ಕಳಿಗೆ ಈ ಚಿತ್ರ ಪ್ರಿಯವಾಗಲಿದೆ ಎಂದರು ನಾಯಕಿ ಗೀತಾಭಾರತಿ ಭಟ್.

    ನಾನು ಇಪ್ಪತ್ತೈದು ವರ್ಷಗಳ ನನ್ನ ಸಿನಿಮಾ ಜರ್ನಿಯಲ್ಲಿ ನೂರಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದೇನೆ. ಅದರಲ್ಲಿ ನನ್ನ ಮನಸ್ಸಿಗೆ ಹತ್ತಿತವಾದ ಚಿತ್ರಗಳು ಕೆಲವು ಮಾತ್ರ. ಅದರಲ್ಲಿ ಈ ಚಿತ್ರ ಕೂಡ ಒಂದು ಎಂದರು ನಟಿ ಪದ್ಮಜಾರಾವ್. ಕಥೆ ಹಾಗೂ ಸಂಭಾಷಣೆ ಬರೆದಿರುವ ಪಾವನ ಸಂತೋಷ್, ಛಾಯಾಗ್ರಾಹಕ ಮುರಳಿಧರ್ ಎನ್, ಸಂಗೀತ ನಿರ್ದೇಶಕ ವಿನಯ್ ಶರ್ಮ ಹಾಗೂ ಚಿತ್ರದಲ್ಲಿ ನಟಿಸಿರುವ ರಾಕೇಶ್ ಮಯ್ಯ, ಪ್ರವೀಣ್ ಅಥರ್ವ, ರಘು ಪಾಂಡೇಶ್ವರ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

  • ‘ರಾಮನ ಅವತಾರ’ ಟೀಸರ್ ರಿಲೀಸ್ : ರಿಷಿ ಸಖತ್ ಕಾಮಿಡಿ ಮಾಡ್ತಾರಪ್ಪ

    ‘ರಾಮನ ಅವತಾರ’ ಟೀಸರ್ ರಿಲೀಸ್ : ರಿಷಿ ಸಖತ್ ಕಾಮಿಡಿ ಮಾಡ್ತಾರಪ್ಪ

    ಪರೇಷನ್ ಅಲಮೇಲಮ್ಮ, ಕವಲುದಾರಿ ಸಿನಿಮಾ ಖ್ಯಾತಿಯ ರಿಷಿ ನಟನೆಯ ‘ರಾಮನ ಅವತಾರ’ (Ramana Avatar) ಸಿನಿಮಾದ ಟೀಸರ್ (Teaser) ರಿಲೀಸ್ ಆಗಿದೆ. ಟೀಸರ್ ಮೂಲಕ ನಿರ್ದೇಶಕ ವಿಕಾಸ್ ಪಂಪಾಪತಿ (Vikas Pampapathy)  ಭರಪೂರ ನಗುವಿನ ಮ್ಯಾಜಿಕ್ ಅನ್ನು ಪ್ರೇಕ್ಷಕರಿಗೆ ಉಣ ಬಡಿಸಿದ್ದಾರೆ. ರಿಷಿ (Rishi) ಪಂಚಿಂಗ್ ಸಂಭಾಷಣೆ ಮೂಲಕ ನೋಡುಗರನ್ನು‌ ನಕ್ಕು ನಲಿಸುತ್ತಾರೆ. ಇವರಿಗೆ ಜೋಡಿಯಾಗಿ ಪ್ರಣೀತಾ  ಸುಭಾಷ್  (Praneetha Subhash) ಹಾಗೂ ಶುಭ್ರ ಅಯ್ಯಪ್ಪ (Shubhra Ayyappa) ನಟಿಸಿದ್ದಾರೆ. ಅರುಣ್ ಸಾಗರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

