ಕನ್ನಡದ ಹೆಮ್ಮೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ” (Kabzaa)ದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 17 ರ ಸಂಜೆ 5 ಗಂಟೆಗೆ ಆನಂದ್ ಆಡಿಯೋ ಮೂಲಕ ಬಹು ನಿರೀಕ್ಷಿತ ಈ ಚಿತ್ರದ ಟೀಸರ್ (Teaser) ಬಿಡುಗಡೆಯಾಗಲಿದೆ. ರಿಯಲ್ ಸ್ಟಾರ್ ಉಪೇಂದ್ರ (Upendra) ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಅಭಿನಯದ ಈ ಚಿತ್ರ ಆರಂಭದಿಂದಲೂ ಭಾರತದಾದ್ಯಂತ ಮನೆಮಾತಾಗಿದೆ.
ಈ ಚಿತ್ರದ ಟೀಸರ್ ಯಾವಾಗ ಬರಬಹುದೆಂದು ಕರ್ನಾಟಕ ಮಾತ್ರವಲ್ಲದೆ, ದೇಶದೆಲ್ಲೆಡೆಯಿರುವ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿತ್ತು. ಈಗ ಆ ಸಮಯ ನಿಗದಿಯಾಗಿದೆ. ಚಿತ್ರದ ನಾಯಕ ಉಪೇಂದ್ರ ಅವರ ಹುಟ್ಟುಹಬ್ಬದ (Birthday) ಸಂದರ್ಭದಲ್ಲಿ “ಕಬ್ಜ” ಚಿತ್ರದ ಟೀಸರ್ ಬಿಡುಗಡೆಯಾಗುತ್ತಿದೆ.
ಕನ್ನಡಿಗರ ಹೆಮ್ಮೆಯ “ಕೆ.ಜಿ.ಎಫ್ 2” (KGF 2) ಚಿತ್ರ ಈಗಾಗಲೇ ವಿಶ್ವದಾದ್ಯಂತ ವಿಜಯ ಪತಾಕೆ ಹಾರಿಸಿದೆ. ಕನ್ನಡಿಗರ ಮತ್ತೊಂದು ಹೆಮ್ಮೆಯ “ಕಬ್ಜ” ಚಿತ್ರ ಕೂಡ ಗೆಲ್ಲಲೇಬೇಕು. ಚಿತ್ರತಂಡದ ಅಪಾರ ಶ್ರಮದಿಂದ ನಿರ್ಮಾಣವಾಗಿರುವ “ಕಬ್ಜ” ಚಿತ್ರ ಗೆದ್ದರೆ ಕನ್ನಡ ಚಿತ್ರ ಗೆದ್ದಂತೆ. ಈ ಚಿತ್ರ ಗೆದ್ದರೆ ಮತ್ತೊಮ್ಮೆ ಬಾಲಿವುಡ್ ನಲ್ಲಿ ನಾವೇ ನಂಬರ್ ಒನ್ ಆಗಲಿದ್ದೇವೆ ಎನ್ನುತ್ತಿರುವ ಕನ್ನಡ ಕಲಾಭಿಮಾನಿಗಳು, “ಕಬ್ಜ” ಪ್ಯಾನ್ ಇಂಡಿಯಾ ಚಿತ್ರ ಪ್ರಪಂಚದಾದ್ಯಂತ ಪ್ರಚಂಡ ಯಶಸ್ಸು ಸಾಧಿಸಲಿ ಎಂದು ತುಂಬು ಮನಸ್ಸಿನಿಂದ ಹಾರೈಸುತ್ತಿದ್ದಾರೆ.
ಆರ್ ಚಂದ್ರು (R. Chandru) ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸೆಪ್ಟೆಂಬರ್ ಹದಿನೇಳರಂದು ಟೀಸರ್ ಬಿಡುಗಡೆಯಾಗಲಿದ್ದು, ಶೀಘ್ರದಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡುವುದಾಗಿ ಆರ್ ಚಂದ್ರು ಹೇಳಿದ್ದಾರೆ.
Live Tv
[brid partner=56869869 player=32851 video=960834 autoplay=true]
ಕನ್ನಡ ಚಿತ್ರರಂಗದ ಸುರದ್ರೂಪಿ ಹಾಗೂ ಪ್ರತಿಭಾವಂತ ನಟ ರಮೇಶ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಸಂದರ್ಭದಲ್ಲಿ ಅವರು ನಾಯಕರಾಗಿ ನಟಿಸಿರುವ “ಶಿವಾಜಿ ಸುರತ್ಕಲ್ 2” (Shivaji Suratkal 2 )ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಟೀಸರ್ (Teaser) ಬಿಡುಗಡೆ ಸಮಾರಂಭ ನಡೆಯಿತು. ಇದನ್ನೂ ಓದಿ:ಕಾಫಿನಾಡು ಚಂದು ಇನ್ಸ್ಟಾಗ್ರಾಂ ಅಕೌಂಟ್ ಹ್ಯಾಕ್ ಆಗಿದ್ದಕ್ಕೆ ಫ್ಯಾನ್ಸ್ ಬೇಸರ
