Tag: teaser

  • ‘ಅನ್ನಪೂರ್ಣಿ’ಗೆ ಸಖತ್ ರೆಸ್ಪಾನ್ಸ್ : ನಯನತಾರಾ ನಟನೆಯ 75ನೇ ಚಿತ್ರ

    ‘ಅನ್ನಪೂರ್ಣಿ’ಗೆ ಸಖತ್ ರೆಸ್ಪಾನ್ಸ್ : ನಯನತಾರಾ ನಟನೆಯ 75ನೇ ಚಿತ್ರ

    ಲೇಡಿ ಸೂಪರ್ ಸ್ಟಾರ್ ನಯನತಾರಾ ನಟನೆಯ 75ನೇ ಸಿನಿಮಾದ ಟೀಸರ್ (Teaser) ರಿಲೀಸ್ ಆಗಿದೆ. ಅನ್ನಪೂರ್ಣಿ (Annapurni) ಹೆಸರಿನಲ್ಲಿ ಮೂಡಿ ಬಂದ ಈ ಸಿನಿಮಾದಲ್ಲಿ ನಯನತಾರಾ ಹೊಸ ಬಗೆಯ ಪಾತ್ರ ಮಾಡಿದ್ದಾರೆ. ಅವರ ಗೆಟಪ್ ಕಂಡು ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಪಕ್ಕಾ ಸಂಪ್ರದಾಯಸ್ಥ ಕುಟುಂಬದ ಹುಡುಗಿಯಾಗಿ ನಯನತಾರಾ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

    ಸಿನಿಮಾದಿಂದ ಸಿನಿಮಾಗೆ ನಯನತಾರಾ ಸಾಕಷ್ಟು ಬ್ಯೂಸಿಯಾಗುತ್ತಿದ್ದಾರೆ. ಪ್ರತಿ ಸಿನಿಮಾದಲ್ಲೂ ಸಕ್ಸಸ್ ಕಾಣುತ್ತಿದ್ದಾರೆ. ಹಾಗಾಗಿಯೇ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ಸಲೀಸಾಗಿ ಎಲ್ಲ ಪಾತ್ರಗಳನ್ನೂ ಒಪ್ಪಿಕೊಳ್ಳದ ಈ ನಟಿ, ಆಯ್ಕೆಯ ಪಾತ್ರಗಳಿಗಷ್ಟೇ ಬಣ್ಣ ಹಚ್ಚುತ್ತಾರೆ.

    ಖ್ಯಾತ ನಟ ಕಮಲ್ ಹಾಸನ್ ಅವರ ಹೊಸಕ್ಕೂ ನಯನತಾರಾ (Nayanthara) ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಹಿಂದೆ ಇದೇ ಸಿನಿಮಾಗೆ ತ್ರಿಷಾ ನಾಯಕಿ ಎಂದು ಹೇಳಲಾಗಿತ್ತು. ತ್ರಿಷಾ ಬದಲಾಗಿ ಇದೀಗ ನಯನತಾರಾ ಹೆಸರು ಕೇಳಿ ಬಂದಿದೆ. ಈ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಈ ಜೋಡಿಯನ್ನು ತೆರೆಯ ಮೇಲೆ ನೋಡಲು ಅಭಿಮಾನಿಗಳು ಈಗಲೇ ಕಾತರದಿಂದ ಕಾಯುವಂತಾಗಿದೆ.

    ಭಾರತೀಯ ಸಿನಿಮಾ ರಂಗದ ಇಬ್ಬರು ದಂತಕಥೆಗಳು ಬರೋಬ್ಬರಿ 36 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ. ನಿರ್ದೇಶಕ ಮಣಿರತ್ನಂ (Mani Ratnam) ಮತ್ತು ಕಮಲ್ ಹಾಸನ್ (Kamal Haasan) ‘ನಾಯಗನ್’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆನಂತರ ಈ ಜೋಡಿ ಮತ್ತೆ ಒಟ್ಟಾಗಿ ಕೆಲಸ ಮಾಡಲೇ ಇಲ್ಲ. ಇದೀಗ ಮೂರುವರೆ ದಶಕದ ಬಳಿಕ ಮತ್ತೆ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಕಮಲ್ ಹಾಸನ್ ನಟನೆಯ 234ನೇ ಚಿತ್ರಕ್ಕೆ ಮಣಿರತ್ನಂ ನಿರ್ದೇಶನ ಮಾಡುತ್ತಿದ್ದಾರೆ.

     

    ಈ ಸಿನಿಮಾ ಶುರುವಾಗುವುದಕ್ಕೆ ಇನ್ನೂ ಹಲವು ತಿಂಗಳು ಬೇಕು. ಅದಕ್ಕೂ ಮುನ್ನ ಅನೇಕ ವಿಷಯಗಳು ಹೊರ ಬಂದಿವೆ. ಈ ಸಿನಿಮಾದಲ್ಲಿ ಸ್ಟಾರ್ ನಟರೇ ದಂಡೇ ಇರಲಿದ್ದು, ತ್ರಿಷಾ (Trisha) ನಾಯಕಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು, ಇದೀಗ ನಯನತಾರಾ ಹೆಸರು ಸೇರ್ಪಡೆ ಆಗಿದೆ. ಅಲ್ಲದೇ, ದುಲ್ಕರ್ ಸಲ್ಮಾನ್ (Dulquer Salmaan) ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರಂತೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಪ್ಲೇಯರ್ ಶಂಕರ್ ಜೀವನ ಕಥನದ ಟೀಸರ್ ರಿಲೀಸ್

    ಸಪ್ಲೇಯರ್ ಶಂಕರ್ ಜೀವನ ಕಥನದ ಟೀಸರ್ ರಿಲೀಸ್

    ಎಂ. ಚಂದ್ರಶೇಖರ್ ಹಾಗೂ ಎಂ.ನಾಗೇಂದ್ರ ಸಿಂಗ್ ನಿರ್ಮಿಸಿರುವ ಹಾಗೂ ರಂಜಿತ್ (Ranjith) ನಿರ್ದೇಶನದಲ್ಲಿ ನಿಶ್ಚಿತ್ ಕರೋಡಿ (Nischith Karodi) ನಾಯಕನಾಗಿ ನಟಿಸಿರುವ ‘ಸಪ್ಲೇಯರ್ ಶಂಕರ’ (Supplier Shankar) ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರದ ನಿರ್ಮಾಪಕರಾದ ಚಂದ್ರಶೇಖರ್ ಹಾಗೂ ನಾಗೇಂದ್ರ ಸಿಂಗ್ ಈ ಚಿತ್ರದ  ಟೀಸರ್ ಬಿಡುಗಡೆ ಮಾಡಿದರು. ನಿರ್ದೇಶಕ ರಂಜಿತ್ ಹೇಳಿದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆವು. ಚಿತ್ರ ಈಗ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ತೆರೆಗೆ ತರುತ್ತೇವೆ ಎಂದು ನಿರ್ಮಾಪಕರಾದ ಚಂದ್ರಶೇಖರ್ ಹಾಗೂ ನಾಗೇಂದ್ರ ಸಿಂಗ್ ತಿಳಿಸಿದರು.

