Tag: technology

  • ಚೀನಾದಲ್ಲಿ ಬಂತು 10ಜಿ – ಜಸ್ಟ್ 1 ನಿಮಿಷದಲ್ಲಿ 2 ಗಂಟೆ ಫಿಲ್ಮ್ ಡೌನ್‌ಲೋಡ್

    ಚೀನಾದಲ್ಲಿ ಬಂತು 10ಜಿ – ಜಸ್ಟ್ 1 ನಿಮಿಷದಲ್ಲಿ 2 ಗಂಟೆ ಫಿಲ್ಮ್ ಡೌನ್‌ಲೋಡ್

    ಬೀಜಿಂಗ್: ಭಾರತದ ಸೇರಿ ಹಲವು ದೇಶಗಳು ಇದೀಗ 5ಜಿ ನೆಟ್‌ವರ್ಕ್ ಪರಿಚಯಿಸಿದರೆ, ಚೀನಾವು ಈಗ ವಿಶ್ವದ ಮೊದಲ 10ಜಿ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಅನ್ನು ಪರಿಚಯಿಸಿದೆ.

    ಚೀನಾ (China) ಹಾಗೂ ಹುವೈ ಯುನಿಕಾರ್ನ್ ಜೊತೆ ಜಂಟಿಯಾಗಿ 10ಜಿ 10ಜಿ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಅನ್ನು ಚೀನಾದ ಹೆಬೈ ಪ್ರಾಂತ್ಯದ ಸುನನ್ ಕೌಂಟಿಯಲ್ಲಿ ಕಾರ್ಯಗತಗೊಳಿಸಿದೆ. ಇದನ್ನೂ ಓದಿ: ನಿವೃತ್ತ ಡಿಜಿಪಿ ಬರ್ಬರ ಹತ್ಯೆ – ತಂಗಿಯರಿಗೆ ಆಸ್ತಿ ಕೊಟ್ಟಿದ್ದಕ್ಕೆ ನಡೀತಾ ಕೊಲೆ?

    ಭಾರತ (India) ಸೇರಿ ಇತರೆ ದೇಶಗಳು 100 ಎಂಬಿಪಿಎಸ್ ವೇಗದಲ್ಲಿರುವಾಗ, ಚೀನಾ ಕಂಪನಿಗಳು ಇದರಿಂದ 10 ಪಟ್ಟು ವೇಗವನ್ನು ಹೊಂದಿರುವ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಅನ್ನು ಜಾರಿಗೊಳಿಸಿದೆ. 2 ಗಂಟೆಗಳ ಫಿಲ್ಮ್‌ಗಳು ಕೇವಲ 1 ನಿಮಿಷದಲ್ಲಿ ಮಾಡಬಹುದು. ಇದನ್ನೂ ಓದಿ: ಕೋಟಿ ಕೋಟಿ ಮೌಲ್ಯದ ಆಸ್ತಿ ಹೊಂದಿದ್ದ ಮಂಗಳಮುಖಿಯ ಬರ್ಬರ ಹತ್ಯೆ – ಪತಿ, ಮನೆಗೆಲಸದಾಕೆ ಪರಾರಿ

    ಹೆಬೈ ಪ್ರಾಂತ್ಯದಲ್ಲಿ ಪರಿಚಯಿಸಲ್ಪಟ್ಟಿರುವ ವಿಶ್ವದ ಮೊದಲ 50ಜಿ ಪಿಒಎನ್ ಸೊಲ್ಯೂಷನ್ಸ್ ಅಡಿ ನಿರ್ಮಿಸಲ್ಪಟ್ಟ ಈ ಬ್ರಾಡ್ ಬ್ಯಾಂಡ್ ಮೂಲಸೌಲಭ್ಯ 9,834 ಎಂಬಿಪಿಎಸ್ ಡೌನ್‌ಲೋಡ್ ಸ್ಟೀಡ್ ಹೊಂದಿದೆ. ಇದು 1,008 ಎಂಬಿಪಿಎಸ್ ಸ್ಪೀಡ್‌ನಲ್ಲಿ ಅಪ್‌ಲೋಡ್ ಮಾಡುತ್ತದೆ. ಇದನ್ನೂ ಓದಿ: ನಿವೃತ್ತ IPS ಅಧಿಕಾರಿಗೆ 10 ಬಾರಿ ಚಾಕುವಿನಿಂದ ಇರಿದು ಕೊಂದ ಪತ್ನಿ; 15 ನಿಮಿಷ ನರಳಿ ಪ್ರಾಣಬಿಟ್ಟ ಓಂ ಪ್ರಕಾಶ್‌

    ಅಲ್ಲದೇ 900 ಜಿಬಿಯಷ್ಟು ಭಾರಿ ಫೈಲ್ ಗಳು ಕೆಲವೇ ಸೆಕೆಂಡಲ್ಲಿ ಡೌನ್‌ಲೋಡ್ ಆಗುತ್ತವೆ. ಫೈಬರ್ ಆಪ್ಟಿಕ್ ಆರ್ಕಿಟೆಕ್ಟರ್ ಅನ್ನು ಅಪ್ ಗ್ರೇಡ್ ಮಾಡಿದಾಗ ಸಿಂಗಲ್ ಯೂಸರ್ ಬ್ಯಾಂಡ್‌ವಿಡ್ಸ್ ಅನ್ನು ಸಾಂಪ್ರದಾಯಿಕ ಗಿಗಾಬೈಟ್‌ನಿಂದ 102 ಹಂತಕ್ಕೆ ಕೊಂಡೊಯ್ಯುತ್ತದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ರಾಜಸ್ಥಾನ | ಅಪ್ರಾಪ್ತನನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ – ಮಹಿಳೆಗೆ 20 ವರ್ಷ ಜೈಲು

    ಬ್ರಾಡ್‌ಬ್ಯಾಂಡ್ ವೇಗವರ್ಧನೆಯು ಭವಿಷ್ಯದಲ್ಲಿ 8ಕೆ ವೀಡಿಯೋ ಸ್ಟ್ರೀಮಿಂಗ್ ಆಪ್‌ಗಳು ಹಾಗೂ ಅಡ್ವಾನ್‌ಸ್ಟ್ ಕ್ಲೌಡ್ ಕಂಪ್ಯೂಟಿಂಗ್ ಹಾಗೂ ಅತ್ಯುನ್ನತ ವರ್ಚುವಲ್ ರಿಯಾಲಿಟಿ ಅನುಭವಕ್ಕೆ ಪೂರಕವಾಗಲಿದೆ ಎಂದು ವರದಿಯಾಗಿದೆ.

  • ಮುಂಬೈ To ದುಬೈ ಮಧ್ಯೆ ಸಮುದ್ರದೊಳಗೆ ರೈಲು! – ದೇಶದ ಭವಿಷ್ಯವನ್ನೇ ಬದಲಿಸಲಿದೆಯಾ ಈ ಪ್ಲ್ಯಾನ್‌?

    ಮುಂಬೈ To ದುಬೈ ಮಧ್ಯೆ ಸಮುದ್ರದೊಳಗೆ ರೈಲು! – ದೇಶದ ಭವಿಷ್ಯವನ್ನೇ ಬದಲಿಸಲಿದೆಯಾ ಈ ಪ್ಲ್ಯಾನ್‌?

    ಸಾಮಾನ್ಯವಾಗಿ ಬಸ್ಸು, ಕಾರುಗಳ ಪ್ರಯಾಣಕ್ಕಿಂತ ರೈಲಿನಲ್ಲಿ ದೀರ್ಘ ಪ್ರವಾಸ ಮಾಡುವ ಮಜಾನೇ ಬೇರೆ.. ಇದು ಕೇವಲ ಅಗ್ಗದ ಸಾರಿಗೆ ಮಾತ್ರವಲ್ಲ, ಆರಾಮದಾಯಕವಾಗಿ ನಿಗದಿತ ಸ್ಥಾನವನ್ನ ತಲುಪುತ್ತೆ. ಮಾರ್ಗದಲ್ಲಿ ಜಲಪಾತಗಳ ಸೌಂದರ್ಯ, ಆಳವಾದ ಕಂದಕ, ಹಚ್ಚ ಹಸಿರಿನ ಸೌಂದರ್ಯ ಸೇರಿದಂತೆ ಅನೇಕ ಅದ್ಭುತವಾದ ಪ್ರಾಕೃತಿಕ ಆಕರ್ಷಣೆಗಳು ಕಣ್ಣು ಕುಕ್ಕುವಂತಿರುತ್ತದೆ. ಜೊತೆಯಲ್ಲಿ ಸ್ನೇಹಿತರಿದ್ದರೆ ಹಿತವಾದ ಮಾತುಗಳನ್ನು ಕೇಳುತ್ತಾ ಊರು ಸೇರಿದ್ದೇ ತಿಳಿಯೋದಿಲ್ಲ. ಸಾಮಾನ್ಯ ರೈಲಿನಲ್ಲಿ ಇಷ್ಟೆಲ್ಲಾ ರೋಮಾಂಚಕ ಅನುಭವ ಸಿಗುತ್ತೆ ಅಂದ್ಮೇಲೆ ಇನ್ನೂ ಸಮುದ್ರದೊಳಗೆ ರೈಲಿನಲ್ಲಿ ಪ್ರಯಾಣಿಸಿದ್ರೆ ಅದರ ಅನುಭವ ಹೇಗಿರುತ್ತೆ ಅಲ್ಲವೇ? ಅಬ್ಬಬ್ಬ! ನೀರಿನಾಳದಲ್ಲಿ ಸಾವಿರಾರು ಜಲಚರಗಳನ್ನ ನೋಡುತ್ತಾ ಮಿಂಚಿನ ವೇಗದಲ್ಲಿ ಸಾಗುವ ಅನುಭವ ನೆನೆಸಿಕೊಂಡ್ರೇನೆ ಮೈ ರೋಮಾಂಚನವಾಗುತ್ತೆ.

    ಇಂತಹದ್ದೊಂದು ಯೋಜನೆಯನ್ನ ಭಾರತದ ಮನಿ ಕ್ಯಾಪಿಟಲ್‌ ಮುಂಬೈ ಹಾಗೂ ದುಬೈ ನಡುವೆ ಕಾರ್ಯರೂಪಕ್ಕೆ ತರುವ ಕೆಲಸ ನಡೆಯುತ್ತಿದೆ.

    ಹೌದು. ಮುಂಬೈನಿಂದ ದುಬೈಗೆ ಸುರಂಗ ಮಾರ್ಗದ ಮೂಲಕ ಸಮುದ್ರದೊಳಗೆ ರೈಲು ಮಾರ್ಗ ನಿರ್ಮಿಸಲು ಸಿದ್ಧತೆ ನಡೆಯುತ್ತಿದೆ. ಸ್ಟಾರ್ಟ್‌ಅಪ್‌, ವ್ಯಾಪಾರ ಯೋಜನೆಗಳಿಗೆ ಹೆಸರುವಾಸಿಯಾಗಿರುವ ಯುಎಇ ಮೂಲದ ನ್ಯಾಷನಲ್‌ ಅಡ್ವೈಸರ್‌ ಬ್ಯೂರೋ ಲಿಮಿಟೆಡ್‌ (ಎನ್‌ಎಬಿಎಲ್‌) ಈ ಯೋಜನೆಯನ್ನ ಪ್ರಸ್ತಾಪಿಸಿದೆ. ಇದು ಭಾರತ ಮತ್ತು ಯುಎಇಯನ್ನು ಅರೇಬಿಯನ್‌ ಸಮುದ್ರದ ಸಂಪರ್ಕಿಸುತ್ತದೆ. ಈಗಾಗಲೇ ಸಿವಿಲ್‌ ಇಂಜಿನಿಯರರು ಇದಕ್ಕೆ ಕೆಲಸ ಮಾಡುತ್ತಿದ್ದು, ಅಂದಾಜು ವೆಚ್ಚ, ಮತ್ತಿತರ ಯೋಜನೆಯ ಕಾರ್ಯಸಾಧ್ಯತೆಗಳನ್ನ ಚರ್ಚಿಸುತ್ತಿದ್ದಾರೆ. ಸದ್ಯಕ್ಕೆ 21 ಶತಕೋಟಿ ಡಾಲರ್‌ ಅಂದಾಜು ವೆಚ್ಚ ಆಗಲಿದೆ ಎಂದು ಅಂದಾಜಿಸಲಾಗಿದೆ.

    ಈ ಪರಿಕಲ್ಪನೆಯು ಮೊದಲಿಗೆ 2018ರಲ್ಲಿ ಬಂದಿತ್ತು. ಆದ್ರೆ ಇತ್ತೀಚಿನ ತಿಂಗಳುಗಳಲ್ಲಿ ಅದರ ಚರ್ಚೆ ಮತ್ತೆ ತೀವ್ರಗೊಂಡಿದೆ ಎಂಬುದು ಗಮನಾರ್ಹ. ದುಬೈನ ಕ್ರೌನ್ ಪ್ರಿನ್ಸ್ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೂಮ್ ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದಾಗಲೂ ಈ ಬಗ್ಗೆ ಚರ್ಚಿಸಿದ್ದಾರೆ. ಜೊತೆಗೆ ಭಾರತ, ಅಮೆರಿಕ, ಯುಎಇ ನಡುವಿನ ಸಂಬಂಧ, ಆರ್ಥಿಕತೆಯನ್ನು ಅಭಿವೃದ್ಧಿ ಪಡಿಸುವ ಭವಿಷ್ಯದ ಯೋಜನೆಗಳ ಕುರಿತಾಗಿಯೂ ಚರ್ಚಿಸಿದ್ದಾರೆ. ಅಲ್ಲದೇ ಈ ಯೋಜನೆ ಇನ್ನೂ ಪರಿಕಲ್ಪನಾ ಹಂತದಲ್ಲಿದ್ದು, ಅನುಮೋದನೆ ಪಡೆಯಲು ತಯಾರಿ ನಡೆಲಸಾಗುತ್ತಿದೆ ಎಂದು ಯುಎಇ ಪತ್ರಿಕೆ ʻಖಲೀಜ್ ಟೈಮ್ಸ್‌ʼ ವರದಿ ಮಾಡಿದೆ.