ಎರಡು ವರ್ಷಗಳ ಹಿಂದೆ ಬಿಡುಗಡೆಯಾದ ” ಶಿವಾಜಿ ಸುರತ್ಕಲ್” ಚಿತ್ರಕ್ಕೆ ಸಿಕ್ಕ ಪ್ರಶಂಸೆಯೇ ಭಾಗ 2 ಮಾಡಲು ಸ್ಪೂರ್ತಿ. ಥಿಯೇಟರ್ ನಲ್ಲಿ ನಮ್ಮ ಚಿತ್ರ ಚೆನ್ನಾಗಿ ಓಡುತ್ತಿರುವ ಸಂದರ್ಭದಲ್ಲೇ ಲಾಕ್ ಡೌನ್ ಆಯಿತು..ಆನಂತರದ ವಿಷಯ ಎಲ್ಲರಿಗೂ ಗೊತ್ತು. ಆಮೇಲೆ ರಮೇಶ್ ಅರವಿಂದ್ (Ramesh Aravind) ಅವರ ಜೊತೆಗೆ ಸಾಕಷ್ಟು ಚರ್ಚೆ ನಡೆಸಿದ ನಂತರ “ಶಿವಾಜಿ ಸುರತ್ಕಲ್ 2” ಚಿತ್ರಕ್ಕೆ ಚಾಲನೆ ದೊರೆಯಿತು. ಎರಡನೇ ಭಾಗ ಮಾಡುವುದು ಅಷ್ಟು ಸುಲಭವಲ್ಲ. ಈಗ ಮೊದಲ ಹಾಗಲ್ಲ. ಎಲ್ಲರ ಬಳಿ ಮೊಬೈಲ್ ಇರುವುದರಿಂದ ಸಣ್ಣಸಣ್ಣ ವಿಷಯಗಳನ್ನು ಪ್ರೇಕ್ಷಕ ಗಮನಿಸುತ್ತಿರುತ್ತಾನೆ. ಈ ರೀತಿಯ ತಪ್ಪಾಗಿದೆ ಎಂದು ಆ ತಕ್ಷಣವೇ ತಿಳಿಸುತ್ತಾನೆ. ಅದನೆಲ್ಲಾ ಗಮನಿಸಿ ಚಿತ್ರ ಮಾಡುವ ಜವಾಬ್ದಾರಿ ನಿರ್ದೇಶಕನ ಮೇಲಿರುತ್ತದೆ. “ಶಿವಾಜಿ ಸುರತ್ಕಲ್ 2” ಕಥೆ ಸಹ ಚೆನ್ನಾಗಿದೆ. ಎಲ್ಲರಿಗೂ ಮೆಚ್ಚುಗೆಯಾಗಲಿದೆ. ರಮೇಶ್ ಅರವಿಂದ್ ಸರ್ ಹುಟ್ಟುಹಬ್ಬಕ್ಕೆ ಈ ಟೀಸರ್ ಬಿಡುಗಡೆ ಮಾಡಿದ್ದೀವಿ. ಇದು ನನ್ನೊಬ್ಬನ ಚಿತ್ರವಲ್ಲ. ತಂಡದ ಚಿತ್ರ ಎನ್ನುತ್ತಾರೆ ನಿರ್ದೇಶಕ ಆಕಾಶ್ ಶ್ರೀವತ್ಸ.
“ಶಿವಾಜಿ ಸುರತ್ಕಲ್” ಸಿಕ್ಕ ಗೆಲುವಿನಿಂದ ಭಾಗ 2 ಮಾಡಲು ಮುಂದಾದ್ದೆವು. ಅದರಲ್ಲೂ ರಮೇಶ್ ಅರವಿಂದ್ ಅವರ ಸಹಕಾರ ಅಪಾರ ಎಂದ ನಿರ್ಮಾಪಕ ಅನೂಪ್ ಗೌಡ, ನಿರ್ದೇಶಕರು ಸೇರಿದಂತೆ ಎಲ್ಲಾ ತಂತ್ರಜ್ಞರಿಗೆ ಹಾಗೂ ಕಲಾವಿದರಿಗೆ ಧನ್ಯವಾದ ತಿಳಿಸಿದರು. ನನ್ನ ನಿಮ್ಮ ಸ್ನೇಹಕ್ಕೆ ಮೂರು ದಶಕಗಳಾಗಿದೆ. ಈ ಮೂವತ್ತು ವರ್ಷಗಳಲ್ಲಿ ಸಾಕಷ್ಟು ಪಾತ್ರಗಳನ್ನು ಮಾಡಿದ್ದೇನೆ. ಆದರೆ ಒಂದೇ ಪಾತ್ರವನ್ನು ಎರಡನೇ ಬಾರಿ ಮಾಡುತ್ತಿರುವುದು “ಶಿವಾಜಿ ಸುರತ್ಕಲ್ 2” ಚಿತ್ರದಲ್ಲಿ ಮಾತ್ರ. ನನಗೆ ನಿರ್ದೇಶಕ ಆಕಾಶ್ ಶ್ರೀವತ್ಸ ಹದಿನೈದು ವರ್ಷಗಳಿಂದ ಪರಿಚಯ. “ಆಕ್ಸಿಡೆಂಟ್” ಚಿತ್ರದಲ್ಲಿ ನನ್ನೊಟ್ಟಿಗೆ ಕೆಲಸವನ್ನೂ ಮಾಡಿದ್ದಾರೆ. ಅದ್ಭುತ ನಿರ್ದೇಶಕ. ಒಳ್ಳೆಯ ತಂಡ. “ಶಿವಾಜಿ ಸುರತ್ಕಲ್ 2” ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ರಮೇಶ್ ಅರವಿಂದ್.
ನಾನು “ಶಿವಾಜಿ ಸುರತ್ಕಲ್” ಚಿತ್ರದಲ್ಲಿ ರಮೇಶ್ ಸರ್ ಪತ್ನಿ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಹಾಗಾಗಿ ನಿರ್ದೇಶಕ ಆಕಾಶ್ ಶ್ರೀವತ್ಸ ಅವರಿಗೆ ಭಾಗ ಎರಡು, ಮೂರು ಹೀಗೆ ಮಾಡುತ್ತಿರಿ ಎಂದು ಹೇಳಿದ್ದೀನಿ ಎನ್ನುತ್ತಾರೆ ನಟಿ ರಾಧಿಕಾ ನಾರಾಯಣ್ (Radhika Narayan). ನನಗೆ ಕೊರೋನ ನಂತರ ಇದು ಮೊದಲ ಪತ್ರಿಕಾಗೋಷ್ಠಿ. ರಮೇಶ್ ಸರ್ ಜೊತೆ ಅಭಿನಯ ಮಾಡುವುದು ನನ್ನ ಬಹು ದಿನಗಳ ಕನಸು. ಅದು ಈಗ ಈಡೇರಿದೆ. ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ್ದೇನೆ ಎಂದರು ನಟಿ ಮೇಫನ ಗಾಂವ್ಕರ್ (Meghana Gaonkar). ಇದೇ ಸಂದರ್ಭದಲ್ಲಿ ಚಿತ್ರತಂಡದಿಂದ ರಮೇಶ್ ಅರವಿಂದ್ ಅವರ ಹುಟ್ಟುಹಬ್ಬದ ಆಚರಣೆ ಸಹ ನಡೆಯಿತು.
ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ದರ್ಶನ್ – ಗುರುಪ್ರಸಾದ್ ಛಾಯಾಗ್ರಹಣ ಹಾಗೂ ಆಕಾಶ್ ಶ್ರೀವತ್ಸ (Akash Srivatsa)ಸಂಕಲನ ಈ ಚಿತ್ರಕ್ಕಿದೆ. ರಮೇಶ್ ಅರವಿಂದ್, ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್, ನಾಜರ್, ಆರಾಧ್ಯ, ರಮೇಶ್ ಭಟ್, ಶ್ರೀನಿವಾಸ್ ಪ್ರಭು, ಶೋಭ್ ರಾಜ್, ವಿದ್ಯಾಮೂರ್ತಿ, ವೀಣಾ ಸುಂದರ್, ರಘು ರಮಣಕೊಪ್ಪ, ಮಧುರ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Live Tv
[brid partner=56869869 player=32851 video=960834 autoplay=true]
ನಟ ರಮೇಶ್ ಅರವಿಂದ್ (Ramesh Aravind) ಇಂದು ಹುಟ್ಟು ಹಬ್ಬವನ್ನು ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಿಕೊಂಡರು. ಇವರ ಹುಟ್ಟು ಹಬ್ಬಕ್ಕಾಗಿಯೇ ರಮೇಶ್ ನಟನೆಯ ‘ಶಿವಾಜಿ ಸುರತ್ಕಲ್ 2’ (Shivaji Surathkal 2) ಸಿನಿಮಾದ ಟೀಸರ್ (Teaser) ರಿಲೀಸ್ ಮಾಡಲಾಗಿದೆ. ಇದೊಂದು ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಾಜಿ ಸುರತ್ಕಲ್ ಸಿನಿಮಾದ ಮುಂದುವರಿಕೆ ಭಾಗವಾಗಿದೆ. ಮೊದಲ ಭಾಗದಲ್ಲೇ ಈ ಸಿನಿಮಾ ಯಶಸ್ಸು ಕಂಡಿದ್ದು, ಎರಡನೇ ಭಾಗ ಕೂಡ ಕುತೂಹಲ ಮೂಡಿಸಿದೆ.
2020ರಲ್ಲಿ ಶಿವಾಜಿ ಸುರತ್ಕಲ್ ಕೇಸ್ ಆಫ್ ರಣಗಿರಿ ಹೆಸರಿನಲ್ಲಿ ಸಿನಿಮಾ ಮೂಡಿ ಬಂದಿತ್ತು. ಆಕಾಶ್ ಶ್ರೀವಾತ್ಸವ್ (Akash Srivatsa) ನಿರ್ದೇಶನದಲ್ಲಿ ಮೂಡಿ ಬಂದಿದ್ದ ಈ ಸಿನಿಮಾ ಬಾಕ್ಸ್ ಆಫೀಸಿನಲ್ಲೂ ಸಖತ್ ಕಮಾಯಿ ಮಾಡಿತ್ತು. ಹೀಗಾಗಿ ಎರಡನೇ ಭಾಗದಲ್ಲಿ ಈ ಚಿತ್ರವನ್ನು ತಯಾರಿಸಲಾಗುತ್ತಿದೆ. ರಮೇಶ್ ಅರವಿಂದ್ ಈ ಸಿನಿಮಾದಲ್ಲಿ ತನಿಖಾಧಿಕಾರಿಯ ಪಾತ್ರ ಮಾಡುತ್ತಿದ್ದಾರೆ. ಕೇಸ್ ನಂ 131ನ್ನು ಬೇಧಿಸುವಂತಹ ಪಾತ್ರದಲ್ಲಿ ಅವರು ಅಭಿನಯಿಸುತ್ತಿದ್ದಾರೆ. ಇದನ್ನೂ ಓದಿ: ರಾಕೇಶ್ ಸ್ಮಾರ್ಟ್ ಗೇಮ್ ಆಡುತ್ತಿದ್ದಾನೆ- ಸಾನ್ಯಾ ಕೆಂಡಾಮಂಡಲ
ಈ ನಡುವೆ ರಮೇಶ್ ಅರವಿಂದ್ ಅವರು ಬರೆದ, ಸಾವಣ್ಣ ಪಬ್ಲಿಕೇಷನ್ (Sawanna Books) ಪ್ರಕಟಿಸಿರುವ ‘ಪ್ರೀತಿಯಿಂದ ರಮೇಶ್’ ಯಶಸ್ಸಿನ ಸರಳ ಸೂತ್ರಗಳು ಹೆಸರಿನ ಪುಸ್ತಕವು (Book) ರವಿವಾರ ಬಿಡುಗಡೆ ಆಗುತ್ತಿದ್ದು, ಯಶಸ್ಸಿಗೆ ಸಂಬಂಧಿಸಿದಂತೆ ಬರಹಗಳು ಈ ಪುಸ್ತಕದಲ್ಲಿ ಇವೆ. ಸಿನಿಮಾ ಕ್ಷೇತ್ರದಲ್ಲಿ ಮಾತ್ರವಲ್ಲ, ಸಾಹಿತ್ಯ ವಲಯದಲ್ಲೂ ರಮೇಶ್ ಅವರು ಗುರುತಿಸಿಕೊಳ್ಳುತ್ತಿದ್ದಾರೆ. ಕಳೆದ ತಿಂಗಳವಷ್ಟೇ ವೀರಲೋಕ ಪ್ರಕಾಶನವು ರಮೇಶ್ ಅವರ ಮತ್ತೊಂದು ಪುಸ್ತಕವನ್ನು ಪ್ರಕಟಿಸಿತ್ತು. ಈಗ ಮತ್ತೊಂದು ಪುಸ್ತಕ ಓದುಗರ ಮಡಿಲಿಗೆ ಹಾಕಿದ್ದಾರೆ.
