Tag: teaser

  • ‘ಓ ಮನಸೇ’ ಚಿತ್ರದ ಟೀಸರ್ ರಿಲೀಸ್ : ತ್ರಿಕೋನ ಪ್ರೇಮ ಕಾವ್ಯ

    ‘ಓ ಮನಸೇ’ ಚಿತ್ರದ ಟೀಸರ್ ರಿಲೀಸ್ : ತ್ರಿಕೋನ ಪ್ರೇಮ ಕಾವ್ಯ

    ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್, ಸಂಚಿತಾ ಪಡುಕೋಣೆ ಪ್ರಮುಖಪಾತ್ರದಲ್ಲಿ ನಟಿಸಿರುವ  “ಓ ಮನಸೇ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಈ ಚಿತ್ರದ ಕುರಿತು ಮಾತನಾಡಿದರು. ನಾನು ಕೊರೋನ ಒಂದನೇ ಅಲೆ ಮುಗಿದ ಮೇಲೆ ನಿರ್ಮಾಪಕರಲೊಬ್ಬರಾದ ರಾಮು ಅವರ ಬಳಿ ಈ ಚಿತ್ರದ ಕಥೆ ಹೇಳಿದೆ. ಅವರಿಗೆ ಕಥೆ ಇಷ್ಟವಾಗಿ, ತಮ್ಮ‌ ಮಿತ್ರರ ಒಡಗೂಡಿ ಈ ಚಿತ್ರ ನಿರ್ಮಾಣಕ್ಕೆ ಮುಂದಾದರು. ಆನಂತರ ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್ ಅವರಿಗೆ ಚಿತ್ರದ ಕಥೆ ಹೇಳಲಾಯಿತು. ಅವರು ಸಹ ನಟಿಸಲು ಒಪ್ಪಿದರು. ಸಂಚಿತಾ ಪಡುಕೋಣೆ ನಾಯಕಿಯಾಗಿ ಆಯ್ಕೆಯಾದರು. ಲವ್ ಮತ್ತು ಕ್ರೈಮ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಮಡಿಕೇರಿ, ಗೋಣಿಕೊಪ್ಪ, ಕುಶಾಲನಗರ, ಬೆಂಗಳೂರು ಮುಂತಾದ ಕಡೆ 55 ದಿನಗಳ ಕಾಲ ನಡೆದಿದೆ. ಹಾಡುಗಳ ಚಿತ್ರೀಕರಣ ಥೈಲ್ಯಾಂಡ್ ನಲ್ಲಿ ಆಗಿದೆ. ಫೆಬ್ರವರಿಯಲ್ಲಿ ಚಿತ್ರ ತೆರೆಗೆ ಬರುವ ಸಾಧ್ಯತೆಯಿದೆ ಎಂದು ನಿರ್ದೇಶಕ ಉಮೇಶ್ ಗೌಡ ತಿಳಿಸಿದರು.

    ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದೇನೆ. ಈ ನಡುವೆ ಪೊಲೀಸ್ ಪಾತ್ರಗಳು ನನಗೆ ಹೆಚ್ಚು ಬರುತ್ತಿದೆ. ಮುಂದಿನ ಎರಡು ಚಿತ್ರಗಳಲ್ಲೂ ನನ್ನದು ಪೊಲೀಸ್ ಪಾತ್ರ. ಇದಕ್ಕೆ ಕಾರಣ “ಓ ಮನಸೇ” ತಂಡ ಎನ್ನಬಹುದು. ಏಕೆಂದರೆ ಕೊರೋನ ಸಮಯದಲ್ಲಿ ಬಿಡುವಿದಾಗ ಇವರು ಬಂದು ಈ ಚಿತ್ರದ ಕಥೆ ಹೇಳಿದರು. ಈ ಚಿತ್ರ ಒಪ್ಪಿದ ನಂತರ ಸಾಲುಸಾಲು ಚಿತ್ರಗಳನ್ನು ನಾನು ಒಪ್ಪಿಕೊಂಡೆ.  ತ್ರಿಕೋನ ಪ್ರೇಮಕಥೆ ಆಧಾರಿತ “ಓ ಮನಸೇ” ಚಿತ್ರವನ್ನು ತಾವು ನೋಡಿ ಹಾರೈಸಿ ಎಂದರು ವಿಜಯ ರಾಘವೇಂದ್ರ. ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುವ ಯುವಜನೋತ್ಸವಕ್ಕೆ ಮೋದಿ ಜೊತೆ ಅಕ್ಷಯ್ ಕುಮಾರ್‌ಗೆ ಆಹ್ವಾನ

    ಕೊರೋನ ಸಮಯದಲ್ಲಿ ಸಿನಿಮಾಗಳು ಕಡಿಮೆಯಾಗಿದ್ದವು. ಅಂತಹ ಸಮಯದಲ್ಲಿ ನಿರ್ಮಾಪಕರು ಕರೆದು ಈ ಚಿತ್ರದ ಅಡ್ವಾನ್ಸ್ ನೀಡಿದರು. ಅವರು ಕೊಟ್ಟ ಘಳಿಗೆ ಚೆನ್ನಾಗಿದೆ. ಆನಂತರ ಸಾಕಷ್ಟು ಚಿತ್ರಗಳು ಬಂದವು. ಈ ಚಿತ್ರದ ಬಗ್ಗೆ ಹೇಳಬೇಕಾದರೆ, ನಾಯಕಿಯನ್ನು ನಾನು ಹಾಗೂ ವಿಜಯ ರಾಘವೇಂದ್ರ ಇಬ್ಬರೂ ಪ್ರೀತಿಸುತ್ತೇವೆ. ಯಾರಿಗೆ ಸಿಗುತ್ತಾರೆ? ಎಂಬುದನ್ನು ಸಿನಿಮಾದಲ್ಲಿ ನೋಡಬೇಕು. ನಿರ್ದೇಶಕರು ಅದ್ಭುತವಾಗಿ ಚಿತ್ರ ಮಾಡಿದ್ದಾರೆ ಎಂದರು ಧರ್ಮ ಕೀರ್ತಿರಾಜ್.

    ನನಗೆ ಕನ್ನಡ ಚಿತ್ರದಲ್ಲಿ ನಟಿಸಲು ಬಹಳ ಆಸೆ. ನನ್ನನ್ನು ಈ ಚಿತ್ರದ ನಾಯಕಿಯಾಗಿ ಆಯ್ಕೆ ಮಾಡಿದ್ದ ನಿರ್ದೇಶಕ – ನಿರ್ಮಾಪಕರಿಗೆ ಧನ್ಯವಾದ ಎಂದರು ಸಂಚಿತಾ ಪಡುಕೋಣೆ. ನಿರ್ಮಾಪಕರಾದ ‌ಎಂ.ಎನ್ ಭೈರೇಗೌಡ, ಧನಂಜಯ್, ಯುವರಾಜು, ಸು.ಕಾ.ರಾಮು ಮತ್ತು ವೆಂಕಟೇಶ್ ಚಿತ್ರ ನಿರ್ಮಾಣದ ಕುರಿತು ಮಾತನಾಡಿದರು. ಧನು ಮಾಸ್ಟರ್ ನೃತ್ಯ ನಿರ್ದೇಶನದ ಬಗ್ಗೆ ಮಾಹಿತಿ ನೀಡಿದರು. ‌ ರಮೇಶ್ ಹಂಡ್ರಂಗಿ ಕಥೆ ಬರೆದಿದ್ದಾರೆ. ಎಂ.ಆರ್.ಸೀನು ಛಾಯಾಗ್ರಹಣ, ಶ್ರೀನಿವಾಸ್ ಪಿ‌ ಬಾಬು ಸಂಕಲನ ಹಾಗೂ ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ, ಬಂಡೆ ಚಂದ್ರು ಅವರ ಸಾಹಸ‌ ನಿರ್ದೇಶನವಿರುವ ಈ ಚಿತ್ರಕ್ಕೆ ಸಾಯಿಕೃಷ್ಣ ಸಂಭಾಷಣೆ ಬರೆದಿದ್ದಾರೆ. ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್, ಸಂಚಿತಾ ಪಡುಕೋಣೆ, ಹರೀಶ್ ರಾಯ್,  ಸಾಧುಕೋಕಿಲ, ಶೋಭ್ ರಾಜ್, ಕಿಲ್ಲರ್ ವೆಂಕಟೇಶ್, ವಾಣಿಶ್ರೀ, ಜಯರಾಮ್, ರುಶಿಕಾ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಪ್ರಜಾರಾಜ್ಯ’ ಸಿನಿಮಾದ ಟೀಸರ್ ಬಿಡುಗಡೆ ಮಾಡಿದ ನಟ ದೇವರಾಜ್

    ‘ಪ್ರಜಾರಾಜ್ಯ’ ಸಿನಿಮಾದ ಟೀಸರ್ ಬಿಡುಗಡೆ ಮಾಡಿದ ನಟ ದೇವರಾಜ್

    ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ ” ಪ್ರಜಾರಾಜ್ಯ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಟ ದೇವರಾಜ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ದೇವರಾಜ್  ಚಿತ್ರದ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ.  ಈ ಚಿತ್ರದಲ್ಲಿ ರಾಜಕೀಯ ಮುಖಂಡನ ಪಾತ್ರ ಮಾಡಿದ್ದೇನೆ.  ಈಗಿನ ರಾಜಕೀಯದ ಲೋಪದೋಷಗಳನ್ನು ತೋರಿಸಿ, ಅದಕ್ಕೆ ಪರಿಹಾರವನ್ನು ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದಾರೆ.  ಟೀಸರ್ ಚೆನ್ನಾಗಿದೆ. ಇನ್ನು, ಈ ಚಿತ್ರದ ನಿರ್ಮಾಪಕರಾದ ವರದರಾಜು ಅವರು ವೈದ್ಯರಾಗಿದ್ದು, ಸಾಮಾಜಿಕ ಕಾಳಜಿಯಿರುವ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರ ಯಶಸ್ವಿಯಾಗಲಿ ಎಂದು ದೇವರಾಜ್ ಹಾರೈಸಿದರು.

    ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದೆ. ನಮ್ಮ ತಾತಂದಿರ ಕಾಲದಲ್ಲಿ ಸ್ವಾತಂತ್ರ್ಯ ಬಂದ ರಜತ ಮಹೋತ್ಸವ ಆಚರಿಸಿದರು. ನಮ್ಮ ತಂದೆಯ ಕಾಲದವರು ಸುವರ್ಣ ಮಹೋತ್ಸವ ಆಚರಣೆ ಮಾಡಿದರು. ನಾವು ಈಗ ‍ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸುತ್ತಿದ್ದೇವೆ. ಇಷ್ಟು ವರ್ಷವಾದರೂ ನಾವು ಯೋಚಿಸುವುದು ನಮಗೆ ಸ್ವಾತಂತ್ರ್ಯ ತಂದುಕೊಟ್ಟವರು ಯಾರು ಅಂತ? ಆದರೆ ನಮಗೆ ಬೇಕಾದ ಆರ್ಥಿಕ ಸ್ವಾತಂತ್ರ್ಯದ ಬಗ್ಗೆ ನಾವು ಯೋಚಿಸಿಯೇ ಇಲ್ಲ. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಹೇಳಿರುವುದು ಆರ್ಥಿಕ ಸ್ವಾತಂತ್ರ್ಯದ ಬಗ್ಗೆ ಯೋಚಿಸಿ ಎಂದು.  ನಾವು ಅದರ ಬಗ್ಗೆ ಯೋಚಸುತ್ತಲೇ ಇಲ್ಲ. ಎಂಬ ಪ್ರಧಾನ ಅಂಶದೊಂದಿಗೆ ಈ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ಈ ಚಿತ್ರವನ್ನು ನೋಡಿ, ದೇಶದ ಪ್ರಜೆಗಳಾಗಿ ನಮ್ಮ ಕರ್ತವ್ಯವೇನು? ಎಂದು ಎಲ್ಲರೂ ತಿಳಿಯಬಹುದು ಎಂದು ನಿರ್ಮಾಪಕ ಹಾಗು ನಟ ವರದರಾಜು ಚಿತ್ರದ ಕುರಿತು ಮಾಹಿತಿ ನೀಡಿದರು.

    ಉತ್ತಮ ಕಥೆಯುಳ್ಳ ಚಿತ್ರ, ಎಲ್ಲರ ಸಹಕಾರದಿಂದ ಉತ್ತಮವಾಗಿ ಬಂದಿದೆ. ನಾನು ಈ ಚಿತ್ರದಲ್ಲಿ ರೈತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ – ನಾಯಕ ವಿಜಯ್ ಭಾರ್ಗವ. ಚಿತ್ರದಲ್ಲಿ ಐದು ಹಾಡುಗಳಿದೆ. ಯೋಗರಾಜ್ ಭಟ್, ನಾಗೇಂದ್ರ ಪ್ರಸಾದ್, ವಿಜಯ್ ಭಾರ್ಗವ  ಬರೆದಿರುವ ಹಾಡುಗಳನ್ನು ರಿಯಲ್ ಸ್ಟಾರ್ ಉಪೇಂದ್ರ, ವಿಜಯ್ ಪ್ರಕಾಶ್ ಮುಂತಾದ ಖ್ಯಾತ ಗಾಯಕರು ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ವಿಜೇತ್ ಮಂಜಯ್ಯ ಹೇಳಿದರು. ಇದನ್ನೂ ಓದಿ: ಸಂದೀಪ್ ಕಿಶನ್ ಜೊತೆ ʻಸೂರ್ಯಕಾಂತಿʼ ನಟಿ ರೆಗಿನಾ ಡೇಟಿಂಗ್

    ಚಿತ್ರದಲ್ಲಿ ನಟಿಸಿರುವ ದಿವ್ಯ, ಮೀಸೆ ಪ್ರಕಾಶ್, ಎಸ್ಕಾರ್ಟ್ ಶ್ರೀನಿವಾಸ್ , ಚಿಕ್ಕ ಹೆಜ್ಜಾಜಿ‌ ಮಹದೇವ್, ಅಮೂಲ್ಯ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ನಿರ್ದೇಶಕ ಮಹೇಶ್ ಕುಮಾರ್, ಒಕ್ಕಲಿಗ ಸಂಘದ ನಿರ್ದೇಶಕರಾದ ಡಿ.ಕೆ.ರಮೇಶ್, ನಿರ್ಮಾಣ ನಿರ್ವಾಹಕ ರವಿಶಂಕರ್ ಸೇರಿದಂತೆ ಅನೇಕ ಗಣ್ಯರು ಸಮಾರಂಭಕ್ಕೆ ಆಗಮಿಸಿ, ಚಿತ್ರಕ್ಕೆ ಶುಭ ಕೋರಿದರು.

    Live Tv
    [brid partner=56869869 player=32851 video=960834 autoplay=true]

  • ಬಾಲಿವುಡ್ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪಾಲಾದ ‘ಕಬ್ಜ’ ವಿತರಣಾ ಹಕ್ಕು

    ಬಾಲಿವುಡ್ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪಾಲಾದ ‘ಕಬ್ಜ’ ವಿತರಣಾ ಹಕ್ಕು

    ಪೇಂದ್ರ ಮತ್ತು ‘ಕಿಚ್ಚ’ ಸುದೀಪ್ ಅಭಿನಯದ ಬಹುನಿರೀಕ್ಷೆಯ ಪ್ಯಾನ್ ಇಂಡಿಯಾ ಚಿತ್ರ ‘ಕಬ್ಜ’ದ ಹಿಂದಿ ಅವತರಣಿಕೆಯ ಹಕ್ಕುಗಳನ್ನು ಬಾಲಿವುಡ್ನ ಪ್ರತಿಷ್ಠಿತ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಆನಂದ್ ಮೋಷನ್ ಪಿಕ್ಚರ್ಸ್ ತನ್ನದಾಗಿಸಿಕೊಂಡಿದ್ದು, ಮೊದಲ ಹಂತವಾಗಿ ಇಂದು ಹಿಂದಿ ಟೀಸರ್ ಬಿಡುಗಡೆ ಮಾಡಿದೆ. ಶ್ರೀ ಸಿದ್ಧೇಶ್ವರ ಎಂಟರ್ಪ್ರೈಸಸ್ ಲಾಂಛನದಲ್ಲಿ ಆರ್. ಚಂದ್ರು ನಿರ್ಮಿಸಿ, ನಿರ್ದೇಶಿಸಿರುವ ‘ಕಬ್ಜ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿದ್ದು, ಮುಂದಿನ ವರ್ಷ ಹಲವು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗಲಿದೆ.

