Tag: Teesta Setalvad

  • 2002 ರ ಗುಜರಾತ್‌ ಗಲಭೆ ಪ್ರಕರಣ – ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಜಾಮೀನು

    2002 ರ ಗುಜರಾತ್‌ ಗಲಭೆ ಪ್ರಕರಣ – ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಜಾಮೀನು

    ನವದೆಹಲಿ: 2002 ರ ಗುಜರಾತ್‌ ಗಲಭೆ (2002 Gujarat Riots) ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ್ತಿ ಹಾಗೂ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ (Teesta Setalvad) ಅವರಿಗೆ ಸುಪ್ರೀಂ ಕೋರ್ಟ್‌ (Supreme Court) ಬುಧವಾರ ಜಾಮೀನು ನೀಡಿದೆ.

    ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿ.ಆರ್‌. ಗವಾಯಿ, ಎ.ಎಸ್‌. ಬೋಪಣ್ಣ ಮತ್ತು ದೀಪಂಕರ್‌ ದತ್ತಾ ಅವರಿದ್ದ ತ್ರಿಸದಸ್ಯ ಪೀಠವು, ತೀಸ್ತಾ ಸೆಟಲ್ವಾಡ್‌ ಅವರಿಗೆ ಜಾಮೀನು ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ ಆದೇಶವನ್ನು ರದ್ದುಗೊಳಿಸಿದೆ. ಅಲ್ಲದೇ ತೀಸ್ತಾ ಅವರಿಗೆ ಜಾಮೀನು ನೀಡಿದೆ. ಇದನ್ನೂ ಓದಿ: ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ಜಾಮೀನು ಮಂಜೂರು

    ಸೆಟಲ್ವಾಡ್‌ ವಿರುದ್ಧ ಚಾರ್ಜ್‌ಸೀಟ್‌ ಸಲ್ಲಿಸಿರುವುದನ್ನು ನ್ಯಾಯಾಲಯ ಅವಲೋಕಿಸಿದೆ. ಕಸ್ಟಡಿ ವಿಚಾರಣೆಯ ಅಗತ್ಯವನ್ನು ತೆಗೆದುಹಾಕಲಾಗಿದೆ. ಆದಾಗ್ಯೂ, ಪ್ರಕರಣದಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಸೆಟಲ್ವಾಡ್‌ ಅವರಿಗೆ ಸುಪ್ರೀಂ ಕೋರ್ಟ್‌ ಷರತ್ತು ವಿಧಿಸಿ ಜಾಮೀನು ನೀಡಿದೆ.

    ಗುಜರಾತ್‌ ಗಲಭೆ ಪ್ರಕರಣದಲ್ಲಿ ನಿರಪರಾಧಿಗಳಿಗೆ ಶಿಕ್ಷೆಯಾಗಲು ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ತೀಸ್ತಾರನ್ನು ಗುಜರಾತ್‌ ಪೊಲೀಸರು ಬಂಧಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಸುಪ್ರೀಂ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಸಿಕ್ಕಿತ್ತು. ಇದನ್ನೂ ಓದಿ: ಅಹ್ಮದ್ ಪಟೇಲ್ ಸೂಚನೆ ಮೇರೆಗೆ ಮೋದಿ ವಿರುದ್ಧ ತೀಸ್ತಾ ಸೆಟಲ್ವಾಡ್ ಸಂಚು: ತನಿಖಾ ತಂಡ

    ಜಾಮೀನು ಅವಧಿ ಮುಗಿದಿದ್ದರಿಂದ ನ್ಯಾಯಾಲಯಕ್ಕೆ ಶರಣಾಗುವಂತೆ ಗುಜರಾತ್‌ ಹೈಕೋರ್ಟ್‌ ಜು. 1 ರಂದು ಸೂಚಿಸಿತ್ತು. ಇದನ್ನು ಪ್ರಶ್ನಿಸಿ ತೀಸ್ತಾ ಅವರು ಮತ್ತೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ಜಾಮೀನು ಮಂಜೂರು

    ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ಜಾಮೀನು ಮಂಜೂರು

    ನವದೆಹಲಿ: 2002ರ ಗೋಧ್ರಾ ಹತ್ಯಾಕಾಂಡ ಪ್ರಕರಣಗಳಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಸೇರಿದಂತೆ ಉನ್ನತ ಅಧಿಕಾರಿಗಳನ್ನು ಬಂಧಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಗುಜರಾತ್ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

    ತಮ್ಮ ಜಾಮೀನು ಅರ್ಜಿಯನ್ನು ದೀರ್ಘಾವಧಿಗೆ ಮುಂದೂಡಿದ ಗುಜರಾತ್ ಹೈಕೋರ್ಟ್ ಆದೇಶದ ವಿರುದ್ಧ ಸೆಟಲ್ವಾಡ್ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ನೇತೃತ್ವದ ತ್ರಿ ಸದಸ್ಯ ಪೀಠ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಕರಾವಳಿಯ ಉತ್ಪನ್ನಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಸುಲಭವಾಗಿ ತಲುಪಬೇಕು: ಮೋದಿ

    ತೀಸ್ತಾ ಕಸ್ಟಡಿ ವಿಚಾರಣೆ ಪೂರ್ಣಗೊಂಡಿರುವುದರಿಂದ ಗುಜರಾತ್ ಹೈಕೋರ್ಟ್ ಮಧ್ಯಂತರ ಜಾಮೀನು ಅರ್ಜಿಯನ್ನು ಪರಿಗಣಿಸಬೇಕಿತ್ತು. ಆದರೆ ಪ್ರಕರಣದ ವಿಚಾರಣೆ ಬಾಕಿ ಇರುವಾಗ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕೇ ಅಥವಾ ಇಲ್ಲವೇ ಎಂಬುದನ್ನು ನಾವು ಪರಿಗಣಿಸುವುದಿಲ್ಲ. ಅದನ್ನು ಹೈಕೋರ್ಟ್ ನಿರ್ಧರಿಸಲಿ. ಅಂತಹ ಅರ್ಜಿಗಳು ಬಾಕಿ ಇರುವಾಗ ಮಾಧ್ಯಂತರ ಜಾಮೀನು ನೀಡಲು ಅವಕಾಶಗಳಿವೆ. ಹೀಗಾಗಿ ನಾವು ಮಧ್ಯಂತರ ಜಾಮೀನು ನೀಡುತ್ತಿದ್ದೇವೆ ಎಂದು ಕೋರ್ಟ್ ಹೇಳಿದೆ.

    ಜಾಮೀನು ನೀಡುವ ವೇಳೆ ಮುಂದೆಯೂ ತನಿಖೆಗೆ ಸಹಕರಿಸಬೇಕು. ಹೈಕೋರ್ಟ್‌ಗೆ ಪಾಸ್‌ಪೊರ್ಟ್ ಒಪ್ಪಿಸಬೇಕು. ಸಾಕ್ಷಿ ನಾಶಕ್ಕೆ ಪ್ರಯತ್ನ ಮಾಡಬಾರದು ಎಂದು ಷರತ್ತು ವಿಧಿಸಿದೆ. ಇದನ್ನೂ ಓದಿ: ಬೆಂಗಳೂರಿನಿಂದ ಹಾಂಕಾಂಗ್‍ಗೆ ನೇರ ಸಂಪರ್ಕ ಕಲ್ಪಿಸುವ ವಿಮಾನ ಹಾರಾಟ ಪ್ರಾರಂಭ

    Live Tv
    [brid partner=56869869 player=32851 video=960834 autoplay=true]

