Tag: tech summit

  • ದೇಶದಲ್ಲಿ ಕರ್ನಾಟಕವೊಂದು ಆರ್ಥಿಕ‌ ದೇಶ: ಬ್ರಿಡ್ಜ್ ಟು ಬೆಂಗಳೂರು ಕಾರ್ಯಕ್ರಮದಲ್ಲಿ ಸಿಎಂ ಅಭಿಪ್ರಾಯ

    ದೇಶದಲ್ಲಿ ಕರ್ನಾಟಕವೊಂದು ಆರ್ಥಿಕ‌ ದೇಶ: ಬ್ರಿಡ್ಜ್ ಟು ಬೆಂಗಳೂರು ಕಾರ್ಯಕ್ರಮದಲ್ಲಿ ಸಿಎಂ ಅಭಿಪ್ರಾಯ

    ನವದೆಹಲಿ: ಕರ್ನಾಟಕ ಕೇವಲ ಸಾಂಸ್ಕೃತಿಕ ಕೇಂದ್ರವಾಗಿಲ್ಲ ಬದಲಿಗೆ ಅದೊಂದು ಆರ್ಥಿಕ ಶಕ್ತಿಕೇಂದ್ರ 337 ಬಿಲಿಯನ್ ಡಾಲರ್ ಜಿಎಸ್‌ಡಿಪಿ ಹೊಂದಿರುವ ನಾವು ಭಾರತದ ನಾಲ್ಕನೇ ದೊಡ್ಡ ಆರ್ಥಿಕತೆ ಹೊಂದಿದ್ದು, ರಾಷ್ಟ್ರದ ಜಿಡಿಪಿಗೆ ಶೇ.9 ರಷ್ಟು ಕೊಡುಗೆಯನ್ನು ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

    ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ‘ಬ್ರಿಡ್ಜ್ ಟು ಬೆಂಗಳೂರು’ ಕಾರ್ಯಕ್ರಮದಲ್ಲಿ ಭಾಗಿಯಾಗಿ 65 ದೇಶಗಳ ರಾಯಭಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ಮತ್ತು ವಿಶ್ವದೊಂದಿಗಿನ ಬಾಂಧವ್ಯವನ್ನು ಬಲಪಡಿಸಲು ನಾವೆಲ್ಲಾ ಇಲ್ಲಿ ಸೇರಿದ್ದೇವೆ. ಈ ಮಾತುಕತೆಯು ಕೇವಲ ತಂತ್ರಜ್ಞಾನಕ್ಕೆ ಮಾತ್ರ ಸೀಮತವಾಗಿರದೇ ವ್ಯಾಪಾರ, ಪ್ರವಾಸೋದ್ಯಮ, ಶಿಕ್ಷಣ, ಸುಸ್ಥಿರತೆ ಮತ್ತು ನಾವೀನ್ಯತೆಯಲ್ಲಿ ಶಾಶ್ವತ ಪಾಲುದಾರಿಕೆಗಳನ್ನು ಸೃಷ್ಠಿಸುವ ಬಗ್ಗೆಯೂ ಚರ್ಚಿಸಲಿದೆ. ಕರ್ನಾಟಕ ವಿನಿಮಯದ ಹೃದಯ ಭಾಗವಾಗಿದ್ದು, ನಮ್ಮ ದೃಷ್ಠಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ನನಗೆ ಸಂತಸವಾಗಿದೆ ಎಂದು ಹೇಳಿದರು.

    ಬೆಂಗಳೂರು ಟೆಕ್ ಸಮ್ಮಿಟ್ 2025 ಕ್ಕೆ ಇಂದಿನ ಕಾರ್ಯಕ್ರಮ ಮುನ್ನುಡಿಯಾಗಿದೆ. ಇದು ನಾವೀನ್ಯತೆಗೆ ಏಷ್ಯಾದಲ್ಲಿಯೇ ಮುಂಚೂಣಿಯಲ್ಲಿರುವ ವೇದಿಕೆ. ಅದಕ್ಕೂ ಮಿಗಿಲಾಗಿ ಸಂಪರ್ಕ, ಸಹಯೋಗ ಮತ್ತು ಹಂಚಿಕೊಳ್ಳಬಹುದಾದ ಭವಿಷ್ಯವನ್ನು ರೂಪಿಸಲು ಇದೊಂದು ಸದವಕಾಶ. ನಮ್ಮ ರಾಜಧಾನಿ ಬೆಂಗಳೂರು ಜಾಗತಿಕ ಟೆಕ್ ನಾಯಕನಾಗಿದ್ದು, ಪ್ರಪಂಚದಾದ್ಯಂತ ಪ್ರತಿಷ್ಠಿತ 15 ಸ್ಟಾರ್ಟ್ ಅಪ್ ಪರಿಸರ ವ್ಯವಸ್ಥೆಗಳಲ್ಲಿ ಒಂದು ಎಂದು ಗುರುತಿಸಲ್ಪಟ್ಟಿದೆ. 18,000 ಕ್ಕೂ ಹೆಚ್ಚು ಸ್ಟಾರ್ಟ್ ಅಪ್‌ಗಳಿಗೆ ಬೆಂಗಳೂರು ನೆಲೆಯಾಗಿದ್ದು, 50+ ಯೂನಿಕಾರ್ನ್‌ಗಳು ಮತ್ತು ಭಾರತದ ಶೇ.40ರಷ್ಟು ಸಾಮರ್ಥ್ಯ ಕೇಂದ್ರಗಳು, ಬಾಷ್, ಇಂಟೆಲ್ ಮತ್ತು ಎಸ್ಎಪಿ ಕಂಪನಿಗಳ ಆರ್ & ಡಿ ಕೇಂದ್ರಗಳನ್ನು ಹೊಂದಿದೆ ಎಂದರು.

    ನಮ್ಮ ಬಿಯಾಂಡ್ ಬೆಂಗಳೂರು ಯೋಜನೆಯು ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಬೆಳವಣಿಗೆಯನ್ನು ಪಸರಿಸುತ್ತಿದ್ದು, ಪ್ರತಿ ಪ್ರದೇಶವೂ ಏಳಿಗೆಯಾಗುವುದನ್ನು ಖಾತ್ರಿಪಡಿಸುತ್ತಿದೆ. ಕರ್ನಾಟಕದ ಯಶಸ್ಸು ಅದರ ಜನ ಹಾಗೂ ನೀತಿಗಳಿಂದಾಗಿ ದೊರೆತಿದೆ. ನಿಪುಣ ಕರ್ನಾಟಕ ಕಾರ್ಯಕ್ರಮಗಳ ಮೂಲಕ ನಾವು ಒಂದು ಲಕ್ಷಕ್ಕೂ ಹೆಚ್ಚು ಯುವಜನರಿಗೆ ಮೈಕ್ರೋಸಾಫ್ಟ್ ಮತ್ತು ಅಕ್ಸೆಂಚರ್‌ನಂತಹ ಜಾಗತಿಕ ಸಂಸ್ಥೆಗಳ ಪಾಲುದಾರಿಕೆಯೊಂದಿಗೆ ಎಐ, ಸೈಬರ್ ಸೆಕ್ಯುರಿಟಿ ಮತ್ತು ಜೈವಿಕ ತಂತ್ರಜ್ಞಾನ ಕೌಶಲ್ಯಗಳಲ್ಲಿ ತರಬೇತಿ ನೀಡುತ್ತಿದ್ದೇವೆ ಎಂದು ತಿಳಿಸಿದರು.