Live Tv
[brid partner=56869869 player=32851 video=960834 autoplay=true]
ಸಮಂತಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರವಾದ ‘ಯಶೋದಾ’ (Yashoda)ದ ಟೀಸರ್ ಇಂದು ಬಿಡುಗಡೆಯಾಗಿದೆ. ಪ್ರೇಕ್ಷಕರು ಹಿಂದೆಂದೂ ನೋಡದ ಸಮಂತಾ ಅವರ ಇನ್ನೊಂದು ಮುಖವನ್ನು ಈ ಟೀಸರ್ನಲ್ಲಿ ಅನಾವರಣಗೊಳಿಸಲಾಗಿದೆ. ಈ ಚಿತ್ರದಲ್ಲಿ ಸಮಂತಾ ಗರ್ಭಿಣಿಯಾಗಿ ಕಾಣಿಸಿಕೊಂಡಿದ್ದು, ವೈದ್ಯರು ಯಾವುದನ್ನು ಬೇಡ ಎಂದು ಸಲಹೆ ನೀಡಿರುತ್ತಾರೋ, ಅವನ್ನೆಲ್ಲ ಮಾಡುತ್ತಿರುವುದನ್ನು ನೋಡಬಹುದಾಗಿದೆ.
ಸೀಟಿನ ಅಂಚಿಗೆ ಕೂರಿಸುವಂತ ರೋಮಾಂಚಕ ಆಕ್ಷನ್ ದೃಶ್ಯಗಳಿರುವ ಈ ಟೀಸರ್ನಲ್ಲಿ ಅನಿವಾರ್ಯ ಮತ್ತು ಅತ್ಯಂತ ಅಪಾಯಕಾರಿ ಸಂದರ್ಭಗಳನ್ನು ಸಮಂತಾ (Samantha) ಹೇಗೆ ನಿರ್ವಹಿಸುತ್ತಾರೆ ಎಂಬುದನ್ನು ನೋಡಬಹುದು. ಸಮಂತಾ ಈ ಹಿಂದಿನ ಚಿತ್ರಗಳಲ್ಲಿ ಮಾಡದಿರುವ ಕೆಲಸಗಳನ್ನು ಈ ಚಿತ್ರದಲ್ಲಿ ಮಾಡಿದ್ದಾರೆ ಎನ್ನುತ್ತದೆ ಚಿತ್ರಂಡ. ಅದು ಏನು ಮತ್ತು ಯಾಕೆ ಎಂದು ಟೀಸರ್ (Teaser) ಸುಳಿವು ನೀಡಿದ್ದು, ಚಿತ್ರದ ಪೂರ್ಣಪಾಠ ಗೊತ್ತಾಗಬೇಕಿದ್ದರೆ, ಚಿತ್ರ ಬಿಡುಗಡೆಯಾದಾಗಲೇ ನೋಡಬೇಕು. ಇದನ್ನೂ ಓದಿ:ಏನ್ ಐಡ್ಯಾ ಗುರೂ: ಆರ್ಯವರ್ಧನ್ ಪಾತ್ರಕ್ಕೆ ಹರೀಶ್ ರಾಜ್ ಫಿಕ್ಸ್: ಫೇಸ್ ಟ್ರಾನ್ಸ್ ಪ್ಲಾಂಟ್ ಬಳಸಿ ಅನಿರುದ್ಧಗೆ ಗೇಟ್ ಪಾಸ್
ಈ ಚಿತ್ರದಲ್ಲಿ ಉನ್ನಿಮುಕುಂದನ್ (Unni Mukundan) ವೈದ್ಯನಾಗಿ ಕಾಣಿಸಿಕೊಂಡಿದ್ದು, ಟೀಸರ್ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ದೊಡ್ಡ ಬಜೆಟ್ನಲ್ಲಿ ಈ ಚಿತ್ರ ನಿರ್ಮಾಣವಾಗಿದ್ದು, ಪ್ರತಿ ದೃಶ್ಯ ಸಹ ಶ್ರೀಮಂತವಾಗಿ ಮೂಡಿಬಂದಿರುವುದರ ಜತೆಗೆ ತಾಂತ್ರಿಕವಾಗಿ ಅದ್ಭುತವಾಗಿ ಮೂಡಿಬಂದಿದೆ. ಅಂದಹಾಗೆ, ‘ಯಶೋದಾ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯದ ಹಂತದ ಬಂದಿದ್ದು, ಸದ್ಯದಲ್ಲೇ ವಿಶ್ವದಾದ್ಯಂತ ತೆಲುಗು, ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಪ್ರತಿಭಾವಂತ ನಿರ್ದೇಶಕ ಜೋಡಿ ಹರಿ-ಹರೀಶ್ (Hari Harish) ನಿರ್ದೇಶಿಸಿರುವ ಅದ್ಭುತ ಸಾಹಸ ದೃಶ್ಯಗಳನ್ನು ಹೊಂದಿರುವ ಈ ಆಕ್ಷನ್ ಥ್ರಿಲ್ಲರ್ ಚಿತ್ರವನ್ನು ದೊಡ್ಡ ಬಜೆಟ್ನಲ್ಲಿ ನಿರ್ಮಿಸಲಾಗಿದೆ. ಈ ಚಿತ್ರಕ್ಕೆ ಯಾವುದೇ ಕೊರತೆ ಉಂಟಾಗದಿರುವಂತೆ ನಿರ್ಮಾಪಕ ಶಿವಲೆಂಕ ಕೃಷ್ಣಪ್ರಸಾದ್ ನೋಡಿಕೊಂಡಿದ್ದು, ಅದ್ಧೂರಿಯಾಗಿ ನಿರ್ಮಿಸಿದ್ದಾರೆ. ‘ಯಶೋದಾ’ ಚಿತ್ರದಲ್ಲಿ ಸಮಂತಾ ಜೊತೆಗೆ ವರಲಕ್ಷ್ಮೀ ಶರತ್ಕುಮಾರ್, ಉನ್ನಿ ಮುಕುಂದನ್ ಸೇರಿದಂತೆ ಪ್ರತಿಭಾವಂತ ಕಲಾವಿದರ ದಂಡಿದ್ದು, ಚಿತ್ರಕ್ಕೆ ‘ಮೆಲೋಡಿ ಬ್ರಹ್ಮ’ ಎಂದೇ ಖ್ಯಾತರಾದ ಮಣಿಶರ್ಮ ಸಂಗೀತ ಸಂಯೋಜಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಸಮಂತಾ ಅಭಿನಯದ ಬಹುನಿರೀಕ್ಷೆಯ ಪ್ಯಾನ್ ಇಂಡಿಯಾ ಚಿತ್ರವಾದ ‘ಯಶೋದಾ’ದ ಟೀಸರ್ ಸೆ. 09ಕ್ಕೆ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಇದಕ್ಕೂ ಮುನ್ನ, ಬಿಡುಗಡೆಯಾದ ಚಿತ್ರದ ಸ್ನೀಕ್ ಪೀಕ್, ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳನ್ನು ಹುಟ್ಟುಹಾಕಿತ್ತು. ಈಗ ನಿರ್ದೇಶಕರಾದ ಹರಿ-ಹರೀಶ್ ಈ ಟೀಸರ್ ಮೂಲಕ ಪ್ರೇಕ್ಷಕರಲ್ಲಿ ಇನ್ನಷ್ಟು ಎದೆಬಡಿತ ಹೆಚ್ಚಿಸುವುದಕ್ಕೆ ಸಿದ್ಧರಾಗಿದ್ದಾರೆ. ಈಗಾಗಲೇ ಟೀಸರ್ ಬಿಡುಗಡೆ ಘೋಷಣೆ ಪೋಸ್ಟರ್ ಬಿಡುಗಡೆಯಾಗಿದ್ದು, ಈ ಪೋಸ್ಟರ್ ವೀಕ್ಷಕರ ಗಮನಸೆಳೆದಿದೆ.
