Tag: Tejas

  • ಯಶಸ್ವಿಯಾಗಿ ಮೊದಲ ಹಾರಾಟ ನಡೆಸಿದ ತೇಜಸ್ ಎಂಕೆ1ಎ ಯುದ್ಧ ವಿಮಾನ

    ಯಶಸ್ವಿಯಾಗಿ ಮೊದಲ ಹಾರಾಟ ನಡೆಸಿದ ತೇಜಸ್ ಎಂಕೆ1ಎ ಯುದ್ಧ ವಿಮಾನ

    ನಾಸಿಕ್: ಭಾರತದ ಸ್ವದೇಶಿ ಯುದ್ಧ ವಿಮಾನ ತೇಜಸ್ ಎಂಕೆ1ಎ (LCA Tejas Mk1A) ಇಂದು ತನ್ನ ಮೊದಲ ಹಾರಾಟ ನಡೆಸಿದೆ.

    ನಾಸಿಕ್‌ನಲ್ಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (HAL) ವಿಮಾನ ಉತ್ಪಾದನಾ ವಿಭಾಗದಲ್ಲಿ ಈ ಹಾರಾಟ ನಡೆಯಿತು. ಭಾರತದಲ್ಲಿ ಯುದ್ಧ ವಿಮಾನ ತಯಾರಿಕೆಯ ಅಭಿವೃದ್ಧಿಯಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

    ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ರಾಜನಾಥ್ ಸಿಂಗ್ ಅವರು LCA ಎಂಕೆ1ಎಯ ಮೂರನೇ ಉತ್ಪಾದನಾ ಘಟಕ ಮತ್ತು ಎಚ್‌ಟಿಟಿ-40 ವಿಮಾನದ ಎರಡನೇ ಘಟಕವನ್ನು ಉದ್ಘಾಟಿಸಿದರು.

    ತೇಜಸ್ MK1A ಅನ್ನು ವಾಯುಪಡೆಗೆ ಸೇರಿಸುವ ದಿನಾಂಕಗಳನ್ನು ಘೋಷಿಸಲಾಗಿಲ್ಲ. ಆದರೆ ಮುಂದಿನ ನಾಲ್ಕು ವರ್ಷಗಳಲ್ಲಿ 83 ತೇಜಸ್ ಮಾರ್ಕ್ 1A ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಗೆ ಪೂರೈಸಲಾಗುವುದು ಎಂದು ಹೆಚ್‌ಎಎಲ್‌ ಹೇಳಿದೆ.  ಇದನ್ನೂ ಓದಿ:  ಗುಜರಾತ್‌ ಸಂಪುಟ ಪುನಾರಚನೆ – ಜಡೇಜಾ ಪತ್ನಿ ರಿವಾಬಾಗೆ ಮಿನಿಸ್ಟರ್‌ ಪಟ್ಟ

    ನಾಸಿಕ್‌ನಲ್ಲಿರುವ HAL ನ ವಿಮಾನ ಉತ್ಪಾದನಾ ವಿಭಾಗವು ಪ್ರತಿ ವರ್ಷ ಎಂಟು ಯುದ್ಧ ವಿಮಾನಗಳನ್ನು ತಯಾರಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರ ಹೊರತಾಗಿ, ತೇಜಸ್‌ನ ಎರಡು ಉತ್ಪಾದನಾ ಘಟಕಗಳು ಬೆಂಗಳೂರಿನಲ್ಲಿದ್ದು ಪ್ರತಿ ವರ್ಷ 16 ಯುದ್ಧ ವಿಮಾನಗಳನ್ನು ತಯಾರಿಸಲಾಗುತ್ತಿದೆ. ಈ ರೀತಿಯಾಗಿ, ನಾಸಿಕ್‌ನ ಉತ್ಪಾದನಾ ಘಟಕ ಪ್ರಾರಂಭವಾದ ನಂತರ, ಪ್ರತಿ ವರ್ಷ 24 ಯುದ್ಧ ವಿಮಾನಗಳನ್ನು ತಯಾರಿಸಲಾಗುವುದು.

    ತೇಜಸ್ ಮಾರ್ಕ್ 1A ಆವೃತ್ತಿಯು ಮುಂದುವರಿದ, ಬಹು-ಪಾತ್ರದ ಯುದ್ಧ ವಿಮಾನವಾಗಿದೆ. ಇದು ಎಲ್ಲಾ ಹವಾಮಾನ ಕಾರ್ಯಾಚರಣೆಗಳಿಗಾಗಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿದ ಸ್ಥಳೀಯ 4.5-ಪೀಳಿಗೆಯ ವಿಮಾನವಾಗಿದೆ.

    ತೇಜಸ್ Mk-1A ತೇಜಸ್ Mk-1 ಆವೃತ್ತಿಗಿಂತ ಹಲವಾರು ಸುಧಾರಿತ ವೈಶಿಷ್ಟ್ಯಗಳನ್ನು ಹೊಂದಿದೆ, ಇದರಲ್ಲಿ ಇಸ್ರೇಲಿ EL/M-2025 AESA ರಾಡಾರ್, ಜಾಮರ್‌ಗಳೊಂದಿಗೆ ಸುಧಾರಿತ ಎಲೆಕ್ಟ್ರಾನಿಕ್ ವಾರ್‌ಫೇರ್ ಸೂಟ್ ಮತ್ತು ಬಿಯಾಂಡ್ ವಿಷುಯಲ್ ರೇಂಜ್ (BVR) ಸಾಮರ್ಥ್ಯಗಳು ಸೇರಿವೆ.

  • ಚೀನಾ 6ನೇ ತಲೆಮಾರಿನ ಯುದ್ಧ ವಿಮಾನ ಪರೀಕ್ಷಿಸುತ್ತಿದೆ, ನಾವಿನ್ನೂ ತೇಜಸ್ ಸ್ವಾಧೀನಕ್ಕಾಗಿ ಕಾಯ್ತಿದ್ದೇವೆ: IAF ಮುಖ್ಯಸ್ಥ ಕಳವಳ

    ಚೀನಾ 6ನೇ ತಲೆಮಾರಿನ ಯುದ್ಧ ವಿಮಾನ ಪರೀಕ್ಷಿಸುತ್ತಿದೆ, ನಾವಿನ್ನೂ ತೇಜಸ್ ಸ್ವಾಧೀನಕ್ಕಾಗಿ ಕಾಯ್ತಿದ್ದೇವೆ: IAF ಮುಖ್ಯಸ್ಥ ಕಳವಳ