    ನಮ್ಮ ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳಾದ ಭಾರತೀಯ ವಿಜ್ಞಾನ ಸಂಸ್ಥೆ, ಐಐಎಂ, ಬೆಂಗಳೂರು ಮತ್ತು ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ಸಂಸ್ಥೆಗಳನ್ನು ಜ್ಞಾನ ಮತ್ತು ನಾವೀನ್ಯತಾ ಕ್ಷೇತ್ರಗಳಿಗೆ ಅವು ನೀಡಿರುವ ಕೊಡುಗೆಗಳಿಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿವೆ. ಎಲೆಕ್ಟ್ರಾನಿಕ್ಸ್, ಆನಿಮೇಷನ್, ಗೇಮಿಂಗ್, ಗ್ರೀನ್ ಹೈಡ್ರೋಜನ್, ಪ್ರವಾಸೋದ್ಯಮ ಮತ್ತು ವಿದ್ಯುತ್ ಚಲನೆಗಳಲ್ಲಿ ಕರ್ನಾಟಕದ ಮುಂದಾಲೋಚನೆಯುಳ್ಳ ನೀತಿಗಳು ಸುಸ್ಥಿರ ಅಭಿವೃದ್ಧಿಗೆ ಸದೃಢ ಪರಿಸರ ವ್ಯವಸ್ಥೆಯನ್ನು ಒದಗಿಸುತ್ತದೆ ಎಂದರು.

    2017 ರಲ್ಲಿ ಪ್ರಾರಂಭಿಸಲಾದ ಜಾಗತಿಕ ನಾವಿನ್ಯತಾ ಮೈತ್ರಿಯು ಕರ್ನಾಟಕವನ್ನು ವಿಶ್ವದೊಂದಿಗೆ ಬೆಸೆಯುವ ಸಂಪರ್ಕ ಸೇತುವಾಗಿದೆ. 2018 ರಲ್ಲಿ ವಿಶ್ವದ ಹತ್ತು ದೇಶದೊಂದಿಗಿನ ಮೈತ್ರಿ ಈಗ 35 ದೇಶಗಳಿಗೆ ವಿಸ್ತರಿಸಿದ್ದು, ಜರ್ಮನಿ, ಆಸ್ಟ್ರೇಲಿಯಾ, ಯುಕೆ, ಯುಎಸ್. ಜಪಾನ್, ಇಸ್ರೇಲ್, ಫ್ರಾನ್ಸ್, ಸೌತ್ ಕೊರಿಯಾ, ಫಿನ್ಲ್ಯಾಂಡ್ ಮತ್ತು ಸ್ವಿಟ್ಜರ್ಲ್ಯಾಂಡ್‌ ದೇಶಗಳು ಮೈತ್ರಿಯಲ್ಲಿವೆ. ಶಿಕ್ಷಣ, ಸಂಶೋಧನೆ, ಸ್ಮಾರ್ಟ್ ಸಿಟಿ, ಶುದ್ಧ ಇಂಧನ, ಪ್ರವಾಸೋದ್ಯಮ ಮತ್ತು ವ್ಯಾಪಾರಗಳಲ್ಲಿ ನಮ್ಮೊಂದಿಗೆ ಸಹಯೋಗ ಬೆಳೆಸಲು ಆಹ್ವಾನಿಸುತ್ತೇವೆ ಎಂದು ಹೇಳಿದರು.

    ನಮ್ಮ ವಿದ್ಯುನ್ಮಾನ, ಐಟಿ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಗಳು ಚಾಲನಾ ಶಕ್ತಿಯಾಗಿದ್ದು, ಕರ್ನಾಟಕವು, ಭಾರತದ ಐಟಿ ಕ್ಷೇತ್ರದ ರಫ್ತಿಗೆ ಸುಮಾರು 64 ಬಿಲಿಯನ್ ಡಾಲರ್‌ನಷ್ಟು ಕೊಡುಗೆ ನೀಡಿದೆ. ಇದು ರಾಷ್ಟ್ರದ ಒಟ್ಟು ರಫ್ತಿನ ಮೂರನೇ ಒಂದು ಭಾಗವಾಗಿದೆ. ಎಐ ಕ್ಲಸ್ಟರ್ಸ್, ವಿದ್ಯುನ್ಮಾನ ಪಾರ್ಕ್ ಮತ್ತು ಜೈವಿಕ ನಾವಿನ್ಯತಾ ಹಬ್‌ಗಳಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಭವಿಷ್ಯದ ಡಿಜಿಟಲ್ ವಿಷಯಗಳಿಗೆ ಸನ್ನದ್ಧವಾಗುವತ್ತ ಕರ್ನಾಟಕವು ದೇಶದಲ್ಲಿಯೇ ಪ್ರಥಮ ರಾಜ್ಯವಾಗಿದ್ದು, ಆನಿಮೇಶನ್, ವಿಶುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರವನ್ನು ಹೊಂದಿದೆ.

    2025 ರ ನವೆಂಬರ್ 18 ರಿಂದ 20 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯಲಿರುವ ಬೆಂಗಳೂರು ಟೆಕ್ ಸಮಿಟ್‌ನಲ್ಲಿ ನಮ್ಮ ಈ ಯೋಜನೆಗಳಿಗೆ ಶಕ್ತಿ ತುಂಬಲಿವೆ. ಭವಿಷ್ಯೀಕರಿಸುವ ಎಂಬ ವಿಷಯವನ್ನು ಆಧರಿಸಿದ ಸಮಿಟ್‌ನಲ್ಲಿ, ಕೃತಕ ವಿಜ್ಞಾನ, ಸೆಮಿಕಂಡಕ್ಟರ್ಸ್‌, ಆರೋಗ್ಯ ಹಾಗೂ ಹವಾಮಾನ ತಂತ್ರಜ್ಞಾನಗಳಲ್ಲಿ ಅನ್ವೇಷಣೆಗಳನ್ನು ಕೈಗೊಳ್ಳಲಾಗುವುದು. ನೋಬೆಲ್ ಪುರಸ್ಕೃತರು, ವಿಶ್ವದ ನಾಯಕರು ಹಾಗೂ ನಾವಿನ್ಯಗಾರರನ್ನು ಬೆಂಗಳೂರು ಟೆಕ್ ಸಮಿಟ್ ಸತ್ಕರಿಸಿದೆ. ಈ ವರ್ಷ ಸಮಿಟ್‌ನಲ್ಲಿ ವಿಶ್ವದ 60 ದೇಶಗಳ ಸುಮಾರು 1200 ಪ್ರದರ್ಶಕರು, 600 ಭಾಷಣಕಾರರು ಹಾಗೂ 1 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಆಶಯ ವ್ಯಕ್ತಪಡಿಸಿದರು.

