Tag: techie

  • ಅಲ್ ಖೈದಾ ಜೊತೆ ಸಂಪರ್ಕ – ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ ಟೆಕ್ಕಿ ಪುಣೆಯಲ್ಲಿ ಅರೆಸ್ಟ್‌

    ಅಲ್ ಖೈದಾ ಜೊತೆ ಸಂಪರ್ಕ – ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ ಟೆಕ್ಕಿ ಪುಣೆಯಲ್ಲಿ ಅರೆಸ್ಟ್‌

    ಪುಣೆ: ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಟೆಕ್ಕಿಯೊಬ್ಬನನ್ನು (Techie) ಭಯೋತ್ಪಾದನಾ ನಿಗ್ರಹ ದಳ ಪುಣೆಯ (Pune) ಕೊಂಧ್ವಾದಲ್ಲಿ (ATS) ಬಂಧಿಸಿದೆ.

    ಬಂಧಿತ ಆರೋಪಿಯನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಳೆದ ತಿಂಗಳಿನಿಂದ ಎಟಿಎಸ್ ಸಿಬ್ಬಂದಿ ತೀವ್ರ ನಿಗಾ ಇಟ್ಟಿದ್ದರು. ಬಂಧನದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ವಿಶೇಷ ಯುಎಪಿಎ ನ್ಯಾಯಾಲಯ ಆರೋಪಿಯನ್ನು ನ.4 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.  

    ಈತ ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡುವಲ್ಲಿ ಪಾತ್ರ ವಹಿಸಿದ್ದಾನೆ. ಅಲ್ಲದೇ ನಗರಗಳಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆರೋಪಿಯ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಅ.9 ರಂದು ಎಟಿಎಸ್ ಪುಣೆಯ ಹಲವು ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಭಯೋತ್ಪಾದಕ ಜಾಲದ ಸುಳಿವು ನೀಡುವ ಎಲೆಕ್ಟ್ರಾನಿಕ್ ಸಾಧನಗಳು, ದಾಖಲೆಗಳು ಮತ್ತು ವಸ್ತುಗಳನ್ನು ಪತ್ತೆಯಾಗಿದ್ದವು. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

  • ಗುಂಡಿ ತಪ್ಪಿಸಲು ಹೋಗಿ ಬೈಕ್‌ನಿಂದ ರಸ್ತೆಗೆ ಬಿದ್ದ ಟೆಕ್ಕಿ – ಲಾರಿ ಹರಿದು ದುರ್ಮರಣ

    ಗುಂಡಿ ತಪ್ಪಿಸಲು ಹೋಗಿ ಬೈಕ್‌ನಿಂದ ರಸ್ತೆಗೆ ಬಿದ್ದ ಟೆಕ್ಕಿ – ಲಾರಿ ಹರಿದು ದುರ್ಮರಣ

    ನೆಲಮಂಗಲ: ರಸ್ತೆ ಗುಂಡಿ (Pothole) ತಪ್ಪಿಸಲು ಹೋಗಿ ಟೆಕ್ಕಿಯೊಬ್ಬರು (Techie) ಲಾರಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ಮಾದನಾಯಕನಹಳ್ಳಿ ಹುಸ್ಕೂರು ಎಪಿಎಂಸಿ ಬಳಿ ನಡೆದಿದೆ.

    ಮೃತ ಟೆಕ್ಕಿಯನ್ನು ಪ್ರಿಯಾಂಕ (26) ಎಂದು ಗುರುತಿಸಲಾಗಿದೆ. ಯುವತಿ ಅಣ್ಣನ ಜೊತೆ ಬೈಕ್‍ನಲ್ಲಿ ಎಪಿಎಂಸಿ ಹುಸ್ಕೂರು ರಸ್ತೆಯಿಂದ ಮಾದಾವರಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ (Accident) ನಡೆದಿದೆ. ಇದನ್ನೂ ಓದಿ: ಬೆಂಗಳೂರು ಹೊರವಲಯದಲ್ಲಿ ರಸ್ತೆ ಗುಂಡಿಗೆ ಬಿ.ಕಾಂ ಪದವೀಧರೆ ಬಲಿ

    ರಸ್ತೆ ಕಾಮಗಾರಿಯಿಂದ ಈ ರಸ್ತೆ ಹದಗೆಟ್ಟಿದ್ದು, ಗುಂಡಿ ತಪ್ಪಿಸಲು ಪ್ರಿಯಾಂಕ ಸಹೋದರ ಯತ್ನಿಸಿದ್ದಾರೆ. ಈ ವೇಳೆ ಮುಂದೆ ಬಂದ ಲಾರಿ ಕೆಳಗೆ ಯುವತಿ ಬಿದ್ದಿದ್ದಾರೆ. ಈ ವೇಳೆ ಲಾರಿ ಯುವತಿಯ ತಲೆ ಮೇಲೆ ಹರಿದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರು | ಸಿಲಿಂಡರ್‌ ಸ್ಫೋಟ – ಮನೆಯೇ ನೆಲಸಮ, ಓರ್ವ ಸಾವು

  • Kurnool Bus Fire | ಬೆಂಗಳೂರಿನ ಇಬ್ಬರು ಟೆಕ್ಕಿಗಳ ದುರಂತ ಸಾವು

    Kurnool Bus Fire | ಬೆಂಗಳೂರಿನ ಇಬ್ಬರು ಟೆಕ್ಕಿಗಳ ದುರಂತ ಸಾವು

    – ದೀಪಾವಳಿ ಹಬ್ಬ ಮುಗಿಸಿಕೊಂಡು ಬರ್ತಿದ್ದ ಸಾಫ್ಟ್‌ವೇರ್‌ ಎಂಜಿನಿಯರ್‌ ಅನುಷಾ

    ಹೈದರಾಬಾದ್‌/ಬೆಂಗಳೂರು: ಕರ್ನೂಲ್‌ನಲ್ಲಿ ನಡೆದ ಭೀಕರ ಬಸ್‌ ದುರಂತದಲ್ಲಿ (Kurnool Bus Fire) ಬೆಂಗಳೂರಿನ (Bengaluru) ಇಬ್ಬರು ಸಾಫ್ಟ್‌ವೇರ್‌ ಎಂಜಿನಿಯರ್‌ ಕೂಡ ಸಾವನ್ನಪ್ಪಿದ್ದಾರೆ.