    – ರಕ್ಷಣಾ ಬಜೆಟ್‌ 15%ಗೆ ಹೆಚ್ಚಿಸುವಂತೆ ಮನವಿ

    ನವದೆಹಲಿ: ಚೀನಾ 6ನೇ ತಲೆಮಾರಿನ ಯುದ್ಧ ವಿಮಾನ (Fighter Jet) ಪರೀಕ್ಷಿಸುತ್ತಿದೆ, ತೇಜಸ್ ಯುದ್ಧ ವಿಮಾನಗಳ ಸ್ವಾಧೀನಕ್ಕಾಗಿ ನಾವು ಇನ್ನೂ ಕಾಯುತ್ತಿದ್ದೇವೆ ಎಂದು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್‌ಪ್ರೀತ್ ಸಿಂಗ್ (Air Chief Marshal A.P. Singh) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ತಯಾರಾಗುತ್ತಿರುವ ತೇಜಸ್ ಯುದ್ಧ ವಿಮಾನಗಳ ಸ್ವಾಧೀನ ವಿಳಂಬದ ಬಗ್ಗೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    21ನೇ ಸುಬ್ರೋತೋ ಮುಖರ್ಜಿ ಸೆಮಿನಾರ್‌ನಲ್ಲಿ ವಾಯುಪ್ರದೇಶದಲ್ಲಿ ಸ್ವಾವಲಂಬನೆ ವಿಷಯದ ಕುರಿತು ಮಾತನಾಡಿದ ವಾಯುಪಡೆಯ ಮುಖ್ಯಸ್ಥರು ತೇಜಸ್ ಯುದ್ಧ ವಿಮಾನ ಪಡೆಯಲು ವಿಳಂಬವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಈ ಯೋಜನೆಯನ್ನು 1984ರಲ್ಲಿ ಪ್ರಾರಂಭಿಸಲಾಯಿತು. 17 ವರ್ಷಗಳ ನಂತರ ವಿಮಾನ‌ ಮೊದಲ ಹಾರಾಟ ನಡೆಸಿತು. 16 ವರ್ಷಗಳ ನಂತರ, ತೇಜಸ್ (Tejas) ಅನ್ನು ವಾಯುಪಡೆಗೆ ಸೇರ್ಪಡೆಗೊಳಿಸಲಾಯಿತು ಇಂದು ನಾವು 2025 ರಲ್ಲಿದ್ದೇವೆ. ಆದ್ರೆ ಇನ್ನೂ ಮೊದಲ 40 ವಿಮಾನಗಳಿಗಾಗಿ ಕಾಯುತ್ತಿದ್ದೇವೆ. ಇದು ನಮ್ಮ ಉತ್ಪಾದನಾ ಸಾಮರ್ಥ್ಯ ಎಂದರು.

    ನಾವು ಸ್ಪರ್ಧೆಯನ್ನು ಉತ್ತೇಜಿಸಬೇಕಾಗಿದೆ, ಅದಕ್ಕಾಗಿ ನಾವು ಅನೇಕ ಮೂಲಗಳನ್ನು ಹೊಂದಿರಬೇಕು. ಇದು ಸಾಧ್ಯವಾಗದಿದ್ದರೆ ಪರಿಸ್ಥಿತಿ ಬದಲಾಗುವುದಿಲ್ಲ. ನಮ್ಮ ಸಾಮರ್ಥ್ಯ ವೃದ್ಧಿ ಬಹಳ ಮುಖ್ಯ, ಉತ್ಪಾದನಾ ಘಟಕಗಳು ಆಧುನಿಕ ಉತ್ಪಾದನಾ ಪ್ರಕ್ರಿಯೆಗಳಲ್ಲಿ ಹೂಡಿಕೆಯನ್ನು ಹೆಚ್ಚಿಸಬೇಕು ಮತ್ತು ಅವರ ಉದ್ಯೋಗಿಗಳಿಗೆ ತರಬೇತಿ ನೀಡಬೇಕು ಎಂದು ಹೇಳಿದರು.

    ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಹೆಚ್ಚಿನ ಹಣ ವಿನಿಯೋಗಿಸಬೇಕು ಮತ್ತು ರಕ್ಷಣಾ ಕ್ಷೇತ್ರದಲ್ಲಿ ಖಾಸಗಿ ಸಹಭಾಗಿತ್ವವನ್ನು ಹೆಚ್ಚಿಸಬೇಕು. ನಾವು ನಮ್ಮ ವೈಫಲ್ಯಗಳಿಂದ ಕಲಿಯಬೇಕು ಮತ್ತು ಮುಂದೆ ಸಾಗಬೇಕೇ ಹೊರತು ಯಾರಿಗೂ ಭಯಪಡಬಾರದು. ನಾವು ಪ್ರಸ್ತುತ ರಕ್ಷಣಾ ಬಜೆಟ್‌ನ ಐದು ಪ್ರತಿಶತವನ್ನು ಸಂಶೋಧನೆ ಮತ್ತು ಅಭಿವೃದ್ಧಿಗೆ ಖರ್ಚು ಮಾಡುತ್ತಿದ್ದೇವೆ. ಆದರೆ ಅದನ್ನು 15%ಗೆ ಹೆಚ್ಚಿಸಬೇಕು. ಸಂಶೋಧನೆ ಮತ್ತು ತಂತ್ರಜ್ಞಾನವನ್ನು ಸಮಯಕ್ಕೆ ಪೂರ್ಣಗೊಳಿಸದಿದ್ದರೆ, ಅವುಗಳು ತಮ್ಮ ಉಪಯುಕ್ತತೆ ಕಳೆದುಕೊಳ್ಳುತ್ತವೆ ಎಚ್ಚರಿಸಿದರು.

    ಭಾರತದ ತೇಜಸ್ ಯುದ್ಧ ವಿಮಾನಗಳು 5ನೇ ತಲೆಮಾರಿನದ್ದಾಗಿದ್ದು, ಅವುಗಳಲ್ಲಿ ಸಾಕಷ್ಟು ವಿಳಂಬವಾಗಿದೆ. ಇದೇ ಸಮಯದಲ್ಲಿ ಚೀನಾ (China) ತನ್ನ 6ನೇ ತಲೆಮಾರಿನ ಯುದ್ಧ ವಿಮಾನವನ್ನು ಪರೀಕ್ಷಿಸಲು ಪ್ರಾರಂಭಿಸಿದೆ. ಉತ್ತರ ಮತ್ತು ಪಶ್ಚಿಮ ಗಡಿಗಳಲ್ಲಿ ಸವಾಲುಗಳು ಹೆಚ್ಚುತ್ತಿವೆ. ಎರಡೂ ಕಡೆಯ ದೇಶಗಳು ತಮ್ಮ ಸೇನೆಗಳ ಸಾಮರ್ಥ್ಯವನ್ನು ವೇಗವಾಗಿ ಹೆಚ್ಚಿಸುತ್ತಿವೆ. ಚೀನಾದ ಮಟ್ಟಿಗೆ ಹೇಳುವುದಾದರೆ, ಇದು ಸಂಖ್ಯೆಯಲ್ಲಿ ಮಾತ್ರವಲ್ಲದೆ ತಂತ್ರಜ್ಞಾನದ ದೃಷ್ಟಿಯಿಂದಲೂ ವೇಗವಾಗಿ ಪ್ರಗತಿ ಸಾಧಿಸುತ್ತಿದೆ. ಅವರು ಇತ್ತೀಚೆಗೆ ಆರನೇ ತಲೆಮಾರಿನ ಯುದ್ಧ ವಿಮಾನವನ್ನು ಪರೀಕ್ಷಿಸಿದ್ದಾರೆ. ಚೀನಾ ತನ್ನ 6ನೇ ತಲೆಮಾರಿನ ಜೆ-20 ಮತ್ತು ಜೆ-35 ವಿಮಾನಗಳನ್ನು ದಾಖಲೆ ಸಮಯದಲ್ಲಿ ರಹಸ್ಯ ತಂತ್ರಜ್ಞಾನದೊಂದಿಗೆ ಸಿದ್ಧಪಡಿಸಿದೆ ಎಂದರು‌.