    ಏನಿದು ನಿರೋಳಗಿನ ರೈಲು ಯೋಜನೆ?
    ಅಂದ್ರೆ ನೀರಿನಾಳದಲ್ಲಿ ಸುರಂಗ ಮಾರ್ಗವೊಂದನ್ನು ನಿರ್ಮಿಸಿ ಆ ಮೂಲಕ ರೈಲು ಸಂಪರ್ಕ ಕಲ್ಪಿಸುವುದು. ಭಾರತ ಮತ್ತು ದುಬೈನ ಫುಜೈರಾಗೆ ಅತೀ ವೇಗದ ರೈಲು ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದೆ. ಯುಎಇಯ ನ್ಯಾಷನಲ್ ಅಡ್ವೈಸರ್ ಬ್ಯೂರೋ ಲಿಮಿಟೆಡ್ ಸಂಸ್ಥೆಯು 6 ವರ್ಷಗಳ ಹಿಂದೆ ಅಬುಧಾಬಿಯಲ್ಲಿ ನಡೆದ ಯುಎಇ-ಇಂಡಿಯಾ ಕಾನ್ಕ್ಲೇವ್‌ನಲ್ಲಿ ಈ ಯೋಜನೆಯ ಪರಿಕಲ್ಪನೆಯನ್ನು ಪ್ರಸ್ತಾಪಿಸಿತ್ತು. ಈ ಯೋಜನೆ ಆರ್ಥಿಕತೆಗೆ ಎನರ್ಜಿ ಬೂಸ್ಟರ್‌ ನೀಡುವ ಜೊತೆಗೆ ದ್ವಿಪಕ್ಷೀಯ ವ್ಯಾಪಾರ ಸಂಬಂಧಕ್ಕೆ ಉತ್ತೇಜನ ನೀಡುತ್ತದೆ. ಫುಜೂತಾ ಬಂದರಿನಿಂದ ಭಾರತಕ್ಕೆ ತೈಲವನ್ನು ನೇರವಾಗಿ ರಫ್ತು ಮಾಡಲು ಅನುಕೂಲವಾಗುತ್ತದೆ. ಈ ಯೋಜನೆಯನ್ನು ಪೂರ್ಣಗೊಳಿಸುವ ಉದ್ದೇಶದಿಂದಲೇ ಮುಂಬೈನ ಉತ್ತರಕ್ಕೆ ನರ್ಮದಾ ನದಿಯಿಂದ ಹೆಚ್ಚುವರಿ ನೀರನ್ನು ಹರಿಸಲಾಗುತ್ತದೆ. ಜೊತೆಗೆ ಇದು ಶೀಘ್ರ ಪ್ರಯಾಣಕ್ಕೂ ಅನುಕೂಲ ಮಾಡಿಕೊಡುತ್ತದೆ ಎಂದು ಉದ್ದೇಶಿಸಲಾಗಿದೆ.

    ಮಿಂಚಿನಷ್ಟೇ ವೇಗ
    ಸಮುದ್ರ ಮಾರ್ಗದಲ್ಲಿ ಹಾದುಹೋಗುವ ಈ ರೈಲು ಮಾರ್ಗ ಸುಮಾರು 2,000 ಕಿಮೀ ವ್ಯಾಪ್ತಿ ಹೊಂದಿರಲಿದೆ. ಅರೇಬಿಯನ್‌ ಸಮುದ್ರದ ಮೇಲ್ಮೈನಿಂದ 20-30 ಮೀಟರ್‌ ಆಳದಲ್ಲಿ ಸುರಂಗ ಮಾರ್ಗದ ಮೂಲಕ ಹಾದುಹೋಗಲಿದೆ. ಇಲ್ಲಿ ರೈಲು ಗಂಟೆಗೆ 600 ರಿಂದ 1 ಸಾವಿರ ಕಿಮೀ ವೇಗದಲ್ಲಿ ಚಲಿಸುತ್ತದೆ. ಜಪಾನ್‌, ಚೀನಾಗಳಲ್ಲಿ ಬುಲೆಟ್‌ಟ್ರೈನ್‌ಗೆ ಬಳಸಿದ ಮ್ಯಾಗ್ಲೆವ್‌ ತಂತ್ರಜ್ಞಾನ ಬಳಸಿ ಟ್ರ್ಯಾಕ್‌ ಮಾಡುವುದರಿಂದ ಇದರ ವೇಗ ಅತಿಹೆಚ್ಚಿನದ್ದಾಗಿಯೇ ಇರುತ್ತದೆ.

    ಪ್ರಸ್ತುತ ವಿಮಾನದಲ್ಲಿ ಮುಂಬೈನಿಂದ ದುಬೈಗೆ ಸುಮಾರು 3 ಗಂಟೆ ಪ್ರಯಾಣ ಮಾಡಬೇಕಾಗುತ್ತದೆ. ಈ ಯೋಜನೆ ಪೂರ್ಣಗೊಂಡರೆ ಮುಂಬೈನಿಂದ ದುಬೈಗೆ ಕೇವಲ 2 ಗಂಟೆಗಳಲ್ಲಿ ಪ್ರಯಾಣಿಸಬಹುದು. ಗಾಳಿ ವೇಗಕ್ಕೆ ಸರಿಸಾಟಿಯಾಗಿ ರೈಲು ಚಲಿಸಿದರೂ ಇದರಲ್ಲಿ ಅಪಘಾತ ಸಾಧ್ಯತೆ ತೀರಾ ಕಡಿಮೆ. ಯುಎಇನಿಂದ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯ ವ್ಯವಹಾರ ಎರಡಕ್ಕೂ ಅರೇಬಿಯನ್‌ ಕೊಲ್ಲಿ ಮೂಲಕ ಎಂಟ್ರಿ, ಎಕ್ಸಿಟ್‌ ಇರಲಿದೆ.

    ವಿಶ್ವದಲ್ಲಿ ಇಂತಹ ಪ್ರಯೋಗ ನಡೆದಿದೆಯೇ?
    ಜಗತ್ತಿನಲ್ಲಿ ನೀರಿನೊಳಗಿನ ರೈಲು ಯೋಜನೆ ಪರಿಕಲ್ಪನೆಯು ಹೊಸದೇನಲ್ಲ. ಇಂಗ್ಲೆಂಡ್‌ ಮತ್ತು ಫ್ರಾನ್ಸ್‌ ನಡುವೆ ನಿರ್ಮಾಣಗೊಳ್ಳುತ್ತಿದೆ. ಇದಕ್ಕಾಗಿ ರೈಲು ಅಳಿ ನಿರ್ಮಾಣ ಮಾಡಲು 1994ರಲ್ಲೇ 50.45 ಕಿಮೀ ಉದ್ದದ ಸುರಂಗ ಮಾರ್ಗ ನಿರ್ಮಿಸಲಾಗಿದೆ. ಸಮುದ್ರದ ಮೇಲ್ಮೈನಿಂದ 75 ಮೀಟರ್‌ ಆಳದಲ್ಲಿ ರೈಲು ಚಲಿಸಲಿದ್ದು, ಯೂರೋಸ್ಟಾರ್ ರೈಲುಗಳು ಗಂಟೆಗೆ 160 ಕಿ.ಮೀ ವೇಗದಲ್ಲಿ ಚಲಿಸುತ್ತದೆ. ರಷ್ಯಾ ಮತ್ತು ಕೆನಡಾ ನಡುವೆ ಸಂಪರ್ಕ ಕಲ್ಪಿಸುವುದಕ್ಕೂ ಪ್ರಸ್ತಾವನೆ ಕೇಳಿಬಂದಿದೆ.

    ಒಟ್ಟಿನಲ್ಲಿ ಅಭಿವೃದ್ಧಿಯ ದಾಪುಗಾಲಿಡುತ್ತಿರುವ ಭಾರತ ಹಲವು ಯೋಜನೆಗಳಲ್ಲಿ ಯಶಸ್ಸನ್ನು ಕಂಡಿದೆ. ಸಾಗರದಲ್ಲಿ ಭೂಸ್ವಾದೀನದಂತಹ ಯಾವುದೇ ಸಮಸ್ಯೆ ಇಲ್ಲವಾದರೂ, ನೀರಿನ ಪರಿಸರ ಮತ್ತು ಜಲಚರಗಳ ಮೇಲೆ ಪರಿಣಾಮ ಬೀರಬಹುದೇ ಎಂಬುದನ್ನು ನೋಡಬೇಕಾಗಿದೆ. ಆದ್ರೆ ಈಗಾಗಲೇ ಅಂಡರ್‌ ವಾಟರ್‌ ಮೆಟ್ರೋ ಯೋಜನೆಯಲ್ಲಿ ಯಶಸ್ಸನ್ನು ಕಂಡಿರುವ ಭಾರತ ನೀರಿನೊಳಗಿನ ರೈಲು ಯೋಜನೆಗಾಗಿ ಯುಎಇ ಜೊತೆಗೆ ಕೈಜೋಡಿಸುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ.

  • ಕರ್ನಾಟಕ ದೇಶದ ತಂತ್ರಜ್ಞಾನ ವಲಯದ ಹೃದಯ ಬಡಿತ: ಡಿಕೆಶಿ

    ಕರ್ನಾಟಕ ದೇಶದ ತಂತ್ರಜ್ಞಾನ ವಲಯದ ಹೃದಯ ಬಡಿತ: ಡಿಕೆಶಿ

    ಬೆಂಗಳೂರು: ದೇಶದ ನೀತಿ ಆಯೋಗದ ಆವಿಷ್ಕಾರ ಸೂಚ್ಯಂಕದಲ್ಲಿ ಕರ್ನಾಟಕ (Karnataka) ಮೊದಲ ಸ್ಥಾನದಲ್ಲಿದೆ. ಅಲ್ಲದೇ ಐಟಿ- ಬಿಟಿ ಹಾಗೂ ನವೋದ್ಯಮ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಕರ್ನಾಟಕ ಅದರಲ್ಲೂ ಬೆಂಗಳೂರು (Bengaluru) ದೇಶದ ತಂತ್ರಜ್ಞಾನ ವಲಯದ ಹೃದಯ ಬಡಿತವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅಭಿಪ್ರಾಯಪಟ್ಟಿದ್ದಾರೆ.

    ಬೆಂಗಳೂರು ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ 27ನೇ ಆವೃತ್ತಿಯ ಬೆಂಗಳೂರು ಟೆಕ್ ಸಮ್ಮಿಟ್ 2024ರ (Tech Summit 2024) ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ದೆಹಲಿ, ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳಿಗೆ ಹೋಲಿಸಿದರೇ ಕರ್ನಾಟಕವು ಪೇಟೆಂಟ್ ವಿಚಾರದಲ್ಲಿ ಮುಂಚೂಣಿಯಲ್ಲಿದೆ. ಪೇಟೆಂಟ್ ಅರ್ಜಿಗಳ ಸಂಖ್ಯೆಯಲ್ಲಿ ಕರ್ನಾಟಕ ಇಡೀ ದೇಶದಲ್ಲಿಯೇ ಅಗ್ರಸ್ಥಾನದಲ್ಲಿದೆ. ಕರ್ನಾಟಕ ಮಾಹಿತಿ ತಂತ್ರಜ್ಞಾನದ ಜೊತೆಗೆ ಚಿಪ್ ವಿನ್ಯಾಸದಲ್ಲಿ ದೇಶದಲ್ಲಿಯೇ ತನ್ನದೇ ಆದ ಛಾಪು ಮೂಡಿಸಿದೆ ಎಂದರು. ಇದನ್ನೂ ಓದಿ: ತುಂಬಿ ಹರಿಯುತ್ತಿದ್ದ ಕಾಲುವೆಗೆ ಇಳಿದ ಗೂಡ್ಸ್ ಆಟೋ – ಕೂಲಿ ಕಾರ್ಮಿಕರು ಪಾರು

    ಯಂತ್ರೋಪಕರಣಗಳ ತಯಾರಿಕೆಯಲ್ಲಿಯೂ ಕರ್ನಾಟಕ ಮುಂದಿದ್ದು, ಸುಮಾರು 85ಕ್ಕೂ ಹೆಚ್ಚು ಫ್ಯಾಬ್ಲೆಸ್ ಚಿಪ್ ವಿನ್ಯಾಸ ಘಟಕಗಳು ನಮ್ಮ ರಾಜ್ಯದಲ್ಲಿವೆ. ಸೆಮಿಕಂಡಕ್ಟರ್ ತಯಾರಿಕೆಗೆ ಕರ್ನಾಟಕವೇ ಆಧಾರ. ದೇಶದ ಜೈವಿಕ ತಂತ್ರಜ್ಞಾನ ವಲಯಕ್ಕೆ 52%ರಷ್ಟು ಉದ್ಯೋಗಿಗಳನ್ನು ಕರ್ನಾಟಕವೇ ಪೂರೈಕೆ ಮಾಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ನವೆಂಬರ್ ಅಂತ್ಯದಿಂದ ಡಿಸೆಂಬರ್‌ವರೆಗೂ ಅಧಿಕ ಚಳಿ: ಹವಾಮಾನ ತಜ್ಞ ಸಿ.ಎಸ್. ಪಾಟೀಲ್

    ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಬೆಂಗಳೂರನ್ನು ಕೇಂದ್ರವಾಗಿಟ್ಟುಕೊಂಡು ಸಾರ್ವಜನಿಕ ಉದ್ದಿಮೆಗಳನ್ನು ಸ್ಥಾಪಿಸಿದ ಕಾರಣಕ್ಕೆ ಇಂದು ನಮ್ಮ ನಗರ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಹಲವಾರು ಶಿಕ್ಷಣತಜ್ಞರು ಹೆಸರಾಂತ ಎಂಜಿನಿಯರಿಂಗ್ ಕಾಲೇಜುಗಳು, ತಂತ್ರಜ್ಞಾನ ಸಂಸ್ಥೆಗಳನ್ನು ಸ್ಥಾಪಿಸಿದ ಕಾರಣಕ್ಕೆ ಇಂದು ಬೆಂಗಳೂರು ತನ್ನ ಅಸ್ತಿತ್ವವನ್ನು ಕಾಪಾಡಿಕೊಂಡಿದೆ. ಬೆಂಗಳೂರು ಬೆಳವಣಿಗೆಗೆ ನೆಹರು ಅವರು ಹಾಗೂ ಅನೇಕರ ದೂರದೃಷ್ಟಿಯ ಕೊಡುಗೆಯಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೊಲೆ ಯತ್ನ ಕೇಸ್; ನಟ ತಾಂಡವೇಶ್ವರ್ ಅರೆಸ್ಟ್- ಕಮಿಷನರ್ ದಯಾನಂದ್ ಹೇಳೋದೇನು?