    ಸ್ವಾತಂತ್ರ್ಯ ಹೋರಾಟಗಾರ ಅಮರೇಶ್ವರನ ಮಗ ಅರ್ಕೇಶ್ವರ, 1960-1984 ರ ಅವಧಿಯಲ್ಲಿ ಭಾರತದಲ್ಲಿ ಭೂಗತ ಜಗತ್ತಿನ ರಾಜನಾಗುತ್ತಾನೆ ಮತ್ತು ಭಾರತೀಯ ಇತಿಹಾಸದಲ್ಲಿ ತನ್ನ ಛಾಪು ಮೂಡಿಸುತ್ತಾನೆ. ಇಂಥದ್ದೊಂದು ಕಥೆ ಇರುವ ‘ಕಬ್ಜ’ ಚಿತ್ರದ ಬಗ್ಗೆ ಬರೀ ಕನ್ನಡವಷ್ಟೇ ಅಲ್ಲ, ಇಡೀ ಭಾರತೀಯ ಚಿತ್ರರಂಗದಲ್ಲೇ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳಿವೆ. ‘ಕಬ್ಜ’ ಚಿತ್ರದ ವಿತರಣೆಯ ಹಕ್ಕುಗಳನ್ನು ಪಡೆದಿರುವ ಆನಂದ್ ಪಂಡಿತ್ ಮಾತನಾಡಿ, ಪ್ರೇಕ್ಷಕರ ಮನರಂಜಿಸುವುದೇ ನಮ್ಮ ಪ್ರಮುಖ ಉದ್ದೇಶ ಮತ್ತು ಕಬ್ಜ ಅಂತಹ ಒಂದು ಮನರಂಜನೆಯಾಗಲಿದೆ ಎಂದು ನಮಗೆ ಸಂಪೂರ್ಣ ನಂಬಿಕೆಯಿದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: `ಕೆಜಿಎಫ್’ ತಾತ ಕೃಷ್ಣ ಜಿ. ರಾವ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    ಚಿತ್ರದ ಬಗ್ಗೆ ಮಾತನಾಡಿದ ನಾಯಕ ನಟ ಉಪೇಂದ್ರ, ‘ಭೂಗತಲೋಕದ ಹೊಸ ಅಧ್ಯಾಯವಾದ ಕಬ್ಜ ಚಿತ್ರೆದ ಹಿಂದಿ ಅವತರಣಿಕೆಯನ್ನು ಬಾಲಿವುಡ್‌ನ ಹೆಸರಾಂತ ನಿರ್ಮಾಪಕರಾದ ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ಬಿಡುಗಡೆ ಮಾಡುತ್ತಿರುವುದು ತುಂಬಾ ಸಂತೋಷವಾಗಿದೆ. ಅವರ ಸಹಕಾರ ಹೀಗೆಯೇ ಮುಂದುವರೆಯಲಿ’ ಎಂದು ಹೇಳಿದ್ದಾರೆ.  ಕಿಚ್ಚ ಸುದೀಪ ಸಹ ಈ ಕುರಿತು ಮಾತನಾಡಿದ್ದು, ‘ದಕ್ಷಿಣ ಭಾರತೀಯ ಸಿನಿಮಾಗಳು ಭಾರತೀಯ ಸಿನಿಮಾ ಎಂದು ಗುರುತಿಸಿಕೊಳ್ಳುತ್ತಿರುವ ಈ ಅದ್ಭುತ ಸಂದರ್ಭದಲ್ಲಿ ಖ್ಯಾತ ವಿತರಕ ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ನಮ್ಮ ‘ಕಬ್ಜ’ ಸಿನಿಮಾವನ್ನು ಬಿಡುಗಡೆ ಮಾಡುತ್ತಿದೆ. ಇದು ಚಿತ್ರತಂಡದ ಕಠಿಣ ಪರಿಶ್ರಮಕ್ಕೆ ಸಿಕ್ಕ  ಪ್ರತಿಫಲ’ ಎಂದಿದ್ದಾರೆ.

    ‘ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ಸಂಸ್ಥೆಯು ಕೈ ಜೋಡಿಸಿರುವುದು ನಮ್ಮ ಬದ್ಧತೆ ಮತ್ತು ಪ್ರಯತ್ನಕ್ಕೆ ಸಿಕ್ಕ ಮನ್ನಣೆ’ ಎನ್ನುವ ಆರ್. ಚಂದ್ರು, ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಿಸುವುದಾಗಿ ಹೇಳುತ್ತಾರೆ. ‘ಕಬ್ಜ’ ಚಿತ್ರದಲ್ಲಿ ಉಪೇಂದ್ರ, ಸುದೀಪ್, ಶ್ರೀಯಾ ಶರಣ್ ಸೇರಿದಂತೆ ಪ್ರತಿಭಾವಂತರ ದೊಡ್ಡ ದಂಡೇ ಇದ್ದು, ಚಿತ್ರಕ್ಕೆ ‘ಕೆಜಿಎಫ್’ ಖ್ಯಾತಿಯ ರವಿ ಬಸ್ರೂರು ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭಾರೀ ಬಜೆಟ್ ನಲ್ಲಿ ನಿರ್ಮಾಣವಾದ ‘ಹನು-ಮಾನ್’ ಚಿತ್ರದ ಟೀಸರ್ ರಿಲೀಸ್

    ಭಾರೀ ಬಜೆಟ್ ನಲ್ಲಿ ನಿರ್ಮಾಣವಾದ ‘ಹನು-ಮಾನ್’ ಚಿತ್ರದ ಟೀಸರ್ ರಿಲೀಸ್

    ಪ್ರಶಾಂತ್ ವರ್ಮಾ ಆಕ್ಷನ್ ಕಟ್ ಹೇಳಿರುವ ತೇಜ ಸಜ್ಜ ನಟನೆಯ ಬಹು ನಿರೀಕ್ಷಿತ ತೆಲುಗು ಸಿನಿಮಾ ‘ಹನು-ಮಾನ್’ ಟೀಸರ್ ಬಿಡುಗಡೆಯಾಗಿದೆ. ಪ್ರೈಮ್ ಶೋ ಎಂಟಟೈನ್ಮೆಂಟ್ ಬ್ಯಾನರ್ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದೆ. ಟೀಸರ್ ಝಲಕ್ ಮೂಲಕ ಪ್ರೇಕ್ಷಕರೆದುರು ಬಂದಿರುವ ‘ಹನು – ಮಾನ್’ ಎಲ್ಲರ ಗಮನ ಸೆಳೆಯುತ್ತಿದೆ.  ಇದನ್ನೂ ಓದಿ:ಕೇಕ್‌ ಕತ್ತರಿಸಿ ಸಕ್ಸಸ್ ಆಚರಿಸಿದ ‌ʻಗಂಧದ ಗುಡಿʼ ಟೀಮ್

    ನಿರ್ದೇಶಕ ಪ್ರಶಾಂತ್ ವರ್ಮಾ ಭಾರತದ ಮೊದಲ ಸೂಪರ್ ಹೀರೋ ‘ಹನು-ಮಾನ್’ ಬಗ್ಗೆ ಕಥೆ ಹೆಣೆದು ಪ್ಯಾನ್ ಇಂಡಿಯಾ ನಿರ್ದೇಶಕನಾಗಿ ಹೊರ ಹೊಮ್ಮುತ್ತಿದ್ದಾರೆ. ಚಿತ್ರದಲ್ಲಿ ನಾಯಕ ನಟನಾಗಿ ಪ್ರತಿಭಾವಂತ ನಟ ತೇಜ ಸಜ್ಜ ನಟಿಸುತ್ತಿದ್ದು, ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸಿರೋದು ಟೀಸರ್ ಝಲಕ್ ನೋಡಿದಾಗಲೇ ತಿಳಿದು ಬರುತ್ತೆ. ಚಿತ್ರದಲ್ಲಿ ನಾಯಕಿಯಾಗಿ ಅಮೃತಾ ಐಯ್ಯರ್ ನಟಿಸಿದ್ದಾರೆ. ಬಿಡುಗಡೆಯಾಗಿರುವ ಟೀಸರ್ ಸಖತ್ ಪ್ರಾಮಿಸಿಂಗ್ ಆಗಿದ್ದು, ನಾಯಕ ನಟ ತೇಜ ಸಜ್ಜ ಲುಕ್, ಚಿತ್ರದ ಮೇಕಿಂಗ್, ಕ್ಯಾಮೆರಾ ವರ್ಕ್, ಮ್ಯೂಸಿಕ್ ಎಲ್ಲವೂ ಗಮನ ಸೆಳೆಯುತ್ತಿದೆ.

    ವರಲಕ್ಷಿ ಶರತ್ ಕುಮಾರ್,  ವಿನಯ್ ರೈ, ರಾಜ್ ದೀಪಕ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಗೆಟಪ್ ಶ್ರೀನು, ಸತ್ಯ ಒಳಗೊಂಡ ಸ್ಟಾರ್ ಕಲಾವಿದರ ತಾರಾಬಳಗ ಚಿತ್ರದಲ್ಲಿದೆ. ಯುವ ಹಾಗೂ ಪ್ರತಿಭಾವಂತ ಸಂಗೀತ ನಿರ್ದೇಶಕರಾದ ಗೌರಹರಿ, ಅನುದೀಪ್ ದೇವ್ ಮತ್ತು ಕೃಷ್ಣ ಸೌರಭ್ ಸಂಗೀತ ನಿರ್ದೇಶನ, ದಶರಧಿ ಶಿವೇಂದ್ರ ಕ್ಯಾಮೆರಾ ವರ್ಕ್, ಎಸ್. ಬಿ ರಾಜು ತಲರಿ ಸಂಕಲನ ಚಿತ್ರಕ್ಕಿದೆ. ಕೆ. ನಿರಂಜನ್ ರೆಡ್ಡಿ ಪ್ರೈಮ್ ಶೋ ಎಂಟಟೈನ್ಮೆಂಟ್ ಬ್ಯಾನರ್ ನಡಿ ಅದ್ದೂರಿಯಾಗಿ, ಬಿಗ್ ಬಜೆಟ್ ನಲ್ಲಿ ‘ಹನು-ಮಾನ್’ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಸಿನಿಮಾ ತಂಡ ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆ.