    ಜಾಗತಿಕ ನಾವಿನ್ಯತಾ ಸಹಕಾರವನ್ನು ಆಧರಿಸಿ, ನಿಮ್ಮ ದೇಶಗಳು ನಾವಿನ್ಯತೆಗಳನ್ನು ಪ್ರದರ್ಶಿಸಿ, ವ್ಯಾಪಾರ ಸಭೆಗಳನ್ನು ನಡೆಸಿ, ನಿರ್ವಾಹಕ ಸಭೆಗಳಲ್ಲಿ ಭಾಗವಹಿಸಬಹುದು. ನಿಮ್ಮನ್ನು ನಾವು ಕೇವಲ ಅತಿಥಿಗಳಾಗಿ ಆಹ್ವಾನಿಸದೇ, ಭವಿಷ್ಯ ರೂಪಿಸುವ ನಮ್ಮ ಭಾಗೀಧಾರರಾಗಿ ಆಹ್ವಾನಿಸುತ್ತೇವೆ. ಕರ್ನಾಟಕ ಎಲ್ಲರನ್ನೊಳಗೊಳ್ಳುವ ಅಭಿವೃದ್ಧಿಯಲ್ಲಿ ಬದ್ಧತೆ ಹೊಂದಿದೆ. ನಮ್ಮ ಹೊಸ ನಾವಿನ್ಯಾತಾ ಜಿಲ್ಲೆಗಳಾದ ಬೆಂಗಳೂರು, ಮೈಸೂರು ಹಾಗೂ ಬೆಳಗಾವಿಯಲ್ಲಿ ಸಂಶೋಧನೆ ಹಾಗೂ ಉದ್ಯೋಗದಲ್ಲಿ ಪ್ರಗತಿ ಕಾಣಲಿವೆ. ಮಂಗಳೂರಿನಲ್ಲಿ ಫಿನ್ ಟೆಕ್ ಯೋಜನೆ ಹಾಗೂ ಹುಬ್ಬಳ್ಳಿ ಧಾರವಾಡದಲ್ಲಿ ಡ್ರೋನ್ ಅಭಿವೃದ್ಧಿ ಯೋಜನೆಗಳು ನಮ್ಮ ಸಮತೋಲಿತ ಬೆಳವಣಿಗೆಯಲ್ಲಿನ ದೂರದೃಷ್ಟಿಯನ್ನು ಬಿಂಬಿಸುತ್ತದೆ. ಕರ್ನಾಟಕ ವಿಶ್ವದೊಂದಿಗಿನ ಪಾಲುದಾರಿಕೆಗೆ ಸಿದ್ದವಾಗಿದೆ.

  • ಏರೋಸ್ಪೇಸ್ ಕ್ಷೇತ್ರದಲ್ಲಿ ಲಕ್ಷ ಮಂದಿಗೆ ತರಬೇತಿ, 60,000 ಕೋಟಿ ಹೂಡಿಕೆಯ ಗುರಿ – ಪ್ರಿಯಾಂಕ್ ಖರ್ಗೆ

    ಏರೋಸ್ಪೇಸ್ ಕ್ಷೇತ್ರದಲ್ಲಿ ಲಕ್ಷ ಮಂದಿಗೆ ತರಬೇತಿ, 60,000 ಕೋಟಿ ಹೂಡಿಕೆಯ ಗುರಿ – ಪ್ರಿಯಾಂಕ್ ಖರ್ಗೆ

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆಯ ಏರೋಸ್ಪೇಸ್ ಮತ್ತು ರಕ್ಷಣಾ ನೀತಿ 2022-27ರಂತೆ ಪರೀಕ್ಷಾ ಸೌಲಭ್ಯಗಳನ್ನು ಒದಗಿಸುವುದರೊಂದಿಗೆ 1 ಲಕ್ಷ ಮಂದಿಗೆ ತರಬೇತಿ ನೀಡುವ ವ್ಯಾಪಕ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುವುದು ಹಾಗೂ 60,000 ಕೋಟಿ ರೂ. ಹೂಡಿಕೆಯ ಮೂಲಕ ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ 70,000 ಉದ್ಯೋಗ ಸೃಷ್ಟಿ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

    ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿರುವ 2 ದಿನಗಳ ರಕ್ಷಣಾ ಮತ್ತು ಏರೋಸ್ಪೇಸ್‌ಗೆ ಸಂಬಂಧಿಸಿದ 13ನೇ ಸ್ಟ್ರಾಟೆಜಿಕ್ ಎಲೆಕ್ಟ್ರಾನಿಕ್ಸ್ ಶೃಂಗಸಭೆಯನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಇದನ್ನೂ ಓದಿ: ಅಗ್ನಿವೀರರಿಗೆ 10% ಮೀಸಲಾತಿ – ಸ್ವಂತ ಉದ್ಯಮ ಆರಂಭಿಸುವವರಿಗೆ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ: ಸಿಎಂ ಘೋಷಣೆ

    ಮೂಲಸೌಕರ್ಯದಲ್ಲಿ ಕೃತಕ ಬುದ್ಧಿಮತ್ತೆ (AI), ಯಂತ್ರ ಕಲಿಕೆ ಮತ್ತು ಸುಧಾರಿತ ಸಾಮಗ್ರಿಗಳಲ್ಲಿ ಸಂಶೋಧನೆಗೆ ಆದ್ಯತೆ ನೀಡುತ್ತದೆ, ಜೊತೆಗೆ ವ್ಯವಹಾರವನ್ನು ಸುಲಭಗೊಳಿಸಲು 500 ಕೋಟಿ ಪ್ರೋತ್ಸಾಹಕಗಳೊಂದಿಗೆ ನಿಯಮಾವಳಿಗಳನ್ನು ಸರಳೀಕರಿಸುತ್ತದೆ. 200ಕ್ಕೂ ಹೆಚ್ಚು ಪಾಲುದಾರಿಕೆಗಳು ಸಹಯೋಗವನ್ನು ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದೂ ಸಚಿವರು ತಿಳಿಸಿದರು.

    ಸುಸ್ಥಿರತೆ ಉತ್ತೇಜಿಸುವ ಮೂಲಕ 2027ರ ವೇಳೆಗೆ ಸ್ಥಳೀಯ ತಂತ್ರಜ್ಞಾನಗಳು ಮತ್ತು ಹಸಿರು ಅಭ್ಯಾಸಗಳ ಮೂಲಕ ಶೇ.30ರಷ್ಟು ಇಂಗಾಲದ ಕಡಿತವನ್ನು ಗುರಿಯಾಗಿರಿಸಿಕೊಳ್ಳಲಾಗಿದೆ, ಹೆಚ್ಚುವರಿಯಾಗಿ, ಏರೋಸ್ಪೇಸ್ ಮತ್ತು ಡಿಫೆನ್ಸ್ ಇಕೋಸಿಸ್ಟಮ್‌ನ ಜಾಗದಲ್ಲಿ ವೇಗವರ್ಧಕ ಬೆಂಬಲವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ರಾಜ್ಯದಾದ್ಯಂತ ಶ್ರೇಷ್ಠತಾ ಕೇಂದ್ರಗಳನ್ನು ಸ್ಥಾಪಿಸಿದೆ ಎಂದೂ ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು. ಇದನ್ನೂ ಓದಿ: ಉಡುಪಿಯ ಹಲವೆಡೆ ನೆರೆ ಪರಿಸ್ಥಿತಿ; ಹಾಸನ, ಕೊಡಗಿನನಲ್ಲಿ ಭೂಕುಸಿತದ ಅವಾಂತರ; ಕಪಿಲಾ ನದಿ ತೀರದಲ್ಲೂ ಪ್ರವಾಹ ಭೀತಿ!