  • ಅಹ್ಮದ್ ಪಟೇಲ್ ಸೂಚನೆ ಮೇರೆಗೆ ಮೋದಿ ವಿರುದ್ಧ ತೀಸ್ತಾ ಸೆಟಲ್ವಾಡ್ ಸಂಚು: ತನಿಖಾ ತಂಡ

    ಅಹ್ಮದ್ ಪಟೇಲ್ ಸೂಚನೆ ಮೇರೆಗೆ ಮೋದಿ ವಿರುದ್ಧ ತೀಸ್ತಾ ಸೆಟಲ್ವಾಡ್ ಸಂಚು: ತನಿಖಾ ತಂಡ

    ಗುರುಗ್ರಾಮ: ಗುಜರಾತ್‍ನ ಅಂದಿನ ಸಿಎಂ ಆಗಿದ್ದ ನರೇಂದ್ರ ಮೋದಿ ವಿರುದ್ಧ ದಿವಂಗತ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಸೂಚನೆ ಮೇರೆಗೆ ತೀಸ್ತಾ ಸೆಟಲ್ವಾಡ್ ಸಂಚು ಮಾಡಿದ್ದರು ಎಂದು ತನಿಖಾ ತಂಡ ತಿಳಿಸಿದೆ.

    ಗುಜರಾತ್ ಪೊಲೀಸರು ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದರು. ತೀಸ್ತಾ ಸೆಟಲ್ವಾಡ್ ಅವರು ನರೇಂದ್ರ ಮೋದಿ ಅವರ ವಿರುದ್ಧ ಅಹ್ಮದ್ ಪಟೇಲ್ ಅವರ ಇಚ್ಛೆಯ ಮೇರೆಗೆ ದೊಡ್ಡ ಪಿತೂರಿ ನಡೆಸಿದ್ದರು ಎಂಬ ವಿಷಯ ಈ ಮೂಲಕ ಬಯಲಿಗೆ ಬಂದಿದೆ. ಇದನ್ನೂ ಓದಿ: ಸಮ್ಮತಿಯ ಸೆಕ್ಸ್‌ನಿಂದ ಅವಿವಾಹಿತೆ ಗರ್ಭಧಾರಣೆ – 20 ವಾರಗಳ ಬಳಿಕ ಗರ್ಭಪಾತಕ್ಕೆ ಅವಕಾಶವಿಲ್ಲ: ಹೈಕೋರ್ಟ್ 

    2002 ರ ಗಲಭೆಯ ನಂತರ ಗುಜರಾತ್‍ನಲ್ಲಿ ಬಿಜೆಪಿ ಸರ್ಕಾರವನ್ನು ವಜಾಗೊಳಿಸಲು ಅಹ್ಮದ್ ಪಟೇಲ್ ಅವರ ಆಜ್ಞೆಯ ಮೇರೆಗೆ ಸೆಟಲ್ವಾಡ್ ಒಂದು ಯೋಜನೆಯನ್ನು ರೂಪಿಸಿದ್ದರು ಎಂದು ಸೆಷನ್ಸ್ ನ್ಯಾಯಾಲಯಕ್ಕೆ ಪೊಲೀಸರ ವಿಶೇಷ ತನಿಖಾ ತಂಡ ಸಲ್ಲಿಸಿದ ಅಫಿಡವಿಟ್ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಡಿ.ಡಿ.ಠಕ್ಕರ್ ಅವರು ಎಸ್‍ಐಟಿಯ ಉತ್ತರವನ್ನು ದಾಖಲಿಸಿಕೊಂಡು ಸೋಮವಾರ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದರು.