    ಎಂಜಿನಿಯರ್‌ಗಳಾದ (Software Engineer) ಅನುಷಾ, ಗನ್ನಮನೇನಿ ಧಾತ್ರಿ (ಜಿ.ಧಾತ್ರಿ) ಮೃತ ದುರ್ದೈವಿಗಳು. ಇದನ್ನೂ ಓದಿ: Kurnool Bus Fire | ಸೂರ್ಯೋದಯಕ್ಕೂ ಮುನ್ನ ಸಾವಿನ ಮನೆ ಕದ ತಟ್ಟಿದ ಸುಂದರ ಕುಟುಂಬ

    ದೀಪಾವಳಿ ಮುಗಿಸಿಕೊಂಡು ಬರ್ತಿದ್ದ ಅನುಷಾ
    ಮಹೇಶ್ವರಂ ಅನುಷಾ ರೆಡ್ಡಿ ಮೂಲತಃ ಯದಾದ್ರಿ ಭುವನಗಿರಿ ಜಿಲ್ಲೆಯ ವಸ್ತಕೊಂಡೂರು ಗ್ರಾಮದವರು. ಬೆಂಗಳೂರಿನಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿ ಕೆಲಸ ಮಾಡಿಕೊಂಡಿದ್ದರು. ದೀಪಾವಳಿ ಹಬ್ಬ ಮುಗಿಸಿ ಬರುತ್ತಿದ್ದ ಅನುಷಾ ಇಂದು ಬೆಳಗ್ಗಿನ ಜಾವ ಸಂಭವಿಸಿದ ದುರಂತದಲ್ಲಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಸಾಫ್ಟ್‌ವೇರ್‌ ಎಂಜಿನಿಯರ್ ಧಾತ್ರಿ
    ಗನ್ನಮನೇನಿ ಧಾತ್ರಿ (ಜಿ.ಧಾತ್ರಿ) ಬಾಪಟ್ಲ ಜಿಲ್ಲೆಯವರು. ಮಾವನ ಮನೆಯಿಂದ ಬೆಂಗಳೂರಿಗೆ ವಾಪಸ್‌ ಬರುತ್ತಿದ್ದ ವೇಳೆ ಸಾವನ್ನಪ್ಪಿದ್ದು, ಬದುಕು ದುರಂತ ಅಂತ್ಯಕಂಡಿದೆ. ಇದನ್ನೂ ಓದಿ: ಬೈಕ್‌ ಡಿಕ್ಕಿ, ಧಗಧಗಿಸಿದ ಬೆಂಗಳೂರಿಗೆ ಬರುತ್ತಿದ್ದ ಬಸ್ಸು – 20ಕ್ಕೂ ಹೆಚ್ಚು ಮಂದಿ ಸಜೀವ ದಹನ

    ಬೆಂಗಳೂರಿಗೆ ಬರುತ್ತಿದ್ದ ಬಸ್‌ನಲ್ಲಿ ಇಬ್ಬರು ಮಕ್ಕಳು ಸೇರಿ ಒಟ್ಟು 41 ಮಂದಿ ಪ್ರಯಾಣಿಕರಿದ್ದರು. 20 ಪ್ರಯಾಣಿಕರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈವರೆಗೆ 11 ಮೃತದೇಹಗಳನ್ನ ಹೊರ ತೆಗೆಯಲಾಗಿದ್ದು, ಮೃತದೇಹ ಪತ್ತೆಹಚ್ಚುವ ಕಾರ್ಯವೂ ನಡೆದಿದೆ. ವಿಧಿವಿಜ್ಞಾನ ತಜ್ಞರು ಮೃತ ದೇಹಗಳ ಮಾದರಿಗಳನ್ನು ಸಂಗ್ರಹಿಸಿ ಡಿಎನ್‌ಎ ಪರೀಕ್ಷೆಗಳನ್ನು ನಡೆಸಿದ ನಂತರ ಪೊಲೀಸರು ಮೃತರ ವಿವರಗಳನ್ನು ಮಾಧ್ಯಮಗಳಿಗೆ ಬಹಿರಂಗಪಡಿಸುವ ಸಾಧ್ಯತೆಯಿದೆ. ಘಟನಾ ಸ್ಥಳದಿಂದ ಡ್ರೈವರ್‌ ಎಸ್ಕೇಪ್‌ ಆಗಿದ್ದು, ನಿರ್ವಾಹಕನನ್ನ ವಶಕ್ಕೆ ಪಡೆಯಲಾಗಿದೆ.