    ಕಳೆದ ವರ್ಷ ಫೆಬ್ರವರಿಯಲ್ಲಿ ಈ ಚಿತ್ರಕ್ಕೆ ಚಾಲನೆ ದೊರೆಯಿತು ಎಂದು ಮಾತು ಪ್ರಾರಂಭಿಸಿದ ನಿರ್ದೇಶಕ ರಂಜಿತ್, ‘ಸಪ್ಲೇಯರ್ ಶಂಕರ’ ಬಾರ್ ಸಪ್ಲೇಯರ್ ಒಬ್ಬನ ಕಥೆ. ನಾನೇ ಕಥೆ ಬರೆದಿದ್ದೇನೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರ.  ಈ ಪಾತ್ರಕ್ಕಾಗಿ ನಾಯಕ ನಿಶ್ಚಿತ್ ಕರೋಡಿ ಬಹಳ ಶ್ರಮಪಟ್ಟಿದ್ದಾರೆ. ನನ್ನ ಕಥೆಗೆ ಜೀವ ತುಂಬಿದ್ದು ನಿರ್ಮಾಪಕರಾದ ಚಂದ್ರಶೇಖರ್ ಹಾಗೂ ನಾಗೇಂದ್ರ ಸಿಂಗ್. ಈ ಚಿತ್ರದಲ್ಲಿ ಹೆಚ್ಚಾಗಿ ಹೊಸತಂಡ ಕಾರ್ಯ ನಿರ್ವಹಿಸಿದೆ. ಇಂದು ಟೀಸರ್ ಬಿಡುಗಡೆಯಾಗಿದೆ. ಶೀಘ್ರದಲ್ಲೇ ಸಪ್ಲೇಯರ್ ಶಂಕರ ನಿಮ್ಮ ಮೆಚ್ಚಿನ ಚಿತ್ರಮಂದಿರಗಳಿಗೆ ಬರುತ್ತಾನೆ ಎಂದರು‌.

    ನಾನು ಈ ಹಿಂದೆ ‘ಗಂಟು ಮೂಟೆ’ ಹಾಗೂ ‘ಟಾಮ್ & ಜೆರ್ರಿ’ ಚಿತ್ರಗಳಲ್ಲಿ ನಟಿಸಿದ್ದೆ. ಇದು ಮೂರನೇ ಚಿತ್ರ. ಬಾರ್ ಸಪ್ಲೇಯರ್ ಪಾತ್ರ ನನ್ನದು. ಹಾಗಾಂತ ಈ ಚಿತ್ರದಲ್ಲಿ ಬರೀ ಸಪ್ಲೇಯರ್ ಕಥೆ ಮಾತ್ರ ಇಲ್ಲ. ಕಾಮಿಡಿ, ಸೆಂಟಿಮೆಂಟ್, ಲವ್, ಥ್ರಿಲ್ಲರ್ ಎಲ್ಲವೂ ಇದೆ. ನಿರ್ದೇಶಕ ರಂಜಿತ್ ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಾಯಕ ನಿಶ್ಚಿತ್ ಕರೋಡಿ.

    ಶಿಕ್ಷಕಿ ಪಾತ್ರ ನಿರ್ವಹಿಸಿರುವುದಾಗಿ ನಾಯಕಿ ದೀಪಿಕಾ ಆರಾಧ್ಯ ಹೇಳಿದರು. ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಆರ್ ಬಿ ಭರತ್ ಮಾಹಿತಿ ನೀಡಿದರು. ಛಾಯಾಗ್ರಾಹಕ ಸತೀಶ್ ಕುಮಾರ್, ಸಂಕಲನಕಾರ ಸತೀಶ್ ಚಂದ್ರಯ್ಯ ಮುಂತಾದವರು ಸಪ್ಲೇಯರ್ ಶಂಕರ ಚಿತ್ರದ ಕುರಿತು ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಚಿಕ್ಕಿಯ ಮೂಗುತಿ’ಗೆ ಬೆನ್ನು ತಟ್ಟಿದ ಅಶ್ವಿನಿ ಪುನೀತ್ ರಾಜಕುಮಾರ್

    ‘ಚಿಕ್ಕಿಯ ಮೂಗುತಿ’ಗೆ ಬೆನ್ನು ತಟ್ಟಿದ ಅಶ್ವಿನಿ ಪುನೀತ್ ರಾಜಕುಮಾರ್

    ವ್  ಸ್ಟೋರಿ, ಕ್ರೈಮ್, ಹಾರರ್ ಸಿನಿಮಾಗಳ ನಡುವೆ ಆಗಾಗ ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ, ವಿನೂತನ ಕಾನ್ಸೆಪ್ಟ್‌ನ ಚಿತ್ರಗಳು ಸಹ ಸದ್ದು ಮಾಡುತ್ತವೆ. ಇದೀಗ ಮತ್ತೊಂದು ಹೊಸ ಬಗೆಯ ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ. ಅದೇ ‘ಚಿಕ್ಕಿಯ ಮೂಗುತಿ’ (Chikkiya Mooguti). ದೇವಿಕಾ ಜನಿತ್ರಿ (Deviki) ನಿರ್ದೇಶನದ ಚಿಕ್ಕಿಯ ಮೂಗುತಿ ಸಿನಿಮಾ ಸದ್ಯ ಟೀಸರ್ (Teaser) ಮೂಲಕ ಅಭಿಮಾನಿಗಳ ಮುಂದೆ  ಬಂದಿದೆ. ಟೀಸರ್ ಬಿಡುಗಡೆ ಮಾಡುವ ಮೂಲಕ ನವ ನಿರ್ದೇಶಕಿಗೆ ಸಾಥ್ ಕೊಟ್ಟಿದ್ದಾರೆ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneet Rajkumar). ಅಪ್ಪು ಹಾಗೂ ಅಶ್ವಿನಿಯವರ ಆತ್ಮೀಯರು ಆಗಿರೋ ದೇವಿಕಾ ನಿರ್ದೇಶದ ಮೊದಲ ಸಿನಿಮಾ ಇದಾಗಿದೆ. ಚಿಕ್ಕಿಯ ಮೂಗುತಿ ಕಾದಂಬರಿ ಆಧಾರಿತ ಸಿನಿಮಾವಾಗಿದ್ದು ವಿಶೇಷ ಎಂದರೆ  ದೇವಕಿ ಜನಿತ್ರಿ ಅವರೇ ಬರೆದಿದ್ದ ಕಾದಂಬರಿಯೇ ಈಗ ಚಿತ್ರವಾಗಿ ಮೂಡಿ ಬರುತ್ತಿದೆ. ಇನ್ನು ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

    ಅಂದಹಾಗೆ ‘ಚಿಕ್ಕಿಯ ಮೂಗುತಿ’ ಹೆಸರೇ ಹೇಳುವ ಹಾಗೆ ಇದೊಂದು ಮಹಿಳಾ ಪ್ರಧಾನ ಸಿನಿಮಾ. ಹೆಣ್ಣು ಮಕ್ಕಳ ಹೋರಾಟ, ಶೋಷಣೆ ಬಗ್ಗೆ ಇರುವ ಚಿತ್ರ ಇದಾಗಿದೆ. ಹಿರಿಯ ನಟಿ ತಾರಾ ಅನುರಾಧಾ, ಶ್ವೇತಾ ಶ್ವೀವಾತ್ಸವ್, ಭವಾನಿ ಪ್ರಕಾಶ್,  ಅವಿನಾಶ್, ತಬಲ ನಾಣಿ, ರಂಗಾಯಣ  ರಘು, ಭರತ್ ಬೋಪಣ್ಣ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ವಿಶೇಷ ಎಂದರೆ ಈ ಸಿನಿಮಾಗೆ ಹೆಣ್ಣು ಮಕ್ಕಳೇ ಶಕ್ತಿ ಎಂದರೆ ತಪ್ಪಾಗಲ್ಲ. ಯಾಕೆಂದರೆ ನಿರ್ದೇಶಕಿ ಸೇರಿದಂತೆ ಬಹುತೇಕರು ಹೆಣ್ಣು ಮಕ್ಕಳೇ ಸೇರಿಕೊಂಡು ಮಾಡಿರುವ ಸಿನಿಮಾ ಇದಾಗಿದೆ.