‘ಯಶೋದಾ’ ಚಿತ್ರವು ಮೂಡಿಬಂದಿರುವ ಬಗ್ಗೆ ಖುಷಿಯಾಗಿರುವ ಶ್ರೀದೇವಿ ಮೂವೀಸ್ನ ನಿರ್ಮಾಪಕ ಶಿವಲೆಂಕ ಕೃಷ್ಣಪ್ರಸಾದ್, ಈ ಚಿತ್ರವನ್ನು ಐದು ಭಾಷೆಗಳಲ್ಲಿ ದೊಡ್ಡ ಮಟ್ಟದಲ್ಲಿ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಸಜ್ಜಾಗಿದ್ದಾರೆ.
ಸಮಂತಾ ಜತೆಗೆ ಈ ಚಿತ್ರದಲ್ಲಿ ವರಲಕ್ಷ್ಮೀ ಶರತ್ಕುಮಾರ್, ಉನ್ನಿ ಮುಕುಂದನ್, ರಾವ್ ರಮೇಶ್, ಮುರಳಿ ಶರ್ಮ, ಸಂಪತ್ ರಾಜ್, ಶತ್ರು, ಮಧಿರಿಮಾ, ಕಲ್ಪಿಕಾ ಗಣೇಶ್, ದಿವ್ಯ ಶ್ರೀಪಾದ, ಪ್ರಿಯಾಂಕಾ ಶರ್ಮ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ‘ಗಂಡುಮಗ’ ಎಂದು ಹಾಡಿ ಹೊಗಳಿದ ಜಗ್ಗೇಶ್
‘ಯಶೋದಾ’ ಚಿತ್ರಕ್ಕೆ ಮಣಿಶರ್ಮ ಸಂಗೀತ ಸಂಯೋಜಿಸಿದ್ದು, ಎಂ. ಸುಕುಮಾರ್ ಛಾಯಾಗ್ರಹಣ ಮಾಡಿದ್ದಾರೆ. ಪುಲಗಂ ಚಿನ್ನಾರಾಯಣ ಮತ್ತು ಡಾ ಚಲ್ಲ ಭಾಗ್ಯಲಕ್ಷ್ಮೀ ಅವರ ಸಂಭಾಷಣೆ, ಚಂದ್ರಬೋಸ್ ಮತ್ತು ರಾಮಜೋಗಯ್ಯ ಶಾಸ್ತ್ರಿ ಅವರ ಸಾಹಿತ್ಯ ಈ ಚಿತ್ರಕ್ಕಿದೆ.’ ಯಶೋದಾ’ ಚಿತ್ರವು ಸದ್ಯದಲ್ಲೇ ತೆಲುಗು, ತಮಿಳು, ಕನ್ನಡ, ಮಲಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.
Live Tv
[brid partner=56869869 player=32851 video=960834 autoplay=true]
ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟಿಸ್ತಿರುವ ಬಹುನಿರೀಕ್ಷಿತ ವಾಮನ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಜಬರ್ದಸ್ತ್ ಆಗಿ ಮೂಡಿ ಬಂದಿರುವ ಟೀಸರ್ ಝಲಕ್ ನಲ್ಲಿ ಧನ್ವೀರ್ ಮಾಸ್ ಲುಕ್ ನಲ್ಲಿ ಮಿಂಚಿದ್ದಾರೆ. ಅದ್ಧೂರಿ ಸೆಟ್, ಭರ್ಜರಿ ಆಕ್ಷನ್, ಧನ್ವೀರ್ ನಯಾ ಗೆಟಪ್, ಬ್ಯಾಗ್ರೌಂಡ್ ಮ್ಯೂಸಿಕ್, ವಿಷ್ಯೂವಲ್ಸ್ ಎಫೆಕ್ಟ್ ಟೀಸರ್ ನಲ್ಲಿ ಅದ್ಭುತವಾಗಿ ಮೂಡಿ ಬಂದಿದೆ. ಪಂಚಿಂಗ್ ಡೈಲಾಗ್ ಹೊಡೆಯುತ್ತಾ ಎಂಟ್ರಿ ಕೊಡುವ ಧನ್ವೀರ್ ಗುಣ ಎಂಬ ಪಾತ್ರದಲ್ಲಿ ನಟಿಸಿದ್ದಾರೆ.