    ಟೀಸರ್ ರಿಲೀಸ್ ಬಳಿಕ ಮಾತಾನಾಡಿದ ರಿಷಿ, ಸಾಮಾನ್ಯವಾಗಿ ಕಾಮಿಡಿ ಕಷ್ಟವಾದ ಜಾನರ್. ಅದರಲ್ಲಿ ಡಬಲ್ ಮೀನಿಂಗ್ ಮಾಡಬಹುದು. ಬೇರೆಯವರನ್ನು ನಿಂದಿಸಿ ಕಾಮಿಡಿ ಮಾಡಬಹುದು. ಡಬಲ್ ಮೀನಿಂಗ್ ಇಲ್ಲದೇ, ಯಾರಿಗೂ ನಿಂದಿಸದೆ, ಕಾಮಿಡಿ ಮಾಡಬಹುದು ಎಂಬುದಕ್ಕೆ ನಿರ್ದೇಶಕ ವಿಕಾಸ್‌ ಪಂಪಾಪತಿ ಉದಾಹರಣೆ. ನಾನು ಈ ಸಿನಿಮಾವನ್ನು ತುಂಬಾ ಮಜಾಕೊಂಡು ಮಾಡಿದ್ದೇನೆ. ನನಗೆ ಖುಷಿ ಕೊಟ್ಟ ಸಿನಿಮಾ. ದೊಡ್ಡ ತಾರಾಬಳಗ ಚಿತ್ರದಲ್ಲಿದೆ. ಅವರೆಲ್ಲರ ಎನರ್ಜಿ ನೋಡಿ ನನಗೆ ಖುಷಿಯಾಗಿದೆ. ಟೀಸರ್ ಚೆನ್ನಾಗಿ ಮೂಡಿಬಂದಿದೆ. ನಮ್ಮ ಸಿನಿಮಾ ಮೇಲೆ ನಿಮ್ಮ ಪ್ರೋತ್ಸಾಹ ಇರಲಿ.

    ಸಿನಿಮಾ ಬಗ್ಗೆ ಮಾತನಾಡಿದ ನಿರ್ದೇಶಕ ವಿಕಾಸ್  ಪಂಪಾಪತಿ, ‘ರಾಮನ ಅವತಾರ ಚಿತ್ರ ಕಲಿಯುಗದ ರಾಮನ ಕಥೆಯಾಗಿದ್ದು, ಸಿನಿಮಾ ನೋಡುವಾಗ ಅಲ್ಲಲ್ಲಿ ಪೌರಾಣಿಕ ರಾಮಾಯಣದ ನೆನಪು ಮಾಡಿಕೊಡುತ್ತದೆ. ಯಾವುದೇ ರೀತಿ ಕಾಂಪ್ರಮೈಸ್ ಮಾಡಿಕೊಳ್ಳದೆ ಸಿನಿಮಾವನ್ನು ಮಾಡಿದ್ದು   ಕನ್ನಡ ಸಿನಿ ರಂಗದಲ್ಲಿ ಇದೊಂದು ವಿಭಿನ್ನ ಚಿತ್ರವಾಗುವುದರಲ್ಲಿ, ಪ್ರೇಕ್ಷಕರಿಗೆ ಮನೋರಂಜನೆ ಕೊಡುವುದರಲ್ಲಿ ಸಂದೇಹವಿಲ್ಲ’ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಗಳ ಮುದ್ದಾದ ಫೋಟೋ ಹಂಚಿಕೊಂಡ ನಟಿ ಮಾನಸ ಜೋಶಿ

    ವಿಕಾಸ್‌ ಪಂಪಾಪತಿ ‘ರಾಮನ ಅವತಾರ’ ಸಿನಿಮಾಕ್ಕೆ ಆಕ್ಷನ್‌ ಕಟ್‌ ಹೇಳಿದ್ದು, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ.  ಅಮರೇಜ್‌ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೊಮ್ಯಾಂಟಿಕ್‌ ಕಾಮಿಡಿ ಜಾನರ್‌ನ ರಾಮನ ಅವತಾರ ಸಿನಿಮಾಗೆ ವಿಷ್ಣುಪ್ರಸಾದ್‌ ಹಾಗೂ ಸಮೀರ್‌ ದೇಶಪಾಂಡೆ ಛಾಯಾಗ್ರಹಣವಿದೆ.