    ಬಸ್‌ನಲ್ಲಿದ್ದವರ ಪಟ್ಟಿ:
    ಅಶ್ವಿನ್ ರೆಡ್ಡಿ (36), ಜಿ.ಧಾತ್ರಿ (27), ಕೀರ್ತಿ (30), ಪಂಕಜ್ (28), ಯುವನ್ ಶಂಕರ್ ರಾಜು (22), ತರುಣ್ (27), ಆಕಾಶ್ (31), ಗಿರಿರಾವ್ (48), ಬುನ್ಸಾಯ್ (33), ಗಣೇಶ್ (30), ಜಯಂತ್ ಪುಷ್ವಾಹ (27), ಪಿಲ್ವಾಮಿನ್ ಬೇಬಿ (30), ರಮೇಶ್ ಕುಮಾರ್ (30) ಮತ್ತು ಅವರ ಕುಟುಂಬದವರು (64), ಕೆ. ಅನುಷಾ (22), ಮೊಹಮ್ಮದ್ ಕೈಸರ್ (51), ದೀಪಕ್ ಕುಮಾರ್ (24), ಆಂದೋಜ್ ನವೀನ್ ಕುಮಾರ್ (26), ಪ್ರಶಾಂತ್ (32), ಎಂ. ಸತ್ಯನಾರಾಯಣ (28), ಮೇಘನಾಥ್ (25), ವೇಣು ಗುಂಡ (33), ಚರಿತ್ (21), ಚಂದನ ಮಂಗ (23), ಸಂಧ್ಯಾರಾಣಿ ಮಂಗಾ (43), ಗ್ಲೋರಿಯಾ (24), ಎಲ್ಲೆಸಾ ಎಸ್. ಶ್ರೀಹರ್ಷ (24), ಶಿವ (24), ಶ್ರೀನಿವಾಸ ರೆಡ್ಡಿ (40), ಸುಬ್ರಹ್ಮಣ್ಯಂ (26), ಕೆ. ಅಶೋಕ್ (27), ಎಂ.ಜಿ. ರಾಮ ರೆಡ್ಡಿ (50), ಉಮಾಪತಿ (32), ಅಮೃತ್ ಕುಮಾರ್ (18), ವೇಣುಗೋಪಾಲ್ ರೆಡ್ಡಿ (24).

    ತುರ್ತು ನಿರ್ಗಮನ ದ್ವಾರದ ಮುರಿದು ಎಸ್ಕೇಪ್ ಆದವರು
    ಜಯಸೂರ್ಯ, ರಾಮಿರೆಡ್ಡಿ, ಅಕಿರಾ, ವೇಣುಗೋಪಾಲ್ ರೆಡ್ಡಿ, ಹರಿಕಾ, ಸತ್ಯನಾರಾಯಣ, ಶ್ರೀಲಕ್ಷ್ಮಿ, ನವೀನ್ ಕುಮಾರ್, ಅಖಿಲ್, ಜಸ್ಮಿತಾ, ರಮೇಶ್ ಮತ್ತು ಸುಬ್ರಹ್ಮಣ್ಯಂ.

  • ಬೆಂಗಳೂರು | ಕೋ ಲಿವಿಂಗ್ ಪಿಜಿಯಲ್ಲಿ ಸೆಕ್ಸ್‌ಗೆ ಒಪ್ಪದ ಯುವತಿಗೆ ಚಾಕು ಇರಿದ ಟೆಕ್ಕಿ

    ಬೆಂಗಳೂರು | ಕೋ ಲಿವಿಂಗ್ ಪಿಜಿಯಲ್ಲಿ ಸೆಕ್ಸ್‌ಗೆ ಒಪ್ಪದ ಯುವತಿಗೆ ಚಾಕು ಇರಿದ ಟೆಕ್ಕಿ

    – ಮದುವೆಯಾಗಿ ಮಗು ಇದ್ರೂ ಪಿಜಿಯಲ್ಲಿದ್ದ ಪಾತಕಿ

    ಬೆಂಗಳೂರು: ಲೈಂಗಿಕ ಕ್ರಿಯೆಗೆ ಒಪ್ಪದ ಯುವತಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದ ಘಟನೆ ವೈಟ್ ಫೀಲ್ಡ್‌ನಲ್ಲಿರುವ (Whitefield) ಕೋ ಲಿವಿಂಗ್ ಪಿಜಿಯಲ್ಲಿ (Co-living PG) ನಡೆದಿದೆ.

    ಚಾಕು ಇರಿದ ಆರೋಪಿಯನ್ನು ಬಾಬು ಎಂದು ಗುರುತಿಸಲಾಗಿದೆ. ಈತ ಸಾಫ್ಟ್‌ವೇರ್ ಇಂಜಿನಿಯರ್‌ (Techie) ಆಗಿದ್ದು, ಮುದುವೆಯಾಗಿ ಮಗುವಿದೆ. ಆದರೂ ಒಬ್ಬನೇ ಪಿಜಿಯಲ್ಲಿ ವಾಸವಿದ್ದ. ಎರಡು ತಿಂಗಳ ಹಿಂದೆ ಅದೇ ಪಿಜಿಗೆ ಬಂದು ವಾಸವಿದ್ದ ಯುವತಿಯನ್ನು ಆರೋಪಿ ಪರಿಚಯ ಮಾಡಿಕೊಂಡಿದ್ದ. ಆಕೆಯ ಮೊಬೈಲ್‌ ನಂಬರ್ ಪಡೆದು ಫೋನ್‌ ಮಾಡಿ ಮಾತನಾಡುತ್ತಿದ್ದನಂತೆ. ಕಳೆದ ಮೂರು ದಿನದ ಹಿಂದೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾನೆ. ಇದಕ್ಕೆ ಯುವತಿ ಒಪ್ಪದಿದ್ದಾಗ, ಆಕೆಯ ಖಾಸಗಿ ಫೋಟೊ ಇಟ್ಟುಕೊಂಡು 70 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಅಮೆರಿಕ ಪೊಲೀಸರ ಗುಂಡೇಟಿಗೆ ಭಾರತೀಯ ಟೆಕ್ಕಿ ಬಲಿ

    ಹಣಕ್ಕೆ ಬೇಡಿಕೆ ಇಟ್ಟಾಗ ಸ್ನೇಹಿತರ ಬಳಿ ಸಾಲ ಮಾಡಿ ಕೊಡುವುದಾಗಿ ಯುವತಿ ತಿಳಿಸಿದ್ದಳು. ಬಳಿಕ ಆಕೆಯ ಮೊಬೈಲ್ ಪಡೆದು 14 ಸಾವಿರ ರೂ. ಹಣ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ. ಬಳಿಕ ಗಲಾಟೆ ಮಾಡಿ ಯುವತಿಯ ಬೆನ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ.