    ಟೀಸರ್ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ತಾರಾ, ಪ್ರಧಾನಿ ನರೇಂದ್ರ ಮೋದಿ ಅವರು  ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದಂತೆ ಈ ಸಿನಿಮಾದಲ್ಲೂ ಮಹಿಳೆಯರಿಗೂ ಮೀಸಲಾತಿ ಇದೆ. ಎಲ್ಲರೂ ಹೆಣ್ಣು ಮಕ್ಕಳೆ  ಸೇರಿಕೊಂಡು ಮಾಡಿರುವ ಸಿನಿಮಾ, ಅದ್ಭತವಾಗಿ ಸಿನಿಮಾ ಮೂಡಿಬಂದಿದೆ. ದೇವಿಕಾ ಅವರ ಮೊದಲು ಸಿನಿಮಾ ಅಂತ ಅನಿಸುವುದೇ ಇಲ್ಲ, ಉತ್ತಮವಾಗಿ ಮೂಡಿಬಂದಿದೆ’ ಎಂದು ಹೇಳಿದರು. ಇನ್ನು ನಟಿ ಶ್ವೇತಾ ಮಾತನಾಡಿ ಮಗುವಿಗೆ ಜನ್ಮ ನೀಡಿದ ಬಳಿಕ ನಟನೆ ಮಾಡಿದ ಮೊದಲ ಸಿನಿಮಾ ಎಂದು ಹೇಳಿದರು. ಭವಾನಿ ಪ್ರಕಾಶ್ ಕೂಡ ಪಾತ್ರದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

    ನಿರ್ದೇಶಕಿ ದೇವಿಕಿ ಅವರು ಈ ಮೊದಲು ಕಾಸ್ಟ್ಯೂಮ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದರು. 40ಕ್ಕೂ ಅಧಿಕ ಕಾದಂಬರಿಗಳನ್ನು ಬರೆದಿದ್ದಾರೆ. ಇದೀಗ ಅವರ ಒಂದು ಕಾದಂಬರಿ ಚಿಕ್ಕಿಯ ಮೂಗುತಿ ಸಿನಿಮಾವಾಗಿ ತೆರೆ ಮೇಲೆ ಬರಲು ಸಜ್ಜಾಗಿದೆ. ಸದ್ಯ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿಕ್ಕಿಯ ಮೂಗುತಿ ಈ ವರ್ಷದ  ಕೊನೆಯಲ್ಲಿ ಅಥವಾ ಮುಂದಿನ ವರ್ಷ ತೆರೆಗೆ ಬರುವ ಸಾಧ್ಯತೆ ಇದೆ. ಸಿನಿಮಾದ ಟೀಸರ್ ಇದೇ ತಿಂಗಳು 20ಕ್ಕೆ ಪಿಆರ್‌ಕೆ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ.

    ಚಿಕ್ಕಿಯ ಮೂಗುತಿ ಚಿತ್ರ  ಜನಿತ್ರಿ ಪ್ರೋಡಕ್ಷನ್ ನಿರ್ಮಾಣವಾಗಿದೆ, ಚಿತ್ರಕ್ಕೆ ಪೂರ್ಣ ಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಮಾಡಿದ್ದು ವೆಂಕಟೇಶ್ ಆರ್ ಕ್ಯಾಮೆರಾ ವರ್ಕ್ ಜೊತೆಗೆ ಎಡಿಟಿಂಗ್ ಕೂಡ ಮಾಡಿದ್ದಾರೆ. ಸದ್ಯ ಟೀಸರ್ ರಿಲೀಸ್ ಮಾಡಿರೋ ತಂಡ ಆದಷ್ಟು ಬೇಗ ಸಿನಿಮಾವನ್ನ ಪ್ರೇಕ್ಷಕರನ್ನ ಮುಂದೆ ತರಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಿಷಬ್ ಶೆಟ್ಟಿ ನಿರ್ಮಾಣದ ‘ಶಿವಮ್ಮ’ ಚಿತ್ರದ ಟೀಸರ್ ರಿಲೀಸ್

    ರಿಷಬ್ ಶೆಟ್ಟಿ ನಿರ್ಮಾಣದ ‘ಶಿವಮ್ಮ’ ಚಿತ್ರದ ಟೀಸರ್ ರಿಲೀಸ್

    ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅತ್ಯಂತ ಮೆಚ್ಚುಗೆ ಪಡೆದ  ರಿಷಬ್ ಶೆಟ್ಟಿ (Rishabh Shetty) ಸಂಸ್ಥೆಯ ಹೆಮ್ಮೆಯ ಚಲನಚಿತ್ರ, ‘ಶಿವಮ್ಮ’ (Shivamma) ಬುಸಾನ್ ಚಲನಚಿತ್ರೋತ್ಸವ ಸೇರಿದಂತೆ ಜಗತ್ತಿನಾದ್ಯಂತ ಹಲವಾರು ಪ್ರತಿಷ್ಠಿತ ಚಲನಚಿತ್ರೋತ್ಸವಗಳ ಮೂಲಕ ಒಂದು ವರ್ಷದ ಪ್ರಯಾಣದ ನಂತರ ಅಂತಿಮವಾಗಿ ಭಾರತಕ್ಕೆ ಆಗಮಿಸಲಿದೆ.

    ಭಾರತದ ಪ್ರತಿಷ್ಠಿತ ಮಾಮಿ ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದಕ್ಷಿಣ ಏಷ್ಯಾದ ಚೊಚ್ಚಲ ಪ್ರದರ್ಶನವನ್ನು ಕಾಣುತ್ತಿದೆ. ಶಿವಮ್ಮ ಚಿತ್ರವನ್ನು ಸಂಪೂರ್ಣವಾಗಿ ಉತ್ತರ ಕರ್ನಾಟಕದ ಕೊಪ್ಪಳ ಜಿಲ್ಲೆಯ ಯರೇಹಂಚಿನಾಳ ಗ್ರಾಮದಲ್ಲಿ ಚಿತ್ರೀಕರಿಸಲಾಗಿದ್ದು, ಊರಿನ ಗ್ರಾಮಸ್ಥರೇ ಮುಖ್ಯ ತಾರಾಗಣದಲ್ಲಿದ್ದಾರೆ.