    ಅಜೀಂ ಪ್ರೇಮ್ ಜೀ ಅವರು ಮತ್ತು ನಾರಾಯಣ ಮೂರ್ತಿ ಅವರು ಬೆಂಗಳೂರು ಹೊರತು ಪಡಿಸಿ ಬೇರೆ ನಗರಗಳನ್ನು ಆಯ್ಕೆ ಮಾಡಿಕೊಂಡಿದ್ದರೆ ಬೆಂಗಳೂರು ಐಟಿ ಹಬ್ ಬೆಳೆಯುತ್ತಿರಲಿಲ್ಲ. ಸಾವಿರಾರು ಜನರು ತಮ್ಮ ಸ್ಟಾರ್ಟ್ಅಪ್‌ಗಳಿಗೆ ಬೆಂಗಳೂರನ್ನು ಆಯ್ಕೆ ಮಾಡದೇ ಇದ್ದಿದ್ದರೆ ಬೆಂಗಳೂರು ಲಕ್ಷಾಂತರ ಜನರಿಗೆ ಆಸರೆ ಒದಗಿಸುತ್ತಿರಲಿಲ್ಲ ಎಂದು ನುಡಿದರು. ಇದನ್ನೂ ಓದಿ:  ಚಿತ್ರದುರ್ಗ| ಪತಿ ಸಾವಿನಿಂದ ಖಿನ್ನತೆ – ತಾಯಿ, ಮಗಳು ನೇಣಿಗೆ ಶರಣು

    ಬೆಂಗಳೂರು ಟೆಕ್ ಸಮ್ಮಿಟ್ ನವೋದ್ಯಮಿಗಳು, ಉದ್ಯಮಿಗಳು, ತಂತ್ರಜ್ಞರು, ಸೃಜನಶೀಲರು ಮತ್ತು ಅಸಾಧಾರಣ ಕನಸುಗಾರರ ಸಮ್ಮೇಳನ. ಕರ್ನಾಟಕ ದಾರ್ಶನಿಕರ, ಆಧುನಿಕ ಚಿಂತಕರ ಭೂಮಿ. ಭಾರತದ ಐಟಿ ಕ್ರಾಂತಿಯ ಹಾಗೂ ಜೈವಿಕ ತಂತ್ರಜ್ಞಾನದ ಹುಟ್ಟೂರು. ಮಾಹಿತಿ ತಂತ್ರಜ್ಞಾನದ ಮೂಲಕ ನಮ್ಮ ರಾಜ್ಯದ ಹೆಸರು ಜಾಗತಿಕ ಮಟ್ಟದಲ್ಲಿದೆ ಎಂದರು. ಇದನ್ನೂ ಓದಿ: ಯು.ಟಿ.ಪಿ ಕಾಲುವೆ ಒಡೆದು 1 ತಿಂಗಳಾದ್ರೂ ದುರಸ್ತಿ ಮಾಡದ ಅಧಿಕಾರಿಗಳು- ಕಂಗಾಲಾದ ರೈತರು

    ಕರ್ನಾಟಕವು ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್ ಮತ್ತು ಎಕ್ಸ್ಟೆಂಡೆಡ್ ರಿಯಾಲಿಟಿ ವಲಯಗಳಲ್ಲಿ ಅಂತಾರಾಷ್ಟ್ರೀಯ ಮಾನದಂಡಗಳನ್ನು ಅನುಸರಿಸುತ್ತಿದೆ. ಈ ವಲಯದಲ್ಲಿ ಜಾಗತಿಕವಾಗಿ ಗುರುತಿಸಿಕೊಂಡಿರುವ ನಮ್ಮ ಕರ್ನಾಟಕವು 2025ರ ವೇಳೆಗೆ ಈ ಕ್ಷೇತ್ರದಲ್ಲಿ ಸುಮಾರು 25,000 ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಗುರಿ ಹೊಂದಿದೆ. ಈ ಕ್ಷೇತ್ರಕ್ಕೆ ಬೆಂಬಲವಾಗಿ ನಿಂತ ಪರಿಣಾಮ ಸುಮಾರು 70% ರಷ್ಟು ಉದ್ಯೋಗ ಸೃಷ್ಟಿಯಾಗಿಯಾಗಿದೆ ಎಂದು ತಿಳಿಸಿದರು.  ಇದನ್ನೂ ಓದಿ: Tumakuru| ಶಾಲಾ ಶಿಕ್ಷಕಿಯ ವಾಹನ ಅಡ್ಡಗಟ್ಟಿ ಸರಗಳ್ಳತನ

  • ವಿಕಸಿತ ಭಾರತ ‘2047’; ಆಧುನಿಕ ಭಾರತದ ಪರಿವರ್ತನೆಯಲ್ಲಿ ತಂತ್ರಜ್ಞಾನದ ಪಾತ್ರವೇನು? – ಟೆಕ್ನಾಲಜಿಯಲ್ಲಿ ದೇಶದ ಸಾಧನೆಯೇನು?

    ವಿಕಸಿತ ಭಾರತ ‘2047’; ಆಧುನಿಕ ಭಾರತದ ಪರಿವರ್ತನೆಯಲ್ಲಿ ತಂತ್ರಜ್ಞಾನದ ಪಾತ್ರವೇನು? – ಟೆಕ್ನಾಲಜಿಯಲ್ಲಿ ದೇಶದ ಸಾಧನೆಯೇನು?

    ಕೃಷಿ ಪ್ರಧಾನ ದೇಶವಾದ ಭಾರತ ಈಗ ಡಿಜಿಟಲ್ ಕ್ಷೇತ್ರದಲ್ಲೂ ಉತ್ತಮ ಪ್ಲೇಯರ್ ಆಗಿ ರೂಪುಗೊಳ್ಳುತ್ತಿದೆ. ಭಾರತದ ಈ ಪರಿವರ್ತನೆಯಲ್ಲಿ ತಂತ್ರಜ್ಞಾನದ ಪಾತ್ರ ದೊಡ್ಡದಿದೆ. ಆರೋಗ್ಯ, ಕೃಷಿ, ಆಡಳಿತ, ಶಿಕ್ಷಣ ಮನುಷ್ಯ ಜೀವನದ ಪ್ರಮುಖ ಭಾಗವಾಗಿದೆ. ಈ ಎಲ್ಲಾ ವಲಯಗಳಲ್ಲೂ ತಂತ್ರಜ್ಞಾನ ತನ್ನದೇ ಪ್ರಾಬಲ್ಯ ಹೊಂದಿದೆ. ಸ್ವಾತಂತ್ರ್ಯ ನಂತರ ಆಧುನಿಕ ಭಾರತವನ್ನು ತಂತ್ರಜ್ಞಾನ ರೂಪಿಸಿದ ಪರಿ ನಿಜಕ್ಕೂ ಕುತೂಹಲಕಾರಿ.

    ಸತತ ಮೂರನೇ ಬಾರಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ‘ವಿಕಸಿತ ಭಾರತ’ (Viksit Bharat 2047) ಪರಿಕಲ್ಪನೆಯನ್ನು ಪರಿಚಯಿಸಿದ್ದಾರೆ. ದೇಶದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಒತ್ತಿ ಹೇಳಿದ್ದಾರೆ. ಡಿಜಿಟಲೀಕರಣ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಭಾರತದ ಸಾಧನೆ ವಿಶ್ವಮಟ್ಟದಲ್ಲಿ ಗಮನ ಸೆಳೆದಿದೆ. ಹೀಗಾಗಿ ಈ ಕ್ಷೇತ್ರಗಳಲ್ಲಿ ಇನ್ನಷ್ಟು ಸುಧಾರಣೆ ತರಲು ಕೇಂದ್ರ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ. 2047ಕ್ಕೆ ಭಾರತಕ್ಕೆ ಸ್ವಾತಂತ್ರ್ಯ ಬಂದು 100 ವರ್ಷ ಆಗಲಿದೆ. ಈ ಹೊತ್ತಿಗೆ ‘ಅಭಿವೃದ್ಧಿ ಹೊಂದಿದ ಭಾರತ’ (ವಿಕಸಿತ ಭಾರತ) ನಿರ್ಮಾಣದ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಹಾಗಾದರೆ, ಆಧುನಿಕ ಭಾರತವನ್ನು ರೂಪಿಸುವಲ್ಲಿ ತಂತ್ರಜ್ಞಾನದ ಪಾತ್ರವೇನು?

    ಪಂಚವಾರ್ಷಿಕ ಯೋಜನೆಯು ವೈಜ್ಞಾನಿಕ ಸಂಶೋಧನೆಗೆ ಆದ್ಯತೆ ನೀಡಿದ್ದು ಹೇಗೆ?
    1950 ರಲ್ಲಿ ಭಾರತವು ಕೃಷಿ, ವಿಜ್ಞಾನ, ಮೂಲಸೌಕರ್ಯ, ಶಿಕ್ಷಣ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಕಾರ್ಯತಂತ್ರ ರೂಪಿಸಲು ಮತ್ತು ಕ್ರಮಗಳನ್ನು ಯೋಜಿಸಲು ಯೋಜನಾ ಆಯೋಗವನ್ನು ಸ್ಥಾಪಿಸಿತು. ಜುಲೈ 1951 ರಲ್ಲಿ ಪರಿಚಯಿಸಲಾದ ಮೊದಲ ಪಂಚವಾರ್ಷಿಕ ಯೋಜನೆಯು ‘ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನೆ’ ಮೇಲೆ ನಿರ್ಣಾಯಕ ಗಮನವನ್ನು ಒಳಗೊಂಡಿತ್ತು. ಈ ಯೋಜನೆಯು ಭಾರತದಲ್ಲಿ ವೈಜ್ಞಾನಿಕ ಸಂಶೋಧನೆಗೆ ಅಡಿಪಾಯ ಹಾಕಿತು. ರಾಷ್ಟ್ರೀಯ ಪ್ರಯೋಗಾಲಯಗಳು ಮತ್ತು ಸಂಶೋಧನಾ ಕೇಂದ್ರಗಳ ಅಭಿವೃದ್ಧಿ ಮತ್ತು ವರ್ಧನೆಗೆ ಒತ್ತು ನೀಡಿತು.

    ಯೋಜನೆಯು ಹನ್ನೊಂದು ರಾಷ್ಟ್ರೀಯ ಸಂಶೋಧನಾ ಸಂಸ್ಥೆಗಳನ್ನು ಗುರುತಿಸಿದೆ. ದೇಶದ ಭವಿಷ್ಯದ ಬೆಳವಣಿಗೆಯಲ್ಲಿ ಅವುಗಳ ಮಹತ್ವವನ್ನು ಎತ್ತಿ ತೋರಿಸುತ್ತದೆ. ರಾಷ್ಟ್ರೀಯ ಭೌತಿಕ ಪ್ರಯೋಗಾಲಯ (ದೆಹಲಿ), ರಾಷ್ಟ್ರೀಯ ರಾಸಾಯನಿಕ ಪ್ರಯೋಗಾಲಯ (ಪುಣೆ, ಮಹಾರಾಷ್ಟ್ರ), ಮತ್ತು ಕೇಂದ್ರೀಯ ಎಲೆಕ್ಟ್ರೋಕೆಮಿಕಲ್ ಸಂಶೋಧನಾ ಸಂಸ್ಥೆ (ಕಾರೈಕುಡಿ, ತಮಿಳುನಾಡು) ಪ್ರಮುಖವಾಗಿವೆ. ಈ ಸಂಸ್ಥೆಗಳಲ್ಲಿ ಕೆಲವು ಇನ್ನೂ ತಮ್ಮ ಆರಂಭಿಕ ಹಂತದಲ್ಲಿದ್ದು, ವಿಸ್ತರಣೆಗೆ ಹೆಚ್ಚಿನ ಹೂಡಿಕೆಯ ಅಗತ್ಯವಿತ್ತು. ಯೋಜನೆಯು ಕಟ್ಟಡಗಳನ್ನು ಪೂರ್ಣಗೊಳಿಸಲು ಮತ್ತು ಈ ಪ್ರಯೋಗಾಲಯಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಉಪಕರಣಗಳನ್ನು ಸ್ಥಾಪಿಸಲು ಸಂಪನ್ಮೂಲಗಳನ್ನು ನಿಯೋಜಿಸಿತ್ತು. ಯೋಜನೆಯು ಮೂರು ಹೊಸ ಸಂಸ್ಥೆಗಳ ಸ್ಥಾಪನೆಯನ್ನು ಪ್ರಸ್ತಾಪಿಸಿತ್ತು. ರೇಡಿಯೋ ಮತ್ತು ಎಲೆಕ್ಟ್ರಾನಿಕ್ಸ್ ಸಂಶೋಧನಾ ಸಂಸ್ಥೆ, ಮೆಕ್ಯಾನಿಕಲ್ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆ, ಕೇಂದ್ರ ಉಪ್ಪು ಸಂಶೋಧನಾ ಕೇಂದ್ರ, ಭಾರತದ ವೈಜ್ಞಾನಿಕ ಸಂಶೋಧನಾ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಿತು.

    1957-1967: ಕೃಷಿ ಮತ್ತು ರಕ್ಷಣೆಯಲ್ಲಿ ಸುಧಾರಣೆ
    ಸ್ವಾತಂತ್ರ‍್ಯದ ನಂತರ ಕೃಷಿ ಕ್ಷೇತ್ರವನ್ನು ಪುನರುಜ್ಜೀವನಗೊಳಿಸುವುದು ಭಾರತದ ಪ್ರಮುಖ ಸವಾಲುಗಳಲ್ಲಿ ಒಂದಾಗಿತ್ತು. ದೇಶದಾದ್ಯಂತ ಬೆಳೆ ಇಳುವರಿ ಸಾಮರ್ಥ್ಯ, ನೀರಾವರಿ ವ್ಯವಸ್ಥೆಗಳು, ರಸಗೊಬ್ಬರಗಳು, ಕೀಟನಾಶಕಗಳು, ವಿದ್ಯುತ್ ಮೂಲಗಳು ಮತ್ತು ಕೃಷಿ ಉಪಕರಣಗಳಿಗೆ ಸಂಬಂಧಿಸಿದ ಸಂಶೋಧನೆಯಲ್ಲಿ ದೇಶ ಹಿಂದಿತ್ತು. ಇದನ್ನು ಗುರುತಿಸಿದ ಸರ್ಕಾರ ಕೃಷಿಯನ್ನು ಮುನ್ನಡೆಸಲು ವೈಜ್ಞಾನಿಕ ಸಂಶೋಧನೆಗೆ ಆದ್ಯತೆ ನೀಡಿತು. ಈ ದಶಕವು ಹಸಿರು ಕ್ರಾಂತಿಯ ಆರಂಭಕ್ಕೆ ಸಾಕ್ಷಿಯಾಯಿತು. ಇದು 1947 ರಲ್ಲಿ ಕುಸಿತದ ಅಂಚಿನಲ್ಲಿದ್ದ ಭಾರತದ ಕೃಷಿ ಆರ್ಥಿಕತೆಯನ್ನು ಗಣನೀಯವಾಗಿ ಸುಧಾರಿಸಿದ ಪರಿವರ್ತಕ ಅವಧಿಯಾಗಿದೆ.

    ಹಸಿರು ಕ್ರಾಂತಿಯು ಭಾರತವು ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಲು ಸಹಾಯ ಮಾಡಿತು. ಈ ಅವಧಿಯು ರಾಷ್ಟ್ರದ ಆಹಾರ ಭದ್ರತೆ ಸಾಧ್ಯವಾಯಿತು. ಜೊತೆಗೆ ದೃಢವಾದ ಕೃಷಿಗೆ ಅಡಿಪಾಯ ಸ್ಥಾಪಿಸುವಲ್ಲಿ ನಿರ್ಣಾಯಕ ಹೆಜ್ಜೆಯಾಯಿತು. 1960 ರ ದಶಕವು ಭಾರತದ ರಕ್ಷಣಾ ಕ್ಷೇತ್ರಕ್ಕೆ ಪ್ರಮುಖವಾಗಿತ್ತು. ದೇಶದ ಮೊದಲ ಸ್ಥಳೀಯ ನೌಕಾ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಕಲ್ವರಿಯನ್ನು ಅಭಿವೃದ್ಧಿಪಡಿಸಲಾಯಿತು. ಈ ಸಾಧನೆಯು ರಕ್ಷಣೆಯಲ್ಲಿ ಮಾತ್ರವಲ್ಲದೆ ವಿವಿಧ ಕ್ಷೇತ್ರಗಳಲ್ಲಿ ‘ಮೇಡ್-ಇನ್-ಇಂಡಿಯಾ’ ತಾಂತ್ರಿಕ ಪ್ರಗತಿಗೆ ನಾಂದಿ ಹಾಡಿತು. ರಕ್ಷಣಾ ವಲಯದಲ್ಲಿ ಅಗ್ನಿ ಮತ್ತು ಪೃಥ್ವಿ ಕ್ಷಿಪಣಿಗಳು, ಸೂಪರ್‌ಸಾನಿಕ್ ಯುದ್ಧ ವಿಮಾನ ತೇಜಸ್ ಮತ್ತು ಪೋಖ್ರಾನ್ ಐಐ ಯಶಸ್ವಿ ಅಭಿವೃದ್ಧಿ, ಪರೀಕ್ಷೆ ಮತ್ತು ನಿಯೋಜನೆಯೊಂದಿಗೆ ಭಾರತದ ಪ್ರಗತಿಯು ಮುಂದುವರೆಯಿತು.