    ಗಾಯಾಳು ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸೋಶಿಯಲ್ ಮೀಡಿಯಾದಲ್ಲಿ ಸಿಎಂ ನಿಂದಿಸಿದ್ದ ನಿವೃತ್ತ ಯೋಧನ ಬಂಧನ

  • ಬೆಂಗಳೂರು | 2 ವರ್ಷದ ಹಿಂದೆ ಮದುವೆಯಾಗಿದ್ದ ಟೆಕ್ಕಿ ಆತ್ಮಹತ್ಯೆ – ಪತಿ ಅರೆಸ್ಟ್

    ಬೆಂಗಳೂರು | 2 ವರ್ಷದ ಹಿಂದೆ ಮದುವೆಯಾಗಿದ್ದ ಟೆಕ್ಕಿ ಆತ್ಮಹತ್ಯೆ – ಪತಿ ಅರೆಸ್ಟ್

    ಬೆಂಗಳೂರು: ಮಹಿಳಾ ಟೆಕ್ಕಿಯೊಬ್ಬರು (Techie) ಆತ್ಮಹತ್ಯೆಗೆ ಶರಣಾದ ಘಟನೆ ನಗರದ (Bengaluru) ಎಸ್‍ಜಿ.ಪಾಳ್ಯದಲ್ಲಿ ನಡೆದಿದೆ.

    ಆತ್ಮಹತ್ಯೆಗೆ ಶರಣಾದ ಟೆಕ್ಕಿಯನ್ನು ಶಿಲ್ಪಾ ಎಂದು ಗುರುತಿಸಲಾಗಿದೆ. ಶಿಲ್ಪಾ, ಪ್ರವೀಣ್ ಎಂಬಾತನನ್ನು 2 ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಪ್ರವೀಣ್ ವಿರುದ್ಧ ಮಹಿಳೆಯ ಕುಟುಂಬಸ್ಥರು, ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸುತ್ತಿದ್ದಾನೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕಾರು ಸಮೇತ ಲಕ್ಷ ಲಕ್ಷ ಹಣ ಕದ್ದು ಪರಾರಿ – ಸಿನಿಮೀಯ ಶೈಲಿಯಲ್ಲಿ ಆರೋಪಿ ಅರೆಸ್ಟ್

    ಘಟನಾ ಸ್ಥಳಕ್ಕೆ ಎಸ್‍ಜಿ ಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪ್ರವೀಣ್‍ನನ್ನು ಬಂಧಿಸಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪ್ರವಾಸಿಗರಿಗೆ ಹುಡುಗಿಯರು ಮತ್ತು ಮಹಿಳೆಯರು ಲಭ್ಯವಿದ್ದಾರೆ – ಸಾಮಾಜಿಕ ಜಾಲತಾಣದಲ್ಲಿ ಕೊಡಗಿನ ಬಗ್ಗೆ ಅಪಪ್ರಚಾರ

  • ಟೆಕ್ಕಿ ಮನೆಯಲ್ಲಿ ಕಳ್ಳತನ – 1 ಕೆಜಿ ಚಿನ್ನ, 4 ಲಕ್ಷ ಹಣ ಕದ್ದು ಪರಾರಿ

    ಟೆಕ್ಕಿ ಮನೆಯಲ್ಲಿ ಕಳ್ಳತನ – 1 ಕೆಜಿ ಚಿನ್ನ, 4 ಲಕ್ಷ ಹಣ ಕದ್ದು ಪರಾರಿ

    ಬೆಂಗಳೂರು: ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿಕೊಂಡು 1 ಕೆಜಿ ಚಿನ್ನ, 4 ಲಕ್ಷ ರೂ. ನಗದು ಕಳ್ಳತನ (Theft) ಮಾಡಿರುವ ಘಟನೆ ಜ್ಞಾನಭಾರತಿಯ (Jnana Bharathi) ಮಲ್ಲತ್ತಹಳ್ಳಿಯಲ್ಲಿ (Mallattahalli) ನಡೆದಿದೆ.ಇದನ್ನೂ ಓದಿ: `ಡಿ ಬಾಸ್‌’ ಮೇಲೆ ಗೌರವ ಇರೋರು ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ: ಸೆಲೆಬ್ರಿಟಿಗಳಿಗೆ ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ

    ಟೆಕ್ಕಿ ನಟೇಶ್ ಅವರ ಮನೆಯಲ್ಲಿ ಕಳ್ಳತನವಾಗಿದೆ. ಕಳೆದ ಶುಕ್ರವಾರ ನಟೇಶ್ ಅವರು ಮೈಸೂರಿಗೆ ತೆರಳಿದ್ದರು. ಬಳಿಕ ಶನಿವಾರ ವಾಪಸ್ ಬಂದು ನೋಡಿದಾಗ ಮನೆಯಲ್ಲಿದ್ದ 1 ಕೆ.ಜಿ ಚಿನ್ನ ಹಾಗೂ 4 ಲಕ್ಷ ರೂ. ನಗದು ಸೇರಿ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿರುವುದು ಕಂಡುಬಂದಿದೆ.

    ಸದ್ಯ ಈ ಸಂಬಂಧ ನಟೇಶ್ ಅವರು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮನೆಯ ಅಕ್ಕಪಕ್ಕದ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.ಇದನ್ನೂ ಓದಿ: `I Stand With Ramya’ – ಸ್ಯಾಂಡಲ್‌ವುಡ್ ಕ್ವೀನ್ ಬೆಂಬಲಕ್ಕೆ ನಿಂತ ಒಳ್ಳೆ ಹುಡ್ಗ ಪ್ರಥಮ್

  • ಮನೆ ಕೆಲಸದವಳ ಜೊತೆ ಅಕ್ರಮ ಸಂಬಂಧ – ಟೆಕ್ಕಿ ಪತಿಯನ್ನೇ ಹತ್ಯೆಗೈದ ಪತ್ನಿ!

    ಮನೆ ಕೆಲಸದವಳ ಜೊತೆ ಅಕ್ರಮ ಸಂಬಂಧ – ಟೆಕ್ಕಿ ಪತಿಯನ್ನೇ ಹತ್ಯೆಗೈದ ಪತ್ನಿ!