    ಸೈನ್ಯ, ವಾಯುಪಡೆ, ಭದ್ರತೆ ಮತ್ತು ಕಣ್ಗಾವಲು, ನೌಕಾಪಡೆ ಮತ್ತು ಬಾಹ್ಯಾಕಾಶ ಕ್ಷೇತ್ರಗಳಿಗೆ ಉಪಕರಣಗಳು ಮತ್ತು ತಂತ್ರಜ್ಞಾನವನ್ನು ಒದಗಿಸಲು ಉಪಗ್ರಹ ಇಂಟರ್ನೆಟ್ ಸೇವೆ (SIS) ಮೌಲ್ಯಯುತವಾದ ವೇದಿಕೆಯಾಗಿದೆ, ಶೃಂಗಸಭೆಯು ಅತ್ಯಾಧುನಿಕ ತಂತ್ರಜ್ಞಾನಗಳು, ನಾವೀನ್ಯತೆ ಮತ್ತು ರೋಮಾಂಚಕ ಭಾರತೀಯ ಸ್ಟ್ರಾಟೆಜಿಕ್ ಎಲೆಕ್ಟ್ರಾನಿಕ್ಸ್ ಉದ್ಯಮದ ಪ್ರಪಂಚದ ಪ್ರದರ್ಶನವನ್ನು ಹೊಂದಿದೆ ಎಂದೂ ಸಚಿವರು ತಮ್ಮ ಉದ್ಘಾಟನಾ ಭಾಷಣದಲ್ಲಿ ಹೇಳಿದರು.

    ಮುಂದುವರೆದು ಕರ್ನಾಟಕವು ಮಾಹಿತಿ ತಂತ್ರಜ್ಞಾನ (IT) ಮಾತ್ರವಲ್ಲದೇ ಡೀಪ್ ಟೆಕ್, ನ್ಯಾನೋ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನದಲ್ಲಿಯೂ ಮುಂಚೂಣಿಯಲ್ಲಿದೆ. ಎಲೆಕ್ಟ್ರಾನಿಕ್ಸ್ ವಲಯದಲ್ಲಿ, ಕರ್ನಾಟಕವು ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಉತ್ಪಾದನೆಯಲ್ಲಿ, ನಿರ್ದಿಷ್ಟವಾಗಿ ಏರೋಸ್ಪೇಸ್ ಮತ್ತು ರಕ್ಷಣಾ ವಲಯದಲ್ಲಿ ಭಾರತದ ಪ್ರಮುಖ ಶಕ್ತಿಗೆ ಹಾದಿಯನ್ನು ಸುಗಮಗೊಳಿಸಿದೆ ಎಂದು ಹೇಳಿದರು. ಇದನ್ನೂ ಓದಿ: Valmiki Corporation Scam | ನಿಗಮದ ಹಣವನ್ನ ಚುನಾವಣೆಯಲ್ಲಿ ಮದ್ಯ ಖರೀದಿಗೆ ಬಳಸಿದ್ದಾರೆ – ಇಡಿ ಸ್ಫೋಟಕ ಹೇಳಿಕೆ!

    ಎಲೆಕ್ಟ್ರಾನಿಕ್ ಇಂಡಸ್ಟ್ರೀಸ್ ಅಸೋಸಿಯೇಷನ್ ಆಫ್ ಇಂಡಿಯಾ (ELCINA) 1967ರಿಂದ ಎಲೆಕ್ಟ್ರಾನಿಕ್ ಹಾರ್ಡ್‌ವೇರ್ ಉದ್ಯಮಕ್ಕೆ ಸೇವೆ ಸಲ್ಲಿಸುತ್ತಿರುವ ಅತಿದೊಡ್ಡ ಮತ್ತು ಹಳೆಯ ಸಂಸ್ಥೆಯಾಗಿದೆ, ಎಲೆಕ್ಟ್ರಾನಿಕ್ ಸಿಸ್ಟಮ್ ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್ (ESDM) ವಲಯದಲ್ಲಿ ಉತ್ಪಾದನೆ ಮತ್ತು ವ್ಯಾಪಾರ ವಿಸ್ತರಣೆಯನ್ನು ಉತ್ತೇಜಿಸುವುದು ಈ ಸಂಸ್ಥೆಯ ಉದ್ದೇಶವಾಗಿದೆ ವಿವರಿಸಿದರು.

  • 25ನೇ ಬೆಂಗಳೂರು ಟೆಕ್ ಸಮ್ಮಿಟ್- ಕನ್ನಡದಲ್ಲಿಯೇ ಮಾತು ಶುರು ಮಾಡಿದ ಪ್ರಧಾನಿ ಮೋದಿ

    25ನೇ ಬೆಂಗಳೂರು ಟೆಕ್ ಸಮ್ಮಿಟ್- ಕನ್ನಡದಲ್ಲಿಯೇ ಮಾತು ಶುರು ಮಾಡಿದ ಪ್ರಧಾನಿ ಮೋದಿ

    ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ಇಂದು ಅರಮನೆ ಮೈದಾನ (Palace Ground) ದಲ್ಲಿ ನಡೆಯುತ್ತಿರೋ 25ನೇ ಟೆಕ್ ಸಮ್ಮಿಟ್‍ (Bengaluru Tech Summit 2022) ಗೆ ವರ್ಚುಯಲ್ ಮೂಲಕ ಚಾಲನೆ ನೀಡಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮಾತನಾಡಿದರು.

    ಎಲ್ಲರಿಗೂ ನಮಸ್ಕಾರ. ಕರ್ನಾಟಕಕ್ಕೆ ಸ್ವಾಗತ. ನಮ್ಮ ಬೆಂಗಳೂರಿಗೆ ಸ್ವಾಗತ ಎಂದು ಕನ್ನಡದಲ್ಲಿಯೇ ಮಾತು ಶುರು ಮಾಡಿದ ಮೋದಿ, ಬೆಂಗಳೂರು ಟೆಕ್ನಾಲಜಿಯ ತವರೂರು. ಬೆಂಗಳೂರು ಗ್ಲೋಬಲ್ ಇಂಡೆಕ್ಸ್ (Bengaluru Global Index) ನಲ್ಲಿ ನಂಬರ್ ಒನ್ ಇದೆ. ಭಾರತದ ಇನ್ನೋವೇಶನ್ ವಿಚಾರದಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿ ಇದೆ. ಭಾರತದಲ್ಲಿ ಇನ್ನೋವೇಟಿವ್ ಯುವ ಸಮೂಹ ಇದೆ. ನಮ್ಮ ದೇಶದ ಯುವ ಸಮೂಹದ ಶಕ್ತಿ ಇಡೀ ವಿಶ್ವಕ್ಕೆ ಈಗಾಗಲೇ ಪರಿಚಿತವಾಗಿದೆ ಎಂದರು.

    ನಾವೀಗ 3ನೇ ಅತಿ ದೊಡ್ಡ ಸ್ಟಾರ್ಟ್ ಅಪ್ ದೇಶವಾಗಿದ್ದೇವೆ. ಆರ್&ಡಿ ವಿಚಾರವಾಗಿಯೂ ನಾವು ತುಂಬಾ ಮುಂದೆ ಬಂದಿದ್ದೇವೆ. ಭಾರತೀಯ ಯುವ ಪೀಳಿಗೆಗೆ ಮೊಬೈಲ್ ಹಾಗೂ ಡೇಟಾ ಉಪಯೋಗದಿಂದ ಹಲವಾರು ಆವಿಷ್ಕಾರ ಮಾಡಿದ್ದಾರೆ. ಬ್ರಾಡ್ ಬ್ಯಾಂಡ್ ಸಂಪರ್ಕ 60 Million ನಿಂದ 810 Million ಆಗಿದೆ. ಸ್ಮಾರ್ಟ್ ಪೋನ್ ಬಳಿಕೆ 130 Million ನಿಂದ 750 Million ಆಗಿದೆ. ಇಂಟರ್‌ ನೆಟ್ ಉಪಯೋಗಿಸೋ ಜನರು ನಗರಕ್ಕಿಂತ ಹೆಚ್ಚಾಗಿ ಗ್ರಾಮೀಣ ಭಾಗದಲ್ಲಿ ಇದ್ದಾರೆ ಎಂದು ಹೇಳಿದರು.