  • ಹುಟ್ಟು ಹಬ್ಬಕ್ಕೆ ಹೊಸ ಸಿನಿಮಾ: ಪಾತ್ರದ ಬಗ್ಗೆ ನೆನಪಿರಲಿ ಪ್ರೇಮ್ ಮಾತು

    ಹುಟ್ಟು ಹಬ್ಬಕ್ಕೆ ಹೊಸ ಸಿನಿಮಾ: ಪಾತ್ರದ ಬಗ್ಗೆ ನೆನಪಿರಲಿ ಪ್ರೇಮ್ ಮಾತು

    ಪ್ಪ ಐ ಲವ್ ಯೂ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದ ಲವ್ಲಿ ಸ್ಟಾರ್ ಪ್ರೇಮ್ (Nenapirali Prem) ಈಗ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಬಾರಿ ಅವರು ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿಲ್ಲ. ಬದಲಾಗಿ ರಗಡ್ ಅವತಾರ ತಾಳಿದ್ದಾರೆ. ನಿನ್ನೆ ಪ್ರೇಮ್ ಜನ್ಮದಿನ.. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ. ಬೆಂಗಳೂರಿನ ಬಂಡಿ ಮಹಾಕಾಳಿ ದೇಗುಲದಲ್ಲಿ ಮುಹೂರ್ತ ನೆರವೇರಿದ್ದು, ಇಡೀ ಚಿತ್ರತಂಡ ಭಾಗಿಯಾಗಿ ತಾಯಿಯ ಆಶೀರ್ವಾದ ಪಡೆದುಕೊಂಡರು.

    ಬಳಿಕ ನೆನಪಿರಲಿ ಪ್ರೇಮ್ ಮಾತನಾಡಿ, ಇಂದು ನಾನು ಹುಟ್ಟಿದ ದಿನ . ಈ ದಿನ ಮುಹೂರ್ತ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿತ್ತು. 2.0 ರೀಬ್ರ್ಯಾಂಡಿಂಗ್ ಅಂತಾ ನನ್ನ ಸ್ನೇಹಿತರು ಕೇಳಿದರು. ಈ ಮೊದಲು ಆಕ್ಷನ್ ಸಿನಿಮಾ ಮಾಡಿದ್ದೇವು. ಆದರೆ ಬಹಳಷ್ಟು ಗ್ಯಾಪ್ ಆಗಿತ್ತು. ಲವ್ ಬ್ರ್ಯಾಂಡ್ ಆಗಿದ್ದರಿಂದ ಈಗ ಒಂದೊಳ್ಳೆ ಕಥೆಯೊಂದಿಗೆ ನಿರ್ದೇಶಕರು ಬಂದರು. ಹೀಗಾಗಿ ಈ ಚಿತ್ರ ಒಪ್ಪಿಕೊಂಡೆ. ಸಿನಿಮಾದಲ್ಲಿ ಸ್ಟ್ರೀಕ್ಟ್ ಪೊಲೀಸ್ ಅಧಿಕಾರಿ ಪಾತ್ರ ನಿರ್ವಹಿಸುತ್ತಿದ್ದೇನೆ. ಸ್ಕ್ರೀಪ್ಟ್ ರೆಡಿಯಾಗ್ತಿದೆ. ಕ್ಲೈಮ್ಯಾಕ್ಸ್ ಚರ್ಚೆ ಹಂತದಲ್ಲಿದೆ. ಪೂರ್ಣ ಪ್ರಮಾಣದಲ್ಲಿ ಸ್ಟಾರ್ ಕಾಸ್ಟ್ ಡಿಸೈಡ್ ಆಗಿಲ್ಲ. ಮುಂದಿನ ದಿನಗಳಲ್ಲಿ ಮುಹೂರ್ತ ಮಾಡಬೇಕು ಎಂದುಕೊಂಡಿದ್ದೇವು. ಆದರೆ ನಿಮ್ಮ ಬರ್ತ್ ಡೇ ಒಳ್ಳೆ ಸಂದರ್ಭ ಸರ್ ಅಂತಾ ನಿರ್ದೇಶಕರು ಹೇಳಿದ್ದರು. ಹೀಗಾಗಿ ಈ ದಿನ ಮುಹೂರ್ತ ಮಾಡಿದ್ದೇವೆ ಎಂದರು.

    ತೇಜೇಶ್ ಮಾತನಾಡಿ, ಇದು ನನ್ನ ಮೊದಲ ಸಿನಿಮಾ. ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಇದಾಗಿದೆ. ಟೈಟಲ್ ಚರ್ಚೆಯಲ್ಲಿದೆ. ಕಥೆಗೆ ಪ್ರೇಮ್ ಸರ್ ಸೂಟ್ ಆಗಿರುವುದರಿಂದ ಅವರನ್ನು ಆಯ್ಕೆ ಮಾಡಿದ್ದೇವೆ. ರಂಗಾಯಣ ರಘು ಸರ್ ಚಿತ್ರದ ಭಾಗವಾಗಿದ್ದಾರೆ. ಈ ತಿಂಗಳಾತ್ಯಂಕ್ಕೆ ಶೂಟಿಂಗ್ ಗೆ ಹೊರಡಲಿದ್ದೇವೆ ಎಂದು ಮಾಹಿತಿ ನೀಡಿದರು.

    ನೆನಪಿರಲಿ ಪ್ರೇಮ್ ಮತ್ತೆ ಪೊಲೀಸ್ ಪಾತ್ರ ಮಾಡಿದ್ದಾರೆ. 11 ವರ್ಷದ ಹಿಂದೆ ಪೊಲೀಸ್ ರೋಲ್ ಮಾಡಿದ್ದರು. ಶತ್ರು ಅನ್ನೋ ಈ ಚಿತ್ರದಲ್ಲಿ ಪೊಲೀಸ್ ಖದರ್ ನಲ್ಲಿ ಪವರ್ ತೋರಿಸಿದ್ದರು. ಆದರೆ ಪ್ರೇಮ್ ಈ ಸಲ ಬೇರೆ ರೀತಿಯ ಪೊಲೀಸ್ ಪಾತ್ರ ಮಾಡಿದ್ದಾರೆ. ರಫ್ ಆ್ಯಂಡ್ ಟಫ್ ಅಲ್ಲದೇ, ರಗಡ್ ಲುಕ್ ಇರೋ ಪೊಲೀಸ್ ರೀತಿನೂ ಕಾಣಿಸುತ್ತಿದ್ದಾರೆ. ಕೈಯಲ್ಲಿ ಸಿಂಗಲ್ ಬ್ಯಾರಲ್ ಗನ್ ಕೂಡ ಇದೆ. ಅದನ್ನ ಸ್ಟೈಲ್ ಆಗಿಯೂ ಪ್ರೇಮ್ ಹಿಡಿದು ಕೊಂಡು, ದೊಂಬಿ ಮಾಡೋರ ಕಡೆಗೆ ಮುಖ ಮಾಡಿ ನಿಂತಿದ್ದಾರೆ.