    ವಿಶ್ವದ ಅತ್ಯಂತ ವೇಗದ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿ, ಬ್ರಹ್ಮೋಸ್, ಬ್ಯಾಲಿಸ್ಟಿಕ್ ಕ್ಷಿಪಣಿ ಜಲಾಂತರ್ಗಾಮಿ ಐಎನ್‌ಎಸ್ ಅರಿಹಂತ್ ಮತ್ತು ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ಅನ್ನು ಭಾರತವು ಅಭಿವೃದ್ಧಿಪಡಿಸಿದೆ. ಈ ಸಾಧನೆಗಳು ಅತ್ಯಾಧುನಿಕ ತಂತ್ರಜ್ಞಾನಗಳ ಸ್ಥಳೀಯ ಅಭಿವೃದ್ಧಿಯ ಮೂಲಕ ಸಾಧ್ಯವಾಯಿತು. ಆಧುನಿಕ ಸಿವಿಲ್ ಮತ್ತು ಮಿಲಿಟರಿ ಏರ್‌ಫ್ರೇಮ್‌ಗಳಲ್ಲಿ ಮತ್ತು ವಿಮಾನಕ್ಕಾಗಿ ಹೆಡ್-ಅಪ್ ಡಿಸ್ಪ್ಲೇಗಳಲ್ಲಿ (ಹೆಚ್‌ಯುಡಿ) ಬಳಸುವ ಹಗುರವಾದ ಸಂಯೋಜನೆಗಳನ್ನು ಸಂಸ್ಕರಿಸಲು ಆಟೋಕ್ಲೇವ್ ತಂತ್ರಜ್ಞಾನವು ಗಮನಾರ್ಹವಾದ ಆವಿಷ್ಕಾರಗಳನ್ನು ಒಳಗೊಂಡಿದೆ.

    ಭಾರತದ ಮೊದಲ ಉಪಗ್ರಹ ಉಡಾವಣೆಯಾಗಿದ್ದು ಯಾವಾಗ?
    ಬಾಹ್ಯಾಕಾಶ ವಿಜ್ಞಾನದ ಮೇಲೆ ಭಾರತದ ಪ್ರಭಾವ ಗಮನಾರ್ಹವಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅನ್ನು 1969 ರಲ್ಲಿ ರಾಷ್ಟ್ರದ ಅಧಿಕೃತ ಬಾಹ್ಯಾಕಾಶ ಸಂಸ್ಥೆಯಾಗಿ ಸ್ಥಾಪಿಸಲಾಯಿತು. ಏಪ್ರಿಲ್ 19, 1975 ರಂದು, ಇಸ್ರೋ ಭಾರತದ ಮೊದಲ ಉಪಗ್ರಹ ಆರ್ಯಭಟವನ್ನು ಉಡಾವಣೆ ಮಾಡಿತು. ಇದನ್ನು ಸಂಪೂರ್ಣವಾಗಿ ದೇಶದೊಳಗೆ ವಿನ್ಯಾಸಗೊಳಿಸಲಾಗಿತ್ತು. ಆರ್ಯಭಟವನ್ನು ಎಕ್ಸ್-ರೇ ಖಗೋಳಶಾಸ್ತ್ರ, ವಾಯುವಿಜ್ಞಾನ ಮತ್ತು ಸೌರ ಭೌತಶಾಸ್ತ್ರದಲ್ಲಿ ಪ್ರಯೋಗಗಳನ್ನು ನಡೆಸಲು ಅಭಿವೃದ್ಧಿಪಡಿಸಲಾಗಿತ್ತು. ಇದು ಜಾಗತಿಕ ಬಾಹ್ಯಾಕಾಶ ಶಕ್ತಿಯಾಗುವತ್ತ ಭಾರತದ ಪ್ರಯಾಣದಲ್ಲಿ ಪ್ರಮುಖ ಮೈಲಿಗಲು ಸ್ಥಾಪಿಸಿತು.

    1980 ರಲ್ಲಿ ಭಾರತವು ತನ್ನ ಮೊದಲ ಉಪಗ್ರಹ ಉಡಾವಣಾ ವಾಹನ, ಎಸ್‌ಎಲ್‌ವಿ-3 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಮಹತ್ವದ ಮೈಲಿಗಲ್ಲು ಸ್ಥಾಪಿಸಿತು. ಈ ಸಾಧನೆಯು 1984 ರಲ್ಲಿ ಭಾರತದ ಮೊದಲ ಗಗನಯಾತ್ರಿ ರಾಕೇಶ್ ಶರ್ಮಾ ಅವರನ್ನು ಬಾಹ್ಯಾಕಾಶಕ್ಕೆ ಕಳುಹಿಸುವುದು ಸೇರಿದಂತೆ ಹೆಚ್ಚಿನ ಪ್ರಗತಿಗೆ ವೇದಿಕೆಯನ್ನು ಸೃಷ್ಟಿಸಿತು. 2000 ರ ಹೊತ್ತಿಗೆ, ಭಾರತವು ತನ್ನದೇ ಆದ ರಾಕೆಟ್‌ಗಳನ್ನು ಅಭಿವೃದ್ಧಿಪಡಿಸಿತು. ಇದು ಸ್ಥಳೀಯ ಉಪಗ್ರಹಗಳು ಮತ್ತು ಸಂಶೋಧನಾ ಉಪಕರಣಗಳನ್ನು ಮಾತ್ರವಲ್ಲದೆ ಇತರ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಪೇಲೋಡ್‌ಗಳನ್ನು ಉಡಾವಣೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ.

    21 ನೇ ಶತಮಾನದಲ್ಲಿ ಬಾಹ್ಯಾಕಾಶ ವಿಭಾಗದ ಅಡಿಯಲ್ಲಿ ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರ (IN-SPAce) ರಚನೆಯಂತಹ ಉಪಕ್ರಮಗಳ ಮೂಲಕ ಭಾರತವು ತನ್ನ ಬಾಹ್ಯಾಕಾಶ ಕ್ಷೇತ್ರ ವಿಸ್ತರಿಸುವುದನ್ನು ಮುಂದುವರೆಸಿತು. IN-SPAce ಬಾಹ್ಯಾಕಾಶ ಚಟುವಟಿಕೆಗಳಲ್ಲಿ ಹೆಚ್ಚಿನ ಖಾಸಗಿ ಮತ್ತು ನಾಗರಿಕರ ಭಾಗವಹಿಸುವಿಕೆಯನ್ನು ಉತ್ತೇಜಿಸಿತು. ಇದು ನಾಲ್ವರು ವಿದ್ಯಾರ್ಥಿಗಳೇ ಅಭಿವೃದ್ಧಿಪಡಿಸಿದ ಉಪಗ್ರಹಗಳ ಯಶಸ್ವಿ ಉಡಾವಣೆಗೆ ಕಾರಣವಾಗಿದೆ. ಇದಲ್ಲದೆ, ತಿರುವನಂತಪುರಂನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೇಸ್ ಸೈನ್ಸ್ ಅಂಡ್ ಟೆಕ್ನಾಲಜಿಯಂತಹ ಸಂಸ್ಥೆಗಳು ಭಾರತದ ಬಾಹ್ಯಾಕಾಶ ಕಾರ್ಯಕ್ರಮಕ್ಕಾಗಿ ಇಂಜಿನಿಯರ್‌ಗಳಿಗೆ ತರಬೇತಿ ನೀಡಲು ಮೀಸಲಾಗಿವೆ. ಬಾಹ್ಯಾಕಾಶ ಪರಿಶೋಧನೆಯಲ್ಲಿ ದೇಶದ ಪ್ರಗತಿಯನ್ನು ಇದು ಖಾತ್ರಿಪಡಿಸುತ್ತದೆ.

    ಡಿಎನ್‌ಎ ಫಿಂಗರ್‌ಪ್ರಿಂಟ್ ಸ್ಥಾಪನೆ
    1988 ರಲ್ಲಿ ಡಿಎನ್‌ಎ ಫಿಂಗರ್‌ಪ್ರಿಂಟಿಂಗ್‌ನ ಅಭಿವೃದ್ಧಿಯೊಂದಿಗೆ ಭಾರತವು ಜೈವಿಕ ತಂತ್ರಜ್ಞಾನದಲ್ಲಿ ಮಹತ್ವದ ಪ್ರಗತಿಯನ್ನು ಸಾಧಿಸಿತು. ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ ಸೆಂಟರ್ ಫಾರ್ ಸೆಲ್ಯುಲಾರ್ ಅಂಡ್ ಮಾಲಿಕ್ಯುಲರ್ ಬಯಾಲಜಿ (CSIR-CCMB) ಯ ವಿಜ್ಞಾನಿಗಳು ಈ ತಂತ್ರಜ್ಞಾನ ಅಭಿವೃದ್ಧಿಪಡಿಸಿ, ಭಾರತವನ್ನು ಮೂರನೇ ರಾಷ್ಟ್ರವನ್ನಾಗಿ ಮಾಡಿದರು. ಜಗತ್ತಿನಲ್ಲಿ ತನ್ನದೇ ಆದ ಡಿಎನ್‌ಎ ಫಿಂಗರ್‌ಪ್ರಿಂಟಿಂಗ್ ಪ್ರೋಬ್ ಭಾರತ ಹೊಂದಿದೆ. ಈ ಆವಿಷ್ಕಾರವು ದೇಶದಲ್ಲಿ ನ್ಯಾಯ ವಿಜ್ಞಾನ ಮತ್ತು ಜೆನೆಟಿಕ್ ಸಂಶೋಧನೆಯಲ್ಲಿ ಪ್ರಮುಖ ಪ್ರಗತಿಗೆ ಕಾರಣವಾಯಿತು.

    ಪೋಖ್ರಾನ್-11 ಪರಮಾಣು ಪರೀಕ್ಷೆ
    ಮೇ 11, 1998 ರಂದು, ಭಾರತವು ರಾಜಸ್ಥಾನದ ಪೋಖ್ರಾನ್‌ನಲ್ಲಿ ಐದು ಭೂಗತ ಪರಮಾಣು ಪರೀಕ್ಷೆಗಳನ್ನು ನಡೆಸಿತು. ಇದನ್ನು ‘ಪೋಖ್ರಾನ್-II’ ಎಂದು ಕರೆಯಲಾಗುತ್ತದೆ. ಈ ಯಶಸ್ವಿ ಪರೀಕ್ಷೆಗಳು ಭಾರತದ ಕಾರ್ಯತಂತ್ರ ಮತ್ತು ತಾಂತ್ರಿಕ ಸಾಮರ್ಥ್ಯಗಳಲ್ಲಿ ಮಹತ್ವದ ಮೈಲುಗಲ್ಲು ಸ್ಥಾಪಿಸಿದೆ. ಈ ಸಾಧನೆಯನ್ನು ಸ್ಮರಿಸಲು ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಮೇ 11ನ್ನು ‘ರಾಷ್ಟ್ರೀಯ ತಂತ್ರಜ್ಞಾನ ದಿನ’ ಎಂದು ಘೋಷಿಸಿದರು. ಇದನ್ನು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತದ ಪ್ರಗತಿಯನ್ನು ಸ್ಮರಿಸಲು ಪ್ರತಿವರ್ಷ ಆಚರಿಸಲಾಗುತ್ತದೆ.

    ಚಂದ್ರನ ಮೇಲೆ ಭಾರತದ ಮೊದಲ ಉಪಗ್ರಹ (ಚಂದ್ರಯಾನ-1)
    ಅಕ್ಟೋಬರ್ 22, 2008 ರಂದು ಭಾರತವು ತನ್ನ ಮೊದಲ ಚಂದ್ರಯಾನ-1 ಉಪಗ್ರಹವನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಡಾಯಿಸಿತು. ಬಾಹ್ಯಾಕಾಶ ನೌಕೆಯು ಚಂದ್ರನ ಸುತ್ತ ಪರಿಭ್ರಮಿಸಿತು. ಅದರ ರಾಸಾಯನಿಕ ಸಂಯೋಜನೆ, ಭೂವಿಜ್ಞಾನ ಮತ್ತು ಖನಿಜಶಾಸ್ತ್ರದ ಬಗ್ಗೆ ಅಮೂಲ್ಯವಾದ ಡೇಟಾವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ISRO) ಒದಗಿಸಿತು.

    ಪೋಲಿಯೊ ಮುಕ್ತ ಭಾರತ
    1994 ರ ಹೊತ್ತಿನಲ್ಲಿ ವಿಶ್ವದ ಪೋಲಿಯೊ ಪ್ರಕರಣಗಳಲ್ಲಿ ಸರಿಸುಮಾರು 60% ರಷ್ಟು ಪಾಲನ್ನು ಭಾರತವೇ ಹೊಂದಿತ್ತು. ಸರ್ಕಾರದ ನೇತೃತ್ವದ ಕಠಿಣ ಲಸಿಕೆ ಅಭಿಯಾನವು ಎರಡು ದಶಕಗಳಲ್ಲಿ ಭಾರತವನ್ನು ಪೋಲಿಯೊ ಮುಕ್ತ ರಾಷ್ಟ್ರವಾಗಿ ಪರಿವರ್ತಿಸಿತು. ಮಾರ್ಚ್ 27, 2014 ರಂದು, ವಿಶ್ವ ಆರೋಗ್ಯ ಸಂಸ್ಥೆ (WHO) ಭಾರತವನ್ನು ಪೋಲಿಯೊ ಮುಕ್ತ ಎಂದು ಅಧಿಕೃತವಾಗಿ ಪ್ರಮಾಣೀಕರಿಸಿತು. ಈ ಅಭಿಯಾನದ ಯಶಸ್ಸಿಗೆ ದೃಢವಾದ ನೀತಿಗಳು, ಸಮರ್ಪಿತ ಆರೋಗ್ಯ ವೃತ್ತಿಪರರು ಮತ್ತು ವ್ಯಾಪಕವಾದ ಸಮುದಾಯದ ಪ್ರಭಾವ ಕಾರಣವಾಯಿತು. ಲಸಿಕೆಯ ಸುರಕ್ಷತೆ ಮತ್ತು ಪ್ರಯೋಜನಗಳ ಬಗ್ಗೆ ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳಲ್ಲಿನ ಜನರಿಗೆ ತಿಳಿಸಿಕೊಡಲಾಯಿತು. ಆಗಿನ ಸಂದರ್ಭದಲ್ಲಿ ಲಸಿಕೆ ಪಡೆಯಲು ಹಿಂಜರಿಯುತ್ತಿದ್ದ ಜನರ ಮನವೊಲಿಸುವ ಕಾರ್ಯದಲ್ಲೂ ಸರ್ಕಾರ ಯಶಸ್ವಿಯಾಯಿತು.