    Live Tv
    [brid partner=56869869 player=32851 video=960834 autoplay=true]

  • ‘ಹಾಸ್ಟೆಲ್ ಹುಡುಗರ’ ಜೊತೆಯಲ್ಲಿ ಮೋಹಕ ತಾರೆ ರಮ್ಯಾ:  ಟೀಸರ್ ರಿಲೀಸ್

    ‘ಹಾಸ್ಟೆಲ್ ಹುಡುಗರ’ ಜೊತೆಯಲ್ಲಿ ಮೋಹಕ ತಾರೆ ರಮ್ಯಾ: ಟೀಸರ್ ರಿಲೀಸ್

    ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagiddare) ಈ ಸಿನಿಮಾ ಹೆಸರು ನೀವು ಕೇಳಿರ್ತೀರಾ. ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಸಖತ್ ಕ್ರಿಯೇಟಿವ್ ಆಗಿರೋ ಸಿನಿಮಾ ಪ್ರಮೋಷನಲ್ ವೀಡಿಯೋಗಳು ನಿಮ್ಮನ್ನು ಸೆಳೆದಿರುತ್ತೆ. ಅದಕ್ಕೂ ಮಿಗಿಲಾಗಿ ಎಲ್ಲರ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಿತ್ರದ ಪೋಸ್ಟರ್ ಲಾಂಚ್ ಮಾಡಿದ್ದ ವೀಡಿಯೋನಂತೂ ಕಣ್ತುಂಬಿಕೊಂಡಿರ್ತಿರಾ.ಹೀಗೆ ಸ್ಟಾರ್ ನಟರ ಮೂಲಕ ಸಿನಿಮಾದ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿರೋ ಈ ಚಿತ್ರತಂಡ ಇದೀಗ  ಸ್ಯಾಂಡಲ್ ವುಡ್ ಕ್ವೀನ್ ಮೋಹಕ ತಾರೆ ರಮ್ಯಾ  (Ramya) ಅವರನ್ನು ಚಿತ್ರದ ಪ್ರಚಾರ ಕಾರ್ಯಕ್ಕೆ ಕರೆತಂದಿದೆ.

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ಕಿಚ್ಚ ಸುದೀಪ ಅವರಿಂದ ಸಿನಿಮಾ ಪ್ರಮೋಷನಲ್ ಕಟೆಂಟ್ ಮಾಡಿಸಿ ಗಮನ ಸೆಳೆದಿತ್ತು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಟೀಂ. ಸ್ಟಾರ್ ನಟರ ಮೂಲಕ ಸಿನಿಮಾ ಪ್ರಚಾರ ಒಂದು ಕಡೆಯಾದ್ರೆ ಇಂಟ್ರಸ್ಟಿಂಗ್ ಪ್ರಮೋಷನಲ್ ಕಂಟೆಂಟ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಎಲ್ಲರನ್ನು ಸಖತ್ ಇಂಪ್ರೆಸ್ ಮಾಡಿತ್ತು. ಹೀಗೆ ವಿಭಿನ್ನವಾಗಿ ಸಿನಿಮಾ ಪ್ರಚಾರ ಮಾಡುತ್ತಾ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಚಿತ್ರತಂಡ. ಈ ಬಾರಿ ಮೋಹಕ ತಾರೆ ರಮ್ಯಾ ಅವರನ್ನು ಚಿತ್ರದ ಪ್ರಚಾರ ಕಾರ್ಯಕ್ಕಾಗಿ ಕರೆತಂದಿದೆ. ರಮ್ಯಾ ಕೂಡ ಚಿತ್ರತಂಡಕ್ಕೆ ಸಾಥ್ ನೀಡಲು ಒಪ್ಪಿದ್ದು, ಬಹಳ ಖುಷಿಯಿಂದಲೇ ಚಿತ್ರದ ಪ್ರಮೋಷನಲ್ ಕಂಟೆಂಟ್ ವೀಡಿಯೋ ನಲ್ಲಿ ಭಾಗಿಯಾಗಿದ್ದಾರೆ. ಇಂದು ಸಂಜೆ ಆರು ಗಂಟೆಗೆ ಮೋಹಕ ತಾರೆ ಭಾಗಿಯಾಗಿರುವ ಚಿತ್ರದ ಪ್ರಮೋಷನಲ್ ಟೀಸರ್ ಬಿಡುಗಡೆ ಮಾಡುತ್ತಿದೆ ಚಿತ್ರತಂಡ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಅಡಿಗ ಸ್ಮಾರ್ಟ್ ಗೇಮ್ ಆಡ್ತಿದ್ದಾರೆ: ನೇಹಾ ಗೌಡ

    ವರುಣ್ ಸ್ಟುಡಿಯೋಸ್ ಹಾಗೂ ಪ್ರಜ್ವಲ್ ಬಿ ಪಿ ಅವರ ಗುಲ್ ಮೋಹರ್ ಫಿಲಂಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಮೊದಲ ಸಿನಿಮಾ ಇದಾಗಿದೆ. ಈ ಚಿತ್ರದ ಕಥೆ ಮೊದಲು ಕೇಳಿದವರು ಮತ್ತದೇ ನಮ್ಮೆಲ್ಲರ ಪ್ರೀತಿಯ ರಾಜರತ್ನ ಪುನೀತ್ ರಾಜ್ ಕುಮಾರ್. ಚಿತ್ರತಂಡ ಈ ಸಿನಿಮಾ ಚಿತ್ರೀಕರಣಕ್ಕೂ ಮೊದಲು ಅಪ್ಪು ಅವರ ಬಳಿ ಹೋಗಿ ಸಿನಿಮಾ ಬಗ್ಗೆ ಮಾತುಕತೆ ನಡೆಸಿದೆ. ಕಥೆ ಕೇಳಿ ಸಖತ್ ಇಂಪ್ರೆಸ್ ಆದ ಅಪ್ಪು ಸಿನಿಮಾ ಮಾಡಿ ಎಂದು ಇಡೀ ತಂಡಕ್ಕೆ ಬೆನ್ನುತಟ್ಟಿ ಪ್ರೋತ್ಸಾಹ ನೀಡಿದ್ರಂತೆ. ಅವರ ಆರ್ಶೀವಾದದೊಂದಿಗೆ ಸಿನಿಮಾ ಚಿತ್ರೀಕರಣ ಆರಂಭಿಸಿದ್ವಿ ಎಂದು ನಿರ್ಮಾಪಕ ವರುಣ್ ಕುಮಾರ್ ಹಾಗೂ ಪ್ರಜ್ವಲ್ ಬಿಪಿ ತಿಳಿಸಿದ್ದಾರೆ.

    ಯೂತ್ ಸಬ್ಜೆಕ್ಟ್ ಒಳಗೊಂಡ  ಚಿತ್ರವನ್ನು ನಿತಿನ್ ಕೃಷ್ಣಮೂರ್ತಿ (Nitin Krishnamurthy) ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹಲವು ರಂಗಭೂಮಿ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಇವರ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೂಡ ಚಿತ್ರದಲ್ಲಿರಲಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನವರಿಯಲ್ಲಿ ಸಿನಿಮಾ ತೆರೆಗೆ ತರುವ ಪ್ಲ್ಯಾನ್ ನಲ್ಲಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಧರ್ಮ ಕೀರ್ತಿರಾಜ್ ನಟನೆ ‘ವಸುಂಧರದೇವಿ’ ಚಿತ್ರದ ಟೀಸರ್ ಗೆ ಮೆಚ್ಚುಗೆ

    ಧರ್ಮ ಕೀರ್ತಿರಾಜ್ ನಟನೆ ‘ವಸುಂಧರದೇವಿ’ ಚಿತ್ರದ ಟೀಸರ್ ಗೆ ಮೆಚ್ಚುಗೆ

    ರ್ಮ ಕೀರ್ತಿರಾಜ್ ಹಾಗೂ ಸೋನುಗೌಡ ನಾಯಕ – ನಾಯಕಿಯಾಗಿ ನಟಿಸಿರುವ “ವಸುಂಧರದೇವಿ” (Vasundharadevi) ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈ ಸಂತೋಷವನ್ನು ಚಿತ್ರತಂಡ ಮಾಧ್ಯಮದ ಮುಂದೆ ಹಂಚಿಕೊಂಡರು. ಇದು ನನ್ನ ನಿರ್ದೇಶನದ ನಾಲ್ಕನೇ ಚಿತ್ರ. ಧರ್ಮ ಕೀರ್ತಿರಾಜ್ ಅವರೊಡನೆ ಇದು ಎರಡನೇ ಚಿತ್ರ. “ವಸುಂಧರದೇವಿ” ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಮುಖ್ಯಮಂತ್ರಿಗಳ ಮಗಳೊಬ್ಬಳು ತಾನು ಮುಖ್ಯಮಂತ್ರಿ ಆಗಬೇಕೆಂಬ ಆಸೆಯಿಂದ ಮುಖ್ಯಮಂತ್ರಿ ಆಗುತ್ತಾಳೆ. ನಂತರ ಆಕೆಯ ಕೊಲೆಯಾಗುತ್ತದೆ. ಆ ಕೊಲೆ ಮಾಡಿದ್ದು ಯಾರು? ಎಂದು ಕಂಡು ಹಿಡಿಯಲು ತನಿಖಾಧಿಕಾರಿ ಬರುತ್ತಾರೆ‌. ಆ ಪಾತ್ರದಲ್ಲಿ(ತನಿಖಾಧಿಕಾರಿ) ಧರ್ಮ ಕೀರ್ತಿರಾಜ್ ಅಭಿನಯಿಸಿದ್ದಾರೆ. “ವಸುಂಧರದೇವಿ” ಪಾತ್ರದಲ್ಲಿ ಸೋನು ಗೌಡ ನಟಿಸಿದ್ದಾರೆ. ಗೋವಿಂದೇ ಗೌಡ, ರೂಪೇಶ್, ಪೂಜಾ, ಸೆವೆನ್ ರಾಜ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು ಮುಂದಿನ ತಿಂಗಳು ತೆರೆಗೆ ಬರುವ ಸಾಧ್ಯತೆಯಿದೆ ಎಂದು  ನಿರ್ದೇಶಕ ಮಹೇಶ್ ಚಿನ್ಮಯ್ ತಿಳಿಸಿದರು.