    ಬೆಂಗಳೂರು: ಮನೆ ಕೆಲಸದವಳ ಜೊತೆ ಅಕ್ರಮ ಸಂಬಂಧ ಹೊಂದಿದ್ದಕ್ಕೆ ಪತ್ನಿಯೇ (Wife) ಪತಿಯನ್ನು ಕೊಲೆ ಮಾಡಿದ ಘಟನೆ ಸುದ್ದಗುಂಟೆ ಪಾಳ್ಯದಲ್ಲಿ ನಡೆದಿದೆ.

    ಭಾಸ್ಕರ್(41) ಕೊಲೆಯಾದ ವ್ಯಕ್ತಿ. ಭಾಸ್ಕರ್‌ ಸಾಫ್ಟ್‌ವೇರ್‌ ಕಂಪನಿಯೊಂದರಲ್ಲಿ (Software Company) ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಶ್ರುತಿ  ಪತಿಯನ್ನು ಕೊಲೆ ಮಾಡಿದ್ದು ಪೊಲೀಸರು ಈಗ ಬಂಧಿಸಿದ್ದಾರೆ.

    ಮನೆಗೆಲಸದವಳ ಜೊತೆ ಭಾಸ್ಕರ್ ಹೆಚ್ಚು ಸಲುಗೆಯಿಂದ ಇದ್ದರು. ಈ ಕಾರಣಕ್ಕೆ ಸಾಕಷ್ಟು ಬಾರಿ ಗಂಡ- ಹೆಂಡತಿ ನಡುವೆ ಕಲಹ ಉಂಟಾಗಿತ್ತು. ಎರಡು ದಿನದ ಹಿಂದೆ ರಾತ್ರಿ ಇದೇ ಕಾರಣಕ್ಕೆ ಗಲಾಟೆ ಶುರುವಾಗಿತ್ತು. ಗಲಾಟೆ ವೇಳೆ ಗಂಡನ ಮುಖಕ್ಕೆ ಬಲವಾಗಿ ಶ್ರುತಿ ಹೊಡೆದಿದ್ದಳು. ಇದರಿಂದ ಸ್ಥಳದಲ್ಲಿಯೇ ಭಾಸ್ಕರ್‌ ಮೃತಪಟ್ಟಿದ್ದರು.  ಇದನ್ನೂ ಓದಿ: ಉಡುಪಿ | `ರಕ್ತಕ್ಕೆ ರಕ್ತವೇ ಬೇಕು’ ಅಂತ ಸ್ಟೇಟಸ್ ಹಾಕಿದ್ದ ಯುವಕ ಅರೆಸ್ಟ್

     

    ಗಂಡನ ಕೊಂದು ಪೊಲೀಸರ ಮುಂದೆ ಶ್ರುತಿ ಕಥೆ ಕಟ್ಟಿದ್ದಳು. ಗಂಡ ಕುಡಿದು ಬಂದು ಬಾತ್ ರೂಮಿನಲ್ಲಿ ಬಿದ್ದು ಗಾಯಗೊಂಡಿದ್ದರು. ನಾನು ಅವರಿಗೆ ಸ್ನಾನ ಮಾಡಿಸಿ ಮಲಗಿಸಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ಹೇಳಿದ್ದಳು.

    ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದ ಎಸ್‌ಜಿ ಪಾಳ್ಯ ಪೊಲೀಸರು ತನಿಖೆ ಆರಂಭಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ (Post ortem Report) ಮುಖಕ್ಕೆ ಮತ್ತು ದೇಹಕ್ಕೆ ಯಾವುದೋ ವಸ್ತುವಿನಿಂದ ಹೊಡೆದಿರುವ ವಿಚಾರ ಬೆಳಕಿಗೆ ಬಂದಿತ್ತು. ಅನುಮಾನ ಬಂದ ಹಿನ್ನೆಲೆಯಲ್ಲಿ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಶ್ರುತಿ ಕೊಲೆ ನಡೆಸಿದ್ದನ್ನು ಒಪ್ಪಿಕೊಂಡಿದ್ದಾಳೆ. ಇದನ್ನೂ ಓದಿ: ರಸ್ತೆಬದಿ ನಡೆದುಕೊಂಡು ಹೋಗ್ತಿದ್ದ 10ರ ಬಾಲಕನ ಮೇಲೆ ಹರಿದ ಕಾರು – ಸ್ಥಳದಲ್ಲೇ ಸಾವು

    ಮೊದಲನೇ ಪತ್ನಿಗೆ ಡಿವೋರ್ಸ್‌ ಕೊಟ್ಟಿದ್ದ ಭಾಸ್ಕರ್‌ ಶ್ರುತಿಯನ್ನು ಮದುವೆಯಾಗಿದ್ದರು. ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಮನೆ ಕೆಲಸದವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು ಶ್ರುತಿ ಕೋಪಕ್ಕೆ ಕಾರಣವಾಗಿತ್ತು. ಸಂಬಳ ಅಲ್ಲದೇ ಮನೆ ಬಾಡಿಗೆಯಿಂದಲೇ ತಿಂಗಳಿಗೆ 1.15 ಲಕ್ಷ ರೂ. ಆದಾಯ ಬರುತ್ತಿತ್ತು. ಬಂದ ಹಣವನ್ನು ಭಾಸ್ಕರ್‌ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ನೀಡುತ್ತಿದ್ದರು. ಕಳೆದ ಒಂದು ತಿಂಗಳಿನಿಂದ ಭಾಸ್ಕರ್‌ ನಿವಾಸಕ್ಕೆ ಬಾರದೇ ಸ್ನೇಹಿತೆಯ ಮನೆಯಲ್ಲೇ ಇರುತ್ತಿದ್ದರು. ಎರಡು ದಿನದ ಹಿಂದೆ ಮನೆಗೆ ಬಂದಾಗ ಪತ್ನಿ ಶ್ರುತಿ  ಈ ವಿಚಾರವನ್ನು ಪ್ರಸ್ತಾಪಿಸಿದ್ದಕ್ಕೆ ಇಬ್ಬರ ಮಧ್ಯೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಗೆ ತಿರುಗಿ ಶ್ರುತಿ  ಪತಿಯನ್ನೇ ಹತ್ಯೆ ಮಾಡಿದ್ದಾಳೆ.