    ಮಂಗಳನೆಡೆಗೆ ಭಾರತ
    ನವೆಂಬರ್ 5, 2013 ರಂದು ಉಡಾವಣೆಯಾದ ಭಾರತದ ಮಾರ್ಸ್ ಆರ್ಬಿಟರ್ ಮಿಷನ್ (ಮಂಗಳಯಾನ್), ದೇಶದ ಮೊದಲ ಅಂತರಗ್ರಹ ಕಾರ್ಯಾಚರಣೆಯನ್ನು ಗುರುತಿಸಿತು. ಇದು ಮಂಗಳನ ಸ್ಥಳಾಕೃತಿ, ರೂಪವಿಜ್ಞಾನ, ಖನಿಜಶಾಸ್ತ್ರ ಮತ್ತು ವಾತಾವರಣದ ವಿವರವಾದ ಅಧ್ಯಯನಗಳನ್ನು ನಡೆಸಿತು. ವೈಜ್ಞಾನಿಕ ಕೊಡುಗೆಗಳ ಜೊತೆಗೆ ಮಂಗಳಯಾನವು ಅದರ ವೆಚ್ಚ-ಪರಿಣಾಮಕಾರಿತ್ವಕ್ಕಾಗಿ ಪ್ರಶಂಸಿಸಲ್ಪಟ್ಟಿದೆ. ಬಾಹ್ಯಾಕಾಶ ಪರಿಶೋಧನೆಯಲ್ಲಿ ಭಾರತವು ಗಮನಾರ್ಹ ಸ್ಥಾನ ಪಡೆದುಕೊಂಡಿತು.

    ಸ್ಟಾರ್ಟ್-ಅಪ್‌ಗಳಿಗೆ ಸಿಕ್ತು ಉತ್ತೇಜನ
    ಜನವರಿ 16, 2016 ರಂದು ಭಾರತ ಸರ್ಕಾರವು ವೈಜ್ಞಾನಿಕ, ತಾಂತ್ರಿಕ ಮತ್ತು ನವೀನ ಪ್ರಗತಿಗೆ ಅನುಕೂಲಕರವಾದ ಪರಿಸರ ವ್ಯವಸ್ಥೆಯನ್ನು ಉತ್ತೇಜಿಸಲು ‘ಸ್ಟಾರ್ಟ್ಅಪ್ ಇಂಡಿಯಾ’ ಕಾರ್ಯಕ್ರಮವನ್ನು ಪರಿಚಯಿಸಿತು. ಇದು ಭಾರತದಲ್ಲಿ ಸ್ಟಾರ್ಟ್ಅಪ್‌ಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಿದೆ. ಜುಲೈ 2021 ರ ವೇಳೆಗೆ ಇದು 52,000 ಅನ್ನು ದಾಟಿದೆ. ಅಲ್ಲದೇ ವಿಶ್ವದ ಅತಿದೊಡ್ಡ ಆರಂಭಿಕ ಪರಿಸರ ವ್ಯವಸ್ಥೆಗಳಲ್ಲಿ ಒಂದಾಗಿದೆ. ಈ ಸ್ಟಾರ್ಟ್ಅಪ್‌ಗಳು ಐಟಿ ಸೇವೆಗಳು, ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ಹಸಿರು ತಂತ್ರಜ್ಞಾನ ಸೇರಿದಂತೆ ವಿವಿಧ ವಲಯಗಳಲ್ಲಿ 5,00,000 ಉದ್ಯೋಗಗಳನ್ನು ಸೃಷ್ಟಿಸಿವೆ.

    ಇಸ್ರೋ ‘ಗಗನಯಾನ’
    ಗಗನ್‌ಯಾನ ಕಾರ್ಯಕ್ರಮವು ಕಡಿಮೆ ಭೂಮಿಯ ಕಕ್ಷೆಯಲ್ಲಿ ಮಾನವ ಬಾಹ್ಯಾಕಾಶ ಹಾರಾಟ ನಡೆಸುವ ಗುರಿಯನ್ನು ಹೊಂದಿದೆ. ಇದು ಭೂಮಿಗೆ ಸಮೀಪವಿರುವ ಬಾಹ್ಯಾಕಾಶ ಪ್ರದೇಶವನ್ನು ಸಾರಿಗೆ, ಸಂವಹನ ಮತ್ತು ವೀಕ್ಷಣೆಯಂತಹ ಚಟುವಟಿಕೆಗಳಿಗೆ ಬಳಸಲಾಗುತ್ತದೆ. ಅಲ್ಲಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಕಕ್ಷೆಯಲ್ಲಿದೆ. ಭವಿಷ್ಯದ ಭಾರತೀಯ ಮಾನವ ಬಾಹ್ಯಾಕಾಶ ಪರಿಶೋಧನೆಗೆ ದಾರಿ ಮಾಡಿಕೊಡಲು ಈ ಉಪಕ್ರಮವನ್ನು ವಿನ್ಯಾಸಗೊಳಿಸಲಾಗಿದೆ. ಗಗನ್‌ಯಾನ್ ಕಾರ್ಯಕ್ರಮದಡಿಯಲ್ಲಿ ಎರಡು ಮಾನವರಹಿತ ಮಿಷನ್‌ಗಳು ಮತ್ತು ಒಂದು ಮಾನವಸಹಿತ ಮಿಷನ್‌ಗೆ ಸರ್ಕಾರ ಅನುಮೋದನೆ ನೀಡಿದೆ. ತಮ್ಮ 2020 ರ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ‘ಗಗನಯಾನ ನಿರಂತರ ಮಾನವ ಬಾಹ್ಯಾಕಾಶ ಪರಿಶೋಧನಾ ಕಾರ್ಯಕ್ರಮದತ್ತ ಭಾರತದ ಮೊದಲ ಪ್ರಮುಖ ಹೆಜ್ಜೆ’ ಎಂದು ಬಣ್ಣಿಸಿದರು. ಇದು ಬಾಹ್ಯಾಕಾಶ ನಿಲ್ದಾಣ ಅಭಿವೃದ್ಧಿಯಲ್ಲಿ ಜಾಗತಿಕ ಸಹಯೋಗದ ಅವಕಾಶಗಳನ್ನು ಹೆಚ್ಚಿಸುತ್ತದೆ. ವೈಜ್ಞಾನಿಕವಾಗಿ ನುರಿತ ಯುವ ಪೀಳಿಗೆಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ.

    ಕೋವಿಡ್ ಲಸಿಕೆ ಸಾಧನೆ
    ಕೋವಿಡ್-19 ಲಸಿಕೆ ಸಂಶೋಧನೆಯಲ್ಲಿ ಭಾರತವು ಪ್ರಮುಖ ಪಾತ್ರವನ್ನು ವಹಿಸಿದೆ. ಲಸಿಕೆಗಳ ವಿಶ್ವದ ಅತಿದೊಡ್ಡ ತಯಾರಕರು ಮತ್ತು ರಫ್ತುದಾರರಲ್ಲಿ ಒಂದಾಗಿ ಭಾರತ ಹೊರಹೊಮ್ಮಿದೆ. 2021 ರ ಅಂತ್ಯದ ವೇಳೆಗೆ ಭಾರತವು 90 ಕ್ಕೂ ಹೆಚ್ಚು ದೇಶಗಳಿಗೆ 70 ಮಿಲಿಯನ್ ಲಸಿಕೆ ಡೋಸ್‌ಗಳನ್ನು ಪೂರೈಸಿದೆ. ಫೆಬ್ರವರಿ 2022 ರ ವೇಳೆಗೆ 1.7 ಶತಕೋಟಿ ಡೋಸ್‌ಗಳನ್ನು ನಿರ್ವಹಿಸುವ ಮೂಲಕ ದೇಶವು ಅಭೂತಪೂರ್ವ ವ್ಯಾಕ್ಸಿನೇಷನ್ ಡ್ರೈವ್ ಕೈಗೊಂಡಿತು. ಜಾಗತಿಕ ಆರೋಗ್ಯ ಸವಾಲುಗಳನ್ನು ಎದುರಿಸಲು ಭಾರತ ತನ್ನ ಸಾಮರ್ಥ್ಯ ಮತ್ತು ಬದ್ಧತೆಯನ್ನು ಪ್ರದರ್ಶಿಸಿತು.

    ಆಧುನಿಕ ಭಾರತವನ್ನು ರೂಪಿಸುವಲ್ಲಿ ತಂತ್ರಜ್ಞಾನವು ಪ್ರಬಲ ಶಕ್ತಿಯಾಗಿದೆ. ಆಡಳಿತ ಮತ್ತು ಶಿಕ್ಷಣದಿಂದ ಹಿಡಿದು ಆರೋಗ್ಯ ಮತ್ತು ಕೃಷಿಯವರೆಗಿನ ಕ್ಷೇತ್ರಗಳಾದ್ಯಂತ ಇದರ ಪರಿವರ್ತಕ ಪರಿಣಾಮವು ಸ್ಪಷ್ಟವಾಗಿ ಗೋಚರಿಸುತ್ತದೆ. ಭಾರತವು ತನ್ನ ಡಿಜಿಟಲ್ ಪ್ರಯಾಣವನ್ನು ಮುಂದುವರೆಸುತ್ತಿರುವಾಗ, ಡೇಟಾ ಗೌಪ್ಯತೆಯನ್ನು ಖಚಿತಪಡಿಸುವುದು ಮತ್ತು ಎಲ್ಲಾ ನಾಗರಿಕರ ಅನುಕೂಲಕ್ಕಾಗಿ ತಂತ್ರಜ್ಞಾನದ ಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಗತ್ಯವಾಗಿದೆ.

  • ಏನಿದು ಡೀಪ್‌ಫೇಕ್‌ ತಂತ್ರಜ್ಞಾನ? ಹೇಗೆ ಮಾಡುತ್ತಾರೆ? – ನೀವು ತಿಳ್ಕೋಳ್ಳಲೇಬೇಕು

    ಏನಿದು ಡೀಪ್‌ಫೇಕ್‌ ತಂತ್ರಜ್ಞಾನ? ಹೇಗೆ ಮಾಡುತ್ತಾರೆ? – ನೀವು ತಿಳ್ಕೋಳ್ಳಲೇಬೇಕು

    ನವದೆಹಲಿ: ಟಾಲಿವುಡ್‌ನಲ್ಲಿ ಮಾತ್ರವಲ್ಲದೇ ಬಾಲಿವುಡ್‌ನಲ್ಲಿಯೂ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಸಖತ್ತಾಗಿ ಮಿಂಚುತ್ತಿದ್ದು ಅವರಿಗೆ ಸಂಬಂಧಿಸಿದ ಯಾವುದೇ ಫೋಟೋ, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಡೀಪ್‌ನೆಕ್ ಬ್ಲಾಕ್ ಡ್ರೆಸ್‌ನಲ್ಲಿದ್ದ ಯುವತಿಯೊಬ್ಬರ ವಿಡಿಯೋವನ್ನು ಥೇಟ್ ರಶ್ಮಿಕಾ ಮಂದಣ್ಣ ಅವರಂತೆ ಮಾರ್ಫ್ ವಿಡಿಯೋ ಸೃಷ್ಟಿಸಿದ್ದಾರೆ. ವಿಡಿಯೋದಲ್ಲಿರುವುದು ರಶ್ಮಿಕಾ ಅಲ್ಲ, ಜರಾ ಪಟೇಲ್ ಎನ್ನುವುದು ಗೊತ್ತಾಗಿದೆ. ಡೀಪ್‌ಫೇಕ್ ತಂತ್ರಜ್ಞಾನ (Deepfake Technology) ಬಳಸಿ ರಶ್ಮಿಕಾ ಹೆಸರಿಗೆ ಮಸಿ ಬಳಿಯಲು ಕಿಡಿಗೇಡಿಗಳು ಯತ್ನಿಸಿದ್ದಕ್ಕೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

    ಸೂಪರ್ ಸ್ಟಾರ್, ನಟ ಅಮಿತಾಬ್ ಕೂಡ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಬೆನ್ನಲ್ಲೇ ಈ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದೊಂದು ಅತ್ಯಂತ ಅಪಾಯಕಾರಿ ಕೃತ್ಯ. ಇಂತಹ ಮಾರ್ಫಿಂಗ್ ವಿಡಿಯೋಗಳ ನಿಯಂತ್ರಣ ಸಾಮಾಜಿಕ ಜಾಲತಾಣಗಳ (Social Media) ಹೊಣೆ. ಅಪ್‌ಲೋಡ್ ಆದ 36 ಗಂಟೆಗಳಲ್ಲಿ ಇವುಗಳನ್ನು ತೊಲಗಿಸದಿದ್ದರೆ ಅಂತಹ ಸಾಮಾಜಿಕ ಜಾಲತಾಣವನ್ನು ಕೋರ್ಟ್‌ಗೆ ಎಳೆಯಬಹುದು ಎಂದು ಸ್ಪಷ್ಟಪಡಿಸಿದೆ.  ಇದನ್ನೂ ಓದಿ: ರಶ್ಮಿಕಾ ಅರೆಬೆತ್ತಲೆ ಫೇಕ್ ವಿಡಿಯೋ: ಕಿಡಿಗೇಡಿಗಳಿಗೆ ರಾಜೀವ್‌ ಚಂದ್ರಶೇಖರ್‌ ಖಡಕ್‌ ವಾರ್ನಿಂಗ್‌

    ಏನಿದು ಡೀಪ್‌ಫೇಕ್?
    ಯಾರದ್ದೋ ದೇಹಕ್ಕೆ ಯಾರದ್ದೋ ತಲೆಯನ್ನು ಫೋಟೋ ಎಡಿಟಿಂಗ್‌ ಟೂಲ್‌ ಮೂಲಕ ಜೋಡಿಸುವುದು ಹಳೇಯ ವಿಚಾರ. ಈ ಫೋಟೋಗಳನ್ನು ನೋಡುವಾಗ ಸ್ವಲ್ಪವಾದರೂ ಅನುಮಾನ ಬರುತ್ತದೆ. ಆದರೆ ಡೀಪ್‌ ಫೇಕ್‌ ತಂತ್ರಜ್ಞಾನದಲ್ಲಿ ಯಾವುದೇ ಅನುಮಾನ ಬಾರದಂತೆ ಫೋಟೋ ಅಲ್ಲ ವಿಡಿಯೋವನ್ನೇ ಸೃಷ್ಟಿ ಮಾಡಲಾಗುತ್ತದೆ. ವಿಡಿಯೋ ಎಷ್ಟು ನೈಜತೆ ಇರುತ್ತದೆ ಅಂದರೆ ವ್ಯಕ್ತಿಯ ದೇಹಕ್ಕೂ ಮತ್ತು ಮುಖಕ್ಕೆ ನೇರ ಸಂಬಂಧ ಇದ್ದಂತೆ ಇರುತ್ತದೆ. ಮೂಲ ವಿಡಿಯೋ ಬೇರೆ ಆಗಿದ್ದರೂ ಈ ವ್ಯಕ್ತಿಯೇ ವಿಡಿಯೋದಲ್ಲಿ ನಟಿಸುತ್ತಿದ್ದಂತೆ ಬಿಂಬಿಸಲಾಗುತ್ತದೆ.