    ನನ್ನ ಚಿತ್ರಕ್ಕೆ ಹಾರೈಸಲು‌ ಅಪ್ಪ- ಅಮ್ಮ ಬಂದಿದ್ದಾರೆ. ಅವರಿಗೆ ಧನ್ಯವಾದ. ಈ ಹಿಂದೆ ನಟಿಸಿರುವ ಚಿತ್ರಗಳಿಗಿಂತ ಈ ಚಿತ್ರದ ಪಾತ್ರ ವಿಭಿನ್ನವಾಗಿದೆ. ನನ್ನ ಹೇರ್ ಸ್ಟೈಲ್ ಕೂಡ ಈ ಚಿತ್ರಕ್ಕಾಗಿ ಬದಲಿಸಿಕೊಂಡಿದ್ದೀನಿ. ಮಹೇಶ್  ಒಂದೊಳ್ಳೆಯ ಚಿತ್ರ ನಿರ್ದೇಶನ ಮಾಡಿದ್ದಾರೆ. ಅಶೋಕ್ ನಿರ್ಮಾಣ ಮಾಡಿದ್ದಾರೆ. ಸೋನು ಗೌಡ ಸೇರಿದಂತೆ ಎಲ್ಲಾ ಕಲಾವಿದರು ಚೆನ್ನಾಗಿ ನಟಿಸಿದ್ದಾರೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಧರ್ಮ. ಇದನ್ನೂ ಓದಿ:ನಯನತಾರಾ- ವಿಘ್ನೇಶ್ ಶಿವನ್ ಬಾಡಿಗೆ ತಾಯ್ತನದ ಕೇಸ್‌ಗೆ ಬಿಗ್ ಟ್ವಿಸ್ಟ್

    ನಾನು‌ ಶಾಲಾ ದಿನಗಳಲ್ಲಿ ಮೈಕ್ ಮುಂದೆ ಮಾತನಾಡುವ ಪ್ರಸಂಗ ಬಂದರೆ ಹಿಂದೆ ಹೋಗುತ್ತಿದೆ. ಈಗ ಧೈರ್ಯ ಬಂದಿದೆ. ಇದೇ ಮೊದಲು ಮಾತನಾಡುತ್ತಿದ್ದೇನೆ. ಮಹೇಶ್ ಅವರು ಹೇಳಿದ್ದ ಕಥೆ ಇಷ್ಟವಾಯಿತು. ಧರ್ಮ ಕೀರ್ತಿರಾಜ್ ಅವರೆ ನಾಯಕರಾಗಲಿ ಎಂದೆ. ನಿರ್ಮಾಣದ ಜೊತೆಗೆ ಚಿತ್ರದಲ್ಲಿ ಒಂದು ಪಾತ್ರವನ್ನು ಮಾಡಿದ್ದೀನಿ ಎನ್ನುತ್ತಾರೆ ನಿರ್ಮಾಪಕ ಅಶೋಕ್ ಕವೇಟಿ. ಈ ಚಿತ್ರದಲ್ಲಿ‌ ಹಾಡಿಲ್ಲ. ರೀರೆಕಾರ್ಡಿಂಗ್ ಅದ್ಭುತವಾಗಿದೆ ಎಂದರು ಸಂಗೀತ ನಿರ್ದೇಶಕ ವಿನು ಮನಸು..

    ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ ನೀವೆಲ್ಲಾ ಪ್ರೋತ್ಸಾಹ ನೀಡುತ್ತಾ ಬಂದಿದ್ದೀರಿ.‌ ಈಗ ನನ್ನ ಮಗನಿಗೂ ನಿಮ್ಮಿಂದ ಆದೇ ಪ್ರೋತ್ಸಾಹ ಸಿಗುತ್ತಿದೆ. “ವಸುಂಧರದೇವಿ” ಚಿತ್ರದ ಟೀಸರ್ ಚೆನ್ನಾಗಿದೆ. ಚಿತ್ರ ಯಶಸ್ಸು ಕಾಣಲಿ ಎಂದರು ಹಿರಿಯ ನಟ ಕೀರ್ತಿರಾಜ್. ಕಲಾವಿದ ಸೆವೆನ್ ‌ರಾಜ್ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

  • ದೀಪಾವಳಿ ಹಬ್ಬಕ್ಕೆ ಶಾರುಖ್, ಸಲ್ಮಾನ್ ಕೊಡಲಿದ್ದಾರೆ ಭರ್ಜರಿ ಗಿಫ್ಟ್

    ದೀಪಾವಳಿ ಹಬ್ಬಕ್ಕೆ ಶಾರುಖ್, ಸಲ್ಮಾನ್ ಕೊಡಲಿದ್ದಾರೆ ಭರ್ಜರಿ ಗಿಫ್ಟ್

    ಬಾಲಿವುಡ್ (Bollywood) ನ ಹೆಸರಾಂತ ಸ್ಟಾರ್ ನಟರಾದ ಶಾರುಖ್ ಖಾನ್ (Shah Rukh Khan) ಮತ್ತು ಸಲ್ಮಾನ್ ಖಾನ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಕೊಡಲು ಮುಂದಾಗಿದ್ದಾರೆ. ಇದೇ ದೀಪಾವಳಿಗೆ ಕೊಡಲು ಆ ಉಡುಗೊರೆ ಸಿದ್ಧವಾಗುತ್ತಿದ್ದು, ಅಭಿಮಾನಿಗಳ ನೆಚ್ಚಿನ ಗಿಫ್ಟ್ ಅದಾಗಲಿದೆ. ಈ ಬಾರಿಯ ದೀಪಾವಳಿಗೆ ಬಿಟೌನ್ ಕೂಡ ಮತ್ತಷ್ಟು ಬೆಳಕಿನ ರಂಗೇರಲಿದೆ.

    ಬಾಲಿವುಡ್ ಬಿಗ್ ಬಜೆಟ್ ಸಿನಿಮಾಗಳು ದೀಪಾವಳಿಗಾಗಿ ಕಾಯುತ್ತಿದ್ದವು. ಈ ಬಾರಿ ಹೇಳಿಕೊಳ್ಳುವಂತಹ ಸಿನಿಮಾಗಳು ರಿಲೀಸ್ ಆಗದೇ ಇದ್ದರೂ, ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ನಟನೆಯ ಎರಡು ಚಿತ್ರಗಳ ಟೀಸರ್ ಬಿಡುಗಡೆ ಆಗಲಿವೆ. ಅದಕ್ಕಾಗಿ ಬಾಲಿವುಡ್ ಈಗಿನಿಂದಲೇ ಭರ್ಜರಿ ಸಿದ್ಧತೆ ಕೂಡ ಮಾಡಿಕೊಳ್ಳಲಾಗುತ್ತಿದೆ. ಈ ಇಬ್ಬರೂ ನಟರ ಅಭಿಮಾನಿಗಳಂತೂ ಆ ದಿನಕ್ಕಾಗಿ ಕಾಯುತ್ತಿದ್ದಾರೆ. ಇದನ್ನೂ ಓದಿ:ಟ್ರೋಲಿಗರಿಗೆ ಖಡಕ್ ಉತ್ತರ ಕೊಟ್ಟ ಜಾಹ್ನವಿ ಕಪೂರ್

    ಸದ್ಯ ಶಾರುಖ್ ಖಾನ್ ಪಠಾಣ್ (Pathan) ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರೆ, ಸಲ್ಮಾನ್ ಖಾನ್ (Salman Khan) ‘ಕಿಸಿ ಕಾ ಭಾಯ್ ಕಿಸಿ ಕಾ ಜಾನ್’ ಚಿತ್ರದ ಚಿತ್ರೀಕರಣದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈ ಎರಡೂ ಚಿತ್ರಗಳ ಟೀಸರ್ ಒಂದೇ ದಿನ ಬಿಡುಗಡೆ ಆಗುತ್ತಿರುವುದು ವಿಶೇಷ. ಅಕ್ಟೋಬರ್ 23 ರಂದು ಈ ಎರಡು ಚಿತ್ರಗಳ ಟೀಸರ್ ಬಿಡುಗಡೆಗೆ ಚಿತ್ರತಂಡ ರೆಡಿ ಮಾಡಿಕೊಂಡಿದೆ ಎನ್ನಲಾಗುತ್ತಿದೆ.

    ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಒಂದು ಕಾಲದಲ್ಲಿ ಇಬ್ಬರೂ ಎದುರಾಳಿಗಳು. ಹಾಗಾಗಿ ಕಳೆದ ಐದು ವರ್ಷಗಳಿಂದ ಒಂದೇ ದಿನಕ್ಕೆ ಈ ಇಬ್ಬರ ಯಾವುದೇ ಸಿನಿಮಾಗಳು ರಿಲೀಸ್ ಆಗಿರುವ ಇತಿಹಾಸವೇ ಇಲ್ಲ. ಐದು ವರ್ಷಗಳ ನಂತರ ಮೊದಲ ಬಾರಿಗೆ ಶಾರುಖ್ ಮತ್ತು ಸಲ್ಮಾನ್ ನಟನೆಯ ಚಿತ್ರಗಳ ಟೀಸರ್ (Teaser) ಒಂದೇ ದಿನ ಬಿಡುಗಡೆ ಆಗುತ್ತಿವೆ. ಹಾಗಾಗಿ ಅಖಾಡ ಯಾವ ರೀತಿಯಲ್ಲಿ ಕಾವು ಪಡೆದುಕೊಳ್ಳತ್ತೋ ಕಾದು ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಕುತೂಹಲ ಮೂಡಿಸುವ ನೈಜಘಟನೆ ಆಧಾರಿತ ‘ರಾಂಚಿ’ ಚಿತ್ರದ ಟೀಸರ್

    ಕುತೂಹಲ ಮೂಡಿಸುವ ನೈಜಘಟನೆ ಆಧಾರಿತ ‘ರಾಂಚಿ’ ಚಿತ್ರದ ಟೀಸರ್

    ರುದ್ರಾನಂದ ಆರ್ ಎನ್ ಹಾಗೂ ಅರುಣ್ ಕುಮಾರ್ ಎನ್ ನಿರ್ಮಾಣ‌ದ, ಶಶಿಕಾಂತ್ ಗಟ್ಟಿ (Shashikant Gatti) ನಿರ್ದೇಶನದ, ನೈಜಘಟನೆ ಆಧಾರಿತ  “ರಾಂಚಿ” (Ranchi) ಚಿತ್ರದ ಟೀಸರ್ (Teaser) ಬಿಡುಗಡೆಯಾಗಿದೆ. ನಾನು ಐ ಪಿ ಸಿ ಸೆಕ್ಷನ್ 300 ಎಂಬ ಸಿನಿಮಾ ನಿರ್ದೇಶನ ಮಾಡುತ್ತಿದ್ದೆ. ಆಗ ನನಗೆ “ರಾಂಚಿ”ಯಿಂದ ಒಂದು ಕರೆ ಬರುತ್ತದೆ. ನೀವು ರೈಲ್ವೆ ಇಲಾಖೆ ಕುರಿತು ಒಂದು ಡಾಕ್ಯುಮೆಂಟರಿ ಮಾಡಿಕೊಡಬೇಕು. ರಾಂಚಿಗೆ ಬನ್ನಿ. ಅವರ ಪರಿಶುದ್ಧ ಹಿಂದಿ ಭಾಷೆ ಕೇಳಿ,   ಇದು ಸರ್ಕಾರದಿಂದ ಬಂದಿರುವ ಕರೆ ಎಂದು ತಿಳಿದು ಸಂತೋಷವಾಯಿತು. ಆಮೇಲೆ ಯೋಚನೆ ಮಾಡಿದೆ. ಸರ್ಕಾರ ಇಂತಹ ವಿಷಯವನ್ನು ಟೆಂಡರ್ ಮೂಲಕ ಕರೆಯುತ್ತಾರೆ. ಇದು ಸುಳ್ಳು ಇರಬಹುದು ಎಂದು ಅಲ್ಲಿನ ಪೊಲೀಸ್ ಅಧಿಕಾರಿ ಪ್ರವೀಣ್ ಕುಮಾರ್ ಅವರಿಗೆ ಫೋನ್ ಮಾಡಿ ಈ ಬಗ್ಗೆ ಕೇಳಿದೆ. ಅವರು ಇದೆಲ್ಲಾ ಸುಳ್ಳು. ನೀವು ಇಲ್ಲಿಗೆ ಬರಬೇಡಿ ಎಂದರು. ಈ ರೀತಿ ಸಾಕಷ್ಟು ನಿರ್ದೇಶಕರು, ನಿರ್ಮಾಪಕರು ಈ ರೀತಿಯ ಕರೆಯಿಂದ ಮೋಸ ಹೋಗಿದ್ದಾರೆ. ಈ ವಿಷಯವನ್ನಿಟ್ಟುಕೊಂಡೆ “ರಾಂಚಿ” ಸಿನಿಮಾ ಮಾಡಿದ್ದೇವೆ.

    ನಾಯಕ ಪ್ರಭು ಮುಂಡ್ಕರ್ (Prabhu Mundkar) ಕಥೆ ಕೇಳಿ ನಟಿಸಲು ಒಪ್ಪಿದರು. ರುದ್ರಾನಂದ ಹಾಗೂ ಅರುಣ್‌ ಕುಮಾರ್ ನಿರ್ಮಾಣಕ್ಕೆ ಮುಂದಾದರು. ನೈಜಘಟನೆ ಆಧಾರಿತ ಸಿನಿಮಾ‌ವಿದು. “ರಾಂಚಿ”ಯಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣ ನಡೆದಿದೆ‌. 2020 ರಲ್ಲೇ ಸೆನ್ಸಾರ್ ಆಗಿತ್ತು. ಕೊರೋನ ಕಾರಣದಿಂದ ಬಿಡುಗಡೆ ವಿಳಂಬವಾಯಿತು.  ಒಂದೊಳ್ಳೆ ಸಿನಿಮಾ ಮಾಡಿರುವ ಖುಷಿಯಿದೆ. ದಿವ್ಯ ಉರುಡಗ (Divya Urudaga), ಟೋಟ ರಾಯ್ ಚೌಧರಿ, ಆರತಿ ನಾಯರ್, ಲಕ್ಷ್ಮಣ್ ಗೌಡ, ಸುರೇಶ್ ಹೆಬ್ಳೀಕರ್, ಉಷಾ ಭಂಡಾರಿ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ ಎಂದು ಚಿತ್ರದ ಕುರಿತು ನಿರ್ದೇಶಕ ಶಶಿಕಾಂತ್ ಗಟ್ಟಿ ಮಾಹಿತಿ ನೀಡಿದರು. ಇದನ್ನೂ ಓದಿ:‘ಅರ್ಧಂಬರ್ಧ ಪ್ರೇಮಕಥೆ’ಯಲ್ಲಿ ಅರವಿಂದ್-ದಿವ್ಯಾ ಉರುಡುಗ ಜೋಡಿ

    ಕೋವಿಡ್ ನಂತರ ಜನ ಸಿನಿಮಾ ನೋಡುವ ರೀತಿ ಬದಲಾಗಿದೆ. ಜನರ  ನಿರೀಕ್ಷೆ ಬೇರೆ ತರಹ ಇದೆ. ” ಕೆ.ಜಿ.ಎಫ್”, “ಚಾರ್ಲಿ”, ” ಕಾಂತಾರ” ದಂತಹ ಚಿತ್ರಗಳ ಗೆಲುವು ಇದಕ್ಕೆ ಸಾಕ್ಷಿ. ನಾನು ಸೈಂಟಿಸ್ಟ್ ಆಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದೆ. ಆನಂತರ ಚಿತ್ರರಂಗಕ್ಕೆ ಬಂದೆ. ನಾನು “ಡಬಲ್ ಇಂಜಿನ್” ಚಿತ್ರದಲ್ಲಿ ನಟಿಸಬೇಕಾದರೆ ಶಶಿಕಾಂತ್ ಈ ಚಿತ್ರದ ಕಥೆ ಹೇಳಿದರು. ನನಗೂ ನೈಜಘಟನೆ ಆಧಾರಿತ ಚಿತ್ರದಲ್ಲಿ ನಟಿಸಬೇಕೆಂಬ ಆಸೆಯಿತ್ತು. ಆ ಸಮಯದಲ್ಲಿ ಈ ಕಥೆ ಕೇಳಿ, ನಟಿಸಲು ಒಪ್ಪಿದೆ ಎಂದರು ನಟ ಪ್ರಭು ಮುಂಡ್ಕರ್.