    ಜೂಡಾ ಸ್ಯಾಂಡಿ ಸಂಗೀತ, ಅಮರನಾಥ್‌ ಸಂಕಲನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್‌ ನಡೆಸಲಾಗಿದೆ. ಟೀಸರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಕಿಕ್ ಸ್ಟಾರ್ಟ್ ಕೊಟ್ಟಿರುವ ಚಿತ್ರತಂಡ ಜೂನ್‌ ಮೊದಲ ವಾರ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

  • ‘ಮತ್ತೆ ಮದುವೆ’ಗಾಗಿ ಟೀಸರ್ ರೆಡಿ ಮಾಡಿದ ನರೇಶ್, ಪವಿತ್ರಾ ಲೋಕೇಶ್

    ‘ಮತ್ತೆ ಮದುವೆ’ಗಾಗಿ ಟೀಸರ್ ರೆಡಿ ಮಾಡಿದ ನರೇಶ್, ಪವಿತ್ರಾ ಲೋಕೇಶ್

    ಟಿ ಪವಿತ್ರಾ ಲೋಕೇಶ್ ಮತ್ತು ನರೇಶ್ ವಿಚಾರ ಎಲ್ಲವೂ ಗೊಂದಲಮಯವಾಗಿವೆ. ಅವರು ಸಿನಿಮಾ ಮಾಡುತ್ತಿದ್ದಾರೋ, ನಿಜವಾಗಿಯೂ ಮದುವೆ ಆಗಿದ್ದಾರೋ ಎನ್ನುವುದಕ್ಕೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಆದರೂ, ಈ ಜೋಡಿ ನಟನೆಯ ‘ಮತ್ತೆ ಮದುವೆ’ ಸಿನಿಮಾ ಟೀಸರ್ ಹಂತಕ್ಕೆ ಬಂದು ತಲುಪಿದೆ. ಇದೇ ಏಪ್ರಿಲ್ 13ರಂದು ಚಿತ್ರದ ಟೀಸರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ.

    ಇತ್ತೀಚೆಗಷ್ಟೇ ‘ಮತ್ತೆ ಮದುವೆ’ (Matte Maduve) ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿತ್ತು. ಸಾಕಷ್ಟು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಎಂ. ಎಸ್. ರಾಜು (MS Raju) ಆಕ್ಷನ್ ಕಟ್ ಹೇಳಿದ್ದಾರೆ. ಇದನ್ನೂ ಓದಿ: ‘ವಿಷ್ಣುಪ್ರಿಯಾ’ಗಾಗಿ ಕೇರಳದಿಂದ ಹಾರಿಬಂದ ಕಣ್ಸನ್ನೆ ಬೆಡಗಿ ಪ್ರಿಯಾ

    ನರೇಶ್ ಜೊತೆ ಪವಿತ್ರಾ ಲೋಕೇಶ್ ಜೋಡಿಯಾಗಿ ನಟಿಸಿರುವ ‘ಮತ್ತೆ ಮದುವೆ’ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಚಿತ್ರರಂಗದಲ್ಲಿ ಸಾಕಷ್ಟು ಕ್ಯೂರಿಯಾಸಿಟಿಯನ್ನು ಹುಟ್ಟು ಹಾಕಿತ್ತು. ಇದೀಗ ಬಿಡುಗಡೆಗೆ ರೆಡಿಯಾಗಿರುವ ಸಿನಿಮಾ ತಂಡ ಫಸ್ಟ್ ಲುಕ್ ಮೂಲಕ ಸಿನಿ ಪ್ರೇಕ್ಷಕರನ್ನು ಎದುರುಗೊಂಡಿದೆ.  ಏಕಕಾಲದಲ್ಲಿ ತೆಲುಗು ಹಾಗೂ ಕನ್ನಡದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಏಪ್ರಿಲ್ ಅಥವಾ ಮೇ ನಲ್ಲಿ ತೆರೆ ಕಾಣಲಿದೆ ಎನ್ನಲಾಗುತ್ತಿದೆ.

    ‘ಮತ್ತೆ ಮದುವೆ’ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

    ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಶೀಘ್ರದಲ್ಲೇ ಚಿತ್ರತಂಡ ಸಿನಿಮಾ ಬಿಡುಗಡೆಯ ದಿನಾಂಕವನ್ನು ಹಂಚಿಕೊಳ್ಳಲಿದೆ.