1.50 ನಿಮಿಷ ಇರುವ ವಾಮನ ಸಿನಿಮಾದ ಟೀಸರ್ ತುಣುಕು ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸ್ತಿದ್ದು, ಶಂಕರ್ ರಾಮನ್ ಸಾರಥ್ಯದಲ್ಲಿ ಚಿತ್ರ ಮೂಡಿ ಬರ್ತಿದೆ. ಧನ್ವೀರ್ ಗೆ ಜೋಡಿಯಾಗಿ ಏಕ್ ಲವ್ ಯಾ ಬೆಡಗಿ ರೀಷ್ಮಾ ನಾಣಯ್ಯ ನಟಿಸ್ತಿದ್ದಾರೆ. ಈಗಾಗಲೇ 70 ದಿನ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಸದ್ಯ ಬಾಕಿ ಉಳಿದ ಭಾಗದ ಚಿತ್ರೀಕರಣದಲ್ಲಿ ನಿರತವಾಗಿದೆ. ಇದನ್ನೂ ಓದಿ:ಹೆಣ್ಣು ಮಗುವಿಗೆ ತಂದೆಯಾದ `ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಚಂದು ಗೌಡ
ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಖ್ಯಾತಿ ಗಳಿಸಿರುವ ಚೇತನ್ ಕುಮಾರ್ ತಮ್ಮದೇ ಈಕ್ವಿನಾಕ್ಸ್ ಗ್ಲೋಬಲ್ ಎಂಟರ್ ಟೈನ್ಮೆಂಟ್ ನಡಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಲವ್ ಸ್ಟೋರಿ ಜೊತೆಗೆ ಔಟ್ ಅಂಡ್ ಔಟ್ ಆಕ್ಷನ್ ಕಮರ್ಷಿಯಲ್ ಸಿನಿಮಾವಾಗಿರುವ ವಾಮನದಲ್ಲಿ ಖಳನಾಯಕನಾಗಿ ಸಂಪತ್ ನಟಿಸುತ್ತಿದ್ದು, ಉಳಿದಂತೆ ಅಚ್ಯುತ್ ಕುಮಾರ್, ತಾರಾ, ಶಿವರಾಜ್ ಕೆ ಆರ್ ಪೇಟೆ ಮತ್ತು ಕಾಕ್ರೋಚ್ ಸುದಿ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ. ಬಿ.ಅಜನೀಶ್ ಲೋಕನಾಥ್ ಸಂಗೀತ, ಮಹೇನ್ ಸಿಂಹ ಕ್ಯಾಮೆರಾ ಕೈಚಳಕ, ಸುರೇಶ್ ಆರ್ಮುಖ ಸಂಕಲನ, ಅರ್ಜುನ್ ರಾಜ್ ಆಕ್ಷನ್ ಸಿನಿಮಾಕ್ಕಿದೆ.
ಟಾಲಿವುಡ್ ಚಿತ್ರರಂಗದ ಭರವಸೆ ನಾಯಕ ಅಖಿಲ್ ಅಕ್ಕಿನೇನಿ ಏಜೆಂಟ್ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಲು ಸಜ್ಜಾಗಿದ್ದಾರೆ. ಸುರೇಂದ್ರ ರೆಡ್ಡಿ ನಿರ್ದೇಶನದಲ್ಲಿ ತಯಾರಾಗ್ತಿರುವ ಈ ಸಿನಿಮಾದ ಟೀಸರ್ ಇದೇ 15ಕ್ಕೆ ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗ್ತಿದೆ.
ಹೈ ಬಜೆಟ್ ಸಿನಿಮಾವಾಗಿರುವ ಏಜೆಂಟ್ ಸ್ಪೈ ಥ್ರಿಲ್ಲರ್ ಕಥಾಹಂದರ ಹೊಂದಿದ್ದು, ಈ ಚಿತ್ರಕ್ಕಾಗಿ ಅಖಿಲ್ ಬೇಜಾನ್ ಕಸರತ್ತು ನಡೆಸಿ ಬಾಡಿ ಟ್ರಾನ್ಸ್ ಫಾರ್ಮೆಷನ್ ಮಾಡಿಕೊಂಡಿದ್ದಾರೆ. ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಏಜೆಂಟ್ ಚಿತ್ರದಲ್ಲಿ ಸಾಕ್ಷಿ ವೈದ್ಯಗೆ ಅಖಿಲ್ ಗೆ ಜೋಡಿಯಾಗಿ ನಟಿಸಿದ್ದಾರೆ. ವಕ್ಕಂತಂ ವಂಶಿ ಕಥೆ ಬರೆದಿರುವ ಚಿತ್ರವನ್ನು ಎಕೆ ಎಂಟರ್‌ಟೈನ್‌ಮೆಂಟ್ಸ್ ಮತ್ತು ಸುರೇಂದರ್ 2 ಸಿನಿಮಾ ಬ್ಯಾನರ್ ನಡಿ ರಾಮಬ್ರಹ್ಮ ಸುಂಕರ ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ:`ಹೊಯ್ಸಳ’ ಡಾಲಿಗೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಸಾಥ್
ಸೆನ್ಸೇಷನಲ್ ಮ್ಯೂಸಿಕ್ ಕಂಪೋಸರ್ ಹಿಪ್ ಹಾಪ್ ತಮಿಝಾ ಸಂಗೀತ, ರಸೂಲ್ ಎಲ್ಲೂರು ಕ್ಯಾಮೆರಾ, ರಾಷ್ಟ್ರ ಪ್ರಶಸ್ತಿ ವಿಜೇತ ನವೀನ್ ನೂಲಿ ಸಂಕಲನ, ಅವಿನಾಶ್ ಕೊಲ್ಲಾ ಕಲಾ ನಿರ್ದೇಶನ ಚಿತ್ರಕ್ಕಿದ್ದು, ಅಜಯ್ ಸುಂಕರ, ಪತಿ ದೀಪಾ ರೆಡ್ಡಿ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಈಗಾಗ್ಲೇ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ, ಇದೇ ತಿಂಗಳ 15ಕ್ಕೆ ಟೀಸರ್ ಬಿಡುಗಡೆ ಮಾಡುವ ಮೂಲಕ ಪ್ರಚಾರಕ್ಕೆ ಮುನ್ನುಡಿ ಬರೆಯುತ್ತಿದೆ.
Live Tv
[brid partner=56869869 player=32851 video=960834 autoplay=true]
ತಮಿಳಿನ ಖ್ಯಾತ ಹಿರಿಯ ನಿರ್ದೇಶಕ ಮಣಿರತ್ನಂ ಮತ್ತೊಮ್ಮೆ ಸಿಡಿದೆದ್ದಿದ್ದಾರೆ. ಮತ್ತೆ ಅವರು ಹಳೆಯ ದಿನಗಳಿಗೆ ಮರಳಿದ್ದಾರೆ. ಒಂದು ಕಾಲದಲ್ಲಿ ಮಣಿರತ್ನಂ ಸಿನಿಮಾಗಳು ಅಂದರೆ, ಅದೊಂದು ರೀತಿಯಲ್ಲಿ ಮಾದರಿ ಆಗಿರುತ್ತಿದ್ದವು. ಅದರದ್ದೇ ಆದ ಟ್ರೆಂಡ್ ಸೆಟ್ ಮಾಡುತ್ತಿದ್ದವು. ಇದೀಗ ಮತ್ತೆ ಅಂಥದ್ದೊಂದು ಟ್ರೆಂಡ್ ಸೃಷ್ಟಿ ಮಾಡಿದ್ದಾರೆ ಮಣಿರತ್ನಂ. ಇವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಪೊನ್ನಿಯನ್ ಸೆಲ್ವನ್ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ದೃಶ್ಯ ವೈಭವ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.