    ಪ್ರಭು ಅವರ ಮೂಲಕ ನಿರ್ದೇಶಕ ಶಶಿಕಾಂತ್ ಗಟ್ಟಿ ಅವರ ಪರಿಚಯವಾಯಿತು. ಅವರು ಹೇಳಿದ ಕಥೆ ಮನಸ್ಸಿಗೆ ಹತ್ತಿರವಾಯಿತು. ನಿರ್ಮಾಣಕ್ಕೆ ಮುಂದಾದೆ ಎಂದು ನಿರ್ಮಾಪಕ ಅರುಣ್ ಕುಮಾರ್ ತಿಳಿಸಿದರು. ಚಿತ್ರದಲ್ಲಿ ನಟಿಸಿರುವ ಆರತಿ ನಾಯರ್, ಲಕ್ಷ್ಮಣ್ ಗೌಡ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಮಿಲನಾ ನಾಗರಾಜ್ ನಟನೆಯ ‘ಓ’ ಸಿನಿಮಾಗಾಗಿ ಹಾಡಿದ ಪುನೀತ್ ರಾಜ್ ಕುಮಾರ್

    ಮಿಲನಾ ನಾಗರಾಜ್ ನಟನೆಯ ‘ಓ’ ಸಿನಿಮಾಗಾಗಿ ಹಾಡಿದ ಪುನೀತ್ ರಾಜ್ ಕುಮಾರ್

    ವ್ ಮಾಕ್ಟೇಲ್  ಚಿತದ ನಂತರ ಮಿಲನಾ ನಾಗರಾಜ್ (Milana Nagaraj) ಹಾಗೂ ಅಮೃತಾ ಅಯ್ಯಂಗಾರ್ (Amrita Iyengar) ಒಟ್ಟಿಗೇ ನಟಿಸಿರುವ ವಿಭಿನ್ನ ಪ್ರೇಮಕಥಾಹಂದರ ಇರುವ ವಾಮಾಚಾರ ಹಾಗೂ ಹಾರರ್ ಹಿನ್ನೆಲೆಯಲ್ಲಿ ಮೂಡಿಬಂದಿರುವ  ಚಿತ್ರ ಓ (O). ಮಹೇಶ್ ಸಿ.ಅಮ್ಮಲ್ಲಿದೊಡ್ಡಿ (Mahesh Ammallidoddy) ಅವರ ಚಿತ್ರಕಥೆ ಹಾಗೂ ನಿರ್ದೇಶನವಿರುವ ಈ ಚಿತ್ರದ ಟ್ರೈಲರ್ (Trailer) ಬಿಡುಗಡೆ ಕಾರ್ಯಕ್ರಮ ವಿಜಯದಶಮಿಯ ಶುಭ ಸಂದರ್ಭದಲ್ಲಿ ನೆರವೇರಿತು. ಕಿರಣ್ ತಲಕಾಡು ಅವರು ಕಥೆ ಬರೆದು ಏಕಾಕ್ಷರ ಫಿಲಂಸ್ ಬ್ಯಾನರ್ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

    ಕೋವಿಡ್‌ಗೂ ಮುನ್ನವೇ ಪ್ರಾರಂಭವಾಗಿದ್ದ ಈ ಚಿತ್ರ ಎಲ್ಲಾ ಅಡೆತಡೆಗಳನ್ನು ದಾಟಿ ಈಗ ಬಿಡುಗಡೆಯ ಹಂತ ತಲುಪಿದೆ. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಮಹೇಶ್ ಈವರೆಗೆ ನಾನೇನು ಹಾರರ್ ಸಿನಿಮಾಗಳನ್ನು ನೋಡಿದ್ದೇನೋ, ಅದೆಲ್ಲಕ್ಕಿಂತ ವಿಭಿನ್ನವಾಗಿರಬೇಕು ಎಂದು ಮಾಡಿದ ಚಿತ್ರ. ಒಂದು ಕುಟುಂಬದಲ್ಲಿ ಅಕ್ಕತಂಗಿಯ ಮೇಲೆ ನಡೆಯುವ ಕಥೆಯಿದು. ಓ ಎಂಬ ಪದಕ್ಕೆ ಅರ್ಥವನ್ನು ಚಿತ್ರದಲ್ಲಿ ಹೇಳಿದ್ದೇವೆ. ಅಲ್ಲದೆ ವಾಮಾಚಾರ ಮಾಡುವುದು ತಪ್ಪು ಅಂತಲೇ ತೋರಿಸಿದ್ದೇವೆ. ಈಗಾಗಲೇ ಚಿತ್ರದ ಫಸ್ಟ್ ಕಾಪಿ ಬಂದಿದ್ದು, ನ.೧೧ಕ್ಕೆ  ಬಿಡುಗಡೆಯಾಗುತ್ತಿದೆ. ನನ್ನ ಜೊತೆ ಕೆಲಸ ಮಾಡಿರುವ ರಿತೇಶ್, ಚೇತನ್ ಮೂಲಕ ನಿರ್ಮಾಪಕ ಕಿರಣ್ ಅವರು ಪರಿಚಯವಾದರು ಎಂದು ವಿವರಿಸಿದರು. ಇದನ್ನೂ ಓದಿ:ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ ಮೂರು ದಿನದ ಗಳಿಕೆ 230 ಕೋಟಿಗೂ ಅಧಿಕ

    ನಿರ್ಮಾಪಕ ಕಿರಣ್ ತಲಕಾಡು ಮಾತನಾಡುತ್ತ ನನಗೆ ಚಿಕ್ಕವನಿದ್ದಾಗಲೇ ನನಗೆ ಏಕಾಕ್ಷರ ಶೀರ್ಷಿಕೆಯಿಟ್ಟುಕೊಂಡು ಸಿನಿಮಾ ಮಾಡಬೇಕೆಂಬ ಆಸೆಯಿತ್ತು. ಸೆನ್ಸಾರ್ ಮಂಡಳಿಯವರು ಸಿನಿಮಾ ನೋಡಿ ತುಂಬಾ ಚೆನ್ನಾಗಿ ಮೂಡಿಬಂದಿದೆ ಎಂದು ಪ್ರಶಂಸಿಸಿದರು. ನಮ್ಮ ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರು ಒಂದು ಹಾಡನ್ನು ಹಾಡಿದ್ದಾರೆ. ಆ ಹಾಡಿನ ಬಿಡುಗಡೆಯನ್ನು ದೊಡ್ಡ ಇವೆಂಟ್ ಮೂಲಕ ಮಾಡಬೇಕೆಂಬ ಯೋಚನೆಯಿದೆ. ಆಡಿಯೋ ಬಿಡುಗಡೆಗೆ ನಾನು ಬರುತ್ತೇನೆ ಎಂದೂ ಪುನೀತ್ ಅವರು ಹೇಳಿದ್ದರು.ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಚಿತ್ರವನ್ನು ಜನರಿಗೆ ಹೇಗೆಲ್ಲಾ ತಲುಪಿಸಬೇಕೆಂದು ಸಾಕಷ್ಟು ಯೋಜನೆಗಳನ್ನು ಹಾಕಿಕೊಂಡಿದ್ದೇವೆ ಎಂದು ಹೇಳಿದರು.

    ನಾಯಕಿ ಮಿಲನಾ ನಾಗರಾಜ್ ಮಾತನಾಡಿ ಹಬ್ಬದ ಶುಭ ದಿನದಂದು ನಮ್ಮ ಚಿತ್ರದ ಟ್ರೇಲರ್ ಬಿಡುಗಡೆಯಾಗುತ್ತಿದೆ. ಲಾಕ್‌ಡೌನ್‌ಗೂ ಮುನ್ನವೇ ಈ ಸಿನಿಮಾ ಪ್ರಾರಂಭವಾಗಿತ್ತು. ಬೇರೆಯದೇ ರೀತಿಯ ಅನುಭವ ಕೊಡುವಂಥ ಚಿತ್ರವಿದು. ಈ ಥರದ ಚಿತ್ರಗಳನ್ನು ಮಾಡುವಾಗ ತುಂಬಾ ಸಹನೆ ಇರಬೇಕು, ಅದು ಈ ನಿರ್ದೇಶಕರಲ್ಲಿತ್ತು. ಅಮೃತ ನನ್ನ ಸಹೋದರಿ ಪಾತ್ರ ಮಾಡಿದ್ದಾರೆ. ಸಿದ್ದು ಕೂಡ ಒಂದೊಳ್ಳೇ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ಬ್ಲಾಕ್ ಮ್ಯಾಜಿಕ್, ಹಾರರ್ ಹೀಗೆ ತುಂಬಾ ವಿಷಯಗಳಿವೆ. ಇದನ್ನು ನಾರ್ಮಲ್ ಸಿನಿಮಾ ರೀತಿ ಶೂಟ್ ಮಾಡಲು ಸಾಧ್ಯವಿಲ್ಲ, ಬೇರೆಥರದ ಶಾಟ್ ಇಡಬೇಕು ಎಂದು ಚಿತ್ರದ ಬಗ್ಗೆ ಸಾಕಷ್ಟು ಮಾಹಿತಿ ಹಂಚಿಕೊಂಡರು. ನಂತರ ಅಮೃತ ಅಯ್ಯಂಗಾರ್ ಮಾತನಾಡಿ ಚಿತ್ರದಲ್ಲಿ ಹಾರರ್ ಎಫೆಕ್ಟ್ ತುಂಬಾ ಚೆನ್ನಾಗಿ ಮೂಡಿಬಂದಿದೆ. ನನ್ನದು  ಎಲ್ಲ ಥರದ ಎಮೋಷನ್ ಕ್ಯಾರಿ ಮಾಡುವಂಥ ಪಾತ್ರ. ಜನರಿಗೆ ಹೆದರಿಸೋದು ತುಂಬಾ ಕಷ್ಟದ ಕೆಲಸ, ಕೆಲವು ಸೀನ್‌ಗಲ್ಲಿ ಆಕ್ಟ್  ಮಾಡುವಾಗ ತುಂಬಾ ಭಯವಾಗಿತ್ತು. ಆಲಾಪ್ ನನ್ನ ತಮ್ಮನ ಪಾತ್ರ ಮಾಡಿದ್ದಾನೆ. ಅವನ ಜೊತೆಗೇ ನನಗೆ ಹೆಚ್ಚು ಸೀನ್‌ಗಳಿವೆ ಎಂದರು. ನಾಯಕ ಸಿದ್ದು ಮೂಲಿಮನಿ ಮಾತನಾಡಿ ನಾನು ಅಭಿನಯಿಸಿದ ಮೊದಲ ಚಿತ್ರವಿದು. ಆಗ ನಾನು ಬೇರೊಂದು ಸಿನಿಮಾಗೆ ಆಡಿಷನ್ ಕೊಟ್ಟಿದ್ದೆ, ಸ್ನೇಹಿತ ಮಹೇಶ್ ನಾನೊಂದು ಸಿನಿಮಾ ಮಾಡುತ್ತಿದ್ದೇನೆ. ಅದರಲ್ಲಿ ನೀನೇ ಹೀರೋ ಅಂದಿದ್ದರು. ಹೇಳಿದ ಹಾಗೇ ಕರೆದು ಹೀರೋ ಮಾಡಿದ್ದಾರೆ ಎಂದು ಹೇಳಿಕೊಂಡರು.