    ಭಾರತ ಕೊರೊನಾವನ್ನ ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದೆ. ಕೊರೊನಾ ಸಮಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಭೂತಪೂರ್ವ ಕೆಲಸ ಮಾಡಿದೆ. ಭಾರತ ವಿಶ್ವದ ಅತಿದೊಡ್ಡ ಆರೋಗ್ಯ ಸೇವೆ ಆಯುಷ್ಮಾನ್ ಭಾರತ್‌ (Ayushman Bharat) ಯೋಜನೆ ಹೊಂದಿರೋ ದೇಶವಾಗಿದೆ. ಟೆಕ್ನಾಲಜಿ ಬಳಕೆಯಲ್ಲಿ ಭಾರತ ಮುಂದಿದೆ. ಆರೋಗ್ಯ, ಶೈಕ್ಷಣಿಕ ವಲಯದವರೆದೂ ಟೆಕ್ನಾಲಜಿ ಬಳಕೆ ಆಗ್ತಿದೆ. ನಮ್ಮ ಡೇಟಾ ದರಗಳು ಪ್ರಪಂಚದಲ್ಲಿ ಅತಿ ಕಡಿಮೆ ಬೆಲೆಯಾಗಿದೆ ಎಂದು ತಿಳಿಸಿದರು.

    ಕೋವಿಡ್ ಸಂದರ್ಭದಲ್ಲಿ ಡಾಟಾ, ಟೆಕ್ನಾಲಜಿ ಬಳಕೆಯಿಂದ ಮಕ್ಕಳಿಗೆ ವಿದ್ಯೆ ನೀಡುವ ಕೆಲಸ ಮಾಡಲಾಗಿದೆ. ಟೆಕ್ನಾಲಜಿ ಬಳಕೆಯಿಂದ ಭ್ರಷ್ಟಾಚಾರ ಕಡಿವಾಣಕ್ಕೆ ಸಹಾಯ ಆಗುತ್ತೆ. ಬೀದಿ ಬದಿ ವ್ಯಾಪಾರಗಳು ಡಿಜಿಟಲ್ ಪೇಮೆಂಟ್ ಬಳಸಲು ಉತ್ತೇಜನ ನೀಡಲಾಯ್ತು. ಡಿಜಿಟಲ್ ಪೇಮೆಂಟ್ ಬಳಸೋರಿಗೆ ಇನ್ಸಿಂಟಿವ್ ಗಳನ್ನು ನೀಡಲಾಯ್ತು. ಟೆಕ್ನಾಲಜಿ ಬಳಕೆಯಿಂದ ಭ್ರಷ್ಟಾಚಾರ ಪ್ರಮಾಣ ಕಡಿಮೆಯಾಗಿದೆ ಎಂದರು.

    ಬೆಂಗಳೂರು ಟೆಕ್ ಸಮ್ಮಿಟ್ ಗೆ ದೀಪ ಬೆಳಗುವ ಮೂಲಕ ಸಿಎಂ ಬೊಮ್ಮಾಯಿ ಸಾಂಪ್ರದಾಯಿಕ ಚಾಲನೆ ನೀಡಿದರು. ಈ ಕಾರ್ಯಕ್ರಮವು ಇಂದಿನಿಂದ ನವೆಂಬರ್ 18ವರೆಗೆ 3 ದಿನಗಳ ಕಾಲ ನಡೆಯಲಿದೆ. ಸಚಿವರಾದ ಅಶ್ವಥ್ ನಾರಾಯಣ, ಮುರುಗೇಶ್ ನಿರಾಣಿ, ಕಿರಣ್ ಮಜುಂದಾರ್ ಶಾ, ಸಿಎಸ್ ವಂದಿತಾ ಶರ್ಮಾ, ನಾಲ್ಕು ದೇಶಗಳ ಸಚಿವರು ಮತ್ತು ಪ್ರತಿನಿಧಿಗಳು ಭಾಗಿಯಾಗಿದ್ದಾರೆ. 50ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು, 550 ಪ್ರದರ್ಶಕರು, 16 ರಾಜ್ಯಗಳ ಸ್ಟಾರ್ಟ್ ಅಪ್ ಗಳು ಪಾಲ್ಗೊಂಡಿದ್ದವು.

    Live Tv
    [brid partner=56869869 player=32851 video=960834 autoplay=true]

  • ತಂತ್ರಜ್ಞಾನ ಶೃಂಗ ಆರಂಭ-ತಾಂತ್ರಿಕ ಬೆಳವಣಿಗೆಯಲ್ಲಿ ಕೃಷಿಗೆ ಒತ್ತು

    ತಂತ್ರಜ್ಞಾನ ಶೃಂಗ ಆರಂಭ-ತಾಂತ್ರಿಕ ಬೆಳವಣಿಗೆಯಲ್ಲಿ ಕೃಷಿಗೆ ಒತ್ತು

    ಬೆಂಗಳೂರು: ಆಧುನಿಕ ತಂತ್ರಜ್ಞಾನ, ನಾವೀನ್ಯತೆ , ಸಂಶೋಧನೆ ಮತ್ತು ಜ್ಞಾನದ ಬೆಳವಣಿಗೆಗಳು ದೇಶದ ಕೃಷಿ ಸ್ಥಿತಿಯ ಸುಧಾರಣೆಗೂ ಹೆಚ್ಚು ಒತ್ತು ಕೊಟ್ಟು ಮುನ್ನಡೆಯಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಹೇಳಿದರು.

    ‘ಭವಿಷ್ಯವನ್ನು ಮುನ್ನಡೆಸು’ (ಡ್ರೈವಿಂಗ್ ದ ನೆಕ್ಸ್ಟ್) ಘೋಷವಾಕ್ಯದ 24ನೇ ಆವೃತ್ತಿಯ ಬೆಂಗಳೂರು ತಂತ್ರಜ್ಞಾನ ಶೃಂಗವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದ ಅವರು, ಐ.ಟಿ. ಮತ್ತು ಬಿ.ಟಿ.ಯೊಂದಿಗೆ ಎಲ್ಲರೂ ಕರ್ತವ್ಯಪ್ರಜ್ಞೆಯನ್ನು (ಡ್ಯೂಟಿ) ಮೈಗೂಡಿಸಿಕೊಂಡಾಗ ದೇಶವು ಶಕ್ತಿಶಾಲಿಯಾಗಿ (ಮೈಟಿ) ಹೊರಹೊಮ್ಮುತ್ತದೆ. ಕೃಷಿಯು ದೇಶದ ಪ್ರಧಾನ ಕಸುಬಾಗಿರುವುದರಿಂದ ತಾಂತ್ರಿಕತೆಯು ಅದಕ್ಕೆ ಪೂರಕವಾಗಿರಬೇಕು ಎಂದರು. ಇದನ್ನೂ ಓದಿ: ತುಂಗಾನಗರ ಪೊಲೀಸರು ಏನು ದನ ಕಾಯುತ್ತಿದ್ದಾರಾ? : SPಗೆ ಈಶ್ವರಪ್ಪ ಪ್ರಶ್ನೆ