    ಯುವ ಪ್ರತಿಭೆ ತೇಜಸ್ ಬಿ.ಕೆ (Tejas) ಕಥೆ ಚಿತ್ರಕಥೆ ಬರೆದು ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದಾರೆ. ವಾಸುಕಿ ವೈಭವ್ ಸಂಗೀತ, ಆನಂದ್ ಮೀನಾಕ್ಷಿ ಛಾಯಾಗ್ರಹಣ ಚಿತ್ರಕ್ಕಿದೆ. ಹೆಸರಿಡದ ಈ ಸಿನಿಮಾಗೆ ಮಧು ಗೌಡ ಬಂಡವಾಳ ಹೂಡಿದ್ದಾರೆ. ಮುಹೂರ್ತ ನೆರವೇರಿಸಿರುವ ಚಿತ್ರತಂಡ ಈ ತಿಂಗಳ್ಯಾಂತಕ್ಕೆ ಶೂಟಿಂಗ್ ಅಖಾಡಕ್ಕೆ ಧುಮುಕಲಿದೆ.

  • ಕಂಗನಾರ ಕಂಗಾಲು ಮಾಡಿದ ‘ತೇಜಸ್’

    ಕಂಗನಾರ ಕಂಗಾಲು ಮಾಡಿದ ‘ತೇಜಸ್’

    ಬಾಲಿವುಡ್ (Bollywood) ನಟಿ ಕಂಗನಾ ರಣಾವತ್ (Kangana Ranaut) ಅವರ ನಿರೀಕ್ಷಿತ ಸಿನಿಮಾ ತೇಜಸ್ (Tejas) ಕೂಡ ಬಾಕ್ಸ್ ಆಫೀಸಿನಲ್ಲಿ ಮಕಾಡೆ ಮಲಗಿದೆ. ಬಾಲಿವುಡ್ ಬಾಕ್ಸ್ ಆಫೀಸ್ ಪಂಡಿತರ ಪ್ರಕಾರ ನವೆಂಬರ್ 1ರಂದು ಈ ಸಿನಿಮಾ ಗಳಿಕೆ ಮಾಡಿದ್ದು ಕೇವಲ 5 ಲಕ್ಷ ರೂಪಾಯಿ ಎಂದು ಹೇಳಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಕಂಗನಾ ಅವರ ಚಿತ್ರಗಳು ಸೋಲು ಅನುಭವಿಸುತ್ತಿರುವುದರಿಂದ ಸಹಜವಾಗಿಯೇ ಕಂಗನಾ ಕಂಗಾಲು ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

    ಮೊನ್ನೆಯಷ್ಟೇ ತೇಜಸ್ ಸಿನಿಮಾವನ್ನು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯ ನಾಥ್ ವೀಕ್ಷಿಸಿದ್ದರು. ಸಿನಿಮಾ ನೋಡಿ ಭಾವುಕರಾಗಿದ್ದರು. ಆ ಫೋಟೋವನ್ನು ಕಂಗನಾ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದರು. ಆದರೆ, ಅಂದುಕೊಂಡಷ್ಟು ಸಿನಿಮಾ ಜನರಿಗೆ ತಲುಪಿಲ್ಲ ಎನ್ನುವುದು ಬಿಟೌನ್ ಲೆಕ್ಕಾಚಾರ.

     

    ತೇಜಸ್ ಸಿನಿಮಾದ ಬಗ್ಗೆ ಕಂಗನಾ ಅವರಿಗೆ ಭಾರೀ ನಿರೀಕ್ಷೆ ಇತ್ತು. ವಾಯುಪಡೆಯ ಅಧಿಕಾರಿ ತೇಜಸ್ ಗಿಲ್ ಪಾತ್ರವನ್ನು ಕಂಗನಾ ನಿರ್ವಹಿಸಿದ್ದರಿಂದ ಈ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಬರಲಿದೆ ಎಂದು ಅಂದಾಜಿಸಲಾಗಿತ್ತು. ಬಹುಶಃ ಆ ಅಂದಾಜು ತಪ್ಪಾಗಿದೆ. ಸಿನಿಮಾ ಬಿಡುಗಡೆ ಐದು ದಿನಗಳು ಕಳೆದರೂ, ಬಾಕ್ಸ್ ಆಫೀಸಿನಲ್ಲಿ ಮಾತ್ರ ಅಷ್ಟೇ ಚೇತರಿಕೆ ಕಂಡಿಲ್ಲ. ಮುಂದಿನ ದಿನಗಳಲ್ಲಿ ಉತ್ತಮವಾಗುತ್ತಾ ಕಾದು ನೋಡಬೇಕು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಾಯುಪಡೆ ಸೇರಿದ ತೇಜಸ್ ಟ್ವಿನ್ ಸೀಟರ್ ವಿಮಾನ

    ವಾಯುಪಡೆ ಸೇರಿದ ತೇಜಸ್ ಟ್ವಿನ್ ಸೀಟರ್ ವಿಮಾನ

    ಬೆಂಗಳೂರು: ಸಂಪೂರ್ಣವಾಗಿ ಸ್ವದೇಶಿ ತಂತ್ರಜ್ಞಾನದೊಂದಿಗೆ ಬೆಂಗಳೂರಿನ ಹೆಚ್‍ಎಎಲ್ (HAL) ಅಭಿವೃದ್ಧಿಪಡಿಸಿದ ಹಗುರ ಯುದ್ಧ ವಿಮಾನ (Fighter Jet) ತೇಜಸ್‍ನ ಮೊದಲ ಟ್ವಿನ್ ಸೀಟರ್ ವಾಯುಪಡೆ ಸೇರಿದೆ.

    ಬೆಂಗಳೂರಿನ ಹೆಚ್‍ಎಎಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಕ್ಷಣಾ ಖಾತೆಯ ಸಹಾಯಕ ಸಚಿವ ಅಜಯ್ ಭಟ್, ಏರ್ ಮಾರ್ಷಲ್ ವಿಆರ್ ಚೌಧರಿಗೆ ತೇಜಸ್ ಟ್ವಿನ್ ಸೀಟರ್ (Tejas Twin Seater) ವಿಮಾನವನ್ನು ಹಸ್ತಾಂತರಿಸಲಾಯ್ತು. ಇದನ್ನೂ ಓದಿ: ಇದು ಪ್ರಿ ಅರೇಂಜ್ ಮ್ಯಾರೇಜ್- ಬಿಜೆಪಿ ದೋಸ್ತಿಗೆ ಮತ್ತೆ ಸಿಎಂ ಇಬ್ರಾಹಿಂ ವಿರೋಧ

    ವಾಯುಸೇನೆಯ ತರಬೇತಿ ಅಗತ್ಯಗಳಿಗೆ ಅನುಗುಣವಾಗಿ ಇಬ್ಬರು ಕುಳಿತುಕೊಳ್ಳುವಂತೆ ತೇಜಸ್ ವಿಮಾನವನ್ನು ಅಭಿವೃದ್ಧಿಪಡಿಸಲಾಗಿದೆ. ತುರ್ತು ಸಂದರ್ಭದಲ್ಲಿ ಪೂರ್ಣ ಪ್ರಮಾಣದಲ್ಲಿ ಯುದ್ಧ ವಿಮಾನವಾಗಿ ಕೆಲಸ ಮಾಡುವ ಸಾಮಥ್ರ್ಯ ಇದಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ತೇಜಸ್’ ಸಿನಿಮಾ ಬಗ್ಗೆ ಹೊಸ ಅಪ್ ಡೇಟ್ ಕೊಟ್ಟ ಕಂಗನಾ ರಣಾವತ್