    ನಾಯಕಿಯರ ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಹಿರಿಯನಟಿ ಸಂಗೀತಾ ಮಾತನಾಡಿ ನಿರ್ಮಾಪಕ ಕಿರಣ್ ನನಗೆ ಫ್ಯಾಮಿಲಿ ಫ್ರೆಂಡ್. ಅವರಿಗೆ ಸಿನಿಮಾ ಬಗ್ಗೆ ತುಂಬಾ ಆಸಕ್ತಿಯಿದೆ. ಇನ್ನೂ ಒಳ್ಳೊಳ್ಳೇ ಚಿತ್ರಗಳನ್ನು ಮಾಡುವಂತಾಗಲಿ, ನಾನೀ ಚಿತ್ರದಲ್ಲಿ ಮಾ.ಆಲಾಪ್, ಅಮೃತಾ ಹಾಗೂ ಮಿಲನಾರ ತಾಯಿಯಾಗಿ ನಟಿಸಿದ್ದೇನೆ ಎಂದು ಹೇಳಿದರು. ಚಿತ್ರಕ್ಕೆ ಛಾಯಾಗ್ರಾಹಕರಾಗಿ ದಿಲೀಪ್ ಚಕ್ರವರ್ತಿ ಕೆಲಸ ಮಾಡಿದ್ದಾರೆ. ಕಿರಣ್ ರವೀಂದ್ರನಾಥ್ ಅವರ ಸಂಗೀತ ಸತೀಶ್ ಬಾಬು ಅವರ ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ. ಉಗ್ರಂ, ಕೆಜಿಎಫ್ ಖ್ಯಾತಿಯ ಶ್ರೀಕಾಂತ್ ಸಂಕಲನಕಾರರಾಗಿ ಕೆಲಸ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಾಹುಬಲಿ ನಟ ಪ್ರಭಾಸ್ ಅಂಡ್ ಟೀಮ್ ಗೆ ಗೃಹ ಸಚಿವರ ಎಚ್ಚರಿಕೆ: ಹನುಮನಿಗೆ ಅವಮಾನ

    ಬಾಹುಬಲಿ ನಟ ಪ್ರಭಾಸ್ ಅಂಡ್ ಟೀಮ್ ಗೆ ಗೃಹ ಸಚಿವರ ಎಚ್ಚರಿಕೆ: ಹನುಮನಿಗೆ ಅವಮಾನ

    ಪ್ರಭಾಸ್ (Prabhas) ನಟಿಸಿರುವ ‘ಆದಿಪುರುಷ್’ (Aadi Purush) ಸಿನಿಮಾದಲ್ಲಿ ರಾಮಾಯಣಕ್ಕೆ ಅಪಮಾನ ಮಾಡಿದ್ದಾರೆಂದು ಹಿಂದೂ ಪರ ಸಂಘಟನೆಗಳು ಆರೋಪಿಸಿವೆ. ರಾಮಾಯಣದ ಪಾತ್ರಗಳನ್ನು ತಮಗಿಷ್ಟ ಬಂದಂತೆ ಪ್ರೆಸೆಂಟ್ ಮಾಡಿರುವುದಕ್ಕಾಗಿ ಭಾರೀ ಆಕ್ರೋಶ ವ್ಯಕ್ಯವಾಗುತ್ತಿದೆ. ಟೀಸರ್ ಕೂಡ ಕಳಪೆ ಮಟ್ಟದ್ದಾಗಿದೆ ಎಂದು ಟ್ರೋಲಿಗರು ಸಿನಿಮಾ ಬೆನ್ನು ಬಿದ್ದಿದ್ದಾರೆ. ಈ ನಡುವೆ ಮಧ್ಯ ಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಚಿತ್ರತಂಡಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.

    ಆದಿಪುರುಷ್ ಸಿನಿಮಾದಲ್ಲಿ ಹಿಂದೂಗಳ ಭಾವನೆ ಧಕ್ಕೆ ಮಾಡಲಾಗಿದೆ ಎಂದು ಗೃಹ ಸಚಿವರು ಆರೋಪಿಸಿದ್ದು, ಈಗಾಗಲೇ ಬಿಡುಗಡೆಗೊಂಡ ಟೀಸರ್ ನಲ್ಲಿ ಹನುಮಂತ ಪಾತ್ರಧಾರಿಗೆ ಲೆದರ್ ಬಟ್ಟೆಗಳನ್ನು ತೊಡಿಸಲಾಗಿದೆ. ಹನುಮನ ಸೈನಕ್ಕೂ ಲೆದರ್ ಬಟ್ಟೆ ಇದೆ. ಹೀಗಾಗಿ ಹನುಮ ದೇವರಿಗೆ ಅಪಮಾನ ಮಾಡಲಾಗಿದೆ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ (Narottam Mishra) ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅದನ್ನು ಸರಿ ಮಾಡದೇ ಇದ್ದರೆ ಪರಿಣಾಮ ಸರಿ ಇರಲ್ಲ ಎಂದು ಚಿತ್ರತಂಡಕ್ಕೆ ತಿಳಿಸಿದ್ದಾರೆ.

    ಈ ಕುರಿತು ಮಾತನಾಡಿರುವ ಮಿಶ್ರಾ, ಲೆದರ್ ಬಟ್ಟೆಗಳನ್ನು ಹಾಕಿರುವ ಕುರಿತು ನಿರ್ದೇಶಕರಿಗೆ ಮತ್ತು ನಿರ್ಮಾಪಕರಿಗೆ ಪತ್ರ ಬರೆಯುವುದಾಗಿ ತಿಳಿಸಿರುವ ಅವರು, ಒಂದು ವೇಳೆ ಆ ದೃಶ್ಯಗಳನ್ನು ತಗೆದು ಹಾಕದೇ ಇದ್ದರೆ ಕಾನೂನು ಕ್ರಮಕ್ಕೂ ತಾವು ಹಿಂಜರಿಯುವುದಿಲ್ಲ ಎನ್ನುತ್ತಾರೆ.  ಇಂತಹ ಅಪಮಾನಗಳನ್ನು ಯಾವತ್ತಿಗೂ ಹಿಂದೂಗಳ ಸಹಿಸುವುದಿಲ್ಲ ಎಂದೂ ಅವರು ಹೇಳಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಗೆ ನಾನು ಲವ್ ಮಾಡೋಕೆ ಬಂದಿಲ್ಲ: ಗೊಬ್ಬರಗಾಲಗೆ ಕಾವ್ಯಶ್ರೀ ವಾರ್ನಿಂಗ್

    ಆದಿ ಪುರುಷ್ ಟೀಸರ್ (Teaser) ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು, ಸ್ವತಃ ಪ್ರಭಾಸ್ ಕೂಡ ಕೋಪ ಮಾಡಿಕೊಂಡಿದ್ದಾರೆ. ಟೀಸರ್ ಬಿಡುಗಡೆ ಸಮಾರಂಭ ಮುಗಿದ ನಂತರ ನಿರ್ದೇಶಕರನ್ನು ತಮ್ಮ ರೂಮ್ ಗೆ ಕರೆದು ಬೈದಿದ್ದಾರೆ ಎಂದು ಹೇಳಲಾಗುತ್ತಿದೆ. ಇದಲ್ಲದೇ ಸೈಫ್ ಅಲಿ ಖಾನ್ (Saif Ali Khan) ಅವರಿಗೆ ರಾವಣನ ಪಾತ್ರ ಕೊಟ್ಟಿದ್ದಕ್ಕೂ ಹಲವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ರಾವಣನ ರೀತಿಯಲ್ಲಿ ಅವರು ಕಾಣುತ್ತಿಲ್ಲ ಎಂದು ಟ್ರೋಲ್ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]