    ನರೇಶ್ (Naresh) ಮತ್ತು ಪವಿತ್ರಾ ಲೋಕೇಶ್ (Pavitra Lokesh) ಮದುವೆ ಫೋಟೋ ರಿಲೀಸ್ ಆದ ಬೆನ್ನಲ್ಲೇ ಸದ್ದಿಲ್ಲದೇ ದುಬೈಗೆ (Dubai) ಹಾರಿದ್ದರು. ಕೆಲ ದಿನಗಳ ಕಾಲ (Honeymoon) ದುಬೈನಲ್ಲಿ ಈ ಜೋಡಿ ಕಳೆದಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ನಿನ್ನೆಯಷ್ಟೇ ಮದುವೆ (Marriage) ಆಗಿದ್ದೇವೆ ಎನ್ನುವ ಅರ್ಥದಲ್ಲಿ ವಿಡಿಯೋ ಶೇರ್ ಮಾಡಿದ್ದ ನರೇಶ್, ನಂತರ ಅವರು ದುಬೈನಲ್ಲಿ ಕಾಲ ಕಳೆದ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿದ್ದವು. ದುಬೈನ ಬೇರೆ ಬೇರೆ ಸ್ಥಳಗಳಲ್ಲಿ ಸೆರೆ ಹಿಡಿಯಲಾದ ಫೋಟೋಗಳು ಕೂಡ ಅವಾಗಿದ್ದವು.

  • ಏಪ್ರಿಲ್ 7ಕ್ಕೆ ರಂಗಾಯಣ ರಘು ನಟನೆಯ ‘ಅಜ್ಞಾತವಾಸಿ’ ಟೀಸರ್ ರಿಲೀಸ್

    ಏಪ್ರಿಲ್ 7ಕ್ಕೆ ರಂಗಾಯಣ ರಘು ನಟನೆಯ ‘ಅಜ್ಞಾತವಾಸಿ’ ಟೀಸರ್ ರಿಲೀಸ್

    ಗುಲ್ಟು ಖ್ಯಾತಿಯ ನಿರ್ದೇಶಕ ಜನಾರ್ದನ್ ಚಿಕ್ಕಣ್ಣ (Janardhan Chikkanna) ಹಾಗೂ ಗೋಧಿ ಬಣ್ಣ ಸಾಧಾರಣ ಮೈಕಟ್ಟು ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ (Hemanth Rao) ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ ‘ಅಜ್ಞಾತವಾಸಿ’ (Ajnathavasi) ಸಿನಿಮಾದ ಟೀಸರ್ (Teaser) ಇದೇ ಏಪ್ರಿಲ್ 7ರಂದು ರಿಲೀಸ್ ಆಗಲಿದೆ. ಜನಾರ್ದನ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದು, ಹೇಮಂತ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ಈ ಕಾರಣದಿಂದಾಗಿಯೇ ಸಿನಿಮಾ ಕುತೂಹಲ ಮೂಡಿಸಿದೆ.

    ಈ ಸಿನಿಮಾದಲ್ಲಿ ರಂಗಾಯಣ ರಘು (Rangayana Raghu) ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದು, ರಂಗಾಯಣ ರಘು ಅವರೊಂದಿಗೆ ನಟಿ ಪಾವನ ಗೌಡ ಹಾಗೂ ಸಿದ್ದು ಮೂಲಿಮನಿ ತಾರಾಗಣದಲ್ಲಿ ಇದ್ದಾರೆ. ರಂಗಾಯಣ ರಘು   ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದರೆ,  ಸಿದ್ದು ಮೂಲಿಮನಿ ಹಾಗೂ ಪಾವನ ಗೌಡ ಅವರ ಪಾತ್ರವೂ ವಿಶೇಷವಾಗಿದೆಯಂತೆ. ಇದನ್ನೂ ಓದಿ:‘ವೀರಂ’ ಮೂಲಕ ವಿಷ್ಣುವರ್ಧನ್ ಅಭಿಮಾನಿಯಾದ ಪ್ರಜ್ವಲ್ ದೇವರಾಜ್