    ಜಗತ್ತು ಈಗ ಜ್ಞಾನಾಧಾರಿತವಾಗಿ ರೂಪುಗೊಳ್ಳುತ್ತಿದ್ದು, ಕೋವಿಡ್ ನಂತರ ಡಿಜಿಟಲೀಕರಣಗೊಳ್ಳುತ್ತಿದೆ. ಯಾವುದೇ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನೀತಿಗಳು ಎಷ್ಟೇ ಚೆನ್ನಾಗಿದ್ದರೂ ಅಂತಿಮವಾಗಿ ತಂತ್ರಜ್ಞಾನದ ಲಾಭಗಳನ್ನು ಸಮಾಜದ ಕಟ್ಟಕಡೆಯ ಮನುಷ್ಯನಿಗೆ ತಲುಪಿಸಬೇಕಾದ್ದು ಮುಖ್ಯ. ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯು ಇದನ್ನು ಸಾಧಿಸಿಕೊಂಡು ಬಂದಿದೆ. ತಂತ್ರಜ್ಞಾನದ ಮೂಲಕ ಇಡೀ ವ್ಯವಸ್ಥೆಯನ್ನು ಪರಿವರ್ತಿಸಬೇಕೆಂಬುದೇ ಪ್ರಧಾನಿ ನರೇಂದ್ರ ಮೋದಿ ಅವರ ಗುರಿಯೂ ಆಗಿದೆ ಎಂದರು.

    ದೇಶದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಖಾಸಗಿ ವಲಯದ ಪಾತ್ರ ಬಹುಮುಖ್ಯವಾಗಿದೆ. ಇದಕ್ಕೆ ಪೂರಕವಾಗಿ ಪ್ರಧಾನಿಯವರು ಸುಧಾರಣೆ-ಸಾಧನೆ-ಪರಿವರ್ತನೆ ಎಂಬುದನ್ನೇ ಮಂತ್ರವಾಗಿಸಿಕೊಂಡು ನೀತಿಗಳನ್ನು ರೂಪಿಸುತ್ತಿದ್ದಾರೆ. ಜಗತ್ತಿನ ವಿಖ್ಯಾತ ಉದ್ದಿಮೆಗಳಲ್ಲೆಲ್ಲ ಭಾರತೀಯರು ನಾಯಕತ್ವ ವಹಿಸಿಕೊಂಡಿರುವುದು ಭಾರತೀಯರಾದ ನಮ್ಮ ಬೌದ್ಧಿಕ ಪ್ರಗತಿಯನ್ನು ದೃಢಪಡಿಸುತ್ತದೆ ಎಂದು ನಾಯ್ಡು ನುಡಿದರು. ಇದನ್ನೂ ಓದಿ: ರಾಜ್ ಕುಟುಂಬದಲ್ಲಿ 20-23 ವರ್ಷಕ್ಕೆ ಮತ್ತೊಬ್ಬ ಸೂಪರ್ ಸ್ಟಾರ್ ಹುಟ್ಟಿಬರ್ತಾನೆ: ಜಗ್ಗೇಶ್

    ನಿರ್ದಿಷ್ಟವಾಗಿ ಬೆಂಗಳೂರು ಮತ್ತು ಒಟ್ಟಾರೆ ಭಾರತ ದೇಶವು ಅತ್ಯಂತ ಕ್ರಿಯಾಶೀಲವಾಗಿವೆ. ಇದಕ್ಕೆ ತಕ್ಕಂತೆ ಭಾರತದ ಪರಂಪರೆ ಮತ್ತು ಸಂಸ್ಕೃತಿಯ ಸಾರವಾದ ಹಂಚಿಕೊಳ್ಳುವಿಕೆ ಮತ್ತು ಇನ್ನೊಬ್ಬರ ಬಗ್ಗೆ ಗಮನ ಹರಿಸುವಿಕೆ (ಕಾಳಜಿ) ಎರಡನ್ನೂ ನಾವು ತಂತ್ರಜ್ಞಾನದ ಧಾರೆಗಳ ಮೂಲಕ ಮುಂದುವರಿಸಿಕೊಂಡು ಹೋಗಬೇಕು. ತಾಂತ್ರಿಕತೆ ಹಾಗೂ ನಾವೀನ್ಯತೆಯು ಅಂತಿಮ ಸಮಾಜದಲ್ಲಿ ಸಂತೋಷವನ್ನುಂಟು ಮಾಡುವ ಉದ್ದೇಶ ಹೊಂದಿರಬೇಕು ಎಂದರು.

    ರಾಜ್ಯಕ್ಕೆ ಮುಕ್ತ ಸ್ವಾಗತ: ಬೊಮ್ಮಾಯಿ: ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರು ಮತ್ತು ಒಟ್ಟಾರೆಯಾಗಿ ರಾಜ್ಯದಲ್ಲಿ ಮನುಷ್ಯನ ಪ್ರತಿಭೆಯ ವಿಕಸನಕ್ಕೆ ತಕ್ಕ ವಾತಾವರಣವಿದ್ದು, ಉದ್ಯಮಗಳ ಬೆಳವಣಿಗೆಗೆ ಪೂರಕವಾದ ರಚನಾತ್ಮಕ ನೀತಿಗಳಿವೆ. ಪ್ರತಿಯೊಂದು ಉದ್ಯಮವನ್ನೂ ರಾಜ್ಯವು ಮುಕ್ತವಾಗಿ ಸ್ವಾಗತಿಸಲಾಗುವುದು’ ಎಂದರು. ಇದನ್ನೂ ಓದಿ: ತುಂಗಾನಗರ ಪೊಲೀಸರು ಏನು ದನ ಕಾಯುತ್ತಿದ್ದಾರಾ? : SPಗೆ ಈಶ್ವರಪ್ಪ ಪ್ರಶ್ನೆ

    ರಾಜ್ಯವು ಐಟಿ-ಬಿಟಿ ತಂತ್ರಜ್ಞಾನ, ಬಾಹ್ಯಾಕಾಶ, ವೈಮಾಂತರಿಕ್ಷ, ಸಂಶೋಧನೆ ಮತ್ತು ಅಭಿವೃದ್ಧಿ, ಸೆಮಿಕಂಡಕ್ಟರ್ ಹೀಗೆ ಎಲ್ಲದರಲ್ಲೂ ಇಡೀ ದೇಶಕ್ಕೇ ಅಗ್ರಸ್ಥಾನದಲ್ಲಿದೆ. ಇದರ ಜತೆಗೆ ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಸೃಷ್ಟಿಯಲ್ಲೂ ಪ್ರಥಮ ಸ್ಥಾನದಲ್ಲಿದೆ. ಹೀಗಾಗಿ ರಾಜ್ಯವು ತಂತ್ರಜ್ಞಾನದ ಭವಿಷ್ಯದ ಬೆಳವಣಿಗೆಗೆ ಪ್ರಶಸ್ತ ತಾಣವಾಗಿದೆ ಎಂದು ವಿವರಿಸಿದರು.