  • ಕೊರಿಯರ್‌ ಕೊಡುವ ನೆಪದಲ್ಲಿ ಬಂದು ಟೆಕ್ಕಿ ಮೇಲೆ ಅತ್ಯಾಚಾರ – ಮುಖಕ್ಕೆ ಸ್ಪ್ರೇ ಮಾಡಿ ಪ್ರಜ್ಞೆ ತಪ್ಪಿಸಿ ಕುಕೃತ್ಯ

    ಕೊರಿಯರ್‌ ಕೊಡುವ ನೆಪದಲ್ಲಿ ಬಂದು ಟೆಕ್ಕಿ ಮೇಲೆ ಅತ್ಯಾಚಾರ – ಮುಖಕ್ಕೆ ಸ್ಪ್ರೇ ಮಾಡಿ ಪ್ರಜ್ಞೆ ತಪ್ಪಿಸಿ ಕುಕೃತ್ಯ

    ಮುಂಬೈ: ಕೊರಿಯರ್‌ ಕೊಡುವ ನೆಪದಲ್ಲಿ ಬಂದು ಮಹಿಳಾ ಟೆಕ್ಕಿಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಪುಣೆಯ (Pune) ಕೊಂಢವಾದಲ್ಲಿ ನಡೆದಿದೆ.

    ಕೊಂಢವಾ ವಸತಿ ಸೊಸೈಟಿಯ ಮನೆಯಲ್ಲಿ ಒಂಟಿಯಾಗಿದ್ದ 22 ವರ್ಷದ ಟೆಕ್ಕಿ ಮೇಲೆ ಕೊರಿಯರ್‌ ಕೊಡುವ ನೆಪದಲ್ಲಿ ಬಂದಾತ ಅತ್ಯಾಚಾರ ಎಸಗಿದ್ದಾನೆಂದು ಆರೋಪಿಸಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಬೈಕ್‌ಗೆ ಟ್ರ್ಯಾಕ್ಟರ್‌  ಡಿಕ್ಕಿ – ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಸಾವು

    ಘಟನೆ ರಾತ್ರಿ 7:30 ರ ಸುಮಾರಿಗೆ ನಡೆದಿದೆ. ಟೆಕ್ಕಿ ತನ್ನ ಬಾಡಿಗೆ ಫ್ಲಾಟ್‌ನಲ್ಲಿ ಒಬ್ಬಂಟಿಯಾಗಿದ್ದಳು. ಆಕೆಯ ಸಹೋದರ ಹೊರಗೆ ಹೋಗಿದ್ದ. ಆರೋಪಿಯು ಕೊರಿಯರ್‌ ನೆಪದಲ್ಲಿ ಆಕೆಯ ಅಪಾರ್ಟ್‌ಮೆಂಟ್‌ಗೆ ಬಂದಿದ್ದ. ನಾನು ಏನನ್ನೂ ಬುಕ್‌ ಮಾಡಿಲ್ಲ ಎಂದು ಆಕೆ ಸ್ಪಷ್ಟಪಡಿಸಿದ್ದಾರೆ. ಆದರೂ, ನಿಮ್ಮ ಸಹಿ ಬೇಕಿದೆ ಎಂದು ಆತ ಕೇಳಿದ್ದಾನೆ.

    ಸಹಿ ಹಾಕಲು ಆಕೆ ಬಾಗಿಲು ತೆರೆದಾಗ, ಆರೋಪಿಯು ಅವಳ ಮೇಲೆ ಪೆಪ್ಪರ್ ಸ್ಪ್ರೇ ಮಾಡಿ ಪ್ರಜ್ಞೆ ತಪ್ಪಿಸಿದ್ದಾನೆ. ನಂತರ ಫ್ಲಾಟ್‌ಗೆ ನುಗ್ಗಿ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಸಂತ್ರಸ್ತೆ ಐಟಿ ವಲಯದಲ್ಲಿ ಕೆಲಸ ಮಾಡುತ್ತಿದ್ದಳು. ಕುಕೃತ್ಯದ ಬಳಿಕ ಆರೋಪಿಯು, ‘ಈ ಬಗ್ಗೆ ಯಾರಿಗೂ ಹೇಳಬೇಡ. ಮತ್ತೆ ಬರುವೆ’ ಮೊಬೈಲ್‌ನಲ್ಲಿ ಸಂದೇಶ ಬಿಟ್ಟು ಹೋಗಿದ್ದಾನೆ. ಅಲ್ಲದೇ, ಸಂತ್ರಸ್ತೆಯೊಂದಿಗೆ ಸೆಲ್ಫಿ ಕೂಡ ಕ್ಲಿಕ್ಕಿಸಿಕೊಂಡಿದ್ದಾನೆ. ಇದನ್ನೂ ಓದಿ: ಎಂಎಲ್‌ಸಿ ರವಿಕುಮಾರ್ ಮೇಲೆ ನಿಯಮಾವಳಿಗಳ ಪ್ರಕಾರ ಕ್ರಮ – ಹೊರಟ್ಟಿ

    ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಸರಾಂತ ಸಂಸ್ಥೆಯಲ್ಲಿ ಐಟಿ ವೃತ್ತಿಪರರಾಗಿರುವ ಆ ಮಹಿಳೆ ಮೂಲತಃ ಅಕೋಲಾದವರು. ಅವರು ನಗರದ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತ್ತಿರುವ ತಮ್ಮ ಕಿರಿಯ ಸಹೋದರನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಪೂರ್ವ ಪ್ರದೇಶ) ಮನೋಜ್ ಪಾಟೀಲ್ ತಿಳಿಸಿದ್ದಾರೆ.