    ಈ ಕುರಿತು ಮಾತನಾಡಿದ ಜನಾರ್ದನ್ ಚಿಕ್ಕಣ್ಣ, ‘ನನ್ನ ಗುರುಗಳಾದ ಕೃಷ್ಣರಾಜ್ ಅವರು ಕಥೆ ಬರೆದಿದ್ದಾರೆ. 1997 ರಲ್ಲಿ ಮಲೆನಾಡಿನಲ್ಲಿ ನಡೆದ ಕೊಲೆಯೊಂದರ ಸುತ್ತ ಈ ಕಥೆ ಹೆಣೆಯಲಾಗಿದೆ. ಅವರು ಕಥೆ ಹೇಳಿದ ರೀತಿ ತುಂಬಾ ಹಿಡಿಸಿತು.  ನನಗೆ ತಿಳಿದ ಹಾಗೆ ಇದೊಂದು ಕನ್ನಡದಲ್ಲಿ ಈವರೆಗೂ ಬಂದಿರದ ಮರ್ಡರ್ ಮಿಸ್ಟರಿ ಅನ್ನಬಹುದು. ಆನಂತರ ಹೇಮಂತ್ ರಾವ್ ಅವರನ್ನು ಭೇಟಿಯಾಗಿ ಕಥೆ ಹೇಳಿದಾಗ ಕೇವಲ ಅರ್ಧಗಂಟೆಯಲ್ಲಿ ನಿರ್ಮಾಣಕ್ಕೆ ಒಪ್ಪಿಕೊಂಡರು.  ಅದ್ವೈತ ಛಾಯಾಗ್ರಹಕರಾಗಿ ಹಾಗೂ ಚರಣ್ ರಾಜ್ ಸಂಗೀತ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ’ ಎನ್ನುತ್ತಾರೆ.

  • ವಿಜಯ್ ರಾಘವೇಂದ್ರ ನಟನೆಯ ವಿಭಿನ್ನ ಸಿನಿಮಾದ ಟೀಸರ್ ರಿಲೀಸ್

    ವಿಜಯ್ ರಾಘವೇಂದ್ರ ನಟನೆಯ ವಿಭಿನ್ನ ಸಿನಿಮಾದ ಟೀಸರ್ ರಿಲೀಸ್

    ವಿಭಿನ್ನ ಕಥಾಹಂದರ ಹೊಂದಿರುವ ‘ಗ್ರೇ ಗೇಮ್ಸ್ ‘ (Gray Games) ಚಿತ್ರದ ಟೀಸರ್ (Teaser) ಬಿಡುಗಡೆಯಾಗಿದೆ. ಗ್ರೇ ಗೇಮ್ಸ್ ಒಂದು ರೋಮಾಂಚಕ ಕೌಟುಂಬಿಕ ಚಿತ್ರವಾಗಿದ್ದು, ಇದರಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ವಿಜಯ್ ರಾಘವೇಂದ್ರ (Vijay Raghavendra), ಶ್ರುತಿ ಪ್ರಕಾಶ್ (Shruti Prakash), ಭಾವನಾ ರಾವ್ (Bhavana Rao), ಅಪರ್ಣಾ, ರವಿ ಭಟ್ ಮತ್ತು ಪ್ರಮುಖ ಪಾತ್ರದಲ್ಲಿ ಜೈ ಅಭಿನಯಿಸಿದ್ದಾರೆ. ಈ ಕಥೆಯು ನಿಮ್ಮ ಸತ್ಯ ಮತ್ತು ಸುಳ್ಳಿನ ನಡುವಿನ ಗೆರೆಗಳನ್ನು ನಿರಂತರ ಬದಲಾವಣೆ ಮತ್ತು ಯೋಚಿಸಲು ಒಳಪಡಿಸುತ್ತಿದೆ ಮತ್ತು ವಾಸ್ತವದ ನಿಮ್ಮ ಗ್ರಹಿಕೆಗೆ ಸವಾಲು ಹಾಕುತ್ತದೆ. ಗ್ರೇ ಗೇಮ್ಸ್‌ನ  ಜಗತ್ತಿನಲ್ಲಿ ಹೆಜ್ಜೆ ಹಾಕಿ, ಲೆಟ್ ದ ಗೇಮ್ ಬಿಗಿನ್ಸ್.

