Tag: teaser

  • ಫೇಸ್‍ಬುಕ್ ಪೋಸ್ಟ್ ಹಾಕಿ ಗುಡ್ ಲಕ್ ಸ್ವೀಟಿ ಎಂದ ಪ್ರಭಾಸ್

    ಫೇಸ್‍ಬುಕ್ ಪೋಸ್ಟ್ ಹಾಕಿ ಗುಡ್ ಲಕ್ ಸ್ವೀಟಿ ಎಂದ ಪ್ರಭಾಸ್

    ಮುಂಬೈ: ದೇಶಾದ್ಯಂತ ಹವಾ ಸೃಷ್ಟಿಸಿದ್ದ `ಬಾಹುಬಲಿ’ ಚಿತ್ರದ ಬಳಿಕ ನಾಯಕ ನಟ ಪ್ರಭಾಸ್ ಹಾಗೂ ಅನುಷ್ಕಾ ನಡುವಿನ ಬಾಂಧವ್ಯದ ಬಗ್ಗೆ ಸಾಕಷ್ಟು ಬಾರಿ ಸುದ್ದಿಯಾಗಿದೆ.

    ಇದರ ಮಧ್ಯೆ ಅನುಷ್ಕಾ ಅಭಿನಯದ `ಭಾಗಮತಿ’ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಈ ಬಗ್ಗೆ ಪ್ರಭಾಸ್ ತಮ್ಮ ಫೇಸ್ ಬುಕ್ ನಲ್ಲಿ ಸ್ಟೇಟಸ್ ಹಾಕಿ ಸ್ವೀಟಿ ಬಗ್ಗೆ ಪ್ರೀತಿಯ ಮಾತುಗಳನ್ನಾಡಿದ್ದಾರೆ.

    “ಪ್ರತಿ ಸಿನಿಮಾಗಳಲ್ಲಿಯೂ ಹೊಸ ರೀತಿಯ ಪ್ರಯೋಗ ಮಾಡುವುದರಲ್ಲಿ ಅನುಷ್ಕಾ ಶೆಟ್ಟಿ ಯಾವಾಗಲೂ ಮೊದಲಿರುತ್ತಾರೆ. ಗುಡ್ ಲಕ್ ಸ್ವೀಟಿ.. ಹಾಗೂ ಚಿತ್ರತಂಡಕ್ಕೆ ಶುಭವಾಗಲಿ” ಎಂದು ಬರೆದು ಭಾಗಮತಿ ಸಿನಿಮಾ ಟೀಸರ್ ಹಾಕಿಕೊಂಡಿದ್ದಾರೆ.

    ಅನುಷ್ಕಾ ಶೆಟ್ಟಿ ಅಭಿನಯದ `ಭಾಗಮತಿ’ ಚಿತ್ರದ ಟೀಸರ್ ಡಿಸೆಂಬರ್ 20 ರಂದು ಬಿಡುಗಡೆಯಾಗಿದೆ. `ಬಾಹುಬಲಿ’ ಚಿತ್ರದಲ್ಲಿ ದೇವಸೇನಾ ಆಗಿ ಕಾಣಿಸಿಕೊಂಡಿದ್ದ ಅನುಷ್ಕಾ, ಈಗ ರಾಣಿ ಭಾಗಮತಿ ಪಾತ್ರದಲ್ಲಿ ಮಿಂಚಲಿದ್ದಾರೆ. ಚಿತ್ರದ ಟೀಸರ್ ತುಂಬಾ ಕುತೂಹಲವನ್ನು ಮೂಡಿಸುತ್ತಿದೆ.