  • ಶೌಚಾಲಯದಲ್ಲಿ ಮಹಿಳಾ ಸಹೋದ್ಯೋಗಿ ವೀಡಿಯೋ ರೆಕಾರ್ಡ್ – ಟೆಕ್ಕಿ ಅರೆಸ್ಟ್

    ಶೌಚಾಲಯದಲ್ಲಿ ಮಹಿಳಾ ಸಹೋದ್ಯೋಗಿ ವೀಡಿಯೋ ರೆಕಾರ್ಡ್ – ಟೆಕ್ಕಿ ಅರೆಸ್ಟ್

    ಬೆಂಗಳೂರು: ರಹಸ್ಯವಾಗಿ ಶೌಚಾಲಯದಲ್ಲಿ ಮಹಿಳಾ ಉದ್ಯೋಗಿ ವೀಡಿಯೋ ರೆಕಾರ್ಡ್ ಮಾಡುತ್ತಿದ್ದ ಟೆಕ್ಕಿಯನ್ನು (Techie) ಎಲೆಕ್ಟ್ರಾನಿಕ್ ಸಿಟಿ ಪೊಲೀಸರು (Electronic City Police) ಬಂಧಿಸಿದ್ದಾರೆ.

    ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ಆಂಧ್ರಪ್ರದೇಶ (Andhra Pradesh) ಮೂಲದ ಸ್ವಪ್ನಿಲ್ ನಾಗೇಶ್ ಮಲಿ (28) ಬಂಧಿತ ಟೆಕ್ಕಿ. ಇದನ್ನೂ ಓದಿ: I Stand By My Words, ಡಿಕೆಶಿಗೂ ಅವಕಾಶ ಸಿಗಲಿ – ಇಕ್ಬಾಲ್ ಹುಸೇನ್

    ಆರೋಪಿಯು ಕಂಪನಿಯ ಪಕ್ಕದ ಶೌಚಾಲಯದ ಕಮೋಡ್ ಮೇಲೆ ನಿಂತು ರಹಸ್ಯವಾಗಿ ಮೊಬೈಲ್‌ನಲ್ಲಿ ಮಹಿಳೆಯ ವೀಡಿಯೋ ಮಾಡುತ್ತಿದ್ದು, ಅದರ ಪ್ರತಿಬಿಂಬ ಎದುರುಗಡೆಯ ಬಾಗಿಲು ಮೇಲೆ ಕಾಣಿಸಿತ್ತು. ಇದನ್ನು ಕಂಡ ಮಹಿಳೆ ಕೂಡಲೇ ಹೊರಬಂದು ನೋಡಿದಾಗ ಇನ್ನೋರ್ವ ಮಹಿಳಾ ಸಿಬ್ಬಂದಿ ಮಾತ್ರ ಕಾಣಿಸಿದ್ದರು. ಇದನ್ನೂ ಓದಿ: ಕೈ ಕೊಟ್ಟ ಪ್ರೀತಿಸಿದ ಹುಡುಗಿ – ಮನನೊಂದು ಯುವಕ ನೇಣಿಗೆ ಶರಣು

    ಬಳಿಕ ಶೌಚಾಲಯದ ಒಳ ಹೋಗಿ ಪರಿಶೀಲಿಸಿದಾಗ ಆರೋಪಿಯು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ. ಈ ವೇಳೆ ಮಹಿಳೆಯು ಕಿರುಚಾಡಿದಾಗ ಆರೋಪಿಯು ಕ್ಷಮೆಯಾಚಿಸಿದ್ದ. ಬಳಿಕ ಕಂಪನಿಯ ಹೆಚ್.ಆರ್ ಸಿಬ್ಬಂದಿ ಆರೋಪಿಯ ಮೊಬೈಲ್ ಪರಿಶೀಲನೆ ಮಾಡಿದಾಗ ಸುಮಾರು 30ಕ್ಕೂ ಅಧಿಕ ಮಹಿಳೆಯರ ವಿಡಿಯೋ ಪತ್ತೆಯಾಗಿತ್ತು. ಇದನ್ನೂ ಓದಿ: 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ರೈಲ್ವೆ ಟ್ರ‍್ಯಾಕ್‌ನಲ್ಲಿ ಶವವಾಗಿ ಪತ್ತೆ

    ಇಷ್ಟಾದರೂ ಕಂಪನಿಯ ಆಡಳಿತ ಮಂಡಳಿಯು ಆರೋಪಿಯಿಂದ ಕ್ಷಮೆ ಕೇಳಿಸಿ ಸುಮ್ಮನಾಗಿತ್ತು. ಈ ವಿಚಾರ ತಿಳಿದ ಮಹಿಳಾ ಉದ್ಯೋಗಿಯ ಪತಿ, ಕಂಪನಿ ವಿರುದ್ಧ ಆಕ್ರೋಶ ಹೊರಹಾಕಿ, ಗಲಾಟೆ ಮಾಡಿದ್ದರು. ಅಲ್ಲದೇ ಮಂಗಳವಾರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಪೊಲೀಸರು ದೂರನ್ನಾಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ.

  • ಲವ್ ಫೇಲ್ ಆದ ಕೋಪಕ್ಕೆ ಉಡುಪಿ ಸೇರಿ 21 ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಟೆಕ್ಕಿ ಅರೆಸ್ಟ್

    ಲವ್ ಫೇಲ್ ಆದ ಕೋಪಕ್ಕೆ ಉಡುಪಿ ಸೇರಿ 21 ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಟೆಕ್ಕಿ ಅರೆಸ್ಟ್

    ಚೆನ್ನೈ/ಉಡುಪಿ: ಉಡುಪಿ (Udupi) ಶಾಲೆ ಸೇರಿದಂತೆ 21 ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಟೆಕ್ಕಿ ಯುವತಿಯೊಬ್ಬಳನ್ನು ಚೆನ್ನೈನಲ್ಲಿ (Chennai Techie) ಪೊಲೀಸರು ಬಂಧಿಸಿದ್ದಾರೆ.

