Tag: Teeth

  • ಚಿಕ್ಕಮಗಳೂರು | 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

    ಚಿಕ್ಕಮಗಳೂರು | 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

    ಚಿಕ್ಕಮಗಳೂರು: ಅಪಘಾತದಲ್ಲಿ 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆ ಕೊಪ್ಪ (Koppa) ತಾಲೂಕಿನ ಭುವನಕೋಟೆ ಸಮೀಪದ ಸಾಲುಮರ ಗ್ರಾಮದಲ್ಲಿ ನಡೆದಿದೆ.

    ಮೃತನನ್ನ ವಿಘ್ನೇಶ್ (18) ಎಂದು ಗುರುತಿಸಲಾಗಿದೆ. ಮೃತ ಬಾಲಕ ಕೊಪ್ಪ ಪಟ್ಟಣದ ಐಟಿಐ ಕಾಲೇಜಿನಲ್ಲಿ ಮೊದಲ ವರ್ಷದ ಐಟಿಐ ಒದುತ್ತಿದ್ದ. ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ಮಹಿಳೆಯನ್ನು ಕಟ್ಟಿಹಾಕಿ ಹಲ್ಲೆ ಕೇಸ್‌ – ಸಮರ್ಥಿಸಿಕೊಂಡ ಪ್ರಮೋದ್‌ ಮಧ್ವರಾಜ್‌ ಮೇಲೆ ಸುಮೋಟೊ ಕೇಸ್‌

    ಕಳೆದ ನಾಲ್ಕು ವರ್ಷದ ಹಿಂದೆ ವಿಘ್ನೇಶ್‌ಗೆ ಅಪಘಾತವಾಗಿತ್ತು. ಆಗ ಅಪಘಾತದಲ್ಲಿ ತನ್ನ 17 ಹಲ್ಲುಗಳನ್ನ ಕಳೆದುಕೊಂಡಿದ್ದ. ಹಾಗಾಗಿ ಆಗಾಗ ಆಸ್ಪತ್ರೆಗೆ ಹೋಗಿ ಬರುತ್ತಿದ್ದ. ಸದಾ ಆಸ್ಪತ್ರೆಗೆ ಹೋಗಬೇಕು ಎಂದು ಬೇಜಾರಾಗಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಎದೆಮಟ್ಟಕ್ಕೆ ಬೆಳೆದು ನಿಂತ ಮಗ ಆತ್ಮಹತ್ಯೆಗೆ ಶರಣಾಗಿದ್ದಕ್ಕೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರು | ಮಳೆಗೆ ಬೈಕ್ ಮೇಲೆ ಬಿದ್ದ ಮರ – ಮೂರು ವರ್ಷದ ಮಗು ಸಾವು

  • ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಬ್ರೂಸ್ಲಿ ಅಭಿಮಾನಿಯ ಸಾಹಸ – ಹಲ್ಲಿನಿಂದ 1 ಟನ್ ತೂಕದ ಕಾರು ಎಳೆದ ಯುವಕ

    ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಬ್ರೂಸ್ಲಿ ಅಭಿಮಾನಿಯ ಸಾಹಸ – ಹಲ್ಲಿನಿಂದ 1 ಟನ್ ತೂಕದ ಕಾರು ಎಳೆದ ಯುವಕ

    ರಾಯಚೂರು: ಸ್ವಾತಂತ್ರ‍್ಯ ದಿನಾಚರಣೆ (Independence Day) ಹಿನ್ನೆಲೆ ರಾಯಚೂರಿನಲ್ಲಿ (Raichur) ಆಯೋಜಿಸಿದ್ದ ಧ್ವಜಾರೋಹಣ ಕಾರ್ಯಕ್ರಮದ ವೇಳೆ ಯುವ ಸಾಹಸಿ ಮಾನ್ವಿಯ (Manvi) ಸತೀಶ್ ಕೊನಾಪುರಪೇಟೆ ಹಲ್ಲಿನಿಂದ 1 ಟನ್ ತೂಕದ ಕಾರನ್ನು ಎಳೆಯುವ ಮೂಲಕ ಸಾಹಸ ಮೆರೆದಿದ್ದಾನೆ.

    ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ಸುಮಾರು 1 ಟನ್ ತೂಕದ ಸ್ವಿಫ್ಟ್ ಡಿಸೈರ್ (Swift Dzire) ಕಾರಿಗೆ ಹಗ್ಗ ಕಟ್ಟಿ ಬಾಯಿಂದ 100 ಮೀಟರ್ ದೂರದವರೆಗೆ ಎಳೆಯುವ ಮೂಲಕ ಸಾಹಸ ಪ್ರದರ್ಶಿಸಿದ್ದಾನೆ. ಬ್ರೂಸ್ಲಿ ಅಭಿಮಾನಿಯಾಗಿರುವ ಈತ ಈಗಾಗಲೇ ಹಲವೆಡೆ ತನ್ನ ಸಾಹಸ ಪ್ರದರ್ಶಿಸಿ ಪ್ರಶಂಸೆ ಪಡೆದಿದ್ದಾನೆ. ಇದನ್ನೂ ಓದಿ: 12 ವರ್ಷಗಳಲ್ಲೇ ಬೆಂಗ್ಳೂರು ಮೆಟ್ರೋದಲ್ಲಿ ದಾಖಲೆ ಪ್ರಯಾಣ

    ಇನ್ನೂ ಇದೇ ವೇಳೆ ಅಗ್ನಿ ಶಾಮಕದಳ ಸಿಬ್ಬಂದಿ, ಬೆಂಕಿ ಅವಘಡಗಳಾದಾಗ ರಕ್ಷಣೆ ಮಾಡುವುದು ಹೇಗೆ ಎಂಬುದರ ಬಗ್ಗೆ ಅಣಕು ಪ್ರದರ್ಶನ ಮಾಡಿದರು. ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಾಗ ಏನು ಮಾಡಬೇಕು? ಅಡುಗೆ ಅನಿಲದ ಸಿಲಿಂಡರ್‌ಗೆ ಬೆಂಕಿ ಹೊತ್ತಿಕೊಂಡಾಗ ಏನು ಮಾಡಬೇಕು ಎಂಬ ಕುರಿತು ಅಣಕು ಪ್ರದರ್ಶನ ಮಾಡಿದರು. ಇದನ್ನೂ ಓದಿ: ನೀರಜ್‌ ಚೋಪ್ರಾ – ಮನು ಭಾಕರ್‌ ಮದುವೆ ವದಂತಿ: ಎಲ್ಲವೂ ಆಧಾರ ರಹಿತ ಎಂದ ಮನು ಭಾಕರ್‌

  • ಹುಲಿ ಬೇಟೆಯಾಡಿ ಹಲ್ಲಿನ ಪೆಂಡೆಂಟ್‌ ಧರಿಸಿದ್ದೇನೆ- ವಿವಾದಕ್ಕೀಡಾದ ಶಾಸಕ

    ಹುಲಿ ಬೇಟೆಯಾಡಿ ಹಲ್ಲಿನ ಪೆಂಡೆಂಟ್‌ ಧರಿಸಿದ್ದೇನೆ- ವಿವಾದಕ್ಕೀಡಾದ ಶಾಸಕ

    ಮುಂಬೈ: ಹುಲಿ ಬೇಟೆಯಾಡಿ ಅದರ ಹಲ್ಲನ್ನು ಕುತ್ತಿಗೆಗೆ ಧರಿಸಿದ್ದೇನೆ ಎಂದು ಹೇಳುವ ಮೂಲಕ ಏಕನಾಥ್ ಶಿಂಧೆ (Eknath Shinde) ನೇತೃತ್ವದ ಶಿವಸೇನೆಯ (Shivasene) ಶಾಸಕರೊಬ್ಬರು ಹೇಳಿಕೊಂಡು ಇದೀಗ ವಿವಾದಕ್ಕೀಡಾಗಿದ್ದಾರೆ.

    ಮಹಾರಾಷ್ಟ್ರದ ವಿದರ್ಭ ಪ್ರದೇಶದ ಬುಲ್ಧಾನಾ ಕ್ಷೇತ್ರವನ್ನು ಪ್ರತಿನಿಧಿಸುವ ಸಂಜಯ್ ಗಾಯಕ್ವಾಡ್ (Sanjay Gaikwad) ಅವರು ವಿವಾದಕ್ಕೀಡಾಗಿರರುವ ಶಾಸಕರಾಗಿದ್ದಾರೆ. ಗಾಯಕ್ವಾಡ್‌ ಅವರು 37 ವರ್ಷಗಳ ಹಿಂದೆ ಹುಲಿಯನ್ನು ಬೇಟೆಯಾಡಿರುವ ಬಗ್ಗೆ ನೀಡಿದ್ದ ಹೇಳಿಕೆಯ ವೀಡಿಯೋ ಇದೀಗ ವೈರಲ್‌ ಆಗಿದೆ.

    ವೀಡಿಯೋದಲ್ಲಿ ಗಾಯಕ್ವಾಡ್ ಅವರ ಕುತ್ತಿಗೆಯಲ್ಲಿರುವ ಪೆಂಡೆಂಟ್‌ ಬಗ್ಗೆ ಕೇಳಲಾಗಿದೆ. ಈ ವೇಳೆ ಅವರು, ಇದು ಹುಲಿ ಹಲ್ಲು. 1987 ರಲ್ಲಿ ನಾನು ಹುಲಿ ಬೇಟೆಯಾಡಿ ಅದರ ಹಲ್ಲು ತೆಗೆದಿದ್ದೆ ಎಂದಿದ್ದಾರೆ. ಸದ್ಯ ಶಾಸಕರ ಈ ಹೇಳಿಕೆ ಭಾರೀ ಟೀಕೆಗೆ ಗುರಿಯಾಗಿದೆ. ಇದನ್ನೂ ಓದಿ: ಹಡಗು ಡಿಕ್ಕಿಯಾಗಿ ಕುಸಿದ ಸೇತುವೆ- ಬಸ್‌ ನದಿಗೆ ಉರುಳಿ ಇಬ್ಬರ ದುರ್ಮರಣ

    ಛತ್ರಪತಿ ಶಿವಾಜಿ ಮಹಾರಾಜರ ಜನ್ಮದಿನವಾದ ಶಿವ ಜಯಂತಿಯಂದು ಶಾಸಕರು ಈ ರೀತಿಯಾಗಿ ಹೇಳಿಕೆ ನೀಡಿದ್ದಾರೆ. ಇದನ್ನು ಶಿವಸೇನೆಯ ಪ್ರತಿಸ್ಪರ್ಧಿ ಉದ್ಧವ್ ಠಾಕ್ರೆ ಬಣದ ಮುಖವಾಣಿ ಸಾಮ್ನಾ ಆನ್‌ಲೈನ್‌ನ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ದೇಶದಲ್ಲಿ ಹುಲಿ ಬೇಟೆಯನ್ನು 1987ರ ಹಿಂದೆಯೇ ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಲಾಗಿತ್ತು.

  • ನಾಯಿಯ ಹಲ್ಲನ್ನು ಸ್ವಚ್ಛಗೊಳಿಸಲು 4 ಲಕ್ಷ ರೂ. ಖರ್ಚು!

    ನಾಯಿಯ ಹಲ್ಲನ್ನು ಸ್ವಚ್ಛಗೊಳಿಸಲು 4 ಲಕ್ಷ ರೂ. ಖರ್ಚು!

    ವಾಷಿಂಗ್ಟನ್: ಸಾಮಾನ್ಯವಾಗಿ ಶ್ವಾನಪ್ರಿಯರು ಶ್ವಾನಗಳನ್ನು ತಮ್ಮ ಮಕ್ಕಳಂತೆ ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಅದರ ತಿಂಡಿ, ಆರೋಗ್ಯ ಸೇರಿದಂತೆ ನಾಯಿಗಳಿಗೆ ಇರುವ ಎಲ್ಲಾ ಖರ್ಚು ವೆಚ್ಚಗಳನ್ನು ನೋಡಿಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಮಾಲೀಕ ನಾಯಿಯ ಹಲ್ಲನ್ನು ಸ್ವಚ್ಛಗೊಳಿಸಲು ಬರೋಬ್ಬರಿ 5,000 ಡಾಲರ್ (3.9 ಲಕ್ಷ ರೂ) ಖರ್ಚು ಮಾಡಿದ್ದಾನೆ.

    ಯುನೈಟೆಡ್ ಸ್ಟೇಟ್‌ನ ಮಧ್ಯಪಶ್ಚಿಮ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ರೆಡ್ಡಿಟ್ ಬಳಕೆದಾರನೊಬ್ಬ ತಮ್ಮ ಸಾಕು ನಾಯಿಯ ಹಲ್ಲುಗಳನ್ನು ಸ್ವಚ್ಛಗೊಳಿಸುವ ಕಾರ್ಯವಿಧಾನದ ಕುರಿತು ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.

    ಪೋಸ್ಟ್‌ನಲ್ಲಿ ಏನಿದೆ?: 12 ವರ್ಷದ ನಾಯಿಯ ಹಲ್ಲನ್ನು ಸ್ವಚ್ಛಗೊಳಿಸಲು ಪಶು ವೈದ್ಯರತ್ತಿರ ಕರೆದೊಯ್ಯಲಾಗಿತ್ತು. ಆಗ ಅಲ್ಲಿ ನಾಯಿಯು ಹಲ್ಲಿನ ಬಣ್ಣವನ್ನು ಕಳೆದುಕೊಂಡಿತು. ಇದರಿಂದಾಗಿ ಆ ಕಾರ್ಯವಿಧಾನವನ್ನು ನಿಲ್ಲಿಸಲಾಯಿತು. ಜೊತೆಗೆ ಅನೇಕ ರೀತಿಯ ಪರೀಕ್ಷೆಗಳನ್ನು ಮಾಡಿಸಲಾಯಿತು. ಏಕೆಂದರೆ ಶ್ವಾನವು ಉತ್ತಮ ಆರೋಗ್ಯವನ್ನು ಹೊಂದಿದೆಯೇ ಎಂದು ಪರೀಕ್ಷಿಸಬೇಕಾಗಿತ್ತು. ಈ ಪರೀಕ್ಷೆಗಳಲ್ಲಿ ರಕ್ತ ಪರೀಕ್ಷೆಗಳು ಮತ್ತು ಹೃದಯ ತಪಾಸಣೆಗಳನ್ನು ಮಾಡಿಸಲಾಯಿತು.

    ಅದಾದ ಬಳಿಕ ತಜ್ಞರನ್ನು ಸಂಪರ್ಕಿಸಿ ಬಾಯಿಯ ಎಕ್ಸ್ ರೇ ಅನ್ನು ಮಾಡಿಸಲಾಯಿತು. ಅಷ್ಟೇ ಅಲ್ಲದೇ ಶ್ವಾನದ ಕೆಲ ಹಲ್ಲುಗಳನ್ನು ಹೊರತೆಯಲು ಹೇಳಿದ್ದರು. ಏಕೆಂದರೆ ಶ್ವಾನಕ್ಕೆ ಕ್ಯಾನ್ಸರ್ ಇದೆಯಾ ಎಂದು ಖಚಿತ ಪಡಿಕೊಳ್ಳಲು ಬಯಾಪ್ಸಿ ಮಾಡಲಾಗಿತ್ತು. ಈ ಎಲ್ಲಾ ಕಾರ್ಯ ವಿಧಾನಕ್ಕೆ 5,000 ಡಾಲರ್ ವೆಚ್ಚವಾಯಿತು ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪಳ ಪಳ ಹೊಳೆಯುವ ಹಲ್ಲು ನಿಮ್ಮದಾಗ ಬೇಕಾ? ಹಾಗಿದ್ರೆ ಒಮ್ಮೆ ಟ್ರೈ ಮಾಡಿ

    ಪಳ ಪಳ ಹೊಳೆಯುವ ಹಲ್ಲು ನಿಮ್ಮದಾಗ ಬೇಕಾ? ಹಾಗಿದ್ರೆ ಒಮ್ಮೆ ಟ್ರೈ ಮಾಡಿ

    ಕ್ಕಾಗ ಹಲ್ಲು ಎಲ್ಲರಿಗೂ ಕಾಣುತ್ತದೆ. ಹೆಚ್ಚನವರಿಗೆ ಹಳದಿ ಹಲ್ಲಿನ ಸಮಸ್ಯೆ ಕಾಡುತ್ತಿರುತ್ತದೆ. ಬಾಯಿ ತೆರೆದು ನಕ್ಕು ಮುಜುಗರಕ್ಕೆ ಒಳಗಾಗುವ ಎಷ್ಟೋ ಸಂದರ್ಭ ಎದುರಾಗಿರಬಹುದು. ಇಂತಹ ಹಳದಿ ಹಲ್ಲಿನ ಸಮಸ್ಯೆಯಿಂದ ಬಳಲುತ್ತಿರುವವರು ಕೆಲವು ಮನೆ ಮದ್ದುಗಳನ್ನು ಟ್ರೈ ಮಾಡಿದರೆ ಪಳ ಪಳ ಹೊಳೆಯುವ ಹಲ್ಲನ್ನು ಪಡೆದುಕೊಳ್ಳಬಹುದಾಗಿದೆ.

    * 1 ಟೀ ಸ್ಪೂನ್ ಅಡುಗೆ ಸೋಡಾ, ಸ್ಪೂನ್ ನಿಂಬೆ ರಸವನ್ನು ಮಿಶ್ರಣ ಮಾಡಿ ಪೇಸ್ಟ್ ತರಹ ಮಾಡಿಕೊಂಡು ಹಲ್ಲುಜ್ಜಿ ಬೆಚ್ಚಗಿನ ನೀರಿನಿಂದ ನಿಮ್ಮ ಬಾಯಿಯನ್ನು ತೊಳೆಯಿರಿ. ಹೀಗೆ ವಾರದಲ್ಲಿ ಎರಡು ಬಾರಿ ಮಾಡಬೇಕು.

    * ಬಾಳೆಹಣ್ಣಿನ ಸಿಪ್ಪೆಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ. ಒಂದು ತುಂಡು ತೆಗೆದುಕೊಂಡು ಅದರ ಒಳಭಾಗದಿಂದ ನಿಮ್ಮ ಹಲ್ಲುಗಳ ಮೇಲೆ ಉಜ್ಜಿ. ನಂತರ ಬೆಚ್ಚಗಿನ ನೀರಿನಿಂದ ತೊಳೆಯಿರಿ. ಪ್ರತಿನಿತ್ಯ ಹೀಗೆ ಮಾಡುತ್ತಾ ಬರುವುದರಿಂದ ಹೊಳೆಯುವ ಹಲ್ಲು ನಿಮ್ಮದಾಗುತ್ತದೆ.

    * ಹಲ್ಲುಜ್ಜುವ ಬ್ರಷ್ ಅನ್ನು ಒದ್ದೆ ಮಾಡಿ ಇದ್ದಿಲಿನ ಪುಡಿಯಲ್ಲಿ ಅದ್ದಿ. ಎರಡು ನಿಮಿಷಗಳ ಕಾಲ ವೃತ್ತಾಕಾರವಾಗಿ ಬ್ರಷ್ ಮಾಡಿ. ಬಾಯಿಯನ್ನು ನೀರಿನಿಂದ ಚೆನ್ನಾಗಿ ತೊಳೆಯಿರಿ. ಇದನ್ನೂ ಓದಿ: ಚರ್ಮದ ಆರೋಗ್ಯಕ್ಕಾಗಿ ಈ ಆಹಾರವನ್ನು ಸೇವಿಸಿ

    * 4-5 ಬೇವಿನ ಎಲೆಗಳನ್ನು 1 ಕಪ್ ನೀರಿನಲ್ಲಿ ಕೆಲವು ನಿಮಿಷ ಕುದಿಸಿ. ನೀರು ಹೆಚ್ಚು ಬಿಸಿಯಾಗಲು ಬಿಡಬೇಡಿ. ಈ ದ್ರಾವಣವನ್ನು ತಣ್ಣಗಾಗಲು ಬಿಡಿ. ಹಲ್ಲುಜ್ಜುವ ಮೊದಲು ಅಥವಾ ನಂತರ ಈ ನೀರಿನಿಂದ ಬಾಯಿ ಮುಕ್ಕಳಿಸಿ. ಇದನ್ನೂ ಓದಿ: ಚಳಿಗಾಲದಲ್ಲಿ ಈ ತರಕಾರಿ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

    * ಹಲ್ಲುಜ್ಜುವ ಬ್ರಷ್‍ಗೆ 1/8 ಟೀಸ್ಪೂನ್ ಅರಿಶಿನ ಪುಡಿಯನ್ನು ಸಿಂಪಡಿಸಿ, ಬ್ರಷ್ ಮಾಡಿ. ನಂತರ ನಿಮ್ಮ ಬಾಯಿಯನ್ನು ಚೆನ್ನಾಗಿ ತೊಳೆದು ಮತ್ತೆ ಮಾಮೂಲಿ ಟೂತ್‍ಪೆಸ್ಟ್‍ನೊಂದಿಗೆ ಬ್ರಷ್ ಮಾಡಿ. ಹೀಗೆ ಪ್ರತಿನಿತ್ಯ ಬ್ರಷ್ ಮಾಡುವುದರಿಂದ ನಿಮ್ಮ ಹಲ್ಲು ಹಾಲಿನ ಬಣ್ಣಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ.

  • ಹಲ್ಲಿಗೆ ಕ್ಲಿಪ್ ಹಾಕಿಸಿಕೊಳ್ಳಲು ಆಸ್ಪತ್ರೆಗೆ ಹೋಗಿ ಯುವಕ ಸಾವು

    ಹಲ್ಲಿಗೆ ಕ್ಲಿಪ್ ಹಾಕಿಸಿಕೊಳ್ಳಲು ಆಸ್ಪತ್ರೆಗೆ ಹೋಗಿ ಯುವಕ ಸಾವು

    ಕಲಬುರಗಿ: ಹಲ್ಲಿಗೆ ಕ್ಲಿಪ್ ಹಾಕಿಸಿಕೊಳ್ಳಲು ಆಸ್ಪತ್ರೆಗೆ ಸೇರಿದ ಯುವಕನೋರ್ವ ಸಾವನ್ನಪ್ಪಿದ ಘಟನೆ ನಗರದಲ್ಲಿ ನಡೆದ ಬಗ್ಗೆ ವರದಿಯಾಗಿದೆ.

    ಶಶಾಂಕ(19) ಮೃತ ಯುವಕ. ಈತ ಹಲ್ಲಿಗೆ ಕ್ಲಿಪ್ ಹಾಕಿಸಿಕೊಳ್ಳಲು ಕಲಬುರಗಿ ನಗರದ ಚಿರಾಯು ಆಸ್ಪತ್ರೆಗೆ ಹೋದಾಗ ಆತನಿಗೆ ವೈದ್ಯರು ಆಪರೇಷನ್ ಮೊದಲು ಅರವಳಿಕೆ ಚುಚ್ಚುಮದ್ದು ನೀಡಿದ್ದರು. ಪರಿಣಾಮ ಯುವಕ ಪ್ರಜ್ಞಾಹೀನನಾಗಿದ್ದು, ಆತ ಕಳೆದ ಮೂರು ದಿನಗಳಿಂದ ಕೋಮಾಕ್ಕೆ ಜಾರಿದ್ದನು. ಆದರೆ ನಿನ್ನೆ ತಡರಾತ್ರಿ ಮೃತಪಟ್ಟನೆಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

    ವೈದ್ಯರು ನೀಡಿದ ಅರವಳಿಕೆಯಿಂದ ತಮ್ಮ ಮಗ ಸಾವನ್ನಪ್ಪಿದ್ದಾನೆಂದು ಆರೋಪಿಸಿ ಕುಟುಂಬದವರು ಆಸ್ಪತ್ರೆಯ ವಿರುದ್ಧ ಆರೋಪ ಮಾಡಿದ್ದಾರೆ. ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದಾಗ ಅವರ ನೆರವಿಗೆ ನೂರಾರು ಜನ ಬಂದ ಹಿನ್ನೆಲೆಯಲ್ಲಿ ಸ್ವಲ್ಪ ಹೊತ್ತು ಆಸ್ಪತ್ರೆಯ ಎದುರಿಗೆ ಬೀಗುವಿನ ವಾತಾವರಣ ಕಂಡು ಬಂದಿತ್ತು. ಅಂತಿಮವಾಗಿ ಪೋಲಿಸರು ಮಧ್ಯ ಪ್ರವೇಶಿಸಿ ಮೃತ ಯುವಕನ ಶರೀರವನ್ನು ಶವ ಪರೀಕ್ಷೆಗಾಗಿ ಆಸ್ಪತ್ರೆಗೆ ಸೇರಿಸಿದರು. ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಮಗನಿಂದಲೇ ಅಪ್ಪನ ಕೊಲೆಗೆ ನಡೆದಿತ್ತಂತೆ ಸ್ಕೇಚ್!

    ಈ ಬಗ್ಗೆ ಸ್ಟೇಷನ್ ಬಜಾರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮೃತ ಯುವಕನ ಶವ ಪರೀಕ್ಷೆ ಹಾಗೂ ಆತನ ರಕ್ತದ ಮಾದರಿಯನ್ನು ಪರೀಕ್ಷಿಸಿ ವರದಿಯನ್ನು ಎಂಸಿಐಗೆ ನಂತರ ವೈದ್ಯರ ನಿರ್ಲಕ್ಷ ಕಂಡುಬಂದರೆ ಅಂತಹವರ ವಿರುದ್ಧ ಕ್ರಮದ ಸಾಧ್ಯತೆಯಿದೆ.

  • ಹೊಸ ಹಲ್ಲು ಹುಟ್ಟಿಲ್ಲವೆಂದು ಪ್ರಧಾನಿಗೆ ಪತ್ರ ಬರೆದ ಪುಟಾಣಿಗಳು

    ಹೊಸ ಹಲ್ಲು ಹುಟ್ಟಿಲ್ಲವೆಂದು ಪ್ರಧಾನಿಗೆ ಪತ್ರ ಬರೆದ ಪುಟಾಣಿಗಳು

    ನವದೆಹಲಿ: ಹಾಲು ಹಲ್ಲು ಬಿದ್ದು ಹೊಸ ಹಲ್ಲು ಇನ್ನೂ ಹುಟ್ಟಿಲ್ಲ ಅಂತ ಪ್ರಧಾನಿಗೆ ಪುಟಾಣಿಗಳು ಅಸ್ಸಾಂನ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಮತ್ತು ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದಿರುವುದು ಎಲ್ಲಡೆ ಸುದ್ದಿಯಾಗುತ್ತಿದೆ.

    adult teeth

    ಪ್ರತದಲ್ಲಿ ಏನಿದೆ?
    ಪ್ರೀತಿಯ ಹಿಮಾಂತ ಮಾಮ ನನ್ನ ಹಲ್ಲುಗಳು ಬಿದ್ದು ಹೋಗಿವೆ. ಇದುವರೆಗೂ ಬಂದಿಲ್ಲ. ಆದ ಕಾರಣ ನಾನು ನನ್ನ ಇಷ್ಟದ ಆಹಾರವನ್ನು ಸೇವಿಸಲು ಆಗುತ್ತಿಲ್ಲ. ದಯವಿಟ್ಟು ಏನಾದರೂ ಕ್ರಮ ಕೈಗೊಳ್ಳಿ. ಪ್ರೀತಿಯ ಮೋದಿಜೀ, ನನ್ನ ಮೂರು ಹಲ್ಲುಗಳು ಉದುರಿ ಹೋಗಿವೆ. ದಯವಿಟ್ಟು ನನ್ನ ಹಲ್ಲು ಇದುವರೆಗೂ ಬಾರದೇ ಇರುವುದಕ್ಕೆ ಏನಾದರೂ ಒಂದು ಕ್ರಮ ತೆಗೆದುಕೊಳ್ಳಿ. ನನ್ನ ಇಷ್ಟದ ಆಹಾರವನ್ನು ಜಗಿಯಲು, ತಿನ್ನಲು ಬಹಳ ಕಷ್ಟಪಡುತ್ತಿದ್ದೇನೆ.

    ಈ ರೀತಿಯ ಪತ್ರ ಬರೆದ ಇಬ್ಬರು ಮಕ್ಕಳು, ಸ್ವಂತ ಅಕ್ಕ-ತಮ್ಮನಾಗಿದ್ದಾರೆ. ಆರು ವರ್ಷದ ರಾವ್ಜ ಮತ್ತು ಐದು ವರ್ಷದ ಆರ್ಯನ್ ಮೂಲತಃ ಅಸ್ಸಾಮಿನವರು. ಇವರಿಬ್ಬರು ಸೇರಿಕೊಂಡು ಅಸ್ಸಾಂನ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಇವರು ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮುದ್ದಾದ ಬರವಣಿಗೆ ಮತ್ತು ವಿಚಾರಕ್ಕೆ ನೆಟ್ಟಿಗರ ಮನಸ್ಸನ್ನು ಗೆದ್ದಿದ್ದಾರೆ ಈ ಪುಟಾಣಿಗಳು.

    adult teeth

    ಈ ಪತ್ರಗಳನ್ನು ಅವರ ತಾಯಿಯ ಚಿಕ್ಕಪ್ಪ ಮುಖ್ತರ್ ಅಹಮದ್ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈಗ ಅವು ವೈರಲ್ ಆಗಿದ್ದು, ನೆಟ್ಟಿಗರ ಹೃದಯ ಗೆದ್ದಿವೆ. ಅವರ ಚಿಕ್ಕಪ್ಪ ಪತ್ರಗಳ ಫೋಟೋ ತೆಗೆದು, ಹಿಮಂತ ಬಿಸ್ವ ಶರ್ಮ, ನರೇಂದ್ರ ಮೋದಿಯವರಿಗೆ ನನ್ನ ಸೊಸೆ ರಾವ್ಜಾ (6 ವರ್ಷ) ಮತ್ತು ಸೋದರಳಿಯ ಆರ್ಯನ್ (5 ವರ್ಷ) ನನ್ನ ಸೊಸೆ ಮತ್ತು ಸೋದರಳಿಯರು ತಮ್ಮದೇ ಆದ ರೀತಿಯಲ್ಲಿ ಬರೆದಿದ್ದಾರೆ. ದಯವಿಟ್ಟು ಅವರ ಹಲ್ಲುಗಳಿಗೆ ಏನಾದರೂ ಸಲಹೆ ಸೂಚನೆ ನೀಡಿ, ಏಕೆಂದರೆ ಅವರು ತಮ್ಮ ನೆಚ್ಚಿನ ಆಹಾರವನ್ನು ಜಗಿಯಲು ಸಾಧ್ಯವಾಗುತ್ತಿಲ್ಲ ಎಂದು ಬರೆದು ಶೇರ್ ಮಾಡಿಕೊಂಡಿದ್ದಾರೆ.

  • ಇಲಿ ವಿಷದಿಂದ ಹಲ್ಲುಜ್ಜಿ ಪ್ರಾಣ ಬಿಟ್ಟ 18ರ ಯುವತಿ

    ಇಲಿ ವಿಷದಿಂದ ಹಲ್ಲುಜ್ಜಿ ಪ್ರಾಣ ಬಿಟ್ಟ 18ರ ಯುವತಿ

    ಮುಂಬೈ: ಟೂತ್ ಪೇಸ್ಟ್ ಎಂದು ತಪ್ಪಾಗಿ ಭಾವಿಸಿ ಇಲಿ ವಿಷದಲ್ಲಿ ಬ್ರಷ್ ಮಾಡಿ ಯುವತಿಯೊಬ್ಬಳು ಮೃತಪಟ್ಟಿರುವ ವಿಚಿತ್ರ ಘಟನೆ ಮುಂಬೈನಲ್ಲಿ ನಡೆದಿದೆ.

    ಅಫ್ಸಾನಾ ಖಾನ್(18) ಮೃತಳಾಗಿದ್ದಾಳೆ. ಮುಂಬೈ ಧಾರವಿ ಪ್ರದೇಶದಲ್ಲಿ ವಾಸಿಸುತ್ತಿದ್ದ ಅಫ್ಸಾನಾ ಟೂತ್ ಪೇಸ್ಟ್ ಎಂದು ತಪ್ಪಾಗಿ ಭಾವಿಸಿ ಇಲಿ ವಿಷದಲ್ಲಿ ಬ್ರಷ್ ಮಾಡಿ ಪ್ರಾಣ ಕಳೆದುಕೊಂಡಿದ್ದಾಳೆ.

    ಅಫ್ಸಾನಾ ಎಂದಿನಂತೆ ಬೆಳಗ್ಗೆ ಹಲ್ಲುಜ್ಜಲು ತೆರಳಿದ್ದಳು. ನಿದ್ದೆ ಕಣ್ಣಿನಲ್ಲಿದ್ದ ಆಕೆ ಟೂತ್ ಪೇಸ್ಟ್ ಬದಲಿಗೆ ಅದರ ಬಳಿಯಿದ್ದ ಇಲಿ ವಿಷದ ಪೇಸ್ಟ್ ಅನ್ನು ಬ್ರಷ್‍ಗೆ ಹಾಕಿ ಹಲ್ಲುಜ್ಜಿದ್ದಾಳೆ. ತಕ್ಷಣವೇ ವ್ಯತ್ಯಾಸ ಅರಿತ ಆಕೆ ಎಲ್ಲವನ್ನೂ ಉಗುಳಿ ಬಾಯಿಯನ್ನು ತೊಳೆದುಕೊಂಡಳು. ಆದರೆ ಅಷ್ಟರಲ್ಲಾಗಲೇ ತಲೆ ಸುತ್ತು ಬಂದು ಕೆಳಗೆ ಬಿದ್ದುಳು. ತಕ್ಷಣವೇ ಕುಟುಂಬಸ್ಥರು ಅಫ್ಸಾನಾಳನ್ನು ಆಸ್ಪತ್ರೆಗೆ ದಾಖಲಿಸಿದರೂ ಅಷ್ಟೊತ್ತಿಗೆ ತಡವಾಗಿತ್ತು. ವಿಷವು ದೇಹದಲ್ಲಿ ಹರಡಲು ಪ್ರಾರಂಭಿಸಿತು. ಎರಡು ದಿನಗಳ ಚಿಕಿತ್ಸೆಯ ನಂತರ, ಅಫ್ಸಾನಾ ಪ್ರಾಣ ಬಿಟ್ಟಿದ್ದಾಳೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ರಮ್ಯಾ ಸೌಂದರ್ಯವನ್ನು ಹಾಡಿಹೊಗಳಿದ ಅಭಿಮಾನಿಗಳು

    ವಿದ್ಯಾಭ್ಯಾಸದಲ್ಲಿ ಮುಂದಿದ್ದ ಅಫ್ಸಾನಾ ಮುಂದಿನ ದಿನಗಳಲ್ಲಿ ಕುಟುಂಬಕ್ಕೆ ನೆರವಾಗುವ ಭರವಸೆ ಮೂಡಿಸಿದ್ದಳು. ಅಫ್ಸಾನಾ ತಾಯಿ ಹಣ್ಣುಗಳನ್ನು ಮಾರಿ ಕುಟುಂಬದ ಖರ್ಚುಗಳನ್ನು ನೋಡಿಕೊಳ್ಳುತಿದ್ದರು. ತಾಯಿಗೆ ಸಹಾಯ ಮಾಡುತ್ತಾ ಅಫ್ಸಾನಾ ವಿದ್ಯಾಭ್ಯಾಸ ಮುಂದುವರೆಸಿದ್ದರು. ತಾನು ಓದಿ ದೊಡ್ಡ ಉದ್ಯೋಗಕ್ಕೆ ಸೇರಿ ಇಡೀ ಕುಟುಂಬವನ್ನು ಕಾಪಾಡುವ ಭರವಸೆ ಹುಟ್ಟುಹಾಕಿದ್ದಳು. ಆದರೆ ಇದೀಗ ಮಗಳ ದುರಂತ ಸಾವಿನಿಂದ ಇಡೀ ಕುಟುಂಬ ಶೋಕದಲ್ಲಿದೆ.

    ಪೊಲೀಸರು ಈ ಘಟನೆಯನ್ನು ಆಕಸ್ಮಿಕ ಸಾವಿನ ಪ್ರಕರಣವಾಗಿ ದಾಖಲಿಸಿದ್ದಾರೆ. ಅಷ್ಟೇ ಅಲ್ಲದೆ ಸುಲಭವಾಗಿ ಕೈಗೆ ಸಿಗುವಂತಹ ಸ್ಥಳಗಳಲ್ಲಿ ಇಂತಹ ವಿಷಕಾರಿ ವಸ್ತುಗಳನ್ನು ಮನೆಯಲ್ಲಿ ಇಡಬೇಡಿ ಎಂದು ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

  • ಕತ್ತರಿ ಬದಲು ಹಲ್ಲಿನಿಂದಲೇ ರಿಬ್ಬನ್ ಕತ್ತರಿಸಿದ ಪಾಕಿಸ್ತಾನದ ಸಚಿವ

    ಕತ್ತರಿ ಬದಲು ಹಲ್ಲಿನಿಂದಲೇ ರಿಬ್ಬನ್ ಕತ್ತರಿಸಿದ ಪಾಕಿಸ್ತಾನದ ಸಚಿವ

    ಇಸ್ಲಾಮಾಬಾದ್: ಪಾಕಿಸ್ತಾನದ ಸಚಿವರೊಬ್ಬರು ಉದ್ಘಾಟನಾ ಸಮಾರಂಭದಲ್ಲಿ ಕತ್ತರಿ ಇಲ್ಲದ್ದನ್ನು ಕಂಡು ಬಾಯಿಯಿಂದಲೇ ರಿಬ್ಬನ್ ಕತ್ತರಿಸಿದ್ದಾರೆ. ಇದೀಗ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

    ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸಚಿವ ಫಯಾಜ್ ಅಲ್ ಹಸನ್ ಚೌಹಾಣ್ ಅವರು ಶೋ ರೂಮ್ ಉದ್ಘಾಟನೆಗಾಗಿ ಸಮಾರಂಭಕ್ಕೆ ಆಗಮಿಸಿದ್ದರು. ಸಕಲ ಸಿದ್ಧತೆಗಳೂ ನಡೆದಿತ್ತು. ಉದ್ಘಾಟನೆ ವೇಳೆ ಎಷ್ಟು ಪ್ರಯತ್ನಿಸಿದರೂ ಕತ್ತರಿಯಿಂದ ಕತ್ತರಿಸಲಾಗದ ರಿಬ್ಬನ್‍ಅನ್ನು ತಮ್ಮ ಬಾಯಿಯಿಂದಲೇ ಕಟ್ ಮಾಡಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಪ್ರಕರಣ ತಡೆಗೆ ವಿದ್ಯಾರ್ಥಿಯಿಂದ ರಾಜ್ಯಾದ್ಯಂತ ಸೈಕಲ್ ಜಾಥಾ

    ಸಚಿವ ಫಯಾಜ್ ಉಲ್ ಹಸನ್ ಚೌಹಾಣ್ ಅವರು ಉದ್ಘಾಟನೆ ವೇಳೆ ಕತ್ತರಿಯನ್ನು ಹಿಡಿದಿದ್ದಾರೆ. ರಿಬ್ಬನ್ ಕತ್ತರಿಸಲು ಮುಂದಾಗುತ್ತಾರೆ. ಆದರೆ ಎಷ್ಟು ಪ್ರಯತ್ನಿಸಿದರೂ ಸಹ ಆ ಕತ್ತರಿಯಿಂದ ರಿಬ್ಬನ್ ಕಟ್ ಆಗಲಿಲ್ಲ. ತಕ್ಷಣ ತಮ್ಮ ಹಲ್ಲುಗಳಿಂದ ರಿಬ್ಬನ್ ಕತ್ತರಿಸಿದ ವೀಡಿಯೋ ಫುಲ್ ವೈರಲ್ ಆಗಿದೆ.

  • ಬಾಳೆಹಣ್ಣಿನ ಸಿಪ್ಪೆಯಿಂದ ಆಗುವ ಆರೋಗ್ಯಕರ ಅನುಕೂಲ

    ಬಾಳೆಹಣ್ಣಿನ ಸಿಪ್ಪೆಯಿಂದ ಆಗುವ ಆರೋಗ್ಯಕರ ಅನುಕೂಲ

    -ಮೊಡವೆ ನಿವಾರಣೆ, ಫಳಫಳ ಹಲ್ಲುಗಳಿಗಾಗಿ ಮದ್ದು ಬಾಳೆ ಸಿಪ್ಪೆ

    ಸಾಮಾನ್ಯವಾಗಿ ನಾವು ಬಳಸಿದ ಪ್ರತಿಯೊಂದು ವಸ್ತುವೂ ಒಂದಲ್ಲ ಒಂದು ರೀತಿಯಲ್ಲಿ ಮತ್ತೆ ಉಪಯೋಗಕ್ಕೆ ಬರುತ್ತವೆ. ಅದರಲ್ಲೂ ನಾವು ಬಳಸುವ ಹಣ್ಣುಗಳಂತೂ ತುಂಬಾ ಉಪಯೋಗಕ್ಕೆ ಬರುತ್ತವೆ. ಆದರೆ ಅದರಿಂದ ಆಗುವ ಅನುಕೂಲಗಳನ್ನು ತಿಳಿಯದೆ ನಾವು ಉಪಯೋಗವಾಗುವ ವಸ್ತು ಅಥವಾ ಹಣ್ಣುಗಳನ್ನು ಬಿಸಾಕುತ್ತೇವೆ. ಅದೇ ರೀತಿ ಎಲ್ಲರೂ ಮನೆಯಲ್ಲಿ ಬಾಳೆ ಹಣ್ಣು ಇದ್ದೆ ಇರುತ್ತದೆ. ಊಟ ಆದ ಮೇಲೆ ತಿಂದು ಅದರ ಸಿಪ್ಪೆಯನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ. ಆದರೆ ಬಾಳೆಹಣ್ಣಿನಲ್ಲಿ ಇರುವಂತಹ ಹಲವಾರು ರೀತಿಯ ಪೋಷಕಾಂಶಗಳು ಬಾಳೆಹಣ್ಣಿನ ಸಿಪ್ಪೆಯಲ್ಲೂ ಇದೆ. ಇದನ್ನು ಕೆಲವೊಂದು ಅಧ್ಯಯನಗಳು ಹೇಳುತ್ತವೆ. ಬಾಳೆಹಣ್ಣಿನ ಸಿಪ್ಪೆ ಕೂಡ ಆರೋಗ್ಯಕ್ಕೆ ತುಂಬಾ ಲಾಭಕರವಾಗಿದೆ.

    ಬಾಳೆಹಣ್ಣಿನ ಸಿಪ್ಪೆಯಲ್ಲಿ ವಿಟಮಿನ್ ಬಿ6 ಮತ್ತು ವಿಟಮಿನ್ ಬಿ12 ಅತ್ಯಧಿಕ ಮಟ್ಟದಲ್ಲಿ ಇರುತ್ತದೆ. ಅಷ್ಟೇ ಅಲ್ಲದೇ ಮೆಗ್ನಿಷಿಯಂ, ಪೊಟ್ಯಾಶಿಯಂ, ನಾರಿನಾಂಶ ಮತ್ತು ಪ್ರೋಟಿನ್ ಬಾಳೆಹಣ್ಣಿನ ಸಿಪ್ಪೆಯಲ್ಲಿದೆ. ಆದ್ದರಿಂದ ಬಾಳೆ ಹಣ್ಣಿನ ಸಿಪ್ಪೆಯಿಂದ ಏನೆಲ್ಲಾ ಸದುಪಯೋಗಗಳನ್ನು ಪಡೆದುಕೊಳ್ಳಬಹುದು ಎಂಬುದನ್ನು ತಿಳಿಯೋಣ.

    1. ಹೊಳೆಯುವ ಹಲ್ಲುಗಳಿಗಾಗಿ: ಬಾಳೆಹಣ್ಣಿನ ಸಿಪ್ಪೆಯನ್ನು ಚಿಕ್ಕ ತುಂಡುಗಳನ್ನಾಗಿ ಮಾಡಿಕೊಂಡು ಎರಡರಿಂದ ಮೂರು ನಿಮಿಷದ ತನಕ ಹಲ್ಲುಗಳ ಮೇಲೆ ಉಜ್ಜಿ. ಆಮೇಲೆ ಹತ್ತು ನಿಮಿಷ ಹಾಗೆಯೇ ಬಿಡಿ. ನಂತರ ನಿಮ್ಮ ಹಲ್ಲುಗಳನ್ನು ತೊಳೆಯಿರಿ. ಇದರಿಂದ ನಿಮ್ಮ ಹಲ್ಲುಗಳಿಗೆ ಫಳ ಫಳ ಎನ್ನುವ ಹೊಳಪು ದೊರೆಯುತ್ತದೆ.

    2. ಮೊಡವೆಯ ಸಮಸ್ಯೆ ಪರಿಹಾರ: ಸಾಮಾನ್ಯವಾಗಿ ಯುವತಿ ಮತ್ತು ಯುವಕರಿಗೆ ಮೊಡವೆಗಳ ಸಮಸ್ಯೆ ಇರುತ್ತದೆ. ಹೀಗಾಗಿ ಮೊಡವೆಗಳು ಉಂಟಾದಾಗ ಬಾಳೆಹಣ್ಣಿನ ಸಿಪ್ಪೆಯ ಚಿಕ್ಕ ತುಂಡನ್ನು ತೆಗೆದುಕೊಂಡು ನಿಮ್ಮ ಮುಖದಲ್ಲಿ ಮೊಡವೆ ಇರುವ ಜಾಗದ ಮೇಲೆ ಸ್ವಲ್ಪ ಹೊತ್ತು ನಿಧಾನವಾಗಿ ಮಸಾಜ್ ಮಾಡಿ. ಅದನ್ನು ಹಾಗೆಯೇ 10 ನಿಮಿಷ ಬಿಡಿ. ಇದರಿಂದ ನೋವು ಕಡಿಮೆಯಾಗುತ್ತದೆ. ಆಮೇಲೆ ಶುದ್ಧವಾದ ನೀರಿನಿಂದ ಮುಖವನ್ನು ತೊಳೆಯಿರಿ. ಒಂದು ವಾರ ಹೀಗೆ ಮಾಡುತ್ತಿದ್ದರೆ ಮುಖದಲ್ಲಿರುವ ಮೊಡವೆ ನಿಧಾನಕ್ಕೆ ಹೋಗುತ್ತವೆ.

    3. ಆರೋಗ್ಯಕರವಾದ ಚರ್ಮಕ್ಕೆ: ಒಂದು ತಾಜಾವಾದ ಬಾಳೆಹಣ್ಣಿನ ಸಿಪ್ಪೆ ತೆಗೆದುಕೊಂಡು ಅದನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಮಾಡಿ ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ. ರುಬ್ಬಿದ ಮಿಶ್ರಣಕ್ಕೆ ಒಂದು ಮೊಟ್ಟೆಯ ಹಳದಿ ಭಾಗವನ್ನು ಸೇರಿಸಿ. ನಂತರ ಮಿಶ್ರಣವನ್ನು ನಿಮ್ಮ ಮುಖಕ್ಕೆ ಹಚ್ಚಿ. ಐದು ನಿಮಿಷ ಬಿಟ್ಟು, ನೀರಿನಿಂದ ಮುಖವನ್ನು ತೊಳೆಯಿರಿ. ವಾರದಲ್ಲಿ ಎರಡು ಅಥವಾ ಮೂರು ದಿನ ಹೀಗೆ ಮಾಡಿ. ಇದು ನಿಮ್ಮ ಮುಖದ ನೆರಿಗೆಯನ್ನು ಕಡಿಮೆ ಮಾಡುವುದಲ್ಲದೇ, ಕಾಂತಿಯನ್ನು ಹೆಚ್ಚಿಸುತ್ತದೆ.

    4. ಚರ್ಮದ ಗಂಟು ನಿವಾರಣೆ: ನಿಮಗೆ ಚರ್ಮದ ಗಂಟಿನಿಂದ ಯಾವುದೇ ಸಮಸ್ಯೆಯಾಗುತ್ತಾ ಇದ್ದರೆ ಬಾಳೆಹಣ್ಣಿನ ಸಿಪ್ಪೆಯಿಂದ ಇದನ್ನು ನಿವಾರಣೆ ಮಾಡಬಹುದು. ಭಾದಿತ ಜಾಗದಲ್ಲಿ ಬಾಳೆಹಣ್ಣಿನ ಸಿಪ್ಪೆಯನ್ನು ಉಜ್ಜಿಕೊಳ್ಳಿ ಮತ್ತು ಇದು ಬೇಗನೆ ನಿವಾರಣೆಯಾಗುವುದು. ಬಾಳೆಹಣ್ಣಿನಲ್ಲಿ ನೋವುನಿವಾರಕ ಗುಣಗಳು ಇವೆ. ಹೀಗಾಗಿ ಬಾಳೆಹಣ್ಣಿನ ಸಿಪ್ಪೆಯನ್ನು ನೋಯುತ್ತಿರುವ ಮಚ್ಚೆಗೆ ಉಜ್ಜಿದರೆ ನೋವು ಕಡಿಮೆಯಾಗುವುದು.

    5. ಕಪ್ಪುಕಲೆ ನಿವಾರಣೆ: ಒಂದು ಬಾಳೆಹಣ್ಣಿನ ಸಿಪ್ಪೆ ತೆಗೆದುಕೊಂಡು ಅದನ್ನು ಚಿಕ್ಕದಾಗಿ ಕತ್ತರಿಸಿಕೊಳ್ಳಿ. ಇದಕ್ಕೆ ಒಂದು ಚಮಚ ಮೊಸರು ಹಾಕಿ ನುಣ್ಣಗೆ ರುಬ್ಬಿ. ರುಬ್ಬಿದ ಮಿಶ್ರಣಕ್ಕೆ ಒಂದು ಚಮಚ ಜೇನುತುಪ್ಪು, ಅರ್ಧಚಮಚ ನಿಂಬೆಹಣ್ಣಿನ ರಸ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಇದನ್ನು ಮುಖಕ್ಕೆ ಹಚ್ಚಿ 10 ನಿಮಿಷ ಹಾಗೆಯೇ ಬಿಡಿ. ನಂತರ ತಣ್ಣಗಿನ ನೀರಿನಿಂದ ಮುಖ ತೊಳೆಯಿರಿ. ವಾರದಲ್ಲಿ ಎರಡು ಬಾರಿ ಹೀಗೆ ಮಾಡಿದರೆ ಕಲೆ ರಹಿತ ಮುಖ ನಿಮ್ಮದಾಗುತ್ತದೆ.

    6. ತ್ವಚೆಗಾಗಿ: ಒಂದು ಬಾಳೆಹಣ್ಣಿನ ಸಿಪ್ಪೆ ಮತ್ತು ಮೂರು ಚಮಚ ಲಿಂಬೆ ರಸವನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಿ. ಈ ಮಿಶ್ರಣವನ್ನು ಮುಖಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯ ಕಳೆದ ಬಳಿಕ ಮುಖವನ್ನು ತಣ್ಣೀರಿನಿಂದ ತೊಳೆಯಿರಿ. ಚರ್ಮದಲ್ಲಿ ಬದಲಾವಣೆ ಬರಲು ನೀವು ಇದನ್ನು ದಿನನಿತ್ಯ ಬಳಸಿಕೊಳ್ಳಬಹುದು.

    7. ಎಣ್ಣೆಯುಕ್ತ ಚರ್ಮಕ್ಕೆ: ಕೆಲವರಿಗೆ ಚರ್ಮವು ಎಣ್ಣೆಯಾಗಿರುತ್ತದೆ. ಅವರು ಮಿಕ್ಸಿಯಲ್ಲಿ ಬಾಳೆಹಣ್ಣಿನ ಸಿಪ್ಪೆ ರುಬ್ಬಿಕೊಳ್ಳಿ. ನಂತರ ರುಬ್ಬಿಕೊಂಡಿರುವ ಬಾಳೆಹಣ್ಣಿನ ಸಿಪ್ಪೆಗೆ ಒಂದು ಚಮಚ ಅಡುಗೆ ಸೋಡಾ ಹಾಕಿ ಮಿಶ್ರಣ ಮಾಡಿ. ಇದು ತುಂಬಾ ಒಣಗಿದಂತೆ ಇರುತ್ತದೆ. ಆಗ ಇದಕ್ಕೆ ನಿಮಗೆ ಬೇಕಾದಷ್ಟು ನೀರು ಹಾಕಿಕೊಳ್ಳಿ. ಇದನ್ನು ಮುಖ ಹಾಗೂ ಚರ್ಮಕ್ಕೆ ಹಚ್ಚಿಕೊಳ್ಳಿ. ತಣ್ಣೀರಿನಿಂದ ತೊಳೆಯಿರಿ. ಇದರಿಂದ ಎಣ್ಣೆಯುಕ್ತ ಚರ್ಮ ನಿವಾರಣೆಯಾಗುತ್ತದೆ.

    8. ತೂಕ ಇಳಿಕೆ: ಬಾಳೆಹಣ್ಣಿನ ಸಿಪ್ಪೆಯನ್ನು ತೂಕ ಕಳೆದುಕೊಳ್ಳಲು ಬಳಸಬಹುದು. ಪ್ರತಿ ದಿನ ಎರಡು ಬಾಳೆಹಣ್ಣುಗಳನ್ನು ಮಧ್ಯಾಹ್ನದ ಊಟದ ವೇಳೆ ಸೇವಿಸಿ. ಇದರ ಸಿಪ್ಪೆಗಳನ್ನು ಪ್ರತ್ಯೇಕವಾಗಿ ಸೇವಿಸಿ. ರಾತ್ರಿ ವೇಳೆ ಊಟ ಮಾಡಬೇಡಿ. ಯಾಕೆಂದರೆ ಬಾಳೆಹಣ್ಣಿನ ಸಿಪ್ಪೆಯು ಸರಿಯಾಗಿ ಕರಗಬೇಕು. ಅಧ್ಯಯನಗಳ ಪ್ರಕಾರ ಈ ಆಹಾರ ಕ್ರಮದಿಂದ ಸುಮಾರು 2.5 ಕೆಜಿಯಷ್ಟು ತೂಕ ಕಳೆದುಕೊಳ್ಳಬಹುದು.

    9. ಕೀಟಗಳ ಕಡಿತಕ್ಕೆ: ಯಾವುದೇ ಕೀಟಗಳು ಕಚ್ಚಿದರೆ ಆ ಜಾಗಕ್ಕೆ ಬಾಳೆಹಣ್ಣಿನ ಸಿಪ್ಪೆಯನ್ನು ಉಜ್ಜಿಕೊಳ್ಳಿ. ಇದರಿಂದ ತುರಿಕೆ ಮತ್ತು ನೋವುಗಳು ತಕ್ಷಣ ನಿವಾರಣೆಯಾಗುತ್ತದೆ.

    10. ಕಣ್ಣಿನ ರಕ್ಷಣೆ: ಬಾಳೆಹಣ್ಣಿನ ಸಿಪ್ಪೆಯನ್ನು ಕಣ್ಣಿನ ಸುತ್ತ ಲೇಪಿಸುವುದರಿಂದ ಯು.ವಿ.ಕಿರಣಗಳಿಂದ ರಕ್ಷಣೆ ಪಡೆಯಬಹುದು. ಹೀಗೆ ಮಾಡುವ ಮೊದಲು ಬಾಳೆಹಣ್ಣಿನ ಸಿಪ್ಪೆಯನ್ನು ಸ್ವಲ್ಪ ಹೊತ್ತು ಬಿಸಿಲಿನಲ್ಲಿ ಬಿಡಿ, ನಂತರ ಹಚ್ಚಿ. ಹೀಗೆ ಮಾಡುವುದರಿಂದ ಕಣ್ಣಿನ ಪೊರೆ ಬರದಂತೆ ಸಹ ತಡೆಯಬಹುದು.

    11. ಹೊಳಪಿಗಾಗಿ: ಶೂ, ಚರ್ಮದ ಉತ್ಪನ್ನ ಮತ್ತು ಬೆಳ್ಳಿಯ ವಸ್ತುಗಳಿಗೆ ತಕ್ಷಣ ಹೊಳಪು ನೀಡಲು ಬಾಳೆಹಣ್ಣಿನ ಸಿಪ್ಪೆಯನ್ನು ಬಳಸಬಹುದು. ಇದಕ್ಕಾಗಿ ಸಿಪ್ಪೆಯನ್ನು ಅವುಗಳ ಮೇಲೆ ಉಜ್ಜಿದರೆ ಹೊಳಪು ಬರುತ್ತದೆ.