    ತನ್ನ ಕುಟುಂಬದ ಉನ್ನತಿಗೋಸ್ಕರ ನೆಟ್ವರ್ಕ್ ಮಾರ್ಕೆಟಿಂಗ್ ವ್ಯಾಪಾರದಲ್ಲಿ ತೊಡಗುವ ಸರ್ಕಾರಿ ಶಾಲೆಯಲ್ಲಿ ಅಡುಗೆ ಕೆಲಸ ಮಾಡುವ ಹಳ್ಳಿ ಹೆಣ್ಣುಮಗಳ ಕಥೆಯಾಗಿದೆ.  ಇರಾನ್‌ನಲ್ಲಿ ನಡೆದ ಫಜರ್ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಗೆದ್ದ ಮೊದಲ ಕನ್ನಡ ಚಿತ್ರ ಇದಾಗಿದ್ದು, ಚಿತ್ರವು ಈಗಾಗಲೇ ಐದು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದು  ಚಿತ್ರದ ಟೀಸರ್ (Teaser) ನಿನ್ನೆ ಬಿಡುಗಡೆ ಆಗಿದೆ. ಇದನ್ನೂ ಓದಿ:ನಾನು ಮದುವೆಯಾಗುವ ಹುಡುಗ ಅದಿತಿ ಪ್ರಭುದೇವ ಗಂಡನ ಥರ ಇರಬೇಕು- ಸೋನು

    ರಿಷಬ್ ಶೆಟ್ಟಿ ಫಿಲಂಸ್ ನಿರ್ಮಾಣದಲ್ಲಿ ಮೂಡಿ ಬಂದ, ರಿಷಬ್ ಶೆಟ್ಟಿ ನಿರ್ಮಾಪಕರಾಗಿರುವ ಶಿವಮ್ಮ ಸಿನಿಮಾಗೆ ಸಾಕಷ್ಟು ಪ್ರಶಸ್ತಿಗಳು ಬಂದಿವೆ. ಈಗ ಫ್ರಾನ್ಸ್ ನ ನಾಂಟೆಸ್ ನಲ್ಲಿ ನೆಡೆದ ಫೆಸ್ಟಿವಲ್ 3 ಕಾಂಟಿನೆಂಟ್ಸ್ ನಲ್ಲಿ ‘ಯುವ ತೀರ್ಪುಗಾರರ ಅವಾರ್ಡ್’ ಪಡೆದುಕೊಂಡಿದೆ. ಜೈಶಂಕರ್ ಅರ್ಯರ (Jai Shankar) ನಿರ್ದೇಶನದ ಈ ಸಿನಿಮಾದಲ್ಲಿ ಶರಣಮ್ಮ ಚಟ್ಟಿ, ಚನ್ನೆಮ್ಮ ಅಬ್ಬಿಗೆರೆ, ಶಿವು ಅಬ್ಬಿಗೆರೆ, ಶ್ರುತಿ ಕೊಂಡೇನಹಳ್ಳಿ ಸೇರಿದಂತೆ ಅನೇಕ ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ.

     

    ಸರ್ಕಾರಿ ಶಾಲೆಯಲ್ಲಿ ಅಡುಗೆ ಕೆಲಸ ಮಾಡುವ ೪೬ ವರ್ಷದ ಶಿವಮ್ಮ ಎನ್ನುವ ಮಹಿಳೆ ತನ್ನ ಪಾರ್ಶ್ವವಾಯು ಪೀಡಿತ ಪತಿಯನ್ನು ಸಾಕಿಕೊಂಡು, ತನ್ನ ಮಕ್ಕಳ ಭವಿಷ್ಯಕ್ಕಾಗಿ  ನೆಟ್ವರ್ಕ್ ಮಾರ್ಕೆಟಿಂಗ್ ವ್ಯಾಪಾರವನ್ನು ಭರವಸೆಯಿಂದ ಪಾಲಿಸುವ ಹೋರಾಟದ ಕಥೆಯನ್ನು ಸಿನಿಮಾ ಮಾಡಿದ್ದಾರೆ ನಿರ್ದೇಶಕರು. ಆದಷ್ಟು ನೈಜವಾಗಿಯೇ ಇಡೀ ಸಿನಿಮಾವನ್ನು ಕಟ್ಟಿರುವುದು ಮತ್ತೊಂದು ವಿಶೇಷ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಕ್ಲಾಂತ’ ಸಿನಿಮಾದ ಟೀಸರ್ ರಿಲೀಸ್: ಸಸ್ಪೆನ್ಸ್ ಆಗಿದೆ ಝಲಕ್

    ‘ಕ್ಲಾಂತ’ ಸಿನಿಮಾದ ಟೀಸರ್ ರಿಲೀಸ್: ಸಸ್ಪೆನ್ಸ್ ಆಗಿದೆ ಝಲಕ್

    ವಿಭಿನ್ನ ಹೆಸರಿನ ಮೂಲಕ ಗಮನ ಸೆಳೆಯುತ್ತಿರುವ ಕ್ಲಾಂತ (Kalanta) ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಸಂಗೀತ ಭಟ್ (Sangeetha Bhatt) ಕಂಬ್ಯಾಕ್ ಚಿತ್ರ ಇದಾಗಿದ್ದು, ಸಾಕಷ್ಟು ನಿರೀಕ್ಷೆ ಇದೆ. ಈ ನಿರೀಕ್ಷೆಯನ್ನು ದ್ವಿಗುಣ ಮಾಡುವ ರೀತಿಯಲ್ಲಿ ಈ ಚಿತ್ರದ ಟೀಸರ್ (Teaser) ಮೂಡಿ ಬಂದಿದೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಕ್ಲಾಂತ  ಟೀಸರ್ ಇದ್ದು , ಸಂಗೀತ ಅವರ ನಟನೆ ಎಲ್ಲರ ಗಮನ ಸೆಳೆದಿದೆ.

    ರಂಗನ್ ಸ್ಟೈಲ್, ದಗಲು ಬಾಜಿಲು ಸೇರಿದಂತೆ ಬೇರೆ ಬಗೆಯ ಜಾನರ್ ಚಿತ್ರ ನಿರ್ದೇಶಿರುವ ವೈಭವ್ ಪ್ರಶಾಂತ್ (Vaibhav Prashant) ಕ್ಲಾಂತ ಎಂಬ ಸಸ್ಪೆನ್ಸ್  ಥ್ರಿಲ್ಲರ್ ಸಿನಿಮಾ ನಿರ್ದೇಶನಕ್ಕಿಳಿದಿದ್ದಾರೆ. ದಟ್ಟ ಅರಣ್ಯಕ್ಕೆ ತೆರಳುವ ಇಬ್ಬರು ಪ್ರೇಮಪಕ್ಷಿಗಳನ್ನು ಗ್ಯಾಂಗ್ ಒಂದು ಅಟ್ಯಾಕ್ ಮಾಡುತ್ತದೆ. ಆ ಗ್ಯಾಂಗ್ ನಿಂದ ಆ ಜೋಡಿ ಹೇಗೆ ತಪ್ಪಿಕೊಂಡು ಬರ್ತಾರೆ. ಅವರ ವಿರುದ್ಧ ಹೇಗೆ ಹೋರಾಡುತ್ತಾರೆ ಅನ್ನೋದನ್ನು ಟೀಸರ್ ನಲ್ಲಿ ಕೊಡಲಾಗಿದೆ. ಎಂ ವಿಘ್ನೇಶ್ ನಾಯಕನಾಗಿ, ಸಂಗೀತ ಭಟ್ ನಾಯಕಿಯಾಗಿ ನಟಿಸುತ್ತಿದ್ದು, ಉಳಿದಂತೆ ಶೋಭರಾಜ್ ,  ವೀಣಾ ಸುಂದರ್ , ಕಾಮಿಡಿ ಕಿಲಾಡಿ ದೀಪಿಕಾ , ಪ್ರವೀಣ್ ಜೈನ್ , ಯುವ , ತಿಮ್ಮಪ್ಪ ಕುಲಾಲ್ , ಸ್ವಪ್ನ , ರಾಘವೇಂದ್ರ ಕಾರಂತ್ , ಪಂಚಮಿ ವಾಮಂಜೂರ್ , ವಾಮದೇವ ಪುಣಿಂಚತ್ತಾಯ ಮುಂತಾದ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ:‘ಜವಾನ್’ ಕಲೆಕ್ಷನ್ 1103.27 ಕೋಟಿ ರೂಪಾಯಿ: ಅಧಿಕೃತ ಘೋಷಣೆ