    ಆರ್ಟಿಫಿಷಿಯಲ್ ಇಂಟೆಲಿಜೆನ್ಸ್+ಮೆಷಿನ್ ಲರ್ನಿಂಗ್ ಸಹಾಯದಿಂದ ಮಾರ್ಫಿಂಗ್ ವಿಡಿಯೋ, ಫೋಟೋಗಳು ಸೃಷ್ಟಿ ಮಾಡುವುದಕ್ಕೆ ಡೀಪ್‌ಫೇಕ್‌ ಎಂದು ಕರೆಯಲಾಗುತ್ತದೆ. ಒಬ್ಬ ಒಬ್ಬ ವ್ಯಕ್ತಿಯಂತೆಯೇ ಸೇಮ್ ಟು ಸೇಮ್ ಡೂಪ್ ಸೃಷ್ಟಿಸಬಹುದು. ಥಟ್ಟನೇ ನೋಡಿದಾಗ ಯಾವುದೇ ವ್ಯತ್ಯಾಸವೇ ಗೊತ್ತಗುವುದಿಲ್ಲ. ಮೃತ ನಟನನ್ನು ಮತ್ತೆ ಸ್ಕ್ರೀನ್‌ ಮೇಲೆ ಮೇಲೆ ಈ ತಂತ್ರಜ್ಞಾನದ ಸಹಾಯದಿಂದ ತೋರಿಸಬಹುದು.

     

    ಹಿಂದಿ, ಇಂಗ್ಲೀಷ್ ಮಾತ್ರ ಬರುವ ವ್ಯಕ್ತಿಗೆ ಕನ್ನಡದಲ್ಲಿ ಮಾತನಾಡಿದಂತೆಯೂ ತೋರಿಸಬಹುದು. ಈ ತಂತ್ರಜ್ಞಾನದಿಂದ ಎಷ್ಟು ಲಾಭ ಇದೆಯೋ ಅಷ್ಟೇ ನಷ್ಟವಿದೆ. ದುರ್ಬಳಕೆ ಕೂಡ ಹೆಚ್ಚಾಗುತ್ತಿದೆ. ಈ ಹಿಂದೆ ಡೀಪ್ ಫೇಕ್ ಹಾವಳಿಗೆ ಹಾಲಿವುಡ್ ನಟ ಟಾಮ್ ಹ್ಯಾಂಕ್ಸ್ ತುತ್ತಾಗಿದ್ದರು. ಡೀಪ್‌ಫೇಕ್ ಬಳಸಿ ಟಾಮ್ ಹ್ಯಾಂಕ್ಸ್ ಯಾವುದೇ ಜಾಹೀರಾತಿನಲ್ಲಿ ನಟಿಸಿದಂತೆ ಮಾಡಲಾಗಿತ್ತು.

  • ಚಿಪ್ ಘಟಕ ತೆರೆಯಲ್ಲ- ವೇದಾಂತ ಜೊತೆಗಿನ 1.61 ಲಕ್ಷ ಕೋಟಿ ಒಪ್ಪಂದವನ್ನ ರದ್ದುಗೊಳಿಸಿದ ಫಾಕ್ಸ್‌ಕಾನ್‌

    ಚಿಪ್ ಘಟಕ ತೆರೆಯಲ್ಲ- ವೇದಾಂತ ಜೊತೆಗಿನ 1.61 ಲಕ್ಷ ಕೋಟಿ ಒಪ್ಪಂದವನ್ನ ರದ್ದುಗೊಳಿಸಿದ ಫಾಕ್ಸ್‌ಕಾನ್‌

    ನವದೆಹಲಿ: ಭಾರತದ ವೇದಾಂತ (Vedanta) ಕಂಪನಿ ಜೊತೆಗೂಡಿ ಗುಜರಾತ್‌ನಲ್ಲಿ 1.61 ಲಕ್ಷ ಕೋಟಿ ರೂ.(19 ಶತಕೋಟಿ ಡಾಲರ್‌) ಹೂಡಿಕೆಯೊಂದಿಗೆ ಆರಂಭವಾಗಬೇಕಿದ್ದ ಸೆಮಿಕಂಡಕ್ಟರ್‌ (Semiconductor) ಘಟಕದ ಒಪ್ಪಂದವನ್ನ ತೈವಾನ್‌ನ ಫಾಕ್ಸ್‌ಕಾನ್‌ (Foxconn) ಕಂಪನಿ ರದ್ದು ಮಾಡಿದೆ.

    ಭಾರತದಲ್ಲಿ ವೇದಾಂತ ಜೊತೆ ಜಂಟಿ ಉದ್ಯಮವಾಗಿ ಸೆಮಿ ಕಂಡಕ್ಟರ್‌ ತಯಾರಿಸುವುದಿಲ್ಲ ಎಂದು ಫಾಕ್ಸ್‌ಕಾನ್‌ ಹೇಳಿದ ನಂತರ ಪರಸ್ಪರ ಉದ್ಯಮವನ್ನು ಕೊನೆಗೊಳಿಸುವ ನಿರ್ಧಾರವನ್ನ ಎರಡೂ ಸಂಸ್ಥೆಗಳಿಂದ ಪ್ರಕಟಿಸಲಾಗಿದೆ. ಇದನ್ನೂ ಓದಿ: Rafale Deal: 90,000 ಕೋಟಿ ವೆಚ್ಚ, 26 ರಫೇಲ್‌ ಖರೀದಿಸಲು ಭಾರತ ಸರ್ಕಾರ ಮೆಗಾ ಪ್ಲ್ಯಾನ್‌!

    ಫಾಕ್ಸ್‌ಕಾನ್‌ ಮತ್ತು ವೇದಾಂತ ಕಂಪನಿ ಗುಜರಾತ್‌ನಲ್ಲಿ 1.61 ಲಕ್ಷ ಕೋಟಿ ರೂ. ಹೂಡಿಕೆಯ ಸೆಮಿಕಂಡಕ್ಟರ್‌ ಘಟಕ (Semiconductor Unit) ಸ್ಥಾಪನೆ ಮಾಡುವುದಾಗಿ ಒಪ್ಪಂದ ಮಾಡಿಕೊಂಡಿದ್ದವು. ಎರಡೂ ಕಂಪನಿಗಳು ಜಂಟಿಯಾಗಿ ಸೆಮಿಕಂಡಕ್ಟರ್ ಮತ್ತು ಡಿಸ್ಪ್ಲೇ ಉತ್ಪಾದನಾ ಘಟಕಗಳನ್ನು ಸ್ಥಾಪಿಸಬೇಕಿತ್ತು. ಇದೀಗ ಒಪ್ಪಂದ ರದ್ದಾಗಿದ್ದು, ಭಾರತದ ಸೆಮಿ ಕಂಡಕ್ಟರ್‌ ಕ್ಷೇತ್ರಕ್ಕೆ ಭಾರೀ ಪೆಟ್ಟು ಬಿದ್ದಿದೆ.

    ಈ ಬಗ್ಗೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar) ಪ್ರತಿಕ್ರಿಯಿಸಿ, ಜಂಟಿ ಉದ್ಯಮದ ಸ್ಥಗಿತವು ಭಾರತವನ್ನು ಸೆಮಿಕಂಡಕ್ಟರ್ ಚಿಪ್ ಹಬ್ ಮಾಡುವ ನಮ್ಮ ಗುರಿಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸೆಮಿಕಂಡಕ್ಟರ್‌ ಘಟಕ ಸ್ಥಾಪನೆಗೆ ಕರ್ನಾಟಕವನ್ನು ಬಿಟ್ಟು ಗುಜರಾತ್‌ ಆಯ್ಕೆ ಮಾಡಿದ್ದು ಯಾಕೆ – ಪ್ರಶ್ನೆಗೆ ಉತ್ತರ ಕೊಟ್ಟ ವೇದಾಂತ ಕಂಪನಿ

    ಈ ನಡುವೆ ಸೆಮಿಕಂಡಕ್ಟರ್‌ಗಳ ಪೂರೈಕೆಗೆ ಸ್ಥಳೀಯ ಪಾಲುದಾರರ ಮೂಲಕ ವ್ಯವಸ್ಥೆ ಮಾಡುವುದಾಗಿ ತಿಳಿಸಿದೆ. ಒಪ್ಪಂದವನ್ನು ಮುರಿಯಲು ಫಾಕ್ಸ್‌ಕಾನ್ ಕಾರಣವನ್ನು ನೀಡಿಲ್ಲ. ಜಂಟಿ ಉದ್ಯಮದಿಂದ ಬೇರೆ ಬೇರೆಯಾದ ನಂತರ ವೇದಾಂತ ಕಂಪನಿ ಸೆಮಿಕಂಡಕ್ಟರ್‌ ಪ್ಲ್ಯಾಂಟ್‌ ಸ್ಥಾಪಿಸಲು ಇತರ ಕಂಪನಿಗಳೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಹೇಳಲಾಗಿದೆ.

    ಕಳೆದ ವರ್ಷ ವೇದಾಂತ ಲಿಮಿಟೆಡ್‌ (Vedanta Ltd.) ಮತ್ತು ತೈವಾನ್‌ನ ಫಾಕ್ಸ್‌ಕಾನ್‌ (Foxconn) ಕಂಪನಿಯು ಸೆಮಿಕಂಡಕ್ಟರ್‌ ಘಟಕ ಸ್ಥಾಪನೆಗೆ ಜಾಗ ನೀಡಲು ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಗುಜರಾತ್‌ ಮುಂದಾಗಿದ್ದವು. ರಾಜ್ಯಗಳು ಪೈಪೋಟಿಗೆ ಇಳಿದ ಹಿನ್ನೆಲೆಯಲ್ಲಿ ಕಂಪನಿ ಭಾರೀ ರಿಯಾಯಿಯಿತಿಯನ್ನು ಬಯಸಿತ್ತು. ಮುಖ್ಯವಾಗಿ 1000 ಎಕ್ರೆ ಭೂಮಿಯನ್ನು ಯಾವುದೇ ಶುಲ್ಕವಿಲ್ಲದೇ 99 ವರ್ಷಗಳ ಅವಧಿಗೆ ಗುತ್ತಿಗೆ (Lease) ನೀಡಬೇಕು. ಇದರ ಜೊತೆ 20 ವರ್ಷಗಳ ಅವಧಿಗೆ ನೀರು ಮತ್ತು ವಿದ್ಯುತ್‌ ಅನ್ನು ರಿಯಾಯಿತಿ ದರದಲ್ಲಿ ಒದಗಿಸಬೇಕು ಎಂದು ಬೇಡಿಕೆ ಇಟ್ಟಿತ್ತು. ಈ ಬೇಡಿಕೆಗೆ ಗುಜರಾತ್‌ ಸರ್ಕಾರ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಅಹಮದಾಬಾದ್‌ನಲ್ಲಿ ಹೊಸ ಸೆಮಿಕಂಡಕ್ಟರ್‌ ಮತ್ತು ಡಿಸ್‌ಪ್ಲೇ ಉತ್ಪಾದನಾ ಘಟಕ ಆರಂಭಿಸಲು ಒಪ್ಪಂದ ಮಾಡಿಕೊಳ್ಳಲಾಗಿತ್ತು.

    ಪ್ರಸ್ತುತ ವಿಶ್ವದ ಚಿಪ್‌ ಮಾರುಕಟ್ಟೆಯಲ್ಲಿ ಚೀನಾ ಮತ್ತು ತೈವಾನ್‌ ಕಂಪನಿಗಳೇ ಹೆಚ್ಚು ಪ್ರಾಬಲ್ಯ ಹೊಂದಿದೆ. ಭಾರತವನ್ನ ಚಿಪ್‌, ಮೊಬೈಲ್‌ ಉತ್ಪಾದನಾ ಹಬ್‌ ದೇಶವನ್ನಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಪ್ರೊಡಕ್ಷನ್-ಲಿಂಕ್ಡ್ ಇನ್ಸೆಂಟಿವ್ಸ್ (ಪಿಎಲ್ಐ) ಯೋಜನೆಯನ್ನು ಆರಂಭಿಸಿತ್ತು. ಉದ್ಯೋಗ ಸೃಷ್ಟಿಗಾಗಿ ಆರಂಭಿಸಲಾದ ಈ ಯೋಜನೆ ಅಡಿ ಮುಂದಿನ 5 ವರ್ಷದಲ್ಲಿ ನಿಗದಿತ ವೆಚ್ಚದಲ್ಲಿ ಮೊಬೈಲ್ ಫೋನ್ ಹಾಗೂ ಬಿಡಿಭಾಗಗಳನ್ನ ಉತ್ಪಾದಿಸುವ ಗುರಿಯನ್ನು ಹಾಕಿಕೊಂಡಿತ್ತು.

    2020ರ ವೇಳೆಗೆ ಕೇವಲ 1.12 ಲಕ್ಷ ಕೋಟಿ ರೂ. ನಷ್ಟಿದ್ದ ಭಾರತದ ಸೆಮಿಕಂಡಕ್ಟರ್‌ ವಲಯ 2026ರ ವೇಳೆಗೆ 5 ಲಕ್ಷ ಕೋಟಿ ರೂ.ಗೆ ತಲುಪುವ ನಿರೀಕ್ಷೆಯನ್ನು ಹೊಂದಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗಳೂರು ತಂತ್ರಜ್ಞಾನ, ನಾವೀನ್ಯತೆ, ನಾಯಕತ್ವದ ತವರು: ಮೋದಿ

    ಬೆಂಗಳೂರು ತಂತ್ರಜ್ಞಾನ, ನಾವೀನ್ಯತೆ, ನಾಯಕತ್ವದ ತವರು: ಮೋದಿ

    ಬೆಂಗಳೂರು: ಭಾರತದಲ್ಲಿ ಮೂಲಸೌಲಭ್ಯ ಅಭಿವೃದ್ಧಿಗೆ ಮುಂಬರುವ ದಿನಗಳಲ್ಲಿ 100 ಟ್ರಿಲಿಯನ್ ಡಾಲರ್ (7,539 ಲಕ್ಷ ಕೋಟಿ)  ನಷ್ಟು ಅಗಾಧ ಮೊತ್ತವನ್ನು ಹೂಡಲಾಗುವುದು. ದೇಶದಲ್ಲಿ (India) ಬಂಡವಾಳ ಹೂಡಿಕೆದಾರರ ಪಾಲಿಗೆ ಹಿಂದಿನ ಕೆಂಪುಪಟ್ಟಿಯ ಸಮಸ್ಯೆ ಕೊನೆಗೊಂಡಿದ್ದು, ಈಗ ರತ್ನಗಂಬಳಿಯ ಸ್ವಾಗತವಿದೆ. ಅದರಲ್ಲೂ ಬೆಂಗಳೂರು (Bengaluru) ತಂತ್ರಜ್ಞಾನ (Technology), ನಾವೀನ್ಯತೆ (Innovation) ಮತ್ತು ಸಮರ್ಥ ನಾಯಕತ್ವದ (Leadership) ತವರಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