    ಗುಜರಾತ್ ಗಲಭೆ ಪ್ರಕರಣಗಳಲ್ಲಿ ಅಮಾಯಕರನ್ನು ಬಂಧಿಸಲು ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿದ ಆರೋಪದ ಮೇಲೆ ಮಾಜಿ ಐಪಿಎಸ್ ಅಧಿಕಾರಿಗಳಾದ ಆರ್.ಬಿ.ಶ್ರೀಕುಮಾರ್ ಮತ್ತು ಸಂಜೀವ್ ಭಟ್ ಅವರೊಂದಿಗೆ ಸೆಟಲ್ವಾಡ್ ಅವರನ್ನು ಬಂಧಿಸಲಾಗಿದೆ. ಈ ದೊಡ್ಡ ಪಿತೂರಿಯನ್ನು ಮಾಡುವಾಗ ಅರ್ಜಿದಾರರ(ಸೆಟಲ್ವಾಡ್) ರಾಜಕೀಯ ಉದ್ದೇಶವೆಂದರೆ ಚುನಾಯಿತ ಸರ್ಕಾರವನ್ನು ವಜಾಗೊಳಿಸುವುದು ಅಥವಾ ಅಸ್ಥಿರಗೊಳಿಸುವುದು ಎಂದು ಎಸ್‍ಐಟಿ ಅಫಿಡವಿಟ್‌ನಲ್ಲಿ ಹೇಳಿದೆ.

    ಈ ಕುರಿತು ತನಿಖಾ ತಂಡ ಮಾಹಿತಿ ಕೊಟ್ಟಿದ್ದು, ದಿ.ಅಹ್ಮದ್ ಪಟೇಲ್ ಅವರ ಸೂಚನೆಯ ಮೇರೆಗೆ ಈ ಸಂಚು ನಡೆಸಲಾಗಿದೆ ಎಂದು ಸಾಕ್ಷಿಗಳನ್ನು ಉಲ್ಲೇಖಿಸಿ ಆರೋಪಿಸಾಗಿದೆ. 2002 ರಲ್ಲಿ ಗೋಧ್ರಾ ಗಲಭೆ ನಂತರ ಪಟೇಲ್ ಅವರ ಆದೇಶದ ಮೇರೆಗೆ ಸೆಟಲ್ವಾಡ್ 30 ಲಕ್ಷ ರೂ. ಕೊಡಲಾಗಿತ್ತು ಎಂಬುದು ತಿಳಿದುಬಂದಿದೆ ಎಂದು ವಿವರಿಸಿದರು. ಇದನ್ನೂ ಓದಿ: ಸರ್ಕಾರಿ ನೌಕರರು 2ನೇ ಮದುವೆಯಾಗಲು ಬೇಕು ಇಲಾಖೆ ಅನುಮತಿ – ಇಲ್ಲವಾದ್ರೆ ಸರ್ಕಾರಿ ಸೌಲಭ್ಯವಿಲ್ಲ

    2002 ರಲ್ಲಿ ಗಲಭೆ ಪ್ರಕರಣಗಳಲ್ಲಿ ಬಿಜೆಪಿ ಸರ್ಕಾರದ ಹಿರಿಯ ನಾಯಕರ ಹೆಸರನ್ನು ಸಿಲುಕಿಸಲು ದೆಹಲಿಯ ಅಧಿಕಾರದಲ್ಲಿದ್ದ ಪ್ರಮುಖ ರಾಷ್ಟ್ರೀಯ ಪಕ್ಷದ ನಾಯಕರನ್ನು ಸೆಟಲ್ವಾಡ್ ಭೇಟಿಯಾಗುತ್ತಿದ್ದರು ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಗುಜರಾತ್ ಗಲಭೆ ಪ್ರಕರಣದಲ್ಲಿ ಕೋರ್ಟ್ ತೀರ್ಪು ಹೊರಬಿದ್ದ ಬೆನ್ನಲ್ಲೇ ತೀಸ್ತಾ ಸೆತಲ್ವಾಡ್ ಬಂಧನ

    ಗುಜರಾತ್ ಗಲಭೆ ಪ್ರಕರಣದಲ್ಲಿ ಕೋರ್ಟ್ ತೀರ್ಪು ಹೊರಬಿದ್ದ ಬೆನ್ನಲ್ಲೇ ತೀಸ್ತಾ ಸೆತಲ್ವಾಡ್ ಬಂಧನ

    ಮುಂಬೈ: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ಬಂಧಿಸಿದೆ.