    ಕ್ಲಾಂತ ಸಿನಿಮಾದ ಚಿತ್ರೀಕರಣ ಕುಕ್ಕೆ ಸುಬ್ರಹ್ಮಣ್ಯ , ಗುಂಡ್ಯ , ಕಳಸ ಸುತ್ತ ಮುತ್ತ ಕಾಡಿನಲ್ಲಿ ಅದ್ಧೂರಿ ವೆಚ್ಚದಲ್ಲಿ ತಯಾರಾಗಿದೆ. ಪಕ್ಕಾ ಆಕ್ಷನ್ , ಸಸ್ಪೆನ್ಸ್  ಥ್ರಿಲ್ಲರ್ ಚಿತ್ರ ಇದಾಗಿದ್ದು, ಎಸ್ ಪಿ ಚಂದ್ರಕಾಂತ್ ಸಂಗೀತ, ಪಿಆರ್ ಸೌಂದರ್ ರಾಜ್ ಸಂಕಲನ, ಮೋಹನ್ ಲೋಕನಾಥ್ ಛಾಯಾಗ್ರಹಣ ಚಿತ್ರಕ್ಕಿದೆ. ಸಂತೋಷ್ ನಾಯ್ಕ್, ವರಾಹ ರೂಪಂ ಖ್ಯಾತಿಯ ಶಶಿರಾಜ್ ಕಾವೂರ್, ವೈಭವ್ ಪ್ರಶಾಂತ್ ಸಾಹಿತ್ಯ ಹಾಡುಗಳಿಗಿದ್ದು, ವಿನೋದ್ ಸ್ಟಂಟ್ ಮಾಸ್ಟರ್ ಆಗಿ , ಮಹೇಶ್ ದೇವ್ ಡಿ ಎನ್ ಪುರ ಸಂಭಾಷಣೆ ಸಿನಿಮಾಕ್ಕಿದೆ.

     

    ಎರಡು ಹಾಡುಗಳಿಗೆ ರಘು ಅವರ ನೃತ್ಯ ಸಂಯೋಜನೆ ಇದೆ. ಅನುಗ್ರಹ ಪವರ್ ಮೀಡಿಯಾ ಬ್ಯಾನರ್ ನಡಿ ಉದಯ್ ಅಮ್ಮಣ್ಣಾಯ ಬಂಡವಾಳ ಹೂಡಿದ್ದು, ಅರುಣ್ ಗೌಡ, ಪ್ರದೀಪ್ ಗೌಡ  ಹೇಮಂತ್ ರೈ ಸಹ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಸದ್ಯ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದು, ಶೀಘ್ರದಲ್ಲಿ ತೆರೆಗೆ ತರುವ ಪ್ರಯತ್ನದಲ್ಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಆಪಲ್ ಕಟ್’ ಚಿತ್ರಕ್ಕೆ ಧ್ವನಿ ನೀಡಿದ ಯೋಗರಾಜ್ ಭಟ್

    ‘ಆಪಲ್ ಕಟ್’ ಚಿತ್ರಕ್ಕೆ ಧ್ವನಿ ನೀಡಿದ ಯೋಗರಾಜ್ ಭಟ್

    ನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ರಾಜ್ ಕಿಶೋರ್ ಅವರ ಪುತ್ರಿ ಸಿಂಧು ಗೌಡ ನಿರ್ದೇಶನದ ಹಾಗೂ ಸಾನ್ವಿ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಾಣ ಮಾಡಿರುವ ‘ಆಪಲ್ ಕಟ್’ (Apple Cut) ಚಿತ್ರದ ಟೀಸರ್ (Teaser) ಗೆ ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ (Yogaraj Bhatt) ಧ್ವನಿ ನೀಡಿದ್ದಾರೆ. ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ.

    ಹೊಸತಂಡದ ಹೊಸಪ್ರಯತ್ನಕ್ಕೆ ಬೆಂಬಲ ನೀಡಿದ್ದ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರಿಗೆ ಚಿತ್ರತಂಡ ಧನ್ಯವಾದ ಹೇಳುವುದರೊಂದಿಗೆ, ಹುಟ್ಟುಹಬ್ಬದ ಶುಭಾಶಯವನ್ನೂ ತಿಳಿಸಿದೆ. ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕಿ ಸಿಂಧು ಗೌಡ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಇದು ಅವರ ನಿರ್ದೇಶನದ ಚೊಚ್ಚಲ ಚಿತ್ರ.

    ಸೂರ್ಯ ಗೌಡ ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಅಶ್ವಿನಿ ಪೋಲೆಪಲ್ಲಿ. ಅಪ್ಪಣ್ಣ, ಅಭಿಜಿತ್,  ಮೀನಾಕ್ಷಿ, ಬಾಲ ರಾಜವಾಡಿ ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ.ವೀರ್ ಸಮರ್ಥ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳನ್ನು ಯೋಗರಾಜ್ ಭಟ್, ಸತ್ಯಪ್ರಕಾಶ್ ಬರೆದಿದ್ದಾರೆ. ವಾಸುಕಿ ವೈಭವ್,  ವಿಜಯಶ್ರೀ ಹಾಡಿದ್ದಾರೆ. ರಾಜೇಶ್ ಗೌಡ ಛಾಯಾಗ್ರಹಣ ಹಾಗೂ ಸುಚೇಂದ್ರ ಎನ್ ಮೂರ್ತಿ ಸಂಕಲನ  ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಿಲೀಸ್ ಆಯಿತು ‘ಮೂಡ್ಸ್ ಆಫ್ ರಾಘವ’ ಟೀಸರ್

    ರಿಲೀಸ್ ಆಯಿತು ‘ಮೂಡ್ಸ್ ಆಫ್ ರಾಘವ’ ಟೀಸರ್

    ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ಚಿತ್ರಗಳಲ್ಲಿ ‘ಅನ್ ಲಾಕ್ ರಾಘವ’ (Unlock Raghava) ಕೂಡ ಒಂದು. ಚಿತ್ರ ಸೆಟ್ಟೇರಿದ ದಿನದಿಂದಲೂ ಹಲವಾರು ವಿಶೇಷತೆಗಳಿಂದ ಎಲ್ಲರ ಗಮನ ಸೆಳೆಯುತ್ತಿದೆ. ಇದೀಗ ಚಿತ್ರತಂಡ ಸಿನಿಪ್ರೇಕ್ಷಕರಿಗೆ ಮತ್ತೊಂದು ಸಿಹಿ ಸುದ್ದಿ ಬಂದಿದೆ. ಅದೇ ‘ಮೂಡ್ಸ್ ಆಫ್ ರಾಘವ’ ಟೀಸರ್. ಟೀಸರ್ ಬಿಡುಗಡೆಯಾದ ಕ್ಷಣದಿಂದಲೇ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಈ ಟೀಸರ್ (Teaser) ಕೂಡ ವಿಭಿನ್ನ ಹೆಸರಿನಿಂದಲೇ ಸಾಕಷ್ಟು ಕುತೂಹಲಗಳನ್ನು ಹುಟ್ಟುಹಾಕಿದೆ. ಹೀಗೆ ವಿಶೇಷ ರಸದೌತಣಗಳನ್ನು ಒಂದರ ನಂತರ ಮತ್ತೊಂದರಂತೆ ಉಣಬಡಿಸುತ್ತಿರುವ ‘ಅನ್ ಲಾಕ್ ರಾಘವ’ ಚಿತ್ರ ನೋಡಲು ಸ್ಯಾಂಡಲ್ವುಡ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ‘ಅನ್ ಲಾಕ್ ರಾಘವ’ ಚಿತ್ರವನ್ನು ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರ್ ನಡಿ ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸುತ್ತಿದ್ದು, ದೀಪಕ್ ಮಧುವನಹಳ್ಳಿ (Deepak Madhuvanahalli) ಅವರು ನಿರ್ದೇಶಿಸುತ್ತಿದ್ದಾರೆ. ಇದನ್ನೂ ಓದಿ:ನಟಿ ಗಾಯತ್ರಿ ಜೋಶಿ ಕಾರು ಅಪಘಾತ: ವೃದ್ಧ ದಂಪತಿ ಸಾವು

    ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಪ್ರಕಾಶ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದಿದ್ದು, ಲವಿತ್ ಛಾಯಾಗ್ರಾಹಣ, ಅನೂಪ್ ಸೀಳಿನ್ ಸಂಗೀತ, ಅಜಯ್ ಕುಮಾರ್ ಸಂಕಲನ ಚಿತ್ರಕ್ಕಿದೆ. ಧನಂಜಯ್ ಮಾಸ್ಟರ್ ಹಾಗೂ ಮುರಳಿ ಮಾಸ್ಟರ್ ನೃತ್ಯನಿರ್ದೇಶನದಲ್ಲಿ  ಹಾಡುಗಳು ಮೂಡಿಬಂದಿದ್ದು, ವಿನೋದ್ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ.

     

    ಮಿಲಿಂದ್ (Milind) ನಾಯಕನಾಗಿ ಹಾಗೂ ರೇಚಲ್ ಡೇವಿಡ್ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಅವಿನಾಶ್, ಶೋಭರಾಜ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ, ಮೂಗೂರು ಸುರೇಶ್ ಹಾಗೂ ಮತ್ತಿತರ ಕಲಾವಿದರು ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ. ಟೀಸರ್ ನ ಮಿಸ್ ಮಾಡದೇ ನೋಡಿ.. ರಾಘವನಿಗೆ ನಿಮ್ಮ ಪ್ರೋತ್ಸಾಹ ನೀಡಿ ಎನ್ನುತ್ತಿದೆ ಚಿತ್ರತಂಡ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಗರುಡ ಪುರಾಣ’ ಚಿತ್ರದ ಟೀಸರ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

    ‘ಗರುಡ ಪುರಾಣ’ ಚಿತ್ರದ ಟೀಸರ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

    ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ನಿರ್ಮಿಸುತ್ತಿರುವ, ಮಂಜುನಾಥ್ ಬಿ ನಾಗಬಾ (Manjunath Nagaba) ಕಥೆ, ಚಿತ್ರಕಥೆ ಬರೆದು ಸಂಕಲನ ಮಾಡಿ ನಿರ್ದೇಶಿಸಿರುವ  ‘ಗರುಡ ಪುರಾಣ’ (Garuda Purana) ಚಿತ್ರದ ಟೀಸರ್ (Teaser) ಅನ್ನು ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ಮಾಜಿ ಶಾಸಕರಾದ ರಾಜು ಗೌಡ,  ತಿಪ್ಪರಾಜು, ಡಿ.ಎಸ್.ಮ್ಯಾಕ್ಸ್ ನ ದಯಾನಂದ್, ನಿವೃತ್ತ ಪೊಲೀಸ್ ಅಧಿಕಾರಿ ಶ್ರೀನಿವಾಸ್ ಕೂಚ್ಚಣ್ಣ, ನಟ ಮಣಿಕಂಠ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

    ನಾನು ‘ಕಾಂತಾರ’ ಸೇರಿದಂತೆ ಹದಿನೆಂಟು ಚಿತ್ರಗಳಿಗೆ ಆನ್ ಲೈನ್ ಎಡಿಟರ್ ಆಗಿ ಕಾರ್ಯ ನಿರ್ವಹಿಸಿದ್ದೇನೆ. ಕಾಂತಾರ ನನಗೆ ಹೆಸರು ತಂದುಕೊಟ್ಟ ಸಿನಿಮಾ. ಅವಕಾಶ ನೀಡಿದ ರಿಷಬ್ ಶೆಟ್ಟಿ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಇನ್ನು ಗರುಡ ಪುರಾಣ ಚಿತ್ರದ ಕುರಿತು ಹೇಳಬೇಕಾದರೆ, ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇ ಬೇಕು ಎಂಬ ಅಂಶ ನಮ್ಮ ಸಿನಿಮಾದಲ್ಲಿರುವುದರಿಂದ ಗರುಡ ಪುರಾಣ ಎಂದು ಹೆಸರಿಟ್ಟಿದ್ದೇವೆ‌. ಮೂರು ಆಯಾಮಗಳಲ್ಲಿ ಚಿತ್ರದ ಕಥೆ ಸಾಗುತ್ತದೆ. ಚಿತ್ರೀಕರಣ ಮುಕ್ತಾಯವಾಗಿ, ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಹಾಗೂ ನಮಗೆ ಮೊದಲಿನಿಂದಲೂ ಪ್ರೋತ್ಸಾಹ ನೀಡುತ್ತಿರುವ ರಾಜು ಗೌಡ ಹಾಗೂ ತಿಪ್ಪರಾಜು ಅವರಿಗೆ ಧನ್ಯವಾದ ಎಂದರು ಚಿತ್ರದ ನಾಯಕ ಹಾಗೂ ನಿರ್ದೇಶಕ ಮಂಜುನಾಥ್ ನಾಗಬಾ.

    ಚಿತ್ರದ ನಿರ್ಮಾಪಕರಾದ ಸಿಂಧು ಕೆ.ಎಂ ಹಾಗೂ ಬಿ.ಎಲ್ ಯೋಗೇಶ್ ಕುಮಾರ್ ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಿದರು. ನಾಯಕಿ ದಿಶಾ ಶೆಟ್ಟಿ (Disha Shetty), ಭಜರಂಗಿ ಖ್ಯಾತಿಯ ಚೆಲುವರಾಜು (Cheluvaraju), ಸಂತೋಷ್ ಕರ್ಕಿ, ಕೆಂಚಣ್ಣ, ರಾಜಕುಮಾರ್, ಮಹೇಂದ್ರ ಗೌಡ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಸಂಗೀತ ನಿರ್ದೇಶಕ ರಾಕೇಶ್ ಆಚಾರ್ಯ ಹಾಡುಗಳ ಬಗ್ಗೆ,  ಸುನೀಲ್ ನರಸಿಂಹಮೂರ್ತಿ ಛಾಯಾಗ್ರಹಣದ ಕುರಿತು ಮಾಹಿತಿ ನೀಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಜಯ್ ರಾಘವೇಂದ್ರ ನಟನೆಯ ‘ಮರೀಚಿ’ ಚಿತ್ರದ ಟೀಸರ್ ರಿಲೀಸ್

    ವಿಜಯ್ ರಾಘವೇಂದ್ರ ನಟನೆಯ ‘ಮರೀಚಿ’ ಚಿತ್ರದ ಟೀಸರ್ ರಿಲೀಸ್

    ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಹಾಗೂ ಸೋನು ಗೌಡ ನಟನೆಯ ಮರೀಚಿ (Mareechi) ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಸಸ್ಪೆನ್ಸ್ ಥ್ರಿಲ್ಲಿಂಗ್ ಅಂಶಗಳ ಝಲಕ್ ಕುತೂಹಲ ಹೆಚ್ಚಿಸಿದೆ. ಪೊಲೀಸ್ ಖದರ್ ನಲ್ಲಿ ರಾಘು ಕಾಣಿಸಿಕೊಂಡಿದ್ದಾರೆ. ಟೀಸರ್ (Teaser) ಬಗ್ಗೆ ಚಿತ್ರತಂಡ ಸಾಕಷ್ಟು ಮಾಹಿತಿ ಹಂಚಿಕೊಂಡಿದೆ.