ನಿನ್ನೆಯಷ್ಟೇ ಕನ್ನಡದಲ್ಲೂ ಈ ಟೀಸರ್ ಅನ್ನು ರಕ್ಷಿತ್ ಶೆಟ್ಟಿ ಬಿಡುಗಡೆ ಮಾಡಿದ್ದು, ಕನ್ನಡದಲ್ಲೂ ಮೊದಲ ಭಾಗದ ಟೀಸರ್ ಟ್ರೆಂಡಿಂಗ್ ನಲ್ಲಿದೆ. ಅದರಲ್ಲೂ ಕರ್ನಾಟಕ ಮೂಲದ ಐಶ್ವರ್ಯ ರೈ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿರುವುದರಿಂದ ಸಹಜವಾಗಿಯೇ ಸಿನಿಮಾದ ಬಗ್ಗೆ ಕುತೂಹಲ ಮೂಡಿಸಿದೆ. ಮೂಲ ತಮಿಳಿನಲ್ಲಿ ಈ ಸಿನಿಮಾ ಮೂಡಿ ಬಂದಿದ್ದರೂ, ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಚಿತ್ರ ರಿಲೀಸ್ ಆಗಲಿದೆಯಂತೆ. ಇದನ್ನೂ ಓದಿ : ಪುಷ್ಪಾ 2 : ವಿಜಯ್ ಸೇತುಪತಿ ಎಂಟ್ರಿಗೆ ಫಹಾದ್ ಫಾಸಿಲ್ ಮುನಿಸು?
ಪೊನ್ನಿಯನ್ ಸೆಲ್ವನ್ ದೊಡ್ಡ ತಾರಾ ಬಳಗವನ್ನೇ ಹೊಂದಿರುವ ಸಿನಿಮಾ. ಐಶ್ವರ್ಯ ರೈ, ವಿಕ್ರಮ್, ಕಾರ್ತಿ ಸೇರಿದಂತೆ ಹೆಸರಾಂತ ಕಲಾವಿದರೇ ನಟಿಸಿದ್ದಾರೆ. 1955ರಲ್ಲಿ ಕಲ್ಕಿ ಕೃಷ್ಣಮೂರ್ತಿ ಅವರು ಬರೆದ ಪೊನ್ನಿಯಿನ್ ಸೆಲ್ವನ್ ಕಾದಂಬರಿಯನ್ನು ಆಧರಿಸಿ ಈ ಸಿನಿಮಾ ಮಾಡಿದ್ದಾರಂತೆ ನಿರ್ದೇಶಕರು. ಇದು ಚೋಳ ಸಾಮ್ರಾಜ್ಯದ ಬಗೆಗಿನ ಸಿನಿಮಾವಾಗಿದ್ದು, ಆ ಕಾಲವನ್ನು ಮಣಿರತ್ನಂ ಅವರು ಸಮರ್ಥವಾಗಿ ಕಟ್ಟಿಕೊಟ್ಟಿದ್ದಾರೆ ಎಂದು ಹೇಳುತ್ತಿದೆ ರಿಲಿಸ್ ಆಗಿರುವ ಟೀಸರ್.
Live Tv
[brid partner=56869869 player=32851 video=960834 autoplay=true]
ಈಗಾಗಲೇ ಅನೇಕ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿರುವ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಡೊಳ್ಳು ಸಿನಿಮಾದ ಟೀಸರ್ ಇಂದು ರಿಲೀಸ್ ಆಗಿದೆ. ಪವನ್ ಒಡೆಯರ್ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಾಗರ್ ಪುರಾಣಿಕ್ ಈ ಚಿತ್ರದ ನಿರ್ದೇಶಕ.ಈಗಾಗಲೇ ಹತ್ತಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದ ಹೆಗ್ಗಳಿಕೆ ಈ ಸಿನಿಮಾದ್ದು.
ಜನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಭಾರತದ ತಾಯಿ ಬೇರುಗಳಿದ್ದಂತೆ. ಜನಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಗ್ರಾಮೀಣ ಭಾರತದ ಜೀವಾಳ ಎಂಬ ಸಾರಂಶದೊಂದಿಗೆ ಹಳ್ಳಿಯಲ್ಲಿ ತೆರೆದುಕೊಳ್ಳುವ ಟೀಸರ್ ನಲ್ಲಿ ಡೊಳ್ಳಿನ ಮಹತ್ವದ ಬಗ್ಗೆ ತಿಳಿಸಲಾಗಿದೆ. ಕೈಲಾಸದಲ್ಲಿ ಕುಳಿತಿರುವ ಶಿವಪ್ಪನನ್ನು ಒಲಿಸಿಕೊಳ್ಳುವ ಭಕ್ತಿ ಮಾರ್ಗ ಕೂಡ ಡೊಳ್ಳು ಅಂತಾ ನಂಬಿರುವ ಹಳ್ಳಿ ಮಂದಿ ಸುತ್ತಾ, ಜನಪದ ಕಲೆ ಡೊಳ್ಳಿನ ಸುತ್ತಾ ಟೀಸರ್ ನ್ನು ಕಟ್ಟಿಕೊಡಲಾಗಿದೆ.