    25ನೇ ಪ್ರತಿಷ್ಠಿತ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯನ್ನು (Bengaluru Tech Summit) ಉದ್ದೇಶಿಸಿ ವರ್ಚುವಲ್ ಮೂಲಕ ಮಾತನಾಡಿದ ಅವರು, ತಂತ್ರಜ್ಞಾನಕ್ಕೆ ಮಾನವೀಯ ಮತ್ತು ಪ್ರಜಾಸತ್ತಾತ್ಮಕ ಸ್ಪರ್ಶವನ್ನು ನೀಡುತ್ತಲೇ ಇರುವುದು ಭಾರತದ ಅನನ್ಯ ಸಾಧನೆಯಾಗಿದೆ. ಅದರಲ್ಲೂ ತಂತ್ರಜ್ಞಾನವು ನಮಗೆ ಬಡತನದ ವಿರುದ್ಧದ ಹೋರಾಟಕ್ಕೆ ಶಕ್ತಿಶಾಲಿ ಅಸ್ತ್ರವಾಗಿದೆ ಎಂದರು. ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯು ಭಾರತೀಯ ಸಾಫ್ಟ್‌ವೇರ್‌ ತಂತ್ರಜ್ಞಾನ ಪಾರ್ಕ್‍ಗಳ ಒಕ್ಕೂಟದ ಸಹಯೋಗದಲ್ಲಿ ಈ ಸಮಾವೇಶವನ್ನು ಏರ್ಪಡಿಸಿದೆ. ಹೆಲ್ತ್ ಟೆಕ್, ಫಿನ್ ಟೆಕ್, ಎಡುಟೆಕ್ ಸೇರಿದಂತೆ ಎಲ್ಲ ರಂಗಗಳನ್ನೂ ಭಾರತೀಯರು ಜಾಗತಿಕ ಮಟ್ಟದಲ್ಲಿ ಮುನ್ನಡೆಸುತ್ತಿದ್ದಾರೆ. ಯುವಶಕ್ತಿಯಿಂದ ಕೂಡಿರುವ ಸಮಕಾಲೀನ ಜಗತ್ತಿನಲ್ಲಿ ಪ್ರತಿಭೆಯ ಜಾಗತೀಕರಣ ನಡೆಯುತ್ತಿದೆ. ಭಾರತದಲ್ಲಿ 81 ಸಾವಿರ ನವೋದ್ಯಮಗಳಿದ್ದು, ಯೂನಿಕಾರ್ನ್‍ಗಳಲ್ಲಿ ಪ್ರಪಂಚದ 3ನೇ ಅತಿದೊಡ್ಡ ಹಬ್ ಆಗಿದೆ. ಜೊತೆಗೆ, ಜಾಗತಿಕ ನಾವೀನ್ಯತಾ ಸೂಚ್ಯಂಕದಲ್ಲಿ ಭಾರತದ ಸ್ಥಾನಮಾನವು ಕಳೆದ ಎಂಟು ವರ್ಷಗಳಲ್ಲಿ 40 ಸ್ಥಾನಗಳಷ್ಟು ಮೇಲಕ್ಕೆ ಜಿಗಿದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕನ್ನಡದಲ್ಲಿ ಮಾತಾಡಿ, ಬೆಂಗಳೂರು ಹೊಗಳಿದ ಪ್ರಧಾನಿ ಮೋದಿ

    ತಂತ್ರಜ್ಞಾನದ ಮೂಲಕ ದೇಶದಲ್ಲಿ ಸಮಾನತೆ ಮತ್ತು ಸಬಲೀಕರಣಗಳನ್ನು ಸಾಧಿಸಲಾಗುತ್ತಿದೆ. ಜೊತೆಗೆ, ಭ್ರಷ್ಟಾಚಾರಕ್ಕೂ ಇದು ತೆರೆ ಎಳೆದಿದೆ. ಭಾರತವಂತೂ ಈಗ ಮಾಹಿತಿ ಸೂಪರ್ ಹೈವೇ ಆಗಿದೆ. ಕೊರೊನಾ (Corona) ಪಿಡುಗಿನ ವಿರುದ್ಧ ಹೋರಾಟ, ಶಿಕ್ಷಣ, ನೇರ ನಗದು ವರ್ಗಾವಣೆ, ಜನ್‍ಧನ್, ಆಧಾರೆ, ಇ-ಮಾರ್ಕೆಟ್ (E-Market) ಎಲ್ಲವನ್ನೂ ಭಾರತವು ತಂತ್ರಜ್ಞಾನದ ಸಮರ್ಥ ಬಳಕೆಯ ಮೂಲಕ ಯಶಸ್ವಿಯಾಗಿ ಕೈಗೊಂಡಿದೆ. ಹೂಡಿಕೆದಾರರ ನಂಬಿಕೆ ಮತ್ತು ದೇಶದಲ್ಲಿರುವ ತಂತ್ರಜ್ಞಾನದ ಶಕ್ತಿ ಎರಡೂ ಸೇರಿದರೆ, ಎಲ್ಲ ಸಮಸ್ಯೆಗಳಿಗೂ ಪರಿಹಾರ ಸಾಧ್ಯವಾಗಲಿದೆ. ಇದು ಸಣ್ಣಪುಟ್ಟ ವ್ಯಾಪಾರಿಗಳಿಗೆ ಅನುಕೂಲಕರವಾಗಿದ್ದು, ದೊಡ್ಡ ಗ್ರಾಹಕರನ್ನು ಸೃಷ್ಟಿಸಿದೆ. ಈಗ ಗ್ರಾಮೀಣ ಭಾಗಗಳಲ್ಲಿ ಬ್ರಾಡ್‍ಬ್ಯಾಂಡ್ ಕ್ರಾಂತಿ ನಡೆಯುತ್ತಿದ್ದು, ಮೊಬೈಲ್‍ನ ವ್ಯಾಪಕ ಬಳಕೆಯಿಂದಾಗಿ ಪ್ರಪಂಚವೇ ಬೆರಗಿನಿಂದ ನೋಡುತ್ತಿರುವಂಥ ಡಿಜಿಟಲ್ ಆರ್ಥಿಕತೆ ನಮ್ಮಲ್ಲಿ ರೂಪುಗೊಂಡಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ‘ನಾನು ಮೋದಿ ಭಕ್ತ’ ಎಂದು ಬಹಿರಂಗವಾಗಿ ಘೋಷಿಸಿದ ನಟ ಅನಂತ್ ನಾಗ್

    ತಂತ್ರಜ್ಞಾನದ ಅಳವಡಿಕೆ ಮೂಲಕ ನಾವು 200 ಕೋಟಿಗೂ ಹೆಚ್ಚು ಕೊರೊನಾ ಲಸಿಕೆ ನೀಡಿದ್ದೇವೆ. ಹಾಗೆಯೇ 200 ದಶಲಕ್ಷ ಕುಟುಂಬಗಳ 600 ದಶಲಕ್ಷ ಜನರಿಗೆ ಆಯುಷ್ಮಾನ್ ಭಾರತ ಯೋಜನೆಯ ಮೂಲಕ ವೈದ್ಯಕೀಯ ಚಿಕಿತ್ಸೆ ಸಿಗುವಂತೆ ಮಾಡಿದ್ದೇವೆ. ನಮ್ಮಲ್ಲಿ ಸಿಗುತ್ತಿರುವಷ್ಟು ಅಗ್ಗದ ದರದಲ್ಲಿ ಡೇಟಾ ಎಲ್ಲೂ ಸಿಗುತ್ತಿಲ್ಲ. ಒಟ್ಟಿನಲ್ಲಿ ತಂತ್ರಜ್ಞಾನದ ಮೂಲಕ ಭಾರತವು ಬೇರಾವ ದೇಶಕ್ಕೂ ಸಾಧ್ಯವಾಗದಂತಹ ಸಾಧನೆಗಳನ್ನು ಮಾಡುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಇನ್ಮುಂದೆ ಟೋಲ್‌ಗಳಲ್ಲಿ ವಾಹನ ನಿಲ್ಲಿಸುವಂತಿಲ್ಲ- ಟೋಲ್ ಸಂಗ್ರಹಕ್ಕೆ ವಿಶೇಷ ತಂತ್ರಜ್ಞಾನ ಅಳವಡಿಕೆಗೆ ಚಿಂತನೆ

    ಇನ್ಮುಂದೆ ಟೋಲ್‌ಗಳಲ್ಲಿ ವಾಹನ ನಿಲ್ಲಿಸುವಂತಿಲ್ಲ- ಟೋಲ್ ಸಂಗ್ರಹಕ್ಕೆ ವಿಶೇಷ ತಂತ್ರಜ್ಞಾನ ಅಳವಡಿಕೆಗೆ ಚಿಂತನೆ

    ನವದೆಹಲಿ: ಸಾಮಾನ್ಯವಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ (National Highway) ಟೋಲ್ ಪ್ಲಾಜಾಗಳನ್ನು (Toll Plaza) ನೋಡುತ್ತವೆ. ಅಲ್ಲಿ ಟೋಲ್ (Toll) ಪಾವತಿಗಾಗಿ ವಾಹನಗಳು ಸಾಲುಗಟ್ಟಿ ನಿಂತಿರುತ್ತವೆ. ಇದರಿಂದ ವಾಹನ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಕಿರಿಕಿರಿ ಆಗುವುದುಂಟು. ಆದರೆ ಭವಿಷ್ಯದಲ್ಲಿ ಈ ಟೋಲ್ ಪ್ಲಾಜಾಗಳಿಂದ ಕಿರಿಕಿರಿ ಆಗುವುದೇ ಇಲ್ಲ.

    ಈ ಕುರಿತು ಮಾತನಾಡಿರುವ ಕೇಂದ್ರ ನಿತಿನ್ ಗಡ್ಕರಿ (Nitin Gadkari), ಶೀಘ್ರದಲ್ಲೇ ಸ್ವಯಂಚಾಲಿತವಾಗಿ ವಾಹನ ಸಂಖ್ಯೆಗಳನ್ನು ಗುರುತಿಸುವ ವ್ಯವಸ್ಥೆ ಅಳವಡಿಸಲಾಗುವುದು. ಸ್ವಯಂ ಚಾಲಿತವಾಗಿ ವಾಹನ ಸಂಖ್ಯೆಗಳನ್ನು ಗುರುತಿಸಲು ಕೇಂದ್ರ ಸರ್ಕಾರ ಈಗಾಗಲೇ ಪ್ರಾಯೋಗಿಕ ಯೋಜನೆಗಳನ್ನು ನಡೆಸುತ್ತಿದೆ. ಇದು ವಾಹನ ಮಾಲೀಕರ ಬ್ಯಾಂಕ್ ಖಾತೆಗಳಿಂದ (Bank Account) ಶುಲ್ಕವನ್ನು ಖಡಿತಗೊಳಿಸಲು ಅನುವು ಮಾಡಿಕೊಡುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ: ಆರಗ ಜ್ಞಾನೇಂದ್ರ

    ಫಾಸ್ಟ್ಯಾಗ್‌ಗಳನ್ನು (FASTags) ಪರಿಚಯಿಸಿದ ನಂತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ(NHAI) ಟೋಲ್ ಆದಾಯವು ವರ್ಷಕ್ಕೆ 15 ಸಾವಿರ ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದೆ. ಅದಕ್ಕಾಗಿ ಈಗ ಆಟೋ ಮೊಬೈಲ್ ನಂಬರ್‌ಪ್ಲೇಟ್(ಸ್ವಯಂಚಾಲಿನ ನಂಬರ್‌ಪ್ಲೇಟ್ ರೀಡರ್ ಕ್ಯಾಮೆರಾ) (Automatic Number Plate Reader Cameras) ತ್ರಜ್ಞಾನವನ್ನು ಪರಿಚಯಿಸಲಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪೇಜಾವರ ಶ್ರೀಗಳ ಎದೆ ಮೇಲೆ ಕಾಲಿಟ್ಟು ಸೊಪ್ಪು ತಿಂದ ಆಡು

    2018-19ರಲ್ಲಿ ಟೋಲ್ ಪ್ಲಾಜಾಗಳಲ್ಲಿ (Toll Plaza) ವಾಹನಗಳು ಕಾಯುತ್ತಿದ್ದ ಸಮಯ ಸರಿಸುಮಾರು 8 ನಿಮಿಷಗಳಿತ್ತು. 2020 ರಿಂದ 2022ರ ಅವಧಿಯಲ್ಲಿ ಫಾಸ್ಟ್ಯಾಗ್‌ಗಳನ್ನು ಪರಿಚಯಿಸಿದ ನಂತರ ವಾಹನಗಳ ಸರಾಸರಿ ಸಮಯವು 47 ಸೆಕೆಂಡುಗಳಿಗೆ ಇಳಿಕೆಯಾಯಿತು. ಹೀಗಿದ್ದೂ ಕೆಲವು ನಗರಗಳಲ್ಲಿ ಸಂದಿಗ್ಧ ಸಮಯಗಳಲ್ಲಿ ಹೆಚ್ಚಿನ ವಿಳಂಬವಾಗುತ್ತಿವೆ. ಅದಕ್ಕಾಗಿ ಸಂಪೂರ್ಣ ಬದಲಿ ವ್ಯವಸ್ಥೆ ಕಲ್ಪಿಸಲು ಸ್ವಯಂಚಾಲಿನ ಟೋಲ್ ಸಂಗ್ರಹಿಸುವ ವಿಧಾನವನ್ನು ಪರಿಚಯಿಸಲಾಗುತ್ತಿದೆ ಎಂದಿದ್ದಾರೆ.

    ಸರ್ಕಾರ ಒಟ್ಟು ಎರಡು ರೀತಿಯ ಆಯ್ಕೆಗಳನ್ನು ಎದುರುನೋಡುತ್ತಿದೆ. ಮೊದಲಿಗೆ ಟೋಲ್ ಅನ್ನು ನೇರವಾಗಿ ವಾಹನ ಮಾಲೀಕರ ಬ್ಯಾಂಕ್ ಖಾತೆಯಿಂದ ಕಡಿತಗೊಳಿಸುವುದು, 2ನೇ ಅಯ್ಕೆಯಾಗಿ ಕಾರಿನಲ್ಲಿ ಜಿಪಿಎಸ್ ಅಳವಡಿಸಿ ಉಪಗ್ರಹ ಆಧಾರಿತವಾಗಿ ಟೋಲ್ ಸಂಗ್ರಹ ಮಾಡುವ ವಿಧಾನವನ್ನು ಎದುರು ನೋಡುತ್ತಿದೆ. ಉಪಗ್ರಹ ವಿಧಾನ ಅನುಸರಿಸಿದರೆ ಫಾಸ್ಟ್ಯಾಗ್‌ ಬದಲಾಗಿ ಜಿಪಿಎಸ್ ಅಳವಡಿಸಬೇಕಾಗುತ್ತದೆ. ಯಾವ ಆಯ್ಕೆಯನ್ನು ಈಗಲೇ ಅಂತಿಮಗೊಳಿಸಿಲ್ಲ. ಆದರೆ ಟೋಲ್ ಪ್ಲಾಜಾಗಳಿಂದ ಮುಕ್ತಿ ನೀಡುವುದು ಖಚಿತ. ಸ್ವಯಂ ಚಾಲಿತ ಟೋಲ್ ಸಂಗ್ರಹಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪರ್ಫಾರ್ಮ್ಯಾಕ್ಸ್ ಬ್ರ್ಯಾಂಡ್‌ಗೆ ಜಸ್ಪ್ರೀತ್‌ ಬುಮ್ರಾ ಬ್ರ್ಯಾಂಡ್‌ ಅಂಬಾಸಿಡರ್‌

    ಪರ್ಫಾರ್ಮ್ಯಾಕ್ಸ್ ಬ್ರ್ಯಾಂಡ್‌ಗೆ ಜಸ್ಪ್ರೀತ್‌ ಬುಮ್ರಾ ಬ್ರ್ಯಾಂಡ್‌ ಅಂಬಾಸಿಡರ್‌

    – ಭಾರತದ ಪ್ರಮುಖ ಕ್ರೀಡಾ ಉಡುಪು ಬ್ರ್ಯಾಂಡ್‌ ಆಗಿಸುವ ಗುರಿ

    ಮುಂಬೈ: ರಿಲಯನ್ಸ್‌ ರಿಟೇಲ್‌ನ ಅಧಿಕ ಕಾರ್ಯಕ್ಷಮತೆಯ ಮತ್ತು ತಾಂತ್ರಿಕವಾಗಿ ಸುಧಾರಿತ ಕ್ರೀಡಾ ಉಡುಪು ಬ್ರ್ಯಾಂಡ್‌ ಪರ್ಫಾರ್ಮ್ಯಾಕ್ಸ್‌ ಗೆ ಸ್ಟಾರ್ ಕ್ರಿಕೆಟಿಗ ಹಾಗೂ ಭಾರತದ ಪ್ರಮುಖ ಬೌಲರ್ ಜಸ್ಪ್ರೀತ್‌ ಬುಮ್ರಾ ಅವರನ್ನು ಬ್ರ್ಯಾಂಡ್‌ ಅಂಬಾಸಿಡರ್ ಆಗಿ ನೇಮಿಸಿದೆ.