    ಪ್ರಭಾಸ್ ಸದ್ಯ ಸಾಹೋ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರವನ್ನ ಸುಜೀತ್ ನಿರ್ದೇಶಿಸುತ್ತಿದ್ದು, ಹಾಲಿವುಡ್ ಸ್ಟಂಟ್‍ಮ್ಯಾನ್ ಕೆನ್ನಿ ಬೇಟ್ಸ್ ಪ್ರಭಾಸ್‍ಗೆ ತರಬೇತಿ ನೀಡುತ್ತಿದ್ದಾರೆ. ಸಾಹೋ ಸಿನಿಮಾ ತೆಲುಗು, ತಮಿಳು, ಮಲೆಯಾಳಂ ಮತ್ತು ಹಿಂದಿ ನಾಲ್ಕು ಭಾಷೆಗಳಲ್ಲಿ ಬಿಡುಗಡೆಯಾಗಲು ಸಿದ್ಧವಾಗುತ್ತಿದ್ದು, ಮುಂದಿನ ವರ್ಷ 2018 ಕ್ಕೆ ತೆರೆಕಾಣುವ ಸಾಧ್ಯತೆ ಇದೆ.


  • ಪವರ್ ಸ್ಟಾರ್ ಅಪ್ಪು ಅಭಿಮಾನಿಗಳಿಗೆ ಡಬಲ್ ಧಮಾಕಾ

    ಪವರ್ ಸ್ಟಾರ್ ಅಪ್ಪು ಅಭಿಮಾನಿಗಳಿಗೆ ಡಬಲ್ ಧಮಾಕಾ

    -ಅಂಜನಿಪುತ್ರ ಆಡಿಯೋ ಟೀಸರ್ ಬಿಡುಗಡೆ

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಬಹು ನಿರೀಕ್ಷಿತ ಚಿತ್ರ ಅಂಜನಿಪುತ್ರ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ಸಖತ್ ಕ್ಯೂರಿಯಾಸಿಟಿ ಹುಟ್ಟಿಸಿದೆ.

    ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್ ಕುಮಾರ್ ಚಿತ್ರದ ಆಡಿಯೋ ಹಾಗೂ ಟೀಸರ್ ಅನ್ನು ಬಿಡುಗಡೆ ಮಾಡಿದರು. ಚಿತ್ರಕ್ಕೆ ರವಿ ಬಸ್ರೂರು ಅವರು ಸಂಗೀತ ನೀಡಿದ್ದು, ಎ ಹರ್ಷ ಅವರ ನಿರ್ದೇಶನದಲ್ಲಿ ಸಿನಿಮಾ ಮೂಡಿಬಂದಿದೆ.

    ಪುನೀತ್ ರಾಜ್ ಕುಮಾರ್ ಅವರ ಒಡೆತನದ ಪಿಆರ್ ಕೆ ಆಡಿಯೋ ಸಂಸ್ಥೆ ಮೊದಲ ಬಾರಿಗೆ ಹಾಡುಗಳ ಹಕ್ಕುಗಳನ್ನು ಪಡೆದಿದೆ. ಈ ವೇಳೆ ಮಾತನಾಡಿದ ಪುನೀತ್ ರಾಜಕುಮಾರ್ ನಾನು ಯಾರಿಗೂ ಕಾಂಪಿಟೇಷನ್ ಕೊಡುವುದಕ್ಕೆ ಈ ಆಡಿಯೋ ಸಂಸ್ಥೆ ಶುರು ಮಾಡಿಲ್ಲ. ನನಗೆ ಚಿಕ್ಕಂದಿನಿಂದಲೂ ಹಾಡು ಅಂದರೆ ಇಷ್ಟ. ‘ಪಿಆರ್ ಕೆ’ ಅಂದರೆ ಪಾರ್ವತಮ್ಮ ರಾಜ್ ಕುಮಾರ್ ವಿಥ್ ರಾಜ್ ಕುಮಾರ್. ಇದು ನನ್ನ ಬಹುದಿನಗಳ ಕನಸು. ಪ್ರಸ್ತುತ ಅಂಜನಿಪುತ್ರ ಹಾಡುಗಳ ಹಕ್ಕುಗಳನ್ನು ಪಡೆದುಕೊಂಡಿದೆ, ಮುಂದೆ ಟಗರು, ಕವಲುದಾರಿ ಚಿತ್ರಗಳ ಹಕ್ಕು ಪಡೆಯುವ ಮೂಲಕ ನಮ್ಮ ಪ್ರಯಾಣ ಸಾಗುತ್ತೆ ಎಂದರು.