    ‘ತೇಜಸ್’ ಸಿನಿಮಾ ಬಗ್ಗೆ ಹೊಸ ಅಪ್ ಡೇಟ್ ಕೊಟ್ಟ ಕಂಗನಾ ರಣಾವತ್

    ಚಂದ್ರಮುಖಿ 2 ಸಿನಿಮಾ ರಿಲೀಸ್ ಬೆನ್ನಲ್ಲೇ ಮತ್ತೊಂದು ಸಿನಿಮಾದ ಹೊಸ ಅಪ್ ಡೇಟ್ ನೀಡಿದ್ದಾರೆ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut). ತುಂಬಾ ನಿರೀಕ್ಷೆ ಮೂಡಿಸಿದ್ದ ಚಂದ್ರಮುಖಿ 2 ಸಿನಿಮಾ ಬಗ್ಗೆ ಅಷ್ಟೇನೂ ಹೇಳಿಕೊಳ್ಳುವಂತಹ ರೆಸ್ಪಾನ್ಸ್ ಸಿಕ್ಕಿಲ್ಲ. ಹಾಗಾಗಿ ಅವರ ಹೊಸ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ.

    ಈಗಾಗಲೇ ತೇಜಸ್ (Tejas) ಹೆಸರಿನಲ್ಲಿ ಸಿನಿಮಾ ಮಾಡಿದ್ದಾರೆ ಕಂಗನಾ ರಣಾವತ್. ಈ ಸಿನಿಮಾದ ರಿಲೀಸ್ ಡೇಟ್ ಬಹಿರಂಗವಾಗಿದ್ದು, ಇದೇ ಅಕ್ಟೋಬರ್ 27ರಂದು ವಿಶ್ವದಾದ್ಯಂತ ಈ ಚಿತ್ರವನ್ನು ಬಿಡುಗಡೆ (Release) ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಒಂದು ಪೋಸ್ಟ್ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ.

     

    ಈ ಸಿನಿಮಾದಲ್ಲಿ ತೇಜಸ್ ಗಿಲ್ ಎಂಬ ಏರ್ ಪೋರ್ಸ್ ಪೈಲಟ್ ಆಗಿ ಕಂಗನಾ ರಣಾವತ್ ಕಾಣಿಸಿಕೊಂಡಿದ್ದಾರೆ. ಸರ್ವೇಶ್ ಮೇವಾರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದೆ. ಏರ್ ಪೋರ್ಸ್ ದಿನವಾದ ಅಕ್ಟೋಬರ್ 8 ರಂದು ಸಿನಿಮಾದ ಟ್ರೈಲರ್ ಕೂಡ ರಿಲೀಸ್ ಆಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಜೆಪಿ ನಾಯಕನಿಗೇ  ಮೋಸ ಮಾಡಿದರಂತೆ ಕಂಗನಾ ರಣಾವತ್

    ಬಿಜೆಪಿ ನಾಯಕನಿಗೇ ಮೋಸ ಮಾಡಿದರಂತೆ ಕಂಗನಾ ರಣಾವತ್

    ಮಗೆ ಸಿನಿಮಾದಲ್ಲಿ ಪಾತ್ರ ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಮಯಾಂಕ್ ಮಧುರ್(Mayank Madhur)  ಆರೋಪ ಮಾಡಿದ್ದಾರೆ. ಈ ಕುರಿತು ಅವರು ಕಾನೂನು ಕ್ರಮಕ್ಕೂ ಮುಂದಾಗಿದ್ದಾರೆ. ಮಾಧ್ಯಮವೊಂದರಲ್ಲಿ ಮಾತನಾಡಿರುವ ಮಾಯಂಕ್, ‘ಕಂಗನಾ ನನ್ನಿಂದ ಕೆಲಸ ಮಾಡಿಸಿಕೊಂಡು ಪಾತ್ರ ಕೊಡಿಸದೇ ಮೊಸ (cheating) ಮಾಡಿದರು’ ಎಂದಿದ್ದಾರೆ.

    ಸದ್ಯ ಕಂಗನಾ ರಣಾವತ್ (Kangana Ranaut) ಅವರು ತೇಜಸ್ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಮೊನ್ನೆಯಷ್ಟೇ ಈ ಸಿನಿಮಾದ ಬಿಡುಗಡೆ ದಿನಾಂಕವನ್ನೂ ಘೋಷಣೆ ಮಾಡಿದ್ದರು. ಪೈಲಟ್ ತೇಜಸ್ ಗಿಲ್ ಅವರ ಜೀವನವನ್ನು ಆಧರಿಸಿದ ಸಿನಿಮಾದಲ್ಲಿ ಕಂಗನಾ, ತೇಜಸ್ ಅವರ ಪಾತ್ರವನ್ನು ಮಾಡಿದ್ದಾರೆ. ಈ ಪಾತ್ರದ ಚಿತ್ರೀಕರಣಕ್ಕಾಗಿ ರಕ್ಷಣಾ ಸಚಿವರನ್ನು ಭೇಟಿ ಮಾಡಿಸಲು ಮಯಾಂಕಾಗೆ ಕಂಗನಾ ಕೇಳಿದ್ದರಂತೆ. ಮಾಯಂಕ್ ಅದರ ವ್ಯವಸ್ಥೆಯನ್ನೂ ಮಾಡಿದ್ದರಂತೆ. ಇದನ್ನೂ ಓದಿ:ಪಡ್ಡೆಹುಡುಗರ ನಿದ್ದೆಗೆಡಿಸಿದ ‘ನಾಗಿಣಿ 2’ ಖ್ಯಾತಿಯ ನಮ್ರತಾ

    ತೇಜಸ್ (Tejas) ಸಿನಿಮಾದ ಶೂಟಿಂಗ್ ನ ಅನುಮತಿ ಪಡೆಯುವುದಕ್ಕಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿಸಿದರೆ, ಮಯಾಂಕ್ ಅವರಿಗೆ ಆ ಸಿನಿಮಾದಲ್ಲಿ 15 ನಿಮಿಷಗಳ ಕಾಲ ತೆರೆಯ ಮೇಲಿರುವ ಪಾತ್ರವನ್ನು ಕೊಡಿಸುವುದಾಗಿ ಭರವಸೆ ನೀಡಿದ್ದರಂತೆ. ರಕ್ಷಣಾ ಸಚಿವರ ಜೊತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನೂ ಮಯಾಂಕ್ ಭೇಟಿ ಮಾಡಿಸಿದ್ದರಂತೆ. ಆದರೆ, ಕಂಗನಾ ಅಂದುಕೊಂಡಂತೆ ನಡೆದುಕೊಳ್ಳಲಿಲ್ಲ ಎಂದಿದ್ದಾರೆ.