    ಹೊಸ ಕರ್ನಾಟಕದಿಂದ ಹೊಸ ಭಾರತವನ್ನು ಕಟ್ಟಬಹುದು. ಪ್ರಧಾನಿ ನೀಡಿರುವ ಆತ್ಮನಿರ್ಭರ ಭಾರತ ನಿರ್ಮಾಣದ ಕನಸು ನನಸಾಗಬೇಕು. ಮೇಕ್ ಇನ್ ಕರ್ನಾಟಕ’ದ ಮೂಲಕ ನಾವು ಮೇಕ್ ಇನ್ ಇಂಡಿಯಾವನ್ನು ಸಾಕಾರಗೊಳಿಸಬೇಕು. ಯಶಸ್ಸು ಎಂಬುದು ಸಾಧನೆಯ ಒಂದಂಶ ಮಾತ್ರ. ಹೀಗಾಗಿ ಯಶಸ್ಸಿಗಿಂತ ಸಾಧನೆ ಮುಖ್ಯವಾಗಿದ್ದು, ತಂತ್ರಜ್ಞಾನ ವಲಯದಲ್ಲಿರುವವರು ಸಾಧನೆಯನ್ನೇ ಗುರಿಯಾಗಿಸಿಕೊಳ್ಳಬೇಕು. ತಂತ್ರಜ್ಞಾನವು ಕೊನೆಗೆ ಜನರ ಜೀವನದ ಗುಣಮಟ್ಟವನ್ನು ಸುಧಾರಿಸಬೇಕು ಎಂದು ಅಭಿಪ್ರಾಯಪಟ್ಟರು.

    ಬೆಂಗಳೂರು ತಂತ್ರಜ್ಞಾನದ ತೊಟ್ಟಿಲು: ಅಶ್ವತ್ಥನಾರಾಯಣ: ಸ್ವಾಗತ ಭಾಷಣ ಮಾಡಿದ ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು, ಕೋವಿಡ್ ಪಿಡುಗಿನ ನಂತರ ಅಭಿವೃದ್ಧಿಯ ಮಾನದಂಡಗಳು ಬದಲಾಗಿದ್ದು, ರಾಜ್ಯವು ಈ ಪರಿಸ್ಥಿತಿಯನ್ನು ತಂತ್ರಜ್ಞಾನದ ಬಲದಿಂದ ಸಕಾರಾತ್ಮಕವಾಗಿ ಬಳಸಿಕೊಳ್ಳುತ್ತಿದೆ ಎಂದರು.

    ಉದ್ದಿಮೆಗಳ ಬೆಳವಣಿಗೆಗೆ ಸರರ್ಕಾರವು ಹಲವು ಅನುಕೂಲಕರ ನೀತಿಗಳನ್ನು ರೂಪಿಸಿದೆ. ಇದರಿಂದಾಗಿ ಐಟಿ, ಬಿಟಿ, ಯೂನಿಕಾರ್ನ್ ಉದ್ದಿಮೆಗಳಲ್ಲಿ ರಾಜ್ಯವು ಅಗ್ರಸ್ಥಾನದಲ್ಲಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯಿಂದಾಗಿ ಮುಂಬರುವ ವರ್ಷಗಳಲ್ಲಿ ರಾಜ್ಯವು ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿ ನಿಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ತುಂಗಾನಗರ ಪೊಲೀಸರು ಏನು ದನ ಕಾಯುತ್ತಿದ್ದಾರಾ? : SPಗೆ ಈಶ್ವರಪ್ಪ ಪ್ರಶ್ನೆ

    ನವೋದ್ಯಮಗಳ ಸ್ಥಾಪನೆಯಲ್ಲಿ ರಾಜ್ಯವು ಜಾಗತಿಕ ಮಟ್ಟದಲ್ಲಿ ಅಗ್ರಪಂಕ್ತಿಯಲ್ಲಿದೆ. ನೀತಿ ಆಯೋಗದ ಸಮೀಕ್ಷೆಯಲ್ಲಿ ರಾಜ್ಯವು ಸತತ ಎರಡನೇ ವರ್ಷವೂ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಐಟಿ ರಫ್ತಿನಲ್ಲಿ ಕರ್ನಾಟಕವು ದೇಶದ ಶೇ.40ರಷ್ಟು ಕೊಡುಗೆಯ ಸಿಂಹಪಾಲನ್ನು ನೀಡುತ್ತಿದೆ ಎಂಬುದರ ಬಗ್ಗೆ ಗಮನಸೆಳೆದರು.

    ಕಾರ್ಯಕ್ರಮದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ನಿರ್ದೇಶಕಿ ಮೀನಾ ನಾಗರಾಜ್, ಐಟಿ, ಬಿಟಿ ಮತ್ತು ಸ್ಟಾರ್ಟಪ್ ವಿಷನ್ ಗ್ರೂಪ್ ಗಳ ಮುಖ್ಯಸ್ಥರಾದ ಕ್ರಮವಾಗಿ ಕ್ರಿಸ್ ಗೋಪಾಲಕೃಷ್ಣನ್, ಕಿರಣ್ ಮಜುಂದಾರ್ ಷಾ ಮತ್ತು ಪ್ರಶಾಂತ್ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ನೆಲಮಂಗಲದಲ್ಲಿ ಮಂಗಳಮುಖಿ ಆತ್ಮಹತ್ಯೆ – ಪೊಲೀಸರಿಂದ ತನಿಖೆ

    ಉಳಿದಂತೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್, ಕಿಂಡ್ರೆಲ್ ಕಂಪನಿಯ ಸಿಇಓ ಮಾರ್ಟಿನ್ ಶ್ರೋಟರ್ ಶೃಂಗವನ್ನು ಉದ್ದೇಶಿಸಿ ವರ್ಚುಯಲ್ ಮೂಲಕ ಮಾತನಾಡಿದರು.

    ಬಿಟಿಎಸ್ ಶೃಂಗದಲ್ಲಿ ನೆರೆದಿರುವವರನ್ನು ನೋಡಿದರೆ ನನಗೆ ಗಗನನೌಕೆಯಲ್ಲಿ ಕುಳಿತು ಭವಿಷ್ಯ ಯಾನ ಮಾಡುತ್ತಿದ್ದೇನೆ ಅನ್ನಿಸುತ್ತಿದೆ. ಕರ್ನಾಟಕವು ಜ್ಞಾನದ ಅಧಿದೇವತೆಯಾದ ಸರಸ್ವತಿಯ ನೆಲೆವೀಡು. ಸರಸ್ವತಿಯನ್ನು ಹೊತ್ತಿರುವ ಹಂಸಪಕ್ಷಿಗಳು ಮಾನಸ ಸರೋವರದ ಎತ್ತರವನ್ನು ತಲುಪಬೇಕು. ಇದು ಉದ್ಯಮಿಗಳ ಗುರಿಯಾಗಬೇಕು. -ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ.

    ಐಟಿ, ಬಿಟಿಗಳ ಜೊತೆಗೆ ನಮ್ಮ ಡ್ಯೂಟಿ ಸೇರಿಕೊಳ್ಳಬೇಕು ಆಗ ನಾವೆಲ್ಲರೂ ಮೈಟಿ (ಶಕ್ತಿಶಾಲಿ) ಆಗಬಹುದು. -ಎಂ.ವೆಂಕಯ್ಯ ನಾಯ್ಡು, ಉಪರಾಷ್ಟ್ರಪತಿ. ಇದನ್ನೂ ಓದಿ: ರಾಜ್ ಕುಟುಂಬದಲ್ಲಿ 20-23 ವರ್ಷಕ್ಕೆ ಮತ್ತೊಬ್ಬ ಸೂಪರ್ ಸ್ಟಾರ್ ಹುಟ್ಟಿಬರ್ತಾನೆ: ಜಗ್ಗೇಶ್