    ಪರ್ಫಾರ್ಮ್ಯಾಕ್ಸ್‌ ಭಾರತೀಯ ಬ್ರ್ಯಾಂಡ್ ಆಗಿದ್ದು, ದೇಶದ ನಂ.1 ಕ್ರೀಡಾ ಉಡುಪು ಬ್ರ್ಯಾಂಡ್ ಆಗಿ ಹೊರಹೊಮ್ಮಿಸುವ ಗುರಿ ಹೊಂದಿದೆ. ಬುಮ್ರಾ ಬದ್ಥತೆ ಮತ್ತು ಪರಿಣತಿಗೆ ಹೆಸರಾಗಿದ್ದಾರೆ. ಪರ್ಫಾರ್ಮ್ಯಾಕ್ಸ್‌ ಸಹ ಇದೇ ಪರಿಣತಿಗೆ ಹೆಸರಾಗಿದ್ದು, ಬೂಮ್ರಾ ಈ ಬ್ರ್ಯಾಂಡ್‌ಗೆ ಸೂಕ್ತ ವ್ಯಕ್ತಿ ಎಂದು ನಿರ್ಧರಿಸಿದೆ. ಇದನ್ನೂ ಓದಿ: ಇಂಗ್ಲೆಂಡ್‌ ವಿರುದ್ಧ ಬೆಂಕಿ ಬೌಲಿಂಗ್‌ ಇದೀಗ ಬುಮ್ರಾ ಏಕದಿನ ಕ್ರಿಕೆಟ್‌ನ ನಂ.1 ಬೌಲರ್‌

    ಈ ಸಂದರ್ಭದಲ್ಲಿ ಮಾತನಾಡಿದ ರಿಲಯನ್ಸ್‌ ರಿಟೇಲ್‌ನ ಫ್ಯಾಷನ್‌ ಮತ್ತು ಲೈಫ್‌ಸ್ಟೈಲ್‌ನ ಸಿಇಒ ಅಖಿಲೇಶ್‌ ಪ್ರಸಾದ್, ಜಸ್ಪ್ರೀತ್‌ ಬುಮ್ರಾ ಜೊತೆಗೆ ನಮ್ಮ ಸಹಭಾಗಿತ್ವವನ್ನು ಘೋಷಿಸುವುದಕ್ಕೆ ನನಗೆ ಹೆಮ್ಮೆಯಾಗುತ್ತಿದೆ. ಬುಮ್ರಾ ಹಲವು ವರ್ಷಗಳಿಂದಲೂ ಭಾರತ ತಂಡದ ಪ್ರಮುಖ ಫೇಸರ್‌ ಆಗಿ ಕಾಣಿಸಿಕೊಂಡಿದ್ದಾರೆ. ಅದೇ ರೀತಿ ಅಂತಾರಾಷ್ಟ್ರೀಯ ಮಾನ್ಯತೆ ಹೊಂದಿರುವ ಭಾರತದ ನಂ.1 ಕ್ರೀಡಾ ಬ್ರ್ಯಾಂಡ್ ಆಗಿ ಪರ್ಫಾರ್ಮ್ಯಾಕ್ಸ್ ಅನ್ನು ರೂಪಿಸುವ ಧ್ಯೇಯವನ್ನು ನಾವು ಹೊಂದಿದ್ದೇವೆ. ಪರ್ಫಾರ್ಮ್ಯಾಕ್ಸ್‌ ಅನ್ನು ನಮ್ಮ ಗ್ರಾಹಕರಿಗೆ ಒಂದು ಉತ್ತಮ ಮತ್ತು ಆದ್ಯತೆಯ ಬ್ರ್ಯಾಂಡ್ ಆಗಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಡುತ್ತಿದ್ದೇವೆʼಎಂದು ಹೇಳಿದ್ದಾರೆ.

    ಜಸ್ಪ್ರೀತ್‌ ಬುಮ್ರಾ ಮಾತನಾಡಿ, ಕ್ರೀಡಾಪಟುವಾಗಿ ನಾನು ಧರಿಸುವ ಉಡುಪಿನ ಬಗ್ಗೆ ವಿಶೇಷ ಕಾಳಜಿ ವಹಿಸುತ್ತೇನೆ. ಸರಿಯಾಗಿ ಫಿಟ್ ಆಗಿರುವ ಉಡುಪು ಉತ್ತಮ ಆಟವಾಡಲು ನೆರವಾಗುತ್ತದೆ. ಪರ್ಫಾರ್ಮ್ಯಾಕ್ಸ್‌ನಲ್ಲಿ ತಾಂತ್ರಿಕವಾಗಿ ಸುಧಾರಿತ ಆಕ್ಟಿವ್ ವೇರ್‌ನ ಹಲವು ವಿಧಗಳಿವೆ. ಇವು ಭಾರತದ ಮುಂದಿನ ತಲೆಮಾರಿನ ಅಥ್ಲೀಟ್‌ಗಳಿಗೆ ಉತ್ತಮ ಸಂಗಾತಿಯಾಗಬಲ್ಲವು. ಉತ್ತಮ ಸಾಧನೆ ಮಾಡಬೇಕು ಎಂಬ ನನ್ನ ಧ್ಯೇಯಕ್ಕೂ ಈ ಬ್ರ್ಯಾಂಡ್‌ನ ಧ್ಯೇಯಕ್ಕೂ ಹೊಂದಿಕೆ ಆಗುವುದರಿಂದ ಇದರ ಜೊತೆಗೆ ನಾನು ಗುರುತಿಸಿಕೊಳ್ಳುತ್ತಿರುವುದು ಖುಷಿಯ ಸಂಗತಿʼ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಏಷ್ಯಾಕಪ್ ಟೂರ್ನಿಯಿಂದ ರವೀಂದ್ರ ಜಡೇಜಾ ಔಟ್

    ಜಸ್ಪ್ರೀತ್‌ ಬುಮ್ರಾ ಅವರ ಮೂಲಕ ಗ್ರಾಹಕರನ್ನು ತಲುಪುವ ಜೊತೆಗೆ, ರಿಲಾಯನ್ಸ್‌ ರಿಟೇಲ್‌ನ ಫ್ಯಾಷನ್ ಮತ್ತು ಲೈಫ್‌ಸ್ಟೈಲ್‌ ಸ್ಟೋರ್‌ಗಳಲ್ಲಿ ಎಕ್ಸ್‌ಕ್ಲೂಸಿವ್ ಬ್ರ್ಯಾಂಡ್‌ ಔಟ್‌ಲೆಟ್‌ಗಳನ್ನು ಸ್ಥಾಪಿಸಲಾಗುತ್ತದೆ. ಮಲ್ಟಿ ಬ್ರ್ಯಾಂಡ್ ಔಟ್‌ಲೆಟ್‌ಗಳಲ್ಲೂ ಪರ್ಫಾರ್ಮ್ಯಾಕ್ಸ್ ಕಾಣಿಸಿಕೊಳ್ಳಲಿದೆ. ಅಷ್ಟೇ ಅಲ್ಲ ಡಿಜಿಟಲ್‌ ವೇದಿಕೆಗಳಲ್ಲೂ ಲಭ್ಯವಿರಲಿದೆ. ಪರ್ಫಾರ್ಮ್ಯಾಕ್ಸ್‌ ರಿಲಯನ್ಸ್‌ ರಿಟೇಲ್‌ನ ಸ್ವಂತ ಬ್ರ್ಯಾಂಡ್ ಆಗಿದ್ದು, ಆಕ್ಟಿವ್‌ ವೇರ್ ಸಾಮಗ್ರಿಗಳಲ್ಲಿ ವಿಶೇಷ ಪರಿಣಿತಿ ಹೊಂದಿದೆ. ಜೊತೆಗೆ ಪಾದರಕ್ಷೆ, ಉಡುಪು ಮತ್ತು ಅಕ್ಸೆಸರಿಗಳು ಇನ್ನಿತರ ಉತ್ಪನ್ನಗಳನ್ನು ಒದಗಿಸುತ್ತದೆ. ಪ್ರಸ್ತುತ 330ಕ್ಕೂ ಹೆಚ್ಚು ನಗರಗಳಲ್ಲಿ 1,000ಕ್ಕೂ ಹೆಚ್ಚು ಸ್ಟೋರ್‌ಗಳಲ್ಲಿ ಬ್ರ್ಯಾಂಡ್‌ ಅಸ್ತಿತ್ವ ಹೊಂದಿದೆ.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರದ ಅಭಿವೃದ್ಧಿಗೆ ತಾಂತ್ರಿಕ ಪ್ರಗತಿ ಬಹಳ ಮುಖ್ಯ: ರಾಜ್ಯಪಾಲ ಗೆಹ್ಲೋಟ್

    ರಾಷ್ಟ್ರದ ಅಭಿವೃದ್ಧಿಗೆ ತಾಂತ್ರಿಕ ಪ್ರಗತಿ ಬಹಳ ಮುಖ್ಯ: ರಾಜ್ಯಪಾಲ ಗೆಹ್ಲೋಟ್

    ಬೆಂಗಳೂರು: ರಾಷ್ಟ್ರದ ಅಭಿವೃದ್ಧಿಗೆ ತಾಂತ್ರಿಕ ಪ್ರಗತಿ ಬಹಳ ಮುಖ್ಯ ಎಂದು ಎಲ್ಲರಿಗೂ ತಿಳಿದಿದೆ. ಇದಕ್ಕೆ ಪ್ರಾಯೋಗಿಕ ಅನುಭವ ಮತ್ತು ತಾಂತ್ರಿಕ ಜ್ಞಾನ, ಸಂಶೋಧನೆ ಮತ್ತು ನಾವೀನ್ಯತೆ ಅಗತ್ಯವಿರುತ್ತದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು.

    ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಆಯೋಜಿಸಿದ್ದ ಗೌರವ ಪದವಿ ವಿತರಣಾ ಕಾರ್ಯಕ್ರಮದಲ್ಲಿ ಪದ್ಮಭೂಷಣ ಪ್ರಶಸ್ತಿ ವಿಜೇತ ಡಾ. ಕೃಷ್ಣ ಎಲಾ ಮತ್ತು ಪದ್ಮಶ್ರೀ ಪುರಸ್ಕೃತ ಪ್ರೊ. ರೋಹಿಣಿ ಎಂ ಗಾಡ್ವೋಲೆ ಅವರಿಗೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದರು. ಇದನ್ನೂ ಓದಿ: ರಾಜಭವನದಲ್ಲಿ 75 ಶ್ರೀಗಂಧ ಸಸಿ ನೆಟ್ಟು ಸ್ವಾತಂತ್ರ್ಯೋತ್ಸವ ಆಚರಣೆ

    ನಂತರ ಮಾತನಾಡಿದ ಅವರು, ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ ಸ್ಮರಣಾರ್ಥ ಸ್ಥಾಪಿತವಾದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ಎಂಜಿನಿಯರಿಂಗ್ ಮತ್ತು ತಾಂತ್ರಿಕ ಶಿಕ್ಷಣ, ಸಂಶೋಧನೆ ಮತ್ತು ಆವಿಷ್ಕಾರಗಳನ್ನು ಉತ್ತೇಜಿಸುವ ಮೂಲಕ ಭಾರತದ ಅತಿದೊಡ್ಡ ತಾಂತ್ರಿಕ ವಿಶ್ವವಿದ್ಯಾಲಯವಾಗಿ ಸ್ಥಾಪಿಸಲ್ಪಟ್ಟಿದೆ ಎಂದರು.

    ಈ ವಿಶ್ವವಿದ್ಯಾನಿಲಯವು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಖ್ಯಾತಿಯನ್ನು ಗಳಿಸಿದೆ. ವಿವಿಧ ಚಟುವಟಿಕೆಗಳಲ್ಲಿ ಅನೇಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದೆ ಎಂದು ಶ್ಲಾಘಿಸಿದರು. ಭಾರತ ಸರ್ಕಾರದ ಶಿಕ್ಷಣ ಸಚಿವಾಲಯವು ಇತ್ತೀಚೆಗೆ ಪ್ರಕಟಿಸಿದ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕದ ಚೌಕಟ್ಟಿನಲ್ಲಿ, ವಿಟಿಯು ಎಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರೀಯವಾಗಿ 49ನೇ ಸ್ಥಾನವನ್ನು ಪಡೆದಿದೆ. ತಾಂತ್ರಿಕ ಮತ್ತು ತಾಂತ್ರಿಕೇತರ ವಿಶ್ವವಿದ್ಯಾಲಯಗಳು ಸೇರಿದಂತೆ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ 72, 76ನೇ ಸ್ಥಾನವನ್ನು ಪಡೆದಿದ್ದು, ಮ್ಯಾನೇಜ್‌ಮೆಂಟ್ ವಿಭಾಗದಲ್ಲಿ ಮತ್ತು “ಒಟ್ಟಾರೆ” ವಿಭಾಗದಲ್ಲಿ ಟಾಪ್ 100 ವಿಭಾಗದಲ್ಲಿ ಸ್ಥಾನ ಪಡೆದುಕೊಂಡಿರುವುದು ಹರ್ಷದಾಯಕ ಎಂದರು. ಇದನ್ನೂ ಓದಿ: ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ – ಬಿಜೆಪಿಗೆ ಕಾಂಗ್ರೆಸ್‌ ಸವಾಲು

    ಪದ್ಮಭೂಷಣ ಡಾ. ಕೃಷ್ಣ ಎಲಾ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರೋಹಿಣಿ ಎಂ ಗೋಡ್ಬೋಲೆ ಅವರಿಗೆ ವಿಜ್ಞಾನ, ತಂತ್ರಜ್ಞಾನ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ನೀಡಿದ ಅಮೂಲ್ಯ ಕೊಡುಗೆಗಾಗಿ ಗೌರವ ಪದವಿಯನ್ನು ನೀಡಲಾಗಿದೆ. ಈ ಸಾಧಕರ ಸೇವೆ ನಿರಂತರವಾಗಿರಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದರು.

    ಗೌರವಾನ್ವಿತ ಅಶ್ವಥ್ ನಾರಾಯಣ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಕರಿಸಿದ್ದಪ್ಪ, ರಿಜಿಸ್ಟ್ರಾರ್, ಪ್ರೊ. ಎ.ರು.ದೇಶಪಾಂಡೆ, ರಿಜಿಸ್ಟ್ರಾರ್ ಮೌಲ್ಯಮಾಪನ, ಪ್ರೊ. ಬಿ.ಇ.ರಂಗಸ್ವಾಮಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]