    ಗ್ರೇ ಗೇಮ್ಸ್ ಆನ್‌ಲೈನ್ ಗೇಮಿಂಗ್ ಗೆ ಸಂಬಂಧಿಸಿದ ಅಪರಾಧಗಳ ವಿಷಯಗಳ ಸುತ್ತ ಸುತ್ತುತ್ತದೆ. ವಿಜಯ್ ರಾಘವೇಂದ್ರ (ಮನಶ್ಶಾಸ್ತ್ರಜ್ಞ), ಭಾವನಾ ರಾವ್ (ಪೊಲೀಸ್ ಅಧಿಕಾರಿ), ಮತ್ತು ಶ್ರುತಿ ಪ್ರಕಾಶ್ (ಚಿತ್ರನಟಿ) ಆಗಿ ಪಾತ್ರಗಳನ್ನು ನಿರ್ವಹಿಸಿದ್ದಾರೆ, ಚಲನಚಿತ್ರವು ಹೊಸ ಪ್ರತಿಭೆ ಜೈ (ಗೇಮರ್) ಪಾತ್ರವನ್ನು ನಿರ್ವಹಿಸಿದ್ದಾರೆ. ಇದು ತಂತ್ರಜ್ಞಾನ ಯುಗದಲ್ಲಿ ನಮ್ಮ ಮೇಲಾಗುವ ಮಾನಸಿಕ ಒತ್ತಡವನ್ನು ಆಧರಿಸಿದೆ. ಚಿತ್ರದಲ್ಲಿ ಮೂರು ಹಾಡುಗಳು ಮತ್ತು ಹೊಸ ಕಥಾವಸ್ತುವಿನ ಜೊತೆಗೆ ಭಾವನಾತ್ಮಕ ತಿರುವುಗಳೊಂದಿಗೆ, ನಿಮ್ಮನ್ನು ಮಾನಸಿಕವಾಗಿ  ಸೆಳೆಯುತ್ತದೆ.

    ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಗಂಗಾಧರ ಸಾಲಿಮಠ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಒಂದು ರೋಚಕ ಕಥೆಯನ್ನು ರಚಿಸಿದ್ದಾರೆ. ಚಿತ್ರದ ಛಾಯಾಗ್ರಾಹಕ ವರುಣ ಡಿಕೆ ಕ್ಯಾಮೆರಾದಲ್ಲಿ ಕಥೆಗೆ ಜೀವ ತುಂಬಿದ್ದಾರೆ. ಚಿತ್ರವನ್ನು ಆನಂದ ಹೆಚ್.ಮುಗದ್ ನಿರ್ಮಿಸಿದ್ದಾರೆ ಮತ್ತು ಸತೀಶ ಗ್ರಾಮಪುರೋಹಿತ, ಅರವಿಂದ ಜೋಶಿ, ಮತ್ತು ಡೋಲೇಶ್ವರ್ ರಾಜ್ ಸುಂಕು ಸಹ-ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ: ಅವಳಿ ಮಕ್ಕಳ ಮುದ್ದಾದ ಫೋಟೋ ಹಂಚಿಕೊಂಡ ಅಮೂಲ್ಯ

    ರಿಯಾಲಿಟಿ ಮತ್ತು ವರ್ಚುವಾಲಿಟಿ ಜಗತ್ತಿನ ಕಥೆಯುಳ್ಳ, ನುರಿತ ಕಲಾವಿದರು ಅಭಿನಯಿಸಿರುವ ಈ ಚಿತ್ರ, ಪ್ರೇಕ್ಷಕರನ್ನು ಮನರಂಜನೆಯ ಜೊತೆಗೆ ಅವರ ವಾಸ್ತವದ ಗ್ರಹಿಕೆಗೆ ಸವಾಲು ಹಾಕುತ್ತದೆ ಎಂಬ ವಿಶ್ವಾಸವಿದೆ ಎನ್ನುತ್ತಾರೆ ನಿರ್ದೇಶಕ ಗಂಗಾಧರ ಸಾಲಿಮಠ.

  • ನಟಿ ಹರ್ಷಿಕಾ ಪೂಣಚ್ಚ ‘ತಾಯ್ತ’ ಕಟ್ಟಿಸಿಕೊಂಡಿದ್ದು ಯಾಕೆ?

    ನಟಿ ಹರ್ಷಿಕಾ ಪೂಣಚ್ಚ ‘ತಾಯ್ತ’ ಕಟ್ಟಿಸಿಕೊಂಡಿದ್ದು ಯಾಕೆ?

    ಶಾಹಿದ್ ನಿರ್ಮಿಸಿರುವ, ಲಯ ಕೋಕಿಲ (Laya Kokila) ನಿರ್ದೇಶನದ ‘ತಾಯ್ತ’ (Taytha) ಚಿತ್ರದ ಟೀಸರ್ (Teaser) ಇತ್ತೀಚೆಗೆ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ಹಿರಿಯ ನಿರ್ದೇಶಕ ಸಾಯಿಪ್ರಕಾಶ್, ನಟ ಧರ್ಮ ಮುಖ್ಯ ಅತಿಥಿಗಳಾಗಿ ಆಗಮಿಸಿ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು.