    ಸ್ವಯಂ ಸೇವಾ ಸಂಸ್ಥೆಯೊಂದರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿರುವ ತೀಸ್ತಾ ಸೆತಲ್ವಾಡ್ ಅವರ ನಿವಾಸಕ್ಕೆ ಭೇಟಿ ನೀಡಿದ ಗುಜರಾತಿನ ಭಯೋತ್ಪಾದನಾ ನಿಗ್ರಹದಳ ಅವರನ್ನು ಬಂಧಿಸಿದೆ. ನಂತರ ಆಕೆಯನ್ನು ಸಾಂತಾಕ್ರೂಜ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

    2002ರ ಗುಜರಾತ್ ಗಲಭೆ ಬಗ್ಗೆ ತೀಸ್ತಾ ಸೆತಲ್ವಾಡ್, ಪೊಲೀಸರಿಗೆ ಆಧಾರ ರಹಿತ ಮಾಹಿತಿ ನೀಡಿದ್ದಾರೆ. ಅಲ್ಲದೆ ಪ್ರಧಾನಿ ಮೋದಿಯವರ ಪ್ರತಿಷ್ಠೆಗೆ ಕಳಂಕ ತರುವಂತೆ ಅವರು ಪ್ರಚಾರ ನಡೆಸಲು ಸಹಾಯ ಮಾಡಿದ್ದಾರೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಆರೋಪಿಸಿದ ಕೆಲವೇ ಗಂಟೆಗಳಲ್ಲಿ ತೀಸ್ತಾ ಅವರನ್ನು ಬಂಧಿಸಲಾಗಿದೆ.

    2002ರ ಗುಜರಾತ್ ಗಲಭೆಯಲ್ಲಿ ದೊಡ್ಡ ಪಿತೂರಿ ನಡೆದಿದೆ ಎಂದು ಹತ್ಯೆಯಾದ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿತ್ತು. ಗಲಭೆಗೆ ಸಂಬಂಧಿಸಿ ಮೋದಿ ಸೇರಿ 64 ಜನರಿಗೆ ಎಸ್‌ಐಟಿ ಕ್ಲೀನ್‌ಚಿಟ್ ನೀಡಿದ್ದನ್ನು ಪ್ರಶ್ನಿಸಿ ಜಾಫ್ರಿ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರಲ್ಲಿ ತೀಸ್ತಾ ಕೂಡ ಒಬ್ಬರಾಗಿದ್ದರು. ಗಲಭೆ ನಡೆದ ಅವಧಿಯಲ್ಲಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದರು.

    ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕೇಂದ್ರ ಸಚಿವ ಅಮಿತ್ ಶಾ, ನಾನು ತೀರ್ಪನ್ನು ಬಹಳ ಎಚ್ಚರಿಕೆಯಿಂದಲೇ ಓದಿದ್ದೇನೆ. ಅದರಲ್ಲಿ ತೀಸ್ತಾ ಸೆತಲ್ವಾಡ್ ಅವರ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಅವರು ನಡೆಸುತ್ತಿರುವ ಎನ್‌ಜಿಓ ಹೆಸರು ನನಗೆ ನೆನಪಿಲ್ಲ. ಆದರೆ ಗಲಭೆಯ ಬಗ್ಗೆ ಆಧಾರ ರಹಿತ ಮಾಹಿತಿಯನ್ನು ಪೊಲೀಸರಿಗೆ ನೀಡಿರುವ ಬಗ್ಗೆ ಮಾಹಿತಿ ಇತ್ತು ಎಂದು ಹೇಳಿರುವುದಾಗಿ ವರದಿಯಾಗಿದೆ.

    Live Tv