    ಚೆನ್ನೈ ಮೂಲದ ರಿನಾ ಜೊಶಿಲ್ಡಾ ಬಂಧಿತ ಆರೋಪಿ. ಈಕೆ ತಾನು ಪ್ರೀತಿಸುತ್ತಿದ್ದ ವ್ಯಕ್ತಿ ತನ್ನನ್ನು ಒಪ್ಪಿಕೊಳ್ಳದ ಕಾರಣಕ್ಕೆ ಸೇಡು ತೀರಿಸಿಕೊಳ್ಳಲು ಈ ರೀತಿಯ ಕೃತ್ಯ ಎಸಗಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ.‌ ಇದನ್ನೂ ಓದಿ: ಇನ್ನೊಬ್ಬಳೊಂದಿಗೆ ಮದುವೆ ಫಿಕ್ಸ್ ಆಗಿದ್ದಕ್ಕೆ ಜಗಳ – ಬುರ್ಖಾ ಧರಿಸಿ ಬಂದು 5ನೇ ಮಹಡಿಯಿಂದ ತಳ್ಳಿ ಪ್ರೇಯಸಿಯ ಕೊಲೆ

    ಇಂಜಿನಿಯರಿಂಗ್ ಮಾಡಿದ್ದ ಯುವತಿ ರಿನಾ, ಉಡುಪಿಯ ವಿದ್ಯೋದಯ ಪಬ್ಲಿಕ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ್ದಳು. ತನಿಖೆ ವೇಳೆ ಆಕೆ ಹೆಸರು ಪತ್ತೆಯಾಗಿ ರಿನಾಳನ್ನು ಚೆನ್ನೈನಲ್ಲಿ ಅರೆಸ್ಟ್ ಮಾಡಲಾಗಿದೆ. ಬಾಂಬ್ ಬೆದರಿಕೆ ಹಿನ್ನೆಲೆ ಉಡುಪಿ ಪೊಲೀಸರು ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಕಸ್ಟಡಿ ಪಡೆಯುವ ಸಾಧ್ಯತೆ ಇದೆ.

    ಜೂ.16ರಂದು ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿತ್ತು. ಇಮೇಲ್‌ನಲ್ಲಿ, ‘ನಿಮ್ಮ ಶಾಲೆಯಲ್ಲಿ ಬಾಂಬ್ ಸ್ಫೋಟಿಸಿದರೆ ಮಕ್ಕಳು ಸಾಯುತ್ತಾರೆ. ಮಕ್ಕಳು ಸತ್ತರೆ ಮಾತ್ರ ಪೋಷಕರು ಪ್ರತಿಭಟನೆ ಮಾಡುತ್ತಾರೆ. ಪೊಲೀಸರು ಸರಿಯಾದ ತನಿಖೆ ನಡೆಸಿ ಹೈದರಾಬಾದಿನ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಒದಗಿಸುತ್ತಾರೆ ಎಂದು ಇಮೇಲ್ ಕಳುಹಿಸಿದ್ದಾಳೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತುರ್ತು ಪರಿಸ್ಥಿತಿ ಕಾಂಗ್ರೆಸ್‌ನ ಪ್ರಜಾಪ್ರಭುತ್ವ ವಿರೋಧಿ ಮನಸ್ಥಿತಿಯ ಪ್ರತಿಬಿಂಬವಾಗಿತ್ತು: ಅಮಿತ್ ಶಾ

    ಗುಜರಾತ್, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇದೇ ರೀತಿಯ ಇಮೇಲ್ ಸಂದೇಶವನ್ನು ಆರೋಪಿ ರಿನಾ ಕಳುಹಿಸಿದ್ದಾಳೆ. ಶಾಲೆಗಳು, ಆಸ್ಪತ್ರೆಗಳು ಮತ್ತು ಕ್ರೀಡಾಂಗಣಗಳಿಗೆ ಬಾಂಬ್ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಆಕೆಯ ಬಂಧನವಾಗಿದೆ.

    ಚೆನ್ನೈನಲ್ಲಿ ಇಂಜಿನಿಯರ್ ಆಗಿರುವ ಆರೋಪಿ ರೀನಾಳನ್ನು, ಉಡುಪಿಯ ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ಕಸ್ಟಡಿಗೆ ಮನವಿ ಉಡುಪಿ ಪೊಲೀಸರು ಮನವಿ ಮಾಡಿದ್ದಾರೆ. ಆರೋಪಿಯನ್ನು ಹೆಚ್ಚಿನ ತನಿಖೆಗಾಗಿ ನಮ್ಮ ಕಸ್ಟಡಿಗೆ ನೀಡಿ ಎಂದು ಪೊಲೀಸ್ ವರಿಷ್ಠಾಧಿಕಾರಿ ಪತ್ರ ಬರೆದಿದ್ದಾರೆ.

    ಲವ್ ಫೇಲ್ ಕೋಪಕ್ಕೆ ಕೃತ್ಯ!?
    ರಿನಾ ಒಬ್ಬ ಹುಡುಗನನ್ನು ಪ್ರೀತಿಸುತ್ತಿದ್ದಳು. ಆದರೆ, ರಿನಾಳನ್ನು ಪ್ರಿಯಕರ ಒಪ್ಪದೇ ಬೇರೆ ಹುಡುಗಿ ಕೈಹಿಡಿದಿದ್ದಾನೆ. ಇದರಿಂದ ಕುಪಿತಳಾದ ರೆನಾ ತನ್ನ ತಾಂತ್ರಿಕ ಪರಿಣತಿಯಿಂದ ನಕಲಿ ಇಮೇಲ್ ಖಾತೆಗಳನ್ನು ತೆರೆದು, ತನ್ನನ್ನು ನಿರ್ಲಕ್ಷಿಸಿದ ಪ್ರಿಯಕರನ ಹೆಸರಲ್ಲಿ ದೇಶದ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ರವಾನಿಸಿದ್ದಳು.