    ಕಂಗನಾ ಅವರನ್ನು ಮಗಳ ರೀತಿಯಲ್ಲಿ ನೋಡುತ್ತಿದ್ದೆ. ಅವರು ಪಾತ್ರವನ್ನು ಕೊಡಿಸುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೆ. ಆದರೆ, ಅವರು ಮೋಸ ಮಾಡಿದರು. ಇದರ ವಿರುದ್ಧ ಕಾನೂನು ಮೊರೆ ಹೋಗಲು ಸಾಧ್ಯವಾ ಎಂದು ಯೋಚಿಸುತ್ತಿದ್ದೇನೆ ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಹಾರಾಟ ನಿಲ್ಲಿಸಿದ ʻತೇಜಸ್‌ʼ- 4 ತಿಂಗಳಲ್ಲಿ 7ನೇ ಚೀತಾ ಸಾವು!

    ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಹಾರಾಟ ನಿಲ್ಲಿಸಿದ ʻತೇಜಸ್‌ʼ- 4 ತಿಂಗಳಲ್ಲಿ 7ನೇ ಚೀತಾ ಸಾವು!

    ಭೋಪಾಲ್: ಮಧ್ಯಪ್ರದೇಶದ ರಾಷ್ಟ್ರೀಯ ಉದ್ಯಾನಕ್ಕೆ ಬಿಡಲಾಗಿದ್ದ ಚೀತಾಗಳ ಪೈಕಿ ʻತೇಜಸ್‌ʼ (Tejas) ಹೆಸರಿನ ಮತ್ತೊಂದು ಗಂಡು ಚೀತಾ (Cheetah) ಸಾವನ್ನಪ್ಪಿದ್ದು, 4 ತಿಂಗಳಲ್ಲಿ ಇದು 7ನೇ ಪ್ರಕರಣವಾಗಿದೆ.

    ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಚಿರತೆಯ ಕತ್ತಿನ ಮೇಲ್ಭಾಗದಲ್ಲಿ ಗಾಯದ ಗುರುತುಗಳು ಕಂಡುಬಂದಿದೆ. ಇದನ್ನು ಗಮನಿಸಿದ ಮೇಲ್ವಿಚಾರಣಾ ತಂಡ ತಕ್ಷಣ ವೈದ್ಯರಿಗೆ (Doctors) ಮಾಹಿತಿ ನೀಡಿದೆ. ನಂತರ ವೈದ್ಯರು ಪ್ರಾಣಿಯನ್ನ ಪರೀಕ್ಷಿಸಿ ಚಿಕಿತ್ಸೆ ನೀಡುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ʻತೇಜಸ್‌ʼ ಮೃತಪಟ್ಟಿದೆ. ಕಳೇಬರವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ ಎಂದು ಪ್ರಧಾನ ಅರಣ್ಯ ಸರಂಕ್ಷಣಾಧಿಕಾರಿ ಜೆ.ಎಸ್‌ ಚೌಹಾಣ್‌ ತಿಳಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಸ್ಥಳಾಂತರಿಸಿದ್ದ ಮತ್ತೊಂದು ಚೀತಾ ಸಾವು

    ಕಳೆದ ಮಾರ್ಚ್‌ 27ರಂದು ಸಾಶಾ ಹೆಸರಿನ ಹೆಣ್ಣು ಚೀತಾ ಕಿಡ್ನಿ ಸೋಂಕಿನಿಂದ ಸಾವನ್ನಪ್ಪಿತ್ತು, ಏಪ್ರಿಲ್‌ 23ರಂದು ಉದಯ್‌ ಹೆಸರಿನ ಗಂಡು ಚೀತಾ ಶ್ವಾಸಕೋಶದ ವೈಫಲ್ಯದಿಂದ, ಮೇ 9ರಂದು ದಕ್ಷಾ0 ಹೆಸರಿನ ಹೆಣ್ಣು ಚೀತಾ ಬೇಟೆಯಾಡುವ ವೇಳೆ ಗಾಯಗೊಂಡು ಮೃತಪಟ್ಟಿತ್ತು. ಆ ನಂತರ ವಿವಿಧ ಕಾರಣದಿಂದ ಮೂರು ಚೀತಾ ಮರಿಗಳು ಮೃತಪಟ್ಟಿದ್ದವು. ಒಟ್ಟು 6 ಚೀತಾ ಸಾವನ್ನಪ್ಪಿದರೂ ಅರಣ್ಯ ಇಲಾಖೆ ಹಾಗೂ ಸರ್ಕಾರ ಆರೋಪಗಳನ್ನ ತಳ್ಳಿಹಾಕಿತ್ತು. ಇದೀಗ 7ನೇ ಚೀತಾ ಸಾವನ್ನಪ್ಪಿದೆ. ಇದನ್ನೂ ಓದಿ: ಕುನೋ ನ್ಯಾಷನಲ್ ಪಾರ್ಕ್‌ನಲ್ಲಿ ಇನ್ನೆರಡು ಚೀತಾ ಮರಿಗಳ ಸಾವು – ಕಳೆದ ಎರಡು ತಿಂಗಳಲ್ಲಿ ಸಾವಿನ ಸಂಖ್ಯೆ ಹೆಚ್ಚಳ

    ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು (Wildlife) ಸಂರಕ್ಷಣೆ ಮಾಡುವ ಯೋಜನೆಯಡಿ ನಮೀಬಿಯಾದಿಂದ (Namibia) ಭಾರತಕ್ಕೆ 3 ಗಂಡು ಹಾಗೂ 5 ಹೆಣ್ಣು ಚೀತಾಗಳನ್ನು ವಿಶೇಷ ವಿಮಾನದಲ್ಲಿ ತರಲಾಗಿತ್ತು. ತಮ್ಮ ಜನ್ಮದಿನವಾದ ಸೆ.17 ರಂದು ಪ್ರಧಾನಿ ಮೋದಿ (Narendra Modi) ಈ ಚೀತಾಗಳನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡುಗಡೆ ಮಾಡಿದ್ದರು. ನವೆಂಬರ್‌ನಲ್ಲಿ ದೊಡ್ಡ ಆವರಣಕ್ಕೆ ಸ್ಥಳಾಂತರಿಸಿದ ಬಳಿಕ ಕಾಡಿಗೆ ಬಿಡುಗಡೆ ಮಾಡಲಾಗಿತ್ತು. ಬಳಿಕ ಚೀತಾಗಳು ಕಾಡಿನ ವಾತಾವರಣಕ್ಕೆ ಹೊಂದಿಕೊಂಡು ಸ್ವತಃ ಬೇಟೆಯಾಡಲು ಆರಂಭಿಸಿದ್ದವು. ಇದನ್ನೂ ಓದಿ: ನಮೀಬಿಯಾ-ದಕ್ಷಿಣ ಆಫ್ರಿಕಾ ಚೀತಾಗಳ ನಡುವೆ ರಣರೋಚಕ ಕಾದಾಟ – ʻಅಗ್ನಿʼಗೆ ಗಾಯ