    ಯಾರಾದರೂ ತುಂಬಾ ಹೆದರಿಕೊಂಡಾಗ ‘ತಾಯ್ತ’ ಕಟ್ಟಿಸಿಕೊ ಎಂದು ಹೇಳುತ್ತಾರೆ. ನನ್ನ ಮೊದಲ ನಿರ್ದೇಶನದ ಚಿತ್ರಕ್ಕೆ ‘ತಾಯ್ತ’ ಎಂದು ಹೆಸರಿಟ್ಟಿದ್ದೀನಿ. ಇದು ಪ್ರೇಮಕಥೆಯಾದರೂ, ಇದರಲ್ಲಿ ಹಾರರ್, ಥ್ರಿಲ್ಲರ್, ಕಾಮಿಡಿ ಎಲ್ಲವೂ ಇದೆ. ಶಾಹಿದ್ ಈ ಚಿತ್ರದ ನಿರ್ಮಾಪಕರು. ರಿಯಾನ್ (Riyan) ಈ ಚಿತ್ರದ ನಾಯಕ. ಹರ್ಷಿಕಾ ಪೂಣಚ್ಛ ನಾಯಕಿ. ಸಾಧುಕೋಕಿಲ, ಪುಷ್ಪಸ್ವಾಮಿ, ಶಾಹಿದ್, ಶೋಭ್ ರಾಜ್ ಅವರ ಜೊತೆಗೆ ನಾನು ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಸಂಗೀತ ಕೂಡ ನೀಡಿದ್ದೇನೆ. ಇಂದು ಟೀಸರ್ ಬಿಡುಗಡೆಯಾಗಿದೆ. ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಹಾಗೂ ನನ್ನ‌ ಇಡೀ ಚಿತ್ರತಂಡಕ್ಕೆ ಧನ್ಯವಾದ ಎಂದರು ಲಯಕೋಕಿಲ.

    ಈ ಚಿತ್ರದ ಕಥೆ ಇಷ್ಟವಾಯಿತು. ಇದು ನನ್ನ ಮೊದಲ ಚಿತ್ರ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ರಿಯಾನ್. ಈ ಚಿತ್ರದಲ್ಲಿ ನಾನು ಖುಷಿ ಎಂಬ ಹೆಸರಿನ ಕಾಲೇಜು ವಿದ್ಯಾರ್ಥಿ ಪಾತ್ರದಲ್ಲಿ ನಟಿಸಿದ್ದೇನೆ. ಇದು ನಾನು ಅಭಿನಯಿಸಿರುವ ಮೊದಲ ಹಾರರ್ ಚಿತ್ರ. ಕಾಲೇಜ್ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಒಂದು ಸ್ಥಳಕ್ಕೆ ಹೋದಾಗ ಅಲ್ಲಿ ಏನೇನು ಆಗುತ್ತದೆ ಎಂಬುದನ್ನು ಚಿತ್ರದಲ್ಲೇ ನೋಡಬೇಕು ಎಂದು ನಾಯಕಿ ಹರ್ಷಿಕಾ ಪೂಣಚ್ಚ  (Harshika Poonachcha)ತಿಳಿಸಿದರು. ಇದನ್ನೂ ಓದಿ: ಪಿಂಕ್ ಕಲರ್ ಡ್ರೆಸ್‌ನಲ್ಲಿ ದೀಪಿಕಾ ದಾಸ್ ಮಿಂಚಿಂಗ್

    ಕಥೆ ಇಷ್ಟವಾಗಿ, ನಿರ್ಮಾಣಕ್ಕೆ ಮುಂದಾದೆ. ಚಿಕ್ಕಮಗಳೂರು, ಬೇಲೂರು ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ನಾನು ಕೂಡ ನಟಿಸಿದ್ದೇನೆ. ಚಿತ್ರ ತರೆಗೆ ಬರಲು ಸಿದ್ದವಾಗಿದೆ ಎಂದರು ನಿರ್ಮಾಪಕ ಶಾಹಿದ್. ಹಿರಿಯ ನಟಿ ಪುಷ್ಪಸ್ವಾಮಿ ಸಹ ತಮ್ಮ ಪಾತ್ರದ ಕುರಿತು ಮಾತನಾಡಿದರು.