    ಕಾರ್ಯಕ್ರಮದ ವೇಳೆ ಪುನೀತ್ ರಾಜ್ ಕುಮಾರ್ ಅವರು ವರನಟ ಡಾ. ರಾಜ್ ಕುಮಾರ್ ಚಿತ್ರಗಳ ಹಾಡನ್ನು ಹಾಡಿ ಎಲ್ಲರನ್ನೂ ರಂಜಿಸಿದರು. ಇನ್ನು ಕಾರ್ಯಕ್ರಮದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸೇರಿದಂತೆ ಹಲವು ಸ್ಯಾಂಡಲ್‍ವುಡ್ ಗಣ್ಯರು ಭಾಗವಹಿಸಿದ್ದರು.

    ಚಿತ್ರದಲ್ಲಿ ರಮ್ಯಾಕೃಷ್ಣ, ರವಿಶಂಕರ್, ಚಿಕ್ಕಣ್ಣ ಸೇರಿದಂತೆ ಬಹುದೊಡ್ಡ ತಾರಾಗಣವಿದ್ದು, ನಟಿ ಹರಿಪ್ರಿಯಾ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಎಂ.ಎನ್. ಕುಮಾರ್ ಅವರು ಬಂಡವಾಳ ಹೂಡಿದ್ದಾರೆ.

  • ಕ್ರೇಜಿಸ್ಟಾರ್ ರವಿಚಂದ್ರನ್‍ಗೆ 56ನೇ ಜನ್ಮದಿನದ ಸಂಭ್ರಮ – ಸೀಜರ್ ಚಿತ್ರತಂಡದಿಂದ ಟೀಸರ್ ಬಿಡುಗಡೆ

    ಕ್ರೇಜಿಸ್ಟಾರ್ ರವಿಚಂದ್ರನ್‍ಗೆ 56ನೇ ಜನ್ಮದಿನದ ಸಂಭ್ರಮ – ಸೀಜರ್ ಚಿತ್ರತಂಡದಿಂದ ಟೀಸರ್ ಬಿಡುಗಡೆ

    ಬೆಂಗಳೂರು: ಕನ್ನಡ ಚಿತ್ರರಂಗದ ಕ್ರೇಜಿಸ್ಟಾರ್ ವಿ. ರವಿಚಂದ್ರನ್‍ಗೆ ಇಂದು 56ನೇ ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳು ಮನೆ ಮುಂದೆ ಬಂದು ನಿಂತ್ರೂ ಅದ್ಯಾಕೋ ರವಿಮಾಮ ಹೊರಗೆ ಬರಲಿಲ್ಲ. ಆದ್ರೆ ಕುಟುಂಬದವರ ಜೊತೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ್ರು.

    ಇನ್ನು ಕನಸುಗಾರನ ಹುಟ್ಟುಹಬ್ಬದ ಪ್ರಯುಕ್ತ `ಸೀಜರ್’ ಚಿತ್ರತಂಡ ಟೀಸರ್‍ವೊಂದನ್ನು ಬಿಡುಗಡೆ ಮಾಡಿದೆ. ಈ ಟೀಸರ್ ರವಿಚಂದ್ರನ್ ಅವರಿಗೆ ಅರ್ಪಿಸಿದ್ದಾರೆ. ಚಿತ್ರದಲ್ಲಿ ರವಿಚಂದ್ರನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪ್ರಕಾಶ್ ರಾಜ್, ಚಿರಂಜೀವಿ ಸರ್ಜ, ಪಾರುಲ್ ಯಾದವ್ ಮತ್ತಿತರರು ಅಭಿನಯಿಸಿದ್ದಾರೆ.

    ರಣಧೀರನ ಜನ್ಮದಿನದ ಶುಭಾಶಯ ಕೋರಿ ಸೀಜರ್ ಚಿತ್ರತಂಡ ಟೀಸರ್ ಬಿಡುಗಡೆ ಮಾಡಿದೆ.

    https://www.youtube.com/watch?v=5ZSTOY0lbuA