    ಚೀತಾ ವಿಶೇಷತೆಯೇನು?
    ಮಚ್ಚೆ ಗುರುತಿನ ಚೀತಾಗಳ ಸಂತತಿಯನ್ನು 1952ರಲ್ಲಿ ಭಾರತದಲ್ಲಿ ಅಳಿದುಹೋದ ಸಂತತಿ ಎಂದು ಘೋಷಣೆ ಮಾಡಲಾಗಿತ್ತು. ಭಾರತದಲ್ಲಿದ್ದ ಕೊನೆಯ ಚೀತಾ 1947ರಲ್ಲಿ ಸಾವನ್ನಪ್ಪಿತ್ತು. 2009ರಲ್ಲಿ ಆಫ್ರಿಕನ್ ಚಿರತೆ ಯೋಜನೆ ಮಾಡಲಾಗಿತ್ತು, ಆದರೆ ಕಾರಣಾಂತರಗಳಿಂದ ಅನುಷ್ಠಾನವಾಗಿರಲಿಲ್ಲ. ಅದಾದ 75 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಿದ ಚೀತಾಗಳಿಗೆ ಕುನೊ ಉದ್ಯಾನವನ ಪರಿಸರ ಅನುಕೂಲಕರವಾಗಿದ್ದು, ಅಲ್ಲಿನ ಸುತ್ತಮುತ್ತಲ 24 ಗ್ರಾಮಗಳ ಜನರನ್ನು ಖಾಲಿ ಮಾಡಿಸಲಾಗಿದೆ. 8 ಚೀತಾಗಳ ಸ್ಥಳಾಂತರಕ್ಕೆ 75 ಕೋಟಿ ರೂ. ಖರ್ಚು ಮಾಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ತೇಜಸ್’ ಸಿನಿಮಾದ ರಿಲೀಸ್ ಡೇಟ್ ಘೋಷಣೆ ಮಾಡಿದ ಕಂಗನಾ

    ‘ತೇಜಸ್’ ಸಿನಿಮಾದ ರಿಲೀಸ್ ಡೇಟ್ ಘೋಷಣೆ ಮಾಡಿದ ಕಂಗನಾ

    ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ (Kangana Ranaut) ಸದ್ದಿಲ್ಲದೇ ಮತ್ತೊಂದು ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಚಿತ್ರೀಕರಣ ಮುಗಿಸಿದ್ದು ಮಾತ್ರವಲ್ಲ, ಈಗಾಗಲೇ ಆ ಸಿನಿಮಾ ಬಿಡುಗಡೆಗೆ ಸಿದ್ದವಾಗಿದ್ದು, ಆ ದಿನಾಂಕವನ್ನೂ ಕೂಡ ಘೋಷಣೆ ಮಾಡಿದ್ದಾರೆ. ತೇಜಸ್ (Tejas) ಹೆಸರಿನಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಅಕ್ಟೋಬರ್ 20 ರಂದು ದೇಶದಾದ್ಯಂತ ಬಿಡುಗಡೆ (Release) ಆಗಲಿದೆ.

    ಇದೇ ಮೊದಲ ಬಾರಿಗೆ ಕಂಗನಾ ರಣಾವತ್, ಪೈಲೆಟ್ ಪಾತ್ರವನ್ನು ನಿರ್ವಹಿಸಿದ್ದಾರೆ. ಈ ಚಿತ್ರದ ಬಿಡುಗಡೆ ದಿನಾಂಕವನ್ನು ಸ್ವತಃ ಕಂಗನಾ ಘೋಷಿಸುವ ಮೂಲಕ, ಈ ಸಿನಿಮಾವನ್ನು ವಾಯು ಸೇನೆಯ ಎಲ್ಲ ಪೈಲೆಟ್ ಗಳಿಗೆ ಅರ್ಪಿಸುವುದಾಗಿ ತಿಳಿಸಿದ್ದಾರೆ. ಸರ್ವೇಶ ಮೇವರಾ (Sarvesha Mewara) ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬಂದಿದ್ದು, ಮಹಿಳಾ ಪೈಲಟ್ ಒಬ್ಬರ ಜೀವನಗಾಥೆಯನ್ನು ಅದು ತೆರೆದಿಡಲಿದೆ. ಇದನ್ನೂ ಓದಿ:‘ಕೆಡಿ’ ಸಿನಿಮಾದಲ್ಲಿ ಧ್ರುವ ಸರ್ಜಾ: ರೆಟ್ರೋ ಲುಕ್ ಫೋಟೋ ಲೀಕ್

    ಇತ್ತೀಚಿನ ದಿನಗಳಲ್ಲಿ ಕಂಗನಾ ವಿವಾದದ ಮೂಲಕವೇ ಹೆಚ್ಚು ಸುದ್ದಿ ಆಗುತ್ತಿದ್ದರು. ಇದೀಗ ಹೊಸ ಸಿನಿಮಾದ ಬಗ್ಗೆ ಅಪ್ ಡೇಟ್ ನೀಡಿ ಸದ್ದು ಮಾಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಅವರ ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ಮುಗ್ಗರಿಸುತ್ತಿದ್ದು, ತೇಜಸ್ ಸಿನಿಮಾವಾದರೂ ಗೆಲ್ಲಲಿ ಎನ್ನುವುದು ಅವರ ಅಭಿಮಾನಿಗಳ ಹಾರೈಕೆ.

    ಒಂದು ಕಡೆ ತೇಜಸ್ ರಿಲೀಸ್ ಆಗುತ್ತಿದ್ದರೆ, ಮತ್ತೊಂದು ಕಡೆ ತಾವೇ ನಿರ್ದೇಶಿಸಿ, ನಟಿಸಿ, ನಿರ್ಮಾಣ ಮಾಡುತ್ತಿರುವ ಎಮರ್ಜೆನ್ಸಿ (Emergency) ಸಿನಿಮಾ ಕೂಡ ಬಹುತೇಕ ಶೂಟಿಂಗ್ ಮುಗಿದಿದೆ. ಅದರ ತಯಾರಿಯಲ್ಲೂ ಕಂಗನಾ ತೊಡಗಿದ್ದಾರೆ. ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಕಾಣಿಸಿಕೊಂಡಿದ್ದು ಎಮರ್ಜೆನ್ಸಿ ಕರಾಳತೆಯನ್ನು ಈ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರಂತೆ ಕಂಗನಾ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಲೇಷ್ಯಾಗೆ 18 ತೇಜಸ್‌ ವಿಮಾನ – ಅಮೆರಿಕ ಸೇರಿದಂತೆ 6 ರಾಷ್ಟ್ರಗಳಿಂದ ಖರೀದಿಗೆ ಆಸಕ್ತಿ

    ಮಲೇಷ್ಯಾಗೆ 18 ತೇಜಸ್‌ ವಿಮಾನ – ಅಮೆರಿಕ ಸೇರಿದಂತೆ 6 ರಾಷ್ಟ್ರಗಳಿಂದ ಖರೀದಿಗೆ ಆಸಕ್ತಿ

    ನವದೆಹಲಿ: ಭಾರತವು ಮಲೇಷ್ಯಾಕ್ಕೆ 18 ತರಬೇತಿ ʼತೇಜಸ್‌ʼ ಲಘು ಯುದ್ಧ ವಿಮಾನ (ಎಲ್‌ಸಿಎ) ಮಾರಾಟ ಮಾಡಲು ಮುಂದಾಗಿದೆ.