    ರಾಜ್ಯವು ಮುಂಬರುವ ದಿನಗಳಲ್ಲಿ ಬಯೋಎಕಾನಮಿಯಲ್ಲೂ ದೇಶಕ್ಕೆ ಅಗ್ರ ಸ್ಥಾನವನ್ನು ಅಲಂಕರಿಸಲಿದೆ. ಜೀವವಿಜ್ಞಾನವನ್ನು ಉತ್ತೇಜಿಸಲು ಸದ್ಯದಲ್ಲೇ ಎಲಿಕ್ಸ್ ಪಾರ್ಕ್ ಸ್ಥಾಪನೆ ಮಾಡಲಾಗುವುದು. -ಡಾ.ಸಿ.ಎನ್.ಅಶ್ವತ್ಥನಾರಾಯಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಸಚಿವ

    ಇಸ್ರೇಲ್ ನ ಪ್ರಾಯೋಗಿಕತೆ ಹಾಗೂ ಭಾರತದ ಕಲ್ಪನೆ ಎರಡೂ ಸೇರಿದರೆ ನಾವೀನ್ಯತೆಯಲ್ಲಿ ಕ್ರಾಂತಿ ಉಂಟುಮಾಡಬಹುದು. ಎರಡೂ ದೇಶಗಳು ಸೇರಿಕೊಂಡು ಜಗತ್ತಿನ ಸಮಸ್ಯೆಗಳಿಗೆ ತಂತ್ರಜ್ಞಾನವನ್ನು ಆಧರಿಸಿ ಪರಿಹಾರ ಕಂಡುಹಿಡಿಯಲು ಸಾಧ್ಯವಿದೆ. ಯಾರು ನಾವೀನ್ಯತೆಗೆ ತೆರೆದುಕೊಳ್ಳುತ್ತಾರೋ ಅವರದೇ ಮುಂದಿನ ಭವಿಷ್ಯ. -ನಫ್ತಾಲಿ ಬೆನೆಟ್, ಇಸ್ರೇಲ್ ಪ್ರಧಾನಿ.

    ಬೆಂಗಳೂರು ಕ್ಷಿಪ್ರಗತಿಯಲ್ಲಿ ಬೆಳೆಯುತ್ತಿರುವ ತಂತ್ರಜ್ಞಾನದ ನೆಲೆಯಾಗಿದೆ. ಇಲ್ಲಿ ನಾವು ನಮ್ಮ ಕಾನ್ಸುಲೇಟ್ ಕಚೇರಿ ತೆರೆಯಲಿದ್ದೇವೆ. -ಸ್ಕಾಟ್ ಮಾರಿಸನ್, ಆಸ್ಟ್ರೇಲಿಯಾ ಪ್ರಧಾನಿ.

    ಭಾರತದಲ್ಲೆ ನಡೆಯುತ್ತಿರುವ ತಾಂತ್ರಿಕ ಆವಿಷ್ಕಾರಗಳು ಇಡೀ ಜಗತ್ತಿನ ಉದ್ದಿಮೆಗಳನ್ನು ಬದಲಿಸುತ್ತಿವೆ. ನಾವು ಕರ್ನಾಟಕದೊಂದಿಗೆ ಬ್ಯಾಂಕಿಂಗ್ ಮತ್ತು ಟೆಲಿಕಾಂ ವಲಯಗಳಲ್ಲಿ ಸಹಕರಿಸಲು ಉತ್ಸುಕರಾಗಿದ್ದೇವೆ. -ಮಾರ್ಟಿನ್ ಶ್ರೋಟರ್, ಸಿಇಒ, ಅಮೆರಿಕದ ಕಿಂಡ್ರೆಲ್ ಕಂಪನಿ

    ಕನ್ನಡದಲ್ಲಿ ಭಾಷಣ, ಪುನೀತ್ ನಿಧನಕ್ಕೆ ಸಂತಾಪ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕನ್ನಡದಲ್ಲೇ ಸರಾಗವಾಗಿ ತಮ್ಮ ಭಾಷಣ ಆರಂಭಿಸಿ, ಕೆಲಸಾಲುಗಳನ್ನು ಮಾತನಾಡಿ ಗಮನ ಸೆಳೆದರು. ಬಳಿಕ ಅವರು, ಇತ್ತೀಚೆಗೆ ಅಕಾಲಿಕವಾಗಿ ಅಗಲಿದ ಕನ್ನಡ ಚಿತ್ರರಂಗದ ಜನಪ್ರಿಯ ಮತ್ತು ಸಮಾಜಮುಖಿ ನಟ ಪುನೀತ್ ರಾಜಕುಮಾರ್ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದರು.

  • ಪುನೀತ್ ನಿಧನದಿಂದ ತುಂಬಲಾರದ ನಷ್ಟವಾಗಿದೆ: ವೆಂಕಯ್ಯ ನಾಯ್ಡು

    ಪುನೀತ್ ನಿಧನದಿಂದ ತುಂಬಲಾರದ ನಷ್ಟವಾಗಿದೆ: ವೆಂಕಯ್ಯ ನಾಯ್ಡು

    ಬೆಂಗಳೂರು: ಇಂದು ನಡೆದ ಟೆಕ್ ಸಮ್ಮೇಳನಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ನಟ ಪುನೀತ್ ರಾಜ್‍ಕುಮಾರ್ ಅವರ ಅಗಲಿಕೆಯ ನೋವನ್ನು ವ್ಯಕ್ತಪಡಿಸಿದ್ದಾರೆ.

    ಟೆಕ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಬೆಂಗಳೂರು ಟೆಕ್ ಸಮ್ಮಿಟ್ ಉದ್ಘಾಟನೆ ಮಾಡಿದ್ದು ಸಂತೋಷವಿದೆ. ಆದರೆ ಕನ್ನಡದ ಸ್ಟಾರ್‌ ನಟ ಪುನೀತ್ ರಾಜ್‍ಕುಮಾರ್ ಕಳೆದುಕೊಂಡಿದ್ದೇವೆ. ಅವರು ಪ್ರತಿಭಾನ್ವಿತ ನಟರಾಗಿ ಗುರುತಿಸಿಕೊಂಡಿದ್ದರು. ಸಾಕಷ್ಟು ಜನಪ್ರಿಯತೆ ಹೊಂದಿದವರಾಗಿದ್ದರು. ಪುನೀತ್ ರಾಜ್‍ಕುಮಾರ್ ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ ಎಂದು ಹೇಳುತ್ತಾ ಪುನೀತ್ ರಾಜ್‍ಕುಮಾರ್‌ಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಇದನ್ನೂ ಓದಿ: ಯುವರತ್ನನಿಗೆ ಪದ್ಮಶ್ರೀ ನೀಡಲು ಶಿಫಾರಸ್ಸಿಗೆ ತೀರ್ಮಾನ

    ಟೆಕ್ ಸಮ್ಮೇಳನ ತಾಜ್ ವೆಸ್ಟೆಂಡ್ ಹೊಟೇಲಿನಲ್ಲಿ ನಡೆಯುತ್ತಿದೆ. ಇಂದಿನಿಂದ ಮೂರು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ರಾಜ್ಯಪಾಲ ಟಿ.ಸಿ.ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಐಟಿಬಿಟಿ ಸಚಿವ ಅಶ್ವಥ ನಾರಾಯಣ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಸೇರಿ ಹಲವು ಐಟಿ ಬಿಟಿ ವಲಯದ ರಾಷ್ಟ್ರೀಯ, ಅಂತರಾಷ್ಟ್ರೀಯ ಸಂಸ್ಥೆಗಳು, ಉದ್ಯಮಿಗಳು ಭಾಗಿಯಾಗಲಿದ್ದಾರೆ