    ನಿರ್ದೇಶಕ ಕಂ ನಿರ್ಮಾಪಕ ಸಿದ್ಧ್ರುವ್ ಮಾತನಾಡಿ, ಮರೀಚಿ ಟೈಟಲ್ ಇಡುವ ಮೊದಲು 150 ಟೈಟಲ್ ನಮ್ಮ ಮುಂದೆ ಇತ್ತು. ಅದರಲ್ಲಿ  ಋಷಿ ಹೆಸರು ಇಡುವ ಟೈಟಲ್ ಆಯ್ಕೆ ಮಾಡಬೇಕಿತ್ತು. ಅದಕ್ಕೆ ಮರೀಚಿ ಆಯ್ಕೆ ಮಾಡಿದ್ದೇನೆ. ಮರೀಚಿ ಎಂದರೆ ಬ್ರಹ್ಮನ ಮಗ. ದೇವದಾಸ್ ಹಾಗೂ ಅಸುರರ ಗಾಡ್ ಫಾದರ್. ನಮ್ಮ ಚಿತ್ರದಲ್ಲಿ ಒಳ್ಳೆಯದು ಕೆಟ್ಟದಕ್ಕೆ ಮರೀಚಿ ಗಾಡ್ ಫಾದರ್ ಎಂದು ತೆಗೆದುಕೊಂಡಿದ್ದೇವೆ. ತುಂಬಾ ಅದ್ಭುತವಾಗಿ ಕಥೆ ಮೂಡಿ ಬಂದಿದೆ. ಒಂದೊಳ್ಳೆ ಪ್ರಯತ್ನ ಮಾಡಿದ್ದೇವೆ. ಸ್ಕ್ರೀನ್ ಪ್ಲೇ, ಸ್ಟೋರಿ ಎಲ್ಲವೂ ಚೆನ್ನಾಗಿ ಬಂದಿದೆ ಎಂದರು.

    ನಟ ವಿಜಯ್ ರಾಘವೇಂದ್ರ ಮಾತನಾಡಿ, ಮರೀಚಿ ಟೀಸರ್ ಲಾಂಚ್ ಆಗಿದೆ. ಟ್ಯಾಗ್ ಲೈನ್ ಹೇಳುವಂತೆ God father of good and bad ಎನ್ನುವಾಗೇ ಪ್ರತಿಯೊಬ್ಬರ ಮನಸ್ಸಿನಲ್ಲಿ ಕಥೆ ಎಣೆಯುವ ಮನಸ್ಸು ಆಗುತ್ತದೆ. ನಮ್ಮಗೂ ಅದೇ ಬೇಕಿರುವುದು. ಮರೀಚಿ ಸಿನಿಮಾ ಒಂದು ಕ್ರೈಮ್ ಥ್ರಿಲ್ಲರ್ ಟೀಸರ್ ನೋಡಿದರೆ ಗೊತ್ತಾಗುತ್ತದೆ. ಈ ಚಿತ್ರದಲ್ಲಿ ಪೊಲೀಸ್ ಪಾತ್ರ ಮಾಡುವ ಅವಕಾಶವನ್ನು ನಿರ್ದೇಶಕರು ಕೊಟ್ಟಿದ್ದಾರೆ. ಮರೀಚಿ ಸಿನಿಮಾದಲ್ಲಿ ತಾಂತ್ರಿಕ ವರ್ಗದವರನ್ನು ಎಷ್ಟು ಜವಾಬ್ದಾರಿಯಿಂದ ಆಯ್ಕೆ ಮಾಡಿದ್ದರೋ ಅದೇ ರೀತಿ ತೆರೆಮೇಲೆ ಬರುವ ಕಲಾವಿದರನ್ನು ಅಷ್ಟೇ ಜವಾಬ್ದಾರಿಯಿಂದ ಆಯ್ಕೆ ಮಾಡಿದ್ದಾರೆ. ಅದರಲ್ಲಿ ನಾನು ಒಬ್ಬ ಇದ್ದೇನೆ ಎಂದು ಹೇಳಲು ಖುಷಿಯಾಗುತ್ತದೆ ಎಂದರು.

    ನಟಿ ಸೋನುಗೌಡ ಮಾತನಾಡಿ, ಮರೀಚಿ ಸ್ಟೋರಿ ಲೈನ್ ನನಗೆ ಬಹಳ ಇಷ್ಟವಾಯಿತು. ಈ ಚಿತ್ರದಲ್ಲಿ ಫಾರ್ಪಮೆನ್ಸ್ ಗೆ ತುಂಬಾ ಸ್ಕೋಪ್ ಇತ್ತು. ನನ್ನ ಪಾತ್ರ ತುಂಬಾ ಚೆನ್ನಾಗಿ ಬಂದಿದೆ. ಹ್ಯಾಪಿ ನ್ಯೂ ಇಯರ್ ನಲ್ಲಿ ಗಂಡ ಹೆಂಡತಿಯಾಗಿ ನಾನು ವಿಜಯ್ ಸರ್ ನಟಿಸಿದ್ದೇವು. ಇಲ್ಲಿಯೂ ಗಂಡ ಹೆಂಡತಿಯಾಗಿ ನಟಿಸಿದ್ದೇವೆ. ಎಮೋಷನಲ್ ಆಗಿ  ಮರೀಚಿ ಸಿನಿಮಾ ಮೂಡಿಬಂದಿದೆ. ಸ್ಕ್ರೀನ್ ನಲ್ಲಿ ನಾವು ಹೇಗೆ ಕಾಣಿಸುತ್ತೇವೆ ಎಂಬುದನ್ನು ನೋಡಲು ನಾನು ಕೂಡ ಕಾತುರಳಾಗಿದ್ದೇನೆ ಎಂದರು. ಮರೀಚಿ ಲವ್  ಸ್ಟೋರಿ ಒಳಗೊಂಡಂತೆ ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾ. ಹಲವು ಕಿರುಚಿತ್ರಗಳನ್ನು ನಿರ್ದೇಶಿಸಿ, ಒಂದಿಷ್ಟು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ದುಡಿದ ಅನುಭವ ಇರುವ ಸಿದ್ಧ್ರುವ್ ನಿರ್ದೇಶನದ ಮೊದಲ ಸಿನಿಮಾವಿದು. ಚಿತ್ರಕ್ಕೆ ಕಥೆ, ಚಿತ್ರಕಥೆ ಕೂಡ ಇವರೇ ಬರೆದಿದ್ದಾರೆ .

    ವಿಜಯ ರಾಘವೇಂದ್ರ (Vijaya Raghavendra) ಜೋಡಿಯಾಗಿ ನಟಿ ಸೋನು ಗೌಡ (Sonu Gowda) ನಟಿಸುತ್ತಿದ್ದು. ಅಭಿ ದಾಸ್, ಸ್ಪಂದನ ಸೋಮಣ್ಣ, ಆರ್ಯನ್, ಶೃತಿ ಪಾಟೀಲ್, ಗೋಪಾಲ್ ಕೃಷ್ಣ ದೇಶಪಾಂಡೆ, ಅರುಣ ಬಾಲರಾಜ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ, ಜ್ಯೂಡ ಸ್ಯಾಂಡಿ ಸಂಗೀತ ನಿರ್ದೇಶನ ಚಿತ್ರಕ್ಕಿರಲಿದೆ. ಎಸ್ ಎಸ್ ರೆಕ್ ಬ್ಯಾನರ್ ನಡಿ ನಿರ್ದೇಶಕ ಸಿದ್ಧ್ರುವ್ ಹಾಗೂ ಸಂತೋಷ್ ಮಾಯಪ್ಪ ಚಿತ್ರವನ್ನು ನಿರ್ಮಿಸಿದ್ದಾರೆ. ಶೂಟಿಂಗ್ ಮುಗಿಸಿರುವ ಚಿತ್ರತಂಡ ಶೀಘ್ರದಲ್ಲೇ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಅಲೆಕ್ಸಾ’ ಚಿತ್ರಕ್ಕಾಗಿ ತನಿಖಾಧಿಕಾರಿಯಾದ ಅದಿತಿ ಪ್ರಭುದೇವ

    ‘ಅಲೆಕ್ಸಾ’ ಚಿತ್ರಕ್ಕಾಗಿ ತನಿಖಾಧಿಕಾರಿಯಾದ ಅದಿತಿ ಪ್ರಭುದೇವ

    ವನ್ ತೇಜ್ ಹಾಗೂ ಅದಿತಿ ಪ್ರಭುದೇವ ಪ್ರಮುಖಪಾತ್ರದಲ್ಲಿ ನಟಿಸಿರುವ ‘ಅಲೆಕ್ಸಾ’ (Alexa)ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಜೀವ (Jeeva) ನಿರ್ದೇಶಿಸಿರುವ ಈ ಚಿತ್ರದ ಟೀಸರ್ (Teaser) ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ. ವಿ.ಚಂದ್ರು ನಿರ್ಮಾಣದ ಈ ಚಿತ್ರ ನವೆಂಬರ್ ನಲ್ಲಿ ತೆರೆಗೆ ಬರುತ್ತಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

    ಇದೊಂದು ಮರ್ಡರ್ ಮಿಸ್ಟರಿ ಚಿತ್ರ. ಕಥೆ ಕೇಳಿದ ತಕ್ಷಣ ನಿರ್ಮಾಪಕರು ಇಷ್ಟಪಟ್ಟರು. ಇನ್ವೆಸ್ಟಿಕೇಶನ್ ಆಫೀಸರ್ ಆಗಿ ಅದಿತಿ ಪ್ರಭುದೇವ (Aditi Prabhudev) ನಟಿಸಿದ್ದಾರೆ. ಪವನ್ ತೇಜ್ (Pawan Tej) ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಫಾರ್ಮಾಸೆಟಿಕಲ್ ಮಾಫಿಯಾ ಬಗ್ಗೆ ಕೂಡ ಕ್ಲೈಮ್ಯಾಕ್ಸ್ ನಲ್ಲಿ ತೋರಿಸಿದ್ದೇವೆ‌. ಈ ಚಿತ್ರದ ಎರಡನೇ ಭಾಗವನ್ನು ತೆರೆಗೆ ತರುವ ಆಲೋಚನೆ ಇದೆ. ಮೈಸೂರು, ಮಡಿಕೇರಿ ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ಮೂರು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳು ಚಿತ್ರದಲ್ಲಿದೆ.‌ ಅಕ್ಟೋಬರ್ ಕೊನೆ ಅಥವಾ ನವೆಂಬರ್ ನಲ್ಲಿ ಚಿತ್ರವನ್ನು ತೆರೆಗೆ ಬರಲಿದೆ ಎಂದು ನಿರ್ದೇಶಕ ಜೀವ ತಿಳಿಸಿದರು.

    ನನಗೆ ನಿಜಜೀವನದಲ್ಲಿ ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸ್ಸಿತ್ತು. ಅದು ಆಗಲಿಲ್ಲ.‌ ನಿರ್ದೇಶಕರು ನೀವು ಈ ಚಿತ್ರದಲ್ಲಿ ಇನ್ವೆಸ್ಟಿಕೇಶನ್ ಆಫೀಸರ್ ಅಂದ ತಕ್ಷಣ ಒಪ್ಪಿಕೊಂಡೆ. ಸಾಹಸ ದೃಶ್ಯಗಳಲ್ಲೂ ಕಾಣಿಸಿಕೊಳ್ಳುವ ಕನಸ್ಸಿತ್ತು. ಅದು ಈ ಚಿತ್ರದಲ್ಲಿ ನನಸ್ಸಾಗಿದೆ. ಸಾಹಸ ನಿರ್ದೇಶಕ ರವಿವರ್ಮ ಹಾಗೂ ಮಾಸ್ ಮಾದ ಅವರು ಸಾಹಸ ಸಂಯೋಜನೆಯಲ್ಲಿ ನಾನು ಅಭಿನಯಿಸಿರುವ ಸಾಹಸ ಸನ್ನಿವೇಶಗಳು ಚೆನ್ನಾಗಿ ಬಂದಿದೆ ಎಂದರು ನಟಿ ಅದಿತಿ ಪ್ರಭುದೇವ. ಇದನ್ನೂ ಓದಿ:ರಶ್ಮಿಕಾ ಮಂದಣ್ಣ ಜೊತೆ ಸಂಪರ್ಕದಲ್ಲಿದ್ದೇನೆ, ಆಕೆಯ ಸಕ್ಸಸ್ ಬಗ್ಗೆ ಖುಷಿಯಿದೆ- ರಕ್ಷಿತ್ ಶೆಟ್ಟಿ

    ಚಿತ್ರದಲ್ಲಿ ಗಂಡ – ಹೆಂಡತಿ ಕೊಲೆ ಆಗಿರುತ್ತದೆ. ಆ‌ ಕೊಲೆಯ ತನಿಖೆಯ ಸುತ್ತ ಕಥೆ ಸಾಗುತ್ತದೆ ಎಂದು ಮಾತನಾಡಿದ ನಾಯಕ ಪವನ್ ತೇಜ್ ಅದಿತಿ ಪ್ರಭುದೇವ ಅವರ ಜೊತೆ ನಟಿಸುವ ಹಂಬಲವಿತ್ತು. ಈ ಚಿತ್ರದಲ್ಲಿ ನಟಿಸಿದ್ದೇನೆ ಎಂದರು. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ನೋಡಿ. ಪ್ರೋತ್ಸಾಹ ನೀಡಿ ಎನ್ನುತ್ತಾರೆ ನಿರ್ಮಾಪಕ ವಿ.ಚಂದ್ರು. ಚಿತ್ರದ ಬಹುತೇಕ ಕಲಾವಿದರು, ತಂತ್ರಜ್ಞರು ಹಾಗೂ ಚಿತ್ರದ ವಿತರಕರಾದ ರಿಲಯನ್ಸ್ ಎಂಟರ್ಟೈನ್ಮೆಂಟ್ ಅವರು ‘ಅಲೆಕ್ಸಾ’ ಬಗ್ಗೆ ಮಾತನಾಡಿದರು.

    ಪವನ್ ತೇಜ್, ಅದಿತಿ ಪ್ರಭುದೇವ, ನಾಗಾರ್ಜುನ್, ಮೇಘಶ್ರೀ, ಮಿಮಿಕ್ರಿ ಗೋಪಿ, ಚಂದ್ರಕಲಾ ಮೋಹನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.  ಸತೀಶ್ ಬಿ  ಅವರ ಛಾಯಾಗ್ರಹಣ ಹಾಗೂ ಉಮೇಶ್ ಆರ್ ಬಿ  ಸಂಕಲನ ಅಲೆಕ್ಸಾ ಚಿತ್ರದಲ್ಲಿ ಸುಂದರವಾಗಿ ಮೂಡಿಬಂದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]