    ಅರ್ಜೆಂಟೀನಾ, ಆಸ್ಟ್ರೇಲಿಯಾ, ಈಜಿಪ್ಟ್, ಅಮೆರಿಕ, ಇಂಡೋನೇಷ್ಯಾ ಮತ್ತು ಫಿಲಿಪೈನ್ಸ್ ಕೂಡ ಸಿಂಗಲ್‌ ಎಂಜಿನ್‌ ಹೊಂದಿರುವ ಯುದ್ಧ ವಿಮಾನವನ್ನು ಖರೀದಿಸಲು ಆಸಕ್ತಿ ತೋರಿಸಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

    ಕಳೆದ ವರ್ಷ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ಗೆ 83 ತೇಜಸ್‌ ವಿಮಾನ ನಿರ್ಮಾಣ ಸಂಬಂಧ 6 ಶತಕೋಟಿ ಡಾಲರ್‌ ಮೌಲ್ಯದ ಗುತ್ತಿಗೆಯನ್ನು ನೀಡಿತ್ತು. 2023ಕ್ಕೆ ಎಚ್‌ಎಎಲ್‌ ವಿಮಾನವನ್ನು ವಿತರಿಸಲಿದೆ.

    1983ರಲ್ಲಿ ಅನುಮೋದನೆಗೊಂಡ ನಾಲ್ಕು ದಶಕಗಳ ನಂತರ ಈಗ ಎಚ್‌ಎಎಲ್‌ ಎಲ್‌ಸಿಎ ತೇಜಸ್‌ ವಿಮಾನವನ್ನು ಮಾರಾಟ ಮಾಡುತ್ತಿದೆ.

    ವಿದೇಶಿ ರಕ್ಷಣಾ ಸಾಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮೋದಿ ಸರ್ಕಾರ ಜೆಟ್‌ ವಿಮಾನಗಳನ್ನು ರಫ್ತು ಮಾಡಲು ರಾಜತಾಂತ್ರಿಕ ಪ್ರಯತ್ನಗಳನ್ನು ಮಾಡುತ್ತಿದೆ. ಈ ಹಿಂದೆ ವಿನ್ಯಾಸ ಮತ್ತು ತೂಕದ ಕಾರಣ ನೀಡಿ ಭಾರತೀಯ ನೌಕಾಪಡೆ ತೇಜಸ್‌ ವಿಮಾನವನ್ನು ತಿರಸ್ಕರಿಸಿತ್ತು. ಬಳಿಕ ತಾಂತ್ರಿಕತೆ, ಏವಿಯಾನಿಕ್ಸ್‌ಗಳಲ್ಲಿ ಬದಲಾವಣೆ ಮಾಡಿದ್ದು ಈಗ ವಿದೇಶಕ್ಕೆ ಮಾರಾಟ ಮಾಡಲು ಮುಂದಾಗುತ್ತಿರುವುದು ವಿಶೇಷ.

    ಕಳೆದ ವರ್ಷ ಅಕ್ಟೋಬರ್‌ನಲ್ಲಿ 18 ಜೆಟ್‌ ಖರೀದಿ ಸಂಬಂಧ ರಾಯಲ್ ಮಲೇಷಿಯನ್ ಏರ್ ಪ್ರಸ್ತಾವನೆಗೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಕೇಳಲಾದ ಲಿಖಿತ ಪ್ರಶ್ನೆಗೆ ರಕ್ಷಣ ಇಲಾಖೆ ಪ್ರತಿಕ್ರಿಯಿಸಿದ್ದು, ತೇಜಸ್‌ನ ವಿಮಾನಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಮಿಗ್ 29 ಬದಲಿಸಲು ಮಲೇಷ್ಯಾದ ಮೊದಲ ಆಯ್ಕೆ ಭಾರತದ ತೇಜಸ್ ಯಾಕೆ? 

    ರಕ್ಷಣಾ ಖಾತೆಯ ರಾಜ್ಯ ಸಚಿವ ಅಜಯ್‌ ಭಟ್‌, ಅರ್ಜೆಂಟೀನಾ, ಆಸ್ಟ್ರೇಲಿಯಾ, ಈಜಿಪ್ಟ್, ಯುಎಸ್‌ಎ, ಇಂಡೋನೇಷ್ಯಾ ಮತ್ತು ಫಿಲಿಪೈನ್ಸ್ ಎಲ್‌ಸಿಎ ಖರೀದಿಸಲು ಆಸಕ್ತಿ ತೋರಿಸಿದೆ ಎಂದು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

    ದೇಶವು ಫೈಟರ್ ಜೆಟ್ ತಯಾರಿಸುವ ಕೆಲಸ ಮಾಡುತ್ತಿದೆ ಎಂದ ಅವರು ರಾಷ್ಟ್ರೀಯ ಭದ್ರತೆಯ ಕಾಳಜಿಯನ್ನು ಉಲ್ಲೇಖಿಸಿ ಟೈಮ್‌ಲೈನ್ ನೀಡಲು ನಿರಾಕರಿಸಿದರು.

    ತನ್ನದೇ ಆದ ಯುದ್ಧ ವಿಮಾನಗಳನ್ನು ನಿರ್ಮಿಸುವ ಭಾರತದ ನಡೆಯನ್ನು ಬೆಂಬಲಿಸುವುದಾಗಿ ಬ್ರಿಟನ್ ಏಪ್ರಿಲ್‌ನಲ್ಲಿ ಹೇಳಿತ್ತು. ಭಾರತದ ವಾಯುಸೇನೆಯಲ್ಲಿ ಪ್ರಸ್ತುತ ರಷ್ಯಾ, ಬ್ರಿಟಿಷ್ ಮತ್ತು ಫ್ರೆಂಚ್ ಯುದ್ಧ ವಿಮಾನಗಳಿವೆ.

    ಕಾರ್ಯನಿರ್ವಹಿಸುತ್ತಿರುವಾಗಲೇ ಪತನ ಹೊಂದುತ್ತಿರುವ ಕಾರಣ ʼಹಾರುವ ಶವಪೆಟ್ಟಿಗೆʼ ಎಂದೇ ಕುಖ್ಯಾತಿ ಪಡೆದಿರುವ ರಷ್ಯಾದಿಂದ ಖರೀದಿಸಲಾಗಿರುವ ಎಲ್ಲ ಮಿಗ್‌ ವಿಮಾನಗಳಿಗೆ 2025ರ ವೇಳೆಗೆ ನಿವೃತ್ತಿ ಹೇಳಲು ವಾಯುಸೇನೆ ಮುಂದಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಯುದ್ಧ ವಿಮಾನ ತೇಜಸ್‍ನಲ್ಲಿ ರಾಜನಾಥ್ ಸಿಂಗ್ ಹಾರಾಟ

    ಭಾರತದ ಸಿಂಗಲ್ ಎಂಜಿನ್ ಫೈಟರ್ ಜೆಟ್ ತೇಜಸ್ ಮಲೇಷ್ಯಾದ ಮೊದಲ ಆದ್ಯತೆಯಾಗಿದ್ದು, ಅದು ತನ್ನ ಹಳೆಯ ಮಿಗ್-29 ಅನ್ನು ಬದಲಿಸಲು ಯೋಜಿಸುತ್ತಿದೆ ಎಂದು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಹೆಚ್‌ಎಎಲ್)ನ ಅಧ್ಯಕ್ಷ ಆರ್. ಮಾಧವನ್ ಕಳೆದ ತಿಂಗಳು ತಿಳಿಸಿದ್ದರು.

    Live Tv
    [brid partner=56869869 player=32851 video=960834 autoplay=true]