ಡೊಳ್ಳು ಕುಣಿತ ಕಂಟೆಂಟ್ ಹೊಂದಿರುವ ಈ ಸಿನ್ಮಾ ಈಗಾಗ್ಲೇ ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಅಲ್ಲದೇ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿಯೂ ಪ್ರದರ್ಶನಗೊಂಡಿದೆ. ಗೋವಿಂದಾಯ ನಮಃ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮಾಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್, ತಮ್ಮದೇ ಒಡೆಯರ್ ಮೂವಿಸ್’ ನಿರ್ಮಾಣ ಸಂಸ್ಥೆಯಡಿ ಡೊಳ್ಳು ಚಿತ್ರ ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ : ಜೈ ಶ್ರೀರಾಮ್ ಎನ್ನುತ್ತಾ ಮುಸ್ಲಿಮರನ್ನು ಹತ್ಯೆ ಮಾಡುವುದು, ಕಾಶ್ಮೀರ ಪಂಡಿತರ ಹತ್ಯೆಗೆ ಸಮ: ಸಾಯಿ ಪಲ್ಲವಿ ವೀಡಿಯೋ ವೈರಲ್
ಮಹಾನ್ ಹುತಾತ್ಮ ಕಿರುಚಿತ್ರದ ಸಾರಥಿ ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಡೊಳ್ಳು ಸಿನಿಮಾದಲ್ಲಿ . ಕಿರುತೆರೆ ನಟ ಕಾರ್ತಿಕ್ ಮಹೇಶ್ ನಾಯಕನಾಗಿ, ನಿಧಿ ಹೆಗ್ಡೆ ನಾಯಕಿ ಪಾತ್ರ ನಿರ್ವಹಿಸಲಿದ್ದಾಪರೆ. ಉಳಿದಂತೆ ಬಾಬು ಹಿರಣ್ಣಯ್ಯ, ಚಂದ್ರ ಮಯೂರ್ ಮತ್ತು ಶರಣ್ ಸುರೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶ್ರೀನಿಧಿ ಡಿಎಸ್ ಚಿತ್ರಕಥೆ ಬರೆದಿದ್ದು, ಅನಂತ್ ಕಾಮತ್ ಸಂಗೀತ ಸಂಯೋಜಿಸಿದ್ದಾರೆ. ಅಭಿಲಾಸ್ ಕಲಾಥಿ ಛಾಯಾಗ್ರಹಣ, ಬಿಎಸ್ ಕೆಂಪರಾಜು ಸಂಕಲನವಿದೆ.
ತೆಲುಗು ಸಿನಿಮಾ ರಂಗದ ಲೆಜೆಂಡ್ ನಟ ಬಾಲಕೃಷ್ಣ ಅವರ ಹುಟ್ಟು ಹಬ್ಬಕ್ಕಾಗಿ ಇವರ ನಟನೆಯ 107ನೇ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಹೇಳಿ ಕೇಳಿ ಬಾಲಕೃಷ್ಣ ಮಾಸ್ ಹೀರೋ, ಟೀಸರ್ ಕೂಡ ಅಷ್ಟೇ ಮಾಸ್ ಆಗಿ ಮೂಡಿ ಬಂದಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ. ಟೀಸರ್ ನಲ್ಲಿ ಹೊಡೆದ ಡೈಲಾಗ್ ಇದೀಗ ಟಾಲಿವುಡ್ ನಲ್ಲಿ ವೈರಲ್ ಆಗಿದೆ.
107ನೇ ಸಿನಿಮಾದ ಶೂಟಿಂಗ್ ನಿರಂತರವಾಗಿ ನಡೆದಿದ್ದು, ನಿರ್ದೇಶಕ ಗೋಪಿಚಂದ್ ಮಲಿನೇನಿ ವಿಶೇಷವಾಗಿ ಟೀಸರ್ ರೆಡಿ ಮಾಡಿದ್ದು, ಬಾಲಕೃಷ್ಣ ಸಾಲ್ಟ್ ಅಂಡ್ ಪೇಪರ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಮಾಸ್ ಲುಕ್ ನಲ್ಲಿ ಕ್ಲಾಸ್ ಡೈಲಾಗ್ ಹೊಡೆದಿದ್ದಾರೆ. ಅದರಲ್ಲೂ ಈ ಟೀಸರ್ ನಲ್ಲಿ ಅಲ್ಲಿನ ಸರಕಾರಕ್ಕೆ ಟಾಂಗ್ ಕೊಟ್ಟಿದ್ದು, ಆ ಡೈಲಾಗ್ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಕೊನೆಗೂ ರಿವೀಲ್ ಆಯಿತು ನಯನತಾರಾ ಮತ್ತು ವಿಘ್ನೇಶ್ ಶಿವನ್ ಮದುವೆ ಫೋಟೋ
ಈ ಟೀಸರ್ ನಲ್ಲಿ ಬಾಲಯ್ಯ ‘ನಿಮಗೆಲ್ಲ ಗೌರ್ಮೆಂಟ್ ಆರ್ಡರ್.. ನನಗೆ ದೇವರ ಆರ್ಡರ್’ ಎಂದು ಹೇಳುವ ಡೈಲಾಗ್ ಇದೀಗ ಸಿಕ್ಕಾಪಟ್ಟೆ ಚರ್ಚೆ ಆಗುತ್ತಿದ್ದು, ಇದು ನಿಜವಾಗಿಯೂ ಬಾಲಯ್ಯ ಸರಕಾರಕ್ಕೆ ಕೊಟ್ಟಿರುವ ಟಾಂಗ್? ಎನ್ನುವ ಪ್ರಶ್ನೆಯನ್ನೂ ಅದು ಹುಟ್ಟು ಹಾಕಿದೆ. ಅಲ್ಲದೇ, ಅವರು ಯಾಕೆ ಸರಕಾರಕ್ಕೆ ಈ ರೀತಿ ಟಾಂಗ್ ಕೊಟ್ಟರು ಎನ್ನುವ ಚರ್ಚೆಯನ್ನೂ ಅದು ಹುಟ್ಟು ಹಾಕಿದೆ.
ಬಾಲಕೃಷ್ಣ ಸಿನಿಮಾದಲ್ಲಿ ಕನ್ನಡದ ದುನಿಯಾ ವಿಜಯ್ ಕೂಡ ನಟಿಸುತ್ತಿದ್ದು, ಎರಡು ಹಂತದ ಶೂಟಿಂಗ್ ಕೂಡ ಅವರು ಮುಗಿಸಿ ಬಂದಿದ್ದಾರೆ. ಈ ಬಾರಿಯ ಹುಟ್ಟು ಹಬ್ಬಕ್ಕೆ ದುನಿಯಾ ವಿಜಯ್, ವಿಶ್ ಮಾಡಿದ್ದಾರೆ. ನಟಸಿಂಹ ಎಂದು ಬಿರುದು ಕೂಡ ಕೊಟ್ಟಿದ್ದಾರೆ.