Tag: Teja Sajja

  • ಹನುಮಾನ್ ಖ್ಯಾತಿಯ ತೇಜ ಸಜ್ಜಾ ನಟನೆಯ ಮಿರಾಯ್ ಟ್ರೈಲರ್ ರಿಲೀಸ್

    ಹನುಮಾನ್ ಖ್ಯಾತಿಯ ತೇಜ ಸಜ್ಜಾ ನಟನೆಯ ಮಿರಾಯ್ ಟ್ರೈಲರ್ ರಿಲೀಸ್

    ನುಮಾನ್ ಚಿತ್ರದ ಮೂಲಕ ಬಾಕ್ಸ್ ಆಫೀಸ್ ಶೇಕ್ ಮಾಡಿದ್ದ ತೇಜ ಸಜ್ಜಾ (Teja Sajja), ಈಗ ಸೂಪರ್ ಯೋಧನಾಗಿ ಮತ್ತೆ ಎಂಟ್ರಿ ಕೊಟ್ಟಿದ್ದಾರೆ. ಬಹುನಿರೀಕ್ಷಿತ ಮಿರಾಯ್ (Mirai Movie) ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ನಿರ್ದೇಶಕ ಕಾರ್ತಿಕ್ ಘಟ್ಟಮನೇನಿ ಪ್ರೇಕ್ಷಕರಿಗೆ ಭರ್ಜರಿ ವಿಷ್ಯುವಲ್ ಟ್ರೀಟ್ ನೀಡಿದ್ದಾರೆ. ಮೂರು ನಿಮಿಷ ಏಳು ಸೆಕೆಂಡ್ ಇರುವ ಟ್ರೇಲರ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.

    ಸೂಪರ್ ಯೋಧನಾಗಿ ಜನರನ್ನು ರಕ್ಷಿಸಲು ತೇಜ ಸಜ್ಜಾ ಹೋರಾಟ ಮಾಡ್ತಾರೆ. ಅವರ ವಿರುದ್ಧ ಮಂಚು ಮನೋಜ್ ಖಳನಾಯಕನಾಗಿ ಅಬ್ಬರಿಸಿದ್ದಾರೆ. ಭರ್ಜರಿ ಆಕ್ಷನ್ ಜೊತೆಗೆ ಪುರಾಣದ ಕಥೆಯನ್ನು ಸೊಗಸಾಗಿ ಟ್ರೇಲರ್‌ನಲ್ಲಿ ಕಟ್ಟಿಕೊಡಲಾಗಿದೆ. ಧರ್ಮ ರಕ್ಷಕನಾಗಿ ತೇಜ ಸಜ್ಜಾ ಹೋರಾಟ ನಡೆಸುತ್ತಾರೆ. ಟ್ರೇಲರ್ ಕೊನೆಯಲ್ಲಿ ಬರುವ ಭಗವಾನ್ ಶ್ರೀರಾಮ ಝಲಕ್ ಪ್ರೇಕ್ಷಕರಿಗೆ ರೋಮಾಂಚನ ನೀಡಲಿದೆ. ಇದನ್ನೂ ಓದಿ: ರೋಷನ್ ಕೋಟಿ ಕೋಟಿ ಒಡೆಯ ಎಂದವರಿಗೆ ಅನುಶ್ರೀ ಕ್ಲ್ಯಾರಿಟಿ ಏನು?

    ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಮೀಡಿಯಾ ಫ್ಯಾಕ್ಟರಿಯಡಿ ಟಿ.ಜಿ.ವಿಶ್ವಪ್ರಸಾದ್ ಚಿತ್ರ ನಿರ್ಮಾಣ ಮಾಡಿದ್ದಾರೆ. ರಿತಿಕಾ ನಾಯಕ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ನಿರ್ದೇಶಕ ಕಾರ್ತಿಕ್ ಘಟ್ಟಮನೇನಿ ಮಿರಾಯ್‌ಗೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಮಣಿಬಾಬು ಕರಣಂ ಸಂಭಾಷಣೆ ಬರೆದಿದ್ದಾರೆ. ಶ್ರೀ ನಾಗೇಂದ್ರ ತಂಗಳ ಕಲಾ ನಿರ್ದೇಶನ ಚಿತ್ರಕ್ಕಿದ್ದು, ವಿವೇಕ್ ಕೂಚಿಭೋಟ್ಲ ಸಹ ನಿರ್ಮಾಪಕರು. ಪ್ರಸಾದ್ ಕ್ರಿಯೇಟಿವ್ ನಿರ್ಮಾಪಕರಾಗಿದ್ದು, ಸುಜಿತ್ ಕುಮಾರ್ ಕೊಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

    ಸೆಪ್ಟೆಂಬರ್ 12ರಂದು ಮಿರಾಯ್ ಸಿನಿಮಾ 2D ಮತ್ತು 3D ಫಾರ್ಮೆಟ್‌ನಲ್ಲಿ ಏಳು ಭಾಷೆಯಲ್ಲಿ ರಿಲೀಸ್ ಆಗಲಿದೆ. ಕನ್ನಡದಲ್ಲಿ ಈ ಚಿತ್ರವನ್ನು ವಿಕೆ ಫಿಲ್ಮ್ ಬ್ಯಾನರ್ ನಡಿ ಹೊಂಬಾಳೆ ಫಿಲ್ಮ್ ರಿಲೀಸ್ ಮಾಡುತ್ತಿದೆ. ಇದನ್ನೂ ಓದಿ: ನಟ ವಿಷ್ಣುವರ್ಧನ್‌ರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡಿ: ಸಿಎಂಗೆ ಅನಿರುದ್ಧ ಮನವಿ

  • ತೇಜ ಸಜ್ಜಾ ನಟನೆಯ ಮಿರಾಯ್ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ತೇಜ ಸಜ್ಜಾ ನಟನೆಯ ಮಿರಾಯ್ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ನುಮಾನ್’ ಮೂಲಕ ಸಾಕಷ್ಟು ಜನಪ್ರಿಯರಾಗಿರುವ ಟಾಲಿವುಡ್ ನಟ ತೇಜ ಸಜ್ಜಾ (Teja Sajja) ನಟನೆಯ ಬಹು ನಿರೀಕ್ಷಿತ ಸಿನಿಮಾ ಮಿರಾಯ್. ಹನುಮಾನ್ ಚಿತ್ರದ ಬಳಿಕ ತೇಜ ಒಪ್ಪಿಕೊಂಡಿರುವ ಮತ್ತೊಂದು ಸೂಪರ್ ಹೀರೋ ಚಿತ್ರ ಇದಾಗಿದೆ. ಸ್ಯಾಂಪಲ್ಸ್ ಮೂಲಕ ನಿರೀಕ್ಷೆ ಹೆಚ್ಚಿರುವ ಮಿರಾಯ್ (Mirai) ಸಿನಿಮಾ ಸೆಪ್ಟೆಂಬರ್ 12ರಂದು ತೆರೆಗೆ ಬರ್ತಿದೆ.

    ಮಿರಾಯ್ ಸಿನಿಮಾದ ಥಿಯೇಟರಿಕಲ್ ಟ್ರೇಲರ್ ನ್ನು ಚಿತ್ರತಂಡ ನಾಳೆ ರಿಲೀಸ್ ಮಾಡಲಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಗೆ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿಯಡಿ ಟಿ.ಜಿ.ವಿಶ್ವಪ್ರಸಾದ್ ಚಿತ್ರ ನಿರ್ಮಾಣ ಮಾಡಿದೆ. ರಾಕಿಂಗ್ ಸ್ಟಾರ್ ಮನೋಜ್ ಮಂಚು ಖಳನಾಯಕನಾಗಿ ಮತ್ತು ರಿತಿಕಾ ನಾಯಕ್ ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಸೂಪರ್ ಯೋಧಾ ಪಾತ್ರದಲ್ಲಿ ತೇಜ ಸಜ್ಜಾ ಅಭಿನಯಿಸಿದ್ದಾರೆ. ಇದನ್ನೂ ಓದಿ: ಗುರುವಾಯೂರು ದೇವಾಲಯದ ಕೊಳದಲ್ಲಿ ಕಾಲು ತೊಳೆದ ಜಾಸ್ಮಿನ್ ಜಾಫರ್ ಭುಗಿಲೆದ್ದ ಆಕ್ರೋಶ

    ನಿರ್ದೇಶಕ ಕಾರ್ತಿಕ್ ಘಟ್ಟಮನೇನಿ ಮಿರಾಯ್ಗೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಮಣಿಬಾಬು ಕರಣಂ ಸಂಭಾಷಣೆ ಬರೆದಿದ್ದಾರೆ. ಶ್ರೀ ನಾಗೇಂದ್ರ ತಂಗಳ ಕಲಾ ನಿರ್ದೇಶನ ಚಿತ್ರಕ್ಕಿದ್ದು, ವಿವೇಕ್ ಕೂಚಿಭೋಟ್ಲ ಸಹ ನಿರ್ಮಾಪಕರು. ಕೃತಿ ಪ್ರಸಾದ್ ಕ್ರಿಯೇಟಿವ್ ನಿರ್ಮಾಪಕರಾಗಿದ್ದು, ಸುಜಿತ್ ಕುಮಾರ್ ಕೊಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

    ವಿಶೇಷವಾಗಿ ಈ ಚಿತ್ರ 2D ಮತ್ತು 3D ಫಾರ್ಮಾಟ್ನಲ್ಲಿ ರಿಲೀಸ್ ಆಗಲಿದೆ. ಮಿರಾಯ್ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯದ ಕಥೆಯನ್ನು ಸಿನಿಮಾ ಹೇಳುತ್ತದೆ.

  • ಮಿರಾಯ್ ಸಿನಿಮಾದ ಮೊದಲ ಹಾಡಿಗೆ ಭರ್ಜರಿ ರೆಸ್ಪಾನ್ಸ್: ಹನುಮಾನ್ ಹುಡುಗನ ಚಿತ್ರ

    ಮಿರಾಯ್ ಸಿನಿಮಾದ ಮೊದಲ ಹಾಡಿಗೆ ಭರ್ಜರಿ ರೆಸ್ಪಾನ್ಸ್: ಹನುಮಾನ್ ಹುಡುಗನ ಚಿತ್ರ

    ‘ಹನುಮಾನ್’ ಖ್ಯಾತಿಯ ನಟ ತೇಜ್ ಸಜ್ಜಾ (Teja Sajja) ನಟನೆಯ ‘ಮಿರಾಯ್’ (Mirai) ಚಿತ್ರ ಮೂಲಕ ಬರಲು ಸಜ್ಜಾಗಿದ್ದಾರೆ. ‘ಹನುಮಾನ್’ ಚಿತ್ರ ಆದ್ಮೇಲೆ ಮಾಡಿರೋ ಮತ್ತೊಂದು ಸೂಪರ್ ಹೀರೋ ಚಿತ್ರವೇ ಇದಾಗಿದೆ. ಬಹುಭಾಷೆಯಲ್ಲಿಯೇ ಬರುತ್ತಿರುವ ಈ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದ್ದು, ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ.

    ವೈಬ್ ಐತೆ ಬೇಬಿ ಎಂದು ನಾಯಕ ತೇಜ್ ಸಜ್ಜಾ ಮತ್ತು ರಿತಿಕಾ ನಾಯಕ್ ಭರ್ಜರಿಯಾಗಿ ಹೆಜ್ಜೆ ಹಾಕಿದ್ದಾರೆ. ಕನ್ನಡದಲ್ಲಿಯೂ ಈ ಹಾಡು ರಿಲೀಸ್ ಆಗಿದ್ದು, ಅರ್ಮಾನ್ ಮಲಿಕ್ ಧ್ವನಿಯಾಗಿದ್ದಾರೆ. ಗೌರ ಹರಿ ಸಂಗೀತ ನೀಡಿದ್ದಾರೆ, ವರದರಾಜ್ ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದಾರೆ. ಇದನ್ನೂ ಓದಿ: ಡಿ-ಬಾಸ್ ಫ್ಯಾನ್ಸ್‌ನಿಂದ ಅಶ್ಲೀಲ ಮೆಸೇಜ್ – ನಟಿ ರಮ್ಯಾ ಬೆಂಬಲಕ್ಕೆ ನಿಂತ ದೊಡ್ಮನೆ ಕುಟುಂಬ

    ‘ಮಿರಾಯ್’ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್‌ಗಳಿವೆ. ಈ ಆ್ಯಕ್ಷನ್ ಚಿತ್ರವನ್ನ ಕಾರ್ತಿಕ್ ಘಟ್ಟಮನೇನಿ ಡೈರೆಕ್ಷನ್ ಮಾಡಿದ್ದಾರೆ. ವಿಶೇಷವಾಗಿ ಈ ಚಿತ್ರ 2ಡಿ ಮತ್ತು 3ಡಿ ರೂಪದಲ್ಲಿಯೇ ಸಿನಿಮಾ ರಿಲೀಸ್ ಆಗುತ್ತಿದೆ. ಅತೀ ದೊಡ್ಡ ಮಟ್ಟದಲ್ಲಿಯೇ ಈ ಚಿತ್ರ ರಿಲೀಸ್ ಆಗುತ್ತಿದೆ. ಸೆಪ್ಟೆಂಬರ್ 5ರಂದು ಮಿರಾಯ್ ಬಿಡುಗಡೆಯಾಗಲಿದೆ.

    ‘ಮಿರಾಯ್’ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯದ ಕಥೆಯನ್ನು ಸಿನಿಮಾ ಹೇಳುತ್ತದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಅಡಿ ಟಿ.ಜಿ.ವಿಶ್ವಪ್ರಸಾದ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ: ಕಿರುತೆರೆಯ ಖ್ಯಾತ ನಟ ಚಂದನ್ ನಿರ್ದೇಶನದ ಚಿತ್ರಕ್ಕೆ ಕಿಚ್ಚನ ಕಂಠ

    ಮನೋಜ್ ಮಂಚು ಖಳನಾಯಕನಾಗಿ ಮತ್ತು ನಾಯಕಿಯಾಗಿ ರಿತಿಕಾ ನಾಯಕ್ ನಟಿಸಿರುವ ಈ ಚಿತ್ರದಲ್ಲಿ ಡಿಫರೆಂಟ್ ರೋಲ್‌ನಲ್ಲಿ ತೇಜ್ ಸಜ್ಜಾ ನಟಿಸುತ್ತಿದ್ದಾರೆ. ಕಾರ್ತಿಕ್ ‘ಮಿರಾಯ್’ಗೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಮಣಿಬಾಬು ಕರಣಂ ಸಂಭಾಷಣೆ ಬರೆದಿದ್ದಾರೆ. ನಾಗೇಂದ್ರ ತಂಗಳ ಕಲಾ ನಿರ್ದೇಶನ, ಗೌರ ಹರಿ ಸಂಗೀತ ಚಿತ್ರಕ್ಕಿದೆ.

  • ಸೂಪರ್ ಯೋಧನಾಗಿ ತೇಜ್ ಸಜ್ಜಾ ಎಂಟ್ರಿ- ಆ್ಯಕ್ಷನ್ ಪ್ಯಾಕ್ಡ್ ‘ಮಿರಾಯ್’‌ ಚಿತ್ರದ ಟೀಸರ್ ಔಟ್

    ಸೂಪರ್ ಯೋಧನಾಗಿ ತೇಜ್ ಸಜ್ಜಾ ಎಂಟ್ರಿ- ಆ್ಯಕ್ಷನ್ ಪ್ಯಾಕ್ಡ್ ‘ಮಿರಾಯ್’‌ ಚಿತ್ರದ ಟೀಸರ್ ಔಟ್

    ನುಮಾನ್ ಖ್ಯಾತಿಯ ತೇಜ್ ಸಜ್ಜಾ (Teja Sajja) ನಟನೆಯ ‘ಮಿರಾಯ್’ (Mirai) ಚಿತ್ರದ ಟೀಸರ್ ರಿಲೀಸ್ ಆಗಿದೆ. ಆ್ಯಕ್ಷನ್ ಪ್ಯಾಕ್ಡ್ ಥ್ರಿಲ್ಲಿಂಗ್ ಟೀಸರ್ ಸಿನಿರಸಿಕರಿಗೆ ಕಿಕ್ ಕೊಟ್ಟಿದೆ. ಸೂಪರ್ ಯೋಧನಾಗಿ ತೇಜ್ ಅಭಿನಯಿಸಿದ್ದು, ಖಳನಾಯಕನಾಗಿ ಮನೋಚ್ ಮಂಚು ತೊಡೆ ತಟ್ಟಿದ್ದಾರೆ. ಭಾರತದ ಶ್ರೀಮಂತ ಐತಿಹಾಸಿಕ ಪರಂಪರೆಗೆ ಆಧುನಿಕ ಸಾಹಸದ ಟಚ್ ಕೊಟ್ಟು ‘ಮಿರಾಯ್’ ಟೀಸರ್ ಕಟ್ ಮಾಡಲಾಗಿದೆ. ಇದನ್ನೂ ಓದಿ:ತಮಿಳಿನಿಂದ ಕನ್ನಡ ಎಂದ ಕಮಲ್ ಹಾಸನ್‌ಗೆ ಸಂಕಷ್ಟ- ಕ್ಷಮೆಯಾಚಿಸುವಂತೆ ಆಗ್ರಹ

    ‘ಮಿರಾಯ್’ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್‌ಗಳೇ ಇವೆ. ಆ್ಯಕ್ಷನ್ ಚಿತ್ರವನ್ನ ಕಾರ್ತಿಕ್ ಘಟ್ಟಮನೇನಿ ಡೈರೆಕ್ಷನ್ ಮಾಡಿದ್ದಾರೆ. ವಿಶೇಷವಾಗಿ ಈ ಚಿತ್ರ 2D ಮತ್ತು 3D ರೂಪದಲ್ಲಿ ರಿಲೀಸ್ ಆಗುತ್ತಿದೆ. ಅತಿ ದೊಡ್ಡ ಮಟ್ಟದಲ್ಲಿಯೇ ಈ ಚಿತ್ರ ರಿಲೀಸ್ ಆಗುತ್ತಿದೆ. ಇದೇ ವರ್ಷ ಸೆ.5ರಂದು ‘ಮಿರಾಯ್’ ಸಿನಿಮಾ 8 ಭಾಷೆಯಲ್ಲಿಯೇ ತೆರೆಗೆ ಬರಲಿದೆ. ಈ ಮೂಲಕ ಸಿನಿಮಾದ ನಾಯಕ ತೇಜ್ ಸಜ್ಜಾ ಮತ್ತೊಮ್ಮೆ ತಮ್ಮ ಅಭಿಮಾನಿಗಳಿಗೆ ಹೊಸ ಅನುಭವ ಕೊಡಲು ಬರುತ್ತಿದ್ದಾರೆ. ಇದನ್ನೂ ಓದಿ:ಐಶ್ವರ್ಯಾ ರೈ ಜೊತೆ ಹೋಲಿಸಿ ಟ್ರೋಲ್- ನಾನು ಯಾರ ಕಾಪಿನೂ ಅಲ್ಲ ಎಂದ ಊರ್ವಶಿ ರೌಟೇಲಾ

    ‘ಮಿರಾಯ್’ ಸಿನಿಮಾದ ಮೂಲಕ ನಾಯಕ ನಟ ತೇಜ್ ಸಜ್ಜಾ ಮತ್ತೆ ಸೂಪರ್ ಹೀರೋ ಆಗಿಯೇ ಬರ್ತಿದ್ದಾರೆ. ಮಿರಾಯ್ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯದ ಕಥೆಯನ್ನು ಸಿನಿಮಾ ಹೇಳುತ್ತದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ಯಡಿ ಟಿ.ಜಿ.ವಿಶ್ವಪ್ರಸಾದ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

    ಮನೋಜ್ ಮಂಚು (Manoj Manchu) ಖಳನಾಯಕನಾಗಿ ಮತ್ತು ರಿತಿಕಾ ನಾಯಕ್ ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಸೂಪರ್ ಯೋಧಾ ಪಾತ್ರದಲ್ಲಿ ತೇಜ್ ಸಜ್ಜಾ ಅಭಿನಯಿಸುತ್ತಿದ್ದಾರೆ. ಕಾರ್ತಿಕ್ ಗಟ್ಟಮ್ನೇನಿ ಮಿರಾಯ್‌ಗೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಮಣಿಬಾಬು ಕರಣಂ ಸಂಭಾಷಣೆ ಬರೆದಿದ್ದಾರೆ. ಶ್ರೀ ನಾಗೇಂದ್ರ ತಂಗಳ ಕಲಾ ನಿರ್ದೇಶನ, ವಿವೇಕ್ ಕೂಚಿಭೋಟ್ಲ ಸಹ ನಿರ್ಮಾಪಕರು. ಕೃತಿ ಪ್ರಸಾದ್ ಕ್ರಿಯೇಟಿವ್ ನಿರ್ಮಾಪಕರಾಗಿದ್ದು, ಸುಜಿತ್ ಕುಮಾರ್ ಕೊಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

  • ಮತ್ತೆ ಸೂಪರ್ ಹೀರೋ ಆಗಿ ತೇಜ್ ಸಜ್ಜಾ ಎಂಟ್ರಿ; ‘ಮಿರಾಯ್’ ಟೀಸರ್ ರಿಲೀಸ್‌ಗೆ ಡೇಟ್ ಫಿಕ್ಸ್

    ಮತ್ತೆ ಸೂಪರ್ ಹೀರೋ ಆಗಿ ತೇಜ್ ಸಜ್ಜಾ ಎಂಟ್ರಿ; ‘ಮಿರಾಯ್’ ಟೀಸರ್ ರಿಲೀಸ್‌ಗೆ ಡೇಟ್ ಫಿಕ್ಸ್

    ‘ಹನುಮಾನ್’ ಖ್ಯಾತಿಯ ನಟ ತೇಜ್ ಸಜ್ಜಾ (Teja Sajja) ನಟನೆಯ ‘ಮಿರಾಯ್’ ಚಿತ್ರ (Mirai) ಮೂಲಕ ಬರಲು ಸಜ್ಜಾಗಿದ್ದಾರೆ. ‘ಹನುಮಾನ್’ ಚಿತ್ರ ಆದ್ಮೇಲೆ ಮಾಡಿರೋ ಮತ್ತೊಂದು ಸೂಪರ್ ಹೀರೋ ಚಿತ್ರವೇ ಇದಾಗಿದೆ. ಬಹುಭಾಷೆಯಲ್ಲಿಯೇ ಬರುತ್ತಿರುವ ಈ ಸಿನಿಮಾದ ಟೀಸರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದೆ. ಮೇ 28ಕ್ಕೆ ‘ಮಿರಾಯ್’ ಸಿನಿಮಾದ ಫಸ್ಟ್ ಟೀಸರ್ ಬಿಡುಗಡೆಯಾಗಲಿದೆ. ಇದನ್ನೂ ಓದಿ:ಅಡವಿ ಶೇಷ್, ಮೃಣಾಲ್ ನಟನೆಯ ‘ಡಕಾಯಿಟ್’ ಚಿತ್ರದ ಟೀಸರ್ ಔಟ್

    ‘ಮಿರಾಯ್’ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್‌ಗಳಿವೆ. ಈ ಆ್ಯಕ್ಷನ್ ಚಿತ್ರವನ್ನ ಕಾರ್ತಿಕ್ ಘಟ್ಟಮನೇನಿ ಡೈರೆಕ್ಷನ್ ಮಾಡಿದ್ದಾರೆ. ವಿಶೇಷವಾಗಿ ಈ ಚಿತ್ರ 2ಡಿ ಮತ್ತು 3ಡಿ ರೂಪದಲ್ಲಿಯೇ ಅಲ್ಲಿಯೇ ರಿಲೀಸ್ ಆಗುತ್ತಿದೆ. ಅತೀ ದೊಡ್ಡ ಮಟ್ಟದಲ್ಲಿಯೇ ಈ ಚಿತ್ರ ರಿಲೀಸ್ ಆಗುತ್ತಿದೆ. ಇದೇ ವರ್ಷ ಆಗಸ್ಟ್ 1ರಂದು ‘ಮಿರಾಯ್’ 8 ಭಾಷೆಯಲ್ಲಿಯೇ ತೆರೆಗೆ ಬರಲಿದೆ. ಈ ಮೂಲಕ ತೇಜ್ ಸಜ್ಜಾ ಮತ್ತೊಮ್ಮೆ ತಮ್ಮ ಅಭಿಮಾನಿಗಳಿಗೆ ದರ್ಶನ ಕೊಡಲು ರೆಡಿಯಾಗಿದ್ದಾರೆ. ಇದನ್ನೂ ಓದಿ:ಕಾನ್ 2025: ನನಗೆ ಫಹಾದ್ ಫಾಸಿಲ್ ಆ್ಯಕ್ಟಿಂಗ್ ಇಷ್ಟ – ಆಲಿಯಾ ಭಟ್ ಗುಣಗಾನ

    ‘ಮಿರಾಯ್’ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯದ ಕಥೆಯನ್ನು ಸಿನಿಮಾ ಹೇಳುತ್ತದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಅಡಿ ಟಿ.ಜಿ.ವಿಶ್ವಪ್ರಸಾದ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

    ಮನೋಜ್ ಮಂಚು ಖಳನಾಯಕನಾಗಿ ಮತ್ತು ರಿತಿಕಾ ನಾಯಕ್ ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಡಿಫರೆಂಟ್ ರೋಲ್‌ನಲ್ಲಿ ತೇಜ್ ಸಜ್ಜಾ ನಟಿಸುತ್ತಿದ್ದಾರೆ. ಕಾರ್ತಿಕ್ ‘ಮಿರಾಯ್’ಗೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಮಣಿಬಾಬು ಕರಣಂ ಸಂಭಾಷಣೆ ಬರೆದಿದ್ದಾರೆ.

  • ‘ಹನುಮಾನ್’ ಹೀರೋ ತೇಜ್ ಸಜ್ಜಾ ನಟನೆಯ ಹೊಸ ಸಿನಿಮಾ ಅನೌನ್ಸ್

    ‘ಹನುಮಾನ್’ ಹೀರೋ ತೇಜ್ ಸಜ್ಜಾ ನಟನೆಯ ಹೊಸ ಸಿನಿಮಾ ಅನೌನ್ಸ್

    ‘ಹನುಮಾನ್’ (Hanuman) ಸಿನಿಮಾ ಮೂಲಕ ಸೂಪರ್ ಸಕ್ಸಸ್ ಕಂಡಿರುವ ತೆಲುಗಿನ ಯುವ ನಟ ತೇಜ್ ಸಜ್ಜಾ ಹೊಸ ಸಿನಿಮಾ ಅನೌನ್ಸ್ ಆಗಿದೆ. ಕಾರ್ತಿಕೇಯ, ಕಾರ್ತಿಕೇಯ-2 (Karthikeya 2), ಧಮಾಕ ಸೇರಿದಂತೆ ಹಲವು ಹಿಟ್ ಚಿತ್ರ ಕೊಟ್ಟಿರುವ ಕಾರ್ತಿಕ್ ಗಟ್ಟಮ್ನೇನಿ ತೇಜ್ ಸಜ್ಜಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಜೋಡಿಯ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಝಲಕ್ ಇಂದು (ಏ.18) ಅನಾವರಣಗೊಂಡಿದೆ.

    ‘ಹನುಮಾನ್’ನಲ್ಲಿ (Hanuman Film) ಸೂಪರ್ ಹೀರೋ ಆಗಿದ್ದ ತೇಜ್ ಸಜ್ಜಾ ಈಗ ಸೂಪರ್ ಯೋಧನಾಗಿ ಪ್ರತ್ಯಕ್ಷರಾಗಿದ್ದಾರೆ. ಕೈಯಲ್ಲಿ ಸ್ಟಿಕ್ ಹಿಡಿದು ದುಷ್ಟರನ್ನು ಸಂಹರಿಸಲು ಪಣ ತೊಟ್ಟಿದ್ದಾರೆ. ಅದಕ್ಕಾಗಿ ತೇಜ್ ಸಜ್ಜಾ ಹೊಸ ಅವತಾರವನ್ನೇ ತಾಳಿದ್ದಾರೆ. ಇದನ್ನೂ ಓದಿ:ಇಡಿಯಿಂದ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ಸೇರಿದ 97 ಕೋಟಿ ರೂ. ಆಸ್ತಿ ಜಪ್ತಿ

     

    View this post on Instagram

     

    A post shared by Hanu⭐️Man (@tejasajja123)

    ಕಾರ್ತಿಕ್ ಗಟ್ಟಮ್ನೇನಿ ಹಾಗೂ ತೇಜ್ ಸಜ್ಜಾ ಹೊಸ ಸಿನಿಮಾ ‘ಮಿರಾಯ್’ ಎಂಬ ಟೈಟಲ್ ಇಡಲಾಗಿದೆ. ಮಿರಾಯ್ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯದ ಕಥೆಯನ್ನು ಬಿಚ್ಚಿಡುವ ಮಿರಾಯ್ ವಿಷ್ಯುವಲ್ ಟ್ರೀಟ್ ನೋಡುಗರಿಗೆ ಹಬ್ಬದಂತಿದೆ.

    ‘ಮಿರಾಯ್’ ಸಿನಿಮಾಗಾಗಿ ತೇಜ್ ಸಜ್ಜಾ ಕೋಲು ಕಾಳಗ ಕಲಿತಿದ್ದಾರೆ. ಪ್ರತಿ ಫ್ರೇಮ್ ಅನ್ನು ಕಾರ್ತಿಕ್ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಗೌರ ಹರಿ ಸಂಗೀತ ತೂಕ ಹೆಚ್ಚಿಸಿದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿಯಡಿ ಟಿಜಿ ವಿಶ್ವಪ್ರಸಾದ್ ಮಿರಾಯ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

    ಕಾರ್ತಿಕ್ ಗಟ್ಟಮ್ನೇನಿ ಮಿರಾಯ್‌ಗೆ ಚಿತ್ರಕಥೆಯನ್ನು ಬರೆದು ನಿರ್ದೇಶನ ಮಾಡುತ್ತಿದ್ದು, ಮಣಿಬಾಬು ಕರಣಂ ಅವರು ಸಂಭಾಷಣೆ ಬರೆದಿದ್ದಾರೆ. ಶ್ರೀ ನಾಗೇಂದ್ರ ತಂಗಳ ಕಲಾ ನಿರ್ದೇಶಕನ, ವಿವೇಕ್ ಕೂಚಿಭೋಟ್ಲ ಸಹ ನಿರ್ಮಾಪಕರಾಗಿದ್ದಾರೆ. ಕೃತಿ ಪ್ರಸಾದ್ ಕ್ರಿಯೇಟಿವ್ ನಿರ್ಮಾಪಕರಾಗಿದ್ದು, ಸುಜಿತ್ ಕುಮಾರ್ ಕೊಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ.

  • ಒಟಿಟಿಗೆ ಕೊನೆಗೂ ಬಂತು ಹನುಮಾನ್

    ಒಟಿಟಿಗೆ ಕೊನೆಗೂ ಬಂತು ಹನುಮಾನ್

    ಭಾರೀ ಸದ್ದು ಮಾಡಿರುವ ಹನುಮಾನ್ ಸಿನಿಮಾ ಥಿಯೇಟರ್ ನಲ್ಲಿ ಪ್ರದರ್ಶನ ಕಾಣುತ್ತಿರುವಾಗಲೇ ಒಟಿಟಿಯಲ್ಲಿ (OTT) ಸ್ಟ್ರೀಮಿಂಗ್ ಆಗುವ ಕುರಿತಂತೆ ಸುದ್ದಿಯೊಂದು ಬಂದಿತ್ತು. ಆದರೆ, ಅದು ಅಂದು ಆಗಲಿಲ್ಲ. ಇದೀಗ ಹನುಮಾನ್ ಒಟಿಟಿಗೆ ಬಂದಿದೆ. ಸದ್ಯಕ್ಕೆ ತೆಲುಗಿನಲ್ಲಿ ಮಾತ್ರ ಈ ಸಿನಿಮಾವನ್ನು ನೋಡಬಹುದಾಗಿದೆ.

    ಒಪ್ಪಂದ ಪ್ರಕಾರ ಸಿನಿಮಾ ರಿಲೀಸ್ ಆಗಿ ಮೂರೇ ಮೂರು ವಾರದಲ್ಲಿ ಹನುಮಾನ್ ಚಿತ್ರ ಒಟಿಟಿಯಲ್ಲಿ ಬರಬೇಕಿತ್ತು. ಸಿನಿಮಾ ಇನ್ನೂ ಥಿಯೇಟರ್ ನಲ್ಲಿ ಇರುವ ಕಾರಣದಿಂದಾಗಿ 55 ದಿನಗಳ ನಂತರ ಚಿತ್ರವನ್ನು ಒಟಿಟಿಯಲ್ಲಿ ತರಲು ನಿರ್ಧರಿಸಲಾಗಿತ್ತು. ಅಂದುಕೊಂಡಂತೆ ಆಗಿದ್ದರೆ ಮಾರ್ಚ್ 2ರಿಂದ ಝೀ 5ನಲ್ಲಿ ಚಿತ್ರ ಬರಬೇಕಿತ್ತು. ಅದು ಆಗಿರಲಿಲ್ಲ.

    ಮಾರ್ಚ್ 2ನೇ ತಾರೀಖು ಒಟಿಟಿಯಲ್ಲಿ ಹನುಮಾನ್ ಸಿಗಲಿಲ್ಲ. ಹಾಗಾಗಿ ಮತ್ತೊಂದು ದಿನಾಂಕವನ್ನು ಘೋಷಣೆ ಮಾಡಲಾಯಿತು. ಅದರಂತೆ ಮಾರ್ಚ್ 16ಕ್ಕೆ ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ಒಟಿಟಿಗೆ ಹನುಮಾನ್ ಬರಬೇಕಿತ್ತು. ತಾಂತ್ರಿಕ ಕಾರಣದಿಂದಾಗಿ ಕೇವಲ ಒಂದೇ ಒಂದು ಭಾಷೆಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

    ಪ್ರಶಾಂತ್ ವರ್ಮಾ (Prashant Verma) ನಿರ್ದೇಶನದಲ್ಲಿ ಮೂಡಿ ಬಂದಿರುವ ಹನುಮಾನ್ (Hanuman) ಚಿತ್ರ ಜಾಗತಿಕ ಮಟ್ಟದಲ್ಲಿ ಸಖತ್ ಸದ್ದು ಮಾಡುತ್ತಿದೆ. ರಿಲೀಸ್ ಆದ 14 ದಿನಕ್ಕೆ 250 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈ ನಡುವೆ ಪಾರ್ಟ್ 2 ಮಾಡುವ ಕುರಿತೂ ಸುದ್ದಿ ಹರಿದಾಡುತ್ತಿದೆ.

     

    ತೇಜ ಸಜ್ಜ ನಟಿಸಿರುವ ‘ಹನುಮಾನ್’ (Hanuman) ಸಿನಿಮಾ ಈಗಾಗಲೇ ಸೂಪರ್ ಡೂಪರ್ ಹಿಟ್ ಆಗಿದೆ. ಈ ಚಿತ್ರವನ್ನು ಪಾರ್ಟ್ 2 ಮಾಡಲು ತೆರೆಮರೆಯಲ್ಲಿ ಭರದಿಂದ ಸಿದ್ಧತೆ ನಡೆಯುತ್ತಿದೆ. ಹೀಗಿರುವಾಗ ಪ್ರದೀಪ್ ವರ್ಮಾ ಅವರ ನಿರ್ದೇಶನದಲ್ಲಿ ‘ಹನುಮಾನ್ ಪಾರ್ಟ್ 2’ ಸಿದ್ಧತೆ ಆರಂಭಿಸಿದೆ.

  • ಮಾರ್ಚ್ 2ರಿಂದ ಒಟಿಟಿಯಲ್ಲಿ ಹನುಮಾನ್

    ಮಾರ್ಚ್ 2ರಿಂದ ಒಟಿಟಿಯಲ್ಲಿ ಹನುಮಾನ್

    ಬಾಕ್ಸ್ ಆಫೀಸಿನಲ್ಲಿ ಭಾರೀ ಸದ್ದು ಮಾಡಿರುವ ಹನುಮಾನ್ ಸಿನಿಮಾ ಇನ್ನೂ ಥಿಯೇಟರ್ ನಲ್ಲಿ ಪ್ರದರ್ಶನ ಕಾಣುತ್ತಿರುವಾಗಲೇ ಒಟಿಟಿಯಲ್ಲಿ (OTT) ಸ್ಟ್ರೀಮಿಂಗ್ ಆಗುವ ಕುರಿತಂತೆ ಸುದ್ದಿಯೊಂದು ಬಂದಿದೆ. ಒಪ್ಪಂದ ಪ್ರಕಾರ ಸಿನಿಮಾ ರಿಲೀಸ್ ಆಗಿ ಮೂರೇ ಮೂರು ವಾರದಲ್ಲಿ ಚಿತ್ರ ಒಟಿಟಿಯಲ್ಲಿ ಬರಬೇಕಿತ್ತು. ಸಿನಿಮಾ ಇನ್ನೂ ಥಿಯೇಟರ್ ನಲ್ಲಿ ಇರುವ ಕಾರಣದಿಂದಾಗಿ 55 ದಿನಗಳ ನಂತರ ಚಿತ್ರವನ್ನು ಒಟಿಟಿಯಲ್ಲಿ ತರಲು ನಿರ್ಧರಿಸಲಾಗಿದೆ. ಮಾರ್ಚ್ 2ರಿಂದ ಝೀ 5ನಲ್ಲಿ ಚಿತ್ರವನ್ನು ವೀಕ್ಷಿಸಬಹುದು.

    ಪ್ರಶಾಂತ್ ವರ್ಮಾ (Prashant Verma) ನಿರ್ದೇಶನದಲ್ಲಿ ಮೂಡಿ ಬಂದಿರುವ ಹನುಮಾನ್ (Hanuman) ಚಿತ್ರ ಜಾಗತಿಕ ಮಟ್ಟದಲ್ಲಿ ಸಖತ್ ಸದ್ದು ಮಾಡುತ್ತಿದೆ. ರಿಲೀಸ್ ಆದ 14 ದಿನಕ್ಕೆ 250 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾ ತನ್ನ ನಾಗಲೋಟವನ್ನು ಮುಂದುವರೆಸಿದೆ. ಈ ನಡುವೆ ಪಾರ್ಟ್ 2 ಮಾಡುವ ಕುರಿತೂ ಸುದ್ದಿ ಹರಿದಾಡುತ್ತಿದೆ.

    ಹನುಮಾನ್ 2ನಲ್ಲಿ ರಾಕಿಭಾಯ್?

    ಕೆಜಿಎಫ್, ಕೆಜಿಎಫ್ 2 (KGF 2) ಚಿತ್ರದ ಸಕ್ಸಸ್ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ಯಶ್ ಬಗ್ಗೆ ಸದಾ ಒಂದಲ್ಲಾ ಒಂದು ವಿಚಾರವಾಗಿ ಚಾಲ್ತಿಯಲ್ಲಿರುತ್ತಾರೆ. ಸುದ್ದಿಗೋಷ್ಠಿಯೊಂದರಲ್ಲಿ ಶಾರುಖ್ ಖಾನ್, ಕರೀನಾ ಕಪೂರ್ ‘ಟಾಕ್ಸಿಕ್’ ಚಿತ್ರಕ್ಕೆ ಎಂಟ್ರಿ ಕೊಡ್ತಾರಾ ಎಂಬ ವಿಚಾರಕ್ಕೆ ಯಶ್ ಸ್ಪಷ್ಟನೆ ನೀಡಿದ್ದರು. ಅದರಂತೆ ‘ಹನುಮಾನ್’ 2ನಲ್ಲಿ ರಾಕಿಬಾಯ್ ನಟಿಸ್ತಾರಾ ಎಂಬ ವಿಚಾರಕ್ಕೆ ಸ್ವತಃ ಯಶ್ ಕ್ಲ್ಯಾರಿಟಿ ಕೊಟ್ಟಿದ್ದಾರೆ.

    ‘ಹನುಮಾನ್’ ಪಾರ್ಟ್ 2ನಲ್ಲಿ ನಾನು ನಟಿಸುತ್ತಿಲ್ಲ. ಈಗ ‘ಟಾಕ್ಸಿಕ್’ (Toxic) ಸಿನಿಮಾ ಬಿಟ್ಟು ಬೇರೆ ಕಡೆ ಯೋಚನೆ ಮಾಡುತ್ತಿಲ್ಲ. ಪರಭಾಷೆಯಿಂದ ಸಾಕಷ್ಟು ಸಿನಿಮಾಗಳು ನನ್ನನ್ನು ಅರಸಿ ಬಂದಿರೋದು ನಿಜ. ಆದರೆ ಯಾವ ಚಿತ್ರಕ್ಕೂ ನಾನು ಸಹಿ ಹಾಕಿಲ್ಲ ಎಂದು ಯಶ್ ಉತ್ತರಿಸಿದ್ದಾರೆ. ಅಲ್ಲಿಗೆ ಹನುಮಾನ್ 2ನಲ್ಲಿ ಯಶ್ ನಟಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

     

    ತೇಜ ಸಜ್ಜ ನಟಿಸಿರುವ ‘ಹನುಮಾನ್’ (Hanuman) ಸಿನಿಮಾ ಈಗಾಗಲೇ ಸೂಪರ್ ಡೂಪರ್ ಹಿಟ್ ಆಗಿದೆ. ಈ ಚಿತ್ರವನ್ನು ಪಾರ್ಟ್ 2 ಮಾಡಲು ತೆರೆಮರೆಯಲ್ಲಿ ಭರದಿಂದ ಸಿದ್ಧತೆ ನಡೆಯುತ್ತಿದೆ. ಹೀಗಿರುವಾಗ ಪ್ರದೀಪ್ ವರ್ಮಾ ಅವರ ನಿರ್ದೇಶನದಲ್ಲಿ ‘ಹನುಮಾನ್ ಪಾರ್ಟ್ 2’ ಮೂಡಿ ಬರಲಿದ್ದು, ಯಶ್ ಲೀಡ್ ರೋಲ್‌ನಲ್ಲಿ ನಟಿಸುತ್ತಾರೆ ಎಂದೇ ಸುದ್ದಿಯಾಗಿತ್ತು. ಅದಕ್ಕೆ ರಾಕಿಭಾಯ್ ಈಗ ಉತ್ತರ ನೀಡಿದ್ದಾರೆ.

  • ಒಟಿಟಿಯಲ್ಲಿ ಸೂಪರ್ ಹಿಟ್ ಸಿನಿಮಾ ಹನುಮಾನ್: ಯಾವಾಗ? ಎಲ್ಲಿ?

    ಒಟಿಟಿಯಲ್ಲಿ ಸೂಪರ್ ಹಿಟ್ ಸಿನಿಮಾ ಹನುಮಾನ್: ಯಾವಾಗ? ಎಲ್ಲಿ?

    ಬಾಕ್ಸ್ ಆಫೀಸಿನಲ್ಲಿ ಭಾರೀ ಸದ್ದು ಮಾಡಿರುವ ಹನುಮಾನ್ ಸಿನಿಮಾ ಇನ್ನೂ ಥಿಯೇಟರ್ ನಲ್ಲಿ ಪ್ರದರ್ಶನ ಕಾಣುತ್ತಿರುವಾಗಲೇ ಒಟಿಟಿಯಲ್ಲಿ (OTT) ಸ್ಟ್ರೀಮಿಂಗ್ ಆಗುವ ಕುರಿತಂತೆ ಸುದ್ದಿಯೊಂದು ಬಂದಿದೆ. ಒಪ್ಪಂದ ಪ್ರಕಾರ ಸಿನಿಮಾ ರಿಲೀಸ್ ಆಗಿ ಮೂರೇ ಮೂರು ವಾರದಲ್ಲಿ ಚಿತ್ರ ಒಟಿಟಿಯಲ್ಲಿ ಬರಬೇಕಿತ್ತು. ಸಿನಿಮಾ ಇನ್ನೂ ಥಿಯೇಟರ್ ನಲ್ಲಿ ಇರುವ ಕಾರಣದಿಂದಾಗಿ 55 ದಿನಗಳ ನಂತರ ಚಿತ್ರವನ್ನು ಒಟಿಟಿಯಲ್ಲಿ ತರಲು ನಿರ್ಧರಿಸಲಾಗಿದೆ. ಮಾರ್ಚ್ ಮೊದಲ ವಾರದಲ್ಲಿ ಝೀ 5ನಲ್ಲಿ ಚಿತ್ರವನ್ನು ವೀಕ್ಷಿಸಬಹುದು.

    ಪ್ರಶಾಂತ್ ವರ್ಮಾ (Prashant Verma) ನಿರ್ದೇಶನದಲ್ಲಿ ಮೂಡಿ ಬಂದಿರುವ ಹನುಮಾನ್ (Hanuman) ಚಿತ್ರ ಜಾಗತಿಕ ಮಟ್ಟದಲ್ಲಿ ಸಖತ್ ಸದ್ದು ಮಾಡುತ್ತಿದೆ. ರಿಲೀಸ್ ಆದ 14 ದಿನಕ್ಕೆ 250 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾ ತನ್ನ ನಾಗಲೋಟವನ್ನು ಮುಂದುವರೆಸಿದೆ.

    ಹನುಮಾನ್ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ಕಂಡಿರೋ ನಿರ್ದೇಶಕರಿಗೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಕೊಟ್ಟಿದ್ದಾರೆ. ಹನುಮಾನ್ ಪಾರ್ಟ್ 2 ಮಾಡಲು ಅವರು ಮುಂದೆ ಬಂದಿದ್ದಾರೆ. ಕೇವಲ ಬಾಯಿ ಮಾತಲ್ಲಿ ಹೇಳದೇ ಪಾರ್ಟ್ 2 ಚಿತ್ರದ ಕೆಲಸಕ್ಕೂ ಅವರು ಮುಂದಾಗಿದ್ದಾರೆ.

    ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಐತಿಹಾಸಿಕ ಕ್ಷಣದಲ್ಲಿ ಇಡೀ ದೇಶವೇ ಸಾಕ್ಷಿಯಾಗಿತ್ತು. ಈ ಶುಭ ದಿನದಂದು, ಹನುಮಾನ್ ಸಿನಿಮಾ ನಿರ್ದೇಶಕ ಪ್ರಶಾಂತ್ ವರ್ಮಾ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಮ್ಮ ಮುಂಬರುವ ಚಿತ್ರ ‘ಜೈ ಹನುಮಾನ್’ ಸಿನಿಮಾಗಾಗಿ ತಯಾರಿಯನ್ನು ಪ್ರಾರಂಭಿಸಿದ್ದಾರೆ. ಅದರ ಭಾಗವಾಗಿ ಜೈ ಹನುಮಾನ್ ಸಿನಿಮಾದ ಸ್ಟ್ರಿಪ್ಟ್ ಪೂಜೆ ನೆರವೇರಿಸಿದ್ದಾರೆ.

    ಪ್ರಶಾಂತ್ ವರ್ಮಾ ಅವರ ಸೂಪರ್ ಹೀರೋ ಚಿತ್ರ ಹನುಮಾನ್ ಜನವರಿ 12 ರಂದು ಬಿಡುಗಡೆಯಾಯಿತು. ತೇಜ ಸಜ್ಜ, ವರಲಕ್ಷ್ಮಿ ಶರತ್‌ಕುಮಾರ್, ಅಮೃತ ಅಯ್ಯರ್ ಮತ್ತು ವಿನಯ್ ರೈ ನಟಿಸಿರುವ ಚಿತ್ರವು ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಕ್ಸಸ್ ಬೆನ್ನಲ್ಲೇ ಜೈ ಹನುಮಾನ್ ಸಿನಿಮಾದ ಕೆಲಸ ಶುರುವಾಗಿವೆ.

     

    ಹನುಮಾನ ಸಿನಿಮಾ ಮೂಲಕ ಪ್ರಶಾಂತ್ ವರ್ಮಾ ರಾಷ್ಟ್ರವ್ಯಾಪಿ ಜನಪ್ರಿಯರಾಗಿದ್ದಾರೆ. ಸೃಜನಶೀಲ ನಿರ್ದೇಶಕರು ಪ್ರಶಾಂತ್ ವರ್ಮಾ ಸಿನಿಮಾಟಿಕ್ ಯೂನಿವರ್ಸ್ (PVCU) ನಿಂದ ಮತ್ತೊಂದು ಮಹಾಕಾವ್ಯ ಸಾಹಸವನ್ನು ಪ್ರೇಕ್ಷಕರ ಎದುರು ತರುತ್ತಿದ್ದಾರೆ. ಅದರ ಭಾಗವಾಗಿ ಜೈ ಹನುಮಾನ್ ಸಿನಿಮಾ ಘೋಷಿಸಿದ್ದು, ದೊಡ್ಡ ಮಟ್ಟದಲ್ಲಿ ಮೂಡಿಬರಲಿರುವ ಸೀಕ್ವೆಲ್‌ಗಾಗಿ ನಿರ್ದೇಶಕರು ಈಗಾಗಲೇ ಸ್ಕ್ರಿಪ್ಟ್ ನ್ನು ಸಿದ್ಧಪಡಿಸಿದ್ದಾರೆ. ಹೈದರಾಬಾದ್‌ನ ಹನುಮಾನ್ ದೇವಾಲಯದಲ್ಲಿಂದು ಸ್ಕ್ರಿಪ್ಟ್ ಪೂಜೆ ನೆರವೇರಿದೆ. ಮುಂದಿನ ದಿನಗಳಲ್ಲಿ ತಾರಾ ಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಮಾಹಿತಿ ನೀಡಲಿದ್ದಾರೆ.

  • ಹನುಮಾನ್ ಶಕ್ತಿಗೆ ಬಾಕ್ಸ್ ಆಫೀಸ್ ಉಡೀಸ್: 14 ದಿನಕ್ಕೆ 250 ಕೋಟಿ ಲೆಕ್ಕ

    ಹನುಮಾನ್ ಶಕ್ತಿಗೆ ಬಾಕ್ಸ್ ಆಫೀಸ್ ಉಡೀಸ್: 14 ದಿನಕ್ಕೆ 250 ಕೋಟಿ ಲೆಕ್ಕ

    ಕ್ಷಿಣದ ಮತ್ತೊಂದು ಸಿನಿಮಾ ಬಾಕ್ಸ್ ಆಫೀಸ್ (Box office) ದೋಚಿದೆ. ಪ್ರಶಾಂತ್ ವರ್ಮಾ (Prashant Verma) ನಿರ್ದೇಶನದಲ್ಲಿ ಮೂಡಿ ಬಂದಿರುವ ಹನುಮಾನ್ (Hanuman) ಚಿತ್ರ ಜಾಗತಿಕ ಮಟ್ಟದಲ್ಲಿ 14 ದಿನಕ್ಕೆ 250 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾ ತನ್ನ ನಾಗಲೋಟವನ್ನು ಮುಂದುವರೆಸಿದೆ.

    ಹನುಮಾನ್ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ಕಂಡಿರೋ ನಿರ್ದೇಶಕರಿಗೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಕೊಟ್ಟಿದ್ದಾರೆ. ಹನುಮಾನ್ ಪಾರ್ಟ್ 2 ಮಾಡಲು ಅವರು ಮುಂದೆ ಬಂದಿದ್ದಾರೆ. ಕೇವಲ ಬಾಯಿ ಮಾತಲ್ಲಿ ಹೇಳದೇ ಪಾರ್ಟ್ 2 ಚಿತ್ರದ ಕೆಲಸಕ್ಕೂ ಅವರು ಮುಂದಾಗಿದ್ದಾರೆ.

    ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಐತಿಹಾಸಿಕ ಕ್ಷಣದಲ್ಲಿ ಇಡೀ ದೇಶವೇ ಸಾಕ್ಷಿಯಾಗಿತ್ತು. ಈ ಶುಭ ದಿನದಂದು, ಹನುಮಾನ್ ಸಿನಿಮಾ ನಿರ್ದೇಶಕ ಪ್ರಶಾಂತ್ ವರ್ಮಾ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಮ್ಮ ಮುಂಬರುವ ಚಿತ್ರ ‘ಜೈ ಹನುಮಾನ್’ ಸಿನಿಮಾಗಾಗಿ ತಯಾರಿಯನ್ನು ಪ್ರಾರಂಭಿಸಿದ್ದಾರೆ. ಅದರ ಭಾಗವಾಗಿ ಜೈ ಹನುಮಾನ್ ಸಿನಿಮಾದ ಸ್ಟ್ರಿಪ್ಟ್ ಪೂಜೆ ನೆರವೇರಿಸಿದ್ದಾರೆ.

    ಪ್ರಶಾಂತ್ ವರ್ಮಾ ಅವರ ಸೂಪರ್ ಹೀರೋ ಚಿತ್ರ ಹನುಮಾನ್ ಜನವರಿ 12 ರಂದು ಬಿಡುಗಡೆಯಾಯಿತು. ತೇಜ ಸಜ್ಜ, ವರಲಕ್ಷ್ಮಿ ಶರತ್‌ಕುಮಾರ್, ಅಮೃತ ಅಯ್ಯರ್ ಮತ್ತು ವಿನಯ್ ರೈ ನಟಿಸಿರುವ ಚಿತ್ರವು ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಕ್ಸಸ್ ಬೆನ್ನಲ್ಲೇ ಜೈ ಹನುಮಾನ್ ಸಿನಿಮಾದ ಕೆಲಸ ಶುರುವಾಗಿವೆ.

    ಹನುಮಾನ ಸಿನಿಮಾ ಮೂಲಕ ಪ್ರಶಾಂತ್ ವರ್ಮಾ ರಾಷ್ಟ್ರವ್ಯಾಪಿ ಜನಪ್ರಿಯರಾಗಿದ್ದಾರೆ. ಸೃಜನಶೀಲ ನಿರ್ದೇಶಕರು ಪ್ರಶಾಂತ್ ವರ್ಮಾ ಸಿನಿಮಾಟಿಕ್ ಯೂನಿವರ್ಸ್ (PVCU) ನಿಂದ ಮತ್ತೊಂದು ಮಹಾಕಾವ್ಯ ಸಾಹಸವನ್ನು ಪ್ರೇಕ್ಷಕರ ಎದುರು ತರುತ್ತಿದ್ದಾರೆ. ಅದರ ಭಾಗವಾಗಿ ಜೈ ಹನುಮಾನ್ ಸಿನಿಮಾ ಘೋಷಿಸಿದ್ದು, ದೊಡ್ಡ ಮಟ್ಟದಲ್ಲಿ ಮೂಡಿಬರಲಿರುವ ಸೀಕ್ವೆಲ್‌ಗಾಗಿ ನಿರ್ದೇಶಕರು ಈಗಾಗಲೇ ಸ್ಕ್ರಿಪ್ಟ್ ನ್ನು ಸಿದ್ಧಪಡಿಸಿದ್ದಾರೆ. ಹೈದರಾಬಾದ್‌ನ ಹನುಮಾನ್ ದೇವಾಲಯದಲ್ಲಿಂದು ಸ್ಕ್ರಿಪ್ಟ್ ಪೂಜೆ ನೆರವೇರಿದೆ. ಮುಂದಿನ ದಿನಗಳಲ್ಲಿ ತಾರಾ ಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಮಾಹಿತಿ ನೀಡಲಿದ